Tag: prakash

  • ಅಹಂಕಾರ ಪಂಕ್ಚರ್ ಮಾಡಿ ಸ್ಥಾನ ತೋರಿಸಿದ್ದಕ್ಕೆ ಧನ್ಯವಾದಗಳು ಎಂದ ಪ್ರಕಾಶ್ ರಾಜ್

    ಅಹಂಕಾರ ಪಂಕ್ಚರ್ ಮಾಡಿ ಸ್ಥಾನ ತೋರಿಸಿದ್ದಕ್ಕೆ ಧನ್ಯವಾದಗಳು ಎಂದ ಪ್ರಕಾಶ್ ರಾಜ್

    ಲೋಕಸಭಾ ಚುನಾವಣೆ (Loksabha Election 2024) ಫಲಿತಾಂಶ ಹೊರಬಿದ್ದಿದೆ. ಸದ್ಯ ಎನ್‌ಡಿಎ ಬಹುಮತ ಪಡೆದರೂ ಇಂಡಿಯಾ ಒಕ್ಕೂಟದ ಅತ್ಯುತ್ತಮ ಸಾಧನೆ ಮಾಡಿದೆ. ಈ ಬೆನ್ನಲ್ಲೇ ಪ್ರಕಾಶ್ ರಾಜ್ (Prakash Raj) ಮಾಡಿರುವ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಅಹಂಕಾರ ಪಂಕ್ಚರ್ ಮಾಡಿದ್ದಕ್ಕೆ ಧನ್ಯವಾದಗಳು ಎಂದು ನಟ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ನಾನು ರಿಲೇಷನ್‌ಶಿಪ್‌ನಲ್ಲಿದ್ದೇನೆ ಎಂದು ಪಡ್ಡೆಹುಡುಗರಿಗೆ ಶಾಕ್ ಕೊಟ್ಟ ಕೃತಿ ಶೆಟ್ಟಿ

    ಚಕ್ರವರ್ತಿ ಬೆತ್ತಲಾಗಿದ್ದಾನೆ. ಅವನು ಈಗ ಅನಿವಾರ್ಯವಾಗಿ ಬೇರೊಬ್ಬನ ಬೆಂಬಲದೊಂದಿಗೆ ಮುನ್ನಡೆಯಬೇಕಿದೆ ಎಂದು ಪ್ರಕಾಶ್ ರಾಜ್ ಬರೆದುಕೊಂಡಿದ್ದಾರೆ. ಇಂಡಿಯಾ ಮತ್ತು ಜವಾಬ್ದಾರಿಯುತ ನಾಗರಿಕ ಸಮಾಜಕ್ಕೆ ಧನ್ಯವಾದಗಳು. ಅಹಂಕಾರ ಪಂಕ್ಚರ್ ಮಾಡಿ ಅವರ ಸ್ಥಾನ ತೋರಿಸಿದ್ದಕ್ಕೆ ಥ್ಯಾಂಕ್ಯೂ ಎಂದಿದ್ದಾರೆ. ನಾನು ನಮ್ಮ ದೇಶಕ್ಕಾಗಿ ಚೆನ್ನಾಗಿ ಹೋರಾಡುತ್ತಿದ್ದೇವೆ. ನಾವು ಹೀಗೆ ಮುಂದುವರಿಯುತ್ತೇವೆ ಎಂದು ಪ್ರಕಾಶ್ ರಾಜ್ ಚುನಾವಣೆ ಫಲಿತಾಂಶದ ಬಳಿಕ ತಮ್ಮದೇ ಶೈಲಿಯಲ್ಲಿ ರಿಯಾಕ್ಟ್ ಮಾಡಿದ್ದಾರೆ. ನಟನ ಪೋಸ್ಟ್‌ಗೆ ಬಗೆ ಬಗೆಯ ಕಾಮೆಂಟ್‌ಗಳು ಹರಿದು ಬರುತ್ತಿವೆ.

  • ಮಾರ್ಚ್ 22 ರಿಂದ ದರ್ಶನ್ ನಟನೆಯ ‘ಡೆವಿಲ್’ ಶೂಟಿಂಗ್ ಶುರು

    ಮಾರ್ಚ್ 22 ರಿಂದ ದರ್ಶನ್ ನಟನೆಯ ‘ಡೆವಿಲ್’ ಶೂಟಿಂಗ್ ಶುರು

    ಡೆವಿಲ್ ಸಿನಿಮಾದ ಶೂಟಿಂಗ್ ಅಸಲಿಯಾಗಿ ಮಾರ್ಚ್ 22 ರಿಂದ ಶುರುವಾಗಲಿದೆ ಎನ್ನುವ ಮಾಹಿತಿ ಸಿಕ್ಕಿದೆ. ಈಗಾಗಲೇ ದರ್ಶನ್ (Darshan) ನಟನೆಯ ಡೆವಿಲ್ ಚಿತ್ರೀಕರಣ ಶುರುವಾಗಿದೆ ಎಂದೇ ಹೇಳಲಾಗಿತ್ತು. ಆದರೆ, ಈವರೆಗೂ ಚಿತ್ರದ ಶೂಟಿಂಗ್ ಮಾಡಿಲ್ಲವೆಂದು ಗೊತ್ತಾಗಿದೆ. ಮೊದಲ ಹಂತದ ಚಿತ್ರೀಕರಣವು ಬೆಂಗಳೂರಿನ ರಾಕ್ ಲೈನ್ ಸ್ಟುಡಿಯೋದಲ್ಲಿ ನಡೆಯಲಿದೆ.

    ಈಗಾಗಲೇ ‘ಡೆವಿಲ್’ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿ ಭರ್ಜರಿ ಸೌಂಡ್ ಮಾಡ್ತಿದೆ. ದಚ್ಚು ಹುಟ್ಟುಹಬ್ಬದ ದಿನ ಫ್ಯಾನ್ಸ್‌ಗೆ ಇದೊಂದು ಸರ್ಪ್ರೈಸ್ ಗಿಫ್ಟ್ ಆಗಿತ್ತು. ದರ್ಶನ್ ‘ಡೆವಿಲ್’ನಲ್ಲಿ (Devil Film) ವಿಭಿನ್ನ ಲುಕ್‌ನಲ್ಲಿ ಕಾಣಿಸ್ಕೊಂಡಿದ್ದಾರೆ. ಹಾಗಾದ್ರೆ ಈ ಸಿನಿಮಾದ ಬ್ಲಾಕ್‌ಬಸ್ಟರ್ ಅಪ್‌ಡೇಟ್ ಏನು? ಶೂಟಿಂಗ್ ಶುರುವಾಗೋದು ಯಾವಾಗ? ಆ ಬಗ್ಗೆ ಖುದ್ದು ದರ್ಶನ್ ಬಿಚ್ಚಿಟ್ಟ ಮಾಹಿತಿ ಇಲ್ಲಿದೆ.

    ದರ್ಶನ್ ಹುಟ್ಟುಹಬ್ಬದ ದಿನವೇ ‘ಡೆವಿಲ್’ ಚಿತ್ರದ ಫಸ್ಟ್ ಲುಕ್ ರಿವೀಲ್ ಆಯ್ತು. ಅಬ್ಬರಿಸುವ ಡೈಲಾಗ್ ಮೂಲಕ ದಚ್ಚು ಎಂಟ್ರಿ ಬಹಳ ಕುತೂಹಲಕಾರಿಯಾಗಿತ್ತು. ‘ನಮ್ಮ ಮನೆಯಲೊಂದು ಪುಟ್ಟ ಪಾಪು ಇರುವುದು’ ಎಂಬ ವಿಭಿನ್ನ ಡೈಲಾಗ್ ಹೇಳುವ ಮೂಲಕ ದರ್ಶನ್ ಉಗ್ರವಾಗಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ನಿರೀಕ್ಷೆ ದುಪ್ಪಟ್ಟಾಗಿದೆ. ಮಾರ್ಚ್‌ನಿಂದ ಚಿತ್ರೀಕರಣ ಪ್ರಾರಂಭವಾಗುತ್ತದೆ ಎಂದಿದ್ದರು ದರ್ಶನ್. ಅದು ಈಗ ನಿಜವಾಗಿದೆ.

    ಮಿಲನ ಪ್ರಕಾಶ್ (Milana Prakash) ಈ ಸಿನಿಮಾವನ್ನು ನಿರ್ದೇಶನ ಮಾಡಲಿದ್ದು, ಅಜನೀಶ್ ಲೋಕನಾಥ್ ಅವರ ಸಂಗೀತ ಸಂಯೋಜನೆ ಚಿತ್ರಕ್ಕೆ ಇರಲಿದೆ, ವೈಷ್ಣೋ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗಲಿದೆ.

     

    ಡಿಬಾಸ್ ಕೈಯಲ್ಲಿ ಈಗ 9ಕ್ಕೂ ಹೆಚ್ಚು ಚಿತ್ರಗಳಿವೆ. ರಮೇಶ್ ಪಿಳ್ಳೈ, ಶೈಲಜಾ ನಾಗ್ ಮತ್ತು ಬಿ.ಸುರೇಶ, ಮೋಹನ್ ನಟರಾಜನ್, ಸೂರಪ್ಪ ಬಾಬು, ಸಚ್ಚಿದಾನಂದ ಇಂಡುವಾಳ, ಕೆ.ಮಂಜುನಾಥ್, ರಘುನಾಥ್ ಸೋಗಿ, ಮಹೇಶ್ ಸುಖಧರೆ, ರಾಘವೇಂದ್ರ ಹೆಗ್ಡೆ ಹೀಗೆ ಸಾಲು ಸಾಲು ನಿರ್ಮಾಪಕರು ದರ್ಶನ್‌ಗಾಗಿ ಸಿನಿಮಾ ಮಾಡಲು ಮುಂದೆ ಬಂದಿದ್ದಾರೆ. ದರ್ಶನ್ ಹುಟ್ಟುಹಬ್ಬದಂದು (ಫೆ.16) ಸಿನಿಮಾಗಳನ್ನು ಘೋಷಣೆ ಕೂಡ ಮಾಡಿದ್ದಾರೆ.

  • ‘ಡೆವಿಲ್’ ದರ್ಶನ: ಪವರ್ ಪ್ಯಾಕ್ಡ್ ಟೀಸರ್ ರಿಲೀಸ್

    ‘ಡೆವಿಲ್’ ದರ್ಶನ: ಪವರ್ ಪ್ಯಾಕ್ಡ್ ಟೀಸರ್ ರಿಲೀಸ್

    ರ್ಶನ್ (Darshan) ನಟನೆಯ ನಿರೀಕ್ಷಿತ ಡೆವಿಲ್ ಸಿನಿಮಾದ ಟೀಸರ್ ನಿನ್ನೆ ಮಧ್ಯೆ ರಾತ್ರಿ ಬಿಡುಗಡೆ ಆಗಿದೆ. ಶೀರ್ಷಿಕೆಗೆ ತಕ್ಕಂತೆ ಡೆವಿಲ್ ಆಗಿದೆ ಟೀಸರ್ (Teaser). ‘ನಮ್ಮ ಮನೆಯಲ್ಲೊಂದು ಪುಟ್ಟ ಪಾಪು ಇರುವುದು, ಫೋಟೋ ತಗೆಯಲದಕ್ಕೆ ಬಲು ಕೋಪ ಬರುವುದು’.. ಎನ್ನುತ್ತಾ ಶೂಟ್ ಮಾಡುವಂಥ ದೃಶ್ಯವನ್ನೇ ಟೀಸರ್ ಅನ್ನಾಗಿ ಮಾಡಲಾಗಿದೆ. ದರ್ಶನ್ ಈ ಸಿನಿಮಾದಲ್ಲಿ ವಿರಾಟ ರೂಪವನ್ನೇ ತಾಳಿದ್ದಾರೆ.

    ಮಿಲನ ಚಿತ್ರದ ಖ್ಯಾತಿಯ  ಪ್ರಕಾಶ್ ವೀರ್ ಅವರ ನಿರ್ದೇಶನದಲ್ಲಿ ‘ಡೆವಿಲ್’ (Devil) ಸಿನಿಮಾ ಮೂಡಿ ಬರುತ್ತಿದ್ದು, ಈ ಚಿತ್ರದ ಸ್ಕ್ರಿಪ್ಟ್ ಪೂಜೆ  ನಾಲ್ಕು ತಿಂಗಳ ಹಿಂದೆಯಷ್ಟೇ ಸರಳವಾಗಿ ನೆರವೇರಿತ್ತು. ಆದರೆ ಚಿತ್ರತಂಡ ಡೆವಿಲ್ ಚಿತ್ರದ ಕುರಿತಂತೆ ಇನ್ನು ಯಾವುದೇ ಪ್ರಚಾರ ಕಾರ್ಯ ಆರಂಭ ಮಾಡಿರಲಿಲ್ಲ. ದರ್ಶನ್ ಹುಟ್ಟು ಹಬ್ಬದಂದು ಅಧಿಕೃತವಾಗಿ ಟೀಸರ್ ರಿಲೀಸ್ ಆಗಿದೆ.

    ಈ ಹಿಂದೆ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೋ ಪೋಸ್ಟರ್ ಹಾಕಿ ಡೆವಿಲ್ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅಂತ ಹೇಳಿಕೊಂಡಿದ್ದರು.  ಈಗ ಈ ಚಿತ್ರಕ್ಕೆ ನಾಯಕಿಯ ಆಯ್ಕೆಯಾಗಿದ್ದಾರೆ ಎಂಬ ವಿಷಯವನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಾಕುತ್ತಿದ್ದಾರೆ. ಈ  ಮೇಲ್ಕಂಡ ಯಾವುದೇ ವಿಷಯಗಳು ಚಿತ್ರತಂಡದ ಅಧಿಕೃತ ಮಾಹಿತಿ ಆಗಿರುವುದಿಲ್ಲ. ಸದ್ಯದಲ್ಲೇ ನಮ್ಮ ಚಿತ್ರದ ಪ್ರಚಾರ ಕಾರ್ಯ ಆರಂಭಿಸುತ್ತೇವೆ‌. ನಮ್ಮ ವೈಷ್ಣೊ ಸ್ಟುಡಿಯೋಸ್ ಸಂಸ್ಥೆಯ ಮೂಲಕವೇ ಅಧಿಕೃತವಾಗಿ ಡೆವಿಲ್ ಚಿತ್ರದ ಬಗ್ಗೆ ಮಾಹಿತಿ ನೀಡುತ್ತಾ ಹೋಗುತ್ತೇವೆ ಎಂದು ನಿರ್ದೇಶಕ ಪ್ರಕಾಶ್ ವೀರ್ ತಿಳಿಸಿದ್ದರು.

     

    ಮಿಲನ ಪ್ರಕಾಶ್ (Milan Prakash) ಈ ಸಿನಿಮಾವನ್ನು ನಿರ್ದೇಶನ ಮಾಡಲಿದ್ದು, ಅಜನೀಶ್ ಲೋಕನಾಥ್ ಅವರ ಸಂಗೀತ ಸಂಯೋಜನೆ ಚಿತ್ರಕ್ಕೆ ಇರಲಿದೆ, ವೈಷ್ಣೋ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗಲಿದೆ. ಈ ನಡುವೆ ಮತ್ತೊಂದು ಸುದ್ದಿ ಗಾಂಧಿ ನಗರದಲ್ಲಿ ಜೋರಾಗಿಯೇ ಕೇಳಿ ಬರುತ್ತಿದೆ. ದರ್ಶನ್ ಮತ್ತು ಸುದೀಪ್ ಕಾಂಬಿನೇಷನ್ ನ  ದಿಗ್ಗಜರು 2 ಸಿನಿಮಾ ಬಗ್ಗೆ ಚರ್ಚೆ ನಡೆಯುತ್ತಿದೆ. ಮತ್ತೆ ಇಬ್ಬರು ಜೊತೆಯಾಗಿ ನಟಿಸುತ್ತಾರಾ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.

  • ಹೊಸ ಸಿನಿಮಾದ ಬಗ್ಗೆ ಅಧಿಕೃತ ಮಾಹಿತಿ ನೀಡಿದ ದರ್ಶನ್

    ಹೊಸ ಸಿನಿಮಾದ ಬಗ್ಗೆ ಅಧಿಕೃತ ಮಾಹಿತಿ ನೀಡಿದ ದರ್ಶನ್

    ದೇ ಮೊದಲ ಬಾರಿಗೆ ತಮ್ಮ ಅಭಿಮಾನಿಗಳಿಗೆ ಹೊಸ ಸಿನಿಮಾದ ಮಾಹಿತಿ ನೀಡಿದ್ದಾರೆ ನಟ ದರ್ಶನ್. ಸೋಷಿಯಲ್ ಮೀಡಿಯಾದ ಮೂಲಕ ತಮ್ಮ ಡೆವಿಲ್ ಸಿನಿಮಾದ ಅಪ್ ಡೇಟ್ ನೀಡಿರುವ ಅವರು, ತಮ್ಮ ಹುಟ್ಟು ಹಬ್ಬದ ಮುನ್ನಾ ದಿನ ಡೆವಿಲ್ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡುತ್ತಿರುವುದಾಗಿ ಬರೆದುಕೊಂಡಿದ್ದಾರೆ.

    ವೈಷ್ಣೋ ಸ್ಟುಡಿಯೋಸ್ ಲಾಂಛನದಲ್ಲಿ ಜೆ.ಜಯಮ್ಮ ಅವರು ನಿರ್ಮಿಸುತ್ತಿರುವ, ಪ್ರಕಾಶ್ ವೀರ್ ನಿರ್ದೇಶನದ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ (n) ನಾಯಕರಾಗಿ ನಟಿಸುತ್ತಿರುವ ಬಹು ನಿರೀಕ್ಷಿತ ‘ಡೆವಿಲ್’ ಚಿತ್ರದ  ಫಸ್ಟ್ ಲುಕ್ (First Look) ಟೀಸರ್ ಫೆಬ್ರವರಿ 15ರ‌ ರಾತ್ರಿ 11.59ಕ್ಕೆ ಬಿಡುಗಡೆಯಾಗಲಿದೆ. ಚಿತ್ರದ ಫಸ್ಟ್ ಲುಕ್ ಟೀಸರ್ ಗೆ ದರ್ಶನ್ ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

    ಮಿಲನ ಚಿತ್ರದ ಖ್ಯಾತಿಯ  ಪ್ರಕಾಶ್ ವೀರ್ ಅವರ ನಿರ್ದೇಶನದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಾಯಕರಾಗಿ ನಟಿಸುತ್ತಿರುವ ‘ಡೆವಿಲ್’ (Devil) ಚಿತ್ರದ ಸ್ಕ್ರಿಪ್ಟ್ ಪೂಜೆ  ಎರಡು ತಿಂಗಳ ಹಿಂದೆ ಸರಳವಾಗಿ ನೆರವೇರಿತ್ತು. ಆದರೆ ಚಿತ್ರತಂಡ ಡೆವಿಲ್ ಚಿತ್ರದ ಕುರಿತಂತೆ ಇನ್ನು ಯಾವುದೇ ಪ್ರಚಾರ ಕಾರ್ಯ ಆರಂಭ ಮಾಡಿರಲಿಲ್ಲ.

    ಮೊದಮೊದಲು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೋ ಪೋಸ್ಟರ್ ಹಾಕಿ ಡೆವಿಲ್ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅಂತ ಹೇಳಿಕೊಂಡಿದ್ದರು.  ಈಗ ಈ ಚಿತ್ರಕ್ಕೆ ನಾಯಕಿಯ ಆಯ್ಕೆಯಾಗಿದ್ದಾರೆ ಎಂಬ ವಿಷಯವನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಾಕುತ್ತಿದ್ದಾರೆ. ಈ  ಮೇಲ್ಕಂಡ ಯಾವುದೇ ವಿಷಯಗಳು ಚಿತ್ರತಂಡದ ಅಧಿಕೃತ ಮಾಹಿತಿ ಆಗಿರುವುದಿಲ್ಲ. ಸದ್ಯದಲ್ಲೇ ನಮ್ಮ ಚಿತ್ರದ ಪ್ರಚಾರ ಕಾರ್ಯ ಆರಂಭಿಸುತ್ತೇವೆ‌. ನಮ್ಮ ವೈಷ್ಣೊ ಸ್ಟುಡಿಯೋಸ್ ಸಂಸ್ಥೆಯ ಮೂಲಕವೇ ಅಧಿಕೃತವಾಗಿ ಡೆವಿಲ್ ಚಿತ್ರದ ಬಗ್ಗೆ ಮಾಹಿತಿ ನೀಡುತ್ತಾ ಹೋಗುತ್ತೇವೆ ಎಂದು ನಿರ್ದೇಶಕ ಪ್ರಕಾಶ್ ವೀರ್ ತಿಳಿಸಿದ್ದರು.

     

    ಮಿಲನ ಪ್ರಕಾಶ್ (Milan Prakash) ಈ ಸಿನಿಮಾವನ್ನು ನಿರ್ದೇಶನ ಮಾಡಲಿದ್ದು, ಅಜನೀಶ್ ಲೋಕನಾಥ್ ಅವರ ಸಂಗೀತ ಸಂಯೋಜನೆ ಚಿತ್ರಕ್ಕೆ ಇರಲಿದೆ, ವೈಷ್ಣೋ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗಲಿದೆ. ಈ ನಡುವೆ ಮತ್ತೊಂದು ಸುದ್ದಿ ಗಾಂಧಿ ನಗರದಲ್ಲಿ ಜೋರಾಗಿಯೇ ಕೇಳಿ ಬರುತ್ತಿದೆ. ದರ್ಶನ್ ಮತ್ತು ಸುದೀಪ್ ಕಾಂಬಿನೇಷನ್ ನ  ದಿಗ್ಗಜರು 2 ಸಿನಿಮಾ ಬಗ್ಗೆ ಚರ್ಚೆ ನಡೆಯುತ್ತಿದೆ. ಮತ್ತೆ ಇಬ್ಬರು ಜೊತೆಯಾಗಿ ನಟಿಸುತ್ತಾರಾ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.

  • ಸದ್ದಿಲ್ಲದೇ ಮೊದಲ ಹಂತದ ಶೂಟಿಂಗ್ ಮುಗಿಸಿದ ದರ್ಶನ್ ನಟನೆಯ ಡೆವಿಲ್

    ಸದ್ದಿಲ್ಲದೇ ಮೊದಲ ಹಂತದ ಶೂಟಿಂಗ್ ಮುಗಿಸಿದ ದರ್ಶನ್ ನಟನೆಯ ಡೆವಿಲ್

    ರ್ಶನ್ ಮುಖ್ಯಭೂಮಿಕೆಯ ಡೆವಿಲ್ ಸಿನಿಮಾದ ಮೊದಲ ಹಂತದ ಶೂಟಿಂಗ್ (shooting) ಮುಕ್ತಾಯವಾಗಿದೆ ಎಂದು ಸ್ವತಃ ನಿರ್ದೇಶಕ ಪ್ರಕಾಶ್ ಅವರೇ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಎರಡನೇ ಹಂತದ ಚಿತ್ರೀಕರಣವನ್ನು ಫೆಬ್ರವರಿ 2 ತಾರೀಖಿನಿಂದ ಆರಂಭಿಸೋದಾಗಿ ತಿಳಿಸಿದ್ದಾರೆ.

    ಕೆಲ ತಿಂಗಳ ಹಿಂದೆಯಷ್ಟೇ ‘ಡೆವಿಲ್’ (Devil) ಚಿತ್ರದ ಸ್ಕ್ರಿಪ್ಟ್ ಪೂಜೆ ಸರಳವಾಗಿ ನೆರವೇರಿತ್ತು. ಪೂಜೆ ಮುಗಿದಿದ್ದೆ ತಡ ಡೆವಿಲ್ ಹೆಸರಿನಲ್ಲಿ ಪೋಸ್ಟರ್ ಹರಿದಾಡಿದವು. ಆದರೆ, ಈ ಕುರಿತು ನಿರ್ದೇಶಕರು ಪ್ರತಿಕ್ರಿಯೆ ನೀಡಿದ್ದರು. ಡೆವಿಲ್ ಸಿನಿಮಾದ ಯಾವುದೇ ಮಾಹಿತಿ ನಂಬಬೇಡಿ. ನಾವೇ ಕೊಡುತ್ತೇವೆ ಎಂದಿದ್ದರು.

    ಶುಭದಿನವೆಂದು ಡೆವಿಲ್ ಚಿತ್ರದ ಸ್ಕ್ರಿಪ್ಟ್ ಪೂಜೆ ಮಾಡಿದ್ದೇವೆ. ಆದರೆ, ಚಿತ್ರದ ಫಸ್ಟ್ ಲುಕ್ (First Look) ಆಗಲಿ, ಪೋಸ್ಟರ್ ಆಗಲಿ ಯಾವುದು ನಾವು ಬಿಡುಗಡೆ ಮಾಡಿಲ್ಲ. ಕಾಟೇರ ಚಿತ್ರದ ನಂತರ ನಮ್ಮ ಚಿತ್ರದ ಪ್ರಚಾರ ಕಾರ್ಯ ಆರಂಭಿಸುತ್ತೇವೆ‌. ನಮ್ಮ ವೈಷ್ಣೊ ಸ್ಟುಡಿಯೋಸ್ ಸಂಸ್ಥೆಯ ಮೂಲಕವೇ ಅಧಿಕೃತವಾಗಿ ಡೆವಿಲ್ ಚಿತ್ರದ ಬಗ್ಗೆ ಮಾಹಿತಿ ನೀಡುತ್ತಾ ಹೋಗುತ್ತೇವೆ ಎಂದು ನಿರ್ದೇಶಕ ಪ್ರಕಾಶ್ ವೀರ್ ತಿಳಿಸಿದ್ದರು.

     

    ಮಿಲನ ಪ್ರಕಾಶ್ (Milan Prakash) ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದು, ಅಜನೀಶ್ ಲೋಕನಾಥ್ ಅವರ ಸಂಗೀತ ಸಂಯೋಜನೆ ಚಿತ್ರಕ್ಕೆ ಇರಲಿದೆ, ವೈಷ್ಣೋ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗಲಿದೆ. ಈ ನಡುವೆ ಮತ್ತೊಂದು ಸುದ್ದಿ ಗಾಂಧಿ ನಗರದಲ್ಲಿ ಜೋರಾಗಿಯೇ ಕೇಳಿ ಬರುತ್ತಿದೆ. ದರ್ಶನ್ ಮತ್ತು ಸುದೀಪ್ ಕಾಂಬಿನೇಷನ್ ನ  ದಿಗ್ಗಜರು 2 ಸಿನಿಮಾ ಬಗ್ಗೆ ಚರ್ಚೆ ನಡೆಯುತ್ತಿದೆ. ಮತ್ತೆ ಇಬ್ಬರು ಜೊತೆಯಾಗಿ ನಟಿಸುತ್ತಾರಾ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ಮುಂದಿನ ದಿನಗಳಲ್ಲಿ ಇದಕ್ಕೂ ಉತ್ತರ ಸಿಗಬಹುದು.

  • ದರ್ಶನ್ ಹುಟ್ಟು ಹಬ್ಬಕ್ಕೆ ಸ್ಪೆಷಲ್ ಗಿಫ್ಟ್

    ದರ್ಶನ್ ಹುಟ್ಟು ಹಬ್ಬಕ್ಕೆ ಸ್ಪೆಷಲ್ ಗಿಫ್ಟ್

    ಫೆಬ್ರವರಿ 16ರಂದು ದಾಸ ದರ್ಶನ್ (Darshan) ಹುಟ್ಟು ಹಬ್ಬವನ್ನು (Birthday) ಆಚರಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಅಭಿಮಾನಿಗಳಿಗೆ ದರ್ಶನ್ ಸಂದೇಶವೊಂದನ್ನು ರವಾನಿಸಿದ್ದು, ಯಾರೂ ಕೇಕ್ ಮತ್ತು ಬ್ಯಾನರ್ ಕಟ್ಟದಂತೆ ಹೇಳಿದ್ದಾರೆ. ಈ ನಡುವೆ ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದ್ದು, ಡೆವಿಲ್ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡುವ ಸಾಧ್ಯತೆ ಇದೆಯಂತೆ.

    ಈ ಹಿಂದೆ ಪ್ರಕಾಶ್ ವೀರ್ (Prakash Veer) ಅನಿರ್ದೇಶನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಾಯಕರಾಗಿ ನಟಿಸುತ್ತಿರುವ ‘ಡೆವಿಲ್’ (Devil) ಚಿತ್ರದ ಸ್ಕ್ರಿಪ್ಟ್ ಪೂಜೆ ಸರಳವಾಗಿ ನೆರವೇರಿದೆ. ಪೂಜೆ ಮುಗಿದಿದ್ದೆ ತಡ ಡೆವಿಲ್ ಹೆಸರಿನಲ್ಲಿ ಪೋಸ್ಟರ್ ಹರಿದಾಡಿದವು. ಆದರೆ, ಈ ಕುರಿತು ನಿರ್ದೇಶಕರು ಪ್ರತಿಕ್ರಿಯೆ ನೀಡಿದ್ದರು.

    ಶುಭದಿನವೆಂದು ಡೆವಿಲ್ ಚಿತ್ರದ ಸ್ಕ್ರಿಪ್ಟ್ ಪೂಜೆ ಮಾಡಿದ್ದೇವೆ. ಆದರೆ, ಚಿತ್ರದ ಫಸ್ಟ್ ಲುಕ್ (First Look) ಆಗಲಿ, ಪೋಸ್ಟರ್ ಆಗಲಿ ಯಾವುದು ನಾವು ಬಿಡುಗಡೆ ಮಾಡಿಲ್ಲ. ಕಾಟೇರ ಚಿತ್ರದ ನಂತರ ನಮ್ಮ ಚಿತ್ರದ ಪ್ರಚಾರ ಕಾರ್ಯ ಆರಂಭಿಸುತ್ತೇವೆ‌. ನಮ್ಮ ವೈಷ್ಣೊ ಸ್ಟುಡಿಯೋಸ್ ಸಂಸ್ಥೆಯ ಮೂಲಕವೇ ಅಧಿಕೃತವಾಗಿ ಡೆವಿಲ್ ಚಿತ್ರದ ಬಗ್ಗೆ ಮಾಹಿತಿ ನೀಡುತ್ತಾ ಹೋಗುತ್ತೇವೆ ಎಂದು ನಿರ್ದೇಶಕ ಪ್ರಕಾಶ್ ವೀರ್ ತಿಳಿಸಿದ್ದರು. ಇದೀಗ ಫಸ್ಟ್ ಲುಕ್ ರಿಲೀಸ್ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

     

    ಅಜನೀಶ್ ಲೋಕನಾಥ್ ಅವರ ಸಂಗೀತ ಸಂಯೋಜನೆ ಚಿತ್ರಕ್ಕೆ ಇರಲಿದ್ದು, ವೈಷ್ಣೋ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗಲಿದೆ. ಈ ನಡುವೆ ಮತ್ತೊಂದು ಸುದ್ದಿ ಗಾಂಧಿ ನಗರದಲ್ಲಿ ಜೋರಾಗಿಯೇ ಕೇಳಿ ಬರುತ್ತಿದೆ. ದರ್ಶನ್ ಮತ್ತು ಸುದೀಪ್ ಕಾಂಬಿನೇಷನ್ ನ  ದಿಗ್ಗಜರು 2 ಸಿನಿಮಾ ಬಗ್ಗೆ ಚರ್ಚೆ ನಡೆಯುತ್ತಿದೆ. ಮತ್ತೆ ಇಬ್ಬರು ಜೊತೆಯಾಗಿ ನಟಿಸುತ್ತಾರಾ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.

  • ಕೊನೆಗೂ ಕ್ಯಾಮೆರಾ ಕಣ್ಣಿಗೆ ಸಿಕ್ಕ ‘Bigg Boss Kannada’ ಶೋ ಡೈರೆಕ್ಟರ್

    ಕೊನೆಗೂ ಕ್ಯಾಮೆರಾ ಕಣ್ಣಿಗೆ ಸಿಕ್ಕ ‘Bigg Boss Kannada’ ಶೋ ಡೈರೆಕ್ಟರ್

    ನ್ನಡದ ಬಿಗ್ ಬಾಸ್ ಶೋ (Bigg Boss Kannada) ನಿರ್ದೇಶಕರು ಈ ಬಾರಿ ಬದಲಾಗಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಈ ಶೋವನ್ನು ಕಲರ್ಸ್ ಕನ್ನಡ ವಾಹಿನಿಯ ಬಿಸ್ನೆಸ್ ಹೆಡ್ ಆಗಿದ್ದ ಪರಮೇಶ್ ಗುಂಡ್ಕಲ್ ಅವರೇ ನಿರ್ದೇಶನ ಮಾಡುತ್ತಿದ್ದರು. ಪ್ರೊಮೋದಿಂದ ಹಿಡಿದು, ಅಲ್ಲಿ ನಡೆಯುವ ಟಾಸ್ಕ್ ತನಕವೂ ಅವರ ನಿರ್ದೇಶನದಲ್ಲೇ (Director) ತಯಾರಾಗುತ್ತಿದ್ದವು. ಈ ಬಾರಿ ಆ ಎಲ್ಲ ಜವಾಬ್ದಾರಿಯನ್ನು ಬೇರೆಯವರು ವಯಿಸಿಕೊಂಡಿದ್ದಾರೆ.

    ಪರಮೇಶ್ ಗುಂಡ್ಕಲ್ ಅವರು ಜಿಯೋ ಸಿನಿಮಾದ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಸ್ಥಾನವನ್ನು ಪ್ರಶಾಂತ್ ನಾಯಕ್ ವಹಿಸಿಕೊಂಡಿದ್ದಾರೆ. ಆದರೆ, ಬಿಗ್ ಬಾಸ್ ಸೀಸನ್ 10 ಅನ್ನು ಪ್ರಕಾಶ್ (Prakash) ಎನ್ನುವವರು ನಿರ್ದೇಶನ ಮಾಡಲಿದ್ದಾರೆ. ಕಲರ್ಸ್ ವಾಹಿನಿಯ ಅನೇಕ ರಿಯಾಲಿಟಿ ಶೋಗಳಿಗೆ ಇವರೇ ನಿರ್ದೇಶಕರಾಗಿಯೂ ಕೆಲಸ ಮಾಡಿದ್ದಾರೆ.

    ಕಲರ್ಸ್ ವಾಹಿನಿಯಲ್ಲಿ ಮೂಡಿ ಬರುತ್ತಿರುವ ರಾಜಾ ರಾಣಿ, ನಮ್ಮಮ್ಮ ಸೂಪರ್ ಸ್ಟಾರ್ ಸೇರಿದಂತೆ ಹಲವಾರು ಜನಪ್ರಿಯ ಕಾರ್ಯಕ್ರಮಗಳನ್ನು ನಿರ್ದೇಶನ ಮಾಡಿರುವ ಪ್ರಕಾಶ್, ಈ ಬಾರಿ ಬಿಗ್ ಬಾಸ್ ಶೋ ನಿರ್ದೇಶನ ಮಾಡಲು ಸರ್ವ ಸಿದ್ಧತೆ ಮಾಡಿಕೊಂಡಿದ್ದಾರೆ. ಈವರೆಗೂ ಬಿಗ್ ಬಾಸ್ ಪ್ರೊಮೋಗಳೆಲ್ಲ ಇವರ ನಿರ್ದೇಶನದಲ್ಲೇ ಮೂಡಿ ಬಂದಿವೆ.

    ಈ ಬಾರಿಯ ಬಿಗ್ ಬಾಸ್ ಹತ್ತು ಹಲವು ಕಾರಣಗಳಿಂದಾಗಿ ವಿಶೇಷ ಅನಿಸಿದೆ. ಕಾರ್ಯಕ್ರಮವು ಹೇಗೆ ವಿಭಿನ್ನವಾಗಿ ರೂಪಿತವಾಗುತ್ತಿದೆಯೋ, ಹಾಗೆಯೇ ಬಿಗ್ ಬಾಸ್ ಮನೆ ಕೂಡ ಹೊಸ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದೆ. ಹಲವು ವರ್ಷಗಳ ಕಾಲ ಬಿಗ್ ಬಾಸ್ ಮನೆಯನ್ನು ಇನೋವೆಟಿವ್ ಫಿಲ್ಮ್ ಸಿಟಿಯಲ್ಲಿ ನಿರ್ಮಾಣವಾಗುತ್ತಿತ್ತು. ವರ್ಷದಿಂದ ವರ್ಷಕ್ಕೆ ಸಣ್ಣ ಮಟ್ಟದಲ್ಲಿ ಬದಲಾವಣೆ ಮಾಡಿಕೊಂಡು ಕಾರ್ಯಕ್ರಮವನ್ನು ನಡೆಸಲಾಗುತ್ತಿತ್ತು. ಈ ವರ್ಷ ಎಲ್ಲವೂ ಬದಲಾಗಿದೆ.

     

    ಈ ಬಾರಿ ಇನೋವೆಟಿವ್ ಫಿಲ್ಮ್ ಸಿಟಿಯಲ್ಲಿ ಬಿಗ್ ಬಾಸ್ ನಡೆಯುತ್ತಿಲ್ಲ. ಬದಲಾಗಿ ಬೆಂಗಳೂರಿನ ದೊಡ್ಡ ಆಲದ ಮರದ ಬಳಿ ಮನೆಯನ್ನು ಹೊಸದಾಗಿ ನಿರ್ಮಾಣ ಮಾಡಲಾಗಿದೆ. ಇದು ಭಾರತದಲ್ಲೇ ಅತೀ ದೊಡ್ಡ ಬಿಗ್ ಬಾಸ್ ಮನೆ ಎಂಬ ಖ್ಯಾತಿಗೆ ಪಾತ್ರವಾಗಲಿದೆ. ಕಲರ್ಸ್ ಕನ್ನಡ ವಾಹಿನಿಯ ಬಿಸ್ನೆಸ್ ಹೆಡ್ ಪ್ರಶಾಂತ್ ನಾಯಕ್ ಈ ವಿಷಯದ ಕುರಿತು ಮಾತನಾಡಿ, ವಿಸ್ತೀರ್ಣದ ವಿಷಯದಲ್ಲಿ ಇದು ದೊಡ್ಡ ಮನೆ ಎಂದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪುಲ್ವಾಮಾ ದಾಳಿ ಕುರಿತಂತೆ ಕಾಂಗ್ರೆಸ್ ಕ್ಷಮೆ ಕೇಳಬೇಕು: ಪ್ರಕಾಶ್ ಜಾವಡೇಕರ್

    ಪುಲ್ವಾಮಾ ದಾಳಿ ಕುರಿತಂತೆ ಕಾಂಗ್ರೆಸ್ ಕ್ಷಮೆ ಕೇಳಬೇಕು: ಪ್ರಕಾಶ್ ಜಾವಡೇಕರ್

    ನವದೆಹಲಿ: ಪುಲ್ವಾಮಾ ದಾಳಿಯನ್ನು ನಾವೇ ಮಾಡಿದ್ದು ಎಂದು ಪಾಕಿಸ್ತಾನ ಪ್ರಕಟಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ದೇಶದ ಜನರ ಕ್ಷಮೆ ಕೇಳಬೇಕು ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಆಗ್ರಹಿಸಿದ್ದಾರೆ.

    ಪುಲ್ವಾಮಾ ಉಗ್ರರ ದಾಳಿ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರ ಕೈವಾಡ ಇದೆ ಎಂದು ಕಾಂಗ್ರೆಸ್ ನಾಯಕರು ಈ ಹಿಂದೆ ಆರೋಪಿಸಿದ್ದರು. ಆದರೆ ಸದ್ಯ ಪುಲ್ವಾಮಾ ದಾಳಿ ಇಮ್ರಾನ್ ಖಾನ್ ಸರ್ಕಾರ ಸಾಧನೆ ಎಂಬಂತೆ ಪಾಕ್ ಮಂತ್ರಿಯೇ ಹೇಳಿರುವುದರಿಂದ ಕಾಂಗ್ರೆಸ್ ನಾಯಕರು ಕ್ಷಮೆ ಕೇಳ ಬೇಕು ಎಂದು ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುವ ವೇಳೆ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.

    ಪುಲ್ವಾಮಾ ದಾಳಿಯ ಹಿಂದೆ ಪ್ರಧಾನಿ ಮೋದಿ, ಪಾಕ್ ಪ್ರಧಾನಿ ಇಮ್ರಾನ್ ಖಾನ್ ನಡುವೆ ಮ್ಯಾಚ್ ಫಿಕ್ಸಿಂಗ್ ನಡೆದಿದೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಗಂಭೀರ ಆರೋಪ ಮಾಡಿದ್ದರು. ಅಲ್ಲದೇ ದೇಶದ ಸಿಆರ್ ಪಿಎಫ್ ಸೈನಿಕರ ಮೇಲಿನ ದಾಳಿಯಿಂದ ಬಿಜೆಪಿ ಲಾಭ ಪಡೆಯುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದ್ದರು. ಕೇವಲ ಕಾಂಗ್ರೆಸ್ ಪಕ್ಷದ ನಾಯಕರು ಮಾತ್ರವಲ್ಲದೇ ವಿರೋಧ ಪಕ್ಷಗಳ ಸ್ಥಾನದಲ್ಲಿದ್ದ ಹಲವು ನಾಯಕರು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಆರೋಪಿಸಿದ್ದರು.

    ಪಾಕ್ ಸಂಸತ್ತಿನಲ್ಲಿ ಮಾತನಾಡಿದ್ದ ಸಚಿವ ಫವಾದ್ ಚೌಧರಿ, ಭಾರತದ ಗಡಿಯೊಳಗೆ ನುಗ್ಗಿ ಹೊಡೆದಿದ್ದೇವೆ. ಪುಲ್ವಾಮಾ ದಾಳಿ ಪ್ರಧಾನಿ ಇಮ್ರಾನ್ ಖಾನ್ ಸರ್ಕಾರದ ಬಹು ದೊಡ್ಡ ಸಾಧನೆ. ಪುಲ್ವಾಮಾ ದಾಳಿಯ ಯೋಜನೆ ಪಾಕಿಸ್ತಾನದಲ್ಲೇ ಸಿದ್ಧವಾಗಿತ್ತು. ಹೀಗಾಗಿ ಪುಲ್ವಾಮಾ ದಾಳಿಯ ಕೀರ್ತಿ ಇಮ್ರಾನ್ ಖಾನ್ ಸರ್ಕಾರಕ್ಕೆ ನೀಡಬೇಕು ಎಂದು ಹೇಳುವ ಮೂಲಕ ಪುಲ್ವಾಮಾ ದಾಳಿಯ ಹಿಂದಿನ ಸತ್ಯವನ್ನು ಒಪ್ಪಿಕೊಂಡಿದ್ದರು.

  • ಮಳೆ ಬಂದ್ರೆ ಡೇಂಜರ್ – ಕೊರೊನಾ ಹೆಚ್ಚಾಗೋ ಸಾಧ್ಯತೆ

    ಮಳೆ ಬಂದ್ರೆ ಡೇಂಜರ್ – ಕೊರೊನಾ ಹೆಚ್ಚಾಗೋ ಸಾಧ್ಯತೆ

    ಬೆಂಗಳೂರು: ಕೊರೊನಾ ವೈರಸ್ ಭೀತಿಯ ಸಮಯದಲ್ಲೇ ರಾಜ್ಯದಲ್ಲಿ ಹಲವೆಡೆ ಮಳೆಯಾಗುತ್ತಿದೆ. ಬೆಂಗಳೂರು ಸೇರಿ ಹಲವೆಡೆ ಮಳೆಯಾಗುತ್ತಿದೆ. ಆದರೆ ಈ ಮಳೆ ಬಂದರೆ ತೀರಾ ಅಪಾಯ ಎಂದು ಭೂಗರ್ಭ ತಜ್ಞರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

    ಎರಡು ದಿನಗಳಿಂದ ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕದ ಹಲವೆಡೆ ಭಾರೀ ಮಳೆ ಆಗಿದೆ. ಇಂದು ಸಹ ಚಿಕ್ಕಬಳ್ಳಾಪುರ, ಕೋಲಾರ ಮತ್ತು ಸಿಲಿಕಾನ್ ಸಿಟಿಯಲ್ಲೂ ಕೂಡ ಮಳೆ ಆರಂಭವಾಗಿದೆ. ಇದೇ ರೀತಿ ಮಳೆ ಮುಂದುವರಿದರೆ ಅಪಾಯ ಎದುರಾಗಬಹುದು ಎನ್ನುವ ಆತಂಕವನ್ನು ಭೂಗರ್ಭ ಶಾಸ್ತ್ರಜ್ಞ ಪ್ರಕಾಶ್ ಹೊರಹಾಕಿದ್ದಾರೆ.

    ಮಳೆಯಲ್ಲಿ ಕೊರೊನಾ ವೈರಸ್ ವ್ಯಾಪಕತೆ ಹೆಚ್ಚಾಗುತ್ತಂತೆ. ಅಲ್ಲದೇ ಮಳೆಯಿಂದ ಭೂಮಿಯಲ್ಲಿ ಈ ವೈರಸ್ ನೆಲೆಗೊಳ್ಳಲು ಬಹು ಸುಲಭ. ಹೀಗಾಗಿ ನೀರಿನಲ್ಲಿ ವೈರಸ್ ಸೇರಿಕೊಂಡು ಕುಡಿಯುವ ನೀರಿನ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಮಳೆಯಿಂದ ಕೊರೊನಾ ವೈರಸ್ ಹರಡುವ ಸಾಧ್ಯತೆಯಿದೆ ಎಂದು ಭೂಗರ್ಭ ತಜ್ಞರು ಹೇಳಿದ್ದಾರೆ.

    ಮಳೆ ಬಂದರೆ ವಾತಾವರಣ ತಂಪಾಗಿ, ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತದೆ. ಜೊತೆಗೆ ಈ ವೈರಸ್ ನೀರಿನಲ್ಲಿ ಕೂಡ ಸೇರಿಕೊಳ್ಳುವ ಸಾಧ್ಯತೆ ಇದೆ. ಕುಡಿಯುವ ನೀರಿನ ಮೂಲಕವೂ ಈ ವೈರಸ್ ನಮ್ಮ ದೇಹ ಸೇರುವ ಸಾಧ್ಯತೆ ಇದೆ. ಮಳೆಗಾಲದ ಮುಂಚೆಯೇ ಇದಕ್ಕೆ ಕಡಿವಾಣ ಹಾಕಬೇಕು ಎಂದು ಭೂಗರ್ಭ ಶಾಸ್ತ್ರಜ್ಞ ಪ್ರಕಾಶ್ ಎಚ್ಚರಿಕೆ ನೀಡಿದ್ದಾರೆ.

    ಬೆಂಗಳೂರಿನ ಹೆಣ್ಣೂರು, ಮಾನ್ಯತಾ ಟೆಕ್ ಪಾರ್ಕ್, ಸಂಪಿಗೆಹಳ್ಳಿ, ಹೆಗ್ಡೆ ನಗರ ಮತ್ತು ಕೊತ್ತನೂರು ಸುತ್ತಮುತ್ತ ಮಳೆಯಾಗುತ್ತಿದೆ. ಸುಮಾರು ಅರ್ಧ ಗಂಟೆಗಳಿಂದ ಧಾರಾಕಾರ ಮಳೆಯಾಗುತ್ತಿದೆ.

  • ಹುಚ್ಚು ಅಭಿಮಾನ ಪ್ರದರ್ಶಿಸಿದ ಅಂಬರೀಶ್ ಅಭಿಮಾನಿ

    ಹುಚ್ಚು ಅಭಿಮಾನ ಪ್ರದರ್ಶಿಸಿದ ಅಂಬರೀಶ್ ಅಭಿಮಾನಿ

    ಮಂಡ್ಯ: ದಿವಂಗತ ನಟ ಅಂಬರೀಶ್ ಹುಟ್ಟು ಹಬ್ಬದ ಪ್ರಯುಕ್ತ ಅವರ ಹುಚ್ಚು ಅಭಿಮಾನಿಯೊಬ್ಬ ತನ್ನ ಕೈ ಮೇಲೆ ಅಂಬರೀಶ್ ನಟಿಸಿರುವ ಸಿನಿಮಾದ ಹೆಸರುಗಳನ್ನು ಹರಿತವಾದ ಲೋಹದಿಂದ ಬರೆದುಕೊಂಡಿದ್ದಾನೆ.

    ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಬೇವಿನಕುಪ್ಪೆ ಗ್ರಾಮದ ಪ್ರಕಾಶ್ ಎಂಬವರೇ ಈ ರೀತಿಯ ಹುಚ್ಚು ಅಭಿಮಾನ ಪ್ರದರ್ಶಿಸಿದ್ದಾರೆ. ಪ್ರಕಾಶ್ ತಮ್ಮ ಕೈ ಮೇಲೆ ಅಂಬರೀಶ್, ಸುಮಲತಾ ಹಾಗೂ ಅಭಿ ಎಂದು ಬರೆದುಕೊಂಡಿರುವುದಲ್ಲದೇ ಅಂಬರೀಶ್ ಅವರ ನಟನೆಯ ಚಿತ್ರಗಳ ಹೆಸರನ್ನು ಬರೆದುಕೊಂಡಿದ್ದಾರೆ.

    ಅಂಬರೀಶ್ ಬದುಕಿದ್ದಾಗ ಒಂದು ದಿನ ನಿಮ್ಮೂರಿಗೆ ಭೇಟಿ ನೀಡಿ ನಿಮ್ಮ ಮನೆಗೆ ಬರುವೆ ಎಂದು ಹೇಳಿದ್ದರಂತೆ. ಆದರೆ ಅಭಿಮಾನಿಯ ಆಸೆ ಈಡೇರಿಸುವ ಮೊದಲೇ ಅಂಬರೀಶ್ ಅವರು ಇಹಲೋಕ ತ್ಯಜಿಸಿದ್ದು, ಅವರ ಕುಟುಂಬದವರಾದರು ನಮ್ಮ ಮನೆಗೆ ಬರಬೇಕೆಂದು ಅಂಬಿ ಅಭಿಮಾನಿ ಪ್ರಕಾಶ್ ಒತ್ತಾಯಿಸುತ್ತಿದ್ದಾರೆ.