Tag: Prakash Belawadi

  • ಇಂಡೋ-ಪಾಕ್ ಕದನ ಹಿನ್ನೆಲೆ ಕುರಿತಾದ ಸಿನಿಮಾ ಸಿಗ್ನಲ್ ಮ್ಯಾನ್ 1971

    ಇಂಡೋ-ಪಾಕ್ ಕದನ ಹಿನ್ನೆಲೆ ಕುರಿತಾದ ಸಿನಿಮಾ ಸಿಗ್ನಲ್ ಮ್ಯಾನ್ 1971

    ಹಿಂದೂಸ್ಥಾನ್ ಮುಕ್ತ ಮೀಡಿಯಾ ಎಂಟರ್ ಟೈನರ್ ಲಾಂಛನದಲ್ಲಿ ಗಣೇಶ್ ಪ್ರಭು ಬಿ.ವಿ ಅವರು ನಿರ್ಮಿಸಿರುವ, ಕೆ.ಶಿವರುದ್ರಯ್ಯ (K. Shivarudraiah) ನಿರ್ದೇಶನದ ಹಾಗೂ ಪ್ರಕಾಶ್ ಬೆಳವಾಡಿ, ರಾಜೇಶ್ ನಟರಂಗ, ವೆಂಕಟೇಶ್ ಪ್ರಸಾದ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ “ಸಿಗ್ನಲ್ ಮ್ಯಾನ್ 1971” (Signal Man 1971) ಚಿತ್ರ ಆಗಸ್ಟ್ ನಲ್ಲಿ  ಬಿಡುಗಡೆಯಾಗಲಿದೆ. ಇತ್ತೀಚೆಗೆ ನಡೆದ ಪತ್ರಿಕಾಗೋಷ್ಟಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.

    1971ರಲ್ಲಿ ನಡೆದ ಇಂಡೋ – ಪಾಕ್ ಕದನದ ಹಿನ್ನೆಲೆಯನ್ನು ಈ ಚಿತ್ರದಲ್ಲಿ ಅಳವಡಿಸಿಕೊಡಲಾಗಿದೆ. ಜೊತೆಗೆ ಯಾರು ಇಳಿಯದ, ಹತ್ತದ ರೈಲ್ವೆ ನಿಲ್ದಾಣದಲ್ಲಿ ಇಪ್ಪತ್ತು ವರ್ಷಗಳ ಕಾಲ ಕಾರ್ಯ ನಿರ್ವಹಿಸುವ “ಸಿಗ್ನಲ್ ಮ್ಯಾನ್” ಒಬ್ಬನ ಜೀವನದ ಕಥಯೂ ಇದರಲ್ಲಿದೆ‌. ಇಪ್ಪತ್ತು ವರ್ಷಗಳ ಕಾಲ ಜನಸಂಪರ್ಕವಿಲ್ಲದ ಸ್ಥಳದಲ್ಲಿದ್ದ ಈತ ಗೊಂದಲಕ್ಕೀಡಾಗುತ್ತಾನೆ. ಗೊಂದಲದಿಂದ ಆಚೆ ಬಂದ ನಂತರ ರಾಜ್ಯ ಹಾಗೂ ರಾಷ್ಟ್ರಕ್ಕೆ ಬೇಕಾಗುವ ವ್ಯಕ್ತಿಯಾಗುತ್ತಾನೆ. ಈ ಪಾತ್ರದಲ್ಲಿ ಪ್ರಕಾಶ್ ಬೆಳವಾಡಿ ಅಭಿನಯಿಸಿದ್ದಾರೆ. ಹೆಚ್ಚಿನ ಭಾಗದ ಚಿತ್ರೀಕರಣ ಊಟಿಯಲ್ಲಿ ಹಾಕಲಾಗಿದ್ದ ರೈಲ್ವೆ ನಿಲ್ದಾಣದ ಸೆಟ್ ನಲ್ಲೇ ನಡೆದಿದೆ. ಗಣೇಶ್ ಪ್ರಭು ಅವರ ನಿರ್ಮಾಣ, ಶೇಖರ್ ಚಂದ್ರು ಛಾಯಾಗ್ರಹಣ, ಸುರೇಶ್ ಅರಸ್ ಸಂಕಲನ, ಒಸೆಪಚ್ಚನ್ ಸಂಗೀತ ನಿರ್ದೇಶನ ಹಾಗೂ ಸಂತೋಷ್ ಪಾಂಚಾಲ್ ಕಲಾ ನಿರ್ದೇಶನ ಈ ಚತ್ರಕ್ಕಿದೆ. ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ, ಚೆನ್ನೈ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ, ಮುಂಬೈ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಹಾಗೂ ಬಾಂಗ್ಲಾದೇಶದಲ್ಲಿ ನಡೆದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಸೇರಿದಂತೆ ಅನೇಕ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಈ ಚಿತ್ರ ಪ್ರದರ್ಶನವಾಗಿದೆ ಎಂದರು ನಿರ್ದೇಶಕ ಕೆ.ಶಿವರುದ್ರಯ್ಯ.

    ಇದು ನಮ್ಮ ಸಂಸ್ಥೆಯಿಂದ ನಿರ್ಮಾಣವಾಗಿರುವ ಮೊದಲ ಸಿನಿಮಾ ಎಂದು ಮಾತನಾಡಿದ ನಿರ್ಮಾಪಕ ಗಣೇಶ್ ಪ್ರಭು, ನಾನು ಈ ಚಿತ್ರದಲ್ಲಿ ಅಭಿನಯಿಸಿದ್ದೇನೆ. ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ. ಆಗಸ್ಟ್ ನಲ್ಲಿ ಚಿತ್ರವನ್ನು ಬಿಡುಗಡೆ ಮಾಡುತ್ತೇವೆ‌. ಬಂಗ್ಲಾದೇಶದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ನಾನು ಹೋಗಿದೆ.‌ ಆ ಚಿತ್ರೋತ್ಸವದಲ್ಲಿ ಬೆಸ್ಟ್ ಫ್ಯೂಚರ್ ಫಿಲ್ಮ್ ಪ್ರಶಸ್ತಿ ಬಂದಿದೆ. ಅಲ್ಲಿನ ಜನರು ನಮ್ಮ ಚಿತ್ರದ ಕುರಿತು ಆಡಿದ ಪ್ರೋತ್ಸಾಹಭರಿತ ಮಾತುಗಳನ್ನು ಕೇಳಿ ಖುಷಿಯಾಯಿತು ಎಂದರು.

    ಚಿತ್ರದಲ್ಲಿ ನಟಿಸಿರುವ ರಾಜೇಶ್ ನಟರಂಗ , ಡಿಂಪಿ ಪದ್ಯ, ಛಾಯಾಗ್ರಾಹಕ ಶೇಖರ್ ಚಂದ್ರು ಹಾಗೂ ಕಾರ್ಯಕಾರಿ ನಿರ್ಮಾಪಕ, ನಟ ವೆಂಕಟೇಶ್ ಪ್ರಸಾದ್ ಚಿತ್ರದ ಕುರಿತು ಮಾತನಾಡಿದರು.

  • ಮಧ್ಯಪ್ರದೇಶದ ಕಡೆಗೆ ‘ಮೈ ಹೀರೋ’ ಪಯಣ : ಹಾಲಿವುಡ್ ನಟ ಭಾಗಿ

    ಮಧ್ಯಪ್ರದೇಶದ ಕಡೆಗೆ ‘ಮೈ ಹೀರೋ’ ಪಯಣ : ಹಾಲಿವುಡ್ ನಟ ಭಾಗಿ

    ಎ.ವಿ .ಸ್ಟುಡಿಯೋಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ‘ಮೈ ಹೀರೊ’ (My Hero) ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಚಿಕ್ಕಮಗಳೂರಿನ ಸುಂದರ ಪರಿಸರದಲ್ಲಿ ಹತ್ತುದಿನಗಳ  ಚಿತ್ರೀಕರಣ ನಡೆದಿದೆ. ಹಾಲಿವುಡ್ ನಟ ಜಿಲಾಲಿ ರೆಜ್ ಕಲ್ಲಾಹ್ (Jilali Rej Kallah), ಬಾಲನಟ ವೇದಿಕ್ ಕೌಶಿಕ್ (Vedic Kaushik), ದತ್ತಣ್ಣ, ಪ್ರಕಾಶ್ ಬೆಳವಾಡಿ (Prakash Belawadi) , ನಿರಂಜನ್ ದೇಶಪಾಂಡೆ, ತನುಜಾ ಕೃಷ್ಣಪ್ಪ, “ಕಾಂತಾರ” ಖ್ಯಾತಿಯ ನವೀನ್ ಬೊಂದೇಲ್ ಮುಂತಾದವರು ಈ ಹಂತದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು.

    ಈ ತಿಂಗಳ ಕೊನೆಗೆ ದ್ವಿತೀಯ ಹಂತದ ಚಿತ್ರೀಕರಣ ಮಧ್ಯಪ್ರದೇಶದಲ್ಲಿ ಆರಂಭವಾಗಲಿದೆ. ಗಗನ್ ಬಡೇರಿಯಾ ಸಂಗೀತ ನಿರ್ದೇಶನ ಹಾಗೂ ವೀನಸ್ ನಾಗರಾಜ ಮೂರ್ತಿ ಅವರ ಛಾಯಾಗ್ರಹಣ “ಮೈ ಹೀರೊ” ಚತ್ರಕ್ಕಿದ್ದು, ಎ.ವಿ.ಸ್ಟುಡಿಯೋಸ್ ಮತ್ತು ಜಿಮ್ ಶಿವು ಸಂಭಾಷಣೆ ಬರೆಯುತ್ತಿದ್ದಾರೆ. ಇದನ್ನೂ ಓದಿ: ಸಾಲುಮರದ ತಿಮ್ಮಕ್ಕನ ಆಶೀರ್ವಾದ ಪಡೆದ ಹಿಂದಿ ನಟಿ

    ವಿಶ್ವದಾದ್ಯಂತ ಇರುವ ಸಾಮಾಜಿಕ ಸಮಸ್ಯೆಯೊಂದನ್ನು ಕೇಂದ್ರವಾಗಿಟ್ಟುಕೊಂಡು ಅವಿನಾಶ್ ವಿಜಯಕುಮಾರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇದು ಅವರಿಗೆ ಚೊಚ್ಚಲ ನಿರ್ದೇಶನದ ಚಿತ್ರ. ಎ.ವಿ.ಸ್ಟುಡಿಯೋಸ್ ಮೂಲಕ ಈ ಚಿತ್ರವನ್ನು ಅವಿನಾಶ್ ವಿಜಯ ಕುಮಾರ್ ಅವರೆ ನಿರ್ಮಿಸುತ್ತಿದ್ದಾರೆ.

    ಅಮೆರಿಕಾದಿಂದ ಬಂದ ಅಧಿಕಾರಿಯೊಬ್ಬರು ಭಾರತದ ಹುಡುಗನೊಬ್ಬನನ್ನು ಭೇಟಿಯಾಗುತ್ತಾರೆ‌‌. ಇವರಿಬ್ಬರ ನಡುವೆ ಹೆಚ್ಚಿನ ಕಥೆ ಸಾಗುತ್ತದೆ.  ಹಾಲಿವುಡ್ ನಟ ಜಿಲಾಲಿ ರೆಜ್ ಕಲ್ಲಾಹ್ ಹಾಗೂ ಬಾಲನಟ ವೇದಿಕ್ ಕೌಶಿಕ್ ಈ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

  • ಐದು ನಿರ್ದೇಶಕರ ಹೊಸಬಗೆಯ ‘ಪೆಂಟಗನ್’ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್

    ಐದು ನಿರ್ದೇಶಕರ ಹೊಸಬಗೆಯ ‘ಪೆಂಟಗನ್’ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್

    ನ್ನಡದ ಪ್ರಯೋಗಾತ್ಮಕ ಹಾಗೂ ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ‘ಪೆಂಟಗನ್’ (Pentagon) ಚಿತ್ರದ ಬಿಡುಗಡೆ ದಿನಾಂಕ (Release) ಘೋಷಣೆಯಾಗಿದೆ. ಏಪ್ರಿಲ್ 7 ರಂದು ದೇಶಾದ್ಯಂತ ಈ ಸಿನಿಮಾವನ್ನು ಬಿಡುಗಡೆ ಮಾಡುವುದಾಗಿ ಚಿತ್ರದ ಕ್ರಿಯೇಟಿವ್ ಡೈರೆಕ್ಟರ್ ಗುರು ದೇಶಪಾಂಡೆ (Guru Deshpande) ಸೋಷಿಯಲ್ ಮೀಡಿಯಾದಲ್ಲಿ ಈ ವಿಷಯವನ್ನು ಹಂಚಿಕೊಂಡಿದ್ದಾರೆ.

    ಐದು ಜನ ನಿರ್ದೇಶಕರು, ಐದು ಕಥೆಗಳು, ಐದು ಜನ ಬರಹಗಾರರು, ಐದು ಹೀರೋಗಳು ಹೀಗೆ ಐದೈದು ವಿಷಯಗಳನ್ನು ಪೆಂಟಗನ್ ಚಿತ್ರದಲ್ಲಿ ಹೇಳಲು ಹೊರಟಿದೆ ಚಿತ್ರತಂಡ. ಎಲ್ಲ ವಯಸ್ಸಿನವರಿಗೂ ಇಷ್ಟವಾಗುವಂತಹ ಕಥೆಗಳನ್ನು ಒಳಗೊಂಡಿರುವ ಸಿನಿಮಾ ಇದಾಗಿದ್ದು, ಚಿತ್ರದಲ್ಲಿ ಸಾಕಷ್ಟು ಪ್ರಯೋಗಗಳನ್ನು ಮಾಡಲಾಗಿದೆ ಎಂದಿದ್ದಾರೆ ಗುರು ದೇಶಪಾಂಡೆ. ಹಾಗಾಗಿ ಸಿನಿಮಾ ಟ್ರೈಲರ್ ಬಿಡುಗಡೆಯಾದ ದಿನದಿಂದ ನಿರೀಕ್ಷೆ ಮೂಡಿಸಿದೆ. ಇದನ್ನೂ ಓದಿ: ಪವನ್ ಕಲ್ಯಾಣ್‌ಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಆರ್.ಚಂದ್ರು

    ಪ್ರತಿಭಾವಂತ ನಿರ್ದೇಶಕರುಗಳಾದ ರಾಘು ಶಿವಮೊಗ್ಗ, ಆಕಾಶ್ ಶ್ರೀವತ್ಸ, ಚಂದ್ರ ಮೋಹನ್, ಕಿರಣ್ ಕುಮಾರ್ ಹಾಗೂ ಮತ್ತೊಂದು ಕಥೆಗೆ ಗುರು ದೇಶಪಾಂಡೆ ಅವರೇ ನಿರ್ದೇಶನ ಮಾಡಿದ್ದಾರೆ. ಪ್ರಕಾಶ್ ಬೆಳವಾಡಿ, ಕಿಶೋರ್ (Kishore), ರವಿಶಂಕರ್ ಸೇರಿದಂತೆ ಹೆಸರಾಂತ ನಟರೇ ತಾರಾ ಬಳಗದಲ್ಲಿ ಇದ್ದಾರೆ. ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದ ಹಾಡುಗಳು ಜನರ ಗಮನ ಸೆಳೆದಿವೆ.

    ಇದು ಪ್ರಯೋಗಾತ್ಮಕ ಸಿನಿಮಾವಲ್ಲ, ಪಕ್ಕಾ ಕಮರ್ಷಿಯಲ್ ಚಿತ್ರ. ನೋಡುಗನಿಗೆ ಏನೆಲ್ಲ ಬೇಕಿದೆಯೋ ಎಲ್ಲವನ್ನೂ ಈ ಸಿನಿಮಾದಲ್ಲಿ ತೋರಿಸುವ ಪ್ರಯತ್ನ ಮಾಡಿದ್ದೇವೆ. ಹೊಸ ಆಲೋಚನೆಯ ನಿರ್ದೇಶಕರು, ಬರಹಗಾರರು ಮತ್ತು ಹೊಸ ಕಲಾವಿದರು ಕೂಡ ಸಿನಿಮಾದ ಭಾಗವಾಗಿದ್ದಾರೆ. ಹಾಗಾಗಿ ಪ್ರೇಕ್ಷಕರಿಗೆ ಈ ಸಿನಿಮಾ ಹೊಸ ಅನುಭವನ್ನು ನೀಡಲಿದೆ ಎನ್ನುತ್ತಾರೆ ಗುರು ದೇಶಪಾಂಡೆ.

  • Special- ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂವಾದದಲ್ಲಿ ಪಾಲ್ಗೊಂಡ ನಟ-ನಟಿಯರು ಯಾರು?

    Special- ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂವಾದದಲ್ಲಿ ಪಾಲ್ಗೊಂಡ ನಟ-ನಟಿಯರು ಯಾರು?

    ನಿನ್ನೆ ಬೆಂಗಳೂರಿನಲ್ಲಿ ನಡೆದ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಜೊತೆಗಿನ ಸಂವಾದದಲ್ಲಿ ಕನ್ನಡ ಸಿನಿಮಾ ರಂಗದ ಕೆಲ ಗಣ್ಯರು ಭಾಗಿಯಾಗಿದ್ದರು. ರಂಗಭೂಮಿ, ಕಿರುತೆರೆ ಮತ್ತು ಸಿನಿಮಾ ರಂಗದ ಸಿಲೆಬ್ರಿಟಿಗಳು ಭಾಗಿಯಾಗಿದ್ದಲ್ಲದೇ, ಅಮಿತ್ ಶಾ ಜೊತೆಗೆ ಹಲವು ವಿಷಯಗಳ ಬಗ್ಗೆ ಸಂವಾದಿಸಿದ್ದಾರೆ. ದೇಶದ ನಾನಾ ವಿಷಯಗಳ ಬಗ್ಗೆ ಚರ್ಚೆ ಕೂಡ ಮಾಡಿದ್ದಾರೆ. ನಂತರ ತಮ್ಮ ಅನುಭವಗಳನ್ನು ಅವರು ಹಂಚಿಕೊಂಡಿದ್ದಾರೆ.

    ಅಮಿತ್ ಶಾ ಜೊತೆಗಿನ ಸಂವಾದದಲ್ಲಿ ನಿರ್ದೇಶಕ ಟಿ.ಎಸ್. ನಾಗಾಭರಣ (Nagabharana), ಸೇತುರಾಮ್, ನಟ ಸುನೀಲ್ ಪುರಾಣಿಕ್, ಪ್ರಕಾಶ್ ಬೆಳವಾಡಿ (Prakash Belawadi), ನಟಿಯರಾದ ಸಂಯುಕ್ತ ಹೊರನಾಡು (Samyukta Horanadu), ಸುಧಾ ಬೆಳವಾಡಿ, ಶ್ವೇತಾ ಶ್ರೀವಾತ್ಸವ್ (Shweta Srivatsav), ಕಾರುಣ್ಯ ರಾಮ್, ಸಿರಿ ಪ್ರಹ್ಲಾದ್, ಅನಿತಾ ಭಟ್ ಸೇರಿದಂತೆ ಹಲವರು ಭಾಗಿಯಾಗಿದ್ದರು. ಸಂವಾದದ ನಂತರ ಪ್ರತಿಯೊಬ್ಬರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದು ವಿಶೇಷವಾಗಿತ್ತು.

    ನಟ, ನಿರ್ದೇಶಕ, ಸಂವಾದ ಕಾರ್ಯಕ್ರಮದ ನಿರೂಪಕ ಪ್ರಕಾಶ್ ಬೆಳವಾಡಿ ಮಾತನಾಡಿ, ‘ದೇಶದ ಗೃಹ ಸಚಿವರ ಜೊತೆ ಮುಕ್ತ ಸಂವಾದ ನಡೆಸೋಕೆ ಅವಕಾಶ ಸಿಗೋದು ಅಪರೂಪ. ಗೃಹ ಸಚಿವರು ಯಾವುದೇ ಪ್ರಶ್ನೆ ಕೇಳೋಕೆ ಅಡ್ಡ ಬರಲಿಲ್ಲ. ನಾನು ಬೆಂಗಳೂರಿನ ಪರವಾಗಿ ಪ್ರಶ್ನೆ ಕೇಳಿದೆ. ಎರಡು ದಿನ ನಿದ್ದೆಗೆಟ್ಟು ಪ್ರಶ್ನೆ ತಯಾರಿಸಿದ್ದೆ. ಅಮಿತ್ ಷಾ ಹೇಳಿದೆಲ್ಲ ನಡೆದರೆ ಬೆಂಗಳೂರು ಅಭಿವೃದ್ಧಿ ಆಗುತ್ತೆ. ಇಲ್ಲಿನ ಸಿಎಂ ಅರ್ಬನ್ ಡೆವೆಲಪ್ಮೆಂಟ್ ಬಗ್ಗೆ ಯೋಜನೆ ಕೊಟ್ಟಿದ್ದಾರೆ ನಾವು ಅದನ್ನು ಮತ್ತೊಮ್ಮೆ ಗೆದ್ದರೆ ತರತ್ತೇವೆ ಅಂದರು’ ಎಂದರು.

    ಸಂಯುಕ್ತಾ ಹೊರನಾಡು ಮಾತನಾಡಿ, ‘ಬೆಂಗಳೂರಿಗೆ ಕೇಳಬೇಕಾದ ಪ್ರಶ್ನೆಗಳನ್ನು ಪ್ರಕಾಶ್ ಬೆಳವಾಡಿ ಕೇಳಿದ್ರು. ಬೆಂಗಳೂರಿನ ಪಾಥ್ ಹೋಲ್, ಭ್ರಷ್ಟಾಚಾರದ ಬಗ್ಗೆ ಸಾಕಷ್ಟು ಪ್ರಶ್ನೆಗಳಿದ್ದವು. ಅಮಿತ್ ಷಾ ತುಂಬಾ ಚೆನ್ನಾಗಿ ಉತ್ತರ ಕೊಟ್ಟರು. ಮುಂದೆ ಬರುವ ಎಲೆಕ್ಷನ್ ಬಗ್ಗೆಯೂ ಉತ್ತರ ಸಿಕ್ಕಿದೆ. ನನಗೂ ತುಂಬಾ ಗೊಂದಲಗಳಿದ್ದವು. ಜಿಎಸ್ ಟಿ ಬಗ್ಗೆ, ಹಿಂದೆ ಹೇರಿಕೆ ಬಗ್ಗೆ, ಕನ್ನಡದ ಬಗ್ಗೆ ಈ ಪ್ರಶ್ನೆಗಳಿಗೆ ಅವರು ಉತ್ತರ ಕೊಟ್ಟರು’ ಎಂದರು.

    ‘ಸಂವಾದ ಕಾರ್ಯಕ್ರಮ ಆಯೋಜನೆ ಮಾಡಿದವರಿಗೆ ಧನ್ಯವಾದಗಳು. ತುಂಬಾ ಚೆನ್ನಾಗಿ ಕಾರ್ಯಕ್ರಮ ನಡೆಯಿತು. ಕರ್ನಾಟಕದ ಪರವಾಗಿ ಸಾಕಷ್ಟು ಪ್ರಶ್ನೆಗಳು ಕೇಳಿದರು. ಎಲ್ಲದಕ್ಕೂ ಉತ್ತರ ಸಿಕ್ಕಿತ್ತು.’ ಎಂದಿದ್ದಾರೆ ನಟಿ ಶ್ವೇತಾ ಶ್ರೀವಾತ್ಸವ್.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಪೆಂಟಗನ್’ ಸಿನಿಮಾದ 3ನೇ ಕಥೆಯ ಲಿರಿಕಲ್ ವಿಡಿಯೋ ಸಾಂಗ್ ರಿಲೀಸ್

    ‘ಪೆಂಟಗನ್’ ಸಿನಿಮಾದ 3ನೇ ಕಥೆಯ ಲಿರಿಕಲ್ ವಿಡಿಯೋ ಸಾಂಗ್ ರಿಲೀಸ್

    ದು ಕಥೆಗಳನ್ನು ಒಳಗೊಂಡ, ಐವರು ನಿರ್ದೇಶಕರು ನಿರ್ದೇಶನ ಮಾಡಿರುವ ಪೆಂಟಗನ್ ಸಿನಿಮಾದ 5 ನೇ ಕಥೆಯ ಟೀಸರ್ ಈಗಾಗಲೇ ಬಿಡುಗಡೆಯಾಗಿ ಸದ್ದು ಮಾಡಿದ್ದು, ಸಾಕಷ್ಟು ಚರ್ಚೆ  ಕೂಡ ಆಗಿದೆ. ಇದೀಗ ಈ ಚಿದ್ರದಲ್ಲಿನ ಮೂರನೇ ಕಥೆಯ ‘ಬಾ ಹೊರಗೆ ಬಾ ‘ ಲಿರಿಕಲ್ ವಿಡಿಯೋ ಸಾಂಗ್ ಅನ್ನು ಪೆಬ್ರವರಿ 22 ರಂದು ಸಂಜೆ 4 ಗಂಟೆಗೆ ಶ್ರೀ ರೇಣುಕಾಂಬ ಸ್ಟುಡಿಯೋದಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಪೆಂಟಗನ್ ಸಿನಿಮಾದ ಈ ಕಥೆಯಲ್ಲಿ ಸಾಮಾಜಿಕ ಜಾಲತಾಣದ ಮೋಸ, ಅಪರಾಧ ಜಗತ್ತು, ಯವ ಪೀಳಿಗೆಯ ಭವಿಷ್ಯದ ಕುರಿತು ಬೆಳಕು ಚೆಲ್ಲುವ ಕಥೆಯಿದು.

    ರಾಘು ಶಿವಮೊಗ್ಗ ನಿರ್ದೇಶನದಲ್ಲಿ ಈ ಅಧ್ಯಾಯದ ಮುಖ್ಯ ಭೂಮಿಕೆಯಲ್ಲಿ ಪ್ರಕಾಶ್ ಬೆಳವಾಡಿ, ತನಿಷಾ ಕುಪ್ಪಂದ, ಪ್ರೇರಣಾ,ಸಾಗರ್,ರಾಕೇಶ ಇನ್ನು ಹಲವರು ಕಾಣಿಸಿಕೊಂಡಿದ್ದಾರೆ. ಈ ಅಧ್ಯಾಯಕ್ಕೆ ಕಿರಣ್ ಹಂಪಾಪುರ ಸಿನಿಮಾಟೋಗ್ರಫಿ ಮಾಡಿದ್ದು, ಮಣಿಕಾಂತ್ ಕದ್ರಿ ಅವರ ಸಂಗೀತ ಸಂಯೋಜನೆಯಿದೆ. ಸಾಹಿತ್ಯ ರಾಘು ಶಿವಮೊಗ್ಗ, ಸಂಕಲನ ವೆಂಕಟೇಶ ಯುಡಿವಿ, ವ್ಯಾಸರಾಜ್ ಸೋಸಲೆ ಅವರ ಕಂಠದಲ್ಲಿ ಹಾಡು ಮೂಡಿ ಬಂದಿದೆ. ಪೆಂಟಗನ್ ಸಿನಿಮಾದಲ್ಲಿ ಒಟ್ಟು ಐದು ಕಥೆಗಳಿದ್ದು, ಆಕಾಶ್ ಶ್ರೀವತ್ಸ (ಶಿವಾಜಿ ಸುರತ್ಕಲ್) ಚಂದ್ರಮೋಹನ್ (ಬ್ರಹ್ಮಚಾರಿ), ರಾಘು ಶಿವಮೊಗ್ಗ (ಚೂರಿಕಟ್ಟೆ), ಕಿರಣ್ ಕುಮಾರ್ (Debut) ಹಾಗೂ ಗುರು ದೇಶಪಾಂಡೆ ತಲಾ ಒಂದೊಂದು ಕಥೆಯನ್ನು ನಿರ್ದೇಶನ ಮಾಡಿದ್ದಾರೆ. ಜಿ ಸಿನಿಮಾಸ್ ಬ್ಯಾನರ್ ನಲ್ಲಿ ಮೂಡಿ ಬಂದಿರುವ ಈ ಸಿನಿಮಾಗೆ ಕ್ರಿಯೇಟಿವ್ ಹೆಡ್ ಮತ್ತು ನಿರ್ಮಾಪಕರು ಗುರು ದೇಶಪಾಂಡೆ.

    ತಮ್ಮ ಬ್ಯಾನರ್ ಅಡಿಯಲ್ಲಿ ಈಗಾಗಲೇ ಅನೇಕ ನಿರ್ದೇಶಕರನ್ನು ಪರಿಚಯಿಸಿರುವ ಗುರು ದೇಶಪಾಂಡೆ, ಜಂಟಲ್ ಮನ್ ಮೂಲಕ ಜಡೇಶ್ ಹಂಪಿ, ಲವ್ ಯೂ ರಚ್ಚು ಮೂಲಕ ಶಂಕರ್ ಅವರನ್ನು ಸಿನಿಮಾ ರಂಗಕ್ಕೆ ನಿರ್ದೇಶಕರಾಗಿ ಪರಿಚಯಿಸಿದ್ದಾರೆ. ರಾಜಾ ಹುಲಿ ಹಾಗೂ ಜಾನ್ ಜಾನಿ ಜನಾರ್ದನ್ ಗಳಂತ ಚಿತ್ರಗಳ ನಿರ್ದೇಶಕರಾದ ಗುರು ದೇಶಪಾಂಡೆ ಮೂರು ವರ್ಷಗಳ ನಂತರ ಮತ್ತೆ ನಿರ್ದೇಶನಕ್ಕೆ ಮರಳಿದ್ದಾರೆ. ಇದನ್ನೂ ಓದಿ:ಸೀರೆಯುಟ್ಟು ಮಿಂಚಿದ `ವಜ್ರಕಾಯ’ ನಟಿ ನಭಾ ನಟೇಶ್

    ತಮ್ಮ ಬ್ಯಾನರ್ ಬಗ್ಗೆ ಗುರು ದೇಶಪಾಂಡೆ, “ನಮ್ಮ ಜಿ ಸಿನಿಮಾಸ್ ಕೇವಲ ಮನರಂಜನೆಯ ಸಿನಿಮಾಗಳನ್ನು ಮಾತ್ರ ಮಾಡದೇ, ಚಿಂತನೆ- ಪ್ರಚೋದನೆ ಹಾಗೂ ಪ್ರಚಲಿತ ವಿಷಯಗಳನ್ನು ಸಿನಿಮಾವಾಗಿಸುವ ಪ್ರಯತ್ನಗಳನ್ನು ಮಾಡುತ್ತಿದೆ. ಈಗಾಗಲೇ ಹಲವು ನಿರ್ದೇಶಕರನ್ನು, ತಂತ್ರಜ್ಞರನ್ನು ಮತ್ತು ಹೊಸ ಹೊಸ ಕಲಾವಿದರನ್ನು ಸಿನಿಮಾ ರಂಗಕ್ಕೆ ಪರಿಚಯಿಸಿದೆ. ಪೆಂಟಗನ್ ಸಿನಿಮಾದಲ್ಲೂ ಇದನ್ನು ಮುಂದುವರೆಸಿದೆ,” ಎನ್ನುತ್ತಾರೆ. ಪೆಭ್ರವರಿ 22 ರಂದು ಸಾಂಗ್  ರಿಲೀಸ್ ಮಾಡಿ, ಮುಂದಿನ ದಿನಗಳಲ್ಲಿ ಸಿನಿಮಾ ಬಿಡುಗಡೆಗೆ  ತಯಾರಿಯಲ್ಲಿ ಚಿತ್ರತಂಡ ತೊಡಗಿಕೊಳ್ಳಲಿದೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಹಲವು ಅಚ್ಚರಿಗಳೊಂದಿಗೆ ತಯಾರಾಗಲಿದೆ ‘ಮೈ ಹೀರೋ’ ಸಿನಿಮಾ

    ಹಲವು ಅಚ್ಚರಿಗಳೊಂದಿಗೆ ತಯಾರಾಗಲಿದೆ ‘ಮೈ ಹೀರೋ’ ಸಿನಿಮಾ

    ನ್ನಡದಲ್ಲಿ ಈಗ ಉತ್ತಮ ಕಂಟೆಂಟ್ ವುಳ್ಳ ಸಿನಿಮಾಗಳು ಹೆಚ್ಚು ಬರುತ್ತಿದೆ. ಅದೇ ಸಾಲಿಗೆ ಸೇರುವ ಮತ್ತೊಂದು ಒಳ್ಳೆಯ ಕಂಟೆಂಟ್ ಓರಿಯಂಟೆಡ್ ಸಿನಿಮಾ ‘ಮೈ ಹೀರೋ’ . ಇತ್ತೀಚಿಗೆ ಈ ಚಿತ್ರದ ಮುಹೂರ್ತ ಸಮಾರಂಭ ಬಸವನಗುಡಿಯ ರೇಣುಕಾದೇವಿ ದೇವಸ್ಥಾನದಲ್ಲಿ ನೆರವೇರಿತು. ಮೊದಲ ಸನ್ನಿವೇಶಕ್ಕೆ ಮಹಾಲಕ್ಷ್ಮಿ ಆರಂಭಫಲಕ ತೋರಿದರು. ನಟ ದತ್ತಣ್ಣ ಕ್ಯಾಮೆರಾ ಚಾಲನೆ ಮಾಡಿದರು.

    ನಾನು ಮೂಲತಃ ರಂಗಭೂಮಿ ಕಲಾವಿದ . ಸ್ಯಾನ್ ಫ್ರಾನ್ಸಿಸ್ಕೊ ಫಿಲಂ ಸ್ಕೂಲ್ ನಲ್ಲಿ ನಿರ್ದೇಶನದ ಕುರಿತು ಹಾಗೂ ಬಾಂಬೆ ಅನುಪಮ್ ಖೇರ್ ಫಿಲಂ ಇನ್ಸ್ಟಿಟ್ಯೂಟ್ ನಲ್ಲಿ ಅಭಿನಯ ತರಭೇತಿ ಪಡೆದಿದ್ದೇನೆ. ನಮ್ಮದೇ ಆದ ಎ ವಿ ಸ್ಟುಡಿಯೋಸ್ ಮೂಲಕ ಈ ಚಿತ್ರ ನಿರ್ಮಾಣ ಮಾಡುತ್ತಿದ್ದೇವೆ. ಇದು ನನ್ನ ಮೊದಲ ನಿರ್ದೇಶನದ ಚಿತ್ರ. ಇದು ಬರೀ ಕರ್ನಾಟಕ, ಭಾರತ ಮಾತ್ರವಲ್ಲ. ಇಡೀ ಪ್ರಪಂಚದಲ್ಲಿರುವ ಸಾಮಾಜಿಕ ಸಮಸ್ಯೆಗಳನ್ನು ಕೇಂದ್ರವಾಗಿಟ್ಟುಕೊಂಡು ಹೆಣೆದಿರುವ ಕಥೆ. ಅಮೇರಿಕಾದಿಂದ ಬಂದ ಅಧಿಕಾರಿಯೊಬ್ಬರು ಭಾರತಕ್ಕೆ ಬಂದಾಗ ಹುಡುಗನೊಬ್ಬನ ಪರಿಚಯವಾಗುತ್ತದೆ. ಇವರಿಬ್ಬರ ನಡುವೆ ಹೆಚ್ಚಿನ ಕಥೆ ಸಾಗುತ್ತದೆ. ಕೆಲವು ಚಿತ್ರದಲ್ಲಿ ಭಾರತವನ್ನು ಬಡ ರಾಷ್ಟ್ರ ಎಂದು ಬಿಂಬಿಸಿ ತೋರಿಸಲಾಗುತ್ತದೆ. ಆದರೆ ನಮ್ಮ ಚಿತ್ರದಲ್ಲಿ ಭಾರತವನ್ನು ಬೇರೆಯದೇ ರೀತಿಯಲ್ಲಿ ತೋರಿಸುತ್ತಿದ್ದೇವೆ‌. ಚಿತ್ರ ನೋಡಿದ ಮೇಲೆ ಭಾರತವನ್ನು ನೋಡುವ ರೀತಿ ಬದಲಾಗಬಹುದು ಎಂಬುದು ನನ್ನ ಅನಿಸಿಕೆ‌. ಹಾಲಿವುಡ್ ನಟ ಜಿಲಾಲಿ  ರೆಜ್ ಕಲ್ಲಾಹ್ ಹಾಗೂ ಬಾಲನಟ ವೇದಿಕ್ ಕೌಶಿಕ್ ಚಿತ್ರದ ಪ್ರಮುಖಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪ್ರಕಾಶ್ ಬೆಳವಾಡಿ ಅವರು ಜಿಲ್ಲಾಧಿಕಾರಿಯಾಗಿ, ದತ್ತಣ್ಣ ಪುರೋಹಿತರ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.  ನಿರಂಜನ್ ದೇಶಪಾಂಡೆ ಕೂಡ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

    ಚಿಕ್ಕಮಗಳೂರಿನಲ್ಲಿ ಚಿತ್ರೀಕರಣ ಆರಂಭವಾಗುತ್ತದೆ. ಮಧ್ಯಪ್ರದೇಶ ಹಾಗೂ ಯು ಎಸ್ ಎ ನಲ್ಲೂ ಚಿತ್ರೀಕರಣ ನಡೆಯುತ್ತದೆ. ಕನ್ನಡ, ಹಿಂದಿ ಹಾಗೂ ಇಂಗ್ಲೀಷ್ ಭಾಷೆಗಳಲ್ಲಿ ಈ ಚಿತ್ರ ಬರಲಿದೆ‌. ಮುಂದೆ ಬೇರೆ ಭಾಷೆಗಳಲ್ಲೂ ಬಿಡುಗಡೆ ಮಾಡುವ ಸಾಧ್ಯತೆಯಿದೆ.  ಮೂರು ಹಾಡುಗಳಿರುವ ಈ ಚಿತ್ರಕ್ಕೆ ಗಗನ್ ಬಧಾರಿಯಾ ಸಂಗೀತ ನೀಡಲಿದ್ದಾರೆ. ಎರಡು ಕನ್ನಡ ಹಾಗೂ ಒಂದು ಇಂಗ್ಲಿಷ್ ಹಾಡು ಚಿತ್ರದಲ್ಲಿರುತ್ತದೆ. ಕುಮಾರಗೌಡ ಈ ಚಿತ್ರದ ಛಾಯಾಗ್ರಾಹಕರು. ಚಿತ್ರಕಥೆಯನ್ನು ನಾನು  ಮುತ್ತುರಾಜ್ ಬರೆದಿದ್ದೇವೆ. ಜೆಮ್ ಶಿವು ಸಂಭಾಷಣೆ ಬರೆದಿದ್ದಾರೆ. ಇದು ಇಲ್ಲಿನ ತಂತ್ರಜ್ಞರ ಮಾಹಿತಿ. ಹಾಲಿವುಡ್ ನ ತಂತ್ರಜ್ಞರು ಸಹ ನಮ್ಮ ಚಿತ್ರದಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ನಿರ್ದೇಶಕ ಹಾಗೂ ನಿರ್ಮಾಪಕ ಅವಿನಾಶ್ ವಿಜಯಕುಮಾರ್ “ಮೈ ಹೀರೋ” ಬಗ್ಗೆ ಮಾಹಿತಿ ನೀಡಿದರು. ಇದನ್ನೂ ಓದಿ: 150 ಕೋಟಿ ಮೌಲ್ಯದ ಹೊಸ ಮನೆಯನ್ನು ಪೋಷಕರಿಗೆ ಗಿಫ್ಟ್ ನೀಡಿದ ಧನುಷ್

    ನಾನು ಕೂಡ ರಂಗಭೂಮಿ ಕಲಾವಿದ. ಹದಿನೈದಕ್ಕೂ ಹೆಚ್ಚು ಚಿತ್ರಗಳಲ್ಲಿ ಹಾಗೂ ಕೆಲವು ವೆಬ್ ಸೀರೀಸ್ ಗಳಲ್ಲಿ ನಟಿಸಿದ್ದೇನೆ‌. ಈ ಚಿತ್ರದ ಕಥೆ ಇಷ್ಟವಾಯಿತು ಎಂದು ಹಾಲಿವುಡ್ ನಟ ಜಿಲಾಲಿ ಹೇಳಿದರು. ಕಲಾವಿದರಾದ ಪ್ರಕಾಶ್ ಬೆಳವಾಡಿ, ದತ್ತಣ್ಣ, ನಿರಂಜನ್ ದೇಶಪಾಂಡೆ ಹಾಗೂ ಸಂಗೀತ ನಿರ್ದೇಶಕ ಗಗನ್ ಬಧಾರಿಯಾ ಪತ್ರಿಕಾಗೋಷ್ಠಿಯಲ್ಲಿ “ಮೈ ಹೀರೋ” ಚಿತ್ರದ ಬಗ್ಗೆ ಮಾತನಾಡಿದರು.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಾನು ಪಠಾಣ್ ಸಿನಿಮಾ ನೋಡುತ್ತೇನೆ: ಬಹಿರಂಗವಾಗಿ ಘೋಷಿಸಿಕೊಂಡ ನಟ ಪ್ರಕಾಶ್ ಬೆಳವಾಡಿ

    ನಾನು ಪಠಾಣ್ ಸಿನಿಮಾ ನೋಡುತ್ತೇನೆ: ಬಹಿರಂಗವಾಗಿ ಘೋಷಿಸಿಕೊಂಡ ನಟ ಪ್ರಕಾಶ್ ಬೆಳವಾಡಿ

    ಠಾಣ್ ಸಿನಿಮಾ ಬಾಯ್ಕಾಟ್ ಮಾಡಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ಶುರುವಾಗಿದೆ. ಈ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ತೊಟ್ಟಿದ್ದಾರೆ ಎನ್ನುವುದು ಒಂದು ಕಡೆಯಾದರೆ, ಈ ಬಿಕಿನಿ ತೊಟ್ಟ ಸಂದರ್ಭದಲ್ಲಿ ಬರುವ ಹಾಡೊಂದರ ಸಾಹಿತ್ಯ ‘ನಾಚಿಕೆ ಇಲ್ಲದ ಬಣ್ಣ’ ಎನ್ನುವುದಾಗಿದೆ. ಇದು ಹಿಂದೂಗಳನ್ನು ಹೀಯಾಳಿಸುವ ಉದ್ದೇಶದಿಂದಲೇ ಮಾಡಿದ ಕೃತ್ಯ ಎಂದು ಹೇಳಲಾಗುತ್ತಿದೆ. ಹಾಗಾಗಿ ಪಠಾಣ್ ಸಿನಿಮಾವನ್ನು ಬಾಯ್ಕಾಟ್ ಮಾಡಿ ಎನ್ನುವ ಧ್ವನಿ ಜೋರಾಗಿದೆ.

    ಈ ಕುರಿತು ನಟ ಪ್ರಕಾಶ್ ಬೆಳವಾಡಿ ಮಾಧ್ಯಮವೊಂದರ ಜೊತೆ ಮಾತನಾಡಿ, ‘ಸಿನಿಮಾ ರಂಗದಲ್ಲಿ ಬಿಗುವಿನ ವಾತಾವರಣವಿದೆ. ಸಿನಿಮಾವನ್ನು ಬಾಯ್ಕಾಟ್ ಮಾಡಬೇಕಾ ಅಥವಾ ಬೇಡವಾ ಎನ್ನುವುದರ ಕುರಿತು ಚರ್ಚೆಯಾಗುತ್ತಿದೆ. ಚರ್ಚೆ ಆಗುತ್ತಿರುವ ವಿಷಯ ಎಷ್ಟು ಸಭ್ಯ ಎಂದು ಯೋಚಿಸಬೇಕಿದೆ. ಮಾತಾಡೋಕೆ ತುಂಬಾ ವಿಷಯ ಇದೆ. ಆದರೆ, ಪರಿಸ್ಥಿತಿ ಕೆಟ್ಟದಾಗಿದೆ. ಚರ್ಚೆ, ವಿವಾದ ಏನೇ ಇರಲಿ, ನಾನು ಆ ಸಿನಿಮಾವನ್ನು ನೋಡುತ್ತೇನೆ’ ಎಂದು ಹೇಳಿದ್ದಾರೆ. ಅಂದಹಾಗೆ ಪ್ರಕಾಶ್ ಬೆಳವಾಡಿ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ: ‘ಕೋಟಿಗೊಬ್ಬ’ ಕ್ಯಾಲೆಂಡರ್ ರಿಲೀಸ್: 20 ಕಲಾವಿದರ ಕುಂಚದಲ್ಲಿ ಮೂಡಿಬಂದ ವಿಷ್ಣುವರ್ಧನ್

    ವಿವಾದದ ಕುರಿತು ಮಾತನಾಡಿರುವ ಶಾರುಖ್ ಖಾನ್. ನಾವು ಸಿನಿಮಾವನ್ನು ಸಿನಿಮಾದಂತೆ ನೋಡಬೇಕು. ನಾನಂತೂ ಸಿನಿಮಾವಾಗಿಯೇ ಅಲ್ಲಿ ಕೆಲಸ ಮಾಡಿದ್ದೇನೆ. ಈ ವಿವಾದವನ್ನು ಯಾಕೆ ಎಬ್ಬಿಸುತ್ತಿದ್ದಾರೆ ಎಂದು ಎಲ್ಲರಿಗೂ ಗೊತ್ತು. ನನ್ನ ಮನಸ್ಸಲ್ಲಂತೂ ಯಾವುದೇ ಕೆಟ್ಟ ಆಲೋಚನೆಗಳು ಇಲ್ಲ. ಈ ವಿವಾದದಿಂದ ಸಿನಿಮಾ ಸಾಕಷ್ಟು ಪ್ರಚಾರ ಪಡೆದುಕೊಂಡಿದೆ. ಹಾಗಾಗಿ ಜನರು ಚಿತ್ರವನ್ನು ಗೆಲ್ಲಿಸುತ್ತಾರೆ ಎನ್ನುವ ವಿಶ್ವಾಸ ನನಗಿದೆ ಎಂದು ಅವರು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸ್ವಾತಂತ್ರ್ಯ ದಿನಾಚರಣೆ : ಇಂದು ಕಿರುತೆರೆಯಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ

    ಸ್ವಾತಂತ್ರ್ಯ ದಿನಾಚರಣೆ : ಇಂದು ಕಿರುತೆರೆಯಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ

    ಬಾಲಿವುಡ್ ನಲ್ಲಿ ಸಂಚಲನ ಸೃಷ್ಟಿ ಮಾಡಿದ್ದ, ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಇಂದು ಝೀ ವಾಹಿನಿಯಲ್ಲಿ ಪ್ರಸಾರಕಾಣಲಿದೆ. ಮಧ್ಯಾಹ್ನ ಮೂರು ಗಂಟೆಗೆ ಪ್ರಸಾರವಾಗಲಿರುವ ಈ ಸಿನಿಮಾ ದೇಶಾದ್ಯಂತ ಸಾಕಷ್ಟು ಚರ್ಚೆ ಹುಟ್ಟು ಹಾಕಿತ್ತು. ಅಲ್ಲದೇ ಬಾಕ್ಸ್ ಆಫೀಸಿನಲ್ಲಿ ಸಖತ್ ಸದ್ದು ಮಾಡಿತ್ತು.

    ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ರಿಲೀಸ್ ಆಗುತ್ತಿದ್ದಂತೆಯೇ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ, ಈ ಸಿನಿಮಾದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಉತ್ತರ ಪ್ರದೇಶ್, ಗುಜರಾತ್, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಈ ಸಿನಿಮಾಗೆ ತೆರಿಗೆ ವಿನಾಯತಿ ನೀಡುವ ಮೂಲಕ, ಹೆಚ್ಚೆಚ್ಚು ಜನರಿಗೆ ತಲುಪಿಸಲಾಯಿತು. ಅಲ್ಲದೇ, ಈ ಸಿನಿಮಾದ ಕುರಿತು ಪರ ಮತ್ತು ವಿರೋಧದ ಮಾತುಗಳು ಕೂಡ ಕೇಳಿ ಬಂದವು. ಇದನ್ನೂ ಓದಿ:ಗಂಟಲು ನೋವಿನ ಔಷಧಿ ವಿಚಾರಕ್ಕೆ ಸೋನು ಕಾಲೆಳೆದ ಕಿಚ್ಚ ಸುದೀಪ್

    ಕಾಶ್ಮೀರ ಪಂಡಿತರ ಹತ್ಯೆಯನ್ನು ಪ್ರಮುಖವಾಗಿಟ್ಟುಕೊಂಡು ಬಂದಿರುವ ಈ ಸಿನಿಮಾದಲ್ಲಿ ಕನ್ನಡಿಗ ಪ್ರಕಾಶ್ ಬೆಳವಾಡಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ ಎನ್ನುವುದು ವಿಶೇಷ. ಥಿಯೇಟರ್ ನಲ್ಲಿ ಕೇವಲ ಹಿಂದಿಯಲ್ಲಿ ಮಾತ್ರ ಈ ಸಿನಿಮಾ ಬಿಡುಗಡೆ ಆಗಿತ್ತು. ಇದೀಗ ಕನ್ನಡವೂ ಸೇರಿದಂತೆ ಹಲವು ಭಾಷೆಗಳಿಗೆ ಈ ಚಿತ್ರ ಡಬ್ ಆಗಿದೆ. ಝೀ ಕನ್ನಡದಲ್ಲಿ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಕನ್ನಡದಲ್ಲೇ ಪ್ರಸಾರವಾಗಲಿದೆ.

    Live Tv
    [brid partner=56869869 player=32851 video=960834 autoplay=true]

  • ಸಾಹಿತಿಗಳಿಗೆ ಓದೋಕೆ ಬರೆಯೋಕೆ ಬಿಟ್ರೆ ಬೇರೇನೂ ಗೊತ್ತಿಲ್ಲ: ರಂಗಕರ್ಮಿ ಪ್ರಕಾಶ್ ಬೆಳವಾಡಿ

    ಸಾಹಿತಿಗಳಿಗೆ ಓದೋಕೆ ಬರೆಯೋಕೆ ಬಿಟ್ರೆ ಬೇರೇನೂ ಗೊತ್ತಿಲ್ಲ: ರಂಗಕರ್ಮಿ ಪ್ರಕಾಶ್ ಬೆಳವಾಡಿ

    ಬೆಂಗಳೂರು: ಹಿರಿಯ ರಂಗಕರ್ಮಿ ಪ್ರಕಾಶ್ ಬೆಳವಾಡಿ ಅವರ ಸಂದರ್ಶನದ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಪ್ರಕಾಶ್ ಬೆಳವಾಡಿ, ಸಾಹಿತಿಗಳು ಅನಾವಶ್ಯಕವಾಗಿ ಮಾತನಾಡೋದನ್ನು ನಿಲ್ಲಿಸಬೇಕು ಎಂದು ಹೇಳಿದ್ದಾರೆ.

    ಕರ್ನಾಟಕದಲ್ಲಿ ಯಾವುದೇ ಸರ್ಕಾರಿ ಕಚೇರಿಗಳಿಗೆ ಹೋದ್ರೆ ಎಲ್ಲ ಕಡೆಯೂ ಸಾಹಿತಿಗಳ ಫೋಟೋ ಹಾಕಿರುತ್ತಾರೆ. ರಾಜ್ಯದ ದೊಡ್ಡ ಎಂಜಿನಿಯರ್ ಗಳು, ಸಂಶೋಧನಕಾರರು ಮತ್ತು ವೈದ್ಯರು, ದೊಡ್ಡ ರೈತರ ಫೋಟೋಗಳು ಎಲ್ಲಿಯೂ ಕಾಣುವುದಿಲ್ಲ. ಮಹಾನ್ ಸಾಧನೆ ಮಾಡಿದವರಿಗೆ ಕರ್ನಾಟಕದಲ್ಲಿ ಗೌರವ ಇಲ್ಲ. ದೊಡ್ಡ ಬಾಯಿಯುಳ್ಳ ಸಾಹಿತಿಗಳನ್ನು ಎಲ್ಲಾ ಕಾರ್ಯಕ್ರಮಗಳಿಗೂ ಕರೆದುಕೊಂಡು ಬರುತ್ತಾರೆ. ದೊಡ್ಡ ಸಾಹಿತಿಗಳಿಗೆ ಬದನೆಕಾಯಿ ಹೇಗೆ ಬೆಳೆಯುತ್ತಾರೆ ಎಂಬುದೇ ಗೊತ್ತಿಲ್ಲ. ಸಾಹಿತಿಗಳಿಗೆ ಓದೋಕೆ ಬರೆಯೋಕೆ ಬಿಟ್ರೆ ಏನೂ ಗೊತ್ತಿಲ್ಲ ಎಂದು ಪ್ರಕಾಶ್ ಬೆಳವಾಡಿ ವಾಗ್ದಾಳಿ ನಡೆಸಿದ್ದಾರೆ.

    ಮಾಜಿ ಪ್ರಧಾನಿ ದೇವೇಗೌಡರಿಗೆ ಗೊತ್ತಿರುವಷ್ಟು ಕರ್ನಾಟಕದ ಮಾಹಿತಿ ಬೇರೆ ಯಾವ ಸಾಹಿತಿಗಳಿಗೂ ತಿಳಿದಿರಲ್ಲ. ಅವರಿಗೆ ಕುಡಿಯುವ ನೀರಿನ ಬೆಲೆ ಗೊತ್ತಿಲ್ಲ. ಯಾವ ಪರಿಸರಕ್ಕೆ ಯಾವ ಬೆಳೆ ಬೆಳೆಯಬೇಕು ಎಂಬುದು ಗೊತ್ತಿಲ್ಲ. ಬದಲಾಗುತ್ತಿರುವ ಜಗತ್ತಿನ ಆಧುನಿಕ ತಂತ್ರಜ್ಞಾನದ ಮಾಹಿತಿ ಅವರಿಗೆ ಗೊತ್ತಿರಲ್ಲ. ಬೆಂಗಳೂರಲ್ಲಿ ರಾಕೆಟ್ ಸೈನ್ಸ್ ಇದೆ. ಆದ್ರೆ ಎಲ್ಲಿಯೂ ಒಬ್ಬ ರಾಕೆಟ್ ವಿಜ್ಞಾನಿಯ ಫೋಟೋವನ್ನು ನಾವು ಕಾಣುವುದಿಲ್ಲ. ಒಂದು ವೇಳೆ ನಾವು ಸಾಹಿತಿಗಳ ಬಳಿ ನಮ್ಮ ಮಕ್ಕಳನ್ನು ಟ್ಯೂಶನ್ ಗೆ ಕಳಿಸಿದ್ರೆ ಅವರನ್ನ ನಾಶ ಮಾಡ್ತಾರೆ. ಎಲ್ಲಾದ್ರೂ ಹೋಗುವಾಗ ಕಾರ್ ಟಯರ್ ಪಂಚರ್ ಆದ್ರೆ ಅದನ್ನ ಹೇಗೆ ರಿಪೇರಿ ಮಾಡಬೇಕು ಎನ್ನುವ ವಿಚಾರವೂ ಗೊತ್ತಿರಲ್ಲ ಎಂದು ಅವರು ಸಾಹಿತಿಗಳನ್ನು ಟೀಕಿಸಿದ್ದಾರೆ.

    ಮನೆಯಲ್ಲಿ ಒಂದು ವಿದ್ಯುತ್ ಸ್ವಿಚ್ ಹೋದರೆ ಅದನ್ನು ರಿಪೇರಿ ಮಾಡುವ ಬದಲು ದೇಶದ ಆರ್ಥಿಕ ಸ್ಥಿತಿ ಎಲ್ಲಿಗೆ ಬಂತು. ಮೋದಿಯವರ ಆರ್ಥಿಕ ನೀತಿ ಎಲ್ಲಿಗೆ ಬಂದಿದೆ ಎಂಬ ದೊಡ್ಡ ಲೇಖನಗಳನ್ನು ಬರೆಯುತ್ತಾರೆ. ಮನೆಯಲ್ಲಿ ಎಂಜಿನಿಯರ್ ಓದಿರುವ ಮಗನಿದ್ರೂ, ಅವನ ತಲೆಯಲ್ಲಿ ಎಡ, ಬಲ ಅಂತಾ ಉಪದೇಶ ಮಾಡಿದ್ದರಿಂದ ಆತನೂ ರಿಪೇರಿ ಮಾಡೋದಕ್ಕೆ ಹೋಗಲ್ಲ ಎಂದು ವ್ಯಂಗ್ಯವಾಡಿದ್ರು.

    ಓದೋದು ನಿಮ್ಮ ಕೆಲಸವಾಗಿದ್ದು, ರಾಜ್ಯಕ್ಕೆ ಹಿತವಾದದನ್ನು ಓದಿ ತಿಳಿದುಕೊಂಡು ನಮಗೂ ಹೇಳಿಕೊಡಿ. ಕರ್ನಾಟಕ ನೈಸರ್ಗಿಕ ಸಂಪತ್ತಿನಿಂದ ಭರಪೂರವಾಗಿದೆ. ಎಲ್ಲಿ ಯಾವ ಉದ್ಯಮ ಆರಂಭಿಸಬೇಕು. ಪರಿಸರಕ್ಕನುಗುಣವಾಗಿ ಕೃಷಿ ಚಟುವಟಿಕೆ ಹೇಗೆ ನಡೆಸಬೇಕು ಎಂಬುದರ ಕುರಿತಾದ ವಿಶೇಷ ಮಾಹಿತಿಗಳನ್ನು ಕಲೆ ಹಾಕಿ ರಾಜ್ಯದ ಜನತೆಗೆ ಮಾರ್ಗದರ್ಶನ ನೀಡಿ. ಐದು ವರ್ಷ ಸುಮ್ಮನಿದ್ದು, ಎಲ್ಲ ವಲಯಗಳ ಮಾಹಿತಿಯನ್ನು ಪಡೆದುಕೊಳ್ಳಬೇಕು. ಸೈನ್ಸ್ ಬಗ್ಗೆ ಜ್ಞಾನ ಇದ್ದವನು ಸಂಶೋಧನೆ, ಎಂಜಿನಿಯರ್, ಮೆಡಿಕಲ್ ವಿಭಾಗಕ್ಕೆ ಸೇರುವುದು. ಕಾಮರ್ಸ್ ಬಗೆಗೆ ಆಸಕ್ತಿಯುಳ್ಳವರು ಮಾರುಕಟ್ಟೆ, ಹಣಕಾಸಿನ ವ್ಯವಹಾರ, ಬ್ಯಾಂಕಿಂಗ್ ವಲಯ ಆಯ್ದುಕೊಳ್ಳುವುದು. ಯಾವ ವಿಷಯ ಗೊತ್ತಿಲ್ಲದವನು ಸಾಹಿತಿ ಆಗುತ್ತಾನೆ ಎಂಬ ತಪ್ಪು ಪರಿಕಲ್ಪನೆ ಬದಲಾಗಬೇಕಿದೆ ಎಂಬ ಆಶಯವನ್ನು ಪ್ರಕಾಶ್ ಬೆಳವಾಡಿ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews