Tag: Prakash Belwadi

  • ಕನ್ನಡದಲ್ಲೂ ಬಂತು ಬಾಲಿವುಡ್ ನ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ

    ಕನ್ನಡದಲ್ಲೂ ಬಂತು ಬಾಲಿವುಡ್ ನ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ

    ವಿವೇಕ್ ಅಗ್ನಿಹೋತ್ರಿ ನಿರ್ದೇಶನದಲ್ಲಿ ಮೂಡಿ ಬಂದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಐವತ್ತು ದಿನಗಳ ದಾಟಿ ಮುನ್ನುಗ್ಗುತ್ತಿರುವ ಈ ಸಂದರ್ಭದಲ್ಲಿ ಹೊಸ ಸುದ್ದಿಯೊಂದನ್ನು ಕೊಟ್ಟಿದೆ. ಕೇವಲ ಹಿಂದಿಯಲ್ಲಿ ಮಾತ್ರ ರಿಲೀಸ್ ಆಗಿದ್ದ ಈ ಸಿನಿಮಾ ಇದೀಗ ಇತರ ಭಾಷೆಗಳಿಗೂ ಡಬ್ ಆಗಿದೆ. ಹಿಂದಿ ಅರ್ಥ ಆಗದೇ ಇರುವವರು ಈಗ  ದಿ ಕಾಶ್ಮೀರ್ ಫೈಲ್ಸ್ ಚಿತ್ರವನ್ನು ತಮ್ಮದೇ ಭಾಷೆಯಲ್ಲಿ ನೋಡಬಹುದು. ಇದನ್ನೂ ಓದಿ : ಮಗನೊಂದಿಗೆ ನಿಖಿಲ್ ಕುಮಾರ್ ಸ್ವಾಮಿ ಜಾಲಿ ಟ್ರೀಪ್

    ಕಾಶ್ಮೀರ ಪಂಡಿತರ ಹತ್ಯಾಕಾಂಡದ ಘಟನೆಯನ್ನು ಇಟ್ಟುಕೊಂಡು ಮಾಡಿರುವ ಈ ಸಿನಿಮಾ ದೇಶಾದ್ಯಂತ ಸಾಕಷ್ಟು ಸಂಚಲನ ಮೂಡಿಸಿತ್ತು. ಸ್ವತಃ ಕೇಂದ್ರ ಸರಕಾರವೇ ಈ ಸಿನಿಮಾದ ಬೆನ್ನಿಗೆ ನಿಂತು ಜನರಿಗೆ ತಲುಪವಲ್ಲಿ ಸಹಕರಿಸಿತ್ತು. ಕರ್ನಾಟಕವೂ ಸೇರಿದಂತೆ ಅನೇಕ ರಾಜ್ಯಗಳು ಈ ಸಿನಿಮಾಗೆ ತೆರಿಗೆ ವಿನಾಯತಿ ಘೋಷಣೆ ಮಾಡಿದ್ದವು. ಅಲ್ಲದೇ, ಕೆಲ ಸಂಘಟನೆಗಳು ಕೂಡ ಸ್ವಯಂ ಪ್ರೇರಿತರಾಗಿ ಈ ಸಿನಿಮಾವನ್ನು ಜನರಿಗೆ ತೋರಿಸಿದರು. ಈಗ ಮತ್ತಷ್ಟು ಜನರಿಗೆ ಅವರದ್ದೇ ಭಾಷೆಯಲ್ಲಿ ತೋರಿಸಲು ಚಿತ್ರತಂಡ ಮುಂದಾಗಿದೆ. ಇದನ್ನೂ ಓದಿ : ಜೇಮ್ಸ್ ಟೀಮ್ ಮೊದಲೇ ಈ ಕೆಲಸ ಮಾಡಬೇಕಿತ್ತು : ನಟ ಶಿವರಾಜ್ ಕುಮಾರ್

    ಹೌದು, ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಕನ್ನಡಕ್ಕೂ ಡಬ್ ಆಗಿ ಬರುತ್ತಿದೆ. ಆದರೆ, ಈ ಸಿನಿಮಾ ಥಿಯೇಟರ್ ಬರುವುದಿಲ್ಲ. ಜೀ 5 ಓಟಿಟಿ ವೇದಿಕೆಯಲ್ಲಿ ಈ ಡಬ್ ಆದ ದಿ ಕಾಶ್ಮೀಪ್ ಫೈಲ್ ಸಿನಿಮಾವನ್ನು ನೋಡಬಹುದಾಗಿದೆ. ಸ್ವತಃ ಜೀ 5 ಸೋಷಿಯಲ್ ಮೀಡಿಯಾದ ಮೂಲಕ ಈ ಸುದ್ದಿಯನ್ನು ನೋಡುಗರಿಗೆ ನೀಡಿದೆ. ಇದನ್ನೂ ಓದಿ : ಜೋಗಿ ಪ್ರೇಮ್ ಹೊಸ ಸಿನಿಮಾ ಘೋಷಣೆ : ಧ್ರುವ ಸರ್ಜಾ ಹೀರೋ, ಏ.24 ಮುಹೂರ್ತ

    ಕನ್ನಡದ ಹೆಸರಾಂತ ನಿರ್ದೇಶಕ ಪ್ರಕಾಶ್ ಬೆಳವಾಡಿ ಸೇರಿದಂತೆ ಬಾಲಿವುಡ್ ನ ಅನೇಕ ಕಲಾವಿದರು ಈ ಸಿನಿಮಾದಲ್ಲಿದ್ದಾರೆ. ಇದೊಂದು ನೈಜ ಘಟನೆಯನ್ನು ಆಧರಿಸಿದ ಸಿನಿಮಾವಾಗಿದ್ದರಿಂದ, ಕರ್ನಾಟಕ ಸರಕಾರ ಕೂಡ ಚಿತ್ರಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಿತ್ತು. ಅಲ್ಲದೇ, ಕರ್ನಾಟಕ ಬಿಜೆಪಿ ಈ ಸಿನಿಮಾವನ್ನು ಡಬ್ ಮಾಡಿ ಕನ್ನಡಕ್ಕೆ ತರುವ ಪ್ರಯತ್ನಕ್ಕೂ ಮುಂದಾಗಿತ್ತು. ಆದರೆ, ಜಿ 5 ಈ ಕೆಲಸವನ್ನು ಮಾಡಿದೆ.

  • ದಿ ಕಾಶ್ಮೀರ್ ಫೈಲ್ಸ್ ಲಾಭವನ್ನು ದಾನಮಾಡಿ ಎಂದ ಐಎಎಸ್ ಆಫೀಸರ್: ನಿರ್ದೇಶಕರ ಉತ್ತರವೇನು?

    ದಿ ಕಾಶ್ಮೀರ್ ಫೈಲ್ಸ್ ಲಾಭವನ್ನು ದಾನಮಾಡಿ ಎಂದ ಐಎಎಸ್ ಆಫೀಸರ್: ನಿರ್ದೇಶಕರ ಉತ್ತರವೇನು?

    ವಿವೇಕ್ ಅಗ್ನಿಹೋತ್ರಿ ನಿರ್ದೇಶನದಲ್ಲಿ ತಯಾರಾದ ಬಾಲಿವುಡ್ ನ ‘ದಿ ಕಾಶ್ಮೀರ್ ಫೈಲ್ಸ್’ ಗಳಿಗೆ ಇದೀಗ 200 ಕೋಟಿ ದಾಟಿದೆ ಎಂದು ಅಂದಾಜಿಸಲಾಗಿದೆ. ಮೂವತ್ತು ಕೋಟಿ ಅಂದಾಜು ಬಜೆಟ್ ನಲ್ಲಿ ನಿರ್ಮಾಣವಾದ ಈ ಸಿನಿಮಾ ನಿರ್ಮಾಪಕರಿಗೆ ಭಾರೀ ಲಾಭ ತಂದುಕೊಟ್ಟಿದೆ. ಹೀಗಾಗಿ ಸಿನಿಮಾದ ಲಾಭಾಂಶದ ಮೇಲೆ ಎಲ್ಲರ ಕಣ್ಣು ಬಿದ್ದಿದೆ. ಇದನ್ನೂ ಓದಿ : ಬಸವರಾಜ ಬೊಮ್ಮಾಯಿಯನ್ನು ಶಿವರಾಜ್ ಕುಮಾರ್ ಭೇಟಿ ಮಾಡಿದ್ದೇಕೆ?

    ದಿ ಕಾಶ್ಮೀರ್ ಫೈಲ್ಸ್ ಸಿನಿಮಾ 200 ಕೋಟಿ ಕ್ಲಬ್ ಗೆ ಸೇರುತ್ತಿದ್ದಂತೆಯೇ ಮಧ್ಯಪ್ರದೇಶದ ಐಎಎಸ್ ಅಧಿಕಾರಿ ನಿಯಾಜಾ ಖಾನ್ ತಮ್ಮ ಟ್ವಿಟರ್ ಖಾತೆಯ ಮೂಲಕ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ಪ್ರಶ್ನೆಯೊಂದನ್ನು ಕೇಳಿದ್ದಾರೆ. ಈಗ ಆ ಪ್ರಶ್ನೆ ವೈರಲ್ ಆಗಿದೆ ಮತ್ತು ಅಧಿಕಾರಿಗೆ ಅಲ್ಲಿನ ಸರಕಾರ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ : ಎದೆಹಾಲು ದಾನ ಮಾಡಿ – ಅಭಿಮಾನಿಗಳಿಗೆ ಸಿಂಡ್ರೆಲಾ ಸಂದೇಶ

    ತಮ್ಮ ಟ್ವಿಟರ್ ಖಾತೆಯಲ್ಲಿ ನಿಯಾಜ್ ಖಾನ್, ‘ನಿರ್ದೇಶಕರೆ, ನಿಮ್ಮ ಸಿನಿಮಾ ಯಶಸ್ಸು ಕಂಡಿರುವುದಕ್ಕೆ ಶುಭಾಶಯಗಳು. ಈ ನಿಮ್ಮ ಸಿನಿಮಾದಿಂದ ಬಂದ ಹಣವನ್ನು ಕಾಶ್ಮೀರಿ ಪಂಡಿತರ ಮಕ್ಕಳ ಶಿಕ್ಷಣಕ್ಕೆ ಮತ್ತು ನೆಲೆ ಕಳೆದುಕೊಂಡಿರುವ ಅವರ ಕುಟುಂಬಕ್ಕೆ ಮನೆ ಕಟ್ಟಿಸಿ ಕೊಡುತ್ತೀರಾ. ಹಾಗೆ ಮಾಡಿದರೆ ಅವರ ಕುಟುಂಬಕ್ಕೆ ಒಳ್ಳೆಯದಾಗುತ್ತದೆ?’ ಎಂದು ಕೇಳಿದ್ದಾರೆ. ಇದನ್ನೂ ಓದಿ: ಹಿಜಬ್ ಧರಿಸಿದ ಉಪ್ಪಿ – ಫೋಟೋ ವೈರಲ್

    ಐಎಎಸ್ ಅಧಿಕಾರಿಯ ಈ ಪ್ರಶ್ನೆಗೆ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಉತ್ತರವನ್ನೂ ಕೊಟ್ಟಿದ್ದಾರೆ. ವಿವೇಕ್ ಕೂಡ ಟ್ವಿಟ್ ಮಾಡಿದ್ದು, ‘ಇದೇ 25ನೇ ತಾರೀಖು ನಾನು ಭೋಪಾಲ್ ಗೆ ಬರುತ್ತಿದ್ದೇನೆ. ತಾವು ಅಂದು ನನಗೆ ಭೇಟಿಗೆ ಅವಕಾಶ ನೀಡಿ. ನಮ್ಮ ನಮ್ಮ ಚಿಂತನೆಗಳನ್ನು ಶೇರ್ ಮಾಡೋಣ ಮತ್ತು ನಿಮ್ಮಿಂದ ನಮಗೂ ಸಹಾಯ ಬೇಕಿದೆ. ತಾವು ಪುಸ್ತಕ ಬರೆಯುತ್ತೀರಿ. ಆ ಹಣದಿಂದ ತಾವು ಎಂದಾದರೂ ಸಮಾಜಮುಖಿ ಕೆಲಸದ ಪ್ರಯತ್ನ ಮಾಡಿದ್ದೀರಾ?’ ಎಂದು ಅವರೂ ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ:  ಹುಡುಗಿ ಎಂದು ಅಪ್ಪನ ಜೊತೆಗೆ ಚಾಟ್ ಮಾಡಿ ಸಿಕ್ಕಿಬಿದ್ದ ಖ್ಯಾತ ನಿರ್ಮಾಪಕ!

    ಈ ಇಬ್ಬರ ಪ್ರಶ್ನೋತ್ತರಗಳು ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಕಾರಣವಾಗಿವೆ. ಸಿನಿಮಾ ಮಾತ್ರ ತನ್ನ ಪಾಡಿಗೆ ತಾನು ಬಾಕ್ಸ್ ಆಫೀಸಿನಲ್ಲಿ ತನ್ನ ಯಶಸ್ಸನ್ನು ಮುಂದುವರೆಸುತ್ತಲೇ ಸಾಗಿದೆ.

  • ದಿ ಕಾಶ್ಮೀರ್ ಫೈಲ್ಸ್ : ಬಾಲಿವುಡ್ ಮೇಲೆ ಕಿಡಿಕಾರಿದ ಕಂಗನಾ ರಣಾವತ್

    ದಿ ಕಾಶ್ಮೀರ್ ಫೈಲ್ಸ್ : ಬಾಲಿವುಡ್ ಮೇಲೆ ಕಿಡಿಕಾರಿದ ಕಂಗನಾ ರಣಾವತ್

    ಮುಚ್ಚುಮರೆ ಇಲ್ಲದೇ ಯಾರನ್ನು ಬೇಕಾದರೂ ಎದುರು ಹಾಕಿಕೊಳ್ಳುವ ನಟಿ ಕಂಗನಾ ರಣಾವತ್, ತನ್ನದೇ ಸಿನಿಮಾ ರಂಗದ ಮೇಲೆ ಕಿಡಿಕಾರಿದ್ದಾರೆ. ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ಬಗ್ಗೆ ಬಾಲಿವುಡ್ ನಟ, ನಟಿಯರು ಮತ್ತು ನಿರ್ದೇಶಕರು ಮೌನ ತಾಳಿದ್ದಕ್ಕೆ ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ : ಇರುವೆ ಪಾತ್ರವಾಗಿ ಬಂದ ಸಂಚಾರಿ ವಿಜಯ್

    ದೇಶಕ್ಕೆ ದೇಶವೇ ಸಿನಿಮಾವನ್ನು ಕೊಂಡಾಡುತ್ತಿದೆ. ಬಾಕ್ಸ್ ಆಫೀಸಿನಲ್ಲಿ ಗಳಿಕೆ ಮಾಡಿದೆ. ಕೊರೋನಾ ನಂತರದಲ್ಲಿ ಅತೀ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಸಿನಿಮಾವಿದು ಎನ್ನುವ ಹೆಗ್ಗಳಿಕೆಗೂ ಚಿತ್ರ ಪಾತ್ರವಾಗಿದೆ. ಆದರೂ, ಬಾಲಿವುಡ್ ಮೌನ ತಾಳಿದೆ ಎಂದು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ : ಜೇಮ್ಸ್ ಚಿತ್ರದ ಬೆಳಗ್ಗಿನ 6 ಗಂಟೆಯ 200 ಶೋಗಳ ಟಿಕೆಟ್ ಸೋಲ್ಡ್ ಔಟ್: ಏನೆಲ್ಲ ದಾಖಲೆ?

    ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಬಾಲಿವುಡ್ ಕೆಲವರಿಗೆ ಹಿಡಿಸಿದಂತೆ ಕಾಣುತ್ತಿಲ್ಲ. ಇಂತಹ ಚಿತ್ರಗಳ ಬಗ್ಗೆ ಅವರಿಗೆ ಯಾವಾಗಲೂ ತಾತ್ಸಾರ ಎಂದೂ ಅವರು ಹೇಳಿಕೊಂಡಿದ್ದಾರೆ. ಇಂತಹ ಚಿತ್ರಗಳನ್ನು ಎಲ್ಲರಿಗೂ ತಲುಪಿಸಲು ಬಾಲಿವುಡ್ ಏಕೆ ಯೋಚಿಸುತ್ತಿಲ್ಲ ಎನ್ನುವುದು ನನಗೆ ಅರ್ಥವಾಗುತ್ತಿಲ್ಲ ಎಂದು ಅವರು ಬರೆದುಕೊಂಡಿದ್ದಾರೆ. ಇದನ್ನೂ ಓದಿ : ರಾಮ್ ಗೋಪಾಲ ವರ್ಮಾ ಡೇಂಜರೆಸ್ ಹುಡುಗಿ ಅಂತ ಹೇಳಿದ್ದು ಯಾರಿಗೆ?

    ಈ ಸಿನಿಮಾವನ್ನು ಜನರಿಗೆ ತಲುಪಿಸಲೇಬೇಕೆಂದು ಕೆಲ ರಾಜ್ಯಗಳು ತೆರಿಗೆ ವಿನಾಯತಿ ಕೊಟ್ಟಿವೆ. ಕೆಲ ಶಾಸಕರು ಉಚಿತವಾಗಿ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸಿನಿಮಾ ತೋರಿಸುತ್ತಿದ್ದಾರೆ. ನೆನ್ನೆಯಷ್ಟೇ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಸೇರಿದಂತೆ ಅವರ ಸಚಿವ ಸಂಪುಟದ ಸಹೋದ್ಯೋಗಿಗಳು ಚಿತ್ರ ನೋಡಿದ್ದಾರೆ. ಇದನ್ನೂ ಓದಿ : exclusive photos – ಗರಡಿಗಾಗಿ ಬಣ್ಣ ಹಚ್ಚಿದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್

    ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಕಾಶ್ಮೀರ ಪಂಡಿತರ ಹತ್ಯ ಮತ್ತು ಅವರ ವಲಸೆ ಕುರಿತಾದ ಸಿನಿಮಾ. ಕನ್ನಡದ ಪ್ರಕಾಶ್ ಬೆಳವಾಡಿ ಸೇರಿದಂತೆ ಹಲವು ಕಲಾವಿದರು ಈ ಸಿನಿಮಾದಲ್ಲಿದ್ದಾರೆ. ವಿವೇಕ್ ಅಗ್ನಿಹೋತ್ರಿ ನಿರ್ದೇಶನದಲ್ಲಿ ಮೂಡಿ ಬಂದಿರುವ ಚಿತ್ರಕ್ಕೆ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಲ್ಲದೇ, ಕೆಲ ಕಡೆ ವಿರೋಧವೂ ‍ವ್ಯಕ್ತವಾಗಿದೆ.

  • ದಿ ಕಾಶ್ಮೀರ್ ಫೈಲ್ಸ್ ಸಿನಿಮಾ: ಕ್ಷಮೆ ಕೋರಿದ ಪ್ರಕಾಶ್ ಬೆಳವಾಡಿ

    ದಿ ಕಾಶ್ಮೀರ್ ಫೈಲ್ಸ್ ಸಿನಿಮಾ: ಕ್ಷಮೆ ಕೋರಿದ ಪ್ರಕಾಶ್ ಬೆಳವಾಡಿ

    ವಿವೇಕ್ ಅಗ್ನಿಹೋತ್ರಿ ನಿರ್ದೇಶನದಲ್ಲಿ ತಯಾರಾದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಭಾರೀ ಚರ್ಚೆಗೆ ಕಾರಣವಾಗಿದೆ. ಕಾಶ್ಮೀರ ಪಂಡಿತರ ಮಾರಣಹೋಮ ಘಟನೆ ಕುರಿತಾದ ಸಿನಿಮಾ ಇದಾಗಿದ್ದು, ಚಿತ್ರದ ಬಗ್ಗೆ ಪರ ಮತ್ತು ವಿರೋಧಗಳು ಕೇಳಿ ಬರುತ್ತಿವೆ. ಇದನ್ನೂ ಓದಿ : ‘ಪುಷ್ಪ ಪಾರ್ಟ್ 10’ ಸಿನಿಮಾಗೆ ನಟ ಮಾಸ್ಟರ್ ಆನಂದ್ ಮಗಳು ಹೀರೋಯಿನ್

    ಒಂದು ಸಮುದಾಯದ ಓಲೈಕೆಗಾಗಿ ಮಾಡಿದ ಸಿನಿಮಾ ಇದು ಎಂದು ಕೆಲವರು ವಾದಿಸಿದರೆ, ಕಾಶ್ಮೀರಿ ಪಂಡಿತರ ವಸ್ತುಸ್ಥಿತಿಯ ಬಗ್ಗೆ ಮುಖಕ್ಕೆ ಹೊಡೆದಂತೆ ನಿರ್ದೇಶಕರು ಹೇಳಿದ್ದಾರೆ ಎನ್ನುವುದು ಮತ್ತೊಂದು ವಾದ. ಈ ವಾದ ವಿವಾದ ಏನೇ ಇರಲಿ, ಈ ಚಿತ್ರದಲ್ಲಿ ಕನ್ನಡದ ಹೆಸರಾಂತ ನಟ, ಪತ್ರಕರ್ತ ಪ್ರಕಾಶ್ ಬೆಳವಾಡಿ ಮಹತ್ವದ ಪಾತ್ರವೊಂದನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ತಾವು ಏಕೆ ನಟಿಸಲು ಒಪ್ಪಿಕೊಂಡೆ ಅನ್ನುವ ಕುರಿತು ಮಾತನಾಡಿದ್ದಾರೆ. ಇದನ್ನೂ ಓದಿ : ಪುನೀತ್ ಹುಟ್ಟುಹಬ್ಬಕ್ಕೆ ಹೊಸ ಸಾಂಗ್: ಒಂದಾಯಿತು ‘ಗೊಂಬೆ ಹೇಳತೈತೆ’ ಕಾಂಬಿನೇಷನ್

    “ಕಾಶ್ಮೀರಿ ಪಂಡಿತರ ಮಾರಣಹೋಮ ನಡೆದಾಗ ನಾನು ಪತ್ರಕರ್ತನಾಗಿದ್ದೆ. ಆ ಸಮಯದಲ್ಲಿ ನಿಜವಾಗಿಯೂ ಅಲ್ಲಿ ಏನು ನಡೆಯಿತು ಎಂದು ತಿಳಿದಿರಲಿಲ್ಲ. ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ನನಗೆ ಸಿನಿಮಾದ ಚಿತ್ರಕಥೆ ಕಳುಹಿಸಿದಾಗ ಗಾಬರಿ ಆಯಿತು. ತಿಳಿದುಕೊಂಡಿರುವ ಇತಿಹಾಸವೇ ಬೇರೆ, ಆಗಿರುವ ಘಟನೆಯೇ ಬೇರೆಯಾಗಿತ್ತು. ಹಾಗಾಗಿ ನಾನು ಆ ಸಿನಿಮಾದಲ್ಲಿ ನಟಿಸಲು ಒಪ್ಪಿಕೊಂಡೆ’ ಎಂದಿದ್ದಾರೆ ಪ್ರಕಾಶ್ ಬೆಳವಾಡಿ. ಇದನ್ನೂ ಓದಿ : ಕಿರುತೆರೆಯ ನಟ, ನಿರ್ದೇಶಕ ರವಿಕಿರಣ್ ಪುತ್ರ ಸಿನಿಮಾಗೆ ರಂಗಕ್ಕೆ ಎಂಟ್ರಿ

    “ಈ ಸಮಾಜದ ಪರವಾಗಿ ನಾನು ಕಾಶ್ಮೀರಿ ಪಂಡಿತರಿಗೆ ಕ್ಷಮೆ ಕೇಳಬೇಕು. ನಾನು ಅಪರಾಧಿ ಭಾವದಲ್ಲಿದ್ದೇನೆ. ಒಬ್ಬ ಪತ್ರಕರ್ತನಾಗಿಯೂ ನನಗೆ ನಿಜವಾದ ಇತಿಹಾಸವನ್ನು ಜನರಿಗೆ ತಿಳಿಸುವುದಕ್ಕೆ ಆಗಲಿಲ್ಲ. ಆ ಅಪರಾಧಿ ಭಾವದಿಂದಲೇ ಆ ಸಿನಿಮಾದಲ್ಲಿ ನಟಿಸಿದೆ. ಈ ಸಿನಿಮಾದ ಮೂಲಕವಾದರೂ, ನನ್ನ ಅಪರಾಧಿ ಭಾವವನ್ನು ಕಡಿಮೆ ಮಾಡಿಕೊಳ್ಳುತ್ತೇನೆ’ ಎನ್ನುವುದು ಅವರ ಮಾತು. ಇದನ್ನೂ ಓದಿ : ಪೂಜಾ ಹೆಗ್ಡೆ ಅವಕಾಶ ಕಿತ್ತುಕೊಂಡ ರಶ್ಮಿಕಾ ಮಂದಣ್ಣ

    ಈ ಸಿನಿಮಾದ ಮೂಲಕ 1990ರಲ್ಲಿ ನಡೆದ ಕ್ರೂರ ಘಟನೆಯ ಸತ್ಯಾಸತ್ಯತೆಯನ್ನು ತಿಳಿಸುವ ಪ್ರಯತ್ನ ಮಾಡಿದ್ದಾರಂತೆ ನಿರ್ದೇಶಕರು. ಹಲವು ವರ್ಷಗಳ ಕಾಲ ಘಟನೆಯ ಬಗ್ಗೆ ಸಂಶೋಧನೆ ಮಾಡಿ, ಸಂದರ್ಶಿಸಿ ಚಿತ್ರಕಥೆ ಹೆಣೆದಿದ್ದಾರಂತೆ. ಅನುಪಮ್ ಖೇರ್, ಪಲ್ಲವಿ ಜೋಸಿ, ಮಿಥುನ್ ಚಕ್ರವರ್ತಿ ಸೇರಿದಂತೆ ಹಲವು ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಇದನ್ನೂ ಓದಿ : ಚಕ್ಡಾ ಎಕ್ಸ್ ಪ್ರೆಸ್ ಸಿನಿಮಾಗಾಗಿ ಅನುಷ್ಕಾ ಬೌಲಿಂಗ್ ಪ್ರಾಕ್ಟಿಸ್

    ಈ ಸಿನಿಮಾದ ಕುರಿತಂತೆ ಈಗಾಗಲೇ ಜಮ್ಮು ಕಾಶ್ಮೀರ ಜಿಲ್ಲಾ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ. ಈ ಸಿನಿಮಾದಲ್ಲಿ ಸ್ಕ್ವಾಡ್ರನ್ ಲೀಡರ್ ರವಿ ಖನ್ನಾ ಅವರ ಗೌರವಕ್ಕೆ ಧಕ್ಕೆ ಆಗುವ ರೀತಿಯಲ್ಲಿ ಪಾತ್ರ ತೋರಿಸಲಾಗಿದೆ ಎಂದು ರವಿ ಖನ್ನಾ ಪತ್ನಿ ದೂರು ದಾಖಲಿಸಿದ್ದಾರೆ.

  • ಹಿಕೋರ ಚಿತ್ರೀಕರಣ ಪೂರ್ಣ

    ಹಿಕೋರ ಚಿತ್ರೀಕರಣ ಪೂರ್ಣ

    ಬೆಂಗಳೂರು: ಶ್ರೀನೀಲಕಂಠೇಶ್ವರ ಸಿನಿ ಕಂಬೈನ್ಸ್ ಲಾಂಛನದಲ್ಲಿ ತಯಾರಾಗಿರುವ ‘ಹಿಕೋರಾ` ಚಿತ್ರತಂಡ ಚಿತ್ರೀಕರಣ ಮುಗಿಸಿದ ಸಂತಸದಲ್ಲಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ತೊಡಗಿಕೊಂಡಿದೆ. ನೀನಾಸಂನಲ್ಲಿ ಸುಮಾರು 18 ವರ್ಷಗಳ ಕಾಲ ವಿದ್ಯಾರ್ಥಿಗಳಿಗೆ ಅನ್ನ ಉಣಬಡಿಸಿದ ರತ್ನಶ್ರೀಧರ್ ಈ ಚಿತ್ರದ ನಿರ್ಮಾಪಕರು. ಬಹುತೇಕ ನೀನಾಸಂನಲ್ಲಿ ತರಬೇತಿ ಪಡೆದು, ತಮ್ಮ ಕೈ ತುತ್ತು ತಿಂದು ಬೆಳೆದವರನ್ನೇ ಈ ಚಿತ್ರದಲ್ಲಿ ಕಲಾವಿದರನ್ನಾಗಿ ಬಳಸಿಕೊಂಡಿದ್ದಾರೆ ನಿರ್ಮಾಪಕರು. ಈ ಚಿತ್ರದ ನಿರ್ದೇಶಕ ಮತ್ತು ನಾಯಕ ಎಂ.ಜಿ.ಕೃಷ್ಣ, ಯಶವಂತ ಶೆಟ್ಟಿ, ಸ್ಪಂದನ ಪ್ರಸಾದ್, ಮಹಾಂತೇಶ್, ಸರ್ದಾರ್ ಸತ್ಯ ಮುಂತದಾವರೆಲ್ಲ ನೀನಾಸಂನವರೇ.


    ಚಿತ್ರದ ನಾಯಕರಾಗಿ ನಟಿಸಿರುವ ಕೃಷ್ಣಪೂರ್ಣ ಈ ಚಿತ್ರದ ನಿರ್ದೇಶಕರೂ ಹೌದು. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಕೃಷ್ಣಪೂರ್ಣ ಅವರೇ ಬರೆದಿದ್ದಾರೆ. ಪೂರ್ಣಚಂದ್ರತೇಜಸ್ವಿ ಸಂಗೀತ ನೀಡಿರುವ ಈ ಚಿತ್ರಕ್ಕೆ ಆಪ್ತಮಿತ್ರ, ಸಂಗೊಳ್ಳಿ ರಾಯಣ್ಣ ಖ್ಯಾತಿಯ ರಮೇಶ್‍ಬಾಬು ಅವರ ಛಾಯಾಗ್ರಹಣವಿದೆ. ಕಿರಣ್ ಸಂಕಲನ, ಮದನ್ – ಹರಿಣಿ ನೃತ್ಯ ನಿರ್ದೇಶನ ಹಾಗೂ ಡಾ.ನಾಗರಾಜ್ ಅವರ ಕಲಾ ನಿರ್ದೇಶನವಿರುವ ಈ ಚಿತ್ರದ ಸಹ ನಿರ್ಮಾಪಕರು ಕುಮಾರಿ ಆದ್ಯ. ಸುನೀಲ್ ಯಾದವ್ ಹಾಗೂ ವಿನಾಯಕರಾಮ ಕಲಗಾರು ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು. ಪ್ರೊಡಕ್ಷನ್ ಕಂಟ್ರೋಲರ್ ಆಗಿ ಅಭಿರಾಮ್ ಕಾರ್ಯ ನಿರ್ವಹಿಸಿದ್ದಾರೆ. ಅಂದುಕೊಂಡಿದ್ದಕ್ಕಿಂತಲೂ ಅದ್ಭುತವಾಗಿ ಚಿತ್ರ ಮೂಡಿಬಂದಿರುವುದಕ್ಕೆ ಚಿತ್ರತಂಡ ಸಂತಸದಲ್ಲಿದೆ.

    ಕೃಷ್ಣಪೂರ್ಣ, ಯಶ್ವಂತ್ ಶೆಟ್ಟಿ, ಸ್ಪಂದನಾ ಪ್ರಸಾದ್, ಪ್ರಕಾಶ್ ಬೆಳವಾಡಿ, ಸರ್ದಾರ್ ಸತ್ಯ, ಮಹಾಂತೇಶ್ ರಾಮದುರ್ಗ, ಆನಂದ್ ಮಾಸ್ಟರ್, ಲಾವಂತಿ, ಮುನಾಲಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಖ್ಯಾತ ನಟ ಪ್ರಕಾಶ್ ಬೆಳವಾಡಿ ಅತೀ ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದಾರೆ.