Tag: Prakash hukkeri

  • Chikkodi Lok Sabha 2024: ‘ಕೈ’ ತಪ್ಪಿ ಹೋಗಿರುವ ಕ್ಷೇತ್ರವನ್ನು ಮರಳಿ ಪಡೆಯುತ್ತಾ? – ಮತ್ತೊಂದು ಗೆಲುವಿಗೆ ಬಿಜೆಪಿ ತಂತ್ರವೇನು?

    Chikkodi Lok Sabha 2024: ‘ಕೈ’ ತಪ್ಪಿ ಹೋಗಿರುವ ಕ್ಷೇತ್ರವನ್ನು ಮರಳಿ ಪಡೆಯುತ್ತಾ? – ಮತ್ತೊಂದು ಗೆಲುವಿಗೆ ಬಿಜೆಪಿ ತಂತ್ರವೇನು?

    – ಕಾಂಗ್ರೆಸ್‌ನಲ್ಲಿ ಕೇಳಿ ಬರ್ತಿದೆ ಸತೀಶ್‌ ಜಾರಕಿಹೊಳಿ ಪುತ್ರಿ ಹೆಸರು?
    – ಬಿಜೆಪಿಯಲ್ಲಿ ಅಣ್ಣಾ ಸಾಹೇಬ ಜೊಲ್ಲೆಗೆ ಮತ್ತೆ ಟಿಕೆಟ್‌

    ಚಿಕ್ಕೋಡಿ: ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ಬೆಳಗಾವಿಯ ತಾಲೂಕು ಕೇಂದ್ರ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕಾವು ಹೆಚ್ಚಾಗಿದೆ. ಕೈತಪ್ಪಿ ಹೋಗಿರುವ ಕ್ಷೇತ್ರವನ್ನು ಮರಳಿ ಪಡೆಯಲು ಕಾಂಗ್ರೆಸ್ ಉತ್ಸುಕವಾಗಿದೆ. ತನ್ನ ಭದ್ರಕೋಟೆಯನ್ನು ವಶಕ್ಕೆ ಪಡೆದಿರುವ ಬಿಜೆಪಿ ಮತ್ತೆ ಅದನ್ನು ‘ಕೈ’ಗೊಪ್ಪಿಸಲು ಸಾಧ್ಯವಿಲ್ಲ ಎಂದು ಪಟ್ಟು ಹಿಡಿದು ಕುಂತಿದೆ.

    ಕ್ಷೇತ್ರ ಪರಿಚಯ
    ಸ್ವತಂತ್ರ ಭಾರತದಲ್ಲಿ ಬೆಳಗಾವಿ ಉತ್ತರ ಲೋಕಸಭಾ ಕ್ಷೇತ್ರವು ಬಾಂಬೆ ರಾಜ್ಯದ ಭಾಗವಾಗಿತ್ತು. 1962 ರ ಹೊತ್ತಿಗೆ ಮೈಸೂರು ರಾಜ್ಯದ ಭಾಗವಾಯಿತು. ಕರ್ನಾಟಕ ರಾಜ್ಯವಾದ ಬಳಿಕ ಚಿಕ್ಕೋಡಿ ಲೋಕಸಭಾ ಕ್ಷೇತ್ರ ರಚನೆಯಾಯಿತು. 1977 ರಲ್ಲಿ ಚಿಕ್ಕೋಡಿ ಕ್ಷೇತ್ರವು ಮೊದಲ ಚುನಾವಣೆಗೆ ಸಾಕ್ಷಿಯಾಯಿತು. ಆಗ ಕಾಂಗ್ರೆಸ್ ಗೆದ್ದಿತ್ತು. ಚಿಕ್ಕೋಡಿ ಕ್ಷೇತ್ರ 2009 ರ ಚುನಾವಣೆವರೆಗೆ ಪರಿಶಿಷ್ಟ ಜಾತಿಯವರಿಗೆ ಮೀಸಲಾಗಿತ್ತು. ನಂತರ 2009 ರಿಂದ ಸಾಮಾನ್ಯ ಕ್ಷೇತ್ರವಾಗಿ ಪರಿವರ್ತನೆಯಾಯಿತು. ಇದನ್ನೂ ಓದಿ: Lok Sabha 2024: ಕೋಟೆ ನಾಡಿಗೆ ಯಾರಾಗ್ತಾರೆ ಒಡೆಯಾ?

    ವಿಧಾನಸಭಾ ಕ್ಷೇತ್ರಗಳು
    ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯಲ್ಲಿನ ಒಟ್ಟು 8 ವಿಧಾನಸಭಾ ಕ್ಷೇತ್ರಗಳು ಬರುತ್ತವೆ. ನಿಪ್ಪಾಣಿ, ಚಿಕ್ಕೋಡಿ, ಹುಕ್ಕೇರಿ, ಕಾಗವಾಡ, ಅಥಣಿ, ರಾಯಬಾಗ, ಕುಡಚಿ, ಹುಕ್ಕೇರಿ, ಯಮಕನಮರಡಿ. ಈಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು ಕ್ಷೇತ್ರಗಳಲ್ಲಿ 5 ಕ್ಷೇತ್ರಗಳು ಕಾಂಗ್ರೆಸ್ ಪಾಲಾದರೆ, ಕೇವಲ 3 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.

    ಚಿಕ್ಕೋಡಿ ಲೋಕಸಭೆಯು ಆರಂಭದಲ್ಲಿ ಕಾಂಗ್ರೆಸ್ ನಂತರ ಬಿಜೆಪಿ ಭದ್ರಕೋಟೆಯಾಯಿತು. 2004 ರಲ್ಲಿ ಬಿಜೆಪಿಯಿಂದ ರಮೇಶ ಜಿಗಜಿಣಗಿ, 2009 ರಲ್ಲಿ ಅದೇ ಪಕ್ಷದಿಂದ ರಮೇಶ ಕತ್ತಿ ಆಯ್ಕೆಯಾಗಿದ್ದರು. 2014 ರಲ್ಲಿ ಮೋದಿ ಹವಾ ನಡುವೆಯೂ ಕಾಂಗ್ರೆಸ್‌ನಿಂದ ಪ್ರಕಾಶ ಹುಕ್ಕೇರಿ ರಮೇಶ ಕತ್ತಿ ವಿರುದ್ಧ ಗೆಲುವು ಸಾಧಿಸಿದರು. ಬಳಿಕ 2019 ರಲ್ಲಿ ರಮೇಶ ಕತ್ತಿ ಟಿಕೆಟ್ ನೀಡದೇ ಅಣ್ಣಾಸಾಹೇಬ ಜೊಲ್ಲೆ ಅವರಿಗೆ ಬಿಜೆಪಿ ಟಿಕೆಟ್ ನೀಡಿತ್ತು. ಪ್ರಕಾಶ ಹುಕ್ಕೇರಿ ವಿರುದ್ಧ ಅಣ್ಣಾಸಾಹೇಬ ಜೊಲ್ಲೆ ಗೆಲುವು ಸಾಧಿಸಿ ಹಾಲಿ ಸಂಸದರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

    ಕಳೆದ ಚುನಾವಣೆಯಲ್ಲಿ ಏನಾಗಿತ್ತು?
    2019 ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ 6,41,232 ಮತ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ 5,24,871 ಮತಗಳನ್ನ ಪಡೆದಿದ್ದರು. 1,16,361 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದರು. ಇದನ್ನೂ ಓದಿ: Lok Sabha 2024: ಬಿಜೆಪಿ ಭದ್ರಕೋಟೆ ಒಡೆಯುತ್ತಾ ‘ಕೈ’?

    ಜೊಲ್ಲೆಗೆ ಮತ್ತೆ ಮಣೆ ಹಾಕಿದ ಬಿಜೆಪಿ
    ಬಿಜೆಪಿ ಪಾಳಯದಲ್ಲಿ ಹಾಲಿ ಸಂಸದ ಅಣ್ಣಾಸಾಹೇಬ ಜೊಲ್ಲೆಗೆ ಬಿಜೆಪಿ ಮತ್ತೆ ಮಣೆ ಹಾಕಿದೆ. ಆರ್‌ಎಸ್‌ಎಸ್ ಬಲವಿರುವ ಜೊಲ್ಲೆಗೆ ಈ ಬಾರಿಯೂ ಟಿಕೆಟ್ ನೀಡಿ ಹುರಿಯಾಳಾಗಿಸಿದೆ.

    ಕಾಂಗ್ರೆಸ್ ಪಕ್ಷದಿಂದ ಲೋಕಸಭೆ ಚುನಾವಣೆ ಎದುರಿಸಲು ನಿರಾಸಕ್ತಿ ಕಾಣುತ್ತಿದೆ. ಈಗಾಗಲೇ ಪ್ರಕಾಶ ಹುಕ್ಕೇರಿ, ಶಾಸಕ ಲಕ್ಷ್ಮಣ ಸವದಿ ನಾವು ಲೋಕಸಭೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೂ ಕಾಂಗ್ರೆಸ್‌ನಿಂದ ಈ ಬಾರಿ ಮತ್ತೊಮ್ಮೆ ಪ್ರಕಾಶ ಹುಕ್ಕೇರಿ ಅವರನ್ನ ಕಣಕ್ಕೆ ಇಳಿಸುವುದು ಪಕ್ಕಾ ಎನ್ನಲಾಗುತ್ತಿದೆ. ಟಿಕೆಟ್ ರೇಸ್‌ನಲ್ಲಿ ಲಕ್ಷ್ಮಣರಾವ ಚಿಂಗಳೆ, ಪ್ರಕಾಶ್ ಹುಕ್ಕೇರಿ, ಚಿದಾನಂದ ಸವದಿ, ಪ್ರಿಯಂಕಾ ಜಾರಕಿಹೊಳಿ ಇದ್ದಾರೆ.

    ಬಿಜೆಪಿಗೆ ಪ್ಲಸ್: ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇರುವುದು, ಕ್ಷೇತ್ರದಲ್ಲಿ ಅತಿ ಹೆಚ್ಚು ಲಿಂಗಾಯತ ಮತದಾದರು ಇರುವುದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದು ಇಷ್ಟು ದಿನ ಆದ್ರು ಒಂದೆ ಒಂದು ಕಾಮಗಾರಿ ಕ್ಷೇತ್ರದಲ್ಲಿ ನಡೆದಿಲ್ಲ, ಮೋದಿ ಹವಾ, ಮೋದಿ ಮುಖಕ್ಕೆ ಮನ್ನಣೆ, ರಾಮಮಂದಿರ ಉದ್ಘಾಟನೆ ಹಿನ್ನೆಲೆ ಹಿಂದುತ್ವದ ಪ್ಲಸ್.

    ಮೈನಸ್: ಹಾಲಿ ಅಭ್ಯರ್ಥಿ ಕ್ಷೇತ್ರದಿಂದ ದೂರ ಉಳಿದಿದ್ದಾರೆ. ಬರಿ ನಿಪ್ಪಾಣಿಗೆ ಮಾತ್ರ ಸೀಮಿತ ಆಗಿದ್ದಾರೆ ಎನ್ನುವ ಆರೋಪ, ಕ್ಷೇತ್ರದಲ್ಲಿ 5 ಜನ ಕಾಂಗ್ರೆಸ್ ಹಾಗೂ 3 ಜನ ಮಾತ್ರ ಬಿಜೆಪಿ ಶಾಸಕರನ್ನ ಹೊಂದಿದೆ, ಹೇಳಿಕೊಳ್ಳುವ ಮಟ್ಟಿಗೆ ಯಾವುದೆ ಕೇಂದ್ರದ ಯೋಜನೆ ತಂದಿಲ್ಲ, ರಾಜ್ಯದ ಕಾಂಗ್ರೆಸ್ ಸರ್ಕಾರ ತಂದಿರುವ ಉಚಿತ ಗ್ಯಾರಂಟಿಗಳು, ಲಕ್ಷ್ಮಣ ಸವದಿಯಂತಹ ದೊಡ್ಡ ನಾಯಕರು ಕಾಂಗ್ರೆಸ್‌ಗೆ ಹೋಗಿದ್ದು ಹಾಗೂ ಪಕ್ಷದಲ್ಲಿನ ಒಳ ಜಗಳ. ಇದನ್ನೂ ಓದಿ: Lok Sabha 2024: ಬೀದರ್‌ನಲ್ಲಿ ಬಿಜೆಪಿಗೆ ಮೈತ್ರಿ ಬಲ?- ಕಾಂಗ್ರೆಸ್‌ಗೆ ವರವಾಗುತ್ತಾ ‘ಕಮಲ’ ಟಿಕೆಟ್ ಒಳಜಗಳ?

    ಕಾಂಗ್ರೆಸ್‌ಗೆ ಪ್ಲಸ್: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆ, ಗ್ಯಾರಂಟಿ ಯೋಜನೆಗಳನ್ನ ನೀಡಿದ್ದು, ಲಕ್ಷ್ಮಣ ಸವದಿ ಕಾಂಗ್ರೆಸ್‌ನಲ್ಲಿ ಇರೋದು, ಬಿಜೆಪಿಯಲ್ಲಿನ ಭಿನ್ನಾಭಿಪ್ರಾಯ, 5 ಕಾಂಗ್ರೆಸ್ ಶಾಸಕರನ್ನ ಹೊಂದಿರುವುದು.
    ಮೈನಸ್: ಸರ್ಕಾರ ಬಂದರೂ ಸ್ಥಳೀಯ ಮಟ್ಟದಲ್ಲಿ ಯಾವುದೇ ಕೆಲಸ ಆಗಿಲ್ಲಾ, ಬರಿ ಗ್ಯಾರಂಟಿ ಯೋಜನೆಗಳಿಗೆ ಮನ್ನಣೆ ಕೊಟ್ಟು ಕ್ಷೇತ್ರದಲ್ಲಿನ ಕೆಲಸಗಳನ್ನ ಸ್ಥಗಿತ ಮಾಡಿರುವುದು, ಕ್ಷೇತ್ರದ ಏತ ನೀರಾವರಿ ಯೋಜನೆಗಳಿಗೆ ಹಣ ನೀಡದೆ ಇರುವುದು, ಬರ ನಿರ್ವಹಣೆಯಲ್ಲಿ ಸರ್ಕಾರದಿಂದ ನಿರ್ಲಕ್ಷ್ಯ ಧೋರಣೆ, ಕಾಂಗ್ರೆಸ್ ಶಾಸಕರಿದ್ದರೂ ಕ್ಷೇತ್ರದಲ್ಲಿ ಇದುವರೆಗೂ ಒಂದೇ ಒಂದು ಕೆಲಸ ಮಾಡದೆ ಇರೋದು.

    ಮತದಾರರ ಸಂಖ್ಯೆ ಎಷ್ಟು?
    ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಮತದಾರರ ಸಂಖ್ಯೆ 17,32,346 ಇದೆ. ಪುರುಷ ಮತದಾರರು- 8,76,983 ಹಾಗೂ ಮಹಿಳಾ ಮತದಾರರು- 8,55,292, ತೃತೀಯ ಲಿಂಗಿ ಮತದಾರರು- 11 ಇದ್ದಾರೆ.

    ಜಾತಿವಾರು ಲೆಕ್ಕಾಚಾರ
    ಲಿಂಗಾಯತ- 4,10,000
    ಕುರುಬ- 1,70,000
    ಎಸ್.ಸಿ- 1,65,000
    ಎಸ್.ಟಿ.- 90,000
    ಮುಸ್ಲಿಂ- 1,80,000
    ಜೈನ್- 1,30,000
    ಮರಾಠಾ- 1,70,000
    ಇತರೆ- 2,55,000

  • ದೆಹಲಿಯ ಕರ್ನಾಟಕ ಭವನದಲ್ಲಿ 68ನೇ ಕನ್ನಡ ರಾಜ್ಯೋತ್ಸವ

    ದೆಹಲಿಯ ಕರ್ನಾಟಕ ಭವನದಲ್ಲಿ 68ನೇ ಕನ್ನಡ ರಾಜ್ಯೋತ್ಸವ

    ನವದೆಹಲಿ: ದೆಹಲಿ ಕರ್ನಾಟಕ ಭವನದಲ್ಲಿ (Karnataka Bhavan) (ಶರಾವತಿ) ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ (Kannada Rajyotsava) ಆಚರಿಸಲಾಯಿತು. ಕರ್ನಾಟಕ ಸರ್ಕಾರದ ನವದೆಹಲಿಯ (New Delhi)  ವಿಶೇಷ ಪ್ರತಿನಿಧಿಗಳಾದ ಪ್ರಕಾಶ್ ಹುಕ್ಕೇರಿ (Prakash Hukkeri) ಕಾರ್ಯಕ್ರಮದಲ್ಲಿ ತಾಯಿ ಭುವನೇಶ್ವರಿ ದೇವಿಗೆ ಪುಷ್ಪಾರ್ಪಣೆ ಮಾಡಿ ಧ್ವಜಾರೋಹಣ ನೆರವೇರಿಸಿದರು.

    ಧ್ವಜಾರೋಹಣದ ಬಳಿಕ ಮಾತನಾಡಿದ ಅವರು, ದೆಹಲಿ ಕನ್ನಡಿಗರು ಸೇರಿದಂತೆ ರಾಜ್ಯದ ಜನರಿಗೆ ಶುಭ ಹಾರೈಸಿದರು. ಇನ್ನು ಕನ್ನಡ ರಾಜ್ಯೋತ್ಸವದ ಅಂಗವಾಗಿ ರಕ್ತದಾನ ಹಾಗೂ ಕಣ್ಣಿನ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು. ಇದನ್ನೂ ಓದಿ: ಮಕ್ಕಳಿಗೆ ಕನ್ನಡ ಭಾಷೆಯಲ್ಲೇ ಪರೀಕ್ಷೆ ಮಾಡುವಂತೆ ಪ್ರಧಾನಿಗೆ ಪತ್ರ ಬರೀತಿನಿ: ಸಿಎಂ

    ಕಾರ್ಯಕ್ರಮದಲ್ಲಿ ಕರ್ನಾಟಕ ಭವನದ ಅಪರ ಮುಖ್ಯ ಕಾರ್ಯದರ್ಶಿ ವಂದನ ಗುರ್ನಾನಿ (ಸಮನ್ವಯ), ನಿವಾಸಿ ಆಯುಕ್ತ ಇಮ್ ಕೊಂಗ್ಲ ಜಮೀರ್, ಅಪರ ನಿವಾಸಿ ಆಯುಕ್ತ ಆಕೃತಿ ಬನ್ಸಲ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಿಬ್ಬಂದಿ ಪರಿವಾರದವರು ಉಪಸ್ಥಿತರಿದ್ದರು. ಇದನ್ನೂ ಓದಿ: ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್‌, ಕುಡಿಯುವ ನೀರು: ಸಿಎಂ ಘೋಷಣೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 7 ವರ್ಷ ಕಳೆದರೂ ಉದ್ಘಾಟನೆ ಭಾಗ್ಯ ಕಾಣದ ಚಿಕ್ಕೋಡಿ ಆಸ್ಪತ್ರೆ – ಜನರ ಗೋಳು ಕೇಳೋರಿಲ್ಲ

    7 ವರ್ಷ ಕಳೆದರೂ ಉದ್ಘಾಟನೆ ಭಾಗ್ಯ ಕಾಣದ ಚಿಕ್ಕೋಡಿ ಆಸ್ಪತ್ರೆ – ಜನರ ಗೋಳು ಕೇಳೋರಿಲ್ಲ

    ಚಿಕ್ಕೋಡಿ: ಬೆಳಗಾವಿ (Belagavi) ಜಿಲ್ಲೆಯ ಗಡಿಭಾಗದಲ್ಲಿ ಜನರಿಗೆ ಸೂಕ್ತ ವೈದ್ಯಕೀಯ ಸೌಲಭ್ಯ ಸಿಗದೇ ನೆರೆಯ ಮಹಾರಾಷ್ಟ್ರದ ಮೀರಜ್ ಸಾಂಗಲಿಗೆ ಹೋಗಬೇಕಾದ ಸ್ಥಿತಿ ಎದುರಾಗಿದೆ. ಇದನ್ನ ತಪ್ಪಿಸುವ ಸಲುವಾಗಿ ಕಳೆದ 7 ವರ್ಷಗಳ ಹಿಂದೆ ಆಸ್ಪತ್ರೆಯೊಂದರ (Hospital) ಕಟ್ಟಡ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಮಂದಗತಿಯಿಂದ ಸಾಗಿದ್ದ ಕಾಮಗಾರಿ ಸದ್ಯ ಬಹುತೇಕ ಪೂರ್ಣಗೊಂಡಿದೆ. ಆದರೆ ಉದ್ಘಾಟನೆ ಭಾಗ್ಯ ಕಂಡಿಲ್ಲ.

    ಬೆಳಗಾವಿ ಜಿಲ್ಲೆ ಚಿಕ್ಕೋಡಿಯ (Chikkodi) ಬಾಣಂತಿ ಕೋಡಿ ರಸ್ತೆಯಲ್ಲಿ ನಿರ್ಮಾಣವಾಗಿರುವ ಈ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಕಾಮಗಾರಿ ಆರಂಭವಾಗಿ 7 ವರ್ಷ ಕಳೆದಿದ್ದು, ಇತ್ತೀಚೆಗೆ ಬಹುತೇಕ ಪೂರ್ಣಗೊಂಡಿದೆ. ಆದ್ರೆ ಜನರು ಉದ್ಘಾಟನೆಗೆ ಇನ್ನೆಷ್ಟು ದಿನ ಕಾಯಬೇಕು ಅಂತ ಪ್ರಶ್ನೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಸಿಎಂ ಭೇಟಿಯಾದ ಗುತ್ತಿಗೆದಾರ ಸಂತೋಷ್ ಪಾಟೀಲ್ ಕುಟುಂಬಸ್ಥರು – ಸಿಐಡಿ ತನಿಖೆಗೆ ಮನವಿ

    ಚಿಕ್ಕೋಡಿ ಉಪವಿಭಾಗದಲ್ಲಿ ಸೂಕ್ತ ಸರ್ಕಾರಿ ಆಸ್ಪತ್ರೆಗಳಿಲ್ಲದ (Hospitals) ಕಾರಣ ಜನರು ಮಹಾರಾಷ್ಟ್ರದ ಮೀರಜ್ ಸಾಂಗಲಿಯ ಖಾಸಗಿ ಆಸ್ಪತ್ರೆಗಳ ಮೊರೆ ಹೋಗುತ್ತಾರೆ. ಇದನ್ನ ತಪ್ಪಿಸುವ ನಿಟ್ಟಿನಲ್ಲಿ ಚಿಕ್ಕೋಡಿಯಲ್ಲಿ ಸುಸಜ್ಜಿತ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣ ಮಾಡುವಂತೆ ಸಾಕಷ್ಟು ಆಗ್ರಹ ಕೇಳಿ ಬಂದಿತ್ತು. ಹಾಗಾಗಿ ವಿಧಾನಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ ಅವರ ಸತತ ಪ್ರಯತ್ನದಿಂದ 100 ಹಾಸಿಗೆಗಳನ್ನೊಳಗೊಂಡ ಆಸ್ಪತ್ರೆ ನಿರ್ಮಾಣ ಮಾಡಲು ಅನುಮೋದನೆ ಸಿಕ್ಕಿತು. ಇದೀಗ 7 ವರ್ಷಗಳ ನಂತರ ಆಸ್ಪತ್ರೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದರೂ ಉದ್ಘಾಟನೆ ಭಾಗ್ಯ ಮಾತ್ರ ಕಂಡಿಲ್ಲ. ಇದರಿಂದ ಜನರು ಕಂಗಾಲಾಗಿದ್ದಾರೆ. ಕೆಲವರಂತೂ ಖಾಸಗಿ ಆಸ್ಪತ್ರೆಗಳಿಗೆ ಹಣ ಸುರಿದು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದು, ಕುಟುಂಬ ನಿರ್ವಹಣೆಗೂ ಹೆಣಗಾಡುತ್ತಿದ್ದಾರೆ. ಹಾಗಾಗಿ ಶೀಘ್ರದಲ್ಲೇ ಆಸ್ಪತ್ರೆ ಉದ್ಘಾಟನೆ ಮಾಡುವಂತೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ನಾಳೆ ಸಿಎಂ ಅಥಣಿ ಕ್ಷೇತ್ರ ಪ್ರವಾಸ – ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

    ಈ ಕುರಿತು ಮಾತನಾಡಿರುವ ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಸಂತೋಷ್ ಕೊಣ್ಣೂರಿ, ಸಾರ್ವಜನಿಕ ಆಸ್ಪತ್ರೆ ಚಿಕ್ಕೋಡಿಯಿಂದ ಹೊಸದಾಗಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ಕಾಮಗಾರಿ 2015ರಿಂದ ಆರಂಭವಾಗಿದ್ದು ಈವರೆಗೂ ಪೂರ್ಣಗೊಂಡಿಲ್ಲ. ಕೋವಿಡ್ ಹಿನ್ನೆಲೆಯಲ್ಲಿ ವಿಳಂಬವಾಗಿತ್ತು. ಬಳಿಕ ಮತ್ತೆ ಕಟ್ಟಡ ಕಾಮಗಾರಿ ಶುರುವಾಯಿತು. ಇನ್ನೊಂದು ತಿಂಗಳಲ್ಲಿ ಆಸ್ಪತ್ರೆ ಉದ್ಘಾಟನೆ ಮಾಡುವ ಚಿಂತನೆ ಇದೆ. ಕಟ್ಟಡ ಕಾಮಗಾರಿ ಮುಗಿದಿದೆ. ಇಂಟಿರಿಯರ್ ವರ್ಕ್ ನಡೆದಿದೆ. ಈಗಾಗಲೇ 80% ವೈದ್ಯಕೀಯ ಉಪಕರಣಗಳು ಸಹ ಬಂದಿವೆ. ಆಸ್ಪತ್ರೆಗೆ ಬೇಕಾದಂತಹ ವೈದ್ಯಕೀಯ ಸಿಬ್ಬಂದಿ ಸಹ ನೇಮಕ ಮಾಡಿಕೊಳ್ಳಲಾಗಿದೆ. ಹೈಟೆಕ್ ಶಸ್ತ್ರಚಿಕಿತ್ಸಾ ಘಟಕ, ಲಿಫ್ಟ್ ಈ ಎರಡು ಕೆಲಸ ಆದರೆ, ಸಾರ್ವಜನಿಕ ಸೇವೆಗೆ ಆಸ್ಪತ್ರೆ ಮುಕ್ತಗೊಳ್ಳಲಿದೆ ಎಂದು ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಿಕ್ಕೋಡಿ ಚುನಾವಣಾ ಅಖಾಡ ಹೇಗಿದೆ? ಕಾಂಗ್ರೆಸ್ ಅಡ್ಡಕ್ಕೆ ಕೈ ಹಾಕುತ್ತಾ ಬಿಜೆಪಿ?

    ಚಿಕ್ಕೋಡಿ ಚುನಾವಣಾ ಅಖಾಡ ಹೇಗಿದೆ? ಕಾಂಗ್ರೆಸ್ ಅಡ್ಡಕ್ಕೆ ಕೈ ಹಾಕುತ್ತಾ ಬಿಜೆಪಿ?

    ಚಿಕ್ಕೋಡಿ: ಕಳೆದ ಬಾರಿ ಗಣೇಶ ಹುಕ್ಕೇರಿ, ಬಿಜೆಪಿ ಹಾಲಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ವಿರುದ್ಧ ಗೆದ್ದು ಶಾಸಕರಾಗಿ ಆಯ್ಕೆಯಾಗಿದ್ದರು. ಈ ಬಾರಿ ಗಣೇಶ ಅವರಿಗೆ ಬಿಜೆಪಿಯಿಂದ ಮಾಜಿ ಸಂಸದ ರಮೇಶ ಕತ್ತಿ (Ramesh Katti) ಪ್ರತಿಸ್ಪರ್ಧಿಯಾಗಿದ್ದಾರೆ.

    ಚಿಕ್ಕೋಡಿ(Chikkodi) ಕ್ಷೇತ್ರದಲ್ಲಿ ಕಾಂಗ್ರೆಸ್ (Congress) ಪಕ್ಷದ ಅಭ್ಯರ್ಥಿ ಗಣೇಶ ಹುಕ್ಕೇರಿ (Ganesh hukkeri) ಹಾಗೂ ಅವರ ತಂದೆ ಪ್ರಕಾಶ ಹುಕ್ಕೇರಿ (Prakash Hukkeri) ಅಪಾರ ಅಭಿಮಾನ ಬಳಗ ಹೊಂದಿದ್ದಾರೆ. ಆದರೆ ಬಿಜೆಪಿಗೆ (BJP) ಕಾರ್ಯಕರ್ತರ ಕೊರತೆಯಿದೆ. ಇದು ರಮೇಶ ಕತ್ತಿಯವರಿಗೆ ಹುಕ್ಕೇರಿ ಕ್ಷೇತ್ರದಲ್ಲಿ ವರ್ಚಸ್ಸು ಕಡಿಮೆಯಾಗಲು ಕಾರಣವಾಗಿದೆ.

    ಬಿಜೆಪಿಗೆ ಧನಾತ್ಮಕ ಅಂಶಗಳು
    ಬಿಜೆಪಿ ಅಭ್ಯರ್ಥಿ ರಮೇಶ ಕತ್ತಿ ತನ್ನದೇ ಅಭಿಮಾನ ಬಳಗ ಹೊಂದಿದ್ದಾರೆ. ಜೊಲ್ಲೆ ಕುಟುಂಬ ಕವಟಗಿಮಠ ಕ್ಷೇತ್ರದ ರಾಜಕಾರಣದಲ್ಲಿ ಸಕ್ರಿಯವಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆ ಜನರಿಗೆ ಮನವರಿಕೆಯಾಗಿದೆ. ಲಿಂಗಾಯತ ಮತಗಳೇ ನಿರ್ಣಾಯಕವಾಗಿದ್ದರಿಂದ ಸಹಜವಾಗಿಯೆ ಬಿಜೆಪಿಗೆ ಇದು ಅನುಕೂಲಕರವಾಗಿದೆ.

    ಬಿಜೆಪಿಗೆ ಋಣಾತ್ಮಕ ಅಂಶಗಳು
    ವಸ್ತುಗಳ ಬೆಲೆ ಏರಿಕೆ ವಿಚಾರದಲ್ಲಿ ಜನ ಬೇಸತ್ತಿದ್ದಾರೆ. ಅಲ್ಲದೆ ಸದಲಗಾ ಭಾಗದಲ್ಲಿ ಪ್ರಕಾಶ ಹುಕ್ಕೇರಿ ಪ್ರಭಾವ ಬಹಳವಿದೆ. ಹೀಗಾಗಿ ಬಿಜೆಪಿಗೆ ಬರುವ ಮತಗಳು ಚದುರುವ ಸಾಧ್ಯತೆ ಇದೆ.

    ಕಾಂಗ್ರೆಸ್ ಧನಾತ್ಮಕ ಅಂಶಗಳು
    ಪ್ರಕಾಶ ಹುಕ್ಕೇರಿ ಹಾಗೂ ಗಣೇಶ ಹುಕ್ಕೇರಿ ವರ್ಚಸ್ಸು ಕ್ಷೇತ್ರದಲ್ಲಿದೆ. ಇಬ್ಬರೂ ಕಾರ್ಯಕರ್ತರಿಗೆ ಸುಲಭವಾಗಿ ಲಭ್ಯವಾಗುವ ನಾಯಕರಾಗಿದ್ದಾರೆ. ವಿಧಾನಸಭಾ ಹಾಗೂ ಪರಿಷತ್‍ನಲ್ಲಿ ತಂದೆ ಮಕ್ಕಳ ಆಯ್ಕೆ, ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಸಹಾಯಕವಾಗಲಿದೆ.

    ಕಾಂಗ್ರೆಸ್ ಋಣಾತ್ಮಕ ಅಂಶಗಳು
    ಕುಟುಂಬ ರಾಜಕಾರಣದಿಂದ ಬೇಸತ್ತ ಜನರು ಬೇರೆ ಪಕ್ಷದ ಅಭ್ಯರ್ಥಿಗೆ ಮತ ನೀಡುವ ಸಾಧ್ಯತೆಯಿದೆ. ಬಹಳ ವರ್ಷಗಳಿಂದ ಒಂದೇ ಕುಟುಂಬಕ್ಕೆ ಸೀಮಿತವಾಗಿರುವ ಅಧಿಕಾರ ಕಾಂಗ್ರೆಸ್‍ಗೆ ಮುಳುವಾಗಬಹುದು. ಬೆಳಗಾವಿಯನ್ನು ಹೊರತುಪಡಿಸಿದರೆ ಮತ್ತೊಂದು ಉಪವಿಭಾಗ ಮತ್ತು ಲೋಕಸಭಾ ಕ್ಷೇತ್ರ ಚಿಕ್ಕೋಡಿ. ಪ್ರಕಾಶ್ ಹುಕ್ಕೇರಿ ಇಲ್ಲಿಂದ ಸತತವಾಗಿ ಆರಿಸಿ ಬಂದಿದ್ದಾರೆ. ಈ ಹಿಂದಿನ ಲೋಕಸಭೆಗೆ ಪ್ರಕಾಶ್ ಹುಕ್ಕೇರಿಯವರು ಸ್ಪರ್ಧೆ ಮಾಡಿರಲಿಲ್ಲ. ಅವರಿಂದ ತೆರವಾದ ಕ್ಷೇತ್ರಕ್ಕೆ ಅವರ ಮಗ ಗಣೇಶ ಹುಕ್ಕೇರಿಯವರನ್ನು ನಿಲ್ಲಿಸಿದ್ದರು. ಗಣೇಶ ಹುಕ್ಕೇರಿಯವರೂ ಸಹ ಸತತ ಎರಡು ಬಾರಿ ಈ ಮತಕ್ಷೇತ್ರದಿಂದ ತಂದೆಯಂತೆ ಆರಿಸಿ ಬಂದಿದ್ದಾರೆ. ಚಿಕ್ಕೋಡಿಯಲ್ಲಿಯೇ ಪ್ರಭಾವಿ ಬಿಜೆಪಿ ನಾಯಕರಿದ್ದರೂ ಸಹ ಈವರೆಗೂ ಚಿಕ್ಕೋಡಿ ವಿಧಾನಸಭಾ ಮತಕ್ಷೇತ್ರವನ್ನು ಬಿಜೆಪಿ ತೆಕ್ಕೆಗೆ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ.

    ಪ್ರತಿ ಬಾರಿಯೂ ಕೃಷ್ಣಾ ನದಿಯ ಪ್ರವಾಹ ಅಪ್ಪಳಿಸಿದಾಗ ಸಾವಿರಾರು ಜನ ಬೀದಿಗೆ ಬೀಳುವ ಪರಿಸ್ಥಿತಿ ಇದೆ. ಹೀಗಿದ್ದರೂ ಸಹ ಇಲ್ಲಿ ಪ್ರಕಾಶ್ ಹುಕ್ಕೇರಿ ಕಳೆದ 5 ಬಾರಿ ಆರಿಸಿ ಬಂದು ಸಚಿವರಾಗಿದ್ದರು. ನಂತರ ಅವರ ಮಗ ಗಣೇಶ ಹುಕ್ಕೇರಿ ಎರಡು ಬಾರಿ ಆರಿಸಿ ಬಂದು ಈಗ ಮೂರನೇ ಬಾರಿಗೆ ತಮ್ಮ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

    ಕಾಂಗ್ರೆಸ್ ಹಾಗೂ ಬಿಜೆಪಿಗೆ ಇಲ್ಲಿ ಸಮಬಲವಿದ್ದರೂ ಸಹ ಪ್ರಕಾಶ್ ಹುಕ್ಕೇರಿಯವರು ಕ್ಷೇತ್ರದಾದ್ಯಂತ ಮಾಡಿರುವ ಅಭಿವೃದ್ದಿ ಕೆಲಸಗಳು ಹಾಗೂ ಜನರಿಗೆ ಸ್ಪಂದಿಸುವ ರೀತಿಯಿಂದ ಜನ ಹುಕ್ಕೇರಿ ಮನೆತನಕ್ಕೆ ಮಣೆ ಹಾಕುತ್ತಾರೆ ಎಂಬ ಮಾತಿದೆ. ಮೀಸೆ ಮಾವ ಎಂದೇ ಪ್ರಖ್ಯಾತಿ ಹೊಂದಿರುವ ಪ್ರಕಾಶ್ ಹುಕ್ಕೇರಿಯವರ ಅಭಿವೃದ್ಧಿಯ ಆಲೋಚನೆಗಳು ಕಳೆದ ಎರಡು ಚುನಾವಣೆಗಳಲ್ಲಿ ಅವರ ಮಗ ಗಣೇಶ ಹುಕ್ಕೇರಿಯವರ ಕೈ ಹಿಡಿದಿವೆ. ಸಮರ್ಥ ಅಭ್ಯರ್ಥಿಯನ್ನು ಬಿಜೆಪಿ ಕಣಕ್ಕಿಳಿಸಿದರೆ ಕಾಂಗ್ರೆಸ್ ಕೋಟೆ ಬಿಜೆಪಿಗೆ ಕೈ ಸೇರಲಿದೆ ಎಂಬ ಲೆಕ್ಕಾಚಾರಗಳಿದ್ದರೂ ಸಹ ಈ ವರೆಗೂ ಅದು ಸಾಧ್ಯವಾಗಿಲ್ಲ.

    ಈಗಾಗಲೇ ಒಂದು ಬಾರಿ ಅಣ್ಣಾಸಾಹೇಬ್ ಜೊಲ್ಲೆ ಮತ್ತೊಂದು ಬಾರಿ ಮಾಜಿ ವಿಧಾನಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಇಬ್ಬರೂ ಸಹ ತಂದೆ ಪ್ರಕಾಶ ಹುಕ್ಕೇರಿ ಹಾಗೂ ಮಗ ಗಣೇಶ ಹುಕ್ಕೇರಿ ವಿರುದ್ಧ ಪರಾಭವಗೊಂಡಿದ್ದಾರೆ. ಹೇಳಿಕೊಳ್ಳುವ ವ್ಯವಹಾರದ ಲಾಬಿ ಇಲ್ಲದಿದ್ದರೂ ಸಹ ಕ್ಷೇತ್ರದಾದ್ಯಂತ ಪ್ರಕಾಶ ಹುಕ್ಕೇರಿಯವರ ಹಿಡಿತ ಸಾಧ್ಯವಾಗಿದೆ ಎನ್ನುವುದು ಒಂದು ವಿಶ್ಲೇಷಣೆ. ಆದರೆ ಅವರು ಮಾಡಿರುವ ಅಭಿವೃದ್ಧಿ ಕೆಲಸಗಳು ಮಾತ್ರ ಹುಕ್ಕೇರಿ ಮನೆತನದ ಕೈ ಹಿಡಿದಿವೆ ಎನ್ನುವುದು ರಾಜಕೀಯ ಪಂಡಿತರ ವಾದವಾಗಿದೆ.

    ಚಿಕ್ಕೋಡಿ ಕ್ಷೇತ್ರದ ಜಾತಿವಾರು ಮತದಾರರ ಲೆಕ್ಕಾಚಾರ
    ಒಟ್ಟು ಮತದಾರರು
    2,15,711
    ಪುರುಷ : 1,08,686
    ಮಹಿಳೆಯರು : 1,07,025

    ಜಾತಿ ಲೆಕ್ಕಾಚಾರ
    ಲಿಂಗಾಯತರು: 40,000
    ಬ್ರಾಹ್ಮಣ: 10,000
    ಎಸ್ ಸಿ ಎಸ್ ಟಿ; 25,000
    ಮುಸ್ಲಿಂ: 28000
    ಕುಂಬಾರ: 6000
    ಜೈನ್: 35000
    ಮರಾಠ: 18000
    ಬಲಜಿಗ: 5000
    ನೇಕಾರ: 5000
    ವಿಶ್ವಕರ್ಮ: 3000
    ಮಡಿವಾಳ: 3000

  • ಪ್ರಕಾಶ್ ಹುಕ್ಕೇರಿ ಭರ್ಜರಿ ಗೆಲುವು- ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ

    ಪ್ರಕಾಶ್ ಹುಕ್ಕೇರಿ ಭರ್ಜರಿ ಗೆಲುವು- ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ

    ಬೆಳಗಾವಿ: ವಾಯುವ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

    ಬೆಳಗಾವಿ ನಗರದ ಜ್ಯೋತಿ ಕಾಲೇಜಿನ ಮುಂಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಗುಲಾಬಿ ಬಣ್ಣ ಎರಚಿ ಸಂಭ್ರಮಿಸಿದರು. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಲ್ಲ ಎಂದ ಶರದ್ ಪವಾರ್

    ತೀವ್ರ ಕುತೂಹಲ ಮೂಡಿಸಿದ್ದ ವಾಯುವ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕೈ ಅಭ್ಯರ್ಥಿ ಮಾಜಿ ಸಚಿವ ಪ್ರಕಾಶ್ ಹುಕ್ಕೇರಿ ಗೆಲುವಿನ ನಗೆ ಬೀರಿದ್ದಾರೆ. ತಮ್ಮ ನೆಚ್ಚಿನ ನಾಯಕನ ಗೆಲುವು ಖಚಿತ ಆಗುತ್ತಿದ್ದಂತೆ ಬೆಳಗಾವಿಯ ಜ್ಯೋತಿ ಕಾಲೇಜಿನ ಹೊರಗಡೆ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪ್ರಕಾಶ್ ಹುಕ್ಕೇರಿ ಪರ ಘೋಷಣೆ ಕೂಗಿ ಸಂಭ್ರಮಿಸಿದರು. ಇದನ್ನೂ ಓದಿ: ಗೂಂಡಾಗಿರಿ ಕಾಂಗ್ರೆಸ್ ನಾಯಕರಿಗೆ ವಂಶಪಾರಂಪರ್ಯವಾಗಿ ಬಂದ ಉಡುಗೊರೆ- ಬಿಜೆಪಿ

    ಎರಡನೇ ಸುತ್ತಿನ ಮತಎಣಿಕೆಯಲ್ಲಿ ಗೆಲುವಿನ ಕೋಟಾ ತಲುಪಿರುವ ಪ್ರಕಾಶ್ ಹುಕ್ಕೇರಿ 20,000 ಮತಗಳ ಪೈಕಿ 10,520 ಮತ ಪಡೆದಿದ್ದಾರೆ. ಅದರಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್ ಶಾಹಾಪುರ 6,008 ಮತಗಳನ್ನು ಪಡೆದಿದ್ದು, ಪ್ರಕಾಶ್ ಹುಕ್ಕೇರಿ 4,512 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಜಯ ದಾಖಲಿಸಿದ್ದಾರೆ.

    Live Tv

  • ವಿಧಾನಪರಿಷತ್ ಚುನಾವಣೆ- ವಾಯವ್ಯ ಶಿಕ್ಷಕರ ಕ್ಷೇತ್ರದಿಂದ ಪ್ರಕಾಶ್ ಹುಕ್ಕೇರಿ ಕಣಕ್ಕೆ

    ವಿಧಾನಪರಿಷತ್ ಚುನಾವಣೆ- ವಾಯವ್ಯ ಶಿಕ್ಷಕರ ಕ್ಷೇತ್ರದಿಂದ ಪ್ರಕಾಶ್ ಹುಕ್ಕೇರಿ ಕಣಕ್ಕೆ

    ಬೆಳಗಾವಿ: ಜೂನ್‍ನಲ್ಲಿ ನಡೆಯುವ ಶಿಕ್ಷಕರ ಕ್ಷೇತ್ರದ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಯನ್ನು ಪ್ರಕಟಿಸಿದೆ.

    ವಾಯವ್ಯ ಶಿಕ್ಷಕರ ಮತ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಪ್ರಕಾಶ್ ಹುಕ್ಕೇರಿಯವರನ್ನು ಕಾಂಗ್ರೆಸ್ ಆಯ್ಕೆ ಮಾಡಿದೆ. ಹುಕ್ಕೇರಿಯವರು ಮಾಜಿ ಸಚಿವ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಮಾಜಿ ಸಂಸದರಾಗಿದ್ದಾರೆ. ಇದನ್ನೂ ಓದಿ: ಧ್ವಂಸಗೊಂಡ ಅಪ್ಪನ ಅಂಗಡಿಯಲ್ಲಿ ಕಾಯಿನ್ ಸಂಗ್ರಹಿಸುತ್ತಿದ್ದ ಬಾಲಕ – ಫೋಟೋ ವೈರಲ್

    ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳನ್ನು ಒಳಗೊಂಡ ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯು ಈಗಾಗಲೇ ಕ್ಷೇತ್ರದ ಹಾಲಿ ಸದಸ್ಯ ಅರುಣ್ ಶಹಾಪುರ ಅವರಿಗೆ ಟಿಕೆಟ್ ನೀಡಿದೆ.

  • ಜೊಲ್ಲೆ ದಂಪತಿ ವಿರುದ್ಧ ಹರಿಹಾಯ್ದ ಪ್ರಕಾಶ್ ಹುಕ್ಕೇರಿ

    ಜೊಲ್ಲೆ ದಂಪತಿ ವಿರುದ್ಧ ಹರಿಹಾಯ್ದ ಪ್ರಕಾಶ್ ಹುಕ್ಕೇರಿ

    ಬೆಳಗಾವಿ: ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಸದ ಅಣ್ಣಾಸಾಹೇಬ ಜೊಲ್ಲೆ ಚುನಾವಣೆಯಲ್ಲಿ ಎಲ್ಲಿಯೂ ಸಹ ಪ್ರಚಾರದಲ್ಲಿ ಭಾಗಿಯಾಗಿಲ್ಲ. ಕೇವಲ ಯಕ್ಸಂಬಾ ಹಾಗೂ ಬೋರಗಾಂವ ಪಟ್ಟಣ ಪಂಚಾಯ್ತಿಗೆ ಮಾತ್ರ ಒತ್ತು ನೀಡಿದ್ದಾರೆ. ಆದರೂ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಸೋತಿರುವುದು ದುರ್ದೈವ. ಬೋರಗಾಂವ ಪಟ್ಟಣ ಪಂಚಾಯ್ತಿಯಲ್ಲಿ ಒಂದು ಸ್ಥಾನ ಆಯ್ಕೆಯಾಗಿಲ್ಲ. ಯಕ್ಸಂಬಾ ಪಟ್ಟಣ ಪಂಚಾಯ್ತಿಯಲ್ಲಿ ಕೇವಲ ಒಬ್ಬರು ಬಿಜೆಪಿಯಿಂದ ಆಯ್ಕೆಯಾಗಿದ್ದಾರೆ ಎಂದು ಸಿಡಿದರು. ಇದನ್ನೂ ಓದಿ: ನಾಳೆಯ ಕರ್ನಾಟಕ ಬಂದ್ ವಾಪಸ್

    ಸಂಸದ ಹಾಗೂ ಸಚಿವೆ ತಮ್ಮ ಕಾರ್ಯ ವೈಖರಿ ಬಗ್ಗೆ ಚಿಂತನೆ ಮಾಡಬೇಕು. ಅವರ ಹೆಸರು ತೆಗೆದುಕೊಳ್ಳಲು ನನಗೆ ಮರ್ಯಾದೆ ಅನಿಸುವುದಿಲ್ಲ. ಜೊಲ್ಲೆ ದಂಪತಿ ಕ್ಷೇತ್ರದ ಜನರಿಂದ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ಜನವರಿ 1 ರಿಂದ ಜಿಎಸ್‍ಟಿ ನಿಯಮಗಳ ಬದಲಾವಣೆ – ಹೀಗಿದೆ ಮುಖ್ಯ ಬೆಲೆ ಏರಿಕೆಗಳ ಪಟ್ಟಿ

  • ಸುರೇಶ್ ಅಂಗಡಿ ಪತ್ನಿ ಸ್ಪರ್ಧೆಗೆ ಬೆಂಬಲ ನೀಡೋ ಬದಲು, ಅವಿರೋಧ ಆಯ್ಕೆಗೆ ಶ್ರಮಿಸಲಿ: ಕತ್ತಿ

    ಸುರೇಶ್ ಅಂಗಡಿ ಪತ್ನಿ ಸ್ಪರ್ಧೆಗೆ ಬೆಂಬಲ ನೀಡೋ ಬದಲು, ಅವಿರೋಧ ಆಯ್ಕೆಗೆ ಶ್ರಮಿಸಲಿ: ಕತ್ತಿ

    – ಪ್ರಕಾಶ್ ಹುಕ್ಕೇರಿ ಹೇಳಿಕೆಗೆ ಉಮೇಶ್ ಕತ್ತಿ ಟಾಂಗ್

    ಚಿಕ್ಕೋಡಿ: ಬೆಳಗಾವಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದ ಕಾಂಗ್ರೆಸ್ ಮುಖಂಡ ಪ್ರಕಾಶ್ ಹುಕ್ಕೇರಿ ಅವರಿಗೆ ಹುಕ್ಕೇರಿ ಮತಕ್ಷೇತ್ರದ ಬಿಜೆಪಿ ಶಾಸಕ ಉಮೇಶ್ ಕತ್ತಿ ಟಾಂಗ್ ನೀಡಿದ್ದಾರೆ.

    ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿ ಮಾತನಾಡಿದ ಶಾಸಕ ಕತ್ತಿ, ಪ್ರಕಾಶ್ ಹುಕ್ಕೇರಿ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡುವ ಬದಲು ಬೆಳಗಾವಿ ಲೋಕಸಭೆಗೆ ದಿವಂಗತ ಸುರೇಶ ಅಂಗಡಿ ಅವರ ಪತ್ನಿಯ ಅವಿರೋಧ ಆಯ್ಕೆಗೆ ಶ್ರಮಿಸಬೇಕಿದೆ. ಕೂಡಲೇ ಕಾಂಗ್ರೆಸ್ ಹೈ ಕಮಾಂಡ್ ಜೊತೆಗೆ ಪ್ರಕಾಶ್ ಹುಕ್ಕೇರಿ ಚರ್ಚಿಸಿ ಬೆಳಗಾವಿ ಲೋಕಸಭೆಗೆ ಅಭ್ಯರ್ಥಿಯನ್ನ ಹಾಕದಂತೆ ಮನವಿ ಮಾಡಲಿ ಎಂದು ಹೇಳಿದರು.

    ಮಾಜಿ ಕಾಂಗ್ರೆಸ್ ಸಂಸದ ಪ್ರಕಾಶ್ ಹುಕ್ಕೇರಿ ಹೇಳಿಕೆಯಿಂದ ನನಗೆ ಸಂತೋಷವಾಗಿದೆ. ದಿವಂಗತ ಕೇಂದ್ರ ಸಚಿವ ಸುರೇಶ ಅಂಗಡಿ ಅವರ ಪತ್ನಿಯನ್ನ ಆಯ್ಕೆ ಮಾಡಿ ಎಲ್ಲರೂ ಸೇರಿ ಹೊಸ ಇತಿಹಾಸ ಸೃಷ್ಟಿಸೋಣ. ನಾವು ಕೂಡ ಸುರೇಶ ಅಂಗಡಿ ಪತ್ನಿ ಅವರಿಗೆ ಟಿಕೆಟ್ ನೀಡುವಂತೆ ಮನವಿ ಮಾಡುತ್ತೇವೆ. ಬೆಳಗಾವಿ ಲೋಕಸಭೆಯಲ್ಲಿ ಕಾಂಗ್ರೆಸ್ ಟಿಕೆಟ್ ನೀಡದಂತೆ ಪ್ರಕಾಶ ಹುಕ್ಕೇರಿ ನೋಡಿಕೊಳ್ಳಲಿ. ಬೆಂಗಳೂರು ಹಾಗೂ ದೆಹಲಿಯ ಹೈ ಕಮಾಂಡ್ ಜೊತೆ ಚರ್ಚಿಸಿ ಆದಷ್ಟು ಬೇಗ ನಿರ್ಣಯ ಕೈಗೊಳ್ಳಲು ಉಮೇಶ್ ಕತ್ತಿ ಒತ್ತಾಯಿಸಿದರು.

    ಪ್ರಕಾಶ ಹುಕ್ಕೇರಿ ಬಿಜೆಪಿ ಪಕ್ಷಕ್ಕೆ ಬಂದರೆ ಸ್ವಾಗತ ಮಾಡುತ್ತೇನೆ ಎಂದು ಇದೇ ಸಂದರ್ಭದಲ್ಲಿ ಉಮೇಶ್ ಕತ್ತಿ ಹೇಳಿದರು. ಸುರೇಶ್ ಅಂಗಡಿ ಪತ್ನಿಗೆ ಟಿಕೆಟ್ ನೀಡಿದರೆ ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ನಾನೇ ಹೋಗಿ ಪ್ರಚಾರ ಮಾಡುತ್ತೇನೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ಇತ್ತಿಚೇಗೆ ಹೇಳಿಕೆ ನೀಡಿದ್ದರು.

  • ರಾಜು ಕಾಗೆ ಕಾಂಗ್ರೆಸ್ ಸೇರ್ಪಡೆ – ಚಿಕ್ಕೋಡಿಯಲ್ಲಿ ಕೈ ಅಸಮಾಧಾನ ಸ್ಫೋಟ

    ರಾಜು ಕಾಗೆ ಕಾಂಗ್ರೆಸ್ ಸೇರ್ಪಡೆ – ಚಿಕ್ಕೋಡಿಯಲ್ಲಿ ಕೈ ಅಸಮಾಧಾನ ಸ್ಫೋಟ

    ಚಿಕ್ಕೋಡಿ: ಬಿಜೆಪಿ ನಾಯಕ ರಾಜು ಕಾಗೆ ಕಾಂಗ್ರೆಸ್ ಸೇರ್ಪಡೆ ವಿಚಾರ ತಿಳಿಯುತ್ತಿದ್ದಂತೆ ಚಿಕ್ಕೋಡಿಯ ಕಾಂಗ್ರೆಸ್‍ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.

    ಇಂದು ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದ ರಾಜು ಕಾಗೆ, ನನಗೆ ಬಿಜೆಪಿಯಲ್ಲಿ ಸಾಕಷ್ಟು ಅವಮಾನಗಳಾಗಿವೆ. ನನಗೆ ಹೇಳದೆ ನನ್ನ ಕ್ಷೇತ್ರದಲ್ಲಿ ಅನರ್ಹ ಶಾಸಕರಿಗೆ ಟಿಕೆಟ್ ನೀಡುತ್ತಿರುವುದು ನೋವಾಗಿದೆ. ಆದ್ದರಿಂದ ನಾನು ಬುಧವಾರ ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದೇನೆ ಮತ್ತು 18 ರಂದು ಕಾಗವಾಡ ಕ್ಷೇತ್ರದಿಂದ ಕೈ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ ಎಂದು ಹೇಳಿದ್ದರು.

    ರಾಜು ಕಾಗೆ ಕಾಂಗ್ರೆಸ್ ಸೇರ್ಪಡೆಯಾಗುವ ಮುಹೂರ್ತ ಫಿಕ್ಸ್ ಆದ ಬೆನ್ನಲ್ಲೇ ಚಿಕ್ಕೋಡಿ ಕಾಂಗ್ರೆಸ್ಸಿನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಕಾಗವಾಡ ಮತಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಪ್ರಕಾಶ ಹುಕ್ಕೇರಿ ಟಿಕೆಟ್ ಕೈ ತಪ್ಪಿತು ಎನ್ನುವ ಅಸಮಾಧಾನದಿಂದ ಅವರು ಹಾಗೂ ಅವರ ಪುತ್ರ ಶಾಸಕ ಗಣೇಶ ಹುಕ್ಕೇರಿ ಇಂದು ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿರಲಿಲ್ಲ.

    ರಾಜು ಕಾಗೆ ಕಾಂಗ್ರೆಸ್ ಸೇರ್ಪಡೆ ವಿಚಾರ ನನಗೆ ಗೊತ್ತೇ ಇಲ್ಲ ಎಂದು ಚಿಕ್ಕೋಡಿ ಕಾಂಗ್ರೆಸ್ ಅಧ್ಯಕ್ಷರು ಹೇಳಿದರೆ ಮಾಜಿ ಸಚಿವ ವೀರಕುಮಾರ ಪಾಟೀಲ್ ಉಪಚುನಾವಣೆಯಲ್ಲಿ ಮೂಲ ಕಾಂಗ್ರೆಸ್ಸಿಗರಿಗೆ ಟಿಕೆಟ್ ನೀಡುವುದು ಒಳ್ಳೆಯದು ಎಂದು ಹೇಳಿದ್ದಾರೆ.

    ಕೇಂದ್ರ ಸರ್ಕಾರದ ಆರ್ಥಿಕ ಹಾಗೂ ಜನ ವಿರೋಧಿ ನೀತಿಗಳನ್ನು ಖಂಡಿಸಿ ಚಿಕ್ಕೋಡಿ ಪಟ್ಟಣದಲ್ಲಿ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಘಟಕದ ವತಿಯಿಂದ ಪ್ರತಿಭಟನೆ ಮಾಡಲಾಯಿತು. ಸರ್ಕಾರಿ ಪ್ರವಾಸಿ ಮಂದಿರದಲ್ಲಿ ರಾಜಕೀಯ ಸಭೆ ನಿಷೇಧವಿದ್ದರೂ ಚಿಕ್ಕೋಡಿ ಪ್ರವಾಸಿ ಮಂದಿರದಲ್ಲೇ ಕೈ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಬಳಿಕ ತಹಶೀಲ್ದಾರ್ ಕಚೇರಿಗೆ ತೆರಳಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

  • ಪ್ರಕಾಶ್ ಹುಕ್ಕೇರಿ ಗೆಲುವಿಗೆ ತನ್ನ ಮೀಸೆ ಪಣಕ್ಕಿಟ್ಟ ಅಭಿಮಾನಿ!

    ಪ್ರಕಾಶ್ ಹುಕ್ಕೇರಿ ಗೆಲುವಿಗೆ ತನ್ನ ಮೀಸೆ ಪಣಕ್ಕಿಟ್ಟ ಅಭಿಮಾನಿ!

    ಬೆಳಗಾವಿ(ಚಿಕ್ಕೋಡಿ): ಲೋಕಸಭಾ ಚುನಾವಣೆಯ ಫಲಿತಾಂಶ ಗುರುವಾರ ಹೊರಬೀಳಲಿದೆ. ಈ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಗೆಲುವಿಗೆ ಅಭಿಮಾನಿಯೊಬ್ಬರು ತಮ್ಮ ಮೀಸೆಯನ್ನೇ ಪಣಕ್ಕಿಟ್ಟಿದ್ದಾರೆ.

    ಹೌದು. ಚುನಾವಣೆ ವೇಳೆ ಹಣ, ಆಸ್ತಿ ಬೆಟ್ಟಿಂಗ್ ಕಟ್ಟೋದನ್ನ ನೋಡಿದ್ದೀವಿ ಇದೇನಪ್ಪ ಮೀಸೆ ಬೆಟ್ಟಿಂಗ್ ಎಂದು ಆಶ್ಚರ್ಯವಾಗಬಹುದು. ಆದರೆ ಇದು ನಿಜ. ಚಿಕ್ಕೋಡಿ ಮಾಜಿ ಪುರಸಭೆ ಸದಸ್ಯ ರವಿ ಮಾಳಿ ಕಳೆದ 20 ವರ್ಷಗಳಿಂದ ಪ್ರೀತಿಯಿಂದ ಬೆಳೆಸಿರುವ ಮೀಸೆ-ಗಡ್ಡ ಪಣಕ್ಕೆ ಇಟ್ಟಿದ್ದಾರೆ. ಪ್ರಕಾಶ್ ಹುಕ್ಕೇರಿ ಅವರು ಈ ಭಾರಿ ಲೋಕಸಮರದಲ್ಲಿ ಗೆಲ್ಲದಿದ್ದರೆ ಅರ್ಧ ಮೀಸೆ ಅರ್ಧ ಗಡ್ಡ ತೆಗೆಯುತ್ತೇನೆ. ಹಾಗೆಯೇ ಚಿಕ್ಕೋಡಿಯಲ್ಲಿ ಪಟ್ಟಣದಲ್ಲಿ ಓಡಾಡುತ್ತೇನೆ ಎಂದು ಚಾಲೆಂಜ್ ಕಟ್ಟಿದ್ದಾರೆ.

    ಈ ಬಗ್ಗೆ ರವಿ ಅವರನ್ನ ಕೇಳಿದರೆ, ಚಿಕ್ಕೋಡಿಯಲ್ಲಿ ಪ್ರಕಾಶ ಹುಕ್ಕೇರಿ ಗೆದ್ದೇ ಗೆಲ್ಲುತ್ತಾರೆ ಎಂಬ ವಿಶ್ವಾಸವಿದೆ. ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಯಾವುದೇ ಕಾರಣಕ್ಕೂ ಗೆಲ್ಲುವದಿಲ್ಲ ಎನ್ನುವುದು ಗೊತ್ತು. ಆದ್ದರಿಂದ ನಮ್ಮ ನಾಯಕರಿಗಾಗಿ ಈ ಮೀಸೆ ಬೆಟ್ಟಿಂಗ್ ಕಟ್ಟಿದ್ದೇನೆ ಎಂದು ಹೇಳಿದ್ದಾರೆ.

    ನಾಳೆ ಪ್ರಕಟವಾಗುವ ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ಇಡೀ ದೇಶವೇ ಕಾತುರದಿಂದ ಕಾಯುತ್ತಿದೆ. ಈ ನಡುವೆ ಯಾವ ಕ್ಷೇತ್ರದಲ್ಲಿ ಯಾವ ಅಭ್ಯರ್ಥಿ ಗೆಲ್ಲುತ್ತಾರೆ ಎಂಬ ಬೆಟ್ಟಿಂಗ್ ಕೂಡ ಭರ್ಜರಿಯಾಗಿ ನಡೆಯುತ್ತಿದೆ. ಈ ಮಧ್ಯೆ ಈ ಮೀಸೆ ಬೆಟ್ಟಿಂಗ್ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಫಲಿತಾಂಶದ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.