Tag: Pralhad Joshi

  • ಕ್ಯಾಬ್‌ ಸೇವೆಗೆ ಮುನ್ನ ಟಿಪ್ಸ್‌ ಪಡೆದರೆ ಕಟ್ಟುನಿಟ್ಟಿನ ಕ್ರಮ: ಪ್ರಹ್ಲಾದ್‌ ಜೋಶಿ ಎಚ್ಚರಿಕೆ

    ಕ್ಯಾಬ್‌ ಸೇವೆಗೆ ಮುನ್ನ ಟಿಪ್ಸ್‌ ಪಡೆದರೆ ಕಟ್ಟುನಿಟ್ಟಿನ ಕ್ರಮ: ಪ್ರಹ್ಲಾದ್‌ ಜೋಶಿ ಎಚ್ಚರಿಕೆ

    ನವದೆಹಲಿ: ತ್ವರಿತ ಸೇವೆ ಒದಗಿಸಲು ಗ್ರಾಹಕರಿಂದ ಮುಂಗಡವಾಗಿ ಟಿಪ್ಸ್‌ ಪಡೆಯುತ್ತಿರುವ ಕ್ಯಾಬ್‌ಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಎಚ್ಚರಿಸಿದ್ದಾರೆ.

    ಟ್ಯಾಕ್ಸಿ ಸೇವೆಗೆ ಗ್ರಾಹಕರಿಂದ ಬುಕ್‌ ಮಾಡುವಾಗಲೇ ಟಿಪ್ಸ್‌ ರೂಪದಲ್ಲಿ ಹೆಚ್ಚುವರಿ ಹಣ ಪಡೆಯುತ್ತಿರುವುದು ಗಮನಕ್ಕೆ ಬಂದಿದ್ದು, ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಈಗಾಗಲೇ ಈ ಸಂಬಂಧ ಪ್ರಮುಖ ಕ್ಯಾಬ್‌ ಸರ್ವೀಸ್‌ Uber ಗೆ ನೋಟಿಸ್‌ ಜಾರಿ ಮಾಡಲಾಗಿದೆ ಎಂದು ಜೋಶಿ ತಿಳಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದಲ್ಲಿ ನನ್ನನ್ನು ಮದುವೆಯಾಗು: ಪಾಕ್‌ ಅಧಿಕಾರಿ ಮುಂದೆ ಆಸೆ ವ್ಯಕ್ತಪಡಿಸಿದ್ದ ಜ್ಯೋತಿ

    ಟ್ಯಾಕ್ಸಿ ಸೇವೆ ಒದಗಿಸಲು Uber ನಂತಹ ಸೇವಾ ಸಂಸ್ಥೆಗಳು ಗ್ರಾಹಕರಿಂದ ಮುಂಚಿತವಾಗಿಯೇ ಒತ್ತಾಯದಿಂದ ಟಿಪ್ಸ್‌ ಪಡೆಯುತ್ತಿರುವುದು ಕಳವಳಕಾರಿ ಬೆಳವಣಿಗೆ. ಟಿಪ್ಸ್‌ ಎನ್ನುವುದು ಗ್ರಾಹಕರು ಉತ್ತಮ ಸೇವೆಗೆ ಮೆಚ್ಚಿ ಕೊಡುವಂಥದ್ದು. ಇದನ್ನು ಯಾರೂ ಒತ್ತಾಯದಿಂದ ಪಡೆಯಬಾರದು ಎಂದು ಸಚಿವರು ಸೂಚಿಸಿದ್ದಾರೆ.

    ಕ್ಯಾಬ್‌ನವರು ಗ್ರಾಹಕರಿಗೆ ಸೇವೆ ಕಲ್ಪಿಸುವ ಮೊದಲೇ ಟಿಪ್ಸ್‌ ಪಡೆಯುವುದು ದಬ್ಬಾಳಿಕೆಯಾಗುತ್ತದೆ. ಗ್ರಾಹಕರ ಶೋಷಣೆಯಾಗುತ್ತದೆ. ಹಾಗಾಗಿ ಈ ಮುಂಗಡ ಟಿಪ್ಸ್‌ ಬಗ್ಗೆ ಪರಿಶೀಲಿಸುವಂತೆ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ(CCPA)ಕ್ಕೆ ಸೂಚನೆ ನೀಡಿದ್ದೆ. CCPA ತಪಾಸಣೆ ವೇಳೆ Uber ಸೇವೆಗೆ ಮುಂಗಡ ಟಿಪ್ಸ್‌ ಪಡೆಯುತ್ತಿರುವುದು ಸಾಬೀತಾದ್ದರಿಂದ ನೋಟಿಸ್ ಜಾರಿ ಮಾಡಿ ವಿವರಣೆ ಕೇಳಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಆಪರೇಷನ್ ಸಿಂಧೂರ ಹೇಳಿಕೆ ವಿವಾದ – ಅಶೋಕ ವಿವಿ ಪ್ರೊಫೆಸರ್‌ಗೆ ಮಧ್ಯಂತರ ಜಾಮೀನು

  • 327 ಕೋಟಿ ವೆಚ್ಚದ ನವಲಗುಂದ ಬೈಪಾಸ್ ರಸ್ತೆ ಕಾಮಗಾರಿಗೆ ಕೇಂದ್ರ ಅಸ್ತು

    327 ಕೋಟಿ ವೆಚ್ಚದ ನವಲಗುಂದ ಬೈಪಾಸ್ ರಸ್ತೆ ಕಾಮಗಾರಿಗೆ ಕೇಂದ್ರ ಅಸ್ತು

    – 10.575 ಕಿಮೀ ರಸ್ತೆ ನಿರ್ಮಾಣಕ್ಕೆ ಕೇಂದ್ರದಿಂದ ಅನುಮೋದನೆ – ಶೀಘ್ರವೇ ಟೆಂಡರ್‌ ಪ್ರತಿಕ್ರಿಯೆ ಶುರು

    ಹುಬ್ಬಳ್ಳಿ: ಸವದತ್ತಿ ಯಲ್ಲಮ್ಮನಗುಡ್ಡ ಸೇರಿದಂತೆ ವಿವಿಧ ಸುಕ್ಷೇತ್ರಗಳಿಗೆ ಸಂಪರ್ಕ ಕಲ್ಪಿಸುವ 327 ಕೋಟಿ ರೂ. ವೆಚ್ಚದ ನವಲಗುಂದ ಬೈಪಾಸ್‌ ರಸ್ತೆ (Navalgund Bypass Road) ಕಾಮಗಾರಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ತಿಳಿಸಿದ್ದಾರೆ.

    ನವಲಗುಂದ ಬೈಪಾಸ್ ರಸ್ತೆ ನಿರ್ಮಾಣಕ್ಕಾಗಿ ಈ ಹಿಂದೆಯೇ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin Gadkari) ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದರಂತೆ ಇದೀಗ ಕಾಮಗಾರಿಗೆ ಅನುಮೋದನೆ ದೊರಕಿದೆ. ರಾಜ್ಯ ಸರ್ಕಾರ ಟೆಂಡರ್ ಕರೆದು ಕಾರ್ಯಾರಂಭ ಮಾಡುವ ಹಂತ ತಲುಪಿದೆ ಎಂದು ತಿಳಿಸಿದ್ದಾರೆ.

    ಈ ಬೈಪಾಸ್‌ ಸಂಬಂಧ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯಕ್ಕೆ ಸಲ್ಲಿಸಿದ್ದ ಜೋಡಣೆ (Alignment) ಮತ್ತು DPR (ವಿವರವಾದ ಯೋಜನಾ ವರದಿ) ಅನ್ನು ಅಲೈನ್‌ಮೆಂಟ್ ಅಪ್ರೂವಲ್ ಕಮಿಟಿ (Alignment Approval Committee (AAC) ಅನುಮೋದನೆ ನೀಡಿದೆ. ನವಲಗುಂದ ಪಟ್ಟಣಕ್ಕೆ 10.575 ಕಿ.ಮೀ. ವಿಸ್ತೀರ್ಣದ ಬೈಪಾಸ್‌ ರಸ್ತೆ ನಿರ್ಮಾಣವಾಗಲಿದೆ ಎಂದು ಹೇಳಿದ್ದಾರೆ.

    ಬೆಣ್ಣೆಹಳ್ಳ ಮತ್ತು ಅದನ್ನು ಸೇರುವ ಸಣ್ಣ ನಾಲಾಗಳು ಮಳೆಗಾಲದಲ್ಲಿ ತುಂಬಿ ಹರಿದು ಪ್ರವಾಹ ಪರಿಸ್ಥಿತಿ ಎದುರಾಗುತ್ತಿತ್ತು. ಇದರಿಂದ ಅಪಾರ ಕೃಷಿ ಭೂಮಿಯಲ್ಲಿ ಬೆಳೆ ಹಾನಿ ಸಂಭವಿಸುತ್ತಿತ್ತು ಮತ್ತು ಅನೇಕ ಕಡೆ ಸಂಪರ್ಕ ಕಡಿತಗೊಳ್ಳುತ್ತಿತ್ತು. ಇದನ್ನೆಲ್ಲ ಗಮನಿಸಿ ಶಾಶ್ವತ ಪರಿಹಾರ ಎನ್ನುವಂತೆ ಬೈಪಾಸ್‌ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ನಡೆಸಿದ ಪ್ರಯತ್ನಕ್ಕೆ ಇದೀಗ ಫಲ ಸಿಕ್ಕಿದೆ. ಅಲೈನ್‌ಮೆಂಟ್ ಅಪ್ರೂವಲ್ ಕಮಿಟಿ ಅನುಮತಿ ನೀಡಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ.

    ಹೆದ್ದಾರಿಯು ನವಲಗುಂದ ಪಟ್ಟಣದ ಮಧ್ಯ ಭಾಗದಿಂದ ಹಾದು ಹೋಗುವ ಕಾರಣ ಟ್ರಾಫಿಕ್ ಸಮಸ್ಯೆಗಳಿಂದಾಗಿ ಪಟ್ಟಣಿಗರು ರೋಸಿ ಹೋಗಿದ್ದರು. ಹೀಗಾಗಿ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಬಹು ವರ್ಷಗಳಿಂದಲೂ ಇದ್ದ ಬೇಡಿಕೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಂತೆ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರು ಸ್ಪಂದಿಸಿದ್ದಾರೆ. ಈ ಮೂಲಕ ಜನರ ಆಶಯ ಸಾಕಾರಗೊಂಡಿದೆ ಎಂದು ಸಚಿವರು ಸಂತಸ ವ್ಯಕ್ತಪಡಿಸಿದ್ದಾರೆ.

    ಉತ್ತರ ಕರ್ನಾಟಕದ ಆರಾಧ್ಯ ದೈವ ಸವದತ್ತಿ ಯಲ್ಲಮ್ಮ ದೇವಸ್ಥಾನ ಸೇರಿದಂತೆ ವಿವಿಧ ಐತಿಹಾಸಿಕ, ಧಾರ್ಮಿಕ ನಗರಗಳಿಗೆ ಸಂಪರ್ಕ ಜೋಡಿಸುತ್ತದೆ ನವಲಗುಂದ ಪಟ್ಟಣ. ಹೀಗಾಗಿ ಈ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಅಧಿಕವಾಗಿರುತ್ತದೆ. ಬೈಪಾಸ್ ರಸ್ತೆ ನಿರ್ಮಾಣದಿಂದ ಪ್ರಯಾಣಿಕರು ಮತ್ತು ಸ್ಥಳೀಯ ನಿವಾಸಿಗಳಿಗೂ ಅನುಕೂಲವಾಗಲಿದೆ ಎಂದಿದ್ದಾರೆ.

    ಕಳೆದ 10 ವರ್ಷಗಳ ಅವಧಿಯಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಸಂಪೂರ್ಣ ಚಿತ್ರಣವೇ ಬದಲಾಗಿದೆ. ಆ ಮಟ್ಟದ ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರು ಹೆದ್ದಾರಿಗಳ ಅಭಿವೃದ್ಧಿಗೆ ಸದಾ ಅಗತ್ಯ ನೆರವು ನೀಡುತ್ತಿದ್ದಾರೆಂದು ಈರ್ವರಿಗೂ ಜೋಶಿ ಅಭಿನಂದನೆ ಸಲ್ಲಿಸಿದ್ದಾರೆ.

    ಶೀಘ್ರ ಕಾಮಗಾರಿಗೆ ಒತ್ತಾಯ:
    ನವಲಗುಂದ ಬೈಪಾಸ್‌ ನಿರ್ಮಾಣ ಸಂಬಂಧ ಈಗಾಗಲೇ ಡಿಪಿಆ‌ರ್ ಸಿದ್ಧಗೊಂಡಿದ್ದು, ರಾಜ್ಯ ಸರ್ಕಾರ ಶೀಘ್ರವೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿಗಳಿಗೆ ತ್ವರಿತ ಚಾಲನೆ ನೀಡಬೇಕೆಂದು ಜೋಶಿ ಒತ್ತಾಯಿಸಿದ್ದಾರೆ.

  • ದೇಶದಲ್ಲಿಲ್ಲ ಆಹಾರ ಕೊರತೆ; ಜನರಿಗೆ ಬೇಕಿಲ್ಲ ಚಿಂತೆ

    ದೇಶದಲ್ಲಿಲ್ಲ ಆಹಾರ ಕೊರತೆ; ಜನರಿಗೆ ಬೇಕಿಲ್ಲ ಚಿಂತೆ

    * ಅಕ್ಕಿ 356.42 LMT, ಗೋಧಿ 383.32 LMT ದಾಸ್ತಾನು; ಸಕ್ಕರೆ 257 LMT ಉತ್ಪಾದನೆ
    * ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಹ್ಲಾದ್ ಜೋಶಿ ಸಂದೇಶ ರವಾನೆ
    * ಹೆಚ್ಚು ಹೆಚ್ಚು ಆಹಾರ ಧಾನ್ಯ-ಅಗತ್ಯ ವಸ್ತು ಸಂಗ್ರಹ; ವರ್ತಕರ ವಿರುದ್ಧ ಕಾನೂನು ಕ್ರಮ
    * ದೇಶದಲ್ಲೆಲ್ಲೂ ಆಹಾರ ಕೊರತೆಯಿಲ್ಲ; ವರ್ತಕರು, ಜನಸಾಮಾನ್ಯರು ವದಂತಿಗೆ ಕಿವಿಗೊಡದಿರಲಿ
    * ಇ-ಮಾರುಕಟ್ಟೆಯಲ್ಲಿ ಕಾನೂನು ಬಾಹಿರ ವಾಕಿ-ಟಾಕಿ ಮಾರಾಟದ ವಿರುದ್ಧ ಕ್ರಮ

    ನವದೆಹಲಿ: ದೇಶದಲ್ಲಿ ಆಹಾರ ಧಾನ್ಯ ಮತ್ತು ಅಗತ್ಯ ವಸ್ತುಗಳ ದುಪ್ಪಟ್ಟು ದಾಸ್ತಾನಿದೆ. ಎಲ್ಲೂ ಕೂಡಾ ಕೊರತೆಯಿಲ್ಲ, ಜನಸಾಮಾನ್ಯರು, ವರ್ತಕರು ಯಾರೂ ಈ ಬಗ್ಗೆ ಚಿಂತಿತರಾಗಬೇಕಿಲ್ಲ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ.

    ಅಕ್ಕಿ, ಗೋಧಿ, ಸಕ್ಕರೆ, ಕಡಲೆ, ತೊಗರಿ, ಮಸೂರ್, ಹೆಸರುಕಾಳು, ಖಾದ್ಯ ತೈಲ ಹೀಗೆ ಪ್ರತಿಯೊಂದೂ ಕೂಡಾ ಸಾಕಷ್ಟು ದಾಸ್ತಾನಿದೆ. ‘ಆಹಾರ ಪದಾರ್ಥ ಕೊರತೆಯಿದೆ’ ಎನ್ನುವುದು ಕೇವಲ ಸುಳ್ಳು ವದಂತಿ. ಇದಕ್ಕೆ ಯಾರೂ ಕಿವಿಗೊಡಬಾರದು, ಭಯಭೀತರಾಗಬಾರದು ಹಾಗೂ ವರ್ತಕರೂ ಹೆಚ್ಚು ಹೆಚ್ಚು ಆಹಾರ ಧಾನ್ಯ ಮತ್ತು ಅಗತ್ಯ ವಸ್ತುಗಳ ಸಂಗ್ರಹಣೆ, ದಾಸ್ತಾನು ಮಾಡಿಟ್ಟುಕೊಳ್ಳಬಾರದು ಎಂದು ಕರೆ ನೀಡಿದ್ದಾರೆ.

    ದೇಶದಲ್ಲಿ ಎಲ್ಲಿಯೂ ಆಹಾರ ಧಾನ್ಯ, ಅಗತ್ಯ ವಸ್ತುಗಳ ಕೊರತೆ ಇರುವುದಿಲ್ಲ. ಅಗತ್ಯಕ್ಕಿಂತ ಹೆಚ್ಚು ಆಹಾರ ಧಾನ್ಯ ಖರೀದಿಗೆ ಮಾರುಕಟ್ಟೆಗಳಲ್ಲಿ ಮುಗಿಬೀಳುವ ಅವಶ್ಯಕತೆಯಿಲ್ಲ ಎಂದ ಸಚಿವರು, ವಿನಾಕಾರಣ ಯಾರಾದರೂ ಸುಳ್ಳು ವದಂತಿ ಹರಡಲು ಯತ್ನಿಸಿದರೆ ಹಾಗೂ ವರ್ತಕರು ಹೆಚ್ಚು ಹೆಚ್ಚು ಸಂಗ್ರಹ ಮಾಡಿಟ್ಟುಕೊಂಡರೆ ಅಂಥವರ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಖಡಕ್‌ ಎಚ್ಚರಿಕೆ ನೀಡಿದ್ದಾರೆ.

    ಆಹಾರ ಧಾನ್ಯ ಮತ್ತು ಅಗತ್ಯ ವಸ್ತುಗಳ ವ್ಯಾಪಾರದಲ್ಲಿ ತೊಡಗಿರುವ ವ್ಯಾಪಾರಿಗಳು, ಸಗಟು ವ್ಯಾಪಾರಿಗಳು, ಚಿಲ್ಲರೆ ವ್ಯಾಪಾರಿಗಳು ಅಥವಾ ವ್ಯಾಪಾರ ಸಂಸ್ಥೆಗಳು ಕಾನೂನು ಜಾರಿ ಸಂಸ್ಥೆಗಳೊಂದಿಗೆ ಸಹಕರಿಸುವಂತೆ ಕೇಂದ್ರ ಸರ್ಕಾರ ನಿರ್ದೇಶನ ಸಹ ನೀಡಿದೆ ಎಂದಿದ್ದಾರೆ.

    ದುಪ್ಪಟ್ಟು ಸಂಗ್ರಹವಿದೆ ವದಂತಿ ನಂಬಬೇಡಿ: ದೇಶದಲ್ಲಿ ಎಲ್ಲೆಡೆಯೂ ದುಪ್ಪಟ್ಟು ಆಹಾರ ಧಾನ್ಯ ಮತ್ತು ಅಗತ್ಯ ವಸ್ತುಗಳ ಸಂಗ್ರಹವಿದೆ. ಸಾಕಷ್ಟು ದಾಸ್ತಾನಿದೆ. ಹಾಗಿದ್ದರೂ ಕೊರತೆಯಿದೆ ಎಂದು ಯಾರಾದರೂ ಅಪಪ್ರಚಾರ ಮಾಡಿದಲ್ಲಿ, ಸಂದೇಶಗಳನ್ನು ರವಾನಿಸಿದಲ್ಲಿ ಯಾರೂ ನಂಬಬಾರದು. ಅಗತ್ಯ ಮಾನದಂಡಗಳನ್ನು ಮೀರಿದ ಸಂದೇಶಗಳಿಗೆ ಗಮನ ಕೊಡಬೇಡಿ ಎಂದು ಸಚಿವ ಜೋಶಿ ಕರೆ ನೀಡಿದ್ದಾರೆ.

    ಏನೇನು ಎಷ್ಟೆಷ್ಟು ದಾಸ್ತಾನಿದೆ: ದೇಶದಲ್ಲಿ ಪ್ರಸ್ತುತ ಅಕ್ಕಿ ದಾಸ್ತಾನು 356.42 ಲಕ್ಷ ಮೆಟ್ರಿಕ್ ಟನ್‌ಗಳಷ್ಟಿದೆ. 135 LMT ಬಫರ್ ಮಾನದಂಡಕ್ಕೆ ವಿರುದ್ಧವಾಗಿ ದುಪ್ಪಟ್ಟು ದಾಸ್ತಾನಿದೆ. ಅದೇ ರೀತಿ, ಗೋಧಿ ದಾಸ್ತಾನು ಸಹ ಹೆಚ್ಚಿದೆ. 276 LMT ಬಫರ್ ಮಾನದಂಡಕ್ಕೆ ವಿರುದ್ಧವಾಗಿ 383.32 LMT ಸಂಗ್ರವಿದ್ದು, ಇದು ಅಗತ್ಯ ಬಫರ್ ಮಾನದಂಡಗಳಿಗಿಂತ ಬಲವಾದ ಹೆಚ್ಚುವರಿಯನ್ನು ಪ್ರದರ್ಶಿಸುತ್ತಿದ್ದು, ರಾಷ್ಟ್ರವ್ಯಾಪಿ ಆಹಾರ ಭದ್ರತೆಯನ್ನು ಖಚಿತಪಡಿಸುತ್ತದೆ ಎಂದು ಹೇಳಿದ್ದಾರೆ.

    ಇದಲ್ಲದೇ, ಭಾರತ ಸುಮಾರು 17 LMT ಖಾದ್ಯ ತೈಲ ದಾಸ್ತಾನು ಹೊಂದಿದೆ. ದೇಶೀಯವಾಗಿ ಗರಿಷ್ಠ ಉತ್ಪಾದನಾ ಋತುವಿನಲ್ಲಿ ಸಾಸಿವೆ ಎಣ್ಣೆಯ ಲಭ್ಯತೆ ಹೇರಳವಾಗಿದ್ದು, ಖಾದ್ಯ ತೈಲ ಪೂರೈಕೆಗೆ ಪೂರಕವಾಗಿದೆ. ಪ್ರಸ್ತುತ ಸಕ್ಕರೆ ಋತುವು 79 LMT ಕ್ಯಾರಿ-ಓವರ್ ಸ್ಟಾಕ್‌ನೊಂದಿಗೆ ಪ್ರಾರಂಭವಾಗಿದ್ದು, 34 LMT ಎಥೆನಾಲ್ ಉತ್ಪಾದನೆಗೆ ಬಳಸಿದ ನಂತರವೂ 262 LMT ಉತ್ಪಾದನೆ ಅಂದಾಜಿಸಲಾಗಿದೆ ಎಂದು ಹೇಳಿದರು.

    ಸುಮಾರು 257 LMT ಸಕ್ಕರೆಯನ್ನು ಈಗಾಗಲೇ ಉತ್ಪಾದಿಸಲಾಗಿದೆ. 280 LMT ದೇಶೀಯ ಬಳಕೆ ಮತ್ತು 10 LMT ರಫ್ತನ್ನು ಪರಿಗಣಿಸಿ, ಅಂತಿಮ ಸ್ಟಾಕ್ ಸುಮಾರು 50 LMT ನಿರೀಕ್ಷೆಯಿದೆ. ಇದು ಎರಡು ತಿಂಗಳ ಬಳಕೆಗಿಂತ ಹೆಚ್ಚು ಸಂಗ್ರಹವನ್ನು ತೋರ್ಪಡಿಸುತ್ತದೆ. ಅನುಕೂಲಕರ ಹವಾಮಾನ ಪರಿಸ್ಥಿತಿಗಳಿಂದಾಗಿ 2025–26ರ ಸಕ್ಕರೆ ಋತುವಿನ ಉತ್ಪಾದನಾ ನಿರೀಕ್ಷೆಯೂ ಆಶಾದಾಯಕವಾಗಿದೆ ಎಂದು ಅಂಕಿ-ಸಂಖ್ಯೆ ಸಹಿತ ವಿವರಿಸಿದ್ದಾರೆ.

    ಇ-ಮಾರುಕಟ್ಟೆಯಲ್ಲಿ ಕಾನೂನು ಬಾಹಿರ ವಾಕಿ-ಟಾಕಿ ವಿರುದ್ಧ ಕ್ರಮ: ರಾಷ್ಟ್ರೀಯ ಭದ್ರತೆ ಹಿನ್ನೆಲೆಯಲ್ಲಿ ಇ-ಕಾಮರ್ಸ್‌ ವೇದಿಕೆಗಳಲ್ಲಿ ಕಡಿಮೆ ಶಕ್ತಿ, ಅತಿ ಕಡಿಮೆ ಫ್ರಿಕ್ವೆನ್ಸಿ ಉಳ್ಳ ವಾಕಿ-ಟಾಕಿ ಸಾಧನ ಮಾರಾಟ ಮಾಡದಂತೆ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ (CCPA) ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದೆ ಎಂದೂ ತಿಳಿಸಿದ್ದಾರೆ.

    ಇ-ಕಾಮರ್ಸ್‌ ವೇದಿಕೆಗಳಲ್ಲಿ ಪ್ರದರ್ಶಿಸುತ್ತಿರುವ ಕೆಲ ವೈರ್‌ಲೆಸ್‌ ಸಾಧನಗಳಿಂದ ರಾಷ್ಟ್ರೀಯ ಭದ್ರತಾ ಕಾರ್ಯಾಚರಣೆಗಳಿಗೆ ಅಪಾಯ ಎದುರಾಗಬಹುದಾದ ಸಾಧ್ಯತೆ ಇರುವುದರಿಂದ ಪ್ರಮುಖ ತಾಂತ್ರಿಕತೆ ಅಂಶಗಳನ್ನು ಹೊಂದಿರದ ಸಾಧನಗಳ ಪಟ್ಟಿ ಹಾಕುವಂತಿಲ್ಲ ಮತ್ತು ಮಾರಾಟ ಸಹ ಮಾಡುವಂತಿಲ್ಲ ಎಂದು ಸಚಿವರು ಎಚ್ಚರಿಸಿದ್ದಾರೆ.

    ಇ-ಕಾಮರ್ಸ್‌ ವೇದಿಕೆಗಳಲ್ಲಿ ಮಾರಾಟವಾಗುತ್ತಿರುವ ವಾಕಿ-ಟಾಕಿಯಂತಹ ವೈರ್‌ಲೆಸ್‌ ಸಾಧನಗಳಲ್ಲಿ ಕೆಲ ಸಮಸ್ಯೆಗಳನ್ನು ಗುರುತಿಸಲಾಗಿದೆ. ಹೀಗಾಗಿ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ 2019ರ ಗ್ರಾಹಕ ರಕ್ಷಣಾ ಕಾಯ್ದೆ ಸೆಕ್ಷನ್ 18(2)(l) ಅಡಿಯಲ್ಲಿ ನಿರ್ದಿಷ್ಟ ಮಾರ್ಗಸೂಚಿ ಹೊರಡಿಸಿದೆ. ಕಾನೂನು ಅನುಸರಣೆ, ಗ್ರಾಹಕರ ರಕ್ಷಣೆ ಮತ್ತು ಡಿಜಿಟಲ್ ಮಾರುಕಟ್ಟೆಯಲ್ಲಿ ಸಮಗ್ರತೆಯನ್ನು ಕಾಪಾಡಿಕೊಳ್ಳುವ ಗುರಿಯೊಂದಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

    ಕಾನೂನು ಅನುಸರಣೆಯಿಲ್ಲದ ವೈರ್‌ಲೆಸ್ ಸಾಧನಗಳ ಮಾರಾಟ ರಾಷ್ಟ್ರೀಯ ಭದ್ರತಾ ಕಾರ್ಯಾಚರಣೆಗಳಿಗೆ ಗಮನಾರ್ಹ ಅಪಾಯ ಉಂಟುಮಾಡುವ ಜನತೆಗೆ ಶಾಸನ ಬದ್ಧ ನಿಯಮ ಉಲ್ಲಂಘನೆಯಾಗುತ್ತದೆ. ಹಾಗಾಗಿ ಗ್ರಾಹಕರ ಹಕ್ಕುಗಳನ್ನು ಎತ್ತಿ ಹಿಡಿಯಲು ಮತ್ತು ಕಾನೂನು ಬಾಹಿರ ವ್ಯಾಪಾರ ಪದ್ಧತಿಗಳನ್ನು ತಡೆಯಲು ಎಲ್ಲಾ ಮಾರಾಟಗಾರರು ನಿಯಂತ್ರಕ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

    ಇ-ಕಾಮರ್ಸ್‌ ವೇದಿಕೆಗಳಲ್ಲಿ ಮಾರಾಟ ಮಾಡುತ್ತಿರುವ ಯಾವುದೇ ವೈರ್‌ಲೆಸ್‌ ಸಾಧನಗಳು ಕಾರ್ಯಾಚರಣಾ ಆವರ್ತನಗಳ ಸರಿಯಾದ ಬಹಿರಂಗಪಡಿಸುವಿಕೆ, ಪರವಾನಗಿ ಮಾಹಿತಿ, ಸಲಕರಣೆ ಪ್ರಕಾರದ ಅನುಮೋದನೆ (ETA)ಯಂತಹ ನಿರ್ಣಾಯಕ ಮಾಹಿತಿಯಿಂದ ಕೂಡಿರಬೇಕಾಗುತ್ತದೆ ಎಂದು ಹೇಳಿದ್ದಾರೆ.

    ಗ್ರಾಹಕ ರಕ್ಷಣಾ ಕಾಯ್ದೆ 2019, ಭಾರತೀಯ ಟೆಲಿಗ್ರಾಫ್ ಕಾಯ್ದೆ 1885, ವೈರ್‌ಲೆಸ್ ಟೆಲಿಗ್ರಾಫಿ ಕಾಯ್ದೆ 1933 ಮತ್ತು ಕಡಿಮೆ ಶಕ್ತಿ, ಅತಿ ಕಡಿಮೆ ಶಕ್ತಿ ಶಾರ್ಟ್ ರೇಂಜ್ ರೇಡಿಯೋ ಫ್ರೀಕ್ವೆನ್ಸಿ ಸಾಧನಗಳ ಬಳಕೆ (ಪರವಾನಗಿ ವಿನಾಯಿತಿ) ನಿಯಮ 2018 ಸೇರಿದಂತೆ ಬಹು ಕಾನೂನುಗಳ ಉಲ್ಲಂಘನೆ ಕಂಡುಬಂದ ಮಾರಾಟಗಾರರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು ಅನಿವಾರ್ಯ ಎಂದು ಸಚಿವ ಜೋಶಿ ತಿಳಿಸಿದ್ದಾರೆ.

  • ಜಮೀರ್ ಸುಮ್ಮನಿದ್ರೆ ಅದೇ ದೊಡ್ಡ ಸೇವೆ: ಜೋಶಿ

    ಜಮೀರ್ ಸುಮ್ಮನಿದ್ರೆ ಅದೇ ದೊಡ್ಡ ಸೇವೆ: ಜೋಶಿ

    -ಬಾಂಬ್‌ ಕಟ್ಟಿಕೊಂಡು ಯುದ್ಧಕ್ಕೆ ಪಾಕ್‌ ಗಡಿಗೆ ಹೋಗ್ತೀನಿ ಅಂದಿದ್ದ ಜಮೀರ್‌ಗೆ ಟಾಂಗ್‌ 

    ವಿಜಯಪುರ: ಬಾಂಬ್ ಕಟ್ಟಿಕೊಂಡು ಪಾಕ್ (Pakistan) ಗಡಿಗೆ ಹೋಗುತ್ತೇನೆ ಎಂದ ಸಚಿವ ಜಮೀರ್ ಅಹ್ಮದ್ (Zameer Ahmed) ಶಾಂತವಾಗಿದ್ದರೆ ಸಾಕು. ನೀವೇನೂ ಮಾಡೋದು ಬೇಡ. ಸುಮ್ಮನಿದ್ದರೆ ಸಾಕು. ಮಿಲಿಟರಿಯನ್ನು ನಂಬಿ ಸುಮ್ಮನಿರಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಜಮೀರ್‌ಗೆ ಟಾಂಗ್ ಕೊಟ್ಟಿದ್ದಾರೆ.

    ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿಮ್ಮ ಭಾಷಣ ಬೇಡ, ನೀವು ಹೋಗುವುದೂ ಬೇಡ. ಸೈನ್ಯದ ಶಕ್ತಿ, ಸೈನಿಕರು, ಇಂಟಲಿಜೆನ್ಸ್ ಬಗ್ಗೆ ವಿಶ್ವಾಸವಿಡಿ. ಹೇಳಿಕೆಗಳನ್ನ ಕೊಡದೇ ಬಾಯಿ ಮುಚ್ಚಿಕೊಂಡಿದ್ದರೆ ಸಾಕು. ಜಮೀರ್ ಶಾಂತವಾಗಿರೋದೇ ದೇಶಕ್ಕೆ ಮಾಡುವ ದೊಡ್ಡ ಸೇವೆ. ಜಮೀರ್ ದೊಡ್ಡ ತ್ಯಾಗಕ್ಕೆ ಹೊರಟಿದ್ದಾರೆ, ಅವರಂತಹ ದೊಡ್ಡ ತ್ಯಾಗದವರು ಯಾರೂ ಇಲ್ಲ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಶಿವಾನಂದ ಪಾಟೀಲ್ ಅವರೇ ನನಗೆ ಹೇಳೋಕೆ ನೀವ್ಯಾರು? – ಎಂ.ಬಿ ಪಾಟೀಲ್ ಗರಂ

    ನೀವು ನಿಮ್ಮ ಪಕ್ಷದವರು ಶಾಂತಿಯಿಂದ ಇರಿ. ಜಮೀರ್, ಸಂತೋಷ್ ಲಾಡ್, ಖರ್ಗೆ, ಸಿದ್ದರಾಮಯ್ಯ ಸುಮ್ಮನಿದ್ದರೆ ಸಾಕು. ಡಿಕೆ ಶಿವಕುಮಾರ್ ಟೆರೆರಿಸ್ಟ್‌ಗಳನ್ನು ಬ್ರದರ್ ಎನ್ನದಿದ್ದರೆ ಸಾಕು. ಸೇನೆ ಎಲ್ಲವನ್ನೂ ನಿಭಾಯಿಸುತ್ತದೆ. ಸೈನ್ಯದ, ಸೈನಿಕರ ಆತ್ಮಸ್ಥೈರ್ಯ ಕುಗ್ಗಿಸದೇ ಸುಮ್ಮನಿದ್ದರೆ ಸಾಕು ಎಂದು ಕಾಂಗ್ರೆಸ್ಸಿಗರಿಗೆ ತಿರುಗೇಟು ನೀಡಿದರು. ಇದನ್ನೂ ಓದಿ: ಪಾಕ್‌ನಿಂದ ಆಮದಾಗುವ ಎಲ್ಲಾ ವಸ್ತುಗಳಿಗೆ ನಿರ್ಬಂಧ ವಿಧಿಸಿದ ಭಾರತ

  • ಕುಲಗೋಡ ಆಂಜನೇಯ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಪ್ರಹ್ಲಾದ್ ಜೋಶಿ

    ಕುಲಗೋಡ ಆಂಜನೇಯ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಪ್ರಹ್ಲಾದ್ ಜೋಶಿ

    – ರಥ ಎಳೆದು ಲೋಕ ಕಲ್ಯಾಣಕ್ಕೆ ಪ್ರಾರ್ಥಿಸಿದ ಕೇಂದ್ರ ಸಚಿವ

    ಹುಬ್ಬಳ್ಳಿ: ಹನುಮ ಜಯಂತಿ ಪ್ರಯುಕ್ತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಅವರು ಬೆಳಗಾವಿ (Belagavi) ಜಿಲ್ಲೆಯ ಕುಲಗೋಡ ಗ್ರಾಮದ ಪ್ರಸಿದ್ಧ ಶ್ರೀ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.

    ಶನಿವಾರ ಮುಂಜಾನೆಯೇ ತಮ್ಮ ಮನೆದೇವರಾದ ಕುಲಗೋಡ ಶ್ರೀ ಹನುಮ ಮಂದಿರಕ್ಕೆ ಕುಟುಂಬ ಸಮೇತ ತೆರಳಿದ್ದ ಸಚಿವರು, ರಾಮಧೂತ ಹನುಮನನ್ನು ಸ್ತುತಿಸುತ್ತಾ ಭಕ್ತಿ ಸಮರ್ಪಿಸಿದರು. ಇದನ್ನೂ ಓದಿ: ಸರ್ಕಾರದ ವಿರುದ್ಧದ 60% ಕಮಿಷನ್ ಆರೋಪ ಸೇರಿಸಿ ಎಸ್‌ಐಟಿ ತನಿಖೆ ನಡೆಸಲಿ: ಬೊಮ್ಮಾಯಿ

    ಪ್ರಹ್ಲಾದ್ ಜೋಶಿಯವರು ದೇಗುಲದ ಪ್ರಾಂಗಣದಲ್ಲಿ ಶ್ರೀ ಆಂಜನೇಯ ದೇವರ ಅಲಂಕೃತ ರಥವನ್ನೆಳೆದು ಲೋಕ ಕಲ್ಯಾಣಕ್ಕೆ ಪ್ರಾರ್ಥಿಸಿದರು. ಸಹೋದರ ಗೋವಿಂದ ಜೋಶಿ ಮತ್ತು ಕುಟುಂಬದ ಸದಸ್ಯರೂ ಈ ವಿಶೇಷ ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ: IPL 2025 | ಗುಜರಾತ್‌ಗೆ ಮಾರ್ಕ್ರಮ್‌, ಪೂರನ್‌ ಪಂಚ್‌ – ಲಕ್ನೋಗೆ 6 ವಿಕೆಟ್‌ಗಳ ಸೂಪರ್‌ ಜಯ

  • ಕೇವಲ ಹಿಂದೂಗಳಿಗೆ ಮಾತ್ರವಲ್ಲ, ದಲಿತರಿಗೂ ವಿರೋಧಿಗಳು – ಕಾಂಗ್ರೆಸ್ ವಿರುದ್ಧ ಜೋಶಿ ಆಕ್ರೋಶ

    ಕೇವಲ ಹಿಂದೂಗಳಿಗೆ ಮಾತ್ರವಲ್ಲ, ದಲಿತರಿಗೂ ವಿರೋಧಿಗಳು – ಕಾಂಗ್ರೆಸ್ ವಿರುದ್ಧ ಜೋಶಿ ಆಕ್ರೋಶ

    ಬೆಂಗಳೂರು: ಕಾಂಗ್ರೆಸ್ಸಿನವರು ಕೇವಲ ಹಿಂದೂ ವಿರೋಧಿಯಲ್ಲ, ದಲಿತ ವಿರೋಧಿ ಕೂಡ ಎಂದು ಜನರಿಗೆ ಭೀಮ ಹೆಜ್ಜೆ ಕಾರ್ಯಕ್ರಮದ ಮೂಲಕ ತಿಳಿಸುತ್ತೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಟೀಕಿಸಿದರು.

    `ಭೀಮ ಹೆಜ್ಜೆ 100ರ ಸಂಭ್ರಮ’ ಕಾರ್ಯಕ್ರಮದ ಉದ್ಘಾಟನೆಯ ಸಂದರ್ಭದ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಡಾ.ಬಿ.ಆರ್.ಅಂಬೇಡ್ಕರ್ (Dr.B R Ambedkar) ಅವರು ನಿಪ್ಪಾಣಿಗೆ ಬಂದು 100 ವರ್ಷಗಳಾದ ಹಿನ್ನೆಲೆಯಲ್ಲಿ, ಅಂಬೇಡ್ಕರರ ಜನ್ಮದಿನವೂ ಬರುತ್ತಿರುವ ಸಲುವಾಗಿ 100 ವರ್ಷದ ನೆನಪನ್ನು ಭೀಮ ಹೆಜ್ಜೆ ಹೆಸರಿನಲ್ಲಿ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು. ಇದನ್ನೂ ಓದಿ: ಬಿಹಾರ ಚುನಾವಣೆ ವೇಳೆ ಕೇಂದ್ರ ಸರ್ಕಾರ ಉಗ್ರ ರಾಣಾನನ್ನ ಗಲ್ಲಿಗೇರಿಸಲಿದೆ: ಸಂಜಯ್ ರಾವತ್‌

    ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ಯಾವ ಕಾರಣಕ್ಕಾಗಿ ತಮ್ಮ ಜೀವನವನ್ನು ಮೀಸಲಿಟ್ಟಿದ್ದರೋ ಅದನ್ನು ಜನರಿಗೆ ನೆನಪಿಸಲಾಗುವುದು. ಕಾಂಗ್ರೆಸ್ ಪಕ್ಷವು ಅವರಿಗೆ ಅನ್ಯಾಯ ಮಾಡಿದ್ದರು. ಅವರು ಸಂವಿಧಾನ ರಚನಾ ಸಭೆಯಲ್ಲಿ ಇರಬಾರದೆಂಬ ಕಾರಣಕ್ಕೆ ಹಿಂದೂ ಬಾಹುಳ್ಯದ ಕ್ಷೇತ್ರಗಳನ್ನು ಪಾಕಿಸ್ತಾನಕ್ಕೆ (Pakistana) ಬಿಟ್ಟು ಕೊಟ್ಟ ಸಂಗತಿಯನ್ನು, ಎರಡೆರಡು ಬಾರಿ ಅವರನ್ನು ಸೋಲಿಸಿದ್ದು, ಮಧ್ಯಂತರ ಸರ್ಕಾರ ಬಾರದಂತೆ ತಡೆದುದ್ದನ್ನು ತಿಳಿಸುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಕಾಂಗ್ರೆಸ್ ಕಳ್ಳರು ದಲಿತರನ್ನು ತುಳಿದಿದ್ದಾರೆಯೇ ಹೊರತು ಉದ್ಧಾರ ಮಾಡಿಲ್ಲ: ಅಶೋಕ್

    ದಲಿತರ ಮೀಸಲಾತಿಗೆ ಇಂದಿರಾ ಗಾಂಧಿ, ರಾಜೀವ್ ಗಾಂಧಿಯವರು ವಿರೋಧಿಸಿದ್ದನ್ನು ಜನರ ಮುಂದೆ ತೆರೆದಿಡುತ್ತೇವೆ. ಈಗಲೂ ಖರ್ಗೆಯವರಿಗೆ ಅವಮಾನ ಮಾಡಿದ್ದನ್ನೂ ತಿಳಿಸುತ್ತೇವೆ ಎಂದರು. ಇದನ್ನೂ ಓದಿ: ವಾರಣಾಸಿ ಗ್ಯಾಂಗ್ ರೇಪ್ – ಏರ್‌ಪೋರ್ಟಲ್ಲೇ ಪೊಲೀಸರಿಂದ ಮಾಹಿತಿ ಪಡೆದ ಪ್ರಧಾನಿ ಮೋದಿ

    ಬೆಳಗಾವಿ (Belagavi) ಅಧಿವೇಶನದಲ್ಲಿ ನಮ್ಮ ಶಾಸಕಿ ಶಶಿಕಲಾ ಜೊಲ್ಲೆ ಅವರು ನಿಪ್ಪಾಣಿಗೆ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ಬಂದು 100 ವರ್ಷವಾಗುತ್ತಿದೆ ಎಂದು ಸರ್ಕಾರದ ಗಮನ ಸೆಳೆದಿದ್ದಾರೆ. ಬೆಳಗಾವಿಗೆ ಮಹಾತ್ಮ ಗಾಂಧಿಯವರು ಬಂದ ಕಾರ್ಯಕ್ರಮವನ್ನು ಅವರು ಮಾಡಿದ್ದಾರೆ. ಅದಕ್ಕೆ ನಮ್ಮ ಆಕ್ಷೇಪ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಬಿಹಾರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ- ಗುರುವಾರ ಒಂದೇ ದಿನ 58 ಬಲಿ

    ಅಂಬೇಡ್ಕರ್ ಅವರ ಭೇಟಿಯ 100 ವರ್ಷ ಯಾಕೆ ಮಾಡಿಲ್ಲ ಎಂದು ಪ್ರಶ್ನಿಸಿದರು. ಸರ್ಕಾರ ಈ ಕಾರ್ಯಕ್ರಮ ಮಾಡಿದ್ದರೆ ನಾವು ಮಾಡುತ್ತಿರಲಿಲ್ಲ. ಇದು ನಮ್ಮ ಬದ್ಧತೆ ಎಂದು ಹೇಳಿದರು.

  • ನಾಳೆಯಿಂದ ಬಿಜೆಪಿಯಿಂದ ಜನಾಕ್ರೋಶ ಯಾತ್ರೆ – ಮೈಸೂರಿನಲ್ಲಿ ಜೋಶಿ ಚಾಲನೆ; ಸರ್ಕಾರದ ವೈಫಲ್ಯ ವಿರುದ್ಧ ಕಹಳೆ

    ನಾಳೆಯಿಂದ ಬಿಜೆಪಿಯಿಂದ ಜನಾಕ್ರೋಶ ಯಾತ್ರೆ – ಮೈಸೂರಿನಲ್ಲಿ ಜೋಶಿ ಚಾಲನೆ; ಸರ್ಕಾರದ ವೈಫಲ್ಯ ವಿರುದ್ಧ ಕಹಳೆ

    ಬೆಂಗಳೂರು/ಮೈಸೂರು: ರಾಜ್ಯ ಸರ್ಕಾರದ ವಿರುದ್ಧ ನಾಳೆಯಿಂದ (ಏಪ್ರಿಲ್‌ 7) ಬಿಜೆಪಿ (BJP) 2ನೇ ಹಂತದ ಹೋರಾಟ ಕೈಗೆತ್ತಿಕೊಂಡಿದೆ. ಜನಾಕ್ರೋಶ ಯಾತ್ರೆ (JanaKrosha Yatra) ಹೆಸರಿನಲ್ಲಿ ಸರ್ಕಾರದ ವಿರುದ್ಧ ನಾಲ್ಕು ಹಂತಗಳಲ್ಲಿ ಹೋರಾಟಕ್ಕೆ ಬಿಜೆಪಿ ಮುಂದಾಗಿದೆ.

    ಸೋಮವಾರ ಬೆಳಗ್ಗೆ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ (Mysuru Chamundehwari Temple) ವಿಶೇಷ ಪೂಜೆ ಸಲ್ಲಿಸುಕ ಮೂಲಕ ಮೂಲಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು (Pralhad Joshi) ಜನಾಕ್ರೋಶ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಸರ್ಕಾರದ ದರ ಏರಿಕೆ ನೀತಿ, ಭ್ರಷ್ಟಾಚಾರ, ಕಮೀಷನ್, ದುರಾಡಳಿತ, ಕಾನೂನು ಅವ್ಯವಸ್ಥೆ, ಮುಸ್ಲಿಂ ಓಲೈಕೆ ಖಂಡಿಸಿ ಜನಾಕ್ರೋಶ ಯಾತ್ರೆ ನಡೆಯಲಿದೆ.

    ಎಲ್ಲಿ, ಯಾವಾಗ ಜನಾಕ್ರೋಶ ಯಾತ್ರೆ?
    ಏಪ್ರಿಲ್ 7-12ರ ವರೆಗೆ ಮೊದಲ ಹಂತದ ಜನಾಕ್ರೋಶ ಯಾತ್ರೆಯು ಮೈಸೂರು/ಚಾಮರಾಜನಗರ, ಮಂಡ್ಯ,/ಹಾಸನ, ಕೊಡಗು/ಮಂಗಳೂರು, ಉಡುಪಿ/ ಚಿಕ್ಕಮಗಳೂರು, ಶಿವಮೊಗ್ಗ/ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಡೆಯಲಿದೆ.

    ಏಪ್ರಿಲ್ 15-18ರ ವರೆಗೆ ಎರಡನೇ ಹಂತದ ಜನಾಕ್ರೋಶ ಯಾತ್ರೆಯು ನಿಪ್ಪಾಣಿ/ಬೆಳಗಾವಿ/ಹುಬ್ಬಳ್ಳಿ, ಬೀದರ್/ಕಲಬುರ್ಗಿ, ವಿಜಯಪುರ/ಬಾಗಲಕೋಟೆಗಳಲ್ಲಿ ನಡೆಯಲಿದೆ.

    ಏಪ್ರಿಲ್ 21-25ರ ವರೆಗೆ ಮೂರನೇ ಹಂತದ ಯಾತ್ರೆಯು ಯಾದಗಿರಿ/ರಾಯಚೂರು, ಬಳ್ಳಾರಿ/ವಿಜಯನಗರ, ಕೊಪ್ಪಳ/ಗದಗ, ಹಾವೇರಿ/ದಾವಣಗೆರೆ, ಚಿತ್ರದುರ್ಗ/ತುಮಕೂರು ಜಿಲ್ಲೆಗಳಲ್ಲಿ ನಡೆಯಲಿದೆ

    ಏಪ್ರಿಲ್ 27- ಮೇ 03ರ ವರೆಗೆ ನಾಲ್ಕನೇ ಹಂತದ ಯಾತ್ರೆ ಚಿಕ್ಕಬಳ್ಳಾಪುರ/ಕೋಲಾರ, ಬೆಂಗಳೂರು/ಬೆಂಗಳೂರು ಗ್ರಾಮಾಂತರ/ರಾಮನಗರ ಜಿಲ್ಲೆಗಳಲ್ಲಿ ನಡೆಯಲಿದೆ.

  • ರಾಜಕೀಯವಾಗಿ ಹಿನ್ನಡೆ ಆಗುತ್ತೆ ಅಂತ ವಕ್ಫ್‌ ಬಿಲ್‌ಗೆ ಕಾಂಗ್ರೆಸ್‌ ವಿರುದ್ಧ – ಜೋಶಿ ಕಿಡಿ

    ರಾಜಕೀಯವಾಗಿ ಹಿನ್ನಡೆ ಆಗುತ್ತೆ ಅಂತ ವಕ್ಫ್‌ ಬಿಲ್‌ಗೆ ಕಾಂಗ್ರೆಸ್‌ ವಿರುದ್ಧ – ಜೋಶಿ ಕಿಡಿ

    – ವಕ್ಫ್‌ ತಿದ್ದುಪಡಿ ಮಸೂದೆ ಮುಸ್ಲಿಮರ ವಿರುದ್ಧವಾಗಿಲ್ಲ
    – ಪೊಲೀಸರು ಕಾಂಗ್ರೆಸ್‌ ಸರ್ಕಾರದ ಗುಲಾಮರಾ?; ಸಚಿವ ರೋಷಾವೇಶ

    ಹುಬ್ಬಳ್ಳಿ: ವಕ್ಫ್‌ ತಿದ್ದುಪಡಿ ಮಸೂದೆ (Waqf Amendment Bill) ಮುಸ್ಲಿಮರ ವಿರುದ್ಧವಾಗಿಲ್ಲ. ಕಾಂಗ್ರೆಸ್‌ ನಾಯಕರಿಗೆ ರಾಜಕೀಯವಾಗಿ ಹಿನ್ನಡೆ ಆಗುತ್ತೆ ಅಂತ ಮಸೂದೆಗೆ ವಿರುದ್ಧ ಮಾಡ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಕಿಡಿ ಕಾರಿದರು.

    ಹುಬ್ಬಳ್ಳಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಕ್ಫ್‌ ತಿದ್ದುಪಡಿ ಮಸೂದೆ ಮುಸ್ಲಿಮರ ವಿರುದ್ಧವಾಗಿಲ್ಲ. ಸೋನಿಯಾ ಗಾಂಧಿ (Sonia Gandhi) ಅವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ. ರಾಜಾ ಮಾತೆ ಸುಪುತ್ರ ರಾಹುಲ್ ಗಾಂಧಿ ಈ ಹಿಂದೆ ಬಿಲ್ ಹರಿದು ಹಾಕಿದ್ದಾರೆ. ಅವರು ಈ ಬಿಲ್ ಬಗ್ಗೆ ಮಾತನಾಡುತ್ತಾರೆ. ಮೋದಿ ಸರ್ಕಾರ ಅಸಂವಿಧಾನಕವಾಗಿ ಬಿಲ್ ಮಂಡನೆ ಮಾಡಿಲ್ಲ. ಕಾಂಗ್ರೆಸ್ ನಾಯಕರಿಗೆ ಈ ಬಿಲ್ ನಿಂದ ರಾಜಕೀಯವಾಗಿ ಹಿನ್ನಡೆ ಆಗುತ್ತೆ, ಹೀಗಾಗಿ ವಿರೋಧ ಮಾಡುತ್ತಿದ್ದಾರೆ. ಬಿಹಾರ ಚುನಾವಣೆಯಲ್ಲಿ ಇದರ ಪ್ರಭಾವ ಗೊತ್ತಾಗುತ್ತದೆ ಎಂದರು.

    ವಕ್ಫ್‌ ಬಿಲ್ ಮುಸ್ಲಿಮರ (Muslims) ವಿರುದ್ಧ ಇಲ್ಲ. 39 ಲಕ್ಷ ಎಕರೆಗೆ 168 ಕೋಟಿ ರೆವೆನ್ಯೂ ಬರ್ತಾ ಇದೆ. ಕರ್ನಾಟಕದಲ್ಲಿ 54 ಸಾವಿರ ಎಕರೆ ವಕ್ಫ್‌ ಜಮೀನಿದೆ. ಈ ಆಸ್ತಿಯನ್ನ ಸರಿಯಾಗಿ ಬಳಸಿದರೆ, ಸಚ್ಛರ ಕಮೀಟಿ ವರದಿ ಪ್ರಕಾರ 12 ಸಾವಿರ ಕೋಟಿ ಆದಾಯ ಬರ್ತಿತ್ತು. ಇದರಲ್ಲಿ ದುರಪಯೋಗ, ಸ್ವಜನ ಪಕ್ಷಪಾತ ಇದೆ, ಆಸ್ತಿ ನುಂಗ್ತಾ ಇದ್ದಾರೆ. ಆದ್ದರಿಂದ ನಾವೆಲ್ಲ ವಿಚಾರ ಮಾಡಿ ಬಿಲ್ ತಂದಿದ್ದೇವೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಕಾರವಾರ | ಹಿಂದೂ ಮಹಾಸಾಗರದಲ್ಲಿ 9 ಮಿತ್ರ ರಾಷ್ಟ್ರಗಳೊಂದಿಗೆ IOS ಸಾಗರ ಹೆಸರಿನ ಕಾರ್ಯಾಚರಣೆಗೆ ಚಾಲನೆ

    ಈ ವಕ್ಫ್‌ ಬಿಲ್‌ ಬಗ್ಗೆ ಕೆಲವರಿಗೆ ತಪ್ಪಾಗಿ ಅರ್ಥ ಮಾಡಿಸ್ತಿದ್ದಾರೆ. ಬಹಳ ಹಿಂದೂಗಳ ಆಸ್ತಿ ವಕ್ಫ್‌ ಆಗಿದೆ. ವಕ್ಫ್‌ ಬೋರ್ಡ್ ಇಂಡಿಪೆಂಡೆಂಟ್ ಇದೆ. ಅನೇಕರ ಮುಸ್ಲಿಮರ ಮನೆಗಳನ್ನ ವಕ್ಫ್‌ ಆಸ್ತಿ ಮಾಡಿದ್ದಾರೆ. ಹಳೇ ಹುಬ್ಬಳ್ಳಿಯಲ್ಲಿ ಅನೇಕರ ಮುಸ್ಲಿಂ ಮನೆ ವಕ್ಫ್‌ ಆಸ್ತಿ ಆಗಿವೆ. ಆದ್ದರಿಂದ ವಕ್ಫ್‌ ಬೋರ್ಡ್‌ನಲ್ಲಿ ಸರಿಯಾದ ರೀತಿ ಮ್ಯಾನೇಜಮೆಂಟ್ ಆಗಬೇಕಿದೆ ಎಂದು ತಿಳಿಸಿದರು. ಇದನ್ನೂ ಓದಿ: ಅಲಹಾಬಾದ್ ಹೈಕೋರ್ಟ್‌ ನ್ಯಾಯಾಧೀಶರಾಗಿ ನ್ಯಾ. ವರ್ಮಾ ಪ್ರಮಾಣ ವಚನ ಸ್ವೀಕಾರ

    ಇನ್ನೂ ಬಿಜೆಪಿ ಕಾರ್ಯಕರ್ತನ ಆತ್ಮಹತ್ಯೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ಮತ್ತು ಸರ್ಕಾರ ಎಷ್ಟು ಅಸಹಿಷ್ನತೆ ಇದೆ ಅಂತ ಸ್ಪಷ್ಟ ಆಗುತ್ತೆ. ಒಬ್ಬ ಶಾಸಕನಿಗೆ ಜಾತಿ ಅಥವಾ ಅವಾಚ್ಯ ಶಬ್ದದಿಂದ ಬೈದ್ರೆ, ಶೌಚಾಲಯ ಕೆಟ್ಟು ಹೋಗಿದ್ದಕ್ಕೆ ಫೋಟೋ ಹಾಕಿದ್ದಾರೆ ಅದರಲ್ಲೆನು ತಪ್ಪು? ಮೃತಪಟ್ಟ ಯುವಕ ಸೇರಿ ಇಬ್ಬರು ಯುವಕರ ಮೇಲೆ ಎಫ್‌ಐಆರ್ ಹಾಕ್ತಾರೆ. ಅಧಿಕಾರದ ಧರ್ಪ, ದುರಹಂಕಾರ ಯಾವ ಪ್ರಮಾಣದಲ್ಲಿದೆ? ಎಫ್‌ಐಆರ್ ಕೋರ್ಟ್‌ನಲ್ಲಿ ಸ್ಟೇ ಆಗುತ್ತೆ. ಆದರೂ ರೌಡಿ ಶೀಟರ್ ತಗಿತೇನೆ ಅಂತ ಬೆದರಿಸಿದ್ದಾರೆ. ಪೊಲೀಸರಿಗೆ ಹೇಳ್ತೇನೆ ಸರ್ಕಾರ ಒಂದೇ ಇರೋದಿಲ್ಲ, ಯಾವ ಆಧಾರದ ಮೇಲೆ ರೌಡಿ ಶೀಟರ್ ಹಾಕ್ತಿರಾ? ಪೊಲೀಸರೇ ಕಾಂಗ್ರೆಸ್ ಪಕ್ಷದ ಗುಲಾಮರಾ ನೀವು? ನಾವು ಕೂಡ ಸರ್ಕಾರದಲ್ಲಿದ್ದೇವೆ, ರಾಮಾನುಜ, ಎಸ್‌ಪಿ ಅಮಾನತ್ತು ಆಗಬೇಕು. ಪೊಣ್ಣನ್ನ ಅನ್ನೋನು ರಾಜಕೀಯಕ್ಕೆ ಅನ್ ಫಿಟ್ ಇದ್ದಾರೆ. ಕೆಲವೊಮ್ಮೆ ನಮ್ಮ ಫೋಟೋ ಕೂಡ ಹಾಕ್ತಾರೆ ನಾವು ಎಫ್‌ಐಆರ್‌ ಹಾಕಿದ್ದೇವಾ? ಆತನ ವಾಟ್ಸಪ್‌ನಲ್ಲಿ ಸ್ಪಷ್ಟವಾಗಿ ಹೆಸರಿದೆ, ಶಾಸಕನ ಹೆಸರು ಬರೆದಿದ್ದಾರೆ. ಇವರ ಮೇಲೆ ಒಂದೂ ಕೇಸ್ ಹಾಕಲ್ಲ ಒಳ್ಳೆ ರೀತಿಯ ಕೆಲಸ ಮಾಡುವ ಪೊಲೀಸರು ನಮ್ಮಲ್ಲಿ ಇದ್ದಾರೆ. ಹೈಕೋರ್ಟ್ ಸ್ಟೇ ಮಾಡಿದ ಮೇಲೂ ರೌಡಿ ಶೀಟರ್ ಹಾಕಿದ್ರೆ ಇಬ್ಬರು ಆಫೀಸರ್ ಮೇಲೆ ಕ್ರಮ ಆಗಬೇಕು ಎಂದು ಒತ್ತಾಯಿಸಿದರು.

    ನಾನು ಪೊಲೀಸ್ ಇಲಾಖೆಯ ಎಲ್ಲ ಅಧಿಕಾರಿಗಳಿಗೆ ಬೈತಿಲ್ಲ. ಈ ಇಬ್ಬರು ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಆಗಲೇಬೇಕು. ಇವರ ವಿರುದ್ಧ ಹೈಕೋರ್ಟ್ ನಲ್ಲಿ ಕೇಸ್ ಹಾಕಲು ಸೂಚಿಸಿದ್ದೇನೆ ಎಂದು ಎಚ್ಚರಿಸಿದರು. ಇದನ್ನೂ ಓದಿ: ಹಕ್ಕಿ ಜ್ವರ ಹರಡುತ್ತಿರುವ ಹಿನ್ನೆಲೆ ಎಲ್ಲಾ ಪೌಲ್ಟ್ರಿ ಫಾರಂಗಳ ಮೇಲೆ ಕಣ್ಣಿಡಲು ಕೇಂದ್ರ ಸೂಚನೆ

  • ಉಡುಪಿ ಕಡೆಗೋಲು ಶ್ರೀಕೃಷ್ಣನ ದರ್ಶನ ಪಡೆದ ಕೇಂದ್ರ ಸಚಿವ ಜೋಶಿ

    ಉಡುಪಿ ಕಡೆಗೋಲು ಶ್ರೀಕೃಷ್ಣನ ದರ್ಶನ ಪಡೆದ ಕೇಂದ್ರ ಸಚಿವ ಜೋಶಿ

    ಉಡುಪಿ: ಶ್ರೀಕೃಷ್ಣ ಮಠಕ್ಕೆ (Udupi Sri Krishna Matha) ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಭೇಟಿ ನೀಡಿ, ಕಡೆಗೋಲು ಶ್ರೀಕೃಷ್ಣ ದೇವರ ದರ್ಶನ ಪಡೆದರು.

    ಪತ್ನಿ ಜ್ಯೋತಿ ಜೋಶಿ ಜೊತೆ ಕೃಷ್ಣಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಪರ್ಯಾಯ ಪುತ್ತಿಗೆ ಮಠದಿಂದ ಪ್ರಹ್ಲಾದ್ ಜೋಶಿಗೆ ಗೌರವ ಸಮರ್ಪಿಸಲಾಯಿತು. ಪುತ್ತಿಗೆ ಸುಗುಣೇಂದ್ರ ತೀರ್ಥ ಸ್ವಾಮೀಜಿಯನ್ನು ಭೇಟಿಯಾದರು. ಮಠದಲ್ಲೇ ಅನ್ನಪ್ರಸಾದ ಸ್ವೀಕಾರಿಸಿದರು.

    pralhad joshi udupi krishna matha 1

    ರನ್ಯಾ ಗೋಲ್ಡ್ ಸ್ಮಗ್ಲಿಂಗ್ ವಿಚಾರವಾಗಿ ಮಾತನಾಡಿದ ಸಚಿವರು, ರಾಜ್ಯ ಸರ್ಕಾರದ ಅಧಿಕಾರಿಗಳು ಆರೋಪಿಗೆ ಎಸ್ಕಾರ್ಟ್ ಕೊಟ್ಟಿದ್ದಾರೆ. ಪ್ರೋಟೊಕಾಲ್ ವ್ಯವಸ್ಥೆ ಮಾಡಿ ಚೆಕ್ಕಿಂಗ್ ಇಲ್ಲದೆ ಬಿಟ್ಟಿದ್ದಾರೆ. ಪ್ರಕರಣದಲ್ಲಿ ರಾಜ್ಯದ ಮಂತ್ರಿಗಳ ಹೆಸರು ಕೇಳಿಬರುತ್ತಿದೆ. ರಾಜ್ಯ ಸರ್ಕಾರ ಈ ಬಗ್ಗೆ ಚಕಾರ ಎತ್ತುತ್ತಿಲ್ಲ. ರಾಜ್ಯ ಸರ್ಕಾರದ ಮಂತ್ರಿಗಳ ಪಾತ್ರ ಇದೆ ಎನ್ನಲಾಗುತ್ತಿದೆ. ಗೃಹ ಸಚಿವ ಪರಮೇಶ್ವರ್ ಮೊದಲು ಸಿಐಡಿ ತನಿಖೆಗೆ ಕೊಟ್ಟರು. ರಾಮಚಂದ್ರ ರಾವ್ ಡಿಜಿಐ ಆಗಿರುವುದರಿಂದ ಅಡಿಷನಲ್ ಚೀಫ್ ಸೆಕ್ರೆಟರಿಗೆ ಕೊಟ್ಟಿದ್ದೇವೆ ಎಂದರು. ಕಸ್ಟಮ್ ತಪ್ಪಿಸಿ ಪ್ರೋಟೊಕಾಲ್ ಮೂಲಕ ಹೇಗೆ ಕರೆತರಲಾಯಿತು? ಭಾರತ ಸರ್ಕಾರದ ಇಂಟೆಲಿಜೆನ್ಸ್ ಬರುವವರೆಗೆ ನಿಮ್ಮ ಇಂಟೆಲಿಜೆನ್ಸ್ ಏನು ಮಾಡುತ್ತಿತ್ತು? ಈ ಥರದ ಹಲವಾರು ಪ್ರಶ್ನೆಗಳಿವೆ. ಈ ಥರದ ದುಡ್ಡು ಬಂಗಾರಗಳು ಸಮಾಜ ವಿದ್ರೋಹಿ ಕೃತ್ಯಕ್ಕೆ ಬಳಕೆಯಾಗುತ್ತದೆ. ಈ ಬಗ್ಗೆ ಸರ್ಕಾರ ಗಂಭೀರವಾಗಿ ಇರಬೇಕು. ಸಂಪೂರ್ಣ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು.

    ರೂಪಾಯಿ ಚಿಹ್ನೆ ನಿರಾಕರಿಸಿದ ಡಿಎಂಕೆ ಸಿಎಂ ಸ್ಟಾಲಿನ್ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿ, ಈ ರೀತಿ ಮಾಡಿರುವುದು ದುರ್ದೈವವೇ ಸರಿ. ಇದು ರಾಷ್ಟ್ರೀಯ ಹಿತಾಸಕ್ತಿಯ ವಿಚಾರ. ರೂಪಾಯಿ ಸಿಂಬಲ್ ಮೋದಿ ಮಾಡಿದ್ದಾ? ಬಿಜೆಪಿ ಮಾಡಿದ್ದಾ? ಕಾಂಗ್ರೆಸ್ ಸರ್ಕಾರ ಇರುವಾಗ ಆಗಿದ್ದಲ್ವಾ? ಇವರೆಲ್ಲ ಆಗ ಮಂತ್ರಿಗಳಾಗಿದ್ದರು. ಎ.ರಾಜ, ದಯಾನಿಧಿ ಮಾರನ್, ಎಲ್ಲರೂ ಸರ್ಕಾರದಲ್ಲಿದ್ದರು. ಯಾಕೆ ಈ ತೀರ್ಮಾನ ತೆಗೆದುಕೊಂಡ್ರಿ? ಕಾಂಗ್ರೆಸ್‌ನ ಚಿದಂಬರA ವಿತ್ತ ಸಚಿವರಾಗಿದ್ದರು. ಹಾಗಾದ್ರೆ ಸಿಂಬಲ್ ಅನ್ನು ಮಾಡಿದ್ದು ಯಾರು? ಕಾಂಗ್ರೆಸ್ ಮತ್ತು ಅವರ ಸ್ನೇಹಿತ ಪಕ್ಷಗಳು ರಾಜಕೀಯವನ್ನು ಈ ಮಟ್ಟಕ್ಕೆ ತೆಗೆದುಕೊಂಡು ಹೋಗಿವೆ. ತಥಾಕಥಿತ ಇಂಡಿ ಘಟಬಂಧನ್ ಮಾಡೋದೇ ಹೀಗೆ. ನೀವು ಮಾಡಿದ ಸಿಂಬಲ್‌ಗೆ ನಮ್ಮ ಅಭ್ಯಂತರ ಏನೂ ಇರಲಿಲ್ಲ. ಈ ಚಿಹ್ನೆಯನ್ನು ಡಿಸೈನ್ ಮಾಡಿದ್ದು ಕೂಡ ತಮಿಳುನಾಡಿನವನು. ನಿಮ್ಮ ಕ್ಷುಲ್ಲಕ ರಾಜಕಾರಣಕ್ಕೆ ಈ ರೀತಿ ಹೇಳಿಕೆ ನೀಡಬೇಡಿ ಕಿಡಿಕಾರಿದರು.

    ಡಿಎಂಕೆ ಸರ್ಕಾರದ ವೈಫಲ್ಯವನ್ನು ಮುಚ್ಚಿ ಹಾಕಲು ಈ ರೀತಿ ಮಾತನಾಡುತ್ತೀರಿ. ರೂಪಾಯಿ ಬದಲಿಸುತ್ತೀರಿ. ತ್ರಿಭಾಷಾ ಸೂತ್ರ ಮಾಡಿರೋದು ಯಾರು? ನೆಹರೂ ಕಾಲದಿಂದ ಇದೆ. ಹೊಸ ಎನ್‌ಇಪಿಯಲ್ಲಿ ತ್ರಿಭಾಷಾ ಸೂತ್ರ ಮಾಡಲು ಹೇಳಿದ್ದೇವೆ. ನಾವು ಹಿಂದಿ ಇರಬೇಕು ಅಂತ ಹೇಳಿದ್ದೇವೆವಾ? ಸುಳ್ಳು ಹೇಳಿ ಜನರನ್ನು ದಾರಿ ತಪ್ಪಿಸಿ ವಂಚನೆ ಮಾಡಿ ತಮ್ಮ ವೈಫಲ್ಯತೆಯನ್ನು ಮುಚ್ಚಿ ಹಾಕುತ್ತಿದ್ದಾರೆ ಎಂದು ಟೀಕಿಸಿದರು.

  • ಮಹಾಕುಂಭದಲ್ಲಿ ಸಚಿವ ಪ್ರಹ್ಲಾದ್ ಜೋಶಿ ಕುಟುಂಬ ಪುಣ್ಯಸ್ನಾನ

    ಮಹಾಕುಂಭದಲ್ಲಿ ಸಚಿವ ಪ್ರಹ್ಲಾದ್ ಜೋಶಿ ಕುಟುಂಬ ಪುಣ್ಯಸ್ನಾನ

    – ತ್ರಿವೇಣಿ ಸಂಗಮದಲ್ಲಿ ತೀರ್ಥಸ್ನಾನ ಗೈದು ಭಕ್ತಿ ಸಮರ್ಪಣೆ

    ಪ್ರಯಾಗ್‌ರಾಜ್/ಹುಬ್ಬಳ್ಳಿ: ವಿಶ್ವಪ್ರಸಿದ್ಧ ಹಿಂದೂ ಧರ್ಮದ ಶ್ರೇಷ್ಠ ಪ್ರಯಾಗ್‌ರಾಜ್ (Prayag raj) ಮಹಾಕುಂಭದಲ್ಲಿ ಇಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi), ಕುಟುಂಬ ಸಹಿತ ಭಾಗಿಯಾಗಿ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನಗೈದಿದ್ದಾರೆ.

    ತ್ರಿವೇಣಿ ಸಂಗಮದ ಪವಿತ್ರ ಗಂಗೆಯಲ್ಲಿ ಮುಳುಗೇಳುತ್ತಾ ತೀರ್ಥಸ್ನಾನ ಮಾಡಿದ ಸಚಿವರು, ಮಂತ್ರ ಪಠಣದೊಂದಿಗೆ ದೇವರಿಗೆ ನಮಸ್ಕರಿಸಿ, ಲೋಕದ ಸುಭಿಕ್ಷೆಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಕುಟುಂಬ ಸಮೇತರಾಗಿ ವಿಶಿಷ್ಠ ಭಂಗಿಯ ಭಗವಾನ್ ಹನುಮ ದೇವಾಲಯ ಹಾಗೂ ಅಕ್ಷಯವತ್‌ಗೆ ತೆರಳಿ ದೇವರ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಇದನ್ನೂ ಓದಿ: ಹೆಚ್‌ಡಿಕೆ ವಿರುದ್ಧ ಭೂ ಒತ್ತುವರಿ ಆರೋಪ – ಎರಡನೇ ದಿನವೂ ಮುಂದುವರಿದ ಸರ್ವೇ ಕಾರ್ಯ

    ವಿಶ್ವದ ಅತ್ಯಂತ ದೊಡ್ಡ ಧಾರ್ಮಿಕ ಉತ್ಸವ ಮತ್ತು ಹಿಂದೂ ಧರ್ಮದ ಶ್ರೇಷ್ಠ ಆಧ್ಯಾತ್ಮಿಕ ಮಹೋತ್ಸವವೂ ಆಗಿರುವ ಈ ಮಹಾ ಕುಂಭಮೇಳದಲ್ಲಿ ಸಚಿವ ಪ್ರಹ್ಲಾದ್ ಜೋಶಿ ಅವರ ಇಡೀ ಕುಟುಂಬವೇ ಭಾಗಿಯಾಗಿ ಶ್ರದ್ಧಾಭಕ್ತಿ ಮೆರೆಯಿತು. ಸಚಿವರೊಂದಿಗೆ ಪತ್ನಿ ಜ್ಯೋತಿ ಜೋಶಿ, ಮಕ್ಕಳಾದ ಅರ್ಪಿತಾ ಜೋಶಿ, ಅನನ್ಯಾ ಜೋಶಿ, ಅನುಷಾ ಜೋಶಿ ಹಾಗೂ ಸಹೋದರ ಗೋವಿಂದ ಜೋಶಿ-ಕಮಲಾ ಜೋಶಿ ದಂಪತಿ ಸೇರಿದಂತೆ ಮಕ್ಕಳು, ಮೊಮ್ಮಕ್ಕಳಾದಿಯಾಗಿ ಕುಟುಂಬದ ಸದಸ್ಯರೆಲ್ಲರೂ ಪುಣ್ಯಸ್ನಾನ ಗೈದು ಭಕ್ತಿ ಸಮರ್ಪಿಸಿದರು. ಇದನ್ನೂ ಓದಿ: 10ಕ್ಕೂ ಹೆಚ್ಚು ಶಾಲಾ ಮಕ್ಕಳ ಮೇಲೆ ಹೆಜ್ಜೇನು ದಾಳಿ – ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

    ಈ ವೇಳೆ ಪ್ರಯಾಗರಾಜ್‌ನಲ್ಲಿ ಮಾಧ್ಯಮಗಳೊಂದಿಗೆ ಮಹಾಕುಂಭದ ಅನನ್ಯ ಅನುಭವವನ್ನು ಹಂಚಿಕೊಂಡ ಜೋಶಿ, ಪ್ರಯಾಗ್‌ರಾಜ್ ಮಹಾ ಕುಂಭಮೇಳ ಹಿಂದೂ ಧರ್ಮದ ಒಂದು ಸಾಮೂಹಿಕ ತೀರ್ಥಯಾತ್ರೆಯಾಗಿ ಯಶಸ್ವಿಯಾಗಿ ಜರಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಚಾಮರಾಜನಗರ: ಚಿರತೆ ದಾಳಿಗೆ ನಾಲ್ಕು ಕರುಗಳು ಬಲಿ

    ತ್ರಿವೇಣಿ ಸಂಗಮದಲ್ಲಿ ಇಂದು ಕುಟುಂಬ ಸಹಿತ ಪಾಲ್ಗೊಂಡು ಪವಿತ್ರ ಸ್ನಾನ ಮಾಡುವ ಸುವರ್ಣ ಅವಕಾಶ ಲಭ್ಯವಾಗಿದ್ದು ನಮ್ಮ ಪುಣ್ಯ. ಇದು ನಮಗೆ ಅತ್ಯಂತ ಮಹತ್ವದ ಮತ್ತು ಭಕ್ತಿ ಸಮರ್ಪಣೆಯ ದೈವಿಕ ಕ್ಷಣವಾಗಿದೆ ಎಂದು ಖುಷಿಪಟ್ಟರು. ಇದನ್ನೂ ಓದಿ: ಶಿಂಧೆ ನೇತೃತ್ವದ ಶಿವಸೇನೆಯ 20 ಶಾಸಕರ Y-ಭದ್ರತೆ ವಾಪಸ್ ಪಡೆದ ಫಡ್ನವಿಸ್

    ಮಹಾಕುಂಭ ಒಂದು ಶ್ರೇಷ್ಠ ಆಧ್ಯಾತ್ಮಿಕ ಅನುಭವ ನೀಡುತ್ತದೆ. ಇಲ್ಲಿ ಪವಿತ್ರ ಸ್ನಾನ ಮಾಡುವುದು ಭವ್ಯವಾದ ಯಶಸ್ಸು, ನಂಬಿಕೆ ಮತ್ತು ಸಂಸ್ಕೃತಿಯ ಪ್ರತೀಕವಾಗಿದೆ ಎಂದು ತಮ್ಮ ಅನನ್ಯ ಅನುಭವವನ್ನು ಹಂಚಿಕೊಂಡರು. ಇದನ್ನೂ ಓದಿ: ಚಿನ್ನಾಭರಣ, ಹಣ ದೋಚಿ ಸಿಕ್ಕಿಬೀಳುವ ಭಯದಲ್ಲಿ ಡಿವಿಆರ್ ಹೊತ್ತೊಯ್ದ ಕಳ್ಳರು!

    ಯೋಗಿಜಿ ವ್ಯವಸ್ಥೆ ಅದ್ಭುತ:
    ಪ್ರಯಾಗರಾಜ್ ಮಹಾಕುಂಭದಲ್ಲಿ ಪ್ರಧಾನಿ ಮೋದಿಜಿ ಅವರ ನೇತೃತ್ವ, ಮಾರ್ಗದರ್ಶನದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅದ್ಭುತ ವ್ಯವಸ್ಥೆ ಕಲ್ಪಿಸಿದ್ದಾರೆ ಎಂದು ಕೊಂಡಾಡಿದರು. ಇದನ್ನೂ ಓದಿ: ಪಾಕ್‌ ಬೆಡಗಿಗೆ ಕಾರವಾರ ನೌಕಾನೆಲೆಯ ಮಾಹಿತಿ, ಪ್ರತಿ ತಿಂಗಳು 5,000 ಜಮೆ -‌ ಎನ್‌ಐಎಯಿಂದ ಇಬ್ಬರು ಅರೆಸ್ಟ್

    ಸಾವಿರಾರು ವರ್ಷಗಳಿಂದ, ವೇದ-ಪುರಾಣಕಾಲದಿಂದ ಮಹಾ ಕುಂಭಮೇಳ ಆಚರಣೆಯಲ್ಲಿದೆ. ದೇಶದೆಲ್ಲೆಡೆಯಿಂದ ಕೋಟ್ಯಂತರ ಸಂಖ್ಯೆಯಲ್ಲಿ ಸಾಧು-ಸಂತರು, ಭಕ್ತರು ಆಗಮಿಸುತ್ತಿದ್ದಾರೆ. ಅತ್ಯಂತ ಶಾಂತಿ, ಸಂಯಮದಿಂದ ಪಾಲ್ಗೊಂಡು ಅವರವರ ಪೂಜಾ ಪದ್ಧತಿಯಲ್ಲಿ ಧಾರ್ಮಿಕ ಉತ್ಸವ ಆಚರಿಸಿ ಅಭೂತಪೂರ್ವವಾಗಿ ಯಶಸ್ವಿಗೊಳಿಸುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಇಡೀ ದೇಶದ ಪೋಷಕರನ್ನು ನೀವು ಅವಮಾನಿಸಿದ್ದೀರಿ – ಯೂಟ್ಯೂಬರ್ ರಣವೀರ್ ಹೇಳಿಕೆಗೆ ಸುಪ್ರೀಂ ಕೆಂಡಾಮಂಡಲ

    ನಕಾರಾತ್ಮಕವಾಗಿ ಆಲೋಚನೆ ಮಾಡುವವರು ಅದೇ ರೀತಿ ಪ್ರತಿಕ್ರಿಯಿಸುವುದು ಸಾಮಾನ್ಯ. ಆದರೆ, ಇಲ್ಲಿ ಸಕಾರಾತ್ಮಕ ಶಕ್ತಿಯೇ ಹೆಚ್ಚಿದೆ. ಸನಾತನ ಹಿಂದೂ ಧರ್ಮದ ಪ್ರಬಲ ಶಕ್ತಿ ಎಂಥದ್ದು ಎಂಬುದನ್ನು ಈ ಮಹಾಕುಂಭ ಪ್ರದರ್ಶಿಸಿದೆ ಎಂದು ಪ್ರತಿಪಾದಿಸಿದರು. ಇದನ್ನೂ ಓದಿ: ದೆಹಲಿ ಅಬಕಾರಿ ಹಗರಣ ಮೀರಿಸುತ್ತಿದೆ ರಾಜ್ಯದ ಲಿಕ್ಕರ್ ಸ್ಕ್ಯಾಮ್‌ – ಕಾಂಗ್ರೆಸ್‌ನಿಂದ ಲೂಟಿ ಎಂದ ಜೆಡಿಎಸ್