– ಬೆಳಗಾವಿವರೆಗೆ ರೈಲು ಸೇವೆ ವಿಸ್ತರಣೆಗೆ ಸಚಿವ ಅಶ್ವಿನಿ ವೈಷ್ಣವ್ ಸಮ್ಮತಿ
ನವದೆಹಲಿ: ಅತಿ ಶೀಘ್ರದಲ್ಲಿಯೇ ಬೆಂಗಳೂರು – ಬೆಳಗಾವಿ ಮಧ್ಯೆ ವಂದೇ ಭಾರತ್ ರೈಲು (Bengaluru-Belgaum Vande Bharat Train) ಸಂಚರಿಸಲಿದೆ.
ಇಂದು ನವದೆಹಲಿಯ ನನ್ನ ಸಂಸದೀಯ ಕಛೇರಿಯಲ್ಲಿ ಬೆಳಗಾವಿ ಸಂಸದರಾದ ಶ್ರೀ @JagadishShettar ಜಗದೀಶ ಶೆಟ್ಟರ ಅವರೊಂದಿಗೆ ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ @AshwiniVaishnaw ಅವರನ್ನು ಭೇಟಿಯಾಗಿ ವಂದೇ ಭಾರತ ರೈಲನ್ನು ಬೆಳಗಾವಿಯವರೆಗೆ ವಿಸ್ತರಿಸುವ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು. ಈ ಹಿಂದೆ ರಾಜ್ಯಸಭಾ ಸದಸ್ಯರಾದ… pic.twitter.com/ptUCjmFDU1
ನವದೆಹಲಿಯಲ್ಲಿ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಅವರು ತಮ್ಮ ಸಂಸದೀಯ ಕಚೇರಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಮತ್ತು ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಜೊತೆ ಸಭೆ ನಡೆಸಿದರು. ಈ ವೇಳೆ, ಬೆಂಗಳೂರಿನಿಂದ ಬೆಳಗಾವಿವರೆಗೆ ವಂದೇ ಭಾರತ್ ರೈಲು ಸಂಚಾರ ಕುರಿತ ಸಾಧಕ-ಬಾಧಕ ಬಗ್ಗೆ ವಿಸ್ತೃತ ಚರ್ಚೆ ನಡೆಸಿದರು.
ವಂದೇ ಭಾರತ್ ರೈಲನ್ನು ಬೆಳಗಾವಿವರೆಗೆ ವಿಸ್ತರಿಸುವ ಕುರಿತು ಈ ಹಿಂದೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹಾಗೂ ಬೆಳಗಾವಿ ಶಾಸಕ ಅಭಯ ಪಾಟೀಲ್ ಸಹ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ್ದರು.
ಈ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದಷ್ಟೇ ಪ್ರಹ್ಲಾದ್ ಜೋಶಿಯವರು ಹುಬ್ಬಳ್ಳಿಯ ತಮ್ಮ ಲೋಕಸಭಾ ಕ್ಷೇತ್ರದ ಕಾರ್ಯಾಲಯದಲ್ಲಿ ನೈರುತ್ಯ ವಲಯದ ರೇಲ್ವೆ ಜನರಲ್ ಮ್ಯಾನೇಜರ್, DRM ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಬೆಂಗಳೂರಿನಿಂದ ಬೆಳಗಾವಿವರೆಗೆ ವಂದೇ ಭಾರತ್ ರೈಲು ಸಂಚಾರ ವಿಸ್ತರಣೆ ಬಗ್ಗೆ ವರದಿ ನೀಡುವಂತೆ ಸೂಚಿಸಿದ್ದರು.
ವಂದೇ ಭಾರತ್ ರೈಲು ಬೆಳಗ್ಗೆ ಬೆಳಗಾವಿಯಿಂದ ಹೊರಟು ಬೆಂಗಳೂರು ತಲುಪಿ ಮತ್ತೆ ಬೆಂಗಳೂರಿಂದ ಬೆಳಗಾವಿಗೆ ರಾತ್ರಿ ತಲುಪುವ ಹಾಗೆ ವೇಳೆ ನಿಗದಿಗೊಳಿಸಿ ಎಂದು ಅವರು ನೈಋತ್ಯ ರೈಲ್ವೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು. ರೈಲ್ವೆ ಅಧಿಕಾರಿಗಳು ತಾಂತ್ರಿಕ ಅಂಶಗಳನ್ನು ವಿಶ್ಲೇಷಿಸಿ, ಸಾಧಕ-ಬಾಧಕಗಳನ್ನು ಅವಲೋಕಿಸಿ ವರದಿ ಸಲ್ಲಿಸಿದ್ದು, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಈ ವರದಿ ಪರಿಗಣಿಸಿ ಬೆಂಗಳೂರು – ಬೆಳಗಾವಿ ಮಧ್ಯೆ ವಂದೇ ಭಾರತ್ ರೈಲು ಸಂಚಾರಕ್ಕೆ ಸಕಾರಾತ್ಮಕ ಪ್ರತಿಕ್ರಿಯೆ ತೋರಿದ್ದಾರೆ.
ವೇಳಾಪಟ್ಟಿ ಶೀಘ್ರ ಬಿಡುಗಡೆ: ಅತೀ ಶೀಘ್ರದಲ್ಲಿಯೇ ಬೆಳಗಾವಿ – ಬೆಂಗಳೂರಿನ ಮಧ್ಯೆ ವಂದೇ ಭಾರತ್ ರೈಲಿನ ಆರಂಭದ ವೇಳಾಪಟ್ಟಿ ಬಿಡುಗಡೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಈ ರೈಲು ಸಂಚಾರದಿಂದ ಹುಬ್ಬಳ್ಳಿ-ಧಾರವಾಡ ಹಾಗೂ ಬೆಳಗಾವಿ ಭಾಗದ ಜನತೆಗೆ ಬೆಂಗಳೂರು ಪ್ರಯಾಣಕ್ಕೆ ಅನುಕೂಲವಾಗಲಿದೆ. ನಮ್ಮ ಮನವಿಗೆ ಸ್ಪಂದಿಸಿ ವಂದೇ ಭಾರತ್ ರೈಲನ್ನು ಬೆಳಗಾವಿವರೆಗೆ ವಿಸ್ತರಿಸಲು ಸಮ್ಮತಿ ಸೂಚಿಸಿದ ಕೇಂದ್ರ ರೈಲ್ವೆ ಸಚಿವರಿಗೆ ಧನ್ಯವಾದ ಅರ್ಪಿಸುವೆ ಎಂದಿದ್ದಾರೆ.
ನವದೆಹಲಿ: ಮಹಾರಾಷ್ಟ್ರದಲ್ಲಿ (Maharashtra) ಹೊಸ ಮತದಾರರ ಸೇರ್ಪಡೆ ಪರಾದರ್ಶಕವಾಗಿಯೇ ಇದೆ. ಈ ವಿಚಾರದಲ್ಲಿ ಕಾಂಗ್ರೆಸ್ (Congress) ಡ್ರಾಮಾ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ತಿರುಗೇಟು ನೀಡಿದ್ದಾರೆ.
ಎಐಸಿಸಿ ಅಧ್ಯಕ್ಷ, ಹಿರಿಯ ಕಾಂಗ್ರೆಸ್ ನಾಯಕರೂ ಆಗಿರುವ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಜೋಶಿ ಪ್ರತಿಕ್ರಿಯಿಸಿದ್ದಾರೆ.
ಖರ್ಗೆಜಿಯವರ ಆರೋಪಗಳು ಆಧಾರರಹಿತವಾಗಿದ್ದು, ಕಾಂಗ್ರೆಸ್ ಪಕ್ಷದ ಅನಗತ್ಯ ದ್ರಣವನ್ನು ಪ್ರಚೋದಿಸುವ ಪ್ರಯತ್ನ ಮಾಡುತ್ತಿದ್ದಾರೆ ಅಷ್ಟೇ ಎಂದು ಸಚಿವ ಜೋಶಿ ತಿರುಗೇಟು ನೀಡಿದ್ದಾರೆ.
CONgress leader @kharge ji’s allegations are baseless and an attempt to stir unnecessary drama. The EC transparently added 40.81 lakh voters in Maharashtra, including 26.46 lakh young electors, with no abnormal trends detected.
ಯಾವುದೂ ಆಕ್ರಮವಾಗಿಲ್ಲ: ಮಹಾರಾಷ್ಟ್ರದಲ್ಲಿ 26.46 ಲಕ್ಷ ಯುವ ಮತದಾರರು ಸೇರಿದಂತೆ 40.81 ಲಕ್ಷ ಮತದಾರರನ್ನು ಚುನಾವಣಾ ಆಯೋಗವು ಪಾರದರ್ಶಕವಾಗಿಯೇ ಸೇರಿಸಿದೆ. ಇದರಲ್ಲಿ ಯಾವುದೇ ರೀತಿಯ ಅಸಹಜ, ಅಕ್ರಮ ಪ್ರಕ್ರಿಯೆ ನಡೆದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಅರಬ್ಬಿ ಸಮುದ್ರದಲ್ಲಿ ನೋಡನೋಡುತ್ತಿದ್ದಂತೆ ಮುಳುಗಿದ ಬೋಟ್ – 6 ಮೀನುಗಾರರ ರಕ್ಷಣೆ
ಕೇಳಿದ್ದನ್ನೇ ಕೇಳುತ್ತಿದೆ ಕಾಂಗ್ರೆಸ್: ಚುನಾವಣಾ ಪ್ರಕ್ರಿಯೆಯ ಭಾಗವಾಗಿ ಚುನಾವಣಾ ಆಯೋಗ ಚುನಾವಣೆಗೆ ಮುನ್ನವೇ ಡೇಟಾವನ್ನು ಒದಗಿಸಿದೆ. ಆದರೆ, ಕಾಂಗ್ರೆಸ್ಸಿಗರು ಈಗ ವಿನಾಕಾರಣ ಸಮಸ್ಯೆ ಸೃಷ್ಟಿಸಲು ಮತ್ತೆ ಮತ್ತೆ ಕೇಳಿದ್ದನ್ನೇ ಕೇಳುತ್ತಿದ್ದಾರೆ ಎಂದು ಸಚಿವ ಜೋಶಿ ಅವರು ತಮ್ಮ ಎಕ್ಸ್‌ನಲ್ಲಿ ತಿಳಿಸಿದ್ದಾರೆ.
ನವದೆಹಲಿ: ಕೇಂದ್ರ ಸರ್ಕಾರ (Union Government) ಕರ್ನಾಟಕಕ್ಕೆ (Karnataka) ಕಳೆದ ವರ್ಷಕ್ಕಿಂತ 10%ರಷ್ಟು ಹೆಚ್ಚಿಗೆ ತೆರಿಗೆ ಹಂಚಿಕೆ ಮಾಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ (Pralhad Joshi) ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಅಗತ್ಯ ಮಾಹಿತಿ ಹಂಚಿಕೊಂಡಿರುವ ಸಚಿವರು, 2025-26ನೇ ಆರ್ಥಿಕ ವರ್ಷದಲ್ಲಿ ಕರ್ನಾಟಕಕ್ಕೆ 51,876 ಕೋಟಿ ರೂ. ತೆರಿಗೆ ಹಂಚಿಕೆ ಮಾಡಿದೆ ಎಂದಿದ್ದಾರೆ.
2014-15ರಲ್ಲಿ 24,789.78 ಕೋಟಿ ರೂ. ತೆರಿಗೆ ಹಂಚಿಕೆ ಆಗಿದ್ದರೆ, 2025-2 6ರ ಆರ್ಥಿಕ ವರ್ಷ ಇದಕ್ಕಿಂತ 108% ರಷ್ಟು (5,1876 ಕೋಟಿ ರೂ.)ಅಧಿಕ ತೆರಿಗೆ ಹಂಚಿಕೆ ಮೊತ್ತವನ್ನು ಕರ್ನಾಟಕಕ್ಕೆ ಭರಿಸಲಾಗಿದೆ ಎಂದು ತಿಳಿಸಿದ್ದಾರೆ.
15ನೇ ಹಣಕಾಸು ಆಯೋಗದಿಂದ ಕರ್ನಾಟಕದ ತೆರಿಗೆ ಪಾಲು 3.647% ರಷ್ಟು ಎಂದು ನಿಗದಿಪಡಿಸಲಾಗಿದೆ. 2004-2014ರ ದಶಕದ ಅವಧಿಯಲ್ಲಿ ರಾಜ್ಯಕ್ಕೆ ಕೇವಲ 81,795 ಕೋಟಿ ರೂ. ನೀಡಲಾಗಿತ್ತು. 2014-2024ರ ದಶಕದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಬರೋಬ್ಬರಿ 2,85,452 ಕೋಟಿ ರೂ. ತೆರಿಗೆ ಹಂಚಿಕೆ ಮಾಡಿದೆ ಎಂದು ಅಂಕಿ ಅಂಶ ಸಹಿತ ವಿವರಣೆ ನೀಡಿದ್ದಾರೆ.
15 ರೈಲ್ವೆ ಯೋಜನೆ: ಕೇಂದ್ರ ಸರ್ಕಾರ ರಾಜ್ಯಕ್ಕೆ ಬರೊಬ್ಬರಿ 7,564 ಕೋಟಿ ರೂ. ವೆಚ್ಚದಲ್ಲಿ 15 ನಿರ್ಣಾಯಕ ರೈಲ್ವೆ ಯೋಜನೆಗಳನ್ನು ನೀಡಿದೆ. ಇದು ರಾಜ್ಯಕ್ಕೆ ಅತ್ಯಧಿಕ ರೈಲ್ವೆ ಯೋಜನೆಗಳ ಕೊಡುಗೆಯಾಗಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ.
ಸ್ಟಾರ್ಟ್ ಅಪ್ ಗೆ ತೆರಿಗೆ ವಿನಾಯಿತಿ: ಸ್ಟಾರ್ಟ್ ಅಪ್‌ಗಳಿಗೆ 10 ವರ್ಷಗಳ ಸಂಪೂರ್ಣ ತೆರಿಗೆ ವಿನಾಯಿತಿ ನೀಡಿದ್ದು, (ಏಪ್ರಿಲ್ 2030 ರವರೆಗೆ ಅನ್ವಯಿಸಲಿದೆ) ಜತೆಗೆ 10,000 ಕೋಟಿ ರೂ. ಅನುದಾನ ಸಹ ನೀಡಲಾಗಿದೆ ಎಂದಿದ್ದಾರೆ.
ಕರ್ನಾಟಕದ ಬೆಳವಣಿಗೆಗೆ ಈ ಬಲಿಷ್ಠ ಸುಧಾರಣೆ ಕ್ರಮಗಳು ಮತ್ತು ದೊಡ್ಡ ಅವಕಾಶಗಳು ಉಜ್ವಲ ಭವಿಷ್ಯ ರೂಪಿಸಲಿವೆ. ಇದರೊಂದಿಗೆ ಕರ್ನಾಟಕ ನಾವೀನ್ಯತೆಯ ಶಕ್ತಿ ಕೇಂದ್ರವಾಗಿ ಹೊರಹೊಮ್ಮಲಿದೆ ಎಂದು ಜೋಶಿ ಆಶಿಸಿದ್ದಾರೆ.
– ಸಿದ್ದರಾಮಯ್ಯಗೆ ಬಡವರ ಬಗ್ಗೆ ಕಾಳಜಿ ಇದ್ರೆ ಅಕ್ಕಿ ಖರೀದಿಸಲಿ ಎಂದ ಸಚಿವ
ಹುಬ್ಬಳ್ಳಿ: 10 ಕೆಜಿ ಅಕ್ಕಿ (Rice) ರಾಜ್ಯ ಸರ್ಕಾರ ನೀಡುತ್ತಿಲ್ಲ. ದರ ಕಡಿಮೆ ಮಾಡಿ ಅಕ್ಕಿ ನೀಡಲು ಕೇಂದ್ರ ಸರ್ಕಾರ ಸಿದ್ಧವಿದೆ. ಆದ್ರೆ ರಾಜ್ಯ ಸರ್ಕಾರದಿಂದ ಯಾವುದೇ ಆರ್ಡರ್ ಬಂದಿಲ್ಲ. ಎಫ್‌ಸಿಐದಲ್ಲಿ ಅಕ್ಕಿ ಲಭ್ಯವಿದೆ, ರಾಜ್ಯ ಸರ್ಕಾರ ಬೇಕಾದ್ರೆ ಕಡಿಮೆ ದರದಲ್ಲಿ ಅಕ್ಕಿ ಕೊಂಡುಕೊಳ್ಳಬಹದು ಅಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕಡಿಮೆ ದರದಲ್ಲಿ ಅಕ್ಕಿ ನೀಡಿದ್ರೆ ರಾಜ್ಯ ಸರ್ಕಾರಕ್ಕೆ ನೂರಾರು ಕೋಟಿ ಹಣ ಉಳಿಯುತ್ತದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಬಡವರ ಬಗ್ಗೆ ಕಾಳಜಿ ಇದ್ರೆ ನಮ್ಮಿಂದ ಕಡಿಮೆ ದರದಲ್ಲಿ ಅಕ್ಕಿ ತೆಗೆದುಕೊಳ್ಳಬಹದು. ಈ ಹಿಂದೆ ರಾಜ್ಯ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಎರಡು ಬಾರಿ ಅಕ್ಕಿಗಾಗಿ ಕೇಂದ್ರ ಬಳಿ ಮನವಿ ಮಾಡಿದ್ದಾರೆ. ಹೀಗಾಗಿ ಕಡಿಮೆ ದರದಲ್ಲಿ ಅಕ್ಕಿ ಕೊಡಲು ಕೇಂದ್ರ ಮುಂದಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ – 18 ಟೆಂಟ್‌ಗಳು ಭಸ್ಮ, ಪರಿಸ್ಥಿತಿ ಅವಲೋಕಿಸಿದ ಮೋದಿ
ಇನ್ನೂ ಸ್ವಾಮಿತ್ವ ಯೋಜನೆ ಕುರಿತು ಮಾತನಾಡಿದ ಸಚಿವರು, ಇದು 100% ಭಾರತ ಸರ್ಕಾರದ ಯೋಜನೆ. ಆದರೆ ಈ ಯೋಜನೆಗೆ ರಾಜ್ಯ ಸರ್ಕಾರದ ಮತ್ತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ಕೊಟ್ಟಿದ್ದಾರೆ. ಇದು ಪ್ರಧಾನಿಗಳ ಬಹು ಆಕಾಂಕ್ಷೆಯ ಯೋಜನೆ. ಆರಂಭದಲ್ಲಿ ರಾಜ್ಯದಲ್ಲಿ 30,715 ಹಳ್ಳಿಗಳ ಸರ್ವೆ ಕಾರ್ಯ ಈ ಯೋಜನೆಯಡಿ ಗುರಿ ಹೊಂದಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಕುಮಾರಸ್ವಾಮಿ ರಾಜ್ಯದ ಹಿತ ನೋಡಿ ಮಾತನಾಡಲಿ – ಸಚಿವ ಎಂ.ಬಿ ಪಾಟೀಲ್
ಕೇಂದ್ರ ಸರ್ಕಾರದಿಂದ 560 ಕೋಟಿ ರೂ. ಬಿಡುಗಡೆ ಮಾಡಿದ್ದೇವೆ. ದೇಶದಲ್ಲಿ 3 ಲಕ್ಷ ಹಳ್ಳಿಗಳ ಸರ್ವೆ ಕಾರ್ಯ ನಡೆದಿದೆ. ಗ್ರಾಮೀಣ ಭಾಗದಲ್ಲಿ ವ್ಯಾಜ್ಯ, ಗಡಿ ಸಮಸ್ಯೆ, ಕಡಿಮೆ ಆಗಿದೆ. ಆದರೆ ನಿನ್ನೆ ಉದ್ಘಾಟನೆ ಮಾಡಿದ ಆಹ್ವಾನ ಪತ್ರದಲ್ಲಿ ಪ್ರಧಾನಿ ಮಂತ್ರಿ ಫೋಟೋ ಇಲ್ಲ. ಇದು ಕರ್ನಾಟಕ ಸರ್ಕಾರದ ಚಿಲ್ಲರೆತನ. ಈ ಚಿಲ್ಲರೆ ರಾಜಕೀಯ ಬಿಡಬೇಕು. ಈ ಯೋಜನೆಗೆ ಡ್ರೋನ್ ಸರ್ವೆ ಮಾಡಿಸಿತ್ತಿರೋದು ಕೇಂದ್ರ ಸರ್ಕಾರ, ಹಣ ನೀಡುತ್ತಿರುವುದು ಕೇಂದ್ರ ಸರ್ಕಾರ, ಇದನ್ನ ಮರೆಮಾಚಿ ರಾಜ್ಯ ಸರ್ಕಾರ ಚಿಲ್ಲರೆ ತನ ತೋರಿಸಿದೆ ಅಂತ ಜೋಶಿ ವಾಗ್ದಾಳಿ ನಡೆಸಿದರು.
ನವದೆಹಲಿ: ವಿಶ್ವಶ್ರೇಷ್ಠ ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ (Manmohan Singh) ಅವರು ಅನಾರೋಗ್ಯದ ಹಿನ್ನೆಲೆ ಗುರುವಾರ ತಡರಾತ್ರಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಹೆಚ್.ಡಿ ಕುಮಾರಸ್ವಾಮಿ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಹಾಗೂ ವಿಪಕ್ಷ ನಾಯಕರು ಸೇರಿದಂತೆ ರಾಜ್ಯದ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅಪಾರ ಜ್ಞಾನ, ದೂರದೃಷ್ಟಿಯ ಆಲೋಚನೆ ಹಾಗೂ ಸಮರ್ಥ ನಾಯಕತ್ವವು ಭಾರತದ ನೆಲದಲ್ಲಿ ಅವರನ್ನು ಅಮರವಾಗಿಸಲಿದೆ.
ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ನಾನು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡೆ. ಈ ಸಂದರ್ಭದಲ್ಲಿ ನಮ್ಮ ಸರ್ಕಾರದ ಯೋಜನೆಗಳಿಗೆ ಅವರಿಂದ… pic.twitter.com/jF7kDMOo9a
ಸಿದ್ದರಾಮಯ್ಯ
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅಪಾರ ಜ್ಞಾನ, ದೂರದೃಷ್ಟಿಯ ಆಲೋಚನೆ ಹಾಗೂ ಸಮರ್ಥ ನಾಯಕತ್ವವು ಭಾರತದ ನೆಲದಲ್ಲಿ ಅವರನ್ನು ಅಮರವಾಗಿಸಲಿದೆ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ನಾನು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡೆ. ಈ ಸಂದರ್ಭದಲ್ಲಿ ನಮ್ಮ ಸರ್ಕಾರದ ಯೋಜನೆಗಳಿಗೆ ಅವರಿಂದ ದೊರೆತ ಮಾರ್ಗದರ್ಶನ ಹಾಗೂ ಬೆಂಬಲವನ್ನು ಸ್ಮರಿಸಲೇಬೇಕು. ಯುಪಿಎ ಸರ್ಕಾರದ ಆಹಾರ ಹಕ್ಕು ಕಾಯ್ದೆಯು ನಮ್ಮ ನಾಡಿನ ಪ್ರಗತಿಯ ಹಾದಿಗೆ ಹೊಸ ಆಯಾಮ ಕಲ್ಪಿಸಿಕೊಟ್ಟಿದೆ. ಮಾತಿಗಿಂತ ಕೃತಿ ಲೇಸೆಂಬ ನುಡಿಗಟ್ಟಿಗೆ ಅನ್ವರ್ಥದಂತೆ ಬದುಕಿದ ಓರ್ವ ಮುತ್ಸದ್ದಿ ನಾಯಕನನ್ನು ಕಳೆದುಕೊಂಡ ಭಾರತವಿಂದು ಬಡವಾಗಿದೆ. ಮೃತರ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗ ಮತ್ತು ಕೋಟ್ಯಂತರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.
An era defined by statesmanship, integrity and quiet strength comes to an end with the demise of Former PM Dr. Manmohan Singh ji.
His vision for the nation both as the PM and the economic architect during one of its most defining moments truly speak volumes about his resilient… pic.twitter.com/3gSr4ynxW7
ಡಿ.ಕೆ ಶಿವಕುಮಾರ್
ರಾಜನೀತಿ, ಸಮಗ್ರತೆ ಮತ್ತು ಶಾಂತ ಶಕ್ತಿಯಿಂದ ವ್ಯಾಖ್ಯಾನಿಸಲಾದ ಯುಗವು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಜಿ ಅವರ ನಿಧನದೊಂದಿಗೆ ಕೊನೆಗೊಳ್ಳುತ್ತದೆ. ಪ್ರಧಾನ ಮಂತ್ರಿಯಾಗಿ ಮತ್ತು ಆರ್ಥಿಕ ವಾಸ್ತುಶಿಲ್ಪಿಯಾಗಿ ರಾಷ್ಟ್ರದ ಬಗ್ಗೆ ಅವರ ದೃಷ್ಟಿಕೋನವು ಅದರ ಅತ್ಯಂತ ನಿರ್ಣಾಯಕ. ಅವರ ಅಗಲಿಕೆಯು ನನಗೆ ವೈಯಕ್ತಿಕ ನಷ್ಟವಾದಂತೆ ಭಾಸವಾಗುತ್ತಿದೆ. ನಿಜವಾದ ಮಣ್ಣಿನ ಮಗನಿಗೆ ವಿದಾಯ ಹೇಳುವ ಈ ಸಂದರ್ಭದಲ್ಲಿ ಅವರ ಕುಟುಂಬಸ್ಥರು ಹಾಗೂ ಆತ್ಮೀಯರಿಗೆ ದುಃಖ ಬರಿಸುವ ಶಕ್ತಿ ಕೊಡಲೆಂದು ನಾನು ಭಾವಿಸುತ್ತೇನೆ.
ಭಾರತದ ಮಾಜಿ ಪ್ರಧಾನಮಂತ್ರಿಗಳು, ಪ್ರಖ್ಯಾತ ವಿತ್ತತಜ್ಞರು, ಆರ್ಥಿಕ ಸುಧಾರಣೆಗಳ ಹರಿಕಾರರೂ ಆಗಿದ್ದ ಡಾ.ಮನಮೋಹನ್ ಸಿಂಗ್ ಅವರ ನಿಧನದ ವಾರ್ತೆ ಕೇಳಿ ಬಹಳ ದುಃಖವಾಯಿತು.
ದೂರದೃಷ್ಟಿ, ಸಂಯಮ ಮತ್ತು ತಮ್ಮ ಆರ್ಥಿಕ ಮೇದಸ್ಸಿನಿಂದ ರಾಷ್ಟ್ರವನ್ನು ದುರಿತ ಕಾಲದಲ್ಲಿ ಸಶಕ್ತವಾಗಿ ಮುನ್ನಡೆಸಿದ್ದ ಮನಮೋಹನ್ ಸಿಂಗ್ ಅವರು ದೇಶಕ್ಕೆ ನೀಡಿರುವ ಕೊಡುಗೆ… pic.twitter.com/M4Mbv7ImQV
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 26, 2024
ಹೆಚ್.ಡಿ ಕುಮಾರಸ್ವಾಮಿ
ಭಾರತದ ಮಾಜಿ ಪ್ರಧಾನಮಂತ್ರಿಗಳು, ಪ್ರಖ್ಯಾತ ವಿತ್ತತಜ್ಞರು, ಆರ್ಥಿಕ ಸುಧಾರಣೆಗಳ ಹರಿಕಾರರೂ ಆಗಿದ್ದ ಡಾ.ಮನಮೋಹನ್ ಸಿಂಗ್ ಅವರ ನಿಧನದ ವಾರ್ತೆ ಕೇಳಿ ಬಹಳ ದುಃಖವಾಯಿತು. ದೂರದೃಷ್ಟಿ, ಸಂಯಮ ಮತ್ತು ತಮ್ಮ ಆರ್ಥಿಕ ಮೇದಸ್ಸಿನಿಂದ ರಾಷ್ಟ್ರವನ್ನು ದುರಿತ ಕಾಲದಲ್ಲಿ ಸಶಕ್ತವಾಗಿ ಮುನ್ನಡೆಸಿದ್ದ ಮನಮೋಹನ್ ಸಿಂಗ್ ಅವರು ದೇಶಕ್ಕೆ ನೀಡಿರುವ ಕೊಡುಗೆ ಅಪಾರ. ಆರ್ಥಿಕ ಸುಧಾರಣೆಗಳ ಮೂಲಕ ಭಾರತಕ್ಕೆ ಜಾಗತಿಕ ಮನ್ನಣೆ ತಂದುಕೊಟ್ಟವರು ಅವರು. ಅವರ ಕೊಡುಗೆಗಳು ಚಿರಸ್ಮರಣೀಯ. ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
Deeply saddened by the loss of former Prime Minister Dr. Manmohan Singh Ji. My heartfelt condolences go out to his family and friends during this difficult time.
ಪ್ರಹ್ಲಾದ್ ಜೋಶಿ
ಭಾರತದ ಮಾಜಿ ಪ್ರಧಾನಿ, ಅರ್ಥಶಾಸ್ತ್ರಜ್ಞರು, ಹಣಕಾಸು ಸಚಿವರಾಗಿದ್ದ ಶ್ರೀಮನಮೋಹನ್ ಸಿಂಗ್ ರವರು ದೈವಾಧೀನರಾದ ವಿಷಯ ಅತೀವ ನೋವನ್ನು ತಂದಿದೆ. ಮೃತರ ಆತ್ಮಕ್ಕೆ ಸದ್ಗತಿ ಸಿಗಲೆಂದು ನಾನು ಪ್ರಾರ್ಥಿಸುತ್ತೇನೆ. ಡಾ. ಮನಮೋಹನ್ ಸಿಂಗ್ ಅವರ ಸಾವು ದೇಶಕ್ಕೆ ತುಂಬಲಾರದ ನಷ್ಟವಾಗಿದೆ. ಈ ಸಮಯಲ್ಲಿ ಅವರ ಕುಟುಂಬಕ್ಕೆ ಧೈರ್ಯ ಸಿಗಲೆಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ.
Very sad to know the passing away of former Prime Minister, Shri Manmohan Singh. He was a good and patient man, a brilliant economist, and a colleague I valued and respected. He will be remembered in history as the man who changed the course of India’s economic future. RIP. pic.twitter.com/WGuXtmzK2f
ಹೆಚ್.ಡಿ ದೇವೇಗೌಡ
ಮಾಜಿ ಪ್ರಧಾನಿ ಶ್ರೀ ಮನಮೋಹನ್ ಸಿಂಗ್ ಅವರ ನಿಧನದ ಸುದ್ದಿ ತಿಳಿದು ತುಂಬಾ ದುಃಖವಾಗಿದೆ. ಅವರು ಒಳ್ಳೆಯ ಮತ್ತು ತಾಳ್ಮೆಯ ವ್ಯಕ್ತಿ, ಅದ್ಭುತ ಅರ್ಥಶಾಸ್ತ್ರಜ್ಞ. ನಾನು ಗೌರವಿಸುವ ಮತ್ತು ಮೌಲ್ಯಯುತ ವ್ಯಕ್ತಿತ್ವವುಳ್ಳ ಸಹೋದ್ಯೋಗಿ, ಭಾರತದ ಆರ್ಥಿಕತೆಯ ಭವಿಷ್ಯ ಬದಲಿಸಿದ ವ್ಯಕ್ತಿ ಮನಮೋಹನ್ ಸಿಂಗ್. ಅವರನ್ನ ಇತಿಹಾಸದಲ್ಲಿ ನೆನಪಿಸಿಕೊಳ್ಳುತ್ತಾರೆ… ಆರ್‌ಐಪಿ.
ಭಾರತದ ಮಾಜಿ ಪ್ರಧಾನಿ ಶ್ರೀ ಮನಮೋಹನ್ ಸಿಂಗ್ ಅವರು ವಿಧಿವಶರಾದ ಸುದ್ದಿ ತೀವ್ರ ನೋವುಂಟು ಮಾಡಿದೆ.
ಕೇಂದ್ರ ಹಣಕಾಸು ಸಚಿವರಾಗಿ, ಆರ್ ಬಿಐ ಗವರ್ನರ್ ಆಗಿ, ಆರ್ಥಿಕ ಸಲಹೆಗಾರರಾಗಿ, ರಾಜ್ಯಸಭೆಯ ಪ್ರತಿಪಕ್ಷ ನಾಯಕರಾಗಿ, ಪ್ರಧಾನ ಮಂತ್ರಿಗಳಾಗಿ ಸುಮಾರು ಐದು ದಶಕಗಳ ಕಾಲ ಅನೇಕ ಹುದ್ದೆಗಳಲ್ಲಿ ರಾಷ್ಟ್ರ ಸೇವೆ ಸಲ್ಲಿಸಿದ ಡಾ. ಮನಮೋಹನ್ ಸಿಂಗ್ ಅವರ… pic.twitter.com/me336JgeLe
ಆರ್. ಅಶೋಕ್
ಭಾರತದ ಮಾಜಿ ಪ್ರಧಾನಿ ಶ್ರೀ ಮನಮೋಹನ್ ಸಿಂಗ್ ಅವರು ವಿಧಿವಶರಾದ ಸುದ್ದಿ ತೀವ್ರ ನೋವುಂಟು ಮಾಡಿದೆ. ಕೇಂದ್ರ ಹಣಕಾಸು ಸಚಿವರಾಗಿ, ಆರ್ ಬಿಐ ಗವರ್ನರ್ ಆಗಿ, ಆರ್ಥಿಕ ಸಲಹೆಗಾರರಾಗಿ, ರಾಜ್ಯಸಭೆಯ ಪ್ರತಿಪಕ್ಷ ನಾಯಕರಾಗಿ, ಪ್ರಧಾನ ಮಂತ್ರಿಗಳಾಗಿ ಸುಮಾರು ಐದು ದಶಕಗಳ ಕಾಲ ಅನೇಕ ಹುದ್ದೆಗಳಲ್ಲಿ ರಾಷ್ಟ್ರ ಸೇವೆ ಸಲ್ಲಿಸಿದ ಡಾ. ಮನಮೋಹನ್ ಸಿಂಗ್ ಅವರ ನಿಧನದಿಂದ ದೇಶ ಒಬ್ಬ ಮುತ್ಸದ್ಧಿ ನಾಯಕನನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.
ದೇಶದ ಅರ್ಥ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರವಹಿಸಿ, ಆರ್ಥಿಕ ಉದಾರೀಕರಣದ ರೂವಾರಿಯಾಗಿ ಭಾರತದ ಬೆಳವಣಿಗೆಗೆ ಅಮೋಘ ಕೊಡುಗೆ ನೀಡಿದ್ದ ವಿಶ್ವ ಕಂಡ ಶ್ರೇಷ್ಠ ಆರ್ಥಿಕ ತಜ್ಞರೂ ಆದ ಮಾಜಿ ಪ್ರಧಾನಿ ಶ್ರೀ ಮನಮೋಹನ್ ಸಿಂಗ್ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸುವೆ. ಅವರ ಸರಳತೆ, ಸಜ್ಜನಿಕೆಯಿಂದಾಗಿ ಅಪರೂಪದ ವಿನಯವಂತ ಪಾಂಡಿತ್ಯ ಮೂರ್ತಿಯನ್ನು ಅವರಲ್ಲಿ… pic.twitter.com/w8rb9buq5r
ಬಿ.ವೈ ವಿಜಯೇಂದ್ರ
ದೇಶದ ಅರ್ಥ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರವಹಿಸಿ, ಆರ್ಥಿಕ ಉದಾರೀಕರಣದ ರೂವಾರಿಯಾಗಿ ಭಾರತದ ಬೆಳವಣಿಗೆಗೆ ಅಮೋಘ ಕೊಡುಗೆ ನೀಡಿದ್ದ ವಿಶ್ವ ಕಂಡ ಶ್ರೇಷ್ಠ ಆರ್ಥಿಕ ತಜ್ಞರೂ ಆದ ಮಾಜಿ ಪ್ರಧಾನಿ ಶ್ರೀ ಮನಮೋಹನ್ ಸಿಂಗ್ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸುವೆ. ಅವರ ಸರಳತೆ, ಸಜ್ಜನಿಕೆಯಿಂದಾಗಿ ಅಪರೂಪದ ವಿನಯವಂತ ಪಾಂಡಿತ್ಯ ಮೂರ್ತಿಯನ್ನು ಅವರಲ್ಲಿ ಕಾಣುವಂತಾಗಿತ್ತು. ಪಕ್ಷಾತೀತವಾಗಿ ಎಲ್ಲರ ಹೃದಯದಲ್ಲೂ ಸ್ನೇಹದ ಬಾಂಧವ್ಯ ಬೆಸೆದಿದ್ದ ಅವರು ಅಕ್ಷರಶಃ ಅಜಾತಶತ್ರುವಾಗಿದ್ದರು. ಎಂದೂ ಯಾರೊಂದಿಗೂ ವಿರಸ ಕಟ್ಟಿಕೊಳ್ಳದೇ ಒಬ್ಬ ಶಿಸ್ತು ಬದ್ಧ ಆರ್ಥಿಕ ಸಲಹೆಗಾರರಾಗಿ, ಸರಳತೆಯ ರಾಜಕಾರಣಿಯಾಗಿ, ಭಾರತದ ಪ್ರಧಾನಿಗಳಾಗಿ ಅವರ ಹತ್ತು ವರ್ಷಗಳ ಸುದೀರ್ಘ ಸೇವೆ ಮಹತ್ವದ ಮೈಲಿಗಲ್ಲು. ಭಾರತೀಯ ರಿಸರ್ವ್ ಬ್ಯಾಂಕ್’ನ ಗವರ್ನರ್ ಆಗಿ, ದೇಶದ ವಿತ್ತ ಸಚಿವರಾಗಿ ಅವರು ಇಟ್ಟ ಹೆಜ್ಜೆಗಳು ಆರ್ಥಿಕ ಸುಧಾರಣೆಯ ಮಹತ್ವದ ತಿರುವುಗಳು. ಮನಮೋಹನ್ ಸಿಂಗ್ ಅವರ ಅಗಲಿಕೆಯಿಂದ ಒಬ್ಬ ಸಜ್ಜನಿಕೆಯ ಆಡಳಿತಗಾರರನ್ನಷ್ಟೇ ದೇಶ ಕಳೆದುಕೊಂಡಿಲ್ಲ, ಮೃದು ಭಾಷೆಯ ಒಬ್ಬ ಮಹಾನ್ ಶ್ರೇಷ್ಠ ಆರ್ಥಿಕ ತಜ್ಞನನ್ನು ಕಳೆದುಕೊಂಡಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹಾಗೂ ಭಾರತದ ಇತಿಹಾಸದಲ್ಲಿ ಮನಮೋಹನ್ ಸಿಂಗ್ ಅವರ ವ್ಯಕ್ತಿತ್ವ, ಕೊಡುಗೆ ಹಾಗೂ ಸಾಧನೆಗಳು ಭಾರತದ ಇತಿಹಾಸದಲ್ಲಿ ಚಿರಸ್ಥಾಯಿಯಾಗಿ ಉಳಿಯಲಿದೆ. ಅಗಲಿದ ಮಹಾನ್ ಚೇತನಕ್ಕೆ ಗೌರವಪೂರ್ವಕ ನಮನಗಳು.
ಬೆಂಗಳೂರು: ಅಮಿತ್ ಶಾ (Amit Shah) ಫೇಕ್ ಎನ್‍ಕೌಂಟರ್‌ಗೆ ಹೆಸರುವಾಸಿ, ಕಾಂಗ್ರೆಸ್ ಪಕ್ಷ ಅಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ಎಂಎಲ್‍ಸಿ ಬಿ.ಕೆ ಹರಿಪ್ರಸಾದ್ (B.K.Hariprasad) ವಾಗ್ದಾಳಿ ನಡೆಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಅವರು ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ, ಸಿ.ಟಿ ರವಿ (C.T Ravi) ಅವರನ್ನು ಈ ಸರ್ಕಾರ ಎನ್‍ಕೌಂಟರ್ ಮಾಡೋ ಪ್ರಯತ್ನ ಮಾಡಿತ್ತು ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ (Pralhad Joshi) ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದರು. ಜೋಶಿಯವರು ಅಮಿತ್ ಶಾ ಸಂತತಿಯವರು. ಫೇಕ್ ಎನ್‍ಕೌಂಟರ್‌ಗೆ ಹೆಸರುವಾಸಿ ಆದವರು ಅಮಿತ್ ಶಾ. ಅವರು ಹೇಳಿಕೊಟ್ಟ ಪಾಠವನ್ನ ಜೋಶಿಯವರು ಇಲ್ಲಿ ಹೇಳ್ತಿದ್ದಾರೆ. ಬಿಜೆಪಿಯವರು ಮಾಡಿರೋದನ್ನ ಅವರು ಇಲ್ಲಿ ಮಾಡ್ತೀವಿ ಎಂದು ಅಪಾದನೆ ಮಾಡ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ರಾಹುಲ್ ಗಾಂಧಿ ಡ್ರಗ್ ಅಡಿಕ್ಟ್ ಎಂಬ ಬಿಜೆಪಿ ಆರೋಪದ ವಿಚಾರಕ್ಕೆ, ಬಿಜೆಪಿಯವರು ಸಂಘಪರಿವಾರದವರು ವ್ಯಸನಿಗಳು, ವಿಕೃತರು. ಗಾಂಧಿಯಿಂದ ಹಿಡಿದು ರಾಹುಲ್ ಗಾಂಧಿ ತನಕ ಇವರು ಅಪಪ್ರಚಾರ ಮಾಡಿಕೊಂಡು ಬರ್ತಿದ್ದಾರೆ. ಇದಕ್ಕೆಲ್ಲ ತಲೆ ಕೆಡಿಸಿಕೊಳ್ಳಲ್ಲ. ಬಿಜೆಪಿಯನ್ನು ಬೇರೆ ಅರ್ಥದ ಪಾರ್ಟಿ ಮಾಡೋದಕ್ಕೆ ಇವರು ಹೊರಟಿದ್ದಾರೆ. ರಾಹುಲ್ ಗಾಂಧಿ ಇವರು ಹೇಳಿದ ತರ ಅಡಿಕ್ಟ್ ಆಗಿದ್ದರೆ, 10 ಸಾವಿರ ಕಿಲೋ ಮೀಟರ್ ಭಾರತ್ ಜೋಡೋದಲ್ಲಿ ನಡೆಯೋದಕ್ಕೆ ಆಗುತ್ತಿರಲಿಲ್ಲ. ಈಗ ಅಂಬೇಡ್ಕರ್ ಬಗ್ಗೆಯೂ ಅಪಪ್ರಚಾರ ಮಾಡ್ತಿದ್ದಾರೆ. ಇದು ಉದ್ದೇಶಪೂರ್ವಕವಾಗಿ ಲೆಕ್ಕಾಚಾರ ಹಾಕಿಕೊಂಡೇ ಹೇಳಿದ ಮಾತು ಇದು ಎಂದು ಆಕ್ರೋಶ ಹೊರಹಾಕಿದ್ದಾರೆ.
ಬಿಜೆಪಿಯವರಿಗೆ (BJP) ದಲಿತರು, ಕೇಳವರ್ಗದವರು, ಶೂದ್ರರು ಯಾರೂ ಬೇಕಾಗಿಲ್ಲ. ಇವರು ಮೇಲ್ವರ್ಗದ ಜೊತೆಗೆ ಇರಬೇಕು ಎಂಬ ಉದ್ದೇಶ. ಅವರಿಗೆ ಕೆಳವರ್ಗದ ಅಭಿವೃದ್ಧಿ ಮಾಡುವುದು ಬೇಕಾಗಿಯೂ ಇಲ್ಲ. ಸುಮ್ಮನೆ ಅಮಿತ್ ಶಾ ಈ ಮಾತು ಹೇಳಿದ್ದಾರೆ ಅಂದುಕೊಳ್ಳಬೇಡಿ. ಇದನ್ನ ಪ್ಲ್ಯಾನ್ ಮಾಡಿಯೇ ಹೇಳಿರೋದು ಎಂದು ಆರೋಪಿಸಿದ್ದಾರೆ.
ಅಮಿತ್ ಶಾ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ್ದಾರೆ. ಮೊದಲು ಅಂಬೇಡ್ಕರ್ ಬಗ್ಗೆ ಅಪಮಾನ ಮಾಡಿ ಬಳಿಕ ಅದನ್ನ ತಿರುಚೋ ಕೆಲಸ ಮಾಡಿದ್ದಾರೆ. ಅಮಿತ್ ಶಾ ಗುರು ಗೋಲ್ವಾಲ್ಕರ್, ಸಾವರ್ಕರ್ ಯಾವತ್ತು ಮೀಸಲಾತಿ, ತ್ರಿವರ್ಣ ಧ್ವಜ, ಸಂವಿಧಾನವನ್ನ ಒಪ್ಪಿರಲಿಲ್ಲ. ಆರ್‍ಎಸ್‍ಎಸ್ ಕಚೇರಿ ಮೇಲೆ ತ್ರಿವರ್ಣ ಧ್ವಜ ಹಾಕಿರಲಿಲ್ಲ. ಇದು ಆರ್‍ಎಸ್‍ಎಸ್‍ನ ಹಿಡನ್ ಅಜೆಂಡಾ. ಮುಂದಿನ ವರ್ಷ ಆರ್‍ಎಸ್‍ಎಸ್‍ಗೆ (RSS) 100 ವರ್ಷ ಆಗುತ್ತೆ. ಇದಕ್ಕೆ ಏನಾದರೂ ಮಾಡಬೇಕು ಅಂತ ಹೀಗೆ ಮಾಡ್ತಿದ್ದಾರೆ.
ಅಮಿತ್ ಶಾ ಹೇಳಿಕೆಯನ್ನು ನಾವು ಖಂಡಿಸುತ್ತೇವೆ. ಇಡೀ ದೇಶ, ರಾಜ್ಯದಲ್ಲಿ ಅವರ ಹೇಳಿಕೆ ವಿರುದ್ಧ ಪ್ರತಿಭಟನೆ ಮಾಡ್ತೀವಿ. ಈ ವಾರದಲ್ಲಿ ಎಲ್ಲಾ ಜಿಲ್ಲಾವಾರು ಪ್ರತಿಭಟನೆ ಮಾಡ್ತೀವಿ. ಸೋಮವಾರದಿಂದಲೇ ಹೋರಾಟಗಳು ಪ್ರಾರಂಭ ಆಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.
ಬಾಗಲಕೋಟೆ: ಮಾಧ್ಯಮದವರು ಇಲ್ಲದೇ ಇದ್ದಿದ್ರೆ, ಸಿ.ಟಿ ರವಿ (CT Ravi) ಅವರನ್ನ ಫೇಕ್ ಎನ್‌ಕೌಂಟರ್ ಮಾಡುವಂತಹ ವಿಚಾರ ಅಲ್ಲಿನ ಪೊಲೀಸ್ ತಂಡಕ್ಕೆ ಇತ್ತು ಅನ್ನಿಸುತ್ತೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಬಾಂಬ್ ಸಿಡಿಸಿದ್ದಾರೆ.
ಸಿ.ಟಿ ರವಿ ಅವರನ್ನು ಬಂಧಿಸಿದ್ದ ವಿಚಾರ ಕುರಿತು ಬಾಗಲಕೋಟೆಯಲ್ಲಿ (Bagalkote) ಮಾತನಾಡಿದ ಅವರು, ಅವಕಾಶ ಸಿಕ್ಕಿದ್ರೆ ಸಿ.ಟಿ ರವಿ ಅವರನ್ನು ಮುಗಿಸಬೇಕು ಅಂತಾ ಯೋಚನೆ ಮಾಡಿದ್ದರು ಅನ್ನಿಸುತ್ತೆ. ಆದ್ರೆ ಅವರಿಗೆ ಸರಿಯಾದ ಅವಕಾಶ ಸಿಕ್ಕಿಲ್ಲ. ಏಕೆಂದರೆ ಆಗ ನಮ್ಮ ಮತ್ತೊಬ್ಬರು ಎಂಎಲ್‌ಸಿ ಕೇಶವ್ ಪ್ರಸಾದ್ ಜೊತೆಯಲ್ಲಿದ್ದರು. ಮಾಧ್ಯಮದವರಿಂದ ನಮಗೆ ಲೈವ್ ಲೊಕೇಶನ್ ಸಿಗ್ತಾ ಇತ್ತು ಎಂದು ಹೇಳಿದ್ದಾರೆ. ಇದನ್ನೂ ಓದಿ: ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿ ಸಾವು – ಮುಖ್ಯಶಿಕ್ಷಕ ಸೇರಿ 6 ಶಿಕ್ಷಕರು ಅಮಾನತು
ನಿಜವಾಗ್ಲೂ ನಾವು ಮಾಧ್ಯಮದವರಿಗೆ ಧನ್ಯವಾದ ಹೇಳಬೇಕು. ಅಷ್ಟು ರಾತ್ರಿಯಲ್ಲೂ ಪೊಲೀಸರ ಬೆನ್ನತ್ತಿ, ವಿಡಿಯೋ ಮಾಡಿ, ಲೈವ್ ಲೊಕೇಶನ್ ಹಾಕ್ತಾ ಇದ್ರು. ಹಾಗಾಗಿ ಸಿ.ಟಿ ರವಿ ಅವರನ್ನ ಮುಗಿಸಲು ಅವಕಾಶ ಸಿಕ್ಕಿಲ್ಲ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಇದು ಸಂಪೂರ್ಣವಾಗಿ ಗೃಹ ಇಲಾಖೆಯ ವೈಫಲ್ಯ, ಹೀಗಾಗಿ ನಾವಿದನ್ನ ಇಲ್ಲಿಗೆ ಬಿಡಲ್ಲ. ಈಗಾಗಲೇ ನಾನು, ಸಿ.ಟಿ ರವಿ ಅವರಿಗೆ ಸೂಕ್ತ ಕಾನೂನು ಸಲಹೆ ಪಡೆಯುವಂತೆ ಹೇಳಿದ್ದೇನೆ. ಈ ಕುತಂತ್ರದ ಹಿಂದೆ ಯಾರಿದ್ದಾರೆ ಎಂಬುದರ ಬಗ್ಗೆ ತನಿಖೆ ಮಾಡಲು ನಾವು ಕೋರ್ಟ್‌ಗೆ ಹೋಗುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪಾಪ್ ಕಾರ್ನ್ ಮೇಲೆ 3 ರೀತಿಯ ಜಿಎಸ್‌ಟಿ – ಕೌನ್ಸಿಲ್ ಸಭೆಯಲ್ಲಿ ಒಪ್ಪಿಗೆ; ಯಾವುದು ದುಬಾರಿ?
ಇನ್ನೂ ಸಿ.ಟಿ ರವಿ ಅವಹೇಳನಕಾರಿ ಶದ್ಧ ಬಳಸಿದಕ್ಕೆ ಎನ್ಕೌಂಟರ್ ಮಾಡ್ತಿದ್ರಾ? ಎಂಬ ಮಾಧ್ಯಮದವ್ರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಅದೊಂದೇ ಕಾರಣ ಅಂತ ನಾನು ಹೇಳೋದಿಲ್ಲ. ಈ ರೀತಿ ಒಬ್ಬರನ್ನ ಎನ್‌ಕೌಂಟರ್ ಮಾಡಿಬಿಟ್ರೆ, ಬಿಜೆಪಿಯವ್ರು ಮುಂದೆ ಯಾವುದೇ ಚಟುವಟಿಕೆ ಮಾಡಲ್ಲ, ಹೆದರಿಕೊಂಡು ಮೂಲೆ ಸೇರುತ್ತಾರೆ ಅಂತ ಭಯ ಸೃಷ್ಟಿ ಮಾಡುವ ಪ್ರಯತ್ನ ಎಂದು ಅಭಿಪ್ರಾಯಪಟ್ಟಿದ್ದಾರೆ.
ಹುಬ್ಬಳ್ಳಿ: ಪರಿಷತ್ ಸದಸ್ಯ ಸಿಟಿ ರವಿ ಬಂಧನ ವಿಚಾರವಾಗಿ ಕಾಂಗ್ರೆಸ್ ದೇಶದಲ್ಲಿ ಶಾಂತಿ-ಸುವ್ಯವಸ್ಥೆ ಹಾಳು ಮಾಡುತ್ತಿದೆ. ಸಭ್ಯ ಮೌಲ್ಯಗಳನ್ನು ಮರೆತು ಜನಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸಲಾಗುತ್ತಿದೆ. ಇಂತಹ ಘಟನೆಗಳು ಖಂಡನೀಯ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅಸಮಾಧಾನ ಹೊರಹಾಕಿದ್ದಾರೆ.
ರಾಹುಲ್ ಗಾಂಧಿ ಅವರು ನಿನ್ನೆ ಬೆಳಗ್ಗೆ ದೆಹಲಿಯಲ್ಲಿ ಸಂಸದ ಪ್ರತಾಪ್ ಸಾರಂಗಿ ಅವರಿಗೆ ಗಾಯ ಮಾಡಿದ್ದಾರೆ. ರಾತ್ರಿ ಮಾಜಿ ಸಚಿವರು ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಮೇಲೆ ಮಾರಣಾಂತಿಕ ಹಲ್ಲೆ. ಒಬ್ಬ ಜನಪ್ರತಿನಿಧಿಯ ವಿರುದ್ಧ ಕಾಂಗ್ರೆಸ್ ಸರ್ಕಾರ ಈ ರೀತಿ ವರ್ತಿಸುತ್ತಿರುವುದು ಖಚಿತವಾಗಿದೆ. ದುರಹಂಕಾರದ ಪರಮಾವಧಿ ಕಾಂಗ್ರೆಸ್ ಪಕ್ಷಕ್ಕೆ ಸಾಕ್ಷಿಯಾಗಿದೆ ಎಂದು ಜೋಶಿ ಕಿಡಿಕಾರಿದ್ದಾರೆ.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಪ್ರಕರಣದಲ್ಲಿ ಸಿ.ಟಿ.ರವಿ ಬಂಧನಕ್ಕೊಳಗಾಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ಬಿಡುಗಡೆಗೆ ಆದೇಶ ಹೊರಡಿಸಿತು. ನಂತರ ದಾವಣಗೆರೆಯಲ್ಲಿ ಬಿಜೆಪಿ ನಾಯಕನನ್ನು ಪೊಲೀಸರು ಬಿಡುಗಡೆ ಮಾಡಿದರು.
ನವದೆಹಲಿ: ರಾಜ್ಯದಿಂದ ಆಯ್ಕೆಯಾಗಿ ಕೇಂದ್ರ ಸಚಿವರಾಗಿರುವ ಪ್ರಹ್ಲಾದ್ ಜೋಶಿ (Pralhad Joshi) ಕನ್ನಡಿಗರಿಗೆ ದ್ರೋಹ ಮಾಡುತ್ತಿದ್ದಾರೆ. ದೆಹಲಿಯಲ್ಲಿ ನರೇಂದ್ರ ಮೋದಿ, ಅಮಿತ್ ಶಾ ಅವರ ಓಲೈಸುವ ರಾಜಕೀಯ ಮಾಡುತ್ತಿದ್ದು, ರಾಜ್ಯಕ್ಕೆ ಅವರ ಕೊಡುಗೆ ಶೂನ್ಯ ಎಂದು ರಾಜ್ಯಸಭೆ ಸಂಸದ ಜಿ.ಸಿ ಚಂದ್ರಶೇಖರ್ (G.C.Chandrashekhar) ವಾಗ್ದಾಳಿ ನಡೆಸಿದ್ದಾರೆ.
ದೆಹಲಿಯಲ್ಲಿ ರಾಜ್ಯಸಭೆ ಸಭಾಪತಿ ಜಗದೀಪ್ ಧನ್ಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಆಡಳಿತ ಪಕ್ಷಕ್ಕಿಂತ ಕಲಾಪ ವಿರೋಧ ಪಕ್ಷಕ್ಕೆ ಮುಖ್ಯ. ಜನಪರ ಧ್ವನಿ ಎತ್ತಲು ಕಲಾಪ ನಮಗೆ ವೇದಿಕೆ. ಆದರೆ, ನಮಗೆ ಇಲ್ಲಿ ಅವಕಾಶ ಸಿಗುತ್ತಿಲ್ಲ. ಧನ್ಕರ್ ಅವರ ಅವಧಿಯಲ್ಲಿ ಹೆಚ್ಚು ಕಾಲ ಕಲಾಪ ಮುಂದೂಡಿಕೆಯಾಗಿದೆ. ಇದನ್ನೂ ಓದಿ: ಸಂಸತ್ ಭವನ ಮೇಲಿನ ದಾಳಿಗೆ 23 ವರ್ಷ – ಹುತಾತ್ಮಕರಿಗೆ ಮೋದಿ ಸೇರಿ ಗಣ್ಯರಿಂದ ನಮನ
ವೆಂಕಯ್ಯನಾಯ್ಡು ಅವರು ಹೀಗೆ ತಾರತಮ್ಯ ಮಾಡಿರಲಿಲ್ಲ. ಅವರು ನ್ಯಾಯಾಧೀಶರ ರೀತಿ ವರ್ತಿಸಬೇಕು. ಆದರೆ, ಅವರು ಆಡಳಿತ ಪಕ್ಷಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ವಿರೋಧ ಪಕ್ಷದ ನಾಯಕರಿಗೆ ಮೈಕ್ ಆನ್ ಮಾಡಲ್ಲ, ಕ್ಯಾಮೆರಾದಲ್ಲಿ ತೋರಿಸಲ್ಲ. ಎಲ್ಲ ಸದಸ್ಯರಿಗೂ ತಮ್ಮದೇ ಆದ ಗೌರವ ಇರುತ್ತೆ. ಎಲ್ಲರಿಗೂ ಇಲ್ಲಿ ಗೌರವ ಕೊಡಬೇಕು. ನಮ್ಮದು ಬಹುಮತ ಇಲ್ಲ ಅಂತಾ ಅವಿಶ್ವಾಸ ಮಂಡನೆ ಮಾಡಬಾರದು ಅಂತಲ್ಲ. ಜನ ವಿರೋಧಿ ನೀತಿಗಳನ್ನು ಖಂಡಿಸಲು ನಾನು ನಮ್ಮ ಜವಾಬ್ದಾರಿ ನಿಭಾಯಿಸಬೇಕು. ಸಭಾಪತಿ ಅವರಿಗೆ ಎಚ್ಚರಿಕೆ ನೀಡಲು ನಾವು ಇದನ್ನು ಮಾಡಿದ್ದೇವೆ ಎಂದು ಸಮರ್ಥಿಸಿಕೊಂಡಿದ್ದಾರೆ.
ಕಲಾಪಗಳು ಮುಂದೂಡಿಕೆ ಬಗ್ಗೆ ನಮಗೂ ಬೇಸರ ಇದೆ. ಬಜೆಟ್ ತಯಾರಾಗುವ ಸಮಯ ಇದು. ಈ ಸಮಯದಲ್ಲಿ ಕರ್ನಾಟಕದ ಬಗ್ಗೆ ಗಮನ ಸೆಳೆಯಬೇಕು. ಆದರೆ, ರಾಜ್ಯದ ಕೇಂದ್ರ ಸಚಿವರು, ಬಿಜೆಪಿ ಸಂಸದರು ಮಾತನಾಡುತ್ತಿಲ್ಲ. ನೀರಾವರಿ ಯೋಜನೆ ಸೇರಿ ಪ್ರಮುಖ ಯೋಜನೆ ಬಗ್ಗೆ ಮಾತನಾಡುತ್ತಿಲ್ಲ. ಪಕ್ಷಪಾತ ಬಿಟ್ಟು ರಾಜ್ಯಕ್ಕೆ ಆಗುವ ಅನ್ಯಾಯ ಖಂಡಿಸಬೇಕಿದೆ. ನಮಗೆ ಮಾತನಾಡಲು ಬಿಡುತ್ತಿಲ್ಲ. ಆಡಳಿತದಲ್ಲಿರುವ ಬಿಜೆಪಿ ನಾಯಕರಾದರೂ ರಾಜ್ಯದ ಬಗ್ಗೆ ಮಾತನಾಡಬೇಕು ಅವರು ಮಾತನಾಡುತ್ತಿಲ್ಲ. ಇದನ್ನೂ ಓದಿ: ರಾಜ್ಯದಲ್ಲಿ 3 ಸಾವಿರ ಹೊಸ ಅಂಗನವಾಡಿ ಸ್ಥಾಪನೆಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆ- ಲಕ್ಷ್ಮಿ ಹೆಬ್ಬಾಳ್ಕರ್
ಪ್ರಹ್ಲಾದ್ ಜೋಶಿ ಹಿರಿಯ ಸಚಿವರಾಗಿದ್ದಾರೆ. ಆದರೆ ಅವರು ಮೋದಿ, ಅಮಿತ್ ಶಾ ಖುಷಿಪಡಿಸುವ ಕೆಲಸ ಮಾಡುತ್ತಿದ್ದಾರೆ. ಮಹದಾಯಿಯಿಂದ ಎಷ್ಟು ಜನಕ್ಕೆ ಅನುಕೂಲ, ಅದನ್ನು ಮಾಡುವ ಪ್ರಯತ್ನ ಮಾಡುತ್ತಿಲ್ಲ. ಕೇವಲ ಅಲ್ಲಿಂದ ಇಲ್ಲಿಗೆ ತಂದಿಡುವ ಕೆಲಸ ಮಾಡುತ್ತಿದ್ದಾರೆ. ಓಲೈಕೆ ರಾಜಕೀಯ ಮಾಡುತ್ತಿದ್ದಾರೆ. ಹಿರಿಯ ಸಚಿವರಾಗಿ ಪ್ರಹ್ಲಾದ್ ಜೋಶಿ ಕೊಡುಗೆ ಶೂನ್ಯ. ಅವರಿಂದ ಕನ್ನಡಿಗರಿಗೆ ದ್ರೋಹವಾಗುತ್ತಿದೆ ಎಂದು ಹೇಳಿದ್ದಾರೆ.
ಒಂದು ದೇಶ, ಒಂದು ಚುನಾವಣೆ ಬಗ್ಗೆ ಮಾತನಾಡಿ, ಇದು ಸರಿಯಾದ ಚಿಂತನೆಯಲ್ಲ ಎಂದರು. ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದ ಅಧಿಕಾರ ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ಸಂವಿಧಾನ ರಾಜ್ಯಕ್ಕೆ ನೀಡಿದ ಸ್ವಾತಂತ್ರ್ಯ ಕಿತ್ತುಕೊಳ್ತಿದೆ. ರಾಜ್ಯಗಳನ್ನು ತನ್ನ ಗುಲಾಮಗಿರಿ ವ್ಯಾಪ್ತಿಗೆ ತರುವ ಪ್ರಯತ್ನ ಮಾಡುತ್ತಿದೆ. ದೇಶದಲ್ಲಿ ಇದನ್ನು ಮಾಡುವುದು ಸುಲಭ ಅಲ್ಲ. ಪ್ರತಿ ರಾಜ್ಯಕ್ಕೂ ತನ್ನದೇ ಆದ ವೈವಿಧ್ಯತೆ ಇದೆ. ಅದಕ್ಕೆ ತಕ್ಕಂತೆ ಚುನಾವಣೆ ಮಾಡಬೇಕು.
ಮೊದಲು ಇದನ್ನು ಸಾರ್ವಜನಿಕ ಚರ್ಚೆಗೆ ಬಿಡಬೇಕು. ಜನರು, ವಿರೋಧ ಪಕ್ಷಗಳು ಒಮ್ಮತಕ್ಕೆ ಬರಬೇಕು. ಬಳಿಕ ಕಮಿಟಿ ಮಾಡಿ, ವರದಿ ಮಾಡಿ ಅಮೇಲೆ ಮಂಡಿಸಬೇಕು. ಹಣಕಾಸು ಉಳಿಬಹುದು ಎನ್ನುವುದು ನಾನು ಒಪ್ಪುವೆ. ಆದರೆ ಇಂದು ಚುನಾವಣೆಗೆ ಎಷ್ಟು ವ್ಯಯವಾಗುತ್ತಿದೆ ಅದನ್ನು ನಿಲ್ಲಿಸಲು ಯಾಕೆ ಕ್ರಮ ತೆಗೆದುಕೊಳ್ಳಬಾರದು? ಅಭ್ಯರ್ಥಿ ಬದಲು ಸರ್ಕಾರ ಹಣ ವ್ಯಯ ಮಾಡಲಿ. ಪ್ರಧಾನಿಯೂ ಎಷ್ಟು ಖರ್ಚು ಮಾಡುತ್ತಾರೆ ಎಂದು ಎಲ್ಲ ಜನರಿಗೆ ಗೊತ್ತಿದೆ. ಈ ಚುನಾವಣಾ ವ್ಯವಸ್ಥೆಯಲ್ಲಿ ಹಣಕಾಸು ಬಳಕೆ ನಿರ್ಬಂಧಿಸಿ. ಆ ಮೇಲೆ ಮುಂದಿನ ಹಂತಕ್ಕೆ ಬರಲಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಆಲಮಟ್ಟಿ – ಯಾದಗಿರಿ ರೈಲು ಮಾರ್ಗ ಯೋಜನೆ ಅನುಮೋದನೆಗೆ ಮನವಿ
ಹುಬ್ಬಳ್ಳಿ: ಮಹತ್ವಾಕಾಂಕ್ಷೆಯ ʻಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆʼ (PM Surya Ghar Muft Bijli Yojan) ಬಗ್ಗೆ ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ಸರಿಯಾದ ರೀತಿಯಲ್ಲಿ ಪ್ರಚಾರ ಮಾಡುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಅಸಮಾಧಾನ ಹೊರಹಾಕಿದರು.
ಜೈಪುರದಲ್ಲಿ ʻಸುಸ್ಥಿರ ಇಂಧನ ಆರ್ಥಿಕತೆಯತ್ತ ಪರಿವರ್ತನೆʼ ಶೃಂಗ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಕಾಂಗ್ರೆಸ್ (Congress) ಉಚಿತ ವಿದ್ಯುತ್ ಭರವಸೆ ನೀಡಿದೆ. ಇದರಿಂದ ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ವಿದ್ಯುತ್ ಕೊರತೆ ಎದುರಾಗುತ್ತಿದ್ದು, ಆಗಾಗ್ಗೆ ಕಡಿತಗೊಳಿಸಲಾಗುತ್ತಿದೆ. 200 ಯೂನಿಟ್ ಉಚಿತ ವಿದ್ಯುತ್ ಜನರ ಕಣ್ಣಿಗೆ ಮಣ್ಣೆರೆಚ್ಚುವ ಒಂದು ತಂತ್ರಗಾರಿಕೆ ಅಷ್ಟೇ ಎಂದು ಟೀಕಿಸಿದರು. ಇದನ್ನೂ ಓದಿ: ಇದೇ ಮೊದಲ ಬಾರಿಗೆ ರಾಜ್ಯಸಭೆ ಸಭಾಪತಿ ವಿರುದ್ಧ ಅವಿಶ್ವಾಸ ಮಂಡನೆ!
200 ಯೂನಿಟ್ ಉಚಿತ ಎನ್ನುತ್ತಾರೆ. ಆದ್ರೆ, ವಾಸ್ತವದಲ್ಲಿ ಅಷ್ಟು ಕೊಡುವುದೇ ಇಲ್ಲ. ಇದರೊಂದಿಗೆ ಉಳಿದವರಿಗೆ ವಿದ್ಯುತ್ ಶುಲ್ಕ ಏರಿಸಿದ್ದಾರೆ. 10 ರೂ., 11 ರೂ., 12 ರೂ. ಹೀಗೆ ಮನಸೋ ಇಚ್ಛೆ ದರ ಹೆಚ್ಚಳ ಮಾಡಿದ್ದಾರೆ. ಕೈಗಾರಿಕೆ, ವಾಣಿಜ್ಯ ಬಳಕೆದಾರರಿಗೂ ವಿದ್ಯುತ್ ದರ ಏರಿಕೆಯ ಬರೆ ಎಳೆದಿದ್ದಾರೆ. ವಿದ್ಯುತ್ ದರ ಏರಿಕೆ ಮತ್ತು ವಿದ್ಯುತ್ ಕಡಿತದಿಂದ ಬೇಸತ್ತ ಉದ್ಯಮಿಯೊಬ್ಬರು 5,000 ಚದರಡಿಯ ತಮ್ಮ ಮೂರು ಶೆಡ್‌ಗಳಿಗೆ ʻಸೂರ್ಯ ಘರ್ʼ ಅಳವಡಿಸಿಕೊಡುವಂತೆ ತನ್ನನ್ನು ಕೋರಿದರು. ಉಚಿತ ವಿದ್ಯುತ್ ರಾಜ್ಯಗಳಲ್ಲಿ ಅಂತಹ ಪರಿಸ್ಥಿತಿ ತಲೆದೋರಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: 2028ಕ್ಕೆ ನಮಗೆ ಬೇಕಾದ ಸರ್ಕಾರ ತಂದು ಮೀಸಲಾತಿ ಪಡೆಯುತ್ತೇವೆ: ಜಯ ಮೃತ್ಯುಂಜಯ ಸ್ವಾಮೀಜಿ
ನಿಜವಾಗಿ ಉಚಿತ ವಿದ್ಯುತ್ ಅಂದ್ರೆ ಸೂರ್ಯ ಘರ್:
ನಿಜವಾಗಿ ಉಚಿತ ವಿದ್ಯುತ್ ಪೂರೈಸುವ ಯೋಜನೆ ಎಂದರೆ ಅದು ʻಸೂರ್ಯ ಘರ್ʼಎಂದು ಪ್ರತಿಪಾದಿಸಿದ ಸಚಿವರು, 3 ಕೆವಿ ವಿದ್ಯುತ್ ಉತ್ಪಾದನೆ ಘಟಕಕ್ಕೆ ಕೇಂದ್ರ ಸರ್ಕಾರ 78,000 ರೂ.ವರೆಗೆ ಸಹಾಯಧನ ನೀಡಲಿದೆ. ಅಲ್ಲದೇ, ಬಳಸಿ ಉಳಿದ ವಿದ್ಯುತ್ ಮಾರಾಟದ ಮೂಲಕ ಆದಾಯಕ್ಕೂ ಅವಕಾಶ ಕಲ್ಪಿಸಿದೆ. ಸೋಲಾರ್ ಪ್ಲ್ಯಾಂಟ್ ಅಳವಡಿಕೆಗೆ ಬ್ಯಾಂಕ್ ಸಾಲ ಸೌಲಭ್ಯಕ್ಕೂ ಅನುವು ಮಾಡಿಕೊಟ್ಟಿದೆ ಎಂದು ಸಚಿವ ಜೋಶಿ ವಿವರಿಸಿದರು. ಇದನ್ನೂ ಓದಿ: Ramanagara | ಹಣದ ಆಸೆಗೆ ಸ್ವಂತ ಮಗುವನ್ನೇ ಮಾರಿದ ತಾಯಿ – ನಾಲ್ವರು ಅರೆಸ್ಟ್
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯದ ʻಸೂರ್ಯ ಘರ್ ಮುಫ್ತ್ ಬಿಜ್ಲಿʼ ಮಹತ್ವಾಕಾಂಕ್ಷೆಯ ಯೋಜನೆ ಆಗಿದ್ದರೂ ಕಾಂಗ್ರೆಸ್ ಆಡಳಿತದ ರಾಜ್ಯಗಳು ಸರಿಯಾಗಿ ಪ್ರಮೋಟ್ ಮಾಡುತ್ತಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಎಸ್‌ಎಂಕೆ ಅಂತಿಮ ದರ್ಶನ ಪಡೆದ ಸಿಎಂ