Tag: Pramod Madhvaraj

  • ಮಧ್ವರಾಜ್ ಅವಕಾಶವಾದಿ ರಾಜಕಾರಣಿ, ಡಿಕೆಶಿ ನಿರೀಕ್ಷೆ ಹುಸಿಯಾಗಿದೆ: ಧ್ರುವನಾರಾಯಣ್

    ಮಧ್ವರಾಜ್ ಅವಕಾಶವಾದಿ ರಾಜಕಾರಣಿ, ಡಿಕೆಶಿ ನಿರೀಕ್ಷೆ ಹುಸಿಯಾಗಿದೆ: ಧ್ರುವನಾರಾಯಣ್

    ಉಡುಪಿ: ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಪ್ರಮೋದ್ ಮಧ್ವರಾಜ್ ಅವಕಾಶವಾದಿ ರಾಜಕಾರಣಿ. ಡಿ.ಕೆ ಶಿವಕುಮಾರ್ ಪ್ರಮೋದ್ ಮಧ್ವರಾಜ್ ಮೇಲಿಟ್ಟ ನಿರೀಕ್ಷೆಗಳೆಲ್ಲ ಹುಸಿಯಾಗಿವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಪ್ರಮೋದ್ ಮಧ್ವರಾಜ್ ಕಾಂಗ್ರೆಸ್‍ಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ ಬಳಿಕ ಉಡುಪಿ ಜಿಲ್ಲಾ ಕಾಂಗ್ರೆಸ್ ತನ್ನ ತನ್ನ ಫಸ್ಟ್ ರಿಯಾಕ್ಷನ್ ಕೊಟ್ಟಿದೆ. ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮೊದಲ ಬಾರಿ ಗೆದ್ದವನಿಗೆ ಪಕ್ಷ ಎಲ್ಲಾ ಅವಕಾಶ ಕೊಟ್ಟಿತ್ತು. ಪ್ರಮೋದ್ ಜಿಲ್ಲಾ ಕಾಂಗ್ರೆಸ್ ವಿರುದ್ಧ ಮಾತನಾಡುವುದು ಶೋಭೆ ತರಲ್ಲ. ಪ್ರಮೋದ್ ಹೇಳಿದವರಿಗೆ ಜಿಲ್ಲಾ ಕಾಂಗ್ರೆಸ್‍ನಲ್ಲಿ ಅವಕಾಶ ಕೊಟ್ಟಿದ್ದೇವೆ. ಬ್ಲಾಕ್ ಕಾಂಗ್ರೆಸ್ ಮತ್ತು ಜಿಲ್ಲಾ ಕಾಂಗ್ರೆಸ್‍ನಲ್ಲಿ ಪ್ರಮೋದ್ ಸೂಚಿಸಿದ ವ್ಯಕ್ತಿಗಳಿಗೆ ಸ್ಥಾನಮಾನ ಕೊಡಲಾಗಿದೆ ಎಂದರು. ಇದನ್ನೂ ಓದಿ: ಉಗುರಿನಲ್ಲಿದ್ದ ರಕ್ತದ ಕಲೆಯಿಂದಾಗಿ ಕೊಲೆ ಮಾಡಿದ್ದ ವ್ಯಕ್ತಿ ಸಿಕ್ಕಿಬಿದ್ದ!

    ಜಿಲ್ಲಾ ಕಾಂಗ್ರೆಸ್ ಮೇಲೆ ಆರೋಪ ಮಾಡಿ ಪ್ರಮೋದ್ ಕಾಂಗ್ರೆಸ್ ಬಿಟ್ಟು ಹೋಗಿರುವುದು ದುರಾದೃಷ್ಟಕರ. ಪ್ರಮೋದ್‍ಗೆ ಸಣ್ಣ ವಯಸ್ಸಿನಲ್ಲಿ ಎಲ್ಲಾ ಹುದ್ದೆ ಕೊಟ್ಟಿದ್ದೇವೆ. ಡಿಕೆಶಿ ಪ್ರಮೋದ್ ಮೇಲೆ ಬಹಳ ನಿರೀಕ್ಷೆ ಇಟ್ಟಿದ್ದರು. ಪ್ರಮೋದ್ ಮಧ್ವರಾಜ್ ಕಾಂಗ್ರೆಸ್‍ಗೆ, ಮತದಾರರಿಗೆ ದ್ರೋಹ ಮಾಡಿದ್ದಾರೆ. ಮಧ್ವರಾಜ್ ವೈಯಕ್ತಿಕ ಆಸೆ ಏನಿದೆ ಗೊತ್ತಿಲ್ಲ. ನಾವು ಜಿಲ್ಲೆಯಲ್ಲಿ ಕಾಂಗ್ರೆಸ್‍ನ್ನು ತಳಮಟ್ಟದಿಂದ ಕಟ್ಟುತ್ತೇವೆ. ರಾಜಕಾರಣ ನಿಂತ ನೀರಲ್ಲ, ಉಡುಪಿಯಲ್ಲಿ ಮತ್ತೆ ಪಕ್ಷ ಕಟ್ಟುತ್ತೇವೆ ಎಂದರು. ಇದನ್ನೂ ಓದಿ: ಕರ್ತವ್ಯದ ವೇಳೆ ಕಂಠಪೂರ್ತಿ ಕುಡಿದು ರಂಪಾಟ ಮಾಡಿದ ಸರ್ಕಾರಿ ನೌಕರ

  • ಉಡುಪಿ ಡಿಸಿ ವಿರುದ್ಧ ಮಾಜಿ ಶಾಸಕ ಮಧ್ವರಾಜ್ ಸಿಎಂಗೆ ದೂರು

    ಉಡುಪಿ ಡಿಸಿ ವಿರುದ್ಧ ಮಾಜಿ ಶಾಸಕ ಮಧ್ವರಾಜ್ ಸಿಎಂಗೆ ದೂರು

    ಉಡುಪಿ: ದುಬೈನಿಂದ ಉಡುಪಿಗೆ ಬಂದ ಗರ್ಭಿಣಿಗೆ ಕ್ವಾರಂಟೈನ್ ಅವಧಿ ಮುಗಿದಿದ್ದರೂ ಅವರನ್ನು ಮನೆಗೆ ಕಳುಹಿಸಲಿಲ್ಲ. ಉಡುಪಿ ಡಿಸಿ ಜಿ ಜಗದೀಶ್ ಬೇಜವಾವ್ದಾರಿಯಿಂದ ವರ್ತಿಸುತ್ತಿದ್ದಾರೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮುಖ್ಯಮಂತ್ರಿಗಳಿಗೆ ದೂರು ಸಲ್ಲಿಸಿದ್ದಾರೆ.

    ಗರ್ಭಿಣಿ ಉಡುಪಿಯ ಲಾಡ್ಜ್‍ನಲ್ಲಿ 15 ದಿನಗಳ ಕ್ವಾರಂಟೈನ್ ಪೂರೈಸಿದ್ದಾರೆ. ಅವಧಿ ಮುಗಿದರೂ ಅವರನ್ನು ಇನ್ನೂ ಅಲ್ಲಿಯೇ ಕ್ವಾರಂಟೈನ್ ಮಾಡಲಾಗಿದೆ. ಜಿಲ್ಲಾಡಳಿತ ಸರ್ಕಾರಿ ನಿಯಮ ಪಾಲಿಸಿಲ್ಲ. ಒಂದೆಡೆ ಮನೆಗೆ ಕಳುಹಿಸಿಲ್ಲ. ಇನ್ನೊಂದೆಡೆ ಮನೆಯ ಅಹಾರಕ್ಕೂ ತಡೆ ನೀಡಿದೆ. ಇದರ ವಿರುದ್ಧ ಪ್ರಮೋದ್ ಮಧ್ವರಾಜ್ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಟ್ವೀಟ್ ಮೂಲಕ ದೂರು ನೀಡಿದ್ದಾರೆ.

    ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾಡಳಿತದ, ಆರೋಗ್ಯ ಅಧಿಕಾರಿಗಳು ಬೇಜವಾಬ್ದಾರಿತನದಿಂದ ವರ್ತಿಸುತ್ತಿದ್ದಾರೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಟ್ವಿಟ್ಟರ್ ನಲ್ಲಿ ಗುಡುಗಿದ್ದಾರೆ.

  • ಸುಪ್ರೀಂಕೋರ್ಟ್ ಜೀವಂತವಿದ್ದರೆ ಪೌರತ್ವ ಕಾಯ್ದೆಯನ್ನು ಸಮುದ್ರಕ್ಕೆಸೆಯಲಿ- ಪ್ರಮೋದ್ ಮಧ್ವರಾಜ್

    ಸುಪ್ರೀಂಕೋರ್ಟ್ ಜೀವಂತವಿದ್ದರೆ ಪೌರತ್ವ ಕಾಯ್ದೆಯನ್ನು ಸಮುದ್ರಕ್ಕೆಸೆಯಲಿ- ಪ್ರಮೋದ್ ಮಧ್ವರಾಜ್

    ಉಡುಪಿ: ಸುಪ್ರೀಂಕೋರ್ಟ್ ಜೀವಂತವಿದ್ದರೆ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯನ್ನು ಸಮುದ್ರಕ್ಕೆ ಎಸೆಯಲಿ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕೇಂದ್ರ ಸರ್ಕಾರದ ವಿರುದ್ಧ ಕೆಂಡಕಾರಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನವಿರೋಧಿ, ದೇಶ ವಿರೋಧಿ, ಸಂವಿಧಾನ ವಿರೋಧಿ, ಎನ್‍ಆರ್‍ಸಿ ಹಾಗೂ ಸಿಎಎ ತರುವ ಮೂಲಕ ಬಿಜೆಪಿ ಭಾರತಕ್ಕೆ ಬೆಂಕಿ ಇಡುತ್ತಿದೆ. ಭಾರತದಲ್ಲಿ 130 ಕೋಟಿ ಜನರೂ ಸಮಾನರು. ದೇಶದ ಧರ್ಮೀಯರಲ್ಲಿ ಬೇಧ ಭಾವ ಮಾಡಕೂಡದು. ಸಂವಿಧಾನದಲ್ಲಿ ಧಾರ್ಮಿಕ ವಿಭಜನೆಗೆ ಅವಕಾಶವಿಲ್ಲ ಎಂದು ಹೇಳಿದರು.

    ಈ ಎರಡು ಕಾಯ್ದೆಯ ಮೂಲಕ ಬಿಜೆಪಿ ಈ ದೇಶಕ್ಕೆ ಬೆಂಕಿ ಇಡುತ್ತಿದೆ. ಜನ ಬೀದಿಗಿಳಿದು ಘರ್ಷಣೆಯಲ್ಲಿ ತೊಡಗಿದ್ದಾರೆ. ಬಿಜೆಪಿ ಸರ್ಕಾರ ಆರ್ಥಿಕವಾಗಿ ಭಾರತವನ್ನು ನಿರ್ಣಾಮ ಮಾಡಿಯಾಗಿದೆ. ಇದೀಗ ಬಾಂಗ್ಲಾದೇಶದ ಅರ್ಧದಷ್ಟು ಜಿಡಿಪಿಗೆ ಭಾರತ ಇಳಿದಿದೆ. ಇಂದಿರಾ ಗಾಂಧಿ ಕಟ್ಟಿದ ಬಾಂಗ್ಲಾದೇಶ ಸುಭದ್ರ ಆಗಿದೆ. ಭಾರತದ ಆರ್ಥಿಕ ತಳಹದಿಯೇ ಕುಸಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ನೀಡುವ ಕಾಲ ಬಂದಿದೆ, ಮಹಾನ್ ನಾಯಕರು ಎಂದು ಕರೆಸಿಕೊಂಡವರು ಭಾರತವನ್ನು ಛಿದ್ರ ಛಿದ್ರ ಮಾಡಲು ಹೊರಟಿದ್ದಾರೆ. ಬಿಜೆಪಿಗೆ ಅಧಿಕಾರ ಮಾಡುವ ಹಕ್ಕಿಲ್ಲ, ಸುಪ್ರೀಂ ಕೋರ್ಟ್ ಪೌರತ್ವ ಕಾಯ್ದೆಯನ್ನು ಬದಿಗೆ ಹಾಕಬೇಕು- ಬಿಜೆಪಿಗೆ ನೈತಿಕತೆ ಇದ್ದರೆ ರಾಜೀನಾಮೆ ಕೊಡಬೇಕು ಎಂದು ಮಧ್ವರಾಜ್ ಒತ್ತಾಯಿಸಿದರು.