ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ನಡೆದ ಪ್ರತಿಭಟನೆ ಸಂದರ್ಭ ಪ್ರಮೋದ್ ಮಧ್ವರಾಜ್ ದ್ವೇಷ ಹರಡುವ ಭಾಷಣ ಮಾಡಿದ್ದಾರೆ ಎಂದು ಪೊಲೀಸರ ಸುಮೋಟೋ ಕೇಸು ದಾಖಲಿಸಿದ್ದಾರೆ.
ಮೀನು ಕದ್ದ ಪ್ರಕರಣದಲ್ಲಿ ಐವರು ಮೀನುಗಾರರ ಮೇಲೆ ಪೊಲೀಸರು ಅಟ್ರಾಸಿಟಿ ಕೇಸ್ ಹಾಕಿದ್ದರು. ಬೆಳವಣಿಗೆ ಖಂಡಿಸಿ ಮಲ್ಪೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಸಚಿವ, ಮೊಗವೀರ ಮುಖಂಡ ಪ್ರಮೋದ್ ಅವರು, ಮಹಿಳೆಯನ್ನು ಕಟ್ಟಿಹಾಕಿ ಎರಡು ಏಟು ಕೊಟ್ಟದ್ದನ್ನು ಸಮರ್ಥಿಸಿದ್ದರು. ಕಳ್ಳರನ್ನು ಕಟ್ಟಿ ಹಾಕಲೇಬೇಕು. ಮಚ್ಚಿನಲ್ಲಿ, ಖಡ್ಗದಲ್ಲಿ, ತಲೆವಾರಿನಲ್ಲಿ ಹೊಡೆದಿದ್ದಾ? ಎರಡು ಕೆನ್ನೆಗೆ ಬಾರಿಸಿದ್ದಾರೆ ಎಂದರು.
ಈ ಹೇಳಿಕೆ ಹಿನ್ನೆಲೆಯಲ್ಲಿ ಮಲ್ಪೆ ಪೊಲೀಸರು ಸುಮೋಟೋ ಕೇಸು ದಾಖಲಿಸಿದ್ದಾರೆ. ದ್ವೇಷ ಭಾವನೆಯಿಂದ ಪ್ರಚೋದನಕಾರಿ ಭಾಷಣ ಮಾಡಿದ್ದಾರೆಂದು, ಬಿಎನ್ ಎಸ್ 57, 191 (1)192 ನಂತೆ ಪ್ರಕರಣ ದಾಖಲಿಸಲಾಗಿದೆ. ಸಾರ್ವಜನಿಕವಾಗಿ ಕಟ್ಟಿಹಾಕಿದ್ದು ಸರಿ ಎಂಬುದನ್ನು ಮಧ್ವರಾಜ್ ಸಮರ್ಥಿಸಿದ್ದಾರೆ ಎಂಬ ಹಿನ್ನೆಲೆಯಲ್ಲಿ ಕೇಸ್ ದಾಖಲಾಗಿದೆ.
ವಿಪರೀತ ಜ್ವರ ತಲೆಗೆ ಏರಿದ ಕಾರಣ ಮನೆಯಲ್ಲಿ ಪ್ರಮೋದ್ ಮಧ್ವರಾಜ್ ತೀವ್ರ ಅಸ್ವಸ್ಥರಾದರು. ಕೂಡಲೇ ಮಣಿಪಾಲ ಕೆಎಂಸಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಒಂದು ತಿಂಗಳಿಂದ ನಿರಂತರವಾಗಿ ಪ್ರವಾಸ ಮತ್ತು ಹಲವಾರು ಕಾರ್ಯಕ್ರಮಗಳಿಗೆ ಭಾಗಿಯಾಗುತ್ತಿದ್ದ ಹಿನ್ನೆಲೆಯಲ್ಲಿ ಅನಾರೋಗ್ಯ ಬಾಧಿಸಿರಬಹುದು ಎನ್ನಲಾಗಿದೆ.
ಉಡುಪಿ: ಸಿದ್ದರಾಮಯ್ಯ (Siddaramaiah) ಏಳು ಸಲ ಪಕ್ಷಾಂತರ ಮಾಡಿದ ರಾಜಕಾರಣಿ. ನಾನು ಹುಟ್ಟಿನಿಂದ ಎಂಟು ತಿಂಗಳ ಹಿಂದೆಯವರೆಗೆ ಕಾಂಗ್ರೆಸ್‍ನಲ್ಲಿ ಇದ್ದೆ. ಈಗ ಬಿಜೆಪಿ (BJP) ಸೇರಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಮೋದ್ ಮಧ್ವರಾಜ್ (Pramod Madhwaraj) ವಾಗ್ದಾಳಿ ನಡೆಸಿದ್ದಾರೆ.
ಉಡುಪಿಯಲ್ಲಿ ನಡೆದ ಪ್ರಜಾ ಧ್ವನಿ ಕಾಂಗ್ರೆಸ್ ಸಮಾವೇಶದಲ್ಲಿ ಪ್ರಮೋದ್ ವಿರುದ್ಧ ಕಾಂಗ್ರೆಸ್ (Congress) ನಾಯಕರು ಸಿಡಿದೆದ್ದಿದ್ದರು. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ (D.K Shivakumar) ವಿರುದ್ಧ ಪ್ರಮೋದ್ ಮಧ್ವರಾಜ್ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಈವರೆಗೆ ಏಳು ಬಾರಿ ಪಕ್ಷವನ್ನು ಬದಲಿಸಿದ್ದಾರೆ. ಸಿದ್ದರಾಮಯ್ಯ 1978ರಲ್ಲಿ ರೈತಸಂಘದಲ್ಲಿದ್ದರು. 1983ರಲ್ಲಿ ಭಾರತೀಯ ಲೋಕದಳ, ಸಮಾಜಪಕ್ಷ ಜನತಾದಳ, ಜಾತ್ಯಾತೀತ ಜನತಾದಳ, ಅಹಿಂದ ಸೇರಿಕೊಂಡರು. ಸಿದ್ದರಾಮಯ್ಯ ಅಶಿಸ್ತಿನ ವಾತಾವರಣ ಸೃಷ್ಟಿ ಮಾಡಿ ವಜಾವಾಗಿದ್ದರು. ಹಾಗಾದ್ರೆ, ಬೇರೆ ಪಕ್ಷದಿಂದ ಕಾಂಗ್ರೆಸ್‍ಗೆ ಬರಬೇಡಿ ಎಂದು ಘೋಷಿಸಿ ಎಂದು ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್‌ಗೆ ಪ್ರಮೋದ್ ಮಧ್ವರಾಜ್ ಸವಾಲೆಸೆದಿದ್ದಾರೆ. ಇದನ್ನೂ ಓದಿ: ಯೋಗ್ಯತೆ ಮೀರಿ ನನಗೆ ಕೇಂದ್ರ ಸರ್ಕಾರ ಗೌರವ ನೀಡಿದೆ: ಎಸ್.ಎಂ.ಕೃಷ್ಣ
ಸನ್ನಿವೇಶಕ್ಕೆ ಅನುಗುಣವಾಗಿ ದೇಶದಲ್ಲಿ ಪಕ್ಷಾಂತರ ಸಾಮಾನ್ಯ. ನನ್ನನ್ನು ಅಸಾಮಿ, ಗಿರಾಗಿ ಅಂತ ಹೇಳಿದ್ದಾರೆ. ನಾನು ಸಿದ್ದರಾಮಯ್ಯ ಕ್ಯಾಬಿನೆಟ್‍ನಲ್ಲಿ ಮಂತ್ರಿಯಾಗಿದ್ದೆ. ನನ್ನ ಬಗ್ಗೆಯೇ ಹೀಗೆ ಮಾತನಾಡುವಾಗ, ಜನಸಾಮಾನ್ಯರ ಬಗ್ಗೆ ಸಿದ್ದರಾಮಯ್ಯ ಹೇಗೆ ಮಾತನಾಡಬಹುದು ಆಲೋಚಿಸಿ. ಸಿದ್ದರಾಮಯ್ಯ ವಿರುದ್ಧ ಕೆಟ್ಟದ್ದಾಗಿ ಮಾತನಾಡಲು ಎಲ್ಲರಿಗೂ ಬರುತ್ತದೆ. ತಂದೆ ತಾಯಿ ನನಗೆ ಸಂಸ್ಕಾರ ಸೌಜನ್ಯತೆ ಕಲಿಸಿದ್ದಾರೆ ಹಾಗಾಗಿ ಮಾತನಾಡಲ್ಲ ಎಂದಿದ್ದಾರೆ. ಇದನ್ನೂ ಓದಿ: ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು
ಉಡುಪಿ, ಚಿಕ್ಕಮಗಳೂರು, ಉ.ಕನ್ನಡ ಮೈತ್ರಿ ಸೀಟ್ ಆಗಿತ್ತು. ಸಿದ್ದರಾಮಯ್ಯ ಮೈಸೂರು ಕ್ಷೇತ್ರ ಉಳಿಸಲು ಸ್ವಾರ್ಥ ಸಾಧನೆ ಮಾಡಿದರು. ಜೆಡಿಎಸ್‍ನಲ್ಲಿ ಟಿಕೆಟ್ ಪಡೆಯೋ ಮೊದಲು ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಪರವಾನಿಗೆ ಪಡೆದಿದ್ದೇನೆ. ಸಿದ್ದರಾಮಯ್ಯ ಅವರ ಸುಳ್ಳಿನ ಬಗ್ಗೆ ಆಕ್ಷೇಪ ಇದೆ ಖಂಡಿಸುತ್ತೇನೆ. ಜೆಡಿಎಸ್‌ನಿಂದ ಹಣ ಪಡೆದಿದ್ದಾನೆ ಎಂದು ಆರೋಪಿಸಿದ್ದಾರೆ. ಜೆಡಿಎಸ್‍ನಿಂದ (JDS) ಬಂದ ಫಂಡನ್ನು ಜಿಲ್ಲಾ ಕಾಂಗ್ರೆಸ್ ಪಡೆದಿದೆ ಎಲ್ಲಾ ಹಂಚಿಕೆ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಉಡುಪಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಬಗ್ಗೆ ಹೊಟ್ಟೆ ಕಿಚ್ಚಿದ್ದವರಿಗೆ ಮದ್ದಿಲ್ಲ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ (Pramod Madhwaraj) ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‌ಎಸ್‌ಎಸ್‌ನ ಶಕ್ತಿಯನ್ನು ಸಹಿಸದೆ ಟೀಕೆ ಮಾಡುವವರಿದ್ದಾರೆ. ಆರ್ಎಸ್ಎಸ್ ಬಗ್ಗೆ ಹೊಟ್ಟೆಕಿಚ್ಚಿನಿಂದ ಕೆಲವರು ಮಾತನಾಡುತ್ತಾರೆ. ಹೊಟ್ಟೆಕಿಚ್ಚಿನಿಂದ ಮಾತನಾಡುವವರಿಗೆ ಮದ್ದಿಲ್ಲ. ಅಜ್ಞಾನದಿಂದ ಮಾತನಾಡುವವರು ಆರ್ ಎಸ್‍ಎಸ್ ನ ಜ್ಞಾನ ಪಡೆದುಕೊಳ್ಳಬಹುದು ಎಂದು ಹೇಳುವ ಮೂಲಕ ಸಿದ್ದರಾಮಯ್ಯ (Siddaramaiah), ಎಡಪಂಥೀಯ ಚಿಂತಕರಿಗೆ ಟಾಂಗ್ ಕೊಟ್ಟರು.
ಸಾಂದರ್ಭಿಕ ಚಿತ್ರ
ಆರ್‌ಎಸ್‌ಎಸ್ ದೇಶಭಕ್ತಿ ದೇಶಪ್ರೇಮ ದೇಶ ನಿಷ್ಠೆಯ ಸಂಘಟನೆ. ದೇಶದ ಕಟ್ಟಕಡೆಯ ಬಡವನ ಬಗ್ಗೆ ಸೇವಾ ರೂಪದಲ್ಲಿ ಆರ್‌ಎಸ್‌ಎಸ್ ಕೆಲಸ ಮಾಡುತ್ತಿದೆ. ಕಳೆದ ಐದು ತಿಂಗಳಲ್ಲಿ ನಾನು ಇದನ್ನು ಪ್ರತ್ಯಕ್ಷವಾಗಿ ಕಂಡಿದ್ದೇನೆ. ಸಂಘದ ಹೊರಗೆ ಇದ್ದು ಟೀಕೆ ಮಾಡುವುದು ಸುಲಭ. ದೇಶ ಕಟ್ಟುವ ಕೆಲಸ ಸಂಸ್ಕಾರ ಉದ್ದೀಪಿಸುವ ಕೆಲಸವನ್ನು ಆರ್ಎಸ್ಎಸ್ ಮಾಡುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಹಾಲಿನ ದರ 2 ರೂ. ಹೆಚ್ಚಳ- ವರ್ಷದಲ್ಲಿ 3ನೇ ಬಾರಿಗೆ ದರ ಏರಿಕೆ
ಕಟ್ಟ ಕಡೆಯ ವ್ಯಕ್ತಿಯ ಶಿಕ್ಷಣ ಮತ್ತು ಆರೋಗ್ಯಕ್ಕೆ ಆರ್‌ಎಸ್‌ಎಸ್ ಸೇವೆ ಸಲ್ಲಿಸುತ್ತಿದೆ. ಸಂಘವನ್ನು ತಿಳಿದುಕೊಳ್ಳದೆ ವಿರೋಧ ಮಾತನಾಡಬಾರದು. ನಾನು ಕೂಡ ಹಿಂದೆ ಆರ್ಎಸ್ಎಸ್ ಬಗ್ಗೆ ವಿರೋಧ ಮಾತನಾಡುತ್ತಿದ್ದೆ. ಆರ್‌ಎಸ್‌ಎಸ್ ಇಡೀ ದೇಶಕ್ಕೆ ಸಂಸ್ಕಾರ ಕೊಡುತ್ತಿದೆ. ಅಜ್ಞಾನದಿಂದ ಸಂಘದ ಬಗ್ಗೆ ಟೀಕೆ ಮಾಡುವ ಒಂದು ವರ್ಗ ಇದೆ ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿ ಸೇರಿದ ನಂತರ ಪ್ರಮೋದ್ ಮಧ್ವರಾಜ್, ಆರ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದಾರೆ. ಇಂದು ಆರ್‍ಎಸ್‍ಎಸ್ ಪ್ರಾಥಮಿಕ ಶಿಕ್ಷಾ ವರ್ಗದ ಸಮಾರೋಪದಲ್ಲಿ ಅವರು ಭಾಗಿಯಾಗಿದ್ದರು.
Live Tv
[brid partner=56869869 player=32851 video=960834 autoplay=true]
ಉಡುಪಿ: ಆರ್‌ಎಸ್‌ಎಸ್‌ನ ಶಕ್ತಿಯನ್ನು ಸಹಿಸದೆ ಟೀಕೆ ಮಾಡುವವರಿದ್ದಾರೆ. ಆರ್ಎಸ್ಎಸ್ (RSS) ಬಗ್ಗೆ ಗೊತ್ತಿದ್ದು ಹೊಟ್ಟೆಕಿಚ್ಚಿನಿಂದ ಮಾತನಾಡುವ ಕೆಲವರ ಸಮಸ್ಯೆಗೆ ಮದ್ದಿಲ್ಲ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ (Pramod Madhwaraj) ಹೇಳಿದರು.
ಉಡುಪಿಯ (Udupi) ಪರ್ಕಳದಲ್ಲಿ ನಡೆದ ಆರ್‌ಎಸ್‌ಎಸ್ ಪ್ರಾಥಮಿಕ ಶಿಕ್ಷಾ ವರ್ಗದ ಸಮಾರೋಪದಲ್ಲಿ ಪ್ರಮೋದ್ ಮಧ್ವರಾಜ್ ಭಾಗಿಯಾಗಿ ಕಸರತ್ತುಗಳು, ಯೋಗ ಪಥಸಂಚಲನ ವೀಕ್ಷಿಸಿ ಮಾತನಾಡಿದರು. ಸಂಘದ ಬಗ್ಗೆ ಹೊಟ್ಟೆಕಿಚ್ಚಿನಿಂದ ಮಾತನಾಡುವವರಿಗೆ ಮದ್ದಿಲ್ಲ. ಅಜ್ಞಾನದಿಂದ ಮಾತನಾಡುವವರು RSSನ ಒಳಗೆ ಬಂದು ಜ್ಞಾನ ಪಡೆದುಕೊಳ್ಳಬಹುದು ಎಂದು ಸಲಹೆ ನೀಡಿದರು.
ಸಾಂದರ್ಭಿಕ ಚಿತ್ರ
ಸದಾ RSSನ್ನು ಟೀಕಿಸುವ ಸಿದ್ದರಾಮಯ್ಯ (Siddaramaiah), ಎಡಪಂಥೀಯ ಚಿಂತಕರಿಗೆ ಟಾಂಗ್ ಕೊಟ್ಟ ಅವರು, ಆರ್‌ಎಸ್‌ಎಸ್ ದೇಶಭಕ್ತಿ, ದೇಶಪ್ರೇಮ, ದೇಶ ನಿಷ್ಠೆಯ ಸಂಘಟನೆಯಾಗಿದೆ. ದೇಶದ ಕಟ್ಟಕಡೆಯ ಬಡವನ ಬಗ್ಗೆ ಸೇವಾ ರೂಪದಲ್ಲಿ ಆರ್‌ಎಸ್‌ಎಸ್ ಕೆಲಸ ಮಾಡುತ್ತಿದೆ. ಕಳೆದ ಐದು ತಿಂಗಳಲ್ಲಿ ನಾನು ಇದನ್ನು ಪ್ರತ್ಯಕ್ಷವಾಗಿ ಕಂಡಿದ್ದೇನೆ. ಸಂಘದ ಹೊರಗೆ ಇದ್ದು ಟೀಕೆ ಮಾಡುವುದು ಸುಲಭ ಎಂದು ಕಿಡಿಕಾರಿದರು.
ದೇಶ ಕಟ್ಟುವ ಕೆಲಸ ಸಂಸ್ಕಾರ ಉದ್ದೀಪಿಸುವ ಕೆಲಸವನ್ನು ಆರ್ಎಸ್ಎಸ್ ಮಾಡುತ್ತಿದೆ. ಕಟ್ಟ ಕಡೆಯ ವ್ಯಕ್ತಿಯ ಶಿಕ್ಷಣ ಮತ್ತು ಆರೋಗ್ಯಕ್ಕೆ RSS ಸೇವೆ ಸಲ್ಲಿಸುತ್ತಿದೆ. ಸಂಘವನ್ನು ತಿಳಿದುಕೊಳ್ಳದೆ ವಿರೋಧ ಮಾತನಾಡಬಾರದು. ನಾನು ಕೂಡ ಹಿಂದೆ ಆರ್ಎಸ್ಎಸ್ ಬಗ್ಗೆ ವಿರೋಧ ಮಾತನಾಡುತ್ತಿದ್ದೆ. ಆರ್‌ಎಸ್‌ಎಸ್ ಇಡೀ ದೇಶಕ್ಕೆ ಸಂಸ್ಕಾರ ಕೊಡುತ್ತಿದೆ. ಅಜ್ಞಾನದಿಂದ ಸಂಘದ ಬಗ್ಗೆ ಟೀಕೆ ಮಾಡುವ ಒಂದು ವರ್ಗ ಇದೆ ಎಂದರು. ಇದನ್ನೂ ಓದಿ: ಜಾಗತಿಕ ಹಸಿವು ಸೂಚ್ಯಂಕ – ಪಾಕ್, ಬಾಂಗ್ಲಾ, ಶ್ರೀಲಂಕಾಗಿಂತಲೂ ಕೆಳಗಿನ ಸ್ಥಾನದಲ್ಲಿ ಭಾರತ
ಉಡುಪಿ/ಬೆಂಗಳೂರು: ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್ ಅವರು ಕಾಂಗ್ರೆಸ್‍ಗೆ ರಾಜೀನಾಮೆ ನೀಡಿದ್ದಾರೆ. ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಈ ಹಿಂದೆ ಪ್ರಮೋದ್ ಮಧ್ವರಾಜ್ ಮೀನುಗಾರಿಕಾ ಮತ್ತು ಯುವಜನ ಸಬಲೀಕರಣ ಕ್ರೀಡಾ ಇಲಾಖೆಯ ಮಾಜಿ ಸಚಿವರಾಗಿ ಸೇವೆ ಸಲ್ಲಿದ್ದರು. ಆದರೆ ಈಗ ಪ್ರಮೋದ್ ಮಧ್ವರಾಜ್ ಅವರು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಮತ್ತು ಕೆಪಿಸಿಸಿ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಕುರಿತು ಡಿ.ಕೆ.ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರವನ್ನು ರವಾನೆ ಮಾಡಿದ್ದಾರೆ. ಈ ಪತ್ರದ ಮೂಲಕ ಅವರು ಕಾಂಗ್ರೆಸ್ ನಾಯಕರು, ಕಾರ್ಯಕರ್ತರು, ಮತದಾರರಿಗೆ ಧನ್ಯವಾದವನ್ನು ಸಲ್ಲಿಸಿದ್ದಾರೆ. ಇದನ್ನೂ ಓದಿ: ಡಿಕೆಶಿ ಏನೇ ಮಾಡಿದ್ರು ಅಂಜುವ ಮಗ ನಾನಲ್ಲ: ಯತ್ನಾಳ್
ಬಿಜೆಪಿ ಸೇರ್ಪಡೆ
ಪ್ರಮೋದ್ ಅವರು ಮಧ್ಯಾಹ್ನ ಕಾಂಗ್ರೆಸ್‌ಗೆ ರಾಜೀನಾಮೆ ಕೊಟ್ಟಿದ್ದು, ಸಂಜೆ ಬೆಂಗಳೂರಿನಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಪತ್ರದಲ್ಲಿ ಏನಿದೆ?
ಇತ್ತೀಚೆಗೆ ನನ್ನನ್ನು ಕೆಪಿಸಿಸಿ ಉಪಾಧ್ಯಕ್ಷರನ್ನಾಗಿ ನೇಮಿಸಿದ್ದಕ್ಕಾಗಿ ನಿಮಗೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಈ ಸಂದರ್ಭದಲ್ಲಿ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಈ ಹಿಂದೆ ನನ್ನ ಸಮಯ ಮತ್ತು ದುಡಿದ ಹಣವನ್ನು ಪಕ್ಷಕ್ಕಾಗಿ ವ್ಯಯಿಸಿ ಕಾಂಗ್ರೆಸ್ ಪಕ್ಷವನ್ನು ಕಟ್ಟುವಲ್ಲಿ ನನ್ನ ವಿನಮ್ರ ಕೊಡುಗೆಗಳನ್ನು ನೀವು ಮತ್ತು ಪಕ್ಷವು ಅರಿತುಕೊಂಡಿದೆ. ಅದೇ ರೀತಿ ಕಾಂಗ್ರೆಸ್ ಪಕ್ಷವು ನನ್ನ ಅಧಿಕಾರಾವಧಿಯಲ್ಲಿ ಸರ್ಕಾರದ ವಿವಿಧ ಹುದ್ದೆಗಳನ್ನು ನೀಡುವ ಮೂಲಕ ಪ್ರತಿಫಲವನ್ನು ನೀಡಿದೆ.
ಚುನಾಯಿತ ಪ್ರತಿನಿಧಿಯಾಗಿ ನಾನು ನನ್ನ ಕ್ಷೇತ್ರ, ಜಿಲ್ಲೆ ಮತ್ತು ರಾಜ್ಯಕ್ಕಾಗಿ ನನ್ನ ಸಾಮಥ್ರ್ಯಕ್ಕೆ ತಕ್ಕಂತೆ ಸಮರ್ಪಣಾಭಾವ ಮತ್ತು ಪ್ರಾಮಾಣಿಕತೆಯಿಂದ ಕೆಲಸ ಮಾಡಿದ್ದೇನೆ. ದಕ್ಷ ಸಂಸ್ಥೆ ಸಮೀಕ್ಷೆಯನ್ನು ನಡೆಸಿತು ಮತ್ತು ನಾನು ಕರ್ನಾಟಕ ರಾಜ್ಯದಲ್ಲಿ ಅತ್ಯುತ್ತಮ ಮತ್ತು ನಂಬರ್ 1 ಶಾಸಕನಾಗಿ ಸ್ಥಾನ ಪಡೆದಿದ್ದೆ. ಕಳೆದ ಮೂರು ವರ್ಷಗಳಿಂದ ಉಡುಪಿ ಜಿಲ್ಲಾ ಕಾಂಗ್ರೆಸ್ ಪಕ್ಷದಲ್ಲಿ ರಾಜಕೀಯ ಉಸಿರುಗಟ್ಟುವಿಕೆಗೆ ಕಾರಣವಾದ ಪರಿಸ್ಥಿತಿಯು ನನಗೆ ಕೆಟ್ಟ ಅನುಭವವಾಗಿದೆ ಎಂದು ತಿಳಿಸಲು ವಿಷಾದಿಸುತ್ತೇನೆ.
ಈ ಸಂಗತಿಗಳನ್ನು ನಿಮ್ಮ ಗಮನಕ್ಕೆ ತರಲಾಗಿದೆ ಮತ್ತು ಇತರ ಪಕ್ಷದ ಮುಖಂಡರಿಗೆ ತಿಳಿಸಲಾಗಿದೆ. ಉಡುಪಿ ಜಿಲ್ಲಾ ಕಾಂಗ್ರೆಸ್ ಪಕ್ಷದಲ್ಲಿನ ಪ್ರಚಲಿತ ಪರಿಸ್ಥಿತಿಯ ಬಗ್ಗೆ ನನ್ನ ಅಸಮಾಧಾನವನ್ನು ನಿವಾರಿಸಲು ಪಕ್ಷದಿಂದ ಯಾವುದೇ ಪ್ರಯೋಜನಕಾರಿ ಕ್ರಮಗಳನ್ನು ತೆಗೆದುಕೊಳ್ಳದಿರುವುದನ್ನು ನಾನು ಗಮನಿಸಿದ್ದೇನೆ. ಮೇಲೆ ವಿವರಿಸಿದ ಸಂದರ್ಭಗಳಿಂದಾಗಿ ನಾನು ಕಾಂಗ್ರೆಸ್ ಪಕ್ಷದಲ್ಲಿ ಮುಂದುವರಿಯುವುದು ಮತ್ತು ಇತ್ತೀಚೆಗೆ ನನಗೆ ನಿಯೋಜಿಸಲಾದ ಹೊಸ ಹುದ್ದೆಗೆ ನ್ಯಾಯ ಸಲ್ಲಿಸುವುದು ಅಸಾಧ್ಯವಾಗುವ ಹಂತವನ್ನು ತಲುಪಿದೆ.
ಕೆಪಿಸಿಸಿ ಉಪಾಧ್ಯಕ್ಷ ಸ್ಥಾನವನ್ನು ಸ್ವೀಕರಿಸದಿರಲು ಮತ್ತು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ಈ ಪತ್ರದ ಮೂಲಕ ನಮ್ಮ ಪಕ್ಷದ ಎಲ್ಲ ನಾಯಕರು ಮತ್ತು ಪಕ್ಷದ ಕಾರ್ಯಕರ್ತರಿಗೆ ನನ್ನ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.
ಬಿಜೆಪಿ ಸೇರ್ಪಡೆ ಕಾರ್ಯಕ್ರಮ
ಕೋಲಾರ ಮತ್ತು ಮಂಡ್ಯದ ಪ್ರಮುಖ ನಾಯಕರು ಶನಿವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ಕಾರ್ಯಕ್ರಮ ಖಾಸಗಿ ಹೋಟೆಲ್‍ನಲ್ಲಿ ನಡೆದಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆದಿದೆ.
ಮಾಜಿ ಐಆರ್‍ಎಸ್ ಅಧಿಕಾರಿ ಲಕ್ಷ್ಮಿ ಅಶ್ವಿನ್ ಗೌಡ, ಮಾಜಿ ಸಚಿವ ಎಸ್.ಡಿ.ಜಯರಾಂ ಪುತ್ರ ಅಶೋಕ್ ಜಯರಾಂ ಈ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಜೆಡಿಎಸ್ ತೊರೆದು ಲಕ್ಷ್ಮಿ ಅಶ್ವಿನ್ ಗೌಡ ಮತ್ತು ಅಶೋಕ್ ಜಯರಂ ಸಹ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ.
ನಾಗಮಂಗಲ ಕ್ಷೇತ್ರದಿಂದ ಟಿಕೆಟ್ ಬಯಸಿ ಲಕ್ಷ್ಮಿ ಅಶ್ವಿನ್ ಗೌಡ, ಮಂಡ್ಯ ಕ್ಷೇತ್ರದಿಂದ ಟಿಕೆಟ್ ಬಯಸಿ ಅಶೋಕ್ ಜಯರಾಂ, ಕೋಲಾರದಿಂದ ಟಿಕೆಟ್ ಬಯಸಿರುವ ಮಾಜಿ ಸಚಿವ ವರ್ತೂರು ಪ್ರಕಾಶ್, ಮಾಲೂರು ಕ್ಷೇತ್ರದಿಂದ ಟಿಕೆಟ್ ಬಯಸಿರುವ ಜೆಡಿಎಸ್ ಮಾಜಿ ಶಾಸಕ ಮಂಜುನಾಥ್ ಗೌಡ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ. ಸಂದೇಶ್ ನಾಗರಾಜ್ ಸಹ ಇಂದೇ ಬಿಜೆಪಿ ಸೇರ್ಪಡೆಯಾದರು. ಸಂದೇಶ್ ನಾಗರಾಜ್ ಸಹ ಇಂದೇ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇದನ್ನೂ ಓದಿ: ಕೇಜ್ರಿವಾಲ್ ಓರ್ವ ಅರಾಜಕತೆ ಸೃಷ್ಟಿ ಮಾಡುವ ನಾಯಕ: ಸಂದೀಪ್
ಸದ್ಯದಲ್ಲೇ ಬಿಜೆಪಿ ಸೇರಲಿರುವ ಅಂಬರೀಶ್ ಆಪ್ತ ಸಚ್ಚಿದಾನಂದ ಅವರಿಗೆ ಶ್ರೀರಂಗಪಟ್ಟಣದಲ್ಲಿ ಬಿಜೆಪಿಯ ಟಿಕೆಟ್ ಪಕ್ಕಾ ಎನ್ನಲಾಗುತ್ತಿದೆ. ಸದ್ಯದಲ್ಲೇ ಇವರು ಬೃಹತ್ ಸಮಾವೇಶ ಮಾಡುವ ಮೂಲಕ ಶ್ರೀರಂಗಪಟ್ಟಣದಲ್ಲೇ ಬಿಜೆಪಿ ಸೇರಲಿದ್ದಾರೆ. ಪಕ್ಷ ಸೇರ್ಪಡೆ ಕಾರ್ಯಕ್ರಮ ಹಿನ್ನೆಲೆ ಕಾರ್ಯಕ್ರಮಕ್ಕೆ ಸಿ.ಪಿ.ಯೋಗೀಶ್ವರ್, ಸಚಿವ ಎಸ್.ಟಿ.ಸೋಮಶೇಖರ್, ಸಚಿವ ಗೋಪಾಲಯ್ಯ, ಮಾಲೂರು ಮಂಜುನಾಥ್ ಗೌಡ, ವರ್ತೂರು ಪ್ರಕಾಶ್, ಸಚಿವ ನಾರಾಯಣ ಗೌಡ ಆಗಮಿಸಿದ್ದರು.
ಕಾರ್ಯಕ್ರಮದ ವೇದಿಕೆಯಲ್ಲಿ ಸಿಎಂ, ಸಚಿವರಾದ ಅಶೋಕ್, ಸುಧಾಕರ್, ಸೋಮಶೇಖರ್, ಗೋಪಾಲಯ್ಯ, ನಾರಾಯಣ ಗೌಡ, ಮುನಿರತ್ನ, ಸಂಸದ ಮುನಿಸ್ವಾಮಿ ಉಪಸ್ಥಿತಿಯಲ್ಲಿದ್ದರು.
ಉಡುಪಿ: ಶ್ರೀಕೃಷ್ಣ ಮಠವನ್ನು ಸರ್ಕಾರದ ಅಧೀನಕ್ಕೆ ತೆಗೆದುಕೊಳ್ಳಬೇಕೆಂದು ಕಾಂಗ್ರೆಸ್ ಆಲೋಚಿಸಿತ್ತು. ಆದರೆ ಶ್ರೀ ಕೃಷ್ಣ ಮಠಕ್ಕೆ ತೊಂದರೆಯಾದರೆ ಮೊದಲು ನಾನೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಅಂತ ಹೇಳಿದ್ದೆ ಎಂದು ಕಾಂಗ್ರೆಸ್ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಉಡುಪಿ ಕೃಷ್ಣಮಠದ ರಾಜಾಂಗಣದಲ್ಲಿ ಅದಮಾರು ಪರ್ಯಾಯ ಸಮಾಪನ ಪ್ರಯುಕ್ತ ನಡೆಯುತ್ತಿರುವ ವಿಶ್ವಾರ್ಪಣಂ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾಂಗ್ರೆಸ್ ಮಾತನಾಡಿದರು. ಈ ಸ್ಫೋಟಕ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಮತ್ತು ನಾಯಕರಿಗೆ ಮತ್ತೊಮ್ಮೆ ಇರಿಸುಮುರಿಸು ಆಗಿದೆ. ಇದನ್ನೂ ಓದಿ: ಪಕ್ಷ ಬೇರೆಯಾದ್ರೂ ಗುಣಕ್ಕೆ ಮತ್ಸರವಿಲ್ಲ- ಮೋದಿಯನ್ನು ಹೊಗಳಿದ ಪ್ರಮೋದ್ ಮಧ್ವರಾಜ್
ಮಧ್ವಾಚಾರ್ಯರು ಪ್ರತಿಷ್ಠಾಪಿಸಿದ ಮಠಕ್ಕೆ ಎಂಟುನೂರು ವರ್ಷಗಳ ಇತಿಹಾಸ ಇದೆ. ದೇಶವಿದೇಶಗಳಲ್ಲಿ ಭಕ್ತರನ್ನು ಹೊಂದಿರುವ ಮಠ, ಉಡುಪಿ ಜನರಿಗೊಂದು ಭಾಗ್ಯ. ನಮ್ಮದೇ ಸರ್ಕಾರ ಇದನ್ನು ವಶಪಡಿಸಲು ಮುಂದಾಗಿತ್ತು. ಆಗ ನಾನು ಮಠವನ್ನು ಮುಟ್ಟಿದರೆ ರಾಜೀನಾಮೆ ನೀಡುತ್ತೇನೆ ಎಂದು ಸಿದ್ದರಾಮಯ್ಯನವರಿಗೆ ಹೇಳಿ ಈ ವಿಚಾರಕ್ಕೆ ಫುಲ್ ಸ್ಟಾಪ್ ಹಾಕುವ ಮೂಲಕ ಶಾಸಕನಾಗಿ ಸಣ್ಣ ಸೇವೆ ಮಾಡಿದ್ದೇನೆ ಎಂಬ ತೃಪ್ತಿ ಇದೆ ಎಂದು ಹೇಳಿ ನೆನಪಿಸಿಕೊಂಡಿದ್ದಾರೆ. ಇದನ್ನೂ ಓದಿ: ಬೂಸ್ಟರ್ ಡೋಸ್ ಅಗತ್ಯತೆ ಬಗ್ಗೆ ಅಧ್ಯಯನ ನಡೆಸಲು ಮೋದಿ ಸೂಚನೆ
ಈ ವಿಷಯ ನನ್ನ ಒಳಗೇ ಇತ್ತು. ಇದನ್ನು ಹೇಳುವುದಿಲ್ಲ ಎಂದುಕೊಂಡಿದ್ದೆ. ಆದರೆ ಇವತ್ತು ಹೇಳಬೇಕಾಯಿತು ಎಂದು ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ಜೊತೆ ಅಂತರ ಕಾಯ್ದುಕೊಂಡಿರುವ ಪ್ರಮೋದ್ ಮಧ್ವರಾಜ್, ಪದ್ಮ ಪ್ರಶಸ್ತಿ ನೀಡುವ ಸಂದರ್ಭ ಪ್ರಧಾನಿ ಮೋದಿಯನ್ನು ಹಾಡಿ ಹೊಗಳಿದ್ದರು. ಆಗಲೂ ರಾಜಕೀಯ ವಲಯದಲ್ಲಿ ಚರ್ಚೆಗೆ ಈಡಾಗಿದ್ದರು. ಈಗ ಮತ್ತೆ ತಮ್ಮ ಕಾಂಗ್ರೆಸ್ ಸರ್ಕಾರದ ನಡೆಯನ್ನು ಕೆದಕುವ ಮೂಲಕ ಸುದ್ದಿಯಾಗಿದ್ದಾರೆ. ಇದನ್ನೂ ಓದಿ:ಟೋಕನೈಸೇಶನ್ ಜಾರಿ 6 ತಿಂಗಳು ವಿಳಂಬ: RBI
ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರನ್ನು ಕಾಂಗ್ರೆಸ್ ನಾಯಕ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬಹಿರಂಗವಾಗಿ ಗುಣಗಾನ ಮಾಡಿದ್ದಾರೆ. ಈ ವಿಚಾರ ಕರಾವಳಿ ಕಾಂಗ್ರೆಸ್ಸಿನಲ್ಲಿ ಚರ್ಚೆಗೆ ಕಾರಣವಾಗಿದೆ. ಬಿಜೆಪಿ ಕಾಂಗ್ರೆಸ್ ವಾಟ್ಸಾಪ್ ಗ್ರೂಪಲ್ಲಿ ಪರ ವಿರೋಧ ಚರ್ಚೆ ಶುರುವಾಗಿದೆ.
ವರ್ಷದ ಹಿಂದೆ ವೃಂದಾವನಸ್ಥರಾದ ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿಯವರಿಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗಿದೆ. ದೆಹಲಿಯಲ್ಲಿ ಪ್ರಶಸ್ತಿ ಸ್ವೀಕರಿಸಿದ ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಉಡುಪಿಗೆ ಆಗಮಿಸಿದ್ದಾರೆ. ಗುರುವಾರ ಸಂಜೆ ಪ್ರಶಸ್ತಿ ಮತ್ತು ಶ್ರೀಗಳ ಸ್ವಾಗತ ಸಮಾರಂಭದಲ್ಲಿ ಅಷ್ಟಮಠಾಧೀಶರು, ಜನಪ್ರತಿನಿಧಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.
ಈ ಸಂದರ್ಭ ನಡೆದ ಸಭೆಯಲ್ಲಿ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಭಾಗಿಯಾಗಿ ಭಾಷಣ ಮಾಡಿದರು. ಪದ್ಮವಿಭೂಷಣ ಇವತ್ತು ಸ್ವಾಮೀಜಿಯವರನ್ನು ಹುಡುಕಿಕೊಂಡು ಬಂದಿದೆ. ಹಿಂದೆ ಎಲ್ಲಾ ಅರ್ಜಿ ಹಾಕಿದವರಿಗೆ ಪ್ರಶಸ್ತಿ ಕೊಡುವ ಕ್ರಮ ಇತ್ತು. ಇವತ್ತು ನರೇಂದ್ರ ಮೋದಿಯವರ ಸರ್ಕಾರ ಬಂದ ಮೇಲೆ ಪ್ರಶಸ್ತಿಯನ್ನು ಹುಡುಕಿಕೊಂಡು ಹೋಗುವಂತಹ ಸಂದರ್ಭ. ಪಕ್ಷ ಬೇರೆಯಾದರೂ ಗುಣಕ್ಕೆ ಮತ್ಸರ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ನಮ್ಮ ಕುಟುಂಬಕ್ಕೆ MLC ಟಿಕೆಟ್ ಕೊಡಬೇಕು ಅಂತ ಹೇಳಿಲ್ಲ, ಕೇಳಿಲ್ಲ: ಪ್ರಜ್ವಲ್ ರೇವಣ್ಣ
ನಾನು ವಿರೋಧ ಪಕ್ಷದಲ್ಲಿ ಇರುವವನು. ಆದರೂ ಅವರ ಒಳ್ಳೆಯ ಕೆಲಸಗಳನ್ನು ಶ್ಲಾಘಿಸಲೇಬೇಕು ಎಂದರು. ಈ ಮಾತಿನ ತುಣುಕು ಕರಾವಳಿಯಲ್ಲಿ ಚರ್ಚೆಗೀಡಾಗಿದೆ. ಉಡುಪಿಯ ಕಾಂಗ್ರೆಸ್ ಬಿಜೆಪಿ ವಾಟ್ಸಪ್ ಗ್ರೂಪ್ ಗಳಲ್ಲಿ ವೀಡಿಯೋ ಓಡಾಡುತ್ತಿದೆ. ಸಭೆಯಲ್ಲಿ ಪರ್ಯಾಯ ಅದಮಾರು ಶ್ರೀ, ಪಲಿಮಾರು ಹಿರಿಯ ಕಿರಿಯ ಸ್ವಾಮೀಜಿ, ಸೋದೆ ಸ್ವಾಮೀಜಿ, ಉಡುಪಿ ಶಾಸಕ ರಘುಪತಿ ಭಟ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ರಾಷ್ಟ್ರೀಯ ಮಹಿಳಾ ಆಯೋಗ ಸದಸ್ಯೆ ಶ್ಯಾಮಲಾ ಕುಂದರ್ ವೇದಿಕೆಯಲ್ಲಿ ಇದ್ದರು.
ಉಡುಪಿ: ರಾಜ್ಯ ಬಿಜೆಪಿಯಲ್ಲಿ ಒಳ ಬೇಗುದಿ ಜೋರಾಗಿದೆ. ನಾಯಕತ್ವ ಬದಲಾವಣೆ ಚರ್ಚೆ ಬಿಸಿಬಿಸಿಯಾಗಿರುವಾಗಲೇ ಉಡುಪಿಯಲ್ಲಿ ಎಲ್ಲರ ಗಮನ ಸೆಳೆಯುವ ರಾಜಕೀಯ ವಿದ್ಯಾಮಾನವೊಂದು ನಡೆದಿದೆ.
ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಪಾಳುಬಿದ್ದ ಕೃಷಿಭೂಮಿಗೆ ಕಾಯಕಲ್ಪ ನೀಡುವ ಕೆಲಸ ನಡೆಯುತ್ತಿದೆ. ಹಡಿಲು ಭೂಮಿಯಲ್ಲಿ ಬೆಳೆ ಬೆಳೆಸುವ ಕೇದಾರೋತ್ಥಾನ ಅಭಿಯಾನದ ಹೆಸರಲ್ಲಿ ಸುಮಾರು 2,000 ಎಕರೆಗಳಷ್ಟು ಹೆಚ್ಚಿನ ಭತ್ತದ ಬೇಸಾಯ ನಡೆಯುತ್ತಿದೆ.
ಇತ್ತೀಚೆಗೆ ಬಿ.ಆರ್ ಶೆಟ್ಟಿ ಸರ್ಕಾರಿ ಆಸ್ಪತ್ರೆ ವಿಚಾರದಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಇತರರು ಹಡಿಲು ಬಿದ್ದ ಅಭಿವೃದ್ಧಿ ಕಾರ್ಯಗಳ ಕಡೆ ಗಮನಹರಿಸುವಂತೆ ಶಾಸಕರಿಗೆ ಚಿವುಟಿದ್ದರು. ಇದೀಗ ಅದೇ ಹಡಿಲು ಗದ್ದೆ ಅಭಿಯಾನ ಇಬ್ಬರು ರಾಜಕೀಯ ವಿರೋಧಿಗಳನ್ನು ಒಂದು ಮಾಡಿದೆ.
ಮಾಜಿ ಸಚಿವ ಪ್ರಮೋದ್ ಉಪ್ಪೂರು ಗ್ರಾಮಸ್ಥ. ಶಾಸಕ ರಘುಪತಿ ಭಟ್ ಮತ್ತು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜಂಟಿಯಾಗಿ ಭತ್ತದ ಗದ್ದೆ ನಾಟಿ ಮಾಡಿದ್ದಾರೆ. ಉದ್ಘಾಟನೆ ನಂತರ ಕೆಲಕಾಲ ಭತ್ತದ ಪೈರಿನ ನಾಟಿ ಕಾರ್ಯದಲ್ಲಿ ತೊಡಗಿಸಿಕೊಂಡರು. ರಾಜಕೀಯ ಕ್ಷೇತ್ರದಲ್ಲಿ ಇವರಿಬ್ಬರು ಪ್ರತಿಸ್ಪರ್ಧಿಗಳಾದರೂ ಬಾಲ್ಯದಲ್ಲಿ ಕ್ಲಾಸ್ ಮೇಟ್ಸ್ ಆಗಿದ್ದರು.
– ಉಡುಪಿ ‘ಕೈ’ ಅಂಗಳದಲ್ಲಿ ಅಸಮಾಧಾನ
– ಕುಂದಾಪುರದ ಭಕ್ತರು ಹೇಳಿದ್ದ ಹರಕೆ ತೀರಿಸಿದ ಡಿಕೆಶಿ
– ರಾಜ್ಯಾಧ್ಯಕ್ಷರ ಕಾರ್ಯಕ್ರಮಕ್ಕೆ ಮಧ್ವರಾಜ್ ಗೈರು
ಉಡುಪಿ: ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ಇಂದು ಮೊದಲ ಉಡುಪಿ ಪ್ರವಾಸ ಕೈಗೊಂಡಿದ್ದಾರೆ. ಸಮಾವೇಶದ ಜೊತೆ ಸಾಲು ಸಾಲು ದೇಗುಲಗಳ ದರ್ಶನ ಮಾಡಿದ್ದಾರೆ. ತಿಹಾರ್ ಜೈಲಿನಲ್ಲಿದ್ದಾಗ ಭಕ್ತರು ಹೇಳಿದ್ದ ಹರಕೆ ತೀರಿಸಿದ್ದಾರೆ. ಇದೇ ವೇಳೆ ಡಿ.ಕೆ.ಶಿವಕುಮಾರ್ ಎದುರೇ ಕಾಂಗ್ರೆಸ್ ಅಂಗಳದಲ್ಲಿನ ಅಸಮಾಧಾನ ಪ್ರದರ್ಶನವಾಯ್ತು. ವೇದಿಕೆಯ ಮೇಲೆ ಮಾತನಾಡುವಾಗ ಚಾಡಿ ಹೇಳೋದು ಬಿಡಿ, ನಾನಂತೂ ಕೇಳಲ್ಲ ಎಂದು ಎಲ್ಲ ನಾಯಕರಿಗೆ ಚಾಟಿ ಬೀಸಿದರು.
ಶನಿವಾರ ರಾತ್ರಿ ಉಡುಪಿಗೆ ಆಗಮಿಸಿದ ಡಿಕೆಶಿ ಕಮಲಶಿಲೆ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದರು. ಇಂದು ಬೆಳಗ್ಗೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ಕೊಟ್ಟು ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ. ಕೊಲ್ಲೂರು ಮೂಕಾಂಬಿಕೆಗೆ ನಡೆಯುವ ಉತ್ಸವದಲ್ಲಿ ಡಿಕೆಶಿ ಭಾಗಿಯಾದರು. ದಾರಿ ನಡುವೆ ಮಾರಣಕಟ್ಟೆ ಬ್ರಹ್ಮ ಲಿಂಗೇಶ್ವರ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಕುಂದಾಪುರ ಭಕ್ತರ ಹರಕೆ: ಐಟಿ ದಾಳಿ ನಂತರ ಡಿಕೆಶಿ ತಿಹಾರ್ ಜೈಲಿನಲ್ಲಿದ್ದ ವೇಳೆ ಪಕ್ಷದ ಕೆಲ ಕಾರ್ಯಕರ್ತರು ಹರಕೆ ಹೊತ್ತಿದ್ದರು. ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ಕಮಲಶಿಲೆ ದೇವಸ್ಥಾನಕ್ಕೆ ಭೇಟಿ ನೀಡಿ ಹರಕೆ ತೀರಿಸಿದರು. ಅಲ್ಲೇ ಭೋಜನ ಪ್ರಸಾದ ಸ್ವೀಕರಿಸಿದರು. ಈ ಬಗ್ಗೆ ಮಾತನಾಡಿದ ಡಿಕೆಶಿ ಸಂಕಷ್ಟದ ಕಾಲದಲ್ಲಿ ಸಾಕಷ್ಟು ಜನ ನನಗೆ ಬೆಂಬಲವಾಗಿ ನಿಂತಿದ್ದಾರೆ. ಪ್ರತಿಭಟನೆಗಳನ್ನು ನಡೆಸಿದ್ದಾರೆ. ದೇವರಿಗೆ ಹರಕೆ ಹೊತ್ತಿದ್ದಾರೆ ಅವರೆಲ್ಲರಿಗೂ ನಾನು ಚಿರಋಣಿ ಎಂದರು.
ಇಂದು ಬೆಳಗ್ಗೆ ಕೊಲ್ಲೂರು ಮುಕಾಂಬಿಕಾ ದರ್ಶನ ಕೈಗೊಂಡರು. ಯಾವುದೇ ಚಂಡಿಕಾ ಹೊಮ ನಡೆಸದ ಡಿಕೆ ಶಿವಕುಮಾರ್ ದೇವಾಲಯದ ರಥೋತ್ಸವದಲ್ಲಿ ಭಾಗಿಯಾದರು. ದೇವಾಲಯದ ವತಿಯಿಂದ ಗೌರವ ಪ್ರಸಾದ ಸ್ವೀಕರಿಸಿದರು.
ಪ್ರಮೋದ್ ಮಧ್ವರಾಜ್ ಗೈರು: ಕೆಪಿಸಿಸಿ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಉಡುಪಿ ಜಿಲ್ಲೆಗೆ ಅಧಿಕಾರ ವಹಿಸಿಕೊಂಡು ಮೊದಲ ಬಾರಿಗೆ ಭೇಟಿ ಕೊಟ್ಟಿದ್ದಾರೆ. ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್‍ನ ಭಿನ್ನಮತ ಮತ್ತೆ ಪ್ರದರ್ಶನಗೊಂಡಿದೆ. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ರಾಜ್ಯಾಧ್ಯಕ್ಷರ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ರಾಜ್ಯಾಧ್ಯಕ್ಷರು ಜಿಲ್ಲೆಗೆ ಪ್ರಥಮ ಬಾರಿ ಆಗಮಿಸಿದ್ದರೂ ಪ್ರಮೋದ್ ಮಧ್ವರಾಜ್ ಶುಭಕೋರಿ ಒಂದೇ ಒಂದು ಕಟೌಟ್ ಜಿಲ್ಲೆಯಲ್ಲಿ ಕಾಣಿಸಲಿಲ್ಲ.
ಉಡುಪಿ ಬಣ ರಾಜಕೀಯ: ಸಮಾವೇಶ ನಡೆಯುವ ಸಭಾಂಗಣದ ಹೊರಗೆ ಪ್ರಮೋದ್ ಮಧ್ವರಾಜ್ ಬೆಂಬಲಿಗರು ಪೆಂಡಾಲ್ ಹಾಕಿ ಮೌನ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದ್ದರು. ಡಿಕೆಶಿ ಸಮಾವೇಶಕ್ಕೆ ಬಂದಿಳಿಯುತ್ತಿದ್ದಂತೆ ಉಡುಪಿಯ ಬಣ ರಾಜಕೀಯ ಜಗಜ್ಜಾಹೀರಾಯಿತು. ಸಭಾಂಗಣದ ಆವರಣದಲ್ಲಿ ವಿವಿಧ ಬಣದ ಮುಖಂಡರು, ಕಾರ್ಯಕರ್ತರು ಡಿಕೆಶಿ ಅವರ ಮುಂದೆ ಕಾಣಿಸಿಕೊಳ್ಳಲು ಹರಸಾಹಸ ಪಡುತ್ತಿದ್ದರು. ಜಿಲ್ಲಾ ಕಾಂಗ್ರೆಸ್, ಬ್ಲಾಕ್ ಕಾಂಗ್ರೆಸ್, ಯುವ ಕಾಂಗ್ರೆಸ್, ಮಧ್ವರಾಜ್ ಬಣ, ಎನ್ ಎಸ್ ಯುಐ, ಸೇವಾದಳ, ಹೀಗೆ ಹಲವು ಗುಂಪುಗಳು ಡಿಕೆಶಿ ಅವರನ್ನು ಅಕ್ಷರಶಃ ಎಳೆದಾಡಿದರು.
ಮೌನ ಪ್ರತಿಭಟನೆ ನಡೆಸಲು ಪೆಂಡಾಲ್ ಹಾಕಲಾಗಿತ್ತು. ಈ ಪೆಂಡಾಲ್ ಗೆ ಡಿಕೆಶಿ ಪ್ರವೇಶಿಸಿದರು. ಸಣ್ಣ ಮಾತುಕತೆ ಮಾಡಿ ಪರಿಸ್ಥಿತಿ ತಿಳಿಗೊಳಿಸಿ ಸಮಾವೇಶ ಜಾಗಕ್ಕೆ ಕರೆದೊಯ್ದರು.
ಚಾಡಿ ಹೇಳೋದು ಬಿಡಿ: ಸಮಾವೇಶ ಉದ್ಘಾಟಿಸಿ ಮಾತನಾಡಿದ ಡಿಕೆ ಶಿವಕುಮಾರ್, ನನ್ನಿಂದಲೇ ಪಕ್ಷ ಅಂತ ಅಂದುಕೊಂಡಿದ್ದರೆ ಬಿಟ್ಟು ಬಿಡಿ. ಬ್ಲ್ಯಾಕ್ ಮೇಲ್ ಮಾಡಬಹುದು ಅಂತ ಭಾವಿಸಿದ್ರೆ ಅದು ಭ್ರಮೆ. ಯಾರಾದ್ರೂ ಪಕ್ಷ ಬಿಟ್ಟು ಹೋಗುವವರಿದ್ರೆ ಗೌರವವಾಗಿ ಕಳಸಿಕೊಡೋಣ. ಯಾರೂ ಕೂಡಾ ಪರ್ಮನೆಂಟ್ ಅಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಇರೋದು ಸೌಭಾಗ್ಯ. ಮೊದಲು ಶಿಸ್ತು ಬೇಕು, ಅಧಿಕಾರ ಎಲ್ಲರಿಗೂ ಸಿಗುತ್ತೆ ಜಿಲ್ಲೆಯಲ್ಲಿ ಒಬ್ರೂ ಶಾಸಕರಿಲ್ಲ ಕಾರ್ಯಕರ್ತರು ಏನ್ ಮಾಡ್ಬೇಕು? ಎಲ್ಲಿ ತ್ಯಾಗ, ಶ್ರಮ ಇಲ್ಲವೋ ಅಲ್ಲಿ ಫಲ ಇಲ್ಲ. ಹಿಂದೆ ಆಗಿದ್ದನ್ನೆಲ್ಲ ಮರೆತುಬಿಡಿ. ಚಾಡಿ ಹೇಳೋದು ಬಿಡಿ, ನಾನಂತೂ ಯಾವ ಚಾಡಿನೂ ಕೇಳಲ್ಲ ಅಂತ ಭಿನ್ನಮತ ಮಾಡುವ ಎಲ್ಲಾ ನಾಯಕರಿಗೆ ಡಿಕೆಶಿ ಚಾಟಿ ಬೀಸಿದರು.