Tag: Pramod Tiwari

  • ರಾಹುಲ್‌ ಗಾಂಧಿ ಪ್ರಧಾನಿಯಾದ ದಿನ ಪಿಒಕೆ ಭಾರತದ ಭಾಗವಾಗಲಿದೆ: ʻಕೈʼ ಸಂಸದ ಪ್ರಮೋದ್ ತಿವಾರಿ

    ರಾಹುಲ್‌ ಗಾಂಧಿ ಪ್ರಧಾನಿಯಾದ ದಿನ ಪಿಒಕೆ ಭಾರತದ ಭಾಗವಾಗಲಿದೆ: ʻಕೈʼ ಸಂಸದ ಪ್ರಮೋದ್ ತಿವಾರಿ

    ನವದೆಹಲಿ: ರಾಹುಲ್ ಗಾಂಧಿಯವರು (Rahul Gandhi) ಪ್ರಧಾನಿಯಾದ ದಿನವೇ ಪಿಒಕೆ ಭಾರತದ ಭಾಗವಾಗಲಿದೆ ಎಂದು ಕಾಂಗ್ರೆಸ್ ಸಂಸದ ಪ್ರಮೋದ್ ತಿವಾರಿ ಹೇಳಿದ್ದಾರೆ. ಈ ಮೂಲಕ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿಯವರ ಹೇಳಿಕೆಯನ್ನು ಅವರು ಬೆಂಬಲಿಸಿದ್ದಾರೆ.

    ರಾಹುಲ್ ಗಾಂಧಿಯವರು ಧೈರ್ಯಶಾಲಿ, ದೃಢ ನಿಶ್ಚಯದ ನಾಯಕ, ಆ ನಂಬಿಕೆ ನನ್ನಲ್ಲಿ ಇದೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗಿನ ‘ಭಾರತ್ ಜೋಡೋ ಯಾತ್ರೆ’ಯ ಮೂಲಕ ಅವರು ತಮ್ಮ ಇಚ್ಛಾಶಕ್ತಿಯನ್ನು ಪ್ರದರ್ಶಿಸಿದ್ದಾರೆ. ರಾಷ್ಟ್ರದ ಬಗ್ಗೆ ಅವರ ಬದ್ಧತೆ ಗಮನಾರ್ಹವಾದದ್ದು ಎಂದು ಬಣ್ಣಿಸಿದ್ದಾರೆ.

    ರಾಹುಲ್‌ ಅವರು ಈ ದೇಶವನ್ನು ಮುನ್ನಡೆಸುವ ದಿನ ಪಿಒಕೆ ವಿಮೋಚನೆಗೊಂಡು ಭಾರತದ ಭಾಗವಾಗುತ್ತದೆ. ಇದು ಸಂಭವಿಸುತ್ತದೆ ಎಂದು ನಾನು ಸಂಪೂರ್ಣವಾಗಿ ನಂಬುತ್ತೇನೆ ಎಂದು ಅವರು ಒತ್ತಿ ಹೇಳಿದ್ದಾರೆ.

    ಹೈದರಾಬಾದಿನ ನಿಜಾಮ್‌ಪೇಟೆಯಲ್ಲಿ ನಡೆದ ಕಾಂಗ್ರೆಸ್‌ನ ‘ಜೈ ಹಿಂದ್ ಯಾತ್ರೆ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ರೇವಂತ್ ರೆಡ್ಡಿಯವರು ಪಾಕಿಸ್ತಾನದ ವಿರುದ್ಧದ ಮಿಲಿಟರಿ ಕಾರ್ಯಾಚರಣೆ ಸಮಯದಲ್ಲಿ ಮೋದಿ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿದ್ದರು. ಕದನ ವಿರಾಮ ಘೋಷಿಸುವ ಮೊದಲು ಸರ್ವಪಕ್ಷ ಸಭೆಯನ್ನು ಏಕೆ ಕರೆಯಲಿಲ್ಲ? ದಾಳಿಗೆ ಮೊದಲು ಒಂದು ಸಭೆ ನಡೆಸಲಾಗಿತ್ತು. ಅವುಗಳನ್ನು ಕೊನೆಗೊಳಿಸುವ ಮೊದಲು ಏಕೆ ಕರೆಯಲಿಲ್ಲ? ಎಂದು ರೆಡ್ಡಿ ಪ್ರಶ್ನಿಸಿದ್ದರು. ಅಲ್ಲದೇ ರಾಹುಲ್‌ ಗಾಂಧಿ ಪ್ರಧಾನಿಯಾದರೆ ಪಾಕ್‌ ಆಕ್ರಮಿತ ಕಾಶ್ಮೀರ ಭಾರತದ ಭಾಗ ಆಗಲಿದೆ ಎಂದಿದ್ದರು. ಇದರ ಬೆನ್ನಲ್ಲೇ ತಿವಾರಿಯವರು ಹೇಳಿಕೆ ನೀಡಿದ್ದಾರೆ.

  • ದೇವಸ್ಥಾನದ ಮೇಲೆ ನಿರ್ಮಾಣವಾದ ಯಾವುದೇ ಮಸೀದಿಯನ್ನೂ ಬಿಡುವುದಿಲ್ಲ, ಎಲ್ಲವನ್ನೂ ಕೆಡವುತ್ತೇವೆ: ಬಿಜೆಪಿ ನಾಯಕ

    ದೇವಸ್ಥಾನದ ಮೇಲೆ ನಿರ್ಮಾಣವಾದ ಯಾವುದೇ ಮಸೀದಿಯನ್ನೂ ಬಿಡುವುದಿಲ್ಲ, ಎಲ್ಲವನ್ನೂ ಕೆಡವುತ್ತೇವೆ: ಬಿಜೆಪಿ ನಾಯಕ

    ಲಕ್ನೋ: ವಾರಣಾಸಿ ನ್ಯಾಯಾಲಯವು ಇತ್ತೀಚಿಗೆ ಜ್ಞಾನವ್ಯಾಪಿ ಮಸೀದಿ ಸಂಕೀರ್ಣ ವೀಡಿಯೋ ಗ್ರಾಫಿಕ್ ಸಮೀಕ್ಷೆಗೆ ಆದೇಶ ನೀಡಿದೆ. ಇದು ಕಾಂಗ್ರೆಸ್ ಹಾಗೂ ಆಡಳಿತ ಪಕ್ಷ ಬಿಜೆಪಿ ನಡುವೆ ವಾಕ್ಸಮರ ಕಾರಣವಾಗಿದೆ. ಈ ಬೆನ್ನಲ್ಲೇ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಸಂಗೀತ್ ಸೋಮ್ ನೀಡಿರುವ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದೆ.

    Sangeet som

    ವಾರಾಣಾಸಿಯ ಪ್ರಸಿದ್ಧ ಕಾಶಿ ವಿಶ್ವನಾಥ ದೇಗುಲದ ಪಕ್ಕದಲ್ಲೇ ಇರುವ ಜ್ಞಾನವಾಪಿ ಮಸೀದಿಯನ್ನು ಬಾಬ್ರಿ ಮಸೀದಿಯಂತೆ ಕೆಡವಲಾಗುವುದು. ಅಂತಹ ಯಾವುದೇ ಮಸೀದಿಯನ್ನು ಬಿಡುವುದಿಲ್ಲ. ಎಲ್ಲವನ್ನೂ ಕೆಡವುತ್ತೇವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.  ಇದನ್ನೂ ಓದಿ: ಲಿವ್ ಇನ್ ರಿಲೇಶನ್‍ಶಿಪ್‍ನಲ್ಲಿದ್ದು ಮದುವೆ ಅಂದಾಗ ಮನೆಯಿಂದ ಹೊರಹಾಕ್ದ!

    ಮೀರತ್‌ನಲ್ಲಿ ನಡೆದ ಸಮಾರಂಭವೊಂದರಲ್ಲಿ ಮಾತನಾಡಿದ ಸಂಗೀತ್ ಸೋಮ್, 1992ರಲ್ಲಿ ಬಾಬರಿ ಮಸೀದಿಯನ್ನು ಧ್ವಂಸಗೊಳಿಸಲಾಯಿತು. ಈಗ ಜ್ಞಾನವ್ಯಾಪಿ ಮಸೀದಿಯ ಸರದಿ. 2022ರಲ್ಲಿ ನಾವು ಈ ಮಸೀದಿಯನ್ನು ಕೆಡವುತ್ತೇವೆ ಎಂದಿದ್ದಾರೆ.

    Sangeet som (1)

    ಮುಸ್ಲಿಂ ದಾಳಿಕೋರರು ದೇವಾಲಯವನ್ನು ಕೆಡವಿ ಮಸೀದಿಯನ್ನು ನಿರ್ಮಿಸಿದ್ದಾರೆ. ಅದನ್ನು ಹಿಂಪಡೆಯುವ ಸಮಯ ಈಗ ಬಂದಿದೆ. ಬಾಬರಿ ಮಸೀದಿ ಕೆಡವಿದ ದಿನವೇ ಮುಸ್ಲಿಮರಿಗೆ ಇದು ಗೊತ್ತಿರಬೇಕಿತ್ತು. ದೇಶವು ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂಬುದು ಅವರಿಗೆ ತಿಳಿದಿರಬೇಕಿತ್ತು. ನಾವು ಅಂತಹ ಯಾವುದೇ ಮಸೀದಿಯನ್ನು ಬಿಡುವುದಿಲ್ಲ, ಎಲ್ಲವನ್ನೂ ಕೆಡವುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಎರಡೇ ದಿನದಲ್ಲಿ ಸಿಕ್ಸ್ ಪ್ಯಾಕ್ – ವೀಡಿಯೋ ನೋಡಿ ಶಾಕ್ ಆದ ನೆಟ್ಟಿಗರು

    ಇದು 1992ರ ಯುಗವಲ್ಲ, 2022ರ ಯುಗ ದೇಶದ ಯುವಶಕ್ತಿ ಅಂದಿಗಿಂತಲೂ 2 ಪಟ್ಟು ಹೆಚ್ಚಾಗಿದೆ. ಜೊತೆಗೆ ಇದು ಮತ್ತೊಂದು ನಿರ್ಧಾರ ಕೈಗೊಳ್ಳಲು ಉತ್ತಮ ನಿರ್ಧಾರ ಎಂದು ಕರೆ ನೀಡಿದ್ದಾರೆ.

    bjp mla sangeet som

    ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ವಕ್ತಾರ ಸುರೇಂದ್ರ ರಜಪೂತ್, ಸಮಾಜದಲ್ಲಿ ಅಶಾಂತಿ ಮತ್ತು ವಿಭಜನೆಯನ್ನು ಸೃಷ್ಟಿಸಲು ಇದು ಬಿಜೆಪಿಯ ನಿಖರವಾದ ಗೇಮ್‌ಪ್ಲಾನ್. ಅದಕ್ಕಾಗಿಯೇ ಜ್ಞಾನವ್ಯಾಪಿ ಹಾಗೂ ತಾಜ್‌ಮಹಲ್ ವಿಷಯವನ್ನು ಎತ್ತಲಾಗಿದೆ. ಇಂತಹ ಹೇಳಿಕೆಗಳಿಂದ ಸಮಾಜಕ್ಕೆ ಹಾನಿಯಾಗುತ್ತಿದೆ. ನಾವು ಈಗಾಗಲೇ ತುಂಬಾ ಅಪಾಯಕಾರಿ ಸನ್ನಿವೇಶಕ್ಕೆ ಹೋಗುತ್ತಿದ್ದೇವೆ ಎಂಬುದನ್ನು ಎಚ್ಚೆತ್ತುಕೊಳ್ಳಬೇಕಾಗಿದೆ ಎಂದಿದ್ದಾರೆ.