Tag: Pranab Mohanty

  • ಧರ್ಮಸ್ಥಳ ಕೇಸ್‌| ದಾರಿ ಬಿಡಿ ಮುಂದಕ್ಕೆ ಹೋಗಬೇಕು: ಪ್ರಣಬ್‌ ಮೊಹಂತಿ

    ಧರ್ಮಸ್ಥಳ ಕೇಸ್‌| ದಾರಿ ಬಿಡಿ ಮುಂದಕ್ಕೆ ಹೋಗಬೇಕು: ಪ್ರಣಬ್‌ ಮೊಹಂತಿ

    ಬೆಂಗಳೂರು: ದಾರಿ ಬಿಡಿ ನಾನು ಮುಂದಕ್ಕೆ ಹೋಗಬೇಕು ಎಂದಷ್ಟೇ ಹೇಳಿ ಯಾವುದೇ ಪ್ರತಿಕ್ರಿಯೆ ನೀಡದೇ ಐಪಿಎಸ್‌ ಅಧಿಕಾರಿ ಪ್ರಣಬ್ ಮೊಹಂತಿ (Pranab Mohanty) ತೆರಳಿದರು.

    ಇಂದು ವಿಧಾನಸೌಧದಲ್ಲಿ ಮಧ್ಯಾಹ್ನ 12 ಗಂಟೆಗೆ ಗೃಹ ಸಚಿವ ಪರಮೇಶ್ವರ್‌ (Parameshwar) ನೇತೃತ್ವದಲ್ಲಿ ಫೇಕ್‌ ನ್ಯೂಸ್‌ (Fake News) ಮತ್ತು ಆನ್‌ಲೈನ್‌ ಬೆಟ್ಟಿಂಗ್‌ ವಿರುದ್ಧ ಕಾನೂನು ತರಲು ಮಹತ್ವದ ಸಭೆ ನಡೆಯಿತು.

    ಈ ಸಭೆಯಲ್ಲಿ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ. ಸಲೀಂ, ಡಿಜಿಪಿ ಪ್ರಣಬ್ ಮೊಹಂತಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಹಿರಿಯ ಪೊಲೀಸ್ ಅಧಿಕಾರಿಗಳಾದ ಮುರುಗನ್, ಶರತ್ ಚಂದ್ರ ಸೇರಿದಂತೆ ಹಲವು ಮಂದಿ ಭಾಗಿಯಾಗಿದ್ದರು. ಇದನ್ನೂ ಓದಿ: ಧರ್ಮಸ್ಥಳ ಕೇಸ್‌| ಪ್ರಣಬ್‌ ಮೊಹಂತಿ ಕೇಂದ್ರ ಸೇವೆಗೆ ಹೋಗ್ತಾರಾ – ಸ್ಪಷ್ಟನೆ ಕೊಟ್ಟ ಪರಮೇಶ್ವರ್‌

     

    ಸಭೆಯಲ್ಲಿ ಭಾಗಿಯಾದ ನಂತರ ಪ್ರಣಬ್ ಮೊಹಂತಿ ಕೊಠಡಿಯಿಂದ ಹೊರ ಬಂದರು. ಈ ವೇಳೆ ಮಾಧ್ಯಮಗಳು ಧರ್ಮಸ್ಥಳ ಬುರುಡೆ ರಹಸ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶ್ನೆ ಕೇಳಿದವು. ಇದನ್ನೂ ಓದಿ: ಧರ್ಮಸ್ಥಳ ಕೇಸ್‌ – ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕ್ರಮ: ಪರಮೇಶ್ವರ್‌ ಎಚ್ಚರಿಕೆ

    ಈ ಪ್ರಶ್ನೆಗೆ ಉತ್ತರ ನೀಡದ ಮೊಹಂತಿ ಮುಂದಕ್ಕೆ ಸಾಗಿದರು. ಈ ವೇಳೆ ಮಾಧ್ಯಮಗಳು ಅವರನ್ನು ಹಿಂಬಾಲಿಸಿ ಪ್ರಶ್ನೆ ಕೇಳಿದಾಗ ಮೊಹಂತಿ ದಾರಿ ಬಿಡಿ ಎಂದಷ್ಟೇ ಹೇಳಿ ಪ್ರಕರಣದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದೇ ಮುಂದಕ್ಕೆ ಸಾಗಿದರು.

    ಸಭೆಗೆ ಮೊದಲು ಮಾತನಾಡಿದ್ದ ಪರಮೇಶ್ವರ್‌, ಪ್ರಣಬ್ ಮೊಹಂತಿ ಅವರು ರಾಜ್ಯದ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕರಾಗಿದ್ದಾರೆ. ಫೇಕ್‌ ನ್ಯೂಸ್‌ ಮತ್ತು ಆನ್‌ಲೈನ್‌ ಬೆಟ್ಟಿಂಗ್‌ಗೆ ಸಂಬಂಧಿಸಿದಂತೆ ಕಾನೂನು ಮಾಡುವ ಸಂಬಂಧ ಇಂದು ಸಭೆ ನಡೆಯಲಿದೆ. ಈ ಸಭೆಯಲ್ಲಿ ಭಾಗಿಯಾಗಲು ಅವರು ವಿಧಾನಸೌಧಕ್ಕೆ ಬಂದಿದ್ದಾರೆ ಎಂದು ತಿಳಿಸಿದ್ದರು. ಇದನ್ನೂ ಓದಿ: ಧರ್ಮಸ್ಥಳ ಕೇಸ್‌ | ಪಾಯಿಂಟ್‌ ನಂ.1ರಲ್ಲಿ ಸಿಕ್ಕ ಡೆಬಿಟ್‌, ಪಾನ್ ಕಾರ್ಡ್‌ ‌ರಹಸ್ಯ ಬಯಲು; ವಾರಸುದಾರರು ಪತ್ತೆ

  • ಧರ್ಮಸ್ಥಳ ಕೇಸ್‌| ಪ್ರಣಬ್‌ ಮೊಹಂತಿ ಕೇಂದ್ರ ಸೇವೆಗೆ ಹೋಗ್ತಾರಾ – ಸ್ಪಷ್ಟನೆ ಕೊಟ್ಟ ಪರಮೇಶ್ವರ್‌

    ಧರ್ಮಸ್ಥಳ ಕೇಸ್‌| ಪ್ರಣಬ್‌ ಮೊಹಂತಿ ಕೇಂದ್ರ ಸೇವೆಗೆ ಹೋಗ್ತಾರಾ – ಸ್ಪಷ್ಟನೆ ಕೊಟ್ಟ ಪರಮೇಶ್ವರ್‌

    ಬೆಂಗಳೂರು: ಐಪಿಎಸ್‌ ಅಧಿಕಾರಿ ಪ್ರಣಬ್‌ ಮೊಹಂತಿ (Pranab Mohanty) ಕರ್ನಾಟಕದಲ್ಲಿ ಇದ್ದಾರೆ. ಅವರು ಕೇಂದ್ರಕ್ಕೆ ಹೋಗುವ ಮಾತು ಎಲ್ಲಿಂದ ಬಂತು ಎಂದು ಗೃಹ ಸಚಿವ ಪರಮೇಶ್ವರ್‌ (Parameshwar) ಪ್ರಶ್ನಿಸಿದ್ದಾರೆ.

    ಧರ್ಮಸ್ಥಳ ತಲೆ ಬುರುಡೆ ರಹಸ್ಯ ಪ್ರಕರಣಕ್ಕೆ (Dharmasthala Mass Burial Case) ಸಂಬಂಧಿಸಿದಂತೆ ಸರ್ಕಾರ ರಚಿಸಿದ ವಿಶೇಷ ತನಿಖಾ ತಂಡದ (SIT) ಮುಖ್ಯಸ್ಥರಾಗಿರುವ ಪ್ರಣಬ್‌ ಮೊಂಹತಿ ಅವರು ಕೇಂದ್ರ ಸೇವೆಗೆ ಹೋಗುತ್ತಾರಾ ಎಂದು ಮಾಧ್ಯಮಗಳು ಇಂದು ವಿಧಾನಸೌಧದಲ್ಲಿ ಪರಮೇಶ್ವರ್‌ ಅವರನ್ನು ಪ್ರಶ್ನಿಸಿದವು.  ಇದನ್ನೂ ಓದಿ: ಧರ್ಮಸ್ಥಳ ಕೇಸ್‌ – ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕ್ರಮ: ಪರಮೇಶ್ವರ್‌ ಎಚ್ಚರಿಕೆ

     

    ಈ ಪ್ರಶ್ನೆಗೆ, ಮಾಧ್ಯಮಗಳಿಂದ ಈ ಗೊಂದಲ ಸೃಷ್ಟಿಯಾಗಿದೆ. ಕೇಂದ್ರ ಸೇವೆಗೆ ಅರ್ಹತೆ ಪಡೆದ ಡಿಜಿಪಿಗಳ ಅಧಿಕಾರಿಗಳ ಪಟ್ಟಿಯಲ್ಲಿ ಪ್ರಣಬ್‌ ಮೊಹಂತಿ ಅರ್ಹತೆ ಪಡೆದಿರುವುದು ಕರ್ನಾಟಕಕ್ಕೆ (Karnataka) ಹೆಮ್ಮೆ. ಕೇಂದ್ರ ಸರ್ಕಾರ ಕೇಂದ್ರ ಸೇವೆಗೆ ಅರ್ಹತೆ ಪಡೆಯುವ ಐಪಿಎಸ್‌ ಅಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತದೆ. ಹಿರಿತನ, ತನಿಖಾ ಸಾಮರ್ಥ್ಯ, ಅನುಭವಗಳನ್ನು ಪರಿಗಣಿಸಿ ಕೇಂದ್ರ ಸರ್ಕಾರ ಈ ಪಟ್ಟಿಗೆ ಇಡೀ ದೇಶದ ಐಪಿಎಸ್‌ ಅಧಿಕಾರಿಗಳ ಹೆಸರನ್ನು ಸೇರಿಸಿ ಬಿಡುಗಡೆ ಮಾಡುತ್ತದೆ ಎಂದರು.

    ಈ ಪಟ್ಟಿಯಲ್ಲಿ ಬಂದಿದೆ ಎಂಬ ಕಾರಣಕ್ಕೆ ತಕ್ಷಣವೇ ಕೇಂದ್ರ ಸರ್ಕಾರ ಹುದ್ದೆ ನೀಡುವುದಿಲ್ಲ. ಕೇಂದ್ರ ಸರ್ಕಾರ ಪ್ರಣಬ್‌ ಮೊಹಂತಿ ಅವರನ್ನು ಕೇಂದ್ರ ಸೇವೆಗೆ ಕಳುಹಿಸಿಕೊಡಿ ಎಂದು ನಮಗೆ ಪತ್ರ ಬರೆಯಬೇಕು. ಅವರನ್ನು ಕಳುಹಿಸುವುದು ಬಿಡುವುದು ನಮ್ಮ ಆಯ್ಕೆ. ಪಟ್ಟಿಯಲ್ಲಿ ಹೆಸರು ಬಂದ ಮಾತ್ರಕ್ಕೆ ಕಳುಹಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಧರ್ಮಸ್ಥಳ ಕೇಸ್‌ | ಪಾಯಿಂಟ್‌ ನಂ.1ರಲ್ಲಿ ಸಿಕ್ಕ ಡೆಬಿಟ್‌, ಪಾನ್ ಕಾರ್ಡ್‌ ‌ರಹಸ್ಯ ಬಯಲು; ವಾರಸುದಾರರು ಪತ್ತೆ

    ಪ್ರಣಬ್ ಮೊಹಾಂತಿ ಅವರು ರಾಜ್ಯದ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕರಾಗಿದ್ದಾರೆ. ಫೇಕ್‌ ನ್ಯೂಸ್‌ ಮತ್ತು ಆನ್‌ಲೈನ್‌ ಬೆಟ್ಟಿಂಗ್‌ಗೆ ಸಂಬಂಧಿಸಿದಂತೆ ಕಾನೂನು ಮಾಡುವ ಸಂಬಂಧ ಇಂದು ಸಭೆ ನಡೆಯಲಿದೆ. ಈ ಸಭೆಯಲ್ಲಿ ಭಾಗಿಯಾಗಲು ಅವರು ವಿಧಾನಸೌಧಕ್ಕೆ ಬಂದಿದ್ದಾರೆ ಎಂದು ತಿಳಿಸಿದರು.

    ಕೇಂದ್ರ ಸರ್ಕಾರದ ನೇಮಕಾತಿಗಳ ಸಂಪುಟ ಸಮಿತಿ ಸಭೆ ನಡೆಸಿ ವಿವಿಧ ರಾಜ್ಯಗಳಲ್ಲಿ ಕರ್ತವ್ಯದಲ್ಲಿರುವ ಐಪಿಎಸ್ ಅಧಿಕಾರಿಗಳನ್ನು ಕೇಂದ್ರ ಸೇವೆಯ ಅರ್ಹರ ಪಟ್ಟಿಗೆ ಆಯ್ಕೆ ಮಾಡಿತ್ತು. ಎನ್‌ಎಐ, ಸಿಬಿಐ ಸೇರಿ ಕೇಂದ್ರ ಸರ್ಕಾರದ ವಿವಿಧ ತನಿಖಾ ಸಂಸ್ಥೆಗಳ ಮಹಾನಿರ್ದೇಶಕ ಹುದ್ದೆಗೆ ಈ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಬಹುದಾಗಿದೆ. ನೇಮಕಾತಿಗಳ ಸಂಪುಟ ಸಮಿತಿ ಬಿಡುಗಡೆ ಮಾಡಿದ ಒಟ್ಟು 35 ಅಧಿಕಾರಿಗಳ ಪಟ್ಟಿಯಲ್ಲಿ ಕರ್ನಾಟಕದಿಂದ ಮೊಹಾಂತಿ ಮಾತ್ರ ಆಯ್ಕೆಯಾಗಿರುವುದು ವಿಶೇಷ.

  • ಧರ್ಮಸ್ಥಳ ಶವಗಳ ಹೂತಿಟ್ಟ ಕೇಸ್ – ಕೊನೆಗೂ ಅಸ್ಥಿಪಂಜರ ಪತ್ತೆ

    ಧರ್ಮಸ್ಥಳ ಶವಗಳ ಹೂತಿಟ್ಟ ಕೇಸ್ – ಕೊನೆಗೂ ಅಸ್ಥಿಪಂಜರ ಪತ್ತೆ

    ಮಂಗಳೂರು: ಧರ್ಮಸ್ಥಳ (Dharmasthala) ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಸಂಬಂಧಿಸಿದಂತೆ ಕೊನೆಗೂ ದೂರುದಾರ ಗುರುತಿಸಿದ್ದ 6ನೇ ಪಾಯಿಂಟ್‌ನಲ್ಲಿ ಎರಡು ಅಸ್ಥಿಪಂಜರಗಳು ಪತ್ತೆಯಾಗಿದೆ ಎಂದು `ಪಬ್ಲಿಕ್ ಟಿವಿ’ಗೆ ಎಸ್‌ಐಟಿ (SIT) ಮೂಲಗಳು ತಿಳಿಸಿವೆ.

    ದೂರುದಾರ ಗುರುತಿಸಿದ ಸ್ಥಳಗಳ ಪೈಕಿ ಇದೀಗ 6ನೇ ಪಾಯಿಂಟ್‌ನಲ್ಲಿ 15 ಕಾರ್ಮಿಕರಿಂದ ಉತ್ಖನನ ನಡೆಯುತ್ತಿದ್ದು, ಎರಡು ಅಸ್ಥಿಪಂಜರ ಪತ್ತೆಯಾಗಿದೆ. ದೇಹದ ಪೂರ್ತಿ ಭಾಗಗಳು ಸಿಕ್ಕಿಲ್ಲ, ತಲೆ ಬುರುಡೆ ಸೇರಿದಂತೆ 12 ಮೂಳೆಗಳು  ಮಾತ್ರ ಸಿಕ್ಕಿದ್ದು, ಇನ್ನೂ ಆಳಕ್ಕೆ ತೆಗೆದು ಹುಡುಕಾಟ ನಡೆಸಲಾಗುತ್ತಿದೆ. ಸದ್ಯ ಸಿಕ್ಕಿರುವ ಕಳೇಬರವನ್ನು ಎಸ್‌ಐಟಿ ಅಧಿಕಾರಿಗಳು ಎಫ್‌ಎಸ್‌ಎಲ್‌ಗೆ (FSL) ಕಳುಹಿಸಲಿದ್ದಾರೆ. ಇನ್ನೂ ಇದರ ಬಳಿಕ 7 ಹಾಗೂ 8ನೇ ಪಾಯಿಂಟ್‌ನಲ್ಲಿ ಉತ್ಖನನ ಕಾರ್ಯ ನಡೆಸುವ ಸಾಧ್ಯತೆಗಳಿವೆ.ಇದನ್ನೂ ಓದಿ: ತಾಯಿಯನ್ನು ಕೊಂದ ಪಾಪಿಯಿಂದ ತಂದೆಯ ಮೇಲೂ ಮೃಗೀಯ ವರ್ತನೆ – ಚರ್ಮ ಸುಲಿಯುವಂತೆ ಹಲ್ಲೆ

    ಇನ್ನೂ ಎಸ್‌ಐಟಿ (SIT) ಅಧಿಕಾರಿಗಳು ಕರ್ನಾಟಕದ ಪ್ರತಿ ಪೊಲೀಸ್ ಠಾಣೆಯಿಂದ ಮಾಹಿತಿ ಕೇಳಿದ್ದು, 1995ರಿಂದ 2005 ಹಾಗೂ 2005ರಿಂದ 2015ವರೆಗೆ ಪತ್ತೆಯಾಗದ ನಾಪತ್ತೆ, ಕೊಲೆ-ಅತ್ಯಾಚಾರ ಪ್ರಕರಣದ ಮಾಹಿತಿ ಒದಗಿಸಲು ತಿಳಿಸಿದೆ. 10 ವರ್ಷಗಳಂತೆ ಎರಡು ಪಟ್ಟಿಯಲ್ಲಿ ಒಟ್ಟು 20 ವರ್ಷದ ದಾಖಲೆ ನೀಡಲು ಎಸ್‌ಐಟಿ ಅಧಿಕಾರಿಗಳು ಪತ್ರದ ಮೂಲಕ ತಿಳಿಸಿದ್ದಾರೆ.

    ಸೋಮವಾರ ದೂರುದಾರ (ಜು.28) 13 ಜಾಗಗಳನ್ನು ಗುರುತಿಸಿದ್ದ. ಅದಾದ ಬಳಿಕ ಎರಡು ದಿನ ಈ ಮೊದಲು 5 ಪಾಯಿಂಟ್‌ಗಳಲ್ಲಿ ನಡೆಸಲಾಗಿದ್ದ ಉತ್ಖನನದ ವೇಳೆ ಯಾವುದೇ ರೀತಿಯ ಕಳೇಬರ ಸಿಕ್ಕಿರಲಿಲ್ಲ. ಆದರೆ ಎರಡನೇ ದಿನದಲ್ಲಿ ಒಂದು ಕೆಂಪು ಬಣ್ಣದ ಹರಿದ ರವಿಕೆ ಹಾಗೂ ಒಂದು ಪ್ಯಾನ್ ಕಾರ್ಡ್ ಹಾಗೂ ಒಂದು ಡೆಬಿಟ್ ಕಾರ್ಡ್ ಸಿಕ್ಕಿತ್ತು. ಗುರುತಿಸಿರೋ ಎಲ್ಲಾ 13 ಜಾಗಗಳಿಗೂ ಎಸ್‌ಐಟಿ ವಿಶೇಷ ಭದ್ರತೆ ಕಲ್ಪಿಸಿದೆ. ಗುರುತಿಸಿದ ಪ್ರತಿ ಸ್ಥಳಕ್ಕೂ ತಲಾ 2 ಮಂದಿ ಶಸ್ತ್ರಸಜ್ಜಿತ ಸಿಬ್ಬಂದಿಗಳನ್ನ ನೇಮಕ ಮಾಡಿದ್ದು, ದಟ್ಟ ಅರಣ್ಯದಲ್ಲಿ ರಾತ್ರಿ ಹಗಲು ಸರ್ಪಗಾವಲು ಹಾಕಿದೆ. ಗುರುತಿಸಿದ ಜಾಗಗಳಿಗೆ ಟೇಪ್ ಹಾಕಿ, ಎಲ್ಲದಕ್ಕೂ ನಂಬರ್ ನೀಡಲಾಗಿದೆ.

    ಎಸ್‌ಐಟಿ ವಿಚಾರಣೆ ವೇಳೆ ದೂರುದಾರ ವ್ಯಕ್ತಿ ಓರ್ವ ನಿವೃತ್ತ ಪೊಲೀಸ್ ಅಧಿಕಾರಿಯ ಹೆಸರನ್ನು ಬಾಯ್ಬಿಟ್ಟಿದ್ದ. ನಾನು ಹೆಣ ಹೂಳುವಾಗ ಈ ಅಧಿಕಾರಿ ಕೂಡ ನನಗೆ ಸಾಥ್ ನೀಡಿರುವುದಾಗಿ ತಿಳಿಸಿದ್ದ. ದೂರುದಾರನ ಮಾಹಿತಿ ಬೆನ್ನಲ್ಲೇ ಎಸ್‌ಐಟಿ ಅಧಿಕಾರಿಗಳು 1995ರಿಂದ ಧರ್ಮಸ್ಥಳ ಔಟ್ ಪೋಸ್ಟ್ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡಿದವರ ಲಿಸ್ಟ್ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಗೆ ಮನವಿ ಪತ್ರ ಕಳುಹಿಸಿದ್ದರು.ಇದನ್ನೂ ಓದಿ: ಗಾಳಿ ಆಂಜನೇಯ ದೇಗುಲ ಭಕ್ತರಿಗೆ ಗುಡ್‌ನ್ಯೂಸ್ – ಶೀಘ್ರದಲ್ಲೇ ಹೋಮ, ಹವನ ಮಾಡಿಸೋಕೆ ಆನ್‌ಲೈನ್ ಸೇವೆ ಆರಂಭ

  • ಪ್ರಣಬ್ ಮೊಹಂತಿ ಕೇಂದ್ರ ಸೇವೆಗೆ ಹೋದ್ರೆ ಎಸ್‌ಐಟಿ ಮುಖ್ಯಸ್ಥರ ಬದಲಾವಣೆ – ಸಿಎಂ

    ಪ್ರಣಬ್ ಮೊಹಂತಿ ಕೇಂದ್ರ ಸೇವೆಗೆ ಹೋದ್ರೆ ಎಸ್‌ಐಟಿ ಮುಖ್ಯಸ್ಥರ ಬದಲಾವಣೆ – ಸಿಎಂ

    ಬೆಂಗಳೂರು: ಧರ್ಮಸ್ಥಳ (Dharmasthala) ನೂರಾರು ಶವಗಳ ಹೂತಿಟ್ಟ ಕೇಸ್‌ಲ್ಲಿ ತನಿಖೆ ನಡೆಸುತ್ತಿರುವ ಎಸ್‌ಐಟಿ (SIT) ಮುಖ್ಯಸ್ಥ ಬದಲಾವಣೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪರೋಕ್ಷ ಸುಳಿವು ನೀಡಿದ್ದಾರೆ.

    ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೇಂದ್ರ ಸೇವೆಗೆ ತೆರಳುವ ಪಟ್ಟಿಯಲ್ಲಿ ಎಸ್‌ಐಟಿ ಮುಖ್ಯಸ್ಥರಾಗಿರುವ ಪ್ರಣಬ್ ಮೊಹಂತಿ ಅವರ ಹೆಸರಿದೆ. ಈ ಹಿನ್ನೆಲೆ ಎಸ್‌ಐಟಿ ಮುಖ್ಯಸ್ಥರ ಬದಲಾವಣೆ ಆಗುತ್ತಾ ಎನ್ನುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮೊಹಂತಿ ಅವರು ಕೇಂದ್ರ ಸೇವೆಗೆ ಹೋದರೆ ಮುಖ್ಯಸ್ಥರ ಬದಲಾವಣೆ ಆಗುತ್ತೆ ಎನ್ನುವ ಅರ್ಥದಲ್ಲಿ ಹೇಳಿದರು.ಇದನ್ನೂ ಓದಿ: ಆಗಸ್ಟ್ 1ರಿಂದ ಆಟೋ ಪ್ರಯಾಣ ದರ ಏರಿಕೆ

    ಇನ್ನೂ ಧರ್ಮಸ್ಥಳದಲ್ಲಿ ಉತ್ಖನನ ಪ್ರಕ್ರಿಯೆ ಮುಂದುವರೆದಿದ್ದು, ಮೂರು ಪಾಯಿಂಟ್‌ಗಳಲ್ಲಿ ಅಗೆಯುವ ಕಾರ್ಯ ಆರಂಭವಾಗಿದೆ. ಇಂದು ಕೂಡ ಉತ್ಖನನದ ಸ್ಥಳಕ್ಕೆ ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿಯವರು ಭೇಟಿ ನೀಡುವ ಸಾಧ್ಯತೆಯಿದೆ. ಜೊತೆಗೆ ಎಸ್‌ಐಟಿ ಕರ್ನಾಟಕದ ಪ್ರತಿ ಪೊಲೀಸ್ ಠಾಣೆಯಿಂದ ಮಾಹಿತಿ ಕೇಳಿದ್ದು, 1995ರಿಂದ 2005 ಹಾಗೂ 2005ರಿಂದ 2015ವರೆಗೆ ಪತ್ತೆಯಾಗದ ನಾಪತ್ತೆ, ಕೊಲೆ-ಅತ್ಯಾಚಾರ ಪ್ರಕರಣದ ಮಾಹಿತಿ ಒದಗಿಸಲು ತಿಳಿಸಿದೆ.

    10 ವರ್ಷಗಳಂತೆ ಎರಡು ಪಟ್ಟಿಯಲ್ಲಿ ಒಟ್ಟು 20 ವರ್ಷದ ದಾಖಲೆ ನೀಡಲು ಎಸ್‌ಐಟಿ ಅಧಿಕಾರಿಗಳು ಪತ್ರದ ಮೂಲಕ ತಿಳಿಸಿದ್ದಾರೆ.ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರಳಿದ ಸಾರಿಗೆ ಬಸ್ – ಪ್ರಯಾಣಿಕರು ಸೇಫ್

  • ಗಣಪತಿ ಕೇಸ್ – ಮಾಜಿ ಸಚಿವ ಜಾರ್ಜ್‌ಗೆ ಸಿಬಿಐನಿಂದ ಕ್ಲೀನ್‍ಚಿಟ್

    ಗಣಪತಿ ಕೇಸ್ – ಮಾಜಿ ಸಚಿವ ಜಾರ್ಜ್‌ಗೆ ಸಿಬಿಐನಿಂದ ಕ್ಲೀನ್‍ಚಿಟ್

    – ಸಿಬಿಐನಿಂದ ಮಡಿಕೇರಿ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಕೆ
    – ಕೊಲೆಯಲ್ಲ ಇದು ಆತ್ಮಹತ್ಯೆ ಪ್ರಕರಣ
    – ಪ್ರಣವ್ ಮೊಹಂತಿ, ಎ.ಎಂ. ಪ್ರಸಾದ್ ಪಾತ್ರ ಇಲ್ಲ

    ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದೇಶಾದ್ಯಂತ ಸುದ್ದಿ ಮಾಡಿದ್ದ ಡಿವೈಎಸ್‍ಪಿ ಗಣಪತಿ ಪ್ರಕರಣದಲ್ಲಿ ಅಂದಿನ ಗೃಹ ಸಚಿವ ಜಾರ್ಜ್ ಅವರಿಗೆ ಸಿಬಿಐ ಕ್ಲೀನ್‍ಚಿಟ್ ನೀಡಿದೆ.

    ತನಿಖೆ ನಡೆಸಿದ್ದ ಸಿಬಿಐ ಮಡಿಕೇರಿ ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್ ಸಲ್ಲಿಸಿದೆ. ಗಣಪತಿ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ್ದ ದೆಹಲಿಯ ಏಮ್ಸ್ ಆಸ್ಪತ್ರೆಯ ವೈದ್ಯರು ಉಸಿರುಗಟ್ಟಿ ಗಣಪತಿ ಸಾವನ್ನಪ್ಪಿದ್ದಾರೆ ಎಂದು ವರದಿ ನೀಡಿದ್ದರು. ಈ ವರದಿಯ ಆಧಾರದಲ್ಲಿ ಗಣಪತಿ ಅವರದ್ದು ಕೊಲೆಯಲ್ಲ, ಆತ್ಮಹತ್ಯೆ ಎಂಬ ನಿರ್ಧಾರಕ್ಕೆ ಸಿಬಿಐ ಬಂದಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

    ಜಾರ್ಜ್ ಜೊತೆಗೆ ಹಿರಿಯ ಐಪಿಎಸ್ ಅಧಿಕಾರಿಗಳಾದ ಪ್ರಣವ್ ಮೊಹಂತಿ, ಎ.ಎಂ. ಪ್ರಸಾದ್ ಪಾತ್ರವೂ ಇಲ್ಲ ಎಂದು ಉಲ್ಲೇಖಿಸಿದೆ. ಜಾರ್ಜ್, ಮೊಹಂತಿ, ಪ್ರಸಾದ್ ಅವರು ಗಣಪತಿ ಅವರಿಗೆ ಕಿರುಕುಳ ನೀಡಿದ್ದಾರೆ ಎಂಬುದಕ್ಕೆ ಯಾವುದೇ ಸಾಕ್ಷ್ಯಾಧಾರಗಳು ಲಭ್ಯವಾಗಿಲ್ಲ. ಕೌಟುಂಬಿಕ ಕಾರಣಗಳಿಂದ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸಿಬಿಐ ಉಲ್ಲೇಖಿಸಿದೆ.

    ಗಣಪತಿಯವರು ಸೇವೆಯಲ್ಲಿದ್ದ ಸಮಯದಲ್ಲಿ ಕರ್ತವ್ಯಲೋಪ ಎಸಗಿರುವುದು ದೃಢಪಟ್ಟಿದೆ. ಇದಕ್ಕೆ ಸಂಬಂಧಿಸಿದಂತೆ ಶಿಸ್ತು ಕ್ರಮಗಳನ್ನು ಎದುರಿಸಿದ್ದಾರೆ. ಶಿಸ್ತು ಕ್ರಮದಿಂದಾಗಿ ಗಣಪತಿ ಅವರ ಭಡ್ತಿ, ಭವಿಷ್ಯದ ಮೇಲೆ ಪರಿಣಾಮ ಬೀರಿಲ್ಲ ಎಂದು ವರದಿಯಲ್ಲಿ ತಿಳಿಸಿದೆ. ಇದರ ಜೊತೆಗೆ ಈ ಮೂವರ ವಿರುದ್ಧದ ಪ್ರಕರಣವನ್ನು ರದ್ದು ಮಾಡಿ ಖುಲಾಸೆ ಮಾಡಬಹುದು ಎಂಬ ಟಿಪ್ಪಣಿ ಅಂಶವನ್ನೂ ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯಲ್ಲಿ ಸಿಬಿಐ ಉಲ್ಲೇಖಿಸಿದೆ.

    ಏನಿದು ಪ್ರಕರಣ?: 2016 ಜುಲೈ 7 ರಂದು ಡಿವೈಎಸ್ಪಿ ಗಣಪತಿ ಮಡಿಕೇರಿಯ ವಿನಾಯಕ ಲಾಡ್ಜ್ ನಲ್ಲಿ ಆತ್ಮಹತ್ಯೆ ಶರಣಾಗುವ ಮುನ್ನ ಸ್ಥಳೀಯ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಮುಂದೆ ನನಗೆ ಏನಾದ್ರೂ ಆದರೆ ಅದಕ್ಕೆ ಸಚಿವ ಕೆಜೆ ಜಾರ್ಜ್, ಪೊಲೀಸ್ ಅಧಿಕಾರಿಗಳಾದ ಅಶಿತ್ ಮೋಹನ್ ಪ್ರಸಾದ್ ಮತ್ತು ಪ್ರಣವ್ ಮೊಹಂತಿ ಕಾರಣ ಎಂದು ನೇರವಾಗಿ ಆರೋಪಿಸಿದ್ದರು. ಈ ಸಂದರ್ಶನ ನೀಡಿದ ಬಳಿಕ ಸಂಜೆ ಮಡಿಕೇರಿ ನಗರದ ಲಾಡ್ಜ್ ನಲ್ಲಿ ನೇಣಿಗೆ ಶರಣಾದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಈ ಪ್ರಕರಣದ ತನಿಖೆಯನ್ನು ನಡೆಸಿದ ಸಿಐಡಿ ಸಚಿವ ಜಾರ್ಜ್ ಮತ್ತು ಐಪಿಎಸ್ ಅಧಿಕಾರಿಗಳಿಗೆ ಬಿ ರಿಪೋರ್ಟ್  ಸಲ್ಲಿಸಿ ಕ್ಲೀನ್ ಚಿಟ್ ನೀಡಿತ್ತು.

    ಸಿಐಡಿ ವರದಿಯಲ್ಲಿ ಸಚಿವ ಜಾರ್ಜ್ ಗೆ ಕ್ಲೀನ್ ಚಿಟ್ ನೀಡಿದ್ದನ್ನು ಪ್ರಶ್ನಿಸಿ ಸಿಬಿಐ ತನಿಖೆಗೆ ಆಗ್ರಹಿಸುವಂತೆ ಗಣಪತಿ ತಂದೆ ಕುಶಾಲಪ್ಪ ಈ ಹಿಂದೆ ಕರ್ನಾಟಕ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಈ ಅರ್ಜಿಯನ್ನು ನ್ಯಾ.ಎಸ್.ಅಬ್ದುಲ್ ನಜೀರ್ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಕುಶಾಲಪ್ಪ ಸುಪ್ರೀಂ ಕೋರ್ಟ್ ಮೆಟ್ಟಿಲು ಏರಿದ್ದರು. ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟಿನ ನ್ಯಾ. ಉದಯ ಲಲಿತ್, ನ್ಯಾ ಆದರ್ಶಕುಮಾರ್ ನೇತೃತ್ವದ ದ್ವಿಸದಸ್ಯ ಪೀಠ 2017ರ ಸೆಪ್ಟೆಂಬರಿನಲ್ಲಿ ಸಿಬಿಐ ತನಿಖೆಗೆ ಆದೇಶ ನೀಡಿತ್ತು.

    ತಕರಾರು ಅರ್ಜಿ ಸಲ್ಲಿಸಿರಲಿಲ್ಲ: ಸಚಿವ ಜಾರ್ಜ್ ಅವರಿಗೆ ಸಿಐಡಿ ನೀಡಿರುವ ಬಿ ರಿಪೋರ್ಟ್  ಅನ್ನು ಗಣಪತಿ ಅವರ ಪುತ್ರ ನೇಹಾಲ್ ಒಪ್ಪಿಕೊಂಡಿದ್ದರು. ಸಿಐಡಿ ಸಲ್ಲಿಸಿದ ಬಿ ರಿಪೋರ್ಟಿಗೆ ಗಣಪತಿ ಪುತ್ರ ಯಾವುದೇ ತಕರಾರು ಅರ್ಜಿ ಸಲ್ಲಿಸಿರಲಿಲ್ಲ. ಈ ಕಾರಣಕ್ಕೆ ಕುಶಾಲಪ್ಪನವರು ಹೈಕೋರ್ಟ್, ಸುಪ್ರೀಂ ಮೊರೆ ಹೋಗಿದ್ದರು.

    ದಾಖಲೆಗಳು ನಾಶ: ಗಣಪತಿ ಪ್ರಕರಣಕ್ಕೆ ಒಂದು ವರ್ಷ ಕಳೆಯುತ್ತಿದ್ದಂತೆ ರಾಷ್ಟ್ರೀಯ ಸುದ್ದಿ ವಾಹಿನಿ ಟೈಮ್ಸ್ ನೌ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ವಿಧಿವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ ಸಾಕ್ಷ್ಯ ನಾಶ ಮಾಡಿರುವ ಬಗ್ಗೆ ಉಲ್ಲೇಖ ಇರುವುದನ್ನು ಬಹಿರಂಗಪಡಿಸಿತ್ತು. ಆತ್ಮಹತ್ಯೆ ಮಾಡಿಕೊಂಡ ದಿನಾಂಕದ ಬಳಿಕ ಹಾಲಿ ಮಂತ್ರಿ, ಮಾಜಿ ಮಂತ್ರಿ, ಹಾಲಿ ಶಾಸಕರು, ಕೇಂದ್ರ ಸಚಿವರ ಸಂಬಂಧಿ, ಮುಖಂಡರು, ಇಬ್ಬರು ಪೊಲೀಸ್ ಅಧಿಕಾರಿಗಳ ಕರೆ ದಾಖಲೆ, ಮೊಬೈಲ್ ದಾಖಲೆ ನಾಶ ಮಾಡಿರುವುದು ಹಾಗೂ ಕಂಪ್ಯೂಟರ್ ದಾಖಲೆ ನಾಶ ಮಾಡಿರೋದು ವಿಧಿವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ ಉಲ್ಲೇಖಿಸಲಾಗಿದೆ.

    ಸಿಐಡಿ ವಿಧಿ ವಿಜ್ಞಾನ ವರದಿಯನ್ನು ತನಿಖೆ ವೇಳೆ ಪರಿಗಣಿಸಿದೇ ಸಚಿವ ಜಾರ್ಜ್ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಕ್ಲೀನ್ ಚೀಟ್ ನೀಡಿದೆ. ಈ ವೇಳೆ ಗಣಪತಿ ಆತ್ಮಹತ್ಯೆಗೆ ಸಂಬಂಧಿಸಿದಂತೆ ಪ್ರತ್ಯಕ್ಷದರ್ಶಿಗಳನ್ನು ವಾಹಿನಿ ಮಾತನಾಡಿಸಿತ್ತು. ಜಗನ್ ಬೆಳ್ಳಿಯಪ್ಪ ಮಾತನಾಡಿ, ಪೊಲೀಸ್ ಅಧಿಕಾರಿಗಳು ನಮ್ಮ ಜೊತೆ ಜಾಸ್ತಿ ಪ್ರಶ್ನೆ ಕೇಳಿಲ್ಲ. ಕೆಲ ಪ್ರಶ್ನೆ ಕೇಳಿದರು. ಏನು ಪ್ರಶ್ನೆ ಕೇಳಿದ್ದಾರೆ ಎನ್ನುವುದು ತಿಳಿದು ಬಂದಿಲ್ಲ. ಕೊನೆಗೆ ಖಾಲಿ ಬಿಳಿ ಹಾಳೆಯಲ್ಲಿ ಸಹಿ ಹಾಕಲು ಹೇಳಿದರು. ನಾವು ಸಹಿ ಹಾಕಿದ್ವಿ ಎಂದು ತಿಳಿಸಿದ್ದರು.

    ಏನೇನು ಡಿಲೀಟ್ ಆಗಿದೆ?: 100 ಇಮೇಲ್, 2699 ವರ್ಡ್ ಫೈಲ್, 910 ಎಂಎಸ್ ಎಕ್ಸೆಲ್ ಫೈಲ್, 145 ಪಿಡಿಎಫ್ ಫೈಲ್, 2500 ಇಮೇಜ್ ಫೈಲ್, 331 ಪಿಪಿಟಿ ಫೈಲ್, 791 ಟೆಕ್ಸ್ಟ್ ಫೈಲ್, 352 ಕಾಂಟಾಕ್ಟ್ , 52 ಮೆಸೇಜ್‍ಗಳು ಡಿಲೀಟ್ ಆಗಿದೆ ಎಂದು ವಾಹಿನಿ ವರದಿ ಪ್ರಸಾರಿಸಿತ್ತು.

    https://www.youtube.com/watch?v=p2V1xEclj3g&feature=emb_title