Tag: pranitha subash

  • ಬೇಬಿ ಶವರ್‌ನಲ್ಲಿ ಮಿಂಚಿದ ಪ್ರಣೀತಾ ಸುಭಾಷ್

    ಬೇಬಿ ಶವರ್‌ನಲ್ಲಿ ಮಿಂಚಿದ ಪ್ರಣೀತಾ ಸುಭಾಷ್

    ನ್ನಡ ಚಿತ್ರದ ಮೂಲಕ ಸಿನಿರಂಗಕ್ಕೆ ಪಾದಾರ್ಪಣೆ ಮಾಡಿದ ಪ್ರಣೀತಾ ಸುಭಾಷ್, ಈಗ ಸಿನಿಮಾಗಳಿಂದ ಕೊಂಚ ಬ್ರೇಕ್ ತೆಗೆದುಕೊಂಡು, ತಮ್ಮ ತಾಯ್ತನದ ಖುಷಿಯಲ್ಲಿದ್ದಾರೆ. ಇತ್ತೀಚೆಗಷ್ಟೇ ಬೇಬಿ ಬಂಪ್ ಫೋಟೋಶೂಟ್‌ನಲ್ಲಿ ಮಿಂಚಿದ ಪ್ರಣಿತಾ, ಈಗ ಬೇಬಿ ಶವರ್ ಸಮಾರಂಭದಲ್ಲಿ ಮಿಂಚಿದ್ದಾರೆ.

    ಬಹುಭಾಷಾ ನಟಿಯಾಗಿ ಗುರುತಿಸಿಕೊಂಡಿರುವ ಪ್ರತಿಭಾವಂತ ನಟಿ ಪ್ರಣಿತಾ, ಬೇಡಿಕೆ ಇರುವಾಗಲೇ ಹಸೆಮಣೆ ಏರಿದ್ದರು. ಒಬ್ಬರನೊಬ್ಬರು ಪ್ರೀತಿಸಿ ಗುರು ಹಿರಿಯರ ಸಮ್ಮುಖದಲ್ಲಿ ಕಳೆದ ವರ್ಷ ನಿತಿನ್ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇತ್ತೀಚೆಗಷ್ಟೇ ತಾವು ತಾಯಿಯಾಗಿರುವ ವಿಚಾರವನ್ನ ಅಭಿಮಾನಿಗಳ ಜತೆ ಹಂಚಿಕೊಂಡಿದ್ದರು. ಈಗ ಬೇಬಿ ಶವರ್‌ನಲ್ಲಿ ಇದೀಗ ಪತಿ ಮತ್ತು ಸ್ನೇಹಿತರೊಂದಿಗೆ ಪ್ರಣೀತಾ ಮಿಂಚಿದ್ದಾರೆ. ಈ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಇದನ್ನೂ ಓದಿ: ಇದೇನಿದು ಹೊಸ ಅವತಾರ- ಗೋಣಿ ಚೀಲವನ್ನೂ ಬಿಡದ ಉರ್ಫಿ ಜಾವೇದ್

    ಬೇಬಿ ಶವರ್‌ನಲ್ಲಿ ಸಖತ್ ಮುದ್ದಾಗಿ ಪ್ರಣಿತಾ ಕಾಣಿಸಿಕೊಂಡಿದ್ದಾರೆ. ಹೊಸ ಅತಿಥಿಯ ಆಗಮನಕ್ಕಾಗಿ ಕಾಯುತ್ತಿರುವ ನಟಿ ಪ್ರಣಿತಾ ಆಗಾಗ ಫೋಟೋಶೂಟ್ ಮಾಡಿಸುತ್ತಾ, ಅಭಿಮಾನಿಗಳ ಗಮನ ಸೆಳೆಯುತ್ತಾರೆ. ಸದ್ಯ ಬೇಬಿ ಶವರ್ ಲುಕ್‌ನಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    ಇನ್ನು ಪ್ರಣೀತಾ ಕಡೆಯದಾಗಿ ನಟಿಸಿದ ಸಿನಿಮಾ, ಬಾಲಿವುಡ್‌ನ `ಹಂಗಾಮ 2′ ಮತ್ತು `ಭುಜ್’ ದಿ ಪ್ರೈಡ್ ಆಫ್ ದಿ ಇಂಡಿಯಾ ಚಿತ್ರದಲ್ಲಿ ನಟಿಸಿದ್ದರು. ಮಗುವಿನ ಆಗಮನದ ನಂತರ ಮತ್ತೆ ಬೆಳ್ಳಿತೆರೆಯಲ್ಲಿ ಹೊಸ ಸಿನಿಮಾಗಳ ಮೂಲಕ ಪ್ರಣೀತಾ ಮಿಂಚಲಿದ್ದಾರೆ.‌

  • ಕ್ಯಾಪ್ ತೊಟ್ಟು ಬೇಬಿ ಬಂಪ್ ಫೋಟೋಶೂಟ್‌ನಲ್ಲಿ ಮಿಂಚಿದ ಪ್ರಣಿತಾ

    ಕ್ಯಾಪ್ ತೊಟ್ಟು ಬೇಬಿ ಬಂಪ್ ಫೋಟೋಶೂಟ್‌ನಲ್ಲಿ ಮಿಂಚಿದ ಪ್ರಣಿತಾ

    `ಪೊರ್ಕಿ’ ಚಿತ್ರದ ಮೂಲಕ ಸಿನಿರಂಗಕ್ಕೆ ಪಾದಾರ್ಪಣೆ ಮಾಡಿದ ಪ್ರಣಿತಾ ಸುಭಾಷ್, ಈಗ ಸಿನಿಮಾಗಳಿಂದ ಕೊಂಚ ಬ್ರೇಕ್ ತೆಗೆದುಕೊಂಡು, ಹೊಸ ಅತಿಥಿಯ ಬರುವಿಕೆಯ ಸಂತಸದಲ್ಲಿದ್ದಾರೆ. ಹೊಸ ಬಗೆಯ ಬೇಬಿ ಬಂಪ್ ಫೋಟೋಶೂಟ್ ಮೂಲಕ ಅಟ್ರಾಕ್ಟ್ ಮಾಡುವ ನಟಿ ಪ್ರಣಿತಾ ಈಗ ಕ್ಯಾಪ್ ತೊಟ್ಟು ಹೊಸದಾಗಿ ಬೇಬಿ ಬಂಪ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ.

    ಬಹುಭಾಷಾ ನಟಿಯಾಗಿ ಗುರುತಿಸಿಕೊಂಡಿರುವ ಪ್ರತಿಭಾವಂತ ನಟಿ ಪ್ರಣಿತಾ, ಬೇಡಿಕೆ ಇರುವಾಗಲೇ ಹಸೆಮಣೆ ಏರಿದ್ದರು. ಒಬ್ಬರನೊಬ್ಬರು ಪ್ರೀತಿಸಿ ಗುರು ಹಿರಿಯರ ಸಮ್ಮುಖದಲ್ಲಿ ಕಳೆದ ವರ್ಷ ನಿತಿನ್ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇತ್ತೀಚೆಗಷ್ಟೇ ತಾವು ತಾಯಿಯಾಗಿರುವ ವಿಚಾರವನ್ನ ಅಭಿಮಾನಿಗಳ ಜತೆ ಹಂಚಿಕೊಂಡಿದ್ದ ನಟಿ ಪ್ರಣಿತಾ, ಇದೀಗ ಭಿನ್ನವಾದ ಬೇಬಿ ಬಂಪ್ ಫೋಟೋಶೂಟ್‌ನಲ್ಲಿ ಪ್ರಣಿತಾ ಮಿಂಚಿದ್ದಾರೆ. ಇದನ್ನೂ ಓದಿ: ಕುಟುಂಬ ಕಲಹದ ಕಥೆ ಹೊತ್ತು ಬಂದ ವೆಡ್ಡಿಂಗ್ ಗಿಫ್ಟ್ ಟೀಸರ್

    ಕ್ಯಾಪ್ ತೊಟ್ಟು ಬ್ಲ್ಯಾಕ್‌ ಡ್ರೆಸ್‌ನಲ್ಲಿ ಬೇಬಿ ಬಂಪ್ ಫೋಟೋಶೂಟ್‌ನಲ್ಲಿ ಸಖತ್ ಮುದ್ದಾಗಿ ಪ್ರಣಿತಾ ಕಾಣಿಸಿಕೊಂಡಿದ್ದಾರೆ. ಹೊಸ ಅತಿಥಿಯ ಆಗಮನಕ್ಕಾಗಿ ಕಾಯುತ್ತಿರುವ ನಟಿ ಪ್ರಣಿತಾ ಆಗಾಗ ಫೋಟೋಶೂಟ್ ಮಾಡಿಸುತ್ತಾ, ಅಭಿಮಾನಿಗಳ ಗಮನ ಸೆಳೆಯುತ್ತಾರೆ. ಸದ್ಯ ಈ ಹೊಸ ಫೋಟೋಶೂಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

  • ಮತ್ತೆ ಬೇಬಿ ಬಂಪ್ ಫೋಟೋ ಹಂಚಿಕೊಂಡ ಪ್ರಣಿತಾ ಸುಭಾಷ್

    ಮತ್ತೆ ಬೇಬಿ ಬಂಪ್ ಫೋಟೋ ಹಂಚಿಕೊಂಡ ಪ್ರಣಿತಾ ಸುಭಾಷ್

    ಹುಭಾಷಾ ನಟಿ ಪ್ರಣಿತಾ ಸುಭಾಷ್ ಸಿನಿಮಾರಂಗದಿಂದ ಕೊಂಚ ಬ್ರೇಕ್ ತೆಗೆದುಕೊಂಡು ವಯಕ್ತಿಕ ಜೀವನದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗಷ್ಟೇ ಪತಿ ನಿತಿನ್ ಜತೆ ಬೇಬಿ ಬಂಪ್ ಫೋಟೋಶೂಟ್ ಮಾಡಿಸಿ ಗಮನ ಸೆಳೆದಿದ್ದರು. ಈಗ ಮತ್ತೊಂದು ಬೇಬಿ ಬಂಪ್ ಫೋಟೋ ಶೇರ್ ಮಾಡಿದ್ದಾರೆ.

    ಕನ್ನಡ ಚಿತ್ರದಿಂದ ಸಿನಿ ಕೆರಿಯರ್ ಶುರು ಮಾಡಿದ ನಟಿ ಪ್ರಣಿತಾ ಬಾಲಿವುಡ್‌ವರೆಗೂ ತಮ್ಮ ನಟನೆಯ ಛಾಪೂ ಮೂಡಿಸಿದ್ರು. ಈಗ ಮದುವೆ, ಸಂಸಾರ ಅಂತಾ ಬ್ಯುಸಿಯಾಗಿದ್ದಾರೆ. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನಟಿ ಪ್ರಣಿತಾ, ನೀರಿನಲ್ಲಿ ಕುಳಿತು ಕ್ಯಾಮೆರಾ ಕಣ್ಣಿಗೆ ಪೋಸ್ ಕೊಟ್ಟಿದ್ದಾರೆ. ಹೊಸ ಬೇಬಿ ಬಂಪ್ ಲುಕ್ ನೋಡುಗರ ಗಮನ ಸೆಳೆಯುತ್ತಿದೆ. ಇದನ್ನೂ ಓದಿ: ಕನ್ನಡದಲ್ಲೇ ಖುಷಿ ಹಂಚಿಕೊಂಡ ರಾ.. ರಾ.. ರಕ್ಕಮ್ಮ ಬೆಡಗಿ ಜಾಕ್ವಲಿನ್

    ಪ್ರಣಿತಾ ನಟನೆಯ `ರಾಮನ ಅವತಾರ’ ಚಿತ್ರದಲ್ಲಿ ನಟಿಸಿದ್ದಾರೆ. ಸದ್ಯದಲ್ಲೇ ಸಿನಿಮಾ ತೆರೆಗೆ ಬರಲಿದೆ. ಮಗುವಿನ ಆಗಮನದ ನಂತರ ಮತ್ತೆ ಪ್ರಣಿತಾ ನಟನೆಗೆ ಕಂಬ್ಯಾಕ್ ಮಾಡಲಿದ್ದಾರೆ. ಚಾಲೆಂಜಿಂಗ್ ಪಾತ್ರದ ಮೂಲಕ ಕಾಣಿಸಿಕೊಳ್ಳಲಿದ್ದಾರೆ.