Tag: Prasanna

  • ಮೈಮೂಲ್‍ನಲ್ಲಿ ಹಿಡಿತಕ್ಕೆ ಸಿಎಂ ಯತ್ನನಾ..?- ಜಿಟಿಡಿ ಆಪ್ತ ಪ್ರಸನ್ನ ಕೆಳಗಿಳಿಸಲು ಸ್ಕೆಚ್

    ಮೈಮೂಲ್‍ನಲ್ಲಿ ಹಿಡಿತಕ್ಕೆ ಸಿಎಂ ಯತ್ನನಾ..?- ಜಿಟಿಡಿ ಆಪ್ತ ಪ್ರಸನ್ನ ಕೆಳಗಿಳಿಸಲು ಸ್ಕೆಚ್

    – ಸಚಿವ ವೆಂಕಟೇಶ್ ಮೂಲಕ ಬೆದರಿಕೆ ಆರೋಪ

    ಮೈಸೂರು: ಸಹಕಾರ ಕ್ಷೇತ್ರದ ಹಿಡಿತ ಪಡೆಯಲು ಸಿಎಂ ಯತ್ನಿಸಿದ್ದಾರೆ ಎಂದು ಹೇಳಲಾಗುತ್ತಿದ್ದು, ತವರು ಜಿಲ್ಲೆಯಿಂದಲೇ ಕಾಂಗ್ರೆಸ್ ನಾಯಕರು ಸಹಕಾರ ಕ್ಷೇತ್ರದ ಆಪರೇಷನ್ ಶುರುಮಾಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ.

    ಡಿಸೆಂಬರ್ ನಲ್ಲಿ ನಡೆಯಬೇಕಿದ್ದ ಎಂಡಿಸಿಸಿ ಬ್ಯಾಂಕ್ (MDCC Bank) ಚುನಾವಣೆಯನ್ನು ರಾಜ್ಯ ಸರ್ಕಾರ ಮುಂದೂಡಿತ್ತು. ಅಲ್ಲದೇ ಜಿ.ಟಿ ದೇವೇಗೌಡ (GT Devegowda) ಮಗ, ಶಾಸಕ ಹರೀಶ್ ಗೌಡನನ್ನು ಅಪೇಕ್ಸ್ ಬ್ಯಾಂಕ್ ಉಪಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿದ್ದೂ ಆಯ್ತು. ಈಗ ಮೈಮೂಲ್ ಸರದಿಯಾಗಿದೆ.

    ಸಹಕಾರ ಕ್ಷೇತ್ರದಲ್ಲಿ ಜಿಟಿ.ದೇವೇಗೌಡರ ಪಾರುಪತ್ಯ ಮುರಿಯಲು ಶತ ಪ್ರಯತ್ನ ನಡೆಸಲಾಗುತ್ತಿದೆ. 15 ಸದಸ್ಯರ ಪೈಕಿ 12 ಸದಸ್ಯ ಬಲದೊಂದಿಗೆ ಮೈಮೂಲ್ ಅಧ್ಯಕ್ಷ ಆಗಿರುವ ಪಿ.ಎಂ.ಪ್ರಸನ್ನ ಅವರು ಜಿಟಿಡಿ ಆಪ್ತ ಮಾಜಿ ಶಾಸಕ ಕೆ.ಮಹದೇವ್ ಪುತ್ರ. ಈ ಕಾರಣಕ್ಕೆ ಪ್ರಸನ್ನ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಯತ್ನಿಸಲಾಗುತ್ತಿದೆ ಎನ್ನಲಾಗಿದೆ.

    ಪಶು ಸಂಗೋಪನೆ ಸಚಿವ ಕೆ.ವೆಂಕಟೇಶ್ ಮೂಲಕ ಆಪರೇಷನ್ ನಡೆಯುತ್ತಿದ್ದು, ವಾಸಸ್ಥಳ ದೃಢೀಕರಣ ವಿಚಾರವಾಗಿಯೇ ಹೆಚ್ಚು ಬಾರಿ ನೋಟೀಸ್ ಕೊಟ್ಟು ಕಿರುಕುಳ ನೀಡಲಾಗುತ್ತದೆ. ಮೈಮೂಲ್ ಇತರ ಸದಸ್ಯರನ್ನು ಬೆದರಿಸುವ ಮೂಲಕ ಪ್ರಸನ್ನ ಮೇಲೆ ಒತ್ತಡ ಹೇರಲಾಗುತ್ತಿದೆ. ಈ ಮೂಲಕ ಸದ್ಯ ಸಚಿವ ವೆಂಕಟೇಶ್ ವಿರುದ್ಧ ದ್ವೇಷ ರಾಜಕಾರಣದ ಗಂಭೀರ ಆರೋಪ ಕೇಳಿಬಂದಿದೆ.

  • ಮದುವೆಯಾಗಿ 12 ವರ್ಷಗಳ ನಂತರ ಲವ್‌ ಬ್ರೇಕಪ್‌ ಬಗ್ಗೆ ಬಾಯ್ಬಿಟ್ಟ ‘ರವಿಶಾಸ್ತ್ರಿ’ ನಟಿ ಸ್ನೇಹಾ

    ಮದುವೆಯಾಗಿ 12 ವರ್ಷಗಳ ನಂತರ ಲವ್‌ ಬ್ರೇಕಪ್‌ ಬಗ್ಗೆ ಬಾಯ್ಬಿಟ್ಟ ‘ರವಿಶಾಸ್ತ್ರಿ’ ನಟಿ ಸ್ನೇಹಾ

    ನ್ನಡದ ರವಿಶಾಸ್ತ್ರಿ, ಕುರುಕ್ಷೇತ್ರ ಸಿನಿಮಾದಲ್ಲಿ ನಟಿಸಿರುವ ತಮಿಳು ನಟಿ ಸ್ನೇಹಾ (Actress Sneha) ಇದೀಗ ತಮ್ಮ ದಾಂಪತ್ಯದ (Wedding) ಬಗ್ಗೆ ಮಾತನಾಡಿದ್ದಾರೆ. ಕೆಲ ತಿಂಗಳುಗಳಿಂದ ಸ್ನೇಹಾ ದಾಂಪತ್ಯದಲ್ಲಿ ಬಿರುಕಾಗಿದೆ. ಡಿವೋರ್ಸ್‌ಗೆ ಸ್ನೇಹಾ- ಪ್ರಸನ್ನ ದಂಪತಿ ಸಜ್ಜಾಗಿದ್ದಾರೆ ಎಂದೆಲ್ಲಾ ಸುದ್ದಿ ಹಬ್ಬಿತ್ತು. ಡಿವೋರ್ಸ್ (Divorce) ಸುದ್ದಿ ಸುಳ್ಳು ನಾವು ಚೆನ್ನಾಗಿದ್ದೇವೆ ಎಂದು ನಟಿ ಉತ್ತರ ನೀಡಿದ್ದಾರೆ. ದಾಂಪತ್ಯದ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

    ಪ್ರೀತಿಯಲ್ಲಿ (Love) ಪೊಸೆಸಿವ್‌ನೆಸ್ ಬೇರೆ. ನಂಬಿಕೆ ಬೇರೆ. ಹೆಚ್ಚು ಪೊಸೆಸಿವ್ ಆಗಿಬಿಟ್ಟರೆ ನಂಬಿಕೆ ಬ್ಯಾಲೆನ್ಸ್ ಮಾಡುವುದು ಕಷ್ಟ. ಮತ್ತೊಬ್ಬರಿಗೆ ಅದು ಅರ್ಥವಾಗುವುದಿಲ್ಲ. ಎಲ್ಲಿ ಹೋಗುತ್ತಿದ್ದೀರಾ, ಏನು ಮಾಡುತ್ತಿದ್ದೀರಾ? ಎಂದು ಕೇಳುವುದು ಕೂಡ ಪೊಸೆಸಿವ್‌ನೆಸ್ ಇರುಬಹುದು, ನಂಬಿಕೆಯೂ ಆಗಿರಬಹುದು. ಒಬ್ಬರನ್ನು ಇನ್ನೊಬ್ಬರು ಅರ್ಥಮಾಡಿಕೊಂಡರೆ ಸಮಸ್ಯೆ ಆಗಲ್ಲ ಎಂದು ನಟಿ ಸ್ನೇಹಾ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ. ಇದನ್ನೂ ಓದಿ:ಅಕ್ಷಯ್ ಕುಮಾರ್ ಬಳಿಕ ‘ಕಣ್ಣಪ್ಪ’ ಸಿನಿಮಾದಲ್ಲಿ ಕಾಜಲ್ ಅಗರ್ವಾಲ್

    ದೈನಂದಿನ ಜೀವನದಲ್ಲಿ ನಾವು ಏನು ಮಾಡುತ್ತಿದ್ದೇನೆ. ಎಲ್ಲಿ ಹೋಗುತ್ತಿದ್ದೇನೆ. ಎಷ್ಟು ಹೊತ್ತಿಗೆ ಬರುತ್ತೇನೆ ಎನ್ನುವುದನ್ನು ಒಬ್ಬರು ಕೇಳುವುದಕ್ಕೆ ಮುನ್ನ ಇನ್ನೊಬ್ಬರು ಹೇಳಬೇಕು. ಅಲ್ಲಿಗೆ ಹೋದ ಮೇಲೂ ಸಮಯ ಇದ್ದರೆ ಒಮ್ಮೆ ಫೋನ್ ಮಾಡಿ ಮಾತನಾಡಿ. ಊಟ ಆಯ್ತಾ? ಏನು ಮಾಡುತ್ತಿದ್ದೀಯಾ ಅಂತ ಕೇಳಬೇಕು. ಇಂತಹ ವಿಷಯಗಳೇ ಇಬ್ಬರಲ್ಲಿ ನಂಬಿಕೆ ಹೆಚ್ಚಿಸುತ್ತದೆ. ಆರಂಭದಲ್ಲಿ ನಾನು ಸ್ವಲ್ಪ ಪೊಸೆಸಿವ್ ಆಗಿದ್ದೆ. ಹಾಗಂತ ನಂಬಿಕೆ ಇರಲಿಲ್ಲ ಅಂತ ಅಲ್ಲ. ಮದುವೆ ಆದ ಮೇಲೆ ಜೀವನ ನಮಗೂ ಬೋರ್ ಎನಿಸಿತ್ತು. ನಾನು ಸಾಕಷ್ಟು ಜಗಳ ಆಡಿದ್ದೇವೆ. ಜಗಳದ ಬಳಿಕ ಇಬ್ಬರೂ ಡೇಟ್ ನೈಟ್ ಹೋಗುತ್ತೇವೆ. ಆ ಸಮಯದಲ್ಲಿ ಮಾತನಾಡಿ, ಎಲ್ಲಾ ಬಗೆಹರಿಸಿಕೊಳ್ಳುತ್ತೇವೆ. ಬಳಿಕ ಮತ್ತೆ ಜೀವನ ಹೀಗೆ ಮುಂದುವರೆಯುತ್ತದೆ. ಒಬ್ಬರನ್ನು ಒಬ್ಬರು ಅರ್ಥ ಮಾಡಿಕೊಳ್ಳಬೇಕು. ಆಗ ಸಮಸ್ಯೆ ಇರುವುದಿಲ್ಲ ಎಂದು ವೈವಾಹಿಕ ಬದುಕಿನ ಬಗ್ಗೆ ನಟಿ ಸಲಹೆ ನೀಡಿದ್ದಾರೆ.

    ಸ್ನೇಹಾ ಮೊದಲ ಬಾರಿಗೆ ತಮ್ಮ ಲವ್ ಬ್ರೇಕಪ್ ಬಗ್ಗೆ ಮಾತನಾಡಿದ್ದಾರೆ. ಪ್ರಸನ್ನ(Actor Prasanna) ಕೈ ಹಿಡಿಯುವ ಮುನ್ನ ನನಗೆ ಒಂದು ಲವ್ ಬ್ರೇಕಪ್ (Love Breakup) ಆಗಿತ್ತು. ಆ ಸಮಯದಲ್ಲಿ ನಾನು ಮಾನಸಿಕವಾಗಿ ಸಾಕಷ್ಟು ನೋವು ಅನುಭವಿಸಿದೆ. ಒಂದರ್ಥದಲ್ಲಿ ಖಿನ್ನತೆಗೆ ಒಳಗಾಗಿದ್ದೆ. ಆ ಇಡೀ ವರ್ಷ ನನಗೆ ಬಹಳ ಕೆಟ್ಟದಾಗಿತ್ತು. ಹೊರಗೆ ಸಾಕಷ್ಟು ಜನ ಏನೇನೋ ಮಾತನಾಡುತ್ತಿದ್ದರು. ಈ ಬಗ್ಗೆ ಪೋಷಕರು ನನ್ನ ಜೊತೆ ಚರ್ಚಿಸಿ ಸಂತೈಸಿದ್ದರು. ಅದರ ನಡುವೆ ಸಿನಿಮಾಗಳಲ್ಲಿ ನಟಿಸುತ್ತಿದ್ದೆ. ವಿಶೇಷ ಅಂದರೆ, ಅದೇ ವರ್ಷ ನನ್ನ ನಟನೆಗೆ ರಾಜ್ಯ ಪ್ರಶಸ್ತಿ ಸಿಕ್ಕಿತ್ತು. ಆ ವರ್ಷವನ್ನು ಮರೆಯುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿಕೊಂಡಿದ್ದಾರೆ. ಈ ಮೂಲಕ ತಮ್ಮ ಬಗ್ಗೆ ಹರಿದಾಡುತ್ತಿದ್ದ ವದಂತಿಗಳಿಗೆ ನಟಿ ತೆರೆ ಎಳೆದಿದ್ದಾರೆ.

  • ವಿನಯ್ ರಾಜ್ ಕುಮಾರ್ ಸಿನಿಮಾಗೆ ಸಿಂಪಲ್ ಸುನಿ ನಿರ್ದೇಶನ

    ವಿನಯ್ ರಾಜ್ ಕುಮಾರ್ ಸಿನಿಮಾಗೆ ಸಿಂಪಲ್ ಸುನಿ ನಿರ್ದೇಶನ

    ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ’ ಮೂಲಕ ಪ್ರೇಕ್ಷಕರ ಮನ ಗೆದ್ದಿರುವ ನಿರ್ದೇಶಕ ಸಿಂಪಲ್ ಸುನಿ ಹೊಸದೊಂದು ಚಿತ್ರಕ್ಕೆ ಆಕ್ಷನ್ ಕಟ್ ಹೇಳಲು ತಯಾರಿ ನಡೆಸುತ್ತಿದ್ದಾರೆ. ವಿಶೇಷ ಅಂದ್ರೆ ಈ ಚಿತ್ರದ ಮೂಲಕ ಇದೇ ಮೊದಲ ಬಾರಿಗೆ ದೊಡ್ಮನೆ ಹುಡುಗ ವಿನಯ್ ರಾಜ್ ಕುಮಾರ್ ಗೆ ಸಿಂಪಲ್ ಸುನಿ ಆಕ್ಷನ್ ಕಟ್ ಹೇಳುತ್ತಿದ್ದಾರೆ.

    ಸಿಂಪಲ್ ಸುನಿ ಮುಂದಿನ ಚಿತ್ರ ರೋಮ್ಯಾಂಟಿಕ್ ಸಬ್ಜೆಕ್ಟ್ ಒಳಗೊಂಡಿದ್ದು, ಈ ಚಿತ್ರದಲ್ಲಿ ನಾಯಕ ನಟನಾಗಿ ವಿನಯ್ ರಾಜ್ ಕುಮಾರ್ ನಟಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಸಿಂಪಲ್ ಸುನಿ ಹಾಗೂ ವಿನಯ್ ರಾಜ್ ಕುಮಾರ್ ಒಟ್ಟಿಗೆ ಕೆಲಸ ಮಾಡುತ್ತಿದ್ದು, ಇಬ್ಬರ ಕಾಂಬಿನೇಶನ್ ನಿರೀಕ್ಷೆ ಮೂಡಿಸಿದೆ. ಚಿತ್ರಕ್ಕೆ ಪ್ರಸನ್ನ ಕಥೆ ಬರೆದಿದ್ದು, ಚಿತ್ರಕಥೆ, ಸಂಭಾಷಣೆ ಬರೆದು ಸಿಂಪಲ್ ಸುನಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇದನ್ನೂ ಓದಿ: ನಾನಿಲ್ಲಿ ಗೆದ್ದಿರುವಂಥದ್ದು ನಿಮ್ಮಿಂದ, ನೀವು ನನ್ನನ್ನು ಗೆಲ್ಲಿಸಿದ್ದೀರಿ: ರೂಪೇಶ್ ಶೆಟ್ಟಿ

    ಚಿತ್ರದ ಪ್ರಿ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿರುವ ಸಿಂಪಲ್ ಸುನಿ ಸದ್ಯದಲ್ಲೇ ಚಿತ್ರದ ಟೈಟಲ್, ತಾರಾಬಳಗ ಎಲ್ಲದರ ಬಗ್ಗೆ ಅಧೀಕೃತ ಮಾಹಿತಿ ಹಂಚಿಕೊಳ್ಳೋದಾಗಿ ತಿಳಿಸಿದ್ದಾರೆ. ವಿನಯ್ ರಾಜ್ ಕುಮಾರ್ ಅಭಿನಯದ ‘ಪೆಪೆ’, ‘ಗ್ರಾಮಾಯಣ’, ‘ಅದೊಂದಿತ್ತು ಕಾಲ’ ಸಿನಿಮಾಗಳು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಈ ಬಾರಿ ದೊಡ್ಮನೆ ಅಭಿಮಾನಿಗಳಿಗೆ ಬ್ಯಾಕ್ ಟು ಬ್ಯಾಕ್ ಸಿನಿಮಾಗಳ ಉಡುಗೊರೆ ನೀಡೋಕೆ ವಿನಯ್ ರಾಜ್ ಕುಮಾರ್ ಕೂಡ ರೆಡಿಯಾಗಿದ್ದಾರೆ.

    ಅಂದ್ಹಾಗೆ ಸಿಂಪಲ್ ಸುನಿ, ವಿನಯ್ ರಾಜ್ ಕುಮಾರ್ ಕಾಂಬಿನೇಶನ್ ಮೊದಲ ಚಿತ್ರಕ್ಕೆ ಮೈಸೂರು ರಮೇಶ್ ಬಂಡವಾಳ ಹೂಡುತ್ತಿದ್ದು, ವೀರ್ ಸಮರ್ಥ್ ಸಂಗೀತ ನಿರ್ದೇಶನ, ಸಭಾ ಛಾಯಾಗ್ರಾಹಣವಿರಲಿದೆ. ವಿನಯ್‍ ರಾಜ್ ಕುಮಾರ್ ವೃತ್ತಿ ಜೀವನಕ್ಕೆ ಇದು ವಿಶೇಷ ಸಿನಿಮಾ ಆಗಲಿದೆ ಎಂದು ಹೇಳಲಾಗುತ್ತಿದೆ. ಸದ್ಯದಲ್ಲೇ ಚಿತ್ರೀಕರಣ ಸೇರಿದಂತೆ ಹಲವು ಮಾಹಿತಿಯನ್ನು ಹಂಚಿಕೊಳ್ಳಲಿದೆ ಚಿತ್ರತಂಡ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಹೈಕಮಾಂಡ್ ಹೇಳುತ್ತೆಂದು ಜೆಡಿಎಸ್‍ಗೆ ಸಪೋರ್ಟ್ ಮಾಡಿದ್ರೆ, ನಮ್ಮ ಕಾರ್ಯಕರ್ತರೇ ಹೊಡಿತಾರೆ : ನಾಗಮಂಗಲ ಕೈ ಅಧ್ಯಕ್ಷ

    ಹೈಕಮಾಂಡ್ ಹೇಳುತ್ತೆಂದು ಜೆಡಿಎಸ್‍ಗೆ ಸಪೋರ್ಟ್ ಮಾಡಿದ್ರೆ, ನಮ್ಮ ಕಾರ್ಯಕರ್ತರೇ ಹೊಡಿತಾರೆ : ನಾಗಮಂಗಲ ಕೈ ಅಧ್ಯಕ್ಷ

    ಮಂಡ್ಯ: ಜಿಲ್ಲೆಯಲ್ಲಿ ನಿಖಿಲ್ ಕುಮಾರಸ್ವಾಮಿಗೆ ಸಪೋರ್ಟ್ ಮಾಡಲ್ಲ. ಹೈಕಮಾಂಡ್ ಹೇಳುತ್ತೆ ಅಂತ ಜೆಡಿಎಸ್‍ಗೆ ಸಪೋರ್ಟ್ ಮಾಡಿದರೆ ನಾಳೆ ನಮ್ಮ ಕಾರ್ಯಕರ್ತರೇ ನಮಗೆ ಹೊಡಿತಾರೆ ಎಂದು ನಾಗಮಂಗಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಹೇಳಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಪ್ರಸನ್ನ ಅವರು, ಹೈಕಮಾಂಡ್ ಹೇಳಿದ್ದನ್ನು ನಾವು ಪಾಲಿಸಬೇಕು. ಅಂದರೆ ನಾವು ಏನೇ ಮಾಡಿದರೂ ಸುಮ್ಮನೆ ಇರಬೇಕು. ಅದು ಬಿಟ್ಟು ಹೈಕಮಾಂಡ್ ಹೇಳಿತು ಎಂದು ನಾವು ಬೇರೆ ಕಡೆ ಹೋದರೆ ನಮ್ಮ ಕಾರ್ಯಕರ್ತರೇ ನಮಗೆ ಹೊಡಿಯುತ್ತಾರೆ. ಈಗ ಇಡೀ ಅಂಬರೀಶ್ ಅಭಿಮಾನಿಗಳು ಕಾಂಗ್ರೆಸ್ ಅವರ ಜೊತೆ ಸೇರಿಕೊಂಡು ನಮಗೆ ಎಚ್ಚರಿಕೆ ಕೊಟ್ಟಿದ್ದಾರೆ. ನೀವು ಏನಾದರೂ ಬೇರೆ ಅವರಿಗೆ ಸಪೋರ್ಟ್ ಮಾಡಿದರೆ ನಿಮಗೆ ಹೊಡೆಯುತ್ತೇವೆ ಎಂದಿದ್ದಾರೆ. ನಾವು ಅವರಿಗೆ ಆ ರೀತಿ ಇಲ್ಲ ನಮ್ಮವರು ಸುಮಲತಾ ಅವರಿಗೆ ಟಿಕೆಟ್ ಕೊಡುತ್ತಾರೆ ಎಂದು ಸಮಾಧಾನ ಮಾಡಿದ್ದೇನೆ ಎಂದರು.

    ನಾವು ಕೂಡ ಕಾಂಗ್ರೆಸ್ಸಿನಿಂದ ಸುಮಲತಾ ಅವರು ಬರುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದೇವೆ. ಹೈಕಮಾಂಡ್ ಹೇಳಿದ ಮೇರೆಗೆ ಸಚಿವ ಡಿ.ಕೆ. ಶಿವಕುಮಾರ್ ಅವರು ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. ನಾವು ಕೊನೆಯವರೆಗೂ ಕಾಯುತ್ತೇವೆ. ನಾವು ಜೆಡಿಎಸ್ ಅವರನ್ನು ಬೆಂಬಲಿಸಲ್ಲ ಎಂದು ಹೇಳಿಲ್ಲ. ನಮ್ಮ ಮಂಡ್ಯದವರನ್ನು ಅಭ್ಯರ್ಥಿಯಾಗಿ ಮಾಡಿರಿ ಎಂದು ಹೇಳಿದ್ದೇವೆ. ನೀವು ಮೈತ್ರಿ ಎಂದು ನಿಮಗೆ ಬೇಕಾದವರನ್ನು ನಿಲ್ಲಿಸಿದರೆ ಅದು ಸರಿ ಇಲ್ಲ. ನಮ್ಮ ಮಂಡ್ಯ ಜಿಲ್ಲೆಗೆ ಅದರದ್ದೆ ಆದ ಸ್ಥಾನ-ಮಾನ ಇದೆ. ಸುಮಲತಾ ಅವರಿಗೆ ಜೆಡಿಎಸ್ ಟಿಕೆಟ್ ಕೊಡಿ, ನಾವು ಬೆಂಬಲಿಸುತ್ತೇವೆ ಎಂದು ಪ್ರಸನ್ನ ಅವರು ಹೇಳಿದ್ದಾರೆ.

    ಒಂದು ಕಾಂಗ್ರೆಸ್ಸಿನಿಂದ ಸುಮಲತಾ ಅವರು ನಿಲ್ಲಬೇಕು ಅಥವಾ ಜೆಡಿಎಸ್‍ನಿಂದ ಸುಮಲತಾ ಅವರಿಗೆ ಟಿಕೆಟ್ ಕೊಡಿ. ಇಲ್ಲವಾದರೇ ನಮ್ಮ ಮಂಡ್ಯ ಜಿಲ್ಲೆಯವರಿಗೆ ಟಿಕೆಟ್ ಕೊಡಬೇಕು. ರಾಜಕೀಯದಲ್ಲಿ ಅನುಭವ ಇರುವವರನ್ನು ನಿಲ್ಲಿಸಬೇಕು. ಹೈಕಮಾಂಡ್ ಆದೇಶವನ್ನು ನಾವು ಕೇಳುತ್ತೇನೆ. ಆದರೆ ಜನರು ಕೇಳಲ್ಲ. ಈಗಾಗಲೇ ನಮ್ಮ ಕಾರ್ಯಕರ್ತರು ಎಚ್ಚರಿಕೆ ಕೊಟ್ಟಿದ್ದಾರೆ. ಹೀಗಾಗಿ ಕೊನೆಯ ಕ್ಷಣದವರೆಗೂ ನಾವು ಕಾಯುತ್ತೇವೆ ಎಂದು ಪ್ರಸನ್ನ ಅವರು ತಿಳಿಸಿದ್ದಾರೆ.

    ಇಂದು ಸುಮಲತಾ ಅವರು ನಾಗಮಂಗಲಕ್ಕೆ ಭೇಟಿ ನೀಡುತ್ತಿದ್ದರು. ಈ ಹಿನ್ನೆಲೆಯಲ್ಲಿ ನಾಗಮಂಗಲದಲ್ಲಿ ಚುನಾವಣಾ ಸುತ್ತಾಟ ಕೈಗೊಂಡಿರುವ ಸುಮಲತಾ ಅವರಿಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಎನ್.ಚಲುವರಾಯಸ್ವಾಮಿ ಆಪ್ತ ಪ್ರಸನ್ನ ಸ್ವಾಗತ ಕೋರಿ ಪೋಸ್ಟರ್ ಹಾಕಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ‘ನೀರ್ ದೋಸೆ’ ಸಿನಿಮಾ ನಿರ್ಮಾಪಕ ಅರೆಸ್ಟ್

    ‘ನೀರ್ ದೋಸೆ’ ಸಿನಿಮಾ ನಿರ್ಮಾಪಕ ಅರೆಸ್ಟ್

    ಬೆಂಗಳೂರು: ಸ್ಯಾಂಡಲ್ ವುಡ್ ನ ‘ನೀರ್ ದೋಸೆ’ ಸಿನಿಮಾ ನಿರ್ಮಾಪಕ ಆರ್. ಪ್ರಸನ್ನರನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದಾರೆ.

    ಬ್ಯಾಂಕಿಗೆ ಕಲರ್ ಜೆರಾಕ್ಸ್ ದಾಖಲಾತಿಗಳನ್ನು ಕೊಟ್ಟು ವಂಚನೆ ಮಾಡಿದ್ದ ಆರೋಪದ ಮೇರೆಗೆ ನಿರ್ಮಾಪಕರನ್ನು ಬಂಧಿಸಲಾಗಿದೆ. ಸಿಂಡಿಕೇಟ್ ಬ್ಯಾಂಕ್ ಮ್ಯಾನೇಜರ್ ದಾಶಿಕಾ ರಮೇಶ್ ದೂರು ನೀಡಿದ್ದರು. ಬ್ಯಾಂಕ್ ಮ್ಯಾನೇಜರ್ ದೂರು ನೀಡಿದ ಹಿನ್ನೆಲೆಯಲ್ಲಿ ಈಗ ನಿರ್ಮಾಪಕರನ್ನು ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಪ್ರಸನ್ನ 2015 ರಲ್ಲಿ ಶೇಷಾದ್ರಿಪುರಂನ ಸಿಂಡಿಕೇಟ್ ಬ್ಯಾಂಕಿನಲ್ಲಿ ಮನೆ ಅಡಮಾನವಿಟ್ಟು ಸಾಲ ಪಡೆದಿಕೊಂಡಿದ್ದರು. ಹೊರಕೆರೆಹಳ್ಳಿ ಮನೆಯ ಭೂ ದಾಖಲೆಯನ್ನು ಕಲರ್ ಜೆರಾಕ್ಸ್ ಮಾಡಿಸಿ ಮೂರು ಕಡೆ ಸಾಲ ಪಡೆದಿದ್ದರು. ಶೇಷಾದ್ರಿಪುರಂನ ಸಿಂಡಿಕೇಟ್ ಬ್ಯಾಂಕ್, ಕಿಲಾರಿ ರಸ್ತೆಯ ದೈವಜ್ಞ ಕೊ ಆಪರೇಟಿವ್ ಸೊಸೈಟಿ ಹಾಗು ಮಾರ್ಗದರ್ಶಿ ಚಿಟ್ಸ್ ನಲ್ಲಿ ಸಾಲ ಪಡೆದುಕೊಂಡಿದ್ದರು.

    ಪ್ರಸನ್ನ ಎಲ್ಲ ಬ್ಯಾಂಕ್ ಗಳಿಗೂ ಒಂದೇ ಆಸ್ತಿ ಪತ್ರ ನೀಡಿ ಒಂದೇ ವಾರದಲ್ಲಿ ಒಂದು ಕೋಟಿ ಸಾಲ ಪಡೆದಿದ್ದರು. ಬ್ಯಾಂಕಿನವರು ಆಸ್ತಿ ಪತ್ರ ಪರಿಶೀಲನೆ ನಡೆಸಿದಾಗ ಕಲರ್ ಜೆರಾಕ್ಸ್ ಕೊಟ್ಟಿರುವುದು ಬೆಳಕಿಗೆ ಬಂದಿದೆ. ನಂತರ ಈ ಬಗ್ಗೆ ಪೊಲೀಸರಿಗೆ ದೂರು ಕೊಡುತ್ತೀವಿ ಎಂದಾಗ ಎರಡು ಕಂತುಗಳಲ್ಲಿ 17 ಲಕ್ಷ ರೂ. ಹಣ ವಾಪಸ್ ಮಾಡಿದ್ದರು. ಉಳಿದ 17 ಲಕ್ಷ ರೂ. ಚೆಕ್ ನೀಡಿದ್ದರು. ಆದರೆ ಪ್ರಸನ್ನ ನೀಡಿದ್ದ  ಚೆಕ್ ಬೌನ್ಸ್ ಆಗಿತ್ತು. ಹೀಗಾಗಿ ಸಿಂಡಿಕೇಟ್ ಬ್ಯಾಂಕ್ ಮ್ಯಾನೇಜರ್ ದಾಶಿಕಾ ರಮೇಶ್ ದೂರು ನೀಡಿದ್ದರು. ಸದ್ಯಕ್ಕೆ ಶೇಷಾದ್ರಿಪುರಂ ಪೊಲೀಸರು ನಿರ್ಮಾಪಕ ಪ್ರಸನ್ನರನ್ನು ಬಂಧಿಸಿದ್ದಾರೆ.

    ನಿರ್ಮಾಪಕ ಪ್ರಸನ್ನ ‘ನೀರ್ ದೋಸೆ’, ‘ಬ್ಯೂಟಿಫುಲ್ ಮನಸುಗಳು’ ಸಿನಿಮಾ ಸೇರಿದಂತೆ ಹಲವಾರು ಚಿತ್ರಗಳನ್ನು ನಿರ್ಮಾಣ ಮಾಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv