Tag: Prasannananda swamiji

  • ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಕಾನೂನಾತ್ಮಕ ಸಹಕಾರ: ಪ್ರಹ್ಲಾದ್ ಜೋಶಿ

    ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಕಾನೂನಾತ್ಮಕ ಸಹಕಾರ: ಪ್ರಹ್ಲಾದ್ ಜೋಶಿ

    ಬೆಂಗಳೂರು: ನ್ಯಾ. ನಾಗಮೋಹನ್ ದಾಸ್ ಆಯೋಗದ ವರದಿ ಜಾರಿಗೊಳಿಸುವ ನಿಟ್ಟಿನಲ್ಲಿ ಕಾನೂನಾತ್ಮಕ ಸಹಕಾರ ನೀಡುವುದಾಗಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

    ಕಳೆದ ಆರು ತಿಂಗಳುಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಯವರು ನಡೆಸುತ್ತಿರುವ ಧರಣಿ ಸತ್ಯಾಗ್ರಹದ ಸ್ಥಳಕ್ಕೆ ಭೇಟಿ ನೀಡಿದ ಜೋಶಿ, ಸ್ವಾಮೀಜಿಯವರ ಆರೋಗ್ಯ ವಿಚಾರಿಸಿದರು. ಇದನ್ನೂ ಓದಿ: ರಕ್ತದೊತ್ತಡ, ಮಧುಮೇಹದ ರಾಜಧಾನಿಯಾಗುತ್ತಿದೆ ಭಾರತ – ಸುಧಾಕರ್ ಆತಂಕ

    ಶೇ.7.5 ಕ್ಕೆ ಎಸ್‌ಟಿ ಸಮುದಾಯದ ಮೀಸಲಾತಿ ಹೆಚ್ಚಳ ಸೇರಿದಂತೆ ನಾಗಮೋಹನ್ ದಾಸ್ ವರದಿ ಜಾರಿಗೆ ಆಗ್ರಹಿಸಿ ಪ್ರಸನ್ನಾನಂದ ಸ್ವಾಮೀಜಿಯವರು ಧರಣಿ ನಡೆಸುತ್ತಿದ್ದಾರೆ. ಶೇ.3 ರಷ್ಟು ಇರುವ ಎಸ್‌ಟಿ ಮೀಸಲಾತಿ ಹೆಚ್ಚಳ ಕುರಿತಂತೆ ಕಾನೂನಾತ್ಮಕವಾಗಿ ಸಹಕಾರ ನೀಡಲು ಸಿದ್ಧ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸ್ವಾಮೀಜಿ ಅವರಿಗೆ ಭರವಸೆ ನೀಡಿದ್ದಾರೆ.

    ಸ್ವಾಮೀಜಿಯವರನ್ನ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಜೋಶಿ, ಪ್ರಸನ್ನಾನಂದ ಸ್ವಾಮೀಜಿ ಅವರ ಬೇಡಿಕೆಗಳನ್ನ ಆಲಿಸಿದರು. ನಾಗಮೋಹನ್ ದಾಸ್ ವರದಿ ಜಾರಿ ಕುರಿತ ಸ್ವಾಮೀಜಿ ಅವರ ಬೇಡಿಕೆಗೆ ಸ್ಪಂದಿಸಿರುವ ಕೇಂದ್ರ ಸಚಿವರು, ಈ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡುವುದಾಗಿ ಸ್ವಾಮೀಜಿಯವರಿಗೆ ತಿಳಿಸಿದರು. ಇದನ್ನೂ ಓದಿ: ಮೊಟ್ಟೆ ಹೊಡೆದ ಸಂಪತ್ ಕಾಂಗ್ರೆಸ್‌ನವನಲ್ಲ – ಪಕ್ಕಾ RSS ಕಾರ್ಯಕರ್ತ: ಸಿದ್ದರಾಮಯ್ಯ

    ಎಸ್‌ಟಿ ಮೀಸಲಾತಿ ಶೇ.3 ರಿಂದ ಶೇ.7.5 ರಷ್ಟು ಹೆಚ್ಚಿಸಲು ಕೆಲವು ಕಾನೂನಿನ ತೊಡಕಗಳು ಎದುರಾಗಲಿವೆ. ಕಾನೂನಿನ ಅಡ್ಡಿಗಳನ್ನ ನಿವಾರಣೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಮಟ್ಟದಲ್ಲಿ ಸಹಕಾರ ನೀಡುವ ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಪ್ರಹ್ಲಾದ್ ಜೋಶಿ ಹೇಳಿದರು. ಧರಣಿ ಕೈ ಬಿಡುವಂತೆ ಪ್ರಸನ್ನಾನಂದ ಸ್ವಾಮೀಜಿ ಅವರಲ್ಲಿ ಈ ವೇಳೆ ಮನವಿ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸಭಾಪತಿ ಹೊರಟ್ಟಿ ರಾಜೀನಾಮೆ ನೀಡಿ ತನಿಖೆ ಎದುರಿಸಲಿ: ಪ್ರಸನ್ನಾನಂದ ಸ್ವಾಮೀಜಿ

    ಸಭಾಪತಿ ಹೊರಟ್ಟಿ ರಾಜೀನಾಮೆ ನೀಡಿ ತನಿಖೆ ಎದುರಿಸಲಿ: ಪ್ರಸನ್ನಾನಂದ ಸ್ವಾಮೀಜಿ

    ಧಾರವಾಡ: ಧಾರವಾಡ ಸರ್ವೋದಯ ಶಿಕ್ಷಣ ಟ್ರಸ್ಟ್‌ಗೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಮೇಲೆ ಈಗಾಗಲೇ ದೂರು ದಾಖಲಾಗಿದ್ದು, ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ ಎಂದು ಹರಿಹರ ರಾಜನಳ್ಳಿ ವಾಲ್ಮೀಕಿ ಪೀಠದ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ.

    ಧಾರವಾಡ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ಮಾಡಿ ಮಾತನಾಡಿದ ಅವರು, ಸರ್ವೋದಯ ಶಿಕ್ಷಣ ಸಂಸ್ಥೆಯಲ್ಲಿ ಹೊರಟ್ಟಿ ಅವರು ತಮ್ಮ ರಾಜಕೀಯ ಪ್ರಭಾವ ಬೀರಿ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಶಾಲೆಯಲ್ಲಿ ವರ್ಗಾವಣೆ ಹಾಗೂ ನೇಮಕಾತಿ ಪ್ರಕ್ರಿಯೆ ನಡೆಸಿದ್ದಾರೆ. ಹೀಗಿರುವಾಗ ನಾನು ಎಲ್ಲಾ ತನಿಖೆಗೂ ಸಿದ್ಧ ಎಂದು ಹೇಳಿರುವ ಹೊರಟ್ಟಿ ಅವರು ತಮ್ಮ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು. ಅವರು ಸಭಾಪತಿ ಆಗಿರುವುದರಿಂದ ಅವರಿಗೆ ಯಾವುದೇ ಸಮನ್ಸ್ ನೀಡಲು ಆಗುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಹಾಸ್ಟೆಲ್‍ಗೆ ಟ್ರಾವೆಲ್ ಬ್ಯಾಗ್‍ನಲ್ಲಿ ಯುವತಿಯನ್ನು ಕರೆತಂದ ಪ್ರಿಯಕರ – ವೀಡಿಯೋ ಮಣಿಪಾಲದ್ದಲ್ಲ

    ಎಲ್ಲರೂ ಕುಳಿತು ಸಮಸ್ಯೆ ಬಗೆಹರಿಸುವ ಸಂಬಂಧ ನಾನೂ ಭಕ್ತರ ಜೊತೆ ಮಾತನಾಡುತ್ತೇನೆ. ಒಳ್ಳೆಯದಾಗುವುದಿದ್ದರೆ ಆಗಲಿ. ಈ ಸಮಸ್ಯೆ ಮುಂದುವರೆಸಬೇಕು ಎಂಬ ಆಸೆ ನಮಗೂ ಇಲ್ಲ. ಮುಂದೆ ಏನು ಮಾಡಬೇಕು ಎಂದು ತೀರ್ಮಾನ ತೆಗೆದುಕೊಳ್ಳುತ್ತೇವೆ. ಹೊರಟ್ಟಿ ಅವರು ಸರ್ವೋದಯ ಸಂಸ್ಥೆಯ ಬಗ್ಗೆ ನಾಲ್ಕು ಕೇಸ್‍ಗಳಿವೆ ಎಂದು ಹೇಳಿದ್ದಾರೆ. ಅವರು ಅವುಗಳನ್ನು ದಾಖಲೆ ಸಮೇತ ಬಿಡುಗಡೆ ಮಾಡಲಿ ಎಂದು ಸ್ವಾಮೀಜಿ ತಿಳಿಸಿದ್ದಾರೆ. ಇದನ್ನೂ ಓದಿ: ಅನೈತಿಕ ಸಂಬಂಧ ಶಂಕೆ- ನೀರು ಅಂತ ಎಣ್ಣೆ ಕಾಯಿಸಿ ಪತ್ನಿ ಮೇಲೆ ಎರಚಿದ್ದವ ಅರೆಸ್ಟ್