Tag: Prashant Rajappa

  • ಸಂಭಾಷಣೆಗಾರ ಪ್ರಶಾಂತ್ ರಾಜಪ್ಪ ಇದೀಗ ರಿಷಿ ಸಿನಿಮಾದ ನಿರ್ದೇಶಕ

    ಸಂಭಾಷಣೆಗಾರ ಪ್ರಶಾಂತ್ ರಾಜಪ್ಪ ಇದೀಗ ರಿಷಿ ಸಿನಿಮಾದ ನಿರ್ದೇಶಕ

    ಚಂದನವನದಲ್ಲಿ ಡೈಲಾಗ್ ರೈಟರ್ ಆಗಿ ಗುರುತಿಸಿಕೊಂಡಿರುವ ಪ್ರಶಾಂತ್ ರಾಜಪ್ಪ ನಿರ್ದೇಶಕನಾಗಿ ಬಡ್ತಿ ಪಡೆಯುತ್ತಿದ್ದಾರೆ. ‘ವಿಕ್ಟರಿ’, ‘ಅಧ್ಯಕ್ಷ’, ‘ರನ್ನ’, ‘ಪೊಗರು’, ‘ಹೊಂದಿಸಿ ಬರೆಯಿರಿ’ ಸೇರಿದಂತೆ 25ಕ್ಕೂ ಹೆಚ್ಚು ಸಿನಿಮಾಗಳಿಗೆ ಸಂಭಾಷಣೆ ಬರೆದಿದ್ದಾರೆ ಪ್ರಶಾಂತ್ ರಾಜಪ್ಪ. ಸಹ ನಿರ್ದೇಶಕನಾಗಿಯೂ ಕೆಲಸ ಮಾಡಿದ ಅನುಭವ ಇವರಿಗಿದೆ. ಇದೀಗ ಅವೆಲ್ಲ ಅನುಭವವನ್ನು ಇಟ್ಟುಕೊಂಡು ನಿರ್ದೇಶಕನಾಗಿ ಚಂದನವನದಲ್ಲಿ ಹೊಸ ಇನಿಂಗ್ಸ್ ಆರಂಭಿಸಲು ಹೊರಟಿದ್ದಾರೆ.

    ನಿರ್ದೇಶಕನಾಗಬೇಕು ಎಂಬುದು ಪ್ರಶಾಂತ್ ರಾಜಪ್ಪ ಅವರ ಬಹಳ ವರ್ಷದ ಕನಸು. ಆ ಕನಸೀಗ ನನಸಾಗುವ ಹಂತಕ್ಕೆ ಬಂದಿದೆ. ಸಿನಿಮಾ ಬರಹಗಾರನಾಗಿ, ನಿರ್ದೇಶಕರಾದ ಗುರು ಪ್ರಸಾದ್, ಪಿ.ಸಿ. ಶೇಖರ್, ಹೆಚ್. ಪಿ. ದಾಸ್ ಜೊತೆ ಸಹ ನಿರ್ದೇಶಕನಾಗಿ ಚಿತ್ರರಂಗದಲ್ಲಿ ದುಡಿದ ಅನುಭವವನ್ನು ತಮ್ಮ ಮೊದಲ ಚಿತ್ರಕ್ಕೆ ಧಾರೆ ಎರೆಯುತ್ತಿದ್ದಾರೆ. ಕಥೆ, ಚಿತ್ರಕಥೆ, ಡೈಲಾಗ್ ಬರೆದು ನಿರ್ದೇಶನ ಮಾಡುವುದರ ಮೂಲಕ ಡೈರೆಕ್ಟರ್ ಕ್ಯಾಪ್ ತೊಡುತ್ತಿದ್ದಾರೆ. ಇದನ್ನೂ ಓದಿ:`ಕಾಂತಾರ’ ಮುಂದೆ ಬೆದರಿದ ಬಾಲಿವುಡ್: ಥಿಯೇಟರ್‌ಗೆ `ಗುಡ್ ಬೈ’ ಹೇಳಿದ ರಶ್ಮಿಕಾ ಚಿತ್ರ

    ‘ಆಪರೇಷನ್ ಅಲಮೇಲಮ್ಮ’, ‘ಕವಲು ದಾರಿ’ ಸಿನಿಮಾ ಖ್ಯಾತಿಯ ನಟ ರಿಷಿ ಪ್ರಶಾಂತ್ ರಾಜಪ್ಪ ಮೊದಲ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಕಾಮಿಡಿ ಎಮೋಷನಲ್ ಡ್ರಾಮಾ ಸಿನಿಮಾ ಇದಾಗಿದ್ದು, ಸಿನಿಮಾದ ಪ್ರಿಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಡಿಸೆಂಬರ್ ನಲ್ಲಿ ಸಿನಿಮಾ ಸೆಟ್ಟೇರಲಿದ್ದು, ಜನವರಿಯಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಸದ್ಯದಲ್ಲೇ ಸಿನಿಮಾ ಟೈಟಲ್, ತಾರಾಬಳಗ ಎಲ್ಲವನ್ನೂ ರಿವೀಲ್ ಮಾಡೋದಾಗಿ ಪ್ರಶಾಂತ್ ರಾಜಪ್ಪ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹಳ್ಳಿಯತ್ತ ಹೊರಟ ಕಮರ್ಷಿಯಲ್ ವಾಸು!

    ಹಳ್ಳಿಯತ್ತ ಹೊರಟ ಕಮರ್ಷಿಯಲ್ ವಾಸು!

    ಬೆಂಗಳೂರು: ವಾಸು ನಾನ್ ಪಕ್ಕಾ ಕಮರ್ಷಿಯಲ್ ಚಿತ್ರದ ಮೂಲಕ ಗೆಲುವೊಂದನ್ನು ತಮ್ಮದಾಗಿಸಿಕೊಂಡ ಅನೀಶ್ ತೇಜೇಶ್ವರ್ ಪಕ್ಕಾ ಹಳ್ಳಿ ಲುಕ್ಕಿನಲ್ಲಿ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ಇನ್ನಷ್ಟೇ ಟೈಟಲ್ ಪಕ್ಕಾ ಆಗಬೇಕಿರೋ ಈ ಚಿತ್ರವನ್ನು ಯಶಸ್ವಿ ಸಂಭಾಷಣೆಕಾರ ಪ್ರಶಾಂತ್ ರಾಜಪ್ಪ ನಿರ್ದೇಶನ ಮಾಡಲಿದ್ದಾರೆ.

    ಇದುವರೆಗಿನ ಚಿತ್ರಗಳಲ್ಲಿ ಸ್ಟೈಲಿಶ್ ಲುಕ್ಕಿನಲ್ಲಿ ಕಾಣಿಸಿಕೊಂಡಿದ್ದ ಅನೀಶ್ ಈ ಚಿತ್ರದಲ್ಲಿ ಸಂಪೂರ್ಣವಾಗಿ ಹಳ್ಳಿ ಗೆಟಪ್ಪಿನಲ್ಲಿ ಕಾಣಿಸಿಕೊಳ್ಳಲಿರೋ ಸಂಭ್ರಮದಲ್ಲಿದ್ದಾರೆ. ಈಗಾಗಲೇ ಪ್ರಶಾಂತ್ ರಾಜಪ್ಪ ಸಂಭಾಷಣೆಕಾರರಾಗಿ ಗೆದ್ದಿದ್ದಾರೆ. ಅವರ ಕಾಮಿಡಿ ಕಿಕ್ಕಿಗೆ ಪ್ರೇಕ್ಷಕರೂ ಫಿದಾ ಆಗಿದ್ದಾರೆ. ಅಷ್ಟಕ್ಕೂ ಇದೀಗ ಸಂಭಾಷಣೆಕಾರರಾಗಿ ಗುರುತಿಸಿಕೊಂಡಿರುವ ಪ್ರಶಾಂತ್ ಅವರ ಪ್ರಧಾನ ಉದ್ದೇಶವಾಗಿದ್ದದ್ದು ನಿರ್ದೇಶನ. ಈಗ ಅದಕ್ಕೆ ಕಾಲ ಕೂಡಿ ಬಂದಿದೆ.

    ಸಂಪೂರ್ಣವಾಗಿ ಹಳ್ಳಿಯಲ್ಲೇ ನಡೆಯುವ ಮಜವಾದ ಕಥೆಯೊಂದನ್ನು ಪ್ರಶಾಂತ್ ರಾಜಪ್ಪ ರೆಡಿ ಮಾಡಿಕೊಂಡಿದ್ದಾರೆ. ಈ ಕಥೆ ಹಳ್ಳಿಯ ಆಸುಪಾಸಿನ ಸಣ್ಣ ಪುಟ್ಟ ಪೇಟೆ ಬಿಟ್ರೆ ನಗರದ ಛಾಯೆಯಿಂದ ಸಂಪೂರ್ಣವಾಗಿ ಮುಕ್ತವಾಗಿರಲಿದೆಯಂತೆ. ಈಗಾಗಲೇ ತಾಂತ್ರಿಕ ವರ್ಗದವರ ಆಯ್ಕೆ ಕಾರ್ಯ ಮುಗಿದಿದೆ. ಗಣೇಶನ ಹಬ್ಬದಂದು ಟೈಟಲ್ ಲಾಂಚ್ ಆಗಲಿದೆ. ಬೆಂಗಳೂರು ಸುತ್ತ ಮುತ್ತಲ ಹಳ್ಳಿಗಳಲ್ಲಿಯೇ ಚಿತ್ರೀಕರಣ ನಡೆಸಲು ಯೋಜಿಸಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv