Tag: Pratap Sarangi

  • ಸಂಸತ್‌ ಭವನ ಆವರಣದಲ್ಲಿ ಹೈಡ್ರಾಮಾ – ರಾಹುಲ್‌ ತಳ್ಳಿದ್ರಿಂದ ನಾನು ಬಿದ್ದೆ ಎಂದ ಬಿಜೆಪಿ ಸಂಸದ

    ಸಂಸತ್‌ ಭವನ ಆವರಣದಲ್ಲಿ ಹೈಡ್ರಾಮಾ – ರಾಹುಲ್‌ ತಳ್ಳಿದ್ರಿಂದ ನಾನು ಬಿದ್ದೆ ಎಂದ ಬಿಜೆಪಿ ಸಂಸದ

    -ಪ್ರತಾಪ್‌ ಸಾರಂಗಿಯ ತಳ್ಳಿದ ರಾಹುಲ್‌ ಗಾಂಧಿ, ಚಿಕಿತ್ಸೆ ನೀಡಿದ ಡಾ. ಸಿಎನ್‌ ಮಂಜುನಾಥ್‌!

    ನವದೆಹಲಿ: ಅಂಬೇಡ್ಕರ್‌ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ನೀಡಿದ ಹೇಳಿಕೆ ಬಿಜೆಪಿ-ಕಾಂಗ್ರೆಸ್‌ ನಡುವೆ ಕಿಚ್ಚುಹೊತ್ತಿಸಿದೆ. ಉಭಯ ಪಕ್ಷಗಳು ಸಂಸತ್‌ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಭಾರೀ ಹೈಡ್ರಾಮಾ ನಡೆದಿದೆ. ಬಿಜೆಪಿ ಸಂಸದ ಪ್ರತಾಪ್‌ ಸಾರಂಗಿ (Pratap Chandra Sarangi) ಕುಸಿದುಬಿದ್ದಿದ್ದು, ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

    ಕಾಂಗ್ರೆಸ್‌ ಪ್ರತಿಭಟನೆ ವಿರೋಧಿಸಿ ಬಿಜೆಪಿ ಸದಸ್ಯರು ಪ್ರತಿಭಟಿಸುತ್ತಿದ್ದ (BJP MPs Protest) ವೇಳೆ ಪ್ರತಾಪ್‌ ಸಾರಂಗಿ ಅವರನ್ನು ರಾಹುಲ್‌ ಗಾಂಧಿ ತಳ್ಳಿದ್ದು, ಸಾರಂಗಿ ಕುಸಿದು ಬಿದ್ದಿದ್ದಾರೆ ಎಂದು ಆರೋಪಿಸಿದ್ದಾರೆ. ಸದ್ಯ ಪ್ರತಿಭಟನೆ ವೇಳೆ ಗಾಯಗೊಂಡ ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ಅವರಿಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ. ಸಿ.ಎನ್‌ ಮಂಜುನಾಥ್‌ ಅವರು ಚಿಕಿತ್ಸೆ ನೀಡಿದ್ದಾರೆ. ಬಳಿಕ ಅವರನ್ನ ದೆಹಲಿಯ ಆರ್‌ಎಂಎಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ನಾವು ಎಂದಿಗೂ ಅಂಬೇಡ್ಕರ್‌ರನ್ನ ಅವಮಾನಿಸುವುದಿಲ್ಲ.. ನನ್ನ ಹೇಳಿಕೆ ತಿರುಚಲಾಗಿದೆ: ಅಮಿತ್ ಶಾ

    ಬಿಜೆಪಿ vs ಕಾಂಗ್ರೆಸ್‌ ಪ್ರೊಟೆಸ್ಟ್‌:
    ಚಳಿಗಾಲದ ಅಧಿವೇಶನದಲ್ಲಿ ʻಸಂವಿಧಾನʼ ಕುರಿತ ಚರ್ಚೆ ವೇಳೆ ರಾಜ್ಯಸಭೆಯಲ್ಲಿ ಅಮಿತ್‌ ಶಾ ಅವರು ಮಾತನಾಡುತ್ತಾ, ʻಅಂಬೇಡ್ಕರ್‌ ಅಂಬೇಡ್ಕರ್‌ ಅಂಬೇಡ್ಕರ್‌ ಇದೊಂದು ಫ್ಯಾಷನ್‌ ಆಗಿಬಿಟ್ಟಿದೆ. ಇಷ್ಟು ಬಾರಿ ದೇವರ ಹೆಸರು ಹೇಳಿದ್ದರೆ ಅವರಿಗೆ ಸ್ವರ್ಗದಲ್ಲಿ ಸ್ಥಾನವಾದರೂ ಸಿಗುತ್ತಿತ್ತುʼ ಎಂದು ಹೇಳಿದ್ದರು. ಈ ಕುರಿತ ವೀಡಿಯೋಗಳನ್ನು ವಿಕ್ಷ ನಾಯಕರು ತಮ್ಮ ಸೋಷಿಯಲ್‌ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ ಕೇಂದ್ರ ಗೃಹ ಸಚಿವರು ರಾಜೀನಾಮೇ ನೀಡಬೇಕು, ಅಂಬೇಡ್ಕರ್‌ ವಿರುದ್ಧದ ಟೀಕೆಗೆ ಕ್ಷಮೆಯಾಚಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ. ಈ ನಡುವೆ ಕಾಂಗ್ರೆಸ್‌ ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.

    ಮತ್ತೊಂದೆಡೆ ಕಾಂಗ್ರೆಸ್ ನಿಂದ ಅಂಬೇಡ್ಕರ್‌ಗೆ ಅನ್ಯಾಯವಾಗಿದೆ ಎನ್ನುವ ಪ್ಲೆ ಕಾರ್ಡ್ ಹಿಡಿದು ಬಿಜೆಪಿ ಸದಸ್ಯರು ಪ್ರತಿಭಟನೆಗಿಳಿದಿದ್ದಾರೆ. ಇತ್ತ ಬಿಜೆಪಿ ಸಂಸದರಿಂದಲೂ ಸಂಸತ್ ಆವರಣದಲ್ಲಿ ʻಕಾಂಗ್ರೆಸ್ ನಿಂದ ಅಂಬೇಡ್ಕರ್‌ಗೆ ಅನ್ಯಾಯವಾಗಿದೆʼ ಅನ್ನೋ ಪ್ಲೆ ಕಾರ್ಡ್ ಹಿಡಿದು ಪ್ರತಿಭಟನೆಗಿಳಿದಿದ್ದಾರೆ. ಪ್ರತಿಭಟನೆಯಲ್ಲಿ ಕರ್ನಾಟಕದ ಬಿಜೆಪಿ ಸಂಸದರಾದ ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ, ಜಗ್ಗೇಶ್ ಭಾಗಿಯಾಗಿದ್ದಾರೆ. ಇದನ್ನೂ ಓದಿ: ʼಒಂದು ದೇಶ, ಒಂದು ಚುನಾವಣೆʼ ಪರಿಶೀಲನೆಗೆ JPC ರಚನೆ – ಸಮಿತಿಯಲ್ಲಿ ಪ್ರಿಯಾಂಕಾ ಗಾಂಧಿ

    ಮೋದಿ ತಿರುಗೇಟು:
    ಇನ್ನೂ ಅಮಿತ್‌ ಶಾ ಅವರ ಹೇಳಿಕೆಗೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ಕಾಂಗ್ರೆಸ್‌ ಅಂಬೇಡ್ಕರ್‌ ಏನೇನು ಕೊಟ್ಟಿದೆ ಚುನಾವಣೆಯಲ್ಲಿ ಸೋಲಿಸಿದ್ದು ಕಾಂಗ್ರೆಸ್‌ ಎಂದು ಹೇಳಿದ್ದರು. ಅಮಿತ್‌ ಶಾ ಅವರು ಸಂವಿಧಾನ ಶಿಲ್ಪಿ ಡಾ ಬಿ.ಆರ್‌ ಅಂಬೇಡ್ಕರ್‌ರನ್ನು ಕನಸಿನಲ್ಲಿಯೂ ಅವಮಾನಿಸಲು ಸಾಧ್ಯವಿಲ್ಲದ ಪಕ್ಷದಿಂದ ಬಂದವರು. ಕಾಂಗ್ರೆಸ್‌ ಅವರ ಹೇಳಿಕೆಯನ್ನು ತಿರುಚಿದೆ ಎಂದು ಹೇಳಿದ್ದಾರೆ.

    ಇನ್ನೂ ಸಿಎಂ ಸಿದ್ದರಾಮಯ್ಯ ಕೂಡ ಪತ್ರದ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಅಂಬೇಡ್ಕರ್‌ರಂತಹ ಮಹಾನ್‌ ವ್ಯಕ್ತಿ ಈ ಭೂಮಿಯಲ್ಲಿ ಹುಟ್ಟದಿದ್ದರೆ ನಾನು ಊರಿನಲ್ಲಿ ಕುರಿ ಮೇಯಿಸಿಕೊಂಡು ಇರುತ್ತಿದ್ದೆ, ಅಮಿತ್‌ ಶಾ ಅವರು ಕೂಡ ಗುಜರಿ ವ್ಯಾಪಾರ ಮಾಡಿಕೊಂಡು ಇರಬೇಕಾಗಿತ್ತು ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: Mumbai Boat Accident | ಸ್ಪೀಡ್‌ ಬೋಟ್‌ ಫೆರ್ರಿಗೆ ಡಿಕ್ಕಿ ಹೊಡೆಯಲು ಕಾರಣ ಏನು? ದುರಂತ ಹೇಗಾಯ್ತು?

  • ದೇಶದ ಪ್ರತಿವಾಸಿಗೂ ಉಚಿತ ಕೊರೊನಾ ವ್ಯಾಕ್ಸಿನ್: ಕೇಂದ್ರ ಸಚಿವ ಸಾರಂಗಿ

    ದೇಶದ ಪ್ರತಿವಾಸಿಗೂ ಉಚಿತ ಕೊರೊನಾ ವ್ಯಾಕ್ಸಿನ್: ಕೇಂದ್ರ ಸಚಿವ ಸಾರಂಗಿ

    ಭುವನೇಶ್ವರ: ದೇಶದ ಎಲ್ಲ ವಾಸಿಗಳಿಗೂ ಕೊರೊನಾ ವ್ಯಾಕ್ಸಿನ್ ನೀಡಲಾಗುವುದು ಎಂದು ಕೇಂದ್ರ ಸಚಿವ ಪ್ರತಾಪ್ ಸಾರಂಗಿ ಹೇಳಿದ್ದಾರೆ.

    ಭಾನುವಾರ ಓಡಿಶಾದ ಬಾಲಸೋರ ಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದ ಪಕ್ಷದ ಸಭೆಯಲ್ಲಿ ಪ್ರತಾಪ್ ಸಾರಂಗಿ ಭಾಗವಹಿಸಿದ್ದರು. ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವರು, ಈಗಾಗಲೇ ಪ್ರಧಾನ ಮಂತ್ರಿಗಳು ಎಲ್ಲರಿಗೂ ಉಚಿತವಾಗಿ ಕೊರೊನಾ ವ್ಯಾಕ್ಸಿನ್ ನೀಡಲಾಗುವುದು ಎಂದು ಹೇಳಿದ್ದಾರೆ. ಹಾಗಾಗಿ ಎಲ್ಲರಿಗೂ ಉಚಿತವಾಗಿ ಕೊರೊನಾ ವ್ಯಾಕ್ಸಿನ್ ನೀಡುವ ಕುರಿತು ಸರ್ಕಾರದ ಮಟ್ಟದಲ್ಲಿ ಸಿದ್ಧತೆಗಳು ನಡೆಯುತ್ತಿವೆ. ಪ್ರತಿ ವ್ಯಾಕ್ಸಿನ್ ಗೆ ಅಂದಾಜು 500 ರೂ. ತಗಲಬಹುದು ಎಂದು ತಿಳಿಸಿದರು. ಇದನ್ನೂ ಓದಿ: ಬಿಹಾರ ಜನತೆಗೆ ಉಚಿತ ಕೊರೊನಾ ವ್ಯಾಕ್ಸಿನ್ – ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ

    ಓಡಿಶಾದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಆರ್ಪಿ ಸ್ವೈನ್, ಕೇಂದ್ರ ಸರ್ಕಾರ ಕೊರೊನಾ ವ್ಯಾಕ್ಸಿನ್ ನೀಡುವ ವಿಚಾರದಲ್ಲಿ ತಾರತಮ್ಯ ಮಾಡುತ್ತಿದೆ. ಬಿಹಾರ ಚುನಾವಣೆಯಲ್ಲಿಯೂ ಕೊರೊನಾ ವ್ಯಾಕ್ಸಿನ್ ನೀಡುವ ಕುರಿತು ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ಹಾಗಾಗಿ ಓಡಿಶಾದವರು ಆಗಿರುವ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್ ಮತ್ತು ಪ್ರತಾಪ್ ಸಾರಂಗಿ ಜನರ ಬಳಿ ಕ್ಷಮೆ ಕೇಳಬೇಕು. ಓಡಿಶಾದಲ್ಲಿ ಕೊರೊನಾ ವ್ಯಾಕ್ಸಿನ್ ನೀಡುವ ಕುರಿತು ಬಿಜೆಪಿಯ ನಿಲುವು ಏನು ಎಂಬುದನ್ನ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದರು. ಇದನ್ನೂ ಓದಿ: ಡಿಸಿಜಿಐ ಶೋಕಾಸ್ ನೋಟಿಸ್ – ಕೊರೊನಾ ವ್ಯಾಕ್ಸಿನ್ ಪ್ರಯೋಗ ನಿಲ್ಲಿಸಿದ ಸೆರಮ್

    ತಮಿಳುನಾಡು, ಮಧ್ಯ ಪ್ರದೇಶ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಕೊರೊನಾ ವ್ಯಾಕ್ಸಿನ್ ನೀಡುವ ಕುರಿತು ರಾಜಕೀಯ ಮೇಲಾಟಗಳು ಆರಂಭಗೊಂಡಿವೆ. ಚುನಾವಣೆಯಲ್ಲಿ ಗೆದ್ದರೆ ಉಚಿತ ಕೊರೊನಾ ವ್ಯಾಕ್ಸಿನ್ ನೀಡುವ ಕುರಿತು ರಾಜಕೀಯ ಪಕ್ಷಗಳು ಆಶ್ವಾಸನೆಗಳನ್ನ ನೀಡುತ್ತಿವೆ. ಈ ಕುರಿತು ಪ್ರತಿಕ್ರಿಯಿಸಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ದೇಶದ ಎಲ್ಲ ರಾಜ್ಯಗಳಿಗೂ ಕೇಂದ್ರ ಸರ್ಕಾರ ಉಚಿತವಾಗಿ ಲಸಿಕೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಎಲ್ಲಿಯವರೆಗೂ ಮದ್ದಿಲ್ಲ, ಅಲ್ಲಿಯವರೆಗೂ ಕೊರೊನಾ ಬಗ್ಗೆ ಮೈಮರೆಯಬೇಡಿ : ಪ್ರಧಾನಿ ಮೋದಿ