Tag: Pratibha Singh

  • ಬಿಜೆಪಿಯನ್ನು ಹಾಡಿ ಹೊಗಳಿದ ಹಿ. ಪ್ರದೇಶದ ಕಾಂಗ್ರೆಸ್ ಸಂಸದೆ ಪ್ರತಿಭಾ ಸಿಂಗ್

    ಬಿಜೆಪಿಯನ್ನು ಹಾಡಿ ಹೊಗಳಿದ ಹಿ. ಪ್ರದೇಶದ ಕಾಂಗ್ರೆಸ್ ಸಂಸದೆ ಪ್ರತಿಭಾ ಸಿಂಗ್

    ಶಿಮ್ಲಾ: ಹಿಮಾಚಲ ಪ್ರದೇಶದ (Himachal Pradesh) ರಾಜಕೀಯ ಬಿಕ್ಕಟ್ಟು ಶಮನಗೊಂಡಿದೆ ಎಂದು ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ (DK Shivakumar) ಘೋಷಿಸಿದ ಬೆನ್ನಲ್ಲೇ ಕಾಂಗ್ರೆಸ್‌ ಸಂಸದೆ ಪ್ರತಿಭಾ ಸಿಂಗ್‌ ಅವರು ಬಿಜೆಪಿ ಪರ ಹೇಳಿಕೆಯೊಂದನ್ನು ನೀಡಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹಿಮಾಚಲಪ್ರದೇಶದಲ್ಲಿ ನಮಗಿಂತ ಬಿಜೆಪಿ (BJP) ಉತ್ತಮ ಕೆಲಸಗಳನ್ನು ಮಾಡಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ನಿರ್ದೇಶನದಂತೆ ಬಿಜೆಪಿಯು ಸಾಕಷ್ಟು ಕೆಲಸಗಳನ್ನು ಮಾಡುತ್ತಿದೆ. ಕಾಂಗ್ರೆಸ್‌ನಲ್ಲಿ ಬಹಳಷ್ಟು ಕೆಲಸಗಳು ಬಾಕಿ ಉಳಿದಿವೆ. ಬಿಜೆಪಿಯ ಕೆಲಸ ನಮಗಿಂತ ಉತ್ತಮವಾಗಿದೆ ಎಂಬುದು ನಿಜ ಎಂದು ಹೇಳಿದರು.

    ಸಂಘಟನೆಯನ್ನು ಬಲಪಡಿಸಿದರೆ ಮಾತ್ರ ಮುಂಬರುವ ಚುನಾವಣೆಯನ್ನು ಎದುರಿಸಲು ಸಾಧ್ಯವಾಗುತ್ತದೆ ಎಂದು ನಾನು ಮೊದಲ ದಿನದಿಂದಲೇ ಸಿಎಂಗೆ ಹೇಳುತ್ತಾ ಬಂದಿದ್ದೇನೆ. ಇದು ನಮಗೆ ತುಂಬಾ ಕಠಿಣ ಪರಿಸ್ಥಿತಿಯಾಗಿದೆ. ನಾವು ಪಕ್ಷವನ್ನು ಸಂಘಟಿಸಬೇಕಾಗಿದ್ದು, ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲಬೇಕಾಗಿದೆ ಎಂದರು. ಇದನ್ನೂ ಓದಿ: ಹಾಲಿ 100 ಬಿಜೆಪಿ ಸಂಸದರಿಗೆ ಸಿಗಲ್ಲ ಟಿಕೆಟ್‌

    ರಾಜ್ಯಸಭಾ ಚುನಾವಣೆಯಲ್ಲಿ ಹಿಮಾಚಲಪ್ರದೇಶದಲ್ಲಿ ಅಡ್ಡಮತದಾನ ನಡೆದಿತ್ತು. 6 ಮಂದಿ ಕಾಂಗ್ರೆಸ್‌ ಶಾಸಕರು ಬಿಜೆಪಿಗೆ ಮತದಾನ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಆರು ಶಾಸಕರನ್ನು ಸದನದಿಂದ ಅನರ್ಹಗೊಳಿಸಲಾಗಿತ್ತು. ಅವರ ಭವಿಷ್ಯವನ್ನು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಸಿಂಗ್ ಹೇಳಿದರು.

  • ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಹೈವೋಲ್ಟೇಜ್ ಮೀಟಿಂಗ್ – ನಾನು ಸಿಎಂ ಆಗ್ಬೋದು ಅಂದ ಪ್ರತಿಭಾ ಸಿಂಗ್

    ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಹೈವೋಲ್ಟೇಜ್ ಮೀಟಿಂಗ್ – ನಾನು ಸಿಎಂ ಆಗ್ಬೋದು ಅಂದ ಪ್ರತಿಭಾ ಸಿಂಗ್

    ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ (Himachal Pradesh) ಒಟ್ಟು 68 ಸ್ಥಾನಗಳ ಪೈಕಿ 40 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಈ ಬಾರಿ ಅಧಿಕಾರದ ಗದ್ದುಗೆ ಏರಲು ಕಾಂಗ್ರೆಸ್‌ ಸಿದ್ಧವಾಗಿದೆ.

    ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯನ್ನ ನಿರ್ಧರಿಸಲು ಇಂದು ಮಧ್ಯಾಹ್ನ 3 ಗಂಟೆಗೆ ಕಾಂಗ್ರೆಸ್ ವರಿಷ್ಠರ ನೇತೃತ್ವದಲ್ಲಿ ಹೈವೋಲ್ಟೇಜ್ ಸಭೆ ನಡೆಯಲಿದೆ. ಈ ನಡುವೆ ಕಾಂಗ್ರೆಸ್ ನಾಯಕಿ ಪ್ರತಿಭಾ ಸಿಂಗ್ ಮುಖ್ಯಮಂತ್ರಿಯಾಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ ಗೆದ್ದಿದ್ಹೇಗೆ?

    ಸಭೆಗೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದ ವರಿಷ್ಠರಾದ ಸೋನಿಯಾಗಾಂಧಿ (Sonia Gandhi) ಹಾಗೂ ಹೈಕಮಾಂಡ್ ಚುನಾವಣೆಗೂ (Election) ಮುನ್ನ ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿ ನನಗೆ ನೀಡಿದ್ದರು. ಆದ್ದರಿಂದ ನಾನು ಸಿಎಂ ಆಗಿ ಮುಂದುವರಿಯಬಹುದೆಂದು ಭಾವಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: `ನಮೋ’ಗೆ ಜೈ ಎಂದ ಗುಜರಾತ್ ಜನ – ನೋಟಾ ಮತ ಶೇ.9ರಷ್ಟು ಇಳಿಕೆ

    ಜನರು ದಿ. ವೀರಭದ್ರ ಸಿಂಗ್ ಅವರೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದರಿಂದಲೇ ಕಾಂಗ್ರೆಸ್ 40 ಸ್ಥಾನಗಳನ್ನು ಗೆದ್ದಿದೆ. ಅಂತಹವರ ಕುಟುಂಬವನ್ನು ಕಡೆಗಣಿಸುವುದಿಲ್ಲ ಎಂದು ಹೇಳಿದ್ದಾರೆ.

    ಮಾಜಿ ಸಚಿವರೂ ಆದ ದಿ. ವೀರಭದ್ರ ಸಿಂಗ್ ಅವರು ದೀರ್ಘಕಾಲದ ವರೆಗೆ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ನಾಯಕರಾಗಿ ಉತ್ತಮ ಆಡಳಿತ ನಡೆಸಿದ್ದರು.

    Live Tv
    [brid partner=56869869 player=32851 video=960834 autoplay=true]