Tag: Praveen Kumar Nettar

  • ಪ್ರವೀಣ್‌ ನೆಟ್ಟಾರು ಕನಸು ನನಸು – ನೂತನ ಮನೆಯ ಗೃಹ ಪ್ರವೇಶ,  ಸ್ಮಾರಕ ಲೋಕಾರ್ಪಣೆ

    ಪ್ರವೀಣ್‌ ನೆಟ್ಟಾರು ಕನಸು ನನಸು – ನೂತನ ಮನೆಯ ಗೃಹ ಪ್ರವೇಶ, ಸ್ಮಾರಕ ಲೋಕಾರ್ಪಣೆ

    ಮಂಗಳೂರು: ದುಷ್ಕರ್ಮಿಗಳ ದಾಳಿಗೆ ಬಲಿಯಾಗಿದ್ದ ಬಿಜೆಪಿ (BJP) ಕಾರ್ಯಕರ್ತ ಪ್ರವೀಣ್ ನೆಟ್ಟಾರ್ (Praveen Kumar Nettar) ಅವರ ನೂತನ ಮನೆಯ ಗೃಹ ಪ್ರವೇಶವು ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯ ನೆಟ್ಟಾರ್‌ನಲ್ಲಿ ನೆರವೆರಿದೆ.

    ಬೆಳ್ಳಾರೆಯ ನೆಟ್ಟಾರ್‌ನ ಹಳೆ ಮನೆಯ ಆವರಣದಲ್ಲೇ ಹೊಸ ಮನೆ ನಿರ್ಮಾಣವನ್ನು ಬಿಜೆಪಿ ವತಿಯಿಂದ ಮಾಡಿದ್ದಾರೆ. ಜೊತೆಗೆ ಮನೆ ಮುಂಭಾಗದಲ್ಲಿ ಪ್ರವೀಣ್ ಸ್ಮಾರಕ ನಿರ್ಮಿಸಲಾಗಿದೆ. ಪ್ರವೀಣ್ ಸ್ಮಾರಕವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalinkumar Kateel) ಅವರು ಗುರುವಾರ ಲೋಕಾರ್ಪಣೆ ಮಾಡಲಾಯಿತು.

    ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ನೆರೆದಿದ್ದರು. ಬಿಜೆಪಿ ವತಿಯಿಂದ ನಿರ್ಮಾಣಗೊಂಡ ಪ್ರವೀಣ್ ನೆಟ್ಟಾರ್‌ನ ಕನಸಿನ ಮನೆಯನ್ನು ಪ್ರವೀಣ್ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಇದನ್ನೂ ಓದಿ: ರೈತ ಯುವಕರನ್ನ ಮದುವೆ ಆಗೋರಿಗೆ 2 ಲಕ್ಷ ಪ್ರೋತ್ಸಾಹ ಧನ – JDS ಪ್ರಣಾಳಿಕೆ ಬಿಡುಗಡೆ

    ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಸುಳ್ಯ ತಾಲೂಕಿನ ನೆಟ್ಟಾರುವಿನಲ್ಲಿ ಐದೇ ತಿಂಗಳಲ್ಲಿ ವಿಶಾಲವಾದ ಸುಂದರ ಮನೆ ನಿರ್ಮಾಣವಾಗಿದೆ. 70 ಲಕ್ಷ ವೆಚ್ಚದಲ್ಲಿ, 2,800 ಚದರಡಿ ವಿಸ್ತೀರ್ಣದಲ್ಲಿ ಮನೆ‌‌ ನಿರ್ಮಾಣ ಮಾಡಲಾಗಿದೆ. ಮಾತ್ರವಲ್ಲದೆ, ನೀಡಿದ ಆಶ್ವಾಸನೆಯಂತೆ, ಪ್ರವೀಣ್ ಪತ್ನಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ‌ಕಚೇರಿಯಲ್ಲಿ ಉದ್ಯೋಗವನ್ನೂ ಕೊಡಿಸಲಾಗಿದೆ.

    ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು (31), ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು. ಇದನ್ನೂ ಓದಿ: ಕಾಂಗ್ರೆಸ್ ಮೋದಿಯವರನ್ನು ಸಾವಿನ ಕೂಪಕ್ಕೆ ತಳ್ಳೋ ಆಹ್ವಾನ ನೀಡಿತ್ತು: ಸ್ಮೃತಿ ಇರಾನಿ

  • Praveen Nettaru Case: ಹತ್ಯೆಯ ಪ್ರಮುಖ ಆರೋಪಿಗಳು ಸೌದಿಯಲ್ಲಿ ಭೂಗತ – ತನಿಖೆಯಲ್ಲಿ ಮಹತ್ವದ ಪ್ರಗತಿ

    Praveen Nettaru Case: ಹತ್ಯೆಯ ಪ್ರಮುಖ ಆರೋಪಿಗಳು ಸೌದಿಯಲ್ಲಿ ಭೂಗತ – ತನಿಖೆಯಲ್ಲಿ ಮಹತ್ವದ ಪ್ರಗತಿ

    ಮಂಗಳೂರು: ಪ್ರವೀಣ್ ಕುಮಾರ್‌ ನೆಟ್ಟಾರು (Praveen Kumar Nettar) ಹತ್ಯೆ ಪ್ರಕರಣದ ಆರೋಪಿಗಳ ಬೆನ್ನು ಬಿದ್ದಿರುವ (National Investigation Agency) ಎನ್‍ಐಎಗೆ ಮಹತ್ವದ ಸುಳಿವು ಸಿಕ್ಕಿದೆ. ತಲೆ ಮರೆಸಿಕೊಂಡಿರುವ ಪ್ರಮುಖ ಆರೋಪಿಗಳ ಸುಳಿವು ಸಿಕ್ಕಿ ಎನ್‍ಐಎ ವಿದೇಶದತ್ತ ತೆರಳಲು ತಯಾರಿ ನಡೆಸಿದೆ.

    2022ರ ಜುಲೈ 27 ರಂದು ದಕ್ಷಿಣ ಕನ್ನಡದ ಬೆಳ್ಳಾರೆಯಲ್ಲಿ (Bellare) ಬಿಜೆಪಿ (BJP) ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪಿಎಫ್‍ಐ ಸಂಘಟನೆ ನಡೆಸಿದ ಈ ಹತ್ಯೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಈ ಹತ್ಯೆ ಪ್ರಕರಣವನ್ನು ಎನ್‍ಐಎಗೆ ಹಸ್ತಾಂತರಿಸಿದ ಬಳಿಕ ತೀವ್ರಗತಿಯಲ್ಲಿ ತನಿಖೆ ನಡೆದಿದ್ದು ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದ ಹತ್ತು ಮಂದಿಯನ್ನು ಬಂಧಿಸಿ ಜೈಲಿಗಟ್ಟಲಾಗಿದೆ. ಆದ್ರೆ ಹತ್ಯೆಯ ಮಾಸ್ಟರ್ ಪ್ಲಾನ್ ಮಾಡಿದವರು, ಹಣಕಾಸು ಹಾಗೂ ಆಶ್ರಯ ನೀಡಿದ ಪ್ರಮುಖ ಆರೋಪಿಗಳು ಇನ್ನೂ ತಲೆಮರೆಸಿಕೊಂಡಿದ್ದಾರೆ. ಇವರ ಬಂಧನ ತಲೆನೋವಾಗಿದ್ದ ಎನ್‍ಐಎ ಆರೋಪಿಗಳ ಪತ್ತೆಗೆ ಬಹುಮಾನ ಘೋಷಿಸಿತ್ತು. ಒಟ್ಟು ಆರು ಪ್ರಮುಖ ಆರೋಪಿಗಳನ್ನು ಪತ್ತೆ ಹಚ್ಚಿ ಕೊಟ್ಟವರಿಗೆ ಒಟ್ಟು 22 ಲಕ್ಷ ಬಹುಮಾನ ಘೋಷಿಸಿತ್ತು. ಇದರ ಫಲವಾಗಿಯೇ ಇದೀಗ ಇಬ್ಬರು ಪ್ರಮುಖ ಆರೋಪಿಗಳ ಸುಳಿವು ಸಿಕ್ಕಿದ್ದು ಬಂಧನಕ್ಕೆ ಎನ್‍ಐಎ ಬಲೆ ಬೀಸಿದೆ. ಇದನ್ನೂ ಓದಿ: Praveen Nettaru murder case: 1,500 ಪುಟಗಳ ಸುದೀರ್ಘ ಚಾರ್ಜ್‌ಶೀಟ್‌ ಸಲ್ಲಿಸಿದ NIA

    ಮೊದಲಿಗೆ ನಾಲ್ಕು ಆರೋಪಿಗಳ ಬಂಧನಕ್ಕೆ ಎನ್‍ಐಎ ಬಹುಮಾನ ಘೋಷಿಸಿದ್ದು ಬಳಿಕ ಜನವರಿ 22 ರಂದು ಬಂಟ್ವಾಳದ ಕೋಡಾಜೆ ನಿವಾಸಿ ಮಹಮ್ಮದ್ ಶರೀಫ್ ಹಾಗೂ ನೆಕ್ಕಿಲಾಡಿ ಅಗ್ನಾಡಿ ಹೌಸ್ ನಿವಾಸಿ ಕೆ.ಎ.ಮಸೂದ್ ಪತ್ತೆಗೆ ಒಟ್ಟು ಹತ್ತು ಲಕ್ಷ ಬಹುಮಾನ ಘೋಷಿಸಿತ್ತು. ಈ ಬಹುಮಾನ ಘೋಷಣೆಯ ಕೆಲವೇ ದಿನಗಳಲ್ಲಿ ಎನ್‍ಐಎ ಅಧಿಕಾರಿಗಳಿಗೆ ಅನಾಮಿಕ ವ್ಯಕ್ತಿ ಮಾಹಿತಿ ನೀಡಿದ್ದು ಆರೋಪಿಗಳಿಬ್ಬರೂ ಸೌದಿ ಅರೇಬಿಯಾದಲ್ಲಿ ಇರುವ ಸುಳಿವು ನೀಡಿದ್ದಾನೆ. ಹೀಗಾಗಿ ಎನ್‍ಐಎ ಅಧಿಕಾರಿಗಳು ಈ ಇಬ್ಬರನ್ನೂ ಸೌದಿ ಅರೇಬಿಯಾದಿಂದ ಬಂಧಿಸಿ ತರಲು ತಯಾರಿ ನಡೆಸಿದ್ದಾರೆ. ಇವರ ಬಂಧನಕ್ಕೆ ಬೇಕಾದ ಸಹಾಯಕ್ಕೆ ಸೌದಿ ಅರೇಬಿಯಾ ಸರ್ಕಾರದ ಜೊತೆ ಉನ್ನತ ಅಧಿಕಾರಿಗಳು ಈಗಾಗಲೇ ಮಾತುಕತೆ ನಡೆಸಿದ್ದು, ಕೆಲವೇ ದಿನಗಳಲ್ಲಿ ಬಂಧಿಸಿ ಕರೆ ತರುವ ಸಾಧ್ಯತೆ ಹೆಚ್ಚಿದೆ. ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸದಂತೆ ತೀರ್ಮಾನ ಮಾಡಿದ್ದೇನೆ: ಬಿಎಸ್‌ವೈ

    ಈ ಹತ್ಯೆ ಪ್ರಕರಣದಲ್ಲಿ ಇನ್ನೂ ನಾಲ್ವರು ಪ್ರಮುಖ ಆರೋಪಿಗಳಿದ್ದು ಅವರ ಬಂಧನಕ್ಕೆ ಮೊದಲ ಹಂತದಲ್ಲಿ 12 ಲಕ್ಷ ರೂ. ಬಹುಮಾನ ಘೋಷಿಸಿದೆ. ಆರೋಪಿಗಳಾದ ಸುಳ್ಯದ ಬೆಳ್ಳಾರೆ ಬೂಡುಮನೆ ನಿವಾಸಿ ಮೊಹಮ್ಮದ್ ಮುಸ್ತಾಫಗೆ 5 ಲಕ್ಷ ರೂ., ಮಡಿಕೇರಿಯ ಗದ್ದಿಗೆ ನಿವಾಸಿ ತುಫೈಲ್ ಎಚ್.ಎಂಗೆ 5 ಲಕ್ಷ ರೂ., ಸುಳ್ಯದ ಕಲ್ಲುಮುಟ್ಲು ನಿವಾಸಿ ಉಮ್ಮರ್ ಫಾರೂಕ್‍ಗೆ 2 ಲಕ್ಷ ರೂ. ಹಾಗೂ ಸುಳ್ಯದ ಬೆಳ್ಳಾರೆ ನಿವಾಸಿ ಅಬೂಬಕ್ಕರ್ ಸಿದ್ದಿಕ್ ಪತ್ತೆಗೆ 2 ಲಕ್ಷ ರೂ. ಬಹುಮಾನ ಈ ಹಿಂದೆಯೇ ಎನ್‍ಐಎ ಘೋಷಿಸಿತ್ತು. ಒಟ್ಟಿನಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ಕೇಸನ್ನು ಗಂಭೀರವಾಗಿ ಪರಿಗಣಿಸಿರುವ ಎನ್ಐಎ ಎಲ್ಲಾ ಆರೋಪಿಗಳನ್ನು ಬಂಧಿಸುವವರೆಗೂ ವಿರಮಿಸುವ ಲಕ್ಷಣ ಕಾಣಿಸುತ್ತಿಲ್ಲ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನುಡಿದಂತೆ ಪ್ರವೀಣ್ ನೆಟ್ಟಾರ್ ಕುಟುಂಬದ ಮನೆ ನಿರ್ಮಾಣಕ್ಕೆ ಅಡಿಪಾಯ ಹಾಕಿದ ಬಿಜೆಪಿ

    ನುಡಿದಂತೆ ಪ್ರವೀಣ್ ನೆಟ್ಟಾರ್ ಕುಟುಂಬದ ಮನೆ ನಿರ್ಮಾಣಕ್ಕೆ ಅಡಿಪಾಯ ಹಾಕಿದ ಬಿಜೆಪಿ

    ಮಂಗಳೂರು: ಜುಲೈ 26 ರಂದು ರಾತ್ರಿ ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು (Praveen Kumar Nettar) ಕನಸಿನ ಮನೆ ನಿರ್ಮಾಣಗೊಳ್ಳುವ ಕಾಲ ಸನ್ನಿಹಿತವಾಗಿದೆ. ಕೆಲ ದಿನಗಳ ಹಿಂದೆ ಪ್ರವೀಣ್ ಕುಟುಂಬಸ್ಥರಿಗೆ ಸಂಸದ, ಬಿಜೆಪಿ ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalinkumar Kateel) ಕೊಟ್ಟ ಮಾತಿನಂತೆ ಮನೆ ನಿರ್ಮಾಣಕ್ಕೆ ಚಾಲನೆ ನೀಡಿದ್ದಾರೆ.

    ಪ್ರವೀಣ್ ನೆಟ್ಟಾರು ಕಂಡಿದ್ದ ಸುಂದರ ಮನೆಯ ಕನಸನ್ನು ನನಸು ಮಾಡುವತ್ತ ಬಿಜೆಪಿ (BJP) ಮುಂದಡಿ ಇಟ್ಟಿದೆ. ನಳಿನ್ ಕುಮಾರ್ ಕಟೀಲ್ ಧಾರ್ಮಿಕ ವಿಧಿ ವಿಧಾನದಂತೆ ಶಂಕುಸ್ಥಾಪನೆ ನೆರವೇರಿಸಿದರು. ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೋಸ್ಟ್ ವಾಂಟೆಡ್ ತುಫೈಲ್ ಹುಡುಕಾಟಕ್ಕಿಳಿದ ಕೊಡಗು ಪೊಲೀಸರು

    ಪ್ರವೀಣ್ ಕಂಡಿದ್ದ ಕನಸಿನಂತೆಯೇ ಮನೆ ನಿರ್ಮಾಣಗೊಳ್ಳುತ್ತಿದೆ. ಹಳೆಯ ಮನೆ ಕೆಡವಿ ಇಂದು ಹೊಸ ಮನೆಗೆ ಗುದ್ದಲಿ ಪೂಜೆ ಮಾಡಲಾಗಿದೆ. ಪ್ರವೀಣ್ ಮನೆಯವರೇ ಕೊಟ್ಟ ನಕ್ಷೆಯ ಪ್ರಕಾರ ಮನೆ ನಿರ್ಮಾಣ ಆಗುತ್ತಿದೆ. ಮೊಗರೋಡಿ ಕನ್ಸ್ ಸ್ಟ್ರಕ್ಷನ್ ಕಂಪನಿಗೆ ಮನೆ ನಿರ್ಮಾಣದ ಜವಾಬ್ದಾರಿ ವಹಿಸಲಾಗಿದೆ. 60 ಲಕ್ಷ ರೂ. ವೆಚ್ಚದಲ್ಲಿ 2,700 ಚದರ ಅಡಿಯ ಮನೆ ನಿರ್ಮಾಣ ಆಗಲಿದೆ. ಮುಂದಿನ ವರ್ಷದ ಮೇ ತಿಂಗಳ ಒಳಗಾಗಿ ಮನೆಯನ್ನು ಪೂರ್ಣ ಮಾಡಿಕೊಡಲು ಇಂದಿನಿಂದಲೇ ಕೆಲಸ ಆರಂಭಿಸಲಾಗಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

    ಪ್ರವೀಣ್ ಪತ್ನಿ ನೂತನಾರವರಿಗೆ ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನೌಕರಿ ಕೊಡಿಸುವಲ್ಲಿ ಮುಖ್ಯ ಪಾತ್ರ ವಹಿಸಿದ್ದ ನಳಿನ್ ಕುಮಾರ್ ಕಟೀಲ್ ಇದೀಗ ಮನೆಯ ಕನಸ್ಸನ್ನು ನನಸಾಗಿಸುವತ್ತ ಹೆಜ್ಜೆ ಇರಿಸಿದ್ದಾರೆ. ಪ್ರವೀಣ್ ಕುಟುಂಬಕ್ಕೆ ಮನೆ ನಿರ್ಮಾಣವಾಗುತ್ತಿರುವುದಕ್ಕೆ ಪತ್ನಿ ಮತ್ತು ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ. ಸಂಸದರು, ಸಚಿವರು ಮತ್ತು ಬಿಜೆಪಿ ಮುಖಂಡರು ಪ್ರವೀಣ್ ಅವರ ಕನಸು ನನಸು ಮಾಡಲು ಮೊದಲ ಹೆಜ್ಜೆ ಇಟ್ಟಿದ್ದಾರೆ. ನಮ್ಮ ಮನೆಯವರ ಪರವಾಗಿ ಎಲ್ಲರಿಗೂ ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಕೇಸ್ – ನಾಲ್ವರು ಆರೋಪಿಗಳ ಸುಳಿವು ನೀಡಿದವರಿಗೆ ಭಾರೀ ಬಹುಮಾನ ಘೋಷಣೆ

    ಬಿಜೆಪಿ ವತಿಯಿಂದ ಈಗಾಗಲೇ ಪ್ರವೀಣ್ ಕುಟುಂಬಕ್ಕೆ 25 ಲಕ್ಷ ನೀಡಲಾಗಿದ್ದು, ಸರ್ಕಾರದಿಂದಲೂ 25 ಲಕ್ಷ ರೂ. ಪರಿಹಾರ ನೀಡಲಾಗಿದೆ. ಅಲ್ಲದೆ ಪ್ರವೀಣ್ ನೆಟ್ಟಾರು ಕಾರ್ಯಾಚರಿಸುತ್ತಿದ್ದ ಯುವ ಮೋರ್ಚಾದಿಂದ 15 ಲಕ್ಷ ರೂ. ಪರಿಹಾರ ನೀಡಲಾಗಿದೆ. ಇದೀಗ ಮನೆ ಕಟ್ಟುವ ಜವಾಬ್ದಾರಿಯನ್ನೂ ಪಕ್ಷ ತೆಗೆದುಕೊಂಡಿದ್ದು ಆದಷ್ಟು ಬೇಗ ಮನೆ ನಿರ್ಮಾಣಗೊಳ್ಳಲಿ ಎನ್ನುವುದು ಪ್ರವೀಣ್ ಪೋಷಕರು ಮತ್ತು ಕಾರ್ಯಕರ್ತರ ಆಶಯವಾಗಿದೆ.

    ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಎಸ್.ಅಂಗಾರ, ಪುತ್ತೂರು ಶಾಸಕ ಸಂಜೀವ ಮಠಂದೂರು, ಪ್ರವೀಣ್ ಅವರ ತಂದೆ, ತಾಯಿ ಸಹಿತ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಶಂಕುಸ್ಥಾಪನೆಗೆ ಸಾಕ್ಷಿಗಳಾದರು. ಜೊತೆಗೆ ಪ್ರವೀಣ್ ನೆಟ್ಟಾರು ಸಮಾಧಿಗೆ ನಮನ ಸಲ್ಲಿಸಿದರು.

    Live Tv
    [brid partner=56869869 player=32851 video=960834 autoplay=true]

  • ಮಂಗಳೂರಿನಲ್ಲಿ ಕೆಲ್ಸ- ಸಿಎಂಗೆ ಧನ್ಯವಾದ ಹೇಳಿದ ಪ್ರವೀಣ್ ನೆಟ್ಟಾರು ಪತ್ನಿ

    ಮಂಗಳೂರಿನಲ್ಲಿ ಕೆಲ್ಸ- ಸಿಎಂಗೆ ಧನ್ಯವಾದ ಹೇಳಿದ ಪ್ರವೀಣ್ ನೆಟ್ಟಾರು ಪತ್ನಿ

    ಬೆಂಗಳೂರು: ಬಿಜೆಪಿ ಕಾರ್ಯಕರ್ತ ದಿವಂಗತ ಪ್ರವೀಣ್ ಕುಮಾರ್ ನೆಟ್ಟಾರು (Praveen Kumar Nettar) ಅವರ ಧರ್ಮಪತ್ನಿ ನೂತನ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರನ್ನು ಭೇಟಿಯಾಗಿ ಸರ್ಕಾರದಿಂದ ಗ್ರೂಪ್ ಸಿ ಹುದ್ದೆಗೆ ನೇಮಕಾತಿ ಮಾಡಿದ್ದಕ್ಕಾಗಿ ಹಾಗೂ ಮಂಗಳೂರಿನಲ್ಲೇ ಕಾರ್ಯನಿರ್ವಹಿಸಲು ಅನುವು ಮಾಡಿಕೊಟ್ಟಿದ್ದಕ್ಕಾಗಿ ಧನ್ಯವಾದ ಸಲ್ಲಿಸಿದ್ದಾರೆ.

    ಬಿಜೆಪಿ ಕಾರ್ಯಕರ್ತ ದಿವಂಗತ ಪ್ರವೀಣ್ ಕುಮಾರ್ ನೆಟ್ಟಾರು ಅವರ ಧರ್ಮಪತ್ನಿ ಶ್ರೀಮತಿ ನೂತನ ಅವರು ಬಿಜೆಪಿ ರಾಜ್ಯಾದ್ಯಕ್ಷರಾದ ನಳಿನ್ ಕುಮಾರ್ ಕಟೀಲ್ (Nalinkumar Kateel) ಅವರೊಂದಿಗೆ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು. ಸರ್ಕಾರದಿಂದ ಕೆಲಸ ಕೊಡಿಸಿ ಮಂಗಳೂರಿನಲ್ಲಿ ಕಾರ್ಯನಿರ್ವಹಿಸಲು ಸಹಕರಿಸಿದಕ್ಕಾಗಿ ಧನ್ಯವಾದ ಸಮರ್ಪಿಸಿದರು. ಇದನ್ನೂ ಓದಿ: ಮದರಸಾದಲ್ಲಿ 1985ರಿಂದಲೂ ಪೂಜೆ ಇತ್ತು, ಪೊಲೀಸರ ಅನುಮತಿ ಸಿಕ್ಕಿತ್ತು: ಹಿಂದೂ ಮುಖಂಡರ ಸ್ಪಷ್ಟನೆ

    ಸರ್ಕಾರದಿಂದ ಗ್ರೂಪ್ ಸಿ ಹುದ್ದೆಗೆ ನೇಮಕಾತಿ ಮಾಡಿ ಸಿಎಂ ಕಚೇರಿಯಲ್ಲಿ ಕೆಲಸ ಕೊಡುವುದಾಗಿ ಸಿಎಂ ಹೇಳಿದ್ದರು. ಈ ವೇಳೆ ಮಂಗಳೂರಿನಲ್ಲಿ ಕೆಲಸ ಕೊಡುವಂತೆ ಬೇಡಿಕೆ ಕೇಳಿ ಬಂದಿತ್ತು. ಇದನ್ನು ಮನಗಂಡು ಬೊಮ್ಮಾಯಿ ಮಂಗಳೂರಿನಲ್ಲೇ ಕಾರ್ಯನಿರ್ವಹಿಸಲು ಅನುವು ಮಾಡಿಕೊಟ್ಟಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ PayCM ಕ್ಯಾಂಪೇನ್‌ – ಬಿಜೆಪಿ ನಾಯಕರಿಗೆ ಹೈಕಮಾಂಡ್‌ ಕ್ಲಾಸ್‌

    Live Tv
    [brid partner=56869869 player=32851 video=960834 autoplay=true]

  • ಪ್ರವೀಣ್ ಪತ್ನಿಗೆ ಗ್ರೂಪ್ ಸಿ ಹುದ್ದೆ- ಸರ್ಕಾರ ಆದೇಶ

    ಪ್ರವೀಣ್ ಪತ್ನಿಗೆ ಗ್ರೂಪ್ ಸಿ ಹುದ್ದೆ- ಸರ್ಕಾರ ಆದೇಶ

    ಬೆಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಬಿಜೆಪಿ (BJP) ಮುಖಂಡ ಪ್ರವೀಣ್ ನೆಟ್ಟಾರು (Praveen Kumar Nettar) ಪತ್ನಿಗೆ ಸಿಎಂ ಸಚಿವಾಲಯದಲ್ಲಿ ಗ್ರೂಪ್ ಸಿ ಹುದ್ದೆ ನೀಡಲು ಸಿಎಂ ಕಚೇರಿ ಆದೇಶ ಹೊರಡಿಸಿದೆ.

    ಇತ್ತೀಚೆಗೆ ದೊಡ್ಡಬಳ್ಳಾಪುರದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ತಮ್ಮ ಕಚೇರಿಯಲ್ಲಿ ಕೆಲಸ ನೀಡುವುದಾಗಿ ಭರವಸೆ ನೀಡಿದ್ದರು. ಆ ಪ್ರಕಾರವಾಗಿಯೇ ಇಂದು ಪ್ರವೀಣ್ ನೆಟ್ಟಾರು ಪತ್ನಿ ನೂತನಾಗೆ ಸರ್ಕಾರಿ ನೌಕರಿಯನ್ನು ನೀಡಿದ್ದಾರೆ.

    ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ 31 ವರ್ಷದ ಪ್ರವೀಣ್ ಕುಮಾರ್ ನೆಟ್ಟಾರು ಜುಲೈ 26 ರಂದು ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು. ಇದನ್ನೂ ಓದಿ: ಹೆಚ್.ಡಿ.ದೇವೇಗೌಡರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ನಿರ್ಮಲಾ ಸೀತಾರಾಮನ್

    ಪ್ರವೀಣ್ ನೆಟ್ಟಾರು ಹತ್ಯೆಯಿಂದ ದಕ್ಷಿಣ ಕನ್ನಡದಲ್ಲೂ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲೂ ಕ್ಷೋಭೆ ಭುಗಿಲೆದ್ದಿತ್ತು, ತನಿಖೆಯಲ್ಲಿ ಸರ್ಕಾರ ವಿಫಲವಾಗಿದೆ. ಕಾರ್ಯಕರ್ತರ ಹಿತ ಕಾಯಲು ಪಕ್ಷ ವಿಫಲವಾಗಿದೆ ಎಂದು ಆರೋಪಿಸಿ ಹಲವಾರು ಬಿಜೆಪಿ ಪದಾಧಿಕಾರಿಗಳು ರಾಜೀನಾಮೆ ನೀಡಿದ್ದರು. ಇದರಿಂದಾಗಿ ಪಕ್ಷ ಹಾಗೂ ಸರ್ಕಾರವು ಮುಜುಗರ ಅನುಭವಿಸಬೇಕಾದ ಪರಿಸ್ಥಿತಿಯೂ ಉಂಟಾಗಿತ್ತು. ಇದನ್ನೂ ಓದಿ: ಅಭಿವೃದ್ಧಿಗೆ ಹುಬ್ಬಳ್ಳಿ – ಅಂಕೋಲಾ ರೈಲು ಮಾರ್ಗ ಅವಶ್ಯಕ : ಪ್ರಹ್ಲಾದ್ ಜೋಶಿ

    Live Tv
    [brid partner=56869869 player=32851 video=960834 autoplay=true]

  • PFI ಬ್ಯಾನ್: ಹಳೇ ಕೇಸ್, ಹೊಸ ಆಟ – ಇದು ಬಿಜೆಪಿ ಗೇಮ್!

    PFI ಬ್ಯಾನ್: ಹಳೇ ಕೇಸ್, ಹೊಸ ಆಟ – ಇದು ಬಿಜೆಪಿ ಗೇಮ್!

    ಬೆಂಗಳೂರು: ದೇಶಾದ್ಯಂತ ಪಿಎಫ್‍ಐ (PFI) 5 ವರ್ಷ ಬ್ಯಾನ್ ಮಾಡಲಾಗಿದ್ದು. ಸದ್ಯ ಪಿಎಫ್‍ಐಗೆ ಮುಂದೆ ನಿಂತು ಹೋರಾಟ ಮಾಡುವವರು ಯಾರೂ ಇಲ್ಲ. ಈಗಾಗಲೇ ಎನ್‍ಐಎ (NIA) ಮೊದಲ ಹಾಗೂ ದ್ವಿತೀಯ ಹಂತದ ನಾಯಕರನ್ನು ಬಂಧಿಸಿಟ್ಟಿದೆ.

    bjP

    ಕೆಲ ಸದಸ್ಯರು ವಿದೇಶಗಳಲ್ಲಿ ತಲೆ ಮರೆಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಮಧ್ಯೆ ಕೆಲ ದಿನಗಳ ಬಳಿಕ ಅಜ್ಞಾತವಾಗಿದ್ದುಕೊಂಡೇ ಬೇರೆ ಹೆಸರಲ್ಲಿ ಸಂಘಟನೆ ಸಕ್ರಿಯಗೊಳಿಸೋಕೆ ಮಾಸ್ಟರ್ ಪ್ಲಾನ್ ಮಾಡಲಾಗಿದೆ ಎನ್ನಲಾಗುತ್ತಿದೆ. ಇದಕ್ಕೆ ಮಾಸ್ಟರ್ ಸ್ಟ್ರೋಕ್ ಕೊಡೋಕೆ ಕೇಂದ್ರ ತನಿಖಾ ಸಂಸ್ಥೆಗಳು ರೆಡಿ ಆಗಿದೆ. ವಿದೇಶದಲ್ಲಿರುವ ಪಿಎಫ್‍ಐ ಸಂಘಟನೆಯವರ ಮೇಲೆ ಕಣ್ಣಿಡಲು ಸಿದ್ಧತೆ ನಡೆಸಿದೆ. ಅಲ್ಲದೇ ಪಿಎಫ್‍ಐನ ಎಲ್ಲ ಸದಸ್ಯರ ಆಧಾರ್, ಪ್ಯಾನ್, ಭಾವಚಿತ್ರಗಳ ಮಾಹಿತಿ ಸಂಗ್ರಹಿಸುತ್ತಿದೆ. ಯಾರದ್ದೇ ಹೆಸರಲ್ಲಿ ಹೊಸ ಸಂಘಟನೆ ಸ್ಥಾಪನೆಗೆ ಅರ್ಜಿ ಬಂದ್ರೆ ಪರಿಶೀಲನೆ ನಡೆಸಲಾಗುತ್ತಿದೆ. ಅಲ್ಲದೆ ಈ ಹಿಂದೆ ಇವರೆಲ್ಲ ನಿಷೇಧಿತ ಸಂಘಟನೆ ಸದಸ್ಯರಾಗಿದ್ರು ಅಂತಾ ಪ್ರೂವ್ ಮಾಡಲು ಸಿದ್ಧತೆ ಕೂಡ ಮಾಡಲಾಗಿದ್ದು, ತಲೆ ಮರೆಸಿಕೊಂಡಿರುವ ಸಂಘಟನೆ ಸದಸ್ಯರ ಮೇಲೆ ಹದ್ದಿನ ಕಣ್ಣಿಡಲಾಗಿದೆ. ಇದನ್ನೂ ಓದಿ: ಪಿಎಸ್‍ಐ ಮರು ಪರೀಕ್ಷೆಗೆ ಹೈಕೋರ್ಟ್ ತಡೆ

    ಈ ನಡುವೆ ದೇಶದಲ್ಲಿ ಪಿಎಫ್‍ಐ ಬ್ಯಾನ್ ಮಾಡಿದ ಕೇಂದ್ರ ಬಿಜೆಪಿ ಸರ್ಕಾರದ ಹೊಸ ಗೇಮ್ ಎಂಬ ಮಾತು ಕೇಳಿಬರುತ್ತಿದೆ. ದೇಶಾದ್ಯಂತ 5 ವರ್ಷ ಪಿಎಫ್‍ಐ ಚಟುವಟಿಕೆಗೆ ಗೃಹ ಇಲಾಖೆ ನಿರ್ಬಂಧ ಹೇರಿರುವ ಬೆನ್ನಲ್ಲೇ ಕೇಂದ್ರ ಸರ್ಕಾರದ ಈ ನಿರ್ಧಾರದ ಹಿಂದಿನ ಸೀಕ್ರೆಟ್ ಏನು ಎಂಬ ಪ್ರಶ್ನೆ ಕಾಡತೊಡಗಿದೆ. ಪಿಎಫ್‍ಐ ನಿಷೇಧದ ಹಿಂದೆ ರಾಜಕೀಯ ರಹಸ್ಯ ಕೂಡ ಅಡಗಿದೆ. ಇದೀಗ ಪಿಎಫ್‍ಐ ನಿಷೇಧಕ್ಕೆ ಕಾರಣವಾಯ್ತಾ ಕರ್ನಾಟಕ ಎಂಬ ಅನುಮಾನವು ಎದ್ದಿದೆ. ಪ್ರವೀಣ್ ಕುಮಾರ್ ನೆಟ್ಟಾರು (Praveen Kumar Nettar) ಹತ್ಯೆ ಬಳಿಕ ಪಕ್ಷದ ವಿರುದ್ಧವೇ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದ್ದರು. ಕೇಂದ್ರ, ರಾಜ್ಯ ನಾಯಕರ ವಿರುದ್ಧ ಹಿಂದೂಪರ ಕಾರ್ಯಕರ್ತರು ಸಿಡಿದೆದ್ದಿದ್ದರು. ಮತ್ತೊಂದ್ಕಡೆ ದೇಶದಲ್ಲಿ ನಡೆಯಲಿರುವ ಸರಣಿ ಚುನಾವಣೆ ಕೂಡ ಪಿಎಫ್‍ಐ ನಿಷೇಧಕ್ಕೆ ಅಸ್ತ್ರವಾಯಿತೇ ಎಂಬ ಅನುಮಾನ ಮೂಡಿದೆ. ಹಿಮಾಚಲಪ್ರದೇಶ, ಗುಜರಾತ್, ಕರ್ನಾಟಕ ಚುನಾವಣೆಗೆ ಕೌಂಟ್‍ಡೌನ್ ಶುರುವಾಗಿದೆ. ಹೀಗಾಗಿಯೇ ಕೇಂದ್ರ ಪಿಎಫ್‍ಐ ನಿಷೇಧಕ್ಕೆ ಗಟ್ಟಿ ನಿರ್ಧಾರ ಮಾಡಿದೆ. ಈ ಮೂಲಕ ಹಿಂದೂಪರ ನಾಯಕರಿಗೆ ಸಂದೇಶ ರವಾನಿಸಿದ್ರಾ ಅಮಿತ್ ಶಾ (Amit Shah) ಎಂಬ ಪ್ರಶ್ನೆಯೊಂದು ಎದ್ದಿದೆ. ಇದರೊಂದಿಗೆ ಸಿದ್ದರಾಮಯ್ಯ ಅವಧಿಯಲ್ಲಿ ಪಿಎಫ್‌ಐ ಮೇಲಿದ್ದ ಒಟ್ಟು 176 ಕೇಸ್ ವಾಪಸ್ ಮಾಡಲಾಗಿತ್ತು. 175 ಪ್ರಕರಣಗಳಲ್ಲಿ 1,764 ಜನರ ಮೇಲಿನ ಕೇಸ್ ವಾಪಸ್ ಪಡೆಯಲಾಗಿತ್ತು. ಇದನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಈ ನಿರ್ಧಾರ ತೆಗೆದುಕೊಂಡಿದೆ ಎಂಬ ಮಾತು ಕೇಳಿಬರುತ್ತಿದೆ. ಇದನ್ನೂ ಓದಿ: ಪಬ್ಲಿಕ್ ಟಿವಿ ಇಂಪ್ಯಾಕ್ಟ್- ತುಮಕೂರಿನಲ್ಲಿ ಕೊನೆಗೂ ರಸ್ತೆಗಿಳಿದ ಕಸ ಸಾಗಿಸುವ ಆಟೋಗಳು!

    Live Tv
    [brid partner=56869869 player=32851 video=960834 autoplay=true]

  • ಪ್ರವೀಣ್ ನೆಟ್ಟಾರು ಕುಟುಂಬದ ಸದಸ್ಯರಿಗೆ ಸಿಎಂ ಕಚೇರಿಯಲ್ಲಿ ಕೆಲಸ

    ಪ್ರವೀಣ್ ನೆಟ್ಟಾರು ಕುಟುಂಬದ ಸದಸ್ಯರಿಗೆ ಸಿಎಂ ಕಚೇರಿಯಲ್ಲಿ ಕೆಲಸ

    ಬೆಂಗಳೂರು: ದುಷ್ಕರ್ಮಿಗಳ ಹತ್ಯೆಗೆ ಬಲಿಯಾಗಿದ್ದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು (Praveen Kumar Nettar) ಕುಟುಂಬಕ್ಕೆ ತಮ್ಮ ಕಚೇರಿಯಲ್ಲಿ ಕೆಲಸ ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಘೋಷಣೆ ಮಾಡಿದ್ದಾರೆ.

    ದೊಡ್ಡಬಳ್ಳಾಪುರದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದ ವೇಳೆ ಸಿಎಂ ಬೊಮ್ಮಾಯಿ ಅವರು ತಮ್ಮ ಭಾಷಣವನ್ನು ಮುಗಿಸಿ ವೇದಿಕೆಯ ಮೇಲೆ ಕುತಿದ್ದರು. ಆಮೇಲೆ ಪುನಃ ಬಂದು ಈ ಘೋಷಣೆಯನ್ನು ಮಾಡಿದ್ದಾರೆ. ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸರ್ಕಾರದ ನೆರವು ನೀಡುತ್ತೇವೆ. ಪ್ರವೀಣ್ ನೆಟ್ಟಾರು ಅವರು ಬಿಜೆಪಿ ಕಾರ್ಯಕರ್ತ. ಇದರಿಂದಾಗಿ ಕೆಲಸ ಕೊಡುವುದು ನಮ್ಮ ಕರ್ತವ್ಯ. ಸಿಎಂ ಕಚೇರಿಯಲ್ಲೇ ಕೆಲಸ ನೀಡುತ್ತೇನೆ ಎಂದು ಭರವಸೆ ನೀಡಿದರು.

    ಈ ಹಿಂದೆ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಿಜೆಪಿ 25 ಲಕ್ಷ ರೂ. ಹಾಗೂ ಸರ್ಕಾರದಿಂದ 25 ಲಕ್ಷ ರೂ. ಪರಿಹಾರವನ್ನು ನೀಡಿತ್ತು. ಅಷ್ಟೇ ಅಲ್ಲದೇ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು 5 ಲಕ್ಷ ರೂ. ಪರಿಹಾರವನ್ನು ನೀಡಿದ್ದರು.

    ಕಾರ್ಯಕ್ರಮದ ವೇದಿಕೆಯಲ್ಲಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹಾಗೂ ಸಚಿವ ಉಮೇಶ್ ಕತ್ತಿ ಅವರ ಚಿತ್ರವನ್ನು ಹಾಕುವ ಮೂಲಕ ಬಿಜೆಪಿ(BJP) ಗೌರವ ಸಲ್ಲಿಸಿತ್ತು. ಇದನ್ನೂ ಓದಿ: ಕಾಂಗ್ರೆಸ್ಸಿನವರಿಗೆ ತಾಕತ್, ಧಮ್ ಇದ್ದರೇ ನಮ್ಮನ್ನು ತಡೆಯಲಿ: ಬೊಮ್ಮಾಯಿ ಸವಾಲು

    ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ 31 ವರ್ಷದ ಪ್ರವೀಣ್ ಕುಮಾರ್ ನೆಟ್ಟಾರು ಜುಲೈ 26 ರಂದು ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‍ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು. ಇದನ್ನೂ ಓದಿ: ಮೋದಿ ಪ್ರಧಾನಿಯಾಗಿ ಇರುವವರೆಗೂ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲು ಬಿಡಲ್ಲ, ಇದು ನಮ್ಮ ಶಪಥ – ಬಿಎಸ್‌ವೈ

    ಪ್ರವೀಣ್ ನೆಟ್ಟಾರು ಹತ್ಯೆಯಿಂದ ದಕ್ಷಿಣ ಕನ್ನಡದಲ್ಲೂ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲೂ ಕ್ಷೋಭೆ ಭುಗಿಲೆದ್ದಿತ್ತು, ತನಿಖೆಯಲ್ಲಿ ಸರ್ಕಾರ ವಿಫಲವಾಗಿದೆ. ಕಾರ್ಯಕರ್ತರ ಹಿತ ಕಾಯಲು ಪಕ್ಷ ವಿಫಲವಾಗಿದೆ ಎಂದು ಆರೋಪಿಸಿ ಹಲವಾರು ಬಿಜೆಪಿ ಪದಾಧಿಕಾರಿಗಳು ರಾಜೀನಾಮೆ ನೀಡಿದ್ದರು. ಇದರಿಂದಾಗಿ ಪಕ್ಷ ಹಾಗೂ ಸರ್ಕಾರವು ಮುಜುಗರ ಅನುಭವಿಸಬೇಕಾದ ಪರಿಸ್ಥಿತಿಯೂ ಉಂಟಾಗಿತ್ತು. ಇದನ್ನೂ ಓದಿ: ಪ್ರವೀಣ್ ‌ನೆಟ್ಟಾರು ಹತ್ಯೆ ಪ್ರಕರಣ- ಪುತ್ತೂರು ಮತ್ತು ಸುಳ್ಯದ 32 ಕಡೆ NIA ದಾಳಿ

    Live Tv
    [brid partner=56869869 player=32851 video=960834 autoplay=true]

  • ಪ್ರವೀಣ್ ‌ನೆಟ್ಟಾರು ಹತ್ಯೆ ಪ್ರಕರಣ- ಪುತ್ತೂರು ಮತ್ತು ಸುಳ್ಯದ 32 ಕಡೆ NIA ದಾಳಿ

    ಪ್ರವೀಣ್ ‌ನೆಟ್ಟಾರು ಹತ್ಯೆ ಪ್ರಕರಣ- ಪುತ್ತೂರು ಮತ್ತು ಸುಳ್ಯದ 32 ಕಡೆ NIA ದಾಳಿ

    ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ‌ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮತ್ತು ಸುಳ್ಯದ 32 ಕಡೆಗಳಲ್ಲಿ ಎನ್ಐಎ ದಾಳಿ ನಡೆಸಿದೆ.

    ಎರಡು ತಿಂಗಳ ಹಿಂದೆ ದುಷ್ಕರ್ಮಿಗಳ ದಾಳಿಗೆ ಬಲಿಯಾಗಿದ್ದ ಪ್ರವೀಣ್‌ ನೆಟ್ಟಾರು ಹತ್ಯೆ ತನಿಖೆಯನ್ನು ಎನ್‌ಐಎ ತಂಡ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಕೆಲವು ಮಾಹಿತಿಯನ್ನಾಧರಿಸಿ 32 ಕಡೆ ಮನೆ ಹಾಗೂ ಕೆಲ‌ ಖಾಸಗಿ ಕಟ್ಟಡಗಳ ಮೇಲೆ ಎನ್ಐಎ ದಾಳಿ ನಡೆಸಿದೆ. ಘಟನೆಗೆ ಸಂಬಂಧಿಸಿ ಆರೋಪಿಗಳು ಮತ್ತು ಆರೋಪಿಗಳಿಗೆ ಸಹಕರಿಸಿದವರ ವಿಚಾರಣೆಗೆ ಒಳಪಡಿಸಿದೆ. ಎನ್ಐಎ ಅಧಿಕಾರಿಗಳ ತಂಡಕ್ಕೆ ರಾಜ್ಯ ಪೊಲೀಸರು ಸಾಥ್ ನೀಡಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು (31), ಜುಲೈ 26 ರಂದು ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು. ಇದನ್ನೂ ಓದಿ: ವಾರದ ಹಿಂದೆಯೇ ಪ್ರವೀಣ್‌ ಹತ್ಯೆಗೆ ಸ್ಕೆಚ್‌ – ಕೇರಳದ 7 ಕಡೆ ಆಶ್ರಯ, ಹಂತಕರು ಕೊನೆಗೂ ಅಂದರ್‌

    ಪ್ರವೀಣ್‌ ನೆಟ್ಟಾರು ಹತ್ಯೆಯಿಂದ ದಕ್ಷಿಣ ಕನ್ನಡದಲ್ಲೂ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲೂ ಕ್ಷೋಭೆ ಭುಗಿಲೆದ್ದಿತ್ತು, ತನಿಖೆಯಲ್ಲಿ ಸರ್ಕಾರ ವಿಫಲವಾಗಿದೆ. ಕಾರ್ಯಕರ್ತರ ಹಿತ ಕಾಯಲು ಪಕ್ಷ ವಿಫಲವಾಗಿದೆ ಎಂದು ಆರೋಪಿಸಿ ಹಲವಾರು ಬಿಜೆಪಿ ಪದಾಧಿಕಾರಿಗಳು ರಾಜೀನಾಮೆ ನೀಡಿದ್ದರು. ಇದರಿಂದಾಗಿ ಪಕ್ಷ ಹಾಗೂ ಸರ್ಕಾರವು ಮುಜುಗರ ಅನುಭವಿಸಬೇಕಾದ ಪರಿಸ್ಥಿತಿಯೂ ಉಂಟಾಯಿತು. ಇದನ್ನೂ ಓದಿ: ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ – ಪ್ರಮುಖ ಮೂವರು ಆರೋಪಿಗಳ ಬಂಧನ

    Live Tv
    [brid partner=56869869 player=32851 video=960834 autoplay=true]

  • ಕಾಸರಗೋಡು ಮಸೀದಿಗೆ ಹೋಗಿದ್ದ ಹಂತಕರು – SDPI, PFI ಲಿಂಕ್‌, ವಾರಂಟ್ ಜಾರಿ ಮಾಡಿ ಆಸ್ತಿ ಸೀಜ್‌

    ಕಾಸರಗೋಡು ಮಸೀದಿಗೆ ಹೋಗಿದ್ದ ಹಂತಕರು – SDPI, PFI ಲಿಂಕ್‌, ವಾರಂಟ್ ಜಾರಿ ಮಾಡಿ ಆಸ್ತಿ ಸೀಜ್‌

    – ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅಲೋಕ್‌ಕುಮಾರ್‌

    ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಯ ಆರೋಪಿಗಳಿಗೆ ಪಿಎಫ್‍ಐ ಮತ್ತು ಎಸ್‍ಡಿಪಿಐ ಜೊತೆ ಸಂಬಂಧ ಇರುವುದು ಗೊತ್ತಾಗಿದೆ. ಹತ್ಯೆಯ ಬಳಿಕ ಆರೋಪಿಗಳು ಕಾಸರಗೋಡು ಮಸೀದಿಗೆ ಹೋಗಿದ್ದರು ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.

    ಪ್ರಕರಣದ ಕುರಿತಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್, ಹತ್ಯೆಯಲ್ಲಿ ನೇರವಾಗಿ ಭಾಗಿಯಾಗಿ ಹಲ್ಲೆ ನಡೆಸಿದ ಮೂವರು ಆರೋಪಿಗಳನ್ನು ಇಂದು ಬೆಳಗ್ಗೆ ಮಂಗಳೂರಿನ ತಲಪಾಡಿ ಚೆಕ್ ಪೋಸ್ಟ್ ಬಳಿ ಬಂಧಿಸಲಾಗಿದೆ. ಸುಳ್ಯದ ಶಿಯಾಬ್ (33), ಅಂಕತಡ್ಕದ ರಿಯಾಝ್ (27) ಸುಳ್ಯದ ಎಲಿಮಲೆ ನಿವಾಸಿ ಬಶೀರ್‌ನನ್ನು ಬಂಧಿಸಿದ್ದೇವೆ. ಶಿಯಾಬ್‌ ಕ್ಯಾಂಪ್ಕೋ ಕಂಪನಿಗೆ ಕೊಕ್ಕೊ ವಿತರಣೆ ಮಾಡುತ್ತಿದ್ದರೆ ರಿಯಾಝ್ ಕೋಳಿ ವ್ಯಾಪಾರ ಮಾಡುತ್ತಿದ್ದ. ಬಶೀರ್ ಹೋಟೆಲ್‍ನಲ್ಲಿ ಕೆಲಸ ಮಾಡುತ್ತಿದ್ದ. ಕೃತ್ಯಕ್ಕೆ ಬ್ಲ್ಯಾಕ್ ಸ್ಪ್ಲೆಂಡರ್ ಬೈಕನ್ನು ಬಳಕೆ ಮಾಡಲಾಗಿದೆ. ಕಾರೊಂದನ್ನು ಸಹ ಬಳಕೆ ಮಾಡಿದ್ದಾರೆ. ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ಸಹ ವಶಪಡಿಸಿಕೊಳ್ಳುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ವಾರದ ಹಿಂದೆಯೇ ಪ್ರವೀಣ್‌ ಹತ್ಯೆಗೆ ಸ್ಕೆಚ್‌ – ಕೇರಳದ 7 ಕಡೆ ಆಶ್ರಯ, ಹಂತಕರು ಕೊನೆಗೂ ಅಂದರ್‌

    ಆರೋಪಿಗಳ ಬಗ್ಗೆ ಮೊದಲೇ ನಮಗೆ ಸುಳಿವು ಸಿಕ್ಕಿತ್ತು. ಆದರೆ ನಾವು ಬಹಿರಂಗ ಮಾಡಿರಲಿಲ್ಲ. ಮುಂದೆ ಈ ರೀತಿಯ ಯಾವುದೇ ಕೃತ್ಯ ನಡೆಯದೇ ಕಠಿಣ ಕ್ರಮ ಕೈಗೊಳ್ಳುತ್ತೇವೆ. ವಾರೆಂಟ್ ಇಶ್ಯೂ ಮಾಡಿ ಹಂತಕರು ಮತ್ತು ಹಂತಕರಿಗೆ ಸಹಕಾರ ನೀಡಿದವರ ಆಸ್ತಿಗಳನ್ನು ಮುಟ್ಟುಗೋಲು ಹಾಕುತ್ತೇವೆ. ಯಾವುದೇ ಅಮಾಯಕರನ್ನು ಬಂಧನ ಮಾಡುವುದಿಲ್ಲ. ಆದರೆ ಕೃತ್ಯದಲ್ಲಿ ಭಾಗಿಯಾದವರೆಲ್ಲರನ್ನು ಬಂಧಿಸುತ್ತೇವೆ. ಯಾರನ್ನು ಫಿಕ್ಸ್ ಮಾಡುವುದಕ್ಕೆ ಹೋಗುವುದಿಲ್ಲ. ಯಾರನ್ನೋ ಬಂಧಿಸುವುದಕ್ಕೆ ಇದು ಹುಡುಗಾಟವಲ್ಲ. ನಮಗೆ ಜಾತಿ, ಧರ್ಮ, ಬಣ್ಣ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಈದ್ಗಾ ಮೈದಾನದ ವಿವಾದ- ಸರ್ಕಾರದ ನಿರ್ಧಾರವೇ ಅಂತಿಮ: ಬೊಮ್ಮಾಯಿ

    ಎಲ್ಲ ಮಾಹಿತಿಯನ್ನು ನಾವು ಎನ್‍ಐಎಗೆ ನೀಡುತ್ತೇವೆ. ಎನ್‍ಐಎ ಕೂಡಾ ತನಿಖೆ ಮುಂದುವರಿಸುತ್ತಿದೆ. ನಮ್ಮ ಅಧಿಕಾರಿಗಳು ಒಳ್ಳೆಯ ಕೆಲಸ ಮಾಡಿದ್ದಾರೆ. ಪೊಲೀಸ್ ತಂಡಕ್ಕೆ ಸೂಕ್ತ ಬಹುಮಾನ ನೀಡಲಾಗುತ್ತದೆ. ಶತಾಯಗತಾಯವಾಗಿ ಈ ಪ್ರಕರಣ ಭೇದಿಸಬೇಕಾಗಿತ್ತು. ಜನರಲ್ಲಿಯೂ ಸಾಕಷ್ಟು ಆತಂಕವಿತ್ತು. ಪ್ರಕರಣ ಭೇದಿಸಲು ಸಾಕಷ್ಟು ಒತ್ತಡಗಳಿತ್ತು. ಅಧಿಕಾರಿಗಳು ಉತ್ತಮ ಕೆಲಸ ಮಾಡಿದ್ದಾರೆ. ಅಧಿಕಾರಿ ತಂಡಕ್ಕೆ ಬಹುಮಾನವೂ ಘೋಷಿಸಲಾಗುತ್ತದೆ ಎಂದು ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]

  • ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ – ಪ್ರಮುಖ ಮೂವರು ಆರೋಪಿಗಳ ಬಂಧನ

    ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ – ಪ್ರಮುಖ ಮೂವರು ಆರೋಪಿಗಳ ಬಂಧನ

    ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದಲ್ಲಿ ತಲೆಮರೆಸಿಕೊಂಡಿದ್ದ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
    ಪ್ರವೀಣ್ ಹತ್ಯೆಗೈದು ಪ್ರಮುಖ ಮೂವರು ಆರೋಪಿಗಳು ಕೇರಳಕ್ಕೆ ಪರಾರಿಯಾಗಿದ್ದರು. ಆ ಬಳಿಕ ಪೊಲೀಸರು ಆರೋಪಿಗಳ ಪತ್ತೆಗಾಗಿ ಕೇರಳದಲ್ಲಿ ಬೀಡುಬಿಟ್ಟಿದ್ದರು. ಇದೀಗ ಕೇರಳದಲ್ಲಿ ಮೂವರು ಆರೋಪಿಗಳಾದ ಶಿಯಾಬ್, ರಿಯಾಝ್, ಬಶೀರ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳಿಂದ ವರದಿಯಾಗಿದೆ. ಇದನ್ನೂ ಓದಿ: ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳ ಆಸ್ತಿ ಸೀಜ್: ಅಲೋಕ್ ಕುಮಾರ್
    ಪೊಲೀಸರು ಕೇರಳದಲ್ಲಿ ಆರೋಪಿಗಳನ್ನು ಬಂಧಿಸಿರುವ ಬಗ್ಗೆ ಮಾಹಿತಿ ಇದ್ದು, ಗೌಪ್ಯ ಸ್ಥಳದಲ್ಲಿರಿಸಿ ಮೂವರು ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ. ಪ್ರವೀಣ್ ಹತ್ಯೆಗೈದ ಪ್ರಮುಖ ಆರೋಪಿಗಳ ಬಂಧನದ ಬಗ್ಗೆ ಇಂದು ಮಧ್ಯಾಹ್ನ 12.30ಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಇದನ್ನೂ ಓದಿ: ಸೇನಾ ಶಿಬಿರದೊಳಗೆ ನುಗ್ಗಲು ಯತ್ನಿಸಿದ್ದ ಇಬ್ಬರು ಉಗ್ರರ ಹತ್ಯೆ- ಮೂವರು ಯೋಧರು ಹುತಾತ್ಮ
    ಏನಿದು ಘಟನೆ:
    ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು (31), ಜುಲೈ 26 ರಂದು ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು.

    Live Tv
    [brid partner=56869869 player=32851 video=960834 autoplay=true]