Tag: Praveen Kumar Nettar Case

  • ಈಡಿಗ-ಬಿಲ್ಲವ ಸಮುದಾಯದ ಯುವಕರನ್ನು ಬಿಜೆಪಿ ಯೂಸ್ & ಥ್ರೋ ಮಾಡುತ್ತಿದೆ: ಪ್ರಣವಾನಂದ ಸ್ವಾಮೀಜಿ

    ಈಡಿಗ-ಬಿಲ್ಲವ ಸಮುದಾಯದ ಯುವಕರನ್ನು ಬಿಜೆಪಿ ಯೂಸ್ & ಥ್ರೋ ಮಾಡುತ್ತಿದೆ: ಪ್ರಣವಾನಂದ ಸ್ವಾಮೀಜಿ

    ಬೆಂಗಳೂರು: ಬಿಲ್ಲವ-ಈಡಿಗ ಸಮುದಾಯ ಬೇಸರದಲ್ಲಿ ಇದೆ. ನಮ್ಮ ಯುವಕರನ್ನು ಬಳಸಿಕೊಂಡು ಬಿಜೆಪಿ ಅವರು ರಾಜಕೀಯ ಮಾಡುತ್ತಿದ್ದಾರೆ. ಪ್ರವೀಣ್ ಕುಟುಂಬಕ್ಕೆ ಒಂದು ಕೋಟಿ ರೂ. ಪರಿಹಾರ ಕೊಡಬೇಕು. ಪ್ರವೀಣ್ ಪತ್ನಿಗೆ ಸರ್ಕಾರಿ ನೌಕರಿ ಕೊಡಬೇಕು. ಇಲ್ಲದೆ ಹೋದ್ರೆ ಸರ್ಕಾರಕ್ಕೆ ಮುಂದಿನ ಚುನಾವಣೆಯಲ್ಲಿ ಪಾಠ ಕಲಿಸುತ್ತೇವೆ ಎಂದು ಈಡಿಗ-ಬಿಲ್ಲವ ಸಮುದಾಯದ ಸ್ವಾಮೀಜಿ ಪ್ರಣವಾನಂದ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

    ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ಹೊರ ಹಾಕಿದರು. ಕೋಟಾ ಶ್ರೀನಿವಾಸ್‌ ಪೂಜಾರಿ, ಸುನಿಲ್ ಕುಮಾರ್ ಭೇಟಿಯಾಗಿದ್ದೇನೆ. ಪ್ರವೀಣ್ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ನೀಡಬೇಕು. ಹೆಂಡತಿಗೆ ಸರ್ಕಾರಿ ನೌಕರಿ ಸರ್ಕಾರ ನೀಡಲೇಬೇಕು ಎಂದು ಒತ್ತಾಯ ಮಾಡಿದ್ದೇನೆ. ಈಗಾಗಲೇ 21 ಜನ ನಮ್ಮ ಸಮುದಾಯದ ಯುವಕರು ಸತ್ತಿದ್ದಾರೆ. ಮಂಗಳೂರು, ಉಡುಪಿಯಲ್ಲಿ ನಮ್ಮ ಸಮುದಾಯದ 12 ಲಕ್ಷ ಜನರು ಇದ್ದಾರೆ. ಬಿಜೆಪಿ ನಮ್ಮ ಯುವಕರನ್ನು ಯೂಸ್ & ಥ್ರೋ ಮಾಡುತ್ತಿದ್ದಾರೆ. ಪೋಸ್ಟರ್ ಹಂಚೋಕೆ ಮಾತ್ರ ಬಳಸಿಕೊಳ್ಳುತ್ತಿದ್ದಾರೆ. ಯಾವುದೇ ಸ್ಥಾನ ಮಾನ ಕೊಡ್ತಿಲ್ಲ. ನಮ್ಮ ಹಿಂದುಳಿದ ವರ್ಗ ಯುವಕರು ಎಚ್ಚೆತ್ತು ಕೊಳ್ಳಬೇಕು ಎಂದು ಕರೆ ಕೊಟ್ಟಿದ್ದಾರೆ. ಇದನ್ನೂ ಓದಿ: ಪ್ರವೀಣ್ ಕೊಲೆ ಖಂಡನೀಯ – 1 ಕೋಟಿ ರೂ. ಪರಿಹಾರ, ಪತ್ನಿಗೆ ಉದ್ಯೋಗ ಕೊಡಿ: ಶ್ರೀ ಪ್ರಣವಾನಂದ ಸ್ವಾಮೀಜಿ ಆಗ್ರಹ

    ಈ ಬಿಜೆಪಿ ಸರ್ಕಾರ ಭ್ರಷ್ಟಾಚಾರದ ಕಾರ್ಖಾನೆಯಾಗಿದೆ. ಯುವಕರೇ ಪ್ರಚೋದನೆಗೆ ಜೀವನ ಕಳೆದುಕೊಳ್ಳಬೇಡಿ. ಪ್ರವೀಣ್‍ನ 16ನೇ ದಿನದ ಕಾರ್ಯ ಆಗಸ್ಟ್ 13ಕ್ಕೆ ನಡೆಯಲಿದೆ. ಪ್ರವೀಣ್‍ನ ಸಮಾಧಿಯ ಮುಂದೆ ನಾನು ನಮ್ಮ ಯುವಕರಿಗೆ ಪ್ರಮಾಣ ಮಾಡಿಸ್ತೀನಿ. ಕೋಮುಗಲಭೆ, ಸಾಮರಸ್ಯ ಹಾಳು ಮಾಡೋದಕ್ಕೆ ಹೋಗಬಾರದು ಎಂದು ಯುವಕರಿಗೆ ಶಪಥ ಮಾಡಿಸುತ್ತೇನೆ. ಆಗಸ್ಟ್ 13 ರಂದು ಗೋವಾ, ತೆಲಂಗಾಣ ಸೇರಿದಂತೆ ನಮ್ಮ ಸಮುದಾಯದ ಜನ ಇರುವ 12 ರಾಜ್ಯದಲ್ಲಿ ಪ್ರವೀಣ್‍ಗೆ ನ್ಯಾಯ ಕೇಳಿ ಹೋರಾಟ ಮಾಡ್ತೀವಿ ಎಂದಿದ್ದಾರೆ. ಇದನ್ನೂ ಓದಿ: ಮನೆ ಹಾನಿಗೆ ಒಂದು ಬಾರಿ ಮಾತ್ರ ಪರಿಹಾರ – ಷರತ್ತು ಏನು?

    ಪರಿಹಾರ ರೂಪದಲ್ಲಿ ಕೇವಲ 25 ಲಕ್ಷ ರೂ. ಕೊಟ್ಟಿದ್ದಾರೆ. ಈಡಿಗ-ಬಿಲ್ಲವ ಸಮುದಾಯಕ್ಕೆ ಬೆಲೆ ಕಟ್ಟೋಕೆ ಸಾಧ್ಯವಿಲ್ಲ. 7 ಜನ ಶಾಸಕರು, ಇಬ್ಬರು ಮಂತ್ರಿಗಳು ಇದ್ದಾರೆ. ಅವರು ಸಮುದಾಯಕ್ಕೆ ಏನು ಮಾಡ್ತಿಲ್ಲ. ನಾರಾಯಣಗುರು ಅಭಿವೃದ್ಧಿ ನಿಗಮ ಪ್ರಾರಂಭ ಮಾಡಿಲ್ಲ. ನಮ್ಮ ಕುಲ ಕಸುಬು ಶೇಂದಿ ಇಳಿಸೋದು ನಿಷೇಧ ಮಾಡಿದ್ದಾರೆ. ಈಡಿಗ-ಬಿಲ್ಲವ ಸಮುದಾಯ ಮುಗಿಸೋಕೆ ಈ ಸರ್ಕಾರ ಮುಂದಾಗಿದೆ. ಕೇವಲ ಒಂದು ಸ್ಥಾನ ನಮ್ಮ ಸಮುದಾಯಕ್ಕೆ ನೀಡಿದ್ದಾರೆ. ಮಂಗಳೂರಿನಲ್ಲಿ ನಮ್ಮವರು ಹೆಚ್ಚು ಜನ ಇದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್‍ಗೂ ಎಚ್ಚರಿಕೆ ನೀಡಿದ್ದಾರೆ.

    ನಮ್ಮ ಸಮುದಾಯಕ್ಕೆ ನ್ಯಾಯ ಕೊಡಿಸಲಿಲ್ಲ ಅಂದರೆ ರಾಜ್ಯ ಸರ್ಕಾರಕ್ಕೆ ಪಾಠ ಕಲಿಸ್ತೀವಿ. ಕೋಟಾ ಶ್ರೀನಿವಾಸ್ ಪೂಜಾರಿ, ಸುನೀಲ್ ವಿರುದ್ಧವೂ ಸಮುದಾಯ ತಿರುಗಿ ಬೀಳುತ್ತದೆ. ಸಮಾಜದ ಕೆಲಸ ಮಾಡಬೇಕು. ಇಲ್ಲದೆ ಹೋದರೆ ನಿಮಗೆ ಪಾಠ ಕಲಿಸ್ತೀವಿ. ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ನಮ್ಮ ಸಮುದಾಯ ಶಕ್ತಿ ತೋರಿಸುತ್ತೇವೆ ಎಂದು ಸರ್ಕಾರಕ್ಕೆ ಪ್ರಣವಾನಂದ ಸ್ವಾಮೀಜಿ ಚಾಟಿ ಬೀಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಮ್ಮೂರಿನಲ್ಲಿ ಡಿ.ವಿ ಸದಾನಂದ ಗೌಡ ಅಂತ ಒಬ್ರು ಇದ್ರು ಈಗ ಅವರು ಭೂಮಿ ಮೇಲೆ ಇದ್ದಾರಾ ಗೊತ್ತಿಲ್ಲ: ಪೋಸ್ಟರ್ ವೈರಲ್

    ನಮ್ಮೂರಿನಲ್ಲಿ ಡಿ.ವಿ ಸದಾನಂದ ಗೌಡ ಅಂತ ಒಬ್ರು ಇದ್ರು ಈಗ ಅವರು ಭೂಮಿ ಮೇಲೆ ಇದ್ದಾರಾ ಗೊತ್ತಿಲ್ಲ: ಪೋಸ್ಟರ್ ವೈರಲ್

    ಮಂಗಳೂರು: ನಮ್ಮೂರಿನಲ್ಲಿ ಡಿ.ವಿ ಸದಾನಂದ ಗೌಡ ಅಂತ ಒಬ್ರು ಇದ್ರು. ಈಗ ಅವರು ಭೂಮಿ ಮೇಲೆ ಇದ್ದಾರಾ ಯಾರಿಗಾದ್ರು ಗೊತ್ತಾ? ಯಾಕಂದ್ರೆ ಅವರ ಊರಿನಲ್ಲೇ ಒಂದು ಕೊಲೆಯಾಗಿದೆ. ಈ ಬಗ್ಗೆ ತಿಳಿಸಬೇಕಿತ್ತು ಅವರ ಫೋನ್ ನಂಬರ್ ಯಾರಲ್ಲಾದರೂ ಇದ್ರೆ ಕೊಡಿ, ನಾನಾದರು ಫೋನ್ ಮಾಡಿ ಹೇಳುತ್ತೇನೆ ಎನ್ನುವ ಆಕ್ರೋಶದ ಪೋಸ್ಟರ್‌ಗಳು ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ಮಾಜಿ ಸಿಎಂ ಸದಾನಂದ ಗೌಡರ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

    ಪೋಸ್ಟರ್‌ನಲ್ಲಿ ಏನಿದೆ?:
    ಅವರ ಬಗ್ಗೆ ನಿಮಗೆ ಈಗ ಮರೆತಿರಬಹುದು. ಅವರು ಒಂದು ಕಾಲದ ಮಹಾನ್ ಹೋರಾಟಗಾರ, ಪುತ್ತೂರಿನಲ್ಲಿ ತನ್ನ ಜಾಥಾದ ಮೂಲಕವೇ ಬಿಜೆಪಿ ಪಕ್ಷದಲ್ಲಿ ಮುಂಚೂಣಿಯಾಗಿ ಕಾಣಿಸಿಕೊಂಡ ವ್ಯಕ್ತಿ. ಹುಟ್ಟೂರು ಸುಳ್ಯದ ಮಂಡೆಕೋಲು ಗ್ರಾಮಸ್ಥ, ಮಡಿಕೇರಿಯ ಕಡೆಯಿಂದ ಮದುವೆಯಾದ ಗೃಹಸ್ಥ. ಇದನ್ನೂ ಓದಿ: ಆರಗ ಮನೆಗೆ ನುಗ್ಗಿದ ABVP ಕಾರ್ಯಕರ್ತರಿಗೆ ಲಾಠಿ ಏಟು

    ಗೊತ್ತಾಗಿಲ್ಲಾ, ಪರ್ವಾಗಿಲ್ಲ. ಇನ್ನೊಂದು ಸುಳಿವು ನಿಮಗೆ ಕೊಡುತ್ತೇವೆ. ಈ ಸುಳಿವು ಮಾತ್ರ ಖಂಡಿತಾ ಆತ ಯಾರೆಂದು ನಿಮಗೆ ಮಾತ್ರವಲ್ಲ, ಇಡೀ ರಾಜ್ಯಕ್ಕೆ, ಜೊತೆಗೇ ದೇಶಕ್ಕೆ ಅವರ ವ್ಯಕ್ತಿತ್ವವನ್ನು ಜನರ ಮುಂದು ಇಟ್ಟು, ಬಿಡಿಸಿ, ಅವರ ವ್ಯಕ್ತಿತ್ವದ ಘನತೆಯನ್ನು ತೆರೆದುಬಿಡುತ್ತದೆ ಎಂದು ಬರೆದಿರುವ ಪೋಸ್ಟರ್‌ಗಳು ಕರಾವಳಿಯಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ಚುನಾವಣೆ ವರ್ಷ ನೆತ್ತರಧಾರೆ ಹರಿದಷ್ಟೂ ಭರ್ಜರಿ ಮತಧಾರೆ: ಎಚ್‍ಡಿಕೆ

    ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ಅವರ ಮನೆಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಸಚಿವರು, ಶಾಸಕರು ಹಾಗೂ ಕೆಲ ಸಂಘಟನೆಯ ಮುಖ್ಯಸ್ಥರು, ಕಾರ್ಯಕರ್ತರು ಭೇಟಿ ನೀಡಿ ಸಾಂತ್ವನ ಹೇಳಿದ್ದು, ಪರಿಹಾರವನ್ನೂ ನೀಡಿದ್ದಾರೆ. ಆದರೆ ಬೆಳ್ಳಾರೆಯಿಂದ ಕೆಲವೇ ಕಿಲೋ ಮೀಟರ್‌ಗಳ ಅಂತರದ ಊರಿನವರಾದ ಸುಳ್ಯ ತಾಲೂಕಿನ, ಮಂಡೆಕೋಲು ಗ್ರಾಮದ ದೇವರಗುಂಡದ ಸದಾನಂದ ಗೌಡರು ಬಾರದೇ ಇರುವುದು ಮತ ನೀಡಿ ಗೆಲ್ಲಿಸಿದ್ದ ಸ್ಥಳೀಯ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ.

    ಈಗಾಗಲೇ ಕರಾವಳಿಯಲ್ಲಿ ಕ್ಷೇತ್ರದ ಶಾಸಕರಾದ ಎಸ್. ಅಂಗಾರ ಮತ್ತು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ವಿರುದ್ಧ ತೀವ್ರ ಆಕ್ರೋಶದ ಮಾತುಗಳು ಕೇಳಿಬರುತ್ತಿದೆ. ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಯ ಬಳಿಕ ಬೆಳ್ಳಾರೆಗೆ ಅಂತಿಮ ದರ್ಶನಕ್ಕೆ ತೆರಳಿದ ನಳಿನ್ ಕುಮಾರ್ ಕಟೀಲ್ ಸಚಿವರಾದ ಸುನಿಲ್ ಕುಮಾರ್, ಎಸ್. ಅಂಗಾರ ಸೇರಿದಂತೆ ಇತರ ಸಚಿವರಿಗೆ ಘೇರಾವ್, ಕಾರನ್ನೇ ಪಲ್ಟಿ ಹಾಕುವಷ್ಟರ ಮಟ್ಟಿಗೆ ಕಾರ್ಯಕರ್ತರು ಕುಪಿತಗೊಂಡಿದ್ದರು.

    Live Tv
    [brid partner=56869869 player=32851 video=960834 autoplay=true]

  • ಚುನಾವಣೆ ವರ್ಷ ನೆತ್ತರಧಾರೆ ಹರಿದಷ್ಟೂ ಭರ್ಜರಿ ಮತಧಾರೆ: ಎಚ್‍ಡಿಕೆ

    ಚುನಾವಣೆ ವರ್ಷ ನೆತ್ತರಧಾರೆ ಹರಿದಷ್ಟೂ ಭರ್ಜರಿ ಮತಧಾರೆ: ಎಚ್‍ಡಿಕೆ

    ಡಬಲ್ ಎಂಜಿನ್ ಸರ್ಕಾರ ಡಬಲ್ ಗೇಮ್’ ಆಡುತ್ತಿದೆ

    ಬೆಂಗಳೂರು: ಸಮರ್ಥ ಅಧಿಕಾರಿಗಳನ್ನು ನಂಬದೆ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು ಎನ್‍ಐಎಗೆ ವಹಿಸುವ ನಾಟಕವಾಡಿ ಕಗ್ಗೊಲೆಗಳ ತನಿಖೆಗೆ ‘ಸಮಾಧಿ’ ಕಟ್ಟಲು ಹೊರಟಿದೆ. ಎರಡು ಕೊಲೆಗಳು ನಡೆದ ಬೆಳ್ಳಾರೆ ಗ್ರಾಮದಲ್ಲಾದರೂ ಬೊಮ್ಮಾಯಿ ಅವರು ಮುಖ್ಯಮಂತ್ರಿ ಹೊಣೆಯ ಘನತೆಗೆ ತಕ್ಕಂತೆ ಶಾಂತಿ ರಕ್ಷಣೆ ಬಗ್ಗೆ ಒಂದು ಮಾತನ್ನಾದರೂ ಹೇಳಿದಿರಾ? ಇಲ್ಲ, ಚುನಾವಣೆ ವರ್ಷವಲ್ಲ. ಕೊಲೆಗಳೇ ಹೆಚ್ಚೆಚ್ಚು ಆಗಬೇಕು, ಅವರ ಮತಪೆಟ್ಟಿಗೆ ಕೊಬ್ಬಬೇಕು. ನೆತ್ತರಧಾರೆ ಹರಿದಷ್ಟೂ ಭರ್ಜರಿ ಮತಧಾರೆ ಎಂದು ಸರಣಿ ಟ್ವೀಟ್ ಮೂಲಕ ಬಿಜೆಪಿ ಸರ್ಕಾರವನ್ನು ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ:
    ನಾಡಿನ ಜನರನ್ನಷ್ಟೇ ಅಲ್ಲ, ತನ್ನ ಕಾರ್ಯಕರ್ತರನ್ನೇ ರಕ್ಷಣೆ ಮಾಡಿಕೊಳ್ಳಲಾಗದ ಅಸಮರ್ಥ, ಅಸಹಾಯಕ ಬಿಜೆಪಿ ಸರ್ಕಾರ, ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು ಎನ್‍ಐಎ ತನಿಖೆಗೆ ಒಪ್ಪಿಸಿದೆ. ಆದರೆ, ಕರಾವಳಿಯಲ್ಲಿ ನಡೆದ ಎಲ್ಲ ಹತ್ಯೆಗಳನ್ನೂ ಎನ್‍ಐಎ ತನಿಖೆಗೆ ವಹಿಸಲು ಹಿಂಜರಿಯುತ್ತಿದೆ! ಏಕೆ? ಕರಾವಳಿ ಭಾಗದಲ್ಲಿ ಪ್ರತಿ ಕೊಲೆ ಬಗ್ಗೆಯೂ ಸರ್ಕಾರಕ್ಕೆ ಮಾಹಿತಿ ಇದೆ. ಆ ಕೊಲೆಗಳು ಏಕಾಗುತ್ತಿವೆ ಎನ್ನುವುದೂ ಗೊತ್ತಿದೆ. ಆದರೆ, ‘ಡಬಲ್ ಎಂಜಿನ್ ಸರ್ಕಾರ ಡಬಲ್ ಗೇಮ್’ ಆಡುತ್ತಿದೆ. ಜಗತ್ತಿನ ಅತಿದೊಡ್ಡ ರಾಜಕೀಯ ಪಕ್ಷ ಎಂದು ಬೀಗುವ ಬಿಜೆಪಿ ಪಕ್ಷ, ತನಗೆ ಅಧಿಕಾರ ತಂದುಕೊಟ್ಟ ಯುವಕರ ಜೀವಗಳಿಗೇ ಗ್ಯಾರಂಟಿ ಕೊಡದಷ್ಟು ದುರ್ಬಲವಾಗಿದೆ. ಇದನ್ನೂ ಓದಿ: ದ.ಕ ಜಿಲ್ಲೆಯಲ್ಲಿ 3 ದಿನಗಳ ಕಾಲ ಕಟ್ಟೆಚ್ಚರ – ಗುಪ್ತಚರ ಇಲಾಖೆಯಿಂದ ಸ್ಫೋಟಕ ಮಾಹಿತಿ

    ಪ್ರವೀಣ್ ಹತ್ಯೆ ಪ್ರಕರಣವನ್ನು ಎನ್‍ಐಎ ತನಿಖೆಗೆ ಒಪ್ಪಿಸಿ ವೀರಾವೇಶ ಮೆರೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳೂರಿನಲ್ಲಿ ಜನರಿಗೆ ಕೊಟ್ಟ ಸಂದೇಶವೇನು? ಅವರ ನಾಲಿಗೆಯ ಮೇಲೆ ಒಮ್ಮೆಯಾದರೂ “ಶಾಂತಿ ಕಾಪಾಡಿ” ಎನ್ನುವ ಮಾತು ಬಂತಾ? ಬರಲಿಲ್ಲ! ನೆಮ್ಮದಿಗಾಗಿ ಕಿಂಚಿತ್ತು ಕ್ರಮ ವಹಿಸಿದ್ದೀರಾ? ಅದೂ ಇಲ್ಲ. ಹಿಂಸೆಗೆ ಇನ್ನಷ್ಟು ತುಪ್ಪಾ ಸುರಿದು ಬಂದರು. ಎನ್‍ಐಎ ತನಿಖೆಗೆ ವಹಿಸಿದ ಎಷ್ಟು ಪ್ರಕರಣಗಳಿಗೆ ತಾರ್ಕಿಕ ಅಂತ್ಯ ಸಿಕ್ಕಿದೆ? ಒಂದೂ ಇಲ್ಲ. ಎನ್‍ಐಎಗೆ ಒಪ್ಪಿಸಿದ ಮೇಲೆ ತನಿಖೆಯಲ್ಲಿ ಮುಂದೆ ಸಾಗುತ್ತಿದ್ದ ರಾಜ್ಯ ಪೊಲೀಸರಿಗೆ ಮುಖ್ಯಮಂತ್ರಿಗಳು ಕೊಟ್ಟ ಸಂದೇಶವೇನು? ಸ್ವತಃ ಗೃಹ ಸಚಿವರಾಗಿದ್ದ ಅವರು, ಸಿಎಂ ಆದ ಮೇಲೆ ತಮ್ಮ ಅಧೀನದ ಪೊಲೀಸ್ ವ್ಯವಸ್ಥೆಯನ್ನೇ ನಂಬುತ್ತಿಲ್ಲ! ಇದಲ್ಲವೇ ವಿಪರ್ಯಾಸ! ರಾಜ್ಯದಲ್ಲಿ ದಕ್ಷ ಪೊಲೀಸ್ ಅಧಿಕಾರಿಗಳು ಇಲ್ಲವೆ? ನಿಷ್ಠಾವಂತ, ಪ್ರಾಮಾಣಿಕ ಅಧಿಕಾರಿಗಳಿಗೆ ಮುಕ್ತ ಸ್ವಾತಂತ್ರ್ಯ ಕೊಟ್ಟರೆ ಕರಾವಳಿ ಹಿಂಸಾಕಾಂಡವನ್ನು ಮೂಲೋತ್ಪಾಟನೆ ಮಾಡಬಲ್ಲರು. ಬೊಮ್ಮಾಯಿ ಸರ್ಕಾರಕ್ಕೆ ಅದು ಬೇಕಿಲ್ಲ. ಇದನ್ನೂ ಓದಿ: ಈಗ ಲೋಕಸಭಾ ಚುನಾವಣೆ ನಡೆದರೆ ಎನ್‍ಡಿಎಗೆ 362 ಸ್ಥಾನ!

    ಸಮರ್ಥ ಅಧಿಕಾರಿಗಳನ್ನು ನಂಬದೆ ಎನ್‍ಐಎಗೆ ವಹಿಸುವ ನಾಟಕವಾಡಿ ಕಗ್ಗೊಲೆಗಳ ತನಿಖೆಗೆ ‘ಸಮಾಧಿ’ ಕಟ್ಟಲು ಹೊರಟಿದೆ. ಎರಡು ಕೊಲೆಗಳು ನಡೆದ ಬೆಳ್ಳಾರೆ ಗ್ರಾಮದಲ್ಲಾದರೂ ಬೊಮ್ಮಾಯಿ ಅವರು ಮುಖ್ಯಮಂತ್ರಿ ಹೊಣೆಯ ಘನತೆಗೆ ತಕ್ಕಂತೆ ಶಾಂತಿ ರಕ್ಷಣೆ ಬಗ್ಗೆ ಒಂದು ಮಾತನ್ನಾದರೂ ಹೇಳಿದಿರಾ? ಇಲ್ಲ, ಚುನಾವಣೆ ವರ್ಷವಲ್ಲ. ಕೊಲೆಗಳೇ ಹೆಚ್ಚೆಚ್ಚು ಆಗಬೇಕು, ಅವರ ಮತಪೆಟ್ಟಿಗೆ ಕೊಬ್ಬಬೇಕು. ನೆತ್ತರಧಾರೆ ಹರಿದಷ್ಟೂ ಭರ್ಜರಿ ಮತಧಾರೆ. ಇದನ್ನೂ ಓದಿ: ಅಂಬುಲೆನ್ಸ್ ಟಯರ್ ಬದಲಿಸಲು ಸಹಾಯ ಮಾಡಿದ ರೇಣುಕಾಚಾರ್ಯ

    ಬೆಳ್ಳಾರೆ ಬೇಗೆ ಇಡೀ ಕರಾವಳಿಯನ್ನು ವ್ಯಾಪಿಸಿದೆ. ಆದರೆ, ಜೀವ ಭಯದಲ್ಲಿರುವ ಎರಡು ಕೋಮುಗಳ ಜನರು ನೆಮ್ಮದಿಯಿಂದ ಬದುಕಲು ಏನು ಮಾಡಿದ್ದೀರಿ ಬೊಮ್ಮಾಯಿ ಅವರೇ? ಅವರ ಜೀವಕ್ಕೆ ಏನು ಖಾತರಿ ಕೊಟ್ಟಿದ್ದೀರಿ? ಪ್ರತಿ ಕೊಲೆ ಆದಾಗಲೂ ಈ ಕೊಲೆಪಾತಕ ರಾಜಕಾರಣ ನಮ್ಮ ಕುಟುಂಬಕ್ಕೇ ಕೊನೆಯಾಗಲಿ ಎನ್ನುವ ತಾಯಂದಿರ ಆರ್ತನಾದಕ್ಕೆ ನಿಮ್ಮ ಉತ್ತರವೇನು? ಕರ್ನಾಟಕ ಸರ್ವಜನಾಂಗದ ಶಾಂತಿಯ ತೋಟ. ಇದನ್ನು ಸರ್ವಶನಾಶ ಮಾಡಿದ್ದೀರಿ. ಹಿಂಸೆಯ ಎಂಬ ವಿಷಸರ್ಪದ ಹೆಡೆಯಡಿ ಕಟ್ಟಿರುವ ನಿಮ್ಮ ಸಾಮ್ರಾಜ್ಯ ಹಿಂಸೆಗೇ ಬಲಿ ಆಗುವುದು ಖಚಿತ. ಕಾರ್ಯಕರ್ತರ ನೆತ್ತರಿನ ಮೇಲಿನ ಅಧಿಕಾರದ ಸುಖಕ್ಕೆ ಅದೇ ಕಾರ್ಯಕರ್ತರ ಆಕ್ರೋಶವೇ ಚರಮಗೀತೆ ಬರೆಯಲಿದೆ. ಕರಾವಳಿ ಕೆರಳಿದೆ, ಕರ್ನಾಟಕ ಕೆರಳುವುದು ಬಾಕಿ ಇದೆ ಎಂದು ಕಿಡಿಕಾರಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ – ಬೆಳ್ಳಾರೆ, ಸುಬ್ರಹ್ಮಣ್ಯ ಠಾಣಾ ಎಸ್‍ಐಗಳ ಎತ್ತಂಗಡಿ

    ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ – ಬೆಳ್ಳಾರೆ, ಸುಬ್ರಹ್ಮಣ್ಯ ಠಾಣಾ ಎಸ್‍ಐಗಳ ಎತ್ತಂಗಡಿ

    ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣದ ಬಳಿಕ ಪ್ರವೀಣ್‍ ಪಾರ್ಥಿವ ಶರೀರದ ಮೆರವಣಿಗೆ ವೇಳೆ ಅಂತಿಮ ನಮನ ಸಲ್ಲಿಸಲು ಆಗಮಿಸಿದ್ದ ಬಿಜೆಪಿ ಕಾರ್ಯಕರ್ತರಿಗೆ ಲಾಠಿ ಚಾರ್ಚ್ ಮಾಡಿದ ಪರಿಣಾಮ ಬೆಳ್ಳಾರೆ ಮತ್ತು ಸುಬ್ರಹ್ಮಣ್ಯ ಠಾಣಾ ಎಸ್‍ಐಗಳನ್ನು ವರ್ಗಾವಣೆಗೊಳಿಸಲಾಗಿದೆ.

    ಪ್ರವೀಣ್ ಪಾರ್ಥಿವ ಶರೀರದ ಮೆರವಣಿಗೆ ವೇಳೆ ಅಂತಿಮ ನಮನ ಸಲ್ಲಿಸಲು ಬಂದಿದ್ದ ಆರ್‌ಎಸ್‌ಎಸ್‌ನ ಹಿರಿಯ ಕಾರ್ಯಕರ್ತರೊಬ್ಬರ ಮೇಲೆ ಪೊಲೀಸರು ಲಾಠಿ ಬೀಸಿ ಹೆಲ್ಮೆಟ್‌ನಿಂದ ಹೊಡೆದಿದ್ದರು. ಆ ಬಳಿಕ ಬೆಳ್ಳಾರೆ, ಸುಬ್ರಹ್ಮಣ್ಯ ಠಾಣೆಯ ಎಸ್‍ಐ ಮತ್ತು ಇತರ ಪೊಲೀಸರನ್ನು ಅಮಾನತುಗೊಳಿಸಬೇಕೆಂದು ಕೂಗು ಕೇಳಿ ಬಂದಿತ್ತು. ಬಳಿಕ ಇದೀಗ ಇಬ್ಬರು ಎಸ್‍ಐ ಮತ್ತು ಸಿಬ್ಬಂದಿಯನ್ನು ವರ್ಗಾವಣೆಗೊಳಿಸಿ ಅವರ ಸ್ಥಾನಕ್ಕೆ ಇತರ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಇದನ್ನೂ ಓದಿ: ಸುರತ್ಕಲ್‌ನಲ್ಲಿ ಫಾಝಿಲ್‌ ಹತ್ಯೆ – 14 ಮಂದಿ ವಶಕ್ಕೆ

    ವಿಟ್ಲ ಠಾಣೆಯ ಪಿಎಸ್‍ಐ ಮಂಜುನಾಥ್ ಸುಬ್ರಹ್ಮಣ್ಯ ಠಾಣೆಗೆ, ಕುಂದಾಪುರ ಗ್ರಾಮಾಂತರ ಠಾಣೆಯ ಪಿಎಸ್‍ಐ ಸುಹಾನ್ ಆರ್. ಬೆಳ್ಳಾರೆ ಠಾಣೆಗೆ ವರ್ಗಾವಣೆಗೊಳಿಸಿ ಪೊಲೀಸ್ ಮಹಾ ನಿರೀಕ್ಷಕರಾದ ದೇವಜ್ಯೋತಿ ರೇ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಕೊಲೆಗಳಾದಾಗ ಯಾವ ರೀತಿ ನಿಭಾಯಿಸಬೇಕು ಅಂತಾ ನಮಗೆ ಗೊತ್ತಿದೆ: ಬೊಮ್ಮಾಯಿ ಕಿಡಿ

    Live Tv
    [brid partner=56869869 player=32851 video=960834 autoplay=true]