Tag: Praveen Kumar Nettar

  • ಆರಗ ಜ್ಞಾನೇಂದ್ರರನ್ನು ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟ: ಸಿದ್ದರಾಮಯ್ಯ

    ಆರಗ ಜ್ಞಾನೇಂದ್ರರನ್ನು ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟ: ಸಿದ್ದರಾಮಯ್ಯ

    ಬೆಂಗಳೂರು: ದಕ್ಷಿಣ ಕನ್ನಡದ ಸರಣಿ ಹತ್ಯೆಗಳನ್ನು ಖಂಡಿಸದೆ, ದುಷ್ಕರ್ಮಿಗಳನ್ನು ಬಂಧಿಸಿ ಜೈಲಿಗೆ ಅಟ್ಟದೆ, ಅವರ ದುಷ್ಕೃತ್ಯವನ್ನು ಕ್ರಿಯೆಗೆ-ಪ್ರತಿಕ್ರಿಯೆ ಎಂಬ ಸಮರ್ಥನೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಇದಕ್ಕೆ ಹೊಣೆಗಾರರು. ಸಿಎಂ ತಕ್ಷಣ ಗೃಹಸಚಿವ ಆರಗ ಜ್ಞಾನೇಂದ್ರರನ್ನು ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟವಾಗಬಹುದು. ಎಂದು ಫಾಜಿಲ್ ಹತ್ಯೆ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವಿಟ್ಟರ್ ಮೂಲಕ ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?
    ಸುಳ್ಯದಲ್ಲಿ ಮಸೂದ್ ಮತ್ತು ಪ್ರವೀಣ್ ನೆಟ್ಟಾರು ಹತ್ಯೆ ನಡೆದಿರುವ ಬೆನ್ನಲ್ಲಿಯೇ ಸುರತ್ಕಲ್‌ನಲ್ಲಿ ಫಾಜಿಲ್ ಎಂಬ ಯುವಕನ ಕೊಲೆ ನಡೆದಿರುವುದು ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿರುವುದಕ್ಕೆ ಸಾಕ್ಷಿ. ದಕ್ಷಿಣ ಕನ್ನಡದ ಸರಣಿ ಹತ್ಯೆಗಳನ್ನು ಖಂಡಿಸದೆ, ದುಷ್ಕರ್ಮಿಗಳನ್ನು ಬಂಧಿಸಿ ಜೈಲಿಗೆ ಅಟ್ಟದೆ, ಅವರ ದುಷ್ಕೃತ್ಯವನ್ನು ಕ್ರಿಯೆಗೆ-ಪ್ರತಿಕ್ರಿಯೆ ಎಂಬ ಸಮರ್ಥನೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಇದಕ್ಕೆ ಹೊಣೆಗಾರರು ಅವರು ಜಿಲ್ಲೆಯಲ್ಲಿರುವಾಗಲೇ ನಡೆದಿರುವ ಹತ್ಯೆ ಅವರ ಮುಖಕ್ಕೆ ಮಂಗಳಾರತಿ ಮಾಡಿದಂತಿದೆ. ಇದನ್ನೂ ಓದಿ: ಪ್ರವೀಣ್ ಹತ್ಯೆ ಕೇಸ್ – ತಪ್ಪು ಮಾಹಿತಿಯಿಂದ ನಡೀತಾ ಕೊಲೆ?

    ಅಸಮರ್ಥ ಗೃಹಸಚಿವರಿಗೆ ಪೊಲೀಸ್ ಇಲಾಖೆಯ ಮೇಲೆ ಯಾವುದೇ ನಿಯಂತ್ರಣ ಇಲ್ಲದಂತಾಗಿದೆ. ಇದರಿಂದಾಗಿ ದುಷ್ಕರ್ಮಿಗಳು ರಾಜಾರೋಷವಾಗಿ ಹತ್ಯಾಕಾಂಡವನ್ನು ಮುಂದುವರಿಸಿದ್ದಾರೆ. ಸಿಎಂ ತಕ್ಷಣ ಗೃಹಸಚಿವ ಆರಗ ಜ್ಞಾನೇಂದ್ರರನ್ನು ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟವಾಗಬಹುದು. ಕೊಲೆಗಡುಕರು ಯಾವುದೇ ಪಕ್ಷ, ಪಂಥ, ಜಾತಿ, ಧರ್ಮದವರಾಗಿದ್ದರೂ ಅವರನ್ನು ಪತ್ತೆ ಹಚ್ಚಿ ಜೈಲಿಗೆ ಅಟ್ಟಬೇಕಾಗಿದೆ. ಆದರೆ, ರಾಜ್ಯ ಬಿಜೆಪಿ ಸರ್ಕಾರ, ಹೆಣಗಳನ್ನು ಮುಂದಿಟ್ಟುಕೊಂಡು ರಾಜಕೀಯ ಲಾಭ-ನಷ್ಟದ ಲೆಕ್ಕಾಚಾರ ಹಾಕುತ್ತಿರುವುದು ಅತ್ಯಂತ ದುರದೃಷ್ಟಕರ ಎಂದು ಸರಣಿ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ – ಶಾಲಾ, ಕಾಲೇಜುಗಳಿಗೆ ರಜೆ

    Live Tv
    [brid partner=56869869 player=32851 video=960834 autoplay=true]

  • ಪ್ರವೀಣ್ ಹತ್ಯೆ ಕೇಸ್ – ತಪ್ಪು ಮಾಹಿತಿಯಿಂದ ನಡೀತಾ ಕೊಲೆ?

    ಪ್ರವೀಣ್ ಹತ್ಯೆ ಕೇಸ್ – ತಪ್ಪು ಮಾಹಿತಿಯಿಂದ ನಡೀತಾ ಕೊಲೆ?

    ಮಂಗಳೂರು: ಕರಾವಳಿಯನ್ನೇ ಬೆಚ್ಚಿಬೀಳಿಸಿದ್ದ ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಬಂಧಿತ ಆರೋಪಿಗಳು ಹತ್ಯೆಗೆ ನಡೆದಿದ್ದ ಪ್ಲಾನ್ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.

    ಶಫೀಕ್ ಮತ್ತು ಝಾಕೀರ್ ಇಬ್ಬರು ಬಂಧಿತರು. ಹತ್ಯೆಗೆ ನಿಜವಾದ ಕಾರಣರಾದ ಹಂತಕರ ಬಂಧನವಾಗಿಲ್ಲ. ಹಂತಕರಿಗಾಗಿ ಪೊಲೀಸರ ತಂಡ ರಚಿಸಿದ್ದು. ಐಪಿಎಸ್ ಅಧಿಕಾರಿ ನೇತೃತ್ವದ ತಂಡ ಕೇರಳದಲ್ಲಿ ಬೀಡುಬಿಟ್ಟಿದೆ. ಮಾಹಿತಿಯ ಪ್ರಕಾರ ಇಬ್ಬರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ. ಶಫೀಕ್ ಮಾಹಿತಿ ಆಧರಿಸಿ ಕೇರಳದ ಗ್ರಾಮವೊಂದರಲ್ಲಿ ಇಬ್ಬರು ಶಂಕಿತರ ವಶಕ್ಕೆ ಪಡೆಯಲಾಗಿದೆ. ಇವರೇ ಆ ಹಂತಕರು ಎನ್ನುವುದು ಸ್ಪಷ್ಟವಾಗಬೇಕಿದೆ. ಸದ್ಯ ಬಂಧಿತ ಶಫೀಕ್ ಮತ್ತು ಝಾಕೀರ್ ಹತ್ಯೆಗೆ ಸಹಾಯ ಮಾಡಿದವರಾಗಿದ್ದು, ಹಂತಕರು ತಪ್ಪಿಸಿಕೊಳ್ಳಲು ದಾರಿ ತೋರಿಸಿದವರಾಗಿದ್ದಾರೆ. ವಿಚಾರಣೆ ವೇಳೆ ಇದನ್ನು ಒಪ್ಪಿಕೊಂಡಿದ್ದಾರೆ. ಇದನ್ನೂ ಓದಿ: ಪ್ರವೀಣ್ ಹತ್ಯೆಗೆ ರಾಜಸ್ಥಾನ ಸಿಎಂ ಖಂಡನೆ

    ಇಬ್ಬರಿಗೂ ಆಗಸ್ಟ್ 11ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅಗತ್ಯವಿದ್ದರೆ ಅವರನ್ನು ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸುವುದಾಗಿ ಪೊಲೀಸರು ಹೇಳಿದ್ದಾರೆ. ಈ ನಡುವೆ ಸಿಸಿಟಿವಿ ದೃಶ್ಯವೊಂದು ಸಿಕ್ಕಿದ್ದು ಅದರಿಂದ ಭಯಾನಕ ಸತ್ಯ ಹೊರಬಿದ್ದಿದೆ. ಆರೋಪಿಗಳಲ್ಲಿ ಒಬ್ಬನಾದ ಶಫೀಕ್ ವ್ಯಕ್ತಿಯೊಬ್ಬನನ್ನು ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಬಂದು ಬೆಳ್ಳಾರೆಯ ಕೋಳಿ ವ್ಯಾಪಾರಿ ಪೃಥ್ವಿರಾಜ್‍ನನ್ನು ದೂರದಿಂದಲೇ ತೋರಿಸಿ ಹೋಗಿದ್ದಾನೆ. ಆದರೆ, ಪೃಥ್ವಿರಾಜ್ ಬದಲಿಗೆ ಪ್ರವೀಣ್ ಹತ್ಯೆ ಆಗಿದ್ದು, ಪ್ರವೀಣ್ ಹತ್ಯೆ ಹಿಂದೆ ಯಾರ ಕೈವಾಡವಿದೆ? ಪೃಥ್ವಿರಾಜ್‍ನನ್ನು ಕೊಲೆ ಮಾಡಲು ಬಂದು ಪ್ರವೀಣ್‍ನ ಕಥೆ ಮುಗಿಸಿದ್ರಾ? ತಪ್ಪು ಮಾಹಿತಿಯಿಂದ ಈ ಕೊಲೆ ನಡೀತಾ? ಹೀಗೆ ಸಾಲು, ಸಾಲು ಪ್ರಶ್ನೆಗಳು ಎದುರಾಗಿದೆ. ಈ ಎಲ್ಲ ಆಯಾಮಗಳಲ್ಲೂ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಪ್ರವೀಣ್ ಕುಟುಂಬಕ್ಕೆ 50 ಲಕ್ಷ ಪರಿಹಾರ ವಿತರಣೆ

    Live Tv
    [brid partner=56869869 player=32851 video=960834 autoplay=true]

  • ಕಾಂಗ್ರೆಸ್ ಇದ್ದಾಗ ಇಬ್ಬರು ಗನ್ ಮ್ಯಾನ್ ಇದ್ರು, ಆದ್ರೆ ಬಿಜೆಪಿ ಬಂದ್ಮೇಲೆ ಒಬ್ಬನೇ ಗನ್ ಮ್ಯಾನ್: ಮುತಾಲಿಕ್

    ಕಾಂಗ್ರೆಸ್ ಇದ್ದಾಗ ಇಬ್ಬರು ಗನ್ ಮ್ಯಾನ್ ಇದ್ರು, ಆದ್ರೆ ಬಿಜೆಪಿ ಬಂದ್ಮೇಲೆ ಒಬ್ಬನೇ ಗನ್ ಮ್ಯಾನ್: ಮುತಾಲಿಕ್

    ಹುಬ್ಬಳ್ಳಿ: ರಾಜ್ಯದಲ್ಲಿ ಹಿಂದೂಗಳ ರಕ್ಷಣೆಯಾಗುತ್ತಿಲ್ಲ. ರಕ್ಷಣೆ ಮಾಡಲು ಬಿಜೆಪಿಯಿಂದಲೂ ಸಾಧ್ಯವಿಲ್ಲ. ಕಾಂಗ್ರೆಸ್‍ನಿಂದಲೂ ಸಾಧ್ಯವಿಲ್ಲ ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಿಡಿಕಾರಿದರು.

    ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿರುವ ಅವರು, ಕಾಂಗ್ರೆಸ್ ಸರ್ಕಾರ ಇದ್ದಾಗ ನನಗೆ ಇಬ್ಬರು ಗನ್ ಮ್ಯಾನ್‍ಗಳನ್ನು ಕೊಡಲಾಗಿತ್ತು. ಆದರೆ ಬಿಜೆಪಿ ಸರ್ಕಾರ ಬಂದ ಮೇಲೆ ಒಬ್ಬ ಗನ್ ಮ್ಯಾನ್ ಅನ್ನು ಕಿತ್ತುಕೊಂಡಿದ್ದಾರೆ. ಇದಕ್ಕೆ ನನ್ನ ಧಿಕ್ಕಾರವಿದೆ.
    ಜಿಹಾದಿಗಳಿಗೆ ಉತ್ತರ ಕೊಡುವಂತಹ ತಾಕತ್ತು ಕೇವಲ ಹಿಂದೂ ಸಂಘಟನೆಗಳಿಗಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

    bjP

    ಕರ್ನಾಟಕದಲ್ಲಿ ನನಗೆ ಅಧಿಕಾರ ಕೊಟ್ಟರೆ ಬುಲ್ಡೋಜರ್ ಆಡಳಿತ ತರುತ್ತೇನೆ. ಎರಡನೇ ಯೋಗಿಯಾಗಿ ಕರ್ನಾಟಕದಲ್ಲಿ ಕೆಲಸ ಮಾಡುತ್ತೇನೆ. ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣವನ್ನು ಎನ್‍ಐಎ ತನಿಖೆಗೆ ನೀಡಲು ಆಗ್ರಹ ಕೇಳಿಬರುತ್ತಿವೆ. ಪರೇಶ್ ಮೇಸ್ತಾ ಸೇರಿದಂತೆ ಅನೇಕ ಪ್ರಕರಣಗಳನ್ನು ಎನ್‍ಐಎಗೆ ಕೊಟ್ಟರು. ಇಲ್ಲಿಯವರೆಗೂ ಏನೂ ಆಗಿಲ್ಲ. ಹೀಗಾಗಿ ನಮ್ಮ ಪೊಲೀಸರೇ ಒಳ್ಳೆಯ ತನಿಖೆಯನ್ನು ಮಾಡುತ್ತಾರೆ. ಕೊಲೆಗೆ ನ್ಯಾಯ ಕೊಡಿಸುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ಮಹಮ್ಮದ್ ಫಾಜಿಲ್ ಬರ್ಬರ ಹತ್ಯೆ- ಮಂಗಳೂರಿನ ಬಜ್ಬೆ, ಪಣಂಬೂರು, ಸುರತ್ಕಲ್, ಮುಲ್ಕಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

    ಪ್ರವೀಣ್ ಶವಯಾತ್ರೆಯಲ್ಲಿ ಲಾಠಿ ಚಾರ್ಜ್ ಮಾಡಿದ್ದು ಅಕ್ಷಮ್ಯ ಅಪರಾಧವಾಗಿದೆ. ಬಿಜೆಪಿ ವಿಫಲತೆ ಮುಚ್ಚಿಕೊಳ್ಳಲು ಲಾಠಿ ಚಾರ್ಜ್ ಮಾಡಲಾಗಿದೆ. ಲಾಠಿ ಚಾರ್ಜ್ ಮಾಡಲು ಯಾರು ಅನುಮತಿ ನೀಡಿದರು ಎನ್ನುವುದು ತನಿಖೆಯಾಗಬೇಕು. ಲಾಠಿ ಚಾರ್ಜ್ ಮಾಡಿದವರೆಲ್ಲರೂ ಅಮಾನತು ಆಗಬೇಕು. ಲಾಠಿ ಚಾರ್ಜ್ ಮಾಡಿದ್ದಕ್ಕೆ ಸಿಎಂ ಮತ್ತು ಗೃಹಸಚಿವರು ರಾಜ್ಯದ ಜನತೆ ಮುಂದೆ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಪ್ರವೀಣ್ ಹತ್ಯೆಗೆ ರಾಜಸ್ಥಾನ ಸಿಎಂ ಖಂಡನೆ

    ಹಿಂದೂಗಳ ಸುರಕ್ಷತೆ ಮಾಡಲು ಬಿಜೆಪಿಗೆ ಯೋಗ್ಯತೆ ಇಲ್ಲ. ಧ್ವಜ ಹಿಡಿದುಕೊಳ್ಳಲು, ಪೋಸ್ಟರ್ ಅಂಟಿಸಲು ಮಾತ್ರ ಇವರಿಗೆ ಬಡ ಕಾರ್ಯಕರ್ತರು ಬೇಕು. ಆದರೆ ಅಧಿಕಾರ ಅನುಭವಿಸಲು ಬಿಜೆಪಿ ನಾಯಕರ ಮಕ್ಕಳು ಬೇಕು. ಬಿಜೆಪಿಯಲ್ಲಿ ಇರುವವರು ಪಕ್ಕಾ ಬಿಜೆಪಿಗರು ಅಲ್ಲಾ. ಬದಲಿಗೆ ಶೇ. 60ರಷ್ಟು ಕಮ್ಯೂನಿಸ್ಟರು, ಕಾಂಗ್ರೆಸ್ ಮತ್ತು ಜೆಡಿಎಸ್‍ನವರು ಇದ್ದಾರೆ. ಇಂತಹವರಿಗೆ ಯಾವುದೇ ಸಿದ್ಧಾಂತವಿಲ್ಲ ಅವರಿಗೆ ಅಧಿಕಾರ ಅಷ್ಟೇ ಬೇಕು. ಬಿಜೆಪಿಯಲ್ಲಿ ಹಿಂದುತ್ವನ್ನು ಮರೆಮಾಚಿದ್ದಾರೆಂದು ವಾಗ್ದಾಳಿ ನಡೆಸಿದರು.

    Live Tv
    [brid partner=56869869 player=32851 video=960834 autoplay=true]

  • ಮಹಮ್ಮದ್ ಫಾಸಿಲ್ ಬರ್ಬರ ಹತ್ಯೆ- ಮಂಗಳೂರಿನ ಬಜ್ಬೆ, ಪಣಂಬೂರು, ಸುರತ್ಕಲ್, ಮುಲ್ಕಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

    ಮಹಮ್ಮದ್ ಫಾಸಿಲ್ ಬರ್ಬರ ಹತ್ಯೆ- ಮಂಗಳೂರಿನ ಬಜ್ಬೆ, ಪಣಂಬೂರು, ಸುರತ್ಕಲ್, ಮುಲ್ಕಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

    ಮಂಗಳೂರು: ಪ್ರವೀಣ್ ಹತ್ಯೆಯ ಬೆನ್ನಲ್ಲೆ ಮತ್ತೊಬ್ಬ ಯುವಕ ಫಾಸಿಲ್‌ನ ಹತ್ಯೆ ಆಗಿರುವ ಹಿನ್ನೆಲೆಯಲ್ಲಿ ಬಜ್ಬೆ, ಪಣಂಬೂರು, ಸುರತ್ಕಲ್, ಮುಲ್ಕಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

    ಬಜ್ಬೆ, ಪಣಂಬೂರು, ಸುರತ್ಕಲ್, ಮುಲ್ಕಿ ವ್ಯಾಪ್ತಿಯ 4 ಠಾಣೆಗಳಲ್ಲಿ ನಿಷೇಧಾಜ್ಞೆ ಜಾರಿಗೆ ಮಂಗಳೂರು ಕಮಿಷನರ್ ಶಶಿಕುಮಾರ್ ಆದೇಶ ನೀಡಿದ್ದಾರೆ. ನಗರದಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದು, ಯಾವುದೇ ವಂದತಿಗೂ ಕಿವಿಗೊಡಬೇಡಿ. ಫಾಸಿಲ್‌ ಹತ್ಯೆಗೆ ಸಂಬಂಧಿಸಿ ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳುತ್ತೇವೆ. ತನಿಖೆಯ ನಂತರ ಸತ್ಯಾಸತ್ಯತೆ ಹೊರಬಿಳಲಿದೆ ಎಂದು ತಿಳಿಸಿದ್ದಾರೆ.

    ಘಟನೆಯೇನು?: ಕಾರ್‌ನಲ್ಲಿ ಬಂದಿದ್ದ ನಾಲ್ವರು ಮುಸುಕುಧಾರಿ ದುಷ್ಕರ್ಮಿಗಳು ಬಟ್ಟೆ ಅಂಗಡಿಗೆ ನುಗ್ಗಿ ಮಹಮ್ಮದ್ ಫಾಸಿಲ್(23)ನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಮಂಗಳೂರು ಬಳಿಯ ಸುರತ್ಕಲ್‍ನಲ್ಲಿ ನಡೆದಿದೆ. ಗ್ಯಾಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಫಾಸಿಲ್ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದ. ಚಿಕಿತ್ಸೆ ಫಲಕಾರಿಯಾಗದೇ ಫಾಸಿಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಇದನ್ನೂ ಓದಿ: ಪ್ರವೀಣ್‌ ಹತ್ಯೆ ಬೆನ್ನಲ್ಲೇ ಮಂಗಳೂರಲ್ಲಿ ಮತ್ತೊಬ್ಬ ಯುವಕನ ಬರ್ಬರ ಹತ್ಯೆ

    POLICE JEEP

    ಸುರತ್ಕಲ್ ಕಾಟಿಪಳ್ಳ ಮಂಗಳಪೇಟೆ ನಿವಾಸಿ ಮಹಮ್ಮದ್ ಫಾಸಿಲ್‌ ಅವರು, ರಾತ್ರಿ 8 ಗಂಟೆಯ ಸುಮಾರಿಗೆ ಎಂಆರ್‍ಪಿಎಲ್ ರಸ್ತೆಯ ಸುರತ್ಕಲ್ ಮಾರುಕಟ್ಟೆ ಸನಿಹದ ಸಂಕೀರ್ಣದಲ್ಲಿರುವ ಬಟ್ಟೆ ಅಂಗಡಿಗೆ ಹೋಗುತ್ತಿರುವ ಸಂದರ್ಭದಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದೆ. ಇದನ್ನೂ ಓದಿ: ಪ್ರವೀಣ್ ಹತ್ಯೆ ಬಳಿಕ ನಮ್ಮ ನಾಯಕರು ತಲೆಯೆತ್ತಿ ಓಡಾಡೋಕೆ ಆಗ್ತಿಲ್ಲ – ವಿಜಯೇಂದ್ರ

    ಈ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಫಾಝಿಲ್ ಎಂಆರ್‌ಪಿಎಲ್‍ನಲ್ಲಿ ಗುತ್ತಿಗೆ ಕಾಮಗಾರಿ ನಿರ್ವಹಿಸುತ್ತಿದ್ದರು. ಘಟನೆ ಸಂಬಂಧಿಸಿ ಸುರತ್ಕಲ್ ಸುತ್ತಮುತ್ತ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಪ್ರವೀಣ್‌ ಹತ್ಯೆ ಬೆನ್ನಲ್ಲೇ ಮಂಗಳೂರಲ್ಲಿ ಮತ್ತೊಬ್ಬ ಯುವಕನ ಬರ್ಬರ ಹತ್ಯೆ

    ಪ್ರವೀಣ್‌ ಹತ್ಯೆ ಬೆನ್ನಲ್ಲೇ ಮಂಗಳೂರಲ್ಲಿ ಮತ್ತೊಬ್ಬ ಯುವಕನ ಬರ್ಬರ ಹತ್ಯೆ

    ಮಂಗಳೂರು: ಪ್ರವೀಣ್‌ ಕುಮಾರ್‌ ನೆಟ್ಟೂರ್‌ ಹತ್ಯೆ ಬೆನ್ನಲ್ಲೇ ಮತ್ತೊಬ್ಬ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆ ಮಾಡಿದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್‌ ಬಳಿ ನಡೆದಿದೆ.

    ಫಾಜೀಲ್‌ ಮೃತ ದುರ್ದೈವಿ. ಫಾಜೀಲ್‌ ಮೇಲೆ ಅಪರಿಚಿತ ತಂಡದವರು ನಡು ರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಸುರತ್ಕಲ್ ಸಮೀಪದ ಮಂಗಳಪಾದೆ ನಿವಾಸಿ ಫಾಜೀಲ್ ಗಂಭೀರ ಗಾಯಗೊಂಡ ಫಾಜೀಲ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಪ್ರವೀಣ್ ಹತ್ಯೆ ಬಳಿಕ ನಮ್ಮ ನಾಯಕರು ತಲೆಯೆತ್ತಿ ಓಡಾಡೋಕೆ ಆಗ್ತಿಲ್ಲ – ವಿಜಯೇಂದ್ರ

    POLICE JEEP

    ಘಟನೆಗೆ ಸಂಬಂಧಿಸಿ ಸುರತ್ಕಲ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಸುರತ್ಕಲ್ ನಲ್ಲಿ ಅಂಗಡಿ ಮುಂಗಟ್ಟು ಬಂದ್ ಮಾಡಲಾಗಿದೆ. ಪ್ರವೀಣ್ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಬೊಮ್ಮಾಯಿ

    Live Tv
    [brid partner=56869869 player=32851 video=960834 autoplay=true]

  • ಕಾಂಗ್ರೆಸ್ ಸರ್ಕಾರವಾಗಿದ್ರೆ ಬೀದಿಯಲ್ಲಿ ನಿಂತು ಕಲ್ಲು ಹೊಡೆಯಬಹುದಿತ್ತು: ತೇಜಸ್ವಿ ಸೂರ್ಯ ಆಡಿಯೋ ವೈರಲ್

    ಕಾಂಗ್ರೆಸ್ ಸರ್ಕಾರವಾಗಿದ್ರೆ ಬೀದಿಯಲ್ಲಿ ನಿಂತು ಕಲ್ಲು ಹೊಡೆಯಬಹುದಿತ್ತು: ತೇಜಸ್ವಿ ಸೂರ್ಯ ಆಡಿಯೋ ವೈರಲ್

    ಚಿಕ್ಕಮಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ರಾಜ್ಯಾದ್ಯಂತ ತಲ್ಲಣ ಸೃಷ್ಟಿಸಿದ್ದು, ಕಾಂಗ್ರೆಸ್ ಸರ್ಕಾರವಿದ್ದಿದ್ದರೇ ಬೀದಿಯಲ್ಲಿ ಕಲ್ಲು ಹೊಡೆಯಬಹುದಿತ್ತು ಎಂದು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಮೊಬೈಲ್ ಸಂಭಾಷಣೆ ಭಾರೀ ವೈರಲ್ ಆಗಿದೆ.

    ಸಂಸದ ತೇಜಸ್ವಿ ಸೂರ್ಯ ಹಾಗೂ ಚಿಕ್ಕಮಗಳೂರು ಜಿಲ್ಲಾ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂದೀಪ್ ಅರವಿನಂಗಡಿ ನಡುವೆ ನಡೆದ ಮೊಬೈಲ್ ಸಂಭಾಷಣೆ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

    ಪ್ರವೀಣ್ ನೆಟ್ಟಾರ್ ಹತ್ಯೆಯಿಂದ ಬೇಸತ್ತು ಚಿಕ್ಕಮಗಳೂರು ಜಿಲ್ಲಾ ಯುವ ಮೋರ್ಚಾದ 9 ಮಂಡಲದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ನಿನ್ನೆ ಸಾಮೂಹಿಕ ರಾಜೀನಾಮೆ ನೀಡಿದ್ದರು. ರಾಜ್ಯದಲ್ಲಿ ಹಿಂದೂಗಳ ಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಪ್ರತಿ ಬಾರಿ ಹತ್ಯೆಯಾದಗಲೂ ಸರ್ಕಾರ ಕಠಿಣ ಕ್ರಮಕೈಗೊಳ್ಳುತ್ತೇವೆ ಎಂದು ನೀಡುತ್ತಿರುವ ಭರವಸೆ ಬರೀ ಭರವಸೆಯಾಗಿ ಉಳಿಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರವೀಣ್ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಬೊಮ್ಮಾಯಿ

    ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ ಬಳಿಕ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಅವರು ಸಂದೀಪ್ ಅರವಿನಂಗಡಿ ಅವರಿಗೆ ದೂರವಾಣಿ ಕರೆ ಮಾಡಿ ಸಾಮಾಹಿಕ ರಾಜೀನಾಮೆಯನ್ನು ವಾಪಸ್ ಪಡೆಯುವಂತೆ ಮನವಿ ಮಾಡಿದ್ದಾರೆ.

    ಈ ವೇಳೆ ಮಾತುಕತೆ ಸಂದರ್ಭದಲ್ಲಿ ಪ್ರವೀಣ್ ಹತ್ಯೆ ವಿಚಾರವಾಗಿ ನಮಗೂ ಬೇಸರ ಮೂಡಿಸಿದೆ. ನಿಮಗಿಂತ ಹತ್ತು ಪರ್ಸೆಂಟ್ ಜಾಸ್ತಿ ರೋಷವಿದೆ. ರಾಜ್ಯದಲ್ಲಿ ನಮ್ಮದೆ ಸರ್ಕಾರವಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಹತ್ಯೆಯಾಗಿದ್ದರೇ ಬೀದಿಯಲ್ಲಿ ನಿಂತು ಕಲ್ಲು ಹೊಡೆಯಬಹುದಿತ್ತು ಎಂದ ಅವರು, ರಾಜೀನಾಮೆಯನ್ನು ವಾಪಸ್ ಪಡೆದುಕೊಳ್ಳಿ. ಯುವ ಮೋರ್ಚಾದಿಂದ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಹತ್ಯೆಕೋರರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಆಗ್ರಹಿಸೋಣ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪ್ರವೀಣ್ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಬೊಮ್ಮಾಯಿ

    ಪ್ರವೀಣ್ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಬೊಮ್ಮಾಯಿ

    ಮಂಗಳೂರು: ಬೆಳ್ಳಾರೆಯ ಮೃತ ಪ್ರವೀಣ್ ಮನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿದ್ದು, ಪ್ರವೀಣ್ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

    ಮಂಗಳೂರು ಪ್ರವೀಣ್ ಹತ್ಯೆ ವಿಚಾರವಾಗಿ ಬೆಳ್ಳಾರೆಯ ನೆಟ್ಟೂರಿಗೆ ಸಿಎಂ ಆಗಮಿಸಿದ್ದಾರೆ. ಈ ವೇಳೆ ಪ್ರವೀಣ್ ಪತ್ನಿ ನೂತನಾ ಮಾತನಾಡಿ, ಇನ್ನು ಮುಂದೆ ಕಾರ್ಯಕರ್ತರ ಕೊಲೆ ಆಗಬಾರದು. ಆರೋಪಿಗಳಿಗೆ ಗಲ್ಲು ಶಿಕ್ಷೆ ಆಗಬೇಕು. ಪಕ್ಷಕ್ಕಾಗಿ ನನ್ನ ಪತಿ ಹಗಲು-ರಾತ್ರಿ ದುಡಿದಿದ್ದಾರೆ. ನನ್ನ ಪತಿಗೆ ಆದ ಸ್ಥಿತಿ ಬೇರೆ ಕಾರ್ಯಕರ್ತರಿಗೆ ಬರಬಾರದು ಎಂದು ಸಿಎಂ ಬಳಿ ಮನವಿ ಮಾಡಿದರು.

    ಇದೇ ರೀತಿ ಮುಂದುವರಿದರೆ ಪಕ್ಷ ಸಂಘಟನೆಗೆ ಯಾವ ಯುವಕರು ಮುಂದೆ ಬರುವುದಿಲ್ಲ. ಆರೋಪಿಗಳಿಗೆ ಶಿಕ್ಷೆ ನೀಡಿ ನಮಗೆ ನ್ಯಾಯ ಒದಗಿಸಬೇಕು. ನಾನು ದಿನಾಲು ಗಂಡನ ಜೊತೆ ಅಂಗಡಿಗೆ ಹೋಗುತ್ತಿದ್ದೆ. ಆದರೆ, ಕೊಲೆಯಾದ ದಿನ ಮಾತ್ರ ತಾಯಿ ಮನೆಗೆ ಹೋಗಿದ್ದೆ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಪ್ರವೀಣ್‌ ಪತ್ನಿಗೆ ಟಿಕೆಟ್‌ ಕೊಡಿ – ಬಿಜೆಪಿ ಕಾರ್ಯಕರ್ತರ ಹೊಸ ಬೇಡಿಕೆ

    ಇದಕ್ಕೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಕಳೆದ ಎಲ್ಲಾ ಪ್ರಕರಣಗಳನ್ನು ಇಟ್ಟುಕೊಂಡು ಎಲ್ಲಾ ಆಯಾಮಗಳಲ್ಲೂ ತನಿಖೆಗೆ ಸೂಚನೆ ನೀಡಿದ್ದೇನೆ. ಈ ಪ್ರಕರಣದ ವರದಿ ಆಧಾರದ ಮೇಲೆ ಇನ್ನಷ್ಟು ತನಿಖೆಗೆ ಸೂಚಿಸಲಾಗಿದೆ. ಈ ಪ್ರಕರಣದ ಹಿಂದೆ ಇರುವ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುತ್ತೇವೆ. ಪಕ್ಷದಿಂದ 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದೇವೆ. ಕುಟುಂಬ ನಿರ್ವಹಣೆಗೆ ಯಾವುದೇ ತೊಂದರೆಯಾಗದಂತೆ ಕ್ರಮಕೈಗೊಳ್ಳಲಾಗುವುದು. ಕುಟುಂಬಕ್ಕೆ ಎಲ್ಲಾ ರೀತಿಯ ಸವಲತ್ತುಗಳನ್ನ ನೀಡಲಾಗುವುದು ಎಂದು ಭರವಸೆ ನೀಡಿದರು.

    ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಗೃಹ ಸಚಿವ ಆರಗ ಜ್ಞಾನೇಂದ್ರ ಇದ್ದರು. ಇದನ್ನೂ ಓದಿ: ಪ್ರವೀಣ್ ಹತ್ಯೆ ಖಂಡಿಸಿ 19 ಮಂದಿ ಬಿಜೆಪಿ ಕಾರ್ಯಕರ್ತರು ರಾಜೀನಾಮೆ

    Live Tv
    [brid partner=56869869 player=32851 video=960834 autoplay=true]

  • ಮನೆ ಕಟ್ಟಲು ಸಮತಟ್ಟು ಮಾಡಿದ ಜಾಗದಲ್ಲೇ ಮಗನನ್ನು ಸುಡಲಾಗಿದೆ: ಬಿಕ್ಕಿ ಬಿಕ್ಕಿ ಅತ್ತ ಪ್ರವೀಣ್ ತಾಯಿ

    ಮನೆ ಕಟ್ಟಲು ಸಮತಟ್ಟು ಮಾಡಿದ ಜಾಗದಲ್ಲೇ ಮಗನನ್ನು ಸುಡಲಾಗಿದೆ: ಬಿಕ್ಕಿ ಬಿಕ್ಕಿ ಅತ್ತ ಪ್ರವೀಣ್ ತಾಯಿ

    ಮಂಗಳೂರು: ಮನೆ ಕಟ್ಟಬೇಕು ಅಂತ ಸಮತಟ್ಟು ಮಾಡಿದ ಜಾಗದಲ್ಲಿಯೇ ನನ್ನ ಮಗ ಪ್ರವೀಣ್ ನನ್ನು ಸುಡಲಾಗಿದೆ ಎಂದು ಹೇಳುತ್ತಾ ಪ್ರವೀಣ್ ಕುಮಾರ್ ನೆಟ್ಟಾರು ತಾಯಿ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಮಗ ಇಲ್ಲದ ಮುಂದಿನ ದಾರಿ ಏನು ಎಂಬುದು ಗೊತ್ತಿಲ್ಲ. ಎಲ್ಲಿ ಹೋಗಿ ಬಂದರೂ ಪೊಪ್ಪ.. ಅಮ್ಮಾ ಅಂತಾ ಬಾಯ್ತುಂಬಾ ಕರೀತಾ ಇದ್ದ. ಪ್ರವೀಣ್ ನನ್ನ ಮುದ್ದು ಮಗ. ಮೂವರು ಹೆಣ್ಣು ಮಕ್ಕಳು, ಒಬ್ಬ ಗಂಡು ಮಗ. ಈತನೇ ಕೊನೆಯವನು. ಕಷ್ಟ-ಸುಖದಲ್ಲಿ ಭಾಗಿಯಾಗುವವನು ಎಂದು ಕಣ್ಣೀರಾಕಿದರು. ಇದನ್ನೂ ಓದಿ: ನನ್ನ ಮುಂದಿನ ಜೀವನ ಏನು ಎಂದು ಗೊತ್ತಿಲ್ಲ: ಪ್ರವೀಣ್ ಪತ್ನಿ ನೂತನ ಕಣ್ಣೀರು

    ನಮಗಿಬ್ಬರಿಗೂ ಕೆಲಸ ಮಾಡಲು ಆಗುತ್ತಿಲ್ಲ. ಅವನ ಅಪ್ಪ ಹಾರ್ಟ್ ಪೇಷೆಂಟ್, 2-3 ಬಾರಿ ಆಪರೇಷನ್ ಕೂಡ ಆಗಿದೆ. ನಾನು ಕೂಡ ಶುಗರ್ ಪೇಷೆಂಟ್ ಆಗಿದ್ದು, ನನಗೂ ಕೆಲಸ ಮಾಡಲು ಆಗ್ತಿಲ್ಲ. ಹಾಗಂತ ಅವನೂ ಯಾವತ್ತೂ ನಮಗೆ ತಿನ್ನೋಕೆ ಕಡಿಮೆ ಮಾಡಿಲ್ಲ. ಪೊಪ್ಪ-ಅಮ್ಮಾ ಅಂತ ಕರೀತಿದ್ದ ನನ್ನ ಮಗುವನ್ನು ನಾವಿಂದು ಕಳೆದುಕೊಂಡಿದ್ದೇವೆ ಎಂದು ಗದ್ಗದಿತರಾದರು.

    ನನ್ನ ಮಗನನ್ನು ಯಾರು ಕೊಂದರೋ ಅವರಿಗೆ ಶಿಕ್ಷೆಯಾಗಲಿ. ಆ ಪಾಪಿಗಳಿಗೆ ಗಲ್ಲು ಶಿಕ್ಷೆ ಆಗಬೇಕು. ನಮ್ಮ ಬದುಕು ಹೋಯ್ತು.. ಅವರನ್ನು ಉಳಿಸಬೇಕಾ..? ಸರ್ಕಾರ ನಮಗೆ ನ್ಯಾಯ ಒದಗಿಸಿಕೊಡಲಿ ಎಂದು ಪ್ರವೀಣ್ ತಾಯಿ ಆಗ್ರಹಿಸಿದರು. ಇದನ್ನೂ ಓದಿ: ಪ್ರವೀಣ್ ಹತ್ಯೆ ಪ್ರಕರಣ- ಬಂಧಿತ ಕೆಲಸ ಮಾಡುತ್ತಿದ್ದ ಅಂಗಡಿಗೆ ಮುತ್ತಿಗೆ

    ನಮಗೆ ಕುಡಿಯಲು ನೀರಿಲ್ಲ. ಬೋರ್ ತೆಗೆಯುವ ಕೆಲಸ ಅರ್ಧಕ್ಕೆ ಬಾಕಿ ಆಯ್ತು. ಮನೆ ಕಟ್ಟಬೇಕು ಅಮ್ಮ ಅಂತ ಹೊರಟ ಅದೂ ಅರ್ಧದಲ್ಲಿಯೇ ಇದೆ. ಮನೆ ಕಟ್ಟಬೇಕು ಅಂತ ಸಮತಟ್ಟು ಮಾಡಿದ ಜಾದಲ್ಲಿಯೇ ನನ್ನ ಮಗನನ್ನು ಸುಡಲಾಗಿದೆ. ನಮಗೆ ಮನೆ ಇಲ್ಲ, ಕುಡಿಯೋಕೆ ನೀರಿಲ್ಲ ಮುಂದೆ ಯಾವ ರೀತಿ ಜೀವನ ಮಾಡುವುದು ಎಂದು ಗೊತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

    ನಮಗೆ ತುಂಬಾ ಸಾಲ ಇದೆ. ಇದನ್ನೆಲ್ಲ ಯಾರು ಇನ್ನು ತೀರಿಸುತ್ತಾರೆ. ನಮಗೆ ದುಡಿಯಲು ಆಗ್ತಿಲ್ಲ. ಮನೆಯಲ್ಲಿ ಸಮಸ್ಯೆಗಳಿದ್ದರೂ ಆತ ಸಮಾಜ ಸೇವೆಯಲ್ಲಿಯೇ ತೊಡಗಿಸಿಕೊಳ್ಳುತ್ತಿದ್ದ ಎಮದು ಮಗನ ನೆನಪಿಸಿಕೊಂಡು ತಾಯಿ ಅತ್ತು ಬಿಟ್ಟರು. ಇದನ್ನೂ ಓದಿ: ಪ್ರವೀಣ್‌ ಹಂತಕರನ್ನು ಕೇರಳ ಗಡಿಯವರೆಗೆ ಕಳುಹಿಸಿ ಕೊಟ್ಟಿದ್ದೇವೆ: ಬಂಧಿತ ಆರೋಪಿಗಳು

    Live Tv
    [brid partner=56869869 player=32851 video=960834 autoplay=true]

  • ಪ್ರವೀಣ್ ನೆಟ್ಟಾರು ತಂದೆ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು

    ಪ್ರವೀಣ್ ನೆಟ್ಟಾರು ತಂದೆ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು

    ಮಂಗಳೂರು: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಯಿಂದ ಆಘಾತಕ್ಕೊಳಗಾಗಿರುವ ತಂದೆಯ ಆರೋಗ್ಯದಲ್ಲಿ ಏರುಪೇರಾಗಿದ್ದು, ಇದೀಗ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಮಗನ ಸಾವಿನಿಂದ ಶೇಖರ್ ಪೂಜಾರಿ ತೀವ್ರ ಆಘಾತಕ್ಕೊಳಗಾಗಿದ್ದರು. ಮೊದಲೇ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ತಂದೆ ಶೇಖರ್ ಪೂಜಾರಿ ಅವರು ಇದ್ದ ಒಬ್ಬ ಮಗನ ಸಾವಿನಿಂದ ಕಂಗಾಲಾಗಿದ್ದರು. ಇದೀಗ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದ್ದು, ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

    ಅಂಬುಲೆನ್ಸ್ ಮೂಲಕ ಬೆಳ್ಳಾರೆಯ ಭಾರದ್ವಾಜ್ ಆಸ್ಪತ್ರೆಗೆ ಶೇಖರ್ ಅವರನ್ನು ರವಾನೆ ಮಾಡಲಾಗಿದೆ. ಇದನ್ನೂ ಓದಿ: ನನ್ನ ಮುಂದಿನ ಜೀವನ ಏನು ಎಂದು ಗೊತ್ತಿಲ್ಲ: ಪ್ರವೀಣ್ ಪತ್ನಿ ನೂತನ ಕಣ್ಣೀರು

    Live Tv
    [brid partner=56869869 player=32851 video=960834 autoplay=true]

  • ನಮ್ಮ ಕಾರ್ಯಕರ್ತರನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ನಳಿನ್ ಕುಮಾರ್ ಕಟೀಲ್

    ನಮ್ಮ ಕಾರ್ಯಕರ್ತರನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ನಳಿನ್ ಕುಮಾರ್ ಕಟೀಲ್

    ಬೆಂಗಳೂರು: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರ್ ಹತ್ಯೆಯ ಬೆನ್ನಲ್ಲೇ ಕಾರ್ಯಕರ್ತರು ಬಿಜೆಪಿ ನಾಯಕರ ವಿರುದ್ಧವೇ ಆಕ್ರೋಶ ಹೊರಹಾಕಿದ್ದಾರೆ. ಈ ನಡುವೆ ನಳಿನ್ ಕುಮಾರ್ ಕಟೀಲ್ ಅವರು ಮಾಡಿದ್ದ ಭಾಷಣದ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಬೆನ್ನಲ್ಲೇ ಮತ್ತೆ ವೀಡಿಯೋ ಮಾಡಿರುವ ಕಟೀಲ್, ನಮ್ಮ ಕಾರ್ಯಕರ್ತರನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

    ಈ ಸಂಬಂಧ ವೀಡಿಯೋ ಮಾಡಿರುವ ನಳೀನ್, ನಮ್ಮ ಕಾರ್ಯಕರ್ತರನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಇಂತಹ ಘಟನೆಗಳು ನಡೆದಾಗ ಕಾರ್ಯಕರ್ತರಿಗೆ ಉತ್ತರ ಕೊಡುವಂತಹ ಕೆಲಸವನ್ನು ಮಾಡುತ್ತೆ. ಈ ಬಗ್ಗೆ ನನಗೆ ವಿಶ್ವಾಸ ಇದೆ. ಮುಖ್ಯಮಂತ್ರಿಗಳ ಬಳಿ ಕೂಡ ಹೇಳಿದ್ದೇನೆ. ಪ್ರವೀಣ್ ಆತ್ಮಕ್ಕೆ ಶಾಂತಿ ಸಿಗುವ ರೀತಿಯಲ್ಲಿ ಉತ್ತರ ಕೊಡುವ ಕೆಲಸ ಮಾಡುತ್ತೇವೆ. ಇದರ ಹಿಂದೆ ಇರುವ ಎಲ್ಲಾ ಷಡ್ಯಂತ್ರ, ಪಿತೂರಿಗಳನ್ನು ಹಾಗೂ ಕೇರಳ ಮುಲದ ಕೈವಾಡಗಳಿದ್ದರೆ ಅದನ್ನು ಕೂಡ ತನಿಖೆ ಮಾಡಿ ಆರೋಪಿಗಳನ್ನು ಬಂಧಿಸುವ ಮೂಲಕ ಉತ್ತರ ಕೊಡುವ ಕೆಲಸ ಸರ್ಕಾರ ಮಾಡುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಈ ಹಿಂದೆ ಭಾಷಣದಲ್ಲಿ ನಳಿನ್ ಕಕುಮಾರ್ ಕಟೀಲ್ ಅವರು, ಕರಾವಳಿ ಜಿಲ್ಲೆಯಲ್ಲಿ ನಾನು ಹೋರಾಟ ಮಾಡಿ ಬಂದವ. ನಮ್ಮ ಜಿಲ್ಲೆಯಲ್ಲಿ ತಾಕತ್ತಿದ್ರೆ ಒಬ್ಬೇ ಒಬ್ಬ ಬಿಜೆಪಿ ಕಾರ್ಯಕರ್ತನನ್ನು ಮುಟ್ಟಿ ನೋಡಿ. ಬಿಜೆಪಿ ತಕ್ಕ ಪಾಠ ಕಲಿಸುತ್ತೆ ಅಂತ ಶಪಥ ಮಾಡಿದ್ದ ವಿಡಿಯೋವೊಂದು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ನನ್ನ ಮುಂದಿನ ಜೀವನ ಏನು ಎಂದು ಗೊತ್ತಿಲ್ಲ: ಪ್ರವೀಣ್ ಪತ್ನಿ ನೂತನ ಕಣ್ಣೀರು

    ಎರಡ್ಮೂರು ತಿಂಗಳ ಹಿಂದೆ ಶಿವಮೊಗ್ಗದ ಹಿಂದೂ ಹರ್ಷನ ಕೊಲೆ ಆಗಿದೆ. ಈಗ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಹಿಂದೂ ಕಾರ್ಯಕರ್ತ, ಬಿಜೆಪಿ ಮುಖಂಡನ ಹತ್ಯೆ ನಡೆದಿದೆ. ಆದ್ರೂ ಯಾರಿಗೂ ಬಿಜೆಪಿ ಪಾಠ ಕಲಿಸಿದಂತೆ ಕಾಣುತ್ತಿಲ್ಲ. ಇತ್ತೀಚಿಗೆ ಪರಪ್ಪನ ಅಗ್ರಹಾರದಲ್ಲಿ ಹರ್ಷನ ಕೊಲೆ ಆರೋಪಿಗಳು ವೀಡಿಯೋ ಕಾಲ್ ಮಾಡ್ತಿರೋ ದೃಶ್ಯಗಳೇ ಇದಕ್ಕೆ ಸಾಕ್ಷಿಯಾಗಿವೆ.

    Live Tv
    [brid partner=56869869 player=32851 video=960834 autoplay=true]