Tag: Praveen Nettar

  • ಪ್ರವೀಣ್ ಹತ್ಯೆಗೈದ ಎಲ್ಲರಿಗೂ ಮರಣ ದಂಡನೆ ಆಗಬೇಕು: ಪತ್ನಿ ಆಗ್ರಹ

    ಪ್ರವೀಣ್ ಹತ್ಯೆಗೈದ ಎಲ್ಲರಿಗೂ ಮರಣ ದಂಡನೆ ಆಗಬೇಕು: ಪತ್ನಿ ಆಗ್ರಹ

    ಮಂಗಳೂರು:‌ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು (Praveen Nettar) ಹತ್ಯೆಯ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ ಬಂಧನಕ್ಕೆ ಪತ್ನಿ ನೂತನ ಸಂತಸ ವ್ಯಕ್ತಪಡಿಸಿದ್ದಾರೆ.

    ಈ ಸಂಬಂಧ ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ಅವರು, ಮುಸ್ತಫಾ ಪೈಚಾರ್ (Musthafa Paichar) ಈ ಪ್ರಕರಣದ ಪ್ರಮುಖ ಆರೋಪಿ. ಅವನು ಸಿಕ್ಕಿದ್ದಾನೆ ಅಂತ ನಮಗೆ ತುಂಬಾ ಖುಷಿಯಾಗಿದೆ. ಈ ಪ್ರಕರಣದ ಎಲ್ಲ ಆರೋಪಿಗಳಿಗೂ ಮರಣ ದಂಡನೆಯಾಗಬೇಕು ಎಂದು ಆಗ್ರಹ ಮಾಡಿದರು.

    ಈ ಪ್ರಕರಣದಲ್ಲಿ ಸುಮಾರು 20 ಮಂದಿ ಭಾಗಿಯಾಗಿದ್ದಾರೆ. ಮುಂದೆ ಸಮಾಜದಲ್ಲಿ ಇಂತಹ ಪ್ರಕರಣ ಮರುಕಳಿಸಬಾರದು. ಇಡೀ ದೇಶದಲ್ಲೇ ಈ ಪ್ರಕರಣ ಅಂತಿಮ ಪ್ರಕರಣ ಆಗಬೇಕು. ನಮ್ಮ ಕುಟುಂಬದವರಿಗೆ ತುಂಬಾ ಸಂತಸದ ಸುದ್ದಿ. ನಮ್ಮ ಕುಟುಂಬ ಹಾಗೂ ಸಮಾಜದವರ ಪರವಾಗಿ ಎನ್ಐಎ ಅಧಿಕಾರಿಗಳಿಗೆ ಧನ್ಯವಾದ ಹೇಳುತ್ತೇನೆ ಎಂದರು.‌ ಇದನ್ನೂ ಓದಿ: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ – 2 ವರ್ಷಗಳ ಬಳಿಕ ಪ್ರಮುಖ ಆರೋಪಿ ಬಂಧನ

    ಪ್ರಕರಣ ನಡೆದು ಎರಡು ವರ್ಷವಾದರೂ ಆರೋಪಿಗಳನ್ನ ಬಂಧಿಸಲು ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ತುಂಬಾ ಪ್ರಯತ್ನ ಪಡುತ್ತಿದ್ದಾರೆ. ಎನ್ ಐಎ ಸಂಸ್ಥೆಯ ಮೇಲೆ ನಂಬಿಕೆ ಇದೆ. ಎಲ್ಲಾ ಆರೋಪಿಗಳ ಬಂಧನವಾಗುತ್ತೆ ಅನ್ನೋ ವಿಶ್ವಾಸವಿದೆ. ಈ ಪ್ರಕರಣದ ಆರೋಪಿಗಳಿಗೆ ನೀಡುವ ಶಿಕ್ಷೆ ಒಂದು ಪಾಠವಾಗಬೇಕು ಎಂದು ಆಕ್ರೋಶ ಹೊರಹಾಕಿದರು. ಇದೆ ವೇಳೆ ಎಸ್‌ಡಿಪಿಐ ಹಾಗೂ ಪಿಎಫ್‌ಐ ಕಾರ್ಯಕರ್ತರು ಮುಂದೆ ಯಾವತ್ತೂ ಇಂತಹ ಪ್ರಕರಣಕ್ಕೆ ಕೈ ಹಾಕಬಾರದು ಎಂದು ಪ್ರವೀಣ್ ನೆಟ್ಟಾರ್‌ ಪತ್ನಿ ನೂತನ ಕಿಡಿಕಾರಿದರು.

    ಮುಸ್ತಫಾ ಪೈಚಾರ್ ಅರೆಸ್ಟ್‌: ಪ್ರಕರಣ ನಡೆದು ಬರೋಬ್ಬರಿ ಎರಡು ವರ್ಷಗಳ ಬಳಿಕ ಹತ್ಯೆಯ ಪ್ರಮುಖ ಆರೋಪಿಯನ್ನು ಎನ್‌ಐಎ ಅಧಿಕಾರಿಗಳು ಇಂದು ಬೆಳಗ್ಗೆ ಸಕಲೇಶಪುರದಲ್ಲಿ ಬಂಧಿಸಿದ್ದಾರೆ.

    ಪ್ರವೀಣ್‌ ಹತ್ಯೆ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ಅವರು 2022 ರ ಜುಲೈ 26 ರಂದು ರಾತ್ರಿ 8 ಗಂಟೆಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು. ತಕ್ಷಣ ಪುತ್ತೂರು ಆಸ್ಪತ್ರೆಗೆ ಪ್ರವೀಣ್‌ ಅವರನ್ನು ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದ ಕಾರಣ ಚಿಕಿತ್ಸೆ ಫಲಕರಿಯಾಗದೇ ಮೃತಪಟ್ಟಿದ್ದರು. ಪ್ರಕರಣ ಸಂಬಂಧ ಈವರೆಗೆ ಹಲವಾರು ಮಂದಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.

  • ಪ್ರವೀಣ್ ನೆಟ್ಟಾರ್ ಹತ್ಯೆ ಆರೋಪಿಗಳು ಶರಣಾಗದಿದ್ದರೆ ಮನೆ ಜಪ್ತಿ

    ಪ್ರವೀಣ್ ನೆಟ್ಟಾರ್ ಹತ್ಯೆ ಆರೋಪಿಗಳು ಶರಣಾಗದಿದ್ದರೆ ಮನೆ ಜಪ್ತಿ

    ಮಂಗಳೂರು: ಪ್ರವೀಣ್ ನೆಟ್ಟಾರ್ (Praveen Nettar) ಹತ್ಯೆ ಆರೋಪಿಗಳಿಗೆ ಶರಣಾಗಲು ಎನ್‌ಐಎ (NIA) ಕೊನೆಯ ವಾರ್ನಿಂಗ್ ನೀಡಿದ್ದು, ಆರೋಪಿಗಳು ಜೂನ್ 30ರ ಒಳಗೆ ಎನ್‌ಐಎ ನ್ಯಾಯಾಲಯಕ್ಕೆ ಶರಣಾಗಬೇಕು. ಇಲ್ಲವಾದಲ್ಲಿ ಆರೋಪಿಗಳ ಮನೆಯನ್ನು ಜಪ್ತಿ ಮಾಡಲಾಗುವುದು ಎಂದು ಖಡಕ್ ಆದೇಶ ಹೊರಡಿಸಿದೆ.

    ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ (Bellare) ವಾಸವಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಪೆರುವಾಜೆ ಕ್ರಾಸ್ ಬಳಿ ಕೋಳಿ ಮಾಂಸದ ಅಂಗಡಿ ನಡೆಸುತ್ತಿದ್ದರು. 2022ರ ಜುಲೈ 26ರಂದು ಅಂಗಡಿ ಮುಗಿಸಿ ಮನಗೆ ಹೊರಟ ವೇಳೆ ಬೈಕಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ತಲ್ವಾರ್‌ನಿಂದ ಏಕಾಏಕಿ ಅವರ ಮೇಲೆ ದಾಳಿ ನಡೆಸಿದ್ದರು. ಇದನ್ನೂ ಓದಿ: ಅಕ್ಕಿ ಬದಲು ಹಣ ನೀಡುವ ಸರ್ಕಾರದ ನಿರ್ಧಾರಕ್ಕೆ ಕಟೀಲ್ ಖಂಡನೆ

    ಇದರಿಂದ ತೀವ್ರ ಗಾಯಗೊಂಡಿದ್ದ ಪ್ರವೀಣ್ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತಾದರೂ ಕುತ್ತಿಗೆಯ ಭಾಗಕ್ಕೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಈ ಪ್ರಕರಣದ ತನಿಖೆಯನ್ನು ಅಂದಿನ ಬಿಜೆಪಿ ಸರ್ಕಾರ ಎನ್‌ಐಎಗೆ ಒಪ್ಪಿಸಿತ್ತು. ಈ ಹಿನ್ನೆಲೆ ತನಿಖೆ ಕೈಗೊಂಡಿರುವ ಎನ್‌ಐಎ ಹಲವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದೆ. ಇದನ್ನೂ ಓದಿ: ಜುಲೈ 1 ರಿಂದ ಎಕ್ಸ್‌ಪ್ರೆಸ್‌ ವೇ 2ನೇ ಟೋಲ್ ಆರಂಭ, ಯಾವ ವಾಹನಗಳಿಗೆ ಎಷ್ಟು ಶುಲ್ಕ ?

    ತನಿಖೆಯನ್ನು ಚುರುಕುಗೊಳಿಸಿರುವ ಎನ್‌ಐಎ ಸುಳ್ಯದಲ್ಲಿ ಮೈಕ್ ಘೋಷಣೆಯ ಮೂಲಕ ಆರೋಪಿಗಳಿಗೆ ಜೂನ್ 30ರ ಒಳಗೆ ಶರಣಾಗಲು ಡೆಡ್‌ಲೈನ್ ನೀಡಿದೆ. ಆರೋಪಿಗಳು ಶರಣಾಗದಿದ್ದರೆ ಅವರ ಮನೆಯನ್ನು ಜಪ್ತಿ (Seize) ಪಡಿಸುವುದಾಗಿ ಆದೇಶ ಹೊರಡಿಸಿದೆ. ಅಲ್ಲದೇ ಆರೋಪಿಗಳ ಸುಳಿವು ಕೊಟ್ಟಲ್ಲಿ ನಗದು ಬಹುಮಾನ ಕೊಡುವುದಾಗಿ ಘೋಷಿಸಿದೆ. ಇದನ್ನೂ ಓದಿ: 5 ಕೆ.ಜಿ ಅಕ್ಕಿ, ಉಳಿದ 5 ಕೆ.ಜಿ ಅಕ್ಕಿಯ ಹಣ ಕೊಡಲು ಸರ್ಕಾರ ನಿರ್ಧಾರ

    ಇನ್ನು ಸುಳ್ಯದ ಕಲ್ಲುಮುಟ್ಟುವಿನಲ್ಲಿ ವಾಸವಿದ್ದ ಆರೋಪಿಗಳಾದ ಉಮ್ಮರ್ ಫಾರೂಕ್ ಮತ್ತು ಮುಸ್ತಫಾ ಮನೆಗೆ ಭೇಟಿ ನೀಡಿದ ಎನ್‌ಐಎ ಅಧಿಕಾರಿಗಳು ಅವರ ಮನೆಗೆ ಎನ್‌ಐಎ ನ್ಯಾಯಾಲಯದ ಆದೇಶ ಪ್ರತಿಯನ್ನು ಅಂಟಿಸಿದ್ದಾರೆ. ಇನ್ನೆರಡು ದಿನಗಳಲ್ಲಿ ಆರೋಪಿಗಳು ಶರಣಾಗುವಂತೆ ಎನ್‌ಐಎ ಸೂಚಿಸಿದ್ದು, ಇಲ್ಲವಾದಲ್ಲಿ ಅವರಿಗೆ ಸೇರಿದ ಸಕಲ ಆಸ್ತಿಗಳನ್ನು ಜಪ್ತಿ ಮಾಡುವುದಾಗಿ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಬಿಜೆಪಿ ಅವಧಿಯ ಅಕ್ರಮಗಳನ್ನು ವಿವಿಧ ತನಿಖಾ ಸಂಸ್ಥೆಗಳ ಮೂಲಕ ತನಿಖೆ: ಪ್ರಿಯಾಂಕ್ ಖರ್ಗೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪ್ರವೀಣ್‌ ನೆಟ್ಟಾರು ಕೇಸ್‌ – ದಕ್ಷಿಣ ಕನ್ನಡ, ಕೊಡಗಿನಲ್ಲಿ PFI ಕಾರ್ಯಕರ್ತರ ಮನೆ ಮೇಲೆ NIA ದಾಳಿ

    ಪ್ರವೀಣ್‌ ನೆಟ್ಟಾರು ಕೇಸ್‌ – ದಕ್ಷಿಣ ಕನ್ನಡ, ಕೊಡಗಿನಲ್ಲಿ PFI ಕಾರ್ಯಕರ್ತರ ಮನೆ ಮೇಲೆ NIA ದಾಳಿ

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

    ಮಂಗಳೂರು/ ಮಡಿಕೇರಿ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು (Praveen Nettar) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿರುವ ನಿಷೇಧಿತ ಪಿಎಫ್​ಐ (PFI) ಸಂಘಟನೆ ಕಾರ್ಯಕರ್ತರ ಮನೆಗಳ ಮೇಲೆ ರಾಷ್ಟ್ರೀಯ ತನಿಖಾ ದಳ (NIA) ಇಂದು ದಾಳಿ ನಡೆಸಿದೆ.

    ಇಂದು ಬೆಳಗ್ಗೆ ಏಕಕಾಲಕ್ಕೆ 6 ಕಡೆಗಳಲ್ಲಿ ದಾಳಿ ನಡೆಸಿರುವ ಎನ್​ಐಎ ಅಧಿಕಾರಿಗಳು, ಎಲೆಕ್ಟ್ರಾನಿಕ್ ಡಿವೈಸ್​​ಗಳು ಸೇರಿದಂತೆ ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ.

    ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕನ್ವೆಂಟ್ ಬಾಣೆ ಹಾಗೂ ಕಲ್ಕಂದೂರು ಗ್ರಾಮಕ್ಕೆ ಆಗಮಿಸಿ ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ನಡೆಸಿದ್ದಾರೆ. ಬಾಣೆಯ ಅಬ್ದುಲ್ ನಾಸೀರ್ ಕಲ್ಕಂದೂರು ನಿವಾಸಿ ಅಬ್ದುಲ್ ರೆಹಮಾನ್ ಮನೆಗೆ ಅಧಿಕಾರಿಗಳು ಆಗಮಿಸಿದ್ದಾರೆ. ಈ ವೇಳೆ ಅಬ್ದುಲ್ ನಜೀರ್, ಅಬ್ದುಲ್ ರೆಹಮಾನ್ ಇಬ್ಬರು ದುಬೈನಲ್ಲಿರುವ ಬಗ್ಗೆ ಎನ್‌ಐಎ ಅಧಿಕಾರಿಗಳಿಗೆ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ‌Expressway- ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ರೆ ಡಿಎಲ್ ರದ್ದು: ಅಲೋಕ್ ಕುಮಾರ್

     

    ಮುಸ್ತಫಾ ಪೈಚಾರ್, ಅಬುಬಕ್ಕರ್ ಸಿದ್ದಿಕ್, ಉಮ್ಮರ್ ಫಾರುಕ್, ತುಫೇಲ್, ಮಸೂದ್ ಅಗ್ನಾಡಿ ಸೇರಿದಂತೆ ಇನ್ನಿತರ ಪ್ರಮುಖ ಆರೋಪಿಗಳಿಗಾಗಿ ಎನ್‌ಐಎ ತಲಾಶ್ ಮಾಡುತ್ತಿದೆ.

    ಏನಿದು ಪ್ರಕರಣ?
    ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ಅವರು ಜುಲೈ 26 ರಂದು ರಾತ್ರಿ 8 ಗಂಟೆಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು.

     

    ತಕ್ಷಣ ಪುತ್ತೂರು ಆಸ್ಪತ್ರೆಗೆ ಪ್ರವೀಣ್‌ ಅವರನ್ನು ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದ ಕಾರಣ ಚಿಕಿತ್ಸೆ ಫಲಕರಿಯಾಗದೇ ಮೃತಪಟ್ಟಿದ್ದರು. ಪ್ರಕರಣ ಸಂಬಂಧ ಈವರೆಗೆ ಹಲವಾರು ಮಂದಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು ಅಂದಿನ ಬಿಜೆಪಿ ಸರ್ಕಾರ ಎನ್ಐಎಗೆ ವಹಿಸಿತ್ತು.

  • ಅಂದು ಪ್ರಶಾಂತ್ ಮಿಸ್.. ಪ್ರವೀಣ್ ನೆಟ್ಟಾರು ಮರ್ಡರ್..!

    ಅಂದು ಪ್ರಶಾಂತ್ ಮಿಸ್.. ಪ್ರವೀಣ್ ನೆಟ್ಟಾರು ಮರ್ಡರ್..!

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕಾಸರಗೋಡು ಮಸೀದಿಗೆ ಹೋಗಿದ್ದ ಹಂತಕರು – SDPI, PFI ಲಿಂಕ್‌, ವಾರಂಟ್ ಜಾರಿ ಮಾಡಿ ಆಸ್ತಿ ಸೀಜ್‌

    ಕಾಸರಗೋಡು ಮಸೀದಿಗೆ ಹೋಗಿದ್ದ ಹಂತಕರು – SDPI, PFI ಲಿಂಕ್‌, ವಾರಂಟ್ ಜಾರಿ ಮಾಡಿ ಆಸ್ತಿ ಸೀಜ್‌

    – ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅಲೋಕ್‌ಕುಮಾರ್‌

    ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಯ ಆರೋಪಿಗಳಿಗೆ ಪಿಎಫ್‍ಐ ಮತ್ತು ಎಸ್‍ಡಿಪಿಐ ಜೊತೆ ಸಂಬಂಧ ಇರುವುದು ಗೊತ್ತಾಗಿದೆ. ಹತ್ಯೆಯ ಬಳಿಕ ಆರೋಪಿಗಳು ಕಾಸರಗೋಡು ಮಸೀದಿಗೆ ಹೋಗಿದ್ದರು ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.

    ಪ್ರಕರಣದ ಕುರಿತಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್, ಹತ್ಯೆಯಲ್ಲಿ ನೇರವಾಗಿ ಭಾಗಿಯಾಗಿ ಹಲ್ಲೆ ನಡೆಸಿದ ಮೂವರು ಆರೋಪಿಗಳನ್ನು ಇಂದು ಬೆಳಗ್ಗೆ ಮಂಗಳೂರಿನ ತಲಪಾಡಿ ಚೆಕ್ ಪೋಸ್ಟ್ ಬಳಿ ಬಂಧಿಸಲಾಗಿದೆ. ಸುಳ್ಯದ ಶಿಯಾಬ್ (33), ಅಂಕತಡ್ಕದ ರಿಯಾಝ್ (27) ಸುಳ್ಯದ ಎಲಿಮಲೆ ನಿವಾಸಿ ಬಶೀರ್‌ನನ್ನು ಬಂಧಿಸಿದ್ದೇವೆ. ಶಿಯಾಬ್‌ ಕ್ಯಾಂಪ್ಕೋ ಕಂಪನಿಗೆ ಕೊಕ್ಕೊ ವಿತರಣೆ ಮಾಡುತ್ತಿದ್ದರೆ ರಿಯಾಝ್ ಕೋಳಿ ವ್ಯಾಪಾರ ಮಾಡುತ್ತಿದ್ದ. ಬಶೀರ್ ಹೋಟೆಲ್‍ನಲ್ಲಿ ಕೆಲಸ ಮಾಡುತ್ತಿದ್ದ. ಕೃತ್ಯಕ್ಕೆ ಬ್ಲ್ಯಾಕ್ ಸ್ಪ್ಲೆಂಡರ್ ಬೈಕನ್ನು ಬಳಕೆ ಮಾಡಲಾಗಿದೆ. ಕಾರೊಂದನ್ನು ಸಹ ಬಳಕೆ ಮಾಡಿದ್ದಾರೆ. ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ಸಹ ವಶಪಡಿಸಿಕೊಳ್ಳುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ವಾರದ ಹಿಂದೆಯೇ ಪ್ರವೀಣ್‌ ಹತ್ಯೆಗೆ ಸ್ಕೆಚ್‌ – ಕೇರಳದ 7 ಕಡೆ ಆಶ್ರಯ, ಹಂತಕರು ಕೊನೆಗೂ ಅಂದರ್‌

    ಆರೋಪಿಗಳ ಬಗ್ಗೆ ಮೊದಲೇ ನಮಗೆ ಸುಳಿವು ಸಿಕ್ಕಿತ್ತು. ಆದರೆ ನಾವು ಬಹಿರಂಗ ಮಾಡಿರಲಿಲ್ಲ. ಮುಂದೆ ಈ ರೀತಿಯ ಯಾವುದೇ ಕೃತ್ಯ ನಡೆಯದೇ ಕಠಿಣ ಕ್ರಮ ಕೈಗೊಳ್ಳುತ್ತೇವೆ. ವಾರೆಂಟ್ ಇಶ್ಯೂ ಮಾಡಿ ಹಂತಕರು ಮತ್ತು ಹಂತಕರಿಗೆ ಸಹಕಾರ ನೀಡಿದವರ ಆಸ್ತಿಗಳನ್ನು ಮುಟ್ಟುಗೋಲು ಹಾಕುತ್ತೇವೆ. ಯಾವುದೇ ಅಮಾಯಕರನ್ನು ಬಂಧನ ಮಾಡುವುದಿಲ್ಲ. ಆದರೆ ಕೃತ್ಯದಲ್ಲಿ ಭಾಗಿಯಾದವರೆಲ್ಲರನ್ನು ಬಂಧಿಸುತ್ತೇವೆ. ಯಾರನ್ನು ಫಿಕ್ಸ್ ಮಾಡುವುದಕ್ಕೆ ಹೋಗುವುದಿಲ್ಲ. ಯಾರನ್ನೋ ಬಂಧಿಸುವುದಕ್ಕೆ ಇದು ಹುಡುಗಾಟವಲ್ಲ. ನಮಗೆ ಜಾತಿ, ಧರ್ಮ, ಬಣ್ಣ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಈದ್ಗಾ ಮೈದಾನದ ವಿವಾದ- ಸರ್ಕಾರದ ನಿರ್ಧಾರವೇ ಅಂತಿಮ: ಬೊಮ್ಮಾಯಿ

    ಎಲ್ಲ ಮಾಹಿತಿಯನ್ನು ನಾವು ಎನ್‍ಐಎಗೆ ನೀಡುತ್ತೇವೆ. ಎನ್‍ಐಎ ಕೂಡಾ ತನಿಖೆ ಮುಂದುವರಿಸುತ್ತಿದೆ. ನಮ್ಮ ಅಧಿಕಾರಿಗಳು ಒಳ್ಳೆಯ ಕೆಲಸ ಮಾಡಿದ್ದಾರೆ. ಪೊಲೀಸ್ ತಂಡಕ್ಕೆ ಸೂಕ್ತ ಬಹುಮಾನ ನೀಡಲಾಗುತ್ತದೆ. ಶತಾಯಗತಾಯವಾಗಿ ಈ ಪ್ರಕರಣ ಭೇದಿಸಬೇಕಾಗಿತ್ತು. ಜನರಲ್ಲಿಯೂ ಸಾಕಷ್ಟು ಆತಂಕವಿತ್ತು. ಪ್ರಕರಣ ಭೇದಿಸಲು ಸಾಕಷ್ಟು ಒತ್ತಡಗಳಿತ್ತು. ಅಧಿಕಾರಿಗಳು ಉತ್ತಮ ಕೆಲಸ ಮಾಡಿದ್ದಾರೆ. ಅಧಿಕಾರಿ ತಂಡಕ್ಕೆ ಬಹುಮಾನವೂ ಘೋಷಿಸಲಾಗುತ್ತದೆ ಎಂದು ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]

  • ದ.ಕ ಜಿಲ್ಲೆಯಲ್ಲಿ 3 ದಿನಗಳ ಕಾಲ ಕಟ್ಟೆಚ್ಚರ – ಗುಪ್ತಚರ ಇಲಾಖೆಯಿಂದ ಸ್ಫೋಟಕ ಮಾಹಿತಿ

    ದ.ಕ ಜಿಲ್ಲೆಯಲ್ಲಿ 3 ದಿನಗಳ ಕಾಲ ಕಟ್ಟೆಚ್ಚರ – ಗುಪ್ತಚರ ಇಲಾಖೆಯಿಂದ ಸ್ಫೋಟಕ ಮಾಹಿತಿ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಹತ್ಯೆ ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸಿದೆ. ಕೋಮು ಸೂಕ್ಷ್ಮ ಜಿಲ್ಲೆ ಇದೀಗ ಬೂದಿ ಮುಚ್ಚಿದ ಕೆಂಡದಂತಾಗಿದೆ. 3 ದಿನಗಳ ಕಾಲ ಕಠಿಣ ಪರಿಸ್ಥಿತಿ ಇದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.

    ಈ ಬೆನ್ನಲ್ಲೇ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದ್ದು. ವಿವಿಧ ಜಿಲ್ಲೆಗಳಿಂದ 2 ಸಾವಿರಕ್ಕೂ ಅಧಿಕ ಪೊಲೀಸರನ್ನು ಕರೆಸಿ ವ್ಯಾಪಕ ಬಂದೋಬಸ್ತ್ ಮಾಡಲಾಗಿದೆ. ಜಿಲ್ಲೆಯ ಎಲ್ಲಾ ಕೋಮು ಸೂಕ್ಷ್ಮ ಪ್ರದೇಶಗಳಲ್ಲಿ ಪಥ ಸಂಚಲನ ನಡೆಸಿ ದುಷ್ಕೃತ್ಯ ನಡೆಸುವವರಿಗೆ ಎಚ್ಚರಿಕೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಕೋಮುದ್ವೇಷ ಹರಡುವವರ ಮೇಲೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಆಗಸ್ಟ್ 1ರ ವರೆಗೂ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಎಲ್ಲಾ ಮದ್ಯದ ಅಂಗಡಿಗಳನ್ನು ಬಂದ್ ಮಾಡಲಾಗಿದೆ. ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ವರುಣನ ಆರ್ಭಟ – 4 ತಾಲೂಕಿನ ಶಾಲೆಗಳಿಗೆ ರಜೆ

    ಕೇವಲ ಅಗತ್ಯ ಸೇವೆಗಳಿಗೆ, ಅಗತ್ಯ ಸಂಚಾರಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಹೋಟೆಲ್, ಮಾಲ್‍ಗಳು ಸಹ ಬಂದ್ ಇರಲಿದೆ. ಈ ಮಧ್ಯೆ ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಮುಖಂಡರು, ಎಲ್ಲ ಪಕ್ಷದ ನಾಯಕರು, ವಿವಿಧ ಸಂಘಟನೆ ಮುಖಂಡರ ಸಮ್ಮುಖದಲ್ಲಿ ಇಂದು ಬೆಳಗ್ಗೆ 11ಕ್ಕೆ ಶಾಂತಿಸಭೆ ನಡೆಯಲಿದೆ. ಕರಾವಳಿ ಜಿಲ್ಲೆ ಈಗ ಖಾಕಿ ಭದ್ರಕೋಟೆಯಂತಾಗಿದೆ. ಇದನ್ನೂ ಓದಿ: ಈಗ ಲೋಕಸಭಾ ಚುನಾವಣೆ ನಡೆದರೆ ಎನ್‍ಡಿಎಗೆ 362 ಸ್ಥಾನ!

    ಬೆಳ್ಳಾರೆಯಲ್ಲಿ ಮಸೂದ್, ಪ್ರವೀಣ್ ಹತ್ಯೆ ಬೆನ್ನಲ್ಲೇ ಗುರುವಾರ ರಾತ್ರಿ ಮಂಗಳೂರು ನಗರದ ಹೊರವಲಯದ ಸುರತ್ಕಲ್‍ನಲ್ಲಿ ಫಾಜಿಲ್ ಎಂಬ ಯುವಕನನ್ನು ಹಂತಕರು ಕೊಚ್ಚಿ ಕೊಲೆ ಮಾಡಿದ್ದರು. ಆ ಬಳಿಕ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ಈ ನಡುವೆ ಈವರೆಗೂ ಫಾಜಿಲ್ ಹತ್ಯೆಗೆ ಕಾರಣವಾಗಲೀ, ಹಂತಕರಾಗಲಿ ಸಿಕ್ಕಿಲ್ಲ. ಆದರೆ, ಫಾಜಿಲ್ ಹತ್ಯೆ ಸಂಬಂಧ 21 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಪ್ರವೀಣ್ ಹತ್ಯೆ ಕೇಸ್ – ತಪ್ಪು ಮಾಹಿತಿಯಿಂದ ನಡೀತಾ ಕೊಲೆ?

    ಪ್ರವೀಣ್ ಹತ್ಯೆ ಕೇಸ್ – ತಪ್ಪು ಮಾಹಿತಿಯಿಂದ ನಡೀತಾ ಕೊಲೆ?

    ಮಂಗಳೂರು: ಕರಾವಳಿಯನ್ನೇ ಬೆಚ್ಚಿಬೀಳಿಸಿದ್ದ ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಬಂಧಿತ ಆರೋಪಿಗಳು ಹತ್ಯೆಗೆ ನಡೆದಿದ್ದ ಪ್ಲಾನ್ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.

    ಶಫೀಕ್ ಮತ್ತು ಝಾಕೀರ್ ಇಬ್ಬರು ಬಂಧಿತರು. ಹತ್ಯೆಗೆ ನಿಜವಾದ ಕಾರಣರಾದ ಹಂತಕರ ಬಂಧನವಾಗಿಲ್ಲ. ಹಂತಕರಿಗಾಗಿ ಪೊಲೀಸರ ತಂಡ ರಚಿಸಿದ್ದು. ಐಪಿಎಸ್ ಅಧಿಕಾರಿ ನೇತೃತ್ವದ ತಂಡ ಕೇರಳದಲ್ಲಿ ಬೀಡುಬಿಟ್ಟಿದೆ. ಮಾಹಿತಿಯ ಪ್ರಕಾರ ಇಬ್ಬರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ. ಶಫೀಕ್ ಮಾಹಿತಿ ಆಧರಿಸಿ ಕೇರಳದ ಗ್ರಾಮವೊಂದರಲ್ಲಿ ಇಬ್ಬರು ಶಂಕಿತರ ವಶಕ್ಕೆ ಪಡೆಯಲಾಗಿದೆ. ಇವರೇ ಆ ಹಂತಕರು ಎನ್ನುವುದು ಸ್ಪಷ್ಟವಾಗಬೇಕಿದೆ. ಸದ್ಯ ಬಂಧಿತ ಶಫೀಕ್ ಮತ್ತು ಝಾಕೀರ್ ಹತ್ಯೆಗೆ ಸಹಾಯ ಮಾಡಿದವರಾಗಿದ್ದು, ಹಂತಕರು ತಪ್ಪಿಸಿಕೊಳ್ಳಲು ದಾರಿ ತೋರಿಸಿದವರಾಗಿದ್ದಾರೆ. ವಿಚಾರಣೆ ವೇಳೆ ಇದನ್ನು ಒಪ್ಪಿಕೊಂಡಿದ್ದಾರೆ. ಇದನ್ನೂ ಓದಿ: ಪ್ರವೀಣ್ ಹತ್ಯೆಗೆ ರಾಜಸ್ಥಾನ ಸಿಎಂ ಖಂಡನೆ

    ಇಬ್ಬರಿಗೂ ಆಗಸ್ಟ್ 11ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅಗತ್ಯವಿದ್ದರೆ ಅವರನ್ನು ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸುವುದಾಗಿ ಪೊಲೀಸರು ಹೇಳಿದ್ದಾರೆ. ಈ ನಡುವೆ ಸಿಸಿಟಿವಿ ದೃಶ್ಯವೊಂದು ಸಿಕ್ಕಿದ್ದು ಅದರಿಂದ ಭಯಾನಕ ಸತ್ಯ ಹೊರಬಿದ್ದಿದೆ. ಆರೋಪಿಗಳಲ್ಲಿ ಒಬ್ಬನಾದ ಶಫೀಕ್ ವ್ಯಕ್ತಿಯೊಬ್ಬನನ್ನು ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಬಂದು ಬೆಳ್ಳಾರೆಯ ಕೋಳಿ ವ್ಯಾಪಾರಿ ಪೃಥ್ವಿರಾಜ್‍ನನ್ನು ದೂರದಿಂದಲೇ ತೋರಿಸಿ ಹೋಗಿದ್ದಾನೆ. ಆದರೆ, ಪೃಥ್ವಿರಾಜ್ ಬದಲಿಗೆ ಪ್ರವೀಣ್ ಹತ್ಯೆ ಆಗಿದ್ದು, ಪ್ರವೀಣ್ ಹತ್ಯೆ ಹಿಂದೆ ಯಾರ ಕೈವಾಡವಿದೆ? ಪೃಥ್ವಿರಾಜ್‍ನನ್ನು ಕೊಲೆ ಮಾಡಲು ಬಂದು ಪ್ರವೀಣ್‍ನ ಕಥೆ ಮುಗಿಸಿದ್ರಾ? ತಪ್ಪು ಮಾಹಿತಿಯಿಂದ ಈ ಕೊಲೆ ನಡೀತಾ? ಹೀಗೆ ಸಾಲು, ಸಾಲು ಪ್ರಶ್ನೆಗಳು ಎದುರಾಗಿದೆ. ಈ ಎಲ್ಲ ಆಯಾಮಗಳಲ್ಲೂ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಪ್ರವೀಣ್ ಕುಟುಂಬಕ್ಕೆ 50 ಲಕ್ಷ ಪರಿಹಾರ ವಿತರಣೆ

    Live Tv
    [brid partner=56869869 player=32851 video=960834 autoplay=true]

  • ಪ್ರವೀಣ್‌ ಹಂತಕರನ್ನು ಕೇರಳ ಗಡಿಯವರೆಗೆ ಕಳುಹಿಸಿ ಕೊಟ್ಟಿದ್ದೇವೆ: ಬಂಧಿತ ಆರೋಪಿಗಳು

    ಪ್ರವೀಣ್‌ ಹಂತಕರನ್ನು ಕೇರಳ ಗಡಿಯವರೆಗೆ ಕಳುಹಿಸಿ ಕೊಟ್ಟಿದ್ದೇವೆ: ಬಂಧಿತ ಆರೋಪಿಗಳು

    ಮಂಗಳೂರು: ನಾವು ಇಬ್ಬರನ್ನು ಕೇರಳ ಗಡಿಯ ತನಕ ಕಳಿಸಿಕೊಟ್ಟಿದ್ದೇವೆ ಎಂದು ಪ್ರವೀಣ್‌ ನೆಟ್ಟಾರು ಅವರನ್ನು ಹತ್ಯೆಗೈದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಆರೋಪಿಗಳು ತಿಳಿಸಿದ್ದಾರೆ.

    ಪ್ರವೀಣ್‌ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಸವಣೂರು ಮೂಲದ ಝಾಕೀರ್ (29) ಮತ್ತು ಶಫೀಕ್ ಬೆಳ್ಳಾರೆ(27) ಬಂಧಿತ ಆರೋಪಿಗಳು. ಝಾಕೀರ್ ಸವಣೂರು ಎಸ್‌ಡಿಪಿಐ ಗ್ರಾಮ ಸಮಿತಿ ಮುಖಂಡನಾಗಿದ್ದು, ಶಫೀಕ್ ಎಸ್‌ಡಿಪಿಐ ಪಕ್ಷದ ಸಕ್ರೀಯ ಕಾರ್ಯಕರ್ತ. ಬೆಳ್ಳಾರೆ, ಸುಳ್ಯದಲ್ಲಿ ಪಕ್ಷ ಸಂಘಟನೆ ಮಾಡುತ್ತಿದ್ದ.

    ವಿಚಾರಣೆ ವೇಳೆ ಆರೋಪಿಗಳು ಹಲವು ವಿಚಾರಗಳನ್ನು ತಿಳಿಸಿದ ಬಗ್ಗೆ ಪೊಲೀಸ್‌ ಮೂಲಗಳು ಮಾಹಿತಿ ನೀಡಿವೆ. ನಾವು ಇಬ್ಬರನ್ನು ಗಡಿಯ ತನಕ ಕಳಿಸಿಕೊಟ್ಟಿದ್ದು ಹಂತಕರು ಕಾಸರಗೋಡಿನ ಮೂಲಕ ಹೋಗಿದ್ದಾರೆ. ಎಲ್ಲಿಗೆ ಹೋಗಿದ್ದಾರೆ ಗೊತ್ತಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ನಿಜವಾದ ಆರೋಪಿಯನ್ನು ಬಂಧಿಸಿ ನನ್ನ ಪತಿಯನ್ನು ಬಿಟ್ಟುಬಿಡಿ: ಶಫೀಕ್ ಪತ್ನಿ ಅನ್ಶಿಫಾ

    ಪೊಲೀಸರು ಈಗಾಗಲೇ ಈ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲು 5 ತಂಡವನ್ನು ರಚಿಸಿದ್ದಾರೆ. ಕೇರಳಕ್ಕೆ ಪರಾರಿಯಾಗಿರುವ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಲು ಕೇರಳಕ್ಕೆ ತೆರಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • PFI ಬ್ಯಾನ್ ಕುರಿತು ಕೇಂದ್ರ ಗೃಹ ಇಲಾಖೆ ಜೊತೆ ಚರ್ಚೆ: ಪ್ರಹ್ಲಾದ್ ಜೋಶಿ

    PFI ಬ್ಯಾನ್ ಕುರಿತು ಕೇಂದ್ರ ಗೃಹ ಇಲಾಖೆ ಜೊತೆ ಚರ್ಚೆ: ಪ್ರಹ್ಲಾದ್ ಜೋಶಿ

    ನವದೆಹಲಿ: ಪಿಎಫ್‍ಐ ಸಂಘಟನೆ ಬ್ಯಾನ್ ಮಾಡುವ ಕುರಿತಂತೆ ಕೇಂದ್ರ ಗೃಹ ಇಲಾಖೆ ಜೊತೆ ಸಿಎಂ ಬೊಮ್ಮಾಯಿ ಚರ್ಚಿಸಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

    ಈ ಕುರಿತಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಬಸವರಾಜ್ ಬೊಮ್ಮಾಯಿ ನನ್ನೊಂದಿಗೆ ಚರ್ಚೆ ನಡೆಸಿದ್ದಾರೆ. ಪ್ರವೀಣ್ ನೆಟ್ಟಾರು ಅವರ ಹತ್ಯೆ ಹಿಂದೆ ಪಿಎಫ್‍ಐ ಸಂಘಟನೆಗಳ ಕೈವಾಡ ಇರುವ ಬಗ್ಗೆ ಬೊಮ್ಮಾಯಿ ಅವರು ಶಂಕೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನೀವು ಊರಿಗೆ ಹಿರಿಯರು, ಕೋಳಿ ಅಂಗಡಿ ಉದ್ಘಾಟನೆಗೆ ತಂದೆಯನ್ನು ಆಹ್ವಾನಿಸಿದ್ದರು: ಪ್ರವೀಣ್ ಬಗ್ಗೆ ಆರೀಫ್ ಮಾತು

    ಪಿಎಫ್‍ಐ ಚಟುವಟಿಕೆಗಳ ಮೇಲೆ ರಾಷ್ಟ್ರಮಟ್ಟದಲ್ಲಿ ನಿಗಾ ಇಡಬೇಕಾಗಿದೆ. ಇಂಥಹ ಸಂಘಟನೆಗಳನ್ನು ರಾಷ್ಟ್ರಮಟ್ಟದಲ್ಲಿಯೇ ಬ್ಯಾನ್ ಮಾಡಬೇಕು ಎಂಬ ಅಭಿಪ್ರಾಯ ಬಸವರಾಜ್ ಬೊಮ್ಮಾಯಿ ಅವರದ್ದಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಗೃಹ ಇಲಾಖೆಯ ಜೊತೆ ಚರ್ಚೆ ನಡೆಸುವುದಾಗಿ ನನ್ನ ಜೊತೆ ಮಾತನಾಡುವಾಗ ತಿಳಿಸಿದ್ದಾರೆ ಎಂದರು.

    ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ ಪ್ರಹ್ಲಾದ್ ಜೋಶಿ ಅವರು ಪಿಎಫ್‍ಐ, ಎಸ್‍ಡಿಪಿಐ ಸಂಘಟನೆಯವರು ಇಂಥಹ ಕೃತ್ಯದ ಹಿಂದಿದ್ದಾರೆ ಎಂಬ ಶಂಕೆ ವ್ಯಕ್ತಪಡಿಸಿದರು. ಈ ಸಂಘಟನೆಗಳ ಕೈವಾಡ ಇರುವ ಬಗ್ಗೆ ಹಲವು ಪ್ರಾಥಮಿಕ ಮತ್ತು ಮಾಧ್ಯಮ ವರದಿಗಳಿವೆ. ಇಂಥಹ ಕೃತ್ಯ ನಡೆಸುವವರಿಗೆ ಕೇರಳದಲ್ಲಿ ರಕ್ಷಣೆ ನೀಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ನಮ್ಮ ಕಾರ್ಯಕರ್ತರನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ನಳಿನ್ ಕುಮಾರ್ ಕಟೀಲ್

    ಪ್ರವೀಣ್ ಹತ್ಯೆಯಿಂದಾಗಿ ರಾಜ್ಯದಲ್ಲಿ ಜನಾಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಬಸವರಾಜ್ ಬೊಮ್ಮಾಯಿ ಅವರು, ಪ್ರಹ್ಲಾದ್ ಜೋಶಿ ಅವರೊಂದಿಗೆ ಚರ್ಚೆ ನಡೆಸಿದ್ದಾರೆ. ಪಿಎಫ್‍ಐ ಬ್ಯಾನ್ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಗೃಹ ಇಲಾಖೆ ಜೊತೆ ಚರ್ಚೆ ನಡೆಸುವ ಬಗ್ಗೆ ಜೋಶಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರಕ್ತದೋಕುಳಿಯ ಸ್ವಾಗತ ನಮಗೆ ಬೇಡ – ಜನೋತ್ಸವ ಕಾರ್ಯಕ್ರಮಕ್ಕೆ ಬರಲ್ಲ

    ರಕ್ತದೋಕುಳಿಯ ಸ್ವಾಗತ ನಮಗೆ ಬೇಡ – ಜನೋತ್ಸವ ಕಾರ್ಯಕ್ರಮಕ್ಕೆ ಬರಲ್ಲ

    ಬೆಂಗಳೂರು: ಪ್ರವೀಣ್ ಹತ್ಯೆ ಬೆನ್ನಲ್ಲೇ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದೆ. ಸ್ವಪಕ್ಷದ ವಿರುದ್ಧ ಕಾರ್ಯಕರ್ತರ ಜೊತೆಗೆ ಕೆಲ ನಾಯಕರೂ ಕಿಡಿಕಾರುತ್ತಿದ್ದಾರೆ. ಈ ಹೊತ್ತಲ್ಲಿ ಜನೋತ್ಸವ ಸಾಧನಾ ಸಮಾವೇಶ ಮಾಡಲು ಹೊರಟ ಸಿಎಂ ಅವರನ್ನು ಹೈಕಮಾಂಡ್ ತೀವ್ರ ತರಾಟೆಗೆ ತೆಗೆದುಕೊಂಡಿತ್ತು.

    ರಕ್ತದೋಕುಳಿಯ ಸ್ವಾಗತ ನಮಗೆ ಬೇಡ. ಜನೋತ್ಸವ ಕಾರ್ಯಕ್ರಮಕ್ಕೆ ಬರಲ್ಲ ಎಂದು ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಖಡಕ್ ಸಂದೇಶ ರವಾನೆ ಮಾಡಿದ್ದರು. ದೂರವಾಣಿ ಮೂಲಕ ಸಿಎಂ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್‍ಗೆ ಬಿಸಿ ಮುಟ್ಟಿಸಿದ್ದರು. ಇದನ್ನೂ ಓದಿ: ಬಿಜೆಪಿಯ ಜನೋತ್ಸವ ರದ್ದು – ಮಧ್ಯರಾತ್ರಿ ಸಿಎಂ ಘೋಷಣೆ

    ಘಟನೆಯ ಎಲ್ಲ ಮಾಹಿತಿ ಪಡೆದುಕೊಂಡಿದ್ದ ಹೈಕಮಾಂಡ್ ನಾಯಕರು, ನಾವು ಈಗ ಜನೋತ್ಸವ ಮಾಡಿದರೆ ಕಾರ್ಯಕರ್ತರಿಗೆ ಕೊಡುವ ಸಂದೇಶ ಏನು? ಕಾರ್ಯಕರ್ತನ ಹತ್ಯೆಯಾಗಿರುವಾಗ ನಾವು ಬಂದು ಸರ್ಕಾರದ ಸಾಧನೆ ಬಗ್ಗೆ ಮಾತನಾಡಬೇಕೇ? ನಮಗೆ ಕಾರ್ಯಕರ್ತರೇ ಮುಖ್ಯ ಎನ್ನುವುದನ್ನು ಸಾಬೀತುಪಡಿಸಿ ಅಂತ ಕ್ಲಾಸ್ ತೆಗೆದುಕೊಂಡಿದ್ದಾರೆ.

    ಹೈಕಮಾಂಡ್ ಸಂದೇಶದ ಬೆನ್ನಲ್ಲೇ ಎಚ್ಚೆತ್ತ ಸಿಎಂ ಬೊಮ್ಮಾಯಿ, ರಾಜ್ಯಾಧ್ಯಕ್ಷ ಕಟೀಲ್ ಮತ್ತು ಸಚಿವ ಸುಧಾಕರ್ ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡು ಚರ್ಚೆ ನಡೆಸಿದರು. ಬಳಿಕ ಸುದ್ದಿಗೊಷ್ಠಿ ನಡೆಸಿ ಜನೋತ್ಸವ ಕಾರ್ಯಕ್ರಮ ರದ್ದುಗೊಳಿಸಿದರು.

    Live Tv
    [brid partner=56869869 player=32851 video=960834 autoplay=true]