Tag: Praveen

  • ಪ್ರವೀಣ್ ಹಂತಕರು ಯಾರೆಂದು ಗೊತ್ತಾಗಿದೆ, ಶೀಘ್ರವೇ ಬಂಧನ ಮಾಡ್ತೇವೆ: ಆರಗ ಜ್ಞಾನೇಂದ್ರ

    ಪ್ರವೀಣ್ ಹಂತಕರು ಯಾರೆಂದು ಗೊತ್ತಾಗಿದೆ, ಶೀಘ್ರವೇ ಬಂಧನ ಮಾಡ್ತೇವೆ: ಆರಗ ಜ್ಞಾನೇಂದ್ರ

    ಬೆಂಗಳೂರು: ಪ್ರವೀಣ್ ಬೆಳ್ಳಾರೆ ಹತ್ಯೆ ಕೇಸ್‍ನ ಹಂತಕರು ಯಾರು ಅಂತ ಗೊತ್ತಾಗಿದೆ. ಶೀಘ್ರದಲ್ಲಿಯೇ ಅವರ ಬಂಧನ ಆಗಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

    ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರವೀಣ್ ಹತ್ಯೆ ಪ್ರಕರಣ ಸಂಬಂಧ ಇಬ್ಬರನ್ನು ಬೆಂಗಳೂರಿನಲ್ಲಿ ಅರೆಸ್ಟ್ ಮಾಡಲಾಗಿದೆ. ಇವರು ಕೃತ್ಯಕ್ಕೆ ಸಹಾಯ ಮಾಡಿದವರು. ಇದಲ್ಲದೇ ಮತ್ತೆ ಅನೇಕರನ್ನು ವಶಕ್ಕೆ ಪಡೆದು ವಿಚಾರ ಮಾಡುತ್ತಿದ್ದೇವೆ ಎಂದು ತಿಳಿಸಿದರು.

    ಯಾರು ಕೃತ್ಯ ಮಾಡಿದ್ದಾರೆ ಅಂತ ನಮಗೆ ಗೊತ್ತಾಗಿದೆ. ಅವರ ಬಂಧನಕ್ಕೂ ಬಲೆ ಬೀಸಿದ್ದೇವೆ. ಎರಡು-ಮೂರು ದಿನಗಳಲ್ಲಿ ಅವರ ಬಂಧನವೂ ಆಗುತ್ತದೆ. ತನಿಖಾ ಹಂತದಲ್ಲಿ ಇರುವುದರಿಂದ ಹೆಚ್ಚಿನ ಮಾಹಿತಿ ಹೇಳಲು ಸಾಧ್ಯವಿಲ್ಲ ಎಂದರು. ಇದನ್ನೂ ಓದಿ: ಆಗಸ್ಟ್‌ 2 ವಿಶೇಷ ದಿನ; ನಾನು DP ಬದಲಾಯಿಸಿದ್ದೇನೆ, ನೀವೂ ಬದಲಾಯಿಸಿ – ಜನತೆಗೆ ಮೋದಿ ಕರೆ

    ಪ್ರಕರಣದಲ್ಲಿ ಅಮಾಯಕರನ್ನು ಬಂಧನ ಮಾಡಿಲ್ಲ. ಕೃತ್ಯಕ್ಕೆ ಸಹಾಯ ಮಾಡಿದವರ ಬಂಧನ ಈಗ ಆಗಿದೆ. ಹತ್ಯೆ ಮಾಡಿರುವುದು ಯಾರು ಅಂತ ಗೊತ್ತಾಗಿದೆ. ಅವರು ಒಂದೇ ಕಡೆ ಇಲ್ಲದೆ ಓಡಾಡುತ್ತಿದ್ದಾರೆ. ಅವರನ್ನು ಶೀಘ್ರವೇ ಬಂಧನ ಮಾಡುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.

    ಇದೇ ವೇಳೆ ಫಾಝಿಲ್ ಪ್ರಕರಣದ ತನಿಖೆ ನಡೆಯುತ್ತಿದೆ. ಯಾರನ್ನು ಈ ಕೇಸ್‍ಯಿಂದ ಬಿಡುವುದಿಲ್ಲ. ಪೊಲೀಸರು ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಅನಧಿಕೃತ ಫ್ಲೆಕ್ಸ್, ಬ್ಯಾನರ್ ವಿರುದ್ಧ ಫೀಲ್ಡ್‌ಗಿಳಿದ ಬಿಬಿಎಂಪಿ ಅಧಿಕಾರಿಗಳು

    Live Tv
    [brid partner=56869869 player=32851 video=960834 autoplay=true]

  • ನೋವಿಗೆ ರಾಜೀನಾಮೆಯೇ ಪರಿಹಾರವಲ್ಲ: ಈಶ್ವರಪ್ಪ

    ನೋವಿಗೆ ರಾಜೀನಾಮೆಯೇ ಪರಿಹಾರವಲ್ಲ: ಈಶ್ವರಪ್ಪ

    ಶಿವಮೊಗ್ಗ: ಹರ್ಷ ಮತ್ತು ಪ್ರವೀಣ್ ಕೊಲೆಯಾಗಿರುವುದು ಎಲ್ಲರಿಗೂ ನೋವಾಗಿದೆ. ಆದರೆ ನೋವಿಗೆ ರಾಜೀನಾಮೆಯೇ ಪರಿಹಾರವಲ್ಲ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

    ನಾಯಕರು ಬೇಕಾದಷ್ಟು ಜನರು ಬರುತ್ತಾರೆ, ಕಾರ್ಯಕರ್ತರು ಬರುವುದಿಲ್ಲ ಎಂಬ ಚಕ್ರವರ್ತಿ ಸೂಲಿಬೆಲೆ ಹೇಳಿಕೆ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚಕ್ರವರ್ತಿ ಸೂಲಿಬೆಲೆ ಹೇಳಿರುವುದು ಸರಿ ಇದೆ. ನಾನು ಒಬ್ಬ ಕಾರ್ಯಕರ್ತ. ಹಿಂದೂ ಕಾರ್ಯಕರ್ತರಾದ ಹರ್ಷ ಮತ್ತು ಪ್ರವೀಣ್ ಕೊಲೆಯಾಗಿರುವ ಸಂದರ್ಭದಲ್ಲಿ ಎಲ್ಲರಿಗೂ ನೋವಿದೆ. ರಾಜ್ಯದಲ್ಲಿರುವ ಎಲ್ಲಾ ಕಾರ್ಯಕರ್ತರಿಗೆ ನೋವಿದೆ. ಸಿಟ್ಟಿನಲ್ಲಿ ರಾಜೀನಾಮೆ ನೀಡುವುದೊಂದೇ ಪರಿಹಾರವಲ್ಲ. ನೋವಿಗೆ ರಾಜೀನಾಮೆ ಉತ್ತರವಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಬೀದಿಗಿಳಿದ ಹಿಂದೂ ಕಾರ್ಯಕರ್ತರು, ಅನ್ನದಾತರು!

    ನೋವನ್ನು ಪಕ್ಷ ಮತ್ತು ಹಿಂದುತ್ವದ ಮೇಲೆ ತೀರಿಸಿಕೊಳ್ಳುವುದು ಪರಿಹಾರವಲ್ಲ. ಮುಂದೆ ನಮ್ಮ ಕಾರ್ಯಕರ್ತರು ಯಾರು ರಾಜೀನಾಮೆ ನೀಡಬಾರದೆಂಬ ಕಾಳಜಿಯಿಂದಾಗಿ ಈ ರೀತಿ ಹೇಳಿಕೆ ನೀಡಿದ್ದೇನೆ. ಆಕ್ರೋಶಕ್ಕೆ ನಮ್ಮ ಬುದ್ಧಿ ನೀಡಿದರೆ, ನಮ್ಮ ಸಂಘಟನೆಗೆ ಪೆಟ್ಟಾಗುತ್ತದೆ. ರಾಜೀನಾಮೆ ನೀಡಿರುವ ನಮ್ಮ ಕಾರ್ಯಕರ್ತರು ಬೇರೆ ಯಾವ ಪಕ್ಷಕ್ಕೂ ಹೋಗುವುದಿಲ್ಲ. ಅಲ್ಲೊಂದು, ಇಲ್ಲೊಂದು ಜಿಲ್ಲೆಯಲ್ಲಿ ಒಟ್ಟು 13 ಜನ ಕಾರ್ಯಕರ್ತರು ರಾಜೀನಾಮೆ ನೀಡಿದ್ದಾರೆಂದು ನಮ್ಮ ಕಾರ್ಯದರ್ಶಿ ಮಹೇಶ್ ತೆಂಗಿನಕಾಯಿ ತಿಳಿಸಿದ್ದಾರೆ. ಇದನ್ನೂ ಓದಿ: ಹವಾಮಾನ ಇಲಾಖೆ ನೀಡುವ ಮಳೆಯ ಲೆಕ್ಕವಾದರೂ ತಪ್ಪಬಹುದು ಜೆಡಿಎಸ್ ನಾಯಕರ ಕಣ್ಣೀರಿನ ಮಳೆ ತಪ್ಪದು: ಬಿಜೆಪಿ

    ಅವರೆಲ್ಲರ ಮನವೊಲಿಸಿ ರಾಜೀನಾಮೆ ವಾಪಾಸ್ ತೆಗೆದುಕೊಂಡಿದ್ದಾರೆ. ಆಕ್ರೋಶಕ್ಕೆ, ಸಿಟ್ಟಿಗೆ ನಮ್ಮ ಬುದ್ದಿ ನೀಡಿದರೆ, ಸಂಘಟನೆಗೆ ಪೆಟ್ಟಾಗುತ್ತದೆ ಎಂದು ನಾನು ಹೇಳಿಕೆ ನೀಡಿದ್ದೇನೆ. ಯಾವುದೇ ಕಾರ್ಯಕರ್ತನಿಗೆ ನೋವಾಗುವಂತೆ ನಾನು ಹೇಳಿಕೆ ನೀಡಿಲ್ಲ. ಈ ರೀತಿ ರಾಜೀನಾಮೆ ನೀಡಿದರೆ, ಬೇರೆಯವರಿಗೆ ನಿಮ್ಮ ಸ್ಥಾನ ನೀಡಬೇಕಾಗುತ್ತದೆ ಎಂಬ ನಿಟ್ಟಿನಲ್ಲಿ ನಮ್ಮ ರಾಜ್ಯಾಧ್ಯಕ್ಷರ ಅನುಮತಿ ಪಡೆದೇ ಮಾತನಾಡಿದ್ದೇನೆ. ನಾನೊಬ್ಬ ಹಿರಿಯನಾಗಿ ಹೇಳಿದ್ದ ಮಾತಿಗೆ ನೋವಾಗಿದೆ. ಚಕ್ರವರ್ತಿ ಸೂಲಿಬೆಲೆ ಮಾಡುತ್ತಿರುವುದು ಕೂಡ ಹಿಂದುತ್ವದ ಕೆಲಸ, ನಾನು ಕೂಡ ಹಿಂದುತ್ವಕ್ಕೆ ಕೆಲಸ ಮಾಡುತ್ತಿದ್ದೇನೆ. ಯಾರು ರಾಜೀನಾಮೆ ನೀಡಬಾರದೆಂಬ ಹಿನ್ನೆಲೆಯಲ್ಲಿ ಕಾರ್ಯಕರ್ತರಿಗೆ ಕಿವಿ ಮಾತು ಹೇಳಿದ್ದೇನೆ ಅಷ್ಟೆ. ಚಕ್ರವರ್ತಿ ಸೂಲಿಬೆಲೆ ಇದರಲ್ಲಿ ತಲೆ ಹಾಕಿಲ್ಲ. ಯುವಕರು ದಾರಿ ತಪ್ಪಬಾರದೆಂಬ ಉದ್ದೇಶದಿಂದ ಅವರು ಈ ರೀತಿ ಹೇಳಿದ್ದಾರೆ ಅಂತ ವಿವರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಕೊಂದು ಬೆಂಗಳೂರಿನಲ್ಲಿ ಬಚ್ಚಿಟ್ಟುಕೊಂಡಿದ್ದ ಹಂತಕರು..!

    ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಕೊಂದು ಬೆಂಗಳೂರಿನಲ್ಲಿ ಬಚ್ಚಿಟ್ಟುಕೊಂಡಿದ್ದ ಹಂತಕರು..!

    ಬೆಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಸೋಮವಾರ ಬಂಧನವಾಗಿರುವ ಇಬ್ಬರು ಆರೋಪಿಗಳು ಹಲವು ವರ್ಷಗಳಿಂದ ಬೆಂಗಳೂರಿನ ಬೇಕರಿಯಲ್ಲಿಯೇ ಕೆಲಸ ಮಾಡಿಕೊಂಡಿದ್ದರು ಎಂಬುದು ತಿಳಿದುಬಂದಿದೆ.

    ಮಾನ್ಯತಾ ಟೆಕ್‌ಪಾರ್ಕ್ ಬಳಿಯ ಬೇಕರಿಯಲ್ಲಿ ಡೆಲಿವರಿ ಬಾಯ್ಸ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿಗಳಾದ ಅಲ್ತಾಫ್ ಹಾಗೂ ಇರ್ಫಾನ್ ಬೆಳ್ಳಾರೆಯಲ್ಲಿ ಪ್ರವೀಣ್ ಹತ್ಯೆ ನಡೆಸಿ, ತಲೆಮರೆಸಿಕೊಳ್ಳಲು ವಾಪಸ್ ಬೆಂಗಳೂರಿಗೆ ಬಂದಿದ್ದರು. ಬಳಿಕ ಏನೂ ಗೊತ್ತಿಲ್ಲದವರಂತೆ ಬೇಕರಿಯಲ್ಲಿ ಕೆಲಸ ಮಾಡಿಕೊಂಡಿದ್ದರು ಎಂದು ವರದಿಯಾಗಿದೆ. ಇದನ್ನೂ ಓದಿ: ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ- ಮತ್ತಿಬ್ಬರು ಪೊಲೀಸರ ವಶಕ್ಕೆ

    ಮೂಲತಃ ಸುಳ್ಯ ಮೂಲದ ಅಲ್ತಾಫ್ ಹಾಗೂ ಇರ್ಪಾನ್ ಸಾಕಷ್ಟು ವರ್ಷಗಳಿಂದ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದರು. ಪ್ರವೀಣ್ ಹತ್ಯೆ ದಿನ ಆರೋಪಿಗಳು ಬೆಳ್ಳಾರೆಯಲ್ಲಿಯೇ ಇದ್ದು, ಬಳಿಕ ಬೆಂಗಳೂರಿಗೆ ಬಂದು ತಲೆಮರೆಸಿಕೊಂಡಿದ್ದರು. ಬೆಳ್ಳಾರೆಯಲ್ಲಿ ಬಂಧನವಾಗಿದ್ದ ಆರೋಪಿಗಳಾದ ಶಫೀಕ್ ಹಾಗೂ ಝಾಕೀರ್ ಮಾಹಿತಿ ಮೇರೆಗೆ ಇವರಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಸರಣಿ ಹತ್ಯೆ ಪ್ರಕರಣ- ದಕ್ಷಿಣ ಕನ್ನಡಕ್ಕೆ DGP ಪ್ರವೀಣ್ ಸೂದ್ ಭೇಟಿ

    Live Tv
    [brid partner=56869869 player=32851 video=960834 autoplay=true]

  • ‘ಮಾರಿಗುಡ್ಡದ ಗಡ್ಡಧಾರಿಗಳಿ’ಗಾಗಿ ಹಾಡಿದ ಬಿ.ಜಯಶ್ರೀ

    ‘ಮಾರಿಗುಡ್ಡದ ಗಡ್ಡಧಾರಿಗಳಿ’ಗಾಗಿ ಹಾಡಿದ ಬಿ.ಜಯಶ್ರೀ

    ರಾಜೀವ್‌ ಚಂದ್ರಕಾಂತ್ ಈ ಹಿಂದೆ ನಾಗಾಭರಣ ಅವರಲ್ಲಿ ಕೆಲಸ ಕಲಿತುಕೊಂಡು, ನಂತರ 75ಕ್ಕೂ ಹೆಚ್ಚು ಚಿತ್ರಗಳಿಗೆ ಪೋಸ್ಟರ್ ಡಿಸೈನ್ ಮಾಡಿದ ಅನುಭವ ಇದೆ. ಇದರಿಂದಲೇ ಸಿನಿಮಾಕ್ಕೆ ರಚನೆ,ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಎಲ್ಲರೂ ನಾಯಕನಿಗೆ ಕಥೆ ಬರೆದರೆ, ಇವರು ಖಳನಾಯಕನ ಮೇಲೆ ಕಥೆಯನ್ನು ಬರೆದಿರುವುದು ವಿಶೇಷ. ’ಸಲಗ’ದಲ್ಲಿ ಸೂರಿಯಣ್ಣ ಪಾತ್ರ ನಿರ್ವಹಿಸಿ ಗುರುತಿಸಿಕೊಂಡಿದ್ದ ದಿನೇಶ್‌ಕುಮಾರ್.ಡಿ ಖತರ್‌ನಾಕ್ ಖಳನಾಯಕನಾಗಿ ಹುಲಿಯಾ ಹೆಸರಿನಲ್ಲಿ ಕಾಣಿಸಿಕೊಳ್ಳುವ ಜತೆಗೆ ಡಿಜೆ ಪ್ರಕಾಶ್ ಸಿನಿ ಪ್ರೊಡಕ್ಷನ್ಸ್ ಅಡಿಯಲ್ಲಿ ನಿರ್ಮಾಣ ಮಾಡುತ್ತಿದ್ದಾರೆ.

    ಒಂದು ವಿಶೇಷ ಸನ್ನಿವೇಶದಲ್ಲಿ ಬರುವ ’ಸಂಜೇಲಿ ಹೊಯ್ದಾವೋ ಮಂಜಿನ ಚಿತ್ತಾರ, ಗಾಟಿಯ ಏರಿಳಿದು ಹೋಯ್ತಾವೋ ನೇಸಾರ’ ಸಾಲಿನ ಗೀತೆಗೆ ನಟಿ, ಪದ್ಮಶ್ರೀ ಬಿ.ಜಯಶ್ರೀ ಹಾಡುವ ಗೀತೆಯನ್ನು ನಾದಬ್ರಹ್ಮ ಹಂಸಲೇಖಾ ಸ್ಟುಡಿಯೋದಲ್ಲಿ ಧ್ವನಿಮುದ್ರಣ ಕಾರ್ಯ ನಡೆಸಲಾಯಿತು.  ಸಂಗೀತ ಕೆ.ಎಂ.ಇಂದ್ರ ಅವರದಾಗಿದೆ. ರಾಮಾಪುರ ಎಂಬ ಊರು, ಮಜ್ಜೇನಹಳ್ಳಿ ಎನ್ನುವ ಪಟ್ಟಣದಲ್ಲಿ 1990ರಂದು ನಡೆಯುವ ಕಾಲ್ಪನಿಕ ಘಟನೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಎಂಟು ಗಡ್ಡಧಾರಿಗಳ ಸುತ್ತ ಸಾಗುವ ಪಯಣದಲ್ಲಿ ಏರುಪೇರು ಉಂಟಾಗುತ್ತದೆ. ಅದು ಏನೆಂಬುದನ್ನು ಕುತೂಹಲದ ಮೂಲಕ ತೋರಿಸಲಾಗುವುದು. ಇದನ್ನೂ ಓದಿ:ಕಿಚ್ಚ ಸುದೀಪ್- ರಕ್ಷಿತ್ ಶೆಟ್ಟಿ ನಡುವೆ ಏನಿದು ಕೋಲ್ಡ್ ವಾರ್!

    ತಾರಗಣದಲ್ಲಿ ಪ್ರವೀಣ್, ನಮ್ರತಾ, ಗಣೇಶ್‌ರಾವ್, ಅವಿನಾಶ್, ರಮೇಶ್‌ಭಟ್, ಬೆನಕನಂಜಪ್ಪ, ಪ್ರಶಾಂತ್‌ಸಿದ್ದಿ,ನಂಜುಂಡ ಮುಂತಾದವರು ನಟಿಸಿದ್ದಾರೆ. ಛಾಯಾಗ್ರಹಣ ವೀರೇಶ್, ಸಾಹಸ ಪಳನಿ-ಜಾಗ್ವಾರ್‌ಸಣ್ಣಪ್ಪ ಅವರದಾಗಿದೆ. ಕೆ.ಜಿ.ಎಫ್, ಕೋಲಾರ ಕಡೆಗಳಲ್ಲಿ 45 ದಿನಗಳ ಕಾಲ ಒಂದೇ ಹಂತದಲ್ಲಿ ಚಿತ್ರೀಕರಣ ನಡೆದಿದೆ.

    Live Tv
    [brid partner=56869869 player=32851 video=960834 autoplay=true]

  • ಇಸ್ರೇಲ್‌ನಲ್ಲಿ ಬೆಳಗ್ಗೆ ಇಂತಹ ಘಟನೆಯಾದರೆ, ಸಂಜೆ ನೇಣಿಗೆ ಹಾಕ್ತಾರೆ: ಬಸವರಾಜ್ ಹೊರಟ್ಟಿ

    ಇಸ್ರೇಲ್‌ನಲ್ಲಿ ಬೆಳಗ್ಗೆ ಇಂತಹ ಘಟನೆಯಾದರೆ, ಸಂಜೆ ನೇಣಿಗೆ ಹಾಕ್ತಾರೆ: ಬಸವರಾಜ್ ಹೊರಟ್ಟಿ

    ಹಾವೇರಿ: ಕರಾವಳಿ ಭಾಗದಲ್ಲಿ ನಡೆದ ಘಟನೆ ಬಹಳ ನೋವು ತಂದಿದೆ. ಇಂತಹ ಕೃತ್ಯ ಮಾಡಿದವರಿಗೆ ಶಿಕ್ಷೆ ಆಗಿರುವುದು ಇವತ್ತಿನವರೆಗೂ ಗೊತ್ತಾಗಿಲ್ಲ. ಶಿಕ್ಷೆ ಆದರೆ ಮಾತ್ರ ಇಂತಹ ಘಟನೆಗಳು ಕಡಿಮೆ ಆಗುತ್ತವೆ. ಅದಕ್ಕೆ ನಮ್ಮಲ್ಲಿ ಆ ರಿಪೋರ್ಟ್, ಈ ರಿಪೋರ್ಟ್ ಎಂಬ 20 ಕಾನೂನುಗಳು ಇವೆ. 10-15 ವರ್ಷ ಆಗುವುದರಲ್ಲಿ ಜನರು ಅದನ್ನು ಮರೆತು ಬಿಡುತ್ತಾರೆ. ನಾನು ಸಹ ಇಸ್ರೇಲ್‌ಗೆ ಹೋಗಿದ್ದೆ. ಅಲ್ಲಿ ಬೆಳಗ್ಗೆ ಇಂತಹ ಘಟನೆಯಾದರೆ ಸಂಜೆ ಗಲ್ಲಿಗೆ ಹಾಕುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಹೇಳಿಕೆ ನೀಡಿದರು.

    ಹಾವೇರಿಯಲ್ಲಿ ಮಾತನಾಡಿದ ಅವರು, ಇಂತಹ ಘಟನೆಗಳು ಆಗಬಾರದು. ಇಂತಹ ಸಮಯದಲ್ಲಿ ಇಂಟೆಲಿಜೆನ್ಸಿಯವರು ಪೊಲೀಸರಿಗಿಂತ ಹೆಚ್ಚಿನ ಕೆಲಸ ಮಾಡಿ ಸರ್ಕಾರಕ್ಕೆ ಮಾಹಿತಿ ಕೊಡಬೇಕು. ಇವೆಲ್ಲಾ ನಡೆಯಬಾರದಾದರೂ ನಡಿಯುತ್ತಿವೆ. ಯಾವುದೇ ಜಾತಿ ಇರಲಿ, ಏನೇ ಇರಲಿ. ತಪ್ಪಿತಸ್ಥರ ಮೇಲೆ ನಿರ್ಧಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಬೇಕು ಎಂದು ಹೊರಟ್ಟಿ ಹೇಳಿದರು.

    ನಮ್ಮಲ್ಲಿ ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯಬಾರದು. ಕಟ್ಟುನಿಟ್ಟಾದ ಕ್ರಮ ಕೈಗೊಳ್ಳಬೇಕು. ಶಿಕ್ಷೆ ಆಗಿದ್ದನ್ನು ಜನರಿಗೆ ಗೊತ್ತು ಮಾಡಿಕೊಡಬೇಕು. ಹಾಗಾದರೆ ಮಾತ್ರ ಇದನ್ನು ತಡೆಯಬಹುದು. ಇಲ್ಲದಿದ್ದರೆ ಇಂತಹ ಘಟನೆಗಳು ಮತ್ತಷ್ಟು ಆಗುತ್ತವೆ. ಇಂತಹ ಸಮಯದಲ್ಲಿ ಎಲ್ಲಾ ಪಕ್ಷಗಳು ಒಂದಾಗಿ ಶಾಂತಿ ಕಾಪಾಡಬೇಕು. ನಾ ಹಾಗೆ ಮಾಡಿದೆ, ನೀ ಹೀಗೆ ಮಾಡಿದೆ ಎಂದು ಒಬ್ಬರನ್ನೊಬ್ಬರು ಎತ್ತಿ ಕಟ್ಟುವ ಪರಿಸ್ಥಿತಿ ಆಗಬಾರದು. ವಿರೋಧ ಪಕ್ಷ ಬರೀ ಟೀಕೆ ಮಾಡುತ್ತಾ ಕುಳಿತರೆ ಸರಿಯಲ್ಲ. ಸಿಎಂ ಎಲ್ಲಾ ರಾಜಕೀಯ ಪಕ್ಷಗಳ ಸಭೆ ಕರೆದು ಮುಂದೆ ಇಂತಹ ಘಟನೆಗಳು ಆಗದಂತೆ ಕ್ರಮ ಕೈಗೊಳ್ಳಬೇಕು ಎಂದರು. ಇದನ್ನೂ ಓದಿ: ಹಿಂದೂಗಳ ನರಮೇಧಕ್ಕೆ ಕಾರಣವೇ ಸಿದ್ದರಾಮಯ್ಯ – ಬಿಜೆಪಿ ಕಾರ್ಯಕರ್ತ ಚಂದ್ರಹಾಸ್

    ನಾನು ಯೋಗಿಯಂತೆ ಮತ್ತೊಬ್ಬರನ್ನು ನೋಡಿಲ್ಲ. ತಪ್ಪು ಮಾಡಿದವರಿಗೆ ಕಠಿಣ ಶಿಕ್ಷೆ ಕೊಡಬೇಕು. ಅದನ್ನು ಮಾಧ್ಯಮದವರ ಮೂಲಕ ಜನರಿಗೆ ಗೊತ್ತು ಮಾಡಬೇಕು. ಹಾಗಾದಾಗ ಇಂತಹ ಘಟನೆಗಳು ನಡೆಯುವುದಿಲ್ಲ. ಯಾವುದೇ ಪಕ್ಷ, ಸಂಘದಲ್ಲಿದ್ದವರನ್ನು ಕೊಲೆ ಮಾಡುವುದು ಸರಿಯಲ್ಲ. ಬಹಳ ನೋವಿನ ಸಂಗತಿಯಿದು. ಕೋಳಿ, ಕುರಿಯಂತೆ ಮನುಷ್ಯನ ಜೀವನ ಹೋಗುತ್ತಿದೆ. ಸರ್ಕಾರ ಗಟ್ಟಿಯಾದ ನಿರ್ಧಾರ ತೆಗೆದುಕೊಂಡು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಹೈದರಾಬಾದ್‌ನಲ್ಲಿ ನಮ್ಮ ಸಜ್ಜನ ಶೂಟೌಟ್ ಮಾಡಲಿಲ್ಲವೇನು? ಇಂತಹ ಸಮಯದಲ್ಲಿ ಪೊಲೀಸರು ಸಣ್ಣ ತಪ್ಪು ಮಾಡಿದರೆ, ಇಂತಹ ಘಟನೆಗಳು ಆಗುವುದು ನಿಂತರೆ ನಾನೇನು ಅದನ್ನು ತಪ್ಪು ಎನ್ನುವುದಿಲ್ಲ ಎಂದು ಬಸವರಾಜ್ ಹೊರಟ್ಟಿ ಹೇಳಿದರು. ಇದನ್ನೂ ಓದಿ: ಮಂಗಳೂರಿನಲ್ಲಿ ರಾಜಕೀಯಕ್ಕಾಗಿ ಕೊಲೆ ನಡೆದಿವೆ: ಮಾಧುಸ್ವಾಮಿ

    Live Tv
    [brid partner=56869869 player=32851 video=960834 autoplay=true]

  • ಹಿಂದೂಗಳ ನರಮೇಧಕ್ಕೆ ಕಾರಣವೇ ಸಿದ್ದರಾಮಯ್ಯ – ಬಿಜೆಪಿ ಕಾರ್ಯಕರ್ತ ಚಂದ್ರಹಾಸ್

    ಹಿಂದೂಗಳ ನರಮೇಧಕ್ಕೆ ಕಾರಣವೇ ಸಿದ್ದರಾಮಯ್ಯ – ಬಿಜೆಪಿ ಕಾರ್ಯಕರ್ತ ಚಂದ್ರಹಾಸ್

    ಮಂಗಳೂರು: ಹಿಂದೂಗಳ ನರಮೇಧಕ್ಕೆ ಮುಖ್ಯ ಕಾರಣ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ. ಅವರಿಗೆ ಪ್ರವೀಣ್ ಹೆಸರು ಎತ್ತುವ ಯೋಗ್ಯತೆ ಇಲ್ಲ ಎಂದು ಬಿಜೆಪಿ ಕಾರ್ಯಕರ್ತ ಚಂದ್ರಹಾಸ್ ಆಕ್ರೋಶ ವ್ಯಕ್ತಪಡಿಸಿದರು.

    ಸುಳ್ಳಿಗೆ ಇನ್ನೊಂದು ಹೆಸರೇ ಸಿದ್ದರಾಮಯ್ಯ. ಇಷ್ಟೆಲ್ಲಾ ಹಿಂದೂಗಳ ನರಮೇಧಕ್ಕೆ ಅವರೇ ಕಾರಣ. ನಾವು ಅವರ ಪ್ರಾಯಕ್ಕೆ ಗೌರವ ಕೊಡುತ್ತೇವೆ ಹೊರತು ಅವರ ಚಿಂತನೆಗೆ ಅಲ್ಲ ಎಂದರು.

    Siddaramaiah

    ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಪ್ರವೀಣ್ ಜೊತೆಗಿದ್ದರು ನಿಜ. ಅವರು ಚಾಲಕ ವೃತ್ತಿ ಮಾಡುತ್ತಿದ್ದುದೂ ನಿಜ. ಆದರೆ ಅಪರೂಪಕ್ಕೊಮ್ಮೆ ಕಟೀಲ್ ಅವರ ಚಾಲಕರಾಗಿ ಕೆಲಸ ಮಾಡಿದ್ದರು. ಕಟೀಲ್ ಅವರ ಡ್ರೈವರ್‌ಗೆ ರಜೆ ಬೇಕಿದ್ದ ಸಂದರ್ಭ ಪ್ರವೀಣ್ ಹೋಗುತ್ತಿದ್ದರು. ಅವರು ಪರ್ಮನೆಂಟ್ ಡ್ರೈವರ್ ಆಗಿರಲಿಲ್ಲ. ಆದರೆ ಸಿದ್ದರಾಮಯ್ಯ ಇದನ್ನೇ ನೆಪವಾಗಿಟ್ಟುಕೊಂಡು ಪ್ರವೀಣ್ ಅವರು ನಳಿನ್ ಕುಮಾರ್ ಅವರ ಚಾಲಕ ಕೆಲಸ ಬಿಟ್ಟು ಬಂದಿದ್ದರು ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಮಂಗಳೂರಿನಲ್ಲಿ ರಾಜಕೀಯಕ್ಕಾಗಿ ಕೊಲೆ ನಡೆದಿವೆ: ಮಾಧುಸ್ವಾಮಿ

    ನಾವು ಪಕ್ಷದ ಹುದ್ದೆಗೆ ರಾಜೀನಾಮೆ ಕೊಟ್ಟಿದ್ದೇವೆ, ನಾವು ಸಿದ್ದರಾಮಯ್ಯರಂತೆ ಪೇಮೆಂಟ್ ಕಾರ್ಯಕರ್ತರಲ್ಲ. ನಾವು ಬಿಜೆಪಿಯ ಪರ್ಮನೆಂಟ್ ಕಾರ್ಯಕರ್ತರು. ನಮ್ಮ ನಾಯಕರಿಗೆ ಬಿಸಿ ಮುಟ್ಟಿಸುವ ಸಲುವಾಗಿ ರಾಜೀನಾಮೆ ಕೊಟ್ಟಿದ್ದೇವೆಯೇ ಹೊರತು ಬಿಜೆಪಿಗೆ ಕೊಟ್ಟಿಲ್ಲ ಎಂದು ಸ್ಪಷ್ಟಪಡಿಸಿದರು.

    ನಾನು ಹಾಗೂ ಪ್ರವೀಣ್ ಒಟ್ಟಿಗೆ ಇದ್ದವರು. ನನಗೂ ಕೆಲವೊಮ್ಮೆ ಜೀವ ಬೆದರಿಕೆಗಳು ಬಂದಿದ್ದವು. ಆ ಸಂದರ್ಭ ಅವರೇ ನನಗೆ ಧೈರ್ಯ ತುಂಬುತ್ತಿದ್ದರು. ಆದರೆ ಇಂದು ಅವರಿಗೆ ಈ ಗತಿ ಬಂದಿದೆ. ಸರ್ಕಾರದಿಂದ ಹೀಗೆಲ್ಲಾ ಆಯ್ತಲ್ಲಾ ಎಂಬ ನೋವು ಎಲ್ಲಾ ಕಾರ್ಯಕರ್ತರಿಗೂ ಇದೆ. ಈ ಕಾರಣ ರಾಜೀನಾಮೆ ಕೊಟ್ಟಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಹಿಂದೂ ಯುವಕರಿಗೆ ರಕ್ಷಣೆ ಇಲ್ಲದಿದ್ದಾಗ ಅಧಿಕಾರದಲ್ಲಿದ್ದು ಏನು ಸಾರ್ಥಕ: ರೇಣುಕಾಚಾರ್ಯ

    ನಮಗೆ ಕಳೆದ 6 ತಿಂಗಳಿನಿಂದಲೂ ಬೆದರಿಕೆ ಕರೆಗಳು ಬರುತ್ತಿದ್ದವು. ಈ ಬಗ್ಗೆ ಪೊಲೀಸರಿಗೆ ಮಾಹಿತಿಯನ್ನು ನಾವು ಆವಾಗಿಂದಲೇ ನೀಡುತ್ತಿದ್ದೆವು. ಆದರೆ ಅವರು ಸರಿಯಾದ ಕ್ರಮವನ್ನು ತೆಗೆದುಕೊಂಡಿಲ್ಲ. ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರಿಗೂ ಕರೆ ಮಾಡಿ ಈ ಬಗ್ಗೆ ಹೇಳಲು ಪ್ರಯತ್ನ ಪಟ್ಟಿದ್ದೆವು. ಆದರೆ ಅವರು ನಮ್ಮ ಕರೆಯನ್ನು ಸ್ವೀಕರಿಸುತ್ತಿರಲಿಲ್ಲ ಎಂದರು.

    Live Tv
    [brid partner=56869869 player=32851 video=960834 autoplay=true]

  • ಪ್ರವೀಣ್ ಹತ್ಯೆ ಖಂಡಿಸಿ ರಾಜೀನಾಮೆ ಪರ್ವ – ಇದು ಹೇಡಿಗಳ ಲಕ್ಷಣ ಎಂದ ಈಶ್ವರಪ್ಪ

    ಪ್ರವೀಣ್ ಹತ್ಯೆ ಖಂಡಿಸಿ ರಾಜೀನಾಮೆ ಪರ್ವ – ಇದು ಹೇಡಿಗಳ ಲಕ್ಷಣ ಎಂದ ಈಶ್ವರಪ್ಪ

    ಶಿವಮೊಗ್ಗ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಯುವ ಮೋರ್ಚಾ ಪ್ರವೀಣ್ ಕೊಲೆ ಖಂಡಿಸಿ ಬಿಜೆಪಿ ಪದಾಧಿಕಾರಿಗಳು ನೀಡುತ್ತಿರುವ ರಾಜೀನಾಮೆಗೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜೀನಾಮೆ ನೀಡುವುದು ಹೇಡಿಗಳ ಲಕ್ಷಣ ಎಂದು ಹೇಳಿಕೆ ನೀಡಿದ್ದಾರೆ.

    ಶಿವಮೊಗ್ಗದಲ್ಲಿ ಹರ್ಷನ ಕೊಲೆ, ಮಂಗಳೂರಿನಲ್ಲಿ ಪ್ರವೀಣ್ ಕೊಲೆಯಾಗಿರಬಹುದು. ಆದರೆ ನಮ್ಮ ಸಿದ್ಧಾಂತವನ್ನು ಕೊಲ್ಲಲು ಆಗುವುದಿಲ್ಲ. ಇದನ್ನೇ ಕಾರಣವಾಗಿಟ್ಟುಕೊಂಡು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ರಾಜೀನಾಮೆ ಕೊಡುತ್ತಿರುವುದು ಸರಿಯಲ್ಲ. ರಾಜೀನಾಮೆ ಕೊಡುವುದು ಹೇಡಿಗಳ ಲಕ್ಷಣ. ಈ ಕೂಡಲೇ ರಾಜೀನಾಮೆ ಹಿಂಪಡೆಯಿರಿ ಎಂದು ಈಶ್ವರಪ್ಪ ಒತ್ತಾಯಿಸಿದ್ದಾರೆ.

    ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬಿಜೆಪಿ ಪಕ್ಷವನ್ನು ಅನೇಕ ಹಿರಿಯರು ಪ್ರಾಣ ತ್ಯಾಗ, ಬಲಿದಾನಗಳ ಮೂಲಕ ಕಟ್ಟಿದ್ದಾರೆ. ನಾವೆಲ್ಲಾ ಒಂದು ಸ್ಥಾನಮಾನದಲ್ಲಿ ಇದ್ದೇವೆ. ಯುವ ಮೋರ್ಚಾ ಕಾರ್ಯಕರ್ತರು ಈಗಷ್ಟೇ ಕಣ್ಣು ಬಿಡುತ್ತಿದ್ದಾರೆ. ಈಗಲೇ ರಾಜೀನಾಮೆ ಕೊಡುತ್ತೇವೆ ಎಂದರೆ ಹೇಗೆ? ನೀವು ಪಕ್ಷಕ್ಕೆ ಕೊಟ್ಟಿರುವ ಕೊಡುಗೆ ಏನು ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: 1,100 ಎನ್‌ಕೌಂಟರ್ ಪೊಲೀಸರಿಂದಲೇ ಮಾಡಿಸ್ತೇವೆ – ಹಿಂದೂ ಸಮಾಜದ ಮುಖಂಡ

    ರಾಜೀನಾಮೆ ಕೊಡುವುದರಿಂದ ಹಿಂದುತ್ವ ಸಿದ್ಧಾಂತಕ್ಕೆ, ನಮ್ಮ ನಾಯಕರಿಗೆ ಅಪಮಾನ ಮಾಡಿದಂತೆ. ರಾಜೀನಾಮೆಯೇ ಉತ್ತರ ಅಲ್ಲ. ರಾಜೀನಾಮೆ ಕೊಟ್ಟಿರುವವರು ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಆ ಜಾಗಕ್ಕೆ ಬೇರೆಯವರು ಬರುತ್ತಾರೆ. ಬಿಜೆಪಿಗೆ ಏನು ಕಾರ್ಯಕರ್ತರು ಸಿಗುವುದಿಲ್ಲವಾ? ರಾಜೀನಾಮೆ ಸಿಟ್ಟಿನಿಂದ ಕೊಟ್ಟಿದ್ದಾರೆ. ಜೊತೆಗೆ ನಮ್ಮ ಯುವಕರಿಗೆ ಸ್ವಲ್ಪ ಪ್ರಬುದ್ಧತೆ ಕಡಿಮೆ. ಅವರಿಗೆ ಸಮಾಧಾನ ಮಾಡುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿಂದು 2 ಸಾವಿರಕ್ಕೂ ಅಧಿಕ ಮಂದಿಗೆ ಕೊರೊನಾ – ನಾಲ್ವರು ಸಾವು

    Live Tv
    [brid partner=56869869 player=32851 video=960834 autoplay=true]

  • ಪ್ರವೀಣ್ ಕುಟುಂಬಕ್ಕೆ ಸಹಾಯದ ನೆಪದಲ್ಲಿ ಹಣ ವಸೂಲಿ: ಚಕ್ರವರ್ತಿ ಸೂಲಿಬೆಲೆ ಗಂಭೀರ ಆರೋಪ

    ಪ್ರವೀಣ್ ಕುಟುಂಬಕ್ಕೆ ಸಹಾಯದ ನೆಪದಲ್ಲಿ ಹಣ ವಸೂಲಿ: ಚಕ್ರವರ್ತಿ ಸೂಲಿಬೆಲೆ ಗಂಭೀರ ಆರೋಪ

    ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊಲೆಯಾದ ಬಿಜೆಪಿ ಯುವ ಮೋರ್ಚ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸಹಾಯ ಮಾಡುವ ನೆಪದಲ್ಲಿ ಬಿಜೆಪಿ ಯುವ ಮೋರ್ಚದ ಸದಸ್ಯರು ಜನರಿಂದ ಹಣ ವಸೂಲಿ ಮಾಡಲು ಮುಂದಾಗಿದ್ದಾರೆ ಎಂದು ವಾಗ್ಮಿ, ಚಿಂತಕ ಚಕ್ರವರ್ತಿ ಸೂಲಿಬೆಲೆ ಗಂಭೀರ ಆರೋಪ ಮಾಡಿದ್ದಾರೆ.

    ಈ ಬಗ್ಗೆ ಟ್ವೀಟ್ ಮಾಡಿರುವ ಸೂಲಿಬೆಲೆ, ಸ್ಥಳೀಯರು ಸ್ವಂತ ಖಾತೆಯ ವಿವರ ನೀಡಿ ಜನರ ಹಣ ವಸೂಲಿ ಮಾಡುತ್ತಿದ್ದಾರೆ. ಒಬ್ಬ ನಾಯಕ ಈ ರೀತಿ ವಂಚನೆಯ ಸಂದೇಶವನ್ನು ಕಳುಹಿಸಿದ್ದು, ಅದಕ್ಕೆ ಆತ ಸೂಕ್ತವಾದ ಉತ್ತರವನ್ನು ಪಡೆದಿದ್ದಾನೆ. ನೀವು ನಮ್ಮಿಂದ ಹಣವನ್ನು ಸಂಗ್ರಹಿಸುತ್ತೀರಿ ಹಾಗೂ ನಿಮ್ಮ ಮಂತ್ರಿಗಳು ಬಳಿಕ ನಿಮ್ಮಿಂದ ಆ ಹಣವನ್ನು ಲೂಟಿ ಮಾಡುತ್ತಾರೆ ಎಂದು ಉತ್ತರಿಸಿದ್ದಾರೆ. ಈ ರೀತಿ ವಂಚಿಸುವುದಕ್ಕೆ ಶಭಾಷ್ ಎಂದು ಸೂಲಿಬೆಲೆ ಟೀಕಿಸಿದ್ದಾರೆ.

    ಈ ಬಗ್ಗೆ ಪತ್ರವೂ ಬರೆದಿರುವ ಸೂಲಿಬೆಲೆ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರನ್ನು ಭಯೋತ್ಪಾದಕರು ಭೀಕರ ಹತ್ಯೆ ಮಾಡಿರುವುದು ಖಂಡನೀಯ. ನಮ್ಮ ಕಾರ್ಯಕರ್ತನಾದ ಪ್ರವೀಣ್ ಕುಟುಂಬಕ್ಕೆ ಪಕ್ಷವು ಈಗಾಗಲೇ ಮೊದಲ ಹಂತದ ನೆರವು ನೀಡಿದೆ. ಮುಂದೆಯೂ ಸರ್ಕಾರ ಮತ್ತು ಪಕ್ಷ ಅವರ ಜೊತೆಗಿರಲಿದೆ ಎಂದಿದ್ದಾರೆ. ಇದನ್ನೂ ಓದಿ: ರಾಷ್ಟ್ರಪತ್ನಿ ಹೇಳಿಕೆ ವಿವಾದ – ದ್ರೌಪದಿ ಮುರ್ಮುಗೆ ಪತ್ರ ಬರೆದು ಕ್ಷಮೆಯಾಚಿಸಿದ ಅಧೀರ್

    ನೊಂದ ಕುಟುಂಬಕ್ಕೆ ಅಲ್ಲಲ್ಲಿ ಪಕ್ಷದ ಹೆಸರಿನಲ್ಲಿ ಖಾಸಗಿ ಧನ ಸಂಗ್ರಹ ಮಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಪಕ್ಷದ ಹೆಸರಿನಲ್ಲಿ ಯಾವುದೇ ರೀತಿಯ ಖಾಸಗಿ ಧನ ಸಂಗ್ರಹ ಮಾಡಬಾರದು ಎಂದು ಸೂಲಿಬೆಲೆ ತಿಳಿಸಿದ್ದು, ವಂಚನೆಗೊಳಗಾಗದಂತೆ ಜನರಿಗೂ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ವೀರೇಂದ್ರ ಹೆಗ್ಗಡೆ ಅವರನ್ನ ಭೇಟಿಯಾದ ಕಿಚ್ಚ ಸುದೀಪ್ ದಂಪತಿ

    Live Tv
    [brid partner=56869869 player=32851 video=960834 autoplay=true]

  • ಮುಸ್ಲಿಂ ಎಂಬ ಕಾರಣಕ್ಕೆ ಫಾಝಿಲ್ ಮನೆಗೆ ಸಿಎಂ ಹೋಗಿಲ್ಲ: ಸಿ.ಎಂ ಇಬ್ರಾಹಿಂ

    ಮುಸ್ಲಿಂ ಎಂಬ ಕಾರಣಕ್ಕೆ ಫಾಝಿಲ್ ಮನೆಗೆ ಸಿಎಂ ಹೋಗಿಲ್ಲ: ಸಿ.ಎಂ ಇಬ್ರಾಹಿಂ

    ಬೀದರ್: ಮುಸ್ಲಿಂ ಎಂಬ ಕಾರಣಕ್ಕೆ ಸಿಎಂ ಫಾಝಿಲ್ ಮನೆಗೆ ಹೋಗದೆ ತಾರತಮ್ಯ ಮಾಡಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಪಕ್ಷ ಸಂಘಟನೆಗೆಂದು ಬೀದರ್‌ಗೆ ಬಂದಿದ್ದ ಸಿ.ಎಂ ಇಬ್ರಾಹಿಂ, ಮುಸ್ಲಿಂ ಎಂಬ ಕಾರಣಕ್ಕೆ ಫಾಝಿಲ್ ಮನೆಗೆ ಸಿಎಂ ಹೋಗಿಲ್ಲ. ಆದರೆ ಪ್ರವೀಣ್ ಮನೆಗೆ ಮಾತ್ರ ಹೋಗಿದ್ದಾರೆ. ಇದು ಮನುಷ್ಯತ್ವನಾ, ಒಬ್ಬ ಮಾಜಿ ಮುಖ್ಯಮಂತ್ರಿ ಎಸ್.ಆರ್ ಬೊಮ್ಮಾಯಿ ಅವರ ಮಗನಾಗಿ ಈ ರೀತಿ ಮಾಡಿದ್ದು ಸರಿಯಲ್ಲ. ಎಲ್ಲರೂ ಮನುಷ್ಯರೆ ಅಲ್ವಾ? ನೀವು ಯಾರನ್ನು ತೃಪ್ತಿ ಪಡಿಸಲು ಸಿಎಂ ಆಗಿದ್ದೀರಿ? ಗೃಹ ಸಚಿವರು ಹಾಗೂ ಸಿಎಂ ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸಂಬಂಧಿ ಜೊತೆ ಸೇರಿ ಪತ್ನಿ ಮೇಲೆ ಅತ್ಯಾಚಾರ ಎಸಗಿ ತಲಾಖ್‌ ನೀಡಿದ ಪತಿ

    ಹತ್ಯೆ ವಿಷಯದಲ್ಲಿ ಯಾಕೆ ಇಂಟೆಲಿಜೆನ್ಸ್? ಪೊಲೀಸರು ಫೇಲಾಗಿದ್ದಾರೆ ಎಂದು ಸಿಎಂ ಇದನ್ನು ನ್ಯಾಯಾಂಗ ತನಿಖೆಗೆ ನೀಡಬೇಕು ಎಂದು ಆಗ್ರಹಿಸಿದರು. ಕೇಶವ ಕೃಪಾ ಹಾಗೂ ಬಸವ ಕೃಪಾ ಹೊಡೆದಾಟ ಶುರುವಾಗಿದ್ದು, ಅದನ್ನು ಮುಗಿಸಲು ಈ ರೀತಿ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅಕ್ರಮ ಬಾರ್ ಆರೋಪ- ಸ್ಮೃತಿ ಪುತ್ರಿ ವಿರುದ್ಧದ ಟ್ವೀಟ್‌ಗಳನ್ನು 24 ಗಂಟೆಯೊಳಗೆ ಅಳಿಸಲು ನ್ಯಾಯಾಲಯ ಆದೇಶ

    Live Tv
    [brid partner=56869869 player=32851 video=960834 autoplay=true]

  • ಪ್ರವೀಣ್ ಕುಟುಂಬಕ್ಕೆ ಬಿಜೆಪಿ ಮನೆ ಕಟ್ಟಿಸಿ ಕೊಡುತ್ತದೆ: ತೇಜಸ್ವಿ ಸೂರ್ಯ

    ಪ್ರವೀಣ್ ಕುಟುಂಬಕ್ಕೆ ಬಿಜೆಪಿ ಮನೆ ಕಟ್ಟಿಸಿ ಕೊಡುತ್ತದೆ: ತೇಜಸ್ವಿ ಸೂರ್ಯ

    ಮಂಗಳೂರು: ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಿಜೆಪಿ ಮನೆ ಕಟ್ಟಿಸಿ ಕೊಡುತ್ತದೆ ಎಂದು ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

    ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಭೇಟಿ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಇಂದು ಪ್ರವೀಣ್ ಅವರ ಕುಟುಂಬವನ್ನು ಭೇಟಿ ಮಾಡಿದ್ದೇನೆ. ಪ್ರವೀಣ್ ಈ ಭಾಗದಲ್ಲಿ ಬೆಳೆಯುತ್ತಿದ್ದ ನಾಯಕ. ಪ್ರವೀಣ್‍ನನ್ನು ಕಳೆದುಕೊಂಡದ್ದು ತುಂಬಲಾರದ ನಷ್ಟ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಎಲ್ಲರ ಗಮನ ಸೆಳೆದ ಗುಹೆಗಳ ಮಾದರಿ ಅಂಗನವಾಡಿ ವಿನ್ಯಾಸ 

    ಈ ರೀತಿಯ ಸಾವು ಮರುಕಳಿಸದಂತೆ ಸರ್ಕಾರಕ್ಕೆ ಆಗ್ರಹ ಮಾಡುತ್ತೇನೆ. ಯುವ ಮೋರ್ಚಾ 15 ಲಕ್ಷ ರೂ. ನೀಡುತ್ತದೆ. ಕುಟುಂಬಕ್ಕೆ ಬಿಜೆಪಿ ಮನೆ ಕಟ್ಟಿಸಿ ಕೊಡುತ್ತದೆ. ಪಕ್ಷ 25 ಲಕ್ಷ ರೂ. ನೀಡಿದೆ. ಸಮಸ್ತ ಹಿಂದೂಗಳು ಎಚ್ಚೆತ್ತುಕೊಳ್ಳಬೇಕು. ಇಸ್ಲಾಮೀ ಜಿಹಾದ್‍ನ್ನು ಮೂಲದಿಂದ ಉಚ್ಚಾಟನೆ ಮಾಡೋದಕ್ಕೆ ನಾವು ಬದ್ಧ ಎಂದು ಭರವಸೆ ಕೊಟ್ಟರು.

    ಪ್ರವೀಣ್ ಸಾವು ಆಗಬಾರದಿತ್ತು. ಪ್ರತಿ ಬಾರಿ ಕಾರ್ಯಕರ್ತರನ್ನು ಬೀಳ್ಕೊಟ್ಟಾಗಲೂ ಈ ಮಾತು ಹೇಳುತ್ತೇವೆ. ಈ ಬಾರಿ ಇಡೀ ರಾಜ್ಯ, ದೇಶ ಎಚ್ಚೆತ್ತಿದೆ. ಈಗಾಗಲೇ ಇಬ್ಬರ ಬಂಧನವಾಗಿದೆ. ಪ್ರವೀಣ್ ಅವರ ಚಿಕನ್ ಅಂಗಡಿಯಲ್ಲಿ ಕೆಲಸ ಮಾಡ್ತಿದ್ದ ವ್ಯಕ್ತಿಯ ಮಗನೇ ಕೃತ್ಯದಲ್ಲಿ ಭಾಗಿಯಾಗಿದ್ದಾನೆ. ಇದು ಅತ್ಯಂತ ಬೇಸರ ಸಂಗತಿಯಾಗಿದೆ ಎಂದರು. ಇದನ್ನೂ ಓದಿ:  ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಕಾನ್ಸ್‌ಟೇಬಲ್ ಅರೆಸ್ಟ್

    ಜಿಹಾದಿ ಮನಸ್ಥಿತಿ ಯಾವ ಮಟ್ಟದಲ್ಲಿದೆ ಅನ್ನೋದು ಗೊತ್ತಾಗುತ್ತೆ. ಬಿಜೆಪಿಯ ಕಾರ್ಯಕರ್ತರು ಧೃತಿಗೆಡಬೇಡಿ. ನಾರಾಯಣ ಗುರು, ಶಿವಾಜಿಯ ಕ್ಷಾತ್ರ ರಕ್ತ ನಮ್ಮಲ್ಲಿದೆ. ಬಿಜೆಪಿ ಕಾರ್ಯಕರ್ತರ ಸಿಟ್ಟು ಕಾಂಗ್ರೆಸ್, ಜೆಡಿಎಸ್‍ಗೆ ಲಾಭವಾಗುತ್ತೆ ಎಂದು ಕೆಕೇ ಹಾಕುತ್ತಿದ್ದಾರೆ. ನಮ್ಮ ಕಾರ್ಯಕರ್ತರ ರೋಷದಿಂದ ನಮಗೆ ನಷ್ಟವಾಗಲ್ಲ. ನಮ್ಮ ಕಾರ್ಯಕರ್ತರು ಸಿದ್ಧಾಂತ ಬಿಡೋದಿಲ್ಲ ನಮ್ಮ ನಿಷ್ಟೆ ಪ್ರಶ್ನಾತೀತವಾಗಿದೆ. ಸರ್ಕಾರ ಎಲ್ಲ ರೀತಿಯ ಕ್ರಮಕೈಗೊಳ್ಳುತ್ತೆ. ಮೂಲಭೂತವಾದಿ ಸಿದ್ಧಾಂತದ ವಿರುದ್ಧ ಎಚ್ಚೆತ್ತು ಕೆಲಸ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಪ್ರವೀಣ್ ಕುಟುಂಬಕ್ಕೆ 50 ಲಕ್ಷ ಪರಿಹಾರ ವಿತರಣೆ

    Live Tv
    [brid partner=56869869 player=32851 video=960834 autoplay=true]