Tag: Praveen

  • ಪ್ರವೀಣ್ ಕೊಲೆ ಖಂಡನೀಯ – 1 ಕೋಟಿ ರೂ. ಪರಿಹಾರ, ಪತ್ನಿಗೆ ಉದ್ಯೋಗ ಕೊಡಿ: ಶ್ರೀ ಪ್ರಣವಾನಂದ ಸ್ವಾಮೀಜಿ ಆಗ್ರಹ

    ಪ್ರವೀಣ್ ಕೊಲೆ ಖಂಡನೀಯ – 1 ಕೋಟಿ ರೂ. ಪರಿಹಾರ, ಪತ್ನಿಗೆ ಉದ್ಯೋಗ ಕೊಡಿ: ಶ್ರೀ ಪ್ರಣವಾನಂದ ಸ್ವಾಮೀಜಿ ಆಗ್ರಹ

    ಕಲಬುರಗಿ: ಮಂಗಳವಾರ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಅವರ ಕೊಲೆ ಕೃತ್ಯ ಖಂಡನೀಯವಾಗಿದ್ದು, ಪ್ರವೀಣ್ ಅವರ ಕುಟುಂಬಕ್ಕೆ ಕೂಡಲೇ ರಾಜ್ಯ ಸರ್ಕಾರ ಒಂದು ಕೋಟಿ ರೂಪಾಯಿ ಪರಿಹಾರ ಘೋಷಿಸಬೇಕು ಹಾಗೂ ಅವರ ಧರ್ಮಪತ್ನಿಗೆ ಸರ್ಕಾರಿ ನೌಕರಿಯನ್ನು ಘೋಷಿಸಬೇಕು ಎಂದು ಆರ್ಯ ಈಡಿಗ ರಾಷ್ಟ್ರೀಯ ಮಹಾಮಂಡಲದ ಅಧ್ಯಕ್ಷ ಶ್ರೀ ಡಾ. ಪ್ರಣವಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ.

    ಬಿಲ್ಲವ ಸಮುದಾಯದ ಕುಲಬಾಂಧವರು, ಗೆಜ್ಜೆಗಿರಿ ಕೋಟಿ ಚೆನ್ನಯ್ಯ ಕ್ಷೇತ್ರದ ಸಕ್ರಿಯ ಸೇವಾ ಕಾರ್ಯಕರ್ತರು, ಯುವ ವಾಹಿನಿ ಮುಖಂಡರು ಹಾಗೂ ರಾಜಕೀಯ, ಸಾಮಾಜಿಕ ಕಾರ್ಯಕರ್ತರಾಗಿದ್ದ ಪ್ರವೀಣ್ ನೆಟ್ಟಾರು ಅವರ ಕೊಲೆಗೆ ಪೂಜ್ಯ ಸ್ವಾಮೀಜಿಯವರು ಅತೀವ ದುಃಖವನ್ನು ವ್ಯಕ್ತಪಡಿಸಿದ್ದಾರೆ.

    ದಕ್ಷಿಣ ಕನ್ನಡ ಮತ್ತು ಉಡುಪಿಯ ಬಿಲ್ಲವ ಸಮುದಾಯವರು ಈ ಘಟನೆಯನ್ನು ಒಕ್ಕೊರಲಿನಿಂದ ತೀವ್ರವಾಗಿ ಖಂಡಿಸಬೇಕಾಗಿದೆ. ಈ ಘಟನೆಯಿಂದ ಎಚ್ಚೆತ್ತುಕೊಂಡು ಯಾವುದೇ ಪಕ್ಷದಲ್ಲಿದ್ದರೂ ಪ್ರಚೋದನೆಗೆ ಒಳಪಡದೇ ಪಕ್ಷದ ಸಿದ್ಧಾಂತದಂತೆ ಸಂಯಮದಿಂದ ಇರಬೇಕೆಂದು ಶ್ರೀಗಳು ಸೂಚಿಸಿದ್ದಾರೆ.  ಇದನ್ನೂ ಓದಿ: ಪ್ರವೀಣ್ ಹತ್ಯೆ ಪ್ರಕರಣ- ಬಂಧಿತ ಕೆಲಸ ಮಾಡುತ್ತಿದ್ದ ಅಂಗಡಿಗೆ ಮುತ್ತಿಗೆ

    ಈ ಹಿಂದಿನ ದಿನಗಳಲ್ಲಿ ಸಾಕಷ್ಟು ಬಿಲ್ಲವ ಯುವಕರು ಹತ್ಯೆಗೀಡಾಗಿದ್ದಾರೆ. ಆದರೆ ಮುಂದಿನ ದಿನಗಳಲ್ಲಿ ಯಾವ ಒಬ್ಬ ಬಿಲ್ಲವ ಯುವಕನು ಕೂಡ ಈ ರೀತಿ ಕೊಲೆಯಾಗುವಂತಹ ಸನ್ನಿವೇಶ ಸೃಷ್ಟಿಯಾಗದಂತೆ ಸಮುದಾಯದ ಜನ ಜಾಗೃತಿ ವಹಿಸಬೇಕಾಗಿದೆ. ನಾವು ಬ್ರಹ್ಮಶ್ರೀ ನಾರಾಯಣ ಗುರುಗಳ ಅಹಿಂಸಾ ಸಿದ್ಧಾಂತದ ಹಾದಿಯಲ್ಲಿ ಮುಂದುವರಿಯಬೇಕೆಂದು ಸ್ವಾಮೀಜಿ ಹೇಳಿದ್ದಾರೆ. ಇದನ್ನೂ ಓದಿ: ಪ್ರವೀಣ್‌ ಹಂತಕರನ್ನು ಕೇರಳ ಗಡಿಯವರೆಗೆ ಕಳುಹಿಸಿ ಕೊಟ್ಟಿದ್ದೇವೆ: ಬಂಧಿತ ಆರೋಪಿಗಳು

    ಶೀಘ್ರದಲ್ಲಿಯೇ ಮೃತ ಪ್ರವೀಣ್ ನೆಟ್ಟಾರು ಮನೆಗೆ ಸ್ವಾಮೀಜಿಯವರು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ. ಇವರೊಂದಿಗೆ ಬಿಲ್ಲವ, ಈಡಿಗ ಸಮಾಜದ ಮುಂದಾಳುಗಳು ತೆರಳಲಿದ್ದಾರೆ ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪ್ರವೀಣ್ ಹತ್ಯೆಗೆ ಭುಗಿಲೆದ್ದ ಆಕ್ರೋಶ – ರಾಜ್ಯಾದ್ಯಂತ ಬಿಜೆಪಿ ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ

    ಪ್ರವೀಣ್ ಹತ್ಯೆಗೆ ಭುಗಿಲೆದ್ದ ಆಕ್ರೋಶ – ರಾಜ್ಯಾದ್ಯಂತ ಬಿಜೆಪಿ ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ

    ಬೆಂಗಳೂರು: ಮಂಗಳವಾರ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ, ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪ ಪೆರುವಾಜೆ ಕ್ರಾಸ್ ಬಳಿ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಕೊಲೆಗೈದಿದ್ದರು. ಈ ಹತ್ಯೆಯನ್ನು ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಪದಾಧಿಕಾರಿಗಳು ರಾಜೀನಾಮೆ ನೀಡುತ್ತಿದ್ದಾರೆ.

    ಹಾಸನ ಜಿಲ್ಲೆಯ ಅರಸೀಕೆರೆ ನಗರ ಬಿಜೆಪಿ ಮಂಡಲದ ಅಧ್ಯಕ್ಷ ಪುರುಷೋತ್ತಮ್, ಕಾರ್ಯದರ್ಶಿ ಚಂದ್ರು, ಉಪಾಧ್ಯಕ್ಷ ಸುಭಾಷ್, ಜಿಲ್ಲಾ ಯುವ ಮೋರ್ಚಾ ಖಂಜಾಂಚಿ ಯುವರಾಜ್ ಸೇರಿ ಐವರು ರಾಜೀನಾಮೆ ನೀಡಿದ್ದಾರೆ. ಆರೋಪಿಗಳನ್ನು ಬಂಧಿಸುವವರೆಗೂ ಪಕ್ಷದ ಚಟುವಟಿಕೆಗಳನ್ನು ಮಾಡುವುದಿಲ್ಲ. ಪ್ರವೀಣ್ ಹತ್ಯೆ ಆರೋಪಿಗಳನ್ನು ಬಂಧಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಬೆಳಗಾವಿಯಲ್ಲೂ ಬಿಜೆಪಿ ಪದಾಧಿಕಾರಿಗಳ ರಾಜೀನಾಮೆ ಪರ್ವ ಪ್ರಾರಂಭವಾಗಿದ್ದು, ಬಿಜೆಪಿ ಅರಭಾವಿ ಮಂಡಲ ಸಾಮಾಜಿಕ ಜಾಲತಾಣ ಸದಸ್ಯ ಸ್ಥಾನಕ್ಕೆ ಅವಿನಾಶ್ ಹಿರೇಮಠ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದು, ಅದರಲ್ಲಿ ಹಿಂದೆ ಎಲ್ಲಾ ಹಿಂದೂಪರ ಕಾರ್ಯಕರ್ತರ ಹತ್ಯೆಯಾದಾಗ ಕಠಿಣ ಕ್ರಮ ಜರುಗಿಸಿದ್ದೀರಿ ಎಂಬುದು ನಮ್ಮ ಕಣ್ಮುಂದೆ ಇದೆ. ಆದರೆ ಅದು ಕೇವಲ ಭರವಸೆಯಾಗಿಯೇ ಉಳಿದಿದೆ ಎಂದು ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ತಾಕತ್ತಿದ್ರೆ ಬಿಜೆಪಿ ಕಾರ್ಯಕರ್ತರನ್ನು ಮುಟ್ಟಿ ನೋಡಿ: ಕಟೀಲ್ ಶಪಥದ ಹಳೇ ವೀಡಿಯೋ ವೈರಲ್

     

    ಮೈಸೂರಿನಲ್ಲಿ ಬಿಜೆಪಿ ಯುವ ಮೋರ್ಚಾದ ಎನ್.ಆರ್ ಕ್ಷೇತ್ರದ ಅಧ್ಯಕ್ಷ ಲೋಹಿತ್ ಸೇರಿದಂತೆ ಹಲವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ನಾವು ಹೇಳಿ ಕೇಳಿ ಅಲ್ಪಸಂಖ್ಯಾತ ಸಮುದಾಯ ಹೆಚ್ಚಾಗಿರುವ ಎನ್.ಆರ್ ಕ್ಷೇತ್ರದಲ್ಲೆ ಪಕ್ಷ ಸಂಘಟಿಸಬೇಕಿರುವ ಕಾರಣ ನಮ್ಮ ಮನೆಗಳಲ್ಲೂ ಆತಂಕ ಹೆಚ್ಚಾಗಿದೆ. ಈ ಕಾರಣ ಪಕ್ಷದ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇವೆ ಎಂದು ಹೇಳಿದ್ದಾರೆ.

    ಬಾಗಲಕೋಟೆ ಜಿಲ್ಲೆಯ ಬಿಜೆಪಿ ಯುವಮೋರ್ಚ ಕಾರ್ಯಕರ್ತರೆಲ್ಲರೂ ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಬಾಗಲಕೋಟೆ ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ್ ಅವರಿಗೆ ಸಲ್ಲಿಸಿದ್ದಾರೆ. ಅಲ್ಲದೆ ಬಿಜೆಪಿ ರಾಜ್ಯ ಪ್ರಮುಖರ ವಿರುದ್ಧ ಯುವ ಮೋರ್ಚಾ ಆಕ್ರೋಶ ಹೊರಹಾಕಿದೆ. ಇದನ್ನೂ ಓದಿ: ಪ್ರವೀಣ್ ಹತ್ಯೆ ಪ್ರಕರಣ- NIA ತನಿಖೆಗೆ ವಹಿಸುವಂತೆ ಅಮಿತ್ ಶಾಗೆ ಪತ್ರ ಬರೆದ ಶೋಭಾ ಕರಂದ್ಲಾಜೆ

    ಚಿಕ್ಕಮಗಳೂರಿನಲ್ಲೂ ಪ್ರವೀಣ್ ಹತ್ಯೆಗೆ ಆಕ್ರೋಶ ಹೊರ ಹಾಕಿ ಬಿಜೆಪಿ ಯುವ ಮೋರ್ಚ ಸದಸ್ಯರು ಸಾಮೂಹಿಕ ರಾಜೀನಾಮೆಗೆ ಮುಂದಾಗಿದ್ದಾರೆ. ಜಿಲ್ಲಾಧ್ಯಕ್ಷ ಸಂದೀಪ್ ಅರವಿನಗಂಡಿ, ಪ್ರಧಾನ ಕಾರ್ಯದರ್ಶಿ ಸಂತೋಷ್, ಗಗನ್ ಕಡೂರು, ಉಪಾಧ್ಯಕ್ಷ ಸಚಿನ್, ಶಶಿ ಜಿಲ್ಲಾ ಕಾರ್ಯದರ್ಶಿ, ಮಂಡಲ ಅಧ್ಯಕ್ಷ ರಾಜೇಶ್, ಕಾಂಚನ್ ಗೌಡ ಸೇರಿದಂತೆ 30ಕ್ಕೂ ಹೆಚ್ಚು ಕಾರ್ಯಕರ್ತರು ರಾಜೀನಾಮೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ತಾಕತ್ತಿದ್ರೆ ಬಿಜೆಪಿ ಕಾರ್ಯಕರ್ತರನ್ನು ಮುಟ್ಟಿ ನೋಡಿ: ಕಟೀಲ್ ಶಪಥದ ಹಳೇ ವೀಡಿಯೋ ವೈರಲ್

    ತಾಕತ್ತಿದ್ರೆ ಬಿಜೆಪಿ ಕಾರ್ಯಕರ್ತರನ್ನು ಮುಟ್ಟಿ ನೋಡಿ: ಕಟೀಲ್ ಶಪಥದ ಹಳೇ ವೀಡಿಯೋ ವೈರಲ್

    ಮಂಗಳೂರು: ತಾಕತ್ತಿದ್ದರೆ ನಮ್ಮ ಜಿಲ್ಲೆಯ ಒಬ್ಬನೇ ಒಬ್ಬ ಬಿಜೆಪಿ ಕಾರ್ಯಕರ್ತನ ಮೈ ಮುಟ್ಟಿ ನೋಡಿ, ಇದಕ್ಕೆ ಬಿಜೆಪಿ ತಕ್ಕ ಪಾಠ ಕಲಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆವೇಶದಲ್ಲಿ ಹೇಳಿಕೆ ನೀಡಿದ್ದ ಹಳೇ ವೀಡಿಯೋ ಇದೀಗ ವೈರಲ್ ಆಗಿದೆ.

    ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಬೆನ್ನಲ್ಲೇ ಕಟೀಲ್ ಅವರ ಈ ವೀಡಿಯೋ ವೈರಲ್ ಆಗಿದೆ. ಹಿಂದೂ ಹಾಗೂ ಬಿಜೆಪಿ ಕಾರ್ಯಕರ್ತರ ಹತ್ಯೆ ವಿಚಾರವಾಗಿ ಬಿಜೆಪಿ ನೇತೃತ್ವದ ಸರ್ಕಾರ ಹಾಗೂ ನಾಯಕರ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿದೆ.

    ನಾನು ಕರಾವಳಿ ಜಿಲ್ಲೆಯಲ್ಲಿ ಹೋರಾಟ ಮಾಡಿ ಬಂದವ. ನಮ್ಮ ಜಿಲ್ಲೆಯಲ್ಲಿ ತಾಕತ್ತಿದ್ದರೆ ಒಬ್ಬನೇ ಒಬ್ಬ ಬಿಜೆಪಿ ಕಾರ್ಯಕರ್ತನ ಮೈ ಮುಟ್ಟಿ ನೋಡಿ, ಬಿಜೆಪಿ ಇದಕ್ಕೆ ತಕ್ಕ ಪಾಠ ಕಲಿಸುತ್ತದೆ. ಯಾರೇ ಒಬ್ಬ ಕಾರ್ಯಕರ್ತ ಇದಕ್ಕೆ ಹೆದರುವ ಅವಶ್ಯಕತೆಯಿಲ್ಲ ಎಂದು ನಳಿನ್ ಕುಮಾರ್ ಈ ಹಿಂದೆ ಶಪಥ ಮಾಡಿದ್ದರು. ಇದನ್ನೂ ಓದಿ: ಜನರು ನಿಮ್ಮ ಮೇಲೆ ಇಟ್ಟಿರುವ ಗೌರವವನ್ನು ಉಳಿಸಿಕೊಳ್ಳಿ: ಸರ್ಕಾರಕ್ಕೆ ಪೇಜಾವರ ಶ್ರೀ ಎಚ್ಚರಿಕೆ

    ನಳಿನ್ ಕುಮಾರ್ ಅವರು ವೀರಾವೇಶದಿಂದ ಈ ಹೇಳಿಕೆಯೇನೋ ನೀಡಿದ್ದರು. ಆದರೆ ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷನ ಕೊಲೆ ಆಯ್ತು. ಇದೀಗ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಬಿಜೆಪಿ ಯುವ ಮೋರ್ಚದ ಪ್ರವೀಣ್ ಹತ್ಯೆ ನಡೆದಿದೆ. ಹೀಗಾದರೆ ನಳಿನ್ ಕುಮಾರ್ ಮಾತಿನಂತೆ ಬಿಜೆಪಿ ಸರ್ಕಾರ ಕ್ರಮ ಕೈಗೊಳ್ಳುತ್ತಾ ಅಥವಾ ಅವರು ಆಕ್ರೋಶದ ಮಾತಿಗಷ್ಟೇ ಸೀಮಿತವಾಗಿದ್ದಾರಾ ಎಂದು ಜನರು ಪ್ರಶ್ನಿಸುತ್ತಿದ್ದಾರೆ.

    ನಳಿನ್ ಕುಮಾರ್ ಅವರ ಈ ಹಳೇ ವೀಡಿಯೋ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು, ಅವರು ತಮ್ಮ ಮಾತನ್ನು ಉಳಿಸಿಕೊಂಡಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: ಪತಿಯ ಕಾರ್ಯ ಮುಗಿಯುವುದರೊಳಗೆ ಆರೋಪಿಗಳಿಗೆ ಶಿಕ್ಷೆ ಆಗ್ಬೇಕು: ಪ್ರವೀಣ್ ಪತ್ನಿ ನೂತನಾ

    Live Tv
    [brid partner=56869869 player=32851 video=960834 autoplay=true]

  • ಪ್ರವೀಣ್ ಹತ್ಯೆ ಪ್ರಕರಣ – ತನಿಖೆಗೆ 6 ತಂಡ ರಚನೆ, 15 ಜನ ವಶಕ್ಕೆ: ಎಡಿಜಿಪಿ

    ಪ್ರವೀಣ್ ಹತ್ಯೆ ಪ್ರಕರಣ – ತನಿಖೆಗೆ 6 ತಂಡ ರಚನೆ, 15 ಜನ ವಶಕ್ಕೆ: ಎಡಿಜಿಪಿ

    ಮಂಗಳೂರು: ಮಂಗಳವಾರ ರಾತ್ರಿ ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ದುಷ್ಕರ್ಮಿಗಳ ಕೈಯಲ್ಲಿ ಭೀಕರವಾಗಿ ಹತ್ಯೆಯಾಗಿದ್ದು, ಈ ಹಿನ್ನೆಲೆ ಪೊಲೀಸರು ಎಲ್ಲಾ ಆಯಾಮಗಳಿಂದ ತನಿಖೆ ನಡೆಸುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ.

    ಪ್ರವೀಣ್ ಹತ್ಯೆ ಹಿನ್ನೆಲೆ ಸುಳ್ಯದ ಬೆಳ್ಳಾರೆಯಲ್ಲಿ ಮಾಹಿತಿ ನೀಡಿದ ಎಡಿಜಿಪಿ ಅಲೋಕ್ ಕುಮಾರ್, ಹತ್ಯೆಯ ಬಗ್ಗೆ ಎಲ್ಲಾ ಆಯಾಮಗಳಿಂದ ತನಿಖೆ ನಡೆಯುತ್ತಿದೆ. ಮಂಗಳೂರು ಕಮಿಷನರ್ ಉಡುಪಿ ಪೊಲೀಸರ ಸಹಾಯ ಪಡೆದು 6 ತಂಡಗಳನ್ನು ರಚನೆ ಮಾಡಿದ್ದೇವೆ. ಈಗಾಗಲೇ 15ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

    ಘಟನೆಯ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಗೃಹಸಚಿವರು ನಿನ್ನೆಯಿಂದ ಮಾಹಿತಿಗಳನ್ನು ಪಡೆದುಕೊಳ್ಳುತ್ತಿದ್ದಾರೆ. ನಿನ್ನೆ ಮತ್ತು ಇಂದು ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಪತಿಯ ಕಾರ್ಯ ಮುಗಿಯುವುದರೊಳಗೆ ಆರೋಪಿಗಳಿಗೆ ಶಿಕ್ಷೆ ಆಗ್ಬೇಕು: ಪ್ರವೀಣ್ ಪತ್ನಿ ನೂತನಾ

    ಇಂದು ಪ್ರವೀಣ್ ಅಂತಿಮ ದರ್ಶನಕ್ಕೆ ಸಂಸದರು ಹಾಗೂ ಸಚಿವರು ಸ್ಥಳಕ್ಕೆ ಬಂದಿದ್ದಾಗ ಜನರು ಭಾವಾವೇಶದಿಂದ ವಾಹನವನ್ನು ತಳ್ಳಲು ಪ್ರಯತ್ನ ಮಾಡಿದ್ದಾರೆ. ನಾವು ಪರಿಸ್ಥಿತಿಯನ್ನು ಹತೋಟಿಗೆ ತರಲು ಲಘು ಲಾಠಿ ಪ್ರಹಾರ ಮಾಡಬೇಕಾಯಿತು. ಇದೀಗ ಜಿಲ್ಲಾಧಿಕಾರಿಗಳು ಸೆಕ್ಷನ್ 144 ಜಾರಿ ಮಾಡಿದ್ದು, ಸದ್ಯ ಪರಿಸ್ಥಿತಿ ಹತೋಟಿಯಲ್ಲಿದೆ ಎಂದು ಮಾಹಿತಿ ನೀಡಿದರು.

     

    ಘಟನೆಯ ಆರೋಪಿಗಳ ಪತ್ತೆಗೆ ಪೊಲೀಸ್ ಅಧಿಕಾರಿಗಳಿಗೆ ಜನರು ಅವಕಾಶ ಮಾಡಿ ಕೊಡಬೇಕು. ಹತ್ಯೆಗೆ 2-3 ಕಾರಣಗಳು ಮೇಲ್ನೋಟಕ್ಕೆ ಕಂಡುಬರುತ್ತಿವೆ. ವಶಕ್ಕೆ ಪಡೆದವರಲ್ಲಿ ಕೊಲೆಗಡುಕರು ಇದ್ದಾರೆಯೇ ಎಂಬುದನ್ನು ಈಗಲೇ ಹೇಳಲು ಸಾಧ್ಯವಿಲ್ಲ. ಆರೋಪಿಗಳನ್ನು ದಸ್ತಗಿರಿ ಮಾಡಿದ ಮೇಲೆಯೇ ಹತ್ಯೆಗೆ ಕಾರಣವನ್ನು ತಿಳಿಸಬಹುದು. ಘಟನಾ ಪ್ರದೇಶದಲ್ಲಿ ಜರ‍್ಯಾರೂ ಗುಂಪು ಕಟ್ಟಿ ಓಡಾಡಬಾರದು ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಹತ್ಯೆಯ ದಿನವೇ ಮುಸ್ಲಿಂ ಸ್ನೇಹಿತನ ಗೃಹಪ್ರವೇಶಕ್ಕೆ ಹೋಗಿದ್ದ ಪ್ರವೀಣ್ ನೆಟ್ಟಾರ್!

    Live Tv
    [brid partner=56869869 player=32851 video=960834 autoplay=true]

  • ಶಶಾಂಕ್ ನಿರ್ದೇಶನದ ‘ಲವ್ 360’ ಚಿತ್ರದ ಮತ್ತೊಂದು ಹಾಡು ರಿಲೀಸ್

    ಶಶಾಂಕ್ ನಿರ್ದೇಶನದ ‘ಲವ್ 360’ ಚಿತ್ರದ ಮತ್ತೊಂದು ಹಾಡು ರಿಲೀಸ್

    ನಿರ್ದೇಶಕ ಶಶಾಂಕ್ ನಿರ್ದೇನದಲ್ಲಿ ಮೂಡಿಬಂದಿದ್ದ “ಮೊಗ್ಗಿನ ಮನಸ್ಸು” ಚಿತ್ರ‌ ಬಿಡುಗಡೆಯಾಗಿ ಹದಿನಾಲ್ಕು ವರ್ಷಗಳಾಗಿದೆ. ಈ ಸುಂದರ ನೆನಪಿನೊಂದಿಗೆ ಪ್ರಸ್ತುತ ಅವರು ನಿರ್ದೇಶಿಸಿರುವ  “ಲವ್ 360” ಚಿತ್ರದ “ಭೋರ್ಗರೆದು” ಎಂಬ ಹಾಡು ಬಿಡುಗಡೆಯಾಗಿದೆ. ಶಶಾಂಕ್ ಅವರೆ ಬರೆದಿರುವ ಈ ಹಾಡನ್ನು ಕೀರ್ತನ್ ಹೊಳ್ಳ ಹಾಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ.

    ನಾನು “ಲವ್ 360” ಸಿನಿಮಾದ ಈ  ಹಾಡನ್ನು ಇಂದು ಬಿಡುಗಡೆ ಮಾಡಲು ಪ್ರಮುಖ ಕಾರಣವಿದೆ. ಅದೇನೆಂದರೆ, ನನ್ನ ನಿರ್ದೇಶನದ “ಮೊಗ್ಗಿನ ಮನಸ್ಸು” ಚಿತ್ರ ತೆರೆಕಂಡು ಇಂದಿಗೆ(ಜಲೈ 18)ಹದಿನಾಲ್ಕು ವರ್ಷಗಳಾಗಿದೆ. ಹಾಗಾಗಿ ಇಂದು ಆ ಚಿತ್ರದ ನೆನಪುಗಳೊಂದಿಗೆ “ಲವ್ 360” ಚಿತ್ರದ ಮೂರನೇ ಹಾಡನ್ನು ಬಿಡುಗಡೆ ಮಾಡಿದ್ದೇವೆ. “ಮೊಗ್ಗಿನ ಮನಸ್ಸು” ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿದ್ದ ಗಂಗಾಧರ್ ಅವರಿಂದ  ಈ ಹಾಡನ್ನು ಬಿಡುಗಡೆ ಮಾಡಿದ್ದಾರೆ. ಆ ಚಿತ್ರದ ನಿರ್ಮಾಪಕ ಇ.ಕೃಷ್ಣಪ್ಪ ಅವರನ್ನು ಆಹ್ವಾನಿಸಿದ್ದೆ. ಕಾರ್ಯದೊತ್ತಡದಿಂದ ಅವರಿಗೆ ಬರಲಾಗಲಿಲ್ಲ . ರಾಕಿಂಗ್ ಸ್ಟಾರ್ ಯಶ್, ರಾಧಿಕಾ ಪಂಡಿತ್, ಶುಭಾ ಪುಂಜಾ ಮುಂತಾದವರು ಅಭಿನಯಿಸಿದ್ದ ಸಿನಿಮಾವದು. ಚಿತ್ರ ಹಾಗೂ ಹಾಡುಗಳು ಈಗಲೂ ಜನಪ್ರಿಯ. ಮುಂದೊಂದು ದಿನ “ಮೊಗ್ಗಿನ ಮನಸ್ಸು ಭಾಗ 2”  ಮಾಡುವ ಆಸೆಯಿದೆ. ಆ ಚಿತ್ರವನ್ನೂ ಹೊಸ ಕಲಾವಿದರೊಂದಿಗೆ ಮಾಡುತ್ತೇನೆ. ಇನ್ನು ಇಂದು ಬಿಡುಗಡೆಯಾಗಿರುವ “ಲವ್ 360”   ಚಿತ್ರದ “ಭೋರ್ಗರೆದು” ಹಾಡನ್ನು ನಾನೇ ಬರೆದಿದ್ದೇನೆ. ಕೀರ್ತನ್ ಹೊಳ್ಳ ಹಾಡಿದ್ದಾರೆ. ಇನ್ನೊಂದು ಹಾಡಿದೆ. ಅದನ್ನು ಸದ್ಯದಲ್ಲೇ ಬಿಡುಗಡೆ ಮಾಡುತ್ತೇವೆ. ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಸೂಕ್ತ ಸಮಯದಲ್ಲಿ ಬಿಡುಗಡೆ ಮಾಡುತ್ತೇವೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಎರಡು ಹಾಡುಗಳು ಜನಪ್ರಿಯವಾಗಿದೆ. ಅದರಲ್ಲೂ ಸಿದ್ ಶ್ರೀರಾಮ್ ಹಾಡಿರುವ “ಜಗವೇ ನೀನು ಗೆಳತಿಯೆ” ಹಾಡಂತೂ ನಾವು ಅಂದುಕೊಂಡದಕ್ಕಿಂತ ದೊಡ್ಡ ಯಶಸ್ಸು ಕಂಡಿದೆ. ರೀಲ್ಸ್ ನಲ್ಲೂ ಈ ಹಾಡಿಗೆ ಹೆಜ್ಜೆ ಹಾಕುತ್ತಿರುವವರು ಹೆಚ್ಚಾಗಿದ್ದಾರೆ ಎಂದು ನಿರ್ದೇಶಕ ಶಶಾಂಕ್ ಮಾಹಿತಿ ನೀಡಿದರು.

    ನಮ್ಮ ಚಿತ್ರದ ಬಿಡುಗಡೆಗೆ ಕಾತುರದಿಂದ ಕಾಯುತ್ತಿದ್ದೇನೆ.  “ಜಗವೇ ನೀನು” ಹಾಡಿನಿಂದ ಈಗಾಗಲೇ ಜನ ನನ್ನನ್ನು ಹೋದ ಕಡೆ ಎಲ್ಲಾ ಗುರುತಿಸುತ್ತಿದ್ದಾರೆ. ಚಿತ್ರದ ಗೆಲುವಿನ ಖುಷಿಯನ್ನು ಈ ಹಾಡು ನನಗೆ ಈಗಾಗಲೇ ನೀಡಿದೆ. ಇಂತಹ ಅದ್ಭುತ ಹಾಡು ಕೊಟ್ಟಿರುವ ನಿರ್ದೇಶಕರಿಗೆ ಹಾಗೂ ಮೆಚ್ಚಿಕೊಂಡಿರುವ ಕಲಾರಸಿಕರಿಗೆ ಧನ್ಯವಾದ. ಇಂದು ಬಿಡುಗಡೆಯಾಗಿರುವ ಹಾಡು ಕೂಡ ಜನರ ಮನಸ್ಸಿಗೆ ಹತ್ತಿರವಾಗಲಿದೆ ಎಂದರು ನಾಯಕ ಪ್ರವೀಣ್. ಇದನ್ನೂ ಓದಿ:ಕೆ.ಎಲ್ ರಾಹುಲ್ -ಅಥಿಯಾ ಶೆಟ್ಟಿ ಮದುವೆ ಡೇಟ್ ಫೈನಲ್

    ಬಿಡುಗಡೆಯಾಗಿರುವ ಎರಡು ಹಾಡುಗಳು ಗೆದ್ದಿದೆ. ಹಿರಿಯರು, ಕಿರಿಯರು ಎಲ್ಲಾ ವಯಸ್ಸಿನವರಿಗೂ “ಜಗವೇ ನೀನು ಗೆಳತಿಯೆ” ಹಾಡು ಇಷ್ಟವಾಗಿದೆ. ಚಿತ್ರ ಕೂಡ ಎಲ್ಲರ ಮನ ಗೆಲ್ಲುತ್ತದೆ ಎಂದರು ನಾಯಕಿ ರಚನಾ ಇಂದರ್.

    Live Tv
    [brid partner=56869869 player=32851 video=960834 autoplay=true]

  • ಶಶಾಂಕ್ ನಿರ್ದೇಶನದ ಚಿತ್ರಕ್ಕೆ ಡಾಕ್ಟರ್ ಹೀರೋ

    ಶಶಾಂಕ್ ನಿರ್ದೇಶನದ ಚಿತ್ರಕ್ಕೆ ಡಾಕ್ಟರ್ ಹೀರೋ

    “ಮೊಗ್ಗಿನ ಮನಸ್ಸು”, ” ಕೃಷ್ಣನ್ ಲವ್ ಸ್ಟೋರಿ ” ಯಂತಹ ಅದ್ಭುತ ಲವ್ ಸ್ಟೋರಿ ಚಿತ್ರಗಳ ನಿರ್ದೇಶಕ ಶಶಾಂಕ್ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಚಿತ್ರ “ಲವ್ 360”. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಸಾಕಷ್ಟು ಮೆಚ್ಚುಗೆ ದೊರಕಿದೆ. ಈ ಸಂತಸ ಹಂಚಿಕೊಳ್ಳಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ಇದನ್ನೂ ಓದಿ : Exclusive- ಅಮೆಜಾನ್ ಪ್ರೈಮ್ನಲ್ಲಿ ‘ಕೆಜಿಎಫ್ 2’ : ಫಸ್ಟ್ ಟೈಮ್ ಮೆಂಬರ್ ಅಲ್ಲದವರೂ ಸಿನಿಮಾ ನೋಡಬಹುದು

    ಬಹಳ ದಿನಗಳ ನಂತರ ನಿಮ್ಮನೆಲ್ಲಾ ನೋಡುತ್ತಿರುವುದು ಖುಷಿಯಾಗಿದೆ. ಮೂರುವರ್ಷಗಳ ನಂತರ “ತಾಯಿಗೆ ತಕ್ಕ ಮಗ” ಚಿತ್ರದ ನಂತರ ನಾನು ನಿರ್ದೇಶಿಸಿರುವ ಚಿತ್ರವಿದು. ಲಾಕ್ ಡೌನ್ ಸಮಯದಲ್ಲಿ ಸಿದ್ದವಾದ ಕಥೆಯಿದು. ನಾನು ಉಪೇಂದ್ರ ಅವರ ಚಿತ್ರ ನಿರ್ದೇಶಿಸಬೇಕಿತ್ತು.‌ ಅದು ದೊಡ್ಡಮಟ್ಟದ ಚಿತ್ರ. ಚಿತ್ರೀಕರಣಕ್ಕೆ ಕೊರೋನ ನಿಯಮಾವಳಿಗಳು ಸಹಕಾರಿಯಾಗುವಂತೆ ಕಾಣಲಿಲ್ಲ. ಹಾಗಾಗಿ ಆ ಚಿತ್ರ ಮುಂದೂಡಿ, ಈ ಚಿತ್ರ ಆರಂಭ ಮಾಡಿದೆ. ಅದರಲ್ಲೂ ಹೊಸಬರೊಂದಿಗೆ ನಾನು ಕೆಲಸ ಮಾಡಿ ಸುಮಾರು ವರ್ಷಗಳೇ ಆಗಿತ್ತು. ಈ ಚಿತ್ರದ ಮೂಲಕ ಪ್ರವೀಣ್ ಎಂಬ ನೂತನ ಪ್ರತಿಭೆಯನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದೇನೆ. ಪ್ರವೀಣ್ ಸೇರಿದಂತೆ ಅವರ ಕುಟುಂಬದರೆಲ್ಲಾ ವೈದ್ಯರು. ಹೊಸಪೇಟೆ ಬಳಿಯ ಮಾರಮ್ಮನಹಳ್ಳಿಯಲ್ಲಿ ಇವರ ಆಸ್ಪತ್ರೆ ಇದೆ. ಸಾವಿರಾರು ಜನಕ್ಕೆ ಉಚಿತ ಚಿಕಿತ್ಸೆ ನೀಡಿ‌ ಪ್ರವೀಣ್ ತಂದೆ ಆ ಊರಿನ ಸುತ್ತ ಹೆಸರುವಾಸಿಯಾಗಿದ್ದರು. ಎಂ.ಬಿ.ಬಿ.ಎಸ್ ಓದಿರುವ ಪ್ರವೀಣ್  ಗೆ ನಟನೆಯಲ್ಲಿ ಆಸಕ್ತಿ. ಈ ಕುರಿತು ಅವರ ತಾಯಿ ನನ್ನ ಬಳಿ ಹೇಳಿದರು. ನಿರ್ಮಾಣವನ್ನೂ ಮಾಡುವುದಾಗಿ ಹೇಳಿದ್ದರು. ಆದರೆ ಅವರ ಬಳಿ ಈ ಚಿತ್ರಕ್ಕೆ ಬೇಕಾದಷ್ಟು ಹಣವಿಲ್ಲದ ಕಾರಣ,  ನಮ್ಮ ಶಶಾಂಕ್ ಸಿನಿಮಾಸ್ ಸಂಸ್ಥೆ

    ಸಹ ನಿರ್ಮಾಣಕ್ಕೆ ಕೈ ಜೋಡಿಸಿತ್ತು. ಪ್ರವೀಣ್ ಗೆ ನಟನೆಗೆ ಬೇಕಾದ ಎಲ್ಲಾ ತಯಾರಿ ನೀಡಿ, ಚಿತ್ರ ಆರಂಭಿಸಲಾಯಿತು. ರಚನಾ ಇಂದರ್ ಈ ಚಿತ್ರದ ನಾಯಕಿ. ಗೋಪಾಲ್ ದೇಶಪಾಂಡೆ, ಡ್ಯಾನಿ ಕುಟ್ಟಪ್ಪ ಸೇರಿದಂತೆ ಅನೇಕ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ. ಅಭಿಷೇಕ್ ಕಲ್ಲತ್ತಿ ಛಾಯಾಗ್ರಹಣ ಹಾಗೂ ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಸಿದ್ ಶ್ರೀರಾಮ್ ಹಾಗೂ ಸಂಚಿತ್ ಹೆಗಡೆ ಹಾಡಿರುವ ಹಾಡುಗಳು ಕೇಳುಗರ ಮನ ಗೆದ್ದಿದೆ‌. ಸದ್ಯದಲ್ಲೇ ಚಿತ್ರದ ಪ್ರಥಮಪ್ರತಿ ಸಿದ್ದವಾಗಲಿದ್ದು, ಸೆನ್ಸಾರ್ ಮಂಡಳಿ ವೀಕ್ಷಿಸಿದ ನಂತರ ಬಿಡುಗಡೆ ದಿನಾಂಕ ಘೋಷಣೆ ಮಾಡುವುದಾಗಿ ನಿರ್ದೇಶಕ ಶಶಾಂಕ್ ತಿಳಿಸಿದರು. ಇದನ್ನೂ ಓದಿ : ಪತಿ ಉಪ್ಪಿಗಿಂತಲೂ ಪತ್ನಿ ಪ್ರಿಯಾಂಕಾ ಉಪೇಂದ್ರ ಫಾಸ್ಟ್ : ಡಿಟೆಕ್ಟೀವ್ ತೀಕ್ಷ್ಣ @ 50

    ನಾನು ಎಂ.ಬಿ.ಬಿ.ಎಸ್ ವಿದ್ಯಾರ್ಥಿಯಾಗಿದಾಗಿನಿಂದಲೂ ನಟನೆಯಲ್ಲಿ ಆಸಕ್ತಿ. ತಿಂಗಳಲ್ಲಿ ಮೂರು ದಿನ ಆದರ್ಶ ಫಿಲಂ ಇನ್ಸ್ಟಿಟ್ಯೂಟ್ ಗೆ ಬಂದು ಅಭಿನಯ ಕಲಿಯುತ್ತಿದೆ. ಅಪ್ಪನಿಗೆ ವಿಷಯ ತಿಳಿದು ಬಯ್ಯುತ್ತಿದ್ದರು. ಈಗ ಅಪ್ಪ ಇಲ್ಲ. ಅಮ್ಮನ ಮುಂದೆ ನನ್ನ ಆಸೆ ಹೇಳಿಕೊಂಡೆ. ಅಮ್ಮ ನನ್ನ‌ ಆಸೆಗೆ ಆಸರೆಯಾದರು. ಆನಂತರ ಶಶಾಂಕ್ ಸರ್ ಪರಿಚಯವಾಯಿತು. ಶಶಾಂಕ್ ಅವರು ಸಾಕಷ್ಟು ವರ್ಕ್ ಶಾಪ್ ನಡೆಸಿ ನನಗೆ ಅಭಿನಯ ಕಲಿಸಿದರು. ಸಾಕಷ್ಟು ತಯಾರಿ ಮಾಡಿಕೊಂಡು ಚಿತ್ರರಂಗಕ್ಕೆ ಬಂದಿದ್ದೀನಿ. ಈ ಚಿತ್ರದಲ್ಲಿ ಬೋಟ್ ಮ್ಯಕಾನಿಕ್ ಪಾತ್ರ ಮಾಡಿದ್ದೀನಿ. ಡಾಕ್ಟರ್ ಆಗಬೇಕಿತ್ತು. ಈಗ ಆಕ್ಟರ್ ಆಗಿದ್ದೀನಿ ಅಂದರು ಪ್ರವೀಣ್. ಇದನ್ನೂ ಓದಿ : ಕಾಲೇಜು ದಿನಗಳಲ್ಲೇ ರಮ್ಯಾ ಮೇಲೆ ಕ್ರಶ್ ಆಗಿದೆ : ರಕ್ಷಿತ್ ಶೆಟ್ಟಿ

    ನಾನು “ಲವ್ ಮಾಕ್ಟೇಲ್” ಚಿತ್ರದಲ್ಲಿ ಅಭಿನಯಿಸಿದ್ದೆ. ಆದರೆ ಪೂರ್ಣಪ್ರಮಾಣದ ನಾಯಕಿಯಾಗಿ ಅಭಿನಯಿಸಿರುವ ಮೊದಲ ಚಿತ್ರವಿದು. ಈ ಚಿತ್ರದ ಆಡಿಷನ್ ಇದಾಗ ಅಮ್ಮ ಜಡೆ ಹಾಕಿ, ಜುಮಕಿ ಹಾಕಿಸಿಕೊಂಡು ಕರೆದುಕೊಂಡು ಹೋಗಿದ್ದರು. ನಾನು ಬೇಡ ಅಂದೆ. ಅಮ್ಮ ಇರಲಿ ಅಂದರು. ಶಶಾಂಕ್ ಅವರಿಗೆ ನಾನು ಹೋಗಿದ್ದ ರೀತಿ ಇಷ್ಟವಾಯಿತಂತೆ. ಆನಂತರ ನಾನು ಸೆಲೆಕ್ಟ್ ಆದೆ. ನಂತರ ನಿರ್ದೇಶಕರು ವರ್ಕ್ ಶಾಪ್ ಮೂಲಕ ಅಭಿನಯ ಹೇಳಿಕೊಟ್ಟರು. ಪಾತ್ರ ತುಂಬಾ ಚೆನ್ನಾಗಿದೆ ಅಂದರು ರಚನಾ ಇಂದರ್.

  • ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು – ಕನ್ನಡಿಗರ ಮನಗೆದ್ದಿತು ರಿಷಬ್ ಶೆಟ್ಟಿ ಕ್ರಿಯೇಟಿವಿಟಿ!

    ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು – ಕನ್ನಡಿಗರ ಮನಗೆದ್ದಿತು ರಿಷಬ್ ಶೆಟ್ಟಿ ಕ್ರಿಯೇಟಿವಿಟಿ!

    ಬೆಂಗಳೂರು: ನಿರ್ದೇಶಕ ರಿಷಬ್ ಶೆಟ್ಟಿ ನಿಜಕ್ಕೂ ಜಾದೂ ಮಾಡಿದ್ದಾರೆ. ಸರ್ಕಾರಿ ಪ್ರಾಥಮಿಕ ಶಾಲೆ ಕಾಸರಗೋಡು ಕೊಡುಗೆ ರಾಮಣ್ಣ ರೈ ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇಡೀ ಕರ್ನಾಟಕದ ಎಲ್ಲ ಭಾಗಗಳ ಜನರೂ ಈ ಚಿತ್ರವನ್ನು ಪ್ರೀತಿಯಿಂದ ವೀಕ್ಷಿಸುತ್ತಿದ್ದಾರೆ, ಮೆಚ್ಚಿಕೊಳ್ಳುತ್ತಿದ್ದಾರೆ. ಬಾಯಿಮಾತಲ್ಲೇ ಹರಡಿಕೊಂಡಿದ್ದ ಒಳ್ಳೆ ಮಾತುಗಳೆಲ್ಲವೂ ಈ ಚಿತ್ರದ ಗೆಲುವಾಗಿ ಮಾರ್ಪಾಡಾಗಿದೆ.

    ಒಂದು ಕಥೆಯನ್ನು ಒಂದು ಚೌಕಟ್ಟಿಗೆ ಸಿಗದಂತೆ ಮತ್ತು ಕಥೆಯ ಬಿಂದು ಚದುರದಂತೆ ಕಟ್ಟಿ ಕೊಡುವುದು ತ್ರಾಸದಾಯಕ ಕೆಲಸ. ಆದರೆ ಇದರಲ್ಲಿ ರಿಷಬ್ ಶೆಟ್ಟಿ ಸಂಪೂರ್ಣವಾಗಿ ಗೆದ್ದಿದ್ದಾರೆ. ಆರಂಭದಲ್ಲಿ ಈ ಚಿತ್ರ ಕಲಾತ್ಮಕ ಎಂಬ ಸುದ್ದಿ ಹರಡಿತ್ತು. ಆ ನಂತರದಲ್ಲಿ ಮಕ್ಕಳ ಚಿತ್ರ ಎಂಬ ಸುದ್ದಿಯೂ ಅಲ್ಲಲ್ಲಿ ಹಬ್ಬಿಕೊಂಡಿತ್ತು. ಆದರೆ ರಿಷಬ್ ಮಾತ್ರ ಈ ಚಿತ್ರ ಅದ್ಯಾವುದೂ ಅಲ್ಲ, ಇದು ಪಕ್ಕಾ ಜ್ಯೂನಿಯರ್ ಕಿರಿಕ್ ಪಾರ್ಟಿ ಅಂತ ಸ್ಪಷ್ಟವಾಗಿಯೇ ಹೇಳಿದ್ದರು.

    ಚಿತ್ರ ನೋಡಿದ ಎಲ್ಲರಿಗೂ ಜ್ಯೂನಿಯರ್ ಕಿರಿಕ್ ಪಾರ್ಟಿಗಳ ಕೀಟಲೆ, ಅದರ ಜೊತೆಗೆ ತೆರೆದುಕೊಳ್ಳೋ ಮನ ಮಿಡಿಯುವ ಕಥೆಗಳೆಲ್ಲವೂ ಇಷ್ಟವಾಗಿವೆ. ಇದು ಕಾಸರಗೋಡು ಸೀಮೆಯಲ್ಲಿ ನಡೆಯೋ ಕಥೆಯಾದರೂ ಗುರುತು ಪರಿಚಯವಿಲ್ಲದ ಪ್ರದೇಶಗಳ ಮನಸುಗಳನ್ನೂ ಸೂರೆಗೊಂಡಿದೆ.

    ಮಕ್ಕಳ ಚಿತ್ರದ ಚೌಕಟ್ಟಿಗೂ ಸಿಗದೆ, ಗಡಿನಾಡಿನ ಸಮಸ್ಯೆಗಳ ಪರಿಧಿಯಲ್ಲಿಯೂ ನಿಲ್ಲದೆ ಎಲ್ಲ ವರ್ಗದ ಪ್ರೇಕ್ಷಕರನ್ನೂ ಆವರಿಸಿಕೊಂಡಿರೋ ಈ ಚಿತ್ರ ಪಕ್ಕಾ ಎಂಟರ್ ಟೈನರ್ ಎಂಬುದರಲ್ಲಿ ಎರಡು ಮಾತಿಲ್ಲ. ನೀವು ಈವರೆಗೂ ಈ ಚಿತ್ರವನ್ನು ನೋಡಿಲ್ಲವಾದರೆ ಈ ವೀಕೆಂಡ್ ಅದಕ್ಕಾಗಿ ಮೀಸಲಾಗಲಿ. ಒಂದು ವೇಳೆ ಈ ಚಿತ್ರವನ್ನು ಮಿಸ್ ಮಾಡಿಕೊಂಡರೆ ಒಂದೊಳ್ಳೆ ಚಿತ್ರ ನೋಡೋ ಅವಕಾಶವನ್ನೂ ಕಳೆದುಕೊಂಡಂತಾಗುತ್ತೆ!

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಊರಲ್ಲಿ ಒಳ್ಳೆಯವ್ರು ಎಷ್ಟೇ ಜನರಿದ್ರೂ, ಕೆಟ್ಟವನು ಮಾತ್ರ ಒಬ್ಬನಿರಬೇಕು-ಗಂಧದಗುಡಿಯ ಮತ್ತೊಂದು ಕಥೆ

    ಊರಲ್ಲಿ ಒಳ್ಳೆಯವ್ರು ಎಷ್ಟೇ ಜನರಿದ್ರೂ, ಕೆಟ್ಟವನು ಮಾತ್ರ ಒಬ್ಬನಿರಬೇಕು-ಗಂಧದಗುಡಿಯ ಮತ್ತೊಂದು ಕಥೆ

    ಬೆಂಗಳೂರು: ಚಂದನವನದಲ್ಲಿ ಮತ್ತೊಮ್ಮೆ ಗಂಧದ ಗುಡಿಯ ಕಥೆಯನ್ನು ತೆಗೆದುಕೊಂಡು ವಿಭಿನ್ನ ಸಿನಿಮಾ ತೆರೆಮೇಲೆ ಅಬ್ಬರಿಸಲು ರೆಡಿಯಾಗುತ್ತಿದೆ. ಈಗಾಗಲೇ ಗಂಧದ ಗುಡಿಯ ಎರಡು ಸಿನಿಮಾಗಳು ಅಚ್ಚಳಿಯದೇ ಉಳಿದುಕೊಂಡಿವೆ. ಅದೇ ರೀತಿಯ ಕಥೆಯನ್ನು ಹೋಲುವ ‘ಚೂರಿ ಕಟ್ಟೆ’ ಚಿತ್ರದ ಟ್ರೇಲರ್, ಹಾಡುಗಳು ಪ್ರೇಕ್ಷಕರನ್ನು ಸೆಳೆಯುವಲ್ಲಿ ಯಶಸ್ವಿಯಾಗುತ್ತಿವೆ.

    ಸಿನಿಮಾದಲ್ಲಿ ಗುಂಡುಗಳ ಸದ್ದು ಸಿಕ್ಕಾಪಟ್ಟೆ ಕೇಳಿಬಂದಿದ್ದು, ಖಡಕ್ ಡೈಲಾಗ್ ಗಳನ್ನು ಹೊಂದಿದೆ. ಊರಲ್ಲಿ ಒಳ್ಳೆಯವ್ರು ಎಷ್ಟೇ ಜನರಿದ್ರೂ, ಕೆಟ್ಟವನು ಮಾತ್ರ ಒಬ್ಬನಿರಬೇಕು ಎಂಬ ಡೈಲಾಗ್ ಚಿತ್ರದ ರೋಚಕತೆಯನ್ನು ಹೇಳುತ್ತದೆ. ಚೌಕಾಬಾರ ಎಂಬ ವಿಭಿನ್ನ ಕಿರುಚಿತ್ರವನ್ನು ನಿರ್ದೇಶನ ಮಾಡಿದ್ದ ನಿರ್ದೇಶಕ ರಘು ಶಿವಮೊಗ್ಗ ‘ಚೂರಿಕಟ್ಟೆ’ಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆಯ ಜೋಗ ಜಲಪಾತದ ಬಳಿಯ ಚೂರಿಕಟ್ಟೆ ಎಂಬ ಅರಣ್ಯ ವಲಯದಲ್ಲಿ ಚಿತ್ರೀಕರಣ ನಡೆದಿದೆ. ಚೂರಿಕಟ್ಟೆ ಟಿಂಬರ್ ಮಾಫಿಯಾ (ಬೆಲೆ ಬಾಳುವ ಮರಗಳ ಕಳ್ಳ ಸಾಗಾಣಿಕೆ) ಕಥೆಯನ್ನು ಹೊಂದಿದ್ದು, ನೋಡುಗರನ್ನು ಮಾಫಿಯಾದ ಕಗ್ಗತ್ತಲಿನಲ್ಲಿ ಭಯಬೀಳಸಲಿದೆ. ಅರಣ್ಯ ಪ್ರದೇಶದಲ್ಲಿಯ ಬೆಲೆ ಬಾಳುವ ಮರಗಳನ್ನು ಕಡಿದು ಅಕ್ರಮ ಸಾಗಾಟಕ್ಕೆ ಸಂಬಂಧಿಸಿದ ವಿಭಿನ್ನ, ರೋಚಕ ಕಥೆಯನ್ನು ಟ್ರೇಲರ್ ಹೇಳುತ್ತದೆ.

    ಈಗಾಗಲೇ ಚೂರಿಕಟ್ಟೆ ತನ್ನ ಟೀಸರ್, ಟ್ರೇಲರ್ ಮತ್ತು ಲಿರಿಕಲ್ ವಿಡಿಯೋ ಹಾಡುಗಳಿಂದ ಚಂದನವನದಲ್ಲಿ ಭರವಸೆಯನ್ನು ಮೂಡಿಸಿದೆ. ರಘು ಶಿವಮೊಗ್ಗ ನಿರ್ದೇಶಕರಾದ ಬಿ.ಸುರೇಶ್ ಮತ್ತು ಪ್ರಕಾಶ್ ಬೆಳವಾಡಿ ಅವರ ಗರಡಿಯಲ್ಲಿ ಪಳಗಿದವರು. `ಸಿಂಪಲ್ ಆಗಿ ಇನ್ನೊಂದು ಲವ್ ಸ್ಟೋರಿ’ ಖ್ಯಾತಿಯ ಪ್ರವೀಣ್ ಚೂರಿಕಟ್ಟೆಯ ಕಥಾ ನಾಯಕ. ಪ್ರವೀಣ್‍ಗೆ ನಾಯಕಿಯಾಗಿ ಪ್ರೇರಣಾ ಎಂಬ ಹೊಸ ನಟಿ ಸ್ಯಾಂಡಲ್‍ವುಡ್ ಗೆ ಪಾದಾರ್ಪಣೆ ಮಾಡಿದ್ದಾರೆ.

    ಚೂರಿಕಟ್ಟೆ ಮಾರ್ನಿಂಗ್ ಸ್ಟಾರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿದ್ದು, ಎಸ್ ನಾಯಜ್ ಮತ್ತು ಎಂ.ತುಳಸೀರಾಮುಡು ಬಂಡವಾಳ ಹೂಡಿದ್ದಾರೆ. ಅಚ್ಯುತ್ ಕುಮಾರ್, ಶರತ್ ಲೋಹಿತಾಶ್ವ, ಬಾಲಾಜಿ ಮನೋಹರ್, ಮಂಜುನಾಥ್ ಹೆಗಡೆ, ಪ್ರಮೋದ್ ಶೆಟ್ಟಿ ಸೇರಿದಂತೆ ದೊಡ್ಡ ತಾರಾಬಳಗವನ್ನು ಸಿನಿಮಾ ಹೊಂದಿದೆ. ವಾಸುಕಿ ವೈಭವ್ ಚೂರಿಕಟ್ಟೆಗೆ ಸಂಗೀತ ನೀಡಿದ್ದು, ಈಗಾಗಲೇ ಹಾಡುಗಳು ಪ್ರೇಕ್ಷಕರ ಸೆಳೆಯುವಲ್ಲಿ ಯಶಸ್ವಿಯಾಗಿವೆ.