Tag: praveensood

  • ಮಂಗಳೂರು ಬಾಂಬ್ ಬ್ಲಾಸ್ಟ್ ಕೇಸ್ – ನಾಳೆ ಮಂಗಳೂರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ

    ಮಂಗಳೂರು ಬಾಂಬ್ ಬ್ಲಾಸ್ಟ್ ಕೇಸ್ – ನಾಳೆ ಮಂಗಳೂರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ

    ಬೆಂಗಳೂರು: ಬಾಂಬ್ ಬ್ಲಾಸ್ಟ್ (Mangaluru Bomb Blast) ಪ್ರಕರಣದ ಸಂಬಂಧ ನಾಳೆ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಮಂಗಳೂರಿಗೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

    ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ (Praveen Sood) ಹಾಗೂ ಎಡಿಜಿಪಿ ಅಲೋಕ್ ಕುಮಾರ್ (Alok Kumar) ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಭೇಟಿ ಸಂದರ್ಭದಲ್ಲಿ ಸಚಿವರು, ಬಾಂಬ್ ಸ್ಫೋಟ ಘಟನೆಯಿಂದ ಗಾಯಗೊಂಡ ಆಟೋ ರಿಕ್ಷಾ ಚಾಲಕನನ್ನೂ ಭೇಟಿಯಾಗಿ ಸಾಂತ್ವನ ಹೇಳಲಿದ್ದಾರೆ. ಇದನ್ನೂ ಓದಿ: ಶಾಲಾ ಪಠ್ಯದಲ್ಲಿ ಭಗವದ್ಗೀತೆ, ರಾಮಾಯಣ ಸೇರ್ಪಡೆ – ಸ್ವಾಮೀಜಿಗಳಿಗೆ ಜವಾಬ್ದಾರಿ ನೀಡಲು ಸರ್ಕಾರ ಚಿಂತನೆ

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಮಂಗಳೂರು ಆಟೋ ರಿಕ್ಷಾ ಬಾಂಬ್ ಸ್ಫೋಟ ಘಟನೆಯನ್ನು (Mangaluru Bomb Blast Case) ರಾಜ್ಯ ಪೊಲೀಸರು ಗಂಭೀರವಾಗಿ ಪರಿಗಣಿಸಿ ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಭಯೋತ್ಪಾದನೆ ಚಟುವಟಿಕೆಗಳನ್ನು ಆಮೂಲಗ್ರಹವಾಗಿ ತನಿಖೆ ಮಾಡಿ, ದ್ರೋಹಿಗಳನ್ನು ಮಟ್ಟ ಹಾಕಲು ಪೋಲಿಸರು ಶ್ರಮಿಸುತ್ತಿದ್ದಾರೆ. ರಾಷ್ಟ್ರೀಯ ತನಿಖಾ ದಳವೂ (NIA) ಇದಕ್ಕೆ ಸಹಕರಿಸುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಏರ್‌ಟೆಲ್‌ ಪ್ಯಾಕ್‌ ದರ ಏರಿಕೆ: ಶೀಘ್ರವೇ ಮೊಬೈಲ್‌ ರಿಚಾರ್ಜ್‌ ದುಬಾರಿ

    ಈವರೆಗಿನ ಮಾಹಿತಿ ಆಧರಿಸಿ, ರಾಜ್ಯ ಪೊಲೀಸರು ಉಗ್ರಗಾಮಿ ಚಟುವಟಿಕೆಗಳಿಗೆ ಸಹಕರಿಸಿದವರ ವಿರುದ್ಧ ತನಿಖೆ ತೀವ್ರಗೊಳಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾರೀಕ್‌ನಿಂದ ಇನ್ನೂ ಹೆಚ್ಚಿನ ಮಾಹಿತಿಗಳು ಹೊರಬರಬೇಕಿದೆ ಎಂದು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಶಿವರಾಜ್ ಕುಮಾರ್ ಅಭಿಮಾನಿಗಳೆಂದು ಹೇಳ್ಕೊಂಡು ನಿರ್ದೇಶಕರಿಗೆ ಬೆದರಿಕೆ: ದೂರು ದಾಖಲು

    ಶಿವರಾಜ್ ಕುಮಾರ್ ಅಭಿಮಾನಿಗಳೆಂದು ಹೇಳ್ಕೊಂಡು ನಿರ್ದೇಶಕರಿಗೆ ಬೆದರಿಕೆ: ದೂರು ದಾಖಲು

    ಬೆಂಗಳೂರು: ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅಭಿಮಾನಿಗಳ ಹೆಸರಲ್ಲಿ ನಿರ್ದೇಶಕ ಎಎಂಆರ್ ರಮೇಶ್‍ಗೆ ಜೀವ ಬೆದರಿಕೆ ಕರೆಗಳು ಬರುತ್ತಿದ್ದು, ಈ ಬಗ್ಗೆ ರಮೇಶ್ ನಗರ ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಗೆ ದೂರು ನೀಡಿದ್ದಾರೆ.

    ಶಿವರಾಜ್ ಕುಮಾರ್ ಅಭಿಮಾನಿಗಳು ಅಂತಾ ಹೇಳಿಕೊಂಡು ದೂರವಾಣಿ ಮತ್ತು ವಾಟ್ಸಪ್ ಮೂಲಕ ಬೆದರಿಕೆಗಳು ಬರುತ್ತಿವೆ. ಈ ಬೆದರಿಕೆಗಳು ಲೀಡರ್ ಟೈಟಲ್ ವಿವಾದದ ನಂತರ ಬರುತ್ತಿವೆ. ಅಲ್ಲದೇ ವಾಟ್ಸಪ್ ಗ್ರೂಪ್ ಮಾಡಿ ಅವಾಚ್ಯ ಪದಗಳಿಂದ ನಿಂದನೆ ಮಾಡುತ್ತಿದ್ದಾರೆ. ಈ ಬಗ್ಗೆ ವಾಣಿಜ್ಯ ಮಂಡಳಿಗೆ ದೂರು ನೀಡಲಾಗಿತ್ತು. ಆದ್ರೆ ಕ್ರಮ ಕೈಗೊಳ್ಳಲು ಚಲನಚಿತ್ರ ವಾಣಿಜ್ಯ ಮಂಡಳಿ ಹಿಂದೇಟು ಹಾಕುತ್ತಿದೆ ಅಂತಾ ದೂರಿನಲ್ಲಿ ಹೇಳಿದ್ದಾರೆ.

    ಇಂತಹವರ ಬಗ್ಗೆ ಕ್ರಮಕೈಗೊಂಡು ರಕ್ಷಣೆ ನೀಡುವಂತೆ ಮನವಿ ಮಾಡಿದ ನಿರ್ದೇಶಕ ರಮೇಶ್ ನಗರ ಪೊಲೀಸ್ ಆಯುಕ್ತರ ಜೊತೆ ಮನವಿ ಮಾಡಿದ್ದಾರೆ. ವಾಟ್ಸಪ್ ಮಾಡಿದ ಗ್ರೂಪಲ್ಲಿ ಶಿವಣ್ಣ ಫೋಟೋ ಡಿಪಿ ಹಾಕಿಕೊಂಡು ಕಿಡಿಕೇಡಿಗಳು ಬೆದರಿಕೆ ಹಾಕುತ್ತಿದ್ದಾರೆ ಅಂತಾ ಹೇಳಿದ್ದಾರೆ.

    ಇದನ್ನೂ ಓದಿ: ಲೀಡರ್ ಟೈಟಲ್ ಯಾರದ್ದು ಎನ್ನುವ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿತು