Tag: Pre-university Education Board

  • ಪ್ರಥಮ ಪಿಯುಸಿ ದಾಖಲಾತಿ ದಿನಾಂಕ ವಿಸ್ತರಣೆ

    ಪ್ರಥಮ ಪಿಯುಸಿ ದಾಖಲಾತಿ ದಿನಾಂಕ ವಿಸ್ತರಣೆ

    ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯು ಪ್ರಥಮ ಪಿಯುಸಿ ದಾಖಲಾತಿ ದಿನಾಂಕವನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.ಇದನ್ನೂ ಓದಿ: UGCET/NEET: ಮೊದಲ ಸುತ್ತಿನ ಅಣಕು ಸೀಟು ಹಂಚಿಕೆ ಫಲಿತಾಂಶ ಪ್ರಕಟ: ಕೆಇಎ

    ಪ್ರಥಮ ಪಿಯುಸಿ ದಾಖಲಾತಿ ದಿನಾಂಕವನ್ನು ದಂಡ ಶುಲ್ಕ ಮತ್ತು ವಿಶೇಷ ದಂಡ ಶುಲ್ಕದೊಂದಿಗೆ ಜು.31ರವರೆಗೆ ವಿಸ್ತರಣೆ ಮಾಡಲಾಗಿದೆ. ಈ ಮೂಲಕ ವಿದ್ಯಾರ್ಥಿಗಳು ದಂಡ ಶುಲ್ಕ 670 ರೂ. + ವಿಶೇಷ ದಂಡ ಶುಲ್ಕ 2,220 ರೂ. ಸೇರಿ ಒಟ್ಟು 2,890 ರೂ. ಪಾವತಿ ಮಾಡಿ ದಾಖಲಾಗಬಹುದು ಎಂದು ತಿಳಿಸಿದೆ.

    ಇತ್ತೀಚಿಗಷ್ಟೇ ಜು.23ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ 3ರ ಫಲಿತಾಂಶ ಪ್ರಕಟವಾಗಿತ್ತು. 2,093,74 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಈ ಪೈಕಿ 42,085 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಒಟ್ಟು 8,683,85 ವಿದ್ಯಾರ್ಥಿಗಳ ಪೈಕಿ 6,452,73 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಈ ಹಿನ್ನೆಲೆ ಪದವಿ ಪೂರ್ವ ಶಿಕ್ಷಣ ಇಲಾಖೆಯು ದಾಖಲಾತಿ ದಿನಾಂಕವನ್ನು ವಿಸ್ತರಣೆ ಮಾಡಿದೆ.ಇದನ್ನೂ ಓದಿ: ಕಾಶ್ಮೀರದಲ್ಲಿ ನೆಲಬಾಂಬ್ ಸ್ಫೋಟ – ಅಗ್ನಿವೀರ್ ಹುತಾತ್ಮ, ಇಬ್ಬರು ಸೈನಿಕರಿಗೆ ಗಾಯ

  • ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

    ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

    ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟವಾಗಿದ್ದು, ಸೆಪ್ಟೆಂಬರ್ 7ರಿಂದ 18ರ ವರೆಗೆ ಪರೀಕ್ಷೆ ನಡೆಯಲಿದೆ.

    ಪದವಿ ಪೂರ್ವ ಪರೀಕ್ಷಾ ಮಂಡಳಿ ಇಂದು ವೇಳಾಪಟ್ಟಿಯನ್ನು ಪ್ರಕಟಿಸಿದೆ. ಎರಡು ಅವಧಿಯಲ್ಲಿ ಪರೀಕ್ಷೆ ನಡೆಯಲಿದ್ದು, ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ಹಾಗೂ ಮಧ್ಯಾಹ್ನ 2.15ರಿಂದ 5.30ರ ವರೆಗೆ ಪರೀಕ್ಷೆ ನಡೆಯಲಿವೆ. ಸೆಪ್ಟೆಂಬರ್ 7 ರಂದು ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರ ವರೆಗೆ ಉರ್ದು, ಸಂಸ್ಕøತ, ಮಧ್ಯಾಹ್ನ 2.15ರಿಂದ 5.30ರ ವರೆಗೆ ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆ್ಯಂಡ್ ವೆಲ್‍ನೆಸ್, ಹೋಮ್ ಸೈನ್, ಸೆ.8ರಂದು ಬೆಳಗ್ಗೆ ಇತಿಹಾಸ, ಸಂಖ್ಯಾಶಾಸ್ತ್ರ, ಜೀವಶಾಸ್ತ್ರ, ಸೆ.9ರಂದು ಬೆಳಗ್ಗೆ ಹಿಂದಿ, ಮಧ್ಯಾಹ್ನ ತಮಿಳು, ತೆಲುಗು, ಮಳಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್ ಪರೀಕ್ಷೆಗಳು ನಡೆಯಲಿವೆ.

    ಸೆ.10ರಂದು ಬೆಳಗ್ಗೆ ಇಂಗ್ಲಿಷ್, ಸೆ.11ರಂದು ಐಚ್ಛಿಕ ಕನ್ನಡ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್, ಮಧ್ಯಾಹ್ನ ಕರ್ನಾಟಕ ಸಂಗೀತ, ಹಿಂದೂಸ್ಥಾನಿ ಸಂಗೀತ, ಭೂಗರ್ಭಶಾಸ್ತ್ರ, ಸೆ.12ರಂದು ಬೆಳಗ್ಗೆ ಅರ್ಥಶಾಸ್ತ್ರ, ಭೌತಶಾಸ್ತ್ರ, ಸೆ.14ರಂದು ಬೆಳಗ್ಗೆ ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ರಸಾಯನ ಶಾಸ್ತ್ರ, ಶಿಕ್ಷಣ ಶಾಸ್ತ್ರ, ಸೆ.15ರಂದು ಬೆಳಗ್ಗೆ ಕನ್ನಡ, ಸೆ.16ರಂದು ಬೆಳಗ್ಗೆ ರಾಜ್ಯಶಾಸ್ತ್ರ, ಬೇಸಿಕ್ ಮ್ಯಾಥ್ಸ್, ಸೆ.17ರಂದು ಬೆಳಗ್ಗೆ ಸಮಾಜಶಾಸ್ತ್ರ, ಲೆಕ್ಕಶಾಸ್ತ್ರ, ಗಣಿತ, ಸೆ.18ರಂದು ಬೆಳಗ್ಗೆ ಭೂಗೋಳಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.