Tag: Pre Wedding Photo Shoot

  • ಸರ್ಕಾರಿ ಆಸ್ಪತ್ರೆಯಲ್ಲಿ ಪ್ರೀ ವೆಡ್ಡಿಂಗ್ ಚಿತ್ರೀಕರಣ – ಹೊರಗುತ್ತಿಗೆ ವೈದ್ಯ ಕರ್ತವ್ಯದಿಂದ ವಜಾ

    ಸರ್ಕಾರಿ ಆಸ್ಪತ್ರೆಯಲ್ಲಿ ಪ್ರೀ ವೆಡ್ಡಿಂಗ್ ಚಿತ್ರೀಕರಣ – ಹೊರಗುತ್ತಿಗೆ ವೈದ್ಯ ಕರ್ತವ್ಯದಿಂದ ವಜಾ

    ಚಿತ್ರದುರ್ಗ: ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿನ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ಪ್ರೀ ವೆಡ್ಡಿಂಗ್ ಶೂಟ್ ಚಿತ್ರೀಕರಣ ಮಾಡಿಕೊಂಡಿದ್ದ ಹೊರಗುತ್ತಿಗೆ ವೈದ್ಯ ಡಾ. ಅಬಿಷೇಕ್ ಅವರನ್ನು ಕರ್ತವ್ಯದಿಂದ ವಜಾಗೊಳಿಸಿ ಚಿತ್ರದುರ್ಗ ಜಿಲ್ಲಾಧಿಕಾರಿ ವೆಂಕಟೇಶ್ ಟಿ. ಆದೇಶಿಸಿದ್ದಾರೆ.

    ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯ ಡಾ. ಅಬಿಷೇಕ್ ಅವರು ಭರಮಸಾಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿನ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ಕಳೆದ ಫೆ.7 ರಂದು ಪ್ರೀ ವೆಡ್ಡಿಂಗ್ ಶೂಟ್ ಮಾಡಿರುತ್ತಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ‌ವೈರಲ್ ಆಗಿತ್ತು. ಈ ಬಗ್ಗೆ ‘ಪಬ್ಲಿಕ್ ಟಿವಿ’ ವಿಸ್ತ್ರತ ವರದಿಯನ್ನು ಇಂದು (ಶುಕ್ರವಾರ) ಬಿತ್ತರಗೊಳಿಸಿತ್ತು. ಇದನ್ನೂ ಓದಿ: ರಾಜ್ಯದಲ್ಲಿ ವಾಲ್ಮೀಕಿ ವಿಶ್ವವಿದ್ಯಾಲಯ ಆಗಲೇಬೇಕು: ಜಿ.ಪರಮೇಶ್ವರ್

    ಇದನ್ನು ಗಮನಿಸಿದ ಚಿತ್ರದುರ್ಗ ಜಿಲ್ಲಾಧಿಕಾರಿ ವೆಂಕಟೇಶ್ ಅವರು ಈ ಕಾರ್ಯವು ನಿಯಮಬಾಹಿರವಾಗಿದ್ದು, ಗುತ್ತಿಗೆ ಆಧಾರದ ವೈದ್ಯರು ಕರ್ತವ್ಯ ಲೋಪವೆಸಗಿರುತ್ತಾರೆ. ಹೀಗಾಗಿ ಭರಮಸಾಗರ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳ ವರದಿಯನ್ವಯ ಡಾ. ಅಭಿಷೇಕ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕರ್ತವ್ಯದಿಂದ ವಜಾಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಟಿ. ಮಾಹಿತಿ ನೀಡಿದ್ದಾರೆ.

  • ಪ್ರೀ- ವೆಡ್ಡಿಂಗ್ ಫೋಟೋಶೂಟ್‌ನಲ್ಲಿ ಮಿಂಚಿದ ನಯನತಾರಾ ದಂಪತಿ

    ಪ್ರೀ- ವೆಡ್ಡಿಂಗ್ ಫೋಟೋಶೂಟ್‌ನಲ್ಲಿ ಮಿಂಚಿದ ನಯನತಾರಾ ದಂಪತಿ

    ಕಾಲಿವುಡ್‌ನ ಲೇಡಿ ಸೂಪರ್ ಸ್ಟಾರ್ ನಯನತಾರಾ ಮತ್ತೆ ಸುದ್ದಿಯಲ್ಲಿದ್ದಾರೆ. ಇತ್ತೀಚೆಗಷ್ಟೇ ಹಸಮಣೆ ಏರಿದ್ದ ನಟಿ ನಯನತಾರಾ ಮತ್ತು ವಿಘ್ನೇಶ್ ಶಿವನ್ ಹನಿಮೂನ್‌ಗೆ ವಿದೇಶಕ್ಕೆ ಹಾರಿದ್ದರು. ಲಾಂಗ್ ಗ್ಯಾಪ್ ತೆಗೆದುಕೊಳ್ಳದೇ ಬಾಲಿವುಡ್ ಸಿನಿಮಾದ ಚಿತ್ರೀಕರಣದಲ್ಲಿ ನಯನತಾರಾ ಪಾಲ್ಗೊಂಡು ಎಲ್ಲರಿಗೂ ಅಚ್ಚರಿ ಮೂಡಿಸಿದ್ದರು. ಇದೀಗ ಮುದ್ದಾದ ಚೆಂದದೊಂದು ಫೋಟೋಶೂಟ್ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

    ಜೂನ್ 9ರಂದು ಗುರುಹಿರಿಯರ ಸಮ್ಮುಖದಲ್ಲಿ ನಯನತಾರಾ ಮತ್ತು ವಿಘ್ನೇಶ್ ಶಿವನ್ ಹಸೆಮಣೆ ಏರಿದ್ದರು. ಬಳಿಕ ಮದುವೆಯ ಗ್ರ್ಯಾಂಡ್ ಲುಕ್ ಮೂಲಕ ಅಭಿಮಾನಿಗಳ ಗಮನ ಸೆಳೆದಿದ್ದರು. ಈಗ ಮದುವೆಗೂ ಮುನ್ನ ತೆಗೆದ ಪ್ರಿ ವೆಡ್ಡಿಂಗ್ ಫೋಟೋಶೂಟ್‌ನಿಂದ ಈ ಜೋಡಿ ಗಮನ ಸೆಳೆದಿದ್ದಾರೆ. ಈ ನಯನತಾರಾ ದಂಪತಿಯ ಪ್ರೀ ವೆಡ್ಡಿಂಗ್ ಫೋಟೋ ಮೂಲಕ ಸಖತ್ ವೈರಲ್ ಆಗುತ್ತಿದೆ. ಇದನ್ನೂ ಓದಿ:ಮಗನ ಜೊತೆ ಮೊದಲ ಬಾರಿಗೆ ರೀಲ್ಸ್ ಮಾಡಿದ ಸಂಜನಾ ಗಲ್ರಾನಿ

    ಬೀಚ್‌ನ ಬದಿಯಲ್ಲಿ ರೊಮ್ಯಾಂಟಿಕ್ ಆಗಿ ಕ್ಯಾಮೆರಾ ಕಣ್ಣಿಗೆ ನಯನತಾರಾ ಮತ್ತು ವಿಘ್ನೇಶ್ ಶಿವನ್ ಪೋಸ್ ನೀಡಿದ್ದಾರೆ. ಈ ಫೋಟೋಶೂಟ್ ಸಾಮಾಜಿಕ ಜಾಲತಾಣ ತುಂಬೆಲ್ಲಾ ವೈರಲ್ ಆಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಮಧ್ಯಪ್ರದೇಶದಲ್ಲಿ ಪ್ರೀ ವೆಡ್ಡಿಂಗ್ ಫೋಟೋಶೂಟ್ ನಿಷೇಧ

    ಮಧ್ಯಪ್ರದೇಶದಲ್ಲಿ ಪ್ರೀ ವೆಡ್ಡಿಂಗ್ ಫೋಟೋಶೂಟ್ ನಿಷೇಧ

    ಭೋಪಾಲ್: ಮಧ್ಯಪ್ರದೇಶದಲ್ಲಿ ಗುಜರಾತಿ, ಜೈನ್ ಮತ್ತು ಸಿಂಧಿ ಸಮುದಾಯದವರು ಪ್ರೀ ವೆಡ್ಡಿಂಗ್ ಫೋಟೋಶೂಟ್ ನಿಷೇಧ ಮಾಡಿದ್ದಾರೆ.

    ಭೋಪಾಲ್ ನಲ್ಲಿ ಗುಜರಾತಿ, ಜೈನ ಮತ್ತು ಸಿಂಧಿ ಸಮುದಾಯದ ಮುಖಂಡರು ಮದುವೆಗೆ ಮುಂಚೆಯೇ ವಧು ಮತ್ತು ವರ ಜೊತೆಯಲ್ಲಿ ಫೋಟೋ ತೆಗೆಸಿಕೊಳ್ಳುವುದು ನಮ್ಮ ಸಂಸ್ಕೃತಿಯಲ್ಲ. ಆದ್ದರಿಂದ ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಮಾಡಿಸಿದವರನ್ನು ಸಮುದಾಯದಿಂದ ಹೊರಹಾಕುತ್ತೇವೆ ಎಂದು ಬೆದರಿಕೆ ಹಾಕಿವೆ.

    ಸಮುದಾಯಗಳ ಈ ನಿರ್ಧಾರಕ್ಕೆ ಬೆಂಬಲ ಸೂಚಿಸಿರುವ ಮಧ್ಯಪ್ರದೇಶದ ಸಾರ್ವಜನಿಕ ಸಂಪರ್ಕ ಸಚಿವ ಪಿಸಿ ಶರ್ಮಾ, ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಎಂಬುದು ನಮ್ಮ ಸಂಸ್ಕೃತಿ ಅಲ್ಲ. ಇಲ್ಲಿನ ಜನರು ನಿಷೇಧಿಸಿರುವುದನ್ನು ಸಾಮಾಜಿಕ ದೃಷ್ಟಿಕೋನದಿಂದ ನಾನು ಒಳ್ಳೆಯದು ಎಂದು ನಂಬುತ್ತೇನೆ. ಜನರ ಹಿಂದಿನ ಸಂಸ್ಕೃತಿ ಮತ್ತು ಹಳೆಯ ಸಂಪ್ರದಾಯದ ಪ್ರಕಾರ ಮದುವೆಯಾದರೆ ವಿವಾಹ ಹೆಚ್ಚು ಯಶಸ್ವಿಯಾಗುತ್ತದೆ ಮತ್ತು ಸಂತೋಷದಾಯಕವಾಗಿ ಇರುತ್ತದೆ ಎಂದು ಹೇಳಿದ್ದಾರೆ.

    ಸಮಾಜದ ಈ ನಿರ್ಧಾರವನ್ನು ಸಮರ್ಥನೆ ಮಾಡಿಕೊಂಡಿರುವ ಗುಜರಾತಿ ಸಮುದಾಯದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂಜಯ್ ಪಾಟೀಲ್, ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಎಂಬುದು ಒಂದು ತಪ್ಪು ಕಲ್ಪನೆ. ಎಷ್ಟೋ ವಿವಾಹಗಳು ನಿಶ್ಚಿತಾರ್ಥ ಆದ ನಂತರ ಮುರಿದು ಬೀಳುತ್ತವೆ. ಆದ್ದರಿಂದ ಈ ರೀತಿಯ ಸಂಪ್ರದಾಯವನ್ನು ನಾವು ತಡೆಯಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

    ಈ ವಿಚಾರದ ಬಗ್ಗೆ ಭೋಪಾಲ್ ಜೈನ ಸಮಾಜದ ಅಧ್ಯಕ್ಷರಾದ ಪ್ರಮೋದ್ ಹಿಮಾಂಶು ಅವರು ಮಾತನಾಡಿ, ನಮ್ಮ ಸಮಾಜದ ಆಧ್ಯಾತ್ಮಿಕ ಗುರುಗಳು ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಅನ್ನು ಅಶ್ಲೀಲ ಎಂದು ಹೇಳಿದ ನಂತರ ನಾವು ನಮ್ಮ ಸಮಾಜದಲ್ಲಿ ಅದನ್ನು ನಿಷೇಧ ಮಾಡಿದ್ದೇವೆ ಎಂದು ಹೇಳಿದ್ದಾರೆ.

    ಫೋಟೋ ಶೂಟ್ ನಿಷೇಧಿಸಿದ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿರುವ ಸಿಂಧಿ ಸಮಾಜದ ಅಧ್ಯಕ್ಷ ಭಗವಾನ್ ದಾಸ್ ಇಸ್ರಾನಿ ಅವರು, ನಮ್ಮ ಸಮುದಾಯದಲ್ಲೂ ಕೂಡ ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಅನ್ನು ನಿಷೇಧ ಮಾಡಿದ್ದೇವೆ. ಈ ನಿಯಮವನ್ನು ಪಾಲಿಸುವಂತೆ ನಮ್ಮ ಸಮುದಾಯದ ಸದಸ್ಯರಿಗೆ ಈಗಾಗಲೇ ತಿಳಿಸಿದ್ದೇವೆ ಎಂದು ಹೇಳಿದ್ದಾರೆ.

    ಕಳೆದ ವರ್ಷ ಚತ್ತೀಸ್‍ಗಢದ ಸಿಂಧಿ ಮತ್ತು ಮಹೇಶ್ವರಿ ಸಮುದಾಯಗಳು ಇದೇ ರೀತಿಯಲ್ಲಿ ಮದುವೆಗೂ ಮುಂಚೆಯೇ ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಮಾಡಿಸಬಾರದು ಎಂದು ನಿಷೇಧ ಮಾಡಿದ್ದವು.