Tag: Preetham gowda

  • ಶ್ರೇಯಸ್ ಜೊತೆಗೆ ಹೊಳೆನರಸೀಪುರದ ಶ್ರೇಯಸ್ಸು ಕೂಡ ಅಡಗಿದೆ – ಪ್ರೀತಂ ಗೌಡ

    ಶ್ರೇಯಸ್ ಜೊತೆಗೆ ಹೊಳೆನರಸೀಪುರದ ಶ್ರೇಯಸ್ಸು ಕೂಡ ಅಡಗಿದೆ – ಪ್ರೀತಂ ಗೌಡ

    – ಹೆಚ್.ಡಿ.ರೇವಣ್ಣ ವಿರುದ್ಧ ಪರೋಕ್ಷ ವಾಗ್ದಾಳಿ

    ಹಾಸನ: ಶ್ರೇಯಸ್ ಅವರೊಂದಿಗೆ ಹೊಳೆನರಸೀಪುರದ (Holenarasipura) ಶ್ರೇಯಸ್ಸು ಕೂಡ ಅಡಗಿದೆ ಎಂದು ಮಾಜಿ ಶಾಸಕ ಪ್ರೀತಂ ಗೌಡ ಹೇಳಿದರು.

    ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಹಾಗೂ ಭುವನೇಶ್ವರಿ ರಥ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ (HD Revanna) ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಅವರು, ಶ್ರೇಯಸ್ ಅವರೊಂದಿಗೆ ಹೊಳೆನರಸೀಪುರದ ಶ್ರೇಯಸ್ಸು ಕೂಡ ಅಡಗಿದೆ. ಅದರ ಶ್ರೇಯಸ್ಸು ಶ್ರೇಯಸ್ ಪಟೇಲ್ ಅವರಿಗೆ ಸಲ್ಲುತ್ತದೆ. ನಿಮ್ಮನ್ನೆಲ್ಲಾ ನೋಡಿದ ಮೇಲೆ ಹೊಳೆನರಸೀಪುರಕ್ಕೆ ಸ್ವಾತಂತ್ರ‍್ಯ ಸಿಕ್ಕಿದೆ ಅನ್ನಿಸಿದೆ. 2024ರ ನಂತರ ವಾಸ್ತು, ದಿಕ್ಕು, ದಿಸೆ ಎಲ್ಲಾ ಬದಲಾಗಿದೆ ಎಂದು ಹೇಳಿದರು.ಇದನ್ನೂ ಓದಿ: ಬಿಜೆಪಿ ಅವಧಿಯಲ್ಲಿ 2,900 ಎಕ್ರೆಗೆ ವಕ್ಫ್‌ ನೋಟಿಸ್‌; ಬಿಎಸ್‌ವೈಗೆ ಮುಖಭಂಗ ಮಾಡಲು ಯತ್ನಾಳ್‌ ಹೋರಾಟ: ಪರಮೇಶ್ವರ್‌

    ಇಲ್ಲಿಯ ತನಕ ಯಾವುದೇ ಕಾರ್ಯಕ್ರಮ ನಡೆಯುವಾಗ ಯಾವುದೋ ಒಂದು ಮನೆಗೆ ಅಥವಾ ಒಂದು ತೋಟದಲ್ಲಿ ಲೈಟ್ ಇರುತ್ತಿತ್ತು. ಇಡೀ ಹೊಳೆನರಸೀಪುರದಲ್ಲಿ ಲೈಟ್ ಇರುವುದನ್ನು ನೋಡಿರಲಿಲ್ಲ. ಈಗ ಹೊಳೆನರಸೀಪುರ ಶ್ರೇಯಸ್ ಪಟೇಲ್ ಅವರ ತಾತನ ಕಾಲಕ್ಕೆ ಕೊಂಡ್ಯೊಯ್ದಿದೆ. ಪುಟ್ಟಸ್ವಾಮಿಗೌಡರನ್ನು ಈ ಸಂದರ್ಭದಲ್ಲಿ ನೆನೆಯುತ್ತೇನೆ ಎಂದರು.

    ರಾಜಕಾರಣ ಬರುತ್ತದೆ. ಹೋಗುತ್ತದೆ. ನಾನು ಒಂದು ಪಕ್ಷದ ಪ್ರಮುಖ ಹುದ್ದೆಯಲ್ಲಿದ್ದೇನೆ. ಶ್ರೇಯಸ್ ಪಟೇಲ್ ಬೇರೆ ಪಕ್ಷದಿಂದ ಸಂಸದರಾಗಿದ್ದಾರೆ. ಮಾನವೀಯತೆ ಎನ್ನುವುದು ಬಹಳ ಮುಖ್ಯವಾದ್ದದ್ದು. ಇದೇ ರೀತಿ ಮುಂದುವರಿದುಕೊಂಡು ಹೋಗಲಿ. ಹೊಳೆನರಸೀಪುರವನ್ನು ಮಾದರಿಯನ್ನಾಗಿ ಮಾಡೋಣ. ಎಲ್ಲಿಯ ತನಕ ಶ್ರೇಯಸ್ ಪಟೇಲ್ ಅವರಿಗೆ ಅಧಿಕಾರ ಕೊಡುತ್ತೀರೊ ನಾನು ಯಾವುದೇ ಪಕ್ಷದಲ್ಲಿರಲಿ ಇದೇ ತರ ಪ್ರತಿ ವರ್ಷ ಬರುತ್ತೇನೆ ಎಂದು ತಿಳಿಸಿದರು.ಇದನ್ನೂ ಓದಿ: ಓವರ್‌ಲೋಡ್‌ನಿಂದ ಕಬ್ಬು ತುಂಬಿದ್ದ ಟ್ರ್ಯಾಕ್ಟರ್‌ ಪಲ್ಟಿ – ಓರ್ವ ಸಾವು

  • Who Is That Preetham Gowda? ಎಂದ ಹೆಚ್‌ಡಿಕೆಗೆ ಪ್ರೀತಂ ಗೌಡ ಕೊಟ್ಟ ಉತ್ತರ ಏನು?

    Who Is That Preetham Gowda? ಎಂದ ಹೆಚ್‌ಡಿಕೆಗೆ ಪ್ರೀತಂ ಗೌಡ ಕೊಟ್ಟ ಉತ್ತರ ಏನು?

    ಹಾಸನ: Who Is That Preetham Gowda? ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿರುದ್ಧ ಪ್ರಶ್ನೆ ಮಾಡಿದ್ದ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅವರ ಪ್ರಶ್ನೆಗೆ ಪ್ರೀತಂ ಗೌಡ (Preetham Gowda) ಉತ್ತರ ಕೊಟ್ಟಿದ್ದಾರೆ.

    ಹಾಸನದಲ್ಲಿ (Hassan) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರೀತಂಗೌಡ ಯಾರು ಎಂಬ ಪ್ರಶ್ನೆಗೆ ನಮ್ಮ ನಾಯಕರು ಉತ್ತರ ಕೊಟ್ಟಿದ್ದಾರೆ. ಪ್ರೀತಂ ಗೌಡ ಓರ್ವ ಸಾಮಾನ್ಯ ಕಾರ್ಯಕರ್ತ ಅನ್ನೋದನ್ನ ಅವರ ಗಮನಕ್ಕೆ ತಂದಿದ್ದಾರೆ. ಹಾಗಾಗಿ ನಾನು ಅದರ ಬಗ್ಗೆ ಹೆಚ್ಚೇನು ಹೇಳುವುದಿಲ್ಲ ಎಂದು ಉತ್ತರಿಸಿದ್ದಾರೆ.

    ಕೆಂಡಾಮಂಡಲವಾಗಿದ್ದ ಹೆಚ್‌ಡಿಕೆ:
    ಹಾಸನದ ಮಾಜಿ ಶಾಸಕ ಪ್ರೀತಂಗೌಡರನ್ನು ಪಾದಯಾತ್ರೆ ಸಭೆಗೆ ಕರೆಸಿದ್ದ ಬಗ್ಗೆ ಇತ್ತೀಚೆಗೆ ಹೆಚ್‌ಡಿ ಕುಮಾರಸ್ವಾಮಿ ಮಾತನಾಡಿದ್ದರು. ದೇವೇಗೌಡರ (Devegowda) ಕುಟುಂಬಕ್ಕೆ ವಿಷ ಇಟ್ಟವನೊಂದಿಗೆ ವೇದಿಕೆ ಹಂಚಿಕೊಳ್ಳಲು ಸಾಧ್ಯವೇ? ಯಾರದು ಪ್ರೀತಂ ಗೌಡ? ದೇವೇಗೌಡರ ಕುಟುಂಬವನ್ನು ನಾಶ ಮಾಡಲು ಹೊರಟವನನ್ನ ಸಭೆಯಲ್ಲಿ ಕೂರಿಸಿಕೊಂಡು, ನನ್ನನ್ನ ಸಭೆಗೆ ಕರೆಯುತ್ತೀರಾ? ಪೆನ್ ಡ್ರೈವ್ ಗಳನ್ನು ಹಂಚಿವರು ಯಾರು ಎಂದು ಗೊತ್ತಿಲ್ಲವೇ? ಚುನಾವಣಾ ಮೈತ್ರಿಯೇ ಬೇರೆ. ರಾಜಕೀಯವೇ ಬೇರೆ. ಸಹಿಸಿಕೊಳ್ಳೋದಕ್ಕೆ ಒಂದು ಮಿತಿಯಿದೆ ಎಂದು ಕಿಡಿಕಾರಿದ್ದರು.

    ಸುದ್ದಿಗೋಷ್ಠಿಯಲ್ಲಿ ಮುಂದುವರಿದು ಮಾತನಾಡಿದ ಪ್ರೀತಂ ಗೌಡ, ಮೈತ್ರಿ ಧರ್ಮ ಪಾಲನೆ ಮಾಡುಬೇಕು ಅನ್ನೋದು ರಾಷ್ಟ್ರೀಯ, ರಾಜ್ಯ ನಾಯಕರ ಸದುದ್ದೇಶ. ಅಧಿಕಾರ ಸಮಬಲವಾಗಿ ಹಂಚಿಕೆಯಾಗಬೇಕು. ಮೈತ್ರಿ ಧರ್ಮವನ್ನು ಎಲ್ಲರೂ ಪಾಲನೆ ಮಾಡಬೇಕು. ಎಲ್ಲಾ ಸದಸ್ಯರ ಅಭಿಪ್ರಾಯದೊಂದಿಗೆ ಪಾಲನೆ ಮಾಡಬೇಕು. ಎರಡು ಪಕ್ಷಕ್ಕೆ ಬಹುಮತ ಇಲ್ಲದಿರುವುದರಿಂದ ಅಧಿಕಾರ ಹಂಚಿಕೆಯಾಗಬೇಕು. ಕಾರ್ಯಕರ್ತರ ಚುನಾವಣೆ, ವೈಯಕ್ತಿಕ ಪ್ರತಿಷ್ಠೆಗೆ ಆಸ್ಪದ ಕೊಡಬಾರದು ಎಂದು ಹೇಳಿದ್ದಾರೆ.

    ಮೈತ್ರಿ ಆಗಿರುವುದು ರಾಷ್ಟ್ರೀಯ ಮಟ್ಟದಲ್ಲಿ, ಅದನ್ನು ಮುಂದುವರಿಸಿಕೊಂಡು ಹೋಗುತ್ತೇವೆ. ಅವರಿಗೂ ಕೂಡ ಬದ್ಧತೆ ಇರಬೇಕು. ರಾಷ್ಟ್ರೀಯ ಅಧ್ಯಕ್ಷರೊಂದಿಗೆ ಆಗಿರುವ ಮೈತ್ರಿ, ಇದರಲ್ಲಿ ಯಾವುದೇ ಗೊಂದಲ ಬೇಡ. ಹಾಸನ ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಮೈತ್ರಿ ಧರ್ಮ ಪಾಲಿಸಲಾಗುವುದು. ಅಧಿಕಾರ ಸಮಾನಾಗಿ ಹಂಚಿಕೆಯಾಗಲಿದೆ. ಹಾಸನ ನಗರಸಭೆಯಲ್ಲಿ ಮೊದಲ ಹತ್ತು ತಿಂಗಳು ಬಿಜೆಪಿ ಅಧಿಕಾರ ಕೊಡಬೇಕು ಎನ್ನುವ ಭಾವನೆ ಇದೆ. ಅದನ್ನು ಬಿಜೆಪಿ ಜಿಲ್ಲಾಧ್ಯಕ್ಷರು ಮಾತನಾಡಲಿದ್ದಾರೆ ಎಂದು ತಿಳಿಸಿದ್ದಾರೆ.

    ನನ್ನಿಂದ ತಪ್ಪಾಗಬಾರದು ಅಂತ ಸಹಮತ ನೀಡುತ್ತಿದ್ದೇನೆ:
    ಕಳೆದ ಲೋಕಸಭಾ ಚುನಾವಣೆಯಲ್ಲಿ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗೆ ಕಡಿಮೆ ಮತಗಳು ಬಂದ ವಿಚಾರಕ್ಕೆ ಪ್ರತಿಕ್ರಿಯಿಸಿ, ವಿಧಾನ ಪರಿಷತ್ ಚುನಾವಣೆ ಆಯ್ತು. ವಿವೇಕಾನಂದ ಅವರು ನಮ್ಮ ಮನೆಗೆ ಭೇಟಿ ನೀಡಿ ಸಹಕಾರ ಕೇಳಿದ್ರು. ಕೋರ್ ಕಮಿಟಿ ಅಧ್ಯಕ್ಷರಾದ ಜಿ.ಟಿ ದೇವೇಗೌಡರು ಫೋನ್ ಮಾಡಿದ್ರು. ನಮ್ಮ ರಾಜ್ಯಾಧ್ಯಕ್ಷರ ಸೂಚನೆಯು ಇತ್ತು. ಪ್ರಾಮಾಣಿಕವಾಗಿ ವಿವೇಕಾನಂದರ ಗೆಲುವಿಗೆ ಕೆಲಸ ಮಾಡಿದ್ರು. ಆದ್ರೆ ಇದು ಕಾರ್ಯಕರ್ತರ ಚುನಾವಣೆ, ವೈಯುಕ್ತಿಕ ಪ್ರತಿಷ್ಠಿಗೆ ಆಸ್ಪದ ಕೊಡಬಾರದು. ಮುಂಬರುವ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಅಧಿಕಾರ ಹಂಚಿಕೆಯಾಗಬೇಕು. ನನ್ನಿಂದ ಯಾವುದೇ ತರಹದ ತಪ್ಪುಗಳು ಆಗಬಾರದೆಂದು ಸಹಮತ ನೀಡುತ್ತಿದ್ದೇನೆ ಎಂದಿದ್ದಾರೆ.

    ನನ್ನಿಂದ ಯಾವುದೇ ರೀತಿಯ ಚಿಕ್ಕ ಲೋಪವಾಗಬಾರದು. ಸಾಂದರ್ಭಿಕ ಸಮಯದಲ್ಲಿ ಕೆಲವು ಸಾಂದರ್ಭಿಕ ಮತಗಳನ್ನು ಪಡೆದು ಹಾಸನ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಸಾಂದರ್ಭಿಕ ಮತಗಳನ್ನು ಹಿಡಿದಿಟ್ಟುಕೊಳ್ಳುವಲ್ಲಿ ಸಾಂದರ್ಭಿಕ ಶಾಸಕರು ವಿಫಲರಾಗಿದ್ದಾರೆ. ಅವರಿಗೆ ಯಾವ ಸಂದರ್ಭದಲ್ಲಿ ಯಾರು ವೋಟು ಹಾಕಿದ್ರು ಅಂತ ಎಲ್ಲರಿಗೂ ಗೊತ್ತಿದೆ. ಆ ವೋಟುಗಳನ್ನು ಅವರು ಹಿಡಿದು ಇಟ್ಟುಕೊಳ್ಳಬೇಕಿತ್ತು. ಸಾಂದರ್ಭಿಕ ಮತಗಳು ಗಟ್ಟಿ ಇಲ್ಲದ ಸಂದರ್ಭದಲ್ಲಿ ಬೇರೆ ಬೇರೆ ಪಕ್ಷಗಳಿಗೆ ಹೋಗುತ್ತೆ. ಸಾಂದರ್ಭಿಕ ಸಂದರ್ಭದಲ್ಲಿ ಸಾಂಪ್ರದಾಯಿಕವಾಗಿ ಚುನಾಯಿತರಾದವರಿಗೆ ಅವರ ಶಕ್ತಿ ಈ ಚುನಾವಣೆಯಲ್ಲಿ ಗೊತ್ತಾಗಿದೆ. ಶಾಸಕರು 84 ಸಾವಿರ ಮತಗಳನ್ನು ಪಡೆದಿದ್ದರು. ಲೋಕಸಭಾ ಚುನಾವಣೆಯಲ್ಲಿ 68 ಸಾವಿರ ಮತಗಳು ಬಂದಿವೆ. ಮೈತ್ರಿ ಧರ್ಮ ಪಾಲನೆ ಮಾಡಿದ್ದಕ್ಕೆ 68 ಸಾವಿರ ಮತಗಳು ಬಂದಿವೆ. ಶ್ರಮಪಟ್ಟು ಮತಗಳಿಸಿರುವುದು ಗಟ್ಟಿಯಾಗಿರುತ್ತೆ. ಇದರಿಂದ ನಗರಸಭೆ ಚುನಾವಣೆಯ ಮೈತ್ರಿ ಅನಿವಾರ್ಯತೆ ಏನು ಎಂಬುದು ಗೊತ್ತಾಗುತ್ತೆ ಎಂದು ತಿಳಿಸಿದ್ದಾರೆ.

    ಇನ್ನೂ ಪಾದಯಾತ್ರೆಯಲ್ಲಿ ಕಡಗಣನೆ ವಿಚಾರ ಕುರಿತು ಮಾತನಾಡಿ, ಪಾದಯಾತ್ರೆಯಲ್ಲಿ ಎಲ್ಲಾ ಕಡೆ ಕಾಣಿಸಿಕೊಂಡಿದೆ. ಅದಕ್ಕೆ ಸೂಕ್ತ ಸಮಯದಲ್ಲಿ ಸೂಕ್ತವಾದ ಉತ್ತರ ಸಿಗುತ್ತೆ. ನನ್ನ ರಾಜಕಾರಣ ಲಾಂಗ್ ಟರ್ಮ್. ನಮ್ಮ ಪಕ್ಷದ ಹಿರಿಯರು ಮಾರ್ಗದರ್ಶನ ಕೊಟ್ಟಿದ್ದಾರೆ. ನಮ್ಮ ಮನೆಯ ಹಿರಿಯರು ಬುದ್ಧಿ ಮಾತು ಹೇಳ್ತಾರೆ. ಅದನ್ನು ಆಶೀರ್ವಾದ ಅಂತ ತಗೋತಿನಿ. ನನ್ನದು ಬಹಳ ದೀರ್ಘವಾದ ರಾಜಕಾರಣ. ಸಾಂದರ್ಭಿಕವಾಗಿ ನಡೆಯುವ ಘಟನೆಗಳಿಗೆ, ಸಾಂದರ್ಭಿಕವಾಗಿ ದೃತಿಗೆಡುವ ಅವಶ್ಯಕತೆ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.

  • ಬಿಜೆಪಿ ಪಾದಯಾತ್ರೆ – ಭಾಗಿಯಾಗಲು ಷರತ್ತು ವಿಧಿಸಿದ ಹೆಚ್‌ಡಿಕೆ

    ಬಿಜೆಪಿ ಪಾದಯಾತ್ರೆ – ಭಾಗಿಯಾಗಲು ಷರತ್ತು ವಿಧಿಸಿದ ಹೆಚ್‌ಡಿಕೆ

    ನವದೆಹಲಿ: ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ಬಿಜೆಪಿ ಬೆಂಗಳೂರಿನಿಂದ ಮೈಸೂರಿಗೆ ನಡೆಸಲು ಮುಂದಾಗಿರುವ ಪಾದಯಾತ್ರೆಗೆ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಷರತ್ತು ಹಾಕಿರುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

    ಹಾಸನದ ಮಾಜಿ ಬಿಜೆಪಿ ಶಾಸಕ ಪ್ರೀತಂ ಗೌಡ (Preetham Gowda) ವಿರುದ್ಧ ಮಂಗಳವಾರ ಕಿಡಿ ಕಾರಿದ್ದ ಹೆಚ್‌ಡಿ ಕುಮಾರಸ್ವಾಮಿ ಪಾದಯಾತ್ರೆಗೆ ಜೆಡಿಎಸ್‌ (JDS) ಬೆಂಬಲ ಇಲ್ಲ ಎಂದು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು.

    ಬಹಿರಂಗ ಹೇಳಿಕೆ ನೀಡುವ ಮೂಲಕ ರಾಜ್ಯದ-ಬಿಜೆಪಿ ಜೆಡಿಎಸ್‌ ಮೈತ್ರಿಗೆ ಬಗ್ಗೆ ಪ್ರಶ್ನೆಗಳು ಎದ್ದ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್‌ ಚುರುಕಾಗಿದೆ. ಇದನ್ನೂ ಓದಿ: ದರ್ಶನ್‌ಗೆ ಜೈಲೇ ಗತಿ – ಆಗಸ್ಟ್‌ 14ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

     

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಮತ್ತು ಕೇಂದ್ರ ಸಚಿವ ಜೆಪಿ ನಡ್ಡಾ (JP Nadda) ಅವರು ದೂರವಾಣಿ ಮೂಲಕ ಹೆಚ್‌ಡಿಕೆ ಜೊತೆ ಮಾತನಾಡಿ ಪಾದಯಾತ್ರೆಯಲ್ಲಿ ಭಾಗಿಯಾಗುವಂತೆ ಮನವಿ ಮಾಡಿದ್ದಾರೆ. ಈ ವೇಳೆ ಪ್ರೀತಂಗೌಡ ಪಾದಯಾತ್ರೆಗೆ ಬಾರದೇ ಇದ್ದರೆ ನಾನು ಭಾಗಿಯಾಗುತ್ತೇನೆ ಎಂದು ಷರತ್ತು ವಿಧಿಸಿದ್ದಾರೆ. ಇದನ್ನೂ ಓದಿ: ಮುಡಾ ಹಗರಣ; ಸಿಎಂ ಪರವಾಗಿ ಸಂಪುಟ ನಿರ್ಣಯ

    ಮಂಗಳವಾರ ಹೆಚ್‌ಡಿಕೆ ಹೇಳಿದ್ದೇನು?
    ದೆಹಲಿಯಲ್ಲಿ ಮಾಧ್ಯಮಗಳ ಜತೆ ಮಾತನಾಡುತ್ತಾ ಖಾರವಾಗಿ ಪ್ರತಿಕ್ರಿಯಿಸಿದ ಹೆಚ್‌ಡಿಕೆ, ದೇವೇಗೌಡರ (Devegowda) ಕುಟುಂಬವನ್ನು ನಾಶ ಮಾಡಲು ಹೊರಟ ಪ್ರೀತಂಗೌಡನನ್ನು ಸಭೆಯಲ್ಲಿ ಕೂರಿಸಿಕೊಂಡು, ನನ್ನನ್ನ ಸಭೆಗೆ ಕರೆಯುತ್ತೀರಾ? ಪೆನ್ ಡ್ರೈವ್ ಗಳನ್ನು ಹಂಚಿವರು ಯಾರು ಎಂದು ಗೊತ್ತಿಲ್ಲವೇ? ಚುನಾವಣಾ ಮೈತ್ರಿಯೇ ಬೇರೆ. ರಾಜಕೀಯವೇ ಬೇರೆ ಎಂದು ಕಿಡಿಕಾರಿದರು.

     

    ಈ ಪ್ರೀತಂಗೌಡ ಯಾರು? ಹಾಸನದಲ್ಲಿ ಹಾದಿಬೀದಿಯಲ್ಲಿ ಪೆನ್ ಡ್ರೈವ್‌ಗಳನ್ನು ಹಂಚಿದವರು ಯಾರೆನ್ನುವುದು ಗೊತ್ತಿದೆ. ದೇವೇಗೌಡರ ಕುಟುಂಬಕ್ಕೆ ವಿಷ ಇಟ್ಟುವನು ಈ ವ್ಯಕ್ತಿ. ಅಂತಹ ವ್ಯಕ್ತಿಯ ಜತೆಯಲ್ಲಿ ನಾವು ವೇದಿಕೆ ಮೇಲೆ ಕೂರಲು ಸಾಧ್ಯವೇ ಇಲ್ಲವಿಲ್ಲ ಎಂದು ಹೇಳುವ ಮೂಲಕ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

  • ದೇವೇಗೌಡರ ಕುಟುಂಬಕ್ಕೆ ವಿಷ ಇಟ್ಟವನ ಜತೆ ವೇದಿಕೆ ಹಂಚಿಕೊಳ್ಳಲು ಸಾಧ್ಯವೇ?: ಕುಮಾರಸ್ವಾಮಿ ಕಿಡಿ

    ದೇವೇಗೌಡರ ಕುಟುಂಬಕ್ಕೆ ವಿಷ ಇಟ್ಟವನ ಜತೆ ವೇದಿಕೆ ಹಂಚಿಕೊಳ್ಳಲು ಸಾಧ್ಯವೇ?: ಕುಮಾರಸ್ವಾಮಿ ಕಿಡಿ

    – ಯಾರ್ರೀ ಪ್ರೀತಂ ಗೌಡ?
    – ವಿಶ್ವಾಸಕ್ಕೆ ತೆಗೆದುಕೊಳ್ಳದ ಕಾರಣ ಪಾದಯಾತ್ರೆಗೆ ಬೆಂಬಲವಿಲ್ಲ

    ನವದೆಹಲಿ: ಹಾಸನದ ಮಾಜಿ ಶಾಸಕ ಪ್ರೀತಂಗೌಡರನ್ನು (Preetham Gowda) ಪಾದಯಾತ್ರೆ ಸಭೆಗೆ ಕರೆಸಿದ್ದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕೇಂದ್ರ ಸಚಿವರು, ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ದೇವೇಗೌಡರ (Devegowda) ಕುಟುಂಬಕ್ಕೆ ವಿಷ ಇಟ್ಟವನೊಂದಿಗೆ ವೇದಿಕೆ ಹಂಚಿಕೊಳ್ಳಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

    ದೆಹಲಿಯಲ್ಲಿ ಮಾಧ್ಯಮಗಳ ಜತೆ ಮಾತನಾಡುತ್ತಾ ಖಾರವಾಗಿ ಪ್ರತಿಕ್ರಿಯಿಸಿದ ಅವರು, ದೇವೇಗೌಡರ ಕುಟುಂಬವನ್ನು ನಾಶ ಮಾಡಲು ಹೊರಟ ಪ್ರೀತಂಗೌಡನನ್ನು ಸಭೆಯಲ್ಲಿ ಕೂರಿಸಿಕೊಂಡು, ನನ್ನನ್ನ ಸಭೆಗೆ ಕರೆಯುತ್ತೀರಾ? ಪೆನ್ ಡ್ರೈವ್ ಗಳನ್ನು ಹಂಚಿವರು ಯಾರು ಎಂದು ಗೊತ್ತಿಲ್ಲವೇ? ಚುನಾವಣಾ ಮೈತ್ರಿಯೇ ಬೇರೆ. ರಾಜಕೀಯವೇ ಬೇರೆ ಎಂದು ಕಿಡಿಕಾರಿದರು.

     

    ಪಾದಯಾತ್ರೆಯಲ್ಲಿ ಭಾಗಿಯಾಗಬಾರದು ಎಂದು ಜೆ‌.ಟಿ.ದೇವೇಗೌಡರ ಅಧ್ಯಕ್ಷತೆಯ ಕೋರ್ ಕಮಿಟಿ ಬೆಂಗಳೂರಿನಲ್ಲಿ ಮಂಗಳವಾರ ತೀರ್ಮಾನ ಮಾಡಿದೆ. ಬಿಜೆಪಿ ನಾಯಕರು ಪಾದಯಾತ್ರೆ ಮಾಡಬೇಕು ಎಂದು ನಿರ್ಧಾರ ಕೈಗೊಂಡು ಸಿದ್ಧತೆ ಮಾಡುತ್ತಿದ್ದಾರೆ. ಆದರೆ, ಪಾದಯಾತ್ರೆಗೆ ಇದು ಸೂಕ್ತ ಸಂದರ್ಭವಲ್ಲ ಎನ್ನುವ ಕಾರಣಕ್ಕೆ ನಾವು ಈ ಪದಯತ್ರೆಯಿಂದ ಹಿಂದೆ ಸರಿದಿದ್ದೇವೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

    ಇಡೀ ಮಳೆ, ನೆರೆ, ಭೂ ಕುಸಿತ, ಬೆಳೆನಾಶದಿಂದ ತತ್ತರಿಸಿದೆ. ಇಂತಹ ಸಂಕಷ್ಟ ಪರಿಸ್ಥಿತಿಯಲ್ಲಿ ಪಾದಯಾತ್ರೆ ಮಾಡಿದರೆ ಜನರಿಂದ ಟೀಕೆಗಳು ಬರುವ ಸಾಧ್ಯತೆ ಇದೆ. ಇದೇ ಕಾರಣದಿಂದ ನಾವು ಪಾದಯಾತ್ರೆಯಿಂದ ಹಿಂದೆ ಸರಿದಿದ್ದೇವೆ ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

    ಈ ಪಾದಯಾತ್ರೆಯಿಂದ ರಾಜ್ಯದ ಜನರಿಗೆ ಆಗುವ ಲಾಭವಾದರೂ ಏನು? ಇಲ್ಲಿ ಕಾನೂನು ಹೋರಾಟ ಮಾಡುವುದು ಮುಖ್ಯ. ಕೇವಲ ರಾಜಕೀಯವೇ ನಮಗೆ ಇಲ್ಲಿ ಮುಖ್ಯವಲ್ಲ. ಹೀಗಾಗಿ ನಾವು ಪಾದಯಾತ್ರೆಗೆ ನೈತಿಕ ಬೆಂಬಲವನ್ನೂ ನೀಡುವುದಿಲ್ಲ. ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದಾಗ ಯಾಕೆ ಬೆಂಬಲ ಕೊಡಬೇಕು? ಬೆಂಗಳೂರಿನಿಂದ ಮೈಸೂರುವರೆಗೂ ನಮ್ಮ ಪಕ್ಷಕ್ಕೆ ಶಕ್ತಿ ಇದೆ. ನಮ್ಮನ್ನೇ ಪರಿಗಣಿಸಿದಿದ್ದರೆ ಹೇಗೆ ಎಂದು ಕೇಂದ್ರ ಸಚಿವರು ಬೇಸರ ವ್ಯಕ್ತಪಡಿಸಿದರು.

     

    ಈ ವಿಜಯದಲ್ಲಿ ನನ್ನ ಮನಸ್ಸಿಗೆ ನೋವಾಗಿದೆ. ಯಾವ ಕಾರಣಕ್ಕಾಗಿ ನಾವು ಪಾದಯಾತ್ರೆಗೆ ಬೆಂಬಲ ಕೊಡಬೇಕು ಎನ್ನುವುದು ಪ್ರಶ್ನೆ. ಈ ಪ್ರೀತಂಗೌಡ ಯಾರು? ಹಾಸನದಲ್ಲಿ ಹಾದಿಬೀದಿಯಲ್ಲಿ ಪೆನ್ ಡ್ರೈವುಗಳನ್ನು ಹಂಚಿದವರು ಯಾರೆನ್ನುವುದು ಗೊತ್ತಿದೆ. ದೇವೇಗೌಡರ ಕುಟುಂಬಕ್ಕೆ ವಿಷ ಇಟ್ಟುವನು ಈ ವ್ಯಕ್ತಿ. ಅಂತಹ ವ್ಯಕ್ತಿಯ ಜತೆಯಲ್ಲಿ ನಾವು ವೇದಿಕೆ ಮೇಲೆ ಕೂರಲು ಸಾಧ್ಯವೇ ಇಲ್ಲವಿಲ್ಲ ಎಂದು ಹೇಳುವ ಮೂಲಕ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

    ಕೋರ್ ಕಮಿಟಿ ಸಭೆಯಲ್ಲಿ ಪಾದಯಾತ್ರೆ ಬಗ್ಗೆ ನಮ್ಮ ನಾಯಕರು ವಿಸ್ತೃತವಾಗಿ ಚರ್ಚೆ ನಡೆಸಿದ್ದಾರೆ. ಎಲ್ಲರ ಅಭಿಪ್ರಾಯವೂ ಪಾದಯಾತ್ರೆ ಸದ್ಯಕ್ಕೆ ಬೇಡ, ಸ್ವಲ್ಪ ದಿನದ ನಂತರ ಮಾಡೋಣ ಎನ್ನುವುದೇ ಆಗಿದೆ. ಕೊಡಗು ಜಿಲ್ಲೆಯ ಪಕ್ಕದಲ್ಲಿಯೇ ಇರುವ ಕೇರಳದ ವೈನಾಡಿನಲ್ಲಿ ಭಾರೀ ಭೂ ಕುಸಿತ ಉಂಟಾಗಿ ನೂರಾರು ಜನರು ಸಾವನ್ನಪ್ಪಿದ್ದಾರೆ. ಇನ್ನೂ ಅನೇಕರು ಕಣ್ಮರೆಯಾಗಿದ್ದಾರೆ. ನಮ್ಮ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ರೆಡ್ ಅರ್ಲಟ್ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ನೆರೆ, ಭೂ ಕುಸಿತ ನಿರಂತರವಾಗಿದೆ. ಹೀಗಾಗಿ ಇಂಥ ಪರಿಸ್ಥಿತಿಯಲ್ಲಿ ಪಾದಯಾತ್ರೆ ಬೇಡ ಎನ್ನುವುದು ನಮ್ಮ ಪಕ್ಷದ ಅಭಿಪ್ರಾಯವಾಗಿದೆ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

    ಬಿಡದಿಯಿಂದ ಮೈಸೂರುವರೆಗೆ ಕೃಷಿ ಚಟುವಟಿಕೆಗಳು ಆರಂಭವಾಗಿವೆ. ಮಂಡ್ಯ, ಮೈಸೂರು ಭತ್ತದ ನಾಟಿ ಶುರುವಾಗಿದೆ. ಬಿಜೆಪಿ ನಾಯಕರು ಪೂರ್ವ ಸಿದ್ದತೆ ಮಾಡಿಕೊಂಡಿದ್ದರು. ಎಲ್ಲವನ್ನೂ ಅಂತಿಮಗೊಳಿಸಿದ ನಂತರ ನಮಗೂ ಮಾಹಿತಿ ಇರಲಿ ಎಂದು ಸಭೆಗೆ ಕರೆದು ಹೇಳಿದ್ದಾರಷ್ಟೇ. ಇದು ಸೂಕ್ತ ಸಂದರ್ಭ ಅಲ್ಲ ಹಾಗಾಗಿ ಹಿಂದೇ ಸರಿದ್ದೇವೆ. ಜನಸಮಾನ್ಯರ ಭಾವನೆ ಮುಖ್ಯ. ಇದಕ್ಕೆ ನಮ್ಮ ನೈತಿಕ ಬೆಂಬಲವೂ ಇಲ್ಲ ಎಂದು ಅವರು ಹೇಳಿದರು.

  • ಪ್ರಜ್ವಲ್‌ ರೇವಣ್ಣ ಪೆನ್‌ ಡ್ರೈವ್‌ ಹಂಚಿಕೆ ಕೇಸ್‌- ಪ್ರೀತಂ ಗೌಡಗೆ ಬಿಗ್‌ ರಿಲೀಫ್‌

    ಪ್ರಜ್ವಲ್‌ ರೇವಣ್ಣ ಪೆನ್‌ ಡ್ರೈವ್‌ ಹಂಚಿಕೆ ಕೇಸ್‌- ಪ್ರೀತಂ ಗೌಡಗೆ ಬಿಗ್‌ ರಿಲೀಫ್‌

    ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna) ಪೆನ್‌ ಡ್ರೈವ್‌ ಹಂಚಿಕೆ ಪ್ರಕರಣದಲ್ಲಿ ಹಾಸನದ ಮಾಜಿ ಬಿಜೆಪಿ ಶಾಸಕ ಪ್ರೀತಂ ಗೌಡಗೆ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್‌ ಸಿಕ್ಕಿದೆ.

    ಪ್ರಕರಣದಲ್ಲಿ ಪ್ರೀತಂ ಗೌಡರನ್ನು (Preetham Gowda) ಬಂಧಿಸದಂತೆ ಕೋರ್ಟ್‌ ಆದೇಶ ನೀಡಿ ವಿಶೇಷ ತನಿಖಾ ತಂಡದ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

    ಈ ಪ್ರಕರಣದಲ್ಲಿ ಸಂತ್ರಸ್ತೆಯ ವಿಡಿಯೋ ಹಂಚಿಕೆ ಆರೋಪದಲ್ಲಿ ಶಾಸಕ ಪ್ರೀತಂ ಗೌಡ, ಸೇರಿದಂತೆ ಇತರ ಮೂವರ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಪ್ರೀತಂ ಗೌಡ ವಿರುದ್ಧ ಪೆನ್‌ಡ್ರೈವ್ (Pen Drive) ಹಂಚಿಕೆ ಆರೋಪ ಕೇಳಿ ಬಂದಿತ್ತು. ಇದಕ್ಕೆ ಪೂರಕ ಎಂಬಂತೆ ಅವರ ಇಬ್ಬರ ಆಪ್ತರನ್ನು ಎಸ್‌ಐಟಿ ಬಂಧಿಸಿತ್ತು. ಎಸ್‌ಐಟಿ ತನ್ನನ್ನು ಬಂಧಿಸದಂತೆ ಪ್ರೀತಂ ಗೌಡ ಹೈಕೋರ್ಟ್‌ ಮೊರೆ ಹೋಗಿದ್ದರು.

  • ಯಾವುದೇ ಕ್ಷಣದಲ್ಲಾದ್ರೂ ಪ್ರೀತಂ ಗೌಡಗೆ ಎಸ್‍ಐಟಿಯಿಂದ ನೊಟೀಸ್

    ಯಾವುದೇ ಕ್ಷಣದಲ್ಲಾದ್ರೂ ಪ್ರೀತಂ ಗೌಡಗೆ ಎಸ್‍ಐಟಿಯಿಂದ ನೊಟೀಸ್

    ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಶಾಸಕರಾಗಿರುವ ಪ್ರೀತಂ ಗೌಡಗೆ (Preetham Gowda) ಎಸ್‍ಐಟಿ ಅಧಿಕಾರಿಗಳು ನೊಟೀಸ್ ನೀಡುವ ಸಾಧ್ಯತೆಗಳಿವೆ.

    ಬೆಂಗಳೂರಿನಲ್ಲಿ ಪೆನ್‍ಡ್ರೈವ್ (Prajwal Pendrive Case) ಖರೀದಿ ಮಾಡಿಸಿದ್ದು ಪ್ರೀತಂ ಗೌಡ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಪ್ರೀತಂಗೌಡ ವಿರುದ್ಧ ಸಿಐಡಿ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

    ಸಂತ್ರಸ್ತೆಯಿಂದ ಪ್ರಜ್ವಲ್ ಲೈಂಗಿಕ ದೌರ್ಜನ್ಯ ಎಸಗಿರುವ ವೀಡಿಯೋ ಮಾಡಿ ಶೇರ್ ಮಾಡಿರುವ ಆರೋಪ ಶಾಸಕರ ಮೇಲಿದೆ. ಹೀಗಾಗಿ ಪ್ರಜ್ವಲ್ ಜೊತೆಗೆ ಹಾಸನ ಮಾಜಿ ಶಾಸಕ ಪ್ರೀತಂ ಗೌಡ, ಚೇತನ್ ಹಾಗೂ ಕ್ವಾಲಿಟಿ ಬಾರ್ ಶರತ್‍ ವಿರುದ್ಧ ಕೂಡ ಕಳೆದ ವಾರ ಐಪಿಸಿ ಸೆಕ್ಷನ್ 354 (ಮಹಿಳೆಯ ಮೇಲಿನ ದೌರ್ಜನ್ಯ) , ಐಟಿ ಆಕ್ಟ್ 66ಇ ಅಡಿ ಪ್ರಕರಣ ದಾಖಲು ಮಾಡಲಾಗಿದೆ.

    ವಿಡೀಯೋ ಹಂಚಿಕೆ ಸಂಬಂಧ ದಾಖಲಾಗಿರುವ ಎಫ್ ಐ ಆರ್ ನಲ್ಲಿ ಪ್ರೀತಮ್ ಗೌಡ ನಾಲ್ಕನೆ ಆರೋಪಿಯಾಗಿದ್ದಾರೆ. ಹೀಗಾಗಿ ಯಾವುದೇ ಕ್ಷಣದಲ್ಲಾದರೂ ಮಾಜಿ ಶಾಸಕ ಪ್ರೀತಂ ಗೌಡಗೆ ಎಸ್‍ಐಟಿ ನೊಟೀಸ್ ನೀಡುವ ಸಾಧ್ಯತೆಗಳಿವೆ. ಬಳಿಕ 66ಇ ಸೆಕ್ಷನ್ (ಗೌಪ್ಯತೆಯ ಉಲ್ಲಂಘನೆ)  ಅಡಿ  ಬಂಧನ ಮಾಡಿ ವಿಚಾರಣೆ ಮಾಡುವ ಸಾಧ್ಯತೆಗಳಿವೆ. ಇದನ್ನೂ ಓದಿ: ಸೂರಜ್ ರೇವಣ್ಣಗೆ ಇಂದೂ ಮೆಡಿಕಲ್ ಟೆಸ್ಟ್ – ಲಿಂಗತ್ವ ಪರೀಕ್ಷೆ ಸಾಧ್ಯತೆ!

    ತಮ್ಮ ವಿರುದ್ಧ ಎಫ್‍ಐಆರ್ ದಾಖಲಾದ ವಿಚಾರಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿದ್ದ ಅವರನ್ನು ಮಾಧ್ಯಮವರು ಈ ಬಗ್ಗೆ ಕೇಳಿದಾಗ, ಪ್ರಕರಣ ದಾಖಲಾದ ಬಗ್ಗೆ ನನಗೆ ಗೊತ್ತಿಲ್ಲ. ಅದರ ಬಗ್ಗೆ ತಿಳಿದುಕೊಳ್ಳುತ್ತೇನೆ. ಆ ಬಳಿಕ ಬಂದು ಮತ್ತೆ ಮಾತಾಡ್ತೇನೆ ಎಂದು ಹೇಳಿ ತರಾತುರಿಯಲ್ಲಿ ಕಾರು ಹತ್ತಿ ಹೊರಟರು.

  • ವೀಡಿಯೋ ನೋಡಿದವರೆಲ್ಲ ತಪ್ಪಿತಸ್ಥರು ಅಂದ್ರೆ ಹಾಸನದ 15 ಲಕ್ಷ ಜನ ತಪ್ಪಿತಸ್ಥರಾಗ್ತಾರೆ: ಪ್ರೀತಂಗೌಡ

    ವೀಡಿಯೋ ನೋಡಿದವರೆಲ್ಲ ತಪ್ಪಿತಸ್ಥರು ಅಂದ್ರೆ ಹಾಸನದ 15 ಲಕ್ಷ ಜನ ತಪ್ಪಿತಸ್ಥರಾಗ್ತಾರೆ: ಪ್ರೀತಂಗೌಡ

    -ಯುವಕರಿಂದ ಮುದುಕರವರೆಗೂ ವೀಡಿಯೋ ಇದೆ, ಅದೇ ಅಪರಾಧ ಅಂದ್ರೆ ಹೇಗೆ?

    – ನಮ್ಮ ಕಾರ್ಯಕರ್ತರ ವಿಚಾರ ಬಂದ್ರೆ ಬೆನ್ನು ತೋರಿಸಿ ಹೋಗಲ್ಲ

    ಬೆಂಗಳೂರು: ಹಾಸನದಲ್ಲಿ ಯುವಕರಿಂದ ಮುದುಕರವರೆಗೂ ಎಲ್ಲರ ಬಳಿಯೂ ಪ್ರಜ್ವಲ್ ಪ್ರಕರಣದ ವೀಡಿಯೋ (Prajwal Revanna Pendrive case) ಇದೆ. ಎಲ್ಲರನ್ನೂ ಬಂಧನ ಮಾಡೋಕಾಗುತ್ತಾ? ನಮ್ಮ ಕಚೇರಿಯಲ್ಲಿ 24 ವರ್ಷದ ಅಮಾಯಕ ಯುವಕನ ಬಳಿ ಅದೇ ರೀತಿ ವೀಡಿಯೋ ಬಂದಿದೆ. ಅದನ್ನೇ ಅಪರಾಧ ಅಂದ್ರೆ ಹೇಗೆ? ವೀಡಿಯೋ ನೋಡಿದವರೆಲ್ಲ ತಪ್ಪಿತಸ್ಥರು ಅಂದ್ರೆ ಹಾಸನದ 15 ಲಕ್ಷ ಜನ ತಪ್ಪಿತಸ್ಥರಾಗ್ತಾರೆ. ತನಿಖೆ ಸರಿಯಾದ ರೀತಿಯಲ್ಲಿ ಆಗಬೇಕು ಎಂದು ಮಾಜಿ ಶಾಸಕ ಪ್ರೀತಂಗೌಡ (Preetham Gowda) ಹೇಳಿದ್ದಾರೆ.

    ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪ್ರಜ್ವಲ್ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ಕೊಡಲ್ಲ. ಈ ಬಗ್ಗೆ ಚರ್ಚೆಯನ್ನೂ ನಾನು ಮಾಡಿಲ್ಲ. ನಮ್ಮ ಕಾರ್ಯಕರ್ತರ ಬಂಧನ ಆಗಿದ್ದಕ್ಕೆ ಮಾತನಾಡುತ್ತಿದ್ದೇನೆ. ನಮಗೂ ವೀಡಿಯೋಗೂ ಸಂಬಂಧ ಇಲ್ಲ ಎಂದಿದ್ದಾರೆ. ಇದನ್ನೂ ಓದಿ: ಸುಪ್ರೀಂನಿಂದಲೂ ರಿಲಿಫ್ – ಸಿಎಂ ಸ್ಥಾನದಿಂದ ಕೇಜ್ರಿವಾಲ್ ಪದಚ್ಯುತಿ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

    ಹಾಸನದಲ್ಲಿ ಹೀಗಾಗಬಾರದಿತ್ತು ಎಂದು ಹಲವರು ಮಾತಾನಾಡುತ್ತಿದ್ದಾರೆ. ನಾನು ಯಾರೇ ಸಿಕ್ಕಿದ್ರೂ ವೀಡಿಯೋ ಇದ್ರೆ ಹಂಚಬೇಡಿ, ಇಟ್ಕೋಬೇಡಿ, ಅದು ನೀಚ ಕೆಲಸ ಎಂದಿದ್ದೇನೆ. ನಮಗೆ ಜವಾಬ್ದಾರಿ ಇದೆ, ವೀಡಿಯೋ ಹಂಚಬೇಡಿ, ಡಿಲೀಟ್ ಮಾಡಿ ಎಂದೇ ನಮ್ಮ ಕಾರ್ಯಕರ್ತರಿಗೂ ಹೇಳಿದ್ದೇನೆ ಎಂದರು.

    ನಮ್ಮ ಕಾರ್ಯಕರ್ತರ ವಿಚಾರ ಬಂದಾಗ ನಾನು ಬೆನ್ನು ತೋರಿಸಿ ಹೋಗುವುದಿಲ್ಲ. ಭಾನುವಾರ ಬಂಧಿತರಾದವರು ಅಮಾಯಕರು, ಅಮಾಯಕರ ಬಂಧನವಾಗಿದೆ ಎಂದು ಅವರು ಆರೋಪಿಸಿದ್ದಾರೆ. ಇದನ್ನೂ ಓದಿ: ಯಾವ ಕಾರಣಕ್ಕೂ ಸರ್ಕಾರವನ್ನ ಆಪರೇಷನ್ ಮಾಡೋಕೆ ಆಗಲ್ಲ: ಸಿದ್ದರಾಮಯ್ಯ

  • ರಸ್ತೆಯಲ್ಲಿ ಸಿಕ್ಕ ಪೆನ್‌ಡ್ರೈವ್‌ ಎ.ಮಂಜುಗೆ ಕೊಟ್ಟಿದ್ದೆ; ಬಾಂಬ್ ಸಿಡಿಸಿದ ಆರೋಪಿ ನವೀನ್‌ಗೌಡ!

    ರಸ್ತೆಯಲ್ಲಿ ಸಿಕ್ಕ ಪೆನ್‌ಡ್ರೈವ್‌ ಎ.ಮಂಜುಗೆ ಕೊಟ್ಟಿದ್ದೆ; ಬಾಂಬ್ ಸಿಡಿಸಿದ ಆರೋಪಿ ನವೀನ್‌ಗೌಡ!

    – ಕುಮಾರಸ್ವಾಮಿ ಹೇಳಿದ ಮಹಾನಾಯಕ ಇವರೇ ಇರಬೇಕು ಎಂದ ನವೀನ್‌ಗೌಡ
    – ನವೀನ್ ಗೌಡ ಯಾರು ಅಂತಾನೇ ಗೊತ್ತಿಲ್ಲ ಎಂದ ಶಾಸಕ

    ಹಾಸನ: ಪ್ರಜ್ವಲ್ ಪೆನ್‌ಡ್ರೈವ್‌ ಪ್ರಕರಣಕ್ಕೆ (Prajwal Revanna Pendrive Case) ಎಸ್‌ಐಟಿ ಬಿಗ್ ಟ್ವಿಸ್ಟ್ ನೀಡಿದೆ. ಪೆನ್‌ಡ್ರೈವ್‌ ವೈರಲ್ ಮಾಡಿದ ಆರೋಪದ ಚೇತನ್, ಲಿಖಿತ್ ಹೆಸರಿನ ಇಬ್ಬರನ್ನು ಎಸ್‌ಐಟಿ ಅರೆಸ್ಟ್ ಮಾಡಿದೆ. ಇದೇ ಹೊತ್ತಿನಲ್ಲಿ ಪೆನ್‌ಡ್ರೈವ್‌ ಹಂಚಿಕೆ ಆರೋಪ ಎದುರಿಸುತ್ತಿರುವ ನವೀನ್ ಗೌಡ (Naveen Gowda) ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿರುವ ಪೋಸ್ಟ್ ಭಾರೀ ಸಂಚಲನ ಸೃಷ್ಟಿಸಿದೆ.

    ಕಳೆದ ಏಪ್ರಿಲ್ 20 ರಂದು ನನಗೆ ರಸ್ತೆಯಲ್ಲಿ ಸಿಕ್ಕಿದ್ದ ಪೆನ್‌ಡ್ರೈವ್ ಅನ್ನು ಅರಕಲಗೂಡಿನಲ್ಲಿ ಶಾಸಕ ಎ.ಮಂಜುಗೆ (A Manju) ಕೊಟ್ಟಿದ್ದೆ. ಅರಕಲಗೂಡಿನ ಮಾರುತಿ ಕಲ್ಯಾಣ ಮಂಟಪದಲ್ಲಿ ಪೆನ್‌ಡ್ರೈವ್‌ ಕೊಟ್ಟಿದ್ದೆ. ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ ಹಾಗೆ ಪೆನ್‌ಡ್ರೈವ್‌ ಹಂಚಿಕೆ ಮಾಡಿದ ಮಹಾನನಾಯಕ ಇವರೇ ಇರಬಹದು ಎಂದು ನವೀನ್‌ಗೌಡ ತಮ್ಮ ಫೇಸ್‌ಬುಕ್ ಪುಟದಲ್ಲಿ ಬರೆದುಕೊಂಡಿದ್ದಾರೆ. ಇದಕ್ಕೆ ಅಲ್ಲದೇ ಹೆಚ್‌.ಡಿ ದೇವೇಗೌಡ, ಹೆಚ್‌ಡಿ ಕುಮಾರಸ್ವಾಮಿ ಹಾಗೂ ರೇವಣ್ಣ ಅವರೊಂದಿಗೆ ಎ. ಮಂಜು ಅವರು ಇರುವ ಫೋಟೋವೊಂದನ್ನು ಲಗತ್ತಿಸಿದ್ದಾರೆ. ಇದನ್ನೂ ಓದಿ: ಮೋದಿಯಂಥ ವ್ಯಕ್ತಿಯೊಂದಿಗೆ ಚರ್ಚಿಸಲು ರಾಹುಲ್‌ ಗಾಂಧಿ ಪ್ರಧಾನಿ ಅಭ್ಯರ್ಥಿಯೇ? – ಸ್ಮೃತಿ ಇರಾನಿ ವ್ಯಂಗ್ಯ

    ತಮ್ಮ ಮೇಲಿನ ಈ ಆರೋಪವನ್ನು ಎ.ಮಂಜು ಅಲ್ಲಗಳೆದಿದ್ದಾರೆ. ನನ್ನನ್ನು ಅವನು ಭೇಟಿ ಮಾಡಿಲ್ಲ. ಅವನನ್ನು ನಾನು ನೋಡಿಯೇ ಇಲ್ಲ. ಅವನು ನನಗೆ ಪರಿಚಯವೇ ಇಲ್ಲ. `ಪಬ್ಲಿಕ್ ಟಿವಿ’ ನೋಡಿದಾಗ ವಿಷಯ ಗೊತ್ತಾಯ್ತು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಪರಿಷತ್‌ ಚುನಾವಣೆ; ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಮರಿತಿಬ್ಬೇಗೌಡ ಕಾಂಗ್ರೆಸ್‌ ಅಭ್ಯರ್ಥಿ

    ತಾನು ಬಚಾವ್ ಆಗಲು ನವೀನ್‌ಗೌಡ ಇಂತಹ ಥರ್ಡ್ಕ್ಲಾಸ್ ಆರೋಪ ಮಾಡಿದ್ದಾನೆ. ಪ್ರಕರಣದ ದಾರಿ ತಪ್ಪಿಸಲು ಹೀಗೆ ಮಾಡಿದ್ದಾರೆ. ಜೆಡಿಎಸ್ ಮುಗಿಸಲು ಸಂಚು ನಡೆದಿರುವಂತೆ ಕಾಣ್ತಿದೆ. ಯರ‍್ಯಾರನ್ನೋ ಎಸ್‌ಐಟಿ ಬಂಧಿಸಿದೆ ಆದ್ರೆ ನವೀನ್‌ಗೌಡನನ್ನ ಏಕೆ ಬಂಧಿಸಿಲ್ಲ. ನನಗೆ ಈಗ ದೂರು ಕೊಡಲು ಅನುಕೂಲ ಆಯ್ತು. ನಾನು ನವೀನ್ ಗೌಡ ವಿರುದ್ಧ ದೂರು ಕೊಟ್ಟೇ ಕೊಡುತ್ತೇನೆ ಎಂದು ಮಂಜು ಹೇಳಿದ್ದಾರೆ.

  • ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಟ್ವಿಸ್ಟ್; ಪ್ರೀತಂ ಗೌಡ ಆಪ್ತ ಸೇರಿ ಇಬ್ಬರು ಎಸ್‌ಐಟಿ ವಶಕ್ಕೆ

    ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಟ್ವಿಸ್ಟ್; ಪ್ರೀತಂ ಗೌಡ ಆಪ್ತ ಸೇರಿ ಇಬ್ಬರು ಎಸ್‌ಐಟಿ ವಶಕ್ಕೆ

    ಹಾಸನ: ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರಿಗೆ ಸಂಬಂಧಿಸಿದ್ದು ಎನ್ನಲಾದ ಪೆನ್‌ಡ್ರೈವ್‌ ವೈರಲ್ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ (Preetham Gowda) ಆಪ್ತ ಸೇರಿದಂತೆ ಇಬ್ಬರನ್ನು ಎಸ್‌ಐಟಿ ವಶಕ್ಕೆ ಪಡೆದಿದೆ.

    ಪೆನ್‌ಡ್ರೈವ್ ವೈರಲ್ ವಿಚಾರದಲ್ಲಿ ಮಾಜಿ ಶಾಸಕ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಅತ್ಯಾಪ್ತ ಲಿಖಿತ್‌ಗೌಡ ಹಾಗೂ ಯಲಗುಂದ ಚೇತನ್ ಎಂಬ ಇಬ್ಬರನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ವಕೀಲ ದೇವರಾಜೇಗೌಡಗೆ ಮೇ 24 ರವರೆಗೆ ನ್ಯಾಯಾಂಗ ಬಂಧನ

    ಇಬ್ಬರನ್ನೂ ನಿನ್ನೆ ಮಧ್ಯರಾತ್ರಿಯೇ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಪ್ರೀತಂಗೌಡ ಜೊತೆ ಚೇತನ್ ಹಾಗೂ ಲಿಖಿತ್ ಗುರುತಿಸಿಕೊಂಡಿದ್ದರು. ಮಾಜಿ ಶಾಸಕ ಪ್ರೀತಂ ಗೌಡ ಕಚೇರಿಯ ಸಿಬ್ಬಂದಿ ಹಾಗೂ ಅವರ ಆಪ್ತ ನಿಖಿತ್ ಎನ್ನಲಾಗಿದೆ.

    ಪೆನ್‌ಡ್ರೈವ್ ಇಟ್ಟುಕೊಂಡಿದ್ದ ಆರೋಪದಲ್ಲಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಲಿಖಿತ್ ಎಂಬಾತ ಪ್ರೀತಂ ಗೌಡ ಜೊತೆ ಹಲವು ವರ್ಷಗಳಿಂದ ಗುರುತಿಸಿಕೊಂಡಿದ್ದ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಬಿಜೆಪಿ ಮುಖಂಡ, ವಕೀಲ ದೇವರಾಜೇ ಗೌಡ ಬಂಧನ

    ಹಾಸನದ ನಗರ ಪೊಲೀಸ್ ಠಾಣೆ ಸಮಚ್ಚಯದಲ್ಲಿರುವ ಸೈಬರ್ ಕ್ರೈಂ ಠಾಣೆಯಲ್ಲಿ ಇಬ್ಬರ ವಿಚಾರಣೆ ನಡೆಸಲಾಗುತ್ತಿದೆ. ಬಿಜೆಪಿ ಕಾರ್ಯಕರ್ತರ ಬಂದನ ತೀವ್ರ ಕುತೂಹಲ ಮೂಡಿಸಿದೆ.

  • ಮೋದಿ ಬಂದರೂ ಪ್ರತಿಷ್ಠೆ ಬಿಡದ ಪ್ರೀತಂಗೌಡ, ಪ್ರಜ್ವಲ್!

    ಮೋದಿ ಬಂದರೂ ಪ್ರತಿಷ್ಠೆ ಬಿಡದ ಪ್ರೀತಂಗೌಡ, ಪ್ರಜ್ವಲ್!

    – ಜೆಡಿಎಸ್-ಬಿಜೆಪಿಗೆ ಬಿಸಿತುಪ್ಪವಾದ ಇಬ್ಬರ ಮುನಿಸು

    ಹಾಸನ: ಲೋಕಸಭೆ ಚುನಾವಣೆಯಲ್ಲಿ (Lok Sabha Election) ಬಿಜೆಪಿ-ಜೆಡಿಎಸ್ (BJP-JDS) ಮೈತ್ರಿ ಮಾಡಿಕೊಂಡಿದ್ದರೂ ದೇವೇಗೌಡರ (HD Devegowda) ತವರು ಹಾಸನದಲ್ಲಿ ಮಾಜಿ ಶಾಸಕ ಪ್ರೀತಂಗೌಡ (Pretham Gowda) ದಳಪತಿಗಳ ಮುನಿಸು ಮುಂದುವರಿದಿದೆ. ಹಾಸನದಲ್ಲಿ ಮಾತ್ರವಲ್ಲದೇ ಮೈಸೂರಿನಲ್ಲಿ ನಡೆದ ಪ್ರಧಾನಿ ಮೋದಿ (PM Narendra Modi) ಕಾರ್ಯಕ್ರಮದಲ್ಲೂ ಈ ಮುನಿಸು ಬಹಿರಂಗಗೊಂಡಿದೆ. ಪ್ರಜ್ವಲ್ ರೇವಣ್ಣ-ಪ್ರೀತಂಗೌಡ ಮುಖಾಮುಖಿಯಾದರೂ ಮಾತನಾಡದೇ ಮುನಿಸು ಮುಂದುವರಿಸಿದ್ದಾರೆ.

    ಭಾನುವಾರ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಪ್ರಧಾನಿ ಮೋದಿ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಜಂಟಿ ಚುನಾವಣಾ ಪ್ರಚಾರ ಸಭೆ ನಡೆಯಿತು. ಈ ಸಭೆಯಲ್ಲಿ ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು ಜಿಲ್ಲೆಗಳ ಅಭ್ಯರ್ಥಿಗಳು ಹಾಗೂ ರಾಜ್ಯ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಭಾಗಿಯಾಗಿದ್ದರು.

    ಕೊಂಚ ತಡವಾಗಿ ವೇದಿಕೆಗೆ ಏರಿದ ಪ್ರಜ್ವಲ್ ರೇವಣ್ಣ (Prajwal Revanna) ವೇದಿಕೆಯಲ್ಲಿ ಆಸೀನರಾಗಿದ್ದ ಎಲ್ಲರಿಗೂ ಹಸ್ತಲಾಘವ ಮಾಡಿದರು. ಪ್ರತಾಪ್ ಸಿಂಹ ಮೊದಲಾದವರನ್ನು ಆಲಂಗಿಸಿಕೊಂಡರು. ಪ್ರೀತಂಗೌಡ ವೇದಿಕೆ ಹಂಚಿಕೊಂಡಿದ್ದರೂ ದೋಸ್ತಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪ್ರೀತಂಗೌಡ ಮುಖ ನೋಡಲಿಲ್ಲ, ಮಾತನಾಡಲಿಲ್ಲ. ಪ್ರೀತಂ ಬಿಟ್ಟು ಉಳಿದವರತ್ತ ಗಮನ ಹರಿಸಿದರು. ಅಲ್ಲಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದಲ್ಲೂ ಇಬ್ಬರು ಯುವ ನಾಯಕರು ಪ್ರತಿಷ್ಠೆ ಬಿಡದೇ ಇರುವುದು ಜಗಜ್ಜಾಹೀರಾಗಿದೆ. ಹೀಗಾಗಿ ಇಬ್ಬರ ನಡುವಿನ ಮುನಿಸು ಮುಂದೆ ಯಾವ ರೀತಿ ಪರಿಣಾಮ ಬೀರಲಿದೆ ಎಂಬುದು ಕುತೂಹಲ ಮೂಡಿದೆ.

     

    ಪ್ರೀತಂಗೌಡ-ಪ್ರಜ್ವಲ್ ಪ್ರತಿಷ್ಠೆಯ ನಡೆ ಮೈತ್ರಿ ನಾಯಕರಿಗೆ ಬಿಸಿತುಪ್ಪವಾಗಿದೆ. ಇವರಿಬ್ಬರ ಮುನಿಸು ಹಾಸನದಲ್ಲಿ ಏನೆಲ್ಲಾ ಪರಿಣಾಮ ಉಂಟು ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (Vijayendra) ಹಾಸನದ ಹೊಳೆನರಸೀಪುರ ಹಾಗೂ ಸಕಲೇಶಪುರದಲ್ಲಿ ರೋಡ್ ಶೋ ನಡೆಸುತ್ತಿದ್ದು, ಪ್ರೀತಂಗೌಡ ಭಾಗಿಯಾಗುತ್ತಾರೋ ಇಲ್ಲವೋ ಕಾದುನೋಡಬೇಕಿದೆ.