Tag: Preetham gowda

  • ನಾವು ಅಡ್ಜೆಸ್ಟ್‌ಮೆಂಟ್ ಮಾಡಿಕೊಳ್ಳುವುದಾದರೆ ಸರ್ಕಾರವನ್ನೇ ಉರುಳಿಸಬಹುದಿತ್ತು- ಪ್ರೀತಂ ಗೌಡಗೆ ಎಚ್‍ಡಿಕೆ ತಿರುಗೇಟು

    ನಾವು ಅಡ್ಜೆಸ್ಟ್‌ಮೆಂಟ್ ಮಾಡಿಕೊಳ್ಳುವುದಾದರೆ ಸರ್ಕಾರವನ್ನೇ ಉರುಳಿಸಬಹುದಿತ್ತು- ಪ್ರೀತಂ ಗೌಡಗೆ ಎಚ್‍ಡಿಕೆ ತಿರುಗೇಟು

    ಮಂಡ್ಯ: ನಾವು ಅಡ್ಜೆಸ್ಟ್‌ಮೆಂಟ್ ಮಾಡಿಕೊಳ್ಳುವುದಾದರೆ ಸರ್ಕಾರವನ್ನೇ ಉರುಳಿಸಬಹುದಿತ್ತು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶಾಸಕ ಪ್ರೀತಂ ಗೌಡಗೆ ತಿರುಗೇಟು ನೀಡಿದರು.

    ಬಿಜೆಪಿ ಜೊತೆ ಅಡ್ಜೆಸ್ಟ್‌ಮೆಂಟ್ ಗಾಗಿ ಜೆಡಿಎಸ್ ಕಾಯುತ್ತಿದೆ ಎಂಬ ಪ್ರೀತಂ ಗೌಡ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ನಾವು ಅಡ್ಜೆಸ್ಟ್‌ಮೆಂಟ್ ಮಾಡಿಕೊಳ್ಳುವುದಾಗಿದ್ದರೆ ಸರ್ಕಾರವನ್ನೇ ಉರುಳಿಸಬಹುದಿತ್ತು. 224 ಜನರು ಮುಖ್ಯಮಂತ್ರಿ ಜೊತೆಯೇ ಇದ್ದಾರೆ. ನಾವು ಯಾವ ಅಡ್ಜೆಸ್ಟ್‌ಮೆಂಟ್ ಗಾಗಿ ಕಾಯುತ್ತಿಲ್ಲ. ಅಡ್ಜೆಸ್ಟ್‌ಮೆಂಟ್ ಮಾಡಿಕೊಳ್ಳುವುದಾಗಿದ್ದರೆ ಸರ್ಕಾರವನ್ನೇ ಉರುಳಿಸಬಹುದಿತ್ತು. ಅದರ ಅವಶ್ಯಕತೆ ನಮಗೆ ಇಲ್ಲ, ಯಾರೋ ಮಾತನಾಡುವವರಿಗೆ ಉತ್ತರ ಕೊಡುವುದಿಲ್ಲ ಎಂದರು.

    ಮೇಕೆದಾಟು ಬಗ್ಗೆ ಕೇಂದ್ರ ಸರ್ಕಾರ ಪಾರ್ಲಿಮೆಂಟ್ ನಲ್ಲಿ ಏನೋ ಉತ್ತರ ನೀಡಿದೆ. ರಾಜ್ಯ ಸರ್ಕಾರ ನಾವು ಮಾಡೇ ಮಾಡುತ್ತೇವೆ ಎನ್ನುತ್ತಿದ್ದಾರೆ. ಯಾವಾಗ ಪ್ರಾರಂಭವಾಗುತ್ತದೆ ಕಾದು ನೋಡೋಣ ಎಂದು ತಿಳಿಸಿದರು.

    ನೂತನ ಸಚಿವ ಸಂಪುಟದ ಖಾತೆ ಹಂಚಿಕೆ ವಿಚಾರದ ಕುರಿತು ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಪೂರ್ಣಾವಧಿ ಬಗ್ಗೆ ನಾನು ಭವಿಷ್ಯ ನುಡಿಯಲ್ಲ. ನೂತನ ಸಿಎಂ ಉಳಿದಿರುವ 28 ತಿಂಗಳು ರಾಜ್ಯದ ಮುಖ್ಯಮಂತ್ರಿಯಾಗಿ ಕೆಲಸ ನಿರ್ವಹಿಸಲಿ. ಅವರು ಮುಂದುವರಿಯುವುದು, ಸಮಸ್ಯೆಗಳು ಎದುರಾಗುವುದು ಬಿಜೆಪಿ ಪಕ್ಷದಲ್ಲಿನ ವಿಚಾರ. ಈ ಬಗ್ಗೆ ನಾನು ಭವಿಷ್ಯ ನುಡಿಯಲ್ಲ. ನನ್ನ ಆತ್ಮೀಯ ಸ್ನೇಹಿತರು ಸಂಪೂರ್ಣ ಅವಧಿಯನ್ನು ಮುಗಿಸಬೇಕು ಎನ್ನುವುದು ನಮ್ಮೆಲ್ಲರ ಆಶಯ. ಅಲ್ಲದೆ ನಾಡಿನ ಜನರ ಸಮಸ್ಯೆಗಳಿಗೆ ಸರ್ಕಾರದಲ್ಲಿ ಉತ್ತಮ ರೀತಿಯ ಕಾರ್ಯಕ್ರಮ ರೂಪಿಸಲಿ ಎಂದು ಸಲಹೆ ನೀಡಿದರು.

    ಪ್ರೀತಂ ಗೌಡ ಹೇಳಿದ್ದೇನು?
    ಸಿಎಂ ಬಸವರಾಜ ಬೊಮ್ಮಾಯಿಯವರು ಮೊದಲು ಸಿದ್ದಗಂಗಾ ಶ್ರೀ, ಸುತ್ತೂರು ಶ್ರೀ, ಸಿರಿಗೆರೆ ಸ್ವಾಮೀಜಿಗಳಿಗೆ ಅಥವಾ ಆದಿ ಚುಂಚನಗಿರಿ ಶ್ರೀಗಳ ಆಶೀರ್ವಾದ ಪಡೆಯಬೇಕಾಗಿತ್ತು. ಆದರೆ ಅವರ ತಂದೆ ಸರ್ಕಾರ ಉರುಳಿಸಿದಂತಹವರ ಮನೆಗೆ ಹೋಗಿ ಆಶೀರ್ವಾದ ಪಡೆಯುವ ಅಗತ್ಯ ಇರಲಿಲ್ಲ. ಇದು ನಾನು ಹೇಳುತ್ತಿಲ್ಲ ಎಲ್ಲಾ ಕಾರ್ಯಕರ್ತರು ಮಾತನಾಡುತ್ತಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಅಡ್ಜೆಸ್ಟ್‌ಮೆಂಟ್ ರಾಜಕಾರಣ ಮಾಡೋದು ಬೇಡ: ಶಾಸಕ ಪ್ರೀತಂ ಗೌಡ

    ನಾನು ಯಾವುದೇ ಮುಲಾಜಿಗೆ ಒಳಗಾಗಿ ರಾಜಕಾರಣ ಮಾಡುವಂತನಲ್ಲ. ನಮ್ಮ ಮನೆಗೆ ಕಲ್ಲು ಹೊಡೆದ ಸಮಯದಲ್ಲಿ ಯಡಿಯೂರಪ್ಪನವರು ಹಾಗೂ ಆರ್. ಅಶೋಕ್ ಬಂದು ಮಾನಸಿಕವಾಗಿ, ನೈತಿಕವಾಗಿ ಧೈರ್ಯ ತುಂಬಿ ಹೆಚ್ಚು ಶಕ್ತಿ ಕೊಟ್ಟಂತಹ ನಾಯಕರ ಮಧ್ಯೆ ನಾನು ಬೆಳೆದು ಬಂದಿದ್ದೇನೆ. ನಾವು ಬೆಳಗಾದರೆ ಜಾತ್ಯತೀಯ ಜನತ ದಳದ ವಿರುದ್ಧ ಗುದ್ದಾಟ ಮಾಡಿ ಪಕ್ಷ ಕಟ್ಟುವುದು, ಇನ್ನೊಬ್ಬರು ಹೋಗಿ ಅಡ್ಜೆಸ್ಟ್‌ಮೆಂಟ್ ರಾಜಕಾರಣ ಮಾಡಿಕೊಳ್ಳುವುದು. ಇಂತಹ ಅಡ್ಜೆಸ್ಟ್‌ಮೆಂಟ್ ರಾಜಕಾರಣ ಮಾಡಿಕೊಳ್ಳಲು ನಾವು ರಾಜಕೀಯದಲ್ಲಿ ಸನ್ಯಾಸಿಗಳಲ್ಲ. ನಾನು ರಾಜಕಾರಣ ಮಾಡಬೇಕೆಂದೇ ಬಂದಿರುವುದು. ಹಳೇ ಮೈಸೂರು ಜಿಲ್ಲೆಯಲ್ಲಾಗಲಿ, ಹಾಸನ ಜಿಲ್ಲೆಯಲ್ಲಾಗಲಿ ಎಲ್ಲೆಯಾದರು ಯಾವುದೇ ಕಾರಣಕ್ಕೂ ಅಡ್ಜೆಸ್ಟ್‌ಮೆಂಟ್ ರಾಜಕಾರಣ ಆಗುವುದಿಲ್ಲ ಎಂದು ನಾನು ಕಾರ್ಯಕರ್ತರಿಗೆ ಪ್ರಾಮಾಣಿಕವಾಗಿ ತಿಳಿಸಿಕೊಡುವಂತಹ ಪ್ರಯತ್ನ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

  • ಯಡಿಯೂರಪ್ಪ ಬದಲಾಗಿದ್ದಾರೆ ಅಂತ ನನಗೆ ಈಗಲೂ ನಂಬಲಾಗ್ತಿಲ್ಲ: ಪ್ರೀತಂಗೌಡ

    ಯಡಿಯೂರಪ್ಪ ಬದಲಾಗಿದ್ದಾರೆ ಅಂತ ನನಗೆ ಈಗಲೂ ನಂಬಲಾಗ್ತಿಲ್ಲ: ಪ್ರೀತಂಗೌಡ

    ಹಾಸನ: ಯಡಿಯೂರಪ್ಪ ಯಾವತ್ತೂ ಸೋಲಲ್ಲ. ಏನಾದರೂ ಅವರು ಸೋತಿದ್ದರೆ ಅದು ಮುಂದಿನ ಗೆಲುವಿಗಾಗಿ ಅಂತ ಶಾಸಕ ಪ್ರೀತಮ್ ಗೌಡ ತಿಳಿಸಿದ್ದಾರೆ.

    ಹಾಸನದಲ್ಲಿ ಪ್ರಾರಂಭವಾದ ಫುಡ್ ಕೋರ್ಟ್ ಉದ್ಘಾಟನಾ ಸಮಾರಂಭದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಟ್ಟ ಕಡೆಯ ತನಕ ಬದಲಾವಣೆ ಆಗಲ್ಲ ಅಂತ ಬಹುಶಃ ನಾನೊಬ್ಬನೇ ವಾದ ಮಾಡಿದೆ. ಆದರೆ ಈಗಲೂ ಬದಲಾಗಿದ್ದಾರೆ ಅಂದ್ರೆ ನನಗೆ ನಂಬಲು ಅಸಾಧ್ಯ. ಪಕ್ಷದಲ್ಲಿ 75 ವರ್ಷ ಮೇಲ್ಪಟ್ಟವರಿಗೆ ಅಧಿಕಾರದಲ್ಲಿ ಇರಬಾರದು ಎಂಬುದು ಮೋದಿ ನಿರ್ಧಾರ. ಹಾಗಾಗಿ ಯಡಿಯೂರಪ್ಪನವರೇ ಸ್ವತಃ ರಾಜೀನಾಮೆ ನೀಡಿದ್ದಾರೆ. ಇದರಲ್ಲಿ ಯಾರ ಒತ್ತಾಯವೂ ಕೂಡ ಇಲ್ಲ. ಯಾರು ಕೂಡಾ ರಾಜೀನಾಮೆ ನೀಡಿ ಅಂತ ಯಡಿಯೂರಪ್ಪನವರಿಗೆ ಬಲವಂತ ಮಾಡಿರಲಿಲ್ಲ ಎಂದು ಸಮರ್ಥನೆ ಮಾಡಿಕೊಂಡರು.

    ಹಾಗೇನಾದರೂ ಬಲವಂತ ಮಾಡಿದ್ದರೆ ಯಡಿಯೂರಪ್ಪನವರೇ ಸಿಎಂ ಆಗಿ ಮುಂದುವರಿಯಬಹುದಿತ್ತು. ಆದರೆ ಪಕ್ಷದ ನಿಷ್ಠೆಗೆ ಅವರು ತಲೆಬಾಗಿದ್ದಾರೆ. ಬೊಮ್ಮಾಯಿಯವರು ಇವತ್ತಿನಿಂದ ನಮ್ಮ ಮುಖ್ಯಮಂತ್ರಿಗಳು. ಕರ್ನಾಟಕವನ್ನು ಪ್ರಗತಿಯತ್ತ ಕೊಂಡೊಯ್ಯುತ್ತಾರೆ ಎನ್ನುವ ವಿಶ್ವಾಸ ನನಗಿದೆ. ಆದರೆ ನನಗೆ ಮಂತ್ರಿ ಸ್ಥಾನ ಸಿಗುತ್ತದೆ. ನನಗೆ ಮಂತ್ರಿ ಸ್ಥಾನ ಕೊಡಿ ಅಂತ ನಾನು ಯಾರಿಗೂ ಒತ್ತಡ ಹಾಕಲ್ಲ. ಈ ಭಾಗಕ್ಕೆ ಅವಶ್ಯಕತೆ ಇದೆಯ ಅಂತ ಹಿರಿಯರು ತೀರ್ಮಾನ ಮಾಡುತ್ತಾರೆ ಎಂದರು.

    ಸಿಎಂ ಬಗ್ಗೆ ಎಕ್ಸಾಮ್ ಬರ್ದಿದ್ದೀನಿ ಅನ್ನೋರು ಎಲಿಜಬಲ್ ಇದ್ರಾ ಅಂತ ಮೊದಲು ನೋಡಬೇಕು. ಯಾವುದೇ ಪರೀಕ್ಷೆ ಬರೆದರೂ ಅದನ್ನು ಮೌಲ್ಯಮಾಪನ ಮಾಡುವವರು ಯಡಿಯೂರಪ್ಪನವರೇ ಅಂತ ಗೊತ್ತಿಲ್ಲದೇ ಬರೆದಿದ್ದಾರೆ. ಇವರು ಕನ್ನಡದಲ್ಲಿ ಎಕ್ಸಾಮ್ ಬರೆದರು. ಆದರೆ ಅದು ಹಿಂದಿಯಲ್ಲಿ ಮೌಲ್ಯಮಾಪನ ಆಗಿದೆ. ಅದನ್ನು ಪರೀಕ್ಷೆ ಬರೆದವರು ಮರೆತಿದ್ದಾರೆ. ಯಡಿಯೂರಪ್ಪ ಎಲ್ಲೇ ಹೋದರು ಐದು ಸಾವಿರ ಜನ ಹಿಂದೆ ಬರ್ತಾರೆ ಆದರೆ ಪರೀಕ್ಷೆ ಬರೆದವರ ಹಿಂದೆ ಯಾರು ಬರುತ್ತಾರೆ..? ಅಂತ ಮಾಜಿ ಸಚಿವ ಸಿಪಿ ಯೋಗೇಶ್ವರ್ ಗೆ ಪರೋಕ್ಷವಾಗಿ ಟಾಂಗ್ ನೀಡಿದರು.

    ಯಡಿಯೂರಪ್ಪನವರು ಜೀವನದಲ್ಲಿ ಸೋತೇ ಇಲ್ಲ. ಇವತ್ತು-ನಾಳೆ ಸೋಲುವಂಥ ವಿಶ್ಲೇಷಣೆ ಮಾಡುವ ಅಗತ್ಯ ಇಲ್ಲ. ಪಕ್ಷಾತೀತವಾಗಿ ಯಡಿಯೂರಪ್ಪನವರು, ದೇವೇಗೌಡ್ರು ರಾಜ್ಯದ ನಾಯಕರು. ವಿಜಯೇಂದ್ರ ಅವರ ಸಾಮಥ್ರ್ಯ ಏನೆಂಬುದು ವರಿಷ್ಠರು ತೀರ್ಮಾನಿಸಿ ಅವರಿಗೆ ಸರಿಯಾದ ಸ್ಥಾನಮಾನ ನೀಡುತ್ತಾರೆ. ಅವರ ಬಗ್ಗೆ ನಾನು ಮಾತಾಡಲ್ಲ ಎಂದರು.

  • ನಾನು ರಕ್ತದಲ್ಲಿ ಬರೆದುಕೊಡ್ತೇನೆ, ಯಡಿಯೂರಪ್ಪ ಪೂರ್ಣಾವಧಿಗೆ ಮುಖ್ಯಮಂತ್ರಿ: ಪ್ರೀತಂ ಗೌಡ

    ನಾನು ರಕ್ತದಲ್ಲಿ ಬರೆದುಕೊಡ್ತೇನೆ, ಯಡಿಯೂರಪ್ಪ ಪೂರ್ಣಾವಧಿಗೆ ಮುಖ್ಯಮಂತ್ರಿ: ಪ್ರೀತಂ ಗೌಡ

    ಹಾಸನ: ಸೂರ್ಯ ಚಂದ್ರರಿರುವಷ್ಟೇ ಸತ್ಯ ಯಡಿಯೂರಪ್ಪ ಪೂರ್ಣಾವಧಿ ಮುಖ್ಯಮಂತ್ರಿ ಆಗಿರುತ್ತಾರೆ. ನಾನು ರಕ್ತದಲ್ಲಿ ಬರೆದುಕೊಡುತ್ತೇನೆ. ಯಡಿಯೂರಪ್ಪ ಪೂರ್ಣವಧಿ ಮುಖ್ಯಮಂತ್ರಿ ಆಗಿದ್ದು ಯಾವುದೇ ಬದಲಾವಣೆ ನಡೆಯುವುದಿಲ್ಲ ಎಂದು ಬಿಜೆಪಿ ಶಾಸಕ ಪ್ರೀತಂಗೌಡ ಅಭಿಪ್ರಾಯಪಟ್ಟಿದ್ದಾರೆ.

    ಹಾಸನದಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆದಿರೋ ವಿಚಾರ ಮತ್ತು ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಪ್ರೀತಂ ಗೌಡ, ಮಾಧ್ಯಮ ಮಿತ್ರರಿಗೆ ಯಾರು ಮಾಹಿತಿ ಕೊಡ್ತಾರೋ ಗೊತ್ತಿಲ್ಲ. ಮುಂಬರುವ ವಿಧಾನಸಭೆ, ಲೋಕಸಭೆ ಚುನಾವಣೆ ಕೂಡ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುತ್ತದೆ. ನಾಯಕತ್ವ ಬದಲಾವಣೆ ಕಪೋಲಕಲ್ಪಿತ. ಕೊರೊನಾ ಕಾಲದಲ್ಲಿ ನಾಯಕತ್ವ ಬದಲಾವಣೆ ಆದರೆ ಜನ ಆಕ್ರೋಶಗೊಂಡು ಛೀ ಥೂ ಅಂತಾರೆ ಎಂದರು.

    20 ಜನ ಡೆಲ್ಲಿಗೆ ಹೋಗಿರುವುದು ಕಪೋಲಕಲ್ಪಿತ. 20 ಜನ ಅಲ್ಲ 40 ಜನ ಡೆಲ್ಲಿಗೆ ಹೋದ್ರು ನಾಯಕತ್ವ ಬದಲಾವಣೆ ಆಗುವುದಿಲ್ಲ. ಮುಂಬರುವ ಚುನಾವಣೆ ಕೂಡ ಅವರ ನಾಯಕತ್ವದಲ್ಲೇ ನಡೆದು ಬಹುಮತ ಬರಲಿದೆ. ಜೆಡಿಎಸ್ ಮತ್ತು ಕಾಂಗ್ರೆಸ್‍ನವರು ಬಿಜೆಪಿಯ ನಾಯಕತ್ವ ಬದಲಾವಣೆ ಬಗ್ಗೆ ಕನಸಲ್ಲೂ ಯೋಚನೆ ಮಾಡಬಾರದು. ಮುಂದೊಂದು ದಿನ ಬಿವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಚುನಾವಣೆ ನಡೆದರು ಕೂಡ ಯಡಿಯೂರಪ್ಪ ಅವರೆ ಮುಖ್ಯಮಂತ್ರಿ ಆಗುತ್ತಾರೆ. ಆದರೆ ಈ ಅವಧಿಯಲ್ಲಿ ಅಂತು ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ. ನಾವೆಲ್ಲರೂ ಅವರ ಪರವಾಗಿ ಇರುತ್ತೇವೆ. ಶಾಸಕಾಂಗ ಪಕ್ಷದ ಸಭೆ ಕರೆದಿಲ್ಲ. ಹಾಗಿದ್ದರೆ ಶಾಸಕರಾದ ನಮಗೆ ತಿಳಿಯುತ್ತಿತ್ತು ಎಂದು ತಿಳಿಸಿದ್ದಾರೆ.

  • ನಮ್ಮಪ್ಪ ಮದುವೆ ಆಗು ಅಂತಿದ್ದಾರೆ ಏನು ಮಾಡೋಣ- ಸಭೆಯಲ್ಲಿ ಪ್ರಜ್ವಲ್ ರೇವಣ್ಣ ಹಾಸ್ಯ

    ನಮ್ಮಪ್ಪ ಮದುವೆ ಆಗು ಅಂತಿದ್ದಾರೆ ಏನು ಮಾಡೋಣ- ಸಭೆಯಲ್ಲಿ ಪ್ರಜ್ವಲ್ ರೇವಣ್ಣ ಹಾಸ್ಯ

    ಹಾಸನ: ಹತ್ತು ಆನೆ ಬೇಕಾದರೂ ಸಾಕ್ತೀನಿ, ನಮ್ಮಪ್ಪ ಮದ್ವೆ ಆಗು ಅಂತಿದ್ದಾರೆ ಏನು ಮಾಡೋಣ ಎಂದು ತುಂಬಿದ ಸಭೆಯಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಪುತ್ರ, ಸಂಸದ ಪ್ರಜ್ವಲ್ ರೇವಣ್ಣ ತಮಾಷೆ ಮಾಡಿದ ಪ್ರಸಂಗ ನಡೆದಿದೆ.

    ನಗರದ ಸಕಲೇಶಪುರದ ಪುರಭವನದಲ್ಲಿ ಆನೆ ಸಮಸ್ಯೆ ಬಗ್ಗೆ ಸಭೆ ನಡೆಯುತ್ತಿತ್ತು. ಈ ವೇಳೆ ಮಾಜಿ ಶಾಸಕ ವಿಶ್ವನಾಥ್ ಅವರು, ಹೊಳೆನರಸೀಪುರ ಕ್ಷೇತ್ರಕ್ಕೆ ಹತ್ತು ಆನೆ ಬಿಟ್ರೆ ಸಮಸ್ಯೆ ಬಗೆಹರಿಯುತ್ತೆ ಎಂದು ತಮಾಷೆ ಮಾಡಿದರು. ಈ ವೇಳೆ ಅವರ ಮಾತಿಗೆ ಪ್ರತ್ಯುತ್ತರ ನೀಡಿದ ಸಂಸದ ಪ್ರಜ್ವಲ್ ರೇವಣ್ಣ, ಹತ್ತು ಆನೆ ಬೇಕಾದರೂ ಸಾಕುತ್ತೇನೆ. ಆದರೆ ಏನ್ ಮಾಡೋದು ನಮ್ಮಪ್ಪ ಮದುವೆ ಆಗು ಅಂತಿದ್ದಾರೆ ಎಂದು ತಮಾಷೆ ಮಾಡಿದರು. ಇದರಿಂದ ಒಂದು ಕ್ಷಣ ಎಲ್ಲರೂ ನಗೆಗಡಲಲ್ಲಿ ತೇಲಿದರು.

    ಇದೇ ವೇಳೆ ಶಾಸಕ ಪ್ರೀತಂಗೌಡ ಅವರನ್ನು ಮೂರ್ಖ ಎಂದು ತುಂಬಿದ ಸಭೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಪರೋಕ್ಷವಾಗಿ ಜರಿದಿದ್ದಾರೆ. ಯಾರೋ ಮೂರ್ಖರು ಪ್ರಜ್ವಲ್ ರೇವಣ್ಣ ಸರಿಯಾಗಿ ಮಾತಾಡಿಲ್ಲ ಅದಕ್ಕೆ ಅನುದಾನ ಬಂದಿಲ್ಲ ಅಂತಾರೆ. ಎಂಪಿಯಾಗಿ ನಾವು ರಿಕ್ವೆಸ್ಟ್ ಮಾಡಿ ಧ್ವನಿ ಎತ್ತಬಹುದು. ಸಮಸ್ಯೆ ಬಗ್ಗೆ ಬಿಂಬಿಸಬಹುದು. ಆದರೆ ರಾಜ್ಯ ಸರ್ಕಾರ ಪ್ರಪೋಸಲ್ ಕಳುಹಿಸದೆ ಕೆಲಸ ಆಗಲ್ಲ. ಇದನ್ನು ಮೊದಲು ಅವರು ಅರ್ಥ ಮಾಡಿಕೊಳ್ಳಬೇಕು ಎಂದು ತಿರುಗೇಟು ನೀಡಿದರು.

    ಸಭೆಯಲ್ಲಿ ಸಚಿವರಾದ ಅರವಿಂದ ಲಿಂಬಾವಳಿ, ಗೋಪಾಲಯ್ಯ ಸೇರಿದಂತೆ ಶಾಸಕರು, ಸಾರ್ವಜನಿಕರು ಪಾಲ್ಗೊಂಡಿದ್ದರು.

  • ಪ್ರಜ್ವಲ್ ರೇವಣ್ಣ ಬೀಗರೂಟ, ಮದುವೆ ಊಟ ಮಾಡ್ತಾ ಕೂತ್ರೆ ಕೆಲಸ ಆಗಲ್ಲ: ಪ್ರೀತಂಗೌಡ

    ಪ್ರಜ್ವಲ್ ರೇವಣ್ಣ ಬೀಗರೂಟ, ಮದುವೆ ಊಟ ಮಾಡ್ತಾ ಕೂತ್ರೆ ಕೆಲಸ ಆಗಲ್ಲ: ಪ್ರೀತಂಗೌಡ

    – ಸಂಸತ್ತಿನಲ್ಲಿ ಪ್ರಜ್ವಲ್ ಹಾಜರಾತಿ ಕಡೆಯಿಂದ ಎರಡನೆಯವರೋ, ಮೂರನೆಯವರೋ

    ಹಾಸನ: ಜಿಲ್ಲೆಗೆ ಸಂಬಂಧಿಸಿದಂತೆ ಬಜೆಟ್ ನನಗೂ ಹತಾಶೆಯಾಗಿದ್ದು, ನಮ್ಮ ಸಂಸದರು ಇಲ್ಲಿ ಬೀಗರೂಟ, ಮದುವೆ ಊಟ ಮಾಡಿಕೊಂಡು ಕುಳಿತರೆ ಕೆಲಸ ಆಗಲ್ಲ ಎಂದು ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಶಾಸಕ ಪ್ರೀತಂ ಗೌಡ ವ್ಯಂಗ್ಯವಾಡಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದ್ದರೂ ಜಿಲ್ಲೆಯ ಸಮಸ್ಯೆಯನ್ನು ಕೇಂದ್ರದ ಗಮನಕ್ಕೆ ತರಬೇಕಾದವರು ಸಂಸದ ಪ್ರಜ್ವಲ್ ರೇವಣ್ಣ. ಅವರು ಸರಿಯಾಗಿ ಕೆಲಸ ಮಾಡಿಲ್ಲ ಎಂದು ಶಾಸಕ ಪ್ರೀತಂ ಗೌಡ ಪರೋಕ್ಷವಾಗಿ ವ್ಯಂಗ್ಯವಾಡಿದ್ದಾರೆ.

    ಸಂಸತ್ತಿನಲ್ಲಿ ಪ್ರಜ್ವಲ್ ರೇವಣ್ಣ ಹಾಜರಾತಿ ನೋಡಿದರೆ ಕಡೆಯಿಂದ ಎರಡನೆಯವರೋ, ಮೂರನೆಯವರೋ ಇರಬೇಕು. ಅವರು ಯುವಕರಿದ್ದಾರೆ, ಉತ್ತವಾಗಿ ಕೆಲಸ ಮಾಡುತ್ತಾರೆ ಎಂಬ ನೀರಿಕ್ಷೆ ಜನರಿಗೆ ಇತ್ತು. ಪ್ರಜ್ವಲ್ ರೇವಣ್ಣ ಲೋಕಸಭೆಗೆ ಹೋಗಿ ಮಾತನಾಡಲು ಜಿಲ್ಲೆಯ ಜನ ಆಯ್ಕೆ ಮಾಡಿದ್ದಾರೆ. ಅವರು ಜಿಲ್ಲೆಗೆ ಏನು ಬೇಕು, ಸಮಸ್ಯೆ ಏನು ಎಂಬ ಬಗ್ಗೆ ಬೆಳಕು ಚೆಲ್ಲಬೇಕು. ಆದರೆ ಇಲ್ಲಿ ಬೀಗರೂಟ, ಮದುವೆ ಮಾಡಿಕೊಂಡು ಕೂತರೆ ಕೆಲಸ ಆಗಲ್ಲ. ಹಿರಿಯರಾದ ದೇವೇಗೌಡರ ಮಾರ್ಗದರ್ಶನ ಪಡೆದು ಹಾಸನ ಸಂಸದರು ಕೆಲಸ ಮಾಡಬೇಕು ಎಂದು ಶಾಸಕ ಪ್ರೀತಂಗೌಡ ಟೀಕೆ ಮಾಡಿದ್ದಾರೆ.

  • ಕಾಲೇಜು ಕಟ್ಟುವ ಮುನ್ನ ರಸ್ತೆ ಮಾಡಬೇಕಿತ್ತು – ರೇವಣ್ಣ ವಿರುದ್ಧ ಪ್ರೀತಂ ಗೌಡ ಕಿಡಿ

    ಕಾಲೇಜು ಕಟ್ಟುವ ಮುನ್ನ ರಸ್ತೆ ಮಾಡಬೇಕಿತ್ತು – ರೇವಣ್ಣ ವಿರುದ್ಧ ಪ್ರೀತಂ ಗೌಡ ಕಿಡಿ

    ಹಾಸನ: ಇಷ್ಟು ದೊಡ್ಡ ಕಾಲೇಜು ಕಟ್ಟುವ ಮೊದಲು ರಸ್ತೆ ನಿರ್ಮಾಣ ಮಾಡಬೇಕಿತ್ತು ಇದನ್ನು ಹೊರತುಪಡಿಸಿ ಅವರು ನಾವು ಹೆಲಿಕಾಪ್ಟರ್ ನಲ್ಲಿ ಬರುವುದಲ್ಲವೇ ಎಂಬ ರೀತಿ ಪ್ಲಾನ್ ಮಾಡಿದ್ದಾರೆ. ಹಾಗಾಗಿ ಇಂತಹದೊಂದು ಸಮಸ್ಯೆಯಾಗಿದೆ ಎಂದು ಶಾಸಕ ಪ್ರೀತಂ ಜೆ. ಗೌಡ ಮತ್ತೊಮ್ಮೆ ರೇವಣ್ಣ ವಿರುದ್ಧ ಪರೋಕ್ಷವಾಗಿ ಗುಡುಗಿದ್ದಾರೆ.

     

    ಹಾಸನದ ಪಶುಸಂಗೋಪನಾ ಮತ್ತು ಸಂಶೋಧನಾ ಸಂಸ್ಥೆಗೆ ಇಂದು ಸಚಿವ ಪ್ರಭು ಚೌಹ್ಹಾಣ್ ಜೊತೆಯಲ್ಲಿ ಪ್ರೀತಂ ಗೌಡ ಭೇಟಿ ನೀಡಿದ ವೇಳೆ ಕಾಲೇಜು ಆಡಳಿತ ಮಂಡಳಿಯವರು, ರಿಂಗ್ ರಸ್ತೆಯಿಂದ ಕಾಲೇಜಿಗೆ ಬರಲು ಸರಿಯಾದ ರಸ್ತೆಯಿಲ್ಲ. ದಯಮಾಡಿ ಕಾಲೇಜಿಗೊಂದು ಸೂಕ್ತ ರಸ್ತೆ ವ್ಯವಸ್ಥೆ ಕಲ್ಪಿಸಿಕೊಡಿ ಎಂದು ಮನವಿ ಮಾಡಿಕೊಂಡರು.

    ಈ ಹಿಂದೆ ರಸ್ತೆಗಾಗಿ 5-10 ಕೋಟಿ ಖರ್ಚಾಗುತ್ತಿತ್ತು. ಆದರೆ ಈಗ 20-30ಕೋಟಿ ಖರ್ಚಾಗುತ್ತೆ ಎಂದು ಸಚಿವರಿಗೆ ಮನವಿ ಮಾಡಿದಾಗ ಸ್ಥಳೀಯ ಶಾಸಕರ ಗಮನಕ್ಕೆ ತಂದು ಕೂಡಲೇ ಸಮಸ್ಯೆಯನ್ನು ಬಗೆಹರಿಸುವುದಾಗಿ ಸಚಿವರು ತಿಳಿಸಿದರು. ಈ ವೇಳೆ ಮಾತಿನ ಮಧ್ಯೆ ಪ್ರವೇಶಿಸಿ ಮಾತನಾಡಿದ ಪ್ರೀತಂ ಗೌಡ, ನಾನು ಇಷ್ಟು ದೊಡ್ಡ ಕಾಲೇಜು ನಿರ್ಮಾಣ ಮಾಡುತ್ತಿರುವಾಗ ಮೊದಲು ರಸ್ತೆ ಮಾಡಬೇಕು. ನಂತರ ಕಾಲೇಜು ಮಾಡಬೇಕು ಎಂಬ ವಿಚಾರ ಈ ಹಿಂದೆ ಕಾಮಗಾರಿ ಮಾಡಿದವರಿಗೆ ಗೊತ್ತಿರಬೇಕಿತ್ತು. ಆದರೆ ಅವರು ನಾವು ಹೆಲಿಕಾಪ್ಟರ್ ನಲ್ಲಿ ಬರುವುದಲ್ಲವೇ ಎಂಬ ಯೋಚನೆಯಿಂದ ಪ್ಲಾನ್ ಮಾಡಿದ್ದಾರೆ. ಹಾಗಾಗಿ ಕಾಲೇಜಿಗೆ ರಸ್ತೆ ಸಮಸ್ಯೆಯಾಗಿದೆ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ವಿರುದ್ಧ ಪರೋಕ್ಷವಾಗಿ ಮಾತಿನ ಚಾಟಿ ಬೀಸಿದರು.

    2006-07ರಲ್ಲಿದ್ದ 20-20 ಸರ್ಕಾರದಲ್ಲಿ ಹಾಸನಕ್ಕೆ ಬೃಹತ್ ಕಟ್ಟಡವನ್ನು ಹೊಂದಿರು ಪಶುವೈದ್ಯಕೀಯ ಮತ್ತು ಸಂಶೋಧನಾ ಸಂಸ್ಥೆಯನ್ನು ಸ್ಥಾಪಿಸಲಾಗಿತ್ತು. ಆ ಬಳಿಕ ಅಲ್ಲಿಂದ ಇಲ್ಲಿಯ ತನಕ ರಸ್ತೆಯ ವಿಚಾರವಾಗಿ ಸ್ಥಳೀಯರು ನ್ಯಾಯಾಲಯದ ಮೆಟ್ಟಿಲೇರಿದ್ದು, ಕಾಲೇಜಿನ ರಸ್ತೆ ಸಂಪರ್ಕ ಇನ್ನು ಕಗ್ಗಂಟಾಗಿಯೇ ಉಳಿದಿದೆ.

  • ಎಲೆಕ್ಷನ್ ಅಂದ್ರೆ ಏನೂಂತ ಗ್ರಾ.ಪಂ ಚುನಾವಣೆಯಲ್ಲಿ ತೋರಿಸ್ತೇವೆ: ಪ್ರಜ್ವಲ್

    ಎಲೆಕ್ಷನ್ ಅಂದ್ರೆ ಏನೂಂತ ಗ್ರಾ.ಪಂ ಚುನಾವಣೆಯಲ್ಲಿ ತೋರಿಸ್ತೇವೆ: ಪ್ರಜ್ವಲ್

    – ವಿಧಾನಸೌಧದಲ್ಲಿ ಮತ್ತೊಮ್ಮೆ ಧ್ವಜ ಹಾರಿಸುತ್ತೇವೆ
    – ಪ್ರೀತಂಗೌಡ ವಿರುದ್ಧ ಪ್ರಜ್ವಲ್ ಕಿಡಿ

    ಹಾಸನ: ಚುನಾವಣೆ ಅಂದ್ರೆ ಏನು ಅಂತ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ತೋರಿಸುತ್ತೇವೆ ಎಂದು ಸಂಸದ ಪ್ರಜ್ವಲ್ ರೇವಣ್ಣ ವಾಗ್ದಾಳಿ ನಡೆಸಿದ್ದಾರೆ.

    ಹಾಸನ ತಾಲೂಕಿನ ತೇಜೂರು ಗ್ರಾಮದಲ್ಲಿ ರಸ್ತೆ ಗುದ್ದಲಿಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವು ತಂದಿರುವ ಅನುದಾನಕ್ಕೆ ಶಾಸಕ ಪ್ರೀತಂಗೌಡ ಗುದ್ದಲಿ ಪೂಜೆ ಮಾಡುತ್ತಿದ್ದಾರೆ. ಎಂಪಿ ಅನುದಾನದಲ್ಲಿ ಎಂಪಿಯವರ ಸಹಿ ಇಲ್ಲದೆ ರಸ್ತೆ ಮಂಜೂರಾತಿ ಆಗಲ್ಲ ಎಂಬುದು ಅವರಿಗೆ ಗೊತ್ತಿಲ್ಲ. ಅವರು ತಂದ ಅನುದಾನವನ್ನು ನಾವೇನು ಹೋಗಿ ಪೂಜೆ ಮಾಡಲ್ಲ. ನಾವು ತಂದಿರುವ ಅನುದಾನದಲ್ಲಿ ಈಗಾಗಲೇ ಒಂದು ಬದಿಯಿಂದ ಅರ್ಧ ಕೆಲಸ ಆಗಿದೆ. ಅಂತಹ ಕಾಮಗಾರಿಗೆ ಮತ್ತೊಂದು ಬದಿಯಿಂದ ಪ್ರೀತಂಗೌಡ ಪೂಜೆ ಮಾಡುತ್ತಿದ್ದಾರೆ. ಇಂತಹ ಪರಿಸ್ಥಿತಿ ಹಾಸನ ತಾಲೂಕಿಗೆ ಬಂದಿರೋದು ನಮ್ಮ ದುರಾದೃಷ್ಟ ಎಂದು ವಾಗ್ದಾಳಿ ನಡೆಸಿದರು.

    ಅಧಿಕಾರಿಗಳು ನನ್ನ ಜೊತೆ ಇದ್ದಾರೆ ಅಂತಾರೆ. ಅಧಿಕಾರ ದುರುಪಯೋಗಪಡಿಸಿಕೊಂಡು ಬೇರೆಯವರ ಮೇಲೆ ಕೇಸ್ ಹಾಕಿಸಿ, ಕಾರ್ಯಕರ್ತರ ನಡುವೆ ಹೊಡೆದಾಡಿಸುವ ಕೆಲಸ ಮಾಡುತ್ತಿದ್ದಾರೆ. ಅದು ಅವರನ್ನ ಸದಾಕಾಲ ಕಾಪಾಡಲ್ಲ. ಅವರು ನನಗೆ ಬುದ್ಧಿವಾದ ಹೇಳುವುದು ಬೇಡ. ನನಗೆ ಬುದ್ಧಿವಾದ ಹೇಳಲು 50 ವರ್ಷ ರಾಜಕಾರಣ ಮಾಡಿದ ದೇವೇಗೌಡರು, ರೇವಣ್ಣ ಇದ್ದಾರೆ ಎಂದು ಕಿಡಿಕಾರಿದರು.

    ಪ್ರೀತಂ ಅವರು ಯಾವಾಗಲೂ ದೇವೇಗೌಡರ ಹೆಸರೇಳಿಕೊಂಡು ಎಂಪಿ ಆದ ಎಂದು ಹೇಳುತ್ತಿರುತ್ತಾರೆ. ಹೌದು ನಾನು ದೇವೇಗೌಡರ ಹೆಸರೇಳಿಕೊಂಡೇ ಎಂಪಿ ಆಗಿರೋದು. ಇದನ್ನು ಗಟ್ಟಿ ಧ್ವನಿಯಲ್ಲಿ ಹೇಳುತ್ತೇನೆ. ಅವರ ಹೆಸರು, ಸಿದ್ಧಾಂತವನ್ನು ಇಟ್ಟುಕೊಂಡೇ ನಾವೆಲ್ಲ ರಾಜಕಾರಣ ಮಾಡುತ್ತಿದ್ದೇವೆ. ಯಡಿಯೂರಪ್ಪ ಅವರ ಮಗ ನನ್ನ ಜೊತೆ ಚೆನ್ನಾಗಿದ್ದಾರೆ ಎಂದು ಕೊಚ್ಚಿಕೊಳ್ಳುತ್ತಾರೆ. ಅವರು ಎಷ್ಟು ಅನುದಾನ ತಂದಿದ್ದಾರೆ. ಅವರ ಸರ್ಕಾರ ಲೂಟಿ ಹೊಡೆಯುತ್ತಿದೆ. ನಾವು ಸುಮ್ಮನೆ ಕುಳಿತಿದ್ದೇವೆ ಎಂದರೆ ನಮಗೆ ಮತನಾಡಲು ಬರಲ್ಲ ಅಂತಲ್ಲ. ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ. ಹಾಸನ ತಾಲೂಕಿನಲ್ಲಿ ಹೊಸದಾಗಿ ಎಂಎಲ್‍ಎ ಆಗಿದ್ದಾರೆ. ಅವರಿಗೆ ಸ್ವಲ್ಪ ತಿಳುವಳಿಕೆ ಕಡಿಮೆ ಇದೆ. ಚುನಾವಣೆ ಅಂದ್ರೆ ಏನು ಎಂದು ಗ್ರಾಮಪಂಚಾಯ್ತಿ ಚುನಾವಣೆಯಲ್ಲಿ ತೋರಿಸುತ್ತೇವೆ ಎಂದರು.

    ಶಿರಾ ಚುನಾವಣೆ ಸಂಬಂಧ ಮಂತ್ರಕ್ಕೆ ಮಾವಿನಕಾಯಿ ಉದುರಲ್ಲ ಎಂಬ ಪ್ರೀತಂಗೌಡ ಹೇಳಿಕೆಗೆ ತಿರುಗೇಟು ನೀಡಿದ ಪ್ರಜ್ವಲ್ ರೇವಣ್ಣ, ನಾವು ಶಿರಾಗೆ ಮಾವಿನಕಾಯಿ ಉದುರಿಸಲು ಹೋಗಿದ್ದೆ ಅಂತಾ ಹೇಳಿದ್ನಾ. ಶಿರಾದಲ್ಲಿ ದುಡ್ಡು ಹಂಚಿಕೆ ಮಾಡಿ ಮತ ಹಾಕಿಸಿಕೊಂಡಿದ್ದಾರೆ. ಯಡಿಯೂರಪ್ಪ ಕೆಜೆಪಿ ಮಾಡಿ 10 ಸೀಟು ತಗೊಂಡ್ರು. ಹಾಗಾದ್ರೆ ಯಡಿಯೂರಪ್ಪ ಸೋತಿಲ್ವಾ. ನಾವು ಮತ್ತೊಮ್ಮೆ ವಿಧಾನಸೌಧದಲ್ಲಿ ಧ್ವಜ ಹಾರಿಸುವ ಕೆಲಸ ಮಾಡುತ್ತೇವೆ.

  • ಆ ನಿಂಬೆಹಣ್ಣನ್ನು ಹೆದರಿಸುವ ಶಕ್ತಿ ಪ್ರೀತಂಗೌಡರ ನಿಂಬೆಹಣ್ಣಿಗಿದೆ: ಎಸ್‍ಟಿಎಸ್ ವ್ಯಂಗ್ಯ

    ಆ ನಿಂಬೆಹಣ್ಣನ್ನು ಹೆದರಿಸುವ ಶಕ್ತಿ ಪ್ರೀತಂಗೌಡರ ನಿಂಬೆಹಣ್ಣಿಗಿದೆ: ಎಸ್‍ಟಿಎಸ್ ವ್ಯಂಗ್ಯ

    ಹಾಸನ: ಆ ನಿಂಬೆಹಣ್ಣಿನ ಶಕ್ತಿಯನ್ನು ಹೆದರಿಸುವ ಶಕ್ತಿ ಪ್ರೀತಂಗೌಡ ಅವರ ನಿಂಬೆಹಣ್ಣಿಗಿದೆ ಎಂದು ಸಚಿವ ಎಸ್‍ಟಿ.ಸೋಮಶೇಖರ್ ಪರೋಕ್ಷವಾಗಿ ರೇವಣ್ಣ ಅವರು ಬಗ್ಗೆ ವ್ಯಂಗ್ಯವಾಡಿದ್ದಾರೆ.

    ಇಂದು ಹಾಸನದ ಚನ್ನರಾಯಪಟ್ಟಣದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಹಾಸನದಲ್ಲಿ ಪ್ರೀತಂಗೌಡ್ರೇ ಇರಬೇಕು. ನಿಂಬೆಹಣ್ಣಿಗೆ ಪ್ರತಿ ವಿರುದ್ಧ ನಿಂಬೆಹಣ್ಣು ತೋರಿಸುವಂತವರು ಪ್ರೀತಂಗೌಡ. ಹೀಗಾಗಿ ಹಾಸನ ಜಿಲ್ಲೆಗೆ ಅವರೇ ಸರಿ ಎಂದು ಪ್ರೀತಂಗೌಡರನ್ನು ಹಾಡಿಹೊಗಳಿದ್ದಾರೆ.

    ಆ ನಿಂಬೆಹಣ್ಣು ತೋರಿಸಿದರೆ ರಾಜ್ಯದ ಎಂತೆಂತಹ ನಾಯಕರೇ ತತ್ತರಿಸಿ ಹೋಗುತ್ತಾರೆ. ಆದರೆ ಆ ನಿಂಬೆಹಣ್ಣಿಗೆ ಪ್ರತಿ ನಿಂಬೆಹಣ್ಣು ತೋರಿಸಿ ಕಂಟ್ರೋಲ್ ಮಾಡುವ ಶಕ್ತಿ ಇದ್ದರೆ ಅದು ಪ್ರೀತಂಗೌಡರಿಗೆ ಮಾತ್ರ. ಅವರಿಗೆ ಇನ್ನೂ ಹೆಚ್ಚಿನ ಶಕ್ತಿಯನ್ನು ನಾವು ನೀಡುತ್ತೇವೆ ಎಂದು ಮಾಜಿ ಸಚಿವ ಹೆಚ್‍ಡಿ.ರೇವಣ್ಣ ನಿಂಬೆಹಣ್ಣಿನ ಶಕ್ತಿ ವಿರುದ್ಧ ಪರೋಕ್ಷವಾಗಿ ಮಾತನಾಡಿದ್ದಾರೆ.

  • ಅಧಿಕಾರಿಗಳ ಬಗ್ಗೆ ರೇವಣ್ಣ ಹೇಳಿಕೆಗೆ ಪ್ರೀತಂ ಗೌಡ ತಿರುಗೇಟು

    ಅಧಿಕಾರಿಗಳ ಬಗ್ಗೆ ರೇವಣ್ಣ ಹೇಳಿಕೆಗೆ ಪ್ರೀತಂ ಗೌಡ ತಿರುಗೇಟು

    – ಪಾಳೇಗಾರಿಕೆ ಸಂಸ್ಕೃತಿ ನಡೆಯಲ್ಲ

    ಹಾಸನ: ಮಾಜಿ ಸಚಿವ ರೇವಣ್ಣ ಅವರು ಮಾಡಿದ್ರೆ ರಾಜಕಾರಣ, ಬೇರೆಯವರು ಮಾಡಿದ್ರೆ ಕಾನೂನು ಬಾಹಿರ ಅನ್ನೋದಾದ್ರೆ ನಾವು ಕೂಡ ರಾಜಕಾರಣಾನೆ ಮಾಡುತ್ತೀವಿ. ಹಾಸನದಲ್ಲಿ ಪಾಳೇಗಾರಿಕೆ ಸಂಸ್ಕೃತಿ ನಡೆಯಲ್ಲ ಎಂದು ಮಾಜಿ ಸಚಿವ ರೇವಣ್ಣಗೆ ಶಾಸಕ ಪ್ರೀತಂಗೌಡ ತಿರುಗೇಟು ನೀಡಿದ್ದಾರೆ.

    ಅಧಿಕಾರಿಗಳು ಬಿಜೆಪಿ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ರೇವಣ್ಣ ಆರೋಪ ಮಾಡಿದ್ರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಪ್ರೀತಂಗೌಡ, ಮುಂಚೆ ಇವರು ಹೇಳಿದ್ದೇ ಶಾಸನ ಎಂಬಂತೆ ಇತ್ತು. ಆ ಶಾಸನ, ಪಾಳೇಗಾರಿಕೆ ಸಂಸ್ಕೃತಿ ಈಗ ನಡೆಯಲ್ಲ. ಇದು ಪ್ರಜಾಪ್ರಭುತ್ವ ವ್ಯವಸ್ಥೆ. ಜನ ಏನು ಅಪೇಕ್ಷೆ ಪಡುತ್ತಾರೋ ಆ ಕೆಲಸವನ್ನು ಅಧಿಕಾರಿಗಳು ಮಾಡುತ್ತಿದ್ದಾರೆ. ರೇವಣ್ಣ ಅವರು ಅಧಿಕಾರಿಗಳ ಬಗ್ಗೆ ಹಗುರವಾಗಿ ಮಾತನಾಡಬಾರದು ಎಂದು ಕಿವಿಮಾತು ಹೇಳಿದ್ದಾರೆ. ಇದನ್ನೂ ಓದಿ: ಮಂಡ್ಯ, ತುಮಕೂರಲ್ಲಿ ಜೆಡಿಎಸ್ ಸೋಲಲು ಕಾಂಗ್ರೆಸ್, ಬಿಜೆಪಿ ಹೊಂದಾಣಿಕೆಯೇ ಕಾರಣ: ರೇವಣ್ಣ

    ಹಾಸನ ನಗರಸಭೆ ಅಧ್ಯಕ್ಷಗಾದಿ ಎಸ್‍ಟಿ ಪಂಗಡಕ್ಕೆ ಮೀಸಲಾಗಿರುವುದರ ಬಗ್ಗೆ ಅಸಮಾಧಾನ ಹೊರಹಾಕಿದ್ದ ರೇವಣ್ಣ ಇದು ಕಾನೂನು ಬಾಹಿರ ಎಂದು ಹೇಳಿದ್ರು. ಮಾಜಿ ಸಚಿವ ರೇವಣ್ಣ ಆರೋಪಕ್ಕೆ ಶಾಸಕ ಪ್ರೀತಂಗೌಡ ಖಡಕ್ಕಾಗೇ ಪ್ರತಿಕ್ರಿಯಿಸಿದ್ದು, ಸರ್ಕಾರ ಕಾನೂನಿನಂತೆ ಮೀಸಲಾತಿ ನಿಗದಿ ಮಾಡಿದೆ. ಈ ಹಿಂದೆ ಹಾಸನ ನಗರಸಭೆಯ 35 ವಾರ್ಡಿನ ಮೀಸಲಾತಿಯನ್ನ ಕಾಂಗ್ರೆಸ್ ಸರ್ಕಾರ ಇದ್ದಾಗ ಪ್ರಕಟಿಸಿತ್ತು. ಇವರು ಅಧಿಕಾರಕ್ಕೆ ಬಂದ ನಂತರ ಮೀಸಲಾತಿ ಯಾಕೆ ಬದಲಾಯಿಸಿದ್ರು ನೆನಪಿಸಿಕೊಳ್ಳಬೇಕು. ಆಗ ಕಾನೂನು ಎಲ್ಲಿ ಹೋಗಿತ್ತು. ಅವರು ಮಾಡಿದ್ರೆ ರಾಜಕಾರಣ, ಬೇರೆಯವರು ಮಾಡಿದ್ರೆ ಕಾನೂನು ಬಾಹಿರ ಅನ್ನೋದಾದ್ರೆ ನಾವು ರಾಜಕಾರಣಾನೇ ಮಾಡ್ತೀವಿ ಎಂದರು.

    4 ನೇ ವಾರ್ಡಿನಲ್ಲಿ ಅತೀ ಹೆಚ್ಚು ಪರಿಶಿಷ್ಟಜಾತಿ ಜನಾಂಗದವರಿದ್ರು. ಆದರೆ ಅದನ್ನು ಜನರಲ್ ಮಾಡಿ ಯಾವ ಕಾನೂನು ಪಾಲನೆ ಮಾಡಿದ್ರು. ರಾಜಕಾರಣದಲ್ಲಿ ಹಾಕುವ ಪಟ್ಟನ್ನ ರೇವಣ್ಣನವರೂ ಮಾಡಿದ್ರು. ನಾನು ಮಾಡ್ತೀನಿ. ಅದಕ್ಕೆ ಹತಾಶರಾಗದೆ ರೇವಣ್ಣ, ರಾಜಕಾರಣವನ್ನು ಒಪ್ಪಿಕೊಳ್ಳಬೇಕು. ಹಾಸನ ನಗರಸಭೆಯಲ್ಲಿ ಯಾರಿಗೂ ಬಹುಮತವಿಲ್ಲ. ಹಾಸನ ವಿಧಾನಸಭೆ ಜನ ಅವರ ಪರವಾಗಿಲ್ಲ ಎಂಬುದನ್ನು ರೇವಣ್ಣ ಅರ್ಥ ಮಾಡಿಕೊಳ್ಳಬೇಕು. ಹಾಸನ ಜನ ಅಭಿವೃದ್ಧಿ ಪರ, ಬಿಜೆಪಿ ಪರ ಇದ್ದಾರೆ. ಹೀಗಾಗಿ ರೇವಣ್ಣ ಅವರು ನಮಗೆ ಸಹಕಾರ ಕೊಡಬೇಕು ಎಂದು ಮನವಿ ಮಾಡಿದ್ದಾರೆ.

  • ವಿಜಯೇಂದ್ರ ಸೂಪರ್ ಸಿಎಂ ಅಲ್ಲ, ಮುಂದೊಂದು ದಿನ ಸಿಎಂ ಆಗ್ತಾರೆ: ಪ್ರೀತಂ ಗೌಡ

    ವಿಜಯೇಂದ್ರ ಸೂಪರ್ ಸಿಎಂ ಅಲ್ಲ, ಮುಂದೊಂದು ದಿನ ಸಿಎಂ ಆಗ್ತಾರೆ: ಪ್ರೀತಂ ಗೌಡ

    ಹಾಸನ: ಯಡಿಯೂರಪ್ಪ ಪೂರ್ಣಾವಧಿಗೆ ಮುಖ್ಯಮಂತ್ರಿ ಆಗಿರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ. ಮುಂದಿನ ಚುನಾವಣೆ ಕೂಡ ಅವರ ನೇತೃತ್ವದಲ್ಲಿ ನಡೆಯುತ್ತೆ ಎಂದು ಹಾಸನದಲ್ಲಿ ಶಾಸಕ ಪ್ರೀತಂ ಗೌಡ ಭವಿಷ್ಯ ನುಡಿದಿದ್ದಾರೆ.

    ಪ್ರಧಾನಿ ನರೇಂದ್ರಮೋದಿ ಹುಟ್ಟುಹಬ್ಬದ ಪ್ರಯುಕ್ತ ಹಿಮ್ಸ್ ಆವರಣದಲ್ಲಿ ಕೊರೊನಾ ವಾರಿಯರ್ಸ್‍ಗೆ ಅಭಿನಂದನೆ ಸಲ್ಲಿಸಿದ ನಂತರ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಚರ್ಚೆಯಿಂದ ಯಾರಿಗೆ ಖುಷಿಯಾಗುತ್ತೋ ಅವರೇ ಇದನ್ನೆಲ್ಲ ಹುಟ್ಟುಹಾಕಿದ್ದಾರೆ. ಮಾಧ್ಯಮದ ಸ್ನೇಹಿತರು ಇದನ್ನು ಆರೋಗ್ಯಕರವಾಗಿ ಚರ್ಚೆ ಮಾಡುತ್ತಿದ್ದಾರೆ ಅಷ್ಟೇ ಎಂದರು.

    ಇಂತಹ ಚರ್ಚೆಗೆ ಪ್ರೋತ್ಸಾಹ ಕೊಡಲು ಒಬ್ಬರೂ ಶಾಸಕರಿರುವುದಿಲ್ಲ. ಎಲ್ಲಾ ಶಾಸಕರು ಸಿಎಂ ಅವರ ಹಿಂದೆ ಇದ್ದೇವೆ. ವಿವಿಧ ಅಭಿವೃದ್ಧಿ ಕಾಮಗಾರಿಗೆ ಕೇಂದ್ರದಿಂದ ಹಣ ತರುವ ಯೋಜನೆಯೊಂದಿಗೆ ಮುಖ್ಯಮಂತ್ರಿಗಳು ದೆಹಲಿಗೆ ಹೋಗಿದ್ದಾರೆ ಅಷ್ಟೇ. ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳು, ರಾಜ್ಯಾಧ್ಯಕ್ಷರಿಗೆ ಬಿಟ್ಟ ವಿಚಾರ. ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ನಾನು ಪಕ್ಷದ ಶಿಸ್ತಿನ ಸಿಪಾಯಿ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಸಂಪುಟ ಪುನರ್‌ ರಚನೆಯಾದ್ರೆ ಮೂವರು ಸಚಿವರಿಗೆ ಕೊಕ್ – 7 ಶಾಸಕರಿಗೆ ಸಚಿವ ಸ್ಥಾನ?

    ಇದೇ ವೇಳೆ ವಿಜಯೇಂದ್ರ ಸೂಪರ್ ಸಿಎಂ ಎಂಬ ಪ್ರತಿಪಕ್ಷಗಳ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರ ಪ್ರಭಾವ ಹೆಚ್ಚಾಗುತ್ತಿದ್ದು, ರಾಜ್ಯದ ನಾಯಕತ್ವ ವಹಿಸಿಕೊಳ್ಳಲು ಮುಂದಾಳತ್ವದಲ್ಲಿ ಬರುತ್ತಿದ್ದಾರೆ. ಅವರು ಬೆಳೆಯುತ್ತಿದ್ದಾರೆ ಎಂದು ಹೀಗೆ ವಿರೋಧ ಪಕ್ಷದವರು ಹೀಗೆ ಮಾತನಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಸಿಎಂ ಆಗುವ ಎಲ್ಲ ಅರ್ಹತೆ ಮತ್ತು ಯೋಗ್ಯತೆಯನ್ನು ಅವರು ಇಟ್ಟುಕೊಂಡಿದ್ದಾರೆ. ಹೀಗಾಗಿ ಅವರು ಸೂಪರ್ ಸಿಎಂ ಅಲ್ಲ ಮುಂದೊಂದು ದಿನ ಸಿಎಂ ಆಗುತ್ತಾರೆ ಎಂದು ಭವಿಷ್ಯ ನುಡಿದರು.