Tag: pregnancy photoshoot

  • ಬೇಬಿ ಬಂಪ್ ಫೋಟೋಶೂಟ್ ಹಂಚಿಕೊಂಡ ‘ಲಕ್ಷ್ಮಿ ಬಾರಮ್ಮ’ ನಟಿಯರು

    ಬೇಬಿ ಬಂಪ್ ಫೋಟೋಶೂಟ್ ಹಂಚಿಕೊಂಡ ‘ಲಕ್ಷ್ಮಿ ಬಾರಮ್ಮ’ ನಟಿಯರು

    ಕಿರುತೆರೆಯ ಜನಪ್ರಿಯ ಲಕ್ಷ್ಮಿ ಬಾರಮ್ಮ ಸೀರಿಯಲ್‌ ನಟಿಯರಾದ ನೇಹಾ ಗೌಡ (Neha Gowda) ಮತ್ತು ಕವಿತಾ (Kavitha Gowda) ಇಬ್ಬರೂ ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಬೇಬಿ ಬಂಪ್ ತೋರಿಸಿ ಪರಸ್ಪರ ಶುಭಾಶಯಗಳನ್ನು ಹೇಳಿದ್ದಾರೆ. ಪ್ರೆಗ್ನೆನ್ಸಿ ಫೋಟೋಶೂಟ್ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.

    ಒಂದೇ ಧಾರಾವಾಹಿಯಲ್ಲಿ ನಟಿಸಿದ ಇಬ್ಬರೂ ನಟಿಯರು ಪ್ರೆಗ್ನೆಂಟ್ ಆಗಿದ್ದಾರೆ. ನೇಹಾ, ಕವಿತಾ ಗೌಡ ಮನೆಗೆ ಹೊಸ ಅತಿಥಿ ಆಗಮಿಸುತ್ತಿರುವ ಖುಷಿಯಲ್ಲಿದ್ದಾರೆ. ಹ್ಯಾಪಿ ಡೆಲಿವರಿ ಎಂದು ಈ ನಟಿಯರು ಪರಸ್ಪರ ಶುಭಹಾರೈಸಿದ್ದಾರೆ. ಸೀರಿಯಲ್‌ನಲ್ಲಿ ಸಹೋದರಿಯರಾಗಿ ನಟಿಸಿದ್ದ ಚಿನ್ನು ಮತ್ತು ಗೊಂಬೆ ರಿಯಲ್ ಲೈಫ್‌ನಲ್ಲಿಯೂ ಉತ್ತಮ ಒಡನಾಟ ಹೊಂದಿದ್ದಾರೆ. ಒಟ್ಟಿಗೆ ತಾಯಿಯಾಗುತ್ತಿರುವ ಸಂಭ್ರಮವನ್ನು ನಟಿಯರು ಹಂಚಿಕೊಂಡಿದ್ದಾರೆ.

     

    View this post on Instagram

     

    A post shared by Neha Ramakrishna (@neharamakrishna)

    ಇತ್ತೀಚೆಗೆ ನೇಹಾ ಗೌಡ ಸೀಮಂತ ಶಾಸ್ತ್ರ ಅದ್ಧೂರಿಯಾಗಿ ಮಾಡಲಾಗಿತ್ತು. ಅದಷ್ಟೇ ಅಲ್ಲ, ವೆಸ್ಟ್‌ರ್ನ್‌ ಸ್ಟೈಲಿನಲ್ಲಿ ಬೇಬಿ ಶವರ್ ಕೂಡ ಆಚರಿಸಿದ್ದರು. ಇದನ್ನೂ ಓದಿ:ರಶ್ಮಿಕಾ ಮಂದಣ್ಣಗೆ ಅಪಘಾತ: ಜೀವನ ಕ್ಷಣಿಕ ಎಂದ ‘ಪುಷ್ಪ’ ನಟಿ

    ಹಾಗೆಯೇ ಪತಿ ಚಂದನ್ ಜೊತೆ ಕವಿತಾ ಗೌಡ ಪ್ರೆಗ್ನೆನ್ಸಿ ಫೋಟೋಶೂಟ್ ಹಂಚಿಕೊಂಡು ಸಂಭ್ರಮಿಸಿದ್ದರು. ಒಟ್ನಲ್ಲಿ ಸ್ಯಾಂಡಲ್‌ವುಡ್‌ನಲ್ಲಿ ನಟಿಮಣಿಯರು ತಾಯಿಯಾಗುತ್ತಿರುವ ಗುಡ್ ನ್ಯೂಸ್ ಕೊಡುತ್ತಾ ಸದ್ದು ಮಾಡ್ತಿದ್ದಾರೆ.

  • ಪ್ರೆಗ್ನೆನ್ಸಿ ಫೋಟೋಶೂಟ್‌ನಲ್ಲಿ ಕಂಗೊಳಿಸಿದ ಹರ್ಷಿಕಾ ಪೂಣಚ್ಚ

    ಪ್ರೆಗ್ನೆನ್ಸಿ ಫೋಟೋಶೂಟ್‌ನಲ್ಲಿ ಕಂಗೊಳಿಸಿದ ಹರ್ಷಿಕಾ ಪೂಣಚ್ಚ

    ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ (Harshika Poonacha) ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದರ ನಡುವೆ ಹೊಸ ಬೇಬಿ ಬಂಪ್ (Baby Bump) ಫೋಟೋಶೂಟ್‌ವೊಂದನ್ನು ನಟಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕ್ಯಾಮೆರಾ ಕಣ್ಣಿಗೆ ನಟಿ ಮುದ್ದಾಗಿ ಪೋಸ್ ನೀಡಿದ್ದಾರೆ. ಈ ಫೋಟೋಸ್ ಇಂಟರ್‌ನೆಟ್‌ನಲ್ಲಿ ಸದ್ದು ಮಾಡುತ್ತಿದೆ. ಇದನ್ನೂ ಓದಿ:‘ಮಂಜುಮ್ಮೆಲ್ ಬಾಯ್ಸ್’ ಚಿತ್ರದ ಸಹಾಯಕ ನಿರ್ದೇಶಕ ನಿಧನ

    ನೇರಳೆ ಬಣ್ಣದ ಸೀರೆಯುಟ್ಟು ಹರ್ಷಿಕಾ ಪ್ರೆಗ್ನೆನ್ಸಿ ಫೋಟೋಶೂಟ್‌ನಲ್ಲಿ ಮಿರ ಮಿರ ಎಂದು ಮಿಂಚಿದ್ದಾರೆ. ಫೋಟೋದಲ್ಲಿ ತಾಯ್ತನದ ಕಳೆ ಎದ್ದು ಕಾಣುತ್ತಿದೆ. ನಟಿಯ ಬ್ಯಾಕ್ ಟು ಬ್ಯಾಕ್ ಬೇಬಿ ಬಂಪ್ ಫೋಟೋಶೂಟ್‌ಗೆ ಫ್ಯಾನ್ಸ್ ಮೆಚ್ಚುಗೆ ಸೂಚಿಸಿದ್ದಾರೆ.

    ಹರ್ಷಿಕಾ ಮತ್ತು ಭುವನ್ ದಂಪತಿ ಮೊದಲ ಮಗುವಿನ ಆಗಮನಕ್ಕಾಗಿ ಎದುರು ನೋಡ್ತಿದ್ದಾರೆ. ಚೊಚ್ಚಲ ಮಗು ಆಗಮನಕ್ಕೆ ದಿನಗಣನೆ ಶುರುವಾಗಿದ್ದು, ಮನೆಯಲ್ಲಿ ಸಂಭ್ರಮ ಮನೆ ಮಾಡಿದ್ದಾರೆ. ಇದನ್ನೂ ಓದಿ:ರಣ್‌ವೀರ್ ಸಿಂಗ್ ಜೊತೆ ಹೆಜ್ಜೆ ಹಾಕಲಿದ್ದಾರೆ ನಾಗಚೈತನ್ಯ ಭಾವಿ ಪತ್ನಿ

    ಜು.2ರಂದು ಕೊಡಗು ಶೈಲಿಯಲ್ಲಿ ಬೇಬಿ ಬಂಪ್ ಫೋಟೋಶೂಟ್ ಮಾಡಿಸಿ ತಾಯಿಯಾಗುತ್ತಿರುವ ಗುಡ್ ನ್ಯೂಸ್ ಅನ್ನು ನಟಿ ಹಂಚಿಕೊಂಡಿದ್ದರು. ಇಡೀ ಕುಟುಂಬ ಈ ಫೋಟೋಶೂಟ್‌ನಲ್ಲಿ ಭಾಗಿಯಾಗಿತ್ತು.

    ಅಂದಹಾಗೆ, ಹಲವು ವರ್ಷಗಳು ಪ್ರೀತಿಸಿ, ಆ.24ರಂದು ಹರ್ಷಿಕಾ ಮತ್ತು ಭುವನ್ ಜೋಡಿ ಹಸೆಮಣೆ ಏರಿದರು. ಹುಟ್ಟೂರು ಕೊಡಗಿನಲ್ಲಿ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಈ ಮದುವೆಗೆ ಪೂಜಾ ಗಾಂಧಿ, ಗೋಲ್ಡನ್ ಸ್ಟಾರ್ ಗಣೇಶ್ ಸೇರಿದಂತೆ ಅನೇಕರು ಭಾಗಿಯಾಗಿ ಶುಭಕೋರಿದ್ದರು.

    ಇನ್ನೂ ಸಿನಿಮಾ ವಿಚಾರಕ್ಕೆ ಬರೋದಾದ್ರೆ, ಪತಿ ಭುವನ್ (Actor Bhuvan) ನಟಿಸಲಿರುವ ಮುಂಬರುವ ಚಿತ್ರಕ್ಕೆ ಹರ್ಷಿಕಾ ಅವರೇ ನಿರ್ಮಾಣದ ಹೊಣೆ ಹೊತ್ತಿದ್ದಾರೆ. ಸದ್ಯ ಶೂಟಿಂಗ್ ಕೂಡ ಭರದಿಂದ ನಡೆಯುತ್ತಿದೆ.

  • ವಿಭಿನ್ನವಾಗಿ ಪ್ರೆಗ್ನೆನ್ಸಿ ಫೋಟೋಶೂಟ್ ಮಾಡಿಸಿಕೊಂಡ ನಟಿ ದಿಶಾ..!

    ವಿಭಿನ್ನವಾಗಿ ಪ್ರೆಗ್ನೆನ್ಸಿ ಫೋಟೋಶೂಟ್ ಮಾಡಿಸಿಕೊಂಡ ನಟಿ ದಿಶಾ..!

    ಬೆಂಗಳೂರು: ಫ್ರೆಂಚ್ ಬಿರಿಯಾನಿ ಸುಂದರಿ ದಿಶಾ ಮದನ್ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇವರು ಬೇಬಿ ಬಂಪ್ ಫೋಟೋಶೂಟ್ ಮಾಡಿಸಿದ್ದು, ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

    ಮಾರ್ಚ್ 2022ಕ್ಕೆ ಕಾಯುತ್ತಿರುವೆ. ಮೂರರಿಂದ ನಾಲ್ವರಾಗುತ್ತಿದ್ದೇವೆ. 2022ರಲ್ಲಿ ನನ್ನ ಮೊದಲ ಮಗ ಅಣ್ಣನಾಗುತ್ತಾನೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡು ತಾವು 2ನೇ ಮಗುವಿನ ನಿರೀಕ್ಷೆಯಲ್ಲಿರುವ ವಿಚಾರವನ್ನು ಈ ಹಿಂದೆ ಹಂಚಿಕೊಂಡಿದ್ದರು. ಇದೀಗ ನಟಿ, ಸಖತ್ ಬೋಲ್ಡ್ ಲುಕ್‍ನಲ್ಲಿ ಬೇಬಿ ಬಂಪ್ ಫೋಟೋಶೂಟ್ ಮಾಡಿಸಿದ್ದಾರೆ. ಇವರ ಫೋಟೋಗಳಿಗೆ ನೆಟ್ಟಿಗರು ಕಾಮೆಂಟ್ ಮಾಡುತ್ತಾ ಮೆಚ್ಚುಗೆ ಸೂಚಿಸುತ್ತಿದ್ದಾರೆ.

    ನಟಿ ದಿಶಾ ಮದನ್ ಹಾಗೂ ಪತಿ ಶಶಾಂಕ್ ವಾಸುಕಿ ಗೋಪಾಲ್ 2017ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. 2019ರಲ್ಲಿ ಪುತ್ರ ವಿಹಾನ್‍ ಜನಿಸಿದ್ದಾನೆ. 2020ರಲ್ಲಿ ಹೊಸ ಮನೆ ಖರೀದಿಸಿ ಗೃಹಪ್ರವೇಶ ಮಾಡಿದ್ದಾರೆ. ಇದೀಗ ದಂಪತಿ 2ನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

     

    View this post on Instagram

     

    A post shared by Disha Madan (@disha.madan)

    ಸಾಮಾಜಿಕ ಜಾಲತಾಣದಲ್ಲಿ ಡಬ್ ಸ್ಮಾಷ್ ಮೂಲಕ ಸದಾ ಕ್ರಿಯಾಶೀಲರಾಗಿರುವ ದಿಶಾ ಮದನ್, ಕಿರುತೆರೆ ಹಾಗೂ ಬೆಳ್ಳಿ ತೆರೆಯಲ್ಲಿ ಆಗಾಗ ಕಾಣಿಸಿಕೊಳ್ಳುವ ಮೂಲಕ ತಮ್ಮದೇ ಆದ ಅಭಿಮಾನಿ ಬಳಗವನ್ನು ಸಂಪಾದಿಸಿಕೊಂಡಿದ್ದಾರೆ. ಈ ಹಿಂದೆ ಡ್ಯಾನ್ಸಿಂಗ್ ರಿಯಾಲಿಟಿ ಶೋನಲ್ಲಿ ಕೂಡ ಹೆಜ್ಜೆ ಹಾಕಿದ್ದರು. ಅಲ್ಲದೆ ಆಗಾಗ ತನ್ನ ಮಗನೊಂದಿಗೆ ಫೋಟೋಶೂಟ್ ನಡೆಸುವ ಮೂಲಕ ಹೆಚ್ಚು ಗಮನಸೆಳೆದಿದ್ದರು.