Tag: Pregnant

  • ಸೆ.7 ರಕ್ತಚಂದ್ರಗ್ರಹಣ – ಗರ್ಭಿಣಿಯರು ಏನು ಮಾಡಬೇಕು? ತಜ್ಞ ವೈದ್ಯರ ಸಲಹೆಗಳೇನು?

    ಸೆ.7 ರಕ್ತಚಂದ್ರಗ್ರಹಣ – ಗರ್ಭಿಣಿಯರು ಏನು ಮಾಡಬೇಕು? ತಜ್ಞ ವೈದ್ಯರ ಸಲಹೆಗಳೇನು?

    ಬೆಂಗಳೂರು: ನಾಳೆ ರಾತ್ರಿ ನಭೋ ಮಂಡಲದಲ್ಲಿ ಕೌತುಕದ ರಕ್ತ ಚಂದನ ಚಂದ್ರಗ್ರಹಣ (Chandra Grahan) ಸಂಭವಿಸಲಿದೆ. ಸುದೀರ್ಘ 3 ಗಂಟೆ 28 ನಿಮಿಷಗಳ ಕಾಲ ನಡೆಯುವ ಭೂಮಿ, ಸೂರ್ಯ ಹಾಗೂ ಚಂದ್ರನ ನಡುವಿನ ನೆರಳಿನಾಟಕ್ಕೆ ಭಾರತ ಕೂಡ ಸಾಕ್ಷಿಯಾಗಲಿದೆ. ಗ್ರಹಣದ ವೇಳೆ ನಮ್ಮಲ್ಲಿ ಗ್ರಹಗತಿಗಳ ಬದಲಾವಣೆ ಆಗುತ್ತೆ ಅನ್ನೋ ನಂಬಿಕೆ ದಟ್ಟವಾಗಿದ್ದು, ಅದರಲ್ಲೂ ಗರ್ಭಿಣಿಯರು (Pregnant Womens) ಮೇಲೆ ಹೆಚ್ಚಿನ ಪ್ರಭಾವ ಬೀರುತ್ತೆ ಅನ್ನೋ ನಂಬಿಕೆ ಕೂಡ ಇದೆ.

    ಹೌದು, ನಾಳೆ ರಾತ್ರಿ ವರ್ಷದ ಎರಡನೇ ಮತ್ತು ಕೊನೆಯ ಚಂದ್ರಗ್ರಹಣ ಸಂಭವಿಸಲಿದೆ. ಹುಣ್ಣಿಮೆಯ ಚಂದ್ರ ರಕ್ತಚಂದನದ ರೀತಿ ಗೋಚರಿಸಲಿದ್ದಾನೆ. ಗ್ರಹಣ ಅಂದ್ರೆ ಒಂದು ರೀತಿಯಲ್ಲಿ ಭಯದ ಭಾವನೆ ಇನ್ನೂ ಜನರಲ್ಲಿದೆ. ಗ್ರಹಣದ ವೇಳೆ ಊಟ ಮಾಡಬಾರದು, ಗ್ರಹಣದ ವೇಳೆ ಹೊರಗೆ ಬರಬಾರದು ಅನ್ನೋ ನಿಯಮಗಳನ್ನೂ ಕೂಡ ಮಾಡಿಕೊಂಡು ಬರಲಾಗಿದೆ. ಅದ್ರೆ ವೈಜ್ಞಾನಿಕವಾಗಿ ನೋಡಿದಾಗ ಇದು ಆಕಾಶದಲ್ಲಿ ನಡೆಯುವ ಒಂದು ಸಹಜ ಪ್ರಕ್ರಿಯೆ. ಚಂದ್ರಗ್ರಹಣದಿಂದ ಸೂಸುವ ಕಿರಣಗಳಿಂದ ಅಷ್ಟಾಗಿ ಯಾವುದೇ ಪರಿಣಾಮ ಬೀರೋದಿಲ್ಲ. ಇದನ್ನೂ ಓದಿ: ಭಾರತ ಇನ್ನೆರಡು ತಿಂಗಳಲ್ಲಿ ಟ್ರಂಪ್‌ ಕ್ಷಮೆಯಾಚಿಸುತ್ತೆ: ಅಮೆರಿಕ ವಾಣಿಜ್ಯ ಕಾರ್ಯದರ್ಶಿ

     ಇನ್ನೂ ಗ್ರಹಣದ ವೇಳೆ ಗರ್ಭಿಣಿಯರ ಮೇಲೆ ಹೆಚ್ಚು ಪರಿಣಾಮ ಪ್ರಭಾವ ಬೀರುತ್ತೆ ಅಂತಾ ಜ್ಯೋತಿಷಿಗಳು ಹೇಳ್ತಾರೆ. ಆದ್ರೆ ವೈಜ್ಞಾನಿಕವಾಗಿ ನೋಡಿದ್ರೆ ಅತಂಹ ಯಾವುದೇ ಪರಿಣಾಮ ಬೀರಲ್ಲ ಎಂದು ಸ್ತ್ರೀ ರೋಗ ತಜ್ಞರು ಹೇಳುತ್ತಾರೆ. ಆದ್ರೆ ಗ್ರಹಣದ ಕಾರಣದಿಂದ ನಾರ್ಮಲ್ ಡೆಲಿವರಿಯನ್ನ ತಡೆಯಲು ಸಾಧ್ಯವಿಲ್ಲ. ಸಿ ಸೆಕ್ಷನ್ ಮಾಡಿಸಿಕೊಳ್ಳುವವರು ಗ್ರಹಣದ ದಿನ ಬೇಡ ಆಪರೇಷನ್ ಮುಂದಕ್ಕೆ ಹಾಕಿ ಅಂತಾ ಸಾಕಷ್ಟು ಗರ್ಭಿಣಿಯರು ಕೇಳಿದ್ದಾರೆ ಎಂದು ಸ್ತ್ರೀ ರೋಗ ತಜ್ಞರು ಹೇಳಿದ್ದಾರೆ. ಇದನ್ನೂ ಓದಿ: ಸೆಮಿಕಂಡಕ್ಟರ್‌ ವಲಯದಲ್ಲಿ ಭಾರತ ‘ವಿಕ್ರಮ’; ಏನಿದು ದೇಶೀಯ ವಿಕ್ರಮ್‌-32 ಚಿಪ್‌ – ಅಮೆರಿಕ, ಚೀನಾಗೆ ಟಕ್ಕರ್?

    ಗ್ರಹಣ ಆಚರಣೆ ಅಂತಾ ಗರ್ಭಿಣಿಯರು ಹೆಚ್ಚು ಕಾಲ ಉಪವಾಸ ಮಾಡಿದ್ರೆ ಮಗುವಿಗೆ ಸಮಸ್ಯೆ ಆಗಲಿದೆ. ಮಗುವಿಗೆ ಗ್ಲೂಕೋಸ್ ಕಡಿಮೆಯಾಗಿ ತಾಯಿ-ಮಗುವಿಗೆ ಸಮಸ್ಯೆ ಆಗುವ ಸಾಧ್ಯತೆ ಇದೆ. ಉಪವಾಸ ಮಾಡುವ ಅಗತ್ಯ ಇರೋದಿಲ್ಲ. ಗರ್ಭಿಣಿಯರು ಎಂದಿನಂತೆ ಇರುವ ಹಾಗೆ ಗ್ರಹಣದ ದಿನವೂ ಇದ್ದರೆ ಉತ್ತಮ ಎಂದು ವೈದ್ಯರು ಹೇಳುತ್ತಾರೆ.

    ಭಾನುವಾರ ಸಂಭವಿಸುತ್ತಿರೋ ರಕ್ತಚಂದನ ಚಂದ್ರಗ್ರಹಣ ಆಗಸದಲ್ಲಿ ಹೊಸ ಚಿತ್ತಾರ ಮೂಡಿಸಲಿದೆ. ಗರ್ಭಿಣಿಯರು ಆತಂಕ ಬಿಟ್ಟು ಸಹಜವಾಗಿರಿ. ಮಾನಸಿಕ ಗೊಂದಲಕ್ಕೆ ಒಳಗಾಗಿ ಸಮಸ್ಯೆ ಮಾಡಿಕೊಂಡು ಇದು ಗ್ರಹಣದ ಪರಿಣಾಮ ಎಂದೆಲ್ಲ ಅಂದುಕೊಳ್ಳಬೇಡಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.

  • ಮರಕ್ಕೆ ಕಾರು ಡಿಕ್ಕಿ – ಗರ್ಭಿಣಿ ಸಾವು

    ಮರಕ್ಕೆ ಕಾರು ಡಿಕ್ಕಿ – ಗರ್ಭಿಣಿ ಸಾವು

    ಕೋಲಾರ: ಮರಕ್ಕೆ ಕಾರು ಡಿಕ್ಕಿ ಹೊಡೆದು ಗರ್ಭಿಣಿ (Pregnant) ಮೃತಪಟ್ಟ ಘಟನೆ ಮಾಲೂರು ತಾಲ್ಲೂಕು ಭಾವನಹಳ್ಳಿಯಲ್ಲಿ ನಡೆದಿದೆ.

    ಅರ್ಚನಾ (25) ಸಾವನ್ನಪ್ಪಿದ ಗರ್ಭಿಣಿ. ಕೊರಚೂರು ಮೂಲದ ಚಾಲಕ ಪತಿಗೆ ಗಾಯಗೊಂಡು ಆಸ್ಪತ್ರೆಗೆ(Hospital) ದಾಖಲಾಗಿದ್ದಾರೆ.  ಇದನ್ನೂ ಓದಿ: 30 ವರ್ಷದಿಂದ ತಲೆಮರೆಸಿಕೊಂಡಿದ್ದ ಬೆಂಗಳೂರು ಸ್ಫೋಟದ ಉಗ್ರ ಬಂಧನ

    ರಸ್ತೆ ಬದಿಯಲ್ಲಿದ್ದ ಮಾವಿನ ಮರಕ್ಕೆ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ರಸ್ತೆ ಬದಿಯ ಬಳಿಮಾವಿನ ಮರ ಇದ್ದ ಕಾರಣ ಕಾರು ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಮಾಲೂರು ಪೊಲೀಸರ ಭೇಟಿ ಪ್ರಕರ ದಾಖಲು.

  • ಆಲಿಯಾ ಭಟ್‌ ಮತ್ತೆ ಪ್ರೆಗ್ನೆಂಟ್..? ವೈರಲ್‌ ಆಯ್ತು ವಿಡಿಯೋ..!

    ಆಲಿಯಾ ಭಟ್‌ ಮತ್ತೆ ಪ್ರೆಗ್ನೆಂಟ್..? ವೈರಲ್‌ ಆಯ್ತು ವಿಡಿಯೋ..!

    ಬಾಲಿವುಡ್‌ ಬೆಡಗಿ ಆಲಿಯಾ ಭಟ್‌ (Alia Bhatt) ಅವರ ಹೊಟ್ಟೆ ಕೊಂಚ ಉಬ್ಬಿದಂತೆ ಕಾಣಿಸಿಕೊಂಡ ವಿಡಿಯೋವೊಂದು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಈ ಬೆನ್ನಲ್ಲೇ ನಟಿ ಮತ್ತೆ ಗರ್ಭಿಣಿಯಾಗಿದ್ದಾರೆ (Pregnant) ಎಂಬ ವದಂತಿ ಹಬ್ಬಿದ್ದು, ಪರ ವಿರೋಧ ಚರ್ಚೆಯನ್ನೂ ಹುಟ್ಟುಹಾಕಿದೆ.

    Alia Bhatt at the L’Oreal Lights On Women Awards at Cannes
    byu/Big-Criticism-8926 inBollyBlindsNGossip

    ಹೌದು.. ಶುಕ್ರವಾರ ಕಾನ್‌ ಫಿಲಂ ಫೆಸ್ಟಿವಲ್‌ನಲ್ಲಿ (Cannes Film Festival) ನಟಿ ಆಲಿಯಾ ಭಟ್‌ ಕಾಣಿಸಿಕೊಂಡ ರೀತಿ ಈ ವದಂತಿಗೆ ಕಾರಣವಾಗಿದೆ. ಇದನ್ನೂ ಓದಿ: ‘ಸಿಂಧೂರ’ ಆಯ್ತು, ಈಗ ಭಗವದ್ಗೀತೆ ಶ್ಲೋಕ- ಭಾರತೀಯ ಸಂಸ್ಕೃತಿ ಪ್ರದರ್ಶಿಸಿದ ಐಶ್ವರ್ಯಾ ರೈ!

    ಖಾನ್‌ ಫೆಸ್ಟಿವಲ್‌ಗೆ ನಟಿ ಶಿಯಾಪರೆಲ್ಲಿ ಗೌನ್‌ನಲ್ಲಿ ಎಂಟ್ರಿ ಕೊಟ್ಟಿದ್ದಾಗ ಫ್ಯಾಷನ್‌ ಪೋಸ್‌ ಕೊಟ್ಟರು.ಈ ವೇಳೆ ಅವರ ಹೊಟ್ಟೆಯ ಭಾಗ ಸ್ವಲ್ಪ ಉಬ್ಬಿದಂತೆ ಕಂಡುಬಂದಿತ್ತು. ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದ್ದಂತೆ ನೆಟ್ಟಿಗರು ಆಲಿತಾ ಮತ್ತೆ ಪ್ರೆಗ್ನೆಂಟ್‌ ಆಗಿದ್ದಾರಾ? ಅಂತ ಪ್ರಶ್ನೆ ಮಾಡತೊಡಗಿದ್ರು. ಇದಕ್ಕೆ ಕೆಲವರು ಯೆಸ್‌… ಯೆಸ್‌… ಅಂತಾ ಕಾಮೆಂಟ್‌ ಮಾಡಿದ್ದಾರೆ. ಆದ್ರೆ ಆಲಿಯಾ ಭಟ್‌- ರಣಬೀರ್‌ ಕಪೂರ್‌ ದಂಪತಿಯಿಂದ ಯಾವುದೇ ಅಧಿಕೃತ ಹೇಳಿಕೆಗಳು ಬಂದಿಲ್ಲ.

    ಇನ್ನೂ 2022ರಲ್ಲಿ ರಣಬೀರ್ ಕಪೂರ್ (Ranbir Kapoor) ಜೊತೆ ಆಲಿಯಾ ಮದುವೆ ನಡೆಯಿತು. ಇವರ ಸುಂದರ ದಾಂಪತ್ಯಕ್ಕೆ 2 ವರ್ಷದ ಮಗಳು ರಾಹಾ ಸಾಕ್ಷಿಯಾಗಿದ್ದಾಳೆ. ಇದನ್ನೂ ಓದಿ: ತಮನ್ನಾ ರಾಯಭಾರಿ | ತೆರಿಗೆ ಪಾವತಿದಾರರ ಹಣವನ್ನು ವ್ಯರ್ಥ ಮಾಡಿದಂತೆ: ರಮ್ಯಾ ಬೇಸರ

    ಮದುವೆ ಬಳಿಕ ಸಿನಿಮಾಗಳಿಗೆ ಬ್ರೇಕ್‌ ನೀಡಿದ್ದ ಆಲಿಯಾ ಭಟ್‌ ಇದೀಗ ʻಬ್ರಹ್ಮಾಸ್ತ್ರ-2ʼ ಚಿತ್ರಕ್ಕಾಗಿ ಕೆಲಸ ಮಾಡ್ತಿದ್ದಾರೆ ಎಂದು ತಿಳಿದುಬಂದಿದೆ. 2022ರಲ್ಲಿ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ನಟನೆಯ ‘ಬ್ರಹ್ಮಾಸ್ತ್ರ-1’ ಸಿನಿಮಾ ರಿಲೀಸ್ ಆಗಿತ್ತು. ಚಿತ್ರದಲ್ಲಿ ಬಿಗ್ ಬಿ, ನಾಗಾರ್ಜುನ, ಮೌನಿ ರಾಯ್ ಸೇರಿದಂತೆ ಅನೇಕರು ನಟಿಸಿದ್ದರು. ಈ ಸಿನಿಮಾ ಸೂಪರ್ ಸಕ್ಸಸ್ ಕಂಡಿತ್ತು. ಇದನ್ನೂ ಓದಿ: ಮೃಣಾಲ್ ಠಾಕೂರ್ ಫ್ಯಾನ್ಸ್‌ಗೆ ಡಬಲ್ ಧಮಾಕ!

  • ಸಂಜನಾ ಗಲ್ರಾನಿ ಮತ್ತೆ ಗರ್ಭಿಣಿ – 2ನೇ ಮಗುವಿನ ನಿರೀಕ್ಷೆಯಲ್ಲಿ ನಟಿ

    ಸಂಜನಾ ಗಲ್ರಾನಿ ಮತ್ತೆ ಗರ್ಭಿಣಿ – 2ನೇ ಮಗುವಿನ ನಿರೀಕ್ಷೆಯಲ್ಲಿ ನಟಿ

    ಸ್ಯಾಂಡಲ್‌ವುಡ್ ನಟಿ ಸಂಜನಾ ಗಲ್ರಾನಿ (Sanjana Galrani) ಅವರ ಮನೆಯಲ್ಲಿ ಸಂತಸ ಮನೆ ಮಾಡಿದೆ. ಸದ್ಯ ಸಿನಿಮಾಗಳಿಂದ (Cinema) ಆಗಿ ದೂರ ಸರಿದು ಕುಟುಂಬದೊಂದಿಗೆ ಸಂತಸದ ದಿನಗಳನ್ನು ಕಳೆಯುತ್ತಿರುವ ನಟಿ ಈಗ 2ನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

    ಸಿನಿಮಾಗಳಿಂದ ವಿರಾಮ ಪಡೆದುಕೊಂಡಿರುವ ನಟಿ, ಪತಿ ಅಜೀಜ್‌ ಪಾಷಾ ಮತ್ತು ಮಗ ಅಲಾರಿಕ್‌ ಜೊತೆ ಸಂತಸದ ಕ್ಷಣಗಳನ್ನು ಕಳೆಯುತ್ತಿದ್ದಾರೆ. ಸೋಶಿಯಲ್‌ ಮೀಡಿಯಾದಲ್ಲೂ ಸಿಕ್ಕಾಪಟ್ಟೆ ಆಕ್ಟೀವ್‌ ಆಗಿರುವ ಸಂಜನಾ ಮತ್ತೆ ತಾಯಿಯಾಗುತ್ತಿರುವ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ತೆಲುಗಿನತ್ತ ಧರ್ಮ ಕೀರ್ತಿರಾಜ್- ಅಪ್ಸರ ರಾಣಿ ಜೊತೆ ಸಿನಿಮಾ

    ಸಂಜನಾ ಗಲ್ರಾನಿ ತಾವು ಮತ್ತೆ ಗರ್ಭಿಣಿಯಾಗಿರುವ ಸಂತಸದ ಸುದ್ದಿಯನ್ನು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಹಸಿರು ಸೀರೆಯುಟ್ಟು, ಸೀಮಂತದ ಫೋಟೋಗಳು (Sanjana Galrani Photoshoot) ಮತ್ತು ವಿಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಶೇರ್‌ ಮಾಡಿಕೊಂಡಿದ್ದಾರೆ. ಈ ಪೋಸ್ಟ್‌ಗೆ, ʻಈ ಯುಗಾದಿ ನನಗೆ ತುಂಬಾ ವಿಶೇಷವಾಗಿದೆ ಏಕೆಂದರೆ ನಮ್ಮ ಕುಟುಂಬದ ಹೊಸ ಸದಸ್ಯರು ಶೀಘ್ರದಲ್ಲೇ ನಮ್ಮೊಂದಿಗೆ ಸೇರಲು ನಾವು ಕಾಯುತ್ತಿದ್ದೇವೆ. ದಯವಿಟ್ಟು ನಿಮ್ಮ ಪ್ರಾರ್ಥನೆ ಮತ್ತು ಆಶೀರ್ವಾದದಲ್ಲಿ ನನ್ನನ್ನು ಇರಿಸಿʼ ಎಂದು ನಟಿ ಕ್ಯಾಪ್ಷನ್‌ ಸಹ ಕೊಟ್ಟಿದ್ದಾರೆ. ಸಂಜನಾ ಅವರ ಸೀಮಂತದ ಫೋಟೋಗಳು ಸಖತ್‌ ವೈರಲ್‌ ಆಗಿದ್ದು, ಅಭಿಮಾನಿಗಳು, ಸ್ನೇಹಿತರು ಮತ್ತು ಹಿತೈಶಿಗಳು ಶುಭ ಹಾರೈಸಿದ್ದಾರೆ.

    ತೆಲುಗು ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದ್ದ ಸಂಜನಾ, ಬಳಿಕ ಕನ್ನಡದಲ್ಲಿ ಹಲವು ಸಿನಿಮಾಗಳಲ್ಲಿ ಚಾನ್ಸ್‌ ಗಿಟ್ಟಿಸಿಕೊಂಡಿದ್ದರು. ಅಲ್ಲದೇ ತಮ್ಮ ಗ್ಲ್ಯಾಮರ್‌ ಪಾತ್ರಕ್ಕೆ ಹಲವು ಬಾರಿ ಸುದ್ದಿಯಾಗಿದ್ದರು. ಲಾಕ್‌ಡೌನ್‌ ಸಮಯದಲ್ಲಿ ಪ್ರೀತಿಸಿ ವೃತ್ತಿಯಲ್ಲಿ ವೈದ್ಯರಾಗಿರುವ ಅಜೀಜ್‌ ಪಾಷಾ ಅವರನ್ನು ವಿವಾಹವಾಗಿ ಸುದ್ದಿಯಲ್ಲಿದ್ದರು. ಇದನ್ನೂ ಓದಿ: ಯಶ್ ನಟನೆಯ ‘ಟಾಕ್ಸಿಕ್’ ಚಿತ್ರೀಕರಣಕ್ಕಾಗಿ ಮುಂಬೈಗೆ ಬಂದಿಳಿದ ನಯನತಾರಾ

    2022ರ ಮೇ ತಿಂಗಳಲ್ಲಿ ಸಂಜನಾ ಗಲ್ರಾನಿ ತಮ್ಮ ಮೊದಲ ಮಗುವಿಗೆ ಜನ್ಮ ನೀಡಿದ್ದರು. ತಂಗಿ ನಿಕ್ಕಿ ಗಲ್ರಾನಿ ಮದುವೆಯ ದಿನವೇ ಮಗುವಿನ ಆಗಮನವಾಗಿತ್ತು. ಅಜೀಜ್‌ ಪಾಷಾ ಮತ್ತು ಸಂಜನಾ ಸಂಪತಿಗೆ ಅಲಾರಿಕ್‌ ಎಂಬ ಹೆಸರಿನ ಮಗನಿದ್ದಾನೆ. ಇದನ್ನೂ ಓದಿ: EXCLUSIVE: ಆಶ್ರಯ ಇಲ್ಲದೆ ವೃದ್ಧಾಶ್ರಮ ಸೇರಿದ ಹಿರಿಯ ನಟಿ ಶೈಲಶ್ರೀ – ನಟಿಗೆ ಧನ ಸಹಾಯ ಮಾಡಿದ ದರ್ಶನ್

  • ಬೆಳಗಾವಿ| ಬಾಲಕಿಯನ್ನು ಪುಸಲಾಯಿಸಿ ಗರ್ಭಿಣಿ ಮಾಡಿದ 2 ಮಕ್ಕಳ ತಂದೆ ಅರೆಸ್ಟ್

    ಬೆಳಗಾವಿ| ಬಾಲಕಿಯನ್ನು ಪುಸಲಾಯಿಸಿ ಗರ್ಭಿಣಿ ಮಾಡಿದ 2 ಮಕ್ಕಳ ತಂದೆ ಅರೆಸ್ಟ್

    ಬೆಳಗಾವಿ: ಇಡೀ ಮಾನವ ಕುಲವೇ ತಲೆ ತಗ್ಗಿಸುವ ಪೈಶಾಚಿಕ ಕೃತ್ಯಕ್ಕೆ ಬೆಳಗಾವಿ (Belagavi) ಜಿಲ್ಲೆ ಸಾಕ್ಷಿಯಾಗಿದೆ. ಎರಡು ಮಕ್ಕಳಿರುವ ತಂದೆಯಿಂದಲೇ ಅಪ್ರಾಪ್ತೆ ಗರ್ಭಿಣಿಯಾದ ಘಟನೆ ಬೆಳಗಾವಿಯ ಕುಲಗೋಡ (Kulagod) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಬಸಪ್ಪ ಅಡಿವೆಪ್ಪ ಹಳ್ಳೂರ ಎಂಬಾತನನ್ನು ಬಾಲಕಿಯ ಪೋಷಕರು ನೀಡಿದ ದೂರಿನ ಅಧಾರದ ಮೇಲೆ ಪೊಲೀಸರು ಬಂಧಿಸಿದ್ದಾರೆ. ಬಾಲಕಿಯನ್ನು ಪುಸಲಾಯಿಸಿ ಆಕೆಯೊಂದಿಗೆ ನಿಂತರ ದೈಹಿಕ ಸಂಪರ್ಕವನ್ನು ಬಸಪ್ಪ ಬೆಳೆಸಿದ್ದ ಎನ್ನಲಾಗಿದೆ. ನಿರಂತರ ದೈಹಿಕ ಸಂಪರ್ಕದ ಹಿನ್ನೆಲೆ ಬಾಲಕಿ 8 ತಿಂಗಳ ಗರ್ಭಿಣಿಯಾಗಿದ್ದಾಳೆ. ಇದನ್ನೂ ಓದಿ: ಡಿಜಿಪಿ ಅಪ್ಪನಿಗೆ ಮಗಳು ತಂದ ಸಂಕಷ್ಟ – ಸರ್ಕಾರದಿಂದ ಎರಡೆರಡು ತನಿಖೆಗೆ ಆದೇಶ

    ವೈದ್ಯರ ಬಳಿ ಬಾಲಕಿಯನ್ನು ಕರೆದುಕೊಂಡು ಹೋಗಿ ಪರೀಕ್ಷೆ ಮಾಡಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಆರೋಪಿಯನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ತನಿಖೆ ಮುಂದುವರೆದಿದೆ. ಇದನ್ನೂ ಓದಿ: ಹೈದರಾಬಾದ್‌ನಲ್ಲಿ ದಂಪತಿ ಆತ್ಮಹತ್ಯೆ – ಇಬ್ಬರು ಮಕ್ಕಳು ಶವವಾಗಿ ಪತ್ತೆ

  • ಅಣ್ಣನಿಂದಲೇ 7 ತಿಂಗಳ ಗರ್ಭಿಣಿಯಾದ ತಂಗಿ‌

    ಅಣ್ಣನಿಂದಲೇ 7 ತಿಂಗಳ ಗರ್ಭಿಣಿಯಾದ ತಂಗಿ‌

    ಚಿಕ್ಕಮಗಳೂರು: ಸಂಬಂಧಗಳಿಗೆ ಬೆಲೆ ಕೊಡುವ ಭಾರತೀಯ ಸಂಸ್ಕೃತಿಯಲ್ಲಿ ಇಡೀ ನಾಗರೀಕ ಸಮಾಜವೇ ತಲೆ ತಗ್ಗಿಸುವಂತ ಘಟನೆಗೆ ಚಿಕ್ಕಮಗಳೂರು (Chikkamgaluru) ಜಿಲ್ಲೆಯ ಮಲೆನಾಡು ತಾಲೂಕಿನ ಕುಗ್ರಾಮವೊಂದು ಸಾಕ್ಷಿಯಾಗಿದೆ.

    ಅಣ್ಣನೇ ತಂಗಿಯನ್ನ ಗರ್ಭಿಣಿ ಮಾಡಿದ್ದಾನೆ. ಮೊದಲ ವರ್ಷದ ಪಿಯುಸಿ ಓದುತ್ತಿರುವ 17 ವರ್ಷದ ಬಾಲಕಿಯನ್ನು ಆಕೆಯ ಅಣ್ಣನೇ (ದೊಡ್ಡಪ್ಪನ ಮಗ) 7 ತಿಂಗಳ ಗರ್ಭಿಣಿ (Pregnant) ಮಾಡಿದ್ದಾನೆ. ಈ ಕುರಿತು ಶೃಂಗೇರಿ ವಿಧಾನಸಭಾ ಕ್ಷೇತ್ರದ ಠಾಣೆಯೊಂದರಲ್ಲಿ ಪ್ರಕರಣ ದಾಖಲಾಗಿದೆ.

     

    ಸಂತ್ರಸ್ತೆಗೆ ಪೊಲೀಸರು ಸಾಕಷ್ಟು ಕೌನ್ಸಿಲಿಂಗ್ ಮಾಡಿದ್ದರು. ಮೂರು ದಿನ ಕೌನ್ಸಿಲಿಂಗ್ ಮಾಡಿದರೂ ಕೂಡ ಬಾಲಕಿ ಯಾರೆಂದು ಹೇಳಿರಲಿಲ್ಲ. ಆದರೆ ಮೂರು ದಿನದ ಬಳಿಕ ಬಾಲಕಿ ಪೊಲೀಸರ ಮುಂದೆ ನಿಜ ಹೇಳಿದ್ದಾಳೆ.

    ಪೊಲೀಸ್ ಠಾಣೆಯಲ್ಲಿ ಈಗ ಬಾಲಕಿಯ  ದೊಡ್ಡಪ್ಪನ ಮಗ 20 ವರ್ಷದ ಪ್ರಕಾಶ್ (ಹೆಸರು ಬದಲಿಸಲಾಗಿದೆ) ವಿರುದ್ಧ ಪ್ರಕರಣ ದಾಖಲಾಗಿದೆ.  ಆರೋಪಿಯನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಕೋರ್ಟ್‌ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

     

  • ಕೋಲಾರ| ಇನ್ನೋವಾ ಕಾರ್‌ಗೆ ಬೈಕ್ ಡಿಕ್ಕಿ ಪ್ರಕರಣ – ಗಂಭೀರ ಗಾಯಗೊಂಡಿದ್ದ ಗರ್ಭಿಣಿ ಸಾವು

    ಕೋಲಾರ| ಇನ್ನೋವಾ ಕಾರ್‌ಗೆ ಬೈಕ್ ಡಿಕ್ಕಿ ಪ್ರಕರಣ – ಗಂಭೀರ ಗಾಯಗೊಂಡಿದ್ದ ಗರ್ಭಿಣಿ ಸಾವು

    – ಸಾವಿನ ಸಂಖ್ಯೆ 6ಕ್ಕೆ ಏರಿಕೆ

    ಕೋಲಾರ: ಇನ್ನೋವಾ ಕಾರ್‌ಗೆ ಬೈಕ್ ಡಿಕ್ಕಿಯಾಗಿ 5 ಜನ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ಗರ್ಭಿಣಿ ಮಂಗಳವಾರ ಮೃತಪಟ್ಟಿದ್ದಾರೆ.

    ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತುಂಬು ಗರ್ಭಿಣಿ ಸುಷ್ಮಿತಾರನ್ನು (32)  ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಸುಷ್ಮಿತಾ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಸ್ವಗ್ರಾಮ ಕೆಜಿಎಫ್ (KGF) ತಾಲೂಕಿನ ಕಮ್ಮಸಂದ್ರದಲ್ಲಿ (Kammasandra) ಸುಷ್ಮಿತಾ ಅಂತ್ಯ ಸಂಸ್ಕಾರ ನೆರವೇರಿದೆ.

    ಕೋಲಾರದ ನೂತನ ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್‌ವೇನಲ್ಲಿ (Bengaluru-Chennai Expressway) ಸೋಮವಾರ ಮಧ್ಯರಾತ್ರಿ ಘಟನೆ ನಡೆದಿದೆ. ಘಟನೆಯಲ್ಲಿ ಸುಷ್ಮಿತಾ ಹೊಟ್ಟೆಯಲ್ಲಿದ್ದ 8 ತಿಂಗಳ ಮಗು ಸೇರಿ ಮಹೇಶ (45), ಉದ್ವಿತ (2), ರತ್ನಮ್ಮ (60) ಹಾಗೂ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಸುಷ್ಮಿತಾ ಹೊರತುಪಡಿಸಿ ಇನ್ನೂ ಮೂರು ಜನ ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    ಮೃತಪಟ್ಟವರು ಕೆಜಿಎಫ್ ತಾಲ್ಲೂಕು ಕಮ್ಮಸಂದ್ರ ಗ್ರಾಮದವರಾಗಿದ್ದು, ಬೆಂಗಳೂರಿನಿಂದ ವಾಪಸ್ ಗ್ರಾಮಕ್ಕೆ ತೆರಳುವ ವೇಳೆ ಘಟನೆ ನಡೆದಿದೆ. ಘಟನೆ ಸಂಬಂಧ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಕುರಿತು ಪ್ರಕರಣ ದಾಖಲಾಗಿದೆ.

  • ಚಿಕ್ಕಬಳ್ಳಾಪುರ| ಪ್ರಿಯಕರನ ಜೊತೆಯಲ್ಲಿದ್ದ 8 ತಿಂಗಳ ಗರ್ಭಿಣಿ ಅನುಮಾನಾಸ್ಪದ ಸಾವು

    ಚಿಕ್ಕಬಳ್ಳಾಪುರ| ಪ್ರಿಯಕರನ ಜೊತೆಯಲ್ಲಿದ್ದ 8 ತಿಂಗಳ ಗರ್ಭಿಣಿ ಅನುಮಾನಾಸ್ಪದ ಸಾವು

    ಚಿಕ್ಕಬಳ್ಳಾಪುರ: ಪ್ರಿಯಕರನ ಜೊತೆಯಲ್ಲಿದ್ದ 8 ತಿಂಗಳ ಗರ್ಭಿಣಿ (Pregnant) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ಗುಂತಪನಹಳ್ಳಿ (Guntapanahalli) ಗ್ರಾಮದ ಬಳಿ ನಡೆದಿದೆ.

    ಚಿಕ್ಕಬಳ್ಳಾಪುರದ ಅಂಬೇಡ್ಕರ್ ನಗರದ ನಿವಾಸಿ ಅನುಷಾ (28) ಮೃತ ಗರ್ಭಿಣಿ ಮಹಿಳೆ. ಹೊಸಕೋಟೆ ಮೂಲದ ವ್ಯಕ್ತಿಯೊಂದಿಗೆ 08 ವರ್ಷಗಳ ಹಿಂದೆ ಮದುವೆ ಮಾಡಿಕೊಡಲಾಗಿತ್ತು. ಒಂದು ಹೆಣ್ಣು ಮಗು ಸಹ ಇತ್ತು. ಆದರೆ ಗಂಡನಿಗೆ ಪ್ಯಾರಾಲಿಸಿಸ್ ಆದ ನಂತರ ಗಂಡನನ್ನು ತೊರದು ತವರು ಮನೆಗೆ ಬಂದು ವಾಸವಾಗಿದ್ದಳು. ಆಗ ಕೂಲಿ ಮಾಡುತ್ತಿದ್ದ ಅನುಷಾಳಿಗೆ ಗುಂತಪನಹಳ್ಳಿ ಗ್ರಾಮದ ಪವನ್ ಪರಿಚಯವಾಗಿ ಇಬ್ಬರ ನಡುವೆ ದೈಹಿಕ ಸಂಪರ್ಕ ಬೆಳೆದು ಗರ್ಭಿಣಿ ಸಹ ಆಗಿದ್ದಾಳೆ. ಇದರಿಂದ ತನ್ನನ್ನ ಮದುವೆಯಾಗುವಂತೆ ಅನುಷಾ ಒತ್ತಾಯಿಸಿ ಪವನ್ ಮನೆಯವರಿಗೆ ವಿಷಯ ತಿಳಿಸಿದ್ದಾಳೆ. ಬೇರೆ ಬೇರೆ ಜಾತಿ ಎರಡನೇ ಮದುವೆ ಅಂತ ಪವನ್ ಮನೆಯವರು ಇಬ್ಬರಿಗೂ ಬೈದು ಮನೆಗೆ ಕರೆದುಕೊಂಡಿಲ್ಲ. ಇದನ್ನೂ ಓದಿ: ಇದು ಮೋಸದ ಸರ್ಕಾರ: ಬಸ್‌ ಟಿಕೆಟ್‌ ದರ ಹೆಚ್ಚಳಕ್ಕೆ ಸಾರ್ವಜನಿಕರು ಆಕ್ರೋಶ

    15 ದಿನಗಳ ಹಿಂದೆ ಸಹ ಪವನ್ ಊಟದ ಜೊತೆ ಇಲಿ ಪಾಷಾಣ ತಿನ್ನಿಸಿ ಕೊಲೆ ಮಾಡಲು ಯತ್ನಿಸಿದ್ದ ಎಂದು ಆಕೆ ಆರೋಪಿಸಿದ್ದಳು. ಪೊಲೀಸ್ ಠಾಣೆಗೆ ಪವನ್ ವಿರುದ್ಧ ದೂರು ನೀಡಿದ್ದಳು. ತದನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಬಂದು ಇಬ್ಬರು ಸಹ ಜೊತೆಯಾಗಿದ್ದಾರೆ. ಕಳೆದ ರಾತ್ರಿ ಗುಂತಪನಹಳ್ಳಿ ಗ್ರಾಮದ ಬಳಿ ಹೊಂಗೆ ಮರದಡಿ ಮದ್ಯಪಾನ ಮಾಡಿ ಮಲಗಿದ್ದರಂತೆ. ಬೆಳಗ್ಗೆ ಎದ್ದು ನೋಡಿದಾಗ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪ್ರಿಯಕರ ಪವನ್ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಇನ್ನೂ ಪೊಲೀಸರು ಪ್ರಿಯಕರನನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರೆಸಿದ್ದಾರೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: Mandya| ನಡುರಸ್ತೆಯಲ್ಲೇ ಎಎಸ್‌ಐ ಮೇಲೆ ಹಲ್ಲೆ – ಆರೋಪಿ ಅರೆಸ್ಟ್

  • ಕೇವಲ 2 ಡಾಲರ್‌ ಟಿಪ್ಸ್‌ ಕೊಟ್ರು ಅಂತ ಗರ್ಭಿಣಿಗೆ 14 ಬಾರಿ ಚಾಕುವಿನಿಂದ ಇರಿದ ಪಿಜ್ಜಾ ಡೆಲಿವರಿ ವರ್ಕರ್‌

    ಕೇವಲ 2 ಡಾಲರ್‌ ಟಿಪ್ಸ್‌ ಕೊಟ್ರು ಅಂತ ಗರ್ಭಿಣಿಗೆ 14 ಬಾರಿ ಚಾಕುವಿನಿಂದ ಇರಿದ ಪಿಜ್ಜಾ ಡೆಲಿವರಿ ವರ್ಕರ್‌

    ನ್ಯೂಯಾರ್ಕ್: ಕೇವಲ 170 ಟಿಪ್ಸ್‌ ಕೊಟ್ಟರು ಎಂದು ಗರ್ಭಿಣಿಗೆ ಪಿಜ್ಜಾ ಡೆಲಿವರಿ ಕೆಲಸಗಾರ್ತಿ ಚಾಕುವಿನಿಂದ 14 ಬಾರಿ ಇರಿದಿರುವ ಘಟನೆ ಅಮೆರಿಕದ ಫ್ಲೋರಿಡಾದಲ್ಲಿ ನಡೆದಿದೆ.

    ಬ್ರಿಯಾನ್ನಾ ಅಲ್ವೆಲೊ (22) ಚಾಕುವಿನಿಂದ ಇರಿದ ಆರೋಪಿ. ಸಂತ್ರಸ್ತ ಮಹಿಳೆ ಕುಟುಂಬದವರು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದರು. ಅದಕ್ಕಾಗಿ ಪಿಜ್ಜಾ ಆರ್ಡರ್‌ ಮಾಡಿದ್ದರು. ಆರ್ಡರ್‌ ತಂದುಕೊಟ್ಟ ಆರೋಪಿಯು ಕೇವಲ 2 ಡಾಲರ್‌ ಕೊಟ್ಟಿದ್ದಕ್ಕೆ ಚಾಕುವಿನಿಂದ ಗರ್ಭಿಣಿ ಮೇಲೆ ಹಲ್ಲೆ ನಡೆಸಿದ್ದಾಳೆ.

    ದಾಳಿಯ ಸಮಯದಲ್ಲಿ ಸಂತ್ರಸ್ತ ಮಹಿಳೆ, ಆಕೆಯ ಗೆಳೆಯ ಮತ್ತು ಆಕೆಯ 5 ವರ್ಷದ ಮಗಳು ಮೋಟೆಲ್ ಕೋಣೆಯಲ್ಲಿದ್ದರು. ಆರೋಪಿ ಅಲ್ವೆಲೊ ಪಿಜ್ಜಾ ಡೆಲಿವರಿ ಮಾಡಿದ್ದಳು. ಒಟ್ಟು ಮೊತ್ತ $33 (ಸುಮಾರು ರೂ. 2,800) ಆಗಿತ್ತು. ಡೆಲಿವರಿ ವರ್ಕರ್‌ಗೆ ಕೇವಲ $2 ಅನ್ನು ನೀಡಿದ್ದರು. ಅದನ್ನು ಪಡೆದು ಹೋಗಿದ್ದ ಆರೋಪಿ ಮತ್ತೆ 90 ನಿಮಿಷಗಳ ನಂತರ ತನ್ನ ಕೆಂಪು ಟೊಯೋಟಾದಲ್ಲಿ ಮುಸುಕುಧಾರಿ ಸಹಚರನೊಂದಿಗೆ ಹಿಂದಿರುಗಿ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾಳೆ.

    ಗರ್ಭಿಣಿಗೆ 14 ಬಾರಿ ಇರಿದು ಹಲ್ಲೆ ನಡೆಸಿದ್ದಾಳೆ. ವಿಷಯ ತಿಳಿದು ಪೊಲೀಸರು ಆಗಮಿಸುತ್ತಿದ್ದಂತೆ ಆರೋಪಿಗಳು ಪರಾರಿಯಾಗಿದ್ದಾರೆ. ಗಾಯಾಳು ಗರ್ಭಿಣಿಯನ್ನು ಹತ್ತಿರದ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

    ಮರುದಿನ ಅಧಿಕಾರಿಗಳು ಆರೋಪಿತಳನ್ನು ಬಂಧಿಸಿದ್ದಾರೆ. ಕೊಲೆಯ ಯತ್ನ, ಬಂದೂಕಿನಿಂದ ಮನೆ ಮೇಲೆ ಆಕ್ರಮಣ ಕೇಸ್‌ ದಾಖಲಿಸಲಾಗಿದೆ. ಆಕೆಯನ್ನು ಬಾಂಡ್ ಇಲ್ಲದೆ ಓಸ್ಸಿಯೋಲಾ ಕೌಂಟಿ ಜೈಲಿನಲ್ಲಿ ಇರಿಸಲಾಗಿದೆ.

  • 4 ಮಕ್ಕಳೊಂದಿಗೆ ಪಾಕ್‌ನಿಂದ ಅಕ್ರಮವಾಗಿ ಭಾರತಕ್ಕೆ ಬಂದಿದ್ದ ಸೀಮಾ ಗರ್ಭಿಣಿ

    4 ಮಕ್ಕಳೊಂದಿಗೆ ಪಾಕ್‌ನಿಂದ ಅಕ್ರಮವಾಗಿ ಭಾರತಕ್ಕೆ ಬಂದಿದ್ದ ಸೀಮಾ ಗರ್ಭಿಣಿ

    ನೊಯ್ಡಾ: ಪಬ್‌ಜೀ ಗೇಮ್‌ನಲ್ಲಿ ಪರಿಚಯವಾದ ಸ್ನೇಹಿತನನ್ನು ವರಿಸಲು ಪತಿಯನ್ನು ತೊರೆದು ಕಳೆದ ವರ್ಷ ತನ್ನ ನಾಲ್ಕು ಮಕ್ಕಳೊಂದಿಗೆ ಅಕ್ರಮವಾಗಿ ಭಾರತಕ್ಕೆ ಬಂದು, ಗ್ರೇಟರ್ ನೋಯ್ಡಾದಲ್ಲಿ ತನ್ನ ಪ್ರಿಯಕರನೊಂದಿಗೆ ನೆಲೆಸಿರುವ ಪಾಕಿಸ್ತಾನದ ಪ್ರಜೆ ಸೀಮಾ ಹೈದರ್ ಇದೀಗ ಗರ್ಭಿಣಿಯಾಗಿದ್ದಾರೆ.

    ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಆ್ಯಕ್ಟಿವ್ ಆಗಿರುವ ಸೀಮಾ ಹೈದರ್ ಮತ್ತು ಸಚಿನ್ ಮೀನಾ ಜೋಡಿ ಆಗಾಗ ತಮ್ಮ ವೈಯಕ್ತಿಕ ಜೀವನಕ್ಕೆ ಸಂಬAಧಿಸಿದ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಗರ್ಭಿಣಿಯಾಗಿರುವ ಖುಷಿಯ ವಿಚಾರವನ್ನು ವಿಡಿಯೋ ಮೂಲಕ ತಿಳಿಸಿದ್ದಾರೆ. ಈ ವಿಡಿಯೋದಲ್ಲಿ ಸೀಮಾ ಗರ್ಭಧಾರಣೆಯ ಪರೀಕ್ಷಾ ಕಿಟ್‌ನೊಂದಿಗೆ ಕಾಣಿಸಿಕೊಂಡಿದ್ದು, ಗರ್ಭಿಣಿಯಾಗಿರುವ ಬಗ್ಗೆ ಪತಿ ಸಚಿನ್‌ಗೆ ತಿಳಿಸಿದ್ದಾರೆ. ಇದನ್ನೂ ಓದಿ: INDIA ಕೂಟದ ನಾಯಕತ್ವ ತ್ಯಜಿಸಲು ಕಾಂಗ್ರೆಸ್‌ ಸಜ್ಜಾಗಿರಬೇಕು: ಮಣಿಶಂಕರ್‌ ಅಯ್ಯರ್‌

    ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಜಕೋಬಾಬಾದ್ ಮೂಲದ ಸೀಮಾ ಹೈದರ್ ಸಂದರ್ಶನವೊಂದರಲ್ಲಿ ‘ತಾನು ಹಿಂದು ಧರ್ಮವನ್ನು ಸ್ವೀಕರಿಸಿದ್ದೇನೆ. ತಾಯ್ನಾಡಿಗೆ (ಪಾಕಿಸ್ತಾನ) ಮರಳಲು ಇಷ್ಟವಿಲ್ಲ. ತನ್ನ ನಾಲ್ಕು ಮಕ್ಕಳು ಹಿಂದೂ ಧರ್ಮವನ್ನು ಸ್ವೀಕರಿಸಿದ್ದಾರೆ’ ಎಂದು ಹೇಳಿದ್ದರು. ಭಾರತೀಯ ಪೌರತ್ವವನ್ನು ಕೋರಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಈ ಹಿಂದೆ ಪತ್ರ ಬರೆದಿದ್ದರು. ಇದನ್ನೂ ಓದಿ: ಶಿರಾಡಿಯಲ್ಲಿ ಸುರಂಗ ಮಾರ್ಗ – ಡಿಪಿಆರ್‌ ತಯಾರಿಸಲು ಕೇಂದ್ರ ಒಪ್ಪಿಗೆ

    ಭಾರತೀಯ ಪ್ರಜೆ ಸಚಿನ್ ಮೀನಾ ಹಾಗೂ ಸೀಮಾ ಹೈದರ್ 2019ರಲ್ಲಿ ಪಬ್‌ಜಿ ಆನ್‌ಲೈನ್ ಗೇಮಿಂಗ್ ಪ್ಲಾಟ್‌ಫಾರ್ಮ್ ಮೂಲಕ ಪರಿಚಯವಾಗಿದ್ದರು. ಈ ವೇಳೆ ಇಬ್ಬರ ನಡುವೆ ಪ್ರೀತಿ ಬೆಳೆದಿದೆ. ಕೊನೆಗೆ ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ದರು. ಹೀಗಾಗಿ ಸೀಮಾ ಹೈದರ್ ಗಂಡ ಗುಲಾಮ್ ಹೈದರ್‌ನನ್ನು ತೊರೆದು ತನ್ನ ನಾಲ್ಕು ಮಕ್ಕಳೊಂದಿಗೆ ಮೇ 2023ರಲ್ಲಿ ಪಾಕಿಸ್ತಾನದ ತಮ್ಮ ಕರಾಚಿ ನಿವಾಸದಿಂದ ನೇಪಾಳಕ್ಕೆ ತೆರಳಿ, ಅಲ್ಲಿಂದ ಅಕ್ರಮವಾಗಿ ಭಾರತಕ್ಕೆ ಬಂದಿದ್ದರು. ಇದನ್ನೂ ಓದಿ: ನಾನು ಹೆದರೋದು ಇಲ್ಲ, ಹೆಬ್ಬಾಳ್ಕರ್ ಕ್ಷಮೆಯ ಅಗತ್ಯವೂ ಇಲ್ಲ: ಸಿ.ಟಿ. ರವಿ

    ಹಿಂದೂ ಧರ್ಮಕ್ಕೆ ಮತಾಂತರಗೊಂಡ ನಂತರ ಸೀಮಾ ಹೈದರ್ ಹಾಗೂ ಸಚಿನ್ ಮೀನಾ ನೇಪಾಳದ ಪಶುಪತಿನಾಥ ದೇವಾಲಯದಲ್ಲಿ ಮದುವೆಯಾಗಿದ್ದರು. ಮತಾಂತರದ ಬಳಿಕ ಎಂಟು ವರ್ಷದ ಮಗ ಫರ್ಹಾನ್ ಅಲಿಯನ್ನು ರಾಜ್ ಎಂದು ಮರುನಾಮಕರಣ ಮಾಡಿದ್ದರು. ಮೂವರು ಪುತ್ರಿಯರಾದ ಫರ್ವಾ, ಫರಿಹಾ ಬಟೂಲ್, ಹಾಗೂ ಫರ್ಹಾ ಅವರಿಗೆ ಕ್ರಮವಾಗಿ ಪ್ರಿಯಾಂಕಾ, ಮುನ್ನಿ ಹಾಗೂ ಪರಿ ಎಂದು ಹೆಸರು ಬದಲಾಯಿಸಿದ್ದರು. ಇದನ್ನೂ ಓದಿ: ಅಕ್ರಮ ಮದ್ಯ ಮಾರಾಟವನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ – ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಸಾವು