Tag: Pregnant Girl

  • ಕೊಡಗಿನಲ್ಲಿ ಕಳೆದ 9 ತಿಂಗಳಲ್ಲಿ 30 ಅಪ್ರಾಪ್ತೆಯರು ಗರ್ಭಿಣಿ – 14 ಬಾಲಕಿಯರಿಗೆ ಹೆರಿಗೆ!

    ಕೊಡಗಿನಲ್ಲಿ ಕಳೆದ 9 ತಿಂಗಳಲ್ಲಿ 30 ಅಪ್ರಾಪ್ತೆಯರು ಗರ್ಭಿಣಿ – 14 ಬಾಲಕಿಯರಿಗೆ ಹೆರಿಗೆ!

    ಮಡಿಕೇರಿ: ತನ್ನ ಪ್ರಾಕೃತಿಕ ಸೌಂದರ್ಯದಿಂದಲ್ಲೇ ದೇಶ-ವಿದೇಶಗಳ ಜನರನ್ನು ಕೈಬೀಸಿ ಕರೆಯುತ್ತಿರುವ ಕೊಡಗು (Kodagu) ಜಿಲ್ಲೆಗೆ ಅಪಖ್ಯಾತಿ ತರುತ್ತಿದೆ. ಇತ್ತೀಚೆಗೆ ಕೊಡಗಿನಲ್ಲಿ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯದಂತಹ ಪ್ರಕರಣಗಳು ಹೆಚ್ಚಾಗುತ್ತಿರುವುದು ಬೆಳಕಿಗೆ ಬಂದಿದೆ.

    ಇದರ ಪರಿಣಾಮವಾಗಿ ಕಳೆದ 9 ತಿಂಗಳ ಅವಧಿಯಲ್ಲಿ 30 ಅಪ್ರಾಪ್ತೆಯರು ಗರ್ಭಿಣಿಯರಾಗಿದ್ದು (Minor girl pregnant), 59 ಪೋಕ್ಸೋ ಪ್ರಕರಣಗಳು ದಾಖಲಾಗಿವೆ, ಇದು ಜಿಲ್ಲಾಡಳಿತದ ನಿದ್ದೆಗಡಿಸಿದೆ. ಇದನ್ನೂ ಓದಿ: ಚಾಂಪಿಯನ್ಸ್‌ ಟ್ರೋಫಿ ಭದ್ರತಾ ಕಾರ್ಯ ನಿರ್ವಹಿಸಲು ನಿರಾಕರಣೆ – ಪಾಕ್‌ನ 100ಕ್ಕೂ ಹೆಚ್ಚು ಪೊಲೀಸರು ವಜಾ

    ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಅಪ್ರಾಪ್ತೆಯರು ಗರ್ಭಿಣಿಯರಾಗುತ್ತಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಜಿಲ್ಲೆಯಲ್ಲಿ 59 ಪ್ರಕರಣಗಳು, 9 ತಿಂಗಳಲ್ಲಿ ನೋಡಿದ್ರೆ 30 ಅಪ್ರಾಪ್ತೆಯರು ಗರ್ಭಿಣಿಯಾಗಿರುವುದು ಕಂಡುಬಂದಿದೆ. 30 ಅಪ್ರಾಪ್ತೆಯರ ಪೈಕಿ ಈಗಾಗಲೇ 14 ಬಾಲಕಿಯರಿಗೆ ಹೆರಿಗೆ ಆಗಿದೆ. ಓರ್ವ ಅಪ್ರಾಪ್ತೆಗೆ ಗರ್ಭಪಾತ ಆಗಿರುವುದು ಕೂಡ ಪತ್ತೆಯಾಗಿದೆ.

    ವಿರಾಜಪೇಟೆ, ಪೊನ್ನಂಪೇಟೆಯಲ್ಲಿ ಹೆಚ್ಚು ಅಪ್ರಾಪ್ತ ಗರ್ಭಿಣಿಯರು ಪತ್ತೆಯಾಗಿದ್ದಾರೆ. ಅದರಲ್ಲೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದಲ್ಲೇ 43 ಸಂತ್ರಸ್ತೆಯರು ಪತ್ತೆಯಾಗಿದ್ದಾರೆ. 43 ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ತೋಟದ ಮನೆಗಳಲ್ಲಿ ಹೆಚ್ಚು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂಬುವುದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವರದಿಯಲ್ಲಿ ಗೊತ್ತಾಗಿದೆ.

    ಈ ಅಂಕಿ-ಅಂಶಗಳನ್ನು ನೋಡಿದ ಜಿಲ್ಲೆಯ ಜನರು ಬೆಚ್ಚಿಬಿಳುತ್ತಿದ್ದಾರೆ. ಅಷ್ಟೇ ಅಲ್ಲದೇ ‌ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಮಕ್ಕಳ ರಕ್ಷಣಾ ಇಲಾಖೆಯ ಅಧಿಕಾರಿಗಳ ವಿರುದ್ಧ ಆಕ್ರೋಶ ಹೋರ ಹಾಕುತ್ತಿದ್ದಾರೆ. ಜಿಲ್ಲೆಯಲ್ಲಿರುವ ಅಧಿಕಾರಿಗಳು ಹಾಡಿ ಅಥವಾ ಕಾಫಿ ತೋಟಗಳಲ್ಲಿ ಇರುವ ಅನರಕ್ಷ ಪೋಷಕರಿಗೆ ಜಾಗೃತಿ ಮೂಡಿಸಬೇಕು. ಆದ್ರೆ ಇಲ್ಲಿರುವ ಅಧಿಕಾರಿಗಳು ಕಚೇರಿಯಲ್ಲೇ ದಿನ ಕಳೆಯುತ್ತಿದ್ದಾರೆ. ಹೀಗಾಗಿ ಇಂತಹ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಸಾರ್ವಜನಿಕರು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ತಮಿಳುನಾಡಿಗೆ ಅಮಿತ್ ಶಾ ಭೇಟಿ – ಕೊಯಮತ್ತೂರಿನಲ್ಲಿ ಬಿಜೆಪಿ ಕಚೇರಿ ಉದ್ಘಾಟಿಸಿದ ಅಮಿತ್ ಶಾ

    ಇನ್ನೂ ಕೊಡಗು ಜಿಲ್ಲೆಯಲ್ಲಿ 2024ರ ಏಪ್ರಿಲ್ ತಿಂಗಳಿನಿಂದ- ಡಿಸೆಂಬರ್‌ ವರೆಗೆ ಪೋಕ್ಸೋ ಕಾಯ್ದೆಯಡಿ ದಾಖಲಾದ ಪ್ರಕರಣಗಳಲ್ಲಿ 59 ಹೆಣ್ಣು ಮಕ್ಕಳು ದೌರ್ಜನ್ಯಕ್ಕೊಳಗಾಗಿದ್ದಾರೆ. ಈ ಪೈಕಿ 10 ಪ್ರಕರಣಗಳು ತನಿಖಾ ಹಂತದಲ್ಲಿದ್ದು, 48 ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿ ಇವೆ. ದಾಖಲಾಗಿದ್ದ ಒಂದು ಪ್ರಕರಣ ಖುಲಾಸೆಯಾಗಿದೆ. ಇದನ್ನೂ ಓದಿ: ಶಿಶು ಕಿಡ್ನ್ಯಾಪ್‌ ಕೇಸ್ – ಅಪರಾಧಿಗೆ 10 ವರ್ಷ ಸಜೆ, 1 ಲಕ್ಷ ರೂ. ದಂಡ

  • 13ನೇ ವಯಸ್ಸಿಗೆ ಬಾಲಕಿ ಗರ್ಭಿಣಿ – ಹೊಟ್ಟೆನೋವಿನಿಂದ ಸಾವು

    13ನೇ ವಯಸ್ಸಿಗೆ ಬಾಲಕಿ ಗರ್ಭಿಣಿ – ಹೊಟ್ಟೆನೋವಿನಿಂದ ಸಾವು

    ಕಲಬುರಗಿ: 13 ವರ್ಷದ ಗರ್ಭಿಣಿ ಬಾಲಕಿ (Pregnant Girl) ಹೊಟ್ಟೆನೋವಿನಿಂದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಕಲಬುರಗಿ (Kalaburagi) ನಗರದ ಸಬ್ ಅರ್ಬನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಸರ್ಫರಾಜ್ ಎಂಬಾತ 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಜೀವ ಬೆದರಿಕೆ ಹಾಕಿ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಮಾಡಿದ್ದು, ಗರ್ಭಿಣಿಯಾದ ಬಳಿಕ ವಿಷಯ ಬೆಳಕಿಗೆ ಬಂದಿದೆ. ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ; ನಕಲಿ ಅಕೌಂಟ್‌ನ ಅಸಲಿ ಮಾಲೀಕರ ಪತ್ತೆ ಮಾಡಿದ ಸಿಐಡಿ

    ಶುಕ್ರವಾರ ಹೊಟ್ಟೆನೋವಿನಿಂದ ಬಳಲುತ್ತಿದ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಕೆಯನ್ನು ಪರೀಕ್ಷಿಸಿದ ವೈದ್ಯರು ಗರ್ಭಿಣಿಯಾಗಿರುವುದಾಗಿ ತಿಳಿಸಿದ್ದರು. ಹೊಟ್ಟೆನೋವಿನಿಂದ ಬಾಲಕಿ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾಳೆ. ಅತ್ಯಾಚಾರ ಎಸಗಿದ ಆರೋಪಿ ಸರ್ಫರಾಜ್ ಮಿರ್ಜಾನನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಎಕ್ಸ್‌ಪ್ರೆಸ್‌ವೇನಲ್ಲಿ ರಾಂಗ್‌ ರೂಟ್‌ನಲ್ಲಿ ಬಂದ ಕಾರಿನಿಂದ ಭೀಕರ ಅಪಘಾತ – 6 ಮಂದಿ ಸ್ಥಳದಲ್ಲೇ ಸಾವು