Tag: Pregnant

  • 6 ತಿಂಗ್ಳು ಅತ್ಯಾಚಾರ- ಗರ್ಭಿಣಿ ಅಂದಾಕ್ಷಣ ಗರ್ಭಪಾತ ಮಾಡ್ಸು ಅಂತ ಪೀಡಿಸ್ದ!

    6 ತಿಂಗ್ಳು ಅತ್ಯಾಚಾರ- ಗರ್ಭಿಣಿ ಅಂದಾಕ್ಷಣ ಗರ್ಭಪಾತ ಮಾಡ್ಸು ಅಂತ ಪೀಡಿಸ್ದ!

    ಮುಜಾಫರ್ ನಗರ್: 6 ತಿಂಗಳು ನಿರಂತರವಾಗಿ ಅತ್ಯಾಚಾರವೆಸಗಿ ಆಕೆ ಗರ್ಭಿಣಿಯಾಗಿದ್ದು ತಿಳಿಯುತ್ತಿದ್ದಂತೆಯೇ ಗರ್ಭಪಾತ ಮಾಡಿಸಿಕೊಳ್ಳಲು ಒತ್ತಾಯ ಮಾಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

    ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಸದ್ಯ ಆರೋಪಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಶೋಯಿಬ್ 24 ವರ್ಷದ ಯುವತಿಯ ಮೇಲೆ ಅತ್ಯಾಚಾರ ಮಾಡಿದ್ದಾನೆ. ಅಲ್ಲದೇ ಅದರ ವಿಡಿಯೋ ಕೂಡ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಶೋಯಬ್ ಯುವತಿಯನ್ನು 6 ತಿಂಗಳು ನಿರಂತರವಾಗಿ ಅತ್ಯಾಚಾರ ಮಾಡಿದ್ದಲ್ಲದೇ ಆಕೆ ಗರ್ಭಿಣಿ ಎಂದು ತಿಳಿದ ತಕ್ಷಣವೇ ಗರ್ಭಪಾತ ಮಾಡಿಸುವಂತೆ ಒತ್ತಾಯ ಮಾಡಿದ್ದಾನೆ. ಈತನೊಂದಿಗೆ ಈತನ ಪೋಷಕರು ಕೂಡ ಸೇರಿ ಯುವತಿಗೆ ಗರ್ಭಪಾತ ಮಾಡಿಸುವಂತೆ ಬೆದರಿಸಿದ್ದಾರೆ ಅಂತ ಪೊಲೀಸ್ ಅಧಿಕಾರಿ ಹರೀಶ್ ಭದೋರಿಯಾ ಹೇಳಿದ್ದಾರೆ.

    ಶೋಯಿಬ್ ಹಾಗೂ ಆತನ ಪೋಷಕರ ಬೆದರಿಕೆಯಿಂದ ಹೆದರಿದ ಯುವತಿ ಈ ವಿಚಾರವನ್ನು ತನ್ನ ಮನೆಯವರಿಗೆ ತಿಳಿಸಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆಯೇ ಯುವತಿಯ ಪೋಷಕರು ಶೋಯಿಬ್ ಹಾಗೂ ಆತನ ತಂದೆ ಬದ್ರು ಹಸನ್, ತಾಯಿ ನಗ್ಮಾ ಹಾಗೂ ಆತನ ಸಹೋದರ ಆರಿಫ್ ವಿರುದ್ಧ ದೂರು ದಾಖಲಿಸಿದ್ದಾರೆ.

    ಯುವತಿ ಹಾಗೂ ಆಕೆಯ ಪೋಷಕರ ದೂರು ಸ್ವೀಕರಿಸಿದ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews

  • ಆ.12 ಮುಖ್ಯವಾದ ದಿನ – ರಾಧಿಕಾ ಅವರಿಂದ ಮೊದಲ ಗರ್ಭಿಣಿ ಫೋಟೋ ಶೇರ್

    ಆ.12 ಮುಖ್ಯವಾದ ದಿನ – ರಾಧಿಕಾ ಅವರಿಂದ ಮೊದಲ ಗರ್ಭಿಣಿ ಫೋಟೋ ಶೇರ್

    ಬೆಂಗಳೂರು: ನಟಿ ರಾಧಿಕಾ ಪಂಡಿತ್ ಗರ್ಭಿಣಿ ಆದ ಮೇಲೆ ಇದೇ ಮೊದಲ ಬಾರಿಗೆ ತಮ್ಮ ಬೇಬಿ ಬಂಪ್ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ.

    ರಾಧಿಕಾ ಅವರು ಪತಿ ಯಶ್ ಜೊತೆಗೆ ನಿಂತು ಸೆಲ್ಫಿ ಫೋಟೋ ತೆಗೆದುಕೊಂಡಿದ್ದು, ಅದನ್ನು ಫೇಸ್‍ಬುಕ್ ಮತ್ತು ಇನ್ಸ್ ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿದ್ದಾರೆ. ಬೇಬಿ ಬಂಪ್ ಫೋಟೋ ಜೊತೆಗೆ ಎರಡು ವರ್ಷದ ಹಿಂದಿನ ನಿಶ್ಚಿತಾರ್ಥದ ಫೋಟೋವನ್ನು ಸಹ ಕೊಲಾಜ್ ಮಾಡಿ ಪೋಸ್ಟ್ ಮಾಡಿದ್ದಾರೆ. “ಆಗಸ್ಟ್ 12 ನಾವು ಎಂಗೇಜ್ ಆಗಿದ್ದೀವಿ. ಇಂದಿಗೆ ಎರಡು ವರ್ಷ ಕಳೆಯಿತು. ಇದು ನಿಜವಾಗಿಯೂ `ಬಂಪಿ ರೈಡ್’ ಆಗಿದೆ ” ಎಂದು ಕಾಮಿಡಿಯಾಗಿ ಬರೆದುಕೊಂಡಿದ್ದಾರೆ.

    ಹೌದು ರಾಧಿಕಾ ಪಂಡಿತ್ ಅವರಿಗೆ ಆಗಸ್ಟ್ 12 ರಂದು ಮಹತ್ವದ ದಿನವಾಗಿದೆ. ಯಾಕೆಂದ್ರೆ 2016 ಆಗಸ್ಟ್ 12 ರಂದು ನಟ ಯಶ್ ಮತ್ತು ರಾಧಿಕಾ ಪಂಡಿತ್ ಅವರು ಗೋವಾದಲ್ಲಿ ರಿಂಗ್ ಬದಲಾಯಿಸಿಕೊಂಡು ಎಂಗೇಜ್ ಮೆಂಟ್ ಮಾಡಿಕೊಂಡಿದ್ದರು. ಆದ್ದರಿಂದ ಆಗಸ್ಟ್ 12 ಕ್ಕೆ ಅವರು ನಿಶ್ಚಿತಾರ್ಥ ಮಾಡಿಕೊಂಡು ಎರಡು ವರ್ಷಗಳು ಕಳೆದಿದೆ. ಆ ಖುಷಿಯಲ್ಲಿ ಪತಿ ಯಶ್ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು ತಮ್ಮ ಗರ್ಭಿಣಿ ಫೋಟೋವನ್ನು ಸಾಮಾಜಿಕ ಜಾಲತಾಣಗಳಿಗೆ ಅಪ್ಲೋಡ್ ಮಾಡಿದ್ದಾರೆ.

    ರಾಧಿಕಾ ಅವರು ಈ ಫೋಟೋವನ್ನು ತಮ್ಮ ಫೇಸ್‍ಬುಕ್ ಮತ್ತು ಇನ್ಸ್ ಸ್ಟಾಗ್ರಾಂ ನಲ್ಲಿ ಅಪ್ಲೋಡ್ ಮಾಡಿದ ಕೂಡಲೇ ಅಭಿಮಾನಿಗಳು ಸಂತಸದಿಂದ ಶುಭ ಹಾರೈಸಿದ್ದಾರೆ. ಜೊತೆಗೆ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಅಪ್ಪನಾಗುತ್ತಿರುವ ಖುಷಿಯಲ್ಲಿರುವ ಯಶ್ ಅವರಿಗೆ ಕೆಜಿಎಫ್ ಸಿನಿಮಾಗಾಗಿ ಕಾತುರದಿಂದ ಕಾಯುತ್ತಿರುವುದಾಗಿ ಅಭಿಮಾನಿಗಳು ತಿಳಿಸಿದ್ದಾರೆ.

    2016 ಡಿಸೆಂಬರ್ 9 ರಂದು ಯಶ್ ಹಾಗೂ ರಾಧಿಕಾ ಪಂಡಿತ್ ಹಸೆಮಣೆ ಏರಿದ್ದರು. ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಐತಿಹಾಸಿಕ ಸೋಮನಾಥೇಶ್ವರ ದೇವಸ್ಥಾನದ ಸೆಟ್ ನಿರ್ಮಾಣವಾಗಿತ್ತು. ಅಲ್ಲಿ ಈ ಜೋಡಿ ದಾಪಂತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಅರಮನೆ ಮೈದಾನದಲ್ಲಿ ಯಶ್-ರಾಧಿಕಾ ಪಂಡಿತ್ ರವರ ಅದ್ಧೂರಿ ಆರತಕ್ಷತೆ ನಡೆದಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಹೆರಿಗೆ ಮಾಡಿಸಲಿಕ್ಕಾಗಲ್ಲ ಖಾಸಗಿ ಆಸ್ಪತ್ರೆ ಹೋಗಿ ಅಂದ್ರು ಜಿಲ್ಲಾಸ್ಪತ್ರೆಯ ವೈದ್ಯೆ

    ಹೆರಿಗೆ ಮಾಡಿಸಲಿಕ್ಕಾಗಲ್ಲ ಖಾಸಗಿ ಆಸ್ಪತ್ರೆ ಹೋಗಿ ಅಂದ್ರು ಜಿಲ್ಲಾಸ್ಪತ್ರೆಯ ವೈದ್ಯೆ

    ಕಲಬುರಗಿ: ನಗರದ ಜಿಲ್ಲಾಸ್ಪತ್ರೆಯ ವೈದ್ಯರ ಅಮಾನವೀಯ ನಡೆಯಿಂದಾಗಿ ಚಿಕಿತ್ಸೆ ಸಿಗದೆ ಗರ್ಭಿಣಿಯೊಬ್ಬಳು ಶುಕ್ರವಾರ ರಾತ್ರಿ ಪರದಾಡಿದ್ದು, ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ.

    ಆಳಂದ ತಾಲೂಕಿನ ನಿಂಬರ್ಗಾದ ಗರ್ಭಿಣಿ ಮೇಘಾ ಅವರಿಗೆ ನಿನ್ನೆ ತಡರಾತ್ರಿ 1 ಗಂಟೆಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಆಕೆಯನ್ನು ಸಂಬಂಧಿಕರು ಜಿಲ್ಲಾಸ್ಪತ್ರೆಗೆ ಕರೆತಂದಿದ್ದರು. ಆದರೆ ವೈದ್ಯೆ ಪ್ರಚೀತಾ ಮಾತ್ರ ಗರ್ಭಿಣಿಗೆ ಚಿಕಿತ್ಸೆ ನೀಡಲು ಆಗುವುದಿಲ್ಲ, ನೀವು ಸಮೀಪದ ಬಸವೇಶ್ವರ ಖಾಸಗಿ ಆಸ್ಪತ್ರೆಗೆ ಹೋಗಿ ಎಂದು ಹೇಳಿದ್ದಾರೆ.

    ಬೆಳಗ್ಗೆಯಿಂದ 18 ಹೆರಿಗೆ ಮಾಡಿಸಲಾಗಿದ್ದು, ಇನ್ನು ಮೂರು ಹೆರಿಗೆ ಮಾಡಿಸುವುದು ಬಾಕಿಯಿದೆ. ಅಷ್ಟೇ ಅಲ್ಲದೇ ಇನ್ನೊಬ್ಬರು ದಾಖಲಾಗಿದ್ದಾರೆ. ಈಗಾಗಲೇ ಮೇಲಿನ ಮಹಡಿಯಲ್ಲಿ ಸಿಬ್ಬಂದಿ ಶಸ್ತ್ರಚಿಕಿತ್ಸೆ ಮಾಡುವುದಿಲ್ಲ ಎನ್ನುತ್ತಿದ್ದಾರೆ. ಗರ್ಭಿಣಿಯನ್ನು ದಾಖಲು ಮಾಡಿಕೊಳ್ಳುತ್ತೇವೆ, ಆದರೆ ತಾಯಿ ಹಾಗೂ ಮಗುವಿನ ಪ್ರಾಣಕ್ಕೆ ತೊಂದರೆಯಾದರೆ ನಾವು ಜವಾಬ್ದಾರರಲ್ಲ ಎಂದು ಹೇಳಿದ್ದಾರೆ.

    ಎಷ್ಟು ಅಂತಾ ಕೆಲಸ ಮಾಡುವುದು. ಸಮೀಪದ ಬಸವೇಶ್ವರ ಆಸ್ಪತ್ರೆಗೆ ಕರೆದುಕೊಂಡು ಹೋಗಿ, ಅವರಿಗೆ ನಾನು ಹೇಳುತ್ತೇನೆ. ನೀವು ಇಲ್ಲಿಯೇ ಕುಳಿತು ಮಗು ಹಾಗೂ ತಾಯಿಗೆ ಏನಾದರು ಸಮಸ್ಯೆಯಾದರೆ ಅದಕ್ಕೆ ನಾನು ಹೊಣೆಯಲ್ಲ ಎಂದು ವೈದ್ಯೆ ಪ್ರಚೀತಾ ಹೇಳಿದ್ದಾರೆ. ಇದನ್ನು ಗರ್ಭಿಣಿ ಸಂಬಂಧಿಕರು ಮೊಬೈಲ್‍ನಲ್ಲಿ ವಿಡಿಯೋ ಮಾಡಿಕೊಂಡಿದ್ದಾರೆ.

    ಕೊನೆಗೆ ಅನಿವಾರ್ಯವಾಗಿ ಗರ್ಭಿಣಿ ಮೇಘಾಳನ್ನು ಸಂಬಂಧಿಕರು ಬಸವೇಶ್ವರ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಂದು ಮೇಘಾ ಒಂದು ಗಂಡು ಹಾಗೂ ಒಂದು ಹೆಣ್ಣು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ.

  • ಬೆಳ್ತಂಗಡಿಯಲ್ಲಿ ಪತಿಯ ಕೃತ್ಯದಿಂದ ಮನನೊಂದು ಪತ್ನಿ ಆತ್ಮಹತ್ಯೆ!

    ಬೆಳ್ತಂಗಡಿಯಲ್ಲಿ ಪತಿಯ ಕೃತ್ಯದಿಂದ ಮನನೊಂದು ಪತ್ನಿ ಆತ್ಮಹತ್ಯೆ!

    ಮಂಗಳೂರು: ಅಪ್ತಾಪ್ತ ಮಗಳ ಮೇಲೆಯೇ ಪತಿ ಅತ್ಯಾಚಾರವೆಸಗಿದ್ದರಿಂದ ಮನನೊಂದು ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಬಳಿಯ ಪೆರಾಡಿಯಲ್ಲಿ ನಡೆದಿದೆ.

    ಎರಡು ದಿನಗಳ ಹಿಂದೆ ತಾಯಿ ಲೀಲಾ(55) ಆತ್ಮಹತ್ಯೆ ಮಾಡಿಕೊಂಡಿದ್ದರು. ಲೀಲಾ ಆತ್ಮಹತ್ಯೆ ಮಾಡಿಕೊಂಡ ಸುದ್ದಿಯ ಬಳಿಕ ಪತಿ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ನಡೆಸಿದ್ದು, ಮಾತ್ರವಲ್ಲದೇ ಇದರಿಂದ ಪುತ್ರಿ ಗರ್ಭಿಣಿಯಾಗಿರುವ ಸುದ್ದಿಯೊಂದು ಹೊರಬಿದ್ದಿದೆ.

    ಮಗಳು ಗರ್ಭಿಣಿ ಎಂದು ತಿಳಿದ ಬಳಿಕ ತಾಯಿ ತನ್ನ ಅಪ್ರಾಪ್ತ ಮಗಳನ್ನು ವಿಚಾರಿಸಿದ್ದಾರೆ. ಈ ವೇಳೆ ಆಕೆ ತಂದೆ ತನ್ನ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸುತ್ತಿದ್ದ ವಿಚಾರವನ್ನು ತಿಳಿಸಿದ್ದಾಳೆ. ಇದರಿಂದ ಮನನೊಂದ ತಾಯಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ತಂದೆಯ ನಿರಂತರ ಅತ್ಯಾಚಾರದಿಂದ 9ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಪುತ್ರಿ ಗರ್ಭಿಣಿಯಾಗಿದ್ದಳು.

    ಇತ್ತ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಆರೋಪಿ ತಂದೆ ಸಾಧು ತಲೆಮರೆಸಿಕೊಂಡಿದ್ದಾನೆ. ಸದ್ಯ ಬೆಳ್ತಂಗಡಿ ಪೊಲೀಸರು ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದ್ರೆ ಅತ್ಯಾಚಾರ ನಡೆಸಿರುವ ತಂದೆಯ ವಿರುದ್ಧ ಈವರೆಗೂ ಯಾವುದೇ ದೂರು ದಾಖಲಾಗಿಲ್ಲ.

    https://www.youtube.com/watch?v=IUZfb7barAw

  • 14ರ ಮಗಳ ಮೇಲೆಯೇ ಮಲತಂದೆಯಿಂದ ಅತ್ಯಾಚಾರ- ಈಗ 3 ತಿಂಗ್ಳ ಗರ್ಭಿಣಿ!

    14ರ ಮಗಳ ಮೇಲೆಯೇ ಮಲತಂದೆಯಿಂದ ಅತ್ಯಾಚಾರ- ಈಗ 3 ತಿಂಗ್ಳ ಗರ್ಭಿಣಿ!

    ಭೋಪಾಲ್: 14 ವರ್ಷದ ಮಗಳ ಮೇಲೆ ಮಲ ತಂದೆಯೊಬ್ಬ 5 ತಿಂಗಳಿಂದ ನಿರಂತರ ಅತ್ಯಾಚಾರವೆಸಗಿದ್ದು, ಸದ್ಯ ಆಕೆ ಗರ್ಭಿಣಿಯಾಗಿರೋ ಘಟನೆಯೊಂದು ಮಧ್ಯಪ್ರದೇಶದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

    ಈ ಘಟನೆ ದೇವಾಸ್ ಜಿಲ್ಲೆಯಲ್ಲಿ ನಡೆದಿದೆ. ಅತ್ಯಾಚಾರಕ್ಕೆ ಒಳಗಾದ ಅಪ್ರಾಪ್ತೆ ಬುಧವಾರ ವಾಂತಿ ಮಾಡಿಕೊಂಡಿದ್ದಾಳೆ. ಹೀಗಾಗಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಕೆಯನ್ನು ಪರೀಕ್ಷಿಸಿದ ವೈದ್ಯರು ಈಕೆ ಗರ್ಭಿಣಿಯಾಗಿರುವ ಮಾಹಿತಿಯನ್ನು ತಿಳಿಸಿದ್ದಾರೆ. ಆ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ ಅಂತ ಪೊಲೀಸರು ತಿಳಿಸಿದ್ದಾರೆ.

    ಮಲತಂದೆ 5 ತಿಂಗಳಿಂದಲೂ ಮಗಳ ಮೇಲೆ ಅತ್ಯಾಚಾರ ಎಸಗಿದ್ದು, ಮಾತ್ರವಲ್ಲದೇ ಈ ವಿಚಾರವನ್ನು ಬಹಿರಂಗಪಡಿಸಿದರೆ ಕೊಲ್ಲುವುದಾಗಿ ಬೆದರಿಕೆಯೊಡ್ಡಿದ್ದನು. ಈಕೆ ಈಗ 3 ತಿಂಗಳ ಗರ್ಭಿಣಿಯಾಗಿದ್ದಾಳೆ ಅಂತ ಖುರ್ತಯಾನ್ ಪೊಲೀಸ್ ಠಾಣೆಯ ಉಸ್ತುವಾರಿ ಬಿಶ್ವದೀಪ್ ಸಿಂಗ್ ಪರಿಹಾರ್ ಹೇಳಿದ್ದಾರೆ.

    ಸದ್ಯ ಆರೋಪಿ ವಿಜಯ್ ಬೈರಗಿಯನ್ನು ಬಂಧಿಸಲಾಗಿದೆ. ಇನ್ನು ಸಂತ್ರಸ್ಥೆಗೆ ಖುರ್ಟಯಾನ್ ಜಿಲ್ಲೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆಕೆ ಸುಧಾರಿಸಿದ ಬಳಿಕ ಬಿಡುಗಡೆ ಮಾಡಲಾಗುತ್ತದೆ ಎಂದು ಜಿಲ್ಲಾಡಳಿತ ಹೇಳಿದೆ.

  • ವರದಕ್ಷಿಣೆ ತರಲಿಲ್ಲ ಎಂದು ಗರ್ಭಿಣಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನ!

    ವರದಕ್ಷಿಣೆ ತರಲಿಲ್ಲ ಎಂದು ಗರ್ಭಿಣಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನ!

    ಬೆಳಗಾವಿ: ವರದಕ್ಷಿಣೆ ತರಲಿಲ್ಲ ಎಂಬ ಕಾರಣಕ್ಕೆ ಗಂಡ, ಅತ್ತೆ, ಮಾವ, ನಾದಿನಿ ಸೇರಿಕೊಂಡು ಜೀವಂತವಾಗಿ ನಾಲ್ಕು ತಿಂಗಳ ಗರ್ಭಿಣಿಯನ್ನ ಸುಡಲು ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ತಪಸ್ಸಿ ಗ್ರಾಮದಲ್ಲಿ ನಡೆದಿದೆ.

    ಅನುಸೂಯಾ(27) ವರ್ಷದ ಗೃಹಿಣಿ ಮೇಲೆ ಈ ರೀತಿ ಅಮಾನುಷವಾಗಿ ಕೊಲೆ ಮಾಡಲು ಗಂಡನ ಮನೆಯವರು ಯತ್ನಿಸಿದ್ದಾರೆ. ಅನುಸೂಯಾರಿಗೆ 4 ವರ್ಷದ ಹಿಂದೆ ಮದುವೆಯಾಗಿದ್ದು, ಈಗಾಗಲೇ ಒಂದೂವರೆ ವರ್ಷದ ಹೆಣ್ಣು ಮಗು ಕೂಡ ಇದೆ. ಜೊತೆಗೆ ಅನುಸೂಯಾ 4 ತಿಂಗಳ ಗರ್ಭಿಣಿ ಕೂಡ ಆಗಿದ್ದಾರೆ. ಆದರೆ ಇದ್ಯಾವುದಕ್ಕೂ ಲೆಕ್ಕಿಸದ ರಾಕ್ಷಸ ಮನಸ್ಥಿತಿಯ ಗಂಡನ ಮನೆಯವರು ಆಕೆಯನ್ನ ಸುಟ್ಟು ಕೊಲೆ ಮಾಡಲು ಯತ್ನಿಸಿದ್ದಾರೆ.

    ಕಳೆದ ಮೂರು ದಿನಗಳ ಹಿಂದೆ ರಾತ್ರಿ ಗಂಡ ಸಿದ್ದಪ್ಪ ಹೆಂಡತಿಗೆ ತವರು ಮನೆಗೆ ಹೋಗಿ ಬಂಗಾರ ತರುವಂತೆ ಹಾಗೂ ಅನುಸೂಯಾ ತಂದೆ ಹೆಸರಿನಲ್ಲಿರುವ ಜಮೀನನ್ನ ತನ್ನ ಹೆಸರಿಗೆ ಬರೆಸುವಂತೆ ಕಿರುಕುಳ ನೀಡಿದ್ದಾನೆ. ಇದ್ಯಾವುದಕ್ಕೂ ಹೆಂಡತಿ ಅನುಸೂಯಾ ಒಪ್ಪದಿದ್ದಾಗ ಗಂಡ ಸಿದ್ದಪ್ಪ, ಮಾವ ಕಾಮೇಶ್, ಅತ್ತೆ ಪಾರ್ವತಿ ಹಾಗೂ ಗಂಡನ ಅಣ್ಣ ಹಾಗೂ ಹೆಂಡತಿ ಸೇರಿಕೊಂಡು ಸೀಮೆ ಎಣ್ಣೆ ಸುರಿದು ಅನುಸೂಯಾರ ಕೊಲೆ ಮಾಡಲು ಯತ್ನಿಸಿದ್ದಾರೆ.

    ಶೇಕಡಾ 90ರಷ್ಟು ಬೆಂಕಿಯಲ್ಲಿ ಬೆಂದಿರುವ ಅನುಸೂಯಾರನ್ನು ನಂತರ ಎಚ್ಚೆತ್ತುಕೊಂಡ ಗಂಡ ಸಿದ್ದಪ್ಪನೇ ಗೋಕಾಕ್ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ತಂದೆ, ತಾಯಿ, ಅಣ್ಣನ ಜೊತೆಗೆ ಪರಾರಿಯಾಗಿದ್ದಾನೆ. ಇತ್ತ ಗ್ರಾಮಸ್ಥರು ಗೋಕಾಕ್ ತಾಲೂಕಿನ ತಳಕಟ್ನಾಳ ಗ್ರಾಮದಲ್ಲಿದ್ದ ಸಂಬಂಧಿಕರಿಗೆ ಸುದ್ದಿ ಮುಟ್ಟಿಸಿದ್ದಾರೆ.

    ಆಸ್ಪತ್ರೆಗೆ ಬಂದ ಅನುಸೂಯಾರ ಕುಟುಂಬಸ್ಥರು ಆಕೆಯ ಸ್ಥಿತಿ ನೋಡಿ ತಕ್ಷಣ ಬೆಳಗಾವಿ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ದೇಹದ ಬಹುತೇಕ ಭಾಗ ಸುಟ್ಟಿದ್ದರಿಂದ ಅನುಸೂಯಾ ಬದುಕುಳಿಯುವುದು ಕಷ್ಟ ಎಂದು ವೈದ್ಯರು ಹೇಳಿದ್ದಾರೆ.

  • ಅಂಬುಲೆನ್ಸ್ ಸೇವೆಗೆ ಗರ್ಭಿಣಿಯನ್ನ 12 ಕಿ.ಮೀ. ಹೊತ್ತು ನಡೆದ ಗ್ರಾಮಸ್ಥರು: ಮಗು ಸಾವು

    ಅಂಬುಲೆನ್ಸ್ ಸೇವೆಗೆ ಗರ್ಭಿಣಿಯನ್ನ 12 ಕಿ.ಮೀ. ಹೊತ್ತು ನಡೆದ ಗ್ರಾಮಸ್ಥರು: ಮಗು ಸಾವು

    ಹೈದರಾಬಾದ್: ಗರ್ಭಿಣಿಯೊಬ್ಬರನ್ನು ಆಸ್ಪತ್ರೆಗೆ ಸೇರಿಸಲು ಪತಿ ಹಾಗೂ ಕೆಲ ಗ್ರಾಮಸ್ಥರು 12 ಕಿ.ಮೀ. ಕ್ರಮಿಸಿ ಅಂಬುಲೆನ್ಸ್ ಸೇವೆ ಪಡೆದಿದ್ದರೂ, ತಾಯಿ ಮಾತ್ರ ಬದುಕುಳಿದು ಮಗು ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

    ಅರಣ್ಯ ಪ್ರದೇಶ ವಾಸಿಯಾಗಿರುವ 8 ತಿಂಗಳ ಗರ್ಭಿಣಿ ಜಿದಮ್ಮ (22) ಹೆರಿಗೆ ನೋವಿನಿಂದ ಬಳಲುತ್ತಿದ್ದರು. ಹೀಗಾಗಿ ಆಕೆಯನ್ನು ಆಸ್ಪತ್ರೆಗೆ ಸೇರಿಸಲು, ಪತಿ ಹಾಗೂ ಗ್ರಾಮಸ್ಥರು ಪಟ್ಟ ಕಷ್ಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಜಿದಮ್ಮ ಅವರ ಗ್ರಾಮದ ಸುತ್ತಮತ್ತಲು ಯಾವುದೇ ಆಸ್ಪತ್ರೆಗಳಿಲ್ಲ. ಗ್ರಾಮದವರೆಗೆ ರಸ್ತೆ ನಿರ್ಮಾಣವಾಗಿಲಿಲ್ಲ. ಹೀಗಾಗಿ ಅಂಬುಲೆನ್ಸ್ ಸೌಲಭ್ಯ ಪಡೆಯಲು ಗ್ರಾಮಸ್ಥರು ಅರಣ್ಯ ಭಾಗದಲ್ಲಿರು ಕಿರಿದಾದ 12 ಕಿ.ಮೀ. ಕ್ರಮಿಸುವುದು ಅನಿವಾರ್ಯ. ಹೆರಿಗೆ ನೋವಿಗೆ ಒಳಗಾಗಿದ್ದ ಜಿದಮ್ಮ ಅವರನ್ನು ಉಳಿಸಿಕೊಳ್ಳಲು ಪತಿ ಆಕೆಯನ್ನು ಸೀರೆಯಿಂದ ಮರೆ ಮಾಡಿ, ಒಂದು ಬಿದಿರಿನ ಬುಟ್ಟಿಯಲ್ಲಿ ಕುಳ್ಳಿರಿಸಿ, ಬುಟ್ಟಿಯ ನಾಲ್ಕು ಬದಿಗೆ ಹಗ್ಗ ಹಾಕಿ ಅದನ್ನು ಬಿದಿರಿನ ಬೊಂಬಿಗೆ ಕಟ್ಟಿ ಇಬ್ಬರು ಹೊತ್ತುಕೊಂಡು ಸಾಗಿದ್ದರು.

    ವಿಜಯನಗರಂನಲ್ಲಿ ಇದು ವಿಶೇಷ ಪ್ರಕರಣವಲ್ಲ. ರಸ್ತೆಗಳಿಲ್ಲದ ಗ್ರಾಮಗಳಲ್ಲಿ ಈ ಹಿಂದೆಯೂ ಇಂತಹ ಘಟನೆಗಳು ನಡೆದಿವೆ ಎಂದು ವರದಿಯಾಗಿದೆ.

    ಬುಡಕಟ್ಟು ಜನಾಂಗ ಎದುರಿಸುತ್ತಿರುವ ರಸ್ತೆ ಹಾಗೂ ಆರೋಗ್ಯ ಸಮಸ್ಯೆ ಕುರಿತು ನಟ ಹಾಗೂ ಜನ ಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಪ್ರಸ್ತಾಪ ಮಾಡಿದ್ದರು. ಸದ್ಯ ಜಿದಮ್ಮ ಪ್ರಕರಣದ ಕುರಿತು ಆಡಳಿತ ಪಕ್ಷವನ್ನು ತರಾಟೆಗೆ ತಗೆದುಕೊಂಡಿದ್ದಾರೆ.

  • ಸರ್ಕಾರಿ ಆಸ್ಪತ್ರೆಯಲ್ಲಿ ಸ್ಟ್ರೆಚರ್ ಸಿಗದೆ ಗರ್ಭಿಣಿ ಪರದಾಟ!

    ಸರ್ಕಾರಿ ಆಸ್ಪತ್ರೆಯಲ್ಲಿ ಸ್ಟ್ರೆಚರ್ ಸಿಗದೆ ಗರ್ಭಿಣಿ ಪರದಾಟ!

    ಬೀದರ್: ತುಂಬು ಗರ್ಭಿಣಿಗೆ ಸ್ಟ್ರೆಚರ್ ನೀಡದ ಪರಿಣಾಮ ಮಹಡಿಯಿಂದ ಮಹಡಿ ಸುತ್ತಾಡಿ ಗರ್ಭಿಣಿ ನರಕಯಾತನೆ ಅನುಭವಿಸಿದ ಅಮಾನವೀಯ ಘಟನೆ ಬೀದರ್ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.

    ಒಂದು ಕಡೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಖಾಸಗಿ ವೈದ್ಯರು ಮುಷ್ಕರದಲ್ಲಿ ಭಾಗಿಯಾಗಿದ್ದಾರೆ. ಮೊತ್ತೊಂದು ಕಡೆ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಬಂದಿದ್ದ ತುಂಬು ಗರ್ಭಿಣಿಗೆ ಸಿಬ್ಬಂದಿ ಸ್ಟ್ರೆಚರ್ ನೀಡದೆ ನಿರ್ಲಕ್ಷ್ಯ ತೊರಿದ್ದಾರೆ. ಹೆರಿಗೆ ವಾಡ್9 ಸಿಗದೇ ಮಹಡಿಯಿಂದ ಮಹಡಿ ಸುತ್ತಾಡಿ ಹೊಟ್ಟೆ ನೋವು ಕಾಣಿಸಿಕೊಂಡು ಗರ್ಭಿಣಿ ಸುಸ್ತಾಗಿ ನರಕಯಾತನೆ ಅನುಭವಿಸಿದ್ದಾರೆ.

    ಬೀದರ್ ತಾಲೂಕಿನ ಕಾಶೆಂಪೂರ್ ಗ್ರಾಮದ ರೇಷ್ಮಾ ಎಂಬ ತುಂಬು ಗರ್ಭಿಣಿ ಜಿಲ್ಲಾಸ್ಪತ್ರೆಗೆ ಬಂದು ನರಕಯಾತನೆ ಅನುಭವಿಸಿದ್ದಾರೆ. ಮೈತ್ರಿ ಸರ್ಕಾರದಲ್ಲಿ ಸಹಕಾರ ಸಚಿವರಾದ ಬಂಡೆಪ್ಪ ಕಾಶೆಂಪೂರ್ ಸ್ವಗ್ರಾಮದ ಗರ್ಭಿಣಿ ಮಹಿಳೆಗೆ ಈ ಸ್ಥಿತಿ ಬಂದಿದೆ. ಜಿಲ್ಲೆಯಲ್ಲಿ ಇಬ್ಬರು ಸಚಿವರು ಇದ್ದರೂ ಬೀದರ್ ಜಿಲ್ಲಾಸ್ಪತ್ರೆಯಲ್ಲಿ ಪದೇ ಪದೇ ಈ ರೀತಿ ನಡೆಯಿವ ಅವಮಾನವೀಯ ಘಟನೆಗಳು ನಡೆಯುತ್ತಿದ್ದರೂ ಅಧಿಕಾರಿಗಳು ಮಾತ್ರ ಎಚ್ಚೆತ್ತಿಲ್ಲ.

  • ಗ್ರಹಣದಿಂದಾಗಿ ದಾಖಲಾಗದ ಗರ್ಭಿಣಿಯರು- ಜಿಲ್ಲಾಸ್ಪತ್ರೆಯಲ್ಲಿ ಎಲ್ಲಾ ಬೆಡ್‍ಗಳೂ ಖಾಲಿಖಾಲಿ

    ಗ್ರಹಣದಿಂದಾಗಿ ದಾಖಲಾಗದ ಗರ್ಭಿಣಿಯರು- ಜಿಲ್ಲಾಸ್ಪತ್ರೆಯಲ್ಲಿ ಎಲ್ಲಾ ಬೆಡ್‍ಗಳೂ ಖಾಲಿಖಾಲಿ

    ಹಾಸನ: ಖಗ್ರಾಸ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಗರ್ಭಿಣಿಯರು ಆಸ್ಪತ್ರೆಗೆ ದಾಖಲಾಗದೇ ಇರುವುದರಿಂದ ಹಾಸನ ಜಿಲ್ಲಾಸ್ಪತ್ರೆಯಲ್ಲಿ ಎಲ್ಲಾ ಬೆಡ್ ಗಳೂ ಖಾಲಿಖಾಲಿ ಆಗಿದೆ.

    ಚಂದ್ರಗ್ರಹಣ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದವರೂ ಸಹ ಶುಕ್ರವಾರ ಡಿಸ್ಚಾರ್ಜ್ ಆಗಿದ್ದಾರೆ. ಗ್ರಹಣ ತಗುಲುತ್ತೆ ಎನ್ನುವ ಮೂಢನಂಬಿಕೆಯಿಂದ ಆಸ್ಪತ್ರೆಯಲ್ಲಿದ್ದವರೆಲ್ಲರೂ ಅಲ್ಲಿಂದ ಡಿಸ್ಚಾರ್ಜ್ ಆಗಿ ಹೋಗಿದ್ದಾರೆ. ಹಾಸನ ಜಿಲ್ಲಾಸ್ಪತ್ರೆಯ ಹೆರಿಗೆ ವಿಭಾಗ ಖಾಲಿಯಾಗಿದೆ.

    ಜಿಲ್ಲಾಸ್ಪತ್ರೆಯ ಪ್ರಸೂತಿ ವಿಭಾಗ ಪ್ರತಿನಿತ್ಯ ಗರ್ಭಿಣಿಯರಿಂದ ತುಂಬಿರುತ್ತಿತ್ತು. ವಿವಿಧ ತಾಲೂಕುಗಳಿಂದ ಜಿಲ್ಲಾಸ್ಪತ್ರೆಗೆ ದಾಖಲಾಗುತ್ತಿದ್ದರು. ನೂರಾರು ಬೆಡ್ ಗಳುಳ್ಳ ಜಿಲ್ಲಾಸ್ಪತ್ರೆಯ ಗರ್ಭಿಣಿಯರ ವಿಭಾಗ ಪ್ರತಿನಿತ್ಯ ಜನಜಂಗುಳಿಯಿಂದ ಕೂಡುತ್ತಿದ್ದು, ಗ್ರಹಣ ಹಿನ್ನೆಲೆ ಖಾಲಿ ಆಗಿದೆ.

    ಖಗ್ರಾಸ ಚಂದ್ರಗ್ರಹಣ ಹಿನ್ನೆಲೆಯಲ್ಲಿ ವಿಜಯಪುರ ನಗರದ ಬಹುತೇಕ ಹೆರಿಗೆ ಆಸ್ಪತ್ರೆಗಳು ಖಾಲಿ-ಖಾಲಿಯಾಗಿದ್ದು, ವಿಜಯಪುರದ ಆಸ್ಪತ್ರೆಗಳಲ್ಲಿ ತುಂಬು ಗರ್ಭಿಣಿ ಸ್ತ್ರೀಯರಿಗೆ ಸಿಸೇರಿಯನ್ ಗಾಗಿ ದಿನಾಂಕ ನೀಡಿದ್ದರೂ, ಯಾರೊಬ್ಬರು ಆಸ್ಪತ್ರೆಯತ್ತ ತಲೆ ಹಾಕಿಲ್ಲ. ಸಿಸೇರಿಯನ್ ಗಾಗಿ ನಿಗದಿಪಡಿಸಿದ ಡೇಟ್‍ಗಳು ಗ್ರಹಣದ ಹಿನ್ನೆಲೆಯಲ್ಲಿ ರದ್ದಾಗಿದೆ. ಗರ್ಭಿಣಿಯರ ಮನೆಯವರು ಹೆರಿಗೆಗೆ ನಿರಾಕರಣೆ ಮಾಡಿದ್ದು, ಬಹುತೇಕ ಆಸ್ಪತ್ರೆಗಳು ಖಾಲಿ ಖಾಲಿಯಾಗಿತ್ತು. ಇನ್ನು ಕೆಲವರು ಶನಿವಾರಕ್ಕೆ ಸಿಸೇರಿಯನ್ ಮುಂದೂಡಿದ್ದಾರೆ.

    ಚಂದ್ರ ಗ್ರಹಣದಿಂದಾಗಿ ಮುಂದೆ ಹುಟ್ಟಲಿರುವ ಮಗುವಿಗೆ ಕಂಟಕವಾಗುತ್ತದೆ ಎಂದು ಭಾವಿಸಿ ಗರ್ಭಿಣಿಯರು ದೇವರ ನಾಮ ಸ್ಮರಣೆಯ ಮೊರೆ ಹೋಗಿದ್ದರು. ಸ್ತ್ರೋತ್ರ ಪುಸ್ತಕಗಳನ್ನು ಓದುತ್ತಾ ಕುಳಿತ ಗರ್ಭಿಣಿ ಸ್ತ್ರೀಯರು ದೇವರ ನಾಮಸ್ಮರಣೆಯಲ್ಲಿ ತಲ್ಲೀನರಾಗಿದ್ದರು.

  • ಗರ್ಭಿಣಿಯರು ಪಾಲಿಸಲೇಬೇಕಾದ ನಿಯಮಗಳ ಪಟ್ಟಿ ಇಲ್ಲಿದೆ

    ಗರ್ಭಿಣಿಯರು ಪಾಲಿಸಲೇಬೇಕಾದ ನಿಯಮಗಳ ಪಟ್ಟಿ ಇಲ್ಲಿದೆ

    ಸುನಿತಾ ಎ.ಎನ್.

    ರ್ಭಾವಸ್ಥೆ ಎಂಬುದು ಹೆಣ್ಣಿನ ಬಾಳಿನಲ್ಲಿ ಅತ್ಯಾನಂದವನ್ನುಂಟು ಮಾಡುವ ಸಮಯವಾಗಿದೆ. ಈ ಸಮಯದಲ್ಲಿ ತನ್ನ ಆರೋಗ್ಯ ಮಾತ್ರವಲ್ಲದೆ ಗರ್ಭದೊಳಗಿರುವ ಕೂಸಿನ ಕಾಳಜಿಯನ್ನು ಆಕೆ ಮಾಡಬೇಕು. ನವ ಮಾಸವೂ ಆ ಮಗುವನ್ನು ಗರ್ಭದಲ್ಲಿ ಹೊತ್ತು ತನ್ನ ಮತ್ತು ಮಗುವಿನ ಆರೋಗ್ಯವನ್ನು ಕಾಪಾಡಬೇಕಾಗುತ್ತದೆ. ಕೆಲವೊಂದು ನಿಯಮಗಳನ್ನು ಚಾಚೂ ತಪ್ಪದೆ ಅನುಸರಿಸಬೇಕಾಗುತ್ತದೆ.

    ಏನು ತಿನ್ನಬೇಕು? ಏನು ತಿನ್ನಬಾರದು? ಎಂಬುದಾಗಿ ಪಟ್ಟಿ ಮಾಡಿ ಆ ರೀತಿಯೇ ಸೇವಿಸಬೇಕು. ನಿಮಗಿಷ್ಟವಿದ್ದರೂ ಅದು ನಿಮ್ಮ ಮಗುವಿನ ಮೇಲೆ ಪರಿಣಾಮ ಬೀರಬಹುದಾದ್ದರಿಂದ ಕೆಲವು ಆಹಾರಗಳನ್ನು ಕೆಲವೊಂದು ಚಟುವಟಿಕೆಗಳನ್ನು ನೀವು ಮಾಡಲೇಬಾರದು. ವೈದ್ಯರ ಸಲಹೆಯನ್ನು ಪ್ರತಿಯೊಂದು ಹೆಜ್ಜೆ ಹೆಜ್ಜೆಯಲ್ಲೂ ಪಡೆದುಕೊಳ್ಳುತ್ತಿರಬೇಕಾಗುತ್ತದೆ.

    ನಿಮ್ಮ ಗರ್ಭಾವಸ್ಥೆಯ ಸಮಯದಲ್ಲಿ ನಿಮಗೆ ತಿಳಿಯದಂತೆ ನಿಮ್ಮ ದೇಹದಲ್ಲಿ ಅನೇಕ ಬದಲಾವಣೆಗಳು ಉಂಟಾಗುತ್ತಿರುತ್ತವೆ. ಈ ಸಮಯದಲ್ಲಿ ಮನೆಯ ಇತರ ಸದಸ್ಯರುಗಳಿಗಿಂತ ಹೆಚ್ಚಾಗಿ ನೀವು ನಿಮ್ಮ ಗರ್ಭದೊಳಗಿರುವ ಕಂದನಿಗೆ ಹೆಚ್ಚಿನ ಅಸ್ಥೆ ಕಾಳಜಿಯನ್ನು ನೀಡಬೇಕಾಗುತ್ತದೆ. ನಿಮ್ಮ ಆಹಾರದ ಕಡೆಗೆ ಗಮನ ಹರಿಸುವುದರ ಜೊತೆಗೆ ಮದ್ಯಪಾನ, ಧೂಮಪಾನ, ಹೆಚ್ಚಿನ ಕೆಫೀನ್ ಅಂಶಗಳ ಸೇವನೆಯನ್ನು ನೀವು ತ್ಯಜಿಸಬೇಕಾಗುತ್ತದೆ. ಇದರೊಂದಿಗೆ ಇನ್ನೂ ಹೆಚ್ಚಿನ ಚಟುವಟಿಕೆಗಳನ್ನು ನೀವು ಮಾಡುತ್ತಿದ್ದಲ್ಲಿ ಅದಕ್ಕೆಲ್ಲಾ ಪೂರ್ಣ ವಿರಾಮ ಇಡುವ ಸಮಯ ಇದಾಗಿದೆ. ಹೀಗಾಗಿ ಇಲ್ಲಿ ನಿಮ್ಮ ಮತ್ತು ಮಗುವಿನ ಉತ್ತಮ ಆರೋಗ್ಯಕ್ಕಾಗಿ ನೀವು ಏನು ಮಾಡಬೇಕು ಏನು ಮಾಡಬಾರದು ಎನ್ನುವ ಮಾಹಿತಿಯನ್ನು ನೀಡಲಾಗಿದೆ. ಇದನ್ನೂ ಓದಿ: ಗರ್ಭಿಣಿಯರು ಸೇವಿಸಬೇಕಾದ 10 ಸಸ್ಯಹಾರಿ ಆಹಾರ

    ಮಗುವಿನ ಉತ್ತಮ ಆರೋಗ್ಯಕ್ಕಾಗಿ ಏನು ಮಾಡಬೇಕು?

    1. ಸಾಹಸ ಕ್ರಿಯೆಗಳಲ್ಲಿ ಭಾಗವಹಿಸುವುದು ಅಮ್ಯೂಸ್‍ಮೆಂಟ್ ಪಾರ್ಕ್ ಗಳಲ್ಲಿ ಸಾಹಸ ಕ್ರೀಡೆಗಳು, ಏರುವುದು, ಹತ್ತುವುದು, ನೀರಾಟ ಮೊದಲಾದ ಚಟುವಟಿಕೆಗಳಿರುತ್ತವೆ. ನಿಮ್ಮ ಗರ್ಭಾವಸ್ಥೆಯಲ್ಲಿ ಇಂತಹ ಕ್ರಿಯೆಗಳನ್ನು ನೀವು ಮಾಡಲೇಬಾರದು. ರೋಲರ್ ಕೋಸ್ಟರ್ ಸವಾರಿ, ನೀರಿನಾಟ ಮತ್ತು ಒಮ್ಮೆಲೆ ನಿಲ್ಲುವಿಕೆಗಳನ್ನು ಒಳಗೊಂಡಿರುವ ಚಟುವಟಿಕೆಗಳನ್ನು ಮಾಡಬೇಡಿ. ಇದರಿಂದ ಗರ್ಭಪಾತ ಅಥವಾ ನಿಮ್ಮ ಮಗುವಿಗೆ ಹಾನಿಯಾಗುವ ಸಾಧ್ಯತೆ ಇರುತ್ತದೆ.

    2. ಕ್ರೀಡೆಗಳಲ್ಲಿ ಭಾಗವಹಿಸದಿರಿ ಎಲ್ಲಾ ರೀತಿಯ ಕ್ರೀಡೆಗಳು ಗರ್ಭಾವಸ್ಥೆಯ ಸಮಯದಲ್ಲಿ ಹೆಚ್ಚು ಹಾನಿಕಾರಕವಾಗಿರುತ್ತವೆ. ಕ್ರೀಡೆಗಳಲ್ಲಿ ಭಾಗವಹಿಸದಿರಿ. ಫುಟ್‍ಬಾಲ್, ಕ್ರಿಕೆಟ್ ಮತ್ತು ವಾಲಿಬಾಲ್‍ನಂತಹ ಕ್ರೀಡೆಗಳನ್ನು ಗರ್ಭಾವಸ್ಥೆಯಲ್ಲಿ ಆಡಲೇಬಾರದು.

    3. ಸೈಕಲ್ ಸವಾರಿ ಮಾಡಬೇಡಿ. ಮೂರನೇ ತ್ರೈಮಾಸಿಕದಲ್ಲಿ ನಿಮಗೆ ಸೈಕಲ್ ಸವಾರಿಯ ಹುಚ್ಚಿದ್ದರೂ ಈ ಕ್ರಿಯೆಗೆ ಇಳಿಯಬೇಡಿ. ಸೈಕಲ್ ಸವಾರಿ ಮಾಡುವಾಗ ಸೈಕಲ್ ನಿರ್ವಹಣೆಯನ್ನು ಮಾಡುವುದು ಗರ್ಭಕ್ಕೆ ದುಷ್ಪರಿಣಾಮವನ್ನುಂಟು ಮಾಡಬಹುದು. ಅದಲ್ಲದೆ ನೀವು ನಿಯಂತ್ರಣ ತಪ್ಪಿ ಕೆಳಕ್ಕೆ ಬೀಳುವ ಸಾಧ್ಯತೆ ಕೂಡ ಇರುತ್ತದೆ.

    5. ಭಾರ ಎತ್ತುವ ವ್ಯಾಯಾಮಗಳನ್ನು ಮಾಡಬೇಡಿ. ಗರ್ಭಾವಸ್ಥೆಯಲ್ಲಿ ಸಕ್ರಿಯರಾಗಿರುವುದು ಒಳ್ಳೆಯ ವಿಷಯವೇ. ಆದರೆ ಈ ಸಮಯದಲ್ಲಿ ಯಾವುದೇ ಭಾರ ಎತ್ತುವ ವ್ಯಾಯಾಮಗಳನ್ನು ಮಾಡಬೇಡಿ. ಹೊಟ್ಟೆಯ ಮೇಲೆ ಮಲಗಿ ಮಾಡುವ ವ್ಯಾಯಾಮಗಳನ್ನು ಅನುಸರಿಸದಿರಿ. ಹೆಚ್ಚು ನೋವನ್ನುಂಟು ಮಾಡುವ ಸಾಧ್ಯತೆ ಇರುತ್ತದೆ.

    6. ಬಿಸಿ ಬಿಸಿ ನೀರಿನ ಸ್ನಾನ ಮಾಡದಿರಿ. ಹಾಟ್ ಟಬ್‍ನಲ್ಲಿ ಸ್ನಾನ ಮಾಡುವುದು ಅನಾರೋಗ್ಯವನ್ನುಂಟು ಮಾಡುವ ಸಾಧ್ಯತೆ ಇರುತ್ತದೆ. ನಿಮ್ಮ ಮಗುವಿನ ಆರೋಗ್ಯದ ಮೇಲೆ ಇದು ಹಾನಿಯನ್ನುಂಟು ಮಾಡಬಹುದು. ಸೌನಾ ಅಥವಾ ಹಾಟ್ ಬಾತ್ ನಿಮ್ಮ ಆರೋಗ್ಯದ ಮೇಲೆ ಹಾನಿಯನ್ನು ಉಂಟು ಮಾಡಿ ಮಗುವಿಗೆ ಸೋಂಕು ಹರಡುವ ಸಾಧ್ಯತೆ ಇರುತ್ತದೆ. ಉಗುರು ಬೆಚ್ಚಗಿನ ನೀರಿನ ಸ್ನಾನ ಉತ್ತಮ.

    7. ಜಾಗಿಂಗ್ ಬೇಡ ಎರಡನೆಯ ಮತ್ತು ಮೂರನೆಯ ಮಾಸಿಕದಲ್ಲಿ ಓಡುವುದು, ನೆಗೆಯುವುದು ಮೊದಲಾದ ಕ್ರಿಯೆಗಳನ್ನು ಮಾಡಬೇಡಿ. ಓಟದಲ್ಲಿ ಹೆಚ್ಚಿನ ನಿಯಂತ್ರಣ ಬೇಕಾಗಿರುತ್ತದೆ ಈ ಸಮಯದಲ್ಲಿ ನಮ್ಮ ದೇಹ ಒಗ್ಗುವುದಿಲ್ಲ. ಆದ್ದರಿಂದ ಓಡುವುದನ್ನು ಮಾಡದಿರಿ. ಇದರಿಂದ ಗರ್ಭಪಾತವಾಗುವ ಸಾಧ್ಯತೆ ಇರುತ್ತದೆ.

    8. ಯೋಗ ಮನಸ್ಸಿಗೆ ಉಲ್ಲಾಸ ನೀಡುತ್ತದೆ. ಹಾಗೆಂದ ಮಾತ್ರಕ್ಕೆ ಯೋಗದಲ್ಲಿ ಕಷ್ಟದ ಭಂಗಿಗಳನ್ನು ಅಭ್ಯಸಿಸಬೇಡಿ. ಗರ್ಭಾವಸ್ಥೆಯಲ್ಲಿ ನೀವು ಯೋಗವನ್ನು ಮಾಡದಿರಿ. ಆದರೆ ಕಷ್ಟವಾಗಿರುವ ಭಂಗಿಗಳನ್ನು ಮಾಡದಿರಿ.

    9. ಮನೆಯ ಸ್ವಚ್ಛತೆ ಮಾಡದಿರಿ. ಗರ್ಭಾವಸ್ಥೆಯಲ್ಲಿ ಎಲ್ಲಾ ಕೆಲಸಗಳನ್ನು ಮಾಡುವುದು ಸರಳ ಹೆರಿಗೆಗೆ ಅನುಕೂಲವಾಗಿರುತ್ತದೆ. ಆದರೆ ಮನೆಗೆಲಸ ಮಾಡುವಾಗ ಎತ್ತುವುದು, ಎಳೆಯುವುದು ಮೊದಲಾದ ಕೆಲಸಗಳನ್ನು ಮಾಡದಿರಿ. ಮನೆಯ ಇತರ ಸದಸ್ಯರು ಈ ಕೆಲಸಗಳನ್ನು ಮಾಡುತ್ತಾರೆ. ನೀವು ಆದಷ್ಟು ನಿಮ್ಮ ಆರೋಗ್ಯಕ್ಕೆ ಹೆಚ್ಚು ಗಮನ ನೀಡಬೇಕು. ಅದರಲ್ಲೂ ಮನೆಯ ಸ್ವಚ್ಛಗೊಳಿಸುವ ಕಾರ್ಯದಲ್ಲಿ ಅತಿ ಹೆಚ್ಚಾಗಿ ಬಗ್ಗುವಂತಹ ಕೆಲಸಗಳನ್ನು ಮಾಡಕೂಡದು. ಏಕೆಂದರೆ ಈ ಪರಿ ಬಗ್ಗುವುದರಿಂದ (sciatic nerve) ಅಥವಾ ಬೆನ್ನುಮೂಳೆಯ ಕೆಳಭಾಗದಿಂದ ಕಾಲಿಗೆ ಧಾವಿಸುವ ನರದ ಮೇಲೆ ಹೆಚ್ಚಿನ ಒತ್ತಡ ಬಿದ್ದು ಈ ನರವನ್ನು ಘಾಸಿಗೊಳಿಸಬಹುದು.

    10. ಕೆಲವರಿಗೆ ಕುದುರೆ ಸವಾರಿ ಮಾಡುವ ಅಭ್ಯಾಸವಿರುತ್ತದೆ. ಆದರೆ ಗರ್ಭಾವಸ್ಥೆಯಲ್ಲಿ ಕುದುರೆ ಸವಾರಿ ಮಾಡುವುದು ನಿಮ್ಮ ಗರ್ಭಕ್ಕೆ ಹಾನಿಯನ್ನುಂಟು ಮಾಡುವ ಸಾಧ್ಯತೆ ಹೆಚ್ಚು.

    11. ಹೈಕಿಂಗ್ ನಮ್ಮ ದೇಹಕ್ಕೆ ಉತ್ತಮ ಚಟುವಕೆಯನ್ನು ನೀಡುವ ಕ್ರಿಯೆಯಾಗಿದೆ ಹೈಕಿಂಗ್. ಆದರೆ ಹೈಕಿಂಗ್ ಸಮಯದಲ್ಲಿ ನೀವು ಬೀಳುವ, ಏಟು ಉಂಟಾಗುವ ಸಾಧ್ಯತೆ ಹೆಚ್ಚಿರುತ್ತದೆ. ಇದರಿಂದ ನಿಮ್ಮ ಮಗುವಿಗೆ ಹಾನಿಯುಂಟಾಗುವುದು ಹೆಚ್ಚು.

    12. ಗುಡಿಸುವುದು, ಬಟ್ಟೆ ಒಣಗಿಸುವುದು ಇವುಗಳನ್ನೆಲ್ಲಾ ಮಾಡಬೇಡಿ. ಗುಡಿಸುವುದು, ಭಾರವಾದ ವಸ್ತುಗಳನ್ನು ಮೇಲಿಡುವುದು, ಬಟ್ಟೆ ಒಣಗಿಸುವುದು ಗರ್ಭಾವಸ್ಥೆಯಲ್ಲಿ ದೇಹದ ಪ್ರಮುಖ ಗಂಟುಗಳು ಮತ್ತು ಮಡಚುವ ಮೂಳೆಗಳ ಭಾಗಗಳು ಕೊಂಚ ಮೆತ್ತಗಾಗುತ್ತವೆ. ಆದ್ದರಿಂದ ಇತರ ಸಮಯದಲ್ಲಿ ಸುಲಭವಾಗುತ್ತಿದ್ದ ಕೆಲಸಗಳು ಈಗ ಕಷ್ಟವಾಗುತ್ತವೆ. ಆದ್ದರಿಂದ ಈ ಕೆಲಸಗಳಿಗೆಲ್ಲಾ ಮನೆಯವರ ಅಥವಾ ಕೆಲಸದವರ ಸಹಾಯ ಪಡೆಯುವುದು ಒಳ್ಳೆಯದು. ಗುಡಿಸುವುದು, ಭಾರವಾದ ವಸ್ತುಗಳನ್ನು ಮೇಲಿಡುವುದು, ಬಟ್ಟೆ ಒಣಗಿಸುವುದು ಮೊದಲಾದ ಕೆಲಸಗಳಿಗೆ ಸಹಾಯ ಪಡೆದುಕೊಳ್ಳುವುದೇ ಜಾಣತನವಾಗಿದೆ.

     

    13. ಬೆಕ್ಕಿನ ಸಂಗ ಬಿಟ್ಟು ಬಿಡಿ! ಒಂದು ವೇಳೆ ನಿಮ್ಮ ಮನೆಯಲ್ಲಿ ಸಾಕಿರುವ ಬೆಕ್ಕು ಇದ್ದರೆ ಬೆಕ್ಕಿನ ಸಂಗ ಈ ಸಮಯದಲ್ಲಿ ಸಲ್ಲದು. ವಿಶೇಷವಾಗಿ ಬೆಕ್ಕಿನ ಮಲವನ್ನು ಸ್ವಚ್ಛಗೊಳಿಸುವುದಿರಲಿ, ಬಳಿಗೂ ಸುಳಿಯಕೂಡದು. ಏಕೆಂದರೆ ಇದರಲ್ಲಿ ಕೆಲವು ಪರಾವಲಂಬಿ ಕ್ರಿಮಿಗಳಿದ್ದು ಗರ್ಭಿಣಿಗೆ ಮಾರಕವಾಗುತ್ತವೆ. ಅಷ್ಟೇ ಅಲ್ಲ, ಬೆಕ್ಕಿನ ಕೂದಲು ಯಾವುದೇ ಕಾರಣಕ್ಕೂ ಆಹಾರ ಅಥವಾ ನೀರಿನ ಮೂಲಕ ದೇಹ ಪ್ರವೇಶಿಸಬಾರದು. ಇದು ಭಾರೀ ಅಲರ್ಜಿಕಾರಕವಾಗಿದ್ದು ಗರ್ಭಿಣಿಯ ಆರೋಗ್ಯವನ್ನು ಕೆಡಿಸಬಹುದು.

    ಧ್ಯಾನ ಮಾಡಿ
    * ನಿಮಗೆ ಆರಾಮವೆನಿಸುವ ಭಂಗಿಯಲ್ಲಿ ಚಕ್ಕಲೆಮಕ್ಕಲೆ ಕುಳಿತುಕೊಳ್ಳಿ. ಆರಾಮ ಅನ್ನಿಸದಿದ್ದರೆ ಕುರ್ಚಿಯ ಮೇಲೂ ಕುಳಿತುಕೊಳ್ಳಹುದು. ಸಾಧ್ಯವಾದಷ್ಟು ಬೆನ್ನುಮೂಳೆ ನೆಟ್ಟಗೇ ಇರಲಿ.
    * ಮನಸ್ಸು ಸೆಳೆಯುವ ಯಾವುದೇ ವಸ್ತು ಎದುರಿಗಿರದಂತೆ ನೋಡಿಕೂಳ್ಳಿ. ಕಣ್ಣುಮುಚ್ಚಿಕೊಂಡು ನಿಮ್ಮ ಗಮನವನ್ನು ಒಂದು ವಿಷಯದತ್ತ ಕೇಂದ್ರೀಕರಿಸಿ.
    * ಈ ಸಮಯದಲ್ಲಿ ಕೇವಲ ಧನಾತ್ಮಕ ವಿಚಾರಗಳು ಆವರಿಸಲಿ. ಉದಾಹರಣೆಗೆ ನನಗೆ ಹುಟ್ಟಲಿರುವ ಮಗು ಉತ್ತಮ ವ್ಯಕ್ತಿಯಾಗಿದ್ದು ಸಮಾಜದಲ್ಲಿ ಮನ್ನಣೆ ಮತ್ತು ಗೌರವ ಪಡೆಯುತ್ತಾನೆ/ತ್ತಾಳೆ ಇತ್ಯಾದಿ.
    * ಪ್ರತಿದಿನ ಒಂದೇ ಸಮಯವನ್ನು ಆಯ್ದುಕೊಂಡು ಆ ಪ್ರಕಾರವೇ ಅನುಸರಿಸಿ. ಇದರಿಂದ ಹೆರಿಗೆಯ ಸಮಯದಲ್ಲಿ ಮಾತ್ರವಲ್ಲ ಮುಂದಿನ ಜೀವನದಲ್ಲಿಯೂ ಒತ್ತಡವನ್ನು ಸಮರ್ಥವಾಗಿ ಎದುರಿಸಲು ಸಾಧ್ಯ.

    ಗರ್ಭಪಾತದ ಸಾಧ್ಯತೆ:
    ಗರ್ಭಾವಸ್ಥೆಯಲ್ಲಿ ಉಂಟಾಗುವ ಒತ್ತಡವು ಗರ್ಭಕೋಶದಲ್ಲಿ ರಾಸಾಯನಿಕ ಹಾನಿಯನ್ನುಂಟುಮಾಡುವುದು ಎಂದು ವೈದ್ಯರು ಹೇಳುತ್ತಾರೆ. ಒತ್ತಡ ಉಂಟಾದಾಗ ಕಾರ್ಟಿಕೋಟ್ರೋಪಿನ್ ಎನ್ನುವ ಹಾರ್ಮೋನ್ ಬಿಡುಗಡೆಯಾಗುವುದು. ಈ ಹಾರ್ಮೋನ್‍ಗಳ ಬದಲಾವಣೆಯಿಂದ ಗರ್ಭಕೋಶದಲ್ಲಿ ಅಧಿಕ ಸಂಕೋಚನವನ್ನು ಉಂಟುಮಾಡುವುದು. ಇದು ಬಹುತೇಕ ಸಂದರ್ಭದಲ್ಲಿ ಗರ್ಭವನ್ನು ಕುಗ್ಗಿಸುವುದು ಅಥವಾ ಗರ್ಭಪಾತಕ್ಕೆ ಕಾರಣವಾಗುವುದು. ಹಾಗಾಗಿ ಬಾಹ್ಯ ಪರಿಸ್ಥಿತಿ ಹೇಗೇ ಇರಲಿ, ನಿಮ್ಮ ಮಗುವಿನ ಬೆಳವಣಿಗೆ ಉತ್ತಮವಾಗಿರಬೇಕು ಎಂದು ನೀವು ಬಯಸುವುದಾದರೆ ಒತ್ತಡದಿಂದ ದೂರ ಇರಲು ಪ್ರಯತ್ನಿಸಿ. ಮಾನಸಿಕ ಹಾಗೂ ದೈಹಿಕವಾಗಿ ಆರೋಗ್ಯ ಉತ್ತಮವಾಗಿರಿಸಿಕೊಳ್ಳಲು ಹೇಗಿರಬೇಕು ಎನ್ನುವುದರ ಕುರಿತು ಚಿಂತಿಸಿ.

    ಭ್ರೂಣದ ಮೆದುಳು ಬೆಳವಣಿಗೆ:
    ತಾಯಿಯಲ್ಲಾಗುವ ಒತ್ತಡವು ಮಗುವಿನ ಮಿದುಳು ಬೆಳವಣಿಗೆಯ ಮೇಲೆ ನೇರವಾದ ಪ್ರಭಾವ ಉಂಟಾಗುವುದು ಎಂದು ವೈದ್ಯರು ಹೇಳುತ್ತಾರೆ. ಇದು ಮಗುವಿನ ಮೇಲೆ ದೀರ್ಘ ಕಾಲದ ಪರಿಣಾಮ ಬೀರುವುದು ಎಂದು ಹೇಳಲಾಗುವುದು. ಮಗುವಿನ ಮೆದುಳಿನ ಮೇಲೆ ಉಂಟಾದ ಪ್ರಭಾವಗಳು ಮಗು ಹುಟ್ಟಿದ ತಕ್ಷಣ ತಿಳಿಯದು. ದಿನಕಳೆದಂತೆ ಮಗುವಿನ ಬೆಳವಣಿಗೆ ನಡೆಯುವುದು. ಆಗ ಸಮಸ್ಯೆಗಳನ್ನು ಗುರುತಿಸಬಹುದು. ಇಂತಹ ಮಕ್ಕಳಲ್ಲಿ ಅಧಿಕ ರಕ್ತದ ಒತ್ತಡದಂತಹ ಅಪಾಯ ಉಂಟಾಗಬಹುದು. ಮಕ್ಕಳಲ್ಲಿ ಮಾನಸಿಕ ಬದಲಾವಣೆಗಳು ಚಿಂತನೀಯ ರೀತಿಯಲ್ಲಿ ಉಂಟಾಗುವುದು. ಅಲ್ಲದೆ ಮಕ್ಕಳು ಬೆಳವಣಿಗೆ ಹೊಂದಿದ ನಂತರ ಜೀವನದಲ್ಲೂ ಬಹುಬೇಗ ಅಧಿಕ ಒತ್ತಡಕ್ಕೆ ಒಳಗಾಗುವ ಮಾನಸಿಕ ಶಕ್ತಿಯನ್ನು ಪಡೆದುಕೊಳ್ಳುವರು.