Tag: Preliminary Investigation

  • 10 ರೂ. ಆಮಿಷವೊಡ್ಡಿ ಅಪ್ರಾಪ್ತೆ ಮೇಲೆ ಅತ್ಯಾಚಾರ – 76ರ ವೃದ್ಧ ಸೇರಿ ಇಬ್ಬರು ಅರೆಸ್ಟ್

    10 ರೂ. ಆಮಿಷವೊಡ್ಡಿ ಅಪ್ರಾಪ್ತೆ ಮೇಲೆ ಅತ್ಯಾಚಾರ – 76ರ ವೃದ್ಧ ಸೇರಿ ಇಬ್ಬರು ಅರೆಸ್ಟ್

    ರಾಯ್‌ಪುರ: 10 ರೂ. ಆಮಿಷವೊಡ್ಡಿ 13 ವರ್ಷದ ಬಾಲಕಿಯ ಮೇಲೆ 76 ವರ್ಷ ವೃದ್ಧ ಮತ್ತು ಇನ್ನೊಬ್ಬ ಸೇರಿ ಅನೇಕ ಬಾರಿ ಅತ್ಯಾಚಾರವೆಸಗಿರುವ ಘಟನೆ ಛತ್ತೀಸ್‍ಗಢದಲ್ಲಿ ನಡೆದಿದೆ.

    ಛತ್ತೀಸ್‍ಗಢದ ಬಲೋದಬಜಾರ್ ಜಿಲ್ಲೆಯಲ್ಲಿ ಈ ಘಟನೆ ಸಂಭವಿಸಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಬಾಲಕಿಯ ಮೇಲೆ ಅತ್ಯಾಚಾರ ಶನಿವಾರ ನಡೆದಿದ್ದು, ನೆರೆ ಮನೆಯ ಮಹಿಳೆ ಈ ಕುರಿತು ಬಾಲಕಿ ಪೋಷಕರನ್ನು ಎಚ್ಚರಿಸಿದ ನಂತರ ಬೆಳಕಿಗೆ ಬಂದಿದೆ. ಪೋಷಕರಿಬ್ಬರು ರ್ಯಾಗ್‍ಪಿಕರ್ಸ್ ಕೆಲಸ ಮಾಡುತ್ತಿರುವುದು ತಿಳಿದುಬಂದಿದೆ. ವಿಷಯ ತಿಳಿದ ನಂತರ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಹಿಜಬ್ ನಿಷೇಧದ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ವಿಳಂಬ: ಸಿಜೆಐ 

    ಬಲೋದಬಜಾರ್ ಕೊತ್ವಾಲಿ ಪೊಲೀಸ್ ಠಾಣಾಧಿಕಾರಿ(ಎಸ್‍ಎಚ್‍ಒ) ಯದುಮಣಿ ಸಿದರ್ ಈ ಕುರಿತು ಮಾಹಿತಿ ನೀಡಿದ್ದು, ಪೋಷಕರು ನೀಡಿದ ದೂರಿನ ಆಧಾರದ ಮೇಲೆ ನಾವು ಆರೋಪಿಗಳಾದ ಕುಂಜ್ರಾಮ್ ವರ್ಮಾ(76) ಮತ್ತು ರಮೇಶ್ ವರ್ಮಾ(47)ನನ್ನು ನಾವು ಬಂಧಿಸಿದ್ದೇವೆ ಎಂದಿದ್ದಾರೆ.

    ದೂರಿನ ಪ್ರಕಾರ, ಬಾಲಕಿ ವಾಸಿಸುವ ಅದೇ ಸ್ಥಳದಲ್ಲಿಯೇ ಕುಂಜ್ರಾಮ್ ಇದ್ದ. ಈ ವೇಳೆ ಬಾಲಕಿಯನ್ನು ನೋಡಿದ ಆತ ಪ್ರತಿ ಬಾರಿ 10 ರೂ. ನೀಡುವುದಾಗಿ ಆಮಿಷವೊಡ್ಡಿ ತನ್ನ ಮನೆಗೆ ಕರೆದು ಅತ್ಯಾಚಾರ ಮಾಡುತ್ತಿದ್ದ. ಕುಂಜ್ರಾಮ್‍ಗೆ ಪರಿಚಿತರಾಗಿರುವ ರಮೇಶ್ ಕೂಡ 10 ರೂ. ಆಮಿಷವೊಡ್ಡಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಪ್ರಾರಂಭಿಸಿದ್ದ ಎಂದು ವಿವರಿಸಿದ್ದಾರೆ. ಇದನ್ನೂ ಓದಿ:  ಸಾವಿನ ದವಡೆಯಿಂದ ಹದ್ದುವನ್ನು ಕಾಪಾಡಿದ ಮೀನುಗಾರ

    ಇಬ್ಬರ ಮನೆಯಿಂದ ಬಾಲಕಿ ಹೊರಗೆ ಬರುತ್ತಿರುವುದನ್ನು ನೆರೆಮನೆಯ ಮಹಿಳೆಯೊಬ್ಬರು ಗಮನಿಸಿದಾಗ, ಆಕೆ ಬಾಲಕಿಯ ತಾಯಿಗೆ ಮಾಹಿತಿ ನೀಡಿದ್ದಾಳೆ. ಬಾಲಕಿ ತನಗಾದ ಕಷ್ಟವನ್ನು ವಿವರಿಸಿದ ನಂತರ, ಆಕೆಯ ಪೋಷಕರು ಪ್ರಕರಣ ದಾಖಲಿಸಿದ್ದಾರೆ. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಆಕೆಯ ಸ್ಥಿತಿ ಸುಧಾರಿದೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರಣಕುಂಡೆಯೆ ಯುವಕನ ಕೊಲೆ ಪ್ರಕರಣ – ನಾಲ್ವರು ಆರೋಪಿಗಳು ಅರೆಸ್ಟ್

    ರಣಕುಂಡೆಯೆ ಯುವಕನ ಕೊಲೆ ಪ್ರಕರಣ – ನಾಲ್ವರು ಆರೋಪಿಗಳು ಅರೆಸ್ಟ್

    ಬೆಳಗಾವಿ: ರಣಕುಂಡೆಯೆ ಗ್ರಾಮದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಹಂತಕರನ್ನು ಪೊಲೀಸರ ಬಂಧಿಸಿದ್ದಾರೆ.

    ಬೆಳಗಾವಿ ತಾಲೂಕಿನ ರಣಕುಂಡೆಯೆ ಗ್ರಾಮದ ನಿವಾಸಿ ನಾಗೇಶ್ ಪಾಟೀಲ್(31)ನನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಪರಿಣಾಮ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ತನಿಖೆ ಪ್ರಾರಂಭಿಸಲಾಗಿತ್ತು. ಈ ಹಿನ್ನೆಲೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಇಬ್ಬರು ಆರೋಪಿಗಳು ತಪ್ಪಿಸಿಕೊಂಡಿದ್ದಾರೆ. ಅವರನ್ನು ಆದಷ್ಟು ಬೇಗ ಬಂಧನ ಮಾಡಲಾಗುತ್ತದೆ ಎಂದು ಕಮಿಷನರ್ ಡಾ.ಬೋರಲಿಂಗಯ್ಯ ಹೇಳಿದ್ದಾರೆ.  ಇದನ್ನೂ ಓದಿ:  ಚಿಕನ್ ಖರೀದಿ ಮಾಡುವಾಗ ಗಲಾಟೆ – ಯುವಕ ಬರ್ಬರ ಹತ್ಯೆ

    ಪ್ರಕರಣ ಹಿನ್ನೆಲೆ: ಬೆಳಗಾವಿ ತಾಲೂಕಿನ ರಣಕುಂಡೆಯೆ ಗ್ರಾಮದ ನಿವಾಸಿ ನಾಗೇಶ್ ಪಾಟೀಲ್ ಮನೆಯಲ್ಲಿಯೇ ಮಲಗಿಕೊಂಡಿದ್ದ. ಆದರೆ ಆತನನ್ನು ಬಲವಂತವಾಗಿ ಹೊರಗಡೆ ಕರೆದುಕೊಂಡು ಹೋಗಿ ಭೀಕರವಾಗಿ ಹಲ್ಲೆಮಾಡಿ ಮನೆಯ ಮುಂದೆ ಬಿಸಾಡಿ ಹೋಗಿದ್ರು. ಇದಲ್ಲದೇ ನಾಗೇಶ್ ರಕ್ಷಣೆಗೆ ಮುಂದಾದ ಆತನ ಸಹೋದರ ಮನೋಜ್ ಪಾಟೀಲ್ ಮೇಲೂ ಆರೋಪಿಗಳು ಹಲ್ಲೆ ಮಾಡಿದ್ದಾರೆ.

    ಮಾರಣಾಂತಿಕ ಹಲ್ಲೆಯಿಂದ ನಾಗೇಶ್ ಪಾಟೀಲ್ ಸಾವನ್ನಪ್ಪಿದ್ದನು. ಇತ್ತ ಗಂಭೀರ ಗಾಯಗೊಂಡ ಮನೋಜ್ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

    ಪೆÇಲೀಸರ ಪ್ರಾಥಮಿಕ ತನಿಖೆಯಲ್ಲಿ, ಕೊಲೆಯಾದ ನಾಗೇಶ್ ತಂದೆ ಆರೋಪಿ ಪ್ರಮೋದ್ ಪಾಟೀಲ್ ಕುಟುಂಬಕ್ಕೆ 20 ಸಾವಿರ ರೂ. ಸಾಲ ನೀಡಿದ್ದರು. ತಂದೆ ಕೊಟ್ಟ ಹಣವನ್ನು ವಾಪಸ್ ಕೇಳೋದಕ್ಕೆ ನಾಗೇಶ್ ಪದೇ-ಪದೇ ಅವರ ಮನೆಗೆ ಹೋಗುತ್ತಿದೆ. ಈ ಹಿನ್ನೆಲೆ ಎರಡು ಕುಟುಂಬಗಳ ಮಧ್ಯೆ ಹಣಕಾಸಿನ ವಿಚಾರದಲ್ಲಿ ಗಲಾಟೆ ಆಗುತ್ತಿತ್ತು. ಇದರಿಂದ ವೈಯಕ್ತಿಕ ವೈಷಮ್ಯ ಬೆಳೆದು ಗಲಾಟೆಯಾಗಿ ಕೊಲೆಯಲ್ಲಿ ಅಂತ್ಯವಾಗಿದೆ. ಇದನ್ನೂ ಓದಿ: ನಾವು ಎಷ್ಟೇ ದೊಡ್ಡವರಾದರೂ ಶಾಲೆ, ಗುರುಗಳು ಅಂದಾಗ ಗೌರವದ ಭಾವ ಮೂಡುತ್ತೆ: ಆರ್.ಅಶೋಕ್ 

    ಬೆಳಗಾವಿ ತಾಲೂಕಿನ ರಣಕುಂಡೆ ಗ್ರಾಮದ ಪ್ರಮೋದ್ ಪಾಟೀಲ್(31), ಶ್ರೀಧರ್ ಪಾಟೀಲ್(28), ಮಹೇಂದ್ರ ಕಂಗ್ರಾಳಕರ(21), ಬೂಮನಿ ಡೋಕ್ರೆ(33) ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಳಗಾವಿ ಗ್ರಾಮೀಣ ಠಾಣೆಯಲ್ಲಿ ದಾಖಲಾಗಿದೆ. ತನಿಖೆ ಮುಂದುವರೆದಿದೆ.