Tag: Prema

  • ಮುರುಗ ಸನ್ ಆಫ್ ಕಾನೂನು:  ಟ್ರೈಲರ್ ರಿಲೀಸ್ ಮಾಡಿದ ಪ್ರೇಮಾ

    ಮುರುಗ ಸನ್ ಆಫ್ ಕಾನೂನು: ಟ್ರೈಲರ್ ರಿಲೀಸ್ ಮಾಡಿದ ಪ್ರೇಮಾ

    ಕಿರುತೆರೆಯ ಮುರುಗ ಖ್ಯಾತಿಯ ನಟ ಮುನಿಕೃಷ್ಣ ನಾಯಕನಾಗಿ ನಟಿಸಿದ್ದ ಕೊಡೆಮುರುಗ ಚಿತ್ರ ಅದ್ಭುತ  ಯಶಸ್ಸು ಕಂಡಿತ್ತು. ಆ ಚಿತ್ರದ  ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ  ಮುನಿಕೃಷ್ಣ ಅವರೀಗ ತಮ್ಮ ಎರಡನೇ ಚಿತ್ರವನ್ನು ತೆರೆಗೆ ತರಲು ಹೊರಟಿದ್ದಾರೆ. ಆ ಚಿತ್ರದ ಹೆಸರು  ‘ಮುರುಗ ಸನ್ ಆಫ್ ಕಾನೂನು’. (Murugan Son of Law)   ಚಿತ್ರದಲ್ಲಿ ಮುನಿಕೃಷ್ಣ ಅವರು ನಾಯಕನಾಗಿ ನಟಿಸುವ ಜೊತೆಗೆ ತಮ್ಮ ಎ.ಎಸ್.ಎ. ಪ್ರೊಡಕ್ಷನ್ ಬ್ಯಾನರ್‌ನಲ್ಲಿ ನಿರ್ಮಾಣ ಕೂಡ ಮಾಡಿದ್ದಾರೆ. ಇತ್ತೀಚೆಗಷ್ಟೇ ಈ ಚಿತ್ರದ ಟ್ರೈಲರ್‌ನ್ನು (Trailer) ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಎಸ್.ಎ. ಚಿನ್ನೆಗೌಡರು ಬಿಡುಗಡೆ ಮಾಡಿದರು. ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ಹೂವಿನ ಹಡಗಲಿ ಶಾಸಕ ಕೃಷ್ಣನಾಯಕ್, ಹಿರಿಯ ನಟಿ ಪ್ರೇಮಾ ಹಾಗೂ ಟಾಲಿವುಡ್ ನಟಿ ಮಿಸ್ ಎಡಿನ್ ರೋಸ್ ಮುಖ್ಯ ಅತಿಥಿಗಳಾಗಿ  ಭಾಗವಹಿಸಿದ್ದರು.  ಈ ಚಿತ್ರವನ್ನು ವಿಜಯ್ ಪ್ರವೀಣ್   ನಿರ್ದೇಶನ ಮಾಡಿದ್ದಾರೆ.

    ಜಾಗ ಕೇಳಿಕೊಂಡು ಊರಿಗೆ ಬರುವ ಖಳನಾಯಕ ನಂತರ ಇಡೀ ಊರನ್ನೇ ತನ್ನ ಕಬ್ಜ ಮಾಡಿಕೊಳ್ಳುತ್ತಾನೆ. ಮುರುಗನ ತಂದೆಯನ್ನೂ ಕೊಲೆ ಮಾಡಿಸುತ್ತಾನೆ. ನಂತರ ಎಲ್.ಎಲ್.ಬಿ.ಓದಿಕೊಂಡಿದ್ದ ಮುರುಗ ಹೇಗೆ ಕಾನೂನಾತ್ಮಕವಾಗಿ ತನ್ನ ಜಾಗದ ಜೊತೆಗೆ ಊರನ್ನೂ ಉಳಿಸಿಕೊಳ್ಳುತ್ತಾನೆ ಎಂಬುದೇ ಮುರುಗ ಸನ್ ಆಫ್ ಕಾನೂನು ಚಿತ್ರದ ಕಥಾಹಂದರ. ಆನೇಕಲ್, ಮಲ್ಪೆ, ಬೆಂಗಳೂರು ಸುತ್ತಮುತ್ತ 62 ದಿನಗಳ ಕಾಲ ಈ ಚಿತ್ರದ ಚಿತ್ರೀಕರಣ ನಡೆಸಲಾಗಿದೆ.

    ವೇದಿಕೆಯಲ್ಲಿ ನಿರ್ದೇಶಕ‌ ವಿಜಯ್ ಮಾತನಾಡಿ ನನ್ನ ನಿರ್ದೇಶನದ 5ನೇ ಚಿತ್ರವಿದು.  ಪುನೀತ್ ರಾಜಕುಮಾರ ಅವರು ನಮ್ಮ ಚಿತ್ರದ ಟೈಟಲ್ ಲಾಂಚ್ ಮಾಡಿಕೊಟ್ಟಿದ್ದರು. ಇದೊಂದು ಔಟ್ ಆಂಡ್ ಔಟ್ ಕಾಮಿಡಿ ಸಿನಿಮಾ’ ಎಂದು  ಹೇಳಿದರು. ನಂತರ ಮಾತನಾಡಿದ ಮುನಿಕೃಷ್ಣ ‘ ಶೀರ್ಷಿಕೆ ಗೀತೆಯನ್ನು ಅಪ್ಪು ಸರ್ ಹಾಡಬೇಕಿತ್ತು. 10  ದಿನ ಶೂಟ್ ಆದಮೇಲೆ ಸಿನಿಮಾ ನಿಂತುಹೋಗಿತ್ತು. ಪುನೀತ್  ಅವರು ಹರಸಿದ ಸಿನಿಮಾ ನಿಲ್ಲಬಾರದೆಂದು ಸ್ವಂತ ಮನೆ ಮಾರಿ ಕಷ್ಟಪಟ್ಟು ಸಿನಿಮಾ ಮುಗಿಸಿದ್ದೇನೆ.  ಮುಂದಿನ ತಿಂಗಳು ರಿಲೀಸ್ ಮಾಡುವ ಪ್ಲ್ಯಾನ್ ಇದೆ. ಚಿತ್ರದಲ್ಲಿ  ಮೂವರು  ನಾಯಕಿಯರಿದ್ದಾರೆ ಎಂದರು.

     

    ನಟಿ ಪ್ರೇಮಾ ಮಾತನಾಡಿ ಟ್ರೇಲರ್ ನೋಡಿ ತುಂಬಾ ಖುಷಿ ಆಯ್ತು. ಈ ಚಿತ್ರದಿಂದ ನಿರ್ಮಾಪಕರಿಗೆ 10 ಮನೆ ಕೊಳ್ಳುವ ಶಕ್ತಿ ಬರಲಿ’ ಎಂದು ಶುಭ ಹಾರೈಸಿದರು. ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಚಿನ್ನೆಗೌಡ ಮಾತನಾಡಿ, ‘ಅಪ್ಪು ಹಾರೈಸಿದ ಸಿನಿಮಾ ಆಗಿದ್ದರಿಂದ ನಿರ್ಮಾಪಕರು ಹಟದಿಂದ ಸಿನಿಮಾ ಮಾಡಿದ್ದಾರೆ. ಟ್ರೇಲರ್ ಚನ್ನಾಗಿದೆ. ತಂಡಕ್ಕೆ ಒಳ್ಳೆಯದಾಗಲಿ’ ಎಂದರು.

     

    ನಾಯಕಿ ಮಮತಾ ರಾವುತ್ ಮಾತನಾಡಿ ‘ನಾನು ಮದುವೆಯಾದ 15 ದಿನಗಳಲ್ಲಿ ಈ ಚಿತ್ರದ ಆಫರ್ ಬಂತು. ತುಂಬಾ ವರ್ಷಗಳಿಂದ ಹಳ್ಳಿ ಹುಡುಗಿಯ ಪಾತ್ರ ಮಾಡುವ ಆಸೆ ಇತ್ತು. ಅದು ಈ ಚಿತ್ರದಿಂದ ಈಡೇರಿದೆ’ ಎಂದರು. ಮತ್ತೋರ್ವ ನಾಯಕಿ ಕಿರಣ್ ಯೋಗೇಶ್ವರ ಸಹ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು.  ಈ ಹಿಂದೆ ನಾಯಕನಾಗಿ ನಟಿಸಿದ್ದ ಧನ್‌ವೀರ್ ಈ  ಚಿತ್ರದಲ್ಲಿ  ಖಳನಟನಾಗಿ ಕಾಣಿಸಿಕೊಂಡಿದ್ದು  ತನ್ನ ಪಾತ್ರದ ಕುರಿತಂತೆ  ಹೇಳಿದರು. ಉಳಿದಂತೆ ಹಿರಿಯ ಕಲಾವಿದ ಎಂ.ಎಸ್. ಉಮೇಶ್, ಸಾಹಸ ನಿರ್ದೇಶಕ ಕೌರವ್ ವೆಂಕಟೇಶ್ ಮಾತನಾಡಿದರು.  ಶೋಭ ರಾಜ್, ಥ್ರಿಲ್ಲರ್ ಮಂಜು, ರಮೇಶ್ ಭಟ್ ಉಳಿದ ತಾರಾಗಣದಲ್ಲಿದ್ದಾರೆ.

  • ‘ಮಹಾನಟಿ’ ಶೋಗೆ ಇವರೇ ನೋಡಿ ಜಡ್ಜಸ್

    ‘ಮಹಾನಟಿ’ ಶೋಗೆ ಇವರೇ ನೋಡಿ ಜಡ್ಜಸ್

    ನ್ನ ವಿಭಿನ್ನ ರಿಯಾಲಿಟಿ ಶೋಗಳ (Reality show) ಮೂಲಕ  ಸಾಕಷ್ಟು ಯುವ ಪ್ರತಿಭೆಗಳನ್ನ ಕರುನಾಡಿಗೆ ಪರಿಚಯಿಸಿರುವ ಜೀ಼ ಕನ್ನಡ ವಾಹಿನಿ, ಈ ಬಾರಿ ಮತ್ತೊಂದು ಹೊಸ ರಿಯಾಲಿಟಿ ಶೋ ಮೂಲಕ ಕರುನಾಡಿನ ಯುವ ನಟಿಯರನ್ನ ಹುಡುಕುವ ಕೆಲಸ ಶುರುಮಾಡಿದೆ.

    ಜೀ಼ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋಗಳಾದ ಡ್ರಾಮಾ ಜೂನಿಯರ್ಸ್‌,ಕಾಮಿಡಿ ಕಿಲಾಡಿಗಳು, ಡಿಕೆಡಿ, ಭರ್ಜರಿ ಬ್ಯಾಚುಲರ್ಸ್‌ ಮತ್ತು ಸರಿಗಮಪ ಮೂಲಕ ಈಗಾಗಲೆ ಸಾಕಷ್ಟು ನಟನಟಿಯರು, ಗಾಯಕ ಗಾಯಕಿಯರು ಹಾಗು ಕೊರಿಯೋಗ್ರಾಫರ್‌ಗಳನ್ನ ಕರುನಾಡಿಗೆ ಕೊಟ್ಟಿರುವ ಜೀ಼ ಕನ್ನಡ ವಾಹಿನಿ, ಇದೀಗ ಮಹಾನಟಿ ಎಂಬ ಹೊಚ್ಚ ಹೊಸ ರಿಯಾಲಿಟಿ ಶೋ ಮೂಲಕ ನಿಮ್ಮೂರಿನಲ್ಲಿರುವ ನಟಿಯಾಗುವ ಕನಸು ಹೊತ್ತಿರುವ, ಅವಕಾಶ ವಂಚಿತ ಪ್ರತಿಭೆಗಳಿಗೆ ವೇದಿಕೆ ಒದಗಿಸಲು ಈ ಕಾರ್ಯಕ್ರಮವನ್ನ ಹೆಣೆದ್ದಿದ್ದು,ಕನ್ನಡ ಚಿತ್ರರಂಗಕ್ಕೆ ಯುವ ನಾಯಕ ನಟಿಯರನ್ನ ನೀಡುವ ಕೆಲಸವನ್ನ ಈ ರಿಯಾಲಿಟಿ ಶೋ ಮಾಡಲಿದೆ. ಕರುನಾಡಿನ ಧೀಮಂತ ನಟಿಯರ  ಸಾಲಿಗೆ ಸೇರಲು ಬಯಸುವ ಎಲ್ಲಾ ಯುವ ನಟಿಯರಿಗೆ ವೇದಿಕೆ ಕಲ್ಪಿಸಿಕೊಡುವ ಈ ಮಹಾನಟಿ ಕಾರ್ಯಕ್ರಮವು ,ನಿಮ್ಮ ಕನಸನ್ನ ನನಸು ಮಾಡುವ  ನಾಡಿನ 31 ಜಿಲ್ಲೆಗಳನ್ನ ಸಂಚರಿಸಿ, ಪ್ರತಿಭೆಗಳನ್ನ ಅಳೆದು ತೂಗಿ,ವೇದಿಕೆ ಕಲ್ಪಿಸಿ ಕೊಡಲು ಹೊರಟಿರುವ ಈ ಹೊಸ ರಿಯಾಲಿಟಿ ಶೋನ ಆಡಿಷನ್‌ ಕೊನೆಯ ಹಂತ ತಲುಪಿದೆ.

    ನಟಿಯಾಗುವ ಕನಸು ಹೊತ್ತ ಅದೆಷ್ಟೋ ಯುವ ನಟಿಯರಿಗೆ, ಸರಿಯಾದ ವೇದಿಕೆ ಸಿಗದೆ ಅವರ ಕನಸುಗಳು ಕರುಗುವ ಹೊತ್ತಿನಲ್ಲಿ, ಅದನ್ನ ಪೋಷಿಸಿ ಬೆಳೆಸಲು ಮಾಡುತ್ತಿರುವ ಈ ಹೊಸ ಪ್ರಯತ್ನವೇ ಮಹಾನಟಿ.ಇಂತಹ ಹೊಸ ಪ್ರಯೋಗದ ಈ ಮಹಾನಟಿ (Mahanati) ರಿಯಾಲಿಟಿ ಶೋನಲ್ಲಿ ಜಡ್ಜಸ್ಗಳು ಯಾರು ಎಂಬ ಕುತೂಹಲ ಎಲ್ಲರಲ್ಲು ಈಗ ಮನೆಮಾಡಿದ್ದು, ಈ ಬಾರಿ ಮೂರು ಹೊಸ ಜಡ್ಜಸ್ಗಳು ವೇದಿಕೆಯನ್ನ ಅಲಂಕರಿಸಲ್ಲಿದ್ದು, ಅವರಲ್ಲಿ ಸ್ಯಾಂಡಲ್‌ ವುಡ್ಡಿನ ಖ್ಯಾತ ನಿರ್ದೇಶಕ,ನಟ ರಮೇಶ್‌ ಅರವಿಂದ್‌ (Ramesh Aravind), ಖ್ಯಾತ ನಾಯಕ ನಟಿ ಪ್ರೇಮ (Prema), ಕಾಟೇರದಂತಹ ಯಶಸ್ವಿ ಚಿತ್ರಕೊಟ್ಟ ನಿರ್ದೇಶಕ ತರುಣ್‌ ಸುಧೀರ್‌ ಮತ್ತು ಯುವ ನಾಯಕ ನಟಿ ನಿಶ್ವಿಕಾ ನಾಯ್ಡು ಈ ರಿಯಾಲಟಿ ಶೋನ ಜಡ್ಜಸ್ಗಳಾಗಿ ಕಾರ್ಯನಿರ್ವಹಿಸಲ್ಲಿದ್ದಾರೆ.

     

    ಆದರೇ ಆ ನಾಲ್ಕು ಜನಗಳಲ್ಲಿ ಒಬ್ಬರು ಹೊಸದಾಗಿ ಬರುವ ನಟಿಯರಿಗೆ ಅಭಿನಯದ ಮಜಲುಗಳನ್ನ ಕಲಿಸುವ ಮೆಂಟರ್‌ ಆಗಿ ಕಾರ್ಯನಿರ್ವಹಿಸಲ್ಲಿದ್ದಾರೆ ಎಂದು ವಾಹಿನಿ ತಿಳಿಸಿದೆ. ಪ್ರತಿ ಬಾರಿ ತನ್ನ ಕಾರ್ಯಕ್ರಮದಲ್ಲಿ ವಿಭಿನ್ನ ಪ್ರಯೋಗಗಳನ್ನ ಮಾಡುವ ಜೀ಼ ಕನ್ನಡ ವಾಹಿನಿ ಈ ಬಾರಿ  ಮಹಾನಟಿಯ ರಿಯಾಲಿಟಿ ಶೋ ಮೂಲಕ ಮನೋರಂಜನೆಯಲ್ಲಿ ಹೊಸತನವನ್ನ ತರಲು ತಯಾರಿ ಮಾಡಿಕೊಂಡಿದ್ದು, ಇದೇ ಮಾರ್ಚ್‌ 3೦ನೇ ತಾರೀಖು ಶನಿವಾರ ತನ್ನ ಮೊದಲ ಸಂಚಿಕೆ ಪ್ರಸಾರ ಮಾಡಲ್ಲಿದ್ದು,ಇನ್ನು ಮುಂದೆ ಈ ಕಾರ್ಯಕ್ರಮವು ಪ್ರತಿ ಶನಿವಾರ ಮತ್ತು ಭಾನುವಾರ ಸಂಜೆ 7.30ಕ್ಕೆ  ಪ್ರಸಾರವಾಗಲಿದೆ.

  • ‘ವರಾಹ ಚಕ್ರಂ’ ಚಿತ್ರಕ್ಕಾಗಿ ನಟಿ ಪ್ರೇಮಾ ಹಾಡಿದ ದೇಶಭಕ್ತಿ ಗೀತೆ ರಿಲೀಸ್

    ‘ವರಾಹ ಚಕ್ರಂ’ ಚಿತ್ರಕ್ಕಾಗಿ ನಟಿ ಪ್ರೇಮಾ ಹಾಡಿದ ದೇಶಭಕ್ತಿ ಗೀತೆ ರಿಲೀಸ್

    ಹಿರಿಯನಟಿ ಪ್ರೇಮಾ (Prema)  ಅವರು  ಅದ್ಭುತ ಕಲಾವಿದೆ ಎನ್ನುವುದು ಎಲ್ಲರಿಗೂ ಗೊತ್ತು. ಆದರೆ ಅವರಲ್ಲೊಬ್ಬ ಗಾಯಕಿಯೂ ಇರುವುದು ಯಾರಿಗೂ ಗೊತ್ತಿರಲಿಲ್ಲ. ಅದನ್ನು ನಿರ್ದೇಶಕ‌ ಮಂಜು ಮಸ್ಕಲ್ ಮಟ್ಟಿ ಪತ್ತೆಹಚ್ಚಿ, ಅವರ ಕೈಲಿ ದೇಶಭಕ್ತಿಗೀತೆಯೊಂದನ್ನು ಹಾಡಿಸಿದ್ದಾರೆ. ‘ವರಾಹ ಚಕ್ರಂ’ (Varaha Chakram) ಸಿನಿಮಾದಲ್ಲಿ ಪ್ರೇಮಾ ಅವರು ಹಾಡಿರುವ ‘ಕಂದಾ ನಿಂದೇ ಹಿಂದೂಸ್ತಾನಾ’ ಎಂಬ ದೇಶ ಭಕ್ತಿಗೀತೆಯ ಬಿಡುಗಡೆ ಧಾರವಾಡ ಹಬ್ಬ ಕಾರ್ಯಕ್ರಮದಲ್ಲಿ ನೆರವೇರಿತು. ವೇದಿಕೆಯಲ್ಲಿ  ಬಸವ ಸಮರ್ಥ ಸಿದ್ದೇಶ್ವರ ಮಹಾಸ್ವಾಮಿಗಳು, ಜ್ಞಾನಯೋಗಾಶ್ರಮ ಶಿರುಂಜೆ  ಅವರು ಈ ಹಾಡನ್ನು ಬಿಡುಗಡೆ ಮಾಡಿದರು.

    ಮಂಜು ಮಸ್ಕಲ್ ಮಟ್ಟಿ (Manju Maskal Matti)  ನಿರ್ದೇಶನ‌ದ ವರಾಹಚಕ್ರಂ ಚಿತ್ರದ ಪ್ರಮುಖ ಪಾತ್ರದಲ್ಲಿ ಪ್ರೇಮ ಅವರು ಕಾಣಿಸಿಕೊಂಡಿದ್ದಾರೆ. ವಾರಣಾಸಿಯಲ್ಲಿ  ಚಿತ್ರೀಕರಿಸಲಾಗಿರುವ ಈ ಹಾಡು ಇಡೀ ಚಿತ್ರದ ಹೈಲೈಟ್ ಆಗಿದೆ. ವರಾಹಚಕ್ರಂ ಚಿತ್ರದಲ್ಲಿ ಸಾಯಿಕುಮಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.  ಯುವನಟ ಅರ್ಜುನ್ ದೇವ ಚಿತ್ರದ ನಾಯಕನಾಗಿ ನಟಿಸಿದ್ದು, ರಾಣಾ, ಇಮ್ರಾನ್ ಷರೀಫ್, ಆರ್ಯನ್, ಪ್ರತೀಕ್ ಗೌಡ ಉಳಿದ ಪಾತ್ರಗಳಲ್ಲಿ  ಕಾಣಿಸಿಕೊಂಡಿದ್ದಾರೆ.

    ಮನ್ವಂತರಿ ಮೂವಿ ಮೇಕರ್ಸ್ ಅಡಿಯಲ್ಲಿ ಸ್ನೇಹಿತರೆಲ್ಲ ಸೇರಿ  ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಲಾವಣ್ಯ ಗ್ರೂಪ್, ನಾಗಭೂಷಣ್ ಎಂ.ರಾವ್, ಮಂಜುನಾಥ್ ಸಿ.ಗೌಡ್ರು, ಕೆ.ಎಸ್.ಜೈ ಸುರೇಶ್ ನಿರ್ಮಾಣದಲ್ಲಿ ಕೈಜೋಡಿಸಿದ್ದಾರೆ. ಮಂಜುನಾಥ್ ಮಸ್ಕಲ್ ಮಟ್ಟಿ ಅವರೇ  ಚಿತ್ರದ ಕಥೆ, ಚಿತ್ರಕಥೆ  ಬರೆದು ನಿರ್ದೇಶನ‌ ಮಾಡಿದ್ದಾರೆ.  ವಿ. ನಾಗೇಂದ್ರಪ್ರಸಾದ್ ಅವರು  ಸಾಹಿತ್ಯ ರಚಿಸಿ, ಸಂಗೀತ ಸಂಯೋಜನೆಯ ಜೊತೆ ಪ್ರಮುಖ ಪಾತ್ರವನ್ನೂ ಸಹ ಮಾಡುತ್ತಿದ್ದಾರೆ.

     

    ಚಿತ್ರಕ್ಕೆ ಶರತ್‌ಕುಮಾರ್ ಜಿ. ಅವರ ಛಾಯಾಗ್ರಹಣ, ಭಾರ್ಗವ ಅವರ ಸಂಕಲನವಿದ್ದು, ಬೆಂಗಳೂರು, ನೆಲ್ಲೂರು, ಪೊಲ್ಲಾಚ್ಚಿ, ಭಟ್ಕಳ, ಹಿರಿಯೂರು ಸೇರಿ ಹಲವಾರು ಲೊಕೇಶನ್ ಗಳಲ್ಲಿ ವರಾಹಚಕ್ರಂ ಚಿತ್ರೀಕರಣ ನಡೆದಿದೆ.

  • ಗಾಯಕಿಯಾದ ನಟಿ ಪ್ರೇಮಾ: ‘ವರಾಹಚಕ್ರಂ’ ಚಿತ್ರಕ್ಕೆ ನಟಿ ಗಾಯನ

    ಗಾಯಕಿಯಾದ ನಟಿ ಪ್ರೇಮಾ: ‘ವರಾಹಚಕ್ರಂ’ ಚಿತ್ರಕ್ಕೆ ನಟಿ ಗಾಯನ

    ಗೌರಿಪುತ್ರ ಖ್ಯಾತಿಯ ಮಂಜು ಮಸ್ಕಲ್ ಮಟ್ಟಿ  ಅವರ ನಿರ್ದೇಶನ‌ದ ಚಿತ್ರ ವರಾಹಚಕ್ರಂ. ಬೆಂಗಳೂರಿನಲ್ಲಿ ನಡೆಯುತ್ತಿರುವ ಅವ್ಯವಸ್ಥಿತ ಪದ್ದತಿಗಳು, ಸಂಸ್ಕ್ರತಿಯ ಕಗ್ಗೊಲೆ, ದೌರ್ಜನ್ಯಗಳ ಬಗ್ಗೆ  ಜಾಗೃತಿ ಮೂಡಿಸುವ ಕಥಾಹಂದರ ಒಳಗೊಂಡ  ವರಾಹಚಕ್ರಂ ಚಿತ್ರದಲ್ಲಿ ಹಿರಿಯನಟಿ ಪ್ರೇಮಾ (Prema), ಸಾಯಿಕುಮಾರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಮನ್ವಂತರಿ ಮೂವಿ ಮೇಕರ್ಸ್ ಅಡಿಯಲ್ಲಿ ಸ್ನೇಹಿತರೆಲ್ಲ ಸೇರಿ  ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

    ಲಾವಣ್ಯ ಗ್ರೂಪ್, ನಾಗಭೂಷಣ್ ಎಂ.ರಾವ್, ಮಂಜುನಾಥ್ ಸಿ.ಗೌಡ್ರು, ಕೆ.ಎಸ್.ಜೈ ಸುರೇಶ್ ನಿರ್ಮಾಣದಲ್ಲಿ ಕೈಜೋಡಿಸಿದ್ದಾರೆ. ವಿಶೇಷವಾಗಿ ನಾಯಕಿ ಪ್ರೇಮಾ ಅವರು ಇದೇ ಮೊದಲ ಬಾರಿಗೆ ಈ ಚಿತ್ರದಲ್ಲಿ ದೇಶಭಕ್ತಿ ಗೀತೆಯೊಂದನ್ನು ಹಾಡಿದ್ದಾರೆ. ವಾರಣಾಸಿಯಲ್ಲಿ  ಚಿತ್ರೀಕರಿಸಲಾಗಿರುವ ಈ ಹಾಡಿನ ಬಿಡುಗಡೆ ಕಾರ್ಯಕ್ರಮ ಜನವರಿ 26ರ  ಗಣರಾಜ್ಯೋತ್ಸವದಂದು ನಡೆಯಲಿದೆ.

    ಶೂಟಿಂಗ್  ಟೈಮ್ ನಲ್ಲಿ ಸೆಟ್ ನಲ್ಲಿ ಪ್ರೇಮ ಅವರು  ಹಾಡುತ್ತಿರುವಾಗ  ಅದನ್ನು ಕೇಳಿದ ನಿರ್ದೇಶಕರು ಈ ಹಾಡನ್ನು ನೀವೆ ಹಾಡಿ ಎಂದು ಕೇಳಿದಾಗ ಅವರೂ ಒಪ್ಪಿ ಪ್ರೀತಿಯಿಂದ ಹಾಡಿಗೆ ದನಿಯಾಗಿದ್ದಾರೆ.  ನಾಯಕಿ ಪಾತ್ರವನ್ನು ಲೀಲಾಜಾಲವಾಗಿ ನಿರ್ವಹಿಸಿರುವ ಪ್ರೇಮ ಅವರು ತುಂಬಾ ಅನುಭವಿ ಗಾಯಕಿಯ ಹಾಗೆ  ಹಾಡಿದ್ದು ವಿಷೇಶವಾಗಿತ್ತು.  ಅರ್ಜುನ್ ದೇವ  ಚಿತ್ರದ ನಾಯಕನಾಗಿ ನಟಿಸಿದ್ದು, ರಾಣಾ, ಇಮ್ರಾನ್ ಷರೀಫ್, ಆರ್ಯನ್, ಪ್ರತೀಕ್ ಗೌಡ ಉಳಿದ ಪಾತ್ರಗಳಲ್ಲಿ  ಕಾಣಿಸಿಕೊಂಡಿದ್ದಾರೆ.


    ಮಂಜುನಾಥ್ ಮಸ್ಕಲ್ ಮಟ್ಟಿ ಅವರೇ  ಚಿತ್ರದ ಕಥೆ, ಚಿತ್ರಕಥೆ  ಬರೆದು ನಿರ್ದೇಶನ‌ ಮಾಡಿದ್ದಾರೆ. ಡಾ.ವಿ. ನಾಗೇಂದ್ರಪ್ರಸಾದ್ ಅವರು  ಸಾಹಿತ್ಯ ರಚಿಸಿ, ಸಂಗೀತ ಸಂಯೋಜನೆಯ ಜೊತೆ ಪ್ರಮುಖ ಪಾತ್ರವನ್ನೂ ಸಹ ಮಾಡುತ್ತಿದ್ದಾರೆ. ಚಿತ್ರಕ್ಕೆ ಶರತ್‌ಕುಮಾರ್ ಜಿ. ಅವರ ಛಾಯಾಗ್ರಹಣ, ಭಾರ್ಗವ ಅವರ ಸಂಕಲನವಿದ್ದು, ಬೆಂಗಳೂರು, ನೆಲ್ಲೂರು, ಪೊಲ್ಲಾಚ್ಚಿ, ಭಟ್ಕಳ, ಹಿರಿಯೂರು ಸೇರಿ ಹಲವಾರು ಲೊಕೇಶನ್ ಗಳಲ್ಲಿ ವರಾಹಚಕ್ರಂ ಚಿತ್ರೀಕರಣ ನಡೆದಿದೆ.

  • ನಾಗಭೂಷಣ್ ಕಾರು ಅಪಘಾತ: ಕುಡಿದಿರಲಿಲ್ಲ, ಸ್ಟೇಶನ್ ಬೇಲ್ ನೀಡಲಾಗಿದೆ- ಡಿಸಿಪಿ ಪ್ರತಿಕ್ರಿಯೆ

    ನಾಗಭೂಷಣ್ ಕಾರು ಅಪಘಾತ: ಕುಡಿದಿರಲಿಲ್ಲ, ಸ್ಟೇಶನ್ ಬೇಲ್ ನೀಡಲಾಗಿದೆ- ಡಿಸಿಪಿ ಪ್ರತಿಕ್ರಿಯೆ

    ನಿನ್ನೆ ರಾತ್ರಿ ನಟ ನಾಗಭೂಷಣ್ (Nagabhushan) ಕಾರು ಅಪಘಾತದಲ್ಲಿ (Accident) ಮಹಿಳೆಯೋರ್ವರು ಸಾವಿಗೀಡಾಗಿದ್ದು ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ನಂತರ ನಟ ನಾಗಭೂಷಣ್ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಎಲ್ಲ ಬೆಳವಣಿಗೆ ಕುರಿತಂತೆ ಸಂಚಾರ ದಕ್ಷಿಣ ಡಿಸಿಪಿ ಶಿವಪ್ರಕಾಶ್ ದೇವರಾಜ್ (Shivaprakash Devaraj) ಪ್ರತಿಕ್ರಿಯೆ ನೀಡಿದ್ದಾರೆ.

    ಶನಿವಾರ ರಾತ್ರಿ 9-30 ಕ್ಕೆ ಅಪಘಾತವಾಗಿದೆ. ಉತ್ತರಹಳ್ಳಿಯ ವಸಂತಪುರ ಮುಖ್ಯರಸ್ತೆಯಲ್ಲಿ ನಡೆದ ಈ ಘಟನೆಯಲ್ಲಿ ಪಾದಾಚಾರಿಗಳಾದ ಕೃಷ್ಣ ಮತ್ತು ಪ್ರೇಮಾ (Prema) ಎಂಬುವರಿಗೆ ಅಪಘಾತವಾಗಿತ್ತು. ಅತಿವೇಗ ಮತ್ತು ನಿರ್ಲಕ್ಷ್ಯತೆಯಿಂದ ಕಾರು ಚಾಲಕ ವಾಹನ ಓಡಿಸಿದ್ದೇ ಅಪಘಾತಕ್ಕೆ ಕಾರಣವಾಗಿದೆ. ಆಕ್ಸಿಡೆಂಟ್ ನಂತರ ಸ್ಪಾಟ್ ನಲ್ಲೇ ಪ್ರೇಮಾ ಮೃತಪಟ್ಟಿದ್ದಾರೆ. ಕೃಷ್ಣ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರು ಚಾಲಕ ನಟನಾಗಿದ್ದು ಅರೆಸ್ಟ್ ಮಾಡಲಾಗಿದೆ. ಮುಂದಿನ ಪ್ರೊಸೀಜರ್ ನಡೆಸಲಾಗ್ತಿದೆ. ಇದನ್ನೂ ಓದಿ:ಹುಟ್ಟುಹಬ್ಬಕ್ಕೆ ಬ್ರೇಕ್‌ ಹಾಕಿದ ರಚಿತಾ- ಸೋಶಿಯಲ್‌ ಮೀಡಿಯಾದಲ್ಲಿ ನಟಿ ಮನವಿ

    ನಾಗಭೂಷಣ್ ಅವರನ್ನು ಈಗ ಸ್ಟೇಷನ್ ಬೇಲ್ ನೀಡಿ ಕಳಿಸಲಾಗಿದ್ದು, ಮುಂದಿನ ವಿಚಾರಣೆಗೆ ಮತ್ತೆ ಕರೆಯಲಾಗುತ್ತದೆ. ಪ್ರಾಥಮಿಕ ತನಿಖೆಯಲ್ಲಿ ಅತಿ ವೇಗ ಅಪಘಾತಕ್ಕೆ ಕಾರಣವಾಗಿದೆ ಎಂದು ಗೊತ್ತಾಗಿದ್ದು, ಆತ ಚಾಲನೆ ಮಾಡುವಾಗ ಕುಡಿದಿಲ್ಲ ಎಂದು ಗೊತ್ತಾಗಿದೆ. ರಾತ್ರಿಯೇ ಆಲ್ಕೊ ಹಾಲ್ ಟೆಸ್ಟಿಂಗ್ ಮೀಟರ್ ನಲ್ಲಿ ಕುಡಿದಿಲ್ಲ ಅನ್ನೋದು ಪತ್ತೆಯಾಗಿದೆ.

    ಬ್ಲಡ್ ತೆಗೆದು ಟೆಸ್ಟಿಂಗ್ ಕೂಡ ಕಳುಹಿಸಲಾಗಿತ್ತು. ಆ ವರದಿಯಲ್ಲೂ ಕುಡಿದಿಲ್ಲ ಅನ್ನೋದು ಪತ್ತೆಯಾಗಿದೆ. ಆಕ್ಸಿಡೆಂಟ್ ಮಾಡಿದ ಬಳಿಕ ಸ್ಥಳೀಯರ ಜೊತೆ ಸೇರಿ ಚಾಲಕ ಅಂದರೆ ನಟ ನಾಗಭೂಷಣ್ ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲು ಮಾಡಿದ್ದಾನೆ ಎಂದು ಸಂಚಾರ ದಕ್ಷಿಣ ಡಿಸಿಪಿ ಶಿವಪಕ್ರಾಶ್ ದೇವರಾಜ್ ಮಾಧ್ಯಮಕ್ಕೆ ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾರು ಅಪಘಾತ: ನಟ ನಾಗಭೂಷಣ್ ಬಂಧನ

    ಕಾರು ಅಪಘಾತ: ನಟ ನಾಗಭೂಷಣ್ ಬಂಧನ

    ಕಾರು ಅಪಘಾತದಲ್ಲಿ ಮಹಿಳೆಯೊಬ್ಬರ ಸಾವಿಗೆ ಕಾರಣರಾದ ನಟ ನಾಗಭೂಷಣ್ ಅವರನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ (Arrest). ಕೆಲವೇ ಗಂಟೆಗಳಲ್ಲಿ ಅವರನ್ನು ಕೋರಮಂಗಲದಲ್ಲಿರುವ ಜಡ್ಜ್ ಮುಂದೆ ಹಾಜರುಪಡಿಸುವುದಾಗಿ ತಿಳಿದು ಬಂದಿದೆ. ನಾಗಭೂಷಣ್ ಅವರು  ಕೂಡ ಸ್ವತಃ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ.

    ಏನಿದು ಪ್ರಕರಣ?

    ಕನ್ನಡದ ಹೆಸರಾಂತ ನಟ ನಾಗಭೂಷಣ್ (Nagabhushan) ಕಾರು ಅಪಘಾತವಾಗಿದ್ದು (Accident), ಬೆಂಗಳೂರಿನ ವಸಂತಪುರದ ನಿವಾಸಿ 48ರ ವಯಸ್ಸಿನ ಪ್ರೇಮಾ (Prema) ಎನ್ನುವವರು ಸಾವನ್ನಪ್ಪಿದ್ದಾರೆ (Death). ನಿನ್ನೆ ತಡ ರಾತ್ರಿ ಕುಮಾರಸ್ವಾಮಿ ಲೇಔಟ್  ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ರಾತ್ರಿ ಒಂಬತ್ತು ಗಂಟೆಗೆ ನಾಗಭೂಷಣ್ ತಮ್ಮ ಮನೆಗೆ ತೆರಳುವಾಗ ಅಪಘಾತವಾಗಿದೆ ಎಂದು ತಿಳಿದು ಬಂದಿದೆ.

    ಶೂಟಿಂಗ್ ಮುಗಿಸಿಕೊಂಡು ನಾಗಭೂಷಣ್ ಬರುವಾಗ ರಸ್ತೆಯಲ್ಲಿ ಅಡ್ಡಬಂದ ಪಾದಚಾರಿ ದಂಪತಿಗಳಾದ ಪ್ರೇಮಾ ಮತ್ತು ಕೃಷ್ಣ ಅವರಿಗೆ ಕಾರು ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ದಂಪತಿಗಳಿಬ್ಬರಿಗೂ ತೀವ್ರ ಗಾಯವಾಗಿದ್ದು, ಗಾಯಾಳುಗಳನ್ನು ಖುದ್ದಾಗಿ ನಾಗಭೂಷಣ್ ಅವರೇ ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗುತ್ತಿದೆ. ಪ್ರೇಮಾ ಅವರಿಗೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಪತಿ ಕೃಷ್ಣ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

     

    ನಾಗಭೂಷಣ್ ಅವರೇ ಸ್ವತಃ ಕಾರನ್ನು ಚಲಾಯಿಸುತ್ತಿದ್ದರಿಂದ ಅವರನ್ನು ಪೊಲೀಸರು ವಶಪಡಿಸಿಕೊಂಡಿದ್ದು ಮಾಹಿತಿ ಪಡೆಯುತ್ತಿದ್ದಾರೆ. ಮೃತರ ಪುತ್ರನು ಕುಮಾರಸ್ವಾಮಿ ಲೇಔಟ್ ಪೊಲೀಸರಿಗೆ ದೂರು ನೀಡಿದ್ದು, ಫುಟ್ ಪಾತ್ ಮೇಲೆ ತಂದೆ ತಾಯಿ ವಾಕ್ ಮಾಡುವಾಗ ಕಾರು ಹಾಯ್ದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಟ ನಾಗಭೂಷಣ್ ಕಾರು ಅಪಘಾತ: ಮಹಿಳೆ ಸಾವು

    ನಟ ನಾಗಭೂಷಣ್ ಕಾರು ಅಪಘಾತ: ಮಹಿಳೆ ಸಾವು

    ನ್ನಡದ ಹೆಸರಾಂತ ನಟ ನಾಗಭೂಷಣ್ (Nagabhushan) ಕಾರು ಅಪಘಾತವಾಗಿದ್ದು (Accident), ಬೆಂಗಳೂರಿನ ವಸಂತಪುರದ ನಿವಾಸಿ 48ರ ವಯಸ್ಸಿನ ಪ್ರೇಮಾ (Prema) ಎನ್ನುವವರು ಸಾವನ್ನಪ್ಪಿದ್ದಾರೆ (Death). ನಿನ್ನೆ ತಡ ರಾತ್ರಿ ಕುಮಾರಸ್ವಾಮಿ ಲೇಔಟ್  ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ರಾತ್ರಿ ಒಂಬತ್ತು ಗಂಟೆಗೆ ನಾಗಭೂಷಣ್ ತಮ್ಮ ಮನೆಗೆ ತೆರಳುವಾಗ ಅಪಘಾತವಾಗಿದೆ ಎಂದು ತಿಳಿದು ಬಂದಿದೆ.

    ಶೂಟಿಂಗ್ ಮುಗಿಸಿಕೊಂಡು ನಾಗಭೂಷಣ್ ಬರುವಾಗ ರಸ್ತೆಯಲ್ಲಿ ಅಡ್ಡಬಂದ ಪಾದಚಾರಿ ದಂಪತಿಗಳಾದ ಪ್ರೇಮಾ ಮತ್ತು ಕೃಷ್ಣ ಅವರಿಗೆ ಕಾರು ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ದಂಪತಿಗಳಿಬ್ಬರಿಗೂ ತೀವ್ರ ಗಾಯವಾಗಿದ್ದು, ಗಾಯಾಳುಗಳನ್ನು ಖುದ್ದಾಗಿ ನಾಗಭೂಷಣ್ ಅವರೇ ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗುತ್ತಿದೆ. ಪ್ರೇಮಾ ಅವರಿಗೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಪತಿ ಕೃಷ್ಣ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    ನಾಗಭೂಷಣ್ ಅವರೇ ಸ್ವತಃ ಕಾರನ್ನು ಚಲಾಯಿಸುತ್ತಿದ್ದರಿಂದ ಅವರನ್ನು ಪೊಲೀಸರು ವಶಪಡಿಸಿಕೊಂಡಿದ್ದು ಮಾಹಿತಿ ಪಡೆಯುತ್ತಿದ್ದಾರೆ. ಮೃತರ ಪುತ್ರನು ಕುಮಾರಸ್ವಾಮಿ ಲೇಔಟ್ ಪೊಲೀಸರಿಗೆ ದೂರು ನೀಡಿದ್ದು, ಫುಟ್ ಪಾತ್ ಮೇಲೆ ತಂದೆ ತಾಯಿ ವಾಕ್ ಮಾಡುವಾಗ ಕಾರು ಹಾಯ್ದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶವ ನೋಡಿ ಬೆಚ್ಚಿಬಿದ್ದಿದ್ದೆ- ಸೌಂದರ್ಯ ಸಾವಿನ ಬಗ್ಗೆ ಪ್ರೇಮಾ ಭಾವುಕ

    ಶವ ನೋಡಿ ಬೆಚ್ಚಿಬಿದ್ದಿದ್ದೆ- ಸೌಂದರ್ಯ ಸಾವಿನ ಬಗ್ಗೆ ಪ್ರೇಮಾ ಭಾವುಕ

    ಭಾರತೀಯ ಚಿತ್ರರಂಗ ಕಂಡ ಟ್ಯಾಲೆಂಟೆಡ್‌ ನಟಿ  ಸೌಂದರ್ಯ ಅವರು 90ರ ದಶಕದಲ್ಲಿ 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಸ್ಟಾರ್ ನಟರಿಗೆ ನಾಯಕಿಯಾಗಿ ಮುಂಚೂಣಿಯಲ್ಲಿದ್ದ ಕಲಾವಿದೆ. ಅಪಾರ ಅಭಿಮಾನಿಗಳ ನೆಚ್ಚಿನ ನಟಿಯಾಗಿರುವ ಸೌಂದರ್ಯ ಅವರ ನಿಧನ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿತ್ತು. ಆಕೆಯ ಸಾವು ಕುಟುಂಬದವರಿಗೆ, ಆಪ್ತರಿಗೆ ಶಾಕ್ ನೀಡಿತ್ತು. ಇದೀಗ ಸ್ನೇಹಿತೆ ಸೌಂದರ್ಯ ಬಗ್ಗೆ ಪ್ರೇಮಾ ಭಾವುಕರಾಗಿದ್ದಾರೆ.

    1992ರಲ್ಲಿ ‘ಗಂಧರ್ವ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ನಟಿ ಸೌಂದರ್ಯ ಅವರು ಬಹುಭಾಷೆಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು. 2004ರಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ವೇಳೆ ಹೆಲಿಕಾಪ್ಟರ್ ದುರಂತದಲ್ಲಿ ಸೌಂದರ್ಯ ನಿಧನರಾದರು. ಇದೀಗ ಸೌಂದರ್ಯ ಅವರನ್ನು ಸಂದರ್ಶನವೊಂದರಲ್ಲಿ ನಟಿ ಪ್ರೇಮಾ ಸ್ಮರಿಸಿದ್ದಾರೆ. ಇದನ್ನೂ ಓದಿ:ಜ್ಯೂ.ಎನ್‌ಟಿಆರ್ ಎದುರು ಅಬ್ಬರಿಸಲಿದ್ದಾರೆ ಸೈಫ್ ಅಲಿ ಖಾನ್

    ಸೌಂದರ್ಯ- ಪ್ರೇಮಾ ಇಬ್ಬರೂ ಆತ್ಮೀಯ ಸ್ನೇಹಿತೆಯರಾಗಿದ್ದರು. ಸೌಂದರ್ಯ ಜೊತೆ ಪ್ರೇಮಾ ನಾಲ್ಕು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡ- ತೆಲುಗು ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದಾರೆ. ನಾನು ನನ್ನ ಹೆಂಡ್ತೀರು, ಆಪ್ತಮಿತ್ರ ಎರಡು ಸಿನಿಮಾಗಳಲ್ಲಿ ಜೊತೆಯಾಗಿ ನಟಿಸಿದ್ದರು. ಈ ಸಿನಿಮಾ ಶೂಟಿಂಗ್ ವೇಳೆ ನಮ್ಮ ನಡುವೆ ಒಡನಾಟ ಬೆಳೆಯಿತು. ರಾಮ ನವಮಿ ಬಂತು ಅಂದರೆ, ಎಲ್ಲರಿಗೂ ಪಾನಕ ಕುಡಿಸುತ್ತಿದ್ದರು. ಅಲ್ಲದೆ ಸೌಂದರ್ಯದ ವಿಚಾರದಲ್ಲಂತೂ ತುಂಬಾನೇ ಕಾಳಜಿ ವಹಿಸುತ್ತಿದ್ದರು. ಆಹಾರವನ್ನೂ ಮಿತವಾಗಿ ಬಳಸುತ್ತಿದ್ದರು. ಸೌಂದರ್ಯಾ ನಟನೆ ಕೂಡ ತುಂಬಾನೇ ಸಹಜವಾಗಿತ್ತು. ಕಣ್ಣಿನಿಂದಲೇ ಸಾವಿರ ಭಾವನೆಗಳನ್ನು ವ್ಯಕ್ತಪಡಿಸುತ್ತಿದ್ದರು ಎಂದು ಪ್ರೇಮಾ ಹೇಳಿಕೊಂಡಿದ್ದಾರೆ.

    2004ರಲ್ಲಿ ಸೌಂದರ್ಯ ಚುನಾವಣ ಪ್ರಚಾರ ಮಾಡುತ್ತಿದ್ದರು. ಈ ವೇಳೆ ಸೌಂದರ್ಯ ಸಹೋದರ ಅಮರ್‌ನಾಥ್ ಅವರೊಂದಿಗೆ ಪ್ರಚಾರಕ್ಕೆ ಮುಂದಾಗಿದ್ದರು. ಬೆಂಗಳೂರಿನಿಂದ ಆಂಧ್ರಪ್ರದೇಶದ ಕರೀಂನಗರಕ್ಕೆ ಪ್ರಚಾರಕ್ಕೆ ತೆರಳುತ್ತಿದ್ದರು. ಈ ವೇಳೆ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಪತನಗೊಂಡಿತ್ತು. ಈ ಅಪಘಾತದಲ್ಲಿ ಸೌಂದರ್ಯಾ ಜೊತೆ ಸಹೋದರ ಅಮರ್‌ನಾಥ್ ಕೂಡ ಸಾವನ್ನಪ್ಪಿದ್ದರು. ಆ ದಿನವನ್ನು ನೆನೆದು ಪ್ರೇಮಾ ಭಾವುಕರಾಗಿದ್ದಾರೆ.

    ಆ ದಿನ ನಾನು ಸೌಂದರ್ಯ ಮನೆಗೆ ಹೋಗಿದ್ದೆ. ಅಲ್ಲಿ ಸೌಂದರ್ಯ ಅವರ ಶವವನ್ನು ಬಾಕ್ಸ್‌ನಲ್ಲಿ ಇಡಲಾಗಿತ್ತು. ಅದರಲ್ಲಿ ಆಕೆಯ ಶವವಿತ್ತು. ಆದರೆ, ಮುಖದ ಗುರುತೇ ಸಿಗಲಿಲ್ಲ. ಅದನ್ನು ನೋಡಿ ಬೆಚ್ಚಿಬಿದ್ದಿದ್ದೆ. ಆ ವೇಳೆ ಕಲಾವಿದರ ಜೀವನ ಇಷ್ಟೇನಾ ಅಂತ ಅನಿಸಿತ್ತು ಎಂದು  ಸೌಂದರ್ಯ ಅವರನ್ನು ನೆನೆದು ಪ್ರೇಮಾ ಭಾವುಕರಾಗಿದ್ದಾರೆ.

  • ಮತದಾನಕ್ಕೂ ಮುನ್ನ ಬಿ.ಸಿ.ಪಾಟೀಲ್ ಗೆಲುವು ಘೋಷಿಸಿದ ನಟಿ ಪ್ರೇಮಾ

    ಮತದಾನಕ್ಕೂ ಮುನ್ನ ಬಿ.ಸಿ.ಪಾಟೀಲ್ ಗೆಲುವು ಘೋಷಿಸಿದ ನಟಿ ಪ್ರೇಮಾ

    ಕೃಷಿ ಸಚಿವ, ನಟ ಬಿ.ಸಿ. ಪಾಟೀಲ್ (B.C. Patil) ಈ ಬಾರಿಯೂ ಚುನಾವಣೆಯಲ್ಲಿ ಗೆಲ್ಲುತ್ತಾರೆ ಎಂದು ನಟಿ ಪ್ರೇಮಾ (Prema) ಭವಿಷ್ಯ ನುಡಿದಿದ್ದಾರೆ. ಹಿರೇಕೆರೂರಿನಲ್ಲಿ (Hirekerur) ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬಂದಿದ್ದ ಅವರು ಬಿ.ಸಿ. ಪಾಟೀಲ್ ಅವರ ಮನೆಯಲ್ಲೇ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಪಾಟೀಲರು ಈ ಕ್ಷೇತ್ರದಲ್ಲಿ ಒಳ್ಳೆಯ ಕೆಲಸ ಮಾಡಿದ್ದಾರೆ. ಹಾಗಾಗಿ ಮತ್ತೊಮ್ಮೆ ಅವರು ಆಯ್ಕೆಯಾಗುತ್ತಾರೆ ಎಂದಿದ್ದಾರೆ.

    ‘ಕೌರವ’ (Kaurava) ಸಿನಿಮಾದಲ್ಲಿ ಬಿ.ಸಿ ಪಾಟೀಲ್ ಮತ್ತು ಪ್ರೇಮಾ ಒಟ್ಟಾಗಿ ನಟಿಸಿದ್ದಾರೆ. ಈ ಸಿನಿಮಾದ ಮೂಲಕ ಈ ಜೋಡಿ ಕೂಡ ಫೇಮಸ್ ಆಗಿತ್ತು. ಕೌರವ ಜೋಡಿ ಎಂದು ಈಗಲೂ ಗುರುತಿಸುವಷ್ಟು ಆ ಸಿನಿಮಾ ನೋಡುಗನ ಮೇಲೆ ಪ್ರಭಾವ ಬೀರಿತ್ತು. ಈ ಬಾಂಧವ್ಯದ ಕಾರಣಕ್ಕಾಗಿ ಪ್ರೇಮಾ ಹಿರೇಕೆರೂರಿಗೆ ಆಗಮಿಸಿ, ಪಾಟೀಲ್ ಪರವಾಗಿ ಮಾತನಾಡಿದ್ದಾರೆ. ಇದನ್ನೂ ಓದಿ: ಪತಿ ದುಡ್ಡು ವೇಸ್ಟ್ ಮಾಡುತ್ತೀರಾ ಎಂದವರಿಗೆ ನಿವೇದಿತಾ ಗೌಡ ಖಡಕ್ ಉತ್ತರ

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಬಿ.ಸಿ.ಪಾಟೀಲರು ಫೋನ್ ಮಾಡಿದ್ದರು. ನಮ್ಮ ತಂದೆ ನಿಧನರಾಗಿದ್ದಾಗ ಅವರು ಬಂದಿದ್ದರು. ಹೀಗಾಗಿ ಅವರ ಮೇಲಿನ ಗೌರವದಿಂದಾಗಿ ನಾನು ಬಂದಿದ್ದೇನೆ. ನನಗೆ ರಾಜಕೀಯದ ಬಗ್ಗೆ ಗೊತ್ತಿಲ್ಲ. ಅವರು ಕರೆದಿದ್ದರು ಅನ್ನುವ ಒಂದೇ ಒಂದು ಕಾರಣಕ್ಕಾಗಿ ಬಂದಿದ್ದೇನೆ ಅಷ್ಟೇ’ ಎಂದು ಅವರು ಮಾತನಾಡಿದರು.

    ಬಿ.ಸಿ ಪಾಟೀಲ್ ರ ಪರವಾಗಿ ಪ್ರಚಾರ ಮಾಡಲು ಬರುತ್ತೀರಾ ಎನ್ನುವ ಪ್ರಶ್ನೆಗೆ, ‘ಪ್ರಚಾರದ ಬಗ್ಗೆ ನನಗೇನೂ ಗೊತ್ತಿಲ್ಲ. ನಾನು ಯಾವಾಗಲೂ ರಾಜಕೀಯದಿಂದ ದೂರ. ಪಾಟೀಲ್ ಅವರ ಜೊತೆ ಒಳ್ಳೆಯ ಬಾಂಧವ್ಯವಿದೆ. ಅದೇ ನನ್ನನ್ನು ಇಲ್ಲಿಗೆ ಕರೆತಂದಿದೆ’ ಎಂದಷ್ಟೇ ಪ್ರೇಮಾ ಹೇಳಿದರು.

  • ಮದುವೆ ಬಗ್ಗೆ ನಾನು ಯೋಚನೆ ಮಾಡಿಲ್ಲ: ಪ್ರೇಮಾ

    ಮದುವೆ ಬಗ್ಗೆ ನಾನು ಯೋಚನೆ ಮಾಡಿಲ್ಲ: ಪ್ರೇಮಾ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k