Tag: president election

  • ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ತಾಲೀಮು ನಡೆಸಿದ್ದು ಯಾಕೆ?

    ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ತಾಲೀಮು ನಡೆಸಿದ್ದು ಯಾಕೆ?

    ಬೆಂಗಳೂರು: ಈ ಬಾರಿ ರಾಷ್ಟ್ರಪತಿ ಮತದಾನಕ್ಕೆ ಬಿಜೆಪಿ ಭರ್ಜರಿ ತಯಾರಿ ಮಾಡಿಕೊಂಡಿದ್ದು ಒಂದೇ ಒಂದು ಮತವೂ ಅಸಿಂಧುವಾಗದಂತೆ ಎಚ್ಚರಿಕೆ ವಹಿಸಲಾಗಿದೆ.

    ಈ ಮೊದಲು ಮತದಾನ ಪ್ರಕ್ರಿಯೆಯಲ್ಲಿ ಇಂದನ ಸಚಿವ ಸುನೀಲ್ ಕುಮಾರ್ ಶಾಸಕರಾದ ಸಿ ಟಿ ರವಿ, ಸತೀಶ್ ರೆಡ್ಡಿ, ಅಭಯ್ ಪಾಟೀಲ್ ತರಬೇತಿ‌ ಪಡಿದ್ದರು. ತರಬೇತಿ ಪಡೆದ ಈ ಶಾಸಕರು ಭಾನುವಾರ ನಗರದ ಖಾಸಗಿ ಹೋಟೆಲಿನಲ್ಲಿ ಅಣಕು ಮತದಾನದ ತರಬೇತಿ ನೀಡಿದ್ದಾರೆ.

    ಕಳೆದ ಬಾರಿಯ ಚುನಾವಣೆಯಲ್ಲಿ 17 ಮತಗಳು ಅಸಿಂಧುಗೊಂಡಿದ್ದವು. ಈ ಸಲ ಯಾವುದೇ ಲೋಪ‌ ಆಗದಂತೆ ಬಿಜೆಪಿ ಮುನ್ನೆಚ್ಚರಿಕೆ ವಹಿಸಿದೆ. ಈ ಸಂಬಂಧ ಎರಡು‌ ದಿನಗಳಿಂದ ಖಾಸಗಿ‌ ಹೊಟೇಲಿನಲ್ಲಿ ಶಾಸಕರನ್ನು ಜಮಾವಣೆ ಮಾಡಿಕೊಂಡು ಬಿಜೆಪಿ ತಾಲೀಮು ನಡೆಸಿದೆ.  ಇದನ್ನೂ ಓದಿ: ಸ್ವಾತಂತ್ರ್ಯದ ಅಮೃತ ಮೋತ್ಸವಕ್ಕೆ ‘ಹರ್ ಘರ್ ತಿರಂಗಾ’ ಅಭಿಯಾನ – ದೇಶಾದ್ಯಂತ 20 ಕೋಟಿ ಮನೆಗಳಲ್ಲಿ ಹಾರಲಿದೆ ತ್ರಿವರ್ಣ ಧ್ವಜ

    ಈ ತಾಲೀಮಿನ ಜೊತೆ ಮುಂದಿನ ಚುನಾವಣೆಗೆ ಪಕ್ಷವನ್ನು ಸಂಘಟಿಸುವ ಬಗ್ಗೆಯೂ ಚರ್ಚಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಇಂದು ರಾಷ್ಟ್ರಪತಿ ಚುನಾವಣೆ – ಜು.25ಕ್ಕೆ ಪ್ರಮಾಣವಚನ

    ಇಂದು ರಾಷ್ಟ್ರಪತಿ ಚುನಾವಣೆ – ಜು.25ಕ್ಕೆ ಪ್ರಮಾಣವಚನ

    ನವದೆಹಲಿ/ಬೆಂಗಳೂರು: ಭಾರತದ 15ನೇ ರಾಷ್ಟ್ರಪತಿ ಆಯ್ಕೆಗೆ ಇಂದು ಚುನಾವಣೆ ನಡೆಯಲಿದೆ. 4,800 ಚುನಾಯಿತ ಸಂಸದರು ಮತ್ತು ಶಾಸಕರು ಮತದಾನ ಮಾಡಲಿದ್ದಾರೆ.

    ಸಂಸತ್ ಭವನ ಮತ್ತು ರಾಜ್ಯ ವಿಧಾನಸೌಧಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ಜುಲೈ 21ಕ್ಕೆ ಫಲಿತಾಂಶ ಪ್ರಕಟವಾಗಲಿದ್ದು, ಜುಲೈ 25ಕ್ಕೆ ಹೊಸ ರಾಷ್ಟ್ರಪತಿ ಪ್ರಮಾಣ ಸ್ವೀಕರಿಸಲಿದ್ದಾರೆ.

    ಎನ್‍ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು, ವಿಪಕ್ಷಗಳ ಅಭ್ಯರ್ಥಿಯಾಗಿ ಯಶವಂತ ಸಿನ್ಹಾ ಕಣದಲ್ಲಿದ್ದಾರೆ. ಎನ್‍ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಶೇ.60ರಷ್ಟು ಮತಗಳೊಂದಿಗೆ ಗೆಲ್ಲುವುದು ಬಹುತೇಕ ಖಚಿತವಾಗಿದೆ. ಇದನ್ನೂ ಓದಿ: ಬುಡಕಟ್ಟು ವಿರೋಧಿ ಎಂದು ಬ್ಯಾನರ್ಜಿ ವಿರುದ್ಧ 50,000 ಪೋಸ್ಟರ್‌ ಹಾಕಿದ ಬಿಜೆಪಿ

    ಎನ್‍ಡಿಎ ಜೊತೆಗೆ ಬುಡಕಟ್ಟು ಮಹಿಳೆ ಎನ್ನುವ ಕಾರಣಕ್ಕೆ ಪ್ರಾದೇಶಿಕ ಪಕ್ಷಗಳಾದ ಬಿಜೆಡಿ, ವೈಎಸ್‍ಆರ್‌ಪಿಸಿ, ಬಿಎಸ್‍ಪಿ, ಎಐಎಡಿಎಂಕೆ, ಟಿಡಿಪಿ, ಜೆಡಿಎಸ್, ಶಿರೋಮಣಿ ಅಕಾಲಿದಳ, ಶಿವಸೇನೆ ಬೆಂಬಲ ನೀಡಿವೆ. ಒಟ್ಟು 10,86,431 ಮತಗಳ ಪೈಕಿ ವಿವಿಧ ಪ್ರಾದೇಶಿಕ ಪಕ್ಷಗಳ ಬೆಂಬಲದ ನಂತರ ಎನ್‍ಡಿಎ ಅಭ್ಯರ್ಥಿ ಪರ 6.67 ಲಕ್ಷಕ್ಕೂ ಹೆಚ್ಚು ಮತಗಳಿವೆ.

    ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ. ರಾಜ್ಯದ 224 ಜನ ಶಾಸಕರು ಹಾಗೂ 28 ಜನ ಲೋಕಸಭಾ ಸದಸ್ಯರು ಮತದಾನ ಮಾಡಲಿದ್ದಾರೆ. ಬಿಜೆಪಿ ಶಾಸಕರು ಒಟ್ಟಾಗಿ ನೇರವಾಗಿ ವಿಧಾನಸೌಧಕ್ಕೆ ಬಂದು ಮತದಾನ ಮಾಡಲಿದ್ದಾರೆ.

    ಕಾಂಗ್ರೆಸ್ ಶಾಸಕರಿಗೆ ನಿಗದಿತ ಸಮಯದೊಳಗೆ ಬಂದು ಮತದಾನ ಮಾಡುವಂತೆ ಸೂಚನೆ ನೀಡಲಾಗಿದೆ. ಈ ಮಧ್ಯೆ, ಆಗಸ್ಟ್ 6ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳ ಅಭ್ಯರ್ಥಿಯಾಗಿ ಕರ್ನಾಟಕ ಮೂಲದ ಕಾಂಗ್ರೆಸ್ ನಾಯಕಿ ಮಾರ್ಗರೇಟ್ ಆಳ್ವಾರನ್ನು ಆಯ್ಕೆ ಮಾಡಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ರಾಷ್ಟ್ರಪತಿ ಚುನಾವಣೆಯಲ್ಲೂ ಆಪರೇಷನ್‌ ಕಮಲದ ಸದ್ದು

    ರಾಷ್ಟ್ರಪತಿ ಚುನಾವಣೆಯಲ್ಲೂ ಆಪರೇಷನ್‌ ಕಮಲದ ಸದ್ದು

    ನವದೆಹಲಿ: ನಾಳೆ ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಎನ್‍ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಗೆಲ್ಲುವುದು ಬಹುತೇಕ ಖಚಿತವಾಗಿದೆ. ಆದರೆ ಈ ಚುನಾವಣೆಯಲ್ಲೂ ಆಪರೇಷನ್‌ ಕಮಲದ ಆರೋಪ ಕೇಳಿಬಂದಿದೆ.

    ಬಿಜೆಪಿ ನೇತೃತ್ವದ ಎನ್‍ಡಿಎ ಬಳಿ ಶೇ.60ಕ್ಕೂ ಹೆಚ್ಚು ಅಂದರೆ 6.67 ಲಕ್ಷಕ್ಕೂ ಹೆಚ್ಚು ಮತಗಳು ಇವೆ. ಮೂರು ಲಕ್ಷ ಚಿಲ್ಲರೆ ಮತಗಳನ್ನು ವಿಪಕ್ಷಗಳಲ್ಲಿ ಒಗ್ಗಟ್ಟು ಇಲ್ಲದ ಕಾರಣ ಯಶವಂತ್ ಸಿನ್ಹಾ ಸೋಲು ಬಹುತೇಕ ಖಚಿತವಾಗಿದೆ. ಅವರ ಬಳಿ ಮೂರು ಲಕ್ಷ ಚಿಲ್ಲರೇ ಮತಗಳಷ್ಟೇ ಇವೆ.

    ಪ್ರಮುಖವಾಗಿ ವಿಪಕ್ಷಗಳಲ್ಲಿನ ಬುಡಕಟ್ಟು ಸಮುದಾಯದ ಶಾಸಕರು, ಸಂಸದರಿಗೆ ಬಿಜೆಪಿ ಗಾಳ ಹಾಕಿದೆ ಎಂಬ ಆರೋಪ ಕೇಳಿ ಬಂದಿದೆ.  ವಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿಯಾಗಿರುವ ಯಶವಂತ್‌ ಸಿನ್ಹಾ ಬಿಜೆಪಿ ಹಣ ಆಮಿಷವನ್ನು ಒಡ್ಡಿದೆ ಎಂಬ ಆರೋಪ ಮಾಡಿದ್ದಾರೆ. ರಾಷ್ಟ್ರಪತಿ ಚುನಾವಣೆಯಲ್ಲಿ ಮುರ್ಮು ಗೆಲ್ಲುವುದು ಪಕ್ಕಾ ಆಗಿರುವುದರಿಂದ ಬಿಜೆಪಿಯವರು ಫುಲ್ ಜೋಷ್‍ನಲ್ಲಿ ಇದ್ದಾರೆ. ಇದನ್ನೂ ಓದಿ: 75 ವರ್ಷಗಳ ಬಳಿಕ ಪಾಕ್‍ನಲ್ಲಿರುವ ಪೂರ್ವಜರ ಮನೆಗೆ ಭೇಟಿ ನೀಡಿದ ಭಾರತೀಯ ಮಹಿಳೆ

    ಇದೇ ಜೋಷ್‍ನಲ್ಲಿ ಎನ್‍ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಬಂಗಾಳದ ರಾಜ್ಯಪಾಲ ಜಗದೀಪ್ ಧನ್ಕರ್‌ ಅವರನ್ನು ಕಣಕ್ಕಿಳಿಸಿದೆ. ವಿಪಕ್ಷಗಳು ಇಂದು ಅಭ್ಯರ್ಥಿಯನ್ನು ಪ್ರಕಟಿಸುವ ಸಂಭವ ಇದೆ.

    Live Tv
    [brid partner=56869869 player=32851 video=960834 autoplay=true]

  • ರಾಷ್ಟ್ರಪತಿ ಚುನಾವಣೆ – ಇಂದು ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಬಿಜೆಪಿಯೇತರ ಪಕ್ಷಗಳ ನಾಯಕರ ಸಭೆ

    ರಾಷ್ಟ್ರಪತಿ ಚುನಾವಣೆ – ಇಂದು ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಬಿಜೆಪಿಯೇತರ ಪಕ್ಷಗಳ ನಾಯಕರ ಸಭೆ

    ನವದೆಹಲಿ: ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಅಖಾಡ ಸಿದ್ಧವಾಗುತ್ತಿದ್ದು, ಬಿಜೆಪಿ ವಿರುದ್ಧ ಸ್ಪರ್ಧಿಸಲು ಅಭ್ಯರ್ಥಿ ಯಾರಾಗಬೇಕು ಎನ್ನುವ ಚರ್ಚೆಗಳು ಶುರುವಾಗಿವೆ. ಈ ಬಗ್ಗೆ ಚರ್ಚೆ ನಡೆಸಲು ಬಿಜೆಪಿಯೇತರ ಪಕ್ಷಗಳ ನಾಯಕರು ದೆಹಲಿಯಲ್ಲಿ ಇಂದು ಸಭೆ ನಡೆಸಲಿದ್ದಾರೆ.

    ಮಧ್ಯಾಹ್ನ 3 ಗಂಟೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸೋನಿಯಾ ಗಾಂಧಿ, ಶರದ್ ಪವಾರ್, ಅಖಿಲೇಶ್ ಯಾದವ್, ಅರವಿಂದ್ ಕೇಜ್ರಿವಾಲ್, ಸೀತಾರಾಂ ಯೆಚೂರಿ ಸೇರಿದಂತೆ ದೇಶದ 22 ಪ್ರಾದೇಶಿಕ ಪಕ್ಷಗಳಿಗೆ ಪತ್ರ ಬರೆದು ಇಂದಿನ ಸಭೆಯಲ್ಲಿ ಭಾಗಿಯಾಗಲು ಮಮತಾ ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್, ಎನ್‍ಸಿಪಿ, ಎಸ್‍ಪಿ, ಆರ್‌ಜೆಡಿ, ಎನ್‍ಸಿ, ಎಎಪಿ, ಸಿಪಿಎಂ, ಸಿಪಿಐ, ಜೆಎಂಎಂ, ಶಿವಸೇನೆ, ಐಯುಎಂಎಲ್, ಪಿಡಿಪಿ, ಜೆಡಿಎಸ್, ಆರ್‍ಎಲ್‍ಡಿ ಸೇರಿದಂತೆ ನವೀನ್ ಪಟ್ನಾಯಕ್ ಅವರ ಬಿಜು ಜನತಾ ದಳ (ಬಿಜೆಡಿ) ಜೊತೆಗೆ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‍ಎಸ್) ಸಭೆಯಯಲ್ಲಿ ಪಾಲ್ಗೊಳ್ಳಲಿದ್ದಾರೆ.

    ಮಮತಾ ಬ್ಯಾನರ್ಜಿ ಕರೆದಿರುವ ಈ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಜೈರಾಮ್ ರಮೇಶ್ ಮತ್ತು ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಕಾಂಗ್ರೆಸ್ ಪ್ರತಿನಿಧಿಸಲಿದ್ದು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಬದಲು ಮಾಜಿ ಮುಖ್ಯಮಂತ್ರಿ ಹೆಚ್‍ಡಿಕೆ ಭಾಗಿ ಆಗುವ ಸಾಧ್ಯತೆಯಿದೆ. ಇದನ್ನೂ ಓದಿ:  2 ಶಿಕ್ಷಕ, 2 ಪದವೀಧರ ಕ್ಷೇತ್ರಗಳ ಫಲಿತಾಂಶ ಇಂದು- 3 ಪಕ್ಷಗಳ ಭವಿಷ್ಯ ನಿರ್ಧಾರ

    ನಿನ್ನೆ ಶರದ್ ಪವಾರ್ ಭೇಟಿಯಾಗಿದ್ದ ಮಮತಾ ಬ್ಯಾನರ್ಜಿ ರಾಷ್ಟ್ರಪತಿ ಅಭ್ಯರ್ಥಿಯಾಗಲು ಮನವಿ ಮಾಡಿದರು. ಆದರೆ ಪವಾರ್ ಈ ಮನವಿ ತಿರಸ್ಕರಿಸಿದ್ದು ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುವ ಇಂಗಿತ ವ್ಯಕ್ತಪಡಿಸಿದ್ದಾರೆ. ಹೀಗಾಗಿ, ವಿಪಕ್ಷಗಳಿಂದ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿ ಯಾರಗಬಹುದು ಎನ್ನುವ ಕುತೂಹಲ ಹೆಚ್ಚಾಗಿದೆ. ಇದನ್ನೂ ಓದಿ: ಪ್ರಾರ್ಥನಾ ಮಂದಿರಗಳಲ್ಲಿ ಮೈಕ್‌ ಸಕ್ರಮಕ್ಕೆ ನೀಡಿದ್ದ ಗಡುವು ಅಂತ್ಯ – ಇಂದಿನಿಂದ ಪೊಲೀಸ್‌ ಕಾರ್ಯಾಚರಣೆ

  • ಬಿಹಾರ ರಾಜ್ಯಪಾಲ ರಾಮನಾಥ್ ಕೋವಿಂದ್ ಎನ್‍ಡಿಎ ರಾಷ್ಟ್ರಪತಿ ಅಭ್ಯರ್ಥಿ

    ಬಿಹಾರ ರಾಜ್ಯಪಾಲ ರಾಮನಾಥ್ ಕೋವಿಂದ್ ಎನ್‍ಡಿಎ ರಾಷ್ಟ್ರಪತಿ ಅಭ್ಯರ್ಥಿ

    ನವದೆಹಲಿ: ಬಿಹಾರ ರಾಜ್ಯಪಾಲ ರಾಮನಾಥ್ ಕೋವಿಂದ್ ಅವರನ್ನು ಎನ್‍ಡಿಎ ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಲು ಬಿಜೆಪಿ ನಿರ್ಧಾರ ಕೈಗೊಂಡಿದೆ.

    ರಾಷ್ಟ್ರಪತಿ ಅಭ್ಯರ್ಥಿಯ ಆಯ್ಕೆ ಸಂಬಂಧ ಬಿಜೆಪಿ ಸಂಸದೀಯ ಸಮಿತಿಯ ಸಭೆ ಸೋಮವಾರ ನಡೆಯಿತು. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಕೇಂದ್ರ ಸಚಿವರಾದ ಸುಷ್ಮಾ ಸ್ವರಾಜ್, ಅನಂತ್ ಕುಮಾರ್, ವೆಂಕಯ್ಯ ನಾಯ್ಡು ಸೇರಿದಂತೆ ಹಲವು ನಾಯಕರು ಈ ಸಭೆಯಲ್ಲಿ ಭಾಗವಹಿಸಿದ್ದರು.

    ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅಮಿತ್ ಷಾ, ರಾಮನಾಥ್ ಕೋವಿಂದ್ ಅವರನ್ನು ಎನ್‍ಡಿಎ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದೇವೆ. ನಮ್ಮ ನಿರ್ಧಾರವನ್ನು ಮಿತ್ರ ಪಕ್ಷಗಳು ಬೆಂಬಲಿಸುತ್ತದೆ ಎಂದು ನಾನು ಭಾವಿಸಿದ್ದೇನೆ ಎಂದು ತಿಳಿಸಿದರು.

    ಯಾರು ರಾಮನಾಥ್ ಕೋವಿಂದ್?
    ಉತ್ತರಪ್ರದೇಶದ ಕಾನ್ಪುರದ ದಿಹಾಟ್ ಎಂಬಲ್ಲಿ 1945 ಅಕ್ಟೋಬರ್ 1ರಂದು ರಾಮನಾಥ್ ಕೋವಿಂದ್ ಜನಿಸಿದ್ದು, ಕಾನ್ಪುರ ವಿಶ್ವವಿದ್ಯಾನಿಲಯದಿಂದ ಬಿ.ಕಾಂ, ಎಲ್ಎಲ್ ಬಿ ಪದವಿ ಪಡೆದಿದ್ದಾರೆ. 1977 ರಿಂದ 1979ರವರೆಗೆ ದೆಹಲಿ ಹೈಕೋರ್ಟ್ ನಲ್ಲಿ ಕೇಂದ್ರ ಸರ್ಕಾರದ ವಕೀಲರಾಗಿ ಕಾರ್ಯನಿರ್ವಹಿಸಿದ್ದಾರೆ. 1980ರಿಂದ 1993ರವರೆಗೆ ಸುಪ್ರೀಂ ಕೋರ್ಟ್ ವಕೀಲರಾಗಿ ಕಾರ್ಯನಿರ್ವಹಿಸಿದ್ದರು. 1994ರಲ್ಲಿ ಉತ್ತರಪ್ರದೇಶದಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ಇವರು 12 ವರ್ಷಗಳ ಕಾಲ ಸಂಸದರಾಗಿದ್ದರು.

    ಇದನ್ನೂ ಓದಿ:ರಾಷ್ಟ್ರಪತಿ ಚುನಾವಣೆ ಹೇಗೆ ನಡೆಯುತ್ತೆ? ಮತ ಲೆಕ್ಕಾಚಾರ ಹೇಗೆ? ಎನ್‍ಡಿಎ,ಯುಪಿಎ ಬಲಾಬಲ ಹೇಗಿದೆ?

  • ರಾಷ್ಟ್ರಪತಿ ಹುದ್ದೆಗೆ ಡಾ. ವೀರೇಂದ್ರ ಹೆಗ್ಗಡೆ ಹೆಸರು – ಸಾಮಾಜಿಕ ಜಾಲತಾಣಗಳಲ್ಲಿ ಬಿಸಿಬಿಸಿ ಚರ್ಚೆ

    ರಾಷ್ಟ್ರಪತಿ ಹುದ್ದೆಗೆ ಡಾ. ವೀರೇಂದ್ರ ಹೆಗ್ಗಡೆ ಹೆಸರು – ಸಾಮಾಜಿಕ ಜಾಲತಾಣಗಳಲ್ಲಿ ಬಿಸಿಬಿಸಿ ಚರ್ಚೆ

    ನವದೆಹಲಿ: ಮುಂದಿನ ತಿಂಗಳು ದೇಶದ ಅತ್ಯುನ್ನತ ಸಂವಿಧಾನಿಕ ಹುದ್ದೆಯಾದ ರಾಷ್ಟ್ರಪತಿ ಹುದ್ದೆಗೆ ಚುನಾವಣೆ ನಡೆಯಲಿದೆ. ಬಿಜೆಪಿ ನೇತೃತ್ವದ ಎನ್‍ಡಿಎ ಒಕ್ಕೂಟ ಅಭ್ಯರ್ಥಿ ಹುಡುಕಾಟದಲ್ಲಿ ತೊಡಗಿರುವ ಬೆನ್ನಲ್ಲೇ ಕರ್ನಾಟಕದವರಿಗೆ ಈ ಪಟ್ಟ ಒಲಿಯಬಹುದು ಅನ್ನೋ ಸುದ್ದಿ ಹಬ್ಬಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ. ವೀರೇಂದ್ರ ಹೆಗ್ಗಡೆಯವರನ್ನು ಎನ್‍ಡಿಎ ತನ್ನ ಅಭ್ಯರ್ಥಿಯಾಗಿ ಪರಿಗಣಿಸಬಹುದು ಅನ್ನೋ ಮಾತು ಕೇಳಿಬಂದಿದೆ.

    ಭಾನುವಾರವಷ್ಟೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆಗಾಗಿ ಕೇಂದ್ರ ಗೃಹ ಸಚಿವ ರಾಜ್‍ನಾಥ್ ಸಿಂಗ್, ಹಣಕಾಸು ಸಚಿವ ಅರುಣ್ ಜೇಟ್ಲಿ, ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಅವರನ್ನೊಳಗೊಂಡ ಮೂವರ ಸಮಿತಿಯನ್ನು ರಚಿಸಿದ್ದಾರೆ. ರಾಷ್ಟ್ರಪತಿ ಚುನಾವಣೆ ಸಂಬಂಧ ವಿಪಕ್ಷಗಳು ಸೇರಿದಂತೆ ಸರ್ವಪಕ್ಷಗಳ ಜೊತೆಗೆ ಚರ್ಚಿಸಿ ಒಮ್ಮತ ಮೂಡಿಸುವ ಜವಾಬ್ದಾರಿ ನೀಡಲಾಗಿದೆ.

    ಇತ್ತ ಬುಧವಾರದಂದು ಕಾಂಗ್ರೆಸ್ ನೇತೃತ್ವದಲ್ಲಿ ವಿಪಕ್ಷಗಳು ಸಭೆ ನಡೆಸಲಿವೆ. ಅಲ್ಲೂ ಅಭ್ಯರ್ಥಿ ಆಯ್ಕೆಗಾಗಿ 10 ಮಂದಿ ಸದಸ್ಯರ ಉಪ ಸಮಿತಿಯನ್ನು ರಚಿಸಲಾಗಿದೆ. ಜುಲೈ 17ರಂದು ರಾಷ್ಟ್ರಪತಿ ಹುದ್ದೆಗೆ ಚುನಾವಣೆ ನಡೆಯಲಿದ್ದು, ಜೂನ್ 28ರೊಳಗೆ ನಾಮಪತ್ರ ಸಲ್ಲಿಸಬೇಕು. ಜುಲೈ 20ರಂದು ಫಲಿತಾಂಶ ಪ್ರಕಟವಾಗಲಿದ್ದು, ಜುಲೈ 25ರಂದು ಹೊಸ ರಾಷ್ಟ್ರಪತಿಯ ಯುಗಾರಂಭವಾಗಲಿದೆ.

  • ರಾಷ್ಟ್ರಪತಿ ಚುನಾವಣೆ ಹೇಗೆ ನಡೆಯುತ್ತೆ? ಮತ ಲೆಕ್ಕಾಚಾರ ಹೇಗೆ? ಎನ್‍ಡಿಎ,ಯುಪಿಎ ಬಲಾಬಲ ಹೇಗಿದೆ?

    ರಾಷ್ಟ್ರಪತಿ ಚುನಾವಣೆ ಹೇಗೆ ನಡೆಯುತ್ತೆ? ಮತ ಲೆಕ್ಕಾಚಾರ ಹೇಗೆ? ಎನ್‍ಡಿಎ,ಯುಪಿಎ ಬಲಾಬಲ ಹೇಗಿದೆ?

    ನವದೆಹಲಿ: ದೇಶದ ಅತ್ಯುನ್ನತ ಸಂವಿಧಾನಿಕ ಹುದ್ದೆ ರಾಷ್ಟ್ರಪತಿ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯ ಚುನಾವಣಾ ಆಯುಕ್ತ ನಜೀಂ ಝೈದಿ 15ನೇ ರಾಷ್ಟ್ರಪತಿ ಚುನಾವಣೆಗೆ ದಿನಾಂಕ ಪ್ರಕಟಿಸಿದರು.

    ಯಾವ ದಿನ ಏನು?
    ಜೂನ್ 14: ರಾಷ್ಟ್ರಪತಿ ಚುನಾವಣೆಗಾಗಿ ಅಧಿಸೂಚನೆ
    ಜೂನ್ 28: ರಾಷ್ಟ್ರಪತಿ ಹುದ್ದೆಗೆ ನಾಮಪತ್ರ ಸಲ್ಲಿಸಲು ಕಡೆಯ ದಿನ
    ಜೂನ್ 29: ನಾಮಪತ್ರಗಳ ಪರಿಶೀಲನೆ
    ಜುಲೈ 1: ನಾಮಪತ್ರ ವಾಪಸ್ ಪಡೆಯಲು ಅವಕಾಶ
    ಜುಲೈ 17: ರಾಷ್ಟ್ರಪತಿ ಹುದ್ದೆಗೆ ಮತದಾನ
    ಜುಲೈ 20: ರಾಷ್ಟ್ರಪತಿ ಚುನಾವಣೆ ಮತ ಎಣಿಕೆ
    ಜುಲೈ 24: ಹಾಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಧಿಕಾರವಧಿ ಅಂತ್ಯ
    ಜುಲೈ 25: 15ನೇ ರಾಷ್ಟ್ರಪತಿಯ ಅಧಿಕಾರಾವಧಿ ಆರಂಭ

    ರಾಷ್ಟ್ರಪತಿ ಚುನಾವಣೆ ಹೇಗೆ ನಡೆಯುತ್ತದೆ..?
    ಸಂವಿಧಾನದ ವಿಧಿ 54ರ ಪ್ರಕಾರ ರಾಷ್ಟ್ರಪತಿ ಚುನಾವಣೆ ನಡೆಯುತ್ತದೆ. ಸಂಸತ್ತಿನ ಉಭಯ ಸದನಗಳಾದ ಲೋಕಸಭೆ, ರಾಜ್ಯಸಭೆ ಸಂಸದರು, ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಲ್ಲಿರುವ ವಿಧಾನಸಭೆ ಸದಸ್ಯರಿಂದ ಮತದಾನ ನಡೆಯುತ್ತದೆ. ವಿಧಾನಪರಿಷತ್ ಸದಸ್ಯರು, ನಾಮಕರಣಗೊಂಡ ಸಂಸದರು, ಶಾಸಕರಿಗೆ ಮತದಾನದ ಹಕ್ಕಿಲ್ಲ. ರಾಷ್ಟ್ರಪತಿ ಹುದ್ದೆಯ ಅಭ್ಯರ್ಥಿಗೆ ನಾಮಪತ್ರ ಸಲ್ಲಿಕೆ ವೇಳೆ 50 ಮಂದಿ ಮತದಾರರು ಸೂಚಕರಾಗಿ, 50 ಮಂದಿ ಅನುಮೋದಕರಾಗಿ ಸಹಿ ಮಾಡಬೇಕಾಗುತ್ತದೆ.

    ಲೋಕಸಭೆ, ರಾಜ್ಯಸಭೆ ಪ್ರಧಾನ ಕಾರ್ಯದರ್ಶಿಗಳು ಆವೃತ ಪದ್ಧತಿಯಡಿ ಚುನಾವಣಾಧಿಕಾರಿಗಳಾಗಿರುತ್ತಾರೆ. ಈ ಬಾರಿ ರಾಷ್ಟ್ರಪತಿ ಚುನಾವಣೆಗೆ ಲೋಕಸಭೆ ಪ್ರಧಾನ ಕಾರ್ಯದರ್ಶಿ ಚುನಾವಣಾಧಿಕಾರಿಯಾಗಿರುತ್ತಾರೆ. ರಾಷ್ಟ್ರಪತಿ ಹುದ್ದೆಗೆ ನಾಮಪತ್ರ ಸಲ್ಲಿಸುವ ಅಭ್ಯರ್ಥಿ 15 ಸಾವಿರ ರೂಪಾಯಿ ಠೇವಣಿ ಇಡಬೇಕಾಗುತ್ತದೆ. ಮತಪತ್ರ ಮೂಲಕ ಮತದಾನ ನಡೆಯಲಿದೆ.

    ಮತ ಲೆಕ್ಕಾಚಾರ ಹೇಗೆ?
    ಪ್ರಸ್ತುತ ಈಗ ದೇಶದಲ್ಲಿ 776 ಸಂಸದರು ಮತ್ತು 4,120 ಶಾಸಕರಿದ್ದಾರೆ. 1971ರ ಜನಗಣತಿಯ ಆಧರಿಸಿ ಸಂಸದರು, ಶಾಸಕರ ಮತಮೌಲ್ಯ ನಿರ್ಧಾರ ಮಾಡಲಾಗುತ್ತದೆ. ರಾಜ್ಯದ ಜನಸಂಖ್ಯೆಯನ್ನು ಒಟ್ಟು ಶಾಸಕರ ಸಂಖ್ಯೆಯೊಂದಿಗೆ ಭಾಗಿಸಿ 1 ಸಾವಿರದೊಂದಿಗೆ ಗುಣಿಸಿದಾಗ ಶಾಸಕರ ಮತಮೌಲ್ಯ ಸಿಗುತ್ತದೆ.

    ಕರ್ನಾಟಕದ ಶಾಸಕರ ಮತ ಮೌಲ್ಯ ಎಷ್ಟು?
    1971ರ ಜನಗಣತಿಯ ಪ್ರಕಾರ ಕರ್ನಾಟಕದ ಜಸಂಖ್ಯೆ = 2,92,99,014.
    ಕರ್ನಾಟಕದ ಶಾಸಕರ ಮತಮೌಲ್ಯ = 131
    ಕರ್ನಾಟಕದ ಒಟ್ಟು ಮತ ಮೌಲ್ಯ (131*224) = 29,344

    ಬೇರೆ ರಾಜ್ಯದಲ್ಲಿ ಎಷ್ಟು?
    ಉತ್ತರ ಪ್ರದೇಶದ ಶಾಸಕರ ಮತಮೌಲ್ಯ 208 ಆಗಿದ್ದರೆ, ಗೋವಾ ಶಾಸಕರ ಮತಮೌಲ್ಯ 8 ಆಗಿದೆ.

    ಸಂಸದರ ಮತ ಮೌಲ್ಯ ಎಷ್ಟು?
    ಎಲ್ಲಾ ರಾಜ್ಯಗಳ ಶಾಸಕರ ಮತಮೌಲ್ಯವನ್ನು ಸಂಸದರ ಒಟ್ಟು ಸಂಖ್ಯೆಯಿಂದ ಭಾಗಿಸಿದಾಗ ಸಂಸದರ ಮತ ಮೌಲ್ಯ ಸಿಗುತ್ತದೆ.
    ಸಂಸದರ ಮತ ಮೌಲ್ಯ : 5,49,474/776 = 708

    ಅಭ್ಯರ್ಥಿ ಅಧಿಕೃತವಾಗಿಲ್ಲ:
    ಅತೀ ದೊಡ್ಡ ಕೂಟವಾಗಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಇನ್ನೂ ಕೂಡಾ ತನ್ನ ಅಭ್ಯರ್ಥಿಯನ್ನು ಅಧಿಕೃತಗೊಳಿಸಿಲ್ಲ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಕೆಲ ದಿನಗಳ ಹಿಂದೆಯಷ್ಟೇ ಎನ್‍ಡಿಎಯೇತರ ಪಕ್ಷಗಳ ಸಭೆ ನಡೆದಿದ್ದರೂ ಅಭ್ಯರ್ಥಿ ಅಂತಿಮವಾಗಿಲ್ಲ. ಒಂದು ವೇಳೆ ಸಹಮತದ ಅಭ್ಯರ್ಥಿಯನ್ನು ಘೋಷಿಸಿದರೆ ಎನ್‍ಡಿಎ ಬೆಂಬಲಿಸಲು ಸಿದ್ಧ ಎಂದು ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಹೇಳಿವೆಯಾದರೂ ಇದುವರೆಗೆ ಅದರ ಸೂಚನೆ ಕಂಡುಬಂದಿಲ್ಲ. ಆದರೆ ಎನ್‍ಡಿಎ ಅಭ್ಯರ್ಥಿಗೆ ಕೇವಲ 20 ಸಾವಿರ ಮತಗಳ ಕೊರತೆಯಷ್ಟೇ ಕಾಡುತ್ತಿದೆ. ರಾಷ್ಟ್ರಪತಿ ಚುನಾವಣೆಯಲ್ಲಿ ಪಕ್ಷಗಳಿಗೆ ವಿಪ್ ನೀಡುವಂತಿಲ್ಲ.

    ಬಲಾಬಲ ಹೇಗಿದೆ?
    ರಾಷ್ಟ್ರಪತಿ ಚುನಾವಣೆಯಲ್ಲಿ ಚಲಾವಣೆಯಾಗಲಿರುವ ಮತಗಳ ಒಟ್ಟು ಮೌಲ್ಯ: 10,98,882
    ರಾಷ್ಟ್ರಪತಿಗಳ ಆಯ್ಕೆಗೆ ಅಗತ್ಯವಾಗಿರುವ ಮತಗಳ ಮೌಲ್ಯ : 5,49,442

    ಎನ್‍ಡಿಎ ಒಕ್ಕೂಟದ ಮತ ಮೌಲ್ಯ: 5,27,371 ಅಂದರೆ ಶೇಕಡಾ 48.10
    2,37,888 (ಲೋಕಸಭೆ)+ 49,560 (ರಾಜ್ಯಸಭೆ) + 2,39,923 (ವಿಧಾನಸಭೆ)

    ಯುಪಿಎ ಒಕ್ಕೂಟದ ಮತ ಮೌಲ್ಯ: 1,73,849 ಅಂದರೆ ಶೇಕಡಾ 15.90
    34,692 (ಲೋಕಸಭೆ) + 46,020 (ರಾಜ್ಯಸಭೆ) + 93,137 (ವಿಧಾನಸಭೆ)

    ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿರುವ ಪಕ್ಷಗಳ ಮತ ಮೌಲ್ಯ : 2,60,392 ಅಂದರೆ ಶೇಕಡಾ 23.80
    60,180 (ಲೋಕಸಭೆ)+ 47,436(ರಾಜ್ಯಸಭೆ)+ 1,52,776(ವಿಧಾನಸಭೆ)

    ಇತರೆ ವಿರೋಧ ಪಕ್ಷಗಳ ಮತ ಮೌಲ್ಯ: 1,33,907 ಅಂದರೆ ಶೇಕಡಾ 12.80
    50,268 (ಲೋಕಸಭೆ)+ 20,532 (ರಾಜ್ಯಸಭೆ)+ 63,107(ವಿಧಾನಸಭೆ)

  • ಬಿಜೆಪಿ ಅಭ್ಯರ್ಥಿಯೇ ರಾಷ್ಟ್ರಪತಿ ಆಗ್ತಾರಾ? ಎಷ್ಟು ಮತ ಬೇಕು? ಈಗ ಎಷ್ಟು ಮತ ಇದೆ?

    ಬಿಜೆಪಿ ಅಭ್ಯರ್ಥಿಯೇ ರಾಷ್ಟ್ರಪತಿ ಆಗ್ತಾರಾ? ಎಷ್ಟು ಮತ ಬೇಕು? ಈಗ ಎಷ್ಟು ಮತ ಇದೆ?

    ನವದೆಹಲಿ: ಉತ್ತರಪ್ರದೇಶದಲ್ಲಿ ಭಾರೀ ಬಹುಮತದೊಂದಿಗೆ ಗೆದ್ದಿರುವ ಬಿಜೆಪಿ ವಿಧಾನಸಭೆಯಲ್ಲಿ ಪಕ್ಷದ ಸ್ಥಾನಗಳನ್ನಷ್ಟೇ ಹೆಚ್ಚಿಕೊಂಡಿಲ್ಲ. ಬದಲಾಗಿ ಮುಂಬರುವ ರಾಷ್ಟ್ರಪತಿ ಚುನಾವಣೆಯ ಮೇಲೂ ಬಿಜೆಪಿಯ ಈ ಗೆಲುವು ಭಾರೀ ಪ್ರಭಾವ ಬೀರಲಿದೆ.

    ಉತ್ತರಪ್ರದೇಶದಲ್ಲಿ 325 ಸ್ಥಾನ, ಉತ್ತರಾಖಂಡ್‍ನಲ್ಲಿ 56 ಸ್ಥಾನ, ಮಣಿಪುರದಲ್ಲಿ 21, ಪಂಜಾಬ್‍ನಲ್ಲಿ 18 ಹಾಗೂ ಗೋವಾದಲ್ಲಿ 13 ಸ್ಥಾನಗಳನ್ನು ಗೆಲ್ಲುವ ಮೂಲಕ ಎನ್‍ಡಿಎ ರಾಷ್ಟಪತಿ ಚುನಾವಣೆಗೆ ಹಾದಿ ಸುಗಮಗೊಳಿಸಿಕೊಂಡಿದೆ. ರಾಷ್ಟ್ರಪತಿ ಆಯ್ಕೆಗೆ ಮೋದಿ ಪಡೆ ಬಹುಮತದ ಸನಿಹದಲ್ಲಿ ಬಂದು ನಿಂತಿದೆ. ಜುಲೈಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವಧಿ ಅಂತ್ಯವಾಗುತ್ತಿರುವ ಹನ್ನೆಲೆಯಲ್ಲಿ ರಾಷ್ಟ್ರಪತಿ ಆಯ್ಕೆಯ ಲೆಕ್ಕಾಚಾರ ಗರಿಗೆದರಿದೆ.

    ಎಷ್ಟು ಮತ ಬೇಕು?
    ದೇಶದ ರಾಷ್ಟ್ರಪತಿಯನ್ನು 29 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶ ಪುದುಚೆರಿ ಹಾಗೂ ರಾಜಧಾನಿ ದೆಹಲಿಯ ಎಲ್ಲಾ ಸಂಸದರು ಹಾಗೂ ಶಾಸಕರನ್ನೊಳಗೊಂಡ ಎಲೆಕ್ಟೋರಲ್ ಕಾಲೇಜ್ ಆಯ್ಕೆ ಮಾಡುತ್ತದೆ. ಎಲೆಕ್ಟೋರಲ್ ಕಾಲೇಜ್‍ನ ಒಟ್ಟು ಮತಗಳ ಸಂಖ್ಯೆ 10,98,882. ಇದರಲ್ಲಿ ರಾಷ್ಟಪತಿ ಆಯ್ಕೆಗೆ ಬೇಕಿರುವುದು 5,49,442 ಮತಗಳು.

    ಎನ್‍ಡಿಎ ಬಳಿ ಎಷ್ಟಿದೆ?
    ಪ್ರಸ್ತುತ ಈಗ ದೇಶದಲ್ಲಿ 776 ಸಂಸದರು ಮತ್ತು 4,120 ಶಾಸಕರಿದ್ದಾರೆ. ಇವರ ಎಲ್ಲ ಮತಗಳು ಸೇರಿದರೆ 10,98,882 ಮತಗಳು ಆಗುತ್ತದೆ. ಹೀಗಾಗಿ ರಾಷ್ಟ್ರಪತಿ ಅಭ್ಯರ್ಥಿ ವಿಜಯಿ ಆಗಲು ಒಟ್ಟು ಮತದ ಅರ್ಧಭಾಗಕ್ಕಿಂತ ಹೆಚ್ಚು ಅಂದರೆ 5,49,442 ಮತಗಳ ಅವಶ್ಯಕತೆಯಿದೆ.

    ಉತ್ತರಪ್ರದೇಶದ ಗೆಲುವಿನಿಂದ ಎಲೆಕ್ಟೋರಲ್ ಕಾಲೇಜ್‍ನಲ್ಲಿ ರಾಜ್ಯದ ಬಿಜೆಪಿ ಮತಗಳ ಸಂಖ್ಯೆ 67,600ಕ್ಕೆ ಏರಿದೆ. ಹೀಗಾಗಿ ಸದ್ಯ ಎನ್‍ಡಿಎ ಬಳಿ ಒಟ್ಟು 5,24,920 ಮತಗಳಿವೆ. ರಾಷ್ಟ್ರಪತಿ ಆಯ್ಕೆಗೆ ಎನ್‍ಡಿಎಗೆ ಕೇವಲ 24,522 ಮತಗಳು ಕಡಿಮೆ ಬೀಳಲಿದೆ.

    ಒಂದು ವೇಳೆ ಬಿಜು ಜನತಾ ದಳ ಹಾಗೂ ಎಐಎಡಿಎಂಕೆ ಪಕ್ಷಗಳು ಬೆಂಬಲ ನೀಡಿದರೆ ಎನ್‍ಡಿಎ ಅಭ್ಯರ್ಥಿಯೇ ರಾಷ್ಟ್ರಪತಿಯಾಗಿ ಆಯ್ಕೆಯಾಗೋದು ಬಹುತೇಕ ಖಚಿತವಾಗಲಿದೆ.

    ಇದನ್ನೂ ಓದಿ:ರಾಷ್ಟ್ರಪತಿ ರೇಸ್‍ನಲ್ಲಿ ಇನ್ಫಿ ನಾರಾಯಣಮೂರ್ತಿ!