Tag: President of Ukraine

  • ನಿವಾಸದ ಮೇಲೆ ದಾಳಿ – ಉಕ್ರೇನ್ ಅಧ್ಯಕ್ಷ ಎಲ್ಲಿ ಅವಿತಿದ್ದಾರೆ?

    ನಿವಾಸದ ಮೇಲೆ ದಾಳಿ – ಉಕ್ರೇನ್ ಅಧ್ಯಕ್ಷ ಎಲ್ಲಿ ಅವಿತಿದ್ದಾರೆ?

    ಕೀವ್: ಉಕ್ರೇನ್ ರಷ್ಯಾ ಯುದ್ಧದ ನಡುವೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸಿ÷್ಕ ತನ್ನ ದೇಶದಿಂದ ಓಡಿ ಹೋಗಿದ್ದಾರೆ ಎಂದು ಸುದ್ದಿಯಾಗಿದೆ. ರಷ್ಯಾದ ಸ್ಟೇಟ್ ಡುಮಾ ಸ್ಪೀಕರ್ ವ್ಯಾಚೆಸ್ಲಾವ್ ಝೆಲೆನ್ಸ್ಕಿಪೋಲೆಂಡ್‌ನಲ್ಲಿ ಅಡಗಿದ್ದಾರೆ ಎಂಬ ಹೇಳಿಕೆ ನೀಡಿದ್ದರು.

    ಈ ಮಧ್ಯೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ನಿವಾಸ ಮರಿನ್ಸ್ಕಿ ಪ್ಯಾಲೆಸ್ ಮೇಲೂ ದಾಳಿ ನಡೆದಿದೆ ಎಂದು ವರದಿಯಾಗಿದೆ. ಇದೀಗ ಎಲ್ಲರಲ್ಲೂ ಕಾಡುತ್ತಿರುವ ಪ್ರಶ್ನೆ ಝೆಲೆನ್ಸ್ಕಿ ಎಲ್ಲಿದ್ದಾರೆ ಎಂಬುದು.

    ಝೆಲೆನ್ಸ್ಕಿ ದೇಶದಿಂದ ಪಲಾಯನ ಮಾಡಿದ್ದಾರೆ ಎಂಬ ವಿಷಯವನ್ನು ರಷ್ಯಾ ಹೇಳುತ್ತಿದ್ದಂತೆ ಇದನ್ನು ಝೆಲೆನ್ಸ್ಕಿ ಸುಳ್ಳು ಎಂದು ಸಾಬೀತು ಮಾಡಿದ್ದರು. ತಮ್ಮ ನಿವಾಸದ ಮುಂಭಾಗದಿಂದಲೇ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ್ದಾ ಹಾಗೂ ತಾವು ದೇಶವನ್ನು ತೊರೆಯುವುದಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಾನು ಕೀವ್‍ನಲ್ಲಿದ್ದೇನೆ, ತಪ್ಪಿಸಿಕೊಂಡು ಹೋಗಿಲ್ಲ: ಉಕ್ರೇನ್ ಅಧ್ಯಕ್ಷ

    ಯುದ್ಧ ಪ್ರಾರಂಭವಾಗುತ್ತಿದ್ದಂತೆ ಅಮೆರಿಕ ಉಕ್ರೇನ್ ಅಧ್ಯಕ್ಷನನ್ನು ಸ್ಥಳಾಂತರಿಸಲು ಮುಂದಾಗಿತ್ತು. ಆದರೆ ಅದನ್ನು ಝೆಲೆನ್ಸ್ಕಿ ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ. ಉಕ್ರೇನ್ ಅಧ್ಯಕ್ಷ ಕೀವ್ ತೊರೆದು ಪೋಲೆಂಡ್‌ನಲ್ಲಿ ಅಡಗಿದ್ದಾರೆ ಎಂಬ ವದಂತಿಯನ್ನು ಉಕ್ರೇನ್ ಸುಳ್ಳು ಎಂದಿದೆ.

    ಝೆಲೆನ್ಸ್ಕಿ ದೇಶವನ್ನು ತೊರೆಯುವ ವರದಿಗಳ ಮಧ್ಯೆ ಉಕ್ರೇನ್‌ನ ಮಾಜಿ ಪ್ರಧಾನಿ ಅಜರೋವ್, ಅಧ್ಯಕ್ಷ ಝೆಲೆನ್ಸ್ಕಿ ಕೀವ್‌ನ ಹೃದಯಭಾಗದಲ್ಲಿರುವ ಬಂಕರ್‌ನಲ್ಲಿರಬಹುದು ಎಂದಿದ್ದಾರೆ. ಏಕೆಂದರೆ ಈ ಬಂಕರ್ ಅಣ್ವಸ್ತ್ರ ದಾಳಿಗೂ ಹಾಳಾಗುವುದಿಲ್ಲ. ಕೀವ್‌ನಲ್ಲಿ ಸಾವಿರಾರು ಜನರು ತಮ್ಮ ಪ್ರಾಣ ಉಳಿಸಿಕೊಳ್ಳಲು ಬಂಕರ್‌ನಲ್ಲೇ ಅಡಗಿ ಕೂತಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಯೂರೋಪ್‌ನಲ್ಲಿ ಸೈಬರ್ ಅಟ್ಯಾಕ್ – ಇಂಟರ್‌ನೆಟ್ ಇಲ್ಲದೇ ಸಾವಿರಾರು ಜನ ಪರದಾಟ

    ಝೆಲೆನ್ಸ್ಕಿ ಶುಕ್ರವಾರ ರಾತ್ರಿ ತನ್ನ ಮೇಲೆ ರಷ್ಯಾ ಮಾರಣಾಂತಿಕ ದಾಳಿ ನಡೆಸಲು ಪ್ರಯತ್ನ ಪಟ್ಟಿದೆ ಎಂದಿದ್ದಾರೆ. ತಮ್ಮ ನಿವಾಸ ಮರಿನ್ಸ್ಕಿ ಅರಮನೆ ಮೇಲೆ ದಾಳಿ ಮಾಡಿರುವ ಫೋಟೋಗಳನ್ನು ಕೂಡಾ ಹಂಚಿಕೊಂಡಿದ್ದರು. ರಷ್ಯಾ ತನ್ನ ಮೇಲೆ ಮಾಡಿರುವ ದಾಳಿ ವಿಫಲವಾಗಿದೆ ಎಂದು ವ್ಯಂಗ್ಯವಾಡಿದ್ದರು.

    ಝೆಲೆನ್ಸ್ಕಿ ಶನಿವಾರ ಯುಎಸ್ ಡೆಮಾಕ್ರೆಟಿಕ್ ಹಾಗೂ ರಿಪಬ್ಲಿಕನ್ ಸೆನೆಟ್‌ಗಳೊಂದಿಗೆ ವರ್ಚುವಲ್ ಸಭೆ ನಡೆಸಲಿದ್ದಾರೆ ಎಂದು ವರದಿಗಳು ತಿಳಿಸಿವೆ.