Tag: President Poll

  • ನೂಪುರ್ ಹೇಳಿಕೆಯಿಂದ ಕೋಮು ಉದ್ವಿಗ್ನತೆ ಸೃಷ್ಟಿಸಿದ್ದು ಕೇವಲ ವೋಟಿಗಾಗಿ – ಸಿನ್ಹಾ ಗುಡುಗು

    ನೂಪುರ್ ಹೇಳಿಕೆಯಿಂದ ಕೋಮು ಉದ್ವಿಗ್ನತೆ ಸೃಷ್ಟಿಸಿದ್ದು ಕೇವಲ ವೋಟಿಗಾಗಿ – ಸಿನ್ಹಾ ಗುಡುಗು

    ನವದೆಹಲಿ: ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾರ ವಿವಾದಾತ್ಮಕ ಹೇಳಿಕೆಯಿಂದಾಗಿ ಕೋಮು ಉದ್ವಿಗ್ನತೆ ಸೃಷ್ಟಿಯಾಗಿದೆ. ಇದರಿಂದಾಗಿ ಉದಯಪುರ, ಅಮರಾವತಿ ಹತ್ಯೆಯ ನಂತರ ಬಂದ ಹೇಳಿಕೆಗಳು ಕೋಮು ಉದ್ವಿಗ್ನತೆ ಸೃಷ್ಟಿಸಿ ಮತ ಪಡೆಯುವ ಉದ್ದೇಶ ಹೊಂದಿವೆ. ಈ ಎಲ್ಲ ಕೋಮು ಗಲಭೆಗಳು ಸೃಷ್ಟಿಸಿದ್ದೂ ಮತ ಪಡೆಯುವ ಉದ್ದೇಶದಿಂದಲೇ ಎಂದು ರಾಷ್ಟ್ರಪತಿ  ಸ್ಥಾನಕ್ಕೆ ಸ್ಪರ್ಧಿಸಿರುವ ಪ್ರತಿ ಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ವಾಗ್ದಾಳಿ ನಡೆಸಿದ್ದಾರೆ.

    ರಾಷ್ಟ್ರಪತಿ ಚುನಾವಣೆಗೂ ಮುನ್ನ ಯಶವಂತ್ ಸಿನ್ಹಾ ಗುಜರಾತ್‌ನ ವಿಧಾನಸೌಧಕ್ಕೆ ಭೇಟಿ ನೀಡಿ ಕಾಂಗ್ರೆಸ್ ಮತ್ತು ಇತರ ಪಕ್ಷದ ನಾಯಕರ ಜೊತೆ ಸಭೆ ನಡೆಸಿದರು. ಬಳಿಕ ಅಮಾನತುಗೊಂಡಿರುವ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಹೇಳಿಕೆ ವಿವಾದ, ಉದಯಪುರ ಹತ್ಯೆ ಹಾಗೂ ಅಮರಾವತಿ ವೈದ್ಯನ ಹತ್ಯೆಗಳ ಕುರಿತಾಗಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಇದನ್ನೂ ಓದಿ: `ಪವಿತ್ರ’ಪ್ರೇಮ ವಿಫಲ – ಯುವಕ ಕೈಕೊಟ್ಟನೆಂದು ಕಾಲೇಜಿನಲ್ಲೇ ವಿದ್ಯಾರ್ಥಿನಿ ನೇಣಿಗೆ ಶರಣು

    ದೇಶದಲ್ಲಿ ಕೋಮು ಉದ್ವಿಗ್ನತೆಯನ್ನು ಸೃಷ್ಟಿಸಲು ಇದು ಯೋಜಿತ ಪಿತೂರಿಯಾಗಿದೆ. ಕೇವಲ ಮತಕ್ಕಾಗಿ ಕಾನೂನು ಸುವ್ಯವಸ್ಥೆ ಸೃಷ್ಟಿಸುವ ಷಡ್ಯಂತ್ರವಿದೆ. ಪ್ರಧಾನಿ ನರೇಂದ್ರ ಮೋದಿ ಮನ್ ಕಿ ಬಾತ್‌ನಲ್ಲಿ ಮಾತನಾಡುತ್ತಾರೆ. ಇಂತಹ ದೊಡ್ಡ ಘಟನೆಗಳು ಉದಯಪುರ, ಅಮರಾವತಿಯಲ್ಲಿ ನಡೆದಿವೆ. ಈವರೆಗೂ ಕೇಂದ್ರ ಸರ್ಕಾರದಿಂದ ಒಂದೇ ಒಂದು ಹೇಳಿಕೆಯನ್ನೂ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವರು ಅಥವಾ ರಕ್ಷಣಾ ಸಚಿವರು ಇಲ್ಲಿವರೆಗೆ ಯಾರೂ ಏನನ್ನೂ ಕೇಳಿಲ್ಲ. ಗುಜರಾತ್‌ನಲ್ಲಿ ಯಾವಾಗಲೂ ಸೆಕ್ಷನ್ 144 ಅಂತಹ ಪರಿಸ್ಥಿತಿ ಏಕೆ ಇದೆ. ತುರ್ತು ಪರಿಸ್ಥಿತಿಯ ಸಂದರ್ಭದಲ್ಲೂ ಇಂದಿನ ಸ್ಥಿತಿ ಇರಲಿಲ್ಲ ಎಂದು ವಿಷಾದಿಸಿದರು. ಇದನ್ನೂ ಓದಿ: ಫಸ್ಟ್ ನೈಟ್ ಅನ್ನೋದೇ ಇಲ್ಲ ಎಂದು ಹೇಳಿ ಪತಿಯನ್ನೇ ಬೆಚ್ಚಿ ಬೀಳಿಸಿದ ನಟಿ ಆಲಿಯಾ ಭಟ್

    ಇದೇ ವೇಳೆ ರಾಷ್ಟ್ರಪತಿ ಚುನಾವಣೆ ಕುರಿತು ಮಾತನಾಡಿದ ಸಿನ್ಹಾ, ಅಧ್ಯಕ್ಷೀಯ ಚುನಾವಣೆ ಬಹಳ ಮುಖ್ಯ. ರಬ್ಬರ್ ಸ್ಟಾಂಪ್ ಅಧ್ಯಕ್ಷರು ಅಲ್ಲಿ ಕುಳಿತರೆ ಏನೂ ಬದಲಾಗುವುದಿಲ್ಲ. ಈ ಚುನಾವಣೆಯಲ್ಲಿ ನಾವು ಯಾವ ಜಾತಿಯಿಂದ ಬಂದವರು ಎಂಬುದು ಮುಖ್ಯವಲ್ಲ. ಯಾವ ಸಿದ್ಧಾಂತ ಪ್ರತಿನಿಧಿಸುತ್ತೇವೆ ಎಂಬುದು ಮುಖ್ಯ ಎಂದು ಹೇಳಿದರು.

    Live Tv
    [brid partner=56869869 player=32851 video=960834 autoplay=true]

  • ರಾಷ್ಟ್ರಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ರೈತ

    ರಾಷ್ಟ್ರಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ರೈತ

    ನವದೆಹಲಿ: ಬಿಜೆಪಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ಗೆಲ್ಲುವುದು ಬಹುತೇಕ ಖಚಿತವಾಗಿದೆ. ಆದರೂ ವಿಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹ ಅವರು ತಮ್ಮ ಪ್ರಯತ್ನ ಮುಂದುವರಿಸಿದ್ದಾರೆ. ಪ್ರಬಲ ಅಭ್ಯರ್ಥಿಗಳ ನಡುವೆ ಪೈಟೋಟಿ ಏರ್ಪಟ್ಟಿರುವ ಹೊತ್ತಿನಲ್ಲಿ ರೈತರೊಬ್ಬರು ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸಿ ನಾಮಪತ್ರ ಸಲ್ಲಿಸಿದ್ದಾರೆ.

    ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿರುವ ಉತ್ತರ ಪ್ರದೇಶದ ಚಂದೌಲಿ ಜಿಲ್ಲೆಯ ರೈತ ವಿನೋದ್ ಕುಮಾರ್ ಯಾದವ್ ತನಗೆ ಹಲವು ಸಂಸದರು, ಶಾಸಕರು ಹಾಗೂ ಸಚಿವರ ಬೆಂಬಲ ಇರುವುದಾಗಿಯೂ ಅವರು ಹೇಳಿಕೊಂಡಿದ್ದಾರೆ.

    10ನೇ ತರಗತಿ ವರೆಗೆ ಓದಿಕೊಂಡಿರುವ ವಿನೋದ್ ಕುಮಾರ್ ಕೃಷಿ ಚಟುವಟಿಕೆ ನಡೆಸುತ್ತಿದ್ದಾರೆ. ಇದರೊಂದಿಗೆ ರಾಜಕೀಯ ಚಟುವಟಿಕೆಗಳಲ್ಲೂ ತನ್ನನ್ನು ತಾನು ತೊಡಗಿಸಿಕೊಂಡಿದ್ದ ವಿನೋದ್ ಇದೀಗ ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸಿದ್ದಾರೆ. ಇದನ್ನೂ ಓದಿ: ರಿಲಯನ್ಸ್ ಜಿಯೋ ನಿರ್ದೇಶಕ ಸ್ಥಾನದಿಂದ ಕೆಳಗಿಳಿದ ಮುಖೇಶ್ ಅಂಬಾನಿ – ಮಗ ಆಕಾಶ್‌ಗೆ ಪಟ್ಟ

    ಚುನಾವಣೆಗೆ ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿರುವ ಅವರು, 2005-06 ರಿಂದ ನಾನು ಸಕ್ರೀಯ ರಾಜಕಾರಣದಲ್ಲಿದ್ದೇನೆ. ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲೂ ಸ್ಪರ್ಧಿಸಿದ್ದೇನೆ. ಅಷ್ಟೇ ಅಲ್ಲದೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಸಮೀಪದ ಗ್ರಾಮದವನೇ ಆಗಿದ್ದೇನೆ. ಹೀಗಾಗಿ ತನ್ನ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ತಾನು 10 ರಾಜ್ಯಗಳ ನಾಯಕರು ಹಾಗೂ ಪಕ್ಷಗಳ ಜೊತೆ ಮಾತುಕತೆ ನಡೆಸಿದ್ದೇನೆ. ಎಲ್ಲರೂ ಬೆಂಬಲ ಸೂಚಿಸಿದ್ದಾರೆ. ಈ ಎಲ್ಲ ಬೆಳವಣಿಗೆಗಳಿಂದ ನನ್ನ ಗೆಲುವು ಖಚಿತ. ಅಷ್ಟೇ ಅಲ್ಲ ತಾನು ಗೆದ್ದ ಬಳಿತ ತನ್ನ ಕಲಾನಿ ಗ್ರಾಮವನ್ನು ವಿಶ್ವವಿಖ್ಯಾತ ಮಾಡುತ್ತೇನೆ ಬೀಗಿದ್ದಾರೆ. ಇದನ್ನೂ ಓದಿ: ನೂಪುರ್‌ ಶರ್ಮಾಗೆ ಬೆಂಬಲ ವ್ಯಕ್ತಪಡಿಸಿದ್ದಕ್ಕೆ ಮುಸ್ಲಿಂ ಯುವಕರಿಂದ ಟೈಲರ್‌ ಶಿರಚ್ಛೇದ

    ನಾಮಪತ್ರ ಸಲ್ಲಿಕೆ ನಾಳೆಗೆ ಕೊನೆ: ಈವರೆಗೆ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು, ವಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹ ಸೇರಿದಂತೆ 56 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಜೂನ್ 29ಕ್ಕೆ ನಾಮಪತ್ರ ಸಲ್ಲಿಕೆ ಅಂತಿಮವಾಗಲಿದ್ದು, ಜುಲೈ 2ರ ಒಳಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ. ಜುಲೈ 18ಕ್ಕೆ ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಜುಲೈ 21ಕ್ಕೆ ಎತ ಎಣಿಕೆ ನಡೆಯಲಿದ್ದು, ಫಲಿತಾಂಶ ಪ್ರಕಟಗೊಳ್ಳಲಿದೆ.

    2017ರಲ್ಲಿ ರಾಷ್ಟ್ರಪತಿ ಚುನಾವಣೆಗೆ 106 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು.

    Live Tv