Tag: presidential candidate

  • ದೇಶಕ್ಕೆ ಮಾತಾಡುವ ರಾಷ್ಟ್ರಪತಿ ಬೇಕು; ನಾನು ಗೆದ್ದರೆ ದೇಶದ್ರೋಹ ಕಾನೂನು ರದ್ದು ಮಾಡ್ತೀನಿ – ಯಶವಂತ್‌ ಸಿನ್ಹಾ

    ದೇಶಕ್ಕೆ ಮಾತಾಡುವ ರಾಷ್ಟ್ರಪತಿ ಬೇಕು; ನಾನು ಗೆದ್ದರೆ ದೇಶದ್ರೋಹ ಕಾನೂನು ರದ್ದು ಮಾಡ್ತೀನಿ – ಯಶವಂತ್‌ ಸಿನ್ಹಾ

    ಬೆಂಗಳೂರು: ದೇಶಕ್ಕೆ ಮಾತನಾಡುವ ರಾಷ್ಟ್ರಪತಿ ಬೇಕು. ನಾನು ಗೆದ್ದರೆ ದೇಶದ್ರೋಹ ಕಾನೂನು ರದ್ದು ಮಾಡುತ್ತೇನೆ ಎಂದು ರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿ ಯಶವಂತ್‌ ಸಿನ್ಹಾ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದೇಶಕ್ಕೆ ಮೌನಿಯಾಗಿರುವ ಅಥವಾ ರಬ್ಬರ್‌ ಸ್ಟ್ಯಾಂಪ್‌ ರಾಷ್ಟ್ರಪತಿ ಅಗತ್ಯವಿಲ್ಲ. ಮಾತನಾಡುವ ರಾಷ್ಟ್ರಪತಿ ಬೇಕು ಎಂದು ಸಿನ್ಹಾ ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಸಿದ್ದರಾಮೋತ್ಸವ ನಡೆಸುವುದು ತಪ್ಪಲ್ಲ: ಜಿ. ಪರಮೇಶ್ವರ್

    ಎರಡು ದಿನಗಳ ಹಿಂದೆ ಸುಪ್ರೀಂ ಕೋರ್ಟ್ ಕೆಲ ಅಭಿಪ್ರಾಯ ವ್ಯಕ್ತಪಡಿಸಿದೆ. ನೂಪುರ್ ಶರ್ಮಾ ಬಗ್ಗೆ ಸುಪ್ರೀಂ ಕೋರ್ಟ್ ಕೆಲವು ಅಭಿಪ್ರಾಯ ಹೇಳಿದೆ. ನ್ಯಾಯಾಂಗವು ಸಂವಿಧಾನಕ್ಕೆ ಉತ್ತರದಾಯಿ ಆಗಿರಬೇಕು ಅಂತಾ ಕೋರ್ಟ್ ಹೇಳಿದೆ. ನ್ಯಾಯಾಲಯದ ಅಭಿಪ್ರಾಯವನ್ನು ನಾನು ಸ್ವಾಗತಿಸುತ್ತೇನೆ. ಆದರೆ ಸೋಷಿಯಲ್ ಮೀಡಿಯಾದಲ್ಲಿ ಸುಪ್ರೀಂ ಕೋರ್ಟ್‌ನ ಅಭಿಪ್ರಾಯ ಬಗ್ಗೆ ಟೀಕೆ-ಟಿಪ್ಪಣಿ ಮಾಡಲಾಗುತ್ತಿದೆ. ಕೆಟ್ಟದಾಗಿ ಟೀಕೆ ಮಾಡಲಾಗುತ್ತಿದೆ. ನ್ಯಾಯಾಂಗದ ಮೇಲಿನ ಇಂತಹ ಟೀಕೆ ಪ್ರಜಾಪ್ರಭುತ್ವಕ್ಕೆ ಕಳಂಕ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಸುಪ್ರೀಂ ಕೋರ್ಟ್ ತಮಗೆ ಅನುಕೂಲಕರ ತೀರ್ಪು ಕೊಟ್ಟರೆ ಸಂಭ್ರಮ ಪಡುತ್ತಾರೆ. ಆದರೆ ತಮಗೆ ಬೇಡವಾದ ತೀರ್ಪು, ಅಭಿಮತ ಬಂದರೆ ತೆಗಳುವುದು ಸರಿಯಲ್ಲ. ಇದು ಪ್ರಜಾಪ್ರಭುತ್ವಕ್ಕೆ ಅಪಾಯಕರಿ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಜು.12ಕ್ಕೆ ಬೆಂಗಳೂರಿನ ಚಾಮರಾಜಪೇಟೆ ಬಂದ್‌

    ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಇಡಿ, ಸಿಬಿಐ, ಐಟಿ ದುರ್ಬಳಕೆ‌ ಆಗುತ್ತಿವೆ. ವಿಪಕ್ಷಗಳ ನಾಯಕರು ಮಾತಾಡುವ ಪರಿಸ್ಥಿತಿ ಇಲ್ಲ. ಯಾರಾದರೂ ಏನಾದರೂ ಮಾತಾಡಿದರೆ ತನಿಖಾ ಸಂಸ್ಥೆಗಳಿಂದ ನೋಟಿಸ್ ಬರುತ್ತೆ.‌ ಮಹಾರಾಷ್ಟ್ರ, ಕರ್ನಾಟಕ, ಮಧ್ಯಪ್ರದೇಶ, ಗೋವಾ, ಅರುಣಾಚಲ ಪ್ರದೇಶದಲ್ಲಿ ಏನೇನಾಗಿದೆ ಅಂತಾ ಎಲ್ಲರಿಗೂ ಗೊತ್ತಿದೆ. ಹಾಲಿ ಸರ್ಕಾರಗಳನ್ನು ಬೀಳಿಸುವ ಕೆಲಸ ಪ್ರಜಾಪ್ರಭುತ್ವ ವಿರೋಧಿ. ಬಿಜೆಪಿಯು ರಾಜ್ಯಗಳಲ್ಲಿ ಬೇರೆ ಸರ್ಕಾರಗಳನ್ನು ಉರುಳಿಸುವ ಕೆಲಸ ಮಾಡುತ್ತಿರುವುದು ಸಮ್ಮತವಲ್ಲ ಎಂದು ಹೇಳಿದ್ದಾರೆ.

    Live Tv

  • ರಾಷ್ಟ್ರಪತಿ ಚುನಾವಣೆ – ಬಿಜೆಪಿಯಿಂದ ಅಭ್ಯರ್ಥಿಯಾಗಿ ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮು ಆಯ್ಕೆ

    ರಾಷ್ಟ್ರಪತಿ ಚುನಾವಣೆ – ಬಿಜೆಪಿಯಿಂದ ಅಭ್ಯರ್ಥಿಯಾಗಿ ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮು ಆಯ್ಕೆ

    ನವದೆಹಲಿ: ಬಿಜೆಪಿ ನೇತೃತ್ವದ ಎನ್‌ಡಿಎ ಮುಂಬರುವ ಚುನಾವಣೆಗೆ ರಾಷ್ಟ್ರಪತಿ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರ ಹೆಸರನ್ನು ಘೋಷಿಸಿದೆ.

    ಬಿಜೆಪಿ ಹಿರಿಯ ಮುಖಂಡರಾದ ದ್ರೌಪದಿ ಮುರ್ಮು ಅವರು 2015-21ರ ಅವಧಿಯಲ್ಲಿ ಜಾರ್ಖಂಡ್‌ನ ರಾಜ್ಯಪಾಲರಾಗಿದ್ದರು. 16ನೇ ರಾಷ್ಟ್ರಪತಿ ಚುನಾವಣೆಯ ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಇದನ್ನೂ ಓದಿ: ವಿಶ್ವಸಂಸ್ಥೆಗೆ ಭಾರತದ ಕಾಯಂ ಪ್ರತಿನಿಧಿಯಾಗಿ ರುಚಿರಾ ಕಾಂಬೋಜ್ ನೇಮಕ

    ದ್ರೌಪದಿ ಮುರ್ಮು ಅವರು ಒಡಿಸ್ಸಾದ ಮಾಯರ್ಭಾಂಜ್‌ ಜಿಲ್ಲೆಯವರಾಗಿದ್ದಾರೆ. ಇವರು ಬುಡಕಟ್ಟು ಜನಾಂಗ ಮೂಲದ ಮಹಿಳೆಯಾಗಿದ್ದು, ಪಕ್ಷದ ನೇತೃತ್ವದಲ್ಲಿ ನಾನಾ ಸ್ಥಾನಗಳನ್ನು ಅಲಂಕರಿಸಿ ಸೇವೆ ಸಲ್ಲಿಸಿದ್ದಾರೆ.

    ಇಂದು ಸಂಜೆಯಷ್ಟೇ ವಿಪಕ್ಷಗಳು ಅಭ್ಯರ್ಥಿಯಾಗಿ ಯಶವಂತ ಸಿನ್ಹಾ ಆಯ್ಕೆ ಮಾಡಿದ್ದರು. ಇದರ ಬೆನ್ನಲ್ಲೇ ಎನ್‌ಡಿಎ ಒಕ್ಕೂಟದಿಂದ ಅಭ್ಯರ್ಥಿ ಘೋಷಿಸಲಾಗಿದೆ. ಜುಲೈ 18 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ.

    `ದ್ರೌಪದಿ ಮುರ್ಮು ಅವರು ಸಮಾಜ ಸೇವೆಗೆ ಮತ್ತು ಬಡವರು, ದೀನದಲಿತರು ಹಾಗೂ ಸಮಾಜದ ಅಂಚಿನಲ್ಲಿರುವವರ ಸಬಲೀಕರಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ. ಅವರು ಶ್ರೀಮಂತ ಆಡಳಿತಾತ್ಮಕ ಅನುಭವವನ್ನು ಹೊಂದಿದ್ದಾರೆ. ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು. ಅವರು ನಮ್ಮ ರಾಷ್ಟ್ರದ ಶ್ರೇಷ್ಠ ರಾಷ್ಟ್ರಪತಿಯಾಗುತ್ತಾರೆ ಎಂಬ ವಿಶ್ವಾಸ ನನಗಿದೆʼ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್‌ ಮಾಡಿದ್ದಾರೆ.

    Live Tv

  • ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸಲ್ಲ: ಫಾರೂಕ್ ಅಬ್ದುಲ್ಲಾ

    ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸಲ್ಲ: ಫಾರೂಕ್ ಅಬ್ದುಲ್ಲಾ

    ಶ್ರೀನಗರ: ರಾಷ್ಟ್ರಪತಿ ಸ್ಥಾನದ ಚುನಾವಣೆಗೆ ಸ್ಪರ್ಧಿಸುವ ಪ್ರಸ್ತಾಪವನ್ನು ನ್ಯಾಷನಲ್ ಕಾನ್ಪರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಶನಿವಾರ ತಿರಸ್ಕರಿಸಿದ್ದಾರೆ.

    ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜಂಟಿ ವಿರೋಧ ಪಕ್ಷದ ಅಭ್ಯರ್ಥಿಯಾಗಿ ಫಾರೂಕ್ ಅಬ್ದುಲ್ಲಾ ಅವರ ಹೆಸರನ್ನು ಸೂಚಿಸಿದ್ದರು. ಆದರೆ ಫಾರೂಕ್ ಅಬ್ದುಲ್ಲಾ ಈ ಪ್ರಸ್ತಾಪವನ್ನು ನಿರಾಕರಿಸಿದ್ದಾರೆ ಹಾಗೂ ಜಮ್ಮು-ಕಾಶ್ಮೀರಕ್ಕೆ ಕೊಡುಗೆ ನೀಡಲು ಬಯಸುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: ಅಗ್ನಿಫಥ್‌ನಿಂದ ಹೆಚ್ಚಿದ ಕಿಚ್ಚು- ನಾಲ್ಕೇ ದಿನಗಳಲ್ಲಿ 200 ಕೋಟಿ ಆಸ್ತಿ ನಷ್ಟ

    ಜಮ್ಮು ಮತ್ತು ಕಾಶ್ಮೀರದ ಈಗಿನ ಪರಿಸ್ಥಿತಿಯಲ್ಲಿ ನನ್ನ ಸಹಕಾರದ ಅಗತ್ಯವಿದೆ. ಮುಂದೆ ನನಗೆ ರಾಜಕೀಯದಲ್ಲಿ ಹಾಗೂ ಸೇವೆಯಲ್ಲಿ ಹೇರಳ ಅವಕಾಶವಿದೆ. ಹೀಗಾಗಿ ನಾನು ರಾಷ್ಟ್ರಪತಿ ಚುನಾವಣೆಗೆ ನನ್ನ ಹೆಸರನ್ನು ಹಿಂಪಡೆಯಲು ಬಯಸುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಅಭಾವ – ಮುಂದಿನ ವಾರದಿಂದಲೇ ಶಾಲೆಗಳು ಬಂದ್

    ಕೆಲವು ದಿನಗಳ ಹಿಂದೆ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ(ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸುವ ಪ್ರಸ್ತಾಪದಿಂದ ಹಿಂದೇಟು ಹಾಕಿದ್ದರು. ಇದೀಗ ಫಾರೂಕ್ ಅಬ್ದುಲ್ಲಾ ಸ್ಪರ್ಧೆಗೆ ಹಿಂದೆ ಸರಿದಿದ್ದಾರೆ.

    Live Tv

  • ಮಾಜಿ ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಯುಪಿಎ ರಾಷ್ಟ್ರಪತಿ ಅಭ್ಯರ್ಥಿ

    ಮಾಜಿ ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಯುಪಿಎ ರಾಷ್ಟ್ರಪತಿ ಅಭ್ಯರ್ಥಿ

    ನವದೆಹಲಿ: ಎನ್‍ಡಿಎ ರಾಷ್ಟ್ರಪತಿ ಅಭ್ಯರ್ಥಿ ರಾಮನಾಥ್ ಕೋವಿಂದ್ ಅವರಿಗೆ ಪ್ರತಿಸ್ಪರ್ಧಿಯಾಗಿ ಯುಪಿಎ ಮೈತ್ರಿಕೂಟ ಮಾಜಿ ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಅವರನ್ನು ಕಣಕ್ಕೆ ಇಳಿಸಲು ತೀರ್ಮಾನ ಕೈಗೊಂಡಿದೆ.

    ರಾಷ್ಟ್ರಪತಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವ ಸಂಬಂಧವಾಗಿ ಗುರುವಾರ ಸಂಜೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಯುಪಿಎ ಮಿತ್ರಪಕ್ಷಗಳ ಸಭೆ ನಡೆದಿತ್ತು. ಈ ಸಭೆಯಲ್ಲಿ ಮೀರಾ ಕುಮಾರ್ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಲು ತೀರ್ಮಾನಿಸಲಾಯಿತು.

    ಸಿಪಿಎಂ ಪಕ್ಷ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಸೂಕ್ತ ಅಭ್ಯರ್ಥಿ ಎಂದು ಹೇಳಿತ್ತು. ಆದರೆ ರಾಮನಾಥ್ ಕೋವಿಂದ್ ದಲಿತ ಅಭ್ಯರ್ಥಿ ಆಗಿರುವ ಕಾರಣ ಅವರ ಮುಂದೆ ಸ್ಪರ್ಧಿಸಲು ಕಾಂಗ್ರೆಸ್ ಈಗ ದಲಿತರಾಗಿರುವ ಮೀರಾ ಕುಮಾರ್ ಅವರನ್ನು ಇಳಿಸಿದೆ.

    ರಾಮನಾಥ್ ಕೋವಿಂದ್ ದಲಿತರಾಗಿದ್ದರೂ ಆರ್‍ಎಸ್‍ಎಎಸ್ ಹಿನ್ನೆಲೆಯವರಾಗಿದ್ದಾರೆ. ಹೀಗಾಗಿ ಎನ್‍ಡಿಎ ಆಯ್ಕೆಯನ್ನು ನಾವು ಒಪ್ಪಲು ಸಿದ್ದರಿಲ್ಲ ಎಂದು ಎಡಪಕ್ಷಗಳು ತಿಳಿಸಿತ್ತು.