Google & Microsoft very disproportionately donate to the Democratic Party.
Between them, they control close to 100% of web browsers and search. Even with the best of intentions, they can’t help but introduce bias. https://t.co/qGqxDPFuB8
ಯಾರಿಗೆ ಎಷ್ಟು?
ಡೆಮಾಕ್ರಟಿಕ್ ಅಭ್ಯರ್ಥಿ ಕಮಲಾ ಹ್ಯಾರಿಸ್‌ಗೆ ಗೂಗಲ್ 14,64,292 ಡಾಲರ್, ಮೈಕ್ರೋಸಾಫ್ಟ್ 7,43,045 ಡಾಲರ್, ಬ್ರೌನ್ ಆಂಡ್ ಬ್ರೌನ್ 3,24,568 ಡಾಲರ್ ನೀಡಿದೆ.
ರಿಪಬ್ಲಿಕನ್ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರಿಗೆ ಅಮೆರಿಕನ್ ಏರ್‌ಲೈನ್ಸ್ 1,34,174 ಡಾಲರ್, ವಾಲ್‌ಮಾರ್ಟ್ 83,908 ಡಾಲರ್, ಬೋಯಿಂಗ್ 82,761 ಡಾಲರ್ ನೀಡಿದೆ.
ಈ ವಿಚಾರವನ್ನು ಎಕ್ಸ್ ಮುಖ್ಯಸ್ಥ ಎಲೋನ್ ಮಸ್ಕ್ (Elon Musk) ಪ್ರಸ್ತಾಪಿಸಿ, ಗೂಗಲ್ ಮತ್ತು ಮೈಕ್ರೋಸಾಫ್ಟ್ ಡೆಮಾಕ್ರಟಿಕ್ ಪಕ್ಷಕ್ಕೆ ಭಾರೀ ದೇಣಿಗೆ ನೀಡಿವೆ. ಈ ಎರಡೂ ಕಂಪನಿಗಳು ಸುಮಾರು 100% ಹುಡುಕಾಟವನ್ನು ನಿಯಂತ್ರಿಸುತ್ತವೆ. ಇವರು ಸಹಾಯ ಮಾಡದೇ ಇದ್ದರೂ ಪಕ್ಷಪಾತವನ್ನು ಪರಿಚಯಿಸಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನವದೆಹಲಿ: ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರ ಆಯ್ಕೆಗೆ ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಅಕ್ಟೋಬರ್ 17ಕ್ಕೆ ಕಾಂಗ್ರೆಸ್ ಅಧ್ಯಕ್ಷರ ಚುನಾವಣಾ ಪ್ರಕ್ರಿಯೆ ನಡೆದರೆ, ಅಕ್ಟೋಬರ್ 19ರಂದು ಮತ ಎಣಿಕೆ ನಡೆಯಲಿದೆ ಎಂದು ವರದಿಯಾಗಿದೆ.
ಚುನಾವಣಾ ಪ್ರಕ್ರಿಯೆಯ ಅಧಿಸೂಚನೆಯನ್ನು ಸೆಪ್ಟೆಂಬರ್ 22ರಂದು ಬಿಡುಗಡೆ ಮಾಡಲಾಗುತ್ತದೆ. ಸೆಪ್ಟೆಂಬರ್ 24ರಂದು ನಾಮಪತ್ರ ಸಲ್ಲಿಕೆ ಪ್ರಾರಂಭವಾಗಲಿದ್ದು, ಸಪ್ಟೆಂಬರ್ 30 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಲಿದೆ ಎಂದು ವರದಿಗಳು ತಿಳಿಸಿದೆ. ಇದನ್ನೂ ಓದಿ: Hijab Row: ನಾಳೆ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ವಿಚಾರಣೆ
ಕಾಂಗ್ರೆಸ್ ಅಧ್ಯಕ್ಷರಾಗಲು ರಾಹುಲ್ ಗಾಂಧಿ ನಿರಾಕರಿಸಿದ್ದಾರೆ. ಆ ಸ್ಥಾನಕ್ಕೆ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಅವರನ್ನು ಆಯ್ಕೆ ಮಾಡಬಹುದು ಎನ್ನುವ ಸುದ್ದಿ ಹರಿದಾಡುತ್ತಿದೆ. ಇದರ ಮಧ್ಯೆ ಕಾಂಗ್ರೆಸ್ ಹಿರಿಯ ನಾಯಕರು ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದಾರೆ. ಈಚೆಗಷ್ಟೇ ಗುಲಾಂ ನಬಿ ಆಜಾದ್ ಅವರನ್ನು ಕಾಂಗ್ರೆಸ್‌ನ ಎಲ್ಲಾ ಸ್ಥಾನಗಳಿಗೂ ರಾಜೀನಾಮೆ ನೀಡಿದ್ದರು. ಇದನ್ನೂ ಓದಿ: ‘ಕೈ’ ನಾಯಕರು ಪಕ್ಷ ಬಿಟ್ಟು ಹೋಗಲು ನಾಯತ್ವದಲ್ಲಿರುವ ದುರಂಹಕಾರ ಕಾರಣ: ಪ್ರಹ್ಲಾದ್ ಜೋಶಿ
Live Tv
[brid partner=56869869 player=32851 video=960834 autoplay=true]
ನವದೆಹಲಿ: ಪ್ರತಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ಅವರು ರಾಷ್ಟ್ರಪತಿ ಚುನಾವಣೆ ಸೋಲಿನ ಬೆನ್ನಲ್ಲೇ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದರು.
ಪ್ರಕಟಣೆಯಲ್ಲಿ ಏನಿದೆ?
2022ರ ರಾಷ್ಟ್ರಪತಿ ಚುನಾವಣೆಯಲ್ಲಿ ಜಯಗಳಿಸಿದ ದ್ರೌಪದಿ ಮುರ್ಮು ಅವರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ಭಾರತದ 15ನೇ ರಾಷ್ಟ್ರಪತಿಯಾಗಿ ಅವರು ಭಯಪಡದೆ ಸಂವಿಧಾನದ ಪಾಲಕರಾಗಿ ಕಾರ್ಯನಿರ್ವಹಿಸುತ್ತಾರೆ ಎಂದು ನಾನು ಭಾವಿಸುತ್ತೇನೆ. ನಿಜವಾಗಿ, ಪ್ರತಿಯೊಬ್ಬ ಭಾರತೀಯನೂ ಇದನ್ನೇ ಆಶಿಸುತ್ತಾರೆ. ನಾನು ದ್ರೌಪದಿ ಮುರ್ಮು ಅವರಿಗೆ ಶುಭ ಹಾರೈಕೆಗಳನ್ನು ಸಲ್ಲಿಸುತ್ತೇನೆ. ಇದನ್ನೂ ಓದಿ: 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ – ದೇಶದ ಪ್ರಥಮ ಪ್ರಜೆಯಾದ ಬುಡಕಟ್ಟು ಮಹಿಳೆ
ಈ ಚುನಾವಣೆಯಲ್ಲಿ ನನ್ನನ್ನು ಒಮ್ಮತದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದಕ್ಕಾಗಿ ವಿರೋಧ ಪಕ್ಷದ ರಾಜಕೀಯ ಪಕ್ಷಗಳ ನಾಯಕರಿಗೆ ನಾನು ಪ್ರಾಮಾಣಿಕವಾಗಿ ಧನ್ಯವಾದ ಹೇಳುತ್ತೇನೆ. ನನಗೆ ಮತ ಹಾಕಿದ ಎಲೆಕ್ಟೋರಲ್ ಕಾಲೇಜಿನ ಎಲ್ಲ ಸದಸ್ಯರಿಗೂ ನಾನು ಧನ್ಯವಾದ ಹೇಳುತ್ತೇನೆ. ಭಗವದ್ಗೀತೆಯಲ್ಲಿ ಭಗವಾನ್ ಕೃಷ್ಣನು ಬೋಧಿಸಿದ ಕರ್ಮಯೋಗದ ತತ್ವದಿಂದ ಮಾರ್ಗದರ್ಶಿಸಲ್ಪಟ್ಟ ‘ಫಲವನ್ನು ನಿರೀಕ್ಷಿಸದೆ ನಿಮ್ಮ ಕರ್ತವ್ಯವನ್ನು ಮಾಡಿ’ ವಿರೋಧ ಪಕ್ಷಗಳ ಪ್ರಸ್ತಾಪವನ್ನು ನಾನು ಸ್ವೀಕರಿಸಿದೆ. ನನ್ನ ದೇಶದ ಮೇಲಿನ ಪ್ರೀತಿಯಿಂದ ನಾನು ನನ್ನ ಕರ್ತವ್ಯವನ್ನು ಆತ್ಮಸಾಕ್ಷಿಯಾಗಿ ನಿರ್ವಹಿಸಿದ್ದೇನೆ.
ಚುನಾವಣೆಯ ಫಲಿತಾಂಶದ ಹೊರತಾಗಿಯೂ, ಇದು ಭಾರತೀಯ ಪ್ರಜಾಪ್ರಭುತ್ವಕ್ಕೆ ಎರಡು ಪ್ರಮುಖ ರೀತಿಯಲ್ಲಿ ಪ್ರಯೋಜನವನ್ನು ನೀಡಿದೆ ಎಂದು ನಾನು ನಂಬುತ್ತೇನೆ. ಮೊದಲನೆಯದಾಗಿ, ಇದು ಹೆಚ್ಚಿನ ವಿರೋಧ ಪಕ್ಷಗಳನ್ನು ಸಾಮಾನ್ಯ ವೇದಿಕೆಗೆ ತಂದಿತು. ಅಧ್ಯಕ್ಷೀಯ ಚುನಾವಣೆಯ ಆಚೆಗೆ ಪ್ರತಿಪಕ್ಷಗಳ ಏಕತೆಯನ್ನು ಮುಂದುವರಿಸಲು – ವಾಸ್ತವವಾಗಿ, ಮತ್ತಷ್ಟು ಬಲಪಡಿಸಲು ನಾನು ಅವರಿಗೆ ಶ್ರದ್ಧೆಯಿಂದ ಮನವಿ ಮಾಡುತ್ತೇನೆ. ಉಪಾಧ್ಯಕ್ಷರ ಚುನಾವಣೆಯಲ್ಲೂ ಅದು ಸ್ಪಷ್ಟವಾಗಿ ಗೋಚರಿಸಬೇಕು.
ಎರಡನೆಯದಾಗಿ, ನನ್ನ ಚುನಾವಣಾ ಪ್ರಚಾರದ ಸಂದರ್ಭದಲ್ಲಿ, ರಾಷ್ಟ್ರ ಮತ್ತು ಸಾಮಾನ್ಯ ಜನರ ಮುಂದೆ ಪ್ರಮುಖ ವಿಷಯಗಳ ಬಗ್ಗೆ ವಿರೋಧ ಪಕ್ಷಗಳ ಅಭಿಪ್ರಾಯಗಳು, ಕಾಳಜಿಗಳು ಮತ್ತು ಬದ್ಧತೆಗಳನ್ನು ಎತ್ತಿ ತೋರಿಸಲು ನಾನು ಪ್ರಯತ್ನಿಸಿದೆ. ನಿರ್ದಿಷ್ಟವಾಗಿ ಹೇಳುವುದಾದರೆ, ವಿರೋಧ ಪಕ್ಷಗಳು ಮತ್ತು ಅವರ ನಾಯಕರ ವಿರುದ್ಧ ಇಡಿ, ಸಿಬಿಐ, ಆದಾಯ ತೆರಿಗೆ ಇಲಾಖೆ ಮತ್ತು ರಾಜ್ಯಪಾಲರ ಕಚೇರಿಯ ಅಬ್ಬರದ ಮತ್ತು ಅತಿರೇಕದ ಶಸ್ತ್ರಾಸ್ತ್ರಗಳ ಬಗ್ಗೆ ನಾನು ತೀವ್ರ ಕಳವಳ ವ್ಯಕ್ತಪಡಿಸಿದೆ. ಇದನ್ನೂ ಓದಿ: ನೆರೆ ರಾಜ್ಯ ಕೇರಳದಲ್ಲಿ ಮಂಕಿಪಾಕ್ಸ್ ಪ್ರಕರಣ; ಕರ್ನಾಟಕದಲ್ಲಿ ಹೈ ಅಲರ್ಟ್ – ಮಾರ್ಗಸೂಚಿ ಪ್ರಕಟ
ಈ ಸಂಸ್ಥೆಗಳನ್ನು ಇಂಜಿನಿಯರ್‌ಗಳ ಪಕ್ಷಾಂತರ ಮತ್ತು ಪ್ರತಿಪಕ್ಷಗಳ ಆಡಳಿತದಲ್ಲಿರುವ ರಾಜ್ಯ ಸರ್ಕಾರಗಳನ್ನು ಉರುಳಿಸಲು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇಷ್ಟು ಪ್ರಮಾಣದ ರಾಜಕೀಯ ಭ್ರಷ್ಟಾಚಾರವನ್ನು ಭಾರತ ಎಂದೂ ಕಂಡಿರಲಿಲ್ಲ. ಇದು, ಧ್ರುವೀಕರಣದ ವಿಷಪೂರಿತ ರಾಜಕೀಯದೊಂದಿಗೆ ಸೇರಿಕೊಂಡು, ಭಾರತದಲ್ಲಿ ಪ್ರಜಾಪ್ರಭುತ್ವ ಮತ್ತು ಕೋಮು ಸೌಹಾರ್ದಕ್ಕೆ ಗಂಭೀರ ಅಪಾಯವನ್ನುಂಟುಮಾಡುತ್ತದೆ.
ನಾನು ಭೇಟಿ ನೀಡಿದ ಎಲ್ಲ ರಾಜ್ಯಗಳ ಸಿಎಂ, ನಾಯಕರು, ಸಂಸದರು ಮತ್ತು ವಿರೋಧ ಪಕ್ಷಗಳಿಗೆ ಸೇರಿದ ಶಾಸಕರಲ್ಲಿ ನನ್ನ ಅಭಿಪ್ರಾಯಗಳು ಬಲವಾದ ಅನುರಣನವನ್ನು ಕಂಡುಕೊಂಡಿದ್ದಕ್ಕಾಗಿ ನನಗೆ ಸಂತೋಷವಾಗಿದೆ. ಸಾಮಾನ್ಯ ಜನರು ಕೂಡ ಈ ಅಭಿಪ್ರಾಯಗಳನ್ನು ಬೆಂಬಲಿಸಿದ್ದಾರೆ.
ಅಂತಿಮವಾಗಿ, ನನ್ನ ದೇಹದಲ್ಲಿ ಕೊನೆಯ ಉಸಿರು ಇರುವವರೆಗೂ, ನಾನು ನಂಬಿದ ಉದ್ದೇಶಕ್ಕಾಗಿ ಸೇವೆ ಸಲ್ಲಿಸುವುದನ್ನು ಮುಂದುವರಿಸುತ್ತೇನೆ ಎಂದು ಪ್ರತಿಜ್ಞೆ ಮಾಡಿದರು.
Live Tv
[brid partner=56869869 player=32851 video=960834 autoplay=true]
ನವದೆಹಲಿ: ದೇಶದ ಪ್ರಥಮ ಪ್ರಜೆಯಾಗಿ ಇದೇ ಮೊದಲ ಬಾರಿಗೆ ಬುಡಕಟ್ಟು ಮಹಿಳೆಯೊಬ್ಬರು ಆಯ್ಕೆಯಾಗಿದ್ದಾರೆ. ಎನ್‍ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ನಿರೀಕ್ಷೆಗಿಂತ ಹೆಚ್ಚು ಮತ ಪಡೆದು 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.
ಪ್ರತಿಸ್ಪರ್ಧಿ, ವಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ನಿರೀಕ್ಷೆಯಂತೆ ಸೋಲು ಕಂಡಿದ್ದಾರೆ. ದ್ರೌಪದಿ ಮುರ್ಮು ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ. ಹಾಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ಮೋದಿ, ವಿಪಕ್ಷ ನಾಯಕರು ಸೇರಿ ಹಲವರು ಅಭಿನಂದನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಗುಜರಾತ್‍ನಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ವಿದ್ಯುತ್ ಉಚಿತ ಪೂರೈಕೆ ಭರವಸೆ ನೀಡಿದ ಕೇಜ್ರಿವಾಲ್
ಜುಲೈ 24ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಧಿಕಾರಾವಧಿ ಅಂತ್ಯಗೊಳ್ಳಲಿದ್ದು, ಜುಲೈ 25 ರಂದು ದ್ರೌಪದಿ ಮುರ್ಮು ರಾಷ್ಟ್ರಪತಿಯಾಗಿ ರೈಸಿನಾ ಹಿಲ್ ಪ್ರದೇಶದಲ್ಲಿರುವ ರಾಷ್ಟ್ರಪತಿ ಭವನವನ್ನು ಪ್ರವೇಶ ಮಾಡಲಿದ್ದಾರೆ. ಈ ಮೂಲಕ ದೇಶದ ಚರಿತ್ರೆಯಲ್ಲಿಯೇ ರಾಷ್ಟ್ರಪತಿಯಾದ ಎರಡನೇ ಮಹಿಳೆ ಎಂಬ ಗರಿಮೆಗೆ ದ್ರೌಪದಿ ಮುರ್ಮು ಅವರು ಭಾಜನರಾಗಿದ್ದಾರೆ. ಫಲಿತಾಂಶಕ್ಕೆ ಮೊದಲೇ ಮುರ್ಮು ಗೆಲುವು ಖಚಿತವಾಗಿತ್ತು. 44 ಪಕ್ಷಗಳು ಮುರ್ಮುರನ್ನು ಬೆಂಬಲಿಸಿದ್ದವು. ವಿಪಕ್ಷಗಳ ಹಲವು ಶಾಸಕರು, ಸಂಸದರು ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಚಲಾಯಿಸಿದ್ದರು. ಗೆಲುವಿಗೆ ಶೇ.50ಕ್ಕಿಂತ ಹೆಚ್ಚಿನ ಮತಗಳನ್ನು ಪಡೆದು ಗೆಲುವು ದಾಖಲಿಸಿದ್ದಾರೆ. ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ. ಇದನ್ನೂ ಓದಿ: ಗುಜರಾತ್‍ನಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ವಿದ್ಯುತ್ ಉಚಿತ ಪೂರೈಕೆ ಭರವಸೆ ನೀಡಿದ ಕೇಜ್ರಿವಾಲ್
ದ್ರೌಪದಿ ಮುರ್ಮು ಪಡೆದ ಮತ:
ಮೊದಲ ಸುತ್ತು (ಸಂಸದರ ಮತಮೌಲ್ಯ 700) ಚಲಾವಣೆಯಾದ ಸಂಸದರ ಮತ – 763 – ಮತ ಮೌಲ್ಯ – 5,34,100
ದ್ರೌಪದಿ ಮುರ್ಮು – 540 – ಮತ ಮೌಲ್ಯ – 3,78,000
ಯಶವಂತ್ ಸಿನ್ಹಾ – 208 – ಮತ ಮೌಲ್ಯ – 1,45,600
ಅನರ್ಹ ಮತ – 15 – ಮತ ಮೌಲ್ಯ – 10,500
2ನೇ ಸುತ್ತು (ಶಾಸಕರ ಮತ ಮೌಲ್ಯ 130.56) ಚಲಾವಣೆಯಾದ ಶಾಸಕರ ಮತ – 1,138 – ಮತ ಮೌಲ್ಯ – 1,49,575
ದ್ರೌಪದಿ ಮುರ್ಮು – 809 – ಮತ ಮೌಲ್ಯ – 1,05,299
ಯಶವಂತ್ ಸಿನ್ಹಾ – 329 – ಮತ ಮೌಲ್ಯ – 44,276
ಅನರ್ಹ ಮತ – 00 – ಮತ ಮೌಲ್ಯ – 00
Live Tv
[brid partner=56869869 player=32851 video=960834 autoplay=true]
ನವದೆಹಲಿ: ದೇಶಾದ್ಯಂತ ರಾಷ್ಟ್ರಪತಿ ಚುನಾವಣೆಗೆ ಮತದಾನ ಮುಗಿದಿದೆ. ಬೆಳಗ್ಗೆ 10 ಗಂಟೆಗೆ ಶುರುವಾದ ವೋಟಿಂಗ್ ಸಂಜೆ 5 ಗಂಟೆಯವರೆಗೂ ನಡೀತು. ಒಟ್ಟು ಶೇಕಡಾ 99.18ರಷ್ಟು ಮತಗಳು ಚಲಾವಣೆ ಆದವು. ಸಂಸತ್ ಭವನದಲ್ಲಿ ಸಂಸದರು, ರಾಜ್ಯಗಳಲ್ಲಿ ಶಾಸನ ಸಭೆಗಳಲ್ಲಿ ಶಾಸಕರು ತಮ್ಮ ಹಕ್ಕು ಚಲಾಯಿಸಿದ್ರು.
Former Prime Minister and Congress MP Dr Manmohan Singh cast his vote for the Presidential election, today at the Parliament. pic.twitter.com/H6jl3O7hlb
ಸಂಸತ್ ಭವನದಲ್ಲಿ ಪ್ರಧಾನಿ ಮೋದಿ, ಸಚಿವರು, ಸಂಸದರು ವೋಟ್ ಹಾಕಿದ್ರು. ಕೋವಿಡ್ ಕಾರಣ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಆರ್‍ಕೆ ಸಿಂಗ್ ಪಿಪಿಇ ಕಿಟ್ ಧರಿಸಿ ಮತ ಚಲಾಯಿಸಿದ್ರು. ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಮತ್ತು ಹೆಚ್‍ಡಿ ದೇವೇಗೌಡರು ವ್ಹೀಲ್ ಚೇರ್ನಲ್ಲಿ ಬಂದು ವೋಟ್ ಹಾಕಿದ್ರು. ಬಿಜೆಪಿಯ ಇಬ್ಬರು ಸೇರಿ 8 ಸಂಸದರು ಮತದಾನದಿಂದ ದೂರ ಉಳಿದ್ರು. ಇತ್ತ ಬೆಂಗಳೂರಿನ ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ, ಸಚಿವರು, ವಿಪಕ್ಷ ನಾಯಕರು, ಶಾಸಕರು ಮತ್ತು ಇಬ್ಬರು ಸಂಸದರು ಮತದಾನ ಮಾಡಿದ್ರು. ಜುಲೈ 21ರಂದು ಫಲಿತಾಂಶ ಪ್ರಕಟವಾಗಲಿದೆ. ಇದನ್ನೂ ಓದಿ: ದೇಶದಲ್ಲಿ ಮಂಕಿಪಾಕ್ಸ್ ಭೀತಿ – ಅಂತಾರಾಷ್ಟ್ರೀಯ ಪ್ರಯಾಣಿಕರ ತಪಾಸಣೆಗೆ ಕೇಂದ್ರ ಸೂಚನೆ
ಸದ್ಯದ ಲೆಕ್ಕಾಚಾರದ ಪ್ರಕಾರ ಎನ್‍ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಶೇಕಡಾ 60ಕ್ಕೂ ಹೆಚ್ಚು ಮತ ಪಡೆದು ವಿಜಯಶಾಲಿ ಆಗಲಿದ್ದಾರೆ. ಮುರ್ಮು ಅವರಿಗೆ ಎನ್‍ಡಿಎ ಪಕ್ಷಗಳಲ್ಲದೇ, ಬಿಜೆಡಿ, ಟಿಡಿಪಿ, ವೈಎಸ್‍ಆರ್‍ಸಿಪಿ, ಜೆಡಿಎಸ್, ಬಿಎಸ್‍ಪಿ, ಅಕಾಲಿದಳ, ಶಿವಸೇನೆ, ಜೆಎಂಎಂ ಬೆಂಬಲ ನೀಡಿವೆ. ಅಲ್ಲದೇ ರಾಷ್ಟ್ರಪತಿ ಚುನಾವಣೆಯಲ್ಲಿ ವಿಪಕ್ಷಗಳ ಕೆಲ ಸದಸ್ಯರಿಂದ ಕ್ರಾಸ್ ವೋಟಿಂಗ್ ನಡೆದಿದೆ ಎನ್ನಲಾಗುತ್ತಿದೆ. ಟಿಎಂಸಿ 12 ಶಾಸಕರು ಮುರ್ಮುಗೆ ವೋಟ್ ಹಾಕಿದ್ದಾರೆ ಎನ್ನಲಾಗುತ್ತಿದೆ. ಐವರು ಕಾಂಗ್ರೆಸ್ ಶಾಸಕರು ಕೂಡ ಕ್ರಾಸ್ ವೋಟ್ ಮಾಡಿದ್ದಾರೆ ಎಂದು ಹೇಳಲಾಗಿದೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ – ಮೊದಲ ಬಾರಿ ಸಾರ್ವಜನಿಕವಾಗಿ ವ್ಹೀಲ್ ಚೇರ್‌ನಲ್ಲಿ ಕಾಣಿಸಿಕೊಂಡ ಹೆಚ್‌ಡಿಡಿ
ತೆಲಂಗಾಣದ ಕಾಂಗ್ರೆಸ್ ಶಾಸಕಿ, ಮಾಜಿ ನಕ್ಸಲ್ ಸೀತಕ್ಕ ಅವರು ಮುರ್ಮುಗೆ ಮತ ಹಾಕಿದ್ರು. ನನ್ನ ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಹಾಕಿದ್ದೇನೆ ಅಂದ್ರು. ಬುಡಕಟ್ಟು ಜನರೇ ಹೆಚ್ಚಿರುವ ಮುಲುಗು ಕ್ಷೇತ್ರವನ್ನು ಸೀತಕ್ಕ ಪ್ರತಿನಿಧಿಸ್ತಿದ್ದಾರೆ. ವಿಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾಗೆ ಮೂರು ಲಕ್ಷದಷ್ಟು ಮತ ಬೀಳುವ ನಿರೀಕ್ಷೆ ಇದೆ. ಈ ಚುನಾವಣೆಯಲ್ಲಿಯೂ ಬಿಜೆಪಿ ಹಣ ಕೊಟ್ಟುಮತ ಖರೀದಿ ಮಾಡಿದೆ ಎಂದು ಯಶವಂತ ಸಿನ್ಹಾ ಗಂಭೀರ ಆರೋಪ ಮಾಡಿರೋದು ಗಮನಾರ್ಹ ವಿಚಾರ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ- ವ್ಹೀಲ್ ಚೇರ್ನಲ್ಲಿ ಬಂದು ಮತ ಹಾಕಿದ ಮನಮೋಹನ್ ಸಿಂಗ್
Live Tv
[brid partner=56869869 player=32851 video=960834 autoplay=true]
ನವದೆಹಲಿ: ಭಾರತದ 15ನೇ ರಾಷ್ಟ್ರಪತಿ ಚುನಾವಣೆ ಸೋಮವಾರ ಭರದಿಂದ ಸಾಗಿದ್ದು, ದೇಶಾದ್ಯಂತ ಗಣ್ಯರು ಮತ ಚಲಾಯಿಸಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಇಂದು ರಾಷ್ಟ್ರಪತಿ ಚುನಾವಣೆಯಲ್ಲಿ ಮತ ಚಲಾಯಿಸಿದ್ದು, ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ವ್ಹೀಲ್‌ಚೇರ್‌ನಲ್ಲಿ ಕಾಣಿಸಿಕೊಂಡಿದ್ದಾರೆ.
ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾದ ಮರುದಿನವೇ ಹೆಚ್.ಡಿ ದೇವೇಗೌಡರಿಗೆ ದೂರವಾಣಿ ಕರೆ ಮಾಡಿ ಬೆಂಬಲ ಯಾಚಿಸಿದ್ದರು. ದ್ರೌಪದಿ ಮುರ್ಮು ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭ ಖುದ್ದಾಗಿ ದೇವೇಗೌಡ ಹಾಗೂ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮತ ಕೇಳಿದ್ದರು.
Live Tv
[brid partner=56869869 player=32851 video=960834 autoplay=true]
ನವದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವ್ಹೀಲ್ ಚೇರ್‌ನಲ್ಲಿ ಆಗಮಿಸಿ ಮತ ಚಲಾಯಿಸಿದರು.
ಭಾರತದ ನೂತನ ರಾಷ್ಟ್ರಪತಿಯನ್ನು ಆಯ್ಕೆ ಮಾಡಲು ಇಂದು ದೇಶಾದ್ಯಂತ ಸಂಸತ್ತಿನಲ್ಲಿ ಮತ್ತು ರಾಜ್ಯ ಶಾಸಕಾಂಗಗಳಲ್ಲಿ ರಹಸ್ಯ ಮತದಾನದ ಮೂಲಕ ಮತದಾನ ನಡೆಯಿತು. ಈ ಸಂದರ್ಭದಲ್ಲಿ 89 ವರ್ಷದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸಂಸತ್ ಭವನಕ್ಕೆ ವ್ಹೀಲ್ ಚೇರ್ ಮೂಲಕ ಬಂದು ಮತವನ್ನು ಹಾಕಿದರು. ಅವರಿಗೆ ಮತ ಚಲಾಯಿಸಲು ನಾಲ್ವರು ಅಧಿಕಾರಿಗಳು ಸಹಾಯ ಮಾಡಿದರು.
ಈ ವೀಡಿಯೋವನ್ನು ಕಾಂಗ್ರೆಸ್‍ನ ಅನೇಕ ನಾಯಕರು ಹಂಚಿಕೊಂಡಿದ್ದು, ಮನಮೋಹನ್ ಸಿಂಗ್ ಅವರು ಆದಷ್ಟು ಬೇಗ ಉತ್ತಮ ಆರೋಗ್ಯವನ್ನು ಮರಳಿ ಪಡೆಯಲಿ. ಅವರನ್ನು ಈ ರೀತಿ ನೋಡಲು ಬೇಸರವಾಗಿದೆ ಎಂದಿದ್ದಾರೆ.
खराब स्वास्थ्य के बाबजूद अपनी लोकतांत्रिक जिम्मेदारी निभाने के लिए संसद पहुंचे सरदार मनमोहन सिंह जी हम सभी के लिए प्रेरणा है।
Former Prime Minister and Congress MP Dr Manmohan Singh cast his vote for the Presidential election, today at the Parliament. pic.twitter.com/H6jl3O7hlb
ರಾಷ್ಟ್ರಪತಿ ಆಯ್ಕೆಯಲ್ಲಿ ಎನ್‍ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು, ವಿಪಕ್ಷಗಳ ಅಭ್ಯರ್ಥಿಯಾಗಿ ಯಶವಂತ ಸಿನ್ಹಾ ಕಣದಲ್ಲಿದ್ದಾರೆ. ಎನ್‍ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಶೇ.60ರಷ್ಟು ಮತಗಳೊಂದಿಗೆ ಗೆಲ್ಲುವುದು ಬಹುತೇಕ ಖಚಿತವಾಗಿದೆ. ದ್ರೌಪದಿ ಮುರ್ಮು ಅವರ ಅಭ್ಯರ್ಥಿಗೆ ಹಲವಾರು ಪ್ರಾದೇಶಿಕ ಪಕ್ಷಗಳು ತಮ್ಮ ಬೆಂಬಲವನ್ನು ಘೋಷಿಸಿರುವುದರಿಂದ ಒಟ್ಟು ಮತಗಳಲ್ಲಿ ಸುಮಾರು 62 ಪ್ರತಿಶತದಷ್ಟು ಮತಗಳನ್ನು ಗಳಿಸುವ ನಿರೀಕ್ಷೆಯಿದೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ- ಮತ ಚಲಾಯಿಸಿದ ಪ್ರಧಾನಿ ಮೋದಿ
Live Tv
[brid partner=56869869 player=32851 video=960834 autoplay=true]
ನವದೆಹಲಿ: ಅಧಿವೇಶನವನ್ನು ಫಲಪ್ರದವಾಗಿಸಲು ಸಂಸದರೆಲ್ಲರೂ ಮುಕ್ತ ಮನಸ್ಸಿನಿಂದ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸುವಂತೆ ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದರು.
ಸಂಸತ್ತಿನ ಮುಂಗಾರು ಅಧಿವೇಶನ ಪ್ರಾರಂಭವಾಗುವ ಮುನ್ನ ಮಾತನಾಡಿದ ಅವರು, ಸಂಸತ್ತಿನಲ್ಲಿ ಮುಕ್ತ ಮನಸ್ಸಿನಿಂದ ಸಂವಾದ ನಡೆಯಬೇಕು. ಅಗತ್ಯಬಿದ್ದರೆ ಚರ್ಚೆಯಾಗಬೇಕು. ಹಾಗೂ ಸದನದ ಘನತೆಯನ್ನು ಎತ್ತಿಹಿಡಿಯಲು ಎಲ್ಲಾ ಸಂಸದರು ಶ್ರಮಿಸಬೇಕು. ಈ ಅಧಿವೇಶನವನ್ನು ಸಾಧ್ಯವಾದಷ್ಟು ಎಲ್ಲಾ ಸಂಸದರು ಆಲೋಚಿಸಿ ವಿಷಯಗಳನ್ನು ಚರ್ಚಿಸಬೇಕು ಎಂದು ಎಂದು ತಿಳಿಸಿದರು.
ಈ ಅವಧಿಯು ಬಹಳ ಮಹತ್ವದ್ದಾಗಿದ್ದು, ಇದು ಆಜಾದಿ ಕಾ ಅಮೃತ ಮಹೋತ್ಸವದ ಅವಧಿಯಾಗಿದೆ. ಆಗಸ್ಟ್ 15 ಮತ್ತು ಮುಂಬರುವ 25 ವರ್ಷಗಳಿಗೆ ವಿಶೇಷ ಮಹತ್ವವಿದೆ. ರಾಷ್ಟ್ರವು 100 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತದೆ. ಇದು ಸಂಕಲ್ಪ ಮಾಡುವ ಸಮಯವಾಗಿದೆ. ನಮ್ಮ ಪ್ರಯಾಣವನ್ನು ನಿರ್ಧರಿಸಿ ಎಂದರು. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ತಾಲೀಮು ನಡೆಸಿದ್ದು ಯಾಕೆ?
ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಅನೇಕರು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ. ಹಾಗೇ ಅನೇಕರು ಜೈಲಿನಲ್ಲೇ ತಮ್ಮ ಜೀವನವನ್ನು ಕಳೆದರು. ಅವರೆಲ್ಲರನ್ನು ನೆನಪಿಸಿಕೊಂಡು, ಅವರ ಕನಸುಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳುವಂತೆ ತಿಳಿಸಿದರು. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ- ಮತ ಚಲಾಯಿಸಿದ ಪ್ರಧಾನಿ ಮೋದಿ
ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಆಗಸ್ಟ್ 12ರವರೆಗೆ ನಡೆಯಲಿದೆ. ಈ ಅವಧಿಯಲ್ಲಿ 18 ಅಧಿವೇಶನಗಳು ನಡೆಯಲಿವೆ. ರಾಷ್ಟ್ರಪತಿ ಚುನಾವಣೆ ಮತ್ತು ಉಪರಾಷ್ಟ್ರಪತಿ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಈ ಅಧಿವೇಶನ ಮಹತ್ವ ಪಡೆದಿದೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ: ದೇಶದ ಪ್ರಥಮ ಪ್ರಜೆ ಆಯ್ಕೆ ರಾಷ್ಟ್ರಪತಿ ಚುನಾವಣೆ ನಾಳೆ ನಡೆಯಲಿದೆ. ನಾಳೆ 15ನೇ ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಆಯೋಗ ಎಲ್ಲಾ ತಯಾರಿ ನಡೆಸಿದೆ.
ರಾಷ್ಟ್ರಪತಿ ಚುನಾವಣೆ ಘೋಷಣೆ ಆಗುವುದಕ್ಕಿಂತ ಮೊದಲು ಎನ್‍ಡಿಎ ಮತ್ತು ವಿಪಕ್ಷಗಳ ಮಧ್ಯೆ ಬಿಗ್ ಫೈಟ್ ನಡೆಯಬಹುದು ಎಂದು ಅಂದಾಜಿಸಲಾಗಿತ್ತು. ಆದ್ರೆ ಆದಿವಾಸಿ ಮಹಿಳೆ ದ್ರೌಪದಿ ಮುರ್ಮುರನ್ನು ಎನ್‍ಡಿಎ ಅಭ್ಯರ್ಥಿ ಆದ ಮೇಲೆ ಪರಿಸ್ಥಿತಿ ಸಂಪೂರ್ಣ ಬದಲಾಗಿ ಹೋಯ್ತು. ಬಿಜೆಪಿ ಮಾತ್ರವಲ್ಲ ಪ್ರಾದೇಶಿಕ ಪಕ್ಷಗಳಲ್ಲಿ ಬಹುತೇಕ ಪಕ್ಷಗಳು ಮುರ್ಮು ಅವರಿಗೆ ಜೈ ಎಂದಿರುವ ಕಾರಣ, ವಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ಕಣದಲ್ಲಿದ್ದರೂ ಚುನಾವಣೆ ಏಕಪಕ್ಷೀಯ ಆಗಲಿದೆ ಎಂಬ ಮಾತು ಕೇಳಿಬಂದಿವೆ. ಇದನ್ನೂ ಓದಿ: ಉಪರಾಷ್ಟ್ರಪತಿ ಹುದ್ದೆಗೆ ಪ್ರತಿಪಕ್ಷಗಳ ಅಭ್ಯರ್ಥಿಯಾಗಿ ಮಂಗಳೂರು ಮೂಲದ ಮಾರ್ಗರೇಟ್ ಆಳ್ವ ಆಯ್ಕೆ
ದ್ರೌಪದಿ ಮುರ್ಮು ಜೊತೆ 44 ಪಕ್ಷಗಳಿದ್ರೆ, ಸಿನ್ಹಾ ಜೊತೆ 34 ಪಕ್ಷಗಳು ನಿಂತಿವೆ. ಎನ್‍ಡಿಎ ಕೂಟದಲ್ಲಿಲ್ಲದ ಬಿಜೆಡಿ, ವೈಎಸ್‍ಆರ್ ಕಾಂಗ್ರೆಸ್, ಶಿವಸೇನೆ, ಜೆಎಂಎಂ, ಟಿಡಿಪಿ, ಬಿಎಸ್‍ಪಿಯಂತಹ ಪಕ್ಷಗಳು ಕೂಡ ಮುರ್ಮುಗೆ ಬೆಂಬಲ ಪ್ರಕಟಿಸಿವೆ. ಇದರೊಂದಿಗೆ ದೇಶದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಬುಡಕಟ್ಟು ಮಹಿಳೆ ರಾಷ್ಟ್ರಪತಿ ಆಗುವುದು ಖಚಿತವಾಗಿದೆ. ಮುರ್ಮು ದೇಶದ ಎರಡನೇ ಮಹಿಳಾ ರಾಷ್ಟ್ರಪತಿ ಎನಿಸಿಕೊಳ್ಳುವುದು ಅಧಿಕೃತವಾಗಿ ತಿಳಿಸುವುದೊಂದು ಬಾಕಿ ಇದೆ. ಇದನ್ನೂ ಓದಿ: ಬುಡಕಟ್ಟು ವಿರೋಧಿ ಎಂದು ಬ್ಯಾನರ್ಜಿ ವಿರುದ್ಧ 50,000 ಪೋಸ್ಟರ್ ಹಾಕಿದ ಬಿಜೆಪಿ
ನಾಳೆ ಮತದಾನ ನಡೆಯಲಿದ್ದು, ಲೋಕಸಭೆ ಸದಸ್ಯರು, ರಾಜ್ಯಸಭೆ ಸದಸ್ಯರು, ಶಾಸಕರು ಸೇರಿ ಒಟ್ಟು 4,896 ಜನಪ್ರತಿನಿಧಿಗಳು ಈ ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ. ಎಲೆಕ್ಟರೋಲ್ ಕಾಲೇಜಿನ ಒಟ್ಟು ಮೌಲ್ಯ 10,86,431 ಇದ್ದು, ಅದ್ರಲ್ಲಿ ಅರ್ಧಕ್ಕಿಂತ ಹೆಚ್ಚು ಮತಗಳನ್ನು ಪಡೆದವರು ವಿಜೇತರಾಗಲಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಮುರ್ಮು ಆರೂವರೆ ಲಕ್ಷಕ್ಕೂ ಹೆಚ್ಚು ಮತ, ಯಶವಂತ ಸಿನ್ಹಾಗೆ ಮೂರೂವರೆ ಲಕ್ಷ ಮತಗಳು ಸಿಗುವ ನಿರೀಕ್ಷೆ ಇದೆ. ಜೂನ್ 21ಕ್ಕೆ ಮತ ಎಣಿಕೆ ನಡೆಯಲಿದೆ. ಪ್ರಸ್ತುತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಧಿಕಾರಾವಧಿ ಜುಲೈ 24ಕ್ಕೆ ಮುಗಿಯಲಿದೆ. ಜುಲೈ 25ಕ್ಕೆ ನೂತನ ರಾಷ್ಟ್ರಪತಿಗಳು ಅಧಿಕಾರ ಸ್ವೀಕರಿಸಲಿದ್ದಾರೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳ ಒಮ್ಮತದ ಅಭ್ಯರ್ಥಿ ಯಶವಂತ್ ಸಿನ್ಹಾ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಕರೆ ಮಾಡಿ ಬೆಂಬಲ ಕೋರಿದ್ದಾರೆ.
ನಾವು ನಮ್ಮ ಪ್ರಚಾರವನ್ನು ಶ್ರದ್ಧೆಯಿಂದ ಪ್ರಾರಂಭಿಸಿದ್ದೇವೆ. ಚುನಾವಣೆಯಲ್ಲಿ ಬೆಂಬಲವನ್ನು ಪಡೆಯಲು ಪ್ರತಿಯೊಬ್ಬರನ್ನು ತಲುಪುತ್ತೇವೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ(ಎನ್‍ಸಿಪಿ) ಮೂಲಗಳು ತಿಳಿಸಿವೆ.ಸಿನ್ಹಾ ಅವರು ಪಿಎಂ ಮೋದಿ ಮತ್ತು ಸಿಂಗ್ ಅವರ ಕಚೇರಿಗಳಿಗೆ ಕರೆ ಮಾಡಿದ್ದಾರೆ. ಅವರ ಬೆಂಬಲ ಕೋರಿ ಸಂದೇಶವನ್ನು ಕಳುಹಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಶುಕ್ರವಾರ ನಾಮಪತ್ರ ಸಲ್ಲಿಸಿದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ(ಎನ್‍ಡಿಎ) ಅಧ್ಯಕ್ಷೀಯ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಜೆಎಂಎಂ(Jharkhand Mukti Morcha) ಮತ್ತು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ನೇತೃತ್ವದ ಜೆಡಿಎಸ್ ಬೆಂಬಲಿತವಾಗಿದೆ ಎಂದು ತಿಳಿದುಬಂದಿದೆ.