Tag: Presidential Poll

  • ರಾಷ್ಟ್ರಪತಿ ಚುನಾವಣೆ – ಕರ್ನಾಟಕದ 4 ಮತಗಳು ತಿರಸ್ಕೃತ

    ರಾಷ್ಟ್ರಪತಿ ಚುನಾವಣೆ – ಕರ್ನಾಟಕದ 4 ಮತಗಳು ತಿರಸ್ಕೃತ

    ನವದೆಹಲಿ: ಕರ್ನಾಟಕ 224 ಮತಗಳ ಪೈಕಿ ನಾಲ್ವರು ಶಾಸಕರ ಮತಗಳು ತಿರಸ್ಕೃತವಾಗಿದೆ. ಕಾಂಗ್ರೆಸ್‌ ಶಾಸಕರ ಎಲ್ಲಾ ಮತಗಳು ಅರ್ಹವಾಗಿವೆ.

    ದ್ರೌಪದಿ ಮುರ್ಮು ಅವರಿಗೆ ಬಿಜೆಪಿ ಜೊತೆ ಜೆಡಿಸ್‌ ಬೆಂಬಲ ನೀಡಿದ್ದರಿಂದ ಒಟ್ಟು 154 ಮತಗಳು ಬೀಳಬೇಕಿತ್ತು. ಆದರೆ 150 ಮತಗಳು ಬಿದ್ದಿದ್ದು 4 ಮತಗಳು ತಿರಸ್ಕೃತಗೊಂಡಿದೆ. ಕಾಂಗ್ರೆಸ್‌ನ 70 ಶಾಸಕರ ಮತಗಳು ಯಶವಂತ ಸಿನ್ಹಾ ಅವರಿಗೆ ಬಿದ್ದಿದೆ.

    ರಾಷ್ಟ್ರಪತಿ ಚುನಾವಣೆಯಲ್ಲಿ ಪಕ್ಷಗಳು ವಿಪ್‌ ಜಾರಿ ಮಾಡಲು ಸಾಧ್ಯವಿಲ್ಲ. ಹೀಗಾಗಿ ಬಿಜೆಪಿ, ಜೆಡಿಎಸ್‌ ಶಾಸಕರ ಪೈಕಿ ಯಾರು ಈ ತಪ್ಪು ಮಾಡಿದ್ದಾರೆ ಎಂಬುದನ್ನು ಪತ್ತೆ ಹಚ್ಚುವುದು ಕಷ್ಟವಾಗಿದೆ.

    ತಾಲಿಮು ನಡೆಸಿದ್ದ ಬಿಜೆಪಿ:
    ಈ ಬಾರಿ ರಾಷ್ಟ್ರಪತಿ ಮತದಾನಕ್ಕೆ ಬಿಜೆಪಿ ಭರ್ಜರಿ ತಯಾರಿ ಮಾಡಿಕೊಂಡಿತ್ತು. ಒಂದೇ ಒಂದು ಮತವೂ ಅಸಿಂಧುವಾಗದಂತೆ ಎಚ್ಚರಿಕೆ ವಹಿಸಲಾಗಿತ್ತು.

    ಈ ಮೊದಲು ಮತದಾನ ಪ್ರಕ್ರಿಯೆಯಲ್ಲಿ ಇಂದನ ಸಚಿವ ಸುನೀಲ್ ಕುಮಾರ್ ಶಾಸಕರಾದ ಸಿ ಟಿ ರವಿ, ಸತೀಶ್ ರೆಡ್ಡಿ, ಅಭಯ್ ಪಾಟೀಲ್ ತರಬೇತಿ‌ ಪಡಿದ್ದರು. ತರಬೇತಿ ಪಡೆದ ಈ ಶಾಸಕರು ಭಾನುವಾರ ನಗರದ ಖಾಸಗಿ ಹೋಟೆಲಿನಲ್ಲಿ ಅಣಕು ಮತದಾನದ ತರಬೇತಿ ನೀಡಿದ್ದರು. ಇದನ್ನೂ ಓದಿ: ದ್ರೌಪದಿ ಮುರ್ಮುಗೆ ಗೆಲುವು – ಯಾರಿಗೆ ಎಷ್ಟು ಮತ?

    ಕಳೆದ ಬಾರಿಯ ಚುನಾವಣೆಯಲ್ಲಿ 17 ಮತಗಳು ಅಸಿಂಧುಗೊಂಡಿದ್ದವು. ಈ ಸಲ ಯಾವುದೇ ಲೋಪ‌ ಆಗದಂತೆ ಬಿಜೆಪಿ ಮುನ್ನೆಚ್ಚರಿಕೆ ವಹಿಸಿತ್ತು. ಈ ಸಂಬಂಧ ಎರಡು‌ ದಿನ ಖಾಸಗಿ‌ ಹೊಟೇಲಿನಲ್ಲಿ ಶಾಸಕರನ್ನು ಜಮಾವಣೆ ಮಾಡಿಕೊಂಡು ಬಿಜೆಪಿ ತಾಲೀಮು ನಡೆಸಿತ್ತು.

    Live Tv
    [brid partner=56869869 player=32851 video=960834 autoplay=true]

  • ಯುರೋಪ್ ಪ್ರವಾಸ ಕೈಗೊಂಡ ರಾಹುಲ್ – ಕಾಂಗ್ರೆಸ್ ಮಹತ್ವದ ಸಭೆಗೆ ಗೈರು

    ಯುರೋಪ್ ಪ್ರವಾಸ ಕೈಗೊಂಡ ರಾಹುಲ್ – ಕಾಂಗ್ರೆಸ್ ಮಹತ್ವದ ಸಭೆಗೆ ಗೈರು

    ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ಅವರು ಖಾಸಗಿ ಭೇಟಿಗಾಗಿ ಯುರೋಪ್ ಪ್ರವಾಸ ಕೈಗೊಂಡಿದ್ದು, ರಾಷ್ಟ್ರಪತಿ ಚುನಾವಣೆ ಹಾಗೂ ಸಂಸತ್ ಮುಂಗಾರು ಅಧಿವೇಶನಕ್ಕೂ ಮುನ್ನ ಭಾನುವಾರ ಭಾರತಕ್ಕೆ ಮರಳುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

    ರಾಹುಲ್‌ಗಾಂಧಿ ಆಗಾಗ್ಗೆ ವಿದೇಶಿ ಪ್ರವಾಸ ಕೈಗೊಳ್ಳುವುದು ಸಹಜ. ಆದರೆ ಕಾಂಗ್ರೆಸ್ ಪಕ್ಷಕ್ಕೆ ಮಹತ್ವದ ಸಭೆ ನಡೆಯುತ್ತಿರುವ ಸಂದರ್ಭದಲ್ಲಿ ಅವರು ಗೈರಾಗುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: RSS ನಿಮ್ಮ ಜೊತೆ ಇದೆ: ದಲಿತ, ಹಿಂದುಳಿದ ವರ್ಗಗಳ ಮಠಾಧೀಶರೊಂದಿಗೆ ಮೋಹನ್‌ ಭಾಗವತ್‌ ಸಂವಾದ

    ಪಕ್ಷದ ಅಧ್ಯಕ್ಷರ ಆಯ್ಕೆಯ ಬಗ್ಗೆಯೇ ಕಾಂಗ್ರೆಸ್ ಗುರುವಾರ ಸಭೆ ಆಯೋಜನೆ ಮಾಡಿದೆ. ಸೋನಿಯಾ ಗಾಂಧಿ ಅವರು ಅನಾರೋಗ್ಯಕ್ಕೆ ಒಳಗಾಗಿದ್ದು, ಈಗ ಚೇತರಿಸಿಕೊಂಡಿದ್ದಾರೆ. ಈ ಬೆನ್ನಲ್ಲೇ ಜುಲೈ 21ಕ್ಕೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಹೇಳಿದೆ. ಈ ಸಂದರ್ಭದಲ್ಲಿ ಪಕ್ಷದ ನಾಯಕತ್ವದ ಬದಲಾವಣೆಗೆ ಒತ್ತಡ ಹೆಚ್ಚಾಗುತ್ತಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸಭೆ ಮುಖ್ಯವಾಗಿದೆ. ಆದರೂ ರಾಹುಲ್ ಈ ಸಭೆಗೆ ಗೈರಾಗುತ್ತಿದ್ದಾರೆ. ಅಧ್ಯಕ್ಷೀಯ ಹುದ್ದೆಯನ್ನು 2019ರ ಲೋಕಸಭಾ ಚುನಾವಣೆ ಸೋಲಿನ ಬಳಿಕ ತ್ಯಜಿಸಿದ್ದ ರಾಹುಲ್ ಗಾಂಧಿ, ಮತ್ತೆ ಈ ಹುದ್ದೆಯನ್ನು ಒಪ್ಪಿಕೊಳ್ಳುತ್ತಾರೆಯೇ ಎನ್ನುವುದು ಸ್ಪಷ್ಟವಾಗಿಲ್ಲ.

    11 ಕಾಂಗ್ರೆಸ್ ಸದಸ್ಯರ ಬಲ ಹೊಂದಿರುವ ಗೋವಾದಲ್ಲಿ ಹಿರಿಯ ನಾಯಕರು ಬಂಡಾಯ ಏಳಲು ಮುಂದಾಗಿದ್ದಾರೆ. ಇದರ ಲಾಭ ಪಡೆಯಲು ಮುಂದಾಗಿರುವ ಬಿಜೆಪಿ ಕಾಂಗ್ರೆಸ್ ಶಾಸಕರನ್ನು ತನ್ನತ್ತ ಸೆಳೆಯಲು ಮುಂದಾಗಿದೆ. ಆದರೂ ಈವರೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯಾಗಲಿ, ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯಾಗಲಿ ಈ ಬಗ್ಗೆ ಪ್ರತಿಕ್ರಿಯೆ ನೀಡದಿರುವುದು ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: ಆರ್ಥಿಕವಾಗಿ ಸ್ಥಿತಿವಂತರಾಗಿದ್ರೆ ಅನುಕಂಪದ ನೌಕರಿಯಿಲ್ಲ – ಹೊಸ ಮಾರ್ಗಸೂಚಿಯಲ್ಲಿ ಏನಿದೆ?

    ಗುರುವಾರ ನಡೆಯಲಿರುವ ಕಾಂಗ್ರೆಸ್ ಸಭೆಯಲ್ಲಿ, ಅಕ್ಟೋಬರ್ 2ರಂದು ಆರಂಭಿಸಲಿರುವ `ಭಾರತ್ ಜೋಡೋ ಯಾತ್ರಾ’ ಅಥವಾ ಭಾರತವನ್ನು ಒಗ್ಗೂಡಿಸುವ ಯಾತ್ರೆಯ ಯೋಜನೆ ರೂಪಿಸುವ ಕುರಿತು ಸಹ ಚರ್ಚಿಸಲಾಗುತ್ತದೆ. ರಾಹುಲ್ ಗಾಂಧಿ ಅವರ ಗೈರು, ನಾಯಕತ್ವದ ಪ್ರಶ್ನೆ ಕುರಿತಾದ ಊಹಾಪೋಹಗಳನ್ನು ಮತ್ತಷ್ಟು ಹೆಚ್ಚಿಸಿದೆ.

    Live Tv
    [brid partner=56869869 player=32851 video=960834 autoplay=true]

  • ರಾಷ್ಟ್ರಪತಿ ಚುನಾವಣೆ: 107 ನಾಮಪತ್ರ ತಿರಸ್ಕೃತ, ದ್ರೌಪದಿ ಮುರ್ಮು, ಸಿನ್ಹಾ ಇಬ್ಬರಲ್ಲಿ ಪೈಪೋಟಿ

    ರಾಷ್ಟ್ರಪತಿ ಚುನಾವಣೆ: 107 ನಾಮಪತ್ರ ತಿರಸ್ಕೃತ, ದ್ರೌಪದಿ ಮುರ್ಮು, ಸಿನ್ಹಾ ಇಬ್ಬರಲ್ಲಿ ಪೈಪೋಟಿ

    ನವದೆಹಲಿ: ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಸಲ್ಲಿಕೆಯಾಗಿರುವ ನಾಮಪತ್ರಗಳನ್ನು ಪರಿಶೀಲಿಸಲಾಗಿದೆ. 94 ಅಭ್ಯರ್ಥಿಗಳಿಂದ ಸಲ್ಲಿಕೆಯಾಗಿದ್ದ 115 ನಾಮಪತ್ರಗಳಲ್ಲಿ 107 ನಾಮಪತ್ರಗಳು ತಿರಸ್ಕೃತವಾಗಿವೆ.

    ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಹಾಗೂ ಪ್ರತಿ ಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ಅವರ ನಾಮಪತ್ರಗಳು ಕ್ರಮಬದ್ಧವಾಗಿದ್ದು, ಅಂತಿಮವಾಗಿ ಇವರಿಬ್ಬರು ಕಣದಲ್ಲಿ ಉಳಿಯಲಿದ್ದಾರೆ ಎಂದು ರಾಜ್ಯಸಭೆ ಪ್ರಧಾನ ಕಾರ್ಯದರ್ಶಿ ಪಿ.ಸಿ.ಮೋದಿ ತಿಳಿಸಿದ್ದಾರೆ. ಇದನ್ನೂ ಓದಿ: ಏಕನಾಥ್‌ ಶಿಂಧೆ ಸಿಎಂ – ನಾನು ಸರ್ಕಾರದಲ್ಲಿ ಇರಲ್ಲ ಎಂದ ಫಡ್ನವೀಸ್‌

    94 ಅಭ್ಯರ್ಥಿಗಳಿಂದ 115 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಇದರಲ್ಲಿ ಅಗತ್ಯ ದಾಖಲೆಗಳಿರದ ಕಾರಣ 107 ನಾಮಪತ್ರಗಳನ್ನು ತಿರಸ್ಕರಿಸಲಾಗಿದೆ. ಆರ್‌ಜೆಡಿ ಸಂಸ್ಥಾಪಕ ಲಾಲು ಪ್ರಸಾದ್ ಯಾದವ್ ಅವರ ಹೆಸರಿನ ವ್ಯಕ್ತಿಯೊಬ್ಬರು, ದೆಹಲಿಯ ಪ್ರೊಫೆಸರ್, ತಮಿಳುನಾಡಿನ ಸಾಮಾಜಿಕ ಹೋರಾಟಗಾರರೊಬ್ಬರು ಹಾಗೂ ಮುಂಬೈ ಕೊಳೆಗೇರಿಯ ನಿವಾಸಿಯೊಬ್ಬರು ನಾಮಪತ್ರ ಸಲ್ಲಿಸಿದ್ದರು. ಆರ್‌ಬಿಐ ಮತ್ತು ಸರ್ಕಾರದ ಖಜಾನೆಗೆ 15 ಸಾವಿರ ರೂ. ಠೇವಣಿ ಇಡದ ಕಾರಣಕ್ಕೆ ಬಹುತೇಕ ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತವಾಗಿವೆ.

    ಮುರ್ಮು ಮತ್ತು ಸಿನ್ಹಾ ಅವರು ತಲಾ 4 ಪ್ರತಿಗಳಲ್ಲಿ ನಾಮಪತ್ರ ಸಲ್ಲಿಸಿದ್ದು, ಕ್ರಮಬದ್ಧವಾಗಿರುವುದರಿಂದ ಈ ಇಬ್ಬರ ನಾಮಪತ್ರಗಳನ್ನು ಸ್ವೀಕರಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮೋದಿ, ಅಮಿತ್‌ ಶಾ, ಯೋಗಿಗೆ ಜೀವ ಬೆದರಿಕೆ – ಆರೋಪಿಯನ್ನು ಬಂಧಿಸಿ ಬಿಟ್ಟು ಕಳುಹಿಸಿದ ಪೊಲೀಸರು

    ನಾಮಪತ್ರ ಹಿಂಪಡೆಯಲು ಜುಲೈ 2 ಅಂತಿಮ ದಿನವಾಗಿದ್ದು, ಅಂದು ಮಧ್ಯಾಹ್ನ 3 ಗಂಟೆಗೆ ಕಣದಲ್ಲಿ ಉಳಿಯುವ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಗೆಜೆಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ಅವರು ಹೇಳಿದರು.

    ಆಗಸ್ಟ್ 6ರಂದು ಉಪರಾಷ್ಟ್ರಪತಿ ಚುನಾವಣೆ: ಜುಲೈ 18ರಂದು ರಾಷ್ಟ್ರಪತಿ ಚುಮಾವಣೆ ಮುಕ್ತಾಯಗೊಳ್ಳಲಿದ್ದು, ಆಗಸ್ಟ್ 6ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ ಜುಲೈ 13ರಿಂದಲೇ ನಾಮಪತ್ರ ಸಲ್ಲಿಕೆಯಾಗಲಿದೆ. ಹಾಲಿ ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಅವರ ಅಧಿಕಾರ ಅವಧಿಯು ಆಗಸ್ಟ್ 10 ರಂದು ಮುಕ್ತಾಯಗೊಳ್ಳಲಿದ್ದು, ಆಗಸ್ಟ್ 6 ರಂದು ಚುನಾವಣೆ ನಡೆಯಲಿದೆ. ಅಂದೇ ಫಲಿತಾಂಶವೂ ಪ್ರಕಟವಾಗಲಿದೆ.

    Live Tv