Tag: presidential polls

  • ದ್ರೌಪದಿ ಮುರ್ಮು, ಸಿನ್ಹಾ ಇಬ್ಬರಿಗೂ ವೋಟು ಹಾಕಲ್ಲ: ರಾಷ್ಟ್ರಪತಿ ಚುನಾವಣೆ ಬಹಿಷ್ಕರಿಸಿದ ಅಕಾಲಿ ದಳ ಶಾಸಕ

    ದ್ರೌಪದಿ ಮುರ್ಮು, ಸಿನ್ಹಾ ಇಬ್ಬರಿಗೂ ವೋಟು ಹಾಕಲ್ಲ: ರಾಷ್ಟ್ರಪತಿ ಚುನಾವಣೆ ಬಹಿಷ್ಕರಿಸಿದ ಅಕಾಲಿ ದಳ ಶಾಸಕ

    ಚಂಡೀಗಢ: ದೇಶದ 15ನೇ ರಾಷ್ಟ್ರಪತಿ ಆಯ್ಕೆಗೆ ನಡೆಯುತ್ತಿರುವ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸುವಂತೆ ಅಕಾಲಿ ದಳ ಪಕ್ಷ ತನ್ನ ಸದಸ್ಯರಿಗೆ ಸೂಚಿಸಿತ್ತು. ಆದರೆ ಪಕ್ಷದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ ಶಾಸಕರೊಬ್ಬರು ರಾಷ್ಟ್ರಪತಿ ಚುನಾವಣೆಯನ್ನೇ ಬಹಿಷ್ಕರಿಸಿದ್ದಾರೆ.

    ಅಕಾಲಿ ದಳ ಪಕ್ಷದ ಶಾಸಕ ಮನ್‌ಪ್ರೀತ್‌ ಸಿಂಗ್‌ ಆಯಲಿ ಚುನಾವಣೆ ಬಹಿಷ್ಕರಿಸಿದ್ದು, ನಾನು ದ್ರೌಪದಿ ಮುರ್ಮು ಹಾಗೂ ಯಶವಂತ್‌ ಸಿನ್ಹಾ ಇಬ್ಬರಿಗೂ ವೋಟು ಹಾಕುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ- ಮತ ಚಲಾಯಿಸಿದ ಪ್ರಧಾನಿ ಮೋದಿ

    ಈ ಕುರಿತು ಫೇಸ್‌ಬುಕ್‌ನಲ್ಲಿ ವೀಡಿಯೋ ಹಂಚಿಕೊಂಡಿರುವ ಶಾಸಕ, 1984ರ ಸಿಖ್ ಹತ್ಯಾಕಾಂಡದ ಹೊಣೆ ಹೊತ್ತಿರುವ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಲು ಸಾಧ್ಯವಿಲ್ಲ. ಪಂಜಾಬ್‌ನ ಸಮಸ್ಯೆಗಳನ್ನು ಬಗೆಹರಿಸುವ ವಿಚಾರವಾಗಿ ಕಾಂಗ್ರೆಸ್‌ನಲ್ಲಿ ನನಗೆ ನಂಬಿಕೆ ಇಲ್ಲ ಎಂದು ಅಯಾಲಿ ಹೇಳಿದ್ದಾರೆ.

    ಬಿಜೆಪಿ ಕೇಂದ್ರದಲ್ಲಿ ಅಧಿಕಾರದಲ್ಲಿದ್ದರೂ ಅವರು ಪಂಜಾಬ್‌ನ ಸಮಸ್ಯೆಗಳನ್ನು ಪರಿಹರಿಸಲಿಲ್ಲ. ಇದು ಸ್ವಾರ್ಥವೋ ಅಥವಾ ಇನ್ನೇನೋ ಗೊತ್ತಿಲ್ಲ ಎಂದು ಬಿಜೆಪಿ ವಿರುದ್ಧವೂ ಕಿಡಿಕಾರಿದ್ದಾರೆ.

    ಸಿಖ್ ಸಮುದಾಯದ ಭಾವನೆಗಳು, ಪಂಜಾಬ್‌ನ ಸಮಸ್ಯೆಗಳು ಮತ್ತು ನನ್ನ ಆತ್ಮಸಾಕ್ಷಿಯ ಧ್ವನಿಯನ್ನು ಆಲಿಸಿ ನಾನು ಇಂದು ರಾಷ್ಟ್ರಪತಿ ಚುನಾವಣೆಯಲ್ಲಿ ಯಾವುದೇ ಪಕ್ಷದ ಅಭ್ಯರ್ಥಿಗೆ ಮತ ಹಾಕುತ್ತಿಲ್ಲ ಎಂದು ಆಯಲಿ ತಿಳಿಸಿದ್ದಾರೆ. ಇದನ್ನೂ ಓದಿ: ಇಂದು ರಾಷ್ಟ್ರಪತಿ ಚುನಾವಣೆ – ಜು.25ಕ್ಕೆ ಪ್ರಮಾಣವಚನ

    ದ್ರೌಪದಿ ಮುರ್ಮು ಅವರು ಬುಡಕಟ್ಟು ಸಮುದಾಯದಿಂದ ಬಂದವರು. ಅವರ ವಿಚಾರವಾಗಿ ನನಗೆ ಯಾವುದೇ ಸಮಸ್ಯೆಯಿಲ್ಲ. ಆದರೆ ಬಿಜೆಪಿ ಕೇಂದ್ರದಲ್ಲಿ ಅಧಿಕಾರದಲ್ಲಿದ್ದರೂ ಸಿಖ್‌ ಕೈದಿಗಳ ಬಿಡುಗಡೆ, ಚಂಡೀಗಢದ ಮೇಲೆ ಪಂಜಾಬ್‌ನ ಹಕ್ಕುಗಳು ಮತ್ತು ಸಟ್ಲೇಜ್-ಯಮುನಾ ಜೋಡಣೆ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರಾಷ್ಟ್ರಪತಿ ಚುನಾವಣೆ NDA ಅಭ್ಯರ್ಥಿಗೆ ಜೆಡಿಎಸ್ ಬೆಂಬಲ ಅಧಿಕೃತ ಘೋಷಣೆ

    ರಾಷ್ಟ್ರಪತಿ ಚುನಾವಣೆ NDA ಅಭ್ಯರ್ಥಿಗೆ ಜೆಡಿಎಸ್ ಬೆಂಬಲ ಅಧಿಕೃತ ಘೋಷಣೆ

    ಬೆಂಗಳೂರು: ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸಿರುವ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಪಕ್ಷ ರಾಜಕಾರಣವನ್ನು ಮೀರಿ ಬೆಂಬಲ ನೀಡಲು ಜಾತ್ಯತೀತ ಜನತಾದಳ ಸರ್ವಾನುಮತದ ನಿರ್ಣಯ ಕೈಗೊಂಡಿದೆ.

    ವಿಧಾನಸೌಧದಲ್ಲಿ ಇಂದು ನಡೆದ ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಶಾಸಕಾಂಗ ಪಕ್ಷದ ಉಪ ನಾಯಕ ಬಂಡೆಪ್ಪ ಕಾಶೆಂಪೂರ್ ಅವರು ಮಾಧ್ಯಮಗಳಿಗೆ ತಿಳಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ಅಹಿಂದ ಜಪಕ್ಕೆ ಟಕ್ಕರ್ ಕೊಡಲು ಮುಂದಾದ ಬಿಜೆಪಿ

    ಕೋವಿಡ್ ಪಾಸಿಟಿವ್ ಕಾರಣಕ್ಕೆ ಹೋಮ್ ಐಸೋಲೇಷನ್ ಆಗಿರುವ ಶಾಸಕಾಂಗ ಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹಾಗೂ ತಮ್ಮ ಪುತ್ರಿಯ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹಾಗೂ ಮಳೆ, ನೆರೆ ಕಾರಣಕ್ಕೆ ತಮ್ಮ ಕ್ಷೇತ್ರಗಳಲ್ಲಿಯೇ ಬೀಡುಬಿಟ್ಟಿರುವ ಪಕ್ಷದ ಎಲ್ಲ ಶಾಸಕರು ವರ್ಚುಯಲ್ ವೇದಿಕೆ ಮೂಲಕ ಸಭೆಯಲ್ಲಿ ಭಾಗಿಯಾಗಿದ್ದರು ಎಂದು ಅವರು ಮಾಹಿತಿ ನೀಡಿದರು.

    ಹೆಚ್.ಡಿ.ದೇವೇಗೌಡರು ಪ್ರಧಾನಿಯಾಗಿದ್ದಾಗ ಮಹಿಳೆಯರಿಗೆ ಮೀಸಲು ಸೌಲಭ್ಯ ಕಲ್ಪಿಸಿ ಮಹಿಳಾ ಸಬಲೀಕರಣಕ್ಕೆ ಐತಿಹಾಸಿಕ ಒತ್ತು ನೀಡಿದ್ದರು. ಮೊತ್ತ ಮೊದಲ ಬಾರಿಗೆ ಆದಿವಾಸಿ ಮಹಿಳೆಯೊಬ್ಬರು ರಾಷ್ಟ್ರಪತಿ ಆಗುತ್ತಿರುವುದು ಹೆಮ್ಮೆಯ ಸಂಗತಿ. ಇದು ದೇವೇಗೌಡರ ಆಶಯಕ್ಕೆ ಅನುಗುಣವಾಗಿದೆ. ಮುರ್ಮು ಅವರ ಹಿನ್ನೆಲೆ, ಅವರು ಪ್ರತಿನಿಧಿಸುವ ಸಮುದಾಯವನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ಬೆಂಬಲ ನೀಡಲಾಗುತ್ತಿದೆ. ಇದರಲ್ಲಿ ಆ ಪಕ್ಷ ಈ ಪಕ್ಷ ಎನ್ನುವ ಮಾತಿಲ್ಲ. ಅಭ್ಯರ್ಥಿಯನ್ನು ಮಾನದಂಡವಾಗಿಟ್ಟುಕೊಂಡು ಬೆಂಬಲ ಘೋಷಣೆ ಮಾಡಲಾಗಿದೆ ಎಂದು ಅವರು ತಿಳಿಸಿದರು. ಇದನ್ನೂ ಓದಿ: ನೂಪುರ್ ಶರ್ಮಾ ಫೋಟೋ ಅಪ್ಲೋಡ್ ಮಾಡಿದ್ದ ಉದ್ಯಮಿಗೆ ಕೊಲೆ ಬೆದರಿಕೆ – ಮೂವರ ಬಂಧನ

    ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾದ ಮರುದಿನವೇ ನಮ್ಮ ಪಕ್ಷದ ವರಿಷ್ಠರಾದ ಹೆಚ್.ಡಿ.ದೇವೇಗೌಡರಿಗೆ ದೂರವಾಣಿ ಕರೆ ಮಾಡಿ ಬೆಂಬಲ ಯಾಚಿಸಿದ್ದರು. ತದನಂತರ ಬೆಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಖುದ್ದು ಅವರೇ ತೆರಳಿ ದೇವೇಗೌಡರು ಹಾಗೂ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮತ ಕೇಳಿದ್ದರು. ಈ ಹಿನ್ನೆಲೆಯಲ್ಲಿ ನಮ್ಮ ಪಕ್ಷ ದ್ರೌಪದಿ ಮುರ್ಮು ಅವರಿಗೆ ಬೆಂಬಲ ನೀಡಲು ತೀರ್ಮಾನ ಕೈಗೊಂಡಿದೆ ಎಂದು ಬಂಡೆಪ್ಪ ಕಾಶಂಪೂರ್ ತಿಳಿಸಿದರು. ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ‌ ದ್ರೌಪದಿ ಮುರ್ಮು ಅವರಿಗೇ ಮತ ಹಾಕುತ್ತೇವೆ ಎಂದು ಅವರು ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]

  • ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮುಗೆ ನಮ್ಮ ಬೆಂಬಲ: ಉದ್ಧವ್‌ ಠಾಕ್ರೆ

    ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮುಗೆ ನಮ್ಮ ಬೆಂಬಲ: ಉದ್ಧವ್‌ ಠಾಕ್ರೆ

    ಮುಂಬೈ: ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಶಿವಸೇನಾ ಬೆಂಬಲ ನೀಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಘೋಷಿಸಿದ್ದಾರೆ.

    ಬುಡಕಟ್ಟು ಸಮುದಾಯದ ಮಹಿಳೆಯೊಬ್ಬರನ್ನು ರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಹೀಗಾಗಿ ಅವರಿಗೆ ಬೆಂಬಲ ನೀಡಬೇಕು ಎಂದು ಶಿವಸೇನಾದ 22 ಸಂಸದ ಪೈಕಿ 16 ಸಂಸದರಿಂದ ಕೇಳಿಬಂದ ಒತ್ತಾಯದ ಮೇರೆಗೆ ಠಾಕ್ರೆ ಈ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ – ಸಂಸದರ ಬೇಡಿಕೆಗೆ ಮಣಿದ್ರಾ ಉದ್ಧವ್?

    ಈ ಕುರಿತು ಪ್ರತಿಕ್ರಿಯಿಸಿದ ಉದ್ಧವ್‌ ಠಾಕ್ರೆ, ನನ್ನ ಪಕ್ಷದ ಬುಡಕಟ್ಟು ನಾಯಕರು ಇದೇ ಮೊದಲ ಬಾರಿಗೆ ಬುಡಕಟ್ಟು ಮಹಿಳೆಗೆ ಅಧ್ಯಕ್ಷರಾಗಲು ಅವಕಾಶವಿದೆ ಎಂದು ನನಗೆ ಹೇಳಿದರು. ಬೆಂಬಲ ನೀಡುವ ವಿಚಾರವಾಗಿ ಸೇನಾ ಸಂಸದರ ಸಭೆಯಲ್ಲಿ ಯಾರೂ ನನ್ನ ಮೇಲೆ ಒತ್ತಡ ಹೇರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ವಾಸ್ತವವಾಗಿ ಈಗಿನ ರಾಜಕೀಯ ವಾತಾವರಣದ ಪ್ರಕಾರ, ನಾನು ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಬಾರದು. ಆದರೆ ನಾವು ಸಂಕುಚಿತ ಮನೋಭಾವದವರಲ್ಲ ಎಂದು ಪರೋಕ್ಷವಾಗಿ ಬಿಜೆಪಿಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: “ಗಾಂಧಿಯಿಂದ ಗೋಡ್ಸೆಯವರೆಗೆ”..ರಾಷ್ಟ್ರ ಲಾಂಛನಕ್ಕೆ ಅವಮಾನ – ಮೋದಿ ವಿರುದ್ಧ ಕಿಡಿ

    ಇದಕ್ಕೂ ಮುಂಚೆ ಮಾತನಾಡಿದ್ದ ಮಾತನಾಡಿದ್ದ ಉದ್ಧವ್‌ ಠಾಕ್ರೆ ಬಣದ ಸಂಜಯ್‌ ರಾವುತ್‌, ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಿದ ಮಾತ್ರಕ್ಕೆ ಬಿಜೆಪಿ ಬೆಂಬಲಿಸಿದ್ದೇವೆ ಎಂದರ್ಥವಲ್ಲ ಎಂದು ತಿಳಿಸಿದ್ದರು.

    ಕಾಂಗ್ರೆಸ್‌, ಎನ್‌ಸಿಪಿ ಸೇರಿದಂತೆ ವಿಪಕ್ಷಗಳು ರಾಷ್ಟ್ರಪತಿ ಚುನಾವಣೆಗೆ ಯಶವಂತ್‌ ಸಿನ್ಹಾ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿವೆ. ಈ ನಡುವೆ ಕಾಂಗ್ರೆಸ್‌ ಮತ್ತು ಎನ್‌ಸಿಪಿಯೊಂದಿಗೆ ಮಹಾಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿ, ಶಿವಸೇನಾದ ಏಕನಾಥ್‌ ಸಿಂಧೆ ಬಣ ಮತ್ತು ಬಿಜೆಪಿ ಮೈತ್ರಿಯಿಂದ ಅಧಿಕಾರದಿಂದ ಕೆಳಗಿಳಿದ ಉದ್ಧವ್‌ ಠಾಕ್ರೆ ಅವರು ದ್ರೌಪದಿ ಮುರ್ಮು ಅವರಿಗೆ ಬೆಂಬಲ ಘೋಷಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರಾಷ್ಟ್ರಪತಿ ಚುನಾವಣೆ – ಬಿಜೆಪಿಯಿಂದ ಅಭ್ಯರ್ಥಿಯಾಗಿ ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮು ಆಯ್ಕೆ

    ರಾಷ್ಟ್ರಪತಿ ಚುನಾವಣೆ – ಬಿಜೆಪಿಯಿಂದ ಅಭ್ಯರ್ಥಿಯಾಗಿ ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮು ಆಯ್ಕೆ

    ನವದೆಹಲಿ: ಬಿಜೆಪಿ ನೇತೃತ್ವದ ಎನ್‌ಡಿಎ ಮುಂಬರುವ ಚುನಾವಣೆಗೆ ರಾಷ್ಟ್ರಪತಿ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರ ಹೆಸರನ್ನು ಘೋಷಿಸಿದೆ.

    ಬಿಜೆಪಿ ಹಿರಿಯ ಮುಖಂಡರಾದ ದ್ರೌಪದಿ ಮುರ್ಮು ಅವರು 2015-21ರ ಅವಧಿಯಲ್ಲಿ ಜಾರ್ಖಂಡ್‌ನ ರಾಜ್ಯಪಾಲರಾಗಿದ್ದರು. 16ನೇ ರಾಷ್ಟ್ರಪತಿ ಚುನಾವಣೆಯ ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಇದನ್ನೂ ಓದಿ: ವಿಶ್ವಸಂಸ್ಥೆಗೆ ಭಾರತದ ಕಾಯಂ ಪ್ರತಿನಿಧಿಯಾಗಿ ರುಚಿರಾ ಕಾಂಬೋಜ್ ನೇಮಕ

    ದ್ರೌಪದಿ ಮುರ್ಮು ಅವರು ಒಡಿಸ್ಸಾದ ಮಾಯರ್ಭಾಂಜ್‌ ಜಿಲ್ಲೆಯವರಾಗಿದ್ದಾರೆ. ಇವರು ಬುಡಕಟ್ಟು ಜನಾಂಗ ಮೂಲದ ಮಹಿಳೆಯಾಗಿದ್ದು, ಪಕ್ಷದ ನೇತೃತ್ವದಲ್ಲಿ ನಾನಾ ಸ್ಥಾನಗಳನ್ನು ಅಲಂಕರಿಸಿ ಸೇವೆ ಸಲ್ಲಿಸಿದ್ದಾರೆ.

    ಇಂದು ಸಂಜೆಯಷ್ಟೇ ವಿಪಕ್ಷಗಳು ಅಭ್ಯರ್ಥಿಯಾಗಿ ಯಶವಂತ ಸಿನ್ಹಾ ಆಯ್ಕೆ ಮಾಡಿದ್ದರು. ಇದರ ಬೆನ್ನಲ್ಲೇ ಎನ್‌ಡಿಎ ಒಕ್ಕೂಟದಿಂದ ಅಭ್ಯರ್ಥಿ ಘೋಷಿಸಲಾಗಿದೆ. ಜುಲೈ 18 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ.

    `ದ್ರೌಪದಿ ಮುರ್ಮು ಅವರು ಸಮಾಜ ಸೇವೆಗೆ ಮತ್ತು ಬಡವರು, ದೀನದಲಿತರು ಹಾಗೂ ಸಮಾಜದ ಅಂಚಿನಲ್ಲಿರುವವರ ಸಬಲೀಕರಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ. ಅವರು ಶ್ರೀಮಂತ ಆಡಳಿತಾತ್ಮಕ ಅನುಭವವನ್ನು ಹೊಂದಿದ್ದಾರೆ. ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು. ಅವರು ನಮ್ಮ ರಾಷ್ಟ್ರದ ಶ್ರೇಷ್ಠ ರಾಷ್ಟ್ರಪತಿಯಾಗುತ್ತಾರೆ ಎಂಬ ವಿಶ್ವಾಸ ನನಗಿದೆʼ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್‌ ಮಾಡಿದ್ದಾರೆ.

    Live Tv

  • ರಾಷ್ಟ್ರಪತಿ ಚುನಾವಣೆ: ವಿಪಕ್ಷಗಳಿಂದ ಅಭ್ಯರ್ಥಿಯಾಗಿ ಯಶವಂತ್‌ ಸಿನ್ಹಾ ಆಯ್ಕೆ

    ರಾಷ್ಟ್ರಪತಿ ಚುನಾವಣೆ: ವಿಪಕ್ಷಗಳಿಂದ ಅಭ್ಯರ್ಥಿಯಾಗಿ ಯಶವಂತ್‌ ಸಿನ್ಹಾ ಆಯ್ಕೆ

    ನವದೆಹಲಿ: ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಹಣಕಾಸು ಮತ್ತು ವಿದೇಶಾಂಗ ವ್ಯವಹಾರಗಳ ಮಾಜಿ ಸಚಿವ ಯಶವಂತ್ ಸಿನ್ಹಾ ಅವರು ವಿಪಕ್ಷಗಳ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ತಿಳಿಸಿದ್ದಾರೆ.

    ಸಾರ್ವಜನಿಕ ಜೀವನದಲ್ಲಿ ಸುದೀರ್ಘ ಮತ್ತು ವಿಶಿಷ್ಟವಾದ ವೃತ್ತಿ ಜೀವನದಲ್ಲಿ ಸಿನ್ಹಾ ಅವರು ಸಮರ್ಥ ಆಡಳಿತಗಾರರಾಗಿ, ನಿಪುಣ ಸಂಸದರಾಗಿ ಮತ್ತು ಹಣಕಾಸು, ವಿದೇಶಾಂಗ ವ್ಯವಹಾರಗಳ ಸಚಿವರಾಗಿ ಮೆಚ್ಚುಗೆ ಪಡೆದಿದ್ದಾರೆ. ಕೇಂದ್ರ ಸಚಿವರಾಗಿ ರಾಷ್ಟ್ರಕ್ಕೆ ಸೇವೆ ಸಲ್ಲಿಸಿದ್ದಾರೆ. ಅವರು ಭಾರತೀಯ ಗಣರಾಜ್ಯದ ಜಾತ್ಯತೀತ ಮತ್ತು ಪ್ರಜಾಸತ್ತಾತ್ಮಕ ಸ್ವರೂಪ ಮತ್ತು ಅದರ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯಲು ಅರ್ಹರಾಗಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

    ಮೋದಿ ಸರ್ಕಾರವು ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ಸಂಬಂಧ ಯಾವುದೇ ಗಂಭೀರ ಪ್ರಯತ್ನ ಮಾಡದಿರುವುದಕ್ಕೆ ನಾವು ವಿಷಾದಿಸುತ್ತೇವೆ. ಆದ್ದರಿಂದ ನಾವು ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳಿಗೆ ಸಿನ್ಹಾ ಅವರ ಉಮೇದುವಾರಿಕೆಯನ್ನು ಬೆಂಬಲಿಸುವಂತೆ ಮನವಿ ಮಾಡುತ್ತೇವೆ. ಇದರಿಂದಾಗಿ ರಾಷ್ಟ್ರವು ಯೋಗ್ಯವಾದ ರಾಷ್ಟ್ರಪತಿಯನ್ನು ಅವಿರೋಧವಾಗಿ ಆಯ್ಕೆ ಮಾಡಬಹುದಾಗಿದೆ ಎಂದು ಹೇಳಿಕೆಯಲ್ಲಿ ಹೇಳಲಾಗಿದೆ.

    ಸಂಸತ್‌ ಭವನದಲ್ಲಿ ಎನ್‌ಸಿಪಿ ವರಿಷ್ಠ ಶರದ್‌ ಪವಾರ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಿಪಕ್ಷಗಳಿಂದ ಒಮ್ಮತದಿಂದ ರಾಷ್ಟ್ರಪತಿ ಅಭ್ಯರ್ಥಿಯಾಗಿ ಯಶವಂತ್‌ ಸಿನ್ಹಾ ಅವರನ್ನು ಆಯ್ಕೆ ಮಾಡಲಾಯಿತು.

    Live Tv

  • ಆಟ ಇನ್ನೂ ಮುಗಿದಿಲ್ಲ: ರಾಷ್ಟ್ರಪತಿ ಚುನಾವಣೆ ಬಗ್ಗೆ ಬಿಜೆಪಿಗೆ ಮಮತಾ ಬ್ಯಾನರ್ಜಿ ಟಾಂಗ್‌

    ಆಟ ಇನ್ನೂ ಮುಗಿದಿಲ್ಲ: ರಾಷ್ಟ್ರಪತಿ ಚುನಾವಣೆ ಬಗ್ಗೆ ಬಿಜೆಪಿಗೆ ಮಮತಾ ಬ್ಯಾನರ್ಜಿ ಟಾಂಗ್‌

    ಕೋಲ್ಕತ್ತಾ: ಪಂಚರಾಜ್ಯ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಗೆಲುವು ಸಾಧಿಸಿರುವ ಬಿಜೆಪಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟಾಂಗ್‌ ನೀಡಿದ್ದಾರೆ. ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿಗೆ ಸವಾಲು ಹಾಕಿದ್ದಾರೆ.

    ಆಟ ಇನ್ನೂ ಮುಗಿದಿಲ್ಲ. ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ಸುಲಭ ಜಯ ಸಾಧಿಸಲು ಸಾಧ್ಯವಿಲ್ಲ. ದೇಶದಲ್ಲಿ ಒಟ್ಟು ಶಾಸಕರ ಪೈಕಿ ಅರ್ಧದಷ್ಟು ಶಾಸಕರ ಸಂಖ್ಯೆಯನ್ನು ಬಿಜೆಪಿ ಪಕ್ಷ ಹೊಂದಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ – ಬಿಜೆಪಿ ಅಭ್ಯರ್ಥಿಗೆ ಸುಲಭವಾಗಿ ಸಿಗಲಿದೆ ಜಯ

    ಈ ಬಾರಿಯ ರಾಷ್ಟ್ರಪತಿ ಚುನಾವಣೆ ಬಿಜೆಪಿಗೆ ಅಷ್ಟು ಸುಲಭವಲ್ಲ. ಅವರು ದೇಶದ ಒಟ್ಟು ಶಾಸಕರ ಪೈಕಿ ಅರ್ಧದಷ್ಟು ಶಾಸಕರನ್ನು ಹೊಂದಿಲ್ಲ. ವಿರೋಧ ಪಕ್ಷಗಳು ಒಟ್ಟಾಗಿ ರಾಷ್ಟ್ರದಾದ್ಯಂತ ಹೆಚ್ಚು ಶಾಸಕರನ್ನು ಹೊಂದಿವೆ ಎಂದು ಹೇಳಿದ್ದಾರೆ.

    ಆಟ ಇನ್ನೂ ಮುಗಿದಿಲ್ಲ. ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸೋತ ಸಮಾಜವಾದಿ ಪಕ್ಷದಂತಹ ಪಕ್ಷಗಳು ಕಳೆದ ಬಾರಿಗಿಂತ ಹೆಚ್ಚು ಶಾಸಕರನ್ನು ಹೊಂದಿವೆ ಎಂದಿದ್ದಾರೆ. ಇದನ್ನೂ ಓದಿ: ಚನ್ನಿ ಪ್ರಮಾಣ ವಚನ ಸಮಾರಂಭಕ್ಕೆ ನನ್ನನ್ನು ಆಹ್ವಾನಿಸಿರಲಿಲ್ಲ: ಎಎಪಿಗೆ ಧನ್ಯವಾದ ತಿಳಿಸಿದ ಕಾಂಗ್ರೆಸ್‌ ಸಂಸದ

    ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರ ಅವಧಿ ಜು.24ಕ್ಕೆ ಅಂತ್ಯಗೊಳ್ಳಲಿದೆ. 75 ವರ್ಷ ಮೇಲ್ಪಟ್ಟವರಿಗೆ ಪಕ್ಷದಿಂದ ನಿವೃತ್ತಿ ನೀಡುವ ಹಿನ್ನೆಲೆಯಲ್ಲಿ 76 ವರ್ಷದ ಕೋವಿಂದ್‌ ಅವರನ್ನು ಎರಡನೇ ಬಾರಿ ಆಯ್ಕೆ ಮಾಡುವುದು ಅನುಮಾನ. ರಾಷ್ಟ್ರಪತಿ ಚುನಾವಣೆಯನ್ನು ಗೆಲ್ಲಬೇಕಾದರೆ ಉತ್ತರ ಪ್ರದೇಶದ ಗೆಲುವು ಬಿಜೆಪಿಗೆ ಅನಿವಾರ್ಯವಾಗಿತ್ತು.

    ಮತ ಲೆಕ್ಕಾಚಾರ ಹೇಗೆ?
    ರಾಷ್ಟ್ರಪತಿ ಚುನಾವಣೆಯಲ್ಲಿ ಲೋಕಸಭೆ ಸದಸ್ಯರು, ರಾಜ್ಯಸಭೆ ಸದಸ್ಯರು, ರಾಜ್ಯ ವಿಧಾನಸಭೆಗಳ ಸದಸ್ಯರು ಮತ್ತು ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭೆ ಸದಸ್ಯರು ಮತ ಹಾಕುತ್ತಾರೆ. ವಿಧಾನಪರಿಷತ್‌ ಸದಸ್ಯರಿಗೆ ಮತದಾನದ ಹಕ್ಕು ಇಲ್ಲ.

    543 ಲೋಕಸಭಾ ಸದಸ್ಯರು, 233 ರಾಜ್ಯಸಭಾ ಸದಸ್ಯರು ಮತ್ತು ದೇಶದ ವಿಧಾನಸಭೆಯಲ್ಲಿರುವ 4,120 ಶಾಸಕರು ಮತ ಹಾಕಲಿದ್ದಾರೆ. ರಾಷ್ಟ್ರಪತಿ ಚುನಾವಣೆಯಲ್ಲಿ ಒಟ್ಟು 10,98,903 ಮತಗಳು ಚಲಾವಣೆಯಾಗುತ್ತವೆ. ಶೇ.50ಕ್ಕಿಂತ ಹೆಚ್ಚು ಮತ ಪಡೆದ ಅಭ್ಯರ್ಥಿ ಜಯಗಳಿಸುತ್ತಾರೆ.

    ಎಲ್ಲ ಸಂಸದರ ವೋಟಿನ ಮೌಲ್ಯ 708. ರಾಜ್ಯದ ಜನಸಂಖ್ಯೆಯ ಆಧಾರದ ಮೇಲೆ ಶಾಸಕನ ಮತವನ್ನು ಲೆಕ್ಕಾಚಾರ ಮಾಡಲಾಗುತ್ತದೆ. ಉತ್ತರ ಪ್ರದೇಶದ ಒಬ್ಬ ಶಾಸಕನ ಮತಕ್ಕೆ ದೇಶದಲ್ಲೇ ಅತಿಹೆಚ್ಚು ಮೌಲ್ಯ 208 ಇದೆ. ದೇಶದಲ್ಲೇ ಕಡಿಮೆ ಇರುವ ಸಿಕ್ಕಿಂ ರಾಜ್ಯದ ಒಬ್ಬ ಶಾಸಕನ ಮತದ ಮೌಲ್ಯ 7 ಇದೆ. ಇದನ್ನೂ ಓದಿ: ಭಾರತಕ್ಕೆ ಬರಲಿದೆ ರಷ್ಯಾ ತೈಲ – ಅಂತಿಮ ಹಂತದಲ್ಲಿ ಮಾತುಕತೆ

    ಉತ್ತರ ಪ್ರದೇಶದ 403 ಶಾಸಕರ ವೋಟಿನ ಮೌಲ್ಯ ಒಟ್ಟು 83,824. 80 ಸಂಸದರು ಮತ ಸೇರಿದರೆ ಮೌಲ್ಯ 56,640 ಆಗುತ್ತದೆ. ಉತ್ತರ ಪ್ರದೇಶ ಒಂದೇ ರಾಜ್ಯದಿಂದ 1.4 ಲಕ್ಷ ಮೌಲ್ಯದ ಮತಗಳು ಚಲಾವಣೆ ಆಗುತ್ತದೆ. ಉತ್ತರಾಖಂಡ 4,480, ಗೋವಾ 800, ಮಣಿಪುರದಲ್ಲಿ 1,080 ಮತಗಳು ಚಲಾವಣೆ ಆಗುತ್ತದೆ.

    ಪಂಚರಾಜ್ಯಗಳ ಚುನಾವಣೆಗೂ ಮೊದಲು ಬಿಜೆಪಿ ಬಳಿ ರಾಷ್ಟ್ರಪತಿಯನ್ನು ಆಯ್ಕೆ ಮಾಡಿಕೊಳ್ಳಲು ಬೇಕಾದಷ್ಟು ಮತಗಳಿದ್ದವು. ಒಂದು ವೇಳೆ ಉತ್ತರ ಪ್ರದೇಶದಲ್ಲಿ ಸೋತಿದ್ದರೆ ಬಿಜೆಡಿ, ಟಿಆರ್‌ಎಸ್‌, ವೈಎಸ್‌ಆರ್‌ ಪಕ್ಷಗಳ ಬೆಂಬಲವನ್ನು ಬಿಜೆಪಿ ಕೇಳಬೇಕಿತ್ತು.