Tag: President’s Rule

  • Manipur | ಬಿರೇನ್‌ ಸಿಂಗ್‌ ರಾಜೀನಾಮೆ ಬೆನ್ನಲ್ಲೇ ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ

    Manipur | ಬಿರೇನ್‌ ಸಿಂಗ್‌ ರಾಜೀನಾಮೆ ಬೆನ್ನಲ್ಲೇ ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ

    ನವದೆಹಲಿ:‌ ಮುಖ್ಯಮಂತ್ರಿ ಸ್ಥಾನಕ್ಕೆ ಬಿರೇನ್ ಸಿಂಗ್ ರಾಜೀನಾಮೆ ನೀಡಿದ ಕೆಲವೇ ದಿನಗಳಲ್ಲಿ ಹಿಂಸಾಚಾರ ಪೀಡಿತ ಮಣಿಪುರದಲ್ಲಿ (Manipur) ರಾಷ್ಟ್ರಪತಿ ಆಳ್ವಿಕೆ (President’s Rule) ಹೇರಲಾಗಿದೆ. ರಾಜ್ಯದಲ್ಲಿ 1951ರಿಂದ ಇದು 11ನೇ ಬಾರಿಗೆ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿದೆ.

    ಇದೇ ಫೆ.9ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಬಿರೇನ್‌ ಸಿಂಗ್‌ (CM N Biren Singh) ದಿಢೀರ್‌ ರಾಜೀನಾಮೆ ಘೋಷಿಸಿದ್ದರು. ಆ ಬಳಿಕ ಉತ್ತರಾಧಿಕಾರಿ ಆಯ್ಕೆಯಲ್ಲಿ ಒಮ್ಮತವಿಲ್ಲದೇ ಸಿಎಂ ಅಭ್ಯರ್ಥಿ ಆಯ್ಕೆ ಮಾಡುವಲ್ಲಿ ವಿಫಲವಾದ ಹಿನ್ನೆಲೆ ಹಾಗೂ ವಿಧಾನಸಭೆ ಅಧಿವೇಶನ ಕೆರಯದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಲಾಗಿದೆ.

    ರಾಜ್ಯಪಾಲರ ವರದಿ ಸ್ವೀಕರಿಸಿದ ಬಳಿಕ, ನನಗೆ ಬಂದ ವರದಿ ಮತ್ತು ಇತರ ಮಾಹಿತಿಯನ್ನಾಧರಿಸಿ ಭಾರತ ಸಂವಿಧಾನದ ನಿಬಂಧನೆಗಳ ಅನ್ವಯ ರಾಷ್ಟ್ರಪತಿ ಆಳ್ವಿಕೆಯನ್ನು ಅನುಷ್ಠಾನಕ್ಕೆ ತರಲಾಗಿದೆ. ಈ ನಿರ್ಧಾರದ ಬಗ್ಗೆ ನನಗೆ ತೃಪ್ತಿ ಇದೆ ಎಂದು ರಾಷ್ಟ್ರಪತಿಗಳು ತಿಳಿಸಿರುವುದಾಗಿ ಕೇಂದ್ರ ಗೃಹ ಸಚಿವಾಲಯ ಹೇಳಿದೆ. ಇದನ್ನೂ ಓದಿ: ಮೆಟ್ರೋ ದರ 100% ಏರಿಕೆಯಾದ ಕಡೆ 30% ದರ ಇಳಿಕೆ – ಮೂಗಿಗೆ ತುಪ್ಪ ಸವರಿದ BMRCL

    ಮೋದಿ ಪ್ರವಾಸದಲ್ಲಿದ್ದಾಲೇ ಬೆಳವಣಿಗೆ:
    ಬಿಜೆಪಿ ಈಶಾನ್ಯ ಉಸ್ತುವಾರಿ ಸಂಬಿತ್‌ ಪಾತ್ರ ಅವರು ಇಂಫಾಲದಲ್ಲಿ ಪಕ್ಷದ ಶಾಸಕರೊಂದಿಗೆ ಚರ್ಚಿಸುತ್ತಿದ್ದರು. ಆದಾಗ್ಯೂ ಮಂಗಳವಾರ ಒಮ್ಮತ ನಿರ್ಧರ ಕೈಗೂಡಲಿಲ್ಲ. ಪ್ರಧಾನಿ ಮೋದಿ ಅವರು ಅಮೆರಿಕ ಪ್ರವಾಸ ಮುಗಿಸಿ ವಾಪಸ್‌ ಆದ ಬಳಿಕ ಮುಖ್ಯಮಂತ್ರಿ ಆಯ್ಕೆ ಮಾಡುವ ನಿರೀಕ್ಷೆಯಲ್ಲಿ ಬಿಜೆಪಿ ಇತ್ತು. ಈ ಮಧ್ಯೆ ವಿಧಾನಸಭೆ ಅಧಿವೇಶನ ಕರೆಯಲು ಸಮಯ ನಿಗದಿಗೊಳಿಸಲಾಗಿತ್ತು. ಸಂವಿಧಾನದ 174(1) ನೇ ವಿಧಿಯ ಪ್ರಕಾರ, ರಾಜ್ಯ ವಿಧಾನಸಭೆಗಳು ತಮ್ಮ ಕೊನೆಯ ಅಧಿವೇಶನದ ಆರು ತಿಂಗಳೊಳಗೆ ಸಭೆ ಸೇರಬೇಕು. ಆದಾಗ್ಯೂ, ಕೊನೆಯ ವಿಧಾನಸಭೆ ಅಧಿವೇಶನವು ಆಗಸ್ಟ್ 12, 2024 ರಂದು ನಡೆದಿದ್ದು, ಇಂದು ಮುಂದಿನ ಅಧಿವೇಶನಕ್ಕೆ ಗಡುವು ವಿಧಿಸಲಾಗಿದೆ.

    ಮಣಿಪುರದಲ್ಲಿ 2023ರ ಮೇ ತಿಂಗಳಿಂದಲೂ ಜನಾಂಗೀಯ ಹಿಂಸಾಚಾರ ಮುಂದುವರೆದಿದೆ. ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವಿನ ಈ ಸಂಘರ್ಷದಲ್ಲಿ ಈವರೆಗೆ 250ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಸಾವಿರಾರು ಜನರು ಸ್ಥಳಾಂತರಗೊಂಡಿದ್ದಾರೆ. ಹಿಂಸಾಚಾರ ನಿಯಂತ್ರಿಸಲು ವಿಫಲವಾದ್ದಕ್ಕಾಗಿ ವಿರೋಧ ಪಕ್ಷಗಳು ನಿರಂತರವಾಗಿ ಎನ್. ಬೀರೇನ್ ಸಿಂಗ್ ಸರ್ಕಾರವನ್ನು ಟೀಕಿಸುತ್ತಿದ್ದವು. ಇದನ್ನೂ ಓದಿ: ಹಾಕುಂಭಮೇಳದಲ್ಲಿ ಭಾಗಿಯಾಗಿ, ತ್ರಿವೇಣಿ ಸಂಗಮದಲ್ಲಿ ಮಿಂದೆದ್ದ ವಿಜಯೇಂದ್ರ

    ಇತ್ತೀಚೆಗೆ ಹಿಂಸಾಚಾರ ಮತ್ತೆ ಭುಗಿಲೆದ್ದಾಗ ಮುಖ್ಯಮಂತ್ರಿಗಳ ಮೇಲೆ ರಾಜೀನಾಮೆ ನೀಡುವ ಒತ್ತಡ ಹೆಚ್ಚಾಯಿತು. ಅವರ ವಿರುದ್ಧ ಜನರ ಆಕ್ರೋಶ ಹೆಚ್ಚುತ್ತಿರುವುದಲ್ಲದೆ, ಅವರದೇ ಪಕ್ಷದ ಶಾಸಕರು ಸಹ ವಿರೋಧ ವ್ಯಕ್ತಪಡಿಸಲು ಆರಂಭಿಸಿದ್ದರು. ರಾಜ್ಯವನ್ನು ನಿಭಾಯಿಸುವಲ್ಲಿ ವಿಫಲರಾದ ಕಾರಣ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಚರ್ಚೆಗಳು ನಡೆಯುತ್ತಿದ್ದವು. ಅಲ್ಲದೇ ಪ್ರತಿಪಕ್ಷ ಕಾಂಗ್ರೆಸ್‌ ಅವಿಶ್ವಾಸ ನಿರ್ಣಯ ಮಂಡಿಸಲೂ ಮುಂದಾಗಿತ್ತು. ಹಾಗಾಗಿ ಫೆ.9ರಂದು ಬಿರೇನ್‌ ಸಿಂಗ್‌ ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದರು.

    ಎನ್. ಬೀರೇನ್ ಸಿಂಗ್ ರಾಜೀನಾಮೆ ನಂತರ ಕೇಂದ್ರ ಗೃಹ ಸಚಿವಾಲಯವು ರಾಜ್ಯದಲ್ಲಿ ಭದ್ರತೆ ಹೆಚ್ಚಿಸಲು ಭದ್ರತಾ ಸಂಸ್ಥೆಗಳಿಗೆ ಹೈಅಲರ್ಟ್ ಘೋಷಿಸಿದೆ. ರಾಜ್ಯದಲ್ಲಿ ಈಗಾಗಲೇ ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ.

  • ಮುಂದುವರಿದ ಹಿಂಸಾಚಾರ – ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಶಿ ತರೂರ್ ಕರೆ

    ಮುಂದುವರಿದ ಹಿಂಸಾಚಾರ – ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಶಿ ತರೂರ್ ಕರೆ

    ಇಂಫಾಲ: ಕಳೆದ ಹಲವು ದಿನಗಳಿಂದ ಈಶಾನ್ಯ ಭಾಗದ ರಾಜ್ಯ ಮಣಿಪುರದಲ್ಲಿ ಹಿಂಸಾಚಾರ (Manipur Violence) ಮುಂದುವರಿಯುತ್ತಲೇ ಇದ್ದು, ಇದೀಗ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ (President’s Rule) ಕಾಂಗ್ರೆಸ್ ಸಂಸದ ಶಶಿ ತರೂರ್ (Shashi Tharoor) ಭಾನುವಾರ ಕರೆ ನೀಡಿದ್ದಾರೆ.

    ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿರುವ ತರೂರ್, ಮಣಿಪುರದಲ್ಲಿ ಹಿಂಸಾಚಾರ ಮುಂದುವರಿದಂತೆ ಬಲ ಚಿಂತನೆಯುಳ್ಳ ಭಾರತೀಯರು ತಮಗೆ ಭರವಸೆ ನೀಡಿದ್ದ ಉತ್ತಮ ಆಡಳಿತಕ್ಕೆ ಏನಾಯ್ತು ಎಂಬುದನ್ನು ತಮಗೆ ತಾವೇ ಕೇಳಿಕೊಳ್ಳಬೇಕು. ಮಣಿಪುರದ ಮತದಾರರು ತಮ್ಮ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದು ಕೇವಲ 1 ವರ್ಷದ ಬಳಿಕ ದೊಡ್ಡ ದ್ರೋಹವನ್ನು ಅನುಭವಿಸುತ್ತಿದ್ದಾರೆ. ಆಯ್ಕೆಯಾಗಿರುವುದಕ್ಕೆ ಕಾರಣವಾದ ಕೆಲಸಗಳನ್ನೇ ರಾಜ್ಯ ಸರ್ಕಾರ ಮಾಡಲು ಸಿದ್ಧವಾಗಿಲ್ಲ. ಇದೀಗ ರಾಷ್ಟ್ರಪತಿಗಳು ಆಳ್ವಿಕೆ ನಡೆಸಲು ಸಮಯ ಬಂದಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಾರತ – ಪಾಕಿಸ್ತಾನ ಕಾಶ್ಮೀರದ ವಿವಾದವನ್ನು ವಿಶ್ವಸಂಸ್ಥೆ ನಿರ್ಣಯದಂತೆ ಬಗೆಹರಿಸಬೇಕು: ಚೀನಾ

    ಬುಧವಾರ ಮಣಿಪುರದ ಆದಿವಾಸಿಗಳು ಹಾಗೂ ಬಹುಸಂಖ್ಯಾತ ಮೈತೆ ಸಮುದಾಯಕ್ಕೆ ಸೇರಿದ ಜನರ ನಡುವೆ ಹಿಂಸಾತ್ಮಕ ಘರ್ಷಣೆ ಪ್ರಾರಂಭವಾಯಿತು. ಪರಿಣಾಮ ಸಾವಿರಾರು ಜನರನ್ನು ಸ್ಥಳಾಂತರಿಸಲಾಗಿದ್ದು, ಘರ್ಷಣೆಯಲ್ಲಿ 54 ಜನರು ಸಾವನ್ನಪ್ಪಿದ್ದಾರೆ.

    ಮಣಿಪುರದ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಶನಿವಾರ ರಾಜ್ಯದಲ್ಲಿ ಶಾಂತಿಯ ಉಪಕ್ರಮಗಳನ್ನು ಅನುಷ್ಠಾನಗೊಳಿಸುವ ಸಲುವಾಗಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಶಾಂತಿ ಸಮಿತಿಯನ್ನು ರಚಿಸುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಅಜ್ಜಿ ಗೆದ್ದಿದ್ದ ತೆಲಂಗಾಣದ ಮೇದಕ್ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಲೋಕಸಭೆಗೆ ಸ್ಪರ್ಧೆ?

  • ರಾಷ್ಟ್ರಪತಿ ನಿಮ್ಮ ಜೇಬಿನಲ್ಲಿದ್ದಾರಾ? ಬಿಜೆಪಿ ಹೇಳಿಕೆಗೆ ಶಿವಸೇನೆ ಕೆಂಡಾಮಂಡಲ

    ರಾಷ್ಟ್ರಪತಿ ನಿಮ್ಮ ಜೇಬಿನಲ್ಲಿದ್ದಾರಾ? ಬಿಜೆಪಿ ಹೇಳಿಕೆಗೆ ಶಿವಸೇನೆ ಕೆಂಡಾಮಂಡಲ

    ಮುಂಬೈ: ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುವ ಸಾಧ್ಯತೆ ಎಂದ ಬಿಜೆಪಿಗೆ ತಿರುಗೇಟು ನೀಡಿರುವ ಶಿವಸೇನೆ, ರಾಷ್ಟ್ರಪತಿ ನಿಮ್ಮ ಜೇಬಿನಲ್ಲಿದ್ದಾರಾ ಎಂದು ಪ್ರಶ್ನೆ ಮಾಡಿದೆ.

    ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಬಿಕ್ಕಟ್ಟು ದಿನದಿಂದ ದಿನಕ್ಕೆ ಜಟಿಲವಾಗುತ್ತಿದೆ. ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡ ಶಿವಸೇನೆ ಮತ್ತು ಬಿಜೆಪಿಗೆ ಬಹುಮತ ಸಿಕ್ಕಿದೆ. ಎರಡೂ ಪಕ್ಷಗಳ ನಡುವಿನ ಹಗ್ಗ-ಜಗ್ಗಾಟದಾಟ ಮತ್ತಷ್ಟು ಕಠಿಣವಾಗುತ್ತಿದೆ. ಎರಡೂ ಪಕ್ಷಗಳ ನಾಯಕರ ಪರಸ್ಪರ ವಿರೋಧಿ ಹೇಳಿಕೆಗಳನ್ನು ನೀಡುತ್ತಿದ್ದು, ಮಹಾರಾಷ್ಟ್ರ ರಾಜಕಾರಣ ದಿನದಿಂದ ದಿನಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ.

    ನವೆಂಬರ್ 8ರೊಳಗೆ ಸರ್ಕಾರ ರಚಿಸದಿದ್ದರೆ ರಾಷ್ಟ್ರಪತಿ ಆಡಳಿತ ಜಾರಿಯಾಗುವ ಸಾಧ್ಯತೆಗಳಿವೆ ಎಂದು ಬಿಜೆಪಿಯ ಸುಧೀರ್ ಮುಂಗಂಟಿವರ್ ಸ್ಫೋಟಕ ಹೇಳಿಕೆ ನೀಡುವ ಮೂಲಕ ಮಹಾರಾಷ್ಟ್ರ ರಾಜಕಾರಣದಲ್ಲಿ ಅಲ್ಲೋಲ-ಕಲ್ಲೋಲ ಎಬ್ಬಿಸಿದ್ದರು. ಇದೀಗ ಸುಧೀರ್ ಹೇಳಿಕೆಗೆ ತಿರುಗೇಟು ನೀಡಿರುವ ಶಿವಸೇನೆ ತನ್ನ ಮುಖವಾಣಿ ಸಾಮ್ನಾ ಪತ್ರಿಕೆಯ ಮುಖಪುಟದಲ್ಲಿ ರಾಷ್ಟ್ರಪತಿ ನಿಮ್ಮ ಜೇಬಿನಲ್ಲಿದ್ದಾರಾ ಎಂದು ಪ್ರಶ್ನಿಸಿದೆ.

    ರಾಷ್ಟ್ರಪತಿಗಳ ಸಹಿಯ ರಬ್ಬರ್ ಸ್ಟ್ಯಾಂಪ್ ಮಹಾರಾಷ್ಟ್ರದ ಬಿಜೆಪಿಯ ಕಾರ್ಯಾಲಯದಲ್ಲಿರಬೇಕು. ಒಂದು ವೇಳೆ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡದಿದ್ದಲ್ಲಿ, ಈ ರಬ್ಬರ್ ಸ್ಟ್ಯಾಂಪ್ ಬಳಸುವ ಮೂಲಕ ರಾಷ್ಟ್ರಪತಿ ಆಡಳಿತದ ತುರ್ತು ಪರಿಸ್ಥಿತಿ ತರಲು ಮುಂದಾಗುತ್ತಿದ್ದಾರೆ. ಬಿಜೆಪಿಯ ಈ ಬೆದರಿಕೆಯನ್ನು ರಾಜ್ಯದ ಜನತೆ ಅರ್ಥ ಮಾಡಿಕೊಳ್ಳುತ್ತಾರೆ ಬರೆದುಕೊಂಡಿದೆ.

    ಸುಧೀರ್ ಮುಂಗಂಟಿವರ್ ಅವರು ಈಗಿರುವ ವಿಧಾನಸಭೆ ಅವಧಿಯ ಅಧಿಕಾರಾವಧಿ ನವೆಂಬರ್ 8ಕ್ಕೆ ಕೊನೆಗೊಳ್ಳಲಿದೆ. ನವೆಂಬರ್ 7ರೊಳಗೆ ಸರ್ಕಾರ ರಚನೆಯಾಗದಿದ್ದರೆ ರಾಷ್ಟ್ರಪತಿ ಆಡಳಿತ ಜಾರಿಯಾಗುವ ಸಾಧ್ಯತೆ ಇದೆ ಎಂದಿದ್ದರು.

    ಸಿಎಂ ಸ್ಥಾನಕ್ಕಾಗಿ ಪಟ್ಟು ಹಿಡಿದಿರುವ ಶಿವಸೇನೆ ಬಿಜೆಪಿಯೇತರ ಸರ್ಕಾರ ರಚನೆಗೆ ಪ್ಲಾನ್ ಮಾಡಿಕೊಂಡಿದೆ. ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಶಿವಸೇನೆಯ ಹಿರಿಯ ಮುಖಂಡ ಸಂಜಯ್ ರಾವತ್ ಭೇಟಿಯಾಗಿ ಹೊಸ ಸಮೀಕರಣ (ಶಿವಸೇನೆ+ಎನ್‍ಸಿಪಿ+ಕಾಂಗ್ರೆಸ್=ಸರ್ಕಾರ) ಮುಂದಿಟ್ಟು ರಹಸ್ಯ ಮಾತುಕತೆ ನಡೆಸಿದ್ದರು. ಇತ್ತ ಮಹಾರಾಷ್ಟ್ರದ ಕಾಂಗ್ರೆಸ್ ನಾಯಕರು ಸಹ ದೆಹಲಿಗೆ ತೆರಳಿ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಅವರ ಜೊತೆ ಮಾತುಕತೆ ನಡೆಸಿದ್ದಾರೆ. ಬಿಜೆಪಿ ಮಾತ್ರ ತಾನೇ ಐದು ವರ್ಷ ಸರ್ಕಾರ ರಚಿಸೋದು, ನಮ್ಮವರೇ ಸಿಎಂ ಸ್ಥಾನ ಅಲಂಕರಿಸೋದು ಎಂದು ಹೇಳುತ್ತಿದೆ.

  • ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಸಾಧ್ಯತೆ

    ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಸಾಧ್ಯತೆ

    ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಫಲಿತಾಂಶ ಹೊರ ಬಂದು 8 ದಿನಗಳು ಕಳೆದರೂ ಸರ್ಕಾರ ರಚನೆಯಾಗಿಲ್ಲ. ಹೀಗಾಗಿ ರಾಷ್ಟ್ರಪತಿ ಆಡಳಿತ ಜಾರಿಯಾಗುವ ಸಾಧ್ಯತೆ ಇದೆ.

    ಈಗಿರುವ ವಿಧಾನಸಭೆ ಅವಧಿಯ ಅಧಿಕಾರಾವಧಿ ನವೆಂಬರ್ 8ಕ್ಕೆ ಕೊನೆಗೊಳ್ಳಲಿದೆ. ಈ ಕುರಿತು ಮಾತನಾಡಿರುವ ಬಿಜೆಪಿ ಮುಖಂಡ ಸುಧೀರ್ ಮುಂಗಂಟಿವರ್, ನವೆಂಬರ್ 7ರೊಳಗೆ ಸರ್ಕಾರ ರಚನೆಯಾಗದಿದ್ದರೆ ರಾಷ್ಟ್ರಪತಿ ಆಡಳಿತ ಜಾರಿಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಿಎಂ ಸ್ಥಾನ ನಮಗೆ ಬರೆದಿಟ್ಟುಕೊಳ್ಳಿ – ಬಿಜೆಪಿ ಇಲ್ಲದೇ ಸರ್ಕಾರ ರಚನೆಗೆ ಶಿವಸೇನೆ ಪ್ಲಾನ್

    ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಶಿವಸೇನ ಮಾತುಕತೆ ವಿಳಂಬವಾಗಿದೆ. ಮುಂದಿನ ಒಂದು ಅಥವಾ ಎರಡು ದಿನಗಳಲ್ಲಿ ಮಾತುಕತೆ ನಡೆಸಿ, ಸರ್ಕಾರ ರಚಿಸಲಾಗುತ್ತದೆ. ರಾಜ್ಯದ ಜನತೆ ಯಾವುದೇ ಒಂದು ಪಕ್ಷಕ್ಕೆ ಬಹುಮತ ನೀಡಿಲ್ಲ. ಬಿಜೆಪಿ-ಶಿವಸೇನಯನ್ನು ಒಳಗೊಂಡ ಮೈತ್ರಿಗೆ ಜನರು ಬಹುಮತ ನೀಡಿದ್ದಾರೆ. ನಮ್ಮ ಮೈತ್ರಿ ಫೆವಿಕಾಲ್ ಅಥವಾ ಅಂಬುಜಾ ಸಿಮೆಂಟ್‍ಗಿಂತ ಬಲವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಇಲ್ಲಿ ಯಾರು ಜೈಲಿನಲ್ಲಿರುವ ಪುತ್ರ ದುಷ್ಯಂತ್ ಚೌಟಾಲಾ ಇಲ್ಲ: ಶಿವಸೇನೆ

    ಈ ನಡುವೆ ಮುಖ್ಯಮಂತ್ರಿ ಪಟ್ಟ ಬೇಕು ಅಂತ ಜೋತುಬಿದ್ದು ಬಿಜೆಪಿಗೆ ಬಿಸಿತುಪ್ಪವಾಗಿರುವ ಶಿವಸೇನೆ ಈಗ ಎನ್‍ಸಿಪಿ ಜೊತೆ ಡೈರೆಕ್ಟ್ ಡೀಲಿಂಗ್‍ಗೆ ಮುಂದಾಗಿದೆ. ಫೋನ್‍ಕಾಲ್ ಮೂಲಕ ಎನ್‍ಸಿಪಿ ಮುಖಂಡ ಶರದ್ ಪವಾರ್ ಜೊತೆ ಶಿವಸೇನ ನಾಯಕ ಉದ್ಧವ್ ಠಾಕ್ರೆ ಮಾತುಕತೆ ನಡೆಸಿದ್ದಾರೆ. ಈ ಬೆನ್ನಲ್ಲೇ ಶಿವಸೇನೆಯ ನಾಯಕರೇ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗುತ್ತಾರೆ ಎಂದು ಶಿವಸೇನ ಸಂಜಯ್ ರಾವತ್ ಹೇಳಿದ್ದಾರೆ.

    ಎನ್‍ಸಿಪಿ-ಕಾಂಗ್ರೆಸ್ ವಿಪಕ್ಷ ಸ್ಥಾನದಲ್ಲಿ ಕೂರಲಿವೆ ಎಂದು ಎನ್‍ಸಿಪಿಯ ಅಜಿತ್ ಪವಾರ್ ಒಂದು ಹೇಳಿಕೆ ಕೊಟ್ಟಿದ್ದಾರೆ. ಮತ್ತೊಂದು ಕಡೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ಮಹಾರಾಷ್ಟ್ರ ಕೈ ಮುಖಂಡರಾದ ಪೃಥ್ವಿರಾಜ್ ಚೌವ್ಹಾಣ್, ಅಶೋಕ್ ಚೌವ್ಹಾಣ್ ಮಾತುಕತೆ ನಡೆಸಿದ್ದಾರೆ. ಈ ಮಧ್ಯೆ, ಜಾರ್ಖಂಡ್‍ಗೆ ನವೆಂಬರ್ 30ರಿಂದ ಡಿಸೆಂಬರ್ 20ರವೆಗೆ 5 ಹಂತದಲ್ಲಿ ಚುನಾವಣೆಯಲ್ಲಿದ್ದು, ಡಿಸೆಂಬರ್ 23ಕ್ಕೆ ಫಲಿತಾಂಶ ಪ್ರಕಟವಾಗಲಿದೆ.