Tag: Pressure

  • ಟಿಎಚ್‍ಒ ಆತ್ಮಹತ್ಯೆಗೆ ಟ್ವಿಸ್ಟ್- ಒತ್ತಡಕ್ಕೆ ಸಿಲುಕಿಯೇ ಆತ್ಮಹತ್ಯೆ ಮಾಡ್ಕೊಂಡ್ರಾ ವಾರಿಯರ್?

    ಟಿಎಚ್‍ಒ ಆತ್ಮಹತ್ಯೆಗೆ ಟ್ವಿಸ್ಟ್- ಒತ್ತಡಕ್ಕೆ ಸಿಲುಕಿಯೇ ಆತ್ಮಹತ್ಯೆ ಮಾಡ್ಕೊಂಡ್ರಾ ವಾರಿಯರ್?

    ಮೈಸೂರು: ಉನ್ನತ ಅಧಿಕಾರಿ ಜೊತೆ ಟಿಎಚ್‍ಓ ಡಾ. ನಾಗೇಂದ್ರ ಮಾತಾಡಿದ್ದಾರೆ ಎನ್ನಲಾಗುತ್ತಿರುವ ಆಡಿಯೋ ವೈರಲ್ ಆಗಿದ್ದು, ಆಡಿಯೋ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಆರೋಗ್ಯಾಧಿಕಾರಿ ನಾಗೇಂದ್ರ ಶುಕ್ರವಾರ ಬೆಳಗ್ಗೆ ತಮ್ಮ ಮೈಸೂರಿನ ಆಲನಹಳ್ಳಿ ನಿವಾಸದಲ್ಲಿ ನೇಣಿಗೆ ಶರಣಾಗಿದ್ದರು. ಕಳೆದ ಒಂದು ವರ್ಷದಿಂದ ನಂಜನಗೂಡಿನಲ್ಲಿ ತಾಲೂಕು ಆರೋಗ್ಯಾಧಿಕಾರಿಯಾಗಿ ನಾಗೇಂದ್ರ ಕಾರ್ಯನಿರ್ವಹಿಸುತ್ತಿದ್ದರು.

    ಡಾ. ನಾಗೇಂದ್ರ ಅವರಿಗೆ ಜಿಲ್ಲಾ ಪಂಚಾಯಿತಿ ಸಿಇಓ ಪ್ರಶಾಂತ್ ಕುಮಾರ್ ಮಿಶ್ರಾ ಅವರಿಂದ ಒತ್ತಡ ಇತ್ತು ಎನ್ನಲಾಗಿದೆ. ಕೊರೊನಾ ಟೆಸ್ಟ್ ಟಾರ್ಗೆಟ್ ಹೆಚ್ಚು ನೀಡಿ ಕಡ್ಡಾಯವಾಗಿ ಮಾಡಲೇಬೇಕೆಂದು ಒತ್ತಡ ಹಾಕಲಾಗಿದೆ. ಇಲಾಖೆಯಲ್ಲಿ ನೌಕರರ ಸಂಖ್ಯೆ ಬಹಳ ಕಡಮೆ ಇದ್ದರೂ ಹೆಚ್ಚುವರಿ ಕೆಲಸ ನೀಡುತ್ತಿದ್ದರು. ಜೊತೆಗೆ 6 ತಿಂಗಳಿಂದ ಒಂದು ದಿನವೂ ರೆಜೆ ನೀಡದೆ ಕೆಲಸ ಮಾಡಿಸಿಕೊಂಡಿದ್ದಾರೆ. ಈಗ ಉನ್ನತ ಅಧಿಕಾರಿ ಜೊತೆ ನಾಗೇಂದ್ರ ಮಾತಾಡಿದ್ದಾರೆ ಎನ್ನಲಾಗುತ್ತಿರುವ ಆಡಿಯೋ ವೈರಲ್ ಆಗಿದ್ದು, ಕುಟುಂಬಸ್ಥರು ನ್ಯಾಯಕ್ಕಾಗಿ ಪಟ್ಟುಹಿಡಿದಿದ್ದಾರೆ.

    ಆಡಿಯೋ ಸಂಭಾಷಣೆ ಇಲ್ಲಿದೆ:

  • ನಕಲಿ ಬಿತ್ತನೆ ಬೀಜದ ವಿಷಯದಲ್ಲಿ ಕೆಲ ರಾಜಕಾರಣಿಗಳಿಂದ ಒತ್ತಡ: ಬಿ.ಸಿ ಪಾಟೀಲ್

    ನಕಲಿ ಬಿತ್ತನೆ ಬೀಜದ ವಿಷಯದಲ್ಲಿ ಕೆಲ ರಾಜಕಾರಣಿಗಳಿಂದ ಒತ್ತಡ: ಬಿ.ಸಿ ಪಾಟೀಲ್

    ಹಾವೇರಿ: ನಕಲಿ ಬಿತ್ತನೆ ಬೀಜ ಸಂಗ್ರಹ ಮಾಡಿ ಇಟ್ಟಿದ್ದವರ ಮೇಲೆ ಕ್ರಮ ಕೈಗೊಳ್ಳದಂತೆ ಕೆಲವು ರಾಜಕಾರಣಿಗಳು ಮತ್ತು ಜನಪ್ರತಿನಿಧಿಗಳು ಒತ್ತಡ ಹೇರುತ್ತಿದ್ದಾರೆ. ಆದರೆ ನಾನು ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ. ಒತ್ತಡಕ್ಕೆ ಮಣಿದರೆ ರೈತರ ಪರಿಸ್ಥಿತಿ ತಾಯಿಯೇ ಮಗನಿಗೆ ವಿಷ ಹಾಕಿದಂತಾಗುತ್ತದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

    ಹಾವೇರಿ ಜಿಲ್ಲೆ ಹಿರೇಕೆರೂರು ಪಟ್ಟಣದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಅವರು, ಕಳೆದ ವಾರ ಹಾವೇರಿ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ನಕಲಿ ಬಿತ್ತನೆ ಬೀಜ ಸಂಗ್ರಹ ಮಾಡಿದ್ದ ಅಡ್ಡೆಗಳ ಮೇಲೆ ದಾಳಿ ಮಾಡಿದ್ದರು ಎಂದು ತಿಳಿಸಿದ್ದಾರೆ.

    ದಾಳಿ ವೇಳೆ ಒಂದು 1 ಲಕ್ಷದ 685 ಕ್ವಿಂಟಲ್ ನಕಲಿ ಬಿತ್ತನೆ ಬೀಜವನ್ನು ಜಪ್ತಿ ಮಾಡಲಾಗಿದೆ. ಆದರೆ ಪೊಲೀಸ್ ಇಲಾಖೆ ಈವರೆಗೂ ಒಬ್ಬ ಆರೋಪಿಯನ್ನೂ ಬಂಧನ ಮಾಡಿಲ್ಲ. ಇದು ಬೇಸರದ ಸಂಗತಿ. ನಕಲಿ ಬೀಜ ಸಂಗ್ರಹ ಮಾಡಿದ್ದವರು ಮತ್ತು ನಕಲಿ ಬೀಜ ಮಾರಾಟ ಮಾಡುತ್ತಿದ್ದವರನ್ನು ಬಂಧಿಸಿ ಜೈಲಿಗೆ ಅಟ್ಟುವಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿದ್ದೇನೆ ಎಂದು ಹೇಳಿದರು.

    ನಕಲಿ ಬಿತ್ತನೆ ಬೀಜ ತಯಾರಿಸುತ್ತಿರುವ ಮೂಲವನ್ನು ಪತ್ತೆ ಮಾಡಿ ರೈತರಿಗೆ ಆಗುತ್ತಿರುವ ದೊಡ್ಡ ಅನ್ಯಾಯವನ್ನು ತಪ್ಪಿಸುವಂತೆ ಗೃಹ ಸಚಿವರು ಮತ್ತು ಪೊಲೀಸ್ ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದೇನೆ. ಅಲ್ಲದೇ ಅವಧಿ ಮೀರಿದ ರಸಗೊಬ್ಬರ ಮಾರಾಟ ಮಾಡೋದು ಕಂಡುಬಂದರೆ ಅಂಥಾ ಅಂಗಡಿಗಳ ಲೈಸನ್ಸ್ ರದ್ದು ಮಾಡುವುದಾಗಿ ತಿಳಿಸಿದರು. ಪ್ರಸಕ್ತ ವರ್ಷ ರೈತರಿಗೆ ಬೇಕಾದ ಬಿತ್ತನೆ ಬೀಜ ಮತ್ತು ರಸಗೊಬ್ಬರದ ಕೊರತೆ ಆಗದಂತೆ ಕ್ರಮ ಕೈಗೊಂಡಿದ್ದೇವೆ ಎಂದು ಸಚಿವ ಪಾಟೀಲ್ ಹೇಳಿದರು.

  • ಪ್ರೀತಿಸಿದ ಯುವತಿ ಜೊತೆ ಹಸೆಮಣೆ ಏರಬೇಕಿದ್ದ ಯುವಕ ನೇಣಿಗೆ ಶರಣು!

    ಪ್ರೀತಿಸಿದ ಯುವತಿ ಜೊತೆ ಹಸೆಮಣೆ ಏರಬೇಕಿದ್ದ ಯುವಕ ನೇಣಿಗೆ ಶರಣು!

    ಮೈಸೂರು: ಪ್ರೀತಿಸಿದ ಯುವತಿ ಜೊತೆ ಹಸೆಮಣೆ ಏರಬೇಕಿದ್ದ ಯುವಕ ನೇಣಿಗೆ ಶರಣಾಗಿರೋ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಕ್ಯಾತಮಾರನಹಳ್ಳಿಯಲ್ಲಿ ನಡೆದಿದೆ.

    ದೀಪಕ್(23) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಕ್ಯಾತಮಾರನಹಳ್ಳಿಯ ಅನಿತಾ ಎಂಬ ಯುವತಿಯನ್ನು ಪ್ರೀತಿಸಿದ್ದ. ಮದುವೆ ಆಗುವಂತೆ ಅನಿತಾ ಹಾಗೂ ಪೋಷಕರು ದೀಪಕ್ ಮೇಲೆ ಒತ್ತಡ ಹೇರಿದ್ದರು. ಆಗ ದೀಪಕ್ ಸದ್ಯಕ್ಕೆ ಮದುವೆ ಬೇಡ ಎಂದು ಹೇಳಿದ್ದ.

    ಇನ್ನೂ ಎರಡು-ಮೂರು ವರ್ಷ ಮದುವೆ ಆಗುವುದಕ್ಕೆ ಆಗುವುದಿಲ್ಲ ಎಂದು ದೀಪಕ್ ಹೇಳಿದ್ದ. ಆದರೂ ಅನಿತಾ ಪೋಷಕರು ಉದಯಗಿರಿ ಪೊಲೀಸ್ ಠಾಣೆಗೆ ದೀಪಕ್‍ನನ್ನು ಕರೆಸಿ ಮದುವೆ ನಿಗದಿ ಮಾಡಿಕೊಳ್ಳುವಂತೆ ಒತ್ತಡ ಹಾಕಿದ್ದರು ಎನ್ನಲಾಗುತ್ತಿದೆ.

    ಮದುವೆ ದಿನಾಂಕ ನಿಶ್ಚಯಿಸುವಂತೆ ಅನಿತಾ ಮನೆಯವರಿಂದ ಯಾವಾಗ ವಿಪರೀತ ಒತ್ತಡ ಉಂಟಾಯಿತೋ ಇದರಿಂದ ಬೇಸತ್ತ ದೀಪಕ್ ನೇಣಿಗೆ ಶರಣಾಗಿದ್ದಾನೆ. ಈ ಬಗ್ಗೆ ದೀಪಕ್ ಪೋಷಕರು, ಅನಿತಾ ಹಾಗೂ ಆಕೆಯ ಪೋಷಕರ ವಿರುದ್ಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.