Tag: price hike

  • ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ 16 ರೂ. ಏರಿಕೆ

    ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ 16 ರೂ. ಏರಿಕೆ

    ನವದೆಹಲಿ: ಇದೀಗ ಆಯುಧ ಪೂಜೆಯಂದೇ ತೈಲ ಮಾರುಕಟ್ಟೆ ಕಂಪನಿಗಳು ಗ್ರಾಹಕರಿಗೆ ದರ ಏರಿಕೆಯ ಶಾಕ್ ಕೊಟ್ಟಿದೆ. 19 ಕೆಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ (Liquefied Petroleum Gas) ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು 15.50 ರೂ. ಏರಿಕೆ ಮಾಡಿದೆ.

    ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ (Commercial LPG cylinder) ಬೆಲೆಯಲ್ಲಿ ಮಾರುಕಟ್ಟೆ ಕಂಪನಿಗಳು ಹೊಸ ಪರಿಷ್ಕರಣೆಯನ್ನು ಘೋಷಿಸಿದ್ದು, ಇಂದಿನಿಂದಲೇ ಈ ದರ ಜಾರಿಯಲ್ಲಿರಲಿದೆ. ದೇಶೀಯ ಬಳಕೆಗೆ ಬಳಸುವ 14.2 ಕೆಜಿ ಸಿಲಿಂಡರ್‌ನ ಬೆಲೆಯಲ್ಲಿ ಯಾವುದೇ ಬದಲಾವಣೆಯಿಲ್ಲ. ಇದನ್ನೂ ಓದಿ: ನಾಡಹಬ್ಬ ದಸರಾ ಸಂಭ್ರಮ – ಅಂಬಾವಿಲಾಸ ಅರಮನೆಯಲ್ಲಿ ಕಳೆಗಟ್ಟಿದ ಆಯುಧಪೂಜೆ

    ಎಲ್ಲೆಲ್ಲಿ ಎಷ್ಟೆಷ್ಟು ಬೆಲೆ?
    ನವದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 15.50 ರೂ. ಬೆಲೆ ಏರಿಕೆ ಆಗಿದ್ದು, ಪ್ರಸ್ತುತ ಸಿಲಿಂಡರ್ ಬೆಲೆ 1595.50 ರೂ. ಆಗಿದೆ. ಕೋಲ್ಕತ್ತಾದಲ್ಲಿ 16.5 ರೂ. ದರ ಹೆಚ್ಚಳವಾಗಿದ್ದು, 1,700.50 ರೂ. ಬೆಲೆಗೆ ಲಭ್ಯವಿದೆ. ಮುಂಬೈನಲ್ಲಿ 15.50 ರೂ. ಬೆಲೆ ಏರಿಕೆ ಆಗಿದ್ದು, ಸಿಲಿಂಡರ್ ಬೆಲೆ 1,547 ರೂ. ಆಗಿದ್ದು, ಚೆನ್ನೈನಲ್ಲಿ 16.5 ರೂ. ದರ ಹೆಚ್ಚಳವಾಗಿದ್ದು, 1754.50 ರೂ. ಬೆಲೆಗೆ 19 ಕೆಜಿ ವಾಣಿಜ್ಯ ಸಿಲಿಂಡರ್ ಲಭ್ಯವಿದೆ.

    ಗೃಹಬಳಕೆ ಸಿಲಿಂಡರ್‌ಗಳು ದರ ಏರಿಕೆ ಇಲ್ಲ
    14.2 ಕೆಜಿ ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳ ದರಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ವಾಣಿಜ್ಯ ದರಗಳಲ್ಲಿ ಏರಿಕೆಯ ಹೊರತಾಗಿಯೂ ದೇಶೀಯ ಅಡುಗೆ ಅನಿಲ ಬೆಲೆಗಳು ಸದ್ಯಕ್ಕೆ ಸ್ಥಿರವಾಗಿವೆ. ವಾಣಿಜ್ಯ ಬಳಕೆಯ ಗ್ಯಾಸ್ ದರ ಏರಿಕೆ ಮಾಡಿರುವುದು ಹೋಟೆಲ್ ಹಾಗೂ ರೆಸ್ಟೋರೆಂಟ್ ಮಾಲೀಕರಿಗೆ ಬರೆ ಎಳೆದಂತಾಗಿದೆ.

  • ಗಮನಿಸಿ – ದಸರಾ ಪ್ರಯುಕ್ತ ಮೈಸೂರು KSRTC ಬಸ್‌ ಟಿಕೆಟ್‌ ದರ ಏರಿಕೆ

    ಗಮನಿಸಿ – ದಸರಾ ಪ್ರಯುಕ್ತ ಮೈಸೂರು KSRTC ಬಸ್‌ ಟಿಕೆಟ್‌ ದರ ಏರಿಕೆ

    – ಗ್ಯಾರಂಟಿ ಸರ್ಕಾರದಿಂದ ಜನಕ್ಕೆ ಶಾಕ್‌; ಯಾವ್ಯಾವ ಬಸ್‌ ಟಿಕೆಟ್‌ ದರ ಎಷ್ಟಿದೆ?

    ಬೆಂಗಳೂರು: ಗ್ಯಾರಂಟಿ ಸರ್ಕಾರ ರಾಜ್ಯದ ಜನರಿಗೆ ಮತ್ತೆ ದರ ಏರಿಕೆ ಬರೆ ಎಳೆದಿದೆ. ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿ ಬಸ್‌ ಟಿಕೆಟ್ ದರ ಏರಿಕೆ ಮಾಡಿದೆ. ಬರೋಬ್ಬರಿ 20 ರೂ. ಏರಿಕೆ ಮಾಡಿದ್ದು ಪ್ರಯಾಣಿಕರು ಆಕ್ರೋಶ ಹೊರ ಹಾಕಿದ್ದಾರೆ.

    ದಸರಾ ಹಬ್ಬದ ಪ್ರಯುಕ್ತ ಟಿಕೆಟ್ ದರ ಇಳಿಕೆ ಮಾಡಿ ದಸರಾ ವೀಕ್ಷಣೆಗೆ ಅವಕಾಶ ಮಾಡಿಕೊಡಬೇಕಾಗಿತ್ತು ಸರ್ಕಾರ. ಆದರೆ ಸಾರಿಗೆ ಇಲಾಖೆ ಮೈಸೂರು ಮಾರ್ಗದ ಕೆಎಸ್ ಆರ್ಟಿಸಿ ಬಸ್ ದರವನ್ನ ಏರಿಕೆ ಮಾಡಿದೆ. ಎಲ್ಲಾ ಕೆಎಸ್ ಆರ್ಟಿಸಿ ಬಸ್ ದರ ಬರೋಬ್ಬರಿ ೨೦ ರೂಪಾಯಿ ಏರಿಕೆ ಮಾಡಿದೆ. ಪ್ರಯಾಣಿಕರು ಟಿಕೆಟ್ ದರ ಏರಿಕೆ ಮಾಡಿರೋದಕ್ಕೆ ಆಕ್ರೋಶ ಹೊರ ಹಾಕ್ತಾ ಇದ್ದಾರೆ.

    ಇನ್ನೂ ಕೆಎಸ್‌ಆರ್‌ಟಿಸಿ ವೇಗದೂತ, ತಡೆರಹಿತ, ರಾಜಹಂಸ, ಐರಾವತ ಸೇರಿದಂತೆ ಎಲ್ಲಾ ಬಸ್‌ಗಳ ದರ ಏರಿಕೆ ಆಗಿದೆ. ದಸರಾ ಮುಗಿಯುವವರೆಗೂ ದರ ಏರಿಕೆ ಇರಲಿದೆ.

    ಯಾವ್ಯಾವ ಬಸ್‌ ಟಿಕೆಟ್‌ ದರ ಎಷ್ಟಿದೆ?
    ಕರ್ನಾಟಕ ಸಾರಿಗೆ ವೇಗದೂತ – 170 ರೂ. ನಿಂದ 190 ರೂ.ಗೆ
    ತಡೆ ರಹಿತ ಸಾರಿಗೆ – 210 ರಿಂದ 240 ರೂ.
    ರಾಜಾಹಂಸ – 270 ರಿಂದ 290 ರೂ.
    ಐರಾವತ – 430 ರಿಂದ 450 ರೂ.
    ಐರಾವತ ಕ್ಲಬ್ ಕ್ಲಾಸ್ – 440 ರಿಂದ 460 ರೂ.

    ದಸರಾ ಪ್ರಯುಕ್ತ ಟಿಕೆಟ್ ದರ ಇಳಿಕೆ ಮಾಡಿ ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಡಬೇಕು.‌ ಆದ್ರೆ ಟಿಕೆಟ್ ದರ ಏರಿಕೆ ಮಾಡಿ ಪ್ರಯಾಣಿಕರಿಗೆ ಶಾಕ್ ನೀಡಿರೋದು ಸರಿಯಲ್ಲ.

  • ಬೈಕ್ ಟ್ಯಾಕ್ಸಿಗೆ ಬ್ರೇಕ್ – ಓಲಾ ಸೇರಿ ಅಗ್ರಿಗೇಟರ್‌ ಕಂಪನಿಗಳಿಂದ ಸುಲಿಗೆ

    ಬೈಕ್ ಟ್ಯಾಕ್ಸಿಗೆ ಬ್ರೇಕ್ – ಓಲಾ ಸೇರಿ ಅಗ್ರಿಗೇಟರ್‌ ಕಂಪನಿಗಳಿಂದ ಸುಲಿಗೆ

    ಬೆಂಗಳೂರು: ರಾಜ್ಯಾದ್ಯಂತ ಬೈಕ್ ಟ್ಯಾಕ್ಸಿ  (Bike Taxi) ನಿಷೇಧದ ಬೆನ್ನಲ್ಲೇ ಇದೀಗ ಅಗ್ರಿಗೇಟರ್‌ ಕಂಪನಿಗಳ ಆಟೋ ಪ್ರಯಾಣದ ದರ ಏರಿಕೆಯಾಗಿದೆ.

    ಬೈಕ್ ಟ್ಯಾಕ್ಸಿಗೆ ಬ್ರೇಕ್ ಹಾಕಿರುವುದನ್ನೇ ಬಂಡವಾಳ ಮಾಡಿಕೊಂಡು ಓಲಾ (Ola) ಸೇರಿದಂತೆ ಕೆಲವು ಅಗ್ರಿಗೇಟ್ ಆಟೋ ಕಂಪನಿಗಳು ಇದೀಗ ಅಟೋ ದರವನ್ನು ಬೇಕಾಬಿಟ್ಟಿಯಾಗಿ ಏರಿಸಿವೆ ಎಂಬ ಆರೋಪ ಕೇಳಿಬಂದಿದೆ.ಇದನ್ನೂ ಓದಿ: ಕೊಡಗು | 7ನೇ ಹೊಸಕೋಟೆ ಗ್ರಾಪಂ ಸದಸ್ಯೆ ಪುತ್ರ ಬೆಂಗಳೂರಿನಲ್ಲಿ ಆತ್ಮಹತ್ಯೆ

    ಉದಾಹರಣೆಗೆ ಟೌನ್‌ಹಾಲ್‌ನಿಂದ (Town Hall) ಮೆಜೆಸ್ಟಿಕ್ ಬಸ್ (Majestic) ನಿಲ್ದಾಣಕ್ಕಿರುವ ಅಂತರ 2.02 ಕಿ.ಮೀ. ನಿಯಮದ ಪ್ರಕಾರ 30-35 ರೂ. ತೆಗೆದುಕೊಳ್ಳಬೇಕು. ಆದರೆ ಓಲಾ 98 ರೂ. ತೆಗೆದುಕೊಳ್ಳುತ್ತಿದೆ. ಇದೇ ರೀತಿ ಹಲವೆಡೆ ಬೇಕಾಬಿಟ್ಟಿ ವಸೂಲಿ ಮಾಡುತ್ತಿರುವುದಾಗಿ ಆರೋಪ ಕೇಳಿಬಂದಿದೆ. ಈ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿ, ಮೀಟರ್ ಪ್ರಕಾರ ಹಣ ತೆಗೆದುಕೊಳ್ಳಿ. ಹೀಗೆ ಹಗಲು ದರೋಡೆ ಮಾಡುತ್ತಿರುವುದು ಸರಿಯಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    2021ರಿಂದ ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿ ಸೇವೆ ಜಾರಿಯಲ್ಲಿತ್ತು. ಇದು ಆಟೋ ಚಾಲಕರು ಮತ್ತು ಕ್ಯಾಬ್ ಚಾಲಕರ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲಲ್ಲಿ ಬೈಕ್ ಟ್ಯಾಕ್ಸಿ ಸವಾರರ ಮೇಲೆ ಹಲ್ಲೆ ಸಹ ನಡೆದಿತ್ತು. ಈ ಬೆನ್ನಲ್ಲೇ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಹಿಂದೆ ವಿಚಾರಣೆ ನಡೆಸಿದ್ದ ಹೈಕೋರ್ಟ್ನ ಏಕಸದಸ್ಯ ಪೀಠವು, ಏ.2ರಂದು ಎಲ್ಲಾ ಬೈಕ್ ಟ್ಯಾಕ್ಸಿ ಸೇವೆಗಳನ್ನು 6 ವಾರದೊಳಗೆ ನಿಲ್ಲಿಸುವಂತೆ ಆದೇಶಿಸಿತ್ತು.

    ನ್ಯಾಯಾಲಯ ನೀಡಿದ್ದ 6 ವಾರಗಳ ಗಡುವು ಮೇ ತಿಂಗಳಲ್ಲಿ ಮುಕ್ತಾಯಗೊಳ್ಳಬೇಕಿತ್ತು. ಆದಾಗ್ಯೂ, ರ‍್ಯಾಪಿಡೊ, ಓಲಾ ಮತ್ತು ಉಬರ್ ಸೇರಿದಂತೆ ಬೈಕ್ ಟ್ಯಾಕ್ಸಿ ನಿರ್ವಾಹಕರು ಆದೇಶ ವಿಸ್ತರಣೆ ಕೋರಿ ನ್ಯಾಯಾಲಯದ ಮೆಟ್ಟಿಲೇರಿದರು. ಈ ವಿನಂತಿಯನ್ನು ಪರಿಗಣಿಸಿದ ನ್ಯಾಯಮೂರ್ತಿಗಳು, ಅಂತಿಮವಾಗಿ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಯನ್ನ ಸ್ಥಗಿತಗೊಳಿಸಲು ಗಡುವನ್ನು ಜೂ.15ರವರೆಗೆ ವಿಸ್ತರಿಸಿದ್ದರು.ಇದನ್ನೂ ಓದಿ: Bengaluru | ವೇಗವಾಗಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದ ಸ್ಕೂಲ್ ವ್ಯಾನ್ – ಸವಾರ ಬಚಾವ್

  • ಪಹಲ್ಗಾಮ್ ದಾಳಿ ಬಳಿಕ ಪಾಕ್‌ನಿಂದ ಆಮದಾಗ್ತಿದ್ದ ಡ್ರೈಫ್ರೂಟ್ಸ್‌ ಪೂರೈಕೆಯಲ್ಲಿ ವ್ಯತ್ಯಯ – ಬೆಲೆ ಏರಿಕೆ ಆತಂಕ!

    ಪಹಲ್ಗಾಮ್ ದಾಳಿ ಬಳಿಕ ಪಾಕ್‌ನಿಂದ ಆಮದಾಗ್ತಿದ್ದ ಡ್ರೈಫ್ರೂಟ್ಸ್‌ ಪೂರೈಕೆಯಲ್ಲಿ ವ್ಯತ್ಯಯ – ಬೆಲೆ ಏರಿಕೆ ಆತಂಕ!

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ಅಟ್ಟಹಾಸ (Pehalgam Terrorist Attack) ಮೆರೆದಿದ್ದು, ಸುಮಾರು 28 ಪ್ರವಾಸಿಗರು ಉಗ್ರರ ದಾಳಿಗೆ ಸಾವನ್ನಪ್ಪಿದ್ರು. ಇದರ ಎಫೆಕ್ಟ್ ನಿಂದಾಗಿ ಕಾಶ್ಮೀರದಿಂದ ಬೆಂಗಳೂರಿಗೆ ಬರಬೇಕಾಗಿದ್ದ ಡ್ರೈಫ್ರೂಟ್ಸ್‌ (Dry Fruits) ಹಾಗೂ ಹಣ್ಣುಗಳ ಸರಬರಾಜಿನಲ್ಲಿ ಕೆಲವೆಡೆ ವ್ಯತ್ಯಯವಾಗ್ತಿದೆ.

    ಕಾಶ್ಮೀರ ಭೂ ಲೋಕದ ಸ್ವರ್ಗ.., ಹಿಮನದಿಗಳ ಭೂಸಿರಿಯಂತಲೇ ಫೇಮಸ್ ಆಗಿದೆ. ಕೇವಲ ಪ್ರಕೃತಿ ಸೌಂದರ್ಯಕ್ಕೆ ಮಾತ್ರವಲ್ಲ, ಮಸಾಲೆ ಪದಾರ್ಥಗಳು, ಡ್ರೈ ಫ್ರೂಟ್ಸ್‌ ಹಾಗೂ ಹಣ್ಣುಗಳಿಗೆ ಹೆಸರುವಾಸಿಯಾಗಿದೆ. ಕಾಶ್ಮೀರದಿಂದ ದೇಶದ ನಾನಾ ಭಾಗಗಳಿಗೆ ಡ್ರೈಫ್ರೂಟ್ಸ್‌ಗಳು ಸರಬರಾಜು ಆಗ್ತಿದ್ದವು. ಆದ್ರಲ್ಲೂ ಶ್ರೀನಗರ, ಜಮ್ಮು ಹಾಗೂ ಪಹಲ್ಗಾಮ್ ನಿಂದ ಒಣಹಣ್ಣುಗಳು ಪೂರೈಕೆಯಾಗ್ತಿದ್ದವು. ಅದ್ಯಾವಾಗ ಪಹಲ್ಗಾಮ್‌ನಲ್ಲಿ ಉಗ್ರರು ಅಟ್ಟಹಾಸ ಮೆರೆದ್ರೋ.. ಅಲ್ಲಿಂದ ಭಾರತ ಆಮದು-ರಪ್ತುಗಳ ವಿಚಾರದಲ್ಲಿ ಕಡಿವಾಣ ಹಾಕಿದೆ. ಇದರಿಂದ ಭಾರತದ ವಿವಿಧೆಡೆಗೆ ಬರುತ್ತಿದ್ದ ಕೆಲ ಡ್ರೈಫ್ರೂಟ್ಸ್‌ ಹಣ್ಣಗಳ ಬೆಲೆ ಗಗನಕ್ಕೇರಿದೆ.

    ಹಾಗಿದ್ರೆ.., ಯಾವೆಲ್ಲ ಡ್ರೈಫ್ರೂಟ್ಸ್‌ಗಳ ಬೆಲೆ ದುಬಾರಿಯಾಗಲಿದೆ.. ಅವುಗಳ ಜೊತೆ ಬೇರೆ ವಸ್ತುಗಳು ಗಗನಕ್ಕೇರುವ ಸಾಧ್ಯತೆಗಳಿವೆ ಅನ್ನೋದರ ಡಿಟೇಲ್ಸ್‌ ಇಲ್ಲಿದೆ. ಇದನ್ನೂ ಓದಿ: ಭಾರತ ಹಿಂದೂಗಳಂತೆ ಮುಸ್ಲಿಮರಿಗೂ ಸೇರಿದೆ – ಪಹಲ್ಗಾಮ್ ದಾಳಿ ಬಗ್ಗೆ ರಾಖಿ ಸಾವಂತ್ ಮಾತು

    ಯಾವೆಲ್ಲಾ ವಸ್ತುಗಳ ಸರಬರಾಜಿನಲ್ಲಿ ವ್ಯತ್ಯಯ ಸಾಧ್ಯತೆ?
    ಪಾಕ್‌ನಿಂದ ಭಾರತಕ್ಕೆ ಆಮದು ಆಗ್ತಿದ್ದ ಡ್ರೈಫ್ರೂಟ್ಸ್‌ ಪೈಲಿ ಬಾದಾಮಿ, ಗೋಡಂಬಿ, ಪಿಸ್ತಾ, ಕರ್ಜೂರ, ಒಣದ್ರಾಕ್ಷಿ, ವಾಲ್‌ನಟ್ಸ್, ಒಣ ಅಪ್ರಿಕಾಟ್‌ಗಳೂ ದುಬಾರಿಯಾಗುವ ಸಾಧ್ಯತೆಗಳಿವೆ. ಇದರೊಂದಿಗೆ ಜೊತೆಗೆ ಕಲ್ಲು ಉಪ್ಪು, ಕನ್ನಡಕದಲ್ಲಿ ಬಳಸಲಾಗುವ ಆಪ್ಟಿಕಲ್ ಲೆನ್ಸ್‌, ಗೋಧಿ, ಅಕ್ಕಿ, ದ್ವಿದಳ ಧಾನ್ಯಗಳು, ಸಿಮೆಂಟ್ ಕಲ್ಲು, ಸುಣ್ಣ, ಹತ್ತಿ, ಉಕ್ಕು, ಚರ್ಮದ ವಸ್ತುಗಳ ಬೆಲೆಯೂ ಏರಿಕೆಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

    ಇನ್ನು, 20-25 ತರಹದ ಒಣಹಣ್ಣುಗಳು ಕಾಶ್ಮೀರದಿಂದ ಬೆಂಗಳೂರಿಗೆ ಬರುತ್ತಿದ್ದವು. ಇದೀಗ ಆಮದು ಬಂದ್ ಆಗಿರೋದ್ರಿಂದ ಗ್ರಾಹಕರ ಡಿಮ್ಯಾಂಡ್ ಹೆಚ್ಚಾಗಿದ್ದು, ಪೂರೈಕೆಯಲ್ಲಿ ವ್ಯತ್ಯಾಯವಾಗಿದೆ. ಹೀಗೆ ಮುಂದುವರೆದ್ರೇ ಬೆಲೆ ಏರಿಕೆಯಾಗಲಿದೆ ಅಂತಾರೆ ಡ್ರೈ ಪ್ರೂಟ್ಸ್ ವ್ಯಾಪಾರಿಗಳು. ಇದನ್ನೂ ಓದಿ: ಕೋಲಾರದಲ್ಲಿ ಮೂರು ಕಾರುಗಳ ನಡುವೆ ಸರಣಿ ಅಪಘಾತ – ಬೆಂಗಳೂರು ಮೂಲದ ವ್ಯಕ್ತಿ ಸಾವು!

  • ದೇಶದ ಸಾಲ ಹೆಚ್ಚಾಗಲು ನರೇಂದ್ರ ಮೋದಿಜಿ ಕಾರಣ: ಸಿದ್ದರಾಮಯ್ಯ ಕಿಡಿ

    ದೇಶದ ಸಾಲ ಹೆಚ್ಚಾಗಲು ನರೇಂದ್ರ ಮೋದಿಜಿ ಕಾರಣ: ಸಿದ್ದರಾಮಯ್ಯ ಕಿಡಿ

    – ಅಗತ್ಯ ವಸ್ತುಗಳ ಬೆಲೆ ಏರಿಕೆಗೂ ಮೋದಿಯೇ ಕಾರಣ: ಸಿಎಂ

    ಬೆಳಗಾವಿ: ದೇಶದ ಸಾಲ ಹೆಚ್ಚಾಗಲು ನರೇಂದ್ರ ಮೋದಿಜಿ (Narendra Modi) ಕಾರಣ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಕಿಡಿಕಾರಿದ್ದಾರೆ.

    ಬೆಳಗಾವಿಯಲ್ಲಿ (Belagavi) ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ ಬಿಜೆಪಿ ಜನಾಕ್ರೋಶ ಯಾತ್ರೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರಿಗೆ ಮಾನ ಮಾರ್ಯಾದೆ ಎನೂ ಇಲ್ಲ. ಪೆಟ್ರೋಲ್ ಡಿಸೇಲ್ ಬೆಲೆ ಏರಿಸಿದವರು ಯಾರು? ಗ್ಯಾಸ್ ಬೆಲೆ ಏರಿಸಿದವರು ಯಾರು? ಇದಕ್ಕೆಲ್ಲ ಕಾರಣ (BJP) ಬಿಜೆಪಿಯವರು. ಮೋದಿ ಸರ್ಕಾರ ಕಾರಣ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಕರಗ ಉತ್ಸವದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ

    ನಾವು ಹಾಲಿನ ದರ ಏರಿಕೆ ಮಾಡಿರೋದು ರೈತರಿಗೆ ವರ್ಗಾವಣೆ ಮಾಡಲು. ಅದನ್ನ ರೈತರಿಗೆ ಕೊಡಬೇಡಿ ಎಂದು ಪ್ರತಿಭಟನೆ ಮಾಡುತ್ತಿದ್ದಾರೆ. ಇವರು ರೈತ ವಿರೋಧಿಗಳಾ? ಗ್ಯಾಸ್‌ ಬೆಲೆ 50 ರೂ. ಹೆಚ್ಚು ಮಾಡಿದ್ದಾರೆ. ಕಚ್ಚಾತೈಲ ಬೆಲೆ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಒಂದು ಬ್ಯಾರಲ್‌ಗೆ 120 ಡಾಲರ್ ಇತ್ತು. ಈಗ 65 ಡಾಲರ್ ಆಗಿದೆ. ಈಗ ಯಾಕೆ ಹೆಚ್ಚು ಮಾಡಿದ್ದಾರೆ? ಬಿಜೆಪಿಯವರಿಗೆ ನೈತಿಕತೆ ಇಲ್ಲ, ಬೆಲೆ ಏರಿಕೆ ಆಗಿರೋದು ಅವರ ಕಾಲದಲ್ಲಿ. ಕೇಂದ್ರ ಸರ್ಕಾರದ ತಪ್ಪು ನೀತಿಯಿಂದ ಬೆಲೆ ಏರಿಕೆ ಆಗಿದೆ. ಅದರ ವಿರುದ್ಧನೂ ಮಾತಾಡಿ ಎಂದು ಬಿಜೆಪಿಗರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

    ರಾಜ್ಯ ಸರ್ಕಾರ ಆರ್ಥಿಕ ದಿವಾಳಿಯಾಗಿದೆ. ಸಂಬಳ ಕೊಡಲು ಹಣವಿಲ್ಲ ಎಂಬ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆ ವಿಚಾರವಾಗಿ, ಯಾರದಾದ್ರೂ ಸಂಬಳ ನಿಂತು ಹೋಗಿದೆಯಾ? ಬಿಜೆಪಿಯವರ ಕಾಲದಲ್ಲಿ ದುಡ್ಡಿಲ್ಲದಿದ್ರೂ ಕರೆದು ಕೆಲಸ ನೀಡಿ, ದುಡ್ಡು ಹೊಡೆದು ಹೊರಟು ಹೋದ್ರು. ಈಗ ಅವರು ನಮಗೆ ಪಾಠ ಹೇಳಿ ಕೊಡಲು ಬರುತ್ತಿದ್ದಾರೆ. ಇಂದು ಕರ್ನಾಟಕ ಆರ್ಥಿಕ ದಿವಾಳಿ ಆಗಿದ್ದರೆ ಬಿಜೆಪಿಯವರು ಕಾರಣ. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ ಇದ್ದಾಗಲೇ ಕರ್ನಾಟಕದ ಆರ್ಥಿಕ ಸ್ಥಿತಿ ಹಾಳಗಿರೋದು.

    ನಾವು ಹಿಂದಿನ ವರ್ಷಕ್ಕಿಂತ ಈ ವರ್ಷ 38ಸಾವಿರ ಕೋಟಿ ರೂ. ಹೆಚ್ಚಿನ ಬಜೆಟ್ ಮಂಡನೆ ಮಾಡಿದ್ದೇವೆ. ಆರ್ಥಿಕ ದಿವಾಳಿ ಆಗಿದ್ರೇ ಇದು ಸಾಧ್ಯ ಆಗುತ್ತಿತ್ತಾ? ನರೇಂದ್ರ ಮೋದಿಯವರು ಎಷ್ಟು ಸಾಲ ಮಾಡಿದ್ರೂ? ಮೋದಿಯವರು ಬಂದಾಗ 53 ಲಕ್ಷದ 11 ಸಾವಿರ ಕೋಟಿ ರೂ. ಸಾಲ ಇತ್ತು. ಹತ್ತು ವರ್ಷದಲ್ಲಿ 200 ಲಕ್ಷ ಕೋಟಿ ರೂ. ಸಾಲ ಆಗಿದೆ. ದೇಶದ ಮೇಲೆ ಸಾಲ ಜಾಸ್ತಿ ಆಗಲು ಕಾರಣ ಮೋದಿ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಜಾತಿಗಣತಿ ಅಂಕಿಅಂಶ ಬಹಿರಂಗ – ಕರ್ನಾಟಕದಲ್ಲಿ ಯಾವ ಜಾತಿ ಜನಸಂಖ್ಯೆ ಎಷ್ಟಿದೆ?

  • ಡೀಸೆಲ್ ಬೆಲೆ ಏರಿಕೆ – ಖಾಸಗಿ ಬಸ್ ಪ್ರಯಾಣ ದರ ದುಬಾರಿ!

    ಡೀಸೆಲ್ ಬೆಲೆ ಏರಿಕೆ – ಖಾಸಗಿ ಬಸ್ ಪ್ರಯಾಣ ದರ ದುಬಾರಿ!

    – ಲಾರಿ ಮುಷ್ಕರಕ್ಕೆ ಖಾಸಗಿ ಬಸ್ ಮಾಲೀಕರ ಸಾಥ್

    ಬೆಂಗಳೂರು: ಈ ವರ್ಷ ಆರಂಭದಿಂದಲೂ ನಿತ್ಯ ಜೇಬಿಗೆ ಹೊರೆಯಾಗುವ ಶಾಕಿಂಗ್ ಸುದ್ದಿಗಳೇ ಕೇಳಿಬರುತ್ತಿವೆ. ನಿತ್ಯ ಒಂದಲ್ಲ ಒಂದು ದರ ಏರಿಕೆಯಿಂದ ಕಂಗೆಟ್ಟಿದ್ದ ಜನಕ್ಕೆ ಈಗ ಮತ್ತೊಂದು ಸರದಿ. ಡೀಸೆಲ್ ದರ ಏರಿಕೆಯಾದ (Diesel Price Hike) ಬೆನ್ನಲ್ಲೇ ಖಾಸಗಿ ಬಸ್ ಪ್ರಯಾಣ ದರ ಕೂಡ ಏರಿಕೆಯಾಗಲಿದೆ.

    ಡೀಸೆಲ್ ದರ ಏರಿಕೆ ಮಾಡಿ ಸರ್ಕಾರದ ವಿರುದ್ಧ ವಾಣಿಜ್ಯ ವಾಹನಗಳು ಸಮರ ಸಾರಿವೆ. ಏ.15ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೂ ಮುಂದಾಗಿವೆ. ಈ ಮಧ್ಯೆ ಈ ಮುಷ್ಕರಕ್ಕೆ ಖಾಸಗಿ ಬಸ್ (Private Bus) ಮಾಲೀಕರು ಕೂಡ ಬೆಂಬಲ ಸೂಚಿಸಿದ್ದಾರೆ. ಮುಷ್ಕರಕ್ಕೆ ಬೆಂಬಲ ಸೂಚಿಸುವುದರ ಜೊತೆಗೆ ಪ್ರಯಾಣ ದರ ಏರಿಕೆಗೂ ಕೂಡ ನಿರ್ಧಾರ ಮಾಡಿದ್ದಾರೆ. ಇದನ್ನೂ ಓದಿ: ಚೀನಾ ಮೇಲಿನ ಟ್ಯಾರಿಫ್‌ ಅನ್ನು 104% ಹೆಚ್ಚಿಸಿದ ಅಮೆರಿಕ

    ಪ್ರತಿ ಸ್ಟೇಜ್‌ಗೂ 2 ರೂ.ನಂತೆ 15%ರಷ್ಟು ದರ ಏರಿಕೆಗೆ ನಿರ್ಧಾರ ಮಾಡಿವೆ. ಅದರಂತೆ ಮುಷ್ಕರ ಆರಂಭವಾದ ದಿನದಿಂದಲೇ ದರ ಏರಿಕೆ ಮಾಡುವ ಸಾಧ್ಯತೆ ಇದೆ. ಎಸಿ, ನಾನ್‌ಎಸಿ, ಸ್ಲೀಪರ್ ಬಸ್‌ಗಳಲ್ಲಿ ದರ ಏರಿಕೆಯಾಗಲಿದೆ. ಈಗಾಗಲೇ ಡೀಸೆಲ್ ದರ, ಬಿಡಿ ಭಾಗಗಳ ದರ, ಟೈರ್ ದರಗಳ ಹೆಚ್ಚಳ ಸೇರಿದಂತೆ ಎಲ್ಲಾ ದರ ಏರಿಕೆ ಕಾರಣ ದರೇರಿಕೆ ಮಾಡದೇ ಬೇರೆ ಆಯ್ಕೆಯೇ ಇಲ್ಲ ಎಂಬ ನಿರ್ಧಾರಕ್ಕೆ ಖಾಸಗಿ ಬಸ್ ಮಾಲೀಕರು ಬಂದಿದ್ದಾರೆ. ಇದನ್ನೂ ಓದಿ: ಅಕ್ರಮ ಸಂಬಂಧ ಆರೋಪ – ಪತ್ನಿ ಆತ್ಮಹತ್ಯೆ, ಪತಿ ಅರೆಸ್ಟ್‌, 7 ಮಂದಿ ವಿರುದ್ಧ FIR

    ರಾಜ್ಯಾದ್ಯಂತ ಒಟ್ಟು 14,000 ಖಾಸಗಿ ಬಸ್‌ಗಳು ನಿತ್ಯ ಓಡಾಟ ಮಾಡುತ್ತಿವೆ. ಬೆಂಗಳೂರಿನಲ್ಲೇ ಎರಡೂವರೆ ಸಾವಿರ ವಾಹನ ಓಡಾಟ ಮಾಡುತ್ತವೆ. ಅಲ್ಲದೇ ವಿಕೇಂಡ್‌ಗಳಲ್ಲಿ ಸಾವಿರಾರು ಸಂಖ್ಯೆಯ ಜನ ಬೆಂಗಳೂರಿನಿಂದ ಹೊರ ಹೋಗಲು ಖಾಸಗಿ ಬಸ್‌ಗಳನ್ನೇ ಅವಲಂಬಿಸಿದ್ದಾರೆ. ಅಲ್ಲದೇ ಗ್ರಾಮೀಣ ಪ್ರದೇಶದ ಹಲವು ಕಡೆ ಈಗಲೂ ಕೂಡ ಖಾಸಗಿ ಬಸ್‌ಗಳೇ ಪ್ರಮುಖ ಸಾರಿಗೆ. ಸದ್ಯದ ದರ ಏರಿಕೆ ಆಯಾ ಗ್ರಾಮೀಣ ಪ್ರದೇಶಗಳ ಜನರ ಮೇಲೆ ಮತ್ತಷ್ಟು ಹೊರೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಭಾರತದ ಉದ್ಯಮಿಗೆ ಅಮೆರಿಕದಲ್ಲಿ ಕಹಿ ಅನುಭವ – ಏರ್‌ಪೋರ್ಟ್‌ನಲ್ಲಿ 8 ಗಂಟೆ ಕೂರಿಸಿದ ಆರೋಪ

    ಬೆಂಗಳೂರಿನಿಂದ ಯಾವ ಭಾಗಕ್ಕೆ ಎಷ್ಟು ದರ?
    ಬೆಂಗಳೂರು ಟು ಹುಬ್ಬಳ್ಳಿ:
    ಈಗಿನ ದರ – 1,000 ರೂ.
    ಸಾಮಾನ್ಯ ದಿನ ದರ – 1,200 ರೂ.
    ವಾರಾಂತ್ಯ ದರ – 1,500 ರೂ.

    ಬೆಂಗಳೂರು ಟು ಬೆಳಗಾವಿ:
    ಈಗಿನ ದರ – 1,200ರೂ.
    ಸಾಮಾನ್ಯ ದಿನ ದರ – 1,400 ರೂ.
    ವಾರಾಂತ್ಯ ದರ – 1,600 ರೂ.

    ಬೆಂಗಳೂರು ಟು ಕಲಬುರಗಿ:
    ಈಗಿನ ದರ – 1,200 ರೂ.
    ಸಾಮಾನ್ಯ ದಿನ ದರ – 1,400 ರೂ.
    ವಾರಾಂತ್ಯ ದರ- 1,600 ರೂ.

    ಬೆಂಗಳೂರು ಟು ಮಂಗಳೂರು:
    ಈಗಿನ ದರ – 1,000 ರೂ.
    ಸಾಮಾನ್ಯ ದಿನ ದರ – 1,400 ರೂ.
    ವಾರಾಂತ್ಯ ದರ – 1,600 ರೂ.

    ಬೆಂಗಳೂರು ಟು ಬಳ್ಳಾರಿ:
    ಈಗಿನ ದರ – 700 ರೂ.
    ಸಾಮಾನ್ಯ ದಿನ ದರ- 1,000 ರೂ.
    ವಾರಾಂತ್ಯ ದರ – 1,200 ರೂ.

    ಬೆಂಗಳೂರು ಟು ಶಿವಮೊಗ್ಗ:
    ಈಗಿನ ದರ – 750 ರೂ.
    ಸಾಮಾನ್ಯ ದಿನ ದರ – 1,000 ರೂ.
    ವಾರಾಂತ್ಯ ದರ – 1,200 ರೂ.

  • ಪಕ್ಷ ಸಂಘಟನೆಗೆ ಒತ್ತು, ಪಕ್ಷದ ಎಲ್ಲಾ ಘಟಕಗಳ ಬಲವರ್ಧನೆ ಬಗ್ಗೆ ಚರ್ಚೆ: ಡಿಕೆಶಿ

    ಪಕ್ಷ ಸಂಘಟನೆಗೆ ಒತ್ತು, ಪಕ್ಷದ ಎಲ್ಲಾ ಘಟಕಗಳ ಬಲವರ್ಧನೆ ಬಗ್ಗೆ ಚರ್ಚೆ: ಡಿಕೆಶಿ

    – ಕೇಂದ್ರದ ವಿರುದ್ಧ ರಾಜ್ಯ ಬಿಜೆಪಿ ಕಾರ್ಯಕರ್ತರೇ ಹೋರಾಟ ಮಾಡುವಂತಾಗಿದೆ ಎಂದ ಡಿಸಿಎಂ

    ಅಹಮದಾಬಾದ್: ಕಳೆದ ಬೆಳಗಾವಿ ಅಧಿವೇಶನದ (Belagavi Session) ವೇಳೆ ಈ ವರ್ಷವನ್ನು ಸಂಘಟನೆಯ ವರ್ಷ ಎಂದು ಸೂಚನೆ ನೀಡಲಾಗಿತ್ತು. ಬ್ಲಾಕ್, ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಪಕ್ಷವನ್ನು ಇನ್ನಷ್ಟು ಬಲಪಡಿಸುವ ಬಗ್ಗೆ ಅಹಮದಾಬಾದ್ ಅಧಿವೇಶನದಲ್ಲಿ ಚರ್ಚೆ ನಡೆಸಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಅವರು ಹೇಳಿದರು.

    ಎಐಸಿಸಿ (AICC) ಅಧಿವೇಶನದಲ್ಲಿ ಭಾಗವಹಿಸಲು ಗುಜರಾತ್‌ನ ಅಹಮದಬಾದ್‌ಗೆ ತೆರಳಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು. ಪಕ್ಷ ಸಂಘಟನೆಯ ವಿಚಾರದಲ್ಲಿ ಒಂದೊಂದೇ ಬದಲಾವಣೆಗಳನ್ನು ತರಲಾಗುತ್ತಿದೆ. ಕಾಂಗ್ರೆಸ್ ಪಕ್ಷ ಕಾರ್ಯಕರ್ತರ (Congress Party Workers) ಪಕ್ಷವಾಗಿ ಇನ್ನೂ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ನಾವೆಲ್ಲರು ಚರ್ಚೆ ನಡೆಸಿ ಒಟ್ಟಿಗೆ ಕೆಲಸ ಮಾಡುವುದಕ್ಕೆ ಈ ಸಮಾವೇಶ ಮುನ್ನುಡಿ ಎಂದು ಹೇಳಿದರು. ಇದನ್ನೂ ಓದಿ: ಶಿವಮೊಗ್ಗ ಡಿಸಿಸಿ ಬ್ಯಾಂಕ್‌, ಅಧ್ಯಕ್ಷ ಮಂಜುನಾಥ ಗೌಡ ನಿವಾಸದ ಮೇಲೆ ಇಡಿ ದಾಳಿ

    ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಹಲವಾರು ವಿಚಾರಗಳು ಸೇರಿದಂತೆ ಪಕ್ಷದ ಎಲ್ಲಾ ಘಟಕಗಳ ಬಲವರ್ಧನೆ ಬಗ್ಗೆ ಚರ್ಚೆ ಮಾಡಲಾಗುವುದು. ಕಳೆದ ವಾರ ದೆಹಲಿಯಲ್ಲಿ ಜಿಲ್ಲಾ ಮಟ್ಟದ ಅಧ್ಯಕ್ಷರ ಸಭೆ ನಡೆಸಲಾಗಿತ್ತು. 1924 ರಲ್ಲಿ ಮಹಾತ್ಮ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಜವಾಬ್ದಾರಿ ತೆಗೆದುಕೊಂಡು 100 ವರ್ಷಗಳು ಸಂದಿವೆ. ಗಾಂಧಿ ಅವರು ಏಕ ನಾಯಕತ್ವದಲ್ಲಿ ನಂಬಿಕೆ ಇಟ್ಟವರಲ್ಲ. ಸಾಮೂಹಿಕ ನಾಯಕತ್ವದಲ್ಲಿ ನಂಬಿಕೆಯಿಟ್ಟು ನಡೆದವರು ಎಂದು ತಿಳಿಸಿದರು.

    ಕಾಂಗ್ರೆಸ್ಸಿನ ಗೆಲುವು ಗುಜರಾತಿನಿಂದ ಪ್ರಾರಂಭವಾಗಲಿದೆಯೇ ಎಂದು ಕೇಳಿದಾಗ, ಹೌದು ಖಂಡಿತವಾಗಿಯೂ ಆಗಲಿದೆ. ಜೊತೆಗೂಡುವುದು ಆರಂಭ, ಜೊತೆಗೂಡಿ ನಡೆಯುವುದು ಪ್ರಗತಿ ಎನ್ನುವ ಮಾತನ್ನು ನಾನು ಪುನರುಚ್ಚರಿಸುತ್ತೇನೆ ಎಂದರು. ಇದನ್ನೂ ಓದಿ: ಶಿವಮೊಗ್ಗ ಡಿಸಿಸಿ ಬ್ಯಾಂಕ್‌, ಅಧ್ಯಕ್ಷ ಮಂಜುನಾಥ ಗೌಡ ನಿವಾಸದ ಮೇಲೆ ಇಡಿ ದಾಳಿ

    ಬಿಜೆಪಿ ಜನಾಕ್ರೋಶ ಯಾತ್ರೆಯ ಬಗ್ಗೆ ಕೇಳಿದಾಗ, ಜೆಪಿಯವರ ಜನಾಕ್ರೋಶ ಯಾತ್ರೆಯನ್ನು ಸ್ವಾಗತಿಸುತ್ತೇನೆ. ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಬೆಲೆ ಏರಿಕೆ ಮಾಡಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಜನರಿಗೆ ಇರುವ ಆಕ್ರೋಶ ಈ ಯಾತ್ರೆ ಮೂಲಕ ರಾಜ್ಯ ಬಿಜೆಪಿ ನಾಯಕರಿಗೆ ಅರ್ಥವಾಗಲಿ. ಅವರ ಸರ್ಕಾರದ ವಿರುದ್ಧವೇ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮಾಡುವಂತಾಗಿದೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: 64 ವರ್ಷಗಳ ಬಳಿಕ ಗುಜರಾತ್‌ನಲ್ಲಿ ಎಐಸಿಸಿ ಅಧಿವೇಶನ – ಹಲವು ಮಹತ್ವದ ನಿರ್ಣಯ ಸಾಧ್ಯತೆ

  • ನಾಳೆಯಿಂದ ಬಿಜೆಪಿಯಿಂದ ಜನಾಕ್ರೋಶ ಯಾತ್ರೆ – ಮೈಸೂರಿನಲ್ಲಿ ಜೋಶಿ ಚಾಲನೆ; ಸರ್ಕಾರದ ವೈಫಲ್ಯ ವಿರುದ್ಧ ಕಹಳೆ

    ನಾಳೆಯಿಂದ ಬಿಜೆಪಿಯಿಂದ ಜನಾಕ್ರೋಶ ಯಾತ್ರೆ – ಮೈಸೂರಿನಲ್ಲಿ ಜೋಶಿ ಚಾಲನೆ; ಸರ್ಕಾರದ ವೈಫಲ್ಯ ವಿರುದ್ಧ ಕಹಳೆ

    ಬೆಂಗಳೂರು/ಮೈಸೂರು: ರಾಜ್ಯ ಸರ್ಕಾರದ ವಿರುದ್ಧ ನಾಳೆಯಿಂದ (ಏಪ್ರಿಲ್‌ 7) ಬಿಜೆಪಿ (BJP) 2ನೇ ಹಂತದ ಹೋರಾಟ ಕೈಗೆತ್ತಿಕೊಂಡಿದೆ. ಜನಾಕ್ರೋಶ ಯಾತ್ರೆ (JanaKrosha Yatra) ಹೆಸರಿನಲ್ಲಿ ಸರ್ಕಾರದ ವಿರುದ್ಧ ನಾಲ್ಕು ಹಂತಗಳಲ್ಲಿ ಹೋರಾಟಕ್ಕೆ ಬಿಜೆಪಿ ಮುಂದಾಗಿದೆ.

    ಸೋಮವಾರ ಬೆಳಗ್ಗೆ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ (Mysuru Chamundehwari Temple) ವಿಶೇಷ ಪೂಜೆ ಸಲ್ಲಿಸುಕ ಮೂಲಕ ಮೂಲಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು (Pralhad Joshi) ಜನಾಕ್ರೋಶ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಸರ್ಕಾರದ ದರ ಏರಿಕೆ ನೀತಿ, ಭ್ರಷ್ಟಾಚಾರ, ಕಮೀಷನ್, ದುರಾಡಳಿತ, ಕಾನೂನು ಅವ್ಯವಸ್ಥೆ, ಮುಸ್ಲಿಂ ಓಲೈಕೆ ಖಂಡಿಸಿ ಜನಾಕ್ರೋಶ ಯಾತ್ರೆ ನಡೆಯಲಿದೆ.

    ಎಲ್ಲಿ, ಯಾವಾಗ ಜನಾಕ್ರೋಶ ಯಾತ್ರೆ?
    ಏಪ್ರಿಲ್ 7-12ರ ವರೆಗೆ ಮೊದಲ ಹಂತದ ಜನಾಕ್ರೋಶ ಯಾತ್ರೆಯು ಮೈಸೂರು/ಚಾಮರಾಜನಗರ, ಮಂಡ್ಯ,/ಹಾಸನ, ಕೊಡಗು/ಮಂಗಳೂರು, ಉಡುಪಿ/ ಚಿಕ್ಕಮಗಳೂರು, ಶಿವಮೊಗ್ಗ/ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಡೆಯಲಿದೆ.

    ಏಪ್ರಿಲ್ 15-18ರ ವರೆಗೆ ಎರಡನೇ ಹಂತದ ಜನಾಕ್ರೋಶ ಯಾತ್ರೆಯು ನಿಪ್ಪಾಣಿ/ಬೆಳಗಾವಿ/ಹುಬ್ಬಳ್ಳಿ, ಬೀದರ್/ಕಲಬುರ್ಗಿ, ವಿಜಯಪುರ/ಬಾಗಲಕೋಟೆಗಳಲ್ಲಿ ನಡೆಯಲಿದೆ.

    ಏಪ್ರಿಲ್ 21-25ರ ವರೆಗೆ ಮೂರನೇ ಹಂತದ ಯಾತ್ರೆಯು ಯಾದಗಿರಿ/ರಾಯಚೂರು, ಬಳ್ಳಾರಿ/ವಿಜಯನಗರ, ಕೊಪ್ಪಳ/ಗದಗ, ಹಾವೇರಿ/ದಾವಣಗೆರೆ, ಚಿತ್ರದುರ್ಗ/ತುಮಕೂರು ಜಿಲ್ಲೆಗಳಲ್ಲಿ ನಡೆಯಲಿದೆ

    ಏಪ್ರಿಲ್ 27- ಮೇ 03ರ ವರೆಗೆ ನಾಲ್ಕನೇ ಹಂತದ ಯಾತ್ರೆ ಚಿಕ್ಕಬಳ್ಳಾಪುರ/ಕೋಲಾರ, ಬೆಂಗಳೂರು/ಬೆಂಗಳೂರು ಗ್ರಾಮಾಂತರ/ರಾಮನಗರ ಜಿಲ್ಲೆಗಳಲ್ಲಿ ನಡೆಯಲಿದೆ.

  • ಈ ಸರ್ಕಾರ ಪೋಸ್ಟ್‌ ಮಾರ್ಟಂಗೂ ದರ ವಿಧಿಸಿಬಿಟ್ರೆ ಸಾಯೋದಕ್ಕೂ ಜನ ಹಿಂಜರೀತಾರೆ – ಸಿ.ಟಿ ರವಿ ಲೇವಡಿ

    ಈ ಸರ್ಕಾರ ಪೋಸ್ಟ್‌ ಮಾರ್ಟಂಗೂ ದರ ವಿಧಿಸಿಬಿಟ್ರೆ ಸಾಯೋದಕ್ಕೂ ಜನ ಹಿಂಜರೀತಾರೆ – ಸಿ.ಟಿ ರವಿ ಲೇವಡಿ

    – ರೈತರಿಗೆ ಆಲೂಗೆಡ್ಡಿಯಿಂದ ಚಿನ್ನ ಬೆಳೆಯೋದು ಹೇಗೆಂದು ಡಿಕೆಶಿ ಹೇಳಿಕೊಡಲಿ; ಲೇವಡಿ

    ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿಗಳಿಗೆ ಹಣ ಹೊಂದಿಸಲು ದಿನಕ್ಕೊಂದು ವಸ್ತುಗಳ ಬೆಲೆ ಏರಿಕೆ ಮಾಡುತ್ತಿದೆ. ಇನ್ನೂ ಪೋಸ್ಟ್‌ ಮಾರ್ಟಂ (ಮರಣೋತ್ತರ ಪರೀಕ್ಷೆ – Post Mortem)ಗೂ ದರ ವಿಧಿಸಿಬಿಟ್ರೆ ಜನ ಸಾಯೋದಕ್ಕೂ ಹಿಂಜರಿಯುತ್ತಾರೆ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ ರವಿ (CT Ravi) ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿ ಕಾರಿದರು.

    ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಸದ ಟೆಂಡರ್‌ಗಳಲ್ಲಿ ಅಕ್ರಮ ಆರೋಪಕ್ಕೆ ಪ್ರತಿಕ್ರಿಯಿಸಿದರು. ಸ್ಮಾರ್ಟ್‌ ಮೀಟರ್‌ಗಳನ್ನೇ ಬಿಟ್ಟಿಲ್ಲ, ಇನ್ನೂ ಕಸವನ್ನ ಬಿಡ್ತಾರಾ ಇವ್ರು? ಬರ್ತ್, ಡೆತ್ ಸರ್ಟಿಫಿಕೇಟ್, ನೋಂದಣಿ ಶುಲ್ಕ ಎಲ್ಲವನ್ನೂ ಏರಿಸಿದ್ದಾರೆ (Price Hike). ಇನ್ನೂ ಪೋಸ್ಟ್‌ ಮಾರ್ಟಂಗೂ ಧರ ವಿಧಿಸಬೇಕು ಅಷ್ಟೇ, ಇದಾದರೆ ಜನ ಸಾಯೋದಕ್ಕೂ ಹಿಂಜರೀತಾರೆ ಅಂತ ವ್ಯಂಗ್ಯವಾಡಿದರು. ಇದನ್ನೂ ಓದಿ: ದೇಶದ ಮೊದಲ ವರ್ಟಿಕಲ್ ರೈಲ್ವೆ ಬ್ರಿಡ್ಜ್ ಲೋಕಾರ್ಪಣೆ ಮಾಡಿದ ಮೋದಿ – ಈ ಸೇತುವೆ ವಿಶೇಷತೆ ಏನು?

    ಮಡಿಕೇರಿ ಬಿಜೆಪಿ ಕಾರ್ಯಕರ್ತ (BJP Worker) ಆತ್ಮಹತ್ಯೆ ಕೇಸ್‌ ಬಗ್ಗೆ ಮಾತನಾಡಿ, ಸಾಯಿಸಿ ರಾಜಕಾರಣ ಮಾಡೋದು ಕಾಂಗ್ರೆಸ್. ಗುತ್ತಿಗೆದಾರ ಸಂತೋಷ್ ಪಾಟೀಲ್ ವಿಚಾರದಲ್ಲಿ, ರೋಹಿತ್ ವೇಮುಲ ವಿಚಾರದಲ್ಲಿ ಮಾಡಿದ ನಿಮ್ಮ ರಾಜಕಾರಣ, ಅಪಪ್ರಚಾರ ಯಾವ ಸೀಮೆಯದು? ಈಗಲೂ ವಿನಯ್ ಸಾವಿನಲ್ಲೂ ಅಪಪ್ರಚಾರ ಮಾಡ್ತಿದ್ದೀರಿ. ಸುಳ್ಳು ಆರೋಪ ಮಾಡಿ ಕಾಂಗ್ರೆಸ್ ರಾಜಕಾರಣ ಮಾಡ್ತಿದೆ. ವಿನಯ್ ಸೋಮಯ್ಯ ಡೆತ್ ನೋಟ್ ಬರೆದಿದ್ದು ಸುಳ್ಳಾ? ಅಂತ ಪ್ರಶ್ನೆ ಮಾಡಿದರು. ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತನದ್ದು ಆತ್ಮಹತ್ಯೆಯಲ್ಲ, ಕೊಲೆ: ವಿಜಯೇಂದ್ರ ಆರೋಪ

    ಇದೇ ವೇಳೆ ಹೆಚ್ಡಿಕೆಯಿಂದ ಡಿಕೆಶಿ ವಿರುದ್ಧ ಕಬ್ಬಿಣದ ಅದಿರು ಸಾಗಣೆ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿ, ಒಬ್ರು ಕೇಂದ್ರ ಸಚಿವರು ಇನ್ನೊಬ್ಬರು ರಾಜ್ಯದ ಡಿಸಿಎಂ, ಆಪಾದನೆ ಬಂದವರು ಪರೀಕ್ಷೆಗೆ ಒಳಪಡಬೇಕು. ಆಪಾದನೆ ಮಾಡಿದವರು ರಾಜ್ಯದ ಕಾನೂನು ಕುಣಿಕೆಯಿಂದ ಅವ್ರು ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳಬೇಕು. ಡಿಕೆಶಿ ಅವ್ರು ನಮ್ಮ ರೈತರಿಗೆ ಆಲೂಗೆಡ್ಡಿಯಿಂದ ಚಿನ್ನ ಬೆಳೆಯೋದು ಹೇಗೆಂದು ಹೇಳಿ ಕೊಡಲಿ, ಎತ್ತಿನಗಾಡಿಯಿಂದ ಪ್ರೈವೇಟ್ ಜೆಟ್ ನಲ್ಲಿ ಹೋಗೋವರೆಗಿನ ಸೂತ್ರ ಏನು ಅಂತ ಡಿಕೆಶಿ ಕೊಡಲಿ ಎಂದು ಲೇವಡಿ ಮಾಡಿದರು. ಇದನ್ನೂ ಓದಿ: New Zealand v/s Pakistan – ಕ್ರಿಕೆಟ್ ಪಂದ್ಯದ ವೇಳೆಯೇ ಗ್ರೌಂಡ್‌ನಲ್ಲಿ ಪವರ್‌ಕಟ್; ಮುಂದೇನಾಯ್ತು?

  • ಬೆಲೆ ಏರಿಕೆ ವಿರುದ್ಧ ಕೇಸರಿ ಕಹಳೆ – ಅಹೋರಾತ್ರಿ ಧರಣಿ ಮುಕ್ತಾಯ

    ಬೆಲೆ ಏರಿಕೆ ವಿರುದ್ಧ ಕೇಸರಿ ಕಹಳೆ – ಅಹೋರಾತ್ರಿ ಧರಣಿ ಮುಕ್ತಾಯ

    -ಸಿಎಂ ಮನೆ ಮುತ್ತಿಗೆಗೆ ಯತ್ನ, ರಸ್ತೆ ತಡೆ ಮೂಲಕ ಆಕ್ರೋಶ

    ಬೆಂಗಳೂರು: ಸರ್ಕಾರದ ದರ ಏರಿಕೆ (Price Hike) ವಿರುದ್ಧ ಬಿಜೆಪಿ ರಣಕಹಳೆ ಮೊಳಗಿಸಿದೆ. ಬುಧವಾರದಿಂದ ನಡೆಯುತ್ತಿರುವ ಬಿಜೆಪಿ (BJP) ಅಹೋರಾತ್ರಿ ಧರಣಿ ಇಂದು ತೀವ್ರ ಸ್ವರೂಪಕ್ಕೆ ತಿರುಗಿತ್ತು. ಯಡಿಯೂರಪ್ಪ  (BS Yediyurappa) ನೇತೃತ್ವದಲ್ಲಿ ಬಿಜೆಪಿ ನಾಯಕರು, ಅಪಾರ ಕಾರ್ಯಕರ್ತರು ಸಿಎಂ ಮನೆ ಮುತ್ತಿಗೆ ಯತ್ನ ನಡೆಸಿದ್ದು, ಈ ವೇಳೆ ಪೊಲೀಸರಿಗೂ ಪ್ರತಿಭಟನಾಕಾರರಿಗೂ ಜಟಾಪಟಿ ನಡೆಯಿತು.

    ಬೆಂಗಳೂರಿನ (Bengaluru) ಫ್ರೀಡಂ ಪಾರ್ಕಿನಲ್ಲಿ (Freedom Park) ಬುಧವಾರದಿಂದ ಬಿಜೆಪಿ ನಡೆಸುತ್ತಿದ್ದ ಅಹೋರಾತ್ರಿ ಧರಣಿಯಲ್ಲಿ ಇಂದು, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಪಾಲ್ಗೊಂಡಿದ್ದರು. ನಾಯಕರೆಲ್ಲ ಮಾತಾಡಿದ ಮೇಲೆ ಯಡಿಯೂರಪ್ಪ ಮುಂದಾಳತ್ವದಲ್ಲಿ ಸಿಎಂ ಮನೆ ಮುತ್ತಿಗೆಗೆ ನಾಯಕರು, ಕಾರ್ಯಕರ್ತರು ಮುಂದಾದರು. ಪ್ರತಿಭಟನಾ ಸ್ಥಳದಿಂದ ಯಡಿಯೂರಪ್ಪ ಜೊತೆಗೆ ನಾಯಕರು, ಕಾರ್ಯಕರ್ತರು ರಸ್ತೆಗೆ ಇಳಿದರು. ಆದರೆ ಅಷ್ಟರೊಳಗೆ ನಾಕಾಬಂದಿ ಹಾಕಿದ್ದ ಪೊಲೀಸರು ಪ್ರತಿಭಟನಾಕಾರರನ್ನು ರಸ್ತೆಯಲ್ಲೇ ಎರಡು ಬದಿ ತಡೆದು ಸಿಎಂ ಮನೆ ಮುತ್ತಿಗೆ ವಿಫಲಗೊಳಿಸಿದರು.ಇದನ್ನೂ ಓದಿ: ಜನವಿರೋಧಿ ನೀತಿ ವಿರುದ್ಧ ಬಿಜೆಪಿ ನಿರಂತರ ಹೋರಾಟ: ಯಡಿಯೂರಪ್ಪ

    <

    ಇದರಿಂದ ರೊಚ್ಚಿಗೆದ್ದ ಪ್ರತಿಭಟನಾಕಾರರು ಪೊಲೀಸ್ ಬ್ಯಾರಿಕೇಡ್‌ಗಳ ಮೇಲೆ ಹತ್ತಿ ಆಕ್ರೋಶ ವ್ಯಕ್ತಪಡಿಸಿದರು. ಸಿಎಂ, ಡಿಸಿಎಂ ಹಾಗೂ ಸಚಿವರ ಫೋಟೋ ಇದ್ದ ರಾವಣನ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಮಹಿಳಾ ಕಾರ್ಯಕರ್ತೆಯರು ಎಮ್‌ಎಲ್‌ಸಿ ಭಾರತಿ ಶೆಟ್ಟಿ ನೇತೃತ್ವದಲ್ಲಿ ರಸ್ತೆಯಲ್ಲೇ ಕೂತು ಪ್ರತಿಭಟನೆಗೆ ಮುಂದಾದರು. ಕೊನೆಗೆ ಪೊಲೀಸರು ಯಡಿಯೂರಪ್ಪ, ವಿಜಯೇಂದ್ರ, ಆರ್.ಅಶೋಕ್, ಸಿ.ಟಿ ರವಿ, ಎಸ್.ಆರ್ ವಿಶ್ವನಾಥ್, ಬೈರತಿ ಬಸವರಾಜು ಮುಂತಾದ ನಾಯಕರನ್ನು ವಶಕ್ಕೆ ಪಡೆದು ಬಸ್ ಮೂಲಕ ಕರೆದೊಯ್ದರು.

    ಇನ್ನು ಪ್ರತಿಭಟನೆ ನಡೆಯುವಾಗಲೇ ವಕ್ಫ್ ಬಿಲ್ (Waqf Bill) ಪಾಸಾದ ಹಿನ್ನೆಲೆಯಲ್ಲಿ ನಾಯಕರು ಪರಸ್ಪರ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು. ಒಟ್ಟಾರೆಯಾಗಿ ಎರಡು ದಿನಗಳ ಅಹೋರಾತ್ರಿ ಹೋರಾಟ ಮೂಲಕ ಸರ್ಕಾರಕ್ಕೆ ಬಿಜೆಪಿ ತಕ್ಕ ಮಟ್ಟಿಗೆ ಬಿಸಿ ಮುಟ್ಟಿಸಿದೆ. ಮುಂದಿನ ದಿನಗಳಲ್ಲಿ ಜಿಲ್ಲಾವಾರು ಹೋರಾಟ ತೀವ್ರಗೊಳಿಸಲು ಕೇಸರಿ ಪಡೆ ಮುಂದಾಗಿದೆ.ಇದನ್ನೂ ಓದಿ: ಭಂಡ ಸರ್ಕಾರ, ಸಿಎಂ ವಿರುದ್ಧ ಬೀದಿಗಿಳಿದು ಹೋರಾಟ ಮಾಡದೇ ಬೇರೆ ದಾರಿಯಿಲ್ಲ: ವಿಜಯೇಂದ್ರ