Tag: price rise

  • ದಾಖಲೆ ಮೀರಿ ಗೋಧಿ ಉತ್ಪಾದನೆಯಾಗುತ್ತಿದ್ದರೂ ಬೆಲೆ ಏರಿಕೆ ಯಾಕೆ?

    ದಾಖಲೆ ಮೀರಿ ಗೋಧಿ ಉತ್ಪಾದನೆಯಾಗುತ್ತಿದ್ದರೂ ಬೆಲೆ ಏರಿಕೆ ಯಾಕೆ?

    ಕೇಂದ್ರವು 16 ವರ್ಷಗಳಲ್ಲೇ ಮೊದಲ ಬಾರಿಗೆ ಜೂನ್ 12ರಂದು ಗೋಧಿ (Wheat) ಮೇಲೆ ದಾಸ್ತಾನು ಮಿತಿಯನ್ನು ಹೇರಿದೆ. ಅಕ್ರಮ ದಾಸ್ತಾನು ತಡೆಯಲು ಹಾಗೂ ಬೆಲೆ ಏರಿಕೆಯನ್ನು ನಿಯಂತ್ರಿಸಲು ಸರ್ಕಾರ ಈ ಕ್ರಮ ಕೈಗೊಂಡಿದೆ.

    ಏಪ್ರಿಲ್-ಜೂನ್ ತಿಂಗಳು ಗೋಧಿಗೆ ಪ್ರಮುಖ ಕೊಯ್ಲು ತಿಂಗಳಾಗಿದೆ. ದೇಶದಲ್ಲಿ ಗೋಧಿ ದಾಖಲೆಯ ಉತ್ಪಾದನೆ ಹೊಂದಿದ್ದರೂ ಇಂತಹ ಕ್ರಮಗಳನ್ನು ಏಕೆ ತೆಗೆದುಕೊಂಡಿದೆ ಎಂಬುದು ಜನತೆಯಲ್ಲಿ ಮೂಡಿರುವ ಪ್ರಶ್ನೆ.

    ಇದೀಗ ಮುಂದಿನ ವರ್ಷವೇ ದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಸರ್ಕಾರ ದೇಶದ ಪ್ರಮುಖ ಆಹಾರ ಧಾನ್ಯವಾಗಿರುವ ಅಕ್ಕಿ ಹಾಗೂ ಗೋಧಿಯ ಹಣದುಬ್ಬರದ ಬಗ್ಗೆ ಚಿಂತಿಸುತ್ತಿದೆ. ಕಳೆದ ಏಪ್ರಿಲ್‌ನಲ್ಲಿ ಸಿರಿಧಾನ್ಯಗಳ ಚಿಲ್ಲರೆ ಹಣದುಬ್ಬರ 12.65% ರಷ್ಟಿತ್ತು. ಮುಂದಿನ ಬೆಳೆ ಬರುವವರೆಗೆ ಎಂದರೆ 2024ರ ಮಾರ್ಚ್ ತಿಂಗಳ ವರೆಗೆ ಗೋಧಿ ಬೆಲೆ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ.

    2023-24ರಲ್ಲಿ ಗೋಧಿ ಬೇಡಿಕೆ, ಪೂರೈಕೆ ಎಷ್ಟು?
    2023 ಜುಲೈಯಿಂದ 2023 ಜೂನ್ ವರೆಗೆ ದೇಶದಲ್ಲಿ ಗೋಧಿ ಉತ್ಪಾದನೆ ದಾಖಲೆಯ 112.74 ಮೆಟ್ರಿಕ್ ಟನ್‌ನಷ್ಟು ಹೊಂದಿದೆ ಎಂದು ಕೃಷಿ ಸಚಿವಾಲಯ ತಿಳಿಸಿದೆ. ಆದರೆ ಫ್ಲೋರ್ ಮಿಲ್ಲರ್ಸ್ ಫೆಡರೇಶನ್ ಆಫ್ ಇಂಡಿಯಾ (RFMFI) ನಿಯೋಜಿಸಿದ ಖಾಸಗಿ ಸಂಸ್ಥೆ ಮಾರ್ಚ್ನಲ್ಲಿ ಅಕಾಲಿ ಮಳೆ ಹಾಗೂ ಆಲಿಕಲ್ಲು ಮಳೆಯ ಬಳಿಕ 1.35 ಮೀ.ನಷ್ಟು ಬೆಳೆ ನಷ್ಟಕ್ಕೆ ಕಾರಣವಾಗಿದ್ದು, ಉತ್ಪಾದನೆಯನ್ನು 102.89 ಮೆಟ್ರಿಕ್ ಟನ್ ಎಂದು ಅಂದಾಜಿಸಿದೆ.

    ನೀತಿ ಆಯೋಗದ ಅಂದಾಜಿನ ಪ್ರಕಾರ 2021-22ರಲ್ಲಿ 97.12 ಮೆಟ್ರಿಕ್ ಟನ್ ಗೋಧಿ ಬಳಕೆಯಾಗಿತ್ತು. ಪ್ರಸಕ್ತ ಹಣಕಾಸು ವರ್ಷದಲ್ಲಿ ಗೋಧಿ ಬಳಕೆ 100 ಮೆಟ್ರಿಕ್ ಟನ್ ಅನ್ನು ಮೀರಬಹುದು ಎನ್ನಲಾಗಿದೆ. ಯುನೈಟೆಡ್ ಸ್ಟೇಟ್ಸ್ ಕೃಷಿ ಇಲಾಖೆ (USDA) ದೇಶದ ಗೋಧಿ ಬಳಕೆಯನ್ನು 108.1 ಮೆಟ್ರಿಕ್ ಟನ್ ಎಂದು ನಿಗದಿಪಡಿಸಿದೆ. ಆದರೆ ದೇಶದಲ್ಲಿ ಹೆಚ್ಚುವರಿ ಗೋಧಿ ಇದೆಯೇ ಅಥವಾ ಕೊರತೆಯಿದೆಯೇ ಎಂಬುದು ಸ್ಪಷ್ಟವಾಗಿಲ್ಲ. ಇದನ್ನೂ ಓದಿ: LPG Price Hike: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 7 ರೂ. ಏರಿಕೆ

    ಗೋಧಿ ಬೆಲೆ:
    ಪ್ಯಾನ್ ಇಂಡಿಯಾ ಸರಾಸರಿ ಮಾರುಕಟ್ಟೆಯ ಬೆಲೆ ಕ್ವಿಂಟಲ್ ಗೋಧಿಗೆ ಮೇ 15ರಂದು 2,196 ರೂ., ಮೇ 22ರಂದು 2,225 ರೂ., ಮೇ 29ರಂದು 2,277, ಜೂನ್ 5ರಂದು 2,307, ಜೂನ್ 12ರಂದು 2,295 ಹಾಗೂ ಜೂನ್ 19ರಂದು 2,310ಕ್ಕೆ ಹೆಚ್ಚಳವಾಗಿದೆ.

    ಸಾಮಾನ್ಯವಾಗಿ ಬೇಡಿಕೆ ಹಾಗೂ ಪೂರೈಕೆಯ ಅಂಶದ ಮೇಲೆ ಮಾರುಕಟ್ಟೆಯಲ್ಲಿ ಬೆಲೆ ನಿಗದಿಯಾಗುತ್ತದೆ. 2022ರ ಮೇ ತಿಂಗಳಿನಲ್ಲಿ ದೇಶದಲ್ಲಿ ಗೋಧಿಯ ಸಂಗ್ರಹ ಕಡಿಮೆಯಿದ್ದು, ಸರ್ಕಾರ ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ ಹಾಗೂ ಇತರ ಕಲ್ಯಾಣ ಯೋಜನೆಗಳ ಅಡಿಯಲ್ಲಿ ಧಾನ್ಯ ಹಂಚಿಕೆಯಲ್ಲಿ ಬದಲಾವಣೆಗೆ ಮುಂದಾಯಿತು. ಗೋಧಿಯ ಬದಲಿಗೆ ಅಕ್ಕಿಯನ್ನು ತೆಗೆದುಕೊಳ್ಳುವಂತೆ ಜನರಲ್ಲಿ ಕೇಳಲಾಯಿತು. ಈ ಪ್ರಕ್ರಿಯೆಯಲ್ಲಿ ತಿಂಗಳಿಗೆ 7 ಲಕ್ಷ ಟನ್ ಗೋಧಿಯನ್ನು ಹಿಂತೆಗೆದುಕೊಳ್ಳಲಾಯಿತು.

    ಈ ಕ್ರಮದಿಂದ ಬೆಲೆಗಳ ಮೇಲೂ ಪರಿಣಾಮ ಬೀರಿದ್ದು, ಹೆಚ್ಚಿನ ಗ್ರಾಹಕರು ತಮ್ಮ ಆಹಾರ ಪದ್ಧತಿಯನ್ನು ಬದಲಾಯಿಸಿಕೊಳ್ಳುವ ಬದಲು ಮುಕ್ತ ಮಾರುಕಟ್ಟೆಯಿಂದ ಧಾನ್ಯವನ್ನು ಪಡೆಯಲು ಹೆಚ್ಚು ಆದ್ಯತೆ ನೀಡಿದರು. 2022ರಲ್ಲಿ ಸುಮಾರು 1.9 ಕೋಟಿ ಟನ್ ಸಂಗ್ರಹವಿತ್ತು. ಈ ವರ್ಷ 2.62 ಕೋಟಿ ಟನ್ ಗೋಧಿ ಸಂಗ್ರಹವಿದ್ದರೂ ಆ ಮಾರುಕಟ್ಟೆ ಸ್ಪಷ್ಟತೆಯನ್ನು ತಿಳಿಸಲಾಗಿಲ್ಲ. ಇದನ್ನೂ ಓದಿ: ಸೇಬಿಗಿಂತ ಟೊಮೆಟೊ ರೇಟೇ ಜಾಸ್ತಿ!

    ಕೆಲ ವಾರಗಳಿಂದ ಗೋಧಿ ಮಾರುಕಟ್ಟೆಯ ಬೆಲೆ ಹೆಚ್ಚುತ್ತಲೇ ಬಂದಿದೆ. ಇದು ಮಾರ್ಚ್ ತಿಂಗಳವರೆಗೂ ಮುಂದುವರಿಯುವ ಸಾಧ್ಯತೆಯಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾಲ್ವರು ಕಾಂಗ್ರೆಸ್ ಸಂಸದರು ಲೋಕಸಭೆಯಿಂದ ಅಮಾನತು

    ನಾಲ್ವರು ಕಾಂಗ್ರೆಸ್ ಸಂಸದರು ಲೋಕಸಭೆಯಿಂದ ಅಮಾನತು

    ನವದೆಹಲಿ: ಮುಂಗಾರು ಅಧಿವೇಶನದ ವೇಳೆ ಬೆಲೆ ಏರಿಕೆ ಖಂಡಿಸಿ ಸದನದೊಳಗೇ ಭಿತ್ತಿಪತ್ರ (ಪ್ಲೇ-ಕಾರ್ಡ್) ಹಿಡಿದು ಪ್ರತಿಭಟನೆ ನಡೆಸಿದ ನಾಲ್ವರು ಕಾಂಗ್ರೆಸ್ ಸಂಸದರನ್ನು ಲೋಕಸಭೆಯಿಂದ ಅಮಾನತು ಮಾಡಲಾಗಿದೆ.

    ಸದನದಲ್ಲೇ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಸಂಸದರಾದ ಮಾಣಿಕಂ ಟ್ಯಾಗೋರ್, ಜೋತಿಮಣಿ, ರಮ್ಯಾ ಹರಿದಾಸ್ ಮತ್ತು ಟಿಎನ್ ಪ್ರತಾಪನ್ ಅವರನ್ನ ಅಮಾನತು ಮಾಡಲಾಗಿದ್ದು, ಆಗಸ್ಟ್ 12ರ ವರೆಗೂ ನಡೆಯಲಿರುವ ಮುಂಗಾರು ಅಧಿವೇಶನದಿಂದ ಹೊರಗಿಡುವಂತೆ ಸಭಾಧ್ಯಕ್ಷ ಓಂ ಬಿರ್ಲಾ ಸೂಚಿಸಿದ್ದಾರೆ. ಇದನ್ನೂ ಓದಿ: ಸಂಸತ್‌ ಅಧಿವೇಶನದಲ್ಲಿ ಧರಣಿ ನಡೆಸುವಂತಿಲ್ಲ: ಆದೇಶ ಪ್ರಕಟ

    ಇದಕ್ಕೂ ಮುನ್ನ ಸಭಾಧ್ಯಕ್ಷರು `ನಾನು ಚರ್ಚೆಗೆ ಸಿದ್ಧನಿದ್ದೇನೆ. ಇಲ್ಲಿ ಸಮಸ್ಯೆಗಳ ಬಗ್ಗೆ ಚರ್ಚೆಗಳು ಆಗಬೇಕು. ನೀವು ಪ್ರತಿಭಟನೆ ಮಾಡುವುದಿದ್ದರೆ ಸದನದಿಂದ ಹೊರಗೆ ಮಾಡಿ. ಆದರೆ ನನ್ನ ಹೃದಯವಂತಿಕೆಯನ್ನು ದೌರ್ಬಲ್ಯ ಎಂದು ಭಾವಿಸಬೇಡಿ ಎಂದು ಎಚ್ಚರಿಕೆ ನೀಡಿದ್ದರು. ಇದನ್ನೂ ಓದಿ: ಸಂಸತ್ ಕಲಾಪದಲ್ಲಿ ಅಸಂಸದೀಯ ಪದಗಳಿಗೆ ಕತ್ತರಿ – ಈ ಪದಗಳು ಬ್ಯಾನ್

    ಮಧ್ಯಾಹ್ನದ 3 ಗಂಟೆಯ ಬಳಿಕ ಚರ್ಚೆ ಮುಂದುವರಿಸುವುದಾಗಿ ಹೇಳಿದ್ದರು. ಆದರೆ ಶೂನ್ಯ ಸಮಯ ಆರಂಭವಾಗುವ 20 ನಿಮಿಷದ ಮುನ್ನವೇ ಚರ್ಚೆ ಅರಂಭವಾಯಿತು. ಈ ವೇಳೆ ಕಾಂಗ್ರೆಸ್ ಸಂಸದರು ಪ್ಲೇ ಕಾರ್ಡ್ ಹಿಡಿದು ಪ್ರವೇಶಿಸಿದ್ದರಿಂದ ಅವರನ್ನು ಇಡೀ ಅಧಿವೇಶನದಿಂದ ಅಮಾನತು ಮಾಡಿ, ಕಲಾಪವನ್ನು ನಾಳೆಗೆ ಮುಂದೂಡಿದ್ದಾರೆ.

    ಸ್ಪೀಕರ್ ಕ್ರಮದ ನಂತರವೂ ನಾಲ್ವರು ಸಂಸದರು ಸಂಸತ್ ಮೈದಾನದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ತೆರಳಿ ಘೋಷಣೆಗಳನ್ನು ಕೂಗಿದ್ದಾರೆ. ಕಾಂಗ್ರೆಸ್ ಸಂಸದರು ಪ್ರಮುಖ ಸಮಸ್ಯೆಗಳನ್ನು ಎತ್ತಲು ಪ್ರತ್ನಿಸುತ್ತಿದ್ದಾರೆ. ಆದರೆ ಕೆಲವರನ್ನು ಅಮಾನತು ಮಾಡುವ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸಂಸದರನ್ನು ಬೆದರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಯುರೋಪಿಯನ್ ಒಕ್ಕೂಟದ ಒಂದು ನಿರ್ಧಾರದಿಂದ ತೈಲ ಬೆಲೆ ಭಾರೀ ಏರಿಕೆ

    ಯುರೋಪಿಯನ್ ಒಕ್ಕೂಟದ ಒಂದು ನಿರ್ಧಾರದಿಂದ ತೈಲ ಬೆಲೆ ಭಾರೀ ಏರಿಕೆ

    ಲಂಡನ್: ಯುರೋಪಿಯನ್ ಒಕ್ಕೂಟ(ಇಯು) ಈ ವರ್ಷದ ಅಂತ್ಯದ ವೇಳೆಗೆ ರಷ್ಯಾದಿಂದ ಆಮದಾಗುವ ತೈಲವನ್ನು ಶೇ.90 ರಷ್ಟು ಕಡಿತಗೊಳಿಸಲು ಒಪ್ಪಿಕೊಂಡಿದೆ. ಇಯು ನಿರ್ಧಾರದ ಬೆನ್ನಲ್ಲೇ ಮಂಗಳವಾರ ಕಚ್ಚಾ ತೈಲದ ಬೆಲೆ ಭಾರೀ ಏರಿಕೆಯಾಗಿದೆ.

    ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಈ ಬಗ್ಗೆ ತಮ್ಮ ಟ್ವಿಟ್ಟರ್‌ನಲ್ಲಿ, ರಷ್ಯಾದಿಂದ ಆಮದಾಗುವ ತೈಲದ ನಿರ್ಬಂಧದ ಒಪ್ಪಂದವನ್ನು ನಾನು ಸ್ವಾಗತಿಸುತ್ತೇನೆ. ಇದು ಈ ವರ್ಷದ ಅಂತ್ಯದ ವೇಳೆ ರಷ್ಯಾದಿಂದ ಸುಮಾರು ಶೇ.90 ರಷ್ಟು ಆಮದನ್ನು ಕಡಿತಗೊಳಿಸುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸತ್ಯೇಂದ್ರ ಜೈನ್ ಬಂಧನ ರಾಜಕೀಯ ಪ್ರೇರಿತ, ನಮ್ಮದು ಪ್ರಾಮಾಣಿಕ ಸರ್ಕಾರ: ಕೇಜ್ರಿವಾಲ್

    ಈ ನಿರ್ಧಾರದಿಂದ ಕಚ್ಚಾ ತೈಲ ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪರಿಣಾಮ ಬೀರಲಿದೆ. ಆದರೆ ಹಂಗೇರಿ, ಸ್ಲೋವಾಕಿಯಾ ಹಾಗೂ ಜೆಕ್ ರಿಪಬ್ಲಿಕ್‌ಗಳಲ್ಲಿ ರಷ್ಯಾದ ಆಮದನ್ನು ಕಡಿತಗೊಳಿಸಲು ಹೆಚ್ಚಿನ ಸಮಯ ತೆಗೆದುಕೊಳ್ಳಲಿದೆ. ಇದಕ್ಕಾಗಿ ಸದ್ಯ ಪೈಪ್‌ಲೈನ್ ಮುಖಾಂತರ ರಷ್ಯಾದಿಂದ ಬರುವ ತೈಲಕ್ಕೆ ತಾತ್ಕಾಲಿಕ ವಿನಾಯಿತಿ ಇರಲಿದೆ ಎಂದು ತಿಳಿಸಿದೆ. ಇದನ್ನೂ ಓದಿ: 130 ಕೋಟಿ ಜನರಿಗೆ ನಾನು ಸೇವಕನಷ್ಟೇ: ನರೇಂದ್ರ ಮೋದಿ

    ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಬ್ಯಾರೆಲ್‌ಗೆ 117.93 ಡಾಲರ್(9,162 ರೂ.) ಇದ್ದ ಕಚ್ಚಾ ತೈಲದ ಬೆಲೆ ಈಗ 122 ಡಾಲರ್‌ಗೆ(9,478 ರೂ.) ಏರಿಕೆಯಾಗಿದೆ.

    ಜಾಗತಿಕವಾಗಿ ತೈಲಬೆಲೆ ಹೆಚ್ಚಾಗಿದ್ದರೂ ಭಾರತದಲ್ಲಿ ಕಳೆದ 9 ದಿನಗಳಿಂದ ಪೆಟ್ರೋಲ್ ಹಾಗೂ ಡೀಸೆಲ್‌ನ ಬೆಲೆ ತಟಸ್ಥವಾಗಿದೆ. ಮೇ 22 ರಂದು ಕೆಂದ್ರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್ ಪೆಟ್ರೋಲ್‌ಗೆ 8 ರೂ. ಹಾಗೂ ಲೀಟರ್ ಡೀಸೆಲ್‌ಗೆ 6 ರೂ. ಕಡಿತಗೊಳಿಸಿದೆ.

  • ಭಾರತವು ಶ್ರೀಲಂಕಾದಂತೆ ಕಾಣುತ್ತಿದೆ: ರಾಹುಲ್ ಗಾಂಧಿ

    ಭಾರತವು ಶ್ರೀಲಂಕಾದಂತೆ ಕಾಣುತ್ತಿದೆ: ರಾಹುಲ್ ಗಾಂಧಿ

    ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಪೆಟ್ರೋಲ್ ಬೆಲೆ, ನಿರುದ್ಯೋಗ ಮತ್ತು ಕೋಮು ಹಿಂಸಾಚಾರದ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಭಾರತವು ಶ್ರೀಲಂಕಾದಂತೆ ಭಾಸವಾಗುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    BRIBE

    ಈ ಕುರಿತು ಭಾರತ ಮತ್ತು ಶ್ರೀಲಂಕಾದ ಪರಿಸ್ಥಿತಿಯನ್ನು ತುಲನೆ ಮಾಡುವ ಗ್ರಾಫ್‌ವೊಂದನ್ನು ಅವರು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಇದರಲ್ಲಿ ದೇಶದಲ್ಲಿ ಹೆಚ್ಚುತ್ತಿರುವ ಪೆಟ್ರೋಲ್ ಬೆಲೆ, ನಿರುದ್ಯೋಗ ಮತ್ತು ಕೋಮು ಹಿಂಸಾಚಾರದ ಬಗ್ಗೆ ತುಲನಾತ್ಮಕವಾಗಿ ಮಾಹಿತಿ ನೀಡಿದ್ದಾರೆ. ಜನರನ್ನು ತಬ್ಬಿಬ್ಬುಗೊಳಿಸುವುದರಿಂದ ಸತ್ಯಗಳು ಬದಲಾಗುವುದಿಲ್ಲ. ಭಾರತವು ಶ್ರೀಲಂಕಾದಂತೆ ಕಾಣುತ್ತದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಮೋದಿ ಎಂದಿಗೂ ನಾನೇ ನೀಡಿದ್ದು ಎಂದು ಹೇಳಿರಲಿಲ್ಲ: ಸಿದ್ದುಗೆ ಟಾಂಗ್ ನೀಡಿದ ಸಿಟಿ ರವಿ

    ಸಶಸ್ತ್ರ ಸಂಘರ್ಷದ ಸ್ಥಳ, ಈವೆಂಟ್ ಡೇಟಾ ಯೋಜನೆ, ಲೋಕಸಭೆಯ ನಕ್ಷತ್ರರಹಿತ ಪ್ರಶ್ನೆ, ಸಿಎಮ್‍ಐಇ, ಪೆಟ್ರೋಲಿಯಂ ಯೋಜನೆ, ವಿಶ್ಲೇಷಣೆ ಕೋಶ ಮತ್ತು ಶ್ರೀಲಂಕಾದ ಸೆಂಟ್ರಲ್ ಬ್ಯಾಂಕ್ ಸೇರಿದಂತೆ ವಿವಿಧ ಮೂಲಗಳನ್ನು ಉಲ್ಲೇಖಿಸಿ ಭಾರತ ಮತ್ತು ಶ್ರೀಲಂಕಾದ ಒಂದೇ ರೀತಿಯ ಚಿತ್ರಗಳನ್ನು ಗ್ರಾಫ್ ಹೊಂದಿದೆ. ಇದನ್ನೂ ಓದಿ: ಅಪ್ಪು ಹುಟ್ಟುಹಬ್ಬಕ್ಕೆ ಕನಸಿನ ‘ಗಂಧದಗುಡಿ’ ಫಸ್ಟ್ ಲುಕ್ ರಿಲೀಸ್

    ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಕಳೆದ ಕೆಲ ದಿನಗಳಿಂದ ಸರ್ಕಾರದ ವಿರುದ್ಧ ಭಾರೀ ಪ್ರತಿಭಟನೆಗಳು ನಡೆಯುತ್ತಲೇ ಇವೆ. ಇತ್ತೀಚಿನ ಹಿಂಸಾಚಾರದಲ್ಲಿ 8 ಮಂದಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ, ಮಹಿಂದಾ ರಾಜಪಕ್ಸ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

  • ಶ್ರೀಲಂಕಾದಲ್ಲಿ ಒಂದೇ ದಿನ ಪೆಟ್ರೋಲ್ ಬೆಲೆ 84 ರೂ. ಏರಿಕೆ – ಪ್ರತಿಭಟನಾಕಾರರ ಮೇಲೆ ಫೈರಿಂಗ್

    ಕೊಲಂಬೋ: ದ್ವೀಪ ದೇಶ ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟಿನಿಂದ ದಿನೇ ದಿನೇ ಪರಿಸ್ಥಿತಿ ಹದಗೆಡುತ್ತಿದೆ. ದಿನನಿತ್ಯದ ಅಗತ್ಯ ವಸ್ತುಗಳ ಕೊರತೆಯನ್ನು ಒಂದೆಡೆ ಜನರು ಎದುರಿಸುತ್ತಿದ್ದರೆ, ವಿದ್ಯುತ್, ಇಂಧನ ಬೆಲೆ ಏರಿಕೆಯೂ ಅಲ್ಲಿನ ಆರ್ಥಿಕತೆಯ ಪರಿಸ್ಥಿತಿಯನ್ನು ಹಿಂಡಿ ಹಿಪ್ಪೆಯನ್ನಾಗಿಸುತ್ತಿದೆ.

    ಪೆಟ್ರೊಲ್ ಬೆಲೆ 84 ರೂ.ಏರಿಕೆ ಮಾಡಲಾಗಿದೆ. ಇದರಿಂದಾಗಿ ಒಂದು ಲೀಟರ್ ಪೆಟ್ರೋಲ್ ಬೆಲೆ 338 ರೂ.ಗೆ ಏರಿಕೆ ಮಾಡಲಾಗಿದೆ. ಮಂಗಳವಾರ ರುಂಬಕ್ಕನ ಪ್ರದೇಶದಲ್ಲಿ ಇಂಧನ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆದಿದೆ. ಪೊಲೀಸರ ಹಾಗೂ ಜನರ ನಡುವೆ ಸಂಘರ್ಷ ಏರ್ಪಟ್ಟು, ಪರಿಸ್ಥಿತಿಯನ್ನು ಪೊಲೀಸರಿಂದ ನಿಯಂತ್ರಣಕ್ಕೆ ತರಲು ಸಾಧ್ಯವಾಗದೇ, ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಪೊಲೀಸರ ಗುಂಡಿನ ದಾಳಿಗೆ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, 12 ಮಂದಿಗೆ ಗಾಯಗಳಾಗಿವೆ. ಇದನ್ನೂ ಓದಿ: ಚೀನಾ ಮೀರಿಸಿದ ಭಾರತ – ವಿಶ್ವದಲ್ಲೇ ಅತೀ ವೇಗದ ಅಭಿವೃದ್ಧಿ

    ಮಂಗಳವಾರ ಪ್ರತಿಭಟನಾಕಾರರು ರಂಬುಕ್ಕನದಲ್ಲಿ ರೈಲು ಮಾರ್ಗದ ಬಳಿ ಪ್ರತಿಭಟನೆ ನಡೆಸಿದ್ದರು. ಭದ್ರತಾ ಸಿಬ್ಬಂದಿ ರೈಲು ಮಾರ್ಗವನ್ನು ತೆರವುಗೊಳಿಸುವಂತೆ ಕೇಳಿದಾಗ, ಭದ್ರತಾ ಸಿಬ್ಬಂದಿಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಬಳಿಕ ಪೊಲೀಸರು ಪ್ರತಿಭಟನಾಕಾರರನ್ನು ಅಲ್ಲಿಂದ ಚದುರಿಸಲು ಪ್ರಯತ್ನಪಟ್ಟರೂ ವಾಹನಗಳಿಗೆ ಬೆಂಕಿ ಹಚ್ಚಲು ಮುಂದಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಈ ವೇಳೆ ಪರಿಸ್ಥಿತಿಯನ್ನು ಹತೋಟಿಗೆ ತರಲು ಸಾಧ್ಯವಾಗದೇ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ಈ ವೇಳೆ ಗುಂಡು ತಗುಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, 12 ಮಂದಿಗೆ ಗಾಯಗಳಾಗಿವೆ. 12 ಜನರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಮಲಾ ಹ್ಯಾರಿಸ್ ರಕ್ಷಣಾ ಸಲಹೆಗಾರರಾಗಿ ಭಾರತೀಯ ಮೂಲದ ಶಾಂತಿ ಸೇಠಿ ನೇಮಕ

    ಇತ್ತೀಚಿನ ಬೆಳವಣಿಗೆಯಲ್ಲಿ ಶ್ರೀಲಂಕಾದಲ್ಲಿ ನಡೆಯುತ್ತಿರುವ ಸರ್ಕಾರೀ ವಿರೋಧಿ ಪ್ರತಿಭಟನೆಯಲ್ಲಿ ಇದೇ ಮೊದಲ ಬಾರಿಗೆ ಸಾವು ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

  • ವಿದ್ಯುತ್ ದರ ಏರಿಕೆ ಖಂಡಿಸಿ ಧಾರವಾಡದಲ್ಲಿ ಪ್ರತಿಭಟನೆ

    ವಿದ್ಯುತ್ ದರ ಏರಿಕೆ ಖಂಡಿಸಿ ಧಾರವಾಡದಲ್ಲಿ ಪ್ರತಿಭಟನೆ

    ಧಾರವಾಡ: ಪೇಡಾ ನಗರಿಯಲ್ಲಿ ವಿದ್ಯುತ್ ದರ ಏರಿಕೆ ಖಂಡಿಸಿ ಎಸ್‍ಯುಸಿಐ ಸಂಘಟನೆ ಕಾರ್ಯಕರ್ತರು ಧಾರವಾಡದ ವಿವೇಕಾನಂದ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

    ದಿನದಿಂದ ದಿನಕ್ಕೆ ತೈಲ ಬೆಲೆ ಏರಿಕೆ ಜೊತೆಗೆ ಅಗತ್ಯ ವಸ್ತುಗಳ ಬೆಲೆ ಕೂಡ ಏರಿಕೆಯಾಗುತ್ತಿದ್ದು, ಇದೀಗ ಸರ್ಕಾರ ವಿದ್ಯುತ್ ದರವನ್ನೂ ಏರಿಕೆ ಮಾಡಿ ಬಡವರಿಗೆ ಗಾಯದ ಮೇಲೆ ಬರೆ ಎಳೆದಿದೆ ಎಂದು ಆರೋಪಿಸಿ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇದನ್ನೂ ಓದಿ: ವಿಗ್ರಹ ಮಾಡೋದು ಹರಾಮ್, ಆದ್ರೇ ಜೀವನೋಪಾಯಕ್ಕೆ ಅದು ಅನಿವಾರ್ಯ: ಉಮರ್ ಷರೀಫ್

    ಕೇಂದ್ರದ ಪ್ರಧಾನಿ ಮೋದಿ ಸರ್ಕಾರ ಬೆಲೆ ಏರಿಕೆ ನೀತಿಯನ್ನು ಅನುಸರಿಸಿ ಬಡವರಿಗೆ ನಿತ್ಯ ತೊಂದರೆ ಕೊಡುತ್ತಿದೆ. ತೈಲ ಬೆಲೆ ಏರಿಕೆಯಿಂದಾಗಿ ಮಧ್ಯಮ ವರ್ಗದ ಜನ ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಬಡವರು ಕಂಗಾಲಾಗಿದ್ದಾರೆ. ಇದನ್ನೂ ಓದಿ: ಹಲಾಲ್‌ ಆಯ್ತು ಈಗ ಮುಸ್ಲಿಮರು ಕೆತ್ತನೆ ಮಾಡಿದ ವಿಗ್ರಹ ಪ್ರತಿಷ್ಠಾಪಿಸದಂತೆ ಅಭಿಯಾನ

    ಇದೀಗ ಗಾಯದ ಮೇಲೆ ಬರೆ ಎಂಬಂತೆ ವಿದ್ಯುತ್ ದರವನ್ನು ಸರ್ಕಾರ ಹೆಚ್ಚಳ ಮಾಡಿದೆ. ಕೂಡಲೇ ಸರ್ಕಾರ ಬೆಲೆ ಏರಿಕೆ ನೀತಿಯನ್ನು ಕೈ ಬಿಟ್ಟು ಬಡವರ ಹಿತ ಕಾಯಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

  • ಕಷ್ಟದಲ್ಲಿರುವ ಜನರಿಗೆ ಸರ್ಕಾರದಿಂದ ಕರೆಂಟ್ ಶಾಕ್: ಪೃಥ್ವಿ ರೆಡ್ಡಿ

    ಕಷ್ಟದಲ್ಲಿರುವ ಜನರಿಗೆ ಸರ್ಕಾರದಿಂದ ಕರೆಂಟ್ ಶಾಕ್: ಪೃಥ್ವಿ ರೆಡ್ಡಿ

    ಬೆಂಗಳೂರು: ಬೆಲೆ ಏರಿಕೆ, ಉದ್ಯೋಗ ನಷ್ಟ ಹಾಗೂ ಲಾಕ್‍ಡೌನ್ ಸಂಕಷ್ಟದಿಂದ ತತ್ತರಿಸಿರುವ ಜನರಿಗೆ ವಿದ್ಯುತ್ ದರ ಏರಿಕೆ ಮೂಲಕ ರಾಜ್ಯ ಸರ್ಕಾರವು ಕರೆಂಟ್ ಶಾಕ್ ನೀಡುತ್ತಿದೆ ಎಂದು ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಟೀಕಿಸಿದ್ದಾರೆ.

    ವಿದ್ಯುತ್ ದರ ಏರಿಕೆ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಒಂದೂವರೆ ವರ್ಷದಲ್ಲಿ ವಿದ್ಯುತ್ ದರವನ್ನು ಮೂರನೇ ಸಲ ಏರಿಕೆ ಮಾಡಲಾಗುತ್ತಿದೆ. ಮಹಾರಾಷ್ಟ್ರ ಬಿಟ್ಟರೆ ಕರ್ನಾಟಕವೇ ಅತಿಹೆಚ್ಚು ವಿದ್ಯುತ್ ಉತ್ಪಾದನೆ ಮಾಡುತ್ತಿದೆ. ಆದರೂ ಇಲ್ಲಿ ಪದೇಪದೆ ಬೆಲೆ ಏರಿಕೆ ಮಾಡಿ ಜನಸಾಮಾನ್ಯರನ್ನು ಹೈರಾಣಾಗಿಸಲಾಗುತ್ತಿದೆ. ಅತೀ ಕಡಿಮೆ ವಿದ್ಯುತ್ ಉತ್ಪಾದನೆ ಮಾಡುವ, ಆಮ್ ಆದ್ಮಿ ಪಾರ್ಟಿ ಆಡಳಿತವಿರುವ ದೆಹಲಿಯಲ್ಲಿ ಪ್ರತಿ ಮನೆಗೆ ತಿಂಗಳಿಗೆ 200 ಯೂನಿಟ್ ತನಕ ಉಚಿತ ವಿದ್ಯುತ್ ನೀಡಲು ಸಾಧ್ಯವಾಗಿದೆ. ನಮ್ಮ ರಾಜ್ಯದಲ್ಲಿ ದರ ಏರಿಕೆಗೆ ಕಡಿವಾಣ ಹಾಕಲೂ ಬಿಜೆಪಿ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು. ಇದನ್ನೂ ಓದಿ: ನಾವು ಎಷ್ಟೇ ದೊಡ್ಡವರಾದರೂ ಶಾಲೆ, ಗುರುಗಳು ಅಂದಾಗ ಗೌರವದ ಭಾವ ಮೂಡುತ್ತೆ: ಆರ್.ಅಶೋಕ್

    ಕೋವಿಡ್‍ನಿಂದಾಗಿ 2 ವರ್ಷಗಳ ಕಾಲ ಶೇ.40ಕ್ಕಿಂತಲೂ ಹೆಚ್ಚಿನ ಕೈಗಾರಿಕೆಗಳು ಸ್ಥಗಿತಗೊಂಡಿದ್ದವು. ಅವು ವಿದ್ಯುತ್ ಬಳಸದಿದ್ದರೂ ಕನಿಷ್ಠ ವಿದ್ಯುತ್ ದರವನ್ನು ಪಾವತಿಸಿದ್ದವು. ಇದರಿಂದಾಗಿ 2 ವರ್ಷಗಳ ಕಾಲ ವಿದ್ಯುತ್ ಸರಬರಾಜು ಕಂಪನಿಗಳಿಗೆ ಉಚಿತವಾಗಿ ಹಣ ಲಭಿಸಿದೆ. ವಿದ್ಯುತ್ ಪೂರೈಕೆಯಲ್ಲಿ ಅನಗತ್ಯ ವೆಚ್ಚಗಳ ಏರಿಕೆ, ಸರಬರಾಜು ನಿರ್ವಹಣೆಯಲ್ಲಿ ನಿರ್ಲಕ್ಷ್ಯ, ಸರ್ಕಾರಿ ಸಂಸ್ಥೆಗಳಿಂದ ಬರಬೇಕಾದ 511 ಕೋಟಿ ರೂ. ಶುಲ್ಕ ವಸೂಲಿಯಲ್ಲಿ ವಿಫಲ ಸೇರಿದಂತೆ ಅನೇಕ ಕಾರಣಗಳಿಂದ ವಿದ್ಯುತ್ ಸರಬರಾಜು ಕಂಪನಿಗಳು ನಷ್ಟ ಅನುಭವಿಸುತ್ತಿವೆ. ಸರ್ಕಾರದ ತಪ್ಪಿನಿಂದಾಗುತ್ತಿರುವ ಈ ನಷ್ಟವನ್ನು ಗ್ರಾಹಕರ ಮೇಲೆ ಹೊರಿಸುವುದು ಸರಿಯಲ್ಲ ಎಂದರು. ಇದನ್ನೂ ಓದಿ: ಕುಮಾರಸ್ವಾಮಿ ಹೀಗೆ ಮಾತನಾಡಿದ್ರೆ ಹಿಟ್ ವಿಕೆಟ್ ಆಗ್ತೀರಾ: ಆರ್.ಅಶೋಕ್ ತಿರುಗೇಟು

    ಆಮ್ ಆದ್ಮಿ ಪಾರ್ಟಿ ಮುಖಂಡರಾದ ಪ್ರಕಾಶ್ ನೆಡುಂಗಡಿ ಮಾತನಾಡಿ, ರಾಜ್ಯದ ಜನರಿಂದ ದುಬಾರಿ ಶುಲ್ಕ ಪಡೆಯುವ ರಾಜ್ಯ ಸರ್ಕಾರವು ಹೊರರಾಜ್ಯಗಳಿಗೆ ಮಾತ್ರ ಅಗ್ಗದ ದರದಲ್ಲಿ ವಿದ್ಯುತ್ ಪೂರೈಸುತ್ತಿದೆ. ಯೂನಿಟ್‍ಗೆ ಕೇವಲ 2.38 ರೂಪಾಯಿಯಂತೆ ಬೇರೆ ರಾಜ್ಯಗಳಿಗೆ ವಿದ್ಯುತ್ ಮಾರಾಟ ಮಾಡಲಾಗುತ್ತಿದೆ. ಜೊತೆಗೆ, ಕೇಂದ್ರ ಸರ್ಕಾರದ ವಿದ್ಯುತ್ ಉತ್ಪಾದನಾ ಘಟಕಗಳಿಂದ ರಾಜ್ಯವು ವಿದ್ಯುತ್ ಖರೀದಿಸದಿದ್ದರೂ ನಿರ್ದಿಷ್ಟ ಶುಲ್ಕವನ್ನು ಪಾವತಿಸಬೇಕಾಗಿದೆ. ಇದರಿಂದಾಗಿ ಗ್ರಾಹಕರು ಹೆಚ್ಚು ದರ ಪಾವತಿಸಬೇಕಾಗಿದೆ. ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರವಾಗುತ್ತಿದ್ದು, ಅದಾನಿ ಪವರ್ ಲಿಮಿಟೆಡ್ ಭಾಗವಾಗಿರುವ ಉಡುಪಿ ಪವರ್ ಲಿಮಿಟೆಡ್‍ಗೆ 2021-22ರಲ್ಲಿ ಶೇ.40ರಷ್ಟು ಅಧಿಕ, ಅಂದರೆ ಯೂನಿಟ್ 6.80 ರೂಪಾಯಿಯನ್ನು ಸರ್ಕಾರ ನೀಡಿದೆ ಎಂದು ಆರೋಪಿಸಿದರು.

  • ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆ

    ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆ

    ನವದೆಹಲಿ: ಕಳೆದ 14 ದಿನದಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ. ಸೋಮವಾರವೂ ಸಹ ಪ್ರತಿ ಲೀಟರ್ ಪೆಟ್ರೋಲ್‍ಗೆ 42 ಪೈಸೆ, ಡಿಸೇಲ್‍ಗೆ 39 ಪೈಸೆ ಏರಿಕೆಯಾಗಿದೆ.

    petrol

    ಭಾನುವಾರ ಬೆಂಗಳೂರಿನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ 109.01 ರೂ., ಡಿಸೇಲ್‍ಗೆ 92.85 ರೂ. ಇತ್ತು. ಈಗ ಲೀಟರ್ ಪೆಟ್ರೋಲ್ ಬೆಲೆ 109.43 ರೂ., ಡಿಸೇಲ್ 93.24 ರೂ.ಗೆ ಏರಿಕೆಯಾಗಿದೆ. ಕಳೆದ ಎರಡು ವಾರಗಳಿಂದ ಇಂಧನದ ತೈಲ ಬೆಲೆಯಲ್ಲಿ ಒಟ್ಟು 8.40 ರೂ. ದರ ಏರಿಕೆಯಾಗಿದೆ. ಇದನ್ನೂ ಓದಿ: 13ನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

    ಯಾವ ನಗರದಲ್ಲಿ ಎಷ್ಟು?
    ದೆಹಲಿಯಲ್ಲಿ ಪ್ರತಿ ಲೀ. ಪೆಟ್ರೋಲ್ ಬೆಲೆ 103.41 ರೂ. ಡೀಸೆಲ್ ಬೆಲೆ ರೂ.94.67 ರೂ. ಏರಿಕೆಯಾಗಿದೆ. ಮುಂಬೈನಲ್ಲಿ ಲೀ. ಪೆಟ್ರೋಲ್ ದರ 118.41 ರೂ. ಡೀಸೆಲ್ 102.64 ರೂ. ದಾಖಲಾಗಿದೆ. ಚೆನ್ನೈನಲ್ಲಿ ಲೀ. ಪೆಟ್ರೋಲ್ ದರ 108.21 ರೂ. ಹಾಗೂ ಡೀಸೆಲ್ ದರ 99.04 ರೂ. ಇದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ರಾಜ್ಯಗಳ ವ್ಯಾಟ್‌ ತೆರಿಗೆ ಸೇರಿದ ಬಳಿಕ ಬೆಲೆ ಏರಿಕೆಯಾಗುತ್ತದೆ.

  • ಕಚ್ಚಾತೈಲ ಬೆಲೆ ಮತ್ತೆ ಶೇ.3 ಏರಿಕೆ; ಮಾರುಕಟ್ಟೆಯಿಂದ ಹೊರಬೀಳಲಿದೆಯಾ ರಷ್ಯಾ ತೈಲ

    ಕಚ್ಚಾತೈಲ ಬೆಲೆ ಮತ್ತೆ ಶೇ.3 ಏರಿಕೆ; ಮಾರುಕಟ್ಟೆಯಿಂದ ಹೊರಬೀಳಲಿದೆಯಾ ರಷ್ಯಾ ತೈಲ

    ಮಾಸ್ಕೋ: ರಷ್ಯಾ ಉಕ್ರೇನ್ ನಡುವೆ ಶಾಂತಿ ಮಾತುಕತೆ ನಡೆಯುವುದು ಅಮಾನಾಸ್ಪದವಾಗಿದೆ. ಉಕ್ರೇನ್ ಉಪಪ್ರಧಾನಿ ಉಕ್ರೇನ್ ನಗರಗಳನ್ನು ಯಾವುದೇ ಕಾರಣಕ್ಕೂ ರಷ್ಯಾಕ್ಕೆ ಶರಣಾಗಿಸುವುದಿಲ್ಲ ಎಂದು ಹೇಳಿಕೆ ನೀಡಿರುವುದು ಯುದ್ಧವನ್ನು ಮುಂದುವರಿಸಲು ಮತ್ತಷ್ಟು ಪುಷ್ಟಿ ನೀಡಿದಂತಾಗಿದೆ.

    ಈ ನಡುವೆ ಇಂದು (ಸೋಮವಾರ) ಕಚ್ಚಾತೈಲ ಬೆಲೆ ಶೇ.3ರಷ್ಟು ಏರಿಕೆಯಾಗಿದೆ. ಒಂದು ಬ್ಯಾರಲ್‌ಗೆ 111 ಡಾಲರ್ (8,444.11 ರೂ.) ಗಳಿಗೆ ಏರಿಕೆಯಾಗಿದೆ. ಹಿಂದಿನ ವಹಿವಾಟಿನಲ್ಲಿ ಪ್ರತಿ ಬ್ಯಾರಲ್‌ಗೆ 107.93 ಡಾಲರ್‌ಗಳಿಗೆ (8,207.57 ರೂ.) ಮಾರಾಟವಾಗುತ್ತಿದ್ದ ಕಚ್ಚಾತೈಲ ಬ್ರೆಂಟ್ ಕಚ್ಚಾತೈಲ ಒಪ್ಪಂದದ ಪ್ರಕಾರ ಕೊನೆಯ ವಹಿವಾಟಿನಲ್ಲಿ ಪ್ರತಿ ಬ್ಯಾರಲ್‌ಗೆ 111 ಡಾಲರ್‌ನಂತೆ ಮಾರಾಟವಾಗಿದೆ. ಇದರಿಂದ ಒಟ್ಟಾರೆ ಕಚ್ಚಾತೈಲ ಸರಬರಾಜಿನಲ್ಲಿ ಶೇ.2.8ರಷ್ಟು ಹೆಚ್ಚಾಗಿರುವುದು ಕಂಡುಬಂದಿದೆ. ಇದನ್ನೂ ಓದಿ: ಉಬರ್ ಚಾಲಕರಾದ ಅಫ್ಘಾನ್ ಮಾಜಿ ಹಣಕಾಸು ಸಚಿವ

    ಭಾರತಕ್ಕೆ ಹೊರೆಯಾಗುವುದೇ?
    ಭಾರತಕ್ಕೆ 3 ಮಿಲಿಯನ್ ಬ್ಯಾರೆಲ್ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳಲು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್) ರಷ್ಯಾದ ತೈಲ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಇದು ಸರ್ಕಾರದ ಮಟ್ಟದಲ್ಲಿ ನಡೆದ ಒಪ್ಪಂದವಲ್ಲ, ತೈಲ ಕಂಪನಿಗಳ ನಡುವೆ ಮಾಡಿಕೊಂಡಿರುವ ಒಪ್ಪಂದ ಆಗಿದೆ ಎಂದು ಹೇಳಲಾಗಿತ್ತು. ಆದರೀಗ ಸತತವಾಗಿ ತೈಲದರ ಏರಿಕೆಯಾಗುತ್ತಿರುವುದು ಮತ್ತು ರಷ್ಯಾದ ತೈಲ ಮಾರುಕಟ್ಟಯಿಂದ ಹೊರಗುಳಿಯಲಿದೆ ಎನ್ನುವ ಸಂಶಯ ವ್ಯಕ್ತವಾಗಿರುವುದು ಭಾರತಕ್ಕೆ ಹೊರೆಯಾಗಲಿದೆಯೇ ಎನ್ನುವ ಆತಂಕ ಉಂಟುಮಾಡಿದೆ. ಇದನ್ನೂ ಓದಿ: 133 ಪ್ರಯಾಣಿಕರಿದ್ದ ಚೀನಾ ವಿಮಾನ ಪತನ

  • ಎಣ್ಣೆ ಪ್ರಿಯರಿಗೆ ಕಹಿ ಸುದ್ದಿ – ಮದ್ಯ ಬೆಲೆ ಏರಿಕೆ

    ಎಣ್ಣೆ ಪ್ರಿಯರಿಗೆ ಕಹಿ ಸುದ್ದಿ – ಮದ್ಯ ಬೆಲೆ ಏರಿಕೆ

    ಚೆನ್ನೈ: ತಮಿಳುನಾಡಿನಲ್ಲಿ ಇಂದಿನಿಂದ ಮದ್ಯ ಬೆಲೆ ಏರಿಕೆಯಾಗಿದ್ದು, 180 ಎಂಎಲ್ ಬಾಟಲಿಗೆ 10 ರೂಪಾಯಿ ಮತ್ತು 375 ಎಂಎಲ್ ಮದ್ಯದ ಬಾಟಲಿಗೆ 20 ರೂಪಾಯಿಯನ್ನು ಹೆಚ್ಚಿಸಲಾಗಿದೆ.

    ಮಾರ್ಚ್ 5ರ ಶನಿವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ತಮಿಳುನಾಡು ಸ್ಟೇಟ್ ಮಾರ್ಕೆಟಿಂಗ್ ಕಾರ್ಪೊರೇಷನ್ ಲಿಮಿಟೆಡ್ (ಟಿಅಎಸ್‍ಎಂಎಸಿ) ಎಂಬ ಬ್ಯಾನರ್ ಅಡಿಯಲ್ಲಿ ತಮಿಳುನಾಡಿನಲ್ಲಿ ಮದ್ಯವನ್ನು ಮಾರಾಟ ಮಾಡಲಾಗುತ್ತದೆ. ಇದನ್ನೂ ಓದಿ: ಎಗ್ ಘೀ ರೋಸ್ಟ್ ಮಾಡುವ ಸರಳ ವಿಧಾನ ನಿಮಗಾಗಿ

    ಈ ಮುನ್ನ ತಮಿಳುನಾಡಿನಲ್ಲಿ 2020ರಲ್ಲಿ ಮದ್ಯ ಬೆಲೆಯನ್ನು ಹೆಚ್ಚಿಸಲಾಗಿತ್ತು. ನಂತರ ಮೇ ತಿಂಗಳಿನಿಂದ ಮತ್ತೆ 20ರೂ.ಗಳಷ್ಟು ಬೆಲೆಯನ್ನು ಹೆಚ್ಚಿಸಲಾಗಿತ್ತು. ಕೋವಿಡ್-19 ಲಾಕ್‍ಡೌನ್‍ನಿಂದಾಗಿ 40 ದಿನಗಳ ನಂತರ ಚಿಲ್ಲರೆ ಮಾರಾಟ ಮಳಿಗೆಗಳನ್ನು ತೆರೆಯಲಾಯಿತು. ಇದನ್ನೂ ಓದಿ: ಉಕ್ರೇನ್‌ ದೇಶವಾಗಿ ಉಳಿಯುವುದೇ ಅನುಮಾನ: ಪುಟಿನ್‌ ನೇರ ಎಚ್ಚರಿಕೆ