ನವದೆಹಲಿ: ರಾಜಸ್ಥಾನದ ಉದಯಪುರದಲ್ಲಿ ನಡೆದ ಕನ್ನಯ್ಯಲಾಲ್ ಹತ್ಯೆ ಘೋರ ಘಟನೆಯಾಗಿದ್ದು, ಇದನ್ನು ನಾಗರಿಕ ಸಮಾಜ ಖಂಡಿಸಬೇಕು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದರು.
ದೇಶದಲ್ಲಿ ಇದೇ ಮಾದರಿಯಲ್ಲಿ ಹಲವು ಹತ್ಯೆಗಳಾಗಿದೆ. ಹಿಂದೆ ಇದೇ ರಾಜಸ್ಥಾನದಲ್ಲಿ ಶಂಕರಲಾಲ್ ಎನ್ನುವವರು ಓರ್ವ ಯುವಕನ ಹತ್ಯೆ ಮಾಡಿಸಿದ್ದರು. ಫರಿದಾಬಾದ್‍ನಲ್ಲಿ ಅಲ್ಪಸಂಖ್ಯಾತ ಎನ್ನುವ ಕಾರಣಕ್ಕೆ ಯುವಕನ ಹತ್ಯೆ ಮಾಡಲಾಗಿತ್ತು. ಕಟುವಾದಲ್ಲಿ ಐದು ವರ್ಷದ ಹೆಣ್ಣು ಮಗುವನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿತ್ತು. ಈ ಎಲ್ಲ ಬೆಳವಣಿಗೆಗಳನ್ನು ನಾವು ಖಂಡಿಸಬೇಕು ಎಂದು ವಿವರಿಸಿದರು.
ಅಸಹಿಷ್ಣುತೆ ಎನ್ನುವುದು ಭಾರತದಲ್ಲಿ ಮೊದಲು ಇರಲಿಲ್ಲ. ಎಂಟು ವರ್ಷದ ಹಿಂದೆ ವಿಶ್ವಗುರು ಬಂದ ಬಳಿಕ ಈ ಬೆಳವಣಿಗೆಗಳು ಆರಂಭವಾಗಿವೆ. ಇದನ್ನು ಸಭ್ಯ ನಾಗರಿಕ ಸಮಾಜ ವಿರೋಧಿಸಬೇಕು ಎಂದು ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕುಟುಕಿದರು. ಇದನ್ನೂ ಓದಿ: ಇದೊಂದು ವ್ಯವಸ್ಥಿತ ಸಂಚು, ದೇಶದಲ್ಲಿ ಮತ್ತೆ ಭಯೋತ್ಪಾದಕ ಚಟುವಟಿಕೆ ಶುರು: ಕಟೀಲ್
ನವದೆಹಲಿ: ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ 58ನೇ ಪುಣ್ಯತಿಥಿಯ ಅಂಗವಾಗಿ ಪ್ರಧಾನಿ ಮೋದಿ, ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಹಾಗೂ ಇತರ ಪಕ್ಷದ ನಾಯಕರು ಸೇರಿದಂತೆ ಅನೇಕರು ಇಂದು ನಮನ ಸಲ್ಲಿಸಿದರು.
ಜವಾಹರಲಾಲ್ ನೆಹರು ಅವರು 1964ರ ಮೇ 27 ರಂದು ಕೊನೆಯುಸಿರೆಳೆದರು. ದೇಶಾದ್ಯಂತ ಸುಮಾರು 1.5 ಮಿಲಿಯನ್ ಜನರು ಅವರ ಅಂತ್ಯಕ್ರಿಯೆ ಸಮಾರಂಭದಲ್ಲಿ ಭಾಗವಹಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ನೆಹರೂ ಅವರನ್ನು ಸ್ಮರಿಸಿ, ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯತಿಥಿಯಂದು ಅವರಿಗೆ ನಮನಗಳು ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಮಂಕಿಪಾಕ್ಸ್ ಆತಂಕ – ಬೆಂಗಳೂರಿನಲ್ಲಿ ಹೈ ಅಲರ್ಟ್
कांग्रेस अध्यक्ष श्रीमती सोनिया गांधी जी ने देश के प्रथम प्रधानमंत्री पंडित जवाहरलाल नेहरू जी के समाधि स्थल शांति वन में उनकी पुण्यतिथि पर उन्हें भावपूर्ण श्रद्धांजलि अर्पित की। pic.twitter.com/AQ4q2mmxY7
‘ಚಾಚಾ ನೆಹರು’ ಎಂದು ಪ್ರೀತಿಯಿಂದ ಕರೆಯಲ್ಪಡುವ ಜವಾಹರಲಾಲ್ ನೆಹರು ಅವರು ಭಾರತದ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು. ಉತ್ತರ ಪ್ರದೇಶದ ಪ್ರಯಾಗ್‍ರಾಜ್‍ನಲ್ಲಿ ನವೆಂಬರ್ 14, 1889 ರಂದು ಜನಿಸಿದ್ದರು. ನೆಹರು ಅವರು ಆಗಸ್ಟ್ 15, 1947 ರಂದು ಭಾರತದ ಪ್ರಧಾನ ಮಂತ್ರಿಯಾಗಿ 18 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿದ್ದಾರೆ.
ಜವಾಹರಲಾಲ್ ನೆಹರೂ ಅವರು ಭಾರತವನ್ನು ಸಾರ್ವಭೌಮ, ಸಮಾಜವಾದಿ, ಜಾತ್ಯಾತೀತ ಮತ್ತು ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಬರಹಗಾರರಾಗಿದ್ದ ಅವರು, ‘ದಿ ಡಿಸ್ಕವರಿ ಆಫ್ ಇಂಡಿಯಾ’, ‘ಗ್ಲಿಂಪ್ಸಸ್ ಆಫ್ ವಲ್ರ್ಡ್ ಹಿಸ್ಟರಿ’ ಮತ್ತು ಅವರ ಆತ್ಮಚರಿತ್ರೆ ‘ಟುವರ್ಡ್ ಫ್ರೀಡಮ್’ ಸೇರಿದಂತೆ ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ.
1950 ರಿಂದ 1955 ರವರೆಗೆ ಭಾರತದಲ್ಲಿ ಶಾಂತಿಯನ್ನು ಎತ್ತಿ ಹಿಡಿದಿದ್ದಕ್ಕಾಗಿ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿಗೆ 11 ನಾಮನಿರ್ದೇಶನಗಳನ್ನು ಗೆದ್ದಿದ್ದಾರೆ. ಅಷ್ಟೇ ಅಲ್ಲದೇ ಅವರಿಗೆ 1955 ರಲ್ಲಿ ಭಾರತ ರತ್ನವನ್ನು ಸಹ ನೀಡಲಾಗಿದೆ.
ಕೊಲಂಬೊ: ಶ್ರೀಲಂಕಾದ ನೂತನ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ತಮ್ಮ ಅವಧಿಯಲ್ಲಿ ಭಾರತದೊಂದಿಗೆ ಉತ್ತಮ ಬಾಂಧವ್ಯವನ್ನು ಬೆಳೆಸಲು ಎದುರು ನೋಡುತ್ತಿರುವುದಾಗಿ ಹೇಳಿದ್ದಾರೆ. ಜೊತೆಗೆ ದೇಶವು ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ದೇಶಕ್ಕೆ ಆರ್ಥಿಕ ನೆರವು ನೀಡಿದ ಭಾರತಕ್ಕೆ ಧನ್ಯವಾದ ಅರ್ಪಿಸಿದ್ದಾರೆ.
ಗುರುವಾರ ಶ್ರೀಲಂಕಾದ 26ನೇ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಸಾಲದ ಸುಳಿಯಲ್ಲಿ ಸಿಲುಕಿರುವ ದೇಶದ ಆರ್ಥಿಕತೆಯನ್ನು ಸ್ಥಿರಗೊಳಿಸಲು ಮತ್ತು ರಾಜಕೀಯ ಪ್ರಕ್ಷುಬ್ಧತೆಗೆ ಅಂತ್ಯ ಹಾಡುವು ಭಾಗವಾಗಿ ಶ್ರೀಲಂಕಾದಲ್ಲಿ ಈ ಮಹತ್ವದ ಬೆಳವಣಿಗೆ ನಡೆದಿದೆ. ಇದನ್ನೂ ಓದಿ: ನನಗೆ ಅವಕಾಶ ಕೊಟ್ಟಿದ್ದು, ಬೆನ್ನೆಲುಬಾಗಿ ನಿಂತಿದ್ದು ರಾಹುಲ್‍ಗಾಂಧಿ: ರಮ್ಯಾ
ಪ್ರಮಾಣ ವಚನ ಸ್ವೀಕರಿಸಿದ ನಂತರ ನಿನ್ನೆ ರಾತ್ರಿ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ನಮಗೆ ಭಾರತದೊಂದಿಗೆ ಉತ್ತಮ ಬಾಂಧವ್ಯದ ಅಗತ್ಯವಿದೆ. ನಾನು ಭಾರತದ ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಆರ್ಥಿಕ ಬಿಕ್ಕಟ್ಟನ್ನು ನಿವಾರಿಸುವುದರ ಕಡೆಗಷ್ಟೇ ನಮ್ಮ ಗಮನ. ಜನರಿಗೆ ಪೆಟ್ರೋಲ್, ಡೀಸೆಲ್ ಮತ್ತು ವಿದ್ಯುತ್ ಪೂರೈಕೆಯನ್ನು ಖಾತ್ರಿಪಡಿಸಲು ಬಯಸುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಕಾಂಗ್ರೆಸ್‍ನಿಂದಲೇ ಟ್ರೋಲ್‍ಗೆ ಕರೆ – ನನ್ನನ್ನು ನಾನೇ ಟ್ರೋಲ್ ಮಾಡ್ಕೋತಿನಿ ಎಂದ ರಮ್ಯಾ
ಭಾರತವು ಈ ವರ್ಷದ ಜನವರಿಯಿಂದ ಶ್ರೀಲಂಕಾಕ್ಕೆ ಸಾಲಗಳು, ಕ್ರೆಡಿಟ್ ಲೈನ್‍ಗಳು ಮತ್ತು ಕ್ರೆಡಿಟ್ ಸ್ವಾಪ್‍ಗಳಂತಹ ಹಲವು ರೂಪಗಳಲ್ಲಿ 3 ಶತಕೋಟಿಗಿಂತ ಹೆಚ್ಚು ನೆರವು ನೀಡಿದೆ. ಪ್ರಜಾಪ್ರಭುತ್ವ ಪ್ರಕ್ರಿಯೆಗಳಿಗೆ ಅನುಗುಣವಾಗಿ ರಚನೆಯಾದ ಶ್ರೀಲಂಕಾದ ಹೊಸ ಸರ್ಕಾರದೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿರುವುದಾಗಿ ಭಾರತ ಗುರುವಾರ ಹೇಳಿದೆ. ದ್ವೀಪ ರಾಷ್ಟ್ರದ ಜನರ ಬಗೆಗಿನ ಭಾರತದ ಬದ್ಧತೆ ಮುಂದುವರೆಯಲಿದೆ ಎಂದು ಹೇಳಿತ್ತು.
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಈಗ ಅಪ್ಪ-ಮಕ್ಕಳು, ಕುಟುಂಬ ರಾಜಕಾರಣದ ಸದ್ದು ಜೋರಾಗಿ ಮಾಡುತ್ತಿದೆ. ಬಿಜೆಪಿ ರಾಷ್ಟ್ರೀಯ ಸಂಘಟನೆ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿಕೆ ತಲ್ಲಣ ಸೃಷ್ಟಿಸಿದ್ದು, ರಾಜ್ಯ ಬಿಜೆಪಿ ನಾಯಕರಿಗೆ ಆತಂಕ ಸೃಷ್ಟಿ ಮಾಡಿದೆ.
ಕುಟುಂಬ ರಾಜಕಾರಣದ ವಿರುದ್ಧ ಹೇಳಿಕೆ ಕೊಟ್ಟರುವ ಬಿ.ಎಲ್.ಸಂತೋಷ್ ಹೇಳಿಕೆಯನ್ನು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಸ್ವಾಗತ ಮಾಡಿದ್ದಾರೆ. ಅಲ್ಲದೆ ರಾಜಕಾರಣದಲ್ಲಿ ಅಪ್ಪ-ಮಕ್ಕಳ ಸಂಸ್ಕೃತಿ ಇರಬಾರದು ಅಂತ ಸಂತೋಷ್ ಮಾತಿಗೆ ಧ್ವನಿಗೂಡಿಸಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಕಾರಣ ಅನ್ನೋದು ಬ್ಯುಸಿನೆಸ್ ಅಲ್ಲ. ಪಕ್ಷ ವಿನೂತನವಾಗಿ, ಹೊಸದಾಗಿ ಏನೇ ಮಾಡಿದರು ನಮಗೆ ಸಂತೋಷ ಇದೆ. ನಮ್ಮ ಅಭ್ಯಂತರ ಇಲ್ಲ. ಪಕ್ಷಕ್ಕೆ ವ್ಯಕ್ತಿಗಳು ಮುಖ್ಯ ಅಲ್ಲ. ವ್ಯಕ್ತಿಗಿಂತ ವ್ಯವಸ್ಥೆ ಮುಖ್ಯವಾಗಿ ಇರುತ್ತದೆ. ವ್ಯವಸ್ಥೆಯಲ್ಲಿ ಯಾರಾದರೇನು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹೊಸ ಮುಖಗಳ ಪರಿಚಯವೇ ಬಿಜೆಪಿ ಅಧಿಕಾರಕ್ಕೇರಲು ಕಾರಣ: ಬಿ.ಎಲ್.ಸಂತೋಷ್
ಕುಟುಂಬ ರಾಜಕಾರಣವನ್ನು ಇಡೀ ಸಮಾಜ ವಿರೋಧ ಮಾಡುತ್ತದೆ. ಕುಟುಂಬ ಆಧಾರಿತ ರಾಜಕೀಯ ಇರಬಾರದು ಅನ್ನೋದು ಸಮಾಜದ ಇಚ್ಛೆ. ಆ ದಿಕ್ಕಿನಲ್ಲಿ ಬಿಜೆಪಿ ಯೋಚನೆ ಮಾಡ್ತಿರೋದು ಒಳ್ಳೆ ಬೆಳವಣಿಗೆ. ಕೆಲವರಿಗೆ ಮೀಸಲು ಇರೋದಕ್ಕೆ ಇದು ಬ್ಯುಸಿನೆಸ್ ಅಲ್ಲ, ಇದೊಂದು ಸೇವೆ. ನಾವು ಸಮಾಜಕ್ಕೆ ಸೇವೆ ಸಲ್ಲಿಸಬೇಕು. ರಾಜಕೀಯಕ್ಕೆ ಬಂದು ನಮ್ಮ ಸೇವೆ ಮಾಡಿಕೊಳ್ಳೋದು ಸರಿಯಲ್ಲ. ಅಪ್ಪ-ಮಕ್ಕಳ ಸಂಸ್ಕೃತಿ ಸಮಾಜದಲ್ಲಿ ಇರಬಾರದು ಎಂದಿದ್ದಾರೆ.
ಕಾಂಗ್ರೆಸ್, ಪ್ರಾದೇಶಿಕ ಪಕ್ಷಗಳಲ್ಲಿ ಕುಟುಂಬ ರಾಜಕಾರಣ, ಅಪ್ಪ ಮಕ್ಕಳ ಪಕ್ಷ ಅಂತ ಇದೆ. ಎಲ್ಲಾ ರಾಜ್ಯದಲ್ಲೂ ಅಪ್ಪ-ಮಕ್ಕಳ ಪಕ್ಷ ಆಗಿ ಬಿಟ್ಟಿದೆ. ಹೀಗಾಗಿ ಪ್ರಧಾನಿ ಮೋದಿ ಅವರು ಇದನ್ನ ಸ್ಪಷ್ಟವಾಗಿ ವಿರೋಧ ಮಾಡಿದ್ದಾರೆ. ಇದನ್ನ ನಾವೂ ವಿರೋಧ ಮಾಡಬೇಕು. ಇದೇನು ಬ್ಯುಸಿನೆಸ್ ಮಾಡೆಲ್ ಅಲ್ಲ. ಈ ನಿಟ್ಟಿನಲ್ಲಿ ಪ್ರಧಾನಿಗಳು ನಿರ್ಧಾರ ಮಾಡಿದ್ದಾರೆ. ಯಾರು ಯಾರು ಇರಬೇಕು ಅಂತ ಪಕ್ಷ ತೀರ್ಮಾನ ಮಾಡುತ್ತದೆ. ಅದಕ್ಕೆ ನಾವು ಬದ್ಧರಾಗಿ ಇರಬೇಕು. ನಾನೇ ಒಬ್ಬ, ನಾನೇ ಎಲ್ಲಾ ಅಂತ ಹೇಳೋದು ತಪ್ಪು ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ:ಭಾರತೀಯ ಸೇನೆಯ ಲೆಫ್ಟಿನೆಂಟ್ ಜನರಲ್ ಆಗಿ ಕಾಫಿನಾಡ ಬಿ.ಎಸ್.ರಾಜು ನೇಮಕ
ನಾಯಕತ್ವ ಬದಲಾವಣೆ ಹೈಕಮಾಂಡ್ ತೀರ್ಮಾನ:
ನಾಯಕತ್ವ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧರಾಗಿ ಇರುತ್ತೇವೆ. ಪಕ್ಷ ಆಲೋಚನೆ ಮಾಡಿ ನಿರ್ಧಾರ ಮಾಡುತ್ತದೆ. ಅದಕ್ಕೆ ನಾವೆಲ್ಲ ಸಹಕಾರ ಕೊಡಬೇಕು. ನಾವೆಲ್ಲ ಒಟ್ಟಾಗಿ ಇರಬೇಕು. ಪಕ್ಷವಾಗಿ ಏನು ನಿರ್ಧಾರ ಆಗುತ್ತೋ ಅದರಂತೆ ಎಲ್ಲರೂ ನಡೆದುಕೊಳ್ಳಬೇಕು ಎಂದು ಸ್ಪಷ್ಟಪಡಿಸಿದ್ದಾರೆ.
ಅನೇಕರಲ್ಲಿ ಬೇರೆ ಬೇರೆ ಅಭಿಪ್ರಾಯಗಳು ಇರಬಹುದು. ಆದರೆ ಪಕ್ಷದ ತೀರ್ಮಾನವೇ ಅಂತಿಮ. ಅದಕ್ಕೆ ಎಲ್ಲರೂ ಬದ್ಧವಾಗಿ ಇರಬೇಕು. ನಾವು ಬಂದಿರೋದು ಸಮಾಜಕ್ಕೆ ಒಳ್ಳೆಯದು ಮಾಡಲು. ಪಕ್ಷ ಏನು ತೀರ್ಮಾನ ಮಾಡುತ್ತೋ ಹಾಗೆ ನಡೆಯಬೇಕು. ಈ ದಿಕ್ಕಿನಲ್ಲಿ ಪಕ್ಷ ತೆಗೆದುಕೊಳ್ಳೊವ ತೀರ್ಮಾನಕ್ಕೆ ನಾನು ಬದ್ಧವಾಗಿ ಇರುತ್ತೇನೆ ಎಂದು ಹೇಳಿದ್ದಾರೆ.
ಲಕ್ನೋ: ಆಧ್ಯಾತ್ಮಿಕ ಪ್ರಯಾಣಕ್ಕಾಗಿ ವಾರಣಾಸಿಗೆ ಭೇಟಿ ನೀಡಿದ ಬಾಸ್ಕೆಟ್ ಬಾಲ್ ಸ್ಟಾರ್ ಆಟಗಾರ ಡ್ವಿಟ್ ಹೊವಾರ್ಡ್, ಪವಿತ್ರ ನಗರವನ್ನು ಸುಧಾರಿಸಿದ್ದಕ್ಕಾಗಿ ಪ್ರಧಾನಿ ಮೋದಿಯನ್ನು ಶ್ಲಾಘಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಅವರು, ವಾರಣಾಸಿಗೆ ಭೇಟಿ ನೀಡಿದ ಬಳಿಕ ನನ್ನಲ್ಲಿ ಶಾಂತಿ ನೆಲೆಸಿದೆ. ಆತ್ಮವನ್ನು ಪುನರುಜ್ಜೀವನಗೊಳಿಸಿದ ಆಧ್ಯಾತ್ಮಿಕ ಪ್ರಯಾಣ ಇದಾಗಿದೆ. ಪವಿತ್ರ ನಗರವನ್ನು ಸುಧಾರಿಸಿದ್ದಕ್ಕಾಗಿ ಪ್ರಧಾನಿ ಮೋದಿ ಅವರಿಗೆ ಅಭಿನಂದನೆಗಳು. ವಾರಣಾಸಿಯು ಅನೇಕ ದಂತಕಥೆಗಳಿಗೆ ಸ್ಫೂರ್ತಿ ನೀಡಿದೆ. ನಾನು ವಾರಣಾಸಿಗೆ ಕೃತಜ್ಞನಾಗಿದ್ದೇನೆ. ಈ ಪವಿತ್ರ ನಗರದ ಪುನರ್ಜನ್ಮವು ಇನ್ನೂ ಅನೇಕರನ್ನು ಪ್ರೇರೇಪಿಸುತ್ತದೆ ಎಂದು ನನಗೆ ಖಾತ್ರಿಯಿದೆ ಎಂದು ಸಾಲುಗಳನ್ನು ಬರೆದು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಬಡ ಮುಸ್ಲಿಮರ ಮೇಲೆ ಬಿಜೆಪಿ ಸಮರ ಸಾರಿದೆ: ಓವೈಸಿ ಕಿಡಿ
ಉತ್ತರ ಪ್ರದೇಶ ಪ್ರವಾಸೋದ್ಯಮ ಇಲಾಖೆಯು ಬಾಸ್ಕೆಟ್‍ಬಾಲ್ ಆಟಗಾರ ಭೇಟಿ ನೀಡಿರುವುದನ್ನು ನಿನ್ನೆ ಖಚಿತಪಡಿಸಿದೆ. ಅವರು ನಿನ್ನೆ ಗಂಗಾ ನದಿ ಆರತಿಗೆ ಸಾಕ್ಷಿಯಾದರು. ಆಧ್ಯಾತ್ಮಿಕತೆ ಮತ್ತು ಸಂಸ್ಕೃತಿಯ ಈ ಪ್ರಾಚೀನ ನಗರಕ್ಕೆ ಭೇಟಿ ನೀಡಿದ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ ಎಂದು ಇಲಾಖೆ ಟ್ವೀಟ್ ಮಾಡಿದೆ. ಇದನ್ನೂ ಓದಿ: ಪರೀಕ್ಷೆಗೆ ಹಿಜಬ್ ಧರಿಸಿ ಬಂದ ಡಿಗ್ರಿ ವಿದ್ಯಾರ್ಥಿನಿಗೆ ಅನುಮತಿ ನಿರಾಕರಣೆ
ಹೊವಾರ್ಡ್ (36) ಪ್ರಸ್ತುತ ಉತ್ತರ ಅಮೆರಿಕಾದ ವೃತ್ತಿಪರ ಬ್ಯಾಸ್ಕೆಟ್‍ಬಾಲ್ ಲೀಗ್ ರಾಷ್ಟ್ರೀಯ ಬಾಸ್ಕೆಟ್‍ಬಾಲ್ ಅಸೋಸಿಯೇಷನ್ ಎನ್‍ಬಿಎನಲ್ಲಿ ಲಾಸ್ ಏಂಜಲೀಸ್ ಲೇಕರ್ಸ್‍ನ ಸೆಂಟರ್-ಫಾರ್ವರ್ಡ್ ಆಗಿ ಆಡುತ್ತಿದ್ದಾರೆ.
ನವದೆಹಲಿ: ಪ್ರಧಾನಿ ಮೋದಿಯವರ ಕೆಲ ನಿರ್ಧಾರಗಳಿಂದಾಗಿ 45 ಕೋಟಿಗೂ ಹೆಚ್ಚು ಜನರು ಉದ್ಯೋಗ ಪಡೆಯುವ ಭರವಸೆ ಕಳೆದುಕೊಂಡಿದ್ದಾರೆ ಎಂದು ಪ್ರದಾನಿ ಮೋದಿಯವರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.
ಒಂದು ದಿನದ ಹಿಂದೆ, ರಾಹುಲ್ ಗಾಂಧಿ ಅವರು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‍ಇ) ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದು ವಾಸ್ತವವಾಗಿ ‘ಸೆಂಟ್ರಲ್ ಬೋರ್ಡ್ ಆಫ್ ಸಪ್ರೆಸಿಂಗ್ ಎಜುಕೇಶನ್’ ಎಂದು ಹೇಳಿದರು. ಸಿಬಿಎಸ್‍ಸಿ ಬೋರ್ಡ್ 10 ಮತ್ತು 12 ನೇ ತರಗತಿಗಳ ಪಠ್ಯಕ್ರಮವನ್ನು ಮಾರ್ಪಡಿಸಿದ ಕೆಲವು ದಿನಗಳ ನಂತರ ಅವರು ಈ ಹೇಳಿಕೆ ನೀಡಿದ್ದಾರೆ.
ಪಠ್ಯಕ್ರಮದ ಮಾರ್ಪಾಡಿನ ಕುರಿತು ಗಾಂಧಿ ವಂಶಸ್ಥರು ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಗುರಿಯಾಗಿಟ್ಟುಕೊಂಡು ಅದನ್ನು ‘ರಾಷ್ಟ್ರೀಯ ಶಿಕ್ಷಾ ಛೇದಕ’ ಎಂದು ಕರೆದರು. ಆಂಗ್ಲೋ-ಏಷ್ಯನ್ ಪ್ರಾಂತ್ಯಗಳಲ್ಲಿ ಇಸ್ಲಾಮಿಕ್ ಸಾಮ್ರಾಜ್ಯಗಳ ಉದಯ, ಮೊಘಲ್ ನ್ಯಾಯಾಲಯಗಳ ವೃತ್ತಾಂತಗಳು, ಶೀತಲ ಸಮರ ಮತ್ತು ಕೈಗಾರಿಕಾ ಕ್ರಾಂತಿಯನ್ನು 11 ಮತ್ತು 12 ನೇ ತರಗತಿಗಳ ಇತಿಹಾಸ ಮತ್ತು ರಾಜಕೀಯ ವಿಜ್ಞಾನ ಪಠ್ಯಕ್ರಮದಿಂದ ಸಿಬಿಎಸ್‍ಸಿ ತೆಗೆದುಹಾಕಿದೆ. ಆದ್ದರಿಂದ ರಾಹುಲ್ ಗಾಂಧಿ ಸಿಬಿಎಸ್‍ಸಿ ವಿರುದ್ಧ ಸಿಡಿದಿದ್ದರು. ಇದನ್ನೂ ಓದಿ: ದಿವ್ಯಾ ಹಾಗರಗಿ ಬಂಧನ ಯಾವಾಗ? – ಪ್ರಭಾವಿಗಳ ಶ್ರೀರಕ್ಷೆಯಲ್ಲಿದ್ದಾರಾ ದಿವ್ಯಾ
ಎಪ್ರಿಲ್ 9 ರಂದು ದೆಹಲಿಯಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ರಾಹುಲ್ ಗಾಂಧಿ ಅವರು ಸಂವಿಧಾನವನ್ನು ಉಳಿಸಲು ನಾವು ಆರ್‍ಎಸ್‍ಎಸ್ ಕೈಯಲ್ಲಿರುವ ಸಂಸ್ಥೆಗಳನ್ನು ರಕ್ಷಿಸಬೇಕು ಎಂದು ಹೇಳುವ ಮೂಲಕ ಆರ್‍ಎಸ್‍ಎಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಬೆಂಗಳೂರು: ಕೊರೊನಾ ನಾಲ್ಕನೇ ಅಲೆ ಈಗಾಗಲೇ ದೇಶದಲ್ಲಿ ಶುರುವಾಗಿದೆ. ಕೋವಿಡ್ ನಾಲ್ಕನೇ ಅಲೆಯ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಎಲ್ಲ ರಾಜ್ಯದ ಸಿಎಂಗಳ ಜೊತೆ ವರ್ಚುವಲ್ ಮೀಟಿಂಗ್ ಮಾಡಲು ಸಹ ನಿರ್ಧಾರ ಮಾಡಿದ್ದಾರೆ.
ದೆಹಲಿ, ಮುಂಬೈ ಸೇರಿದಂತೆ ಹಲವೆಡೆ ಈಗಾಗಲೇ ನಾಲ್ಕನೇ ಅಲೆಯ ಅಬ್ಬರ ಶುರುವಾದ ಕಾರಣದಿಂದ ರಾಜ್ಯದಲ್ಲೂ ಸಹ ಕಟ್ಟೆಚ್ಚರವಹಿಸಲು ಸರ್ಕಾರ ಮುಂದಾಗಿದೆ. ಇಂದಿನಿಂದ ರಾಜ್ಯದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಅಂತಾ ಆದೇಶವನ್ನು ಸರ್ಕಾರ ನೀಡಿದೆ.
ಕೆ.ಆರ್ ಮಾರ್ಕೆಟ್‍ನಲ್ಲಿ ಜನಸಾಗರವೇ ಸೇರುತ್ತೆ. ಬಹುತೇಕ ಜನರು ಕಳೆದ ಮೂರು ತಿಂಗಳಿಂದ ಮಾಸ್ಕ್ ಧರಿಸುವುದನ್ನು ಮರೆತಿದ್ದು ಮಾಸ್ಕ್ ಹಾಕದೇ ವ್ಯಾಪಾರ ವಹಿವಾಟುನಲ್ಲಿ ತೊಡಗಿರುವ ದೃಶ್ಯಗಳು ಸಾಮಾನ್ಯವಾಗಿ ಕಾಣಿಸುತ್ತಿದೆ.
ನವದೆಹಲಿ: ಎಲೆಕ್ಟ್ರಿಕ್ ವಾಹನಗಳಿಗೆ ಬೆಂಕಿ ಹೊತ್ತಿಕೊಳ್ಳುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸಚಿವ ನಿತಿನ ಗಡ್ಕರಿ ಅವರು, ಸುರಕ್ಷತಾ ಮಾನದಂಡಗಳನ್ನು ಅಳವಡಿಕೊಳ್ಳುವಲ್ಲಿ ಎಲೆಕ್ಟ್ರಿಕ್ ವಾಹನ ತಯಾರಕರು ನಿರ್ಲಕ್ಷ್ಯ ತೋರಿದರೆ ಅವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
Several mishaps involving Electric Two Wheelers have come to light in last two months. It is most unfortunate that some people have lost their lives and several have been injured in these incidents.
ಈ ಕುರಿತು ಸರಣಿ ಟ್ವೀಟ್ ಮಾಡಿದ ಅವರು, ಕಳೆದ ಎರಡು ತಿಂಗಳಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ ಸಂಬಂಧಿಸಿದ ಹಲವಾರು ಅವಘಡಗಳು ಬೆಳಕಿಗೆ ಬಂದಿವೆ. ಈ ಘಟನೆಗಳಲ್ಲಿ ಕೆಲವರು ಪ್ರಾಣ ಕಳೆದುಕೊಂಡಿದ್ದು, ಹಲವರು ಗಾಯಗೊಂಡಿರುವುದು ಅತ್ಯಂತ ದುರದೃಷ್ಟಕರ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ರಾಮನವಮಿಯಂದು ಖಾರ್ಗೋನ್‌ನಲ್ಲಿ ಹಿಂಸಾಚಾರ – ಐವರ ಬಂಧನ
We have constituted an Expert Committee to enquire into these incidents and make recommendations on remedial steps.
Based on the reports, we will issue necessary orders on the defaulting companies. We will soon issue quality-centric guidelines for Electric Vehicles.
ಈ ಘಟನೆಗಳ ಬಗ್ಗೆ ತನಿಖೆ ನಡೆಸಲು ಮತ್ತು ಪರಿಹಾರ ಕ್ರಮಗಳ ಕುರಿತು ಶಿಫಾರಸುಗಳನ್ನು ಮಾಡಲು ನಾವು ತಜ್ಞರ ಸಮಿತಿಯನ್ನು ರಚಿಸಿದ್ದೇವೆ. ವರದಿಗಳ ಆಧಾರದ ಮೇಲೆ, ನಾವು ಎಲೆಕ್ಟ್ರಿಕ್ ವಾಹನಗಳ ಕಂಪನಿಗಳ ಮೇಲೆ ಅಗತ್ಯ ಆದೇಶಗಳನ್ನು ನೀಡುತ್ತೇವೆ ಎಂದು ಹೇಳಿದರು.
ನಾವು ಶೀಘ್ರದಲ್ಲೇ ಎಲೆಕ್ಟ್ರಿಕ್ ವಾಹನಗಳಿಗೆ ಗುಣಮಟ್ಟ-ಕೇಂದ್ರಿತ ಮಾರ್ಗಸೂಚಿಗಳನ್ನು ನೀಡುತ್ತೇವೆ. ಯಾವುದೇ ಕಂಪನಿಯು ತನ್ನ ಪ್ರಕ್ರಿಯೆಗಳಲ್ಲಿ ನಿರ್ಲಕ್ಷ್ಯ ತೋರಿದರೆ, ಭಾರೀ ದಂಡವನ್ನು ವಿಧಿಸಲಾಗುವುದು ಮತ್ತು ಎಲ್ಲಾ ದೋಷಯುಕ್ತ ವಾಹನಗಳನ್ನು ಹಿಂಪಡೆಯಲು ಆದೇಶಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
If any company is found negligent in their processes, a heavy penalty will be imposed and a recall of all defective vehicles will also be ordered.
ಇದರ ಮಧ್ಯೆ ಎಲ್ಲಾ ದೋಷಯುಕ್ತ ವಾಹನಗಳನ್ನು ತಕ್ಷಣವೇ ಹಿಂಪಡೆಯಲು ಕಂಪನಿಗಳು ಮುಂಗಡ ಕ್ರಮವನ್ನು ತೆಗೆದುಕೊಳ್ಳಬಹುದು. ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ, ಪ್ರತಿಯೊಬ್ಬ ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಗುಜರಾತ್‌ನಲ್ಲಿ ಜೆಸಿಬಿ ಕಾರ್ಖಾನೆ ಓಪನ್ – ಬ್ರಿಟನ್ ಪ್ರಧಾನಿ ಚಾಲನ
Meanwhile companies may take advance action to Recall all defective batches of vehicles immediately. Under the leadership of PM Shri @narendramodi ji, our government is committed to ensure safety of each and every commuter.
ಕಳೆದ ತಿಂಗಳು ಪುಣೆಯಲ್ಲಿ ರೈಡ್-ಹೇಲಿಂಗ್ ಆಪರೇಟರ್ ಓಲಾ ಅವರ ಎಲೆಕ್ಟ್ರಿಕ್ ಮೊಬಿಲಿಟಿ ಆರ್ಮ್ ಬಿಡುಗಡೆ ಮಾಡಿದ ಇ-ಸ್ಕೂಟರ್‌ಗೆ ಬೆಂಕಿ ಹೊತ್ತಿಕೊಂಡ ನಂತರ ಸರ್ಕಾರ ತನಿಖೆಗೆ ಆದೇಶಿಸಿತ್ತು.
ರಸ್ತೆ ಸಾರಿಗೆ ಸಚಿವಾಲಯದ ಪ್ರಕಾರ, ಘಟನೆಗೆ ಕಾರಣವಾದ ಸಂದರ್ಭಗಳನ್ನು ತನಿಖೆ ಮಾಡಲು ಮತ್ತು ಪರಿಹಾರ ಕ್ರಮಗಳನ್ನು ಸೂಚಿಸಲು ಬೆಂಕಿ ಸ್ಫೋಟಕ ಮತ್ತು ಪರಿಸರ ಸುರಕ್ಷತೆ ಕೇಂದ್ರವನ್ನು ಕೇಳಲಾಗಿದೆ.
ನವದೆಹಲಿ: ಬನಾಸ್ ಡೈರಿಯಲ್ಲಿನ ಉಪಕ್ರಮಗಳು ರೈತರನ್ನು ಸಬಲಗೊಳಿಸುತ್ತದೆ ಮತ್ತು ಗ್ರಾಮೀಣ ಆರ್ಥಿಕತೆಯನ್ನು ಹೆಚ್ಚಿಸುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು.
ಇಂದು ಗುಜರಾತ್‍ನ ಬನಸ್ಕಾಂತದಲ್ಲಿರುವ ಬನಾಸ್ ಡೈರಿ ಸಂಕುಲ್‍ನಲ್ಲಿ ಅತ್ಯಾಧುನಿಕ ಡೈರಿ ಸಂಕೀರ್ಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇದು ಸ್ಥಳೀಯ ಸಮುದಾಯಗಳನ್ನು ಸಬಲೀಕರಣಗೊಳಿಸುವ ಕೇಂದ್ರವಾಗಿದೆ. ಬನಾಸ್ ಡೈರಿಯಲ್ಲಿನ ಅಭಿವೃದ್ಧಿ ಉಪಕ್ರಮಗಳು ರೈತರನ್ನು ಸಬಲೀಕರಣಗೊಳಿಸುತ್ತದೆ ಮತ್ತು ಗ್ರಾಮೀಣ ಆರ್ಥಿಕತೆಯನ್ನು ಹೆಚ್ಚಿಸುತ್ತದೆ. ಆತ್ಮನಿರ್ಭರ ಭಾರತ್ ಅಭಿಯಾನಕ್ಕೆ ಸಹಕಾರಿ ಚಳುವಳಿ ಹೇಗೆ ಶಕ್ತಿ ನೀಡುತ್ತದೆ ಎಂಬುದನ್ನು ನಾವು ಇಲ್ಲಿ ಅನುಭವಿಸಬಹುದು ಎಂದು ಡೈರಿಯ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದರು.
I am delighted to be visiting @banasdairy1969 yet again. I had last visited the Dairy in 2016. That time a series of products of the Dairy were launched. I had also visited the Dairy in 2013. Here are glimpses from both programmes. pic.twitter.com/J8xlTPHT6e
ಪ್ರಧಾನಮಂತ್ರಿಯವರು ಇಂದು ಬನಸ್ಕಾಂತದಲ್ಲಿರುವ ಬನಾಸ್ ಡೈರಿ ಸಂಕುಲದಲ್ಲಿ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದ್ದಾರೆ. ಗುಜರಾತಿನ ಅಭಿವೃದ್ಧಿಯ ಮಟ್ಟವು ಪ್ರತಿ ಗುಜರಾತಿಯನ್ನು ಹೆಮ್ಮೆಪಡುವಂತೆ ಮಾಡುತ್ತದೆ. ನಾನು ನಿನ್ನೆ ವಿದ್ಯಾ ಸಮೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ್ದೆ, ಅಲ್ಲಿ ತಂತ್ರಜ್ಞಾನದ ಬಳಕೆ ಪ್ರಭಾವಶಾಲಿಯಾಗಿದೆ. ಇತರ ರಾಜ್ಯಗಳ ಶಿಕ್ಷಣ ಇಲಾಖೆಗಳು ಈ ಕೇಂದ್ರಕ್ಕೆ ಭೇಟಿ ನೀಡುವಂತೆ ನಾನು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.
Gujarat | PM Narendra Modi today inaugurated and visited the new dairy complex and potato processing plant at Diyodar, Banaskantha district, built at a cost of over Rs 600 crores pic.twitter.com/7DzeFjiZn0
ಸಾಮಾಜಿಕ ಜಾಲತಾಣದಲ್ಲಿ ಅವರು ಈ ಹಿಂದೆ 2016ರಲ್ಲಿ ಡೈರಿಗೆ ಭೇಟಿ ನೀಡಿದ್ದ ಫೋಟೋವನ್ನು ಹಂಚಿಕೊಂಡಿದ್ದಾರೆ. ಬನಾಸ್ ಡೈರಿಗೆ ಮತ್ತೊಮ್ಮೆ ಭೇಟಿ ನೀಡುತ್ತಿರುವುದಕ್ಕೆ ನನಗೆ ಸಂತೋಷವಾಗಿದೆ. ನಾನು 2016ರಲ್ಲಿ ಕೊನೆಯದಾಗಿ ಡೈರಿಗೆ ಭೇಟಿ ನೀಡಿದ್ದೇನೆ. ಆ ಸಮಯದಲ್ಲಿ ಡೈರಿಯ ಉತ್ಪನ್ನಗಳನ್ನು ಪ್ರಾರಂಭಿಸಲಾಗಿತ್ತು ಎಂದು ಟ್ವೀಟ್ ಮಾಡಿದ್ದಾರೆ.
Sharing some glimpses from my visit to the Vidya Samiksha Kendra in Gandhinagar. It is commendable how technology is being leveraged to ensure a more vibrant education sector in Gujarat. This will tremendously benefit the youth of Gujarat. pic.twitter.com/ezRueOdfjq
ಬನಸ್ಕಾಂತದ ಜನರ ಕಠಿಣ ಪರಿಶ್ರಮ ಮತ್ತು ಸಹಿಷ್ಣುತೆಯ ಮನೋಭಾವಕ್ಕಾಗಿ ನಾನು ಶ್ಲಾಘಿಸಲು ಬಯಸುತ್ತೇನೆ. ಈ ಜಿಲ್ಲೆಯ ಕೃಷಿಯಲ್ಲಿ ರೈತರು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡಿದ್ದಾರೆ. ನೀರಿನ ಸಂರಕ್ಷಣೆಯತ್ತ ಗಮನಹರಿಸಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ಒಡಿಯಾದ ಖ್ಯಾತ ಸಂಗೀತಗಾರ ಮತ್ತು ಗಾಯಕ ಪ್ರಫುಲ್ಲ ಕರ್ ಇಂದು ನಿಧನರಾಗಿದ್ದಾರೆ. ಪ್ರಫುಲ್ಲ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಅವರ ಕುಟುಂಬಕ್ಕೆ ನೋವು ಭರಿಸುವಂತಹ ಶಕ್ತಿಯು ದೇವರು ಕೊಡಲೆಂದು ಪ್ರಾರ್ಥಿಸಿದ್ದಾರೆ.
ಒಡಿಯಾ ಸಂಸ್ಕೃತಿ ಮತ್ತು ಸಂಗೀತಕ್ಕೆ ಅವರು ಸಲ್ಲಿಸಿದ ಕೊಡುಗೆಗಾಗಿ ಕರ್ ಅವರನ್ನು ಸ್ಮರಿಸಲಾಗುವುದು ಎಂದು ಮೋದಿ ಹೇಳಿದ್ದಾರೆ. ‘ಶ್ರೀ ಪ್ರಫುಲ್ಲ ಕರ್ ಅವರ ನಿಧನದಿಂದ ನನಗೆ ಅಪಾರ ದುಃಖವಾಗಿದೆ. ಒಡಿಯಾ ಸಂಸ್ಕೃತಿ ಮತ್ತು ಸಂಗೀತಕ್ಕೆ ಅವರ ಕೊಡುಗೆ ಅಪಾರ. ಅವರು ಬಹುಮುಖಿ ವ್ಯಕ್ತಿತ್ವದಿಂದ ಆಶೀರ್ವದಿಸಲ್ಪಟ್ಟಿದ್ದಾರೆ ಮತ್ತು ಅವರ ಸೃಜನಶೀಲತೆಯು ಅವರ ಕೃತಿಗಳಲ್ಲಿ ಪ್ರತಿಫಲಿಸುತ್ತದೆ’ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ, ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳನ್ನು ಸೂಚಿಸುತ್ತೇನೆ ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.
Anguished by the passing away of Shri Prafulla Kar Ji. He will be remembered for his pioneering contribution to Odia culture and music. He was blessed with a multifaceted personality and his creativity was reflected in his works. Condolences to his family and admirers. Om Shanti.
ಖ್ಯಾತ ಒಡಿಯಾ ಸಂಗೀತಗಾರ ಮತ್ತು ಗಾಯಕ ಕರ್ ಅವರು ರಾಜ್ಯ ರಾಜಧಾನಿ ಭುವನೇಶ್ವರದಲ್ಲಿರುವ ತಮ್ಮ ನಿವಾಸದಲ್ಲಿ ಭಾನುವಾರ ತಡರಾತ್ರಿ ನಿಧನರಾಗಿದ್ದಾರೆ. 83 ವರ್ಷ ವಯಸ್ಸಿನ ಅವರು ಕೆಲವು ತಿಂಗಳಿನಿಂದ ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದರು. ಅವರ ಅಂತಿಮ ಸಂಸ್ಕಾರವನ್ನು ಪೂರ್ಣ ಗೌರವದಿಂದ ಪುರಿಯಲ್ಲಿ ಇಂದು ನೆರವೇರಿಸಲಾಗಿದೆ.