Tag: prime minister modi

  • ಕಿಸಾನ್ ಸಮ್ಮಾನ್ ಯೋಜನೆಯನ್ನ ಪುಟಗೋಸಿಗೆ ಹೋಲಿಸಿದ ಸಂಸದ ಮೊಯ್ಲಿ

    ಕಿಸಾನ್ ಸಮ್ಮಾನ್ ಯೋಜನೆಯನ್ನ ಪುಟಗೋಸಿಗೆ ಹೋಲಿಸಿದ ಸಂಸದ ಮೊಯ್ಲಿ

    ಚಿಕ್ಕಬಳ್ಳಾಪುರ: ಪ್ರಧಾನಮಂತ್ರಿ ನರೇಂದ್ರ ಮೋದಿ ರೈತರಿಗೆ ಪುಟಗೋಸಿ 6 ಸಾವಿರ ರೂ. ಕೊಡುತ್ತಾರಂತೆ ಎಂದು ಹೇಳುವ ಮೂಲಕ ಸಂಸದ ವೀರಪ್ಪ ಮೊಯ್ಲಿ ಕೇಂದ್ರ ಸರ್ಕಾರದ ಕಿಸಾನ್ ಸಮ್ಮಾನ್ ಯೋಜನೆಯ ಬಗ್ಗೆ ಟೀಕೆ ಮಾಡಿದ್ದಾರೆ.

    ನಗರದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ, ಯುಪಿಎ ಆಡಳಿತವಾಧಿಯಲ್ಲಿದ್ದ ನರೇಗಾ ಯೋಜನೆಯನ್ನ ಜಾರಿ ಮಾಡಿದ್ದೆವು. ಪ್ರತಿಯೊಬ್ಬ ಕೂಲಿಯಾಳುವಿಗೆ ಒಂದು ದಿನಕ್ಕೆ 212 ರೂ. ನೀಡುತ್ತಿದ್ದೇವು. ಒಂದು ಕುಟುಂಬದಲ್ಲಿ 5 ಮಂದಿ ಇದ್ದರೆ 1,500 ರೂ. ಹಣ ಸಿಗುತಿತ್ತು ಎಂದರು.

    ದೇಶದ ಪ್ರಧಾನಿ ಮೋದಿ ಮೊನ್ನೆ ಜಾರಿ ಮಾಡಿದ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ಪುಟಗೋಸಿ 6 ಸಾವಿರ ರೂ. ಹಣ ಕೊಡುತ್ತಾರಂತೆ. ಅದು ಆರು ಕಂತಿನಲ್ಲಿ ಹಾಕುತ್ತಾರಂತೆ ಎಂದರು. ಅಲ್ಲದೇ ಮೋದಿ ದುರ್ಬಲ ಪ್ರಧಾನಿಯಾಗಿದ್ದು, ದೇಶದ ಬಗ್ಗೆ ಪಾಕಿಸ್ತಾನದವರಿಗೆ ಭಯ ಹೋಗಿ ಬಿಟ್ಟಿದೆ. ಸರ್ಜಿಕಲ್ ಸ್ಟ್ರೈಕ್ ನಲ್ಲಿ ಎಷ್ಟು ಉಗ್ರಗಾಮಿಗಳು ಸತ್ತಿದ್ದಾರೆಂದು ಲೆಕ್ಕ ಕೊಡಲಿಕ್ಕೆ ಆಗುತ್ತಿಲ್ಲ. ಆದರೆ ಸುಮ್ಮನೆ ಬಡಾಯಿ ಕೊಚ್ಚಿಕೊಳುತ್ತಾರೆ ಎಂದರು.

    ಕೃಷ್ಣ ನದಿ ನೀರು: ಇದೇ ವೇಳೆ ಆಂಧ್ರದ ಅನಂತಪುರಕ್ಕೆ ಬಂದಿರುವ ಕೃಷ್ಣ ನದಿ ನೀರನ್ನು ಬಯಲುಸೀಮೆಯ ಜಿಲ್ಲೆಗಳಿಗೆ ಹರಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

  • ಐಟಿ ದಾಳಿ – ಮೋದಿ ವಿರುದ್ಧ ಸಿಎಂ ಕೆಂಡಾಮಂಡಲ

    ಐಟಿ ದಾಳಿ – ಮೋದಿ ವಿರುದ್ಧ ಸಿಎಂ ಕೆಂಡಾಮಂಡಲ

    ಬೆಂಗಳೂರು: ಆದಾಯ ತೆರಿಗೆ ಇಲಾಖೆ ಮೂಲಕ ಪ್ರಧಾನಿ ಮೋದಿಯಿಂದ ಸರ್ಜಿಕಲ್ ದಾಳಿ ನಡೆಯುತ್ತಿದೆ ಎಂದು ಐಟಿ ದಾಳಿ ಬಗ್ಗೆ ಸಿಎಂ ಕುಮಾರಸ್ವಾಮಿ ಅವರು ಕೆಂಡಾಮಂಡಲವಾಗಿದ್ದು, ಟ್ವಿಟರ್ ಮೂಲಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    “ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಐಟಿ ಅಧಿಕಾರಿಗಳ ಮೂಲಕ ಸರ್ಜಿಕಲ್ ಸ್ಟ್ರೈಕ್ ಮಾಡುತ್ತಿದ್ದಾರೆ. ಐಟಿ ಅಧಿಕಾರಿ ಬಾಲಕೃಷ್ಣರಿಗೆ ಸಂವಿಧಾನಾತ್ಮಕ ಹುದ್ದೆಯ ಆಮಿಷವನ್ನು ಒಡ್ಡಿದ್ದು, ಅವರ ಸಹಾಯದಿಂದ ಈ ರೀತಿ ದಾಳಿ ಮಾಡಿಸುತ್ತಿದ್ದಾರೆ. ಈ ಮೂಲಕ ಪ್ರಧಾನಿ ಮೋದಿ ಅವರು ಕೇಂದ್ರ ಸರ್ಕಾರ ಸಂಸ್ಥೆಗಳನ್ನ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ದಾಳಿ ಮೂಲಕ ವಿಪಕ್ಷಗಳಿಗೆ ಚುನಾವಣೆ ಸಮಯದಲ್ಲಿ ತೊಂದರೆ ಕೊಡುತ್ತಿದ್ದಾರೆ” ಎಂದು ಮೋದಿ ಮತ್ತು ಐಟಿ ಅಧಿಕಾರಿಗಳ ವಿರುದ್ಧವೇ ಸಿಎಂ ನೇರ ವಾಗ್ದಾಳಿ ಮಾಡಿದ್ದಾರೆ.

    ಬುಧವಾರ ಸಿಎಂ ಕುಮಾರಸ್ವಾಮಿ, “ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಚುನಾವಣಾ ಸಂದರ್ಭದಲ್ಲಿ ಕರ್ನಾಟಕದ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರಿಗೆ ಬೆದರಿಕೆ ಹಾಕಲು ಐಟಿ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ” ಎಂದು ಟ್ವೀಟ್ ಮಾಡಿದ್ದರು.

    ಇಂದು ಬೆಳಗ್ಗೆ ಮೈಸೂರು, ಮಂಡ್ಯ ಮತ್ತು ಹಾಸನ ಸೇರಿದಂತೆ ಸಚಿವ ಪುಟ್ಟರಾಜು ಮತ್ತು ರೇವಣ್ಣ ಅವರ ಆಪ್ತರ ಮೇಲೆ ಐಟಿ ದಾಳಿ ಮಾಡಿದ್ದಾರೆ. ಬಿಜೆಪಿ ಅವರೇ ಉದ್ದೇಶ ಪೂರ್ವಕವಾಗಿ ಮಾಡಿಸುತ್ತಿದ್ದಾರೆ ಎಂದು ಮೈತ್ರಿ ನಾಯಕರು ಆರೋಪ ಮಾಡುತ್ತಿದ್ದಾರೆ.

  • ಮೋದಿ ಅಭಿಮಾನಿಗಳಿಗೆ ನಿಖಿಲ್ ಫ್ಯಾನ್ಸ್ ಸವಾಲು

    ಮೋದಿ ಅಭಿಮಾನಿಗಳಿಗೆ ನಿಖಿಲ್ ಫ್ಯಾನ್ಸ್ ಸವಾಲು

    ಬೆಂಗಳೂರು: ಸೋಲಿಲ್ಲದ ಸರದಾರ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಪ್ರಧಾನಿ ಮೋದಿ ಅವರ ಅಭಿಮಾನಿಗಳಿಗೆ ಸವಾಲು ಹಾಕಿದ್ದಾರೆ.

    ‘ಬಿಜೆಪಿಯ ನಕಲಿ, ಮೋದಿಯ ಫೇಕ್ ಅಕೌಂಟ್ ಭಕ್ತರೇ’ ಬೆಂಗಳೂರು ದಕ್ಷಿಣದಲ್ಲಿ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಕ್ಕಿಲ್ಲ. ಮಂಡ್ಯದಲ್ಲಿ ಕಾಂಗ್ರೆಸ್ಸಿನಿಂದ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ಕೊಟ್ಟಿಲ್ಲ ಎಂದು ಲೇವಡಿ ಮಾಡಿದ್ರಿ ಈಗ ತೇಜಸ್ವಿನಿಯವರಿಗೆ ಟಿಕೆಟ್ ತಪ್ಪಿದೆ. ಈ ಬಗ್ಗೆ ಯಾರೊಬ್ಬರು ಚಕಾರವೆತ್ತುತ್ತಿಲ್ಲ. ಈಗ ಸ್ವಾಭಿಮಾನಿ ಮೋದಿ ಭಕ್ತರು ಈಗ ಅಲ್ಲಿ ಹೋಗಿ ತೇಜಸ್ವಿನಿ ಅನಂತ್ ಕುಮಾರ್ ಅವರನ್ನು ಸ್ವಾಭಿಮಾನಿಯಾಗಿ ನಿಲ್ಲಿಸಿ ಗೆಲ್ಲಿಸಿ ಎಂದು ಮೋದಿ ಅಭಿಮಾನಿಗಳಿಗೆ ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸವಾಲು ಹಾಕುತ್ತಿದ್ದಾರೆ.

    ಮಂಡ್ಯದಲ್ಲಿ ಸುಮಲತಾ ಅವರಿಗೆ ಟಿಕೆಟ್ ಸಿಗದ್ದಕ್ಕೆ ಬಿಜೆಪಿ ಅಭಿಮಾನಿಗಳು ದೇವೇಗೌಡರ ಕುಟುಂಬ ಮತ್ತು ಕಾಂಗ್ರೆಸ್ ಅವರನನ್ನು ಟಾರ್ಗೆಟ್ ಮಾಡಿ ಮಾತನಾಡುತ್ತಿದ್ದರು. ಅಷ್ಟೇ ಅಲ್ಲದೇ ಅಂಬರೀಶ್ ಕಲಾ ಸೇವೆಯನ್ನು ಮೆಚ್ಚಿ ಸುಮಲತಾ ಅವರನ್ನು ಬೆಂಬಲಿಸುವುದಾಗಿ ಬಿಜೆಪಿ ಹೇಳಿಕೆ ನೀಡಿತ್ತು. ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿಯನ್ನಾಗಿ ರಾಜ್ಯ ಬಿಜೆಪಿ ನಾಯಕರು ತೇಜಸ್ವಿನಿ ಅವರನ್ನು ಬೆಂಬಲಿಸದ ಪರಿಣಾಮ ಕೊನೆ ಕ್ಷಣದವರೆಗೂ ಅವರಿಗೆ ಟಿಕೆಟ್ ಸಿಗಲಿದೆ ಎನ್ನುವ ನಿರೀಕ್ಷೆ ಇತ್ತು. ಆದರೆ ಕೊನೆಯಲ್ಲಿ ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ನೀಡಿದ್ದಕ್ಕೆ, ನಿಖಿಲ್ ಕುಮಾರಸ್ವಾಮಿ ಅವರ ಅಭಿಮಾನಿಗಳು ನೀವು ಸ್ವಾಭಿಮಾನಿಗಳಾಗಿದ್ದರೆ ತೇಜಸ್ವಿನಿ ಅವರನ್ನು ನಿಲ್ಲಿಸಿ ಗೆಲ್ಲಿಸಿ ನೋಡೋಣ ಎಂದು ಮೋದಿ ಪ್ರಧಾನಿ ಅಭಿಮಾನಿಗಳಿಗೆ ಸವಾಲ್ ಎಸೆದಿದ್ದಾರೆ.

  • `ನೀವು ಬಂದ್ರೆ 28ಕ್ಕೆ 28′ ಕ್ಯಾಂಪೇನ್ ಬಲು ಜೋರು – ಬೆಂಗ್ಳೂರಿಗೆ ಮೋದಿ!

    `ನೀವು ಬಂದ್ರೆ 28ಕ್ಕೆ 28′ ಕ್ಯಾಂಪೇನ್ ಬಲು ಜೋರು – ಬೆಂಗ್ಳೂರಿಗೆ ಮೋದಿ!

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಿಂದ ಸ್ಪರ್ಧೆ ಮಾಡುವಂತೆ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭ ಮಾಡಲಾಗಿದ್ದು, ‘ನೀವು ಬಂದ್ರೆ 28ಕ್ಕೆ 28’ ಎಂಬ ಹ್ಯಾಶ್ ಟ್ಯಾಗ್ ಬಳಸಿ ರಾಷ್ಟ್ರಮಟ್ಟದಲ್ಲಿ ಅಭಿಯಾನ ಆರಂಭಿಸಲಾಗಿದೆ.

    ಬೆಂಗಳೂರಿನ ದಕ್ಷಿಣ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ಈ ಅಭಿಯಾನ ಆರಂಭ ಮಾಡಲಾಗಿದೆ. ಆದರೆ ಬಿಜೆಪಿ ರಾಜ್ಯ ನಾಯಕರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ತೇಜಸ್ವಿನಿ ಅನಂತ್‍ಕುಮಾರ್ ಅವರ ಹೆಸರು ಅಂತಿಮಗೊಳಿಸಿ ಕಳುಹಿಸಿದ್ದಾರೆ. ಹೈಕಮಾಂಡ್ ಹಂತದಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ಘೋಷಣೆ ಆಗಬೇಕಿದೆ.

    ಪ್ರಮುಖವಾಗಿ ಚಕ್ರವರ್ತಿ ಸೂಲಿಬೆಲೆ ಅವರ ನೇತೃತ್ವದಲ್ಲಿ ಅಭಿಯಾನ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಇಂತಹ ಅಭಿಯಾನ ಏಕೆ ಎಂಬ ಅನುಮಾನ ಮೂಡಲು ಕಾರಣವಾಗಿದೆ. ಅನಗತ್ಯವಾಗಿ ಕ್ಷೇತ್ರದಲ್ಲಿ ಗೊಂದಲ ಮೂಡಿಸಲು ಇಂತಹ ಅಭಿಯಾನ ಆರಂಭ ಮಾಡಲಾಗಿದೆಯೇ ಅಥವಾ ಹೈಕಮಾಂಡ್ ಚುನಾವಣೆಗೆ ಹೊಸ ನಾಯಕರ ಹೆಸರು ಚಾಲ್ತಿ ಇದೆಯಾ ಎಂಬ ಚರ್ಚೆಗಳು ಕೇಳಿ ಬಂದಿದೆ.

    ಇತ್ತ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ತೇಜಸ್ವಿನಿ ಅನಂತ್‍ಕುಮಾರ್ ಅವರ ಹೆಸರನ್ನು ಶಿಫಾರಸ್ಸು ಮಾಡಿದ್ದು, ಇಂದು ಹೈಕಮಾಂಡ್ ಅಧಿಕೃತ ಘೋಷಣೆ ಮಾಡಲಾಗುತ್ತದೆ. ಯಾವುದೇ ರೀತಿಯ ಗೊಂದಲಗಳು ಪಕ್ಷದಲ್ಲಿ ಇಲ್ಲ ಎಂದಿದ್ದಾರೆ. ಅಲ್ಲದೇ ಕೋರ್ ಕಮಿಟಿ ಸಭೆ ಕೂಡ ತೇಜಸ್ವಿನಿ ಅನಂತ್‍ಕುಮಾರ್ ಅವರನ್ನೇ ಶಿಫಾರಸ್ಸು ಮಾಡಿರುವುದಿರಿಂದ ಹೈಕಮಾಂಡ್ ನಿರ್ಧಾರ ಮೇಲೆ ಹೆಚ್ಚಿನ ಕುತೂಹಲ ಮೂಡಿದೆ.

  • ಜನ್ಮದಿನದ ಶುಭಾಶಯ ಕೋರಿ ವಿಶೇಷ ಫೋಟೋ ಹಂಚಿಕೊಂಡ ಸ್ಮೃತಿ ಇರಾನಿ ಪತಿ

    ಜನ್ಮದಿನದ ಶುಭಾಶಯ ಕೋರಿ ವಿಶೇಷ ಫೋಟೋ ಹಂಚಿಕೊಂಡ ಸ್ಮೃತಿ ಇರಾನಿ ಪತಿ

    – ಅಮೇಥಿಯಲ್ಲಿ ಗೆದ್ದು ಬನ್ನಿ ಎಂದ್ರು ಮೋದಿ

    ನವದೆಹಲಿ: 43ನೇ ವಸಂತಕ್ಕೆ ಕಾಲಿಟ್ಟ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಪತಿ ಝುಬಿನ್ ಇರಾನಿ ಜನ್ಮದಿನದ ಶುಭಾಶಯ ಕೋರಿ ಪತ್ನಿಯೊಂದಿಗಿನ ವಿಶೇಷ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

    ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಫೋಟೋ ಪೋಸ್ಟ್ ಮಾಡಿರುವ ಇರಾನಿ ಅವರು, ನಾನು ನಿನ್ನನ್ನು ಮದುವೆಯಾದ ದಿನ ಭಾರೀ ಸಾಲವನ್ನ ಮಾಡಿದೆ. ಈ ವೇಳೆ ನನಗೆ ಅಪರಿಮಿತ ಪ್ರೀತಿ, ಎಂದಿಗೂ ಅಂತ್ಯವಾಗದ ಬದ್ಧತೆ ಲಭಿಸಿತ್ತು. ನಾನು ಕೊಟ್ಟ ಮಾತಿನಂತೆ ನನ್ನ ಕೊನೆಯ ಉಸಿರಿರುವ ತನಕ ಈ ಸಾಲವನ್ನ ಮರುಪಾವತಿಸುತ್ತೇನೆ ಎಂದು ಪ್ರೀತಿಯ ಪತ್ನಿಗೆ ಸಂದೇಶ ರವಾನಿಸಿದ್ದಾರೆ.

    https://www.instagram.com/p/BvVcgSunOdb/

    2019 ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರ ವಿರುದ್ಧ ಸ್ಪರ್ಧೆಗಿಳಿದಿರುವ ಸ್ಮೃತಿ ಇರಾನಿ ಅವರಿಗೆ ಪ್ರಧಾನಿ ಮೋದಿ ಸೇರಿದಂತೆ, ಬಿಜೆಪಿಯ ಹಲವು ನಾಯಕರು ಶುಭಾಶಯ ತಿಳಿಸಿದ್ದಾರೆ.

    ಗೆದ್ದು ಬನ್ನಿ: ಸ್ಮೃತಿ ಇರಾನಿ ಅವರಿಗೆ ಜನ್ಮದಿನದ ಶುಭಾಶಯಗಳು. ಸರ್ಕಾರದಲ್ಲಿ ಒಳ್ಳೆಯ ಯೋಜನೆಗಳನ್ನು ಜಾರಿಗೊಳಿಸಲು ಸಾಕಷ್ಟು ಕೆಲಸ ಮಾಡಿದ್ದೀರಿ. ದೇವರು ನಿಮಗೆ ದೀರ್ಘಾಯಸ್ಸು ಹಾಗು ಉತ್ತಮ ಆರೋಗ್ಯ ನೀಡಲಿ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಬನ್ನಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

    2014ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ವಿರುದ್ಧ ಸ್ಮೃತಿ ಇರಾನಿ ಸ್ಪರ್ಧೆ ಮಾಡಿದ್ದರು. 2014ರಲ್ಲಿ ಅಮೇಥಿ ಕ್ಷೇತ್ರ ಇಡೀ ದೇಶದ ಗಮನವನ್ನ ಸೆಳೆದಿತ್ತು. 1998ರಲ್ಲಿ ಮಾತ್ರ ಬಿಜೆಪಿ ಅಭ್ಯರ್ಥಿ ಸಂಜಯ್ ಸಿಂಗ್ ಗೆಲುವು ಸಾಧಿಸಿದ್ದರು. ತದನಂತರ ಎದುರಾದ ಎಲ್ಲ ಚುನಾವಣೆಗಳಲ್ಲಿಯೂ ಕಾಂಗ್ರೆಸ್ ಜಯಭೇರಿ ಸಾಧಿಸಿದೆ. ಸ್ಮೃತಿ ಇರಾನಿ ಅವರು 2014ರ ಚುನಾವಣೆಯಲ್ಲಿ ರಾಹುಲ್ ಗಾಂಧಿಯವರಿಗೆ ತೀವ್ರ ಪೈಪೋಟಿಯನ್ನು ನೀಡಿದ್ದರು. ರಾಹುಲ್ ಗಾಂಧಿ 4,08,651 ಮತಗಳನ್ನು ಪಡೆದ್ರೆ ಸ್ಮೃತಿ ಇರಾನಿ 3,00,748 ಮತ ಪಡೆಯುವ ಮೂಲಕ ಸೋಲು ಕಂಡಿದ್ದರು.

    https://www.instagram.com/p/BpEI1HonGsg/

    https://www.instagram.com/p/BpyFMJOnyYD/

    https://www.instagram.com/p/BTrQID2h6jq/

  • ಇಂದು ಗೋವಾ ಸಿಎಂ ಪರಿಕ್ಕರ್ ಅಂತ್ಯಕ್ರಿಯೆ – ಪ್ರಧಾನಿ ಮೋದಿ ಭಾಗಿ, ಬಿಜೆಪಿ ಟಿಕೆಟ್ ಹಂಚಿಕೆ ಸಭೆ ರದ್ದು

    ಇಂದು ಗೋವಾ ಸಿಎಂ ಪರಿಕ್ಕರ್ ಅಂತ್ಯಕ್ರಿಯೆ – ಪ್ರಧಾನಿ ಮೋದಿ ಭಾಗಿ, ಬಿಜೆಪಿ ಟಿಕೆಟ್ ಹಂಚಿಕೆ ಸಭೆ ರದ್ದು

    ಪಣಜಿ: ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಭಾನುವಾರ ಪಣಜಿಯಲ್ಲಿರುವ ಮಗನ ನಿವಾಸದಲ್ಲಿ ವಿಧಿವಶರಾಗಿದ್ದು, ಅವರ ಅಂತ್ಯಕ್ರಿಯೆ ಇಂದು ನಡೆಯಲಿದೆ.

    ಸಂಜೆ 5 ಗಂಟೆಗೆ ಬೀಚ್‍ಬಳಿಯ ಮಿರಾಮರ್‍ನಲ್ಲಿ ಅಂತ್ಯಸಂಸ್ಕಾರ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪ್ರಮುಖರು ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆವರೆಗೆ ಕಲಾ ಅಕಾಡೆಮಿಯಲ್ಲಿ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ.

    ಇತ್ತ ಪರಿಕ್ಕರ್ ನಿಧನ ಬೆನ್ನಲ್ಲೇ ರಾಜಕೀಯ ಬಿಕ್ಕಟ್ಟು ಸೃಷ್ಟಿ ಆಗಿದ್ದು, ಹೊಸ ಸಿಎಂ ಯಾರಾಗಬೇಕೆಂಬ ಬಗ್ಗೆ ತಡರಾತ್ರಿವರೆಗೂ ನಡೆದ ಸಭೆ ವಿಫಲವಾಗಿದೆ.

    ತೀವ್ರ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ 63 ವರ್ಷದ ಮನೋಹರ್ ಪರಿಕ್ಕರ್ ಕಳೆದ ಒಂದು ವರ್ಷದಿಂದ ಪ್ಯಾಂಕ್ರಿಯಾಟಿಕ್ ಕಾಯಿಲೆ (ಮೆದೋಜೀರಕ ಗೃಂಥಿ ಸಮಸ್ಯೆ)ಯಿಂದ ಬಳಲುತ್ತಿದ್ದರು. ಅಲ್ಲದೇ ಕೆಲ ತಿಂಗಳ ಹಿಂದೆಯಷ್ಟೇ ಅಮೆರಿಕದಲ್ಲಿ 3 ತಿಂಗಳ ಕಾಲ ಚಿಕಿತ್ಸೆ ಪಡೆದಿದ್ದ ಅವರು ಸೆ.6 ರಂದು ಚೇತರಿಸಿಕೊಂಡು ಮತ್ತೆ ತಾಯ್ನಾಡಿಗೆ ಮರಳಿದ್ದರು. ಗೋವಾ, ಮುಂಬೈ, ನವದೆಹಲಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ಸಂಪೂರ್ಣವಾಗಿ ಗುಣಮುಖರಾಗದ ಕಾರಣ ಅವರ ಮೂಗಿಗೆ ಪೈಪ್ ಅಳವಡಿಸಲಾಗಿತ್ತು. ಹಾಗಿದ್ದರೂ ಕೂಡ ಬಜೆಟ್ ಅಧಿವೇಶದಲ್ಲಿ ಭಾಗವಹಿಸಿ ಬಜೆಟ್ ಮಂಡನೆ ಮಾಡಿದ್ದರು.

    ಗೋವಾದ ತಮ್ಮ ಖಾಸಗಿ ನಿವಾಸದಲ್ಲೇ ಹೆಚ್ಚಿನ ಸಮಯ ವಿಶ್ರಾಂತಿ ಪಡೆದು ಚೇತರಿಸಿಕೊಳ್ಳುತ್ತಿದ್ದ ಅವರು ಅಲ್ಲಿಂದಲೇ ಸರ್ಕಾರದ ಆಡಳಿತವನ್ನು ನಿರ್ವಹಿಸುತ್ತಿದ್ದರು. ಆದರೆ ಫೆಬ್ರವರಿ ಅಂತ್ಯದಲ್ಲಿ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರು ಕಾಣಿಸಿಕೊಂಡ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದರು. ಅಂದಿನಿಂದಲೂ ಅವರ ಆರೋಗ್ಯದ ಮೇಲೆ ನಿಗಾವಹಿಸಿದ್ದ ವೈದ್ಯರ ತಂಡ ಸೂಕ್ತ ಚಿಕಿತ್ಸೆ ನೀಡುತ್ತಿದ್ದರು.

  • ರಾಹುಲ್ ಗಾಂಧಿಗೆ ಸೋಲಿನ ಭಯ? – ಅಮೇಥಿ ಜೊತೆ ಕರ್ನಾಟಕದಿಂದ ಸ್ಪರ್ಧೆಗೆ ಒಲವು

    ರಾಹುಲ್ ಗಾಂಧಿಗೆ ಸೋಲಿನ ಭಯ? – ಅಮೇಥಿ ಜೊತೆ ಕರ್ನಾಟಕದಿಂದ ಸ್ಪರ್ಧೆಗೆ ಒಲವು

    ಬೆಂಗಳೂರು: ಲೋಕಸಭಾ ಚುನಾವಣೆ ಸಮರಕ್ಕೆ ದಿನ ಗಣನೆ ಆರಂಭವಾಗುತ್ತಿದಂತೆ ರಾಜಕೀಯ ಪಕ್ಷಗಳ ಘಟಾನುಘಟಿ ನಾಯಕ ಸೋಲು ಗೆಲುವಿನ ಲೆಕ್ಕಾಚಾರ ಆರಂಭವಾಗಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಸೋಲಿನ ಭಯ ಕಾಡುತ್ತಿದ್ಯಾ ಎನ್ನುವ ಪ್ರಶ್ನೆ ಎದ್ದಿದೆ.

    ಹೌದು, ರಾಹುಲ್ ಗಾಂಧಿ ಈ ಬಾರಿ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ ಎನ್ನುವ ಸುದ್ದಿ ರಾಜಕೀಯ ವಲಯದಿಂದ ಕೇಳಿ ಬರುತ್ತಿದೆ. ಈ ಸುದ್ದಿಗೆ ಪೂರಕ ಎಂಬಂತೆ ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಚಾಮರಾಜನಗರದಲ್ಲಿ ನಡೆದ ಸಮಾವೇಶದಲ್ಲಿ ರಾಹುಲ್ ಗಾಂಧಿ ರಾಜ್ಯದಿಂದ ಸ್ಪರ್ಧಿಸಬೇಕು ಎಂದು ಹೇಳಿಕೆ ನೀಡಿದ್ದರಿಂದ ಈ ಪ್ರಶ್ನೆ ಸೃಷ್ಟಿಯಾಗಿದೆ.

    ಉತ್ತರ ಪ್ರದೇಶದ ಅಮೇಥಿ ಕ್ಷೇತ್ರದಿಂದ 2004ರಿಂದ ರಾಹುಲ್ ಗಾಂಧಿ ಅವರು ಸತತ ಮೂರು ಬಾರಿ ಆಯ್ಕೆ ಆಗಿದ್ದಾರೆ. ಆದರೆ ಈ ಬಾರಿ ವಿರೋಧಿ ಅಲೆ ಜಾಸ್ತಿ ಆಗಿದ್ದು ಈ ಬಾರಿ ಇಲ್ಲಿ ಕಠಿಣ ಸ್ಪರ್ಧೆ ನಡೆಯಲಿದೆ ಎಂದು ಈ ಹಿಂದೆಯೇ ಇಲ್ಲಿ ಸಮೀಕ್ಷೆ ನಡೆಸಿದ್ದ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿತ್ತು. ಹೀಗಾಗಿ ಈ ಬಾರಿ ರಾಹುಲ್ ಗಾಂಧಿ ಎರಡು ಕ್ಷೇತ್ರಗಳಲ್ಲಿ ಕಣಕ್ಕೆ ಇಳಿಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಒಂದು ಅಮೇಥಿಯಾದರೆ ಇನ್ನೊಂದು ಯಾವ ಕ್ಷೇತ್ರ ಎನ್ನುವ ಪ್ರಶ್ನೆಗೆ ಪೂರಕ ಎಂಬಂತೆ ಕೈ ನಾಯಕರು ಕರ್ನಾಟಕದಿಂದಲೇ ಸ್ಪರ್ಧಿಸಿ ಎಂದು ಆಹ್ವಾನ ಕೊಟ್ಟಿದ್ದು ಈಗ ಹಲವು ಅನುಮಾನಗಳನ್ನು ಹುಟ್ಟಿಹಾಕಿದೆ. ಈ ಮೂಲಕ ರಾಹುಲ್ ಗಾಂಧಿ ಅವರಿಗೆ ಅಮೇಥಿ ಸೇಫ್ ಅಲ್ವಾ ಎಂಬ ಅನುಮಾನ ಮೂಡುವಂತೆ ಮಾಡಿದೆ.

    ಈಗಾಗಲೇ ರಾಹುಲ್ ಗಾಂಧಿ ಅವರು ಅಮೇಥಿಯಿಂದ ಸ್ಪರ್ಧೆ ಮಾಡುವುದು ಖಚಿತವಾಗಿದ್ದು, ಕಳೆದ ಬಾರಿ ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಮೃತಿ ಇರಾನಿ ಅವರು ಭಾರೀ ಪೈಪೋಟಿ ನೀಡಿದ್ದರು. ಆದರೂ ರಾಹುಲ್ ಗೆದ್ದು ಬೀಗಿದ್ದರು. ಈ ಬಾರಿಯೂ ಬಿಜೆಪಿ ಅಂತಹದ್ದೇ ಪೈಪೋಟಿ ನೀಡುವ ವಿಶ್ವಾಸದಲ್ಲಿದೆ.

    ಅಂತರ ಎಷ್ಟಿತ್ತು?
    2014ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ 4,08,651 ಮತಗಳನ್ನು ಪಡೆದಿದ್ದರೆ, ಸ್ಮೃತಿ ಇರಾನಿ ಅವರು 3,00,748 ಮತಗಳನ್ನು ಪಡೆದಿದ್ದರು. ಆ ಮೂಲಕ ರಾಹುಲ್ 1,07,903 ಮತಗಳ ಅಂತರದಿಂದ ಜಯ ಪಡೆದಿದ್ದರು. 2009 ರ ಚುನಾವಣೆಯಲ್ಲಿ ರಾಹುಲ್ ಗಾಂಧಿ 4,64,195 ಮತಗಳನ್ನು ಪಡೆದಿದ್ದರೆ ಬಿಎಸ್‍ಪಿಯ ಆಶಿಶ್ ಶುಕ್ಲಾ 93,997 ಮತಗಳನ್ನು ಪಡೆದಿದ್ದರು. ಈ ಮೂಲಕ ರಾಹುಲ್ 3,70,198 ಮತಗಳ ಅಂತರದಿಂದ ಪ್ರಚಂಡವಾಗಿ ಜಯಸಿದ್ದರು. ಈ ಚುನಾವಣೆಯಲ್ಲಿ ಬಿಜೆಪಿಗೆ ಕೇವಲ 37,570 ಮತಗಳು ಬಿದ್ದಿತ್ತು. ಆದರೆ ಮೊದಲ ಬಾರಿಗೆ ಸ್ಪರ್ಧಿಸಿದ್ದ ಸ್ಮೃತಿ ಇರಾನಿ 3 ಲಕ್ಷಕ್ಕೂ ಅಧಿಕ ಮತಗಳನ್ನು ಪಡೆಯುವ ಮೂಲಕ ರಾಜಕೀಯ ಪಂಡಿತರ ಲೆಕ್ಕಾಚಾರವನ್ನು ತಲೆಕೆಳಗೆ ಮಾಡಿ ಅಚ್ಚರಿ ಮೂಡಿಸಿದ್ದರು.

    ಈ ಬಾರಿ ಕಷ್ಟ ಯಾಕೆ?
    ಅಮೇಥಿ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಅವರನ್ನು ಸೋಲಿಸಲು ಪಣತೊಟ್ಟಿರುವ ಸ್ಮೃತಿ ಇರಾನಿ ಅವರು ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಅಲ್ಲದೇ ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಅಮೇಥಿಯ ಎಕೆ 203 ರೈಫಲ್ ತಯಾರಿಕಾ ಕಾರ್ಖಾನೆಗೆ ಶಂಕು ಸ್ಥಾಪನೆಯನ್ನು ಪ್ರಧಾನಿ ಮೋದಿ ಅವರು ನೆರವೇರಿಸಿದ್ದರು. ಈ ವೇಳೆ ಉಗ್ರ ಧಮನಕ್ಕೆ ಮೇಡ್ ಇನ್ ಅಮೇಥಿ ರೈಫಲ್ ಯೋಧರಿಗೆ ಬಲ ನೀಡಲಿದೆ. ಇಷ್ಟು ದಿನ ಒಂದು ಕುಟುಂಬದಿಂದ ಗುರುತಿಸಿಕೊಳ್ಳುತ್ತಿದ್ದ ಈ ಕ್ಷೇತ್ರ ಇನ್ನು ರೈಫಲ್ ಹೆಸರಿನಲ್ಲಿ ಗುರುತಿಸಿಕೊಳ್ಳಲಿದೆ. ಇದೂವರೆಗೆ ನಾವು ಅಮೇಥಿ ಗೆದ್ದಿಲ್ಲ. ಆದರೆ ಈಗ ನಾವು ಜನರ ಹೃದಯ ಗೆದ್ದಿದ್ದೇವೆ ಎಂದು ಮೋದಿ ಭಾಷಣದಲ್ಲಿ ಪ್ರಸ್ತಾಪಿಸಿ ಚುನಾವಣಾ ರಣ ಕಹಳೆ ಮೊಳಗಿಸಿದ್ದರು. 2017ರ ವಿಧಾನಸಭಾ ಚುನಾವಣೆಯಲ್ಲಿ ಅಮೇಥೀ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಶೂನ್ಯ ಸಾಧನೆ ಮಾಡಿದೆ. 3 ಬಿಜೆಪಿ ಗೆದ್ದಿದ್ದರೆ ಒಂದು ಕ್ಷೇತ್ರವನ್ನು ಎಸ್‍ಪಿ ಗೆದ್ದುಕೊಂಡಿತ್ತು.

    ಕೈ ನಾಯಕರು ಹೇಳಿದ್ದು ಏನು?
    ಚಾಮರಾಜನಗರದಲ್ಲಿ ನಡೆದ ಕಾಂಗ್ರೆಸ್ ಪರಿವರ್ತನಾ ಸಮಾವೇಶದಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್ ಅವರು, ರಾಹುಲ್ ಗಾಂಧಿಯವರು ಕೇವಲ ಉತ್ತರ ಭಾರತದಿಂದ ಮಾತ್ರ ಸ್ಪರ್ಧೆ ಮಾಡುವುದಲ್ಲ. ದಕ್ಷಿಣ ಭಾರತದಿಂದಲೂ ಸ್ಪರ್ಧೆ ಮಾಡಲಿ. ಅದರಲ್ಲೂ ಕರ್ನಾಟಕದಿಂದಲೇ ಸ್ಪರ್ಧೆ ಮಾಡಲಿ. ಈ ಹಿಂದೆ ಇಂದಿರಾ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರನ್ನು ನಾವು ಆಯ್ಕೆ ಮಾಡಿದ್ದೇವು. ಈಗ ರಾಹುಲ್ ಗಾಂಧಿಯನ್ನು ಆಯ್ಕೆ ಮಾಡಿ ಪ್ರಧಾನ ಮಂತ್ರಿಯನ್ನಾಗಿ ಮಾಡೋಣ ಎಂದು ಹೇಳಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮೋದಿ ಭಯೋತ್ಪಾದಕನಂತೆ ಕಾಣ್ತಾರೆ – ಜನ ಪ್ರಧಾನಿಯನ್ನ ಕಂಡ್ರೆ ಭಯಪಡ್ತಿದ್ದಾರೆ: ಕಾಂಗ್ರೆಸ್ ಸ್ಟಾರ್ ನಾಯಕಿ

    ಮೋದಿ ಭಯೋತ್ಪಾದಕನಂತೆ ಕಾಣ್ತಾರೆ – ಜನ ಪ್ರಧಾನಿಯನ್ನ ಕಂಡ್ರೆ ಭಯಪಡ್ತಿದ್ದಾರೆ: ಕಾಂಗ್ರೆಸ್ ಸ್ಟಾರ್ ನಾಯಕಿ

    ಹೈದರಾಬಾದ್: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವೈಯಕ್ತಿಕ ಟೀಕೆಗಳು ಹೆಚ್ಚಾಗುತ್ತಿದ್ದು, ಈ ಪಟ್ಟಿಗೆ ತೆಲಂಗಾಣದ ಕಾಂಗ್ರೆಸ್ ನಾಯಕಿ, ನಟಿ ವಿಜಯಶಾಂತಿ ಕೂಡ ಸೇರ್ಪಡೆಯಾಗಿದ್ದಾರೆ.

    ತೆಲಂಗಾಣದ ಶಾಂಶಬಾದ್ ನಗರದಲ್ಲಿ ನಡೆದ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ವೇಳೆ ಕಾಂಗ್ರೆಸ್ ನಾಯಕಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ ಮೋದಿ ಅವರನ್ನು ಭಯೋತ್ಪಾದಕರಿಗೆ ಹೋಲಿಕೆ ಮಾಡಿ ಟೀಕೆ ಮಾಡಿದ್ದಾರೆ.

    ಯಾವುದೇ ಕ್ಷಣದಲ್ಲಿ ಮೋದಿ ನಮ್ಮ ಮೇಲೆ ಬಾಂಬ್ ಹಾಕ್ತಾರೆ ಎಂಬ ಭಯದಲ್ಲಿ ಜನರಿದ್ದಾರೆ. ಮೋದಿ ಭಯೋತ್ಪಾದಕನಂತೆ ಕಾಣುತ್ತಿದ್ದಾರೆ. ಜನರನ್ನು ಪ್ರೀತಿಸಿ ಅವರ ಮನಸ್ಸು ಗೆಲ್ಲುವುದನ್ನ ಬಿಟ್ಟು, ಭಯ ಮಾಡುವಂತೆ ಮಾಡುತ್ತಿದ್ದಾರೆ. ಪ್ರಧಾನಿಯಾಗಿ ನಡೆದುಕೊಳ್ಳುವ ರೀತಿ ಇದಲ್ಲ ಎಂದು ಕಿಡಿಕಾರಿದ್ದಾರೆ.

    ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭಾಗವಹಿಸಿದ್ದ ಈ ಸಮಾವೇಶದಲ್ಲಿ ರಾಹುಲ್ ಮಾತನಾಡುವ ಮುನ್ನ ವಿಜಯಶಾಂತಿ ಈ ಹೇಳಿಕೆ ನೀಡಿದ್ದಾರೆ.

    ಅಂದಹಾಗೇ ವಿಜಯಶಾಂತಿ ನಟಿಯಾಗಿ ಹೆಸರು ಪಡೆದ ಬಳಿಕ ರಾಜಕೀಯ ಪ್ರವೇಶವನ್ನು ಬಿಜೆಪಿ ಪಕ್ಷದಿಂದಲೇ ಮಾಡಿದ್ದರು. ಸುಮಾರು 10 ವರ್ಷಗಳ ಕಾಲ ಪಕ್ಷದಲ್ಲಿದ್ದ ವಿಜಯಶಾಂತಿ, ಬಿಜೆಪಿಯಿಂದ ಹೊರ ಬಂದು ತಮ್ಮದೇ ಪಕ್ಷ ಕಟ್ಟಿದ್ದರು. ಆದರೆ ಅಲ್ಲಿಯೂ ಯಶಸ್ಸು ಕಾಣದೇ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ ಎಸ್) ಪಕ್ಷದಲ್ಲಿ ತಮ್ಮ ಪಕ್ಷವನ್ನು ವಿಸರ್ಜನೆ ಮಾಡಿದ್ದರು. ಕಳೆದ 2014 ಚುನಾವಣೆ ವೇಳೆ ಉಂಟಾದ ಕಲಹದಿಂದ ಅಲ್ಲಿಂದ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷ ಇವರನ್ನು ಸ್ಟಾರ್ ಪ್ರಚಾರಕಿಯಾಗಿ ಆಯ್ಕೆ ಮಾಡಿದೆ.

    ಕಳೆದ ಕೆಲ ದಿನಗಳ ಹಿಂದೆಯಷ್ಟೇ ಕಾಂಗ್ರೆಸ್ ಪಕ್ಷದ ನಾಯಕ ಬೇಳೂರು ಗೋಪಾಲಕೃಷ್ಣ ಅವರು ಮೋದಿಯನ್ನು ಗುಂಡಿಟ್ಟು ಕೊಲ್ಲುತ್ತೀರಾ ಎಂದು ಪ್ರಶ್ನೆ ಮಾಡುವ ಮೂಲಕ ವಿವಾದತ್ಮಾಕ ಹೇಳಿಕೆ ನೀಡಿದ್ದರು. ಆ ಬಳಿಕ ತಮ್ಮ ಮಾತಿಗೆ ಸ್ಪಷ್ಟನೆ ನೀಡಿ ಕ್ಷಮೆ ಕೋರಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ‘ಮೇಡ್ ಇನ್ ಅಮೇಥಿ’ ಎಕೆ203 ರೈಫಲ್ – ಉಗ್ರ ವಿರುದ್ಧ ಹೋರಾಟಕ್ಕೆ ಮತ್ತಷ್ಟು ಬಲ: ಪ್ರಧಾನಿ ಮೋದಿ

    ‘ಮೇಡ್ ಇನ್ ಅಮೇಥಿ’ ಎಕೆ203 ರೈಫಲ್ – ಉಗ್ರ ವಿರುದ್ಧ ಹೋರಾಟಕ್ಕೆ ಮತ್ತಷ್ಟು ಬಲ: ಪ್ರಧಾನಿ ಮೋದಿ

    ಅಮೇಥಿ: ರಾಹುಲ್ ಗಾಂಧಿ ಸ್ವಕ್ಷೇತ್ರ ಅಮೇಥಿಯ ಸಮಾವೇಶದಲ್ಲಿ ಪ್ರಧಾನಿ ಮೋದಿ ಘರ್ಜಿಸಿದ್ದು, ಇನ್ನು ಮುಂದೇ ಅಮೇಥಿ ಒಂದು ಕುಟುಂಬ ಬದಲು ‘ಮೇಡ್ ಇನ್ ಅಮೇಥಿ ಎಕೆ-203’ ಹೆಸರನಿಂದ ಗುರುತಿಸಲಾಗುತ್ತದೆ ಎಂದು ಹೇಳಿದ್ದಾರೆ.

    ಅಮೇಥಿಯ ಸಮಾವೇಶದಲ್ಲಿ ಮಾತನಾಡಿದ ಅವರು, ರಷ್ಯಾದ ಸಹಭಾಗಿತ್ವದಲ್ಲಿ ಸ್ಥಾಪಿಸಲಾದ ಕಲಾಶ್ನಿಕೋವ್ ರೈಫಲ್ಸ್ ಘಟಕದಲ್ಲಿ ಅತ್ಯಾಧುನಿಕ ಎಕೆ-203 ರೈಫಲ್‍ಗಳನ್ನು ಉತ್ಪಾದಿಸಲಾಗುತ್ತಿದೆ. ಈ ಘಟಕ ಭಯೋತ್ಪಾದಕರು ಮತ್ತು ಮಾವೋವಾದಿಗಳ ವಿರುದ್ಧ ಹೋರಾಡಲು ನಮ್ಮ ಯೋಧರಿಗೆ ಹೊಸ ಶಕ್ತಿ ನೀಡುತ್ತದೆ ಎಂದು ಹೇಳಿದರು.

    ಇತ್ತ ಇಂದು ಕೂಡ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಪ್ರಧಾನಿ ಮೋದಿ ನಡುವಿನ ರಫೇಲ್ ವಾರ್ ಮುಂದುವರಿಯಿತು. ಉತ್ತರ ಪ್ರದೇಶದ ರಾಹುಲ್ ಸ್ವಕ್ಷೇತ್ರ ಅಮೇಥಿಯ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶ ನಡೆಸಿದರು. ಅಲ್ಲದೇ ಉಗ್ರರ ಧಮನಕ್ಕೆ ಮೇಡ್ ಇನ್ ಅಮೇಥಿ ನಮ್ಮ ಯೋಧರಿಗೆ ಬಲ ನೀಡಲಿದೆ ಎಂದು ಟಾಂಗ್ ಕೊಟ್ಟರು.

    ಅಮೇಥಿಯಲ್ಲಿ ಕಾರ್ಖಾನೆ ಸ್ಥಾಪನೆ ಮಾಡಲು 2007ರಲ್ಲೆ ಶಂಕು ಸ್ಥಾಪನೆ ಮಾಡಿ 2010 ರಲ್ಲಿ ಕಾರ್ಯಾಣೆಯ ಕಾಮಗಾರಿ ಆರಂಭವಾಗಲಿದೆ ಎಂದಿದ್ದರು. ಆದರೆ ಅಂದು ಇಲ್ಲಿ ಯಾವ ಶಸ್ತ್ರಸ್ತ್ರಗಳನ್ನು ಉತ್ಪಾದನೆ ಮಾಡಬೇಕೆಂದು ಅಂದಿನ ಸರ್ಕಾರ ನಿರ್ಧಾರ ಮಾಡಿಯೇ ಇರಲಿಲ್ಲ ಎಂದು ಮೋದಿ ಆರೋಪಿಸಿದರು. ಇದೇ ವೇಳೆ ಕಾರ್ಖಾನೆ ಸ್ಥಾಪನೆ ಮಾಡಲು ಸಹಕಾರ ನೀಡಿದ್ದ ರಷ್ಯಾ ಅಧ್ಯಕ್ಷ ಪುಟಿನ್ ಅವರ ಕಾರ್ಯವನ್ನು ಮೆಚ್ಚಿ ಕೃತಜ್ಞನೆ ಸಲ್ಲಿಸಿದರು.

    7.62-39 ಎಂಎಂ ಕ್ಯಾಲಿಬರ್ ಎಕೆ-204 ಗನ್ ಗಳು ಎಕೆ-47 ಸರಣಿಯ ಅತ್ಯಾಧುನಿಕ ತಲೆಮಾರಿನ ಅಸ್ತ್ರಗಳಾಗಿವೆ. 7.50 ಲಕ್ಷ ಎಕೆ-203 ರೈಫಲ್ ಗಳ ಉತ್ಪಾದನೆಗೆ ರಷ್ಯಾ ಜತೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಈ ಬಂದೂಕುಗಳನ್ನು ಭೂ ಸೇನೆ ಯೋಧರಿಗೆ ನೀಡಲಾಗುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ವೀರ ಯೋಧ ‘ಅಭಿ’ನಂದನ್‍ಗೆ ನಮೋ ಎಂದ ಮೋದಿ

    ವೀರ ಯೋಧ ‘ಅಭಿ’ನಂದನ್‍ಗೆ ನಮೋ ಎಂದ ಮೋದಿ

    ನವದೆಹಲಿ: ಶತ್ರು ರಾಷ್ಟ್ರ ಪಾಕಿಸ್ತಾನದಿಂದ ಆಗಮಿಸಿದ ವಿಗ್ ಕಮಾಂಡರ್ ಅಭಿನಂದನ್ ಅವರಿಗೆ ಸ್ವಾಗತ ಕೋರಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ನಾಯಕರು ಟ್ವೀಟ್ ಮಾಡಿದ್ದಾರೆ.

    ನಿಮ್ಮ ಧೈರ್ಯ, ಸ್ಥೈರ್ಯ ದೇಶಕ್ಕೆ ಮಾದರಿ. ನಮ್ಮ ದೇಶದ ಸೇನಾಪಡೆಗಳು 130 ಕೋಟಿ ಭಾರತೀಯರಿಗೆ ಸ್ಫೂರ್ತಿ ಆಗಿದೆ ಎಂದು ಮೋದಿ ತಿಳಿಸಿದ್ದಾರೆ. ಇತ್ತ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕೂಡ ಸ್ವಾಗತಕೋರಿದ್ದು, ನಿಮ್ಮ ಶೌರ್ಯ, ಘಟನತೆಯಿಂದ ನಮ್ಮನ್ನು ಮತ್ತಷ್ಟು ಹೆಮ್ಮೆ ಪಡುವಂತೆ ಮಾಡಿದ್ದೀರಿ ಎಂದಿದ್ದಾರೆ.

    ಅಭಿನಂದನ್ ತಯ್ನಾಡಿಗೆ ಆಗಮಿಸುತ್ತಿದಂತೆ ದೇಶದೆಲ್ಲೆಡೆ ಸಂಭ್ರಮದಲ್ಲಿದ್ದು, ಪಟಾಕಿ ಸಿಡಿಸಿ, ಸಿಹಿ ನೀಡಿ ಸಾರ್ವಜನಿಕರು ಸಂಭ್ರಮಿಸಿದ್ದಾರೆ. ವೈರಿ ರಾಷ್ಟ್ರದಿಂದ ಬರುವ ವೇಳೆ ಮುಖದಲ್ಲಿ ಅದೇ ಮಂದಹಾಸ, ಅದೇ ಹುರಿ ಮೀಸೆ, ಅದೇ ಮಾನಸಿಕ ದೃಢತೆಯೊಂದಿಗೆ ಕಾಣಸಿಕ್ಕ ಅಭಿನಂದನ್ ಅವರು ತಾಯ್ನಾಡಿನ ಕಡೆಗೆ ನಗು ಮುಖದಿಂದ ಹೆಜ್ಜೆ ಇಟ್ಟ ಕ್ಷಣ ಎಲ್ಲರನ್ನು ರೋಮಾಂಚನ ಗೊಳಿಸಿತ್ತು.

    ಅಭಿನಂದನ್ ಅವರು ಆಗಮಿಸುತ್ತಿದಂತೆ ದೇಶಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದ್ದು, ಪ್ರಮುಖವಾಗಿ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪಂಜಾಬ್ ಸಿಎಂ ಅಮರಿಂದರ್ ಸಿಂಗ್, ಮಾಜಿ ಸಿಎಂ ಸಿದ್ದರಾಮಯ್ಯ, ಬಿಎಸ್ ಯಡಿಯೂರಪ್ಪ ಸೇರಿದಂತೆ ದೇಶದ ಪ್ರಮುಖ ರಾಜಕೀಯ ಗಣ್ಯರು ಅಭಿನಂದನ್ ಅರಿಗೆ ಸ್ವಾಗತ ಕೋರಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv