Tag: prime minister

  • ತೆಲಂಗಾಣದಲ್ಲಿ ಬಿಜೆಪಿ ಅಲೆ ಶುರುವಾಗಿದೆ : ಮೋದಿ

    ತೆಲಂಗಾಣದಲ್ಲಿ ಬಿಜೆಪಿ ಅಲೆ ಶುರುವಾಗಿದೆ : ಮೋದಿ

    ಹೈದರಾಬಾದ್: ತೆಲಂಗಾಣ ರಾಜ್ಯದಲ್ಲಿ ಬಿಜೆಪಿ ಅಲೆ ಶುರುವಾಗಿದ್ದು, ಇಲ್ಲಿ ಬಿಜೆಪಿ ಮುಂದಿನ ಸರ್ಕಾರ ರಚಿಸಲಿದೆ ಎಂದು ಪ್ರಧಾನಿ ನರೇಂದ್ರಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಬೇಗಂಪೇಟೆ ವಿಮಾನ ನಿಲ್ದಾಣದಲ್ಲಿಂದು ಬಿಜೆಪಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಟಿಆರ್‌ಎಸ್ (ತೆಲಂಗಾಣ ರಾಷ್ಟ್ರಸಮಿತಿ) ಒಂದು ಕುಟುಂಬದ ಪಕ್ಷವಾಗಿದ್ದು, ಅಧಿಕಾರದಲ್ಲಿರಲು ಯೋಗ್ಯವಲ್ಲ. ತೆಲಂಗಾಣದಲ್ಲಿ ಬಿಜೆಪಿ ಮುಂದಿನ ಸರ್ಕಾರ ರಚಿಸಲಿದೆ ಎಂದಿದ್ದಾರೆ. ಇದನ್ನೂ ಓದಿ: ಮೋದಿ ಪ್ರಧಾನಿಯಾಗಿ 8 ವರ್ಷ – ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ವೇಗೆ ಚಾಲನೆ

    MODi

    ಕುಟುಂಬ ಆಡಳಿತದಿಂದಾಗಿ ದೇಶದ ಯುವಕರಿಗೆ ರಾಜಕೀಯದಲ್ಲಿ ಅವಕಾಶ ಸಿಗುತ್ತಿಲ್ಲ. ಈಗಾಗಲೇ ರಾಜ್ಯದಲ್ಲಿ ಬಿಜೆಪಿ ಪರ ಅಲೆ ಎದ್ದಿದ್ದು, ಮುಂದಿನ ವಿಧಾನಸಭೆ ಚುನಾವಣೆಯ ನಂತರ ಸರ್ಕಾರ ಬದಲಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಇದನ್ನೂ ಓದಿ: ಪಾಟಿದರ್ ಸ್ಫೋಟಕ ಶತಕ, ಡಿ.ಕೆ ಅಬ್ಬರ – ಅಹಮದಾಬಾದ್‌ಗೆ ಹಾರಿದ ಬೆಂಗ್ಳೂರು

    ಹಾಲಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ (KCR) ಮತ್ತು ಅವರ ಕುಟುಂಬದ ವಿರುದ್ಧ ಮೋದಿ ಪರೋಕ್ಷ ವಾಗ್ದಾಳಿ ನಡೆಸಿದರು. ಅಲ್ಲದೆ, ತೆಲಂಗಾಣದಲ್ಲಿ ಕುಟುಂಬ ಆಡಳಿತವನ್ನು ಕೊನೆಗಾಣಿಸುವಂತೆ ಜನರಿಗೆ ಕರೆ ನೀಡಿದರು.

    ಪ್ರತ್ಯೇಕ ತೆಲಂಗಾಣಕ್ಕಾಗಿ ಪ್ರಾಣ ತ್ಯಾಗ ಮಾಡಿದವರ ಆಶೋತ್ತರಗಳನ್ನು ಈಡೇರಿಸುವಲ್ಲಿ ಕುಟುಂಬ ಆಡಳಿತ ವಿಫಲವಾಗಿದೆ. ಆದ್ದರಿಂದ ತೆಲಂಗಾಣಕ್ಕೆ ಪ್ರಗತಿಪರ ಸರ್ಕಾರ ಬೇಕಿದ್ದು, ಬಿಜೆಪಿಯಿಂದ ಮಾತ್ರ ಅದು ಸಾಧ್ಯ ಎಂದು ಮೋದಿ ಹೇಳಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಕೆಸಿಆರ್ ಪಕ್ಷದ ವಕ್ತಾರ ಕ್ರಿಶಾಂಕ್ ಮನ್ನೆ, ಪ್ರಧಾನಿ ನರೇಂದ್ರಮೋದಿ ದೇಶದ ಪ್ರಧಾನಿಯಂತೆ ಮಾತನಾಡಿಲ್ಲ. ಅವರು ಬಿಜೆಪಿ ನಾಯಕನಾಗಿ ಒಂದು ಪರಿವಾರದ ಬಗ್ಗೆ ಮಾತನಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

  • ಆಸ್ಟ್ರೇಲಿಯಾ ನೂತನ ಪ್ರಧಾನಿಯಾಗಿ ಅಂಥೋನಿ ಎಲ್ಬನೀಸ್ ಅಧಿಕಾರಕ್ಕೆ

    ಆಸ್ಟ್ರೇಲಿಯಾ ನೂತನ ಪ್ರಧಾನಿಯಾಗಿ ಅಂಥೋನಿ ಎಲ್ಬನೀಸ್ ಅಧಿಕಾರಕ್ಕೆ

    ಕ್ಯಾನ್ಬೆರಾ: ಆಸ್ಟ್ರೇಲಿಯಾ ನೂತನ ಪ್ರಧಾನಿಯಾಗಿ ಅಂಥೋನಿ ಎಲ್ಬನೀಸ್‌ ಪ್ರಮಾಣವಚನ ಸ್ವೀಕರಿಸಿದ್ದಾರೆ.

    ಜಪಾನ್‌ನಲ್ಲಿ ನಡೆಯುತ್ತಿರುವ ಟೋಕಿಯೊ ಶೃಂಗಸಭೆಗೂ ಮುನ್ನವೇ ಅಧಿಕಾರ ಸ್ವೀಕರಿಸಿದ್ದಾರೆ. ಪ್ರಧಾನ ಮಂತ್ರಿ ಎಲ್ಬನೀಸ್ ಜಯದ ಹಾದಿ ಮುಟ್ಟಿದ್ದು ಬೆಂಬಲಿಗರು ಸಂಭ್ರಮಿಸಿದ್ದಾರೆ. ಇದನ್ನೂ ಓದಿ: ಜಪಾನ್‌ ಯುವಕರು ಒಮ್ಮೆಯಾದರೂ ಭಾರತಕ್ಕೆ ಭೇಟಿ ನೀಡಬೇಕು: ಮೋದಿ ಆಹ್ವಾನ

    Anthony Albanese

    ಎಲ್ಬನೀಸ್ ಗವರ್ನರ್‌-ಜನರಲ್ ಡೇವಿಡ್ ಅವರಿಂದ ಪ್ರಮಾಣ ವಚನ ಸ್ವೀಕರಿಸಿದ ನಂತರ ಅವರು ಅಮೆರಿಕ ಅಧ್ಯಕ್ಷ ಜೋ ಬೈಡನ್‌, ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಹಾಗೂ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಾಳೆ ಭದ್ರತಾ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಟೋಕಿಯೊಗೆ ಪ್ರಯಾಣ ಬೆಳೆಸಿದ್ದಾರೆ. ಇದನ್ನೂ ಓದಿ: ಭಾರತದ ಸ್ಮಾರ್ಟ್ ಸಿಟಿ, 5ಜಿ ಯೋಜನೆಗೆ ಕೊಡುಗೆ ನೀಡಲು ಮುಂದಾದ ಜಪಾನ್

    ಈ ಕುರಿತು ಪ್ರತಿಕ್ರಿಯಿಸಿರುವ ಎಲ್ಬನೀಸ್‌, ನಾನು ಆಶಾವಾದದ ಭಾವನೆ ಹೊಂದಿರುವ ಸರ್ಕಾರವನ್ನು ಮುನ್ನಡೆಸಲು ಬಯಸುತ್ತೇನೆ. ಜೊತೆಗೆ ಆಸ್ಟ್ರೇಲಿಯಾ ಜನರನ್ನು ಹೆಮ್ಮೆ ಪಡುವಂತೆ ಮಾಡುತ್ತೇನೆ ಎಂದು ನೂತನ ಪ್ರಧಾನಿ ಹೇಳಿದ್ದಾರೆ.

  • 2030ರ ವೇಳೆಗೆ ಭಾರತಕ್ಕೆ 6ಜಿ ನೆಟ್‌ವರ್ಕ್ – ಪ್ರಧಾನಿ ಮೋದಿ

    2030ರ ವೇಳೆಗೆ ಭಾರತಕ್ಕೆ 6ಜಿ ನೆಟ್‌ವರ್ಕ್ – ಪ್ರಧಾನಿ ಮೋದಿ

    ನವದೆಹಲಿ: 2030ರ ವೇಳೆಗೆ ಅಂದರೆ ಈ ದಶಕದ ಅಂತ್ಯದಲ್ಲಿ ದೇಶಕ್ಕೆ 6ಜಿ ತಂತ್ರಜ್ಞಾನ ಸಂಪರ್ಕ ಕಲ್ಪಿಸುವ ಗುರಿ ಹೊಂದಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

    ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರದ (ಟ್ರಾಯ್) ಬೆಳ್ಳಿಹಬ್ಬ ಸಮಾರಂಭದಲ್ಲಿ ಮಾತನಾಡಿದ ಮೋದಿ, ದೇಶದಲ್ಲಿ ಟೆಲಿಡೆನ್ಸಿಟಿ ಹಾಗೂ ಇಂಟರ್ನೆಟ್ ಬಳಕೆಯನ್ನು ವೇಗವಾಗಿ ವಿಸ್ತರಿಸಲಾಗುತ್ತಿದೆ. 21ನೇ ಶತಮಾನದಲ್ಲಿ ಈ ಸಂಪರ್ಕವು ದೇಶದ ಪ್ರಗತಿಯನ್ನು ನಿರ್ಧರಿಸುತ್ತದೆ. ಈ ದಶಕದ ಅಂತ್ಯದ ವೇಳೆಗೆ ನಾವು 6G ನೆಟ್‌ವರ್ಕ್ ಸೇವೆ ಪ್ರಾರಂಭಿಸಲು ಸಾಧ್ಯವಾಗುತ್ತದೆ. ಈಗಾಗಲೇ ನಮ್ಮ ಕಾರ್ಯಪಡೆ 6ಜಿ ಹೊರತರುವ ಕೆಲಸ ಪ್ರಾರಂಭಿಸಿದೆ ಎಂದು ಅವರು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಮಾಹಿತಿ ಲೀಕ್ – ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಅಧಿಕಾರಿ ವಜಾ

    modi (1)

    5ಜಿ ಅನುಷ್ಠಾನ ಯಾವಾಗ?: 3G ಹಾಗೂ 4G ನೆಟ್‌ವರ್ಕ್ ಸೇವೆ ಚಾಲ್ತಿಯಲ್ಲಿದ್ದು, ಕೆಲವೇ ತಿಂಗಳಲ್ಲಿ 5ಜಿ ಸೇವೆ ಸಹ ಲಭ್ಯವಾಗಲಿದೆ. 5G ನೆಟ್‌ವರ್ಕ್ ಸೇವೆ ಚಾಲನೆಯಿಂದ ದೇಶದ ಆರ್ಥಿಕತೆಗೆ 450 ಬಿಲಿಯನ್ ಡಾಲರ್ (ಅಂದಾಜು 3,492 ಕೋಟಿ ರೂ.) ಆದಾಯ ದೊರೆಯಲಿದೆ. ಇದು ಇಂಟರ್ನೆಟ್ ವೇಗವನ್ನು ಮಾತ್ರವಲ್ಲದೆ ಅಭಿವೃದ್ಧಿಯನ್ನೂ ಹೆಚ್ಚಿಸುತ್ತದೆ. ಜೊತೆಗೆ ಜೀವನ ಮತ್ತು ವ್ಯವಹಾರವನ್ನು ಸುಲಭಗೊಳಿಸುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಶಿವಲಿಂಗ ಪತ್ತೆಯಾದ ಜಾಗವನ್ನು ರಕ್ಷಿಸಿ: ಸುಪ್ರೀಂ ಕೋರ್ಟ್‌

    5G

    ಇದು ಕೇವಲ ಇಂಟರ್‌ನೆಟ್ ಸೇವೆಯ ವೇಗ ಹೆಚ್ಚಿಸುವುದಕ್ಕೆ ಸಂಬಂಧಿಸಿದ್ದಲ್ಲ. ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಗೆ ಸಂಬಂಧಿಸಿದ ವಿಚಾರವೂ ಆಗಿದೆ. ಜೀವನ ನಿರ್ವಹಣೆ ಮತ್ತು ಉದ್ಯೋಗ ಸುಗಮವಾಗಲಿದೆ. ಕೃಷಿ, ಆರೋಗ್ಯ, ಶಿಕ್ಷಣ, ಸರಕು ಸಾಗಣೆ ಹಾಗೂ ಮೂಲಸೌಕರ್ಯ ಕ್ಷೇತ್ರಗಳಿಗೂ ಇದರಿಂದ ಉತ್ತೇಜನ ದೊರೆಯಲಿದೆ ಎಂದು ಅವರು ತಿಳಿಸಿದ್ದಾರೆ.

  • ಶ್ರೀಲಂಕಾದ ನೂತನ ಪ್ರಧಾನಿಯಾಗಿ ರಾನಿಲ್‌ ವಿಕ್ರಮಸಿಂಘೆ ಪ್ರಮಾಣ ವಚನ

    ಶ್ರೀಲಂಕಾದ ನೂತನ ಪ್ರಧಾನಿಯಾಗಿ ರಾನಿಲ್‌ ವಿಕ್ರಮಸಿಂಘೆ ಪ್ರಮಾಣ ವಚನ

    ಕೊಲಂಬೊ: ಹಿಂಸಾತ್ಮಕ ಸರ್ಕಾರ ವಿರೋಧಿ ಪ್ರತಿಭಟನೆಗಳನ್ನು ಕಂಡ ದ್ವೀಪರಾಷ್ಟ್ರ ಎದುರಿಸುತ್ತಿರುವ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟಿನ ಮಧ್ಯೆ ಯುನೈಟೆಡ್ ನ್ಯಾಶನಲ್ ಪಾರ್ಟಿ (ಯುಎನ್‌ಪಿ) ನಾಯಕ ರಾನಿಲ್ ವಿಕ್ರಮಸಿಂಘೆ ಅವರು ಶ್ರೀಲಂಕಾದ ನೂತನ ಪ್ರಧಾನಿಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

    ಐದು ಬಾರಿ ಪ್ರಧಾನಿಯಾಗಿ ಸೇವೆ ಸಲ್ಲಿಸಿರುವ ವಿಕ್ರಮಸಿಂಘೆ ಅವರಿಗೆ ಅಧ್ಯಕ್ಷ ಗೊಟಬಯ ರಾಜಪಕ್ಸ ಪ್ರಮಾಣ ವಚನ ಬೋಧಿಸಿದ್ದಾರೆ. ಶ್ರೀಲಂಕಾ ಪೊದುಜನ ಪೆರಮುನಾ (ಎಸ್‌ಎಲ್‌ಪಿಪಿ) ಸಂಸದರ ಬೆಂಬಲವನ್ನು ಪಡೆದುಕೊಂಡ ನಂತರ ವಿಕ್ರಮಸಿಂಘೆ ಅವರು ಪ್ರಧಾನಿ ಹುದ್ದೆ ಅಲಂಕರಿಸಿದ್ದಾರೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ಹೊಸ ಸರ್ಕಾರ ರಚನೆಗೆ ವಿಪಕ್ಷ ನಾಯಕ ಒಪ್ಪಿಗೆ

    ಶ್ರೀಲಂಕಾದ ವಿರೋಧ ಪಕ್ಷದ ನಾಯಕ ಸಜಿತ್ ಪ್ರೇಮದಾಸ ಅವರು ಯುನೈಟೆಡ್ ನ್ಯಾಶನಲ್ ಪಾರ್ಟಿ (ಯುಎನ್‌ಪಿ) ನಾಯಕ ರಾನಿಲ್ ವಿಕ್ರಮಸಿಂಘೆ ಅವರನ್ನು ದೇಶದ ಪ್ರಧಾನಿಯನ್ನಾಗಿ ಮಾಡಿದರೆ ನಮ್ಮ ಪಕ್ಷವು ಕಾರ್ಯತಂತ್ರ ರೂಪಿಸುವುದಾಗಿ ತಿಳಿಸಿದ್ದರು.

    ಸಜಿತ್ ಅವರು ಅಧ್ಯಕ್ಷ ಗೊಟಬಯ ರಾಜಪಕ್ಸ ಅವರಿಗೆ ಪತ್ರ ಬರೆದಿರುವುದಾಗಿ ಸಜಿತ್‌ ಹೇಳಿಕೊಂಡಿದ್ದರು. ಅದರಲ್ಲಿ ತಮ್ಮ ಪಕ್ಷವು ಮುಂದಿಟ್ಟಿರುವ ಬೇಡಿಕೆಗಳನ್ನು ಈಡೇರಿಸಿದರೆ ಪ್ರಧಾನಿ ಹುದ್ದೆಯನ್ನು ವಹಿಸಿಕೊಳ್ಳುತ್ತೇವೆ ಎಂದು ಹೇಳಿದ್ದರು. ಇದನ್ನೂ ಓದಿ: ಹೆಣ್ಣುಮಕ್ಕಳಿಗೆ ಶಿಕ್ಷಣ ನಿಷೇಧಿಸಿ ತನ್ನ ಪುತ್ರಿಯರನ್ನು ಶಾಲೆಗೆ ಸೇರಿಸಿದ ತಾಲಿಬಾನ್‌ ವಕ್ತಾರ

    ವಿಕ್ರಮಸಿಂಘೆ ಕುರಿತು ಕೇಳಿದ್ದ ಪ್ರಶ್ನೆಗೆ ಈ ಮೊದಲು ಪ್ರತಿಕ್ರಿಯಿಸಿದ್ದ ಸಜಿತ್‌, ಊಹಾಪೋಹಗಳ ಬಗ್ಗೆ ನಾನು ಮಾತನಾಡುವುದಿಲ್ಲ. ಒಂದು ವೇಳೆ ಅದು ಸಾಧ್ಯವಾದರೆ, ನಾವು ಶೀಘ್ರದಲ್ಲೇ ನಮ್ಮ ಕಾರ್ಯತಂತ್ರ ಪ್ರಾರಂಭಿಸುತ್ತೇವೆ. ನಾವು ದೇಶದ ಅತಿದೊಡ್ಡ ವಿರೋಧ ಪಕ್ಷವಾಗಿದ್ದು, ದೇಶದ ರಾಜಕೀಯ ವ್ಯವಸ್ಥೆ ನಮಗೆ ತಿಳಿದಿದೆ ಎಂದು ಹೇಳಿದ್ದರು.

    ಆರ್ಥಿಕ ಬಿಕ್ಕಟ್ಟಿನಿಂದಾಗಿ ದೇಶದಲ್ಲಿ ಹೋರಾಟ ತೀವ್ರಗೊಂಡಿದೆ. ಸರ್ಕಾರಿ ಬೆಂಬಲಿತರನ್ನು ಗುರಿಯಾಗಿಸಿ ಪ್ರತಿಭಟನಾಕಾರರು ಹಿಂಸಾಚಾರ ತೀವ್ರಗೊಳಿಸಿದ್ದರು. ಇದರಿಂದ ಎಚ್ಚೆತ್ತ ಮಹಿಂದಾ ರಾಜಪಕ್ಸ ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

  • DMK ಆಡಳಿತ ಪಕ್ಷದಿಂದ ನನಗೆ ಜೀವ ಬೆದರಿಕೆ: ದೇಸಿಗರ್ ಸ್ವಾಮೀಜಿ

    DMK ಆಡಳಿತ ಪಕ್ಷದಿಂದ ನನಗೆ ಜೀವ ಬೆದರಿಕೆ: ದೇಸಿಗರ್ ಸ್ವಾಮೀಜಿ

    ಚೆನ್ನೈ: ಆಡಳಿತಾರೂಢ ಡಿಎಂಕೆ ಪಕ್ಷದಿಂದ ನನಗೆ ಕಿರುಕುಳವಾಗುತ್ತಿದೆ. ನನಗೆ ಜೀವ ಬೆದರಿಕೆಯೂ ಇದೆ ಎಂದು ಮಧುರೈ ಅಧೀನಂ ಧರ್ಮದರ್ಶಿ ಜ್ಞಾನಸಂಬಂಧ ದೇಸಿಗರ್ ಸ್ವಾಮೀಜಿ ಆತಂಕ ವ್ಯಕ್ತಪಡಿಸಿದ್ದಾರೆ.

    Pallakki Festival

    ಮಧುರೈ ಜಿಲ್ಲಾಧಿಕಾರಿ ನಿನ್ನೆ ಸಾಂಪ್ರದಾಯಿಕ ಪಲ್ಲಕ್ಕಿ ಉತ್ಸವ ಆಚರಣೆಗೆ ಅನುಮತಿ ನಿರಾಕರಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, 500 ವರ್ಷಗಳ ಹಿಂದಿನ ಈ ಧಾರ್ಮಿಕ ಆಚರಣೆಯನ್ನು ನಿಷೇಧಿಸಿ ಆದೇಶ ಹೊರಡಿಸಿರುವುದು ನೋವಾಗಿದೆ. ಈ ಆಚರಣೆಯನ್ನು ಮಾಡಲೇಬೇಕು. ಇದಕ್ಕಾಗಿ ನಾನು ಪ್ರಾಣ ತ್ಯಾಗಕ್ಕೂ ಸಿದ್ಧನಾಗಿದ್ದೇನೆ. ಅಂತಹ ಆಚರಣೆಯನ್ನು ನಿಷೇಧಿಸುವ ಹಕ್ಕು ಯಾವುದೇ ಸರ್ಕಾರ ಅಥವಾ ಸಂಸ್ಥೆಗೆ ಇಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪೊಲೀಸರಿಂದ ಕೊಲೆಯ ಸಾಕ್ಷ್ಯಾಧಾರಗಳನ್ನು ಕದ್ದ ಕೋತಿ!

    ಸ್ವಾಮೀಜಿ ತಮ್ಮ ಜೀವಕ್ಕೆ ಅಪಾಯವಿದೆ ಮತ್ತು ಆಡಳಿತಾರೂಢ ಡಿಎಂಕೆ ಪಕ್ಷವು ತನಗೆ ಕಿರುಕುಳ ನೀಡುತ್ತಿದೆ ಎಂದು ಆರೋಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮರ್ಯಾದಾ ಹತ್ಯೆ – ತಹಶೀಲ್ದಾರ್ ಕಚೇರಿಯಲ್ಲೇ ಚಾಕುವಿನಿಂದ ಇರಿದು ವ್ಯಕ್ತಿ ಬರ್ಬರ ಕೊಲೆ

    MK STALIN AND ANNAMALAI

    ಆಡಳಿತ ಪಕ್ಷದವರು ಗುತ್ತಿಗೆ ಪಡೆದಿರುವ ಜಮೀನಿಗೆ ಬಾಡಿಗೆ ನೀಡುತ್ತಿಲ್ಲ, ಜಮೀನನ್ನೂ ಹಿಂದಿರುಗಿಸುತ್ತಿಲ್ಲ. ನಾನು ಬಾಡಿಗೆ ಕೇಳಿದರೆ, ಅವರು ನನಗೆ ಬೆದರಿಕೆ ಹಾಕುತ್ತಾರೆ. ವಿಧಾನಸಭೆಯಲ್ಲಿ ಮಾತ್ರ ದೇವಸ್ಥಾನ ಸರಿಯಾಗಿ ನಿರ್ವಹಣೆಯಾಗುತ್ತಿಲ್ಲ ಎಂದೂ ಆರೋಪಿಸುತ್ತಾರೆ. ಜಾತ್ಯಾತೀತ ಎಂದು ಕರೆಯುವ ಸರ್ಕಾರ ಒಂದು ಧರ್ಮವನ್ನು ದುರ್ಬಲಗೊಳಿಸುತ್ತಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರನ್ನು ಭೇಟಿ ಮಾಡಿ ಅವರಿಗೇ ಹೇಳುತ್ತೇನೆ ಎಂದಿದ್ದಾರೆ.

  • ಸವಾಲುಗಳ ನಡುವೆ ಪ್ರಧಾನಿ ಮೋದಿ ಯುರೋಪ್‌ ಪ್ರವಾಸ

    ಸವಾಲುಗಳ ನಡುವೆ ಪ್ರಧಾನಿ ಮೋದಿ ಯುರೋಪ್‌ ಪ್ರವಾಸ

    ನವದೆಹಲಿ: ಮೂರು ರಾಷ್ಟ್ರಗಳ ನಿರ್ಣಾಯಕ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರಮೋದಿ ಅವರು, ಯುರೋಪಿಯನ್ ಪಾಲುದಾರರೊಂದಿಗೆ ಶಾಂತಿ, ಸಮೃದ್ಧಿಗಾಗಿ ಸಹಕಾರದ ಮನೋಭಾವ ಬಲಪಡಿಸಲು ಹಾಗೂ ಕೋವಿಡ್ ಆರ್ಥಿಕ ಚೇತರಿಕೆಯನ್ನು ಬಲಪಡಿಸಲು ಬರ್ಲಿನ್, ಕೋಪನ್ ಹೇಗನ್ ಮತ್ತು ಪ್ಯಾರಿಸ್ ಪ್ರವಾಸಕ್ಕೆ ತೆರಳುತ್ತಿದ್ದಾರೆ.

    MODI VISIT EUROP

    ಅವರಿಂದು ಜರ್ಮನಿಯ ಫೆಡರಲ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರ ಆಹ್ವಾನದ ಮೇರೆಗೆ ಜರ್ಮನಿಯ ಬರ್ಲಿನ್‌ಗೆ ಭೇಟಿ ನೀಡಿದ್ದಾರೆ. ಇದರೊಂದಿಗೆ ಡೆನ್ಮಾರ್ಕ್ ಪ್ರಧಾನಿ ಮೆಟ್ಟೆ ಫ್ರೆಡೆರಿಕ್ಸೆನ್ ಮತ್ತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನೂ ಭೇಟಿ ಮಾಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಲಿಫ್ಟ್‌ನಲ್ಲಿ ಹೋಗುವುದೆಂದರೆ ನನಗೆ ಭಯ: ಅಜಯ್ ದೇವಗನ್

    ಪ್ರವಾಸಕ್ಕೂ ಮುನ್ನ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಭಾನುವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತವು ಅನೇಕ ಸವಾಲುಗಳನ್ನು ಎದುರಿಸುತ್ತಿರುವ ಸಮಯದಲ್ಲಿ ಯುರೋಪ್ ಪ್ರವಾಸ ಮಾಡುತ್ತಿದ್ದೇನೆ ಎಂದಿದ್ದಾರೆ ಎಂದು ಹೇಳಿದೆ.

    ಭಾರತ ಮತ್ತು ಜರ್ಮನಿ ನಡುವಿನ ದೀರ್ಘಕಾಲದ ವಾಣಿಜ್ಯ ಸಂಬಂಧಗಳು ನಮ್ಮ ಕಾರ್ಯತಂತ್ರದ ಸಹಭಾಗಿತ್ವದ ಆಧಾರ ಸ್ತಂಭಗಳಲ್ಲಿ ಒಂದಾಗಿದೆ. 2021ಕ್ಕೆ ಭಾರತ ಮತ್ತು ಜರ್ಮನಿ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಗೆ 70 ವರ್ಷ ಕಳೆದಿದೆ. ಚಾನ್ಸೆಲರ್ ಸ್ಕೋಲ್ಜ್ ಮತ್ತು ನಾನು ಜಂಟಿಯಾಗಿ ನಮ್ಮ ಉದ್ಯಮ ಉತ್ತೇಜಿಸುವ ಗುರಿ ಹೊಂದಿದ್ದು, ಜಾಗತಿಕ ಬೆಳವಣಿಗಳ ಬಗ್ಗೆ ಚರ್ಚಿಸಲಿದ್ದೇವೆ. ಇದರಿಂದ ಎರಡೂ ದೇಶಗಳಲ್ಲಿ ಕೋವಿಡ್ ಆರ್ಥಿಕ ಚೇತರಿಕೆ ಬಲಪಡಿಸಲು ಸಹಾಯ ಮಾಡುತ್ತದೆ. ಬರ್ಲಿನ್‌ಗೆ ನನ್ನ ಭೇಟಿಯು ಚಾನ್ಸೆಲರ್ ಸ್ಕೋಲ್ಜ್ ಅವರೊಂದಿಗೆ ವಿವರವಾದ ದ್ವಿಪಕ್ಷೀಯ ಚರ್ಚೆಗಳನ್ನು ನಡೆಸಲು ಒಂದು ಅವಕಾಶವಾಗಿದೆ. ಇದೇ ವೇಳೆ ಉಕ್ರೇನ್ ಯುದ್ಧದ ಬಗ್ಗೆಯೂ ಗಮನ ಹರಿಸಲಾಗುವುದು ಎಂದು ಪ್ರಧಾನಿ ಹೇಳಿದ್ದಾರೆ.

    ಯುರೋಪ್ ಖಂಡ ಭಾರತೀಯ ಮೂಲದ ಒಂದು ಮಿಲಿಯನ್‌ಗಿಂತಲೂ ಹೆಚ್ಚು ಜನರಿಗೆ ನೆಲೆಯಾಗಿದೆ ಮತ್ತು ಜರ್ಮನಿಯು ಈ ಸಂಖ್ಯೆಯಲ್ಲಿ ಗಮನಾರ್ಹ ಪ್ರಮಾಣವನ್ನು ಹೊಂದಿದೆ. ಯುರೋಪ್‌ನೊಂದಿಗಿನ ನಮ್ಮ ಸಂಬಂಧಗಳಲ್ಲಿ ಪ್ರಮುಖ ಆಧಾರವಾಗಿದೆ ಮತ್ತು ಆದ್ದರಿಂದ ನಾನು ನನ್ನ ಭೇಟಿಯ ಅವಕಾಶವನ್ನು ತೆಗೆದುಕೊಳ್ಳುತ್ತೇನೆ ಅಲ್ಲಿ ನಮ್ಮ ಸಹೋದರ, ಸಹೋದರಿಯರನ್ನು ಭೇಟಿ ಮಾಡುತ್ತೇನೆ ಎಂದು ಪ್ರಧಾನಿ ಹೇಳಿದ್ದಾರೆ. ಇದನ್ನೂ ಓದಿ: ಹಿಂದಿ ರಾಷ್ಟ್ರ ಭಾಷೆ : ಕರ್ನಾಟಕದಲ್ಲಿ ಅಜಯ್ ದೇವಗನ್ ಸಿನಿಮಾ ರಿಲೀಸ್ ಅಡ್ಡಿ : ಕರವೇಯಿಂದ ಪ್ರತಿಭಟನೆ

    ನಂತರ ಅವರು ಮೇ 3 ರಿಂದ 4 ಡೆನ್ಮಾರ್ಕ್‌ನ ಕೋಪನ್‌ಹೇಗನ್‌ಗೆ ಪ್ರಯಾಣಿಸಲಿದ್ದಾರೆ. ಭಾರತಕ್ಕೆ ಹಿಂತಿರುಗುವ ವೇಳೆ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಭೇಟಿ ಮಾಡಲಿದ್ದಾರೆ. ಇದು 2022ರಲ್ಲಿ ಪ್ರಧಾನಿಯವರ ಮೊದಲ ವಿದೇಶಿ ಪ್ರವಾಸವಾಗಿದೆ.

  • ರಾಷ್ಟ್ರಪತಿಯಲ್ಲ, ಪಿಎಂ ಆಗೋ ಕನಸಿದೆ: ಎಸ್‌ಪಿಗೆ ಮಾಯಾವತಿ ಟಾಂಗ್‌

    ರಾಷ್ಟ್ರಪತಿಯಲ್ಲ, ಪಿಎಂ ಆಗೋ ಕನಸಿದೆ: ಎಸ್‌ಪಿಗೆ ಮಾಯಾವತಿ ಟಾಂಗ್‌

    ಲಕ್ನೋ: ರಾಷ್ಟ್ರಪತಿಯಲ್ಲ, ದೇಶದ ಪ್ರಧಾನ ಮಂತ್ರಿಯಾಗುವ ಕನಸಿದೆ ಎನ್ನುವ ಮೂಲಕ ಸಮಾಜವಾದಿ ಪಕ್ಷಕ್ಕೆ ಬಹುಜನ ಸಮಾಜ ಪಕ್ಷದ ನಾಯಕಿ ಮಾಯಾವತಿ ಟಾಂಗ್‌ ಕೊಟ್ಟಿದ್ದಾರೆ.

    ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ರಾಷ್ಟ್ರಪತಿಯಾಗಲು ಬಯಸುತ್ತಿದ್ದೇನೆ ಎಂದು ಸಮಾಜವಾದಿ ಪಕ್ಷ (ಎಸ್‌ಪಿ) ವದಂತಿ ಹಬ್ಬಿಸುತ್ತಿದೆ. ಆದರೆ ರಾಷ್ಟ್ರಪತಿಯಲ್ಲ, ಉತ್ತರ ಪ್ರದೇಶದಲ್ಲಿ ಮತ್ತೆ ಸಿಎಂ ಆಗುವ ಇಲ್ಲವೇ ಪ್ರಧಾನಿಯಾಗುವ ಕನಸು ಹೊಂದಿದ್ದೇನೆ ಎಂದು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಪ್ರಧಾನಿಗೆ ನಾಚಿಕೆಯಾಗಬೇಕು: ಮುಖ್ಯಮಂತ್ರಿಗಳ ವಾಗ್ದಾಳಿ

    ಸಮಾಜವಾದಿ ಪಕ್ಷವು ನನ್ನನ್ನು ರಾಷ್ಟ್ರಪತಿಯಾಗಿಸುವ ಕನಸು ಬಿಡಬೇಕು. ನನಗೆ ನೆಮ್ಮದಿಯ ಜೀವನ ಬೇಡ ಬದಲಿಗೆ ಹೋರಾಟದ ಬದುಕು ಬೇಕು ಎಂದು ತಿಳಿಸಿದ್ದಾರೆ.

    ನಮ್ಮ ಅಧಿಕಾರಾವಧಿಯಲ್ಲಿ ನಿರ್ಮಿಸಲಾದ ಸ್ಮಾರಕಗಳನ್ನು ಎಸ್‌ಪಿ ಮತ್ತು ಬಿಜೆಪಿ ಎರಡೂ ಸರ್ಕಾರಗಳು ನಿರ್ಲಕ್ಷಿಸಿವೆ. ಈ ಬಗ್ಗೆ ರಾಜ್ಯ ಸರ್ಕಾರದ ಗಮನ ಸೆಳೆಯಲು ಮಿಶ್ರಾ ನೇತೃತ್ವದ ಬಿಎಸ್‌ಪಿ ನಿಯೋಗ ಯೋಗಿ ಅವರನ್ನು ಭೇಟಿ ಮಾಡಲು ತೆರಳಿತ್ತು ಎಂದು ಬಿಜೆಪಿ ಮತ್ತು ಬಿಎಸ್‌ಪಿ ಮೈತ್ರಿ ಆರೋಪಗಳನ್ನು ಅಲ್ಲಗಳೆದಿದ್ದಾರೆ. ಇದನ್ನೂ ಓದಿ: ಸೂರ್ಯನ ಕೆಂಗಣ್ಣು – ದೆಹಲಿಯಲ್ಲಿ ದಾಖಲೆ ಪ್ರಮಾಣದ ತಾಪಮಾನ ದಾಖಲು

    ಉತ್ತರ ಪ್ರದೇಶದಲ್ಲಿ ಬಿಜೆಪಿ ಗೆಲುವಿಗೆ ಸಮಾಜವಾದಿ ಪಕ್ಷವೇ ಹೊಣೆ. ಮುಸ್ಲಿಮರು ಮತ್ತು ಇತರರ ಮೇಲೆ ನಡೆಯುತ್ತಿರುವ ಎಲ್ಲಾ ದೌರ್ಜನ್ಯಗಳಿಗೆ ಎಸ್‌ಪಿಯೇ ಹೊಣೆ ಎಂದು ಆರೋಪಿಸಿದ್ದಾರೆ.

    ಈಚೆಗೆ ನಡೆದ ವಿಧಾನಸಭಾ ಚುನಾವಣೆಯ ವೇಳೆ ಬಿಎಸ್‌ಪಿ ತನ್ನ ಮತದಾರರನ್ನು ಬಿಜೆಪಿಗೆ ವರ್ಗಾಯಿಸಿದೆ. ಯುಪಿ ಚುನಾವಣೆಗೆ ಹಿಂದೂ-ಮುಸ್ಲಿಂ ಎಂದು ವಿಭಜಿಸಲು ಬಿಜೆಪಿ ಜೊತೆ ಕೈಜೋಡಿಸಿದೆ ಎಂದು ಎಂದು ಅಖಿಲೇಶ್ ಯಾದವ್ ಆರೋಪಿಸಿದ್ದರು. ಇದನ್ನೂ ಓದಿ: 10,900 ಅಕ್ರಮ ಧ್ವನಿವರ್ಧಕಗಳ ತೆರವು

  • ಪ್ರಧಾನಿ ಮೋದಿ ಕೈ ಸೇರಿದ ಅನುಪಮ್ ಖೇರ್ ತಾಯಿ ಕೊಟ್ಟ ರುದ್ರಾಕ್ಷಿ

    ಪ್ರಧಾನಿ ಮೋದಿ ಕೈ ಸೇರಿದ ಅನುಪಮ್ ಖೇರ್ ತಾಯಿ ಕೊಟ್ಟ ರುದ್ರಾಕ್ಷಿ

    ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ನಂತರ ನಾನಾ ಕಾರಣಗಳಿಂದಾಗಿ ಬಾಲಿವುಡ್ ನಟ ಅನುಪಮ್ ಖೇರ್ ಹೆಚ್ಚು ಸುದ್ದಿ ಆಗುತ್ತಿದ್ದಾರೆ. ಅದರಲ್ಲೂ ಅವರ ಆಧ್ಯಾತ್ಮಿಕ ಜೀವನದ ಬಗ್ಗೆ ಒಂದೊಂದೇ ಪುಟಗಳು ತೆರೆದುಕೊಳ್ಳುತ್ತಿವೆ. ಮೊನ್ನೆಯಷ್ಟೇ ಅನುಪಮ್ ಖೇರ್ ಮನೆಗೆ ಬಂದಿದ್ದ ಸ್ವಾಮಿಗಳು, ಅವರ ಮನೆಯಲ್ಲೇ ಪೂಜೆ ಸಲ್ಲಿಸಿ ಹೋಗಿದ್ದರು. ಇದನ್ನೂ ಓದಿ : ಬಾಲಿವುಡ್ ಬಾಕ್ಸ್ಆಫೀಸ್‌ನಲ್ಲಿ ಯಶ್ ಮೇನಿಯಾ: 300 ಕೋಟಿ ಬಾಚಿದ `ಕೆಜಿಎಫ್ 2′

    ಅಲ್ಲದೇ ಅನುಪಮ್ ಖೇರ್ ಅವರ ತಾಯಿ ಕೂಡ ಆಧ್ಯಾತ್ಮ ಜೀವ. ಶಿವನ ಆರಾಧಕರು. ಹಾಗಾಗಿ ಅವರು ವಿಶೇಷವಾದ ರುದ್ರಾಕ್ಷಿಯೊಂದನ್ನು ಖರೀದಿಸಿದ್ದಾರೆ. ಆ ರುದ್ರಾಕ್ಷಿ ಖರೀದಿಸಿದ್ದು ತಮ್ಮ ಕುಟುಂಬದ ಸದಸ್ಯರಿಗೆ ಕೊಡುವುದಕ್ಕೆ ಅಲ್ಲ, ಬದಲಾಗಿ ಮಗನ ಕೈಗೆ ಅದನ್ನು ಕೊಟ್ಟು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಲುಪಿಸಲು ವಿನಂತಿಸಿದ್ದಾರೆ. ಇದನ್ನೂ ಓದಿ:ಸೀಮಂತದ ಸಂಭ್ರಮದಲ್ಲಿ ನಟಿ ಸಂಜನಾ ಗಲ್ರಾನಿ

    ತಾಯಿಯ ಆಸೆಯಂತೆ ನಿನ್ನೆಯಷ್ಟೇ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿರುವ ಅನುಪಮ್ ಖೇರ್, ತಾಯಿ ಕೊಟ್ಟ ರುದ್ರಾಕ್ಷಿ ಮಾಲೆಯನ್ನು ಪ್ರಧಾನಿಗೆ ನೀಡಿದ್ದಾರೆ. ಭೇಟಿ ವೇಳೆ ‘ದೇಶ, ದೇಶವಾಸಿಗಳನ್ನು ರಕ್ಷಿಸುತ್ತಿರುವ ನಿಮ್ಮ ರಕ್ಷಣೆಗೆ ಈ ರುದ್ರಾಕ್ಷಿ ಮಾಲೆಯನ್ನು ನನ್ನ ತಾಯಿ ಕಳುಹಿಸಿದ್ದಾರೆ. ಇದು ನಿಮ್ಮನ್ನು ಕಾಪಾಡುತ್ತದೆ ಎನ್ನುವುದು ನನ್ನ ತಾಯಿಯ ಅಚಲವಾದ ನಂಬಿಕೆ. ನಿಮಗೆ ಒಳ್ಳೆದಾಗುತ್ತದೆ’ ಎಂದು ಹಾರೈಸಿ ರುದ್ರಾಕ್ಷಿ ಮಾಲೆಯನ್ನು ಮೋದಿ ಅವರಿಗೆ ನೀಡಿದ್ದಾರೆ. ಇದನ್ನೂ ಓದಿ: ಡಾ.ರಾಜ್ ಮೊಮ್ಮಗಳ `ಕಾಲಾಪತ್ಥರ್’ ಚಿತ್ರದ ಫಸ್ಟ್ ಲುಕ್ ರಿವೀಲ್: ಗಂಗಾ ಪಾತ್ರದಲ್ಲಿ ಧನ್ಯ ಮಿಂಚಿಂಗ್

    MODi

    ರುದ್ರಾಕ್ಷಿ ಮಾಲೆಯನ್ನು ಸ್ವೀಕರಿಸಿದ ಪ್ರಧಾನಿ ಮೋದಿ ಅವರು, ‘ಈ ರುದ್ರಾಕ್ಷಿ ಮೂಲಕ ಮಾತಾಜಿ ಅವರ ಆಶೀರ್ವಾದ ನನಗೆ ಸಿಕ್ಕಂತಾಗಿದೆ. ಈ ದೇಶದ ಜನರು ಹೀಗೆ ನನ್ನ ರಕ್ಷಣೆಗೆ ನಿಂತಿದ್ದು ದೇಶಕ್ಕಾಗಿ ಮತ್ತಷ್ಟು ಕೆಲಸ ಮಾಡಲು ಹುಮ್ಮಸ್ಸು ತಂದಿದೆ’ ಎಂದಿದ್ದಾರೆ ಮೋದಿ.

  • ನನ್ನ ಕೈಯಲ್ಲಿ ಭಾರತದ ಲಸಿಕೆಯಿದೆ: ಬ್ರಿಟನ್ ಪ್ರಧಾನಿ ಬೋರಿಸ್

    ನನ್ನ ಕೈಯಲ್ಲಿ ಭಾರತದ ಲಸಿಕೆಯಿದೆ: ಬ್ರಿಟನ್ ಪ್ರಧಾನಿ ಬೋರಿಸ್

    ನವದೆಹಲಿ: ಭಾರತದಲ್ಲಿ ಎರಡು ದಿನಗಳ ಪ್ರವಾಸ ಕೈಗೊಂಡಿರುವ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಂದು ಸುದೀರ್ಘ ಮಾತುಕತೆ ನಡೆಸಿದರು. ರಕ್ಷಣಾ ಕ್ಷೇತ್ರ, ವ್ಯಾಪಾರ ಹಾಗೂ ಸ್ವಚ್ಛ ಇಂಧನದಲ್ಲಿ ಸಹಕಾರ ವಿಸ್ತರಿಸುವ ನಿಟ್ಟಿನಲ್ಲಿ ಚರ್ಚಿಸಿದ್ದಾರೆ.

    ಇದೇ ವೇಳೆ ಮಾತನಾಡಿರುವ ಅವರು, ನನ್ನ ಕೈಯ್ಯಲ್ಲಿ ಭಾರತದ ಲಸಿಕೆಯಿದೆ. ಅದು ನನಗೆ ಒಳ್ಳೆಯದನ್ನು ಮಾಡಿದೆ. ನಾನು ಭಾರತಕ್ಕೆ ಧನ್ಯವಾದ ಹೇಳುತ್ತೇನೆ. ನನ್ನ ವಿಶೇಷ ಗೆಳಯ ಪ್ರಧಾನಿ ನರೇಂದ್ರಮೋದಿ ಅವರಿಗೂ ಧನ್ಯವಾದ ಸಲ್ಲಿಸುತ್ತೇನೆ ಎಂದೂ ಹೇಳಿದ್ದಾರೆ. ಇದನ್ನೂ ಓದಿ: ಹೊಸ ಆತಂಕ ಹುಟ್ಟಿಸಿದ ಓಮಿಕ್ರಾನ್ BA.2.12 ತಳಿ

    MODI MET BORIS

    ನಾವು ರಕ್ಷಣಾ ಪಾಲುದಾರಿಕೆಯೊಂದಿಗೆ ಆರೋಗ್ಯ ಪಾಲುದಾರಿಕೆಯ ಬಗ್ಗೆಯೂ ಚರ್ಚಿಸಿದ್ದೇವೆ. ಉದಾಹರಣೆಗೆ ಅಸ್ಟ್ರಾಜೆನಿಕಾ ಸೀರಂ ಸಂಸ್ಥೆಯು ಕೋವಿಡ್ ವಿರುದ್ಧ ಹೋರಾಡಲು ಶತಕೋಟಿ ಜನರಿಗೆ ಲಸಿಕೆ ನೀಡಿದೆ. ಅಲ್ಲದೆ, ಅದು ಭಾರತಕ್ಕೂ ಸಹಾಯ ಮಾಡಿದೆ. ಅದಕ್ಕಾಗಿ ವಿಶ್ವದ ಅತಿದೊಡ್ಡ ಲಸಿಕಾ ತಯಾರಕರಾದ ಸೀರಂ ಇನ್‌ಸ್ಟಿಟ್ಯೂಟ್ ಕೋವಿಡ್ ಲಸಿಕೆಯನ್ನು ಅಭಿವೃದ್ಧಿಪಡಿಸಲು ಸ್ವೀಡಿಷ್ ಅಸ್ಟ್ರಾಜೆನಿಕ ಸಂಸ್ಥೆಯೊಂದಿಗೆ ಪಾಲುದಾರಿಕೆ ಹೊಂದಿವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಧರ್ಮ ಸಂಸತ್‍ನಲ್ಲಿ ದ್ವೇಷ ಭಾಷಣ – ದೆಹಲಿ ಪೊಲೀಸ್ ಸಲ್ಲಿಸಿದ್ದ ಅಫಿಡವಿಟ್‍ಗೆ ಸುಪ್ರೀಂ ಅಸಮಾಧಾನ

    PM MEET

    ಅಲ್ಲದೆ, ದೇಶೀಯವಾಗಿ ಯುದ್ಧ ವಿಮಾನಗಳ ತಯಾರಿಕೆ ಸಾಮಗ್ರಿಗಳ ಕ್ಷಿಪ್ರ ಪೂರೈಕೆ ಸೇರಿದಂತೆ ರಕ್ಷಣಾ ವ್ಯವಸ್ಥೆಯಲ್ಲಿ ಭಾರತಕ್ಕೆ ಸಹಕಾರ ನೀಡಲು ಬ್ರಿಟನ್ ಮುಂದಾಗಿದೆ. ಪ್ರಸ್ತುತ ಭಾರತಕ್ಕೆ ಅಗತ್ಯವಿರುವ ರಕ್ಷಣಾ ಸಾಮಗ್ರಿಗಳ ಪೈಕಿ ಅರ್ಧಕ್ಕಿಂತ ಹೆಚ್ಚು ರಷ್ಯಾದಿಂದ ಪೂರೈಕೆಯಾಗುತ್ತಿದೆ. ಹಿಂದೂ ಮಹಾಸಾಗರದಲ್ಲಿ ಅಪಾಯಗಳನ್ನು ಎದುರಿಸಲು ಅಗತ್ಯವಿರುವ ಹೊಸ ತಂತ್ರಜ್ಞಾನ ಹಾಗೂ ಯುದ್ಧ ವಿಮಾನಗಳ ಅಭಿವೃದ್ಧಿಯಲ್ಲಿ ಪೂರ್ಣ ಸಹಕಾರ ನೀಡುವುದಾಗಿ ಬ್ರಿಟಿಷ್ ಹೈ ಕಮಿಷನ್ ಹೇಳಿದೆ ಎನ್ನಲಾಗಿದೆ.

    ಕ್ಷಿಪ್ರಗತಿಯಲ್ಲಿ ರಕ್ಷಣಾ ಸಾಮಗ್ರಿಗಳ ಸಾಗಣೆಗೆ ಅನುವಾಗುವ ನಿಟ್ಟಿನಲ್ಲಿ ಭಾರತಕ್ಕೆ ಬ್ರಿಟನ್ ಮುಕ್ತ ಸಾರ್ವತ್ರಿಕ ರಫ್ತು ಪರವಾನಗಿ (OGEL) ಒದಗಿಸುವುದಾಗಿ ತಿಳಿಸಿದೆ. ಇದರಿಂದಾಗಿ ರಕ್ಷಣಾ ಸಾಮಗ್ರಿಗಳ ಪೂರೈಕೆ ಅವಧಿ ಕಡಿತಗೊಳ್ಳಲಿದೆ. ಇದನ್ನೂ ಓದಿ: ಮೇವು ಹಗರಣ – ಲಾಲೂ ಪ್ರಸಾದ್‌ ಯಾದವ್‌ಗೆ ಜಾಮೀನು

    ‘ಹವಾಮಾನ ಬದಲಾವಣೆಯಿಂದ ಹಿಡಿದು ಇಂಧನ, ಭದ್ರತೆ ಹಾಗೂ ರಕ್ಷಣಾ ವಲಯಗಳಲ್ಲಿ ನಮ್ಮ ಪಾಲುದಾರಿಗೆ ಉಭಯ ರಾಷ್ಟ್ರಗಳ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಪ್ರಮುಖವಾಗಿದೆ. ಗೆಳೆಯ ನಿಮ್ಮನ್ನು ಭಾರತದಲ್ಲಿ ಕಂಡು ಪುಳಕಿತನಾಗಿರುವೆ…’ ಎಂದು ಪ್ರಧಾನಿ ಮೋದಿ ಅವರು ಬೋರಿಸ್ ಅವರನ್ನು ಭೇಟಿಯಾದ ಚಿತ್ರದೊಂದಿ ಟ್ವೀಟ್ ಮಾಡಿದ್ದಾರೆ.

  • ‘ನಾನು ಪ್ರಧಾನಮಂತ್ರಿಗಳ ಖಾಸಗಿ ಕಾರ್ಯದರ್ಶಿ’ ಎಂದವನ ವಿರುದ್ಧ ದಾಖಲಾಯ್ತು ಎಫ್‍ಐಆರ್

    ‘ನಾನು ಪ್ರಧಾನಮಂತ್ರಿಗಳ ಖಾಸಗಿ ಕಾರ್ಯದರ್ಶಿ’ ಎಂದವನ ವಿರುದ್ಧ ದಾಖಲಾಯ್ತು ಎಫ್‍ಐಆರ್

    ನವದೆಹಲಿ: ನಾನು ಪ್ರಧಾನಮಂತ್ರಿಗಳ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದೇನೆ, ನರೇಂದ್ರ ಮೋದಿ ಅವರ ಖಾಸಗಿ ಕಾರ್ಯದರ್ಶಿ ಎಂದು ಹೇಳಿಕೊಂಡು ಜನರ ವಂಚನೆಗೆ ಇಳಿದಿರುವ ಅನಾಮಧೇಯ ವ್ಯಕ್ತಿಯ ವಿರುದ್ಧ ದೆಹಲಿಯ ಸೈಬರ್ ಸೆಲ್ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. ಈ ಬಗ್ಗೆ ತನಿಖೆ ಆರಂಭಿಸಿರುವ ದೆಹಲಿ ಪೊಲೀಸರು ಅನಾಮಧೇಯ ವ್ಯಕ್ತಿಯ ಹುಡುಕಾಟದಲ್ಲಿದ್ದಾರೆ.

    ಪ್ರಧಾನಮಂತ್ರಿಗಳಿಗಾಗಿ ವಿಶೇಷ ಟೇಬಲ್‍ನ ಅವಶ್ಯಕತೆ ಇದೆ. ಪ್ರಧಾನಮಂತ್ರಿಗಳ ಶಾಶ್ವತ ಬಳಕೆಗೆ ಒಂದು ವಿಶೇಷ ಟೇಬಲ್ ಮಾಡಿಕೊಡುವಂತೆ ಕುನಾಲ್ ಎಂಬುವರಿಗೆ ಇಮೇಲ್ ಬಂದಿದೆ. ವಿವೇಕ್ ಕುಮಾರ್ ಎಂಬುವರಿಂದ ಈ ಇಮೇಲ್ ಬಂದಿದ್ದು ಇದರಲ್ಲಿ ತಾವು ವಿಶೇಷ ಖಾಸಗಿ ಕಾರ್ಯದರ್ಶಿ ಎಂದು ಪರಿಚಯಿಸಿಕೊಂಡಿದ್ದಾರೆ. ಅಲ್ಲದೇ ಈ ಬಗ್ಗೆ ಚರ್ಚಿಸುವಂತೆ ಮೂಬೈಲ್ ನಂಬರ್‍ವೊಂದನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಮದ್ಯ ಸೇವಿಸಿ ಗುರುದ್ವಾರ ಪ್ರವೇಶಿಸಿದ ಆರೋಪ- ಪಂಜಾಬ್ ಸಿಎಂ ವಿರುದ್ಧ ದೂರು

    ಇಮೇಲ್ ಸ್ವೀಕರಿಸುತ್ತಿದ್ದಂತೆ ಕುನಾಲ್, ಇಮೇಲ್ ಸ್ಕ್ರೀನ್ ಶಾರ್ಟ್ ಸಮೇತ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಈ ಮಾಹಿತಿಯನ್ನು ಆಧರಿಸಿ ದೆಹಲಿ ಸೈಬರ್ ಸೆಲ್ ಪೊಲೀಸರು ದೂರು ದಾಖಲಿಸಿಕೊಂಡಿದ್ದು ವ್ಯಾಪಾರಿಯನ್ನು ಸಂಪರ್ಕ ಮಾಡಿದ್ದಾರೆ. ಘಟನೆಯ ಮಾಹಿತಿ ಪಡೆದುಕೊಳ್ಳುತ್ತಿದ್ದು ಇಮೇಲ್ ಮಾಡಿದ ವ್ಯಕ್ತಿಯ ಹುಡುಕಾಟದಲ್ಲಿದ್ದಾರೆ. ಇದನ್ನೂ ಓದಿ: ಪಂಚರಾಜ್ಯಗಳ ಚುನಾವಣೆ ಸೋಲಿನ ಬಳಿಕ ಎಚ್ಚೆತ್ತ ಕಾಂಗ್ರೆಸ್ – ಗುಜರಾತ್ ಎಲೆಕ್ಷನ್ ಮೇಲೆ ಕಣ್ಣು

    ಘಟನೆಯ ಬಗ್ಗೆ ದೆಹಲಿ ಪೊಲೀಸ್ ಕಮಿಷನ್ ರಾಜೇಶ್ ಅಸ್ತಾನ್ ತಮ್ಮ ಟ್ವಿಟ್ಟರ್‍ನಲ್ಲಿ ಮಾಹಿತಿ ಹಂಚಿಕೊಂಡಿದ್ದು ಪ್ರಧಾನಮಂತ್ರಿ ಹಾಗೂ ಗೃಹ ಇಲಾಖೆಗೆ ಟ್ಯಾಗ್ ಮಾಡಿದ್ದು ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ತನಿಖೆ ಆರಂಭಗೊಂಡಿದ್ದು ಅನಾಮಧೇಯ ವ್ಯಕ್ತಿಯ ಹುಡುಕಾಟದಲ್ಲಿ ಪೊಲೀಸರು ಬ್ಯುಸಿಯಾಗಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಪ್ರಧಾನಿ ಹತ್ಯೆ ಮಾಡುವುದಾಗಿ ಎನ್‍ಐಎ ಅಧಿಕಾರಿಗಳಿಗೆ ಇಮೇಲ್ ಒಂದು ರವಾನೆಯಾಗಿತ್ತು.