Tag: prime minister

  • ಪ್ರಧಾನಿ ಭೇಟಿ ಮಾಡಿ ಸಂಭ್ರಮಿಸಿದ ಗ್ರ್ಯಾಮಿ ಅವಾರ್ಡ್ ವಿಜೇತ ರಿಕಿ  ಕೇಜ್

    ಪ್ರಧಾನಿ ಭೇಟಿ ಮಾಡಿ ಸಂಭ್ರಮಿಸಿದ ಗ್ರ್ಯಾಮಿ ಅವಾರ್ಡ್ ವಿಜೇತ ರಿಕಿ ಕೇಜ್

    ಹೆಮ್ಮೆಯ ಕನ್ನಡಿಗ, ಭಾರತೀಯ ಸಂಗೀತ ಸಂಯೋಜಕ ರಿಕಿ  ಕೇಜ್ ಮೊನ್ನೆಯಷ್ಟೇ ಎರಡನೇ ಬಾರಿಗೆ ಗ್ರ್ಯಾಮಿ ಆವಾರ್ಡ್ ಪಡೆದುಕೊಂಡಿದ್ದಾರೆ. ಎಮ್.ಜಿ.ಎಂ ಗ್ರ್ಯಾಂಡ್ ಗಾರ್ಡನ್ ಅರೇನಾ ಲಾಸ್ ವೇಗಾಸ್ ನಲ್ಲಿ ನಡೆದ ಪ್ರತಿಷ್ಠಿತ 2022 ರ ಗ್ರ್ಯಾಮಿ ಅವಾರ್ಡ್ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿದ್ದ ರಿಕಿ  ಕೇಜ್ ನಂತರ ಭಾರತಕ್ಕೆ ಆಗಮಿಸಿದ್ದರು. ಇದೀಗ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ಸಂಭ್ರಮವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ : ತಾಳಿಕಟ್ಟಿ ಹೆಂಡತಿಯನ್ನು ಎತ್ತಿಕೊಂಡ ರಣಬೀರ್ ಕಪೂರ್

    ರಿಕಿ ಕೇಜ್ ಅವರಿಗೆ ಮೊದಲ ಬಾರಿಗೆ ಗ್ರ್ಯಾಮಿ ಪ್ರಶಸ್ತಿ ಬಂದಾಗ ಪ್ರಧಾನಿ ನರೇಂದ್ರ ಮೋದಿ ಅವರು ರಿಕಿಗೆ ಶುಭಾಶಯ ಕೋರಿದ್ದರು. ಎರಡನೇ ಬಾರಿಯೂ ಟ್ವಿಟರ್ ಮೂಲಕ ವಿಶ್ ಮಾಡಿದ್ದರು. ಹೀಗಾಗಿ ಮೋದಿ ಅವರನ್ನು ರಿಕಿ ಭೇಟಿ ಮಾಡಿ, ಗ್ರ್ಯಾಮಿ ಅವಾರ್ಡ್ ಅನ್ನು ತೋರಿಸಿದ್ದಾರೆ.

     

    ರಿಕಿ  ಭೇಟಿ ನಂತರ ಪ್ರಧಾನಿಗಳು ಟ್ವಿಟ್ ಮಾಡಿದ್ದು’ಸಂಗೀತದ ಬಗೆಗಿನ ನಿಮ್ಮ ಒಲವು ಮತ್ತು ಬಲವು ಈ ಪ್ರತಿಷ್ಠಿತ ಪ್ರಶಸ್ತಿಯಿಂದಾಗಿ ಮತ್ತಷ್ಟು ಬಲಗೊಳ್ಳಲಿ. ನಿಮ್ಮನ್ನು ಭೇಟಿಯಾಗಿದ್ದು ಖುಷಿ ಆಯಿತು. ನಿಮ್ಮ ಮುಂದಿನ ಎಲ್ಲ ಕಾರ್ಯಗಳಿಗೂ ಯಶಸ್ಸು ದೊರೆಯಲಿ’ ಎಂದು ಟ್ವಿಟ್ ಮೂಲಕ ಹಾರೈಸಿದ್ದಾರೆ. ಇದನ್ನೂ ಓದಿ: ‘BOSS’ ಪಟ್ಟ ಅಲಂಕರಿಸಿದ ಯಶ್ : ಟ್ವಿಟರ್ ಟ್ರೆಂಡಿಂಗ್ ನಲ್ಲಿ #YASHBOSS

    ಪ್ರತಿಯಾಗಿ ರಿಕಿ ಕೂಡ ಪ್ರಧಾನಿಗಳಿಗೆ ಧನ್ಯವಾದಗಳನ್ನು ಹೇಳಿದ್ದಾರೆ. ‘ಮೊದಲ ಬಾರಿಗೆ ನನಗೆ ಗ್ರ್ಯಾಮಿ ಅವಾರ್ಡ್ ಬಂದಾಗಲೂ ನೀವು ನನಗೆ ಹಾರೈಸಿದ್ದೀರಿ. ನಾನು ಆಗ ನಿಮ್ಮನ್ನು ಭೇಟಿ ಕೂಡ ಮಾಡಿದ್ದೆ. ಏಳು ವರ್ಷಗಳ ಹಿಂದಿನ ಭೇಟಿಯನ್ನು ನಾನು ಯಾವತ್ತಿಗೂ ಮರೆಯುವುದಿಲ್ಲ. ನಾನು ಈ ಪ್ರಶಸ್ತಿಯನ್ನು ಆಜಾದಿ ಕಾ ಅಮೃತ ಮಹೋತ್ಸವಕ್ಕೆ ಅರ್ಪಿಸುವೆ. ಭಾರತಕ್ಕಾಗಿ ಎರಡನೇ ಗ್ರ್ಯಾಮಿ ಅವಾರ್ಡ್ ಬಂದಾಗಲೂ ನೀವು ನನಗೆ ಹಾರೈಸಿದ್ದನ್ನು ಮರೆಯುವುದಿಲ್ಲ’ ಎಂದು ರಿಕಿ ಟ್ವೀಟ್ ಮಾಡಿದ್ದಾರೆ.

    ಲಹರಿ ಸಂಸ್ಥೆಯ ಮೂಲಕ ಹೊರ ಬಂದ ‘ಡಿವೈನ್ ಟೈಡ್ಸ್’ ಆಲ್ಬಂಗೆ ಈ ಬಾರಿ ರಿಕಿ ಗ್ರ್ಯಾಮಿ ಅವಾರ್ಡ್ ಪಡೆದಿದ್ದಾರೆ. ಏಳು ವರ್ಷಗಳ ನಂತರ ಮತ್ತೊಂದು ಗ್ರ್ಯಾಮಿ ಕೈಯಲ್ಲಿ ಹಿಡಿದುಕೊಂಡು ಸಂಭ್ರಮಿಸಿದ್ದಾರೆ.

  • ಎಲ್ಲಾ ಪ್ರಧಾನಿಗಳ ಕಥೆ ಹೇಳುವ ಮ್ಯೂಸಿಯಂ ಉದ್ಘಾಟಿಸಲಿದ್ದಾರೆ ಮೋದಿ – ವಿಶೇಷತೆ ಏನು?

    ಎಲ್ಲಾ ಪ್ರಧಾನಿಗಳ ಕಥೆ ಹೇಳುವ ಮ್ಯೂಸಿಯಂ ಉದ್ಘಾಟಿಸಲಿದ್ದಾರೆ ಮೋದಿ – ವಿಶೇಷತೆ ಏನು?

    ನವದೆಹಲಿ: ಸ್ವಾತಂತ್ರ್ಯದ ಬಳಿಕ ದೇಶದಲ್ಲಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಪ್ರತಿಯೊಬ್ಬರ ಕಥೆ ಹೇಳುವ ವಸ್ತುಸಂಗ್ರಹಾಯಲಯವನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ಉದ್ಘಾಟಿಸಲಿದ್ದಾರೆ.

    ಆಜಾದಿ ಕಾ ಅಮೃತ್ ಮಹೋತ್ಸವ್ ಆಚರಣೆಯ ಅಂಗವಾಗಿ ಉದ್ಘಾಟನೆಯಾಗಲಿರುವ ವಸ್ತುಸಂಗ್ರಹಾಲಯ ಸ್ವಾತಂತ್ರ್ಯದ ಬಳಿಕದ ಭಾರತದ ಕಥೆ, ಪ್ರಧಾನ ಮಂತ್ರಿಗಳ ಜೀವನ ಹಾಗೂ ಅವರು ನೀಡಿರುವ ಕೊಡುಗೆಗಳನ್ನು ತಿಳಿಸಲಿದೆ.

    ನವದೆಹಲಿಯ ತೀನ್ ಮೂರ್ತಿ ಕಾಂಪ್ಲೆಕ್ಸ್‌ನಲ್ಲಿರುವ ಈ ವಸ್ತುಸಂಗ್ರಹಾಲಯ ದೇಶದ ಎಲ್ಲಾ 14 ಪ್ರಧಾನ ಮಂತ್ರಿಗಳ ಬಗ್ಗೆ ಜನರಿಗೆ ತಿಳಿಸಲು ಅಭಿವೃದ್ಧಿಪಡಿಸಲಾಗಿದೆ ಹಾಗೂ ಭವಿಷ್ಯದಲ್ಲಿ ನಾಯಕರಾಗುವವರಿಗೂ ಇಲ್ಲಿ ಮಾಹಿತಿಗಳನ್ನು ಸಂಗ್ರಹಿಸಲು ಸಾಕಷ್ಟು ಸ್ಥಳಾವಕಾಶವಿದೆ ಎಂದು ಸರ್ಕಾರ ಹೇಳಿದೆ. ಇದನ್ನೂ ಓದಿ: ಬಿರ್ಭೊಮ್ ಹಿಂಸಾಚಾರ – ಪ್ರತಿಭಟನೆ ವೇಳೆ ಸುವೆಂದು ಅಧಿಕಾರಿಗೆ ಗಾಯ

    ರಾಷ್ಟ್ರ ನಿರ್ಮಾಣಕ್ಕಾಗಿ ಶ್ರಮವಹಿಸಿದ, ದೇಶಕ್ಕೆ ಕೊಡುಗೆ ನೀಡಿದ, ಸ್ವಾತಂತ್ರ್ಯ ನಂತರದ ಪ್ರತಿಯೊಬ್ಬ ಪ್ರಧಾನ ಮಂತ್ರಿಗಳ ಅಧಿಕಾರ ಅಥವಾ ಸಿದ್ಧಾಂತವನ್ನು ಲೆಕ್ಕಿಸದೇ ಈ ವಸ್ತು ಸಂಗ್ರಹಾಲಯದ ನಿರ್ಮಾಣ ಮಾಡಲಾಗಿದೆ. ಇದು ಯುವ ಪೀಳಿಗೆಯನ್ನು ಪ್ರೇರೇಪಿಸುವ ಗುರಿ ಹೊಂದಿದೆ ಎಂದು ಮೋದಿ ತಿಳಿಸಿದ್ದಾರೆ.

    ಮ್ಯೂಸಿಯಂ ವಿಶೇಷತೆ:
    ಹೊಲೊಗ್ರಾಮ್‌ಗಳು, ವರ್ಚುವಲ್ ರಿಯಾಲಿಟಿ, ಮಲ್ಟಿ-ಟಚ್, ಮಲ್ಟಿಮೀಡಿಯಾ, ಸಂವಾದಾತ್ಮಕ ಕಿಯೋಸ್ಕ್‌ಗಳು, ಕಂಪ್ಯೂಟರೀಕೃತ ಚಲನ ಶಿಲ್ಪಗಳು, ಸ್ಮಾರ್ಟ್ಫೋನ್ ಅಪ್ಲಿಕೇಶನ್‌ಗಳು, ಸಂವಾದಾತ್ಮಕ ಪರದೆಗಳು ಹೀಗೆ ಮೊದಲಾದ ಫೀಚರ್‌ಗಳನ್ನು ಅಳವಡಿಸಲಾಗಿದೆ.

    ಮ್ಯೂಸಿಯಂನಲ್ಲಿ ಒಟ್ಟು 43 ಗ್ಯಾಲರಿಗಳಿವೆ. ಇದು ಸ್ವಾತಂತ್ರ‍್ಯ ಹೋರಾಟ ಮತ್ತು ಸಂವಿಧಾನ ರಚನೆ ಬಗೆಗಿನ ಪ್ರದರ್ಶನ ಆರಂಭಗೊಂಡು, ಪ್ರಧಾನ ಮಂತ್ರಿಗಳು ರಾಷ್ಟ್ರವನ್ನು ಹೇಗೆ ಹೊಸದಾಗಿ ನಿರ್ಮಾಣ ಮಾಡಿದರು ಹಾಗೂ ದೇಶದ ಸರ್ವತೋಮುಖ ಪ್ರಗತಿಯ ಕಥೆಯನ್ನು ಮ್ಯೂಸಿಯಂ ಹೇಳುತ್ತದೆ. ಇದನ್ನೂ ಓದಿ: ಗಿಫ್ಟ್‌ ಆಗಿ ಬಂದ ನೆಕ್ಲೆಸ್‌ನ್ನು 18 ಕೋಟಿಗೆ ಮಾರಿದ್ದಕ್ಕೆ ಇಮ್ರಾನ್‌ ಖಾನ್‌ ವಿರುದ್ಧ ತನಿಖೆ

    ಪಿಎಂ ಮ್ಯೂಸಿಯಂಗೆ ವಿರೋಧ:
    2018ರಲ್ಲಿ ನರೇಂದ್ರ ಮೋದಿ ಮ್ಯೂಸಿಯಂ ನಿರ್ಮಾಣದ ಬಗ್ಗೆ ಘೋಷಿಸಿದಾಗ ಇದು ಜವಾಹರಲಾಲ್ ನೆಹರು ಅವರ ಪರಂಪರೆಯನ್ನು ಟೀಕಿಸುವ ಪ್ರಯತ್ನವಾಗಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು.

  • ಪಾಕಿಸ್ತಾನ ಪ್ರಧಾನಿಯಾಗಿ ಶೆಹಬಾಜ್ ಷರೀಫ್ ಆಯ್ಕೆ

    ಪಾಕಿಸ್ತಾನ ಪ್ರಧಾನಿಯಾಗಿ ಶೆಹಬಾಜ್ ಷರೀಫ್ ಆಯ್ಕೆ

    ಇಸ್ಲಮಾಬಾದ್: ಪಾಕಿಸ್ತಾನದ ನೂತನ ಪ್ರಧಾನ ಮಂತ್ರಿಯಾಗಿ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಸಹೋದರ, ಶೆಹಬಾಜ್ ಷರೀಫ್ ಆಯ್ಕೆಯಾಗಿದ್ದಾರೆ.

    ಸದನದ ನೂತನ ನಾಯಕರ ಆಯ್ಕೆ ಪ್ರಕ್ರಿಯೆ ಭಾನುವಾರ ಆರಂಭವಾಗಿತ್ತು. ರವಿವಾರದ ಪ್ರಮುಖ ಬೆಳವಣಿಗೆಯಾಗಿ ಬಿಲಾವಲ್ ಭುಟ್ಟೋ ನೇತೃತ್ವದ ಪಾಕಿಸ್ತಾನ ಪೀಪಲ್ಸ್ ಪಾರ್ಟಿ ಮತ್ತು ವಿಪಕ್ಷಗಳ ಇತರ ಮುಖಂಡರೆಲ್ಲ ಸೇರಿ ಶೆಹಬಾಜ್ ಷರೀಫ್ ಅವರನ್ನು ಮೈತ್ರಿಕೂಟದ ಮುಖಂಡರನ್ನಾಗಿ ಆಯ್ಕೆ ಮಾಡಿದ್ದಾರೆ. ಇದನ್ನೂ ಓದಿ: ಬೆಳಗಾವಿ ಬಿಜೆಪಿಯಲ್ಲಿನ ಭಿನ್ನಮತ ಶಮನಕ್ಕೆ ಮುಂದಾದ ಅರುಣ್ ಸಿಂಗ್, ಬಿಎಸ್‍ವೈ

    ಶನಿವಾರ ರಾತ್ರಿ ಪಾಕಿಸ್ತಾನದ ನ್ಯಾಶನಲ್ ಅಸೆಂಬ್ಲಿಯಲ್ಲಿ ನಡೆದ ಅವಿಶ್ವಾಸ ಮತ ಮಂಡನೆ ಮತದಾನದಲ್ಲಿ ಇಮ್ರಾನ್ ಖಾನ್ ಸೋಲನುಭವಿಸಿದ್ದರು. ಇದನ್ನೂ ಓದಿ: ಲವ್ ಜಿಹಾದ್ ಬದಲಿಗೆ `ಲವ್ ಕೇಸರಿ’ ಟ್ರೆಂಡ್ ಸೃಷ್ಟಿಸಲು ಶ್ರೀರಾಮಸೇನೆ ಕರೆ

    ಇಮ್ರಾನ್ ಖಾನ್ ಹೇಳಿದ್ದೇನು?: 16 ಸಾವಿರ ಕೋಟಿ ರೂಪಾಯಿ ಮತ್ತು 8 ಸಾವಿರ ಕೋಟಿ ರೂಪಾಯಿಯ ಭ್ರಷ್ಟಾಚಾರದ ಕೇಸ್ ಹೊಂದಿರುವ ವ್ಯಕ್ತಿ ಆ ವ್ಯಕ್ತಿಯನ್ನು ಪ್ರಧಾನಿಯನ್ನಾಗಿ ಆಯ್ಕೆ ಮಾಡಿದ್ದಾರೆ. ದೇಶಕ್ಕೆ ಅದಕ್ಕಿಂತ ದೊಡ್ಡ ಅವಮಾನ ಇರಲಾರದು. ರಾಷ್ಟ್ರೀಯ ಅಸೆಂಬ್ಲಿಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಇಮ್ರಾನ್ ಖಾನ್ ಟ್ವಿಟ್ಟರ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.

    ಶಹಬಾಜ್ ಷರೀಫ್ ಯಾರು?: ಮೂರು ಬಾರಿ ಪ್ರಧಾನಿಯಾಗಿದ್ದ ನವಾಜ್ ಷರೀಫ್ ಅವರ ಸಹೋದರನಾಗಿರುವ ಶೆಹಬಾಜ್ ಷರೀಫ್, ದೇಶದ ಹೊರಗೆ ಅಷ್ಟೊಂದು ಪ್ರಸಿದ್ದರಲ್ಲದಿದ್ದರೂ, ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿಯಾಗಿದ್ದ ಪಾಕಿಸ್ತಾನದಲ್ಲಿ ಉತ್ತಮ ಹೆಸರು ಗಳಿಸಿದ್ದಾರೆ. 1999 ರಲ್ಲಿ ಪಾಕಿಸ್ತಾನದಲ್ಲಿ ಮಿಲಿಟರಿ ದಂಗೆಯ ನಂತರ ಶಹಬಾಜ್ ಜೈಲಿನಲ್ಲಿದ್ದರು, ಬಳಿಕ ಸೌದಿ ಅರೇಬಿಯಾಕ್ಕೆ ಗಡಿಪಾರಾಗಿದ್ದರು. 2007 ರಲ್ಲಿ ದೇಶಕ್ಕೆ ಮರಳಿದ ಅವರು, ಪನಾಮ ಪೇಪರ್ಸ್ ಲೀಕ್ ಸಂಬಂಧಿಸಿದ ಆಸ್ತಿಯನ್ನು ಮರೆಮಾಚುವ ಆರೋಪದ ಮೇಲೆ 2017 ರಲ್ಲಿ ನವಾಜ್ ಷರೀಫ್ ತಪ್ಪಿತಸ್ಥರೆಂದು ಸಾಬೀತಾದ ನಂತರ ರಾಷ್ಟ್ರೀಯ ರಂಗಕ್ಕೆ ಪ್ರವೇಶಿಸಿದರು. ನವಾಜ್ ಷರೀಫ್‍ಗಿಂತ ಭಿನ್ನವಾಗಿ, ಶಹಬಾಜ್ ಅವರು ಪಾಕಿಸ್ಥಾನದಲ್ಲಿ ಸಾಂಪ್ರದಾಯಿಕವಾಗಿ ವಿದೇಶಿ ಮತ್ತು ರಕ್ಷಣಾ ನೀತಿಯನ್ನು ನಿಯಂತ್ರಿಸುವ ಪಾಕಿಸ್ತಾನದ ಮಿಲಿಟರಿಯೊಂದಿಗೆ ಸೌಹಾರ್ದಯುತ ಸಂಬಂಧವನ್ನು ಹೊಂದಿದ್ದಾರೆ ಎಂದು ವಿಶ್ಲೇಷಕರು ಹೇಳುತ್ತಾರೆ.

  • ಮುಸ್ಲಿಮನೊಬ್ಬ ಪ್ರಧಾನಿಯಾದರೆ ಶೇ.50ರಷ್ಟು ಹಿಂದೂಗಳು ಮತಾಂತರಗೊಳ್ಳುತ್ತಾರೆ: ಯತಿ ನರಸಿಂಹಾನಂದ್

    ಮುಸ್ಲಿಮನೊಬ್ಬ ಪ್ರಧಾನಿಯಾದರೆ ಶೇ.50ರಷ್ಟು ಹಿಂದೂಗಳು ಮತಾಂತರಗೊಳ್ಳುತ್ತಾರೆ: ಯತಿ ನರಸಿಂಹಾನಂದ್

    ನವದೆಹಲಿ: ಒಬ್ಬ ಮುಸಲ್ಮಾನ ಭಾರತದ ಪ್ರಧಾನಿಯಾದರೆ ಶೇಕಡಾ 50 ರಷ್ಟು ಹಿಂದೂಗಳು ಮತಾಂತರಗೊಳ್ಳುತ್ತಾರೆ, ಶೇಕಡಾ 40 ರಷ್ಟು ಜನರನ್ನು ಕೊಲ್ಲಲಾಗುತ್ತದೆ ಮತ್ತು ಶೇಕಡಾ 10ರಷ್ಟು ಜನ ದೇಶಭ್ರಷ್ಟರಾಗುತ್ತಾರೆ ಎಂದು ಧಾರ್ಮಿಕ ಮುಖಂಡ ಯತಿ ನರಸಿಂಗಾನಂದ್ ಹೇಳಿದ್ದಾರೆ.

    ಭಾನುವಾರ ದೆಹಲಿಯಲ್ಲಿ ನಡೆದ ಹಿಂದೂ ಮಹಾಪಂಚಾಯತ್ ಅನ್ನು ಉದ್ದೇಶಿಸಿ ಮಾತನಾಡಿವ ವೇಳೆ ಈ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು. ಇದೀಗ ಯತಿ ನರಸಿಂಗಾನಂದ್ ಅವರ ವಿರುದ್ಧ ದೆಹಲಿ ಪೊಲೀಸರು ಸೆಕ್ಷನ್ 153ಂರ ಅಡಿಯಲ್ಲಿ [ಧರ್ಮ, ಜನಾಂಗ, ಜನ್ಮ ಸ್ಥಳ, ನಿವಾಸ, ಭಾಷೆಯ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು] ಮತ್ತು ಸೆಕ್ಷನ್ 188ರ ಅಡಿಯಲ್ಲಿ ಎಫ್‍ಐಆರ್ ದಾಖಲಿಸಿದ್ದಾರೆ. ಇದನ್ನೂ ಓದಿ:  ಮೈಕ್ ತೆಗೆಸದಿದ್ದರೆ, ನಾವೂ ಬೆಳಗ್ಗೆ 5ಕ್ಕೆ ಮಂದಿರಗಳಲ್ಲಿ ಈಶ್ವರನ ಭಜನೆ, ಓಂಕಾರ ಹಾಕಿಸುತ್ತೇವೆ: ಮುತಾಲಿಕ್

    ಇದಕ್ಕೂ ಮುನ್ನ 2021ರ ಡಿಸೆಂಬರ್‌ನಲ್ಲಿ ಹರಿದ್ವಾರದಲ್ಲಿ ನಡೆದ ಧರ್ಮ ಸಂಸದ್‍ನಲ್ಲಿ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ್ದಕ್ಕಾಗಿ ಯತಿ ನರಸಿಂಹಾನಂದ ಅವರನ್ನು ಬಂಧಿಸಲಾಯಿತು. ನಂತರ ಅವರಿಗೆ ಜಾಮೀನು ನೀಡಲಾಯಿತು. ಇದನ್ನೂ ಓದಿ: ಮಸೀದಿಗಳಲ್ಲಿ ಧ್ವನಿವರ್ಧಕ ನಿಷೇಧ: ವಕ್ಫ್ ಮಂಡಳಿಯ ಸುತ್ತೋಲೆಯಲ್ಲಿ ಏನಿದೆ? ಸುಪ್ರೀಂ ಕೋರ್ಟ್ ಹೇಳಿದ್ದೇನು?

  • ಪಾಕ್ ಪ್ರಧಾನಿ ಇಮ್ರಾನ್‌ಖಾನ್‌ನನ್ನು ಮಿನಿ ಟ್ರಂಪ್ ಎಂದ ಮಾಜಿ ಪತ್ನಿ

    ಪಾಕ್ ಪ್ರಧಾನಿ ಇಮ್ರಾನ್‌ಖಾನ್‌ನನ್ನು ಮಿನಿ ಟ್ರಂಪ್ ಎಂದ ಮಾಜಿ ಪತ್ನಿ

    ಇಸ್ಲಾಮಾಬಾದ್: `ನೀವು ಇಲ್ಲದಿದ್ದರೆ ಪಾಕಿಸ್ತಾನ ಅದ್ಬುತವಾಗಿರುತ್ತಿತ್ತು’ ಎಂದು ಕಿಡಿಕಾರಿದ್ದ ಪಾಕಿಸ್ತಾನದ ಹಂಗಾಮಿ ಪ್ರಧಾನಿ ಇಮ್ರಾನ್‌ಖಾನ್ ವಿರುದ್ಧ ಅವರ ಮಾಜಿ ಪತ್ನಿ ರೆಹಮ್ ಖಾನ್ ಮತ್ತೆ `ಮಿನಿ ಟ್ರಂಪ್’ ಎಂದು ಟ್ವೀಟ್ ಮಾಡುವ ಮೂಲಕ ಅವರ ಖಾನ್ ವಿರುದ್ಧದ ಅಸಮಾಧಾನ ಹೊರಹಾಕಿದ್ದಾರೆ.

    ತನ್ನ ವಿರುದ್ಧ ನಿನ್ನೆ ಮಂಡನೆಯಾಗಬೇಕಿದ್ದ ಅವಿಶ್ವಾಸ ನಿರ್ಣಯ ವಿಫಲಗೊಳ್ಳುವಂತೆ ಮಾಡಿ ಸಂಸತ್ತನ್ನೇ ವಿಸರ್ಜಿಸಿದ ಪಾಕಿಸ್ತಾನದ ಹಂಗಾಮಿ ಪ್ರಧಾನಿ ಇಮ್ರಾನ್‌ಖಾನ್‌ನನ್ನು `ಮಿನಿ ಟ್ರಂಪ್’ ಎಂದು ಕರೆದಿದ್ದಾರೆ. ಇದನ್ನೂ ಓದಿ: ಭಾರತವನ್ನು ಬೆಂಬಲಿಸುತ್ತಿರುವ ಪ್ರಬಲ ರಾಷ್ಟ್ರವೊಂದು ಪಾಕಿಸ್ತಾನದ ಮೇಲೆ ಕೋಪಗೊಂಡಿದೆ: ಇಮ್ರಾನ್‌ ಖಾನ್‌ 

    IMRAN KHAN

    ರಾಜಕೀಯ ವಿಶ್ಲೇಷಕ ಅದ್ನಾನ್ ಹಫೀಜ್ ಅವರು ಈ ಹಿಂದೆ, ಪಾಕಿಸ್ತಾನದ ಪ್ರಧಾನಿ ವ್ಯಾಪಕ ಹಿಂಸಾಚಾರವನ್ನು ಪ್ರಚೋದಿಸುತ್ತಿದ್ದಾರೆ. ರಾಜಕೀಯ ವಿರೋಧಿಗಳನ್ನು ದೇಶದ್ರೋಹಿಗಳು ಮತ್ತು ಅಮೆರಿಕನ್ನರ ಏಜೆಂಟರು ಎಂದು ಹೆಸರಿಸುವ ಮೂಲಕ ಅವರ ಮೇಲೆ ದಾಳಿಯನ್ನು ಪ್ರಚೋದಿಸುತ್ತಿದ್ದಾರೆ. ದಯವಿಟ್ಟು ಗಮನಿಸಿ ಮತ್ತು ಅವರ ಟ್ವಿಟ್ಟರ್ ಖಾತೆಯನ್ನು ಅಮಾನತುಗೊಳಿಸಿ ಎಂದು ಟ್ವೀಟ್ ಮಾಡಿದ್ದರು. ಇದನ್ನೂ ಓದಿ: ನೀವು ಪ್ರಧಾನಿಯಾಗಿಲ್ಲದಿದ್ದಾಗ ಪಾಕಿಸ್ತಾನ ಅದ್ಭುತವಾಗಿತ್ತು: ಇಮ್ರಾನ್‌ಗೆ ಮಾಜಿ ಪತ್ನಿ ತರಾಟೆ

    ಇದೀಗ ಈ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ರೆಹಮ್ ಖಾನ್, ತುಂಬಾ ಒಳ್ಳೆಯ ಉಪಾಯ! ಈ ಮಿನಿ ಟ್ರಂಪ್ ಹಿಂಸಾಚಾರ ಪ್ರಚೋದಿಸುವುದನ್ನು ಮತ್ತು ನಮ್ಮ ಭದ್ರತೆ ಹಾಗೂ ಸ್ಥಿರತೆಗೆ ಹಾನಿಯುಂಟುಮಾಡುವುದನ್ನು ತಡೆಯಬೇಕು ಎಂದು ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.

     

  • ಮೋದಿ ಪರೀಕ್ಷಾ ಪೇ ಚರ್ಚಾ ಸಂವಾದಕ್ಕೆ ಬೆಳಗಾವಿಯ ಇಬ್ಬರು ವಿದ್ಯಾರ್ಥಿಗಳು ಆಯ್ಕೆ

    ಮೋದಿ ಪರೀಕ್ಷಾ ಪೇ ಚರ್ಚಾ ಸಂವಾದಕ್ಕೆ ಬೆಳಗಾವಿಯ ಇಬ್ಬರು ವಿದ್ಯಾರ್ಥಿಗಳು ಆಯ್ಕೆ

    ಬೆಳಗಾವಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ “ಪರೀಕ್ಷಾ ಪೇ ಚರ್ಚಾ” 5ನೇ ಆವೃತ್ತಿ ಸಂವಾದ ಕಾರ್ಯಕ್ರಮಕ್ಕೆ ಬೆಳಗಾವಿಯ ಇಬ್ಬರು ವಿದ್ಯಾರ್ಥಿಗಳು ಆಯ್ಕೆ ಆಗಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶುಕ್ರವಾರ ನಡೆಯಲಿರುವ ಪರೀಕ್ಷಾ ಪೇ ಚರ್ಚಾ 5ನೇ ಸಂವಾದ ಕಾರ್ಯಕ್ರಮದಲ್ಲಿ ಭಾರತ ಮತ್ತು ಹೊರದೇಶಗಳಿಂದ ಕೋಟ್ಯಂತರ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರು ವರ್ಚುಯಲ್ ಮೂಲಕ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಇದನ್ನೂ ಓದಿ: ಮೃತಪಟ್ಟ ಮುದ್ದಿನ ಶ್ವಾನದ ಸವಿನೆನಪಿಗಾಗಿ ದೇಗುಲ ನಿರ್ಮಾಣ

    ಸೃಜನಾತ್ಮಕ ಬರವಣಿಗೆ ಸ್ಪರ್ಧೆಯಲ್ಲಿ ಭಾಗವಹಿಸಲು ಸುಮಾರು 15.7ಲಕ್ಷ ಜನ ಉತ್ಸಾಹದಿಂದ ನೊಂದಾಯಿಸಿಕೊಂಡಿದ್ದಾರೆ. ಏಪ್ರಿಲ್ 1 ರಂದು ಪ್ರಧಾನ ಮಂತ್ರಿಯವರು ಜಗತ್ತಿನಾದ್ಯಂತ ವಿದ್ಯಾರ್ಥಿಗಳು, ಶಿಕ್ಷಕರು, ಮತ್ತು ಪೋಷಕರ ಜೊತೆ ಸಂವಾದ ನಡೆಸಲಿದ್ದಾರೆ. ಪರೀಕ್ಷಾ ಪೇ ಚರ್ಚಾ ಬಹುನಿರೀಕ್ಷಿತ ವಾರ್ಷಿಕ ಕಾರ್ಯಕ್ರಮವಾಗಿದೆ. ಇದರಲ್ಲಿ ಮೋದಿಯವರು ಪರೀಕ್ಷಾ ಒತ್ತಡಕ್ಕೆ ಸಂಬಂಧಿಸಿದ ಮತ್ತು ಪರೀಕ್ಷೆ ಕುರಿತು ವಿದ್ಯಾರ್ಥಿಗಳು ಎದುರಿಸುವ ಪ್ರಶ್ನೆಗಳಗೆ ವಿಶಿಷ್ಟ ರೀತಿಯಲ್ಲಿ ನೇರ ಪ್ರಸಾರ ಮೂಲಕ ಉತ್ತರಿಸಲಿದ್ದಾರೆ ಎಂದರು.

    ವಿಶೇಷವಾಗಿ ಬೆಳಗಾವಿ ಜಿಲ್ಲೆಯಿಂದ ಶ್ರೇಯಸ್ ಮಾರ್ಗನಕೊಪ್ಪ, ಜಾನವಿ ದ್ವಿಬೇದಿ ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಪರೀಕ್ಷಾ ಪೇ ಚರ್ಚಾ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ತನ್ನ ಲಗೇಜ್ ಹುಡುಕಲು ಇಂಡಿಗೋ ವೆಬ್‌ಸೈಟ್ ಹ್ಯಾಕ್ ಮಾಡಿದ ಬೆಂಗಳೂರು ಟೆಕ್ಕಿ

  • ಇಮ್ರಾನ್ ಖಾನ್ ಕೊನೆಯ ಬಾಲ್ ವರೆಗೂ ಹೋರಾಡುತ್ತಾರೆ, ರಾಜೀನಾಮೆ ಕೊಡಲ್ಲ: ಪಾಕ್ ಸಚಿವ

    ಇಮ್ರಾನ್ ಖಾನ್ ಕೊನೆಯ ಬಾಲ್ ವರೆಗೂ ಹೋರಾಡುತ್ತಾರೆ, ರಾಜೀನಾಮೆ ಕೊಡಲ್ಲ: ಪಾಕ್ ಸಚಿವ

    ಇಸ್ಲಾಮಾಬಾದ್: ಪಾಕ್ ಪ್ರಧಾನಿ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿರುವ ಇಮ್ರಾನ್ ಖಾನ್ ಒಬ್ಬ ಆಟಗಾರನಾಗಿ ಕೊನೆಯ ಬಾಲ್ ವರೆಗೆ ಹೋರಾಡುತ್ತಾರೆ. ರಾಜೀನಾಮೆ ಕೊಡುವುದಿಲ್ಲ ಎಂದು ಪಾಕಿಸ್ತಾನದ ಸಚಿವ ಫವಾದ್ ಚೌಧರಿ ಟ್ವಿಟ್ಟರ್‌ನಲ್ಲಿ ಟ್ವೀಟ್ ಮಾಡಿದ್ದಾರೆ.

    ಪಾಕ್ ಸಂಸತ್‍ನಲ್ಲಿ ಅವಿಶ್ವಾಸ ಮಂಡನೆ ಬಳಿಕ ಸರ್ಕಾರ ಪತನಗೊಳ್ಳುವ ಎಲ್ಲಾ ಸಾಧ್ಯತೆಗಳು ಇದ್ದು, ಪ್ರಧಾನಿ ಸ್ಥಾನಕ್ಕೆ ಇಮ್ರಾನ್ ಖಾನ್ ರಾಜೀನಾಮೆ ಕೊಡಬೇಕೆಂಬ ಕೂಗು ಜೋರಾಗಿದೆ. ಈ ನಡುವೆ ಇಮ್ರಾನ್ ಖಾನ್ ಸರ್ಕಾರದಲ್ಲಿ ಸಚಿವರಾಗಿದ್ದ ಫವಾದ್ ಚೌಧರಿ, ಇಮ್ರಾನ್ ಖಾನ್ ಆಟಗಾರ ಅವರು ಕೊನೆಯ ಬಾಲ್ ವರೆಗೂ ಆಡುತ್ತಾರೆ ರಾಜೀನಾಮೆ ನೀಡುವುದಿಲ್ಲ ಎಂದು ಉರ್ದು ಭಾಷೆಯಲ್ಲಿ ಬರೆದುಕೊಂಡು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಅಲ್ಪಮತಕ್ಕೆ ಕುಸಿದ ಇಮ್ರಾನ್ ಖಾನ್ ಸರ್ಕಾರ- ಪ್ರಧಾನಮಂತ್ರಿ ಹುದ್ದೆಗೆ ರಾಜೀನಾಮೆ ಸಾಧ್ಯತೆ

    ಪಾಕಿಸ್ತಾನದ ನ್ಯಾಷನಲ್ ಅಸೆಂಬ್ಲಿಯು 342 ಸಂಸದರ ಸಾಮರ್ಥ್ಯ ಹೊಂದಿದೆ. 172 ಸ್ಥಾನಗಳು ಬಹುಮತ ಸಂಖ್ಯೆಯಾಗಿದ್ದು, ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ್ ತ್ರೆಹ್ರೀಕ್ – ಎ ಇನ್ಸಾಫ್ ಪಕ್ಷ 177 ಸ್ಥಾನಗಳನ್ನು ಹೊಂದಿತ್ತು. ವಿಪಕ್ಷ ಪಿಪಿಪಿ ಬಳಿ 162 ಸ್ಥಾನಗಳಿದ್ದು, ಸರ್ಕಾರ ರಚನೆಗೆ ಇಮ್ರಾನ್ ಖಾನ್ ಪರ ಸಂಸದರನ್ನು ಸೆಳೆಯುತ್ತಿದೆ. ಇದನ್ನೂ ಓದಿ: ಚೀನಾದ ಶಾಂಫೈನಲ್ಲಿ ಲಾಕ್‌ಡೌನ್ ಜಾರಿ – ಭಾರತದ ಮೇಲೆ ಪರಿಣಾಮ ಏನು?

    https://twitter.com/FawadPTIUpdates/status/1509104201019936771

    ಈಗ ಪಿಪಿಪಿಗೆ ಎಂಕ್ಯೂಎಂ-ಪಿ ಪಕ್ಷವೂ ಬೆಂಬಲ ನೀಡುವುದಾಗಿ ಹೇಳಿರುವುದರಿಂದ ಇಮ್ರಾನ್ ಖಾನ್ ಸರ್ಕಾರ ಕುಸಿದು ಬೀಳುವುದು ಖಚಿತವಾಗಿದೆ. ನಾಳೆ ಪಾಕ್ ನ್ಯಾಷನಲ್ ಅಸೆಂಬ್ಲಿಯಲ್ಲಿ ಅವಿಶ್ವಾಸ ಗೊತ್ತುವಳಿ ಮೇಲೆ ಚರ್ಚೆ ಆರಂಭವಾಗಲಿದ್ದು, ಏಪ್ರಿಲ್ 3ಕ್ಕೆ ಮತದಾನ ನಡೆಯಲಿದೆ. ಈ ನಡುವೆ ಇಮ್ರಾನ್ ಖಾನ್ ಏನು ನಿರ್ಧಾರ ಕೈಗೊಳ್ಳುತ್ತಾರೆ? ರಾಜೀನಾಮೆಗೆ ಮುಂದಾಗುತ್ತಾರಾ? ಎಂಬ ಕುತೂಹಲ ಪಾಕ್ ರಾಜಕೀಯದಲ್ಲಿ ಮೂಡಿದೆ.

  • ಅಲ್ಪಮತಕ್ಕೆ ಕುಸಿದ ಇಮ್ರಾನ್ ಖಾನ್ ಸರ್ಕಾರ- ಪ್ರಧಾನಮಂತ್ರಿ ಹುದ್ದೆಗೆ ರಾಜೀನಾಮೆ ಸಾಧ್ಯತೆ

    ಅಲ್ಪಮತಕ್ಕೆ ಕುಸಿದ ಇಮ್ರಾನ್ ಖಾನ್ ಸರ್ಕಾರ- ಪ್ರಧಾನಮಂತ್ರಿ ಹುದ್ದೆಗೆ ರಾಜೀನಾಮೆ ಸಾಧ್ಯತೆ

    ಇಸ್ಲಾಮಾಬಾದ್‌: ಅವಿಶ್ವಾಸ ಗೊತ್ತುವಳಿ ಮಂಡನೆ ಬೆನ್ನಲ್ಲೇ ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್‌ಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಇಮ್ರಾನ್ ಖಾನ್‌ಗೆ ಬೆಂಬಲ ನೀಡಿದ್ದ ಮುತಾಹಿದಾ ಕ್ವಾಮಿ ಮೂವ್‌ಮೆಂಟ್ – ಪಾಕಿಸ್ತಾನ ಪಕ್ಷ (ಎಂಕ್ಯೂಎಂ-ಪಿ) ತನ್ನ ಬೆಂಬಲ ವಾಪಸ್ ಪಡೆದುಕೊಂಡಿದೆ.

    ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತ್ರೆಹ್ರೀಕ್ – ಎ – ಇನ್ಸಾಫ್ ಪಕ್ಷದಿಂದ 24 ಸಂಸದರು ಈ ಹಿಂದೆ ಕೈ ಕೊಟ್ಟು ವಿಪಕ್ಷ ಪಿಪಿಪಿಯನ್ನು ಸೇರಿಕೊಂಡಿದ್ದರು. ಈಗ ಎಂಕ್ಯೂಎಂ-ಪಿ ಕೂಡಾ ಬೆಂಬಲ ವಾಪಸ್ ಪಡೆದಿರುವ ಹಿನ್ನೆಲೆ ಇಮ್ರಾನ್ ಖಾನ್ ನೇತೃತ್ವದ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. ಇದನ್ನೂ ಓದಿ: ಇಮ್ರಾನ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ – ಸರ್ಕಾರ ಪತನಕ್ಕೆ ಕ್ಷಣಗಣನೆ

    PAK

    ಪಾಕಿಸ್ತಾನದ ನ್ಯಾಷನಲ್ ಅಸೆಂಬ್ಲಿಯು 342 ಸಂಸದರ ಸಾಮರ್ಥ್ಯ ಹೊಂದಿದೆ. 172 ಸ್ಥಾನಗಳು ಬಹುಮತ ಸಂಖ್ಯೆಯಾಗಿದ್ದು, ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ್ ತ್ರೆಹ್ರೀಕ್ – ಎ – ಇನ್ಸಾಫ್ ಪಕ್ಷ 177 ಸ್ಥಾನಗಳನ್ನು ಹೊಂದಿತ್ತು. ವಿಪಕ್ಷ ಪಿಪಿಪಿ ಬಳಿ 162 ಸ್ಥಾನಗಳಿದ್ದು, ಸರ್ಕಾರ ರಚನೆಗೆ ಇಮ್ರಾನ್ ಖಾನ್ ಪರ ಸಂಸದರನ್ನು ಸೆಳೆಯುತ್ತಿದೆ.

    ಈಗ ಪಿಪಿಪಿಗೆ ಎಂಕ್ಯೂಎಂ-ಪಿ ಪಕ್ಷವೂ ಬೆಂಬಲ ನೀಡುವುದಾಗಿ ಹೇಳಿರುವುದರಿಂದ ಇಮ್ರಾನ್ ಖಾನ್ ಸರ್ಕಾರ ಕುಸಿದು ಬೀಳುವುದು ಖಚಿತವಾಗಿದೆ. ನಾಳೆ ಪಾಕ್ ನ್ಯಾಷನಲ್ ಅಸೆಂಬ್ಲಿಯಲ್ಲಿ ಅವಿಶ್ವಾಸ ಗೊತ್ತುವಳಿ ಮೇಲೆ ಚರ್ಚೆ ಆರಂಭವಾಗಲಿದ್ದು, ಏಪ್ರಿಲ್ 3 ಕ್ಕೆ ಮತದಾನ ನಡೆಯಲಿದೆ. ಇದನ್ನೂ ಓದಿ: CRPF ಬಂಕರ್ ಮೇಲೆ ಪೆಟ್ರೋಲ್ ಬಾಂಬ್ ಎಸೆದ ಬುರ್ಕಾದಾರಿ ಮಹಿಳೆ

    ಸರ್ಕಾರ ಬಹುಮತ ಕಳೆದುಕೊಂಡಿರುವುದು ಸ್ಪಷ್ಟವಾದ ಹಿನ್ನೆಲೆ ಇಮ್ರಾನ್ ಖಾನ್ ಮತದಾನಕ್ಕೂ ರಾಜೀನಾಮೆ ನೀಡುವ ಸಾಧ್ಯತೆಗಳಿದೆ ಎಂದು ಮೂಲಗಳು ಹೇಳಿವೆ.

  • ರಾಜಕೀಯ ವಿರೋಧಿಗಳನ್ನು ಹತ್ತಿಕ್ಕಲು ಹಿಂಸಾಚಾರ ಬಳಸೋದು ಹಕ್ಕುಗಳ ಉಲ್ಲಂಘನೆ: ಮೋದಿ

    ರಾಜಕೀಯ ವಿರೋಧಿಗಳನ್ನು ಹತ್ತಿಕ್ಕಲು ಹಿಂಸಾಚಾರ ಬಳಸೋದು ಹಕ್ಕುಗಳ ಉಲ್ಲಂಘನೆ: ಮೋದಿ

    ಕೋಲ್ಕತ್ತಾ: ರಾಜಕೀಯ ಚಟುವಟಿಕೆಗಳಲ್ಲಿ ಭಾಗವಹಿಸುವುದು ಪ್ರಜಾಪ್ರಭುತ್ವದ ಹಕ್ಕು. ಅದರೆ ರಾಜಕೀಯ ವಿರೋಧಿಗಳನ್ನು ಹತ್ತಿಕ್ಕಲು ಅವರ ವಿರುದ್ಧ ಹಿಂಸಾಚಾರ ಬಳಸುವುದು ಹಾಗೂ ಬೆದರಿಕೆ ಒಡ್ಡುವುದು ಪ್ರಜಾಪ್ರಭುತ್ವ ಹಕ್ಕುಗಳ ಉಲ್ಲಂಘನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

    ಪಶ್ಚಿಮ ಬಂಗಾಳದ ಠಾಕೂರ್ ನಗರದಲ್ಲಿ ನಡೆದ ಮಟುವಾ ಧರ್ಮ ಮಹಾಸಮ್ಮೇಳ ಉದ್ದೇಶಿಸಿ ಮಾತನಾಡಿದ ಅವರು, ರಾಜಕೀಯ ಚಟುವಟಿಕೆಗಳಲ್ಲಿ ಭಾಗವಹಿಸುವುದು ನಮ್ಮ ಪ್ರಜಾಸತ್ತಾತ್ಮಕ ಹಕ್ಕು. ಆದರೆ ರಾಜಕೀಯ ವಿರೋಧದಿಂದಾಗಿ ಯಾರು ಯಾರನ್ನೇ ಬೆದರಿಸಿದರೂ ಅದು ಇತರರ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಆದ್ದರಿಂದ ಹಿಂಸೆ, ಅರಾಜಕತೆಯ ಮನಸ್ಥಿತಿ ಎಲ್ಲಿಯೇ ಇದ್ದರೂ ಅದನ್ನು ವಿರೋಧಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ತಿಳುವಳಿಕೆ ನೀಡಿದ್ದಾರೆ. ಇದನ್ನೂ ಓದಿ: ಮಾನವೀಯತೆ ಇರುವುದು ನಿಜವೇ? – ಸಿಎಂ ಕೇಜ್ರಿವಾಲ್‌ಗೆ ಅಗ್ನಿಹೋತ್ರಿ ಪ್ರಶ್ನೆ

    MODI 2

    ಪ್ರಸ್ತುತ ಭಾಷೆ, ಪ್ರದೇಶದ ಆಧಾರದ ಮೇಲೆ ಸಮಾಜವನ್ನು ವಿಭಜಿಸುವ ಪ್ರಯತ್ನಗಳು ನಡೆಯುತ್ತಿವೆ. ಇಂತಹ ಹೊತ್ತಿನಲ್ಲಿ ಆಧ್ಯಾತ್ಮಿಕ ಗುರು ಶ್ರೀ ಹರಿಚಂದ್ ಠಾಕೂರ್ ಅವರ ಬೋಧನೆ ತತ್ವಗಳು ಮಹತ್ವದ್ದಾಗಿವೆ ಎಂದಿದ್ದಾರೆ. ಇದನ್ನೂ ಓದಿ: ರಷ್ಯಾ- ಉಕ್ರೇನ್ ಯುದ್ಧದಲ್ಲಿ ಭಾರತದ ನಿಲುವು ಹಗ್ಗದ ಮೇಲೆ ನೃತ್ಯ ಮಾಡಿದಂತಾಗಿದೆ: ಶಶಿ ತರೂರ್

    ಮಟುವಾ ಹಿಂದುಳಿದ ಹಿಂದೂ ಸಮುದಾಯವಾಗಿದ್ದು, 2019ರ ಲೋಕಸಭೆ ಚುನಾವಣೆಯ ಮೊದಲು ಬಿಜೆಪಿ ಕೇಂದ್ರ ನಾಯಕರು ಭರವಸೆ ನೀಡಿದಂತೆ ಪೌರತ್ವ ತಿದ್ದುಪಡಿ ಕಾಯ್ದೆ (CAA) ಅನುಷ್ಠಾನಕ್ಕೆ ಒತ್ತಾಯಿಸುತ್ತಿದ್ದಾರೆ. ಆದರೆ ಈ ಸಮುದಾಯದಿಂದಲೇ ಶಾಸಕರಾಗಿ ಆಯ್ಕೆಯಾದವರು ಅದರ ಅನುಷ್ಠಾನದಲ್ಲಿ ವಿಳಂಬ ಮಾಡಿರುವುದರಿಂದ ಪಕ್ಷದ ನಾಯಕತ್ವದ ಬಗ್ಗೆ ಕೆಲವರು ಅತೃಪ್ತರಾಗಿದ್ದಾರೆ ಎಂದು ತಿಳಿಸಿದ್ದಾರೆ.

    MODI 3

    ಪ್ರಧಾನಮಂತ್ರಿ ಕಾರ್ಯಾಲಯ ಈಚೆಗಷ್ಟೇ ಹೊರಡಿಸಿದ ಸುತ್ತೋಲೆಯಲ್ಲೂ, ಠಾಕೂರ್ ಅವರು ಸ್ವಾತಂತ್ರ‍್ಯ ಪೂರ್ವದಲ್ಲಿ ಅವಿಭಜಿತ ಬಂಗಾಳದಲ್ಲಿ ತುಳಿತಕ್ಕೊಳಗಾದ, ದೀನದಲಿತ ಮತ್ತು ವಂಚಿತ ವ್ಯಕ್ತಿಗಳ ಸುಧಾರಣೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟವರು. ಅವರು ಪ್ರಾರಂಭಿಸಿದ ಸಾಮಾಜಿಕ ಮತ್ತು ಧಾರ್ಮಿಕ ಚಳವಳಿಯು ಈಗ ಬಾಂಗ್ಲಾದೇಶದಲ್ಲಿರುವ ಒರಕಂಡಿಯಲ್ಲಿ 1860ರಲ್ಲಿ ಹುಟ್ಟಿಕೊಂಡಿತು. ಮಟುವ ಧರ್ಮದ ರಚನೆಗೆ ಕಾರಣವಾಯಿತು ಎಂದು ಹೇಳಿದೆ.

     

  • ಬಿಜೆಪಿ ಸಂಸ್ಥಾಪನಾ ದಿನದ ಪ್ರಯುಕ್ತ ಸಿಹಿ ಸುದ್ದಿಕೊಟ್ಟ ಪ್ರಧಾನಿ: ಒಂದು ಕ್ಲಿಕ್‌ನಲ್ಲಿದೆ ಮಾಹಿತಿ

    ಬಿಜೆಪಿ ಸಂಸ್ಥಾಪನಾ ದಿನದ ಪ್ರಯುಕ್ತ ಸಿಹಿ ಸುದ್ದಿಕೊಟ್ಟ ಪ್ರಧಾನಿ: ಒಂದು ಕ್ಲಿಕ್‌ನಲ್ಲಿದೆ ಮಾಹಿತಿ

    ನವದೆಹಲಿ: ಇದೇ ಏಪ್ರಿಲ್ 6ರಂದು ನಡೆಯಲಿರುವ ಬಿಜೆಪಿ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಸಾಮರಸ್ಯ ದಿನವನ್ನಾಗಿ ಆಚರಿಸಲು ನಿರ್ಧರಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು – ಹಲವು ಮಹತ್ವದ ಕಾರ್ಯಕ್ರಮಗಳನ್ನು ಘೋಷಿಸಿದ್ದಾರೆ.

    ನವದೆಹಲಿಯ ಅಂಬೇಡ್ಕರ್ ಕೇಂದ್ರದಲ್ಲಿ ನಡೆದ ಸಂಸದೀಯ ಪಕ್ಷದ ಸಭೆಯಲ್ಲಿ ಮಾತನಾಡಿರುವ ಅವರು, ಏಪ್ರಿಲ್ 6 ರಿಂದ ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನದ ದಿನವಾದ ಏಪ್ರಿಲ್ 14ರ ವರೆಗೆ ಬಿಜೆಪಿಯಿಂದ ಸರಣಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ರಕ್ತದಾನ ಶಿಬಿರಗಳು ಸೇರಿದಂತೆ ಸಾರ್ವಜನಿಕ ಹಿತಾಸಕ್ತಿ ಕಾರ್ಯಕ್ರಮಗಳೂ ನಡೆಯಲಿವೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಪರವಾನಿಗೆ ಇಲ್ಲದೆ ಬಂದೂಕುಗಳನ್ನು ಹೊಂದಲು ಕೊಡವರಿಗೆ ಅವಕಾಶ- ರಾಜ್ಯಕ್ಕೆ ಸುಪ್ರೀಂ ನೋಟಿಸ್‌

    NARENDRA MODI

    14 ಮಾಜಿ ಪ್ರಧಾನಿಗಳ ಕೊಡುಗೆ ಗುರುತಿಸಲು ಎನ್‌ಡಿಎ ಸರ್ಕಾರ ಕ್ರಮ ಕೈಗೊಂಡಿದೆ. ಅದಕ್ಕಾಗಿ ಪ್ರತಿಷ್ಠಿತ ವಸ್ತು ಸಂಗ್ರಹಾಲಯಗಳನ್ನೂ ನಿರ್ಮಿಸಲಾಗಿದ್ದು, ಏಪ್ರಿಲ್ 14ರಂದು ಸಂಗ್ರಹಾಲಯವನ್ನು ಉದ್ಘಾಟಿಸಾಗುವುದು. ನೆಹರೂ ಮ್ಯೂಸಿಯಂನಲ್ಲಿರುವ ಪ್ರಧಾನ ಮಂತ್ರಿ ಸಂಗ್ರಹಾಲಯವು ಎಲ್ಲ ಮಾಜಿ ಪ್ರಧಾನಿಗಳ ಕಾರ್ಯ ವೈಖರಿ, ಅವರು ದೇಶಕ್ಕೆ ನೀಡಿರುವ ಕೊಡುಗೆಗಳನ್ನು ಸ್ಮರಿಸಲಿದೆ. ಈ ಮೂಲಕ ಎಲ್ಲಾ ಪ್ರಧಾನ ಮಂತ್ರಿಗಳ ಕೊಡುಗೆ ಗುರುತಿಸುವುದನ್ನು ತಮ್ಮ ಸರ್ಕಾರ ಖಚಿತಪಡಿಸಿದೆ ಎಂದಿದ್ದಾರೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.  ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ ರದ್ದು – ಸರ್ಕಾರಕ್ಕೆ ಮಾಹಿತಿ ರವಾನೆ

    ಇದರೊಂದಿಗೆ ರಾಷ್ಟ್ರ ರಾಜಧಾನಿಯಲ್ಲಿ ಸ್ಥಾಪಿಸಲಾಗಿರುವ ಡಾ.ಬಿ.ಆರ್.ಅಂಬೇಡ್ಕರ್ ವಸ್ತು ಸಂಗ್ರಹಾಲಯವೂ ಅಂಬೇಡ್ಕರ್ ಜನ್ಮದಿನವಾದ ಏಪ್ರಿಲ್ 14ರಂದೇ ಲೋಕಾರ್ಪಣೆಗೊಳ್ಳಲಿದೆ ಎಂದಿದ್ದಾರೆ.

    Narendra Modi

    ಇದೇ ವೇಳೆ ಸಾರ್ವಜನಿಕ ಹಿತಾಸಕ್ತಿ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಿರುವ ಸಂಸದರು, ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (PM-GKAY) ಯೋಜನೆಯನ್ನು ಇನ್ನೂ 6 ತಿಂಗಳವರೆಗೆ ವಿಸ್ತರಿಸಿದೆ. ಇದರಿಂದ ಎನ್‌ಎಫ್‌ಎಸ್‌ಎ ಅಡಿಯಲ್ಲಿ ಪ್ರತಿ ಫಲಾನುಭವಿಯೂ ಮುಂದಿನ ಸೆಪ್ಟೆಂಬರ್ 22ರ ವರೆಗೆ ಆಹಾರ ಧಾನ್ಯಗಳ ಸಾಮಾನ್ಯ ಕೋಟಾದ ಜೊತೆಗೆ ತಿಂಗಳಿಗೆ ಹೆಚ್ಚುವರಿ 5 ಕೆ.ಜಿ. ಉಚಿತ ಪಡಿತರ ಪಡೆಯಲು ಅರ್ಹರಾಗಿರುತ್ತಾರೆ ಎಂದು ತಿಳಿಸಿದೆ.