Tag: prime minister

  • ಶಾರ್ಟ್‌ಕಟ್‌ ರಾಜಕೀಯದ ಮೂಲಕ ಮತಗಳನ್ನು ಸೆಳೆಯುವುದು ತುಂಬಾ ಸುಲಭ: ಪ್ರಧಾನಿ ಮೋದಿ

    ಶಾರ್ಟ್‌ಕಟ್‌ ರಾಜಕೀಯದ ಮೂಲಕ ಮತಗಳನ್ನು ಸೆಳೆಯುವುದು ತುಂಬಾ ಸುಲಭ: ಪ್ರಧಾನಿ ಮೋದಿ

    ರಾಂಚಿ: ಶಾರ್ಟ್‌ಕಟ್‌ ರಾಜಕೀಯವೆಂಬುದು ದೊಡ್ಡ ಸವಾಲಾಗಿದೆ. ಶಾರ್ಟ್ಕಟ್ ಮೂಲಕ ಮತಗಳನ್ನು ಸೆಳೆಯುವುದು ತುಂಬಾ ಸುಲಭ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

    ಜಾರ್ಖಂಡ್‌ನ ದೇವಘರ್‌ನಲ್ಲಿ ನಡೆದ ಬಿಜೆಪಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, `ಶಾರ್ಟ್‌ಕಟ್‌’ ರಾಜಕೀಯದ ವಿರುದ್ಧ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಬುಮ್ರಾ ಬೌಲಿಂಗ್‌ ದಾಳಿಗೆ ತತ್ತರಿಸಿದ ಆಂಗ್ಲರು – ಭಾರತಕ್ಕೆ 10 ವಿಕೆಟ್‌ಗಳ ಭರ್ಜರಿ ಜಯ

    ಶಾರ್ಟ್‌ಕಟ್‌ ರಾಜಕೀಯವೇ ದೊಡ್ಡ ಸವಾಲಾಗಿದೆ. ಶಾರ್ಟ್‌ಕಟ್‌ಗಳ ಮೂಲಕ ಮತಗಳನ್ನು ಸೆಳೆಯುವುದು ತುಂಬಾ ಸುಲಭ. ಆದರೆ ಒಂದು ದೇಶವು ಶಾರ್ಟ್‌ಕಟ್‌ ರಾಜಕೀಯ ಅವಲಂಬಿಸಿದರೆ ಅದು ಶಾರ್ಟ್ ಸರ್ಕ್ಯೂಟ್‌ಗೆ ಕಾರಣವಾಗುತ್ತದೆ. ನಾವು ಅದರಿಂದ ದೂರವಿರಬೇಕು ಎಂದು ಎಚ್ಚರಿಸಿದ್ದಾರೆ.

    ನಂತರ ಪ್ರಧಾನಿ ನರೇಂದ್ರ ಮೋದಿ ಅವರು 16,800 ಕೋಟಿಗೂ ಅಧಿಕ ಮೊತ್ತದ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಇದನ್ನೂ ಓದಿ: PSI ಹಗರಣದ ಹಿಂದೆ ಬೊಮ್ಮಾಯಿ, ಗೃಹಸಚಿವರಿದ್ದಾರೆ – ಸರ್ಕಾರದ ಕುಮ್ಮಕ್ಕಿಲ್ಲದೇ ಇದೆಲ್ಲಾ ಸಾಧ್ಯವೇ ಎಂದ ಸಿದ್ದರಾಮಯ್ಯ

    ಇದಕ್ಕೂ ಮುನ್ನ ದೇಶದ 12 ಜ್ಯೋತಿರ್ಲಿಂಗಗಳಲ್ಲಿ ಒಂದಾದ ಬಾಬಾ ಬೈದ್ಯನಾಥ ದೇವಾಲಯದಲ್ಲಿ ವೇದ ಮಂತ್ರಗಳ ಪಠಣಗಳ ನಡುವೆ ಪ್ರಧಾನಿ ಮೋದಿ ಪ್ರಾರ್ಥನೆ ಸಲ್ಲಿಸಿದರು. ಪ್ರಧಾನಿ ಭೇಟಿಗಾಗಿ ದೇವಾಲಯವನ್ನು ದೀಪಗಳು ಮತ್ತು ಹೂವುಗಳಿಂದ ಅಲಂಕರಿಸಲಾಗಿತ್ತು. ದೇಗುಲದ ವಿಐಪಿ ಬಾಗಿಲು ತಲುಪಿದ ತಕ್ಷಣ 11 ಪುರೋಹಿತರ ಗುಂಪಿನಿಂದ ಶಂಖನಾದದ ನಡುವೆ ಪ್ರಧಾನಿ ಅವರನ್ನು ಸ್ವಾಗತಿಸಲಾಯಿತು.

    ಜಾರ್ಖಂಡ್ ರಾಜಧಾನಿಯಿಂದ ಸುಮಾರು 720 ಕಿಮೀ ದೂರದಲ್ಲಿರುವ ಈ ದೇವಾಲಯವು ಜುಲೈ 14 ರಂದು ಪ್ರಾರಂಭವಾಗುವ ಶ್ರಾವಣಿ ಮೇಳದ ಸಂದರ್ಭದಲ್ಲಿ ಪ್ರತಿವರ್ಷ ಸಾವಿರಾರು ಯಾತ್ರಿಕರನ್ನು ಆಕರ್ಷಿಸುತ್ತದೆ ಎಂದು ಹೇಳಲಾಗುತ್ತದೆ.

    Live Tv
    [brid partner=56869869 player=32851 video=960834 autoplay=true]

  • ಶ್ರೀಲಂಕಾದ ಪ್ರಧಾನಿ ರನೀಲ್ ವಿಕ್ರಮಸಿಂಘೆ ಮನೆಗೆ ಬೆಂಕಿ, ವಾಹನಗಳು ಜಖಂ – ಹೊಸ ಸರ್ಕಾರ ರಚನೆಗೆ ಅಸ್ತು

    ಶ್ರೀಲಂಕಾದ ಪ್ರಧಾನಿ ರನೀಲ್ ವಿಕ್ರಮಸಿಂಘೆ ಮನೆಗೆ ಬೆಂಕಿ, ವಾಹನಗಳು ಜಖಂ – ಹೊಸ ಸರ್ಕಾರ ರಚನೆಗೆ ಅಸ್ತು

    ಕೊಲಂಬೋ: ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟಿನಿಂದಾಗಿ ರೊಚ್ಚಿಗೆದ್ದ ಜನ ದಂಗೆ ಎದ್ದಿದ್ದು, ಉದ್ರಿಕ್ತ ಗುಂಪೊಂದು ಲಂಕಾದ ಪ್ರಧಾನಿ ರನೀಲ್ ವಿಕ್ರಮಸಿಂಘೆ ಮನೆಗೆ ಬೆಂಕಿ ಹಚ್ಚಿ ವಾಹನಗಳನ್ನು ಜಖಂಗೊಳಿಸಿದೆ. ಈ ನಡುವೆ ರನೀಲ್ ವಿಕ್ರಮಸಿಂಘೆ ಹೊಸ ಸರ್ಕಾರ ರಚನೆಯಾಗುವುದರವರೆಗೂ ಪ್ರಧಾನಿಯಾಗಿ ಮುಂದುವರೆಯಲಿದ್ದಾರೆ.

    ನಿನ್ನೆ ಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ರಾಜೀನಾಮೆಗೆ ಆಗ್ರಹಿಸಿ ಅಧ್ಯಕ್ಷರ ಭವನಕ್ಕೆ ನುಗ್ಗಿ ಜನ ದಾಂಧಲೆ ನಡೆಸಿದ್ದರು. ಇದರ ಬೆನ್ನಲ್ಲೇ ರನಿಲ್ ವಿಕ್ರಮಸಿಂಘೆ ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಬಳಿಕ ಕೊಲಂಬೋದಲ್ಲಿರುವ ವಿಕ್ರಮಸಿಂಘೆ ಅವರ ಖಾಸಗಿ ನಿವಾಸಕ್ಕೆ ಪ್ರತಿಭಟನಾ ನಿರತರು ಬೆಂಕಿ ಹಚ್ಚಿದ್ದು, ಪ್ರಧಾನಿಗೆ ಸೇರಿದ ವಾಹನಗಳನ್ನು ಪುಡಿಮಾಡಿದ್ದಾರೆ. ಇದನ್ನೂ ಓದಿ: ಶ್ರೀಲಂಕಾ ಅಧ್ಯಕ್ಷರ ಮನೆಗೆ ನುಗ್ಗಿದ ಸಾವಿರಾರು ಜನ – ಪೂಲ್‌ನಲ್ಲಿ ಪ್ರತಿಭಟನಾಕಾರರು, ರಾಜಪಕ್ಸೆ ಪರಾರಿ

    ಲಂಕಾದಲ್ಲಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟನ್ನು ನಿಭಾಯಿಸುವುದಕ್ಕಾಗಿ ಸರ್ವ ಪಕ್ಷ ಸರ್ಕಾರಕ್ಕೆ ಅವಕಾಶ ನೀಡುವುದಾಗಿ ಘೋಷಿಸಿದ ವಿಕ್ರಮಸಂಘೆ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಆದರೆ ಹೊಸ ಸರ್ಕಾರ ರಚನೆಯಾಗುವುದರವರೆಗೂ ವಿಕ್ರಮಸಿಂಘೆ ಪ್ರಧಾನಿಯಾಗಿ ಮುಂದುವರೆಯಲಿದ್ದಾರೆ. ಬುಧವಾರ ಹೊಸ ಸರ್ಕಾರ ರಚನೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ಜನಾಕ್ರೋಶ ಉಲ್ಬಣ – ಪ್ರಧಾನಿ ಸ್ಥಾನಕ್ಕೆ ರನಿಲ್‌ ವಿಕ್ರಮಸಿಂಘೆ ರಾಜೀನಾಮೆ

    https://twitter.com/SLukako/status/1545831647597166593

    ಆರ್ಥಿಕ ಬಿಕ್ಕಟ್ಟಿನಿಂದ ಶ್ರೀಲಂಕಾದಲ್ಲಿ ಜನತೆ ರೊಚ್ಚಿಗೆದ್ದು ಪ್ರತಿಭಟನೆ ನಡೆಸುತ್ತಿದ್ದು, ದೇಶದಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದೆ. ದ್ವೀಪ ರಾಷ್ಟ್ರ ಅಧ್ಯಕ್ಷ ಗೊಟಬಯ ರಾಜಪಕ್ಸೆ ರಾಜೀನಾಮೆಗೆ ಆಗ್ರಹಿಸಿ ಅಧ್ಯಕ್ಷರ ಭವನಕ್ಕೆ ನುಗ್ಗಿ ಸ್ವಿಮ್ಮಿಂಗ್ ಪೂಲ್‍ಗೆ ಇಳಿದು ಈಜಾಡಿ, ಸೋಫಾ, ಬೆಡ್‍ಗಳ ಮೇಲೆ ಕುಣಿದಾಡಿದ್ದರು. ಇದರ ಬೆನ್ನಲ್ಲೇ ರನಿಲ್ ವಿಕ್ರಮಸಿಂಘೆ ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿ ಅಧಿಕೃತ ನಿವಾಸದಿಂದ ಸ್ಥಳಾಂತರಗೊಂಡಿದ್ದರು.

    ಆರ್ಥಿಕ ಬಿಕ್ಕಟ್ಟಿನಿಂದಾಗಿ ಶ್ರೀಲಂಕಾದಲ್ಲಿ ಅರಾಜಕತೆ ವಾತಾವರಣ ಸೃಷ್ಟಿಯಾಗಿದೆ. ದೇಶದ ಜನತೆ ಹಲವಾರು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದೇಶದಲ್ಲಿ ನಿರಂತರವಾಗಿ ಪ್ರತಿಭಟನೆ ನಡೆಯುತ್ತಿದೆ. ಪರಿಣಾಮವಾಗಿ ಮಹಿಂದಾ ರಾಜಪಕ್ಸೆ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದಾದ ನಂತರ ರನಿಲ್ ವಿಕ್ರಮಸಿಂಘೆ ಅವರು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಆರ್ಥಿಕ ದುಸ್ಥಿತಿಯಿಂದ ಕಂಗೆಟ್ಟಿರುವ ದೇಶಕ್ಕೆ ಅನೇಕ ಕಡೆಯಿಂದ ಸಾಲ ಹಾಗೂ ಇನ್ನಿತರ ಸೌಲಭ್ಯಕ್ಕಾಗಿ ರನಿಲ್ ಪ್ರಯತ್ನಿಸಿದರು.

    Live Tv
    [brid partner=56869869 player=32851 video=960834 autoplay=true]

  • ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆಗೆ ಗುಂಡೇಟು – ಆಸ್ಪತ್ರೆಯಲ್ಲಿ ನಿಧನ

    ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆಗೆ ಗುಂಡೇಟು – ಆಸ್ಪತ್ರೆಯಲ್ಲಿ ನಿಧನ

    ಟೋಕಿಯೋ: ಗುಂಡೇಟು ತಿಂದು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಜಪಾನ್‍ನ ಮಾಜಿ ಪ್ರಧಾನಿ ಶಿಂಜೋ ಅಬೆ (62) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಜಪಾನ್‌ ಸರ್ಕಾರ ಅಧಿಕೃತವಾಗಿ ಈ ವಿಚಾರವನ್ನು ತಿಳಿಸಿದೆ.

    ನಾರಾ ನಗರದಲ್ಲಿ ಭಾಷಣ ಮಾಡುತ್ತಿರುವಾಗಲೇ ಶಿಂಜೋ ಅಬೆಗೆ ಹಿಂದಿನಿಂದ ವ್ಯಕ್ತಿಯೊಬ್ಬ ಶೂಟ್‌ ಮಾಡಿದ್ದ. ಭಾಷಣ ಮಾಡುತ್ತಿರುವಾಗ ಶಿಂಜೋ ಅಬೆ ಎದೆಗೆ ಗುಂಡು ತಾಗಿದ ಪರಿಣಾಮ ತೀವ್ರ ರಕ್ತಸ್ರಾವವಾಗಿತ್ತು. ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿತ್ತು. ಇದನ್ನೂ ಓದಿ: ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆಗೆ ಗುಂಡೇಟು

    ಶಿಂಜೋ ಅಬೆ ಎರಡು ಬಾರಿ ಜಪಾನ್ ಪ್ರಧಾನಿಯಾಗಿದ್ದರು. ಜಪಾನ್‌ನ ದೀರ್ಘ ಕಾಲದ ಪ್ರಧಾನಿ ಎಂಬ ಹಿರಿಮೆಗೆ ಪಾತ್ರರಾಗಿದ್ದರು. ಜಪಾನ್‌ ಕಾಲಮಾನ ಬೆಳಗ್ಗೆ 11 ಗಂಟೆಗೆ ನಾರಾ ನಗರದಲ್ಲಿ ಭಾಷಣ ಮಾಡುತ್ತಿರುವಾಗ 2 ಬಾರಿ ಶೂಟ್‌ ಮಾಡಿ ಮಾಡಲಾಗಿತ್ತು.

    ಜಪಾನ್ ಸಂಸತ್​ನ ಮೇಲ್ಮನೆಗೆ ಚುನಾವಣೆ ನಡೆಯುತ್ತಿದ್ದ ಪ್ರಚಾರದ ವೇಳೆ ಈ ಘಟನೆ ನಡೆದಿದೆ. ಅವರ ಹಿಂದೆ ಸ್ವಲ್ಪ ದೂರದಲ್ಲೇ  ನಿಂತಿದ್ದ 41 ವರ್ಷದ ಟೆಟ್ಸುಯಾ ಯಮಗಾಮಿ ಎಂಬಾತ ಶಿಂಜೋ ಅಬೆ ಹತ್ಯೆ ಮಾಡಿದ್ದಾನೆ. ಹಂತಕನನ್ನು ಕೂಡಲೇ ಪೊಲೀಸರು ಬಂಧಿಸಿದ್ದಾರೆ. ತನಿಖೆಯಲ್ಲಿ ಆರೋಪಿ ನಾರಾ ಸಿಟಿಯ ನಿವಾಸಿಯಾಗಿದ್ದು ನೌಕಾಸೇನೆಯ ಮಾಜಿ ಅಧಿಕಾರಿ ಎಂದು ಗುರುತಿಸಲಾಗಿದೆ. ಘಟನೆಗೆ ಮನೆಯಲ್ಲಿ ತಯಾರಿಸಿದ ದೇಸಿ ಗನ್ ಬಳಿಕೆ ಮಾಡಿ ಎರಡು ಸುತ್ತು ಗುಂಡು ಹಾರಿಸಲಾಗಿದೆ ಎಂದು ತಿಳಿದು ಬಂದಿದೆ. ಆದರೆ ಘಟನೆಗೆ ನಿಖರ ಕಾರಣ ಇನ್ನು ವರದಿಯಾಗಿಲ್ಲ.

    ಆಸ್ಪತ್ರೆ ದಾಖಲಿಸುವ ವೇಳೆಗೆ ಅವರ ಉಸಿರಾಟ ನಿಂತು ಹೋಗಿತ್ತು. ಅದಾಗ್ಯೂ ಅವರನ್ನು ಉಳಿಸಿಕೊಳ್ಳುವ ಪ್ರಯತ್ನವನ್ನು ವೈದ್ಯರು ಮಾಡಿದರು. ಆದರೆ ಯಾವ ಚಿಕಿತ್ಸೆಗೆ ಸ್ಪಂಧಿಸದ ಹಿನ್ನಲೆ ಜಪಾನ ಕಾಲ ಮಾನದ ಪ್ರಕಾರ ಸಂಜೆ ಐದು ಗಂಟೆಗೆ ಅವರ ಸಾವಿನ ಸುದ್ದಿಯನ್ನು ಅಧಿಕೃತಗೊಳಿಸಲಾಯಿತು.

    Live Tv
    [brid partner=56869869 player=32851 video=960834 autoplay=true]

  • ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆಗೆ ಗುಂಡೇಟು

    ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆಗೆ ಗುಂಡೇಟು

    ಟೋಕಿಯೋ: ಜಪಾನ್‍ನ ಮಾಜಿ ಪ್ರಧಾನಿ ಶಿಂಜೋ ಅಬೆಗೆ ದುಷ್ಕರ್ಮಿಗಳಿಂದ ಗುಂಡೇಟು ಬಿದ್ದು ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಜಪಾನ್ ನಾರಾ ನಗರದಲ್ಲಿ ಭಾಷಣ ಮಾಡುತ್ತಿರುವಾಗಲೇ ಶಿಂಜೋ ಅಬೆಗೆ ಗುಂಡೇಟು ಬಿದ್ದಿದೆ. ಭಾಷಣ ಮಾಡುತ್ತಿರುವಾಗ ಶಿಂಜೋ ಅಬೆ ಎದೆಗೆ ಗುಂಡು ತಾಗಿದ ಪರಿಣಾಮ ತೀವ್ರ ರಕ್ತಸ್ರಾವವಾಗಿತ್ತು. ತಕ್ಷಣ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ. ಜಪಾನ್‌ ಕಾಲಮಾನ ಬೆಳಗ್ಗೆ 11 ಗಂಟೆಗೆ ಘಟನೆ ನಡೆದಿದೆ. ‌ಇದನ್ನೂ ಓದಿ: ವಿವಾದಾತ್ಮಕ ಟ್ವೀಟ್ – ಹರಿಯಾಣ ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ವಜಾ

    ಶಿಂಜೋ ಅಬೆ ಎರಡು ಬಾರಿ ಜಪಾನ್ ಪ್ರಧಾನಿಯಾಗಿದ್ದರು. ಈ ಹಿಂದೆ ಭಾರತಕ್ಕೂ ಕೂಡ ಶಿಂಜೋ ಅಬೆ ಭೇಟಿ ನೀಡಿದ್ದರು. ಭಾರತದ ಪ್ರಧಾನಿ ನರೇಂದ್ರ ಮೋದಿಗೆ ಅತ್ಯಾಪ್ತರಾಗಿದ್ದರು. ಇದನ್ನೂ ಓದಿ: ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ – 10 ಮಂದಿಗೆ ಗಾಯ

    Live Tv
    [brid partner=56869869 player=32851 video=960834 autoplay=true]

  • ಬೋರಿಸ್ ಜಾನ್ಸನ್ ಬಳಿಕ ಯುಕೆ ಪಿಎಂ ಯಾರು? ಭಾರತ ಮೂಲದ ರಿಷಿಗಿದೆ ಚಾನ್ಸ್

    ಬೋರಿಸ್ ಜಾನ್ಸನ್ ಬಳಿಕ ಯುಕೆ ಪಿಎಂ ಯಾರು? ಭಾರತ ಮೂಲದ ರಿಷಿಗಿದೆ ಚಾನ್ಸ್

    ಲಂಡನ್: ಬೋರಿಸ್ ಜಾನ್ಸನ್ ಬ್ರಿಟನ್ ಪ್ರಧಾನಿ ಸ್ಥಾನದಿಂದ ಕೆಳಗಿಳಿಯಲು ಸಜ್ಜಾಗಿದ್ದಾರೆ. ಆದರೆ ಮುಂದಿನ ಪ್ರಧಾನಿ ಯಾರಾಗುತ್ತಾರೆ ಎಂಬ ಪ್ರಶ್ನೆಗೆ ಭಾರತ ಮೂಲದ ರಿಷಿ ಸುನಾಕ್ ಹೆಸರು ಕೇಳಿ ಬರುತ್ತಿದೆ. ಒಂದು ವೇಳೆ ಇದು ನಿಜವಾದರೆ, ಬ್ರಿಟನ್ ಪ್ರಧಾನಿಯಾದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ರಿಷಿ ಸುನಾಕ್ ಪಾತ್ರರಾಗುತ್ತಾರೆ.

    ಇನ್ಫೋಸಿಸ್ ನಾರಾಯಣ ಮೂರ್ತಿ ಅಳಿಯ ರಿಷಿ ಸುನಾಕ್, ಬೋರಿಸ್ ಜಾನ್ಸನ್ ರಾಜೀನಾಮೆಗೆ ಒಪ್ಪಿಗೆ ನೀಡಿದ ಬಳಿಕ ಪ್ರಧಾನಿ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ ಎಂದು ಕೇಳಿ ಬರುತ್ತಿದೆ. ರಿಷಿ ಸುನಾಕ್‌ರೊಂದಿಗೆ ರಕ್ಷಣಾ ಕಾರ್ಯದರ್ಶಿ ಬೆನ್ ವ್ಯಾಲೇಸ್, ವಿದೇಶಾಂಗ ಕಾರ್ಯದರ್ಶಿ ಲಿಜ್ ಟ್ರಾಸ್, ಮಾಜಿ ಆರೋಗ್ಯ ಕಾರ್ಯದರ್ಶಿ ಸಾಜಿದ್ ಜಾವಿದ್ ಕೂಡಾ ಪ್ರಧಾನಿ ಸ್ಥಾನಕ್ಕೆ ಸ್ಪರ್ಧಿಗಳಾಗಲಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಬ್ರಿಟನ್ ಪ್ರಧಾನಿ ಬೋರಿಸ್ ರಾಜೀನಾಮೆ ಘೋಷಣೆ

    ರಿಷಿ ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್ ನಾರಾಯಣ ಮೂರ್ತಿಯವರ ಪುತ್ರಿ ಅಕ್ಷತಾ ಮೂರ್ತಿಯ ಪತಿಯಾಗಿದ್ದು, ಬ್ರಿಟನ್‌ನಲ್ಲಿ ಅತ್ಯಂತ ಪ್ರಭಾವಿ ವ್ಯಕ್ತಿ ಎನ್ನಲಾಗುತ್ತದೆ. ಇವರನ್ನು ಬೋರಿಸ್ ಜಾನ್ಸನ್ ಆಯ್ಕೆ ಮಾಡಿ, 2020ರಲ್ಲಿ ಮೊದಲ ಪೂರ್ಣ ಕ್ಯಾಬೆನೆಟ್ ಸ್ಥಾನವನ್ನು ಪಡೆದಿದ್ದರು.

    ಬ್ರಿಟನ್ ಸರ್ಕಾರದ ಹಣಕಾಸು ಖಾತೆ ಸಚಿವರಾಗಿದ್ದ ಸುನಾಕ್ ಬುಧವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬೋರಿಸ್ ಜಾನ್ಸನ್ ವಿರುದ್ಧ ಭಿನ್ನಾಭಿಪ್ರಾಯದಿಂದ ಸಾಜಿದ್ ಜಾವೇಜ್ ರಾಜೀನಾಮೆ ನೀಡಿದ ಬೆನ್ನಲ್ಲೇ ರಿಷಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಪತ್ರವನ್ನು ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದರು. ಇದನ್ನೂ ಓದಿ: ಉದ್ಯೋಗಿಯಿಂದ ಅವಳಿ ಮಕ್ಕಳು – 51ರ ಮಸ್ಕ್‌ ಈಗ 9 ಮಕ್ಕಳ ತಂದೆ

    Live Tv
    [brid partner=56869869 player=32851 video=960834 autoplay=true]

  • ಹೋಳಿಗೆ, ನಿಪ್ಪಟ್ಟು, ಆಲೂ ಕೂರ್ಮಾ; ತೆಲಂಗಾಣ ಸಾಂಪ್ರದಾಯಿಕ ಖಾದ್ಯ ಸವಿದ ಮೋದಿ – ಮೆನುವಿನಲ್ಲಿತ್ತು 50 ಐಟಂ

    ಹೋಳಿಗೆ, ನಿಪ್ಪಟ್ಟು, ಆಲೂ ಕೂರ್ಮಾ; ತೆಲಂಗಾಣ ಸಾಂಪ್ರದಾಯಿಕ ಖಾದ್ಯ ಸವಿದ ಮೋದಿ – ಮೆನುವಿನಲ್ಲಿತ್ತು 50 ಐಟಂ

    ಹೈದರಾಬಾದ್: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಹಿನ್ನೆಲೆಯಲ್ಲಿ ಹೈದರಾಬಾದ್‌ಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಇತರ ಬಿಜೆಪಿ ನಾಯಕರಿಗೆ ತೆಲಂಗಾಣ ಸಾಂಪ್ರದಾಯಿಕ ಶೈಲಿಯ ಅಡುಗೆ ರುಚಿ ತೋರಿಸಲು ವಿಶೇಷ ಖಾದ್ಯಗಳನ್ನು ಸಿದ್ಧಪಡಿಸಲಾಗಿತ್ತು.

    ಇಲ್ಲಿನ ಕರೀಂನಗರ ಜಿಲ್ಲೆಯ ಹುಸ್ನಾಬಾದ್ ಕ್ಷೇತ್ರದ ಗೌರವೆಲ್ಲಿ ಗುಡತಿಪಲ್ಲಿಯ ಯಾದಮ್ಮ, ಪ್ರಧಾನಿಗೆ ತೆಲಂಗಾಣದ ಅಡುಗೆಯ ರುಚಿ ತೋರಿಸಿದರು. ಸಂಪೂರ್ಣ ಸಸ್ಯಾಹಾರ ಖಾದ್ಯಗಳನ್ನೇ ಸವಿದು ಪ್ರಧಾನಿ ಮೋದಿ ಸಂತಸಪಟ್ಟರು. ಇದನ್ನೂ ಓದಿ: ದೇಶಕ್ಕೆ ಮಾತಾಡುವ ರಾಷ್ಟ್ರಪತಿ ಬೇಕು; ನಾನು ಗೆದ್ದರೆ ದೇಶದ್ರೋಹ ಕಾನೂನು ರದ್ದು ಮಾಡ್ತೀನಿ – ಯಶವಂತ್‌ ಸಿನ್ಹಾ

    50 ಬಗೆಯ ಖಾದ್ಯ: ಪ್ರಧಾನಿ ಮೋದಿ ಸೇರಿದಂತೆ ಇತರ ನಾಯಕರಿಗಾಗಿ 50 ಬಗೆಯ ಖಾದ್ಯಗಳನ್ನು ಸಿದ್ಧಪಡಿಸಲಾಗಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಸ್ವತಃ ಖಾದ್ಯಗಳ ರುಚಿ ಪರಿಶೀಲನೆ ಮಾಡಿದರು. ನಂತರ ಬಿಜೆಪಿ ಅತಿರಥರು ಯಾದಮ್ಮರ ಕೈರುಚಿ ಸವಿದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಇತರ ಗಣ್ಯರು ನನ್ನ ಅಡುಗೆಯ ರುಚಿ ಸವಿದಿರುವುದು ನನ್ನ ಪಾಲಿನ ಪುಣ್ಯ. ನನಗೆ ಈ ಅವಕಾಶ ಕಲ್ಪಿಸಿದ ಬಂಡಿ ಸಂಜಯ್ ಅವರಿಗೆ ಋಣಿಯಾಗಿದ್ದೇನೆ ಎಂದು ಯಾದಮ್ಮ ಕೃತಜ್ಞತೆ ಅರ್ಪಿಸಿದ್ದಾರೆ. ಇದನ್ನೂ ಓದಿ: ಬ್ಯಾಟರಾಯನಪುರದಲ್ಲಿ ಕೇಸರಿ ಫೌಂಡೇಶನ್‌ ವತಿಯಿಂದ ಆಷಾಢ ಅಷ್ಟಲಕ್ಷ್ಮಿ ಪೂಜೆ

    ಏನೆಲ್ಲಾ ಇತ್ತು ಊಟದ ಮೆನುವಿನಲ್ಲಿ?
    ಚಿಕ್ಕುಡುಕಾಯಿ ಟೊಮ್ಯಾಟೊ, ಆಲೂ ಕೂರ್ಮಾ, ಬದನೆಕಾಯಿ ಮಸಾಲಾ, ತೊಂಡೇಕಾಯಿ ಹಸಿಕೊಬ್ಬರಿ ಫ್ರೈ, ಬೆಂಡೇಕಾಯಿ ಕಾಜು ಫ್ರೈ, ತೋಟಕೂರ ಟೊಮ್ಯಾಟೊ ಫ್ರೈ, ಬೀರೆಕಾಯಿ ಮೀಲ್ ಮೇಕರ್ ಫ್ರೈ, ಮೆಂತ್ಯೆ ಹೆಸರುಕಾಳು ಫ್ರೈ, ಮಾವಿನಕಾಯಿ ಪಪ್ಪು, ಸಾಂಬಾರ್, ಮುದ್ದಪಪ್ಪು, ಪಚ್ಚಿಪುಲುಸು, ಬಗಾರಾ, ಪುಲಿಹೋರಾ, ಪುದೀನಾ ರೈಸ್, ವೈಟ್ ರೈಸ್, ಮೊಸರನ್ನ, ಗೋಂಗೂರ ಪಚ್ಚಡಿ, ಸೌತೆಕಾಯಿ ಚಟ್ನಿ, ಟೊಮ್ಯಾಟೊ ಚಟ್ನಿ, ಸೋರೆಕಾಯಿ ಚಟ್ನಿ, ಕಡಲೆ ಬೀಜದ ಚಟ್ನಿ, ಹಸಿ ತೆಂಗಿನಕಾಯಿ ಚಟ್ನಿ, ಹಸಿ ಮೆಣಸಿನ ಕಾಯಿ ಫ್ರೈ.

    ಸಿಹಿ ತಿನಿಸು: ಬೆಲ್ಲದ ಪರಮಾನ್ನ, ಶ್ಯಾವಿಗೆ ಪಾಯಸ, ಹೋಳಿಗೆ, ಬೂರೆಲು, ಕಜ್ಜಾಯ.

    ಕುರುಕುಲು ತಿಂಡಿ: ಉದ್ದಿನ ವಡೆ, ಮಿರ್ಚಿ ಬಜ್ಜಿ, ಚಕ್ಕುಲಿ, ಖಾರ ಬೂಂದಿ, ನಿಪ್ಪಟ್ಟು.

    Live Tv

  • ಇಂದು ರಾಷ್ಟ್ರೀಯ ವೈದ್ಯರ ದಿನ – ಡಾಕ್ಟರ್ಸ್ ಕರ್ತವ್ಯ ಸ್ಮರಿಸಿ ಶುಭಕೋರಿದ ಪ್ರಧಾನಿ ಮೋದಿ

    ಇಂದು ರಾಷ್ಟ್ರೀಯ ವೈದ್ಯರ ದಿನ – ಡಾಕ್ಟರ್ಸ್ ಕರ್ತವ್ಯ ಸ್ಮರಿಸಿ ಶುಭಕೋರಿದ ಪ್ರಧಾನಿ ಮೋದಿ

    ನವದೆಹಲಿ: ರಾಷ್ಟ್ರೀಯ ವೈದ್ಯರ ದಿನಾಚರಣೆಯ ಅಂಗವಾಗಿ ಶುಭ ಕೋರಿರುವ ಪ್ರಧಾನಿ ನರೇಂದ್ರ ಮೋದಿ ಅವರು ಜೀವ ಉಳಿಸುವಲ್ಲಿ ವೈದ್ಯರ ಪಾತ್ರ ಎಷ್ಟು ಮಹತ್ವ ಎಂಬುದನ್ನು ಸ್ಮರಿಸಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ದೇಶದ ಎಲ್ಲ ವೈದ್ಯರಿಗೂ ವೈದ್ಯರ ದಿನಾಚರಣೆಯ ಶುಭಾಶಯಗಳು. ಜೀವ ಉಳಿಸುವಲ್ಲಿ ಮತ್ತು ನಮ್ಮ ಗ್ರಹವನ್ನು ಆರೋಗ್ಯಕರವಾಗಿಸುವಲ್ಲಿ ವೈದ್ಯರ ಪಾತ್ರ ಅಪಾರವಾಗಿದೆ ಎಂದು ನೆನೆದಿದ್ದಾರೆ. ಇದನ್ನೂ ಓದಿ: ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದಿದ್ದ ನೀರಜ್ ಚೋಪ್ರಾಗೆ ವಜ್ರದ ಕಿರೀಟ

    https://twitter.com/narendramodi/status/1542712243225526272?ref_src=twsrc%5Etfw%7Ctwcamp%5Etweetembed%7Ctwterm%5E1542712243225526272%7Ctwgr%5E%7Ctwcon%5Es1_&ref_url=https%3A%2F%2Fwww.indiatoday.in%2Findia%2Fstory%2Fnational-doctors-day-pm-modi-greets-doctors-role-in-saving-lives-1968858-2022-07-01

    ಇದರೊಂದಿಗೆ ಎಂತಹ ಭೀಕರ ಕಾಯಿಲೆಗಳು ಎದುರಾದ ಸಂದರ್ಭದಲ್ಲೂ ವೈದ್ಯರ ಸೇವೆಯನ್ನು ಬಿಂಬಿಸುವ ವೀಡಿಯೋವೊಂದನ್ನು ಟ್ಯಾಗ್ ಮಾಡಿದ್ದಾರೆ.

    ಖ್ಯಾತ ವೈದ್ಯರು ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬಿಧನ್ ಚಂದ್ರರಾಯ್ ಅವರ ಗೌರವಾರ್ಥವಾಗಿ ವೈದ್ಯರ ದಿನವನ್ನು ಆಚರಿಸಲಾಗುತ್ತದೆ.

    Live Tv

  • ಬಂಡೀಪುರ ಹೆದ್ದಾರಿಯಿಂದ ಡಿವೈಡರ್ ಕೋರಿ ಪ್ರಧಾನಿಗೆ ಪತ್ರ

    ಬಂಡೀಪುರ ಹೆದ್ದಾರಿಯಿಂದ ಡಿವೈಡರ್ ಕೋರಿ ಪ್ರಧಾನಿಗೆ ಪತ್ರ

    ಚಾಮರಾಜನಗರ: ರಾಷ್ಟ್ರೀಯ ಉದ್ಯಾನವನ ಬಂಡೀಪುರದಲ್ಲಿ ವನ್ಯ ಪ್ರಾಣಿಗಳಿಗೆ ಸಂಚಕಾರವುಂಟಾಗುತ್ತೆ ಅಂತಾ ಈಗಾಗಲೇ ರಾತ್ರಿ ಸಂಚಾರ ನಿರ್ಬಂಧ ಮಾಡಲಾಗಿದೆ. ಇದೀಗ ಗುಂಡ್ಲುಪೇಟೆ ಶಾಸಕರು ಪ್ರಧಾನಿ ಮೋದಿಗೆ ಪತ್ರ ಬರೆದು ಚತುಷ್ಪಥ ರಸ್ತೆ ನಿರ್ಮಿಸಿ, ಸುಗಮ ಸಂಚಾರಕ್ಕೆ ಡಿವೈಡರ್ ಅಳವಡಿಸಲು ಪತ್ರ ನೀಡಿದ್ದಾರೆ. ಇದರಿಂದ ವನ್ಯ ಸಂಕುಲಕ್ಕೆ ಸಂಕಷ್ಟ ಎದುರಾಗುತ್ತೆ. ಅಲ್ಲದೆ ಈ ಪತ್ರ ಎಲ್ಲೆಡೆ ವೈರಲ್ ಆಗಿದ್ದು ಶಾಸಕರ ನಡೆಗೆ ಪರಿಸರವಾದಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

    ಹೌದು. ರಾಷ್ಟ್ರೀಯ ಹೆದ್ದಾರಿ 766. ಮೈಸೂರಿನಿಂದ ಕೇರಳ, ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆ ಸದ್ಯ ವಾಹನ ಸವಾರರ ಪಾಲಿಗೆ ಮೃತ್ಯುಕೂಪವಾಗಿ ಪರಿಣಮಿಸಿದೆ. ನಂಜನಗೂಡಿನಿಂದ ಗುಂಡ್ಲುಪೇಟೆವರೆಗಿನ ಹೆದ್ದಾರಿಯಲ್ಲಿ ತಿಂಗಳಿಗೆ ಸರಾಸರಿ 15ಕ್ಕೂ ಹೆಚ್ಚು ಅಪಘಾತಗಳು ನಡೆದು 5ಕ್ಕೂ ಹೆಚ್ಚು ಮಂದಿ ಜೀವ ಕಳೆದುಕೊಂಡಿದ್ದಾರೆ. ರಸ್ತೆಯನ್ನ ಅವೈಜ್ಞಾನಿಕ ರೀತಿಯಲ್ಲಿ ನಿರ್ಮಿಸಿರುವುದೇ ಅಪಘಾತಕ್ಕೆ ಕಾರಣ ಅಂತಾ ಪೊಲೀಸರು ವರದಿ ಕೊಟ್ಟಿದ್ರು. ಇದನ್ನೂ ಓದಿ: ರಾಜ್ಯದ ಜನತೆಗೆ ಕರೆಂಟ್‌ ಶಾಕ್‌ – ಇಂದಿನಿಂದ ವಿದ್ಯುತ್‌ ದರ ಏರಿಕೆ

    ಅಲ್ಲದೇ ಸಂಸದ ಶ್ರೀನಿವಾಸ್ ಪ್ರಸಾದ್ ಕೂಡ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಪತ್ರ ಬರೆದು ನಂಜನಗೂಡು ಅರಣ್ಯ ಪ್ರದೇಶದಲ್ಲಿ ರಸ್ತೆ ಅಗಲೀಕರಣ ಮಾಡಬಾರದು, ವಿಭಜಕ ಅಳವಡಿಸಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದ್ರು. ರಸ್ತೆ ಅಗಲೀಕರಣ ಮಾಡುವುದರಿಂದ ವಾಹನಗಳು ಅತಿವೇಗದಿಂದ ಚಲಿಸುತ್ತವೆ. ಇದರಿಂದ ವನ್ಯಜೀವಿಗಳ ಪ್ರಾಣಕ್ಕೆ ಕುತ್ತು ಬರುತ್ತೆ. ಹೀಗಾಗಿ ಅರಣ್ಯಪ್ರದೇಶ ಪ್ರಾರಂಭವಾಗುವವರೆಗೂ ಮಾತ್ರ ರಸ್ತೆ ಅಗಲೀಕರಣ ಮಾಡಲಿ ಎಂದು ಸಲಹೆ ನೀಡಿದ್ದಾರೆ.

    ಈ ನಡುವೆ ಬಂಡೀಪುರ ಅರಣ್ಯದ ನಡುವೆ ಕೇರಳ ಹಾಗೂ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ನಂಜನಗೂಡಿನಿಂದ ಗುಂಡ್ಲುಪೇಟೆ ಮಾರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ದಟ್ಟಣೆಯಿಂದ ಅಪಘಾತಗಳು ಹೆಚ್ಚಾಗುತ್ತಿವೆ. ಕೃಷಿ ಉತ್ಪನ್ನ ಸಾಗಾಣೆಗೆ ರೈತರಿಗೂ ತೊಂದರೆಯಾಗುತ್ತಿದೆ. ಹಾಗಾಗಿ ಕೇರಳ ಹಾಗು ತಮಿಳುನಾಡು ಗಡಿಯವರೆಗು ಡಬಲ್ ರೋಡ್ ಮಾಡಿ ರಸ್ತೆ ವಿಭಜಕ ಅಳವಡಿಸಬೇಕೆಂದು ಶಾಸಕ ನಿರಂಜನ್ ಕುಮಾರ್ ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದಿದ್ದ ನೀರಜ್ ಚೋಪ್ರಾಗೆ ವಜ್ರದ ಕಿರೀಟ

    ಶಾಸಕರ ಪತ್ರದ ವಿಚಾರಕ್ಕೆ ಪರಿಸರವಾದಿಗಳೂ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೀವವೈವಿಧ್ಯತೆಗೆ ಇದರಿಂದ ಧಕ್ಕೆಯಾಗಲಿದೆ. ವನ್ಯಜೀವಿಗಳಿಗೆ ಕಂಟಕವಾಗಲಿದೆ, ಬೇಕಿದ್ದರೆ ಕಾಡಿನ ಹೊರಗೆ ರಸ್ತೆ ಅಗಲೀಕರಣ, ರಸ್ತೆವಿಭಜಕ ಅಳವಡಿಸಲಿ ಎಂದು ಆಗ್ರಹಿಸಿದ್ದಾರೆ. ಒಟ್ಟಿನಲ್ಲಿ ಒಂದೆಡೆ ರಸ್ತೆ ಅಗಲೀಕರಣ ಮಾಡಿ ಎಂದು ಶಾಸಕರು ಪತ್ರ ಬರೆದಿದ್ರೆ ಮತ್ತೊಂದೆಡೆ ಪರಿಸರವಾದಿಗಳು ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಂಡೀಪುರದಲ್ಲಿ ರಸ್ತೆ ಆಗಲೀಕರಣ, ವಿಭಜಕ ಮಾಡಲೂ ಮುಂದಾದ್ರೆ ಪ್ರಾಣಿಗಳಿಗೆ ಕುತ್ತು ಗ್ಯಾರಂಟಿ.

    Live Tv

  • ಗುಜರಾತ್ ಗಲಭೆ ಪ್ರಕರಣದಲ್ಲಿ ಕೋರ್ಟ್ ತೀರ್ಪು ಹೊರಬಿದ್ದ ಬೆನ್ನಲ್ಲೇ ತೀಸ್ತಾ ಸೆತಲ್ವಾಡ್ ಬಂಧನ

    ಗುಜರಾತ್ ಗಲಭೆ ಪ್ರಕರಣದಲ್ಲಿ ಕೋರ್ಟ್ ತೀರ್ಪು ಹೊರಬಿದ್ದ ಬೆನ್ನಲ್ಲೇ ತೀಸ್ತಾ ಸೆತಲ್ವಾಡ್ ಬಂಧನ

    ಮುಂಬೈ: ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆತಲ್ವಾಡ್ ಅವರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳವು ಬಂಧಿಸಿದೆ.

    ಸ್ವಯಂ ಸೇವಾ ಸಂಸ್ಥೆಯೊಂದರ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನಲ್ಲಿರುವ ತೀಸ್ತಾ ಸೆತಲ್ವಾಡ್ ಅವರ ನಿವಾಸಕ್ಕೆ ಭೇಟಿ ನೀಡಿದ ಗುಜರಾತಿನ ಭಯೋತ್ಪಾದನಾ ನಿಗ್ರಹದಳ ಅವರನ್ನು ಬಂಧಿಸಿದೆ. ನಂತರ ಆಕೆಯನ್ನು ಸಾಂತಾಕ್ರೂಜ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ.

    2002ರ ಗುಜರಾತ್ ಗಲಭೆ ಬಗ್ಗೆ ತೀಸ್ತಾ ಸೆತಲ್ವಾಡ್, ಪೊಲೀಸರಿಗೆ ಆಧಾರ ರಹಿತ ಮಾಹಿತಿ ನೀಡಿದ್ದಾರೆ. ಅಲ್ಲದೆ ಪ್ರಧಾನಿ ಮೋದಿಯವರ ಪ್ರತಿಷ್ಠೆಗೆ ಕಳಂಕ ತರುವಂತೆ ಅವರು ಪ್ರಚಾರ ನಡೆಸಲು ಸಹಾಯ ಮಾಡಿದ್ದಾರೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಆರೋಪಿಸಿದ ಕೆಲವೇ ಗಂಟೆಗಳಲ್ಲಿ ತೀಸ್ತಾ ಅವರನ್ನು ಬಂಧಿಸಲಾಗಿದೆ.

    2002ರ ಗುಜರಾತ್ ಗಲಭೆಯಲ್ಲಿ ದೊಡ್ಡ ಪಿತೂರಿ ನಡೆದಿದೆ ಎಂದು ಹತ್ಯೆಯಾದ ಕಾಂಗ್ರೆಸ್ ನಾಯಕ ಎಹ್ಸಾನ್ ಜಾಫ್ರಿ ಅವರ ಪತ್ನಿ ಜಾಕಿಯಾ ಜಾಫ್ರಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿತ್ತು. ಗಲಭೆಗೆ ಸಂಬಂಧಿಸಿ ಮೋದಿ ಸೇರಿ 64 ಜನರಿಗೆ ಎಸ್‌ಐಟಿ ಕ್ಲೀನ್‌ಚಿಟ್ ನೀಡಿದ್ದನ್ನು ಪ್ರಶ್ನಿಸಿ ಜಾಫ್ರಿ ಅರ್ಜಿ ಸಲ್ಲಿಸಿದ್ದರು. ಅರ್ಜಿದಾರರಲ್ಲಿ ತೀಸ್ತಾ ಕೂಡ ಒಬ್ಬರಾಗಿದ್ದರು. ಗಲಭೆ ನಡೆದ ಅವಧಿಯಲ್ಲಿ ನರೇಂದ್ರ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದರು.

    ಸಂದರ್ಶನವೊಂದರಲ್ಲಿ ಮಾತನಾಡಿದ್ದ ಕೇಂದ್ರ ಸಚಿವ ಅಮಿತ್ ಶಾ, ನಾನು ತೀರ್ಪನ್ನು ಬಹಳ ಎಚ್ಚರಿಕೆಯಿಂದಲೇ ಓದಿದ್ದೇನೆ. ಅದರಲ್ಲಿ ತೀಸ್ತಾ ಸೆತಲ್ವಾಡ್ ಅವರ ಹೆಸರನ್ನು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಅವರು ನಡೆಸುತ್ತಿರುವ ಎನ್‌ಜಿಓ ಹೆಸರು ನನಗೆ ನೆನಪಿಲ್ಲ. ಆದರೆ ಗಲಭೆಯ ಬಗ್ಗೆ ಆಧಾರ ರಹಿತ ಮಾಹಿತಿಯನ್ನು ಪೊಲೀಸರಿಗೆ ನೀಡಿರುವ ಬಗ್ಗೆ ಮಾಹಿತಿ ಇತ್ತು ಎಂದು ಹೇಳಿರುವುದಾಗಿ ವರದಿಯಾಗಿದೆ.

    Live Tv

  • ವಿಷಕಂಠನಂತೆ ಮೋದಿ 19 ವರ್ಷಗಳಿಂದ ಗುಜರಾತ್ ಗಲಭೆ ನೋವನ್ನು ಸಹಿಸಿಕೊಂಡಿದ್ದಾರೆ: ಅಮಿತ್ ಶಾ

    ವಿಷಕಂಠನಂತೆ ಮೋದಿ 19 ವರ್ಷಗಳಿಂದ ಗುಜರಾತ್ ಗಲಭೆ ನೋವನ್ನು ಸಹಿಸಿಕೊಂಡಿದ್ದಾರೆ: ಅಮಿತ್ ಶಾ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ 19 ವರ್ಷಗಳಿಂದ ಗುಜರಾತ್ ಗಲಭೆ ಕುರಿತಾಗಿ ಒಂದು ಮಾತನ್ನೂ ಮಾತನಾಡದೆ ನೋವನ್ನು ವಿಷಕಂಠನಂತೆ ಸಹಿಸಿಕೊಂಡಿದ್ದಾರೆ. ವಿಷ ನುಂಗಿ ತನ್ನ ಗಂಟಲಿನಲ್ಲಿ ಹಿಡಿದಿಟ್ಟುಕೊಂಡ ಶಿವನಂತೆ ಮೋದಿ ಇದ್ದರು ಎಂದು ಗೃಹ ಸಚಿವ ಅಮಿತ್ ಶಾ ಅಭಿಪ್ರಾಯಪಟ್ಟಿದ್ದಾರೆ.

    ಗುಜರಾತ್‍ನ ಗೋಧ್ರಾ ನರಮೇಧ ನಂತರದ ಹಿಂಸಾಚಾರ ಪ್ರಕರಣದಲ್ಲಿ ನರೇಂದ್ರ ಮೋದಿ ಅವರಿಗೆ ಎಸ್‍ಐಟಿ (ವಿಶೇಷ ತನಿಖಾ ತಂಡ) ಕ್ಲೀನ್ ಚಿಟ್ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ನಿನ್ನೆ ವಜಾಗೊಳಿಸಿತ್ತು. ಈ ಬಗ್ಗೆ ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿದ ಅಮಿತ್ ಶಾ, ಗುಜರಾತ್ ಗಲಭೆ ಯಾಕಾಯಿತು, ಹೇಗಾಯಿತು, ನಂತರದ ಪರಿಣಾಮಗಳು ಹೇಗೆ ಬೀರಿದ್ದವು ಎಂಬುದನ್ನು ವಿವರಿಸಿದ್ದಾರೆ. ಇದನ್ನೂ ಓದಿ: ಗುಜರಾತ್‌ ಗಲಭೆ – ಮೋದಿಗೆ ಬಿಗ್‌ ರಿಲೀಫ್‌, ಸುಪ್ರೀಂನಿಂದ ಸಿಕ್ತು ಕ್ಲೀನ್‌ ಚಿಟ್‌

    ಗುಜರಾತ್ ಗಲಭೆಗೆ ಪ್ರಮುಖ ಕಾರಣ ಗೋಧ್ರಾ ರೈಲಿಗೆ ಬೆಂಕಿ ಹಚ್ಚಿದ್ದು. 16 ದಿನದ ಮಗು ಸೇರಿದಂತೆ 59 ಮಂದಿ ಸಜೀವ ದಹನವಾಗಿದ್ದರು. ಆಗ ಮೆರವಣಿಗೆ ಮಾಡಿರಲಿಲ್ಲ. ಮೃತದೇಹಗಳನ್ನು ಸಿವಿಲ್ ಆಸ್ಪತ್ರೆಗೆ ತೆಗೆದುಕೊಂಡು ಹೋಗಿ ನಂತರ ಅಂಬುಲೆನ್ಸ್ ನಲ್ಲಿ ಮೃತದೇಹಗಳನ್ನು ಅವರ ಕುಟುಂಬಸ್ಥರಿಗೆ ಒಪ್ಪಿಸಲಾಯಿತು. ಆದರೆ ಘಟನೆಯ ಬಳಿಕ ಈ ಬಗ್ಗೆ ಸುಳ್ಳು ಸುದ್ದಿಗಳು ಹರಿದಾಡಿದವು. ಸತ್ಯದ ಪರವಾಗಿದ್ದರೂ ಆರೋಪಗಳನ್ನು ಎದುರಿಸುತ್ತಿರುವ ಮೋದಿಜೀ ಈ ನೋವನ್ನು ಸಹಿಸಿಕೊಳ್ಳುವುದನ್ನು ನಾನು ಹತ್ತಿರದಿಂದ ನೋಡಿದ್ದೇನೆ. ನ್ಯಾಯಾಂಗ ಪ್ರಕ್ರಿಯೆ ನಡೆಯುತ್ತಿದ್ದರಿಂದ ಅವರು ಮಾತನಾಡಲಿಲ್ಲ. ಅಂದು ಗುಜರಾತ್‍ನ ಗೃಹ ಸಚಿವನಾಗಿದ್ದ ನಾನು ಈ ಬಗ್ಗೆ ಮಾತನಾಡಲಿಲ್ಲ. ಇಂದಿನ ಸಂದರ್ಶನವನ್ನು ನಾನು 2003ರಲ್ಲಿ ಗುಜರಾತ್ ಗೃಹ ಸಚಿವನಾಗಿ ನೀಡಬಹುದಿತ್ತು. ಆದರೆ ನ್ಯಾಯಾಂಗ ಪ್ರಕ್ರಿಯೆ ಮುಗಿಯುವವರೆಗೂ ಮೋದಿಜೀ ಯಾವುದೇ ಪ್ರಭಾವ ಬೀರದಂತೆ ಏನನ್ನೂ ಹೇಳಲಿಲ್ಲ. ಇದೆಲ್ಲವನ್ನೂ ಅವರು ಮೌನವಾಗಿ ಸಹಿಸಿಕೊಂಡಿದ್ದರು ಇದರ ಫಲವಾಗಿ ಸತ್ಯಕ್ಕೆ ಜಯವಾಗಿದೆ ಎಂದರು.

    ಬಿಜೆಪಿಯ ರಾಜಕೀಯ ವಿರೋಧಿಗಳು, ರಾಜಕೀಯ ಪ್ರೇರಿತ ಪತ್ರಕರ್ತರು ಮತ್ತು ಸರ್ಕಾರೇತರ ಸಂಘಟನೆಗಳು ಒಟ್ಟಾಗಿ ಬಿಜೆಪಿ ಮತ್ತು ಪಕ್ಷದ ನಾಯಕರ ವಿರುದ್ಧ ಗಲಭೆ ಪ್ರಕರಣದ ಆರೋಪ ಹೊರಿಸಿದರು. ನಮ್ಮ ಮೇಲೆ ಸುಳ್ಳು ಆರೋಪ ಹೊರಿಸಿದ್ದರೂ ಕೂಡ ಬಿಜೆಪಿಗೆ ಗುಜರಾತ್‍ನ ಜನತೆಯ ಮೇಲೆ ನಮಗೆ ನಂಬಿಕೆ ಇತ್ತು. ಅಲ್ಲಿನ ಜನರು ಬಿಜೆಪಿಯನ್ನು ಕೈಬಿಡಲಿಲ್ಲ. ಅಧಿಕಾರ ತಂದು ಕೊಟ್ಟರು. ಇಂದಿಗೆ ಈ ಘಟನೆ ನಡೆದು 20 ವರ್ಷಗಳಾಗಿದೆ. ಜನರ ಆದೇಶವೇ ದೊಡ್ಡದು, ಸಾರ್ವಜನಿಕರು ಎಲ್ಲವನ್ನೂ ನೋಡುತ್ತಾರೆ. ದೇಶದ 130 ಕೋಟಿ ಜನರಿಗೆ 260 ಕೋಟಿ ಕಣ್ಣುಗಳು ಮತ್ತು 260 ಕೋಟಿ ಕಿವಿಗಳಿವೆ. ಅವರು ಎಲ್ಲವನ್ನೂ ನೋಡುತ್ತಾರೆ ಮತ್ತು ಕೇಳುತ್ತಾರೆ, ನಾವು ಎಂದಿಗೂ ಚುನಾವಣೆಯಲ್ಲಿ ಗುಜರಾತ್‍ನಲ್ಲಿ ಸೋತಿಲ್ಲ. ಜನ ನಮ್ಮನ್ನು ಕೈಬಿಟ್ಟಿಲ್ಲ. ನಮ್ಮ ಮೇಲೆ ಜನರಿಗೆ ನಂಬಿಕೆ ಇತ್ತು ಇದೀಗ ಮತ್ತೆ ನಾವು ತಪ್ಪು ಮಾಡಿಲ್ಲ ಎಂಬುದು ಸಾಬೀತಾಗಿದೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: 7 ಭ್ರೂಣಗಳ ಪತ್ತೆ ಪ್ರಕರಣ – ಭ್ರೂಣಗಳನ್ನು ಎಸೆದಿದ್ದ ಆಸ್ಪತ್ರೆ ಸೀಜ್ ಮಾಡಿದ DHO

    ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ನಾನು ಬಹಳ ಎಚ್ಚರಿಕೆಯಿಂದ ಓದಿದ್ದೇನೆ. ತೀರ್ಪಿನಲ್ಲಿ ತೀಸ್ತಾ ಸೆಟಲ್ವಾಡ್ ಹೆಸರನ್ನು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಆಕೆಯು ನಡೆಸುತ್ತಿದ್ದ ಎನ್‍ಜಿಒ ನನಗೆ ಆ ಎನ್‍ಜಿಒ ಹೆಸರು ನೆನಪಿಲ್ಲ ಆದರೆ ಗಲಭೆಯ ಬಗ್ಗೆ ಆಧಾರರಹಿತ ಮಾಹಿತಿಯನ್ನು ಪೊಲೀಸರಿಗೆ ನೀಡಲಾಗಿತ್ತು. ಇದರಿಂದ ನಮ್ಮ ಮೇಲೆ ಸುಳ್ಳು ಆರೋಪ ಪಿತೂರಿ ನಡೆಸಲಾಗಿತ್ತು. ಇದೀಗ ಪ್ರಕರಣದ ಬಗ್ಗೆ ಸತ್ಯ ಹೊರಬಂದಿದ್ದು, ಸುಪ್ರೀಂ ಕೋರ್ಟ್ ಎಲ್ಲಾ ಆರೋಪಗಳನ್ನು ತಳ್ಳಿಹಾಕಿದೆ. ಆರೋಪಗಳನ್ನು ಕೋರ್ಟ್ ಸರಿಯಾಗಿ ಪ್ರಶ್ನಿಸಿದೆ. ಆರೋಪಗಳನ್ನು ರಾಜಕೀಯ ಪ್ರೇರಿತ ಎಂದು ನೀವು ಹೇಳಬಹುದು, ಇದು ಸಹ ಸಾಭೀತಾಗಿದೆ. ಈ ಹೋರಾಟ ಕಳೆದ 19 ವರ್ಷಗಳಿಂದ ನಾವು ನಡೆಸಿರುವ ಹೋರಾಟ ಕಡೆಗೆ ಜಯ ನಮ್ಮದಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

    ಗೋಧ್ರಾ ನರಮೇಧ ನಂತರ ನಡೆದ ಹಿಂಸಾಚಾರ ಪ್ರಕರಣದ ತನಿಖೆ ನಡೆಸಿದ್ದ ಎಸ್‍ಐಟಿ ಅಂದಿನ ಮುಖ್ಯಮಂತ್ರಿ ನರೇಂದ್ರ ಮೋದಿ ಅವರಿಗೆ ಕ್ಲೀನ್ ಚಿಟ್ ನೀಡಿತ್ತು. ಕ್ಲೀನ್ ಚಿಟ್ ನೀಡಿದ್ದನ್ನು ಪ್ರಶ್ನಿಸಿ ಹಿಂಸಾಚಾರದ ವೇಳೆ ಹತ್ಯೆಗೀಡಾದ ಸಂಸದ ಇಸಾನ್ ಜಫ್ರಿ ಅವರ ಪತ್ನಿ ಜಾಕಿಯಾ ಜಫ್ರಿ ತಕರಾರು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿಗಳಾದ ಎ.ಎಂ.ಖನ್ವಿಲ್ಕರ್, ದಿನೇಶ್ ಮಹೇಶ್ವರಿ, ಸಿಟಿ ರವಿಕುಮಾರ್ ಅವರಿದ್ಧ ಪೀಠ ನಿನ್ನೆ ತೀರ್ಪು ನೀಡಿತ್ತು. ಸುಪ್ರೀಂ ಕೋರ್ಟ್ ನೇಮಕ ಮಾಡಿದ್ದ ಎಸ್‍ಐಟಿ ಕ್ಲೀನ್ ಚಿಟ್ ನೀಡಿದ್ದನ್ನು ಎತ್ತಿ ಹಿಡಿದ ಕೋರ್ಟ್ ಈ ಅರ್ಜಿಗೆ ಯಾವುದೇ ಅರ್ಹತೆಯಿಲ್ಲ ಎಂದು ಅಭಿಪ್ರಾಯಪಟ್ಟು ವಜಾಗೊಳಿಸಿತು. ಇದನ್ನೂ ಓದಿ: ಇದೇ ವರ್ಷ ಬರಲಿದೆ ಇ-ಪಾಸ್‌ಪೋರ್ಟ್ – ಹೇಗಿರಲಿದೆ? ಕೆಲಸ ಹೇಗೆ?

    ಏನಿದು ಪ್ರಕರಣ?
    2002ರ ಫೆಬ್ರವರಿ 22 ರಂದು ಗೋಧ್ರಾದಲ್ಲಿ ಸಬರಮತಿ ಎಕ್ಸ್ ಪ್ರೆಸ್ ರೈಲಿನ ಎಸ್6 ಬೋಗಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಪರಿಣಾಮ ಆಯೋಧ್ಯೆಯಿಂದ ಗುಜರಾತ್ ಗೆ ಮರಳುತ್ತಿದ್ದ 59 ಕರಸೇವಕರು ಸಜೀವವಾಗಿ ದಹನವಾಗಿದ್ದರು. ಈ ಘಟನೆ ಬಳಿಕ ಗುಜರಾತಿನಲ್ಲಿ ವ್ಯಾಪಕ ಹಿಂಸಾಚಾರ ಭುಗಿಲೆದ್ದಿತ್ತು. ಅನೇಕ ಕಡೆಗಳಲ್ಲಿ ಕೋಮುಗಲಭೆ ಸಂಭವಿಸಿ 1,200 ಕ್ಕೂ ಹೆಚ್ಚು ಮಂದಿಯ ಹತ್ಯೆಯಾಗಿತ್ತು. ವಿಶೇಷವಾಗಿ ಗುಲ್ಬರ್ಗಾ ಸೊಸೈಟಿಯಲ್ಲಿ ನರಮೇಧವೇ ನಡೆದು ಹೋಗಿತ್ತು. ಇದರಲ್ಲಿ ಇಸಾನ್ ಜಫ್ರಿ ಸೇರಿ 68 ಮಂದಿ ಹತರಾಗಿದ್ದರು. 2002 ಫೆಬ್ರವರಿ 27ರಿಂದ ಮೇ ತಿಂಗಳವರೆಗೆ ವ್ಯಾಪಕ ಹಿಂಸಾಚಾರ ನಡೆದಿದ್ದು, ಇದರ ಹಿಂದೆ ಬಹುದೊಡ್ಡ ಪಿತೂರಿ ಅಡಗಿದೆ. ನರೇಂದ್ರ ಮೋದಿ ಅವರ ಪಾತ್ರವಿದೆ ಎಂದು ಆರೋಪಿಸಿ ಅರ್ಜಿ ಸಲ್ಲಿಸಲಾಗಿತ್ತು.

    Live Tv