Tag: primeminister modi

  • ಅ.29 ರಂದು ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳಕ್ಕೆ ಭೇಟಿ

    ಅ.29 ರಂದು ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳಕ್ಕೆ ಭೇಟಿ

    ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇದೇ ತಿಂಗಳ 29ಕ್ಕೆ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

    ವಿಶೇಷ ವಿಮಾನದಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ, ಬಳಿಕ ಅಲ್ಲಿಂದ ಹೆಲಿಕಾಪ್ಟರ್ ಮುಖಾಂತರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಾಲಯಕ್ಕೆ ತೆರಳಲಿದ್ದಾರೆ. ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿದ ಬಳಿಕ ಉಜಿರೆಯಲ್ಲಿ ನಡೆಯಲಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

    ಇಂದು ಮೋದಿ ವಿಶ್ವಪ್ರಸಿದ್ಧ ಕೇದಾರನಾಥ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ರು. ಆ ಬಳಿಕ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮೋದಿ ಶಂಕುಸ್ಥಾಪನೆ ಮಾಡಿದ್ರು. ಬಳಿಕ ಕೇದಾರನಾಥ ದೇವಸ್ಥಾನದಲ್ಲೇ ಬಿಜೆಪಿ ಕಾರ್ಯಕರ್ತರೊಂದಿಗೆ ದೀಪಾವಳಿ ಹಬ್ಬ ಆಚರಿಸಿದ್ರು.

    ಯೋಧರೊಂದಿಗೆ ದೀಪಾವಳಿ ಆಚರಣೆ: ಬುಧವಾರದಂದು ಮೋದಿ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿ ಯೋಧರೊಂದಿಗೆ ದೀಪಾವಳಿ ಆಚರಣೆ ಮಾಡಿದ್ರು. ಶ್ರೀನಗರದಿಂದ 200 ಕಿಮಿ ದೂರದಲ್ಲಿರೋ ಬಂಡೀಪೋರ ಜಿಲ್ಲೆಯ ಗುರೇಜ್ ಸೆಕ್ಟರ್ ಗೆ ಭೇಟಿ ನೀಡಿದ ಮೋದಿ ಅಲ್ಲಿನ ಗಡಿ ನಿಯಂತ್ರಣಾ ರೇಖೆ (ಎಲ್‍ಒಸಿ) ಪ್ರದೇಶದಲ್ಲಿ ಸಹಿ ಹಂಚಿ ದೇಶ ಕಾಯುವ ಯೋಧರಿಗೆ ದೀಪಾವಳ ಹಬ್ಬದ ಶುಭಾಶಯ ಕೋರಿದರು.

    ನನಗೆ ನಿಮ್ಮೊಂದಿಗೆ ದೀಪಾವಳಿ ಆಚರಿಸಲು ಒಂದು ಒಳ್ಳೆಯ ಅವಕಾಶ ಸಿಕ್ಕಿದೆ. ಹಬ್ಬದ ರಜೆಯಲ್ಲಿರೋ ಯೋಧರೊಂದಿಗೆ ಗಡಿಯಲ್ಲಿ ದೀಪಾವಳಿ ಹಬ್ಬವನ್ನು ಬಹಳ ಸಂಭ್ರಮದಿಂದ ಆಚರಿಸಿದ್ದೇನೆ ಅಂತ ವಿಸಿಟರ್ಸ್ ಬುಕ್ ನಲ್ಲಿ ಮೋದಿ ಬರೆದಿದ್ದಾರೆ.

    ಈ ಮೊದಲು ಅಂದರೆ 2014ರಲ್ಲಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಪ್ರಧಾನಿ ಮೋದಿ ಅವರು ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿ ಹಬ್ಬದ ಶುಭಾಶಯ ತಿಳಿಸಿದ್ದರು. ಇದೀಗ ಮೋದಿ ಮತ್ತೆ ಭೇಟಿ ನೀಡುವ ಮೂಲಕ ಪ್ರತೀ ವರ್ಷದಂತೆ ಈ ಬಾರಿಯೂ ಯೋಧರೊಂದಿಗೆ ದೀಪಾವಳಿ ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ರು.

  • ಇಂದು ಮೋದಿಯ ಐತಿಹಾಸಿಕ ಇಸ್ರೇಲ್ ಪ್ರವಾಸ ಆರಂಭ

    ಇಂದು ಮೋದಿಯ ಐತಿಹಾಸಿಕ ಇಸ್ರೇಲ್ ಪ್ರವಾಸ ಆರಂಭ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮೂರು ದಿನಗಳ ಭೇಟಿಗಾಗಿ ಇಸ್ರೇಲ್‍ಗೆ ಪ್ರಯಾಣ ಬೆಳೆಸಿದ್ದಾರೆ. ಈ ಭೇಟಿ ದ್ವಿಪಕ್ಷೀಯ ಸಂಬಂಧದ ದೃಷ್ಟಿಯಿಂದ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.

    ಇಸ್ರೇಲ್ ಜೊತೆಗಿನ ರಾಜತಾಂತ್ರಿಕ ಬಾಂಧವ್ಯಕ್ಕೆ 25 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಇಸ್ರೇಲ್ ಪ್ರವಾಸ ಕೈಗೊಂಡಿದ್ದಾರೆ. ಪ್ರಧಾನಿ ನೆತಾನ್ಯಾಹು ಅವರೇ ಖುದ್ದಾಗಿ ಪ್ರಧಾನಿ ಮೋದಿಯನ್ನು ಸ್ವಾಗತಿಸಲಿದ್ದಾರೆ. 48 ಗಂಟೆಗಳ ಅವಧಿಯಲ್ಲಿ ಪ್ರಧಾನಿ ಮೋದಿ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

    ಭಯೋತ್ಪಾದನೆಯನ್ನು ಮಟ್ಟಹಾಕುವ ಸಂಬಂಧ ಇಸ್ರೇಲ್ ಪ್ರವಾಸ ತುಂಬಾ ಮಹತ್ವದ್ದು ಎಂದು ಪ್ರಧಾನಿ ನರೇಂದ್ರ ಮೋದಿ ಪ್ರವಾಸಕ್ಕೂ ಮುನ್ನ ಟ್ವೀಟ್ ಮಾಡಿದ್ದಾರೆ. ಯಹೂದಿ ರಾಜ್ಯಕ್ಕೆ ಭೇಟಿ ಮೋದಿ ನೀಡುತ್ತಿರುವುದು ಅಲ್ಲಿಯೂ ಭಾರೀ ಸಂಚಲನ ಮೂಡಿಸಿದೆ.

    ಮೋದಿ ಭೇಟಿ ಕುರಿತು ಮಾತನಾಡಿರುವ ಇಸ್ರೇಲ್ ಪ್ರಧಾನಿ ನೇತನ್ಯಾಹು, ಮೋದಿ ನನ್ನ ಮಿತ್ರ. ಅತಿ ವೇಗವಾಗಿ ಆರ್ಥಿಕ ಬೆಳವಣಿಗೆ ಕಾಣುತ್ತಿರುವ ದೇಶದ ಪ್ರಧಾನಿ ಭೇಟಿಯಿಂದ ಉಭಯ ದೇಶಗಳ ನಡುವಿನ ಸಂಬಂಧ ಮತ್ತಷ್ಟು ಗಟ್ಟಿಯಾಗಲಿದೆ ಎಂದು ಹೇಳಿದ್ದಾರೆ. ಇನ್ನು ಇಸ್ರೇಲ್‍ನ ಪ್ರಮುಖ ಬ್ಯುಸಿನೆಸ್ ದಿನ ಪತ್ರಿಕೆ `ದಿ ಮಾರ್ಕ್’, ಏಳಿ, ಎದ್ದೇಳಿ, ವಿಶ್ವದ ಅತ್ಯಂತ ಪ್ರಮುಖ ಪ್ರಧಾನಿ ಬರುತ್ತಿದ್ದಾರೆ ಎಂದು ಕೆಲ ದಿನಗಳ ಹಿಂದಷ್ಟೇ ಹಾಡಿ ಹೊಗಳಿತ್ತು.

    ಜುಲೈ 6ರಂದು ಮೋದಿ ಜರ್ಮನಿಯ ಹ್ಯಾಮ್‍ಬರ್ಗ್‍ಗೆ ಜಿ-20 ಶೃಂಗಸಭೆಗಾಗಿ ತೆರಳಲಿದ್ದಾರೆ.